Home Blog Page 112

ರಷ್ಯಾದ ಅತಿದೊಡ್ಡ ತೈಲ ಟರ್ಮಿನಲ್‌ ಮೇಲೆ ಉಕ್ರೇನ್‌ ಡ್ರೋನ್‌ ದಾಳಿ

ನವದೆಹಲಿ,ಸೆ.13– ಬಾಲ್ಟಿಕ್‌ ಸಮುದ್ರದಲ್ಲಿರುವ ರಷ್ಯಾದ ಮಾಸ್ಕೋದ ಅತಿದೊಡ್ಡ ತೈಲ ಟರ್ಮಿನಲ್‌ ಮೇಲೆ ಕೈವ್‌ ಡ್ರೋನ್‌ ದಾಳಿ ನಡೆಸಿದೆ. ಇದರಿಂದ ಉಕ್ರೇನ್‌ ಮತ್ತು ರಷ್ಯಾ ನಡುವಿನ ಯುದ್ಧ ಮತ್ತೆ ತೀವ್ರಗೊಂಡಿದೆ.

ಉಕ್ರೇನಿಯನ್‌ ಅಧಿಕಾರಿಗಳ ಪ್ರಕಾರ, ರಷ್ಯಾದ ಲೆನಿನ್‌ಗ್ರಾಡ್‌ ಪ್ರದೇಶದ ಪ್ರಿಮೊಸ್ರ್ಕ್‌ ತೈಲ ಬಂದರನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದೆ. ಬಾಲ್ಟಿಕ್‌ ಪೈಪ್‌ಲೈನ್‌ ವ್ಯವಸ್ಥೆಯ ಕೊನೆಯ ನಿಲ್ದಾಣವಾದ ಪ್ರಿಮೊಸ್ರ್ಕ್‌ ತೈಲ ಬಂದರಿನ ಮೇಲೆ ನಡೆದ ಡ್ರೋನ್‌ ದಾಳಿಯಿಂದ ಎರಡು ಹಡಗುಗಳು ಹಾನಿಗೊಳಗಾದವು. ಆದರೆ, ಡ್ರೋನ್‌ ದಾಳಿಗೆ ರಷ್ಯಾದ ರಕ್ಷಣಾ ಅಧಿಕಾರಿಗಳು ಇನ್ನೂ ಪ್ರತಿಕ್ರಿಯಿಸಿಲ್ಲ.

ಡ್ರೋನ್‌ ದಾಳಿಯ ಸಮಯದಲ್ಲಿ ಡಿಕ್ಕಿ ಹೊಡೆದ ಎರಡು ಟ್ಯಾಂಕರ್‌ಗಳನ್ನು ಕುಸ್ಟೊ ಮತ್ತು ಕೈ ಯುನ್‌ ಎಂದು ಗುರುತಿಸಲಾಗಿದೆ. ಕಸ್ಟೊವನ್ನು ಸೊಲ್ಸ್ಟಿಸ್‌‍ ಕಾರ್ಪ್‌ ಒಡೆತನದಲ್ಲಿದೆ. ಕೈ ಯುನ್‌ ಅನ್ನು ಅಕ್ಸೆರೋನಿಕ್‌್ಸ ಲಿಮಿಟೆಡ್‌ ಒಡೆತನದಲ್ಲಿದೆ. ಜಾಗತಿಕ ಮಾಧ್ಯಮ ವರದಿಗಳ ಪ್ರಕಾರ, ಈ ಎರಡು ಹಡಗುಗಳು ಸೀಶೆಲ್‌ನಲ್ಲಿ ನೋಂದಾಯಿಸಲ್ಪಟ್ಟಿವೆ.

ಇತ್ತೀಚೆಗೆ, ರಷ್ಯಾ ಮತ್ತು ಉಕ್ರೇನ್‌ ಪರಸ್ಪರ ಡ್ರೋನ್‌ ದಾಳಿಗಳನ್ನು ತೀವ್ರಗೊಳಿಸಿವೆ. ನಿರ್ಣಾಯಕ ಮೂಲಸೌಕರ್ಯವನ್ನು ಗುರಿಯಾಗಿರಿಸಿಕೊಳ್ಳುವ ಗುರಿಯನ್ನು ಹೊಂದಿವೆ. ಡ್ರೋನ್‌ ದಾಳಿಗಳು ರಷ್ಯನ್ನರಿಗೆ ವಿಶೇಷವಾಗಿ ತೀವ್ರವಾಗಿವೆ. ಆಗಸ್ಟ್‌ನಲ್ಲಿ ನಡೆದ ಡ್ರೋನ್‌ ದಾಳಿಯಲ್ಲಿ ಉಕ್ರೇನ್‌ ರಷ್ಯಾದ ತೈಲ ಸಂಸ್ಕರಣಾ ಸಾಮರ್ಥ್ಯದ ಶೇ. 20ರಷ್ಟು ನಿಷ್ಕ್ರಿಯವಾಗಿದೆ.

ಈ ವಾರದ ಆರಂಭದಲ್ಲಿ ನ್ಯಾಟೋ ಸದಸ್ಯ ಪೋಲೆಂಡ್‌ ತನ್ನ ವಾಯುಪ್ರದೇಶದ ಮೇಲೆ ದೊಡ್ಡ ಸಂಖ್ಯೆಯ ರಷ್ಯಾದ ಡ್ರೋನ್‌ಗಳನ್ನು ಹೊಡೆದುರುಳಿಸಿರುವುದಾಗಿ ಹೇಳಿಕೊಂಡಿತ್ತು.

ಗುಜರಾತ್‌ನಲ್ಲಿ ಕಳೆದ ಎರಡು ವರ್ಷಗಳಲ್ಲಿ ಕನಿಷ್ಠ 307 ಏಷ್ಯಾಟಿಕ್‌ ಸಿಂಹಗಳ ಸಾವು

ಗಾಂಧಿನಗರ,ಸೆ.13- ಗುಜರಾತ್‌ನಲ್ಲಿ ಕಳೆದ ಎರಡು ವರ್ಷಗಳಲ್ಲಿ ಕನಿಷ್ಠ 307 ಏಷ್ಯಾಟಿಕ್‌ ಸಿಂಹಗಳು ಸಾವನ್ನಪ್ಪಿದ್ದು, ಇವುಗಳಲ್ಲಿ 41 ಸಾವುಗಳು ಅಸಹಜ ಕಾರಣಗಳಿಂದ ಸಂಭವಿಸಿವೆ ಎಂದು ರಾಜ್ಯ ಅರಣ್ಯ ಸಚಿವ ಮುಲುಭಾಯ್‌ ಬೇರಾ ವಿಧಾನಸಭೆಗೆ ತಿಳಿಸಿದ್ದಾರೆ.

ಪ್ರಶ್ನೋತ್ತರ ವೇಳೆಯಲ್ಲಿ ಆಮ್‌ ಆದಿ ಪಕ್ಷದ (ಎಎಪಿ) ಶಾಸಕ ಉಮೇಶ್‌ ಮಕ್ವಾನಾ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಿಂಹಗಳ ಅಸಹಜ ಸಾವುಗಳನ್ನು ಪರಿಶೀಲಿಸಲು ರಾಜ್ಯ ಸರ್ಕಾರ ಈ ಎರಡು ವರ್ಷಗಳಲ್ಲಿ ವಿವಿಧ ಕ್ರಮಗಳಿಗಾಗಿ 37.35 ಕೋಟಿ ರೂ. ಆಗಸ್ಟ್‌ 2023 ಮತ್ತು ಜುಲೈ 2024 ರ ನಡುವೆ 141 ಸಿಂಹಗಳು ಸತ್ತರೆ, ಆಗಸ್ಟ್‌ 2024 ಮತ್ತು ಜುಲೈ 2025 ರ ನಡುವೆ 166 ದೊಡ್ಡ ಬೆಕ್ಕುಗಳ ಸಾವು ವರದಿಯಾಗಿದೆ ಎಂದು ಬೆರಾ ಹೇಳಿದರು.

ಈ 307 ಸಿಂಹಗಳಲ್ಲಿ 41 ಅಸಹಜ ಕಾರಣಗಳಿಂದ ಸಾವನ್ನಪ್ಪಿವೆ. 20 ಬೆಕ್ಕುಗಳು ಬಾವಿಗೆ ಬಿದ್ದು ಸತ್ತರೆ, ಒಂಬತ್ತು ಇತರ ಜಲಮೂಲಗಳಲ್ಲಿ ಮುಳುಗಿವೆ. ಇತರ ಕಾರಣಗಳಲ್ಲಿ ನೈಸರ್ಗಿಕ ವಿಕೋಪ (ಎರಡು ಸಿಂಹಗಳು), ರಸ್ತೆ ಅಪಘಾತ (ಎರಡು), ರೈಲುಗಳು (ಐದು) ಮತ್ತು ವಿದ್ಯುತ್‌ ಆಘಾತಗಳು (ಮೂರು) ಸೇರಿವೆ.

ದೊಡ್ಡ ಬೆಕ್ಕುಗಳ ಅಸ್ವಾಭಾವಿಕ ಮರಣವನ್ನು ತಡೆಗಟ್ಟಲು ರಾಜ್ಯ ಸರ್ಕಾರವು ವಿವಿಧ ಸ್ಥಳಗಳಲ್ಲಿ ಕಾಡು ಪ್ರಾಣಿಗಳ ಚಿಕಿತ್ಸೆಗಾಗಿ ಕೇಂದ್ರಗಳನ್ನು ಸ್ಥಾಪಿಸುವುದು, ಪಶುವೈದ್ಯರನ್ನು ನೇಮಿಸುವುದು ಮತ್ತು ಸಿಂಹಗಳ ಸಕಾಲಿಕ ಮಧ್ಯಸ್ಥಿಕೆ ಮತ್ತು ಚಿಕಿತ್ಸೆಗಾಗಿ ಆಂಬ್ಯುಲೆನ್‌್ಸ ಸೇವೆಯನ್ನು ಪರಿಚಯಿಸುವುದು ಮುಂತಾದ ಹಲವಾರು ಕ್ರಮಗಳನ್ನು ಕೈಗೊಂಡಿದೆ ಎಂದು ಸಚಿವರು ಹೇಳಿದರು.

ಇತರ ಕ್ರಮಗಳೆಂದರೆ ಅಭಯಾರಣ್ಯ ಪ್ರದೇಶಗಳ ಮೂಲಕ ಹಾದುಹೋಗುವ ರಸ್ತೆಗಳಲ್ಲಿ ಸ್ಪೀಡ್‌ ಬ್ರೇಕರ್‌ಗಳನ್ನು ನಿರ್ಮಿಸುವುದು ಮತ್ತು ಸೈನ್‌ಬೋರ್ಡ್‌ಗಳನ್ನು ಅಳವಡಿಸುವುದು, ಕಾಡುಗಳಲ್ಲಿ ನಿಯಮಿತವಾದ ಕಾಲ್ನಡಿಗೆ, ಅರಣ್ಯಗಳ ಬಳಿ ತೆರೆದ ಬಾವಿಗಳಿಗೆ ಪ್ಯಾರಪೆಟ್‌ ಗೋಡೆಗಳನ್ನು ನಿರ್ಮಿಸುವುದು, ಗಿರ್‌ ವನ್ಯಜೀವಿ ಅಭಯಾರಣ್ಯದ ಬಳಿ ರೈಲ್ವೆ ಹಳಿಗಳ ಎರಡೂ ಬದಿಗಳಲ್ಲಿ ಬೇಲಿಗಳನ್ನು ಹಾಕುವುದು ಮತ್ತು ಏಷ್ಯಾಟಿಕ್‌ ಸಿಂಹಗಳ ಚಲನವಲನವನ್ನು ಪತ್ತೆಹಚ್ಚಲು ರೇಡಿಯೋ ಕಾಲರ್‌ ಮಾಡುವುದು ಸೇರಿವೆ ಎಂದು ಅವರು ಹೇಳಿದರು.

2025 ರ ಜನಗಣತಿಯ ಪ್ರಕಾರ, ಗುಜರಾತ್‌ನ ಗಿರ್‌ ವನ್ಯಜೀವಿ ಅಭಯಾರಣ್ಯ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳು 891 ಏಷ್ಯಾಟಿಕ್‌ ಸಿಂಹಗಳಿಗೆ ನೆಲೆಯಾಗಿದೆ. ಮೂರು ದಿನಗಳ ಕಾಲ ನಡೆದ ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯಗೊಂಡಿದೆ.

ಬೆಂಗಳೂರಲ್ಲಿ ಸರಣಿ ಅಪಘಾತ : ಇಬ್ಬರ ಸಾವು

ಬೆಂಗಳೂರು,ಸೆ.13- ಹಾಸನ ಘಟನೆ ಮಾಸುವ ಮುನ್ನವೇ ಇಂದು ಬೆಳ್ಳಂಬೆಳಿಗ್ಗೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸುಮನಹಳ್ಳಿ ಜಂಕ್ಷನ್‌ ರಸ್ತೆಯಲ್ಲಿ ಇಂದು ಬೆಳಿಗ್ಗೆ 7.45ರ ಸುಮಾರಿನಲ್ಲಿ ಅಡ್ಡ ದಾರಿಯಿಂದ ಅತೀ ವೇಗವಾಗಿ ಬರುತ್ತಿದ್ದ ಟ್ರಕ್‌ ಸುಮನಹಳ್ಳಿ ರಸ್ತೆಗೆ ಇಳಿದಾಗ ಬ್ರೇಕ್‌ಫೇಲ್ಯೂರ್‌ ಆಗಿ ಮುಂದೆ ಇದ್ದ ಕಾರು ಹಾಗೂ ಆಟೋಗೆ ಡಿಕ್ಕಿ ಹೊಡೆದಿದ್ದರಿಂದ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಆಟೋ ಚಾಲಕ ಹಾಗೂ ಅದರಲ್ಲಿದ್ದ ಪ್ರಯಾಣಿಕ ಮೃತಪಟ್ಟಿದ್ದು, ಅವರ ಹೆಸರು, ವಿಳಾಸ ಸದ್ಯಕ್ಕೆ ತಿಳಿದುಬಂದಿಲ್ಲ.

ಅಪಘಾತದಲ್ಲಿ ಗಾಯಗೊಂಡಿರುವ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗಾಗಿ ದಾಖಲಿಸಲಾಗಿದೆ.ಇಂದು ಬೆಳಿಗ್ಗೆ ಈ ಮಾರ್ಗದಲ್ಲಿ ಅಪಘಾತ ಸಂಭವಿಸಿದ್ದರಿಂದ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು.

ಸುದ್ದಿ ತಿಳಿದು ಕಾಮಾಕ್ಷಿಪಾಳ್ಯ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಅಪಘಾತದಿಂದ ಜಖಂಗೊಂಡಂತಹ ವಾಹನಗಳನ್ನು ತೆರವುಗೊಳಿಸಿ ನಂತರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

BIG STORY : ಹಾಸನ ಗಣೇಶೋತ್ಸವ ದುರಂತದಲ್ಲಿ ಮೃತಪಟ್ಟ ಒಬ್ಬೊಬ್ಬರದ್ದೂ ಒಂದೊಂದು ಕಣ್ಣೀರ ಕಥೆ

ಹಾಸನ,ಸೆ.13- ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ಮೇಲೆಯೇ ರಕ್ಕಸನಂತೆ ಟ್ರಕ್‌ ನುಗ್ಗಿದ್ದರಿಂದಾಗಿ ಕಣ್ಣು ಮುಚ್ಚಿ ಕಣ್ಣು ಬಿಡುವಷ್ಟರಲ್ಲಿ ಉಸಿರು ಚೆಲ್ಲಿದ 9 ಮಂದಿಯ ಕುಟುಂಬಗಳ ಕಣ್ಣೀರ ಕಥೆಗಳೇ ಕರುಣಾಜನಕವಾಗಿವೆ. ಈ ಹೃದಯ ವಿಧ್ರಾವಕ ಘಟನೆಯಿಂದ ಇಡೀ ಜಿಲ್ಲೆಯೇ ಶೋಕ ಸಾಗರದಲ್ಲಿ ಮುಳುಗಿದೆ.

ಈ ಘೋರ ದುರಂತದಲ್ಲಿ ಮೃತಪಟ್ಟವರಲ್ಲಿ ಯುವಕರೇ ಹೆಚ್ಚು. ಮನೆಗೆ ಆಧಾರವಾಗಬೇಕಿದ್ದ ಯುವಕರ ಭೀಕರ ಅಂತ್ಯವಾಗಿರುವುದು ದುರ್ದೈವ. ಮಕ್ಕಳನ್ನು ಕಳೆದುಕೊಂಡ ಹೆತ್ತವರ ಕಣ್ಣೀರ ಕೋಡಿಯೇ ಹರಿದಿದೆ. ಮೃತಪಟ್ಟ ಒಬ್ಬೊಬ್ಬರದ್ದೂ ಒಂದೊಂದು ಕಣ್ಣೀರ ಕಥೆಯಾಗಿದೆ.
ಮೃತಪಟ್ಟವರ ಪೈಕಿ 6 ಮಂದಿ ಸ್ಥಳೀಯ ನಿವಾಸಿಗಳು. ಉಳಿದ ಮೂವರು ಬಳ್ಳಾರಿ, ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯವರು ಎಂದು ಗುರುತಿಸಲಾಗಿದೆ.

ಮೃತ ದೇಹಗಳ ಹಸ್ತಾಂತರ:
ಸಮುದಾಯ ಆರೋಗ್ಯ ಕೇಂದ್ರದಲ್ಲಿ ಒಂಬತ್ತು ಮಂದಿಯ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆ ನಡೆಸಿ, ಇಂದು ಮುಂಜಾನೆ ವಾರಸುದಾರರಿಗೆ ಹಸ್ತಾಂತರಿಸಲಾಯಿತು.
ಆರೋಗ್ಯ ಕೇಂದ್ರದ ಬಳಿ ಜಮಾಯಿಸಿದ ಮೃತರ ಪೋಷಕರು, ಸಂಬಂಧಿಕರು, ಸ್ನೇಹಿತರ ಗೋಳಾಟ ಕರಳು ಕಿವುಚುವಂತಿತ್ತು.

ಮೃತರ ವಿವರ:
ಬಳ್ಳಾರಿಯ ಪ್ರವೀಣ್‌ ಕುಮಾರ್‌, ಹೊಳೇನರಸೀಪುರ ತಾಲ್ಲೂಕಿನ ಡನಾಯಕನಹಳ್ಳಿ ಕೊಪ್ಪಲು ನಿವಾಸಿ ಈಶ್ವರ (17), ಹಳೇ ಕೋಟೆ ಹೋಬಳಿಯ ಕಬ್ಬಿನಹಳ್ಳಿ ಗ್ರಾಮದ ಕುಮಾರ (25), ಪ್ರವೀಣ್‌, (25), ಕೆ.ಬಿ.ಪಾಳ್ಯದ ರಾಜೇಶ (17), ಮುತ್ತಿಗೆ ಹೀರಳ್ಳಿ ಗ್ರಾಮದ ಗೋಕುಲ (17), ಹಾಸನದ ಬಂಟರಹಳ್ಳಿಯ ಪ್ರಭಾಕರ್‌ (55), ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಗವಿಗಂಗಾಪುರ ಗ್ರಾಮದ ಮಿಥುನ್‌ (23) ಹಾಗೂ ಚಿಕ್ಕಮಗಳೂರು ಜಿಲ್ಲೆ ಮಣೆನಹಳ್ಳಿ ಮಲ್ಲೆ ಗ್ರಾಮದ ಸುರೇಶ ಮೃತ ದುರ್ದೈವಿಗಳು.

ಮೃತರ ಪೈಕಿ ಐದು ಮಂದಿ ಎಂಜಿನಿಯರಿಂಗ್‌ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಇವರು ಮೊಸಳೆಹೊಸಳ್ಳಿ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು ಎಂದು ಐಜಿಪಿ ಬೋರಲಿಂಗಯ್ಯ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.ಅಪಘಾತದಲ್ಲಿ ಗಾಯಗೊಂಡಿರುವ 20ಕ್ಕೂ ಹೆಚ್ಚು ಮಂದಿಯನ್ನು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಇನ್ನು ಕೆಲವು ಗಾಯಾಳುಗಳು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗಾಯಗೊಂಡಿರುವ 19 ಮಂದಿ ಪೈಕಿ ಇಬ್ಬರ ಸ್ಥಿತಿ ಸ್ಥಿರವಾಗಿದೆ. ಇಬ್ಬರು ಗಾಯಾಳುಗಳಿಗೆ ಪಕ್ಕೆಲುಬು ಮೂಳೆ ಮುರಿತವಾಗಿದ್ದರಿಂದ ಅವರನ್ನು ತುರ್ತು ಶಸ್ತ್ರ ಚಿಕಿತ್ಸೆಗೊಳಪಡಿಸಲಾಗಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಹುಟ್ಟುಹಬ್ಬ ದಿನವೇ ಯುವಕ ಸಾವು:
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ನಿವಾಸಿ ಮಿಥುನ್‌ ರಾತ್ರಿಯಷ್ಟೇ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡು ನಂತರ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯಲ್ಲಿ ಪಾಲ್ಗೊಂಡು ದುರಂತ ಅಂತ್ಯವಾಗಿರುವುದು ವಿಷಾದಕರ.

ಮನೆಗೆ ಆಧಾರವಾಗಬೇಕಾದವರೇ ದುರ್ಮರಣ:
ಈ ಅಪಘಾತದಲ್ಲಿ ಮೃತಪಟ್ಟ ಯುವಕರು 17 ರಿಂದ 25 ವಯೋಮಾನದವರು. ಇದು ಸಾಯುವ ವಯಸ್ಸಂತೂ ಅಲ್ಲವೇ ಅಲ್ಲ. ಎದೆಯುದ್ದ ಬೆಳೆದು ನಿಂತಿದ್ದ ಮಕ್ಕಳು ಮುಂದೊಂದು ದಿನ ಮನೆಗೆ ಆಧಾರವಾಗುತ್ತಾರೆ ಎಂದು ಪೋಷಕರು ಹಲವು ಕನಸು ಕಂಡಿದ್ದರು. ಈ ಯುವಕರೂ ಸಹ ವಿದ್ಯಾಭ್ಯಾಸ ಮಾಡಿ, ಉದ್ಯೋಗ ಪಡೆದುಕೊಳ್ಳುವ ಗುರಿ ಹೊಂದಿದ್ದರು. ಆದರೆ ಈ ಭೀಕರ ದುರಂತ ಯುವಕರ ಬದುಕನ್ನೇ ಅಂತ್ಯಗೊಳಿಸಿದರೆ, ಇನ್ನು ಅವರುಗಳ ಪೋಷಕರು ಕಣ್ಣೀರಲ್ಲಿ ಕೈ ತೊಳೆಯುವಂತಾಗಿದೆ.

ಅಪಘಾತವಾದದ್ದು ಹೇಗೆ:
ಹಾಸನ ಜಿಲ್ಲೆಯ ಮೊಸಳೆಹೊಸಹಳ್ಳಿ ಗ್ರಾಮದಲ್ಲಿ ನಿನ್ನೆ ಹಬ್ಬದ ವಾತಾವರಣವಿತ್ತು. ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದ ಗ್ರಾಮಸ್ಥರು ಮಧ್ಯಾಹ್ನ ಮೆರವಣಿಗೆ ಆರಂಭಿಸಿದ್ದರು. ಡಿಜೆ ಸಂಗೀತದೊಂದಿಗೆ ನೃತ್ಯ ಮಾಡಿಕೊಂಡು ಮೆರವಣಿಗೆ ತೆರಳುತ್ತಿದ್ದು, ಮೊಸಳೆಹೊಸಳ್ಳಿಯ ಸಂತೆ ಮಾಳದಲ್ಲಿ ಸಂಗೀತ ರಸಸಂಜೆ ಆಯೋಜಿಸಲಾಗಿತ್ತು. ಗಣೇಶೋತ್ಸವದ ಮೆರವಣಿಗೆ ಇನ್ನು 5 ನಿಮಿಷಗಳ ಕಾಲ ಮುಂದೆ ಹೋಗಿದ್ದರೆ ಸಂತೆಮಾಳ ಸೇರಿಕೊಳ್ಳುತ್ತಿತ್ತು. ಅಷ್ಟರಲ್ಲಿ ದುರ್ಘಟನೆ ಸಂಭವಿಸಿದೆ.

ಸುಮಾರು ಎರಡು ಸಾವಿರಕ್ಕೂ ಹೆಚ್ಚು ಗ್ರಾಮಸ್ಥರು ಮೆರವಣಿಗೆಯಲ್ಲಿ ಭಕ್ತಿಭಾವದಿಂದ ಪಾಲ್ಗೊಂಡಿದ್ದರು. ರಾತ್ರಿ 8.30ರ ಸುಮಾರಿನಲ್ಲಿ ಈ ಮೆರವಣಿಗೆ ಮೈಸೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಸರಕು ಸಾಗಾಣಿಕೆಯ ಕಂಟೈನರ್‌ ಬೈಕ್‌ಗೆ ಗುದ್ದಿ, ಬಲಭಾಗಕ್ಕೆ ತಿರುಗಿ ಡಿವೈಡರ್‌ನ್ನು ಹತ್ತಿ ಪಕ್ಕದ ರಸ್ತೆಯಲ್ಲಿದ್ದ ಮೆರವಣಿಗೆಯ ಮೇಲೆ ಹರಿದಿದೆ. ಇದರಿಂದ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 20 ಮಂದಿ ಗಂಭೀರ ಗಾಯಗೊಂಡಿದ್ದಾರೆ.

ಕಂಗಾಲಾದ ಗ್ರಾಮಸ್ಥರು :
ಹಬ್ಬದ ವಾತಾವರಣವಿದ್ದ ಗ್ರಾಮ ಕ್ಷಣಾರ್ಧದಲ್ಲಿ ದುರಂತವಾಗಿ ಪರಿವರ್ತನೆಯಾಗಿರುವುದು ದುರ್ದೈವ. ಇಡೀ ಗ್ರಾಮವೇ ರಾತ್ರಿಯಿಡೀ ಜಾಗರಣೆ ಮಾಡಿದೆ. ಯುವಕರು ದುರಂತ ಅಂತ್ಯ ಕಂಡಿರುವುದಕ್ಕೆ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.

ದೇಶಾದ್ಯಂತ ಆಘಾತ :
ಈ ಭೀಕರ ಅಪಘಾತದ ದೃಶ್ಯ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ವೈರಲ್‌ ಆಗಿರುವುದರಿಂದ ದೇಶಾದ್ಯಂತ ತೀವ್ರ ಆಘಾತ ವ್ಯಕ್ತವಾಗಿದೆ.ಘಟನೆಯ ತೀವ್ರತೆ ಹಾಗೂ ಅಪಘಾತದ ವಿಭಿನ್ನ ದೃಶ್ಯಗಳು ಮೈ ಜುಮೆನ್ನುವಂತಿದ್ದು, ಗಾಬರಿ ಹುಟ್ಟಿಸುವಂತಿವೆ. ಅಪಘಾತದ ವಿಡಿಯೋ ದೃಶ್ಯಾವಳಿಗಳನ್ನು ನೋಡಿದ ಜನರು ಘಟನೆಯ ಭೀಕರತೆಯನ್ನು ಕಂಡು ಬೆಚ್ಚಿಬಿದ್ದಿದ್ದಾರೆ.

ಗಣ್ಯರು ಸಂತಾಪ :
ಹಾಸನ, ಸೆ.13- ಗಣೇಶೋತ್ಸವದ ಮೇಲೆ ಲಾರಿ ಹರಿದು 9 ಮಂದಿ ಮೃತಪಟ್ಟ ಘಟನೆ ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗಿದ್ದು, ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಜೆಡಿಎಸ್‌‍ನ ಮುಖಂಡರು ಹಾಗೂ ಹೊಳೆನರಸೀಪುರ ಶಾಸಕರಾದ ಎಚ್‌.ಡಿ.ರೇವಣ್ಣ ಅವರ ಪುತ್ರರು ಆಗಿರುವ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣ, ಜೆಡಿಎಸ್‌‍ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ರಾತ್ರಿಯೇ ಸ್ಥಳಕ್ಕೆ ಭೇಟಿ ನೀಡಿದ್ದರು.

ಸಂಸದ ಶ್ರೇಯಸ್‌‍ ಪಟೇಲ್‌ ಕೂಡ ಸ್ಥಳಕ್ಕೆ ತೆರಳಿ ಪರಿಹಾರ ಕಾರ್ಯಗಳ ಉಸ್ತುವಾರಿ ನೋಡಿಕೊಂಡರು. ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ, ಎಸ್‌‍ಪಿ ಮೊಹಮದ್‌ ಸುಚೇತಾ, ಸಿಇಓ ಪೂರ್ಣಿಮಾ ಅವರು ರಾತ್ರಿಯೇ ಸ್ಥಳದಲ್ಲೇ ಮೊಕ್ಕಂ ಹೂಡಿದರು.

ಇಂದು ಬೆಳಗ್ಗೆ ಹಾಸನ ಜಿಲ್ಲೆಯ ಉಸ್ತುವಾರಿಯು ಆಗಿರುವ ಕಂದಾಯ ಸಚಿವ ಕೃಷ್ಣಭೈರೇಗೌಡ ಜಿಲ್ಲೆಗೆ ಭೇಟಿ ನೀಡಿ, ಹೆದ್ದಾರಿಯ ಸಮೀಪದಲ್ಲಿರುವ ಸರ್ಕಾರಿ ಶಾಲೆಯಲ್ಲೇ ಸಂಸದರು, ಡಿಸಿ, ಎಸ್‌‍ಪಿ, ಸಿಇಓ ಅವರ ಜೊತೆ ತುರ್ತು ಸಭೆ ನಡೆಸಿದರು. ನಂತರ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿ ಮಾಡಿ ಘಟನೆ ವಿವರ ಪಡೆದರು. ಮೃತಪಟ್ಟವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಮೃತಪಟ್ಟ ಕುಟುಂಬಗಳ ಮನೆಗಳಿಗೂ ಭೇಟಿ ನೀಡಿದರು.

ನೇಪಾಳದ ಮಧ್ಯಂತರ ಪ್ರಧಾನಿ ಸುಶೀಲಾ ಕರ್ಕಿ ಅವರಿಗೆ ಮೋದಿ ಅಭಿನಂದನೆ

ಕಠಂಡು,ಸೆ.13- ನೇಪಾಳದ ಮಧ್ಯಂತರ ಪ್ರಧಾನಿ ಸುಶೀಲಾ ಕರ್ಕಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಹಿಂಸಾತಕ ಪ್ರತಿಭಟನೆಗಳ ಸಮಯದಲ್ಲಿ, ನೇಪಾಳದಲ್ಲಿ ಖಾಸಗಿ ಮತ್ತು ಸಾರ್ವಜನಿಕ ಆಸ್ತಿಗಳು ದೊಡ್ಡ ಪ್ರಮಾಣದಲ್ಲಿ ನಾಶವಾಗಿವೆ ಎಂದು ನಾವು ನಿಮಗೆ ಹೇಳೋಣ. ನೂರಾರು ಕೋಟಿ ಮೌಲ್ಯದ ಆಸ್ತಿ ನಾಶವಾಗಿದೆ, ಅಂತಹ ಪರಿಸ್ಥಿತಿಯಲ್ಲಿ, ಹೂಡಿಕೆದಾರರ ಯೋಜನೆಗಳು ಸಹ ಪರಿಣಾಮ ಬೀರಿವೆ.

ಅತ್ಯಂತ ನಿರ್ಣಾಯಕ ವಿಷಯವೆಂದರೆ ಜೀವನೋಪಾಯದ ಅತಿದೊಡ್ಡ ಸಾಧನವಾದ ಪ್ರವಾಸೋದ್ಯಮ ಸಹ ಹಿನ್ನಡೆ ಅನುಭವಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಎಕ್‌್ಸನಲ್ಲಿ ಪೋಸ್ಟ್‌ ಮಾಡುವ ಮೂಲಕ ಸುಶೀಲಾ ಕರ್ಕಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಅವರು ತಮ ಪೋಸ್ಟ್‌ನಲ್ಲಿ ನೇಪಾಳದ ಮಧ್ಯಂತರ ಸರ್ಕಾರದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಗೌರವಾನ್ವಿತ ಸುಶೀಲಾ ಕರ್ಕಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ನೇಪಾಳದ ಸಹೋದರ ಸಹೋದರಿಯರ ಶಾಂತಿ, ಪ್ರಗತಿ ಮತ್ತು ಸಮೃದ್ಧಿಗೆ ಭಾರತ ಸಂಪೂರ್ಣವಾಗಿ ಬದ್ಧವಾಗಿದೆ ಎಂದು ಬರೆದಿದ್ದಾರೆ.

ಕರ್ಕಿಯವರಿಗೆ ಬರೆದ ಅಭಿನಂದನಾ ಸಂದೇಶದಲ್ಲಿ, ಭಾರತವು ಈ ನೆರೆಯ ದೇಶದ ಅಭಿವೃದ್ಧಿ ಮತ್ತು ಶಾಂತಿಯಲ್ಲಿ ಪ್ರಮುಖ ಪಾತ್ರ ವಹಿಸುವುದನ್ನು ಮುಂದುವರಿಸುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದರ ಜೊತೆಗೆ, ಅಲ್ಲಿನ ಜನರಲ್ಲಿ ಶಾಂತಿ ಮತ್ತು ಸೌಹಾರ್ದತೆಯ ಮನೋಭಾವವನ್ನು ಕಾಪಾಡಿಕೊಳ್ಳುವಲ್ಲಿಯೂ ಸಹ ಇದು ಕೊಡುಗೆ ನೀಡುತ್ತದೆ ಎಂದಿದ್ದಾರೆ.

ನೇಪಾಳದಲ್ಲಿ ಹಿಂಸಾತಕ ಪ್ರತಿಭಟನೆಗಳ ನಂತರ, ಮತ್ತೊಮೆ ಅಧಿಕಾರ ಬದಲಾವಣೆಯಾಗಿದೆ. ಇದಕ್ಕೂ ಮೊದಲು, ರಾಜಮನೆತನದ ವಿರುದ್ಧ ಪ್ರತಿಭಟನೆಯ ಬೆಂಕಿ ಭುಗಿಲೆದ್ದಿತ್ತು, ನಂತರ ವಿಭಿನ್ನ ರೀತಿಯ ಆಡಳಿತ ಕಂಡುಬಂದಿತು. ಈಗ ಯುವಕರ ಪ್ರತಿಭಟನೆಯಿಂದಾಗಿ, ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ತಮ ಹುದ್ದೆಗೆ ರಾಜೀನಾಮೆ ನೀಡಿದರು ಮತ್ತು ಅವರ ಸರ್ಕಾರ ಪತನಗೊಂಡಿತು. ಇಂತಹ ಬಿಕ್ಕಟ್ಟಿನ ಸಮಯದಲ್ಲಿ, ನೇಪಾಳದ ಮಾಜಿ ಮುಖ್ಯ ನ್ಯಾಯಾಧೀಶೆ ಸುಶೀಲಾ ಕರ್ಕಿ ಅವರನ್ನು ಮಧ್ಯಂತರ ಪ್ರಧಾನಿಯನ್ನಾಗಿ ಮಾಡಲಾಗಿದೆ.

ಪ್ರಸಿದ್ಧ ನ್ಯಾಯಾಧೀಶೆ ಮತ್ತು ಪ್ರಸಿದ್ಧ ಬರಹಗಾರ್ತಿಯಾಗಿರುವ ಸುಶೀಲಾ ಕರ್ಕಿ ಅವರಿಗೆ ಜನರಲ್‌‍-ಜಿ ಅವರ ಬೆಂಬಲವೂ ಸಿಕ್ಕಿದೆ. 5000 ಕ್ಕೂ ಹೆಚ್ಚು ಜನರ ಸಭೆಯಲ್ಲಿ, ಹೆಚ್ಚಿನ ಸದಸ್ಯರು ಸುಶೀಲಾ ಕರ್ಕಿ ಅವರ ಹೆಸರನ್ನು ಒಪ್ಪಿಕೊಂಡಿದ್ದಾರೆ. ನ್ಯಾಯಾಧೀಶೆಯಾಗಿದ್ದಾಗ, ಸುಶೀಲಾ ಕರ್ಕಿ ಭ್ರಷ್ಟಾಚಾರದ ವಿರುದ್ಧ ಮಾತ್ರವಲ್ಲದೆ ಭಯೋತ್ಪಾದನೆಯ ವಿರುದ್ಧವೂ ಕಠಿಣ ನಿಲುವನ್ನು ತೆಗೆದುಕೊಂಡಿದ್ದಾರೆ. ಇದೇ ಕಾರಣಕ್ಕೆ ಅವರು ಜನರಲ್‌‍-ಜಿ ಅವರ ಮೊದಲ ಆಯ್ಕೆಯಾದರು ಮತ್ತು 73 ನೇ ವಯಸ್ಸಿನಲ್ಲಿ ನೇಪಾಳದ ರಾಜಕೀಯದ ಪ್ರಮುಖ ಮುಖವಾದರು.

ಶೀಲಾ ಕರ್ಕಿ ಭಾರತದೊಂದಿಗೆ ಆಳವಾದ ಸಂಬಂಧ ಹೊಂದಿದ್ದಾರೆ. ಅವರು 1952ರಲ್ಲಿ ಬಿರಾಟ್‌ ನಗರದ ಶಂಕರ್‌ಪುರದಲ್ಲಿ ಜನಿಸಿದರು. ಅವರ ತಂದೆ ವೃತ್ತಿಯಲ್ಲಿ ರೈತರಾಗಿದ್ದರು. ಸುಶೀಲಾ ಏಳು ಜನ ಒಡಹುಟ್ಟಿದವರಲ್ಲಿ ಹಿರಿಯರು. 1971 ರಲ್ಲಿ, ಅವರು ತ್ರಿಭುವನ್‌ ವಿಶ್ವವಿದ್ಯಾಲಯದ ಮಹೇಂದ್ರ ಮೊರಾಂಗ್‌ನಿಂದ ಪದವಿ ಪಡೆದರು ಮತ್ತು ನಂತರ 1975 ರಲ್ಲಿ ಅವರು ಬನಾರಸ್‌‍ ಹಿಂದೂ ವಿಶ್ವವಿದ್ಯಾಲಯದಿಂದ ರಾಜಕೀಯ ವಿಜ್ಞಾನದಲ್ಲಿ ಪದವಿ ಪಡೆದರು.

1978 ರಲ್ಲಿ ಕಾನೂನು ಅಧ್ಯಯನವನ್ನು ಪೂರ್ಣಗೊಳಿಸಿದ ನಂತರ, ಸುಶೀಲಾ ಕರ್ಕಿ ಬಿರಾಟ್‌ ನಗರದಿಂದಲೇ ಕಾನೂನು ಅಭ್ಯಾಸ ಮಾಡಲು ಪ್ರಾರಂಭಿಸಿದರು. ಸುಶೀಲಾ ಕರ್ಕಿ ನೇಪಾಳ ಕಾಂಗ್ರೆಸ್‌‍ನ ಪ್ರಸಿದ್ಧ ನಾಯಕ ದುರ್ಗಾ ಪ್ರಸಾದ್‌ ಸುಬೇದಿ ಅವರೊಂದಿಗೆ ಸಪ್ತಪದಿ ತುಳಿದರು. ಇಬ್ಬರೂ ಬನಾರಸ್‌‍ ಹಿಂದೂ ವಿಶ್ವವಿದ್ಯಾಲಯದಲ್ಲಿ ಭೇಟಿಯಾದರು, ನಂತರ ಇಬ್ಬರೂ ವಿವಾಹವಾದರು. ಸುಶೀಲಾ ಕರ್ಕಿ ಅವರ ಪತಿ ಸುಬೇದಿ ಅವರ ಹೆಸರನ್ನು 1970 ರಲ್ಲಿ ನೇಪಾಳ ಕಾಂಗ್ರೆಸ್‌‍ನ ಯುವ ಕ್ರಾಂತಿಕಾರಿಗಳಲ್ಲಿ ಸೇರಿಸಲಾಯಿತು.

ಮೊಸಳೆಹೊಸಳ್ಳಿ ಅಪಘಾತ : ಉನ್ನತಮಟ್ಟದ ತನಿಖೆಗೆ ನಿಖಿಲ್‌ ಕುಮಾರಸ್ವಾಮಿ ಆಗ್ರಹ

ಹಾಸನ, ಸೆ.13– ಹಾಸನ ತಾಲ್ಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ದುರಂತ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಜೆಡಿಎಸ್‌‍ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಆಗ್ರಹಿಸಿದರು.

ಅಪಘಾತದ ಹಿನ್ನೆಲೆಯಲ್ಲಿ ತಡ ರಾತ್ರಿ ಅವರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಮೃತರ ಕುಟುಂಬದರಿಗೆ ಸಾಂತ್ವನ ಹೇಳಿದರು. ನಂತರ ಗಾಯಾಳುಗಳ ಆರೋಗ್ಯ ವಿಚಾರಿಸಿ ಕುಟುಂಬದವರಿಗೆ ಧೈರ್ಯ ತುಂಬಿದರು.

ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಅಪಘಾತದ ದುರಂತದ ವಿಡಿಯೋ ನೋಡಿ ನಾವೆಲ್ಲರೂ ಬೆಚ್ಚಿಬಿದ್ದಿದ್ದೇವೆ. ನಾವು ಜೀರ್ಣ ಮಾಡಿಕೊಳ್ಳಲಾಗದ ದೃಶ್ಯ ಅದು. ತಂದೆ-ತಾಯಿ ತಮ ಮಕ್ಕಳ ಭವಿಷ್ಯ ಬಗ್ಗೆ ದೊಡ್ಡ ಕನಸನ್ನು ಕಟ್ಟಿಕೊಂಡಿರುತ್ತಾರೆ. ಈ ಅಪಘಾತದಿಂದ ಅವರ ಮನಸ್ಸಿನ ಮೇಲೆ ಆಗಿರುವ ನೋವನ್ನು ನಾವು ಯಾರು ಹೋಗಲಾಡಿಸಲು ಆಗುವುದಿಲ್ಲ. ತಾಯಿ ಚಾಮುಂಡೇಶ್ವರಿ ದೇವಿಯು ಈ ನೋವನ್ನು ಭರಿಸುವಂತಹ ಶಕ್ತಿಯನ್ನು ಮೃತರ ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

ದುರ್ಘಟನೆಯಿಂದ ಉಂಟಾಗಿರುವ ಜೀವ ಹಾನಿಗೆ ಯಾರೂ ಬೆಲೆ ಕಟ್ಟಲು ಆಗುವುದಿಲ್ಲ. ಅದರಲ್ಲೂ ಅವರ ತಂದೆ, ತಾಯಿಗಳು ಮಕ್ಕಳ ಭವಿಷ್ಯ ರೂಪಿಸುವುದಕ್ಕೆ ಕಂಡಿದ್ದ ಕನಸುಗಳು ಇವತ್ತು ಮಣ್ಣುಪಾಲಾಗಿವೆ ಎಂದು ಬೇಸರ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಗಳು ಮೃತರಿಗೆ 5 ಲಕ್ಷ ಪರಿಹಾರ ಘೋಷಣೆ ಮಾಡಿರುವುದನ್ನು ಸ್ವಾಗತ ಮಾಡುತ್ತೇವೆ. ಅವರ ಕುಟುಂಬದ ಆರ್ಥಿಕ ಪರಿಸ್ಥಿತಿಯನ್ನು ತಿಳಿದುಕೊಂಡು ಮಾನವೀಯತೆ ದೃಷ್ಟಿಯಿಂದ ಸರ್ಕಾರ ಇನ್ನೂ ಹೆಚ್ಚಿನ ಪರಿಹಾರ ಘೋಷಣೆ ಮಾಡಬೇಕು ಎಂದು ನಿಖಿಲ್‌ ಕುಮಾರಸ್ವಾಮಿ ಅವರು ಆಗ್ರಹಿಸಿದರು.ಈ ಸಂದರ್ಭದಲ್ಲಿ ಶಾಸಕರಾದ ಸ್ವರೂಪ್‌ ಪ್ರಕಾಶ್‌, ಹೆಚ್‌.ಟಿ ಮಂಜು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ದೇವೇಗೌಡರ ಸಂತಾಪ
ಬೆಂಗಳೂರು, ಸೆ.13-ಹಾಸನ ಜಿಲ್ಲೆಯ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದ ಭೀಕರ ಅಪಘಾತದಿಂದ 8 ಜನ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡ ಘಟನೆಯ ಬಗ್ಗೆ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು ಹಾಗೂ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸಂಭವಿಸಿರುವ ಭೀಕರ ಅಪಘಾತದ ಹೃದಯವಿದ್ರಾವಕ ಘಟನೆ ಮನಸ್ಸಿಗೆ ತೀವ್ರ ನೋವುಂಟುಮಾಡಿದೆ. ಮೃತರ ಆತಕ್ಕೆ ಶಾಂತಿ ಸಿಗಲಿ ಹಾಗೂ ಮೃತರ ಕುಟುಂಬದವರಿಗೆ ಈ ನೋವು ಭರಿಸುವ ಶಕ್ತಿ ದೇವರು ನೀಡಲಿ ಎಂದಿರುವ ದೇವೇಗೌಡರು, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಭೀಕರ ಅಪಘಾತ ಸಂಭವಿಸಿ ಹಲವರು ಜೀವ ಕಳೆದುಕೊಂಡು, 20ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು ಎಂದು ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ಗಣಪತಿ ಮೆರವಣಿಗೆ ಹೋಗುತ್ತಿದ್ದವರ ಮೇಲೆ ಟ್ರಕ್‌ ಹರಿದು ಭಕ್ತರ ಸಾವುಂಟಾಗಿರುವುದು ನನಗೆ ಅತ್ಯಂತ ದುಃಖ ಉಂಟು ಮಾಡಿದೆ.

ಇದು ಅತೀವ ದುರ್ದೈವದ ಘಟನೆಯಾಗಿದ್ದು, ಮೃತರ ಆತಕ್ಕೆ ಭಗವಂತ ಸದ್ಗತಿ ಕರುಣಿಸಲಿ ಹಾಗೂ ದುಃಖತಪ್ತ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಅವರು Xನಲ್ಲಿ ಹೇಳಿದ್ದಾರೆ. ಎಲ್ಲಾ ಗಾಯಾಳುಗಳು ಅದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯ ಸರ್ಕಾರ ಗಾಯಾಳುಗಳಿಗೆ ಉತ್ತಮ, ಉಚಿತ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಹಾಸನ ಗಣೇಶೋತ್ಸವ ದುರಂತ : ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ ಪ್ರಧಾನಿ

ನವದೆಹಲಿ : ಕರ್ನಾಟಕದ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಮೊಸಳೆ ಹೊಸಳ್ಳಿ ಬಳಿ ಗಣೇಶ ಉತ್ಸವದ ವೇಳೆಟ್ರಕ್ ಹರಿದುಸಾವನ್ನಪ್ಪಿದವರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿಯವರು 2 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋದಿಯವರು ಟ್ರಕ್ಹರಿದು ಸಾವನ್ನಪ್ಪಿದ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲ 50,000 ಪರಿಹಾರವನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ( PMNR) ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಇನ್ನು ಘಟನೆಯ ಕುರಿತಂತೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮೋದಿಯವರು ಸಾವು- ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಗಾಯಗಳು ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಸಾವನ್ನಪ್ಪಿದವರ ಕುಟುಂಬಕ್ಕೆ ನನ್ನ ನಮನಗಳು. ಅಪಘಾತದ ಸುದ್ದಿ ಕೇಳಿ ತುಂಬಾ ನೋವಾಗಿದೆ. ಗಣೇಶ ವಿಸರ್ಜನೆ ವೇಳೆ ಇಂತಹ ದುರ್ಘಟನೆ ನಡೆದಿರುವುದು ನಿಜಕ್ಕೂ ಅತ್ಯಂತ ನೋವಿನ ಸಂಗತಿ ಎಂದು ವಿಷಾದಿಸಿದ್ದಾರೆ.

ಕರ್ನಾಟಕ ಸರ್ಕಾರ ಗಾಯಾಳುಗಳಿಗೆ ಎಲ್ಲಾ ರೀತಿಯ ಚಿಕಿತ್ಸೆ ನೆರವು ನೀಡುತ್ತದೆ ಎಂಬುದರ ಕುರಿತು ಮಾಹಿತಿ ಪಡೆದುಕೊಂಡಿದ್ದೇನೆ. ಅಲ್ಲಿನ ಸರ್ಕಾರ ತ್ವರಿತ ಗತಿಯಲ್ಲಿ ಗಾಯನಗಳಿಗೆ ಚಿಕಿತ್ಸೆ ನೀಡಲಿದೆ ಎಂದು ಹೇಳಿದ್ದಾರೆ. ಘಟನೆಯ ಸುದ್ದಿ ಕೇಳಿ ನನ್ನ ಮನಸ್ಸಿಗೆ ಅಗತ್ಯವಾಗಿದೆ ಇದನ್ನು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ ನೊಂದವರ ಕುಟುಂಬದ ಜೊತೆ ಸರಕಾರ ಇರಲಿದೆ .ಎಷ್ಟು ಸಾಧ್ಯವಾದಷ್ಟು ಬೇಗ ಗಾಯಗಳು ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ಮೋದಿ ಏಕ್ಸ್ ನಲ್ಲಿ ಹೇಳಿದ್ದಾರೆ.

ಶುಕ್ರವಾರ ರಾತ್ರಿ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನಮೂಳೆಹೊಸಹಳ್ಳಿ ಬಳಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಬೈಕ್ ಅಪಘಾತ ಸಂಭವಿಸುವುದನ್ನು ತಡೆಗಟ್ಟುವ ವೇಳೆ ಚಾಲಕ
ಬಾರಿ ಸಂಖ್ಯೆಯಲ್ಲಿದ್ದ ಜನರ ಮೇಲೆ ನುಗ್ಗಿದ ಪರಿಣಾಮ 9 ಮಂದಿ ಸಾವನ್ನಪ್ಪಿ 20ಕ್ಕೆ ಹೆಚ್ಚು ಬಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.ಸದ್ಯ ಹಾಸನದ ಸರ್ಕಾರಿ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಕೆಲವರ ಸ್ಥಿತಿ ಈಗಲೂ ಚಿಂತಾ ಜನಕವಾಗಿದೆ.ತೀವ್ರವಾಗಿ ಗಾಯಗೊಂಡಿರುವ ಕೆಲವರನ್ನು ICUನಲ್ಲಿ ಚಿಕಿತ್ಸೆ ನೀಡಲಾಗುತ್ತದೆ.


ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (13-09-2025)

ನಿತ್ಯ ನೀತಿ : ಮೊದಲ ಪ್ರಯತ್ನದಲ್ಲಿ ಗೆಲ್ಲುವವರು ಬದುಕಿನಲ್ಲಿ ಗೆಲ್ಲಬಲ್ಲರು, ಆದರೆ ಮೊದಲ ಪ್ರಯತ್ನದಲ್ಲಿ ಸೋತವರು ಜಗತ್ತನ್ನೇ ಗೆಲ್ಲಬಲ್ಲರು. ಯಾಕೆಂದರೆ ಸಂಕಟದೊಂದಿಗೆ ಸೆಣಸಾಡುವ ಮನಸ್ಸಿಗೇ ಛಲ ಹೆಚ್ಚು.

ಪಂಚಾಂಗ : ಶನಿವಾರ, 13-09-2025
ವಿಶ್ವಾವಸುನಾಮ ಸಂವತ್ಸರ / ಅಯನ:ದಕ್ಷಿಣಾಯನ / ಋತು:ಸೌರ ಶರದ / ಮಾಸ: ಭಾದ್ರಪದ / ಪಕ್ಷ:ಕೃಷ್ಣ / ತಿಥಿ: ಷಷ್ಠಿ / ನಕ್ಷತ್ರ: ಕೃತ್ತಿಕಾ / ಯೋಗ: ಹರ್ಷಣ / ಕರಣ: ವಿಷ್ಟಿ
ಸೂರ್ಯೋದಯ – ಬೆ.06.09
ಸೂರ್ಯಾಸ್ತ – 06.22
ರಾಹುಕಾಲ – 9.00-10.30
ಯಮಗಂಡ ಕಾಲ – 1.30-3.00
ಗುಳಿಕ ಕಾಲ – 6.00-7.30

ರಾಶಿಭವಿಷ್ಯ :
ಮೇಷ: ನಿಮ್ಮ ಸ್ವಂತ ಪರಿಶ್ರಮದ ಮೇಲೆ ನಂಬಿಕೆ ಇಡಿ. ಛಾಡಿ ಮಾತಿಗೆ ಕಿವಿಕೊಡಬೇಡಿ.
ವೃಷಭ: ಹಣ ಬರಲು ವಿಳಂಬ ಆಗಬಹುದು.
ಮಿಥುನ: ಹಿರಿಯರ ಸಹಾಯದಿಂದ ಸಮಸ್ಯೆಗಳನ್ನು ಸುಲಭವಾಗಿ ಜಯಿಸುವಿರಿ.

ಕಟಕ: ಕಾರ್ಯಸಾಧನೆ ಮಾಡುವ ವೇಳೆ ದಾರಿ ತಪ್ಪದಿರಿ.
ಸಿಂಹ: ಕೈಗಾರಿಕಾ ಕ್ಷೇತ್ರದಲ್ಲಿ ಸಕಾರಾತಕ ಬದಲಾವಣೆಯ ಕಾರಣ ಉತ್ತಮ ಫಲ ಸಿಗಲಿದೆ.
ಕನ್ಯಾ: ಮಕ್ಕಳಿಗೆ ವಿದೇಶ ಪ್ರಯಾಣ ಮಾಡುವ ಯೋಗ ಒದಗಿಬರಲಿದೆ.

ತುಲಾ: ಪೋಷಕರ ಆಶೀರ್ವಾದದಿಂದ ಹೊಸ ವಾಹನವನ್ನು ಖರೀದಿಸುವಿರಿ.
ವೃಶ್ಚಿಕ: ಆಪ್ತರಿಂದ ನೀವು ಅಂದುಕೊಂಡ ಕೆಲಸಕ್ಕೆ ವಿಘ್ನ ಒದಗಿ ಬರಲಿದೆ.
ಧನುಸ್ಸು: ಹೊಸ ವ್ಯಾಪಾರ ಆರಂಭಿಸುವಾಗ ದಾರಿ ತಪ್ಪಿಸುವ ಜನರಿಂದ ದೂರವಿರಿ.

ಮಕರ: ಉದ್ಯೋಗ ಸ್ಥಳದಲ್ಲಿ ಶತ್ರುಗಳ ಕಾಟವು ತಪ್ಪಲಿದೆ. ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯುವಿರಿ.
ಕುಂಭ: ದೂರ ಪ್ರಯಾಣವು ಅತ್ಯಂತ ಸುಖಕರವಾಗಿ ನಡೆಯುವುದು.
ಮೀನ: ಲೆಕ್ಕಾಚಾರ ಇಲ್ಲದ ಹಣದ ವ್ಯವಹಾರ ಬೇಡ. ಒಂದು ವೇಳೆ ಮಾಡುವ ಸಮಯ ಬಂದರೆ ಎಚ್ಚರವಾಗಿರಿ.

ಹಾಸನ ದುರಂತ : ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಾಸನ ದುರಂತದಲ್ಲಿ ಮೃತಪಟ್ಟವರಿಗೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದು, 8 ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದು ಹೇಳಿದ್ದಾರೆ.

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸಂತಾಪ :
ಇನ್ನೂ ಈ ಘಟನೆ ಬಗ್ಗೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಟ್ವಿಟ್ ಮಾಡಿ ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಮೊಸಳೆಹೊಸಳ್ಳಿಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಭೀಕರ ಅಪಘಾತ ಸಂಭವಿಸಿ ಹಲವರು ಜೀವ ಕಳೆದುಕೊಂಡು, 20ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು. ಗಣಪತಿ ಮೆರವಣಿಗೆ ಹೋಗುತ್ತಿದ್ದವರ ಮೇಲೆ ಟ್ರಕ್ ಹರಿದು ಭಕ್ತರ ಸಾವುಂಟಾಗಿರುವುದು ನನಗೆ ಅತ್ಯಂತ ದುಃಖ ಉಂಟು ಮಾಡಿದೆ.

ಇದು ಅತೀ ದುರ್ದೈವದ ಘಟನೆಯಾಗಿದ್ದು, ಮೃತರ ಆತ್ಮಕ್ಕೆ ಭಗವಂತ ಸದ್ಗತಿ ಕರುಣಿಸಲಿ ಹಾಗೂ ದುಃಖತಪ್ತ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ. ಎಲ್ಲಾ ಗಾಯಾಳುಗಳು ಅದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯ ಸರ್ಕಾರ ಗಾಯಾಳುಗಳಿಗೆ ಉತ್ತಮ, ಉಚಿತ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

BIG BREAKING : ಹಾಸನದಲ್ಲಿ ಘೋರ ದುರಂತ, ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು 8 ಮಂದಿ ಸಾವು..!

ಹಾಸನ : ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು ಎಂಟು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಹಾಸನ ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದ ಬಳಿ. ಗಣಪತಿ ಮೂರ್ತಿ ವಿಸರ್ಜನೆಗಾಗಿ ಮೆರವಣಿಗೆ ಮೂಲಕ ತೆರಳುತ್ತಿದ್ದಾಗ ವೇಗವಾಗಿ ಬಂದ ಟ್ರಕ್ ಜನರ ಗುಂಪಿನ ಮೇಲೆ ನುಗ್ಗಿದ್ದು ಸ್ಥಳದಲ್ಲೇ ಎಂಟು ಜನ ಸಾವನ್ನಪ್ಪಿದ್ದಾರೆ.

ಹೊಳೆನರಸೀಪುರ ಕಡೆ ಹೊರಟಿದ್ದ ಕ್ಯಾಂಟರ್ ಡಿಕ್ಕಿಯಾಗಿ ಈ ಗಂಭೀರ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಅಡ್ಡ ಬಂದ ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಕ್ಯಾಂಟರ್ ಚಾಲಕ ಮೆರವಣಿಗೆಯ ಮೇಲೆ ವಾಹನ ಹತ್ತಿಸಿದ್ದಾನೆ. ಇನ್ನೂ ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಸ್ಥಳಕ್ಕೆ ಮಾಜಿ ಸಚಿವ ಎಚ್.ಡಿ.ರೇವಣ್ಣ, ಸೂರಜ್ ರೇವಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೊಸಳೆಹೊಸಳ್ಳಿ ರಾಷ್ಟ್ರೀಯ ಹೆದ್ದಾರಿ 373ರ ಚತುಷ್ಪಥ ರಸ್ತೆಯ ಒಂದು ಬದಿಯಲ್ಲಿ ಗಣೇಶ ಮೂರ್ತಿ ಮೆರವಣಿಗೆಗೆ ಅವಕಾಶ ನೀಡಲಾಗಿತ್ತು. ಈ ವೇಳೆ ವೇಗವಾಗಿ ಬಂದ ಮಹಾರಾಷ್ಟ್ರ ಮೂಲದ ಕ್ಯಾಂಟರ್ ಮೊದಲಿಗೆ ಬೈಕ್ ಗೆ ಡಿಕ್ಕಿ ಹೊಡೆದು ನಂತರ ಮೆರವಣಿಗೆಯಲ್ಲಿ ಸಾಗುತ್ತಿದ್ದ ನೂರಾರು ಜನರ ಮೇಲೆ ಕ್ಯಾಂಟರ್ ನುಗ್ಗಿದೆ. ಇನ್ನು ಸ್ಥಳದಲ್ಲಿ ಸಾವಿಗೀಡಾದವರ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಮಕ್ಕಳನ್ನು ಕಳೆದುಕೊಂಡ ಪೋಷಕರು ಕಣ್ಣೀರಿಡುತ್ತಿದ್ದಾರೆ. ಸ್ಥಳಕ್ಕೆ ಸ್ಥಳೀಯ ಶಾಸಕ ಹೆಚ್.ಡಿ ರೇವಣ್ಣ, ಸಂಸದ ಶ್ರೇಯಸ್ ಪಟೇಲ್ ಆಗಮಿಸಿದ್ದು, ಪೊಲೀಸ್ ವೈಫಲ್ಯವೇ ಘಟನೆಗೆ ಕಾರಣ ಎಂದು ಕಿಡಿಕಾರಿದ್ದಾರೆ.

ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ :
ಹಾಸನ ದುರಂತದಲ್ಲಿ ಮೃತಪಟ್ಟವರಿಗೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದು, 8 ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದು ಹೇಳಿದ್ದಾರೆ.

ಟ್ರಕ್ ಓಡಿಸುತ್ತಿದ್ದ ಭುವನೇಶ್
ಟ್ರಕ್ ಅನ್ನು ಭುವನೇಶ್ ಎಂಬಾತ ಓಡಿಸುತ್ತಿದ್ದ ಎನ್ನಲಾಗಿದೆ. ಹಾಸನದಿಂದ ಹೊಳೆನರಸೀಪುರ ಕಡೆಗೆ ಟ್ರಕ್ ಹೋಗುತ್ತಿದ್ದು, ಈ ವೇಳೆ ಬೈಕ್ ಸವಾರ ಅಡ್ಡ ಬಂದಿದ್ದಾನೆ. ಈ ವೇಳೆ ಅಡ್ಡ ಬಂದ ಬೈಕ್ ಸವಾರನನ್ನು ಉಳಿಸಲು ಹೋಗಿ ಜನರು ಸಾಗುತ್ತಿದ್ದ ಗಣೇಶೋತ್ಸವದ ಮೆರವಣಿಗೆ ಮೇಲೆ ಟ್ರಕ್ ನುಗ್ಗಿಸಿದ್ದಾನೆ ಎನ್ನಲಾಗಿದೆ. ಈ ದುರ್ಘಟನೆಯು ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯಿಂದ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ :
ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗೋ ಆತಂಕ ಎದುರಾಗಿದೆ. ಸದ್ಯ ಗಾಯಾಳುಗಳನ್ನು ಹಾಸನದ ಹಿಮ್ಸ್ ಆಸ್ಪತ್ರೆ ಸೇರಿದಂತೆ ನಗರದ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸಂತಾಪ :
ಇನ್ನೂ ಈ ಘಟನೆ ಬಗ್ಗೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಟ್ವಿಟ್ ಮಾಡಿ ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಮೊಸಳೆಹೊಸಳ್ಳಿಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಭೀಕರ ಅಪಘಾತ ಸಂಭವಿಸಿ ಹಲವರು ಜೀವ ಕಳೆದುಕೊಂಡು, 20ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು. ಗಣಪತಿ ಮೆರವಣಿಗೆ ಹೋಗುತ್ತಿದ್ದವರ ಮೇಲೆ ಟ್ರಕ್ ಹರಿದು ಭಕ್ತರ ಸಾವುಂಟಾಗಿರುವುದು ನನಗೆ ಅತ್ಯಂತ ದುಃಖ ಉಂಟು ಮಾಡಿದೆ.

ಇದು ಅತೀ ದುರ್ದೈವದ ಘಟನೆಯಾಗಿದ್ದು, ಮೃತರ ಆತ್ಮಕ್ಕೆ ಭಗವಂತ ಸದ್ಗತಿ ಕರುಣಿಸಲಿ ಹಾಗೂ ದುಃಖತಪ್ತ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ. ಎಲ್ಲಾ ಗಾಯಾಳುಗಳು ಅದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯ ಸರ್ಕಾರ ಗಾಯಾಳುಗಳಿಗೆ ಉತ್ತಮ, ಉಚಿತ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

15 ಲಕ್ಷ ಪರಿಹಾರಕ್ಕೆ ಆಗ್ರಹ
ಇನ್ನು ಈ ಘಟನೆ ಪೊಲೀಸರ ನಿರ್ಲಕ್ಷ್ಯದಿಂದ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೇ ಈ ಪ್ರಕರಣವನ್ನು ತನಿಖೆಗೆ ಒಳಪಡಿಸಬೇಕು. , ಸರ್ಕಾರ ಗಂಭೀರವಾಗಿ ಪರಿಗಣಿಸಿ ಮೃತರ ಸಂತ್ರಸ್ತ ಕುಟುಂಬಳಿಗೆ ಕನಿಷ್ಠ ₹10 ಲಕ್ಷ ರೂ. ಗಳಿಂದ ₹15 ಲಕ್ಷ ಪಹಾರ ಕೊಡಬೇಕು. ಲಾರಿ ಚಾಲಕ ಪಾನಮತ್ತನಾಗಿ ವಾಹನ ಚಲಾಯಿಸುತ್ತಿದ್ದು, ಆತನ ಯಡವಟ್ಟಿನಿಂದಲೇ ಈ ಅಪಘಾತ ಸಂಭವಿಸಿ ಅಮಾಯಕರ ಪ್ರಾಣ ಹೋಗಿದೆ. ಲಾರಿ ಚಾಲಕ ಮತ್ತು ಮಾಲೀಕನ ಮೇಲೆ ಕಠಿಣ ಕ್ರಮ ಜರುಗಿಸಬೇಕು, ಮೃತರ ಕುಟುಂಬಗಳಿಗೆ ನ್ಯಾಯ ಒದಗಿಸಬೇಕು ಎಂದು ರೇವಣ್ಣ ಆಗ್ರಹಿಸಿದರು.

ಸ್ಥಳಕ್ಕೆ ಸಂಸದ ಶ್ರೇಯಸ್ ಪಟೇಲ್ ಭೇಟಿ :
ಘಟನೆ ನಡೆದ ಸ್ಥಳಕ್ಕೆ ಸಂಸದ ಶ್ರೇಯಸ್ ಪಟೇಲ್ ಭೇಟಿ ನೀಡಿ ಪರಿಶೀಲಿಸಿದರು. ಆನಂತರ ಮಾತನಾಡಿದ ಅವರು, ಇದು ದುದೃಷ್ಟಕರ ಘಟನೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸೂಕ್ತ ತನಿಖೆ ನಡೆಸಿದ ನಂತರ ಅಪಘಾತಕ್ಕೆ ಕಾರಣ ಏನು ಎಂಬುದು ತಿಳಿಯುತ್ತದೆ ಎಂದು ಹೇಳಿದರು.

ಸ್ಥಳಕ್ಕೆ ನಿಖಿಲ್‌ ಕುಮಾರಸ್ವಾಮಿ ದೌಡು
ಹಾಸನ ತಾಲೂಕಿನ ಮೊಸಳೆಹೊಸಳ್ಳಿಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆಯ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದು, 20 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಇಂದು ರಾತ್ರಿ ಬಾಧಿತರನ್ನು ಭೇಟಿಯಾಗಲಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರು ಸ್ವತಃ ಅಪಘಾತ ಸ್ಥಳಕ್ಕೆ ಭೇಟಿ ನೀಡಿ, ನಂತರ ಗಾಯಾಳುಗಳನ್ನು ದಾಖಲಿಸಲಾಗಿರುವ ಆಸ್ಪತ್ರೆಗೂ ತೆರಳಲಿದ್ದಾರೆ. ಅವರು ಬಾಧಿತರನ್ನು ಹಾಗೂ ಅವರ ಕುಟುಂಬದವರನ್ನು ಭೇಟಿಯಾಗಿ ಧೈರ್ಯ ತುಂಬಿ, ಚಿಕಿತ್ಸಾ ವ್ಯವಸ್ಥೆಗಳ ಪರಿಶೀಲನೆ ನಡೆಸಲಿದ್ದಾರೆ.