Saturday, February 22, 2025
Homeರಾಜ್ಯಜಾನಪದ ಕೋಗಿದೆ ಪದ್ಮಶ್ರೀ ಸುಕ್ರಿ ಬೊಮ್ಮಗೌಡ ಇನ್ನಿಲ್ಲ

ಜಾನಪದ ಕೋಗಿದೆ ಪದ್ಮಶ್ರೀ ಸುಕ್ರಿ ಬೊಮ್ಮಗೌಡ ಇನ್ನಿಲ್ಲ

Padma Shri awardee folk singer Sukri Bommagowda passes away

ಬೆಂಗಳೂರು,ಫೆ.13– ಪದ್ಮಶ್ರೀ ಪುರಸ್ಕೃತ, ಜಾನಪದ ಕೋಗಿದೆ. ಹಾಡುಹಕ್ಕಿ ಸುಕ್ರಿ ಬೊಮ್ಮಗೌಡ (88) ಇಂದು ಮುಂಜಾನೆ ವಿಧಿವಶರಾಗಿದ್ದಾರೆ. ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು ಹಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯಕ್ಕೆ ತುತ್ತಾಗಿದ್ದರು. ಇಂದು ಬೆಳಿಗ್ಗೆ 2.30 ರ ಸುಮಾರಿಗೆ ನಿಧನರಾಗಿದ್ದಾರೆ.

ಮೂಲತಃ ಉತ್ತರಕನ್ನಡ ಜಿಲ್ಲೆಯ ಆಡೋಲ ತಾಲ್ಲೂಕಿನ ಬಡಿಗೇರಿ ಗ್ರಾಮದವರಾದ ಸುಕ್ರಿ ಬೊಮ್ಮನಗೌಡ ಅವರು ಹಾಲಕ್ಕಿ ಒಕ್ಕಲಿಗೆ ಬುಡಕಟ್ಟು ಸಮುದಾಯದವರು ಅವರನ್ನು ಜಾನಪದ ಕೋಗಿದೆ ಎಂದೇ ಕರೆಯುತ್ತಿದ್ದರು. ಜಾನಪದ ಹಾಡು, ಹಾಲಕ್ಕಿ ಒಕ್ಕಲಿಗೆ ಬುಡಕಟ್ಟಿನ ಸಾಂಪ್ರದಾಯಿಕ ಸಂಗೀತ ಹಾಡುಗಳನ್ನು ಸಂರಕ್ಷಿಸಿಕೊಂಡು ಬರುವಲ್ಲಿ ಕ್ರಮ ವಹಿಸಿದ್ದರು.

ಬಾಲ್ಯದಲ್ಲಿದ್ದಾಗ ತಮ್ಮ ತಾಯಿಯ ಮೂಲಕ ಜಾನಪದ ಹಾಡುಗಳನ್ನು ಕಲಿತಿದ್ದರು. ವಿವಿಧ ಸಾಮಾಜಿಕ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದರು. ಬುಡಕಟ್ಟು ಜನಾಂಗವಾದ ಹಾಲಕ್ಕಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸದಿದ್ದರೆ ತಮಗೆ ನೀಡಿದ್ದ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ನೀಡಲು ನಿರ್ಧರಿಸಿದ್ದರು. ತಮ್ಮ ಜನಾಂಗದ ಅಭಿವೃದ್ಧಿಗಾಗಿ ವಿಧಾನಸೌಧದಲ್ಲಿಂದು ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನು ಅವರು ನೀಡಿದ್ದರು.

ಸುಕ್ರಜ್ಜಿ ಅವರು ಸಂಗೀತ ಕಲಾಸೇವೆಗೆ ಪದ್ಮಶ್ರೀ ಪ್ರಶಸ್ತಿ, ಹಂಪಿ ವಿಶ್ವವಿದ್ಯಾಲಯ ನೀಡುವ ನಾಡೋಜ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಅವರು ಭಾಜನರಾಗಿದ್ದರು. ಸುಕ್ರಿ ಬೊಮ್ಮನಗೌಡ ಅವರ ನಿಧನ ಸಾಂಪ್ರದಾಯಿಕ ಹಾಡುಗಳ ಜನಪದ ಕೊಂಡಿಯನ್ನು ಕಳೆದುಕೊಂಡಂತಾಗಿದೆ.

ಪ್ರಖ್ಯಾತ ಜಾನಪದ ಗಾಯಕಿ ಸುಕ್ರಿ ಬೊಮ್ಮನಗೌಡ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಇವರ ನಿಧನದಿಂದ ಸಾಂಸ್ಕೃತಿಕ ಲೋಕಕ್ಕೆ ಆಗಿರುವ ನಷ್ಟ ತುಂಬಲು ಸಾಧ್ಯವಿಲ್ಲ. ಹಾಲಕ್ಕಿ ಜಾನಪದ ಹಾಡುಗಳ ಮೂಲಕವೇ ಲೋಕಪ್ರಸಿದ್ಧರಾಗಿದ್ದ ಸುಕ್ರಜ್ಜಿ ಅವರಿಗೆ ಸಂಗೀತವೇ ಬದುಕಾಗಿತ್ತು, ಸಂಗೀತದ ಜೊತೆಜೊತೆಯಲ್ಲಿ ಮದ್ಯಪಾನ ವಿರೋಧಿ ಆಂದೋಲನದಲ್ಲಿಯೂ ಸಕ್ರಿಯರಾಗಿದ್ದರು. ಅವರ ಬದುಕು ಮತ್ತು ಸಾಧನೆ ಆದರ್ಶಪ್ರಾಯವಾಗಿತ್ತು.

ಅವರ ಸಂಗೀತ ಕಲಾಸೇವೆಗೆ ಪದ್ಮಶ್ರೀ, ನಾಡೋಜ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಬಂದಿವೆ. ಅವರನ್ನು ಕಳೆದುಕೊಂಡಿರುವ ಬಂಧುಮಿತ್ರರ ಮಖದಲ್ಲಿ ನಾನೂ ಪಾಲ್ಗೊಂಡಿದ್ದೇನೆ ಎಂದು ಹೇಳಿದ್ದಾರೆ.

ಸುಕ್ರಜ್ಜಿಯೆಂದೇ ಜನಜನಿತರಾಗಿದ್ದ ಸುಕ್ರಿ ಬೊಮ್ಮನಗೌಡ ಅವರ ನಿಧನಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಜನಪರ ವಿಷಯಗಳ ಬಗ್ಗೆ ಜಾಗೃತಿ ಮೂಡಿಸಿದ್ದ ಸುಕ್ರಜ್ಜಿ ಅವರು 5 ಸಾವಿರಕ್ಕೂ ಹೆಚ್ಚು ಹಾಲಕ್ಕಿ ಹಾಡುಗಳನ್ನು ಹಾಡುತ್ತಿದ್ದರು. ಅವರ ಅಗಲಿಕೆ ರಾಜ್ಯದ ಸಾಂಸ್ಕೃತಿಕ ಜನಪದ ಲೋಕಕ್ಕೆ ಬಹುದೊಡ್ಡ ನಷ್ಟವಾಗಿದೆ ಎಂದು ಅವರು ಸಂತಾಪದಲ್ಲಿ ತಿಳಿಸಿದ್ದಾರೆ.

ಸಿಎಂ ಸಂತಾಪ :
ಸುಕ್ರಿ ಬೊಮ್ಮಗೌಡ ಅವರ ನಿಧನದಿಂದ ಸಾಂಸ್ಕೃತಿಕ ಲೋಕಕ್ಕೆ ಆಗಿರುವ ನಷ್ಟ ತುಂಬಲು ಸಾಧ್ಯವಿಲ್ಲ. ಅವರೊಬ್ಬರು ಹುಟ್ಟು ಕಲಾವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ. ಹಾಲಕ್ಕಿ ಜಾನಪದ ಹಾಡುಗಳ ಮೂಲಕವೇ ಲೋಕಪ್ರಸಿದ್ಧರಾಗಿದ್ದ ಸುಕ್ರಜ್ಜಿ ಅವರಿಗೆ ಸಂಗೀತವೇ ಬದುಕಾಗಿತ್ತು. ಸಂಗೀತದ ಜೊತೆಯಲ್ಲಿ ಮದ್ಯಪಾನ ವಿರೋಧಿ ಆಂದೋಲನದಲ್ಲಿಯೂ ಸಕ್ರಿಯರಾಗಿದ್ದ ಸುಕ್ರಿ ಬೊಮ್ಮಗೌಡ ಅವರ ಬದುಕು ಮತ್ತು ಸಾಧನೆ ಆದರ್ಶಪ್ರಾಯವಾದುದು.

ಸಂಗೀತ ಕಲಾಸೇವೆಗಾಗಿ ಪದ್ಮಶ್ರೀ ಪ್ರಶಸ್ತಿ ಗಳಿಸಿದ್ದ ಸುಕ್ರಜ್ಜಿ ಅವರು ಹಂಪಿ ವಿಶ್ವವಿದ್ಯಾಲಯ ನೀಡುವ ನಾಡೋಜ ಪ್ರಶಸ್ತಿಯೂ ಸೇರಿದಂತೆ ಹಲವಾರು ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದರು.
ಸುಕ್ರಿ ಬೊಮ್ಮಗೌಡ ಅವರನ್ನು ಕಳೆದುಕೊಂಡಿರುವ ಬಂಧು ಮಿತ್ರರ ದುಃಖದಲ್ಲಿ ನಾನೂ ಪಾಲ್ಗೊಂಡಿದ್ದೇನೆ ಎಂದು ತಿಳಿಸಿದ್ದಾರೆ.

ಎಚ್‌ಡಿಕೆ ಸಂತಾಪ :
ಸುಕ್ರಜ್ಜಿಯೆಂದೇ ಜನಜನಿತರಾಗಿದ್ದ ಸುಕ್ರಿ ಬೊಮ್ಮನಗೌಡ ಅವರ ನಿಧನಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಜನಪರ ವಿಷಯಗಳ ಬಗ್ಗೆ ಜಾಗೃತಿ ಮೂಡಿಸಿದ್ದ ಸುಕ್ರಜ್ಜಿ ಅವರು 5 ಸಾವಿರಕ್ಕೂ ಹೆಚ್ಚು ಹಾಲಕ್ಕಿ ಹಾಡುಗಳನ್ನು ಹಾಡುತ್ತಿದ್ದರು. ಅವರ ಅಗಲಿಕೆಯಿಂದ ರಾಜ್ಯದ ಸಾಂಸ್ಕೃತಿಕ ಜಾನಪದ ಲೋಕಕ್ಕೆ ಬಹುದೊಡ್ಡ ನಷ್ಟವಾಗಿದೆ ಎಂದು ಅವರು ಸಂತಾಪದಲ್ಲಿ ತಿಳಿಸಿದ್ದಾರೆ.

ಬಿ.ವೈ.ವಿಜಯೇಂದ್ರ ಸಂತಾಪ :
ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮನಗೌಡ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರ ಸಂತಾಪ ಸೂಚಿಸಿದ್ದಾರೆ. ಜಾನಪದ ಹಾಡು, ಹಾಲಕ್ಕಿ ಒಕ್ಕಲಿಗ ಬುಡಕಟ್ಟಿನ ಸಾಂಪ್ರದಾಯಿಕ ಸಂಗೀತದ ಹಾಡುಗಳನ್ನು ಸಂರಕ್ಷಿಸಲು ಶ್ರಮಿಸಿದ್ದರು. ಅಲ್ಲದೆ ಸಾಮಾಜಿಕ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದರು ಎಂದು ಅವರು ಸ್ಮರಿಸಿದ್ದಾರೆ.

RELATED ARTICLES

Latest News