Home Blog Page 114

ಕ್ರಿಮಿನಲ್‌ಗಳ ಜೊತೆ ಗುರುತಿಸಿಕೊಂಡರೆ ಕಠಿಣ ಕ್ರಮ : ಸೀಮಂತ್‌ಕುಮಾರ್‌ ಸಿಂಗ್‌ ಎಚ್ಚರಿಕೆ

ಬೆಂಗಳೂರು,ಸೆ.12- ಕ್ರಿಮಿನಲ್‌ಗಳ ಜೊತೆ ಗುರುತಿಸಿಕೊಂಡರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ಕುಮಾರ್‌ ಸಿಂಗ್‌ ಎಚ್ಚರಿಸಿದ್ದಾರೆ.

ಥಣಿಸಂದ್ರದ ಸಿಎಆರ್‌ ಕವಾಯತು ಮೈದಾನದಲ್ಲಿಂದು ಹಮಿಕೊಂಡಿದ್ದ ಮಾಸಿಕ ಪರೇಡ್‌ನಲ್ಲಿ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ಕ್ರಿಮಿನಲ್‌ಗಳ ಜೊತೆ ಸೇರಿಕೊಂಡರೆ ಸಮಾಜಕ್ಕೆ ತಪ್ಪು ಸಂದೇಶ ಹೋಗುತ್ತದೆ, ಯಾವ ಕಾರಣಕ್ಕೂ ಅಂತಹ ಸಿಬ್ಬಂದಿಯನ್ನು ಬಿಡುವು ದಿಲ್ಲ, ಪೊಲೀಸ್‌‍ ಇಲಾಖೆಗೆ ಸೇರಿದ್ದೀರಿ, ಒಂದು ಟೀಂ ಆಗಿ ಉತ್ತಮವಾಗಿ ಕೆಲಸ ಮಾಡಬೇಕು ಎಂದು ಅವರು ಎಚ್ಚರಿಸಿದರು.

ಬಂದೋಬಸ್ತ್‌ ವೇಳೆ ಮೊದಲು ನಿಮನ್ನು ನೀವು ರಕ್ಷಣೆ ಮಾಡಿಕೊಂಡು ಹೆಲೆಟ್‌, ಲಾಠಿ ಹಿಡಿದು ಕರ್ತವ್ಯದಲ್ಲಿ ತೊಡಗಿಕೊಂಡರೆ ಸಾರ್ವಜನಿಕರನ್ನು ರಕ್ಷಣೆ ಮಾಡಬಹುದು ಎಂದು ಸಿಬ್ಬಂದಿಗಳಿಗೆ ಸಲಹೆ ನೀಡಿದರು.

ಇತ್ತೀಚೆಗೆ ಬಂದೋಬಸ್ತ್‌ನಲ್ಲಿ ಯಾರೂ ಕೂಡ ಹೆಲೆಟ್‌ ಹಾಗೂ ಲಾಠಿ ತೆಗೆದುಕೊಂಡು ಹೋಗದಿರುವುದನ್ನು ಗಮನಿಸಿದ್ದೇನೆ. ಕಾಟಾಚಾರಕ್ಕೆ ನಿಂತರೆ ಆಗುವುದಿಲ್ಲ. ಪ್ರತಿ ಹಂತದಲ್ಲೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಅತಿಮುಖ್ಯ. ಅಧಿಕಾರಿಗಳು ಬಂದೋಬಸ್ತ್‌ ಕರ್ತವ್ಯಕ್ಕೆ ಹೋಗುವ ಸಿಬ್ಬಂದಿಯನ್ನು ತಪಾಸಣೆ ಮಾಡಿ ಕಳುಹಿಸಬೇಕು ಎಂದರು.

ನೀವು ಕರ್ತವ್ಯಕ್ಕೆ ತೆರಳುವಾಗ ಸಮವಸ್ತ್ರ ಇದ್ದರೆ ಸಾಲುವುದಿಲ್ಲ, ಬಂದೋಬಸ್ತ್‌ ನೋಡಿಕೊಳ್ಳುವವರು ಆಯುಧಗಳ ಜೊತೆಗೆ ತೆರಳಬೇಕು. ನಗರಕ್ಕೆ ಕೆಎಸ್‌‍ಆರ್‌ಪಿ ತುಕಡಿ ಬಂದಾಗಲೂ ಸಹ ಕಡ್ಡಾಯವಾಗಿ ಲಾಠಿ, ಹೆಲೆಟ್‌ ಜೊತೆಯಲ್ಲಿರಬೇಕು ಎಂದು ಅವರು ಹೇಳಿದರು.

ಸರ್ಕಾರದ ಗೃಹ ಇಲಾಖೆಯಿಂದ ಪೊಲೀಸ್‌‍ ಇಲಾಖೆಗೆ ಸೌಲಭ್ಯಗಳು ಬರುತ್ತಿದ್ದು, ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಅದೇ ರೀತಿ ಸಮಾಜಕ್ಕೆ ಒಳ್ಳೆಯ ರೀತಿ ಸೇವೆ ಮಾಡಲು ನೀವು ಕಾರಣರಾಗಬೇಕು ಎಂದು ಅವರು ತಿಳಿಸಿದರು.

ವೃತ್ತಿ ಆಧಾರಿತ ಹಾಗೂ ವೈಯಕ್ತಿಕ ಜೀವನ ಎರಡನ್ನೂ ನಿಭಾಯಿಸಬೇಕು. ಹಬ್ಬಗಳನ್ನು ಕುಟುಂಬದೊಂದಿಗೆ ಆಚರಿಸಿ, ಕರ್ತವ್ಯವಿದ್ದಾಗ ನಿಷ್ಠೆಯಿಂದ ಸೇವೆ ಸಲ್ಲಿಸಿ ಬೆಂಗಳೂರು ನಗರಕ್ಕೆ ಒಳ್ಳೆಯ ಹೆಸರು ಬರಲು ಕಾರಣರಾಗಬೇಕು ಎಂದು ಸಿಬ್ಬಂದಿಗಳಿಗೆ ಕರೆ ನೀಡಿದರು.

ಪೊಲೀಸ್‌‍ ಸಿಬ್ಬಂದಿಗಳಿಗಾಗಿ ಆರೋಗ್ಯ ತಪಾಸಣೆಗಾಗಿ ಖುಷಿ ಅಭಿಯಾನ ಆರಂಭವಾಗಿದೆ. ಎಲ್ಲಾ ಸಿಬ್ಬಂದಿಯೂ ತಪಾಸಣೆ ಮಾಡಿಸಿಕೊಂಡು ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಕಾರ್ಯಕ್ರಮ ಯಶಸ್ವಿಯಾದರೆ ಮೂರು ತಿಂಗಳಿಗೊಮೆ ಈ ಅಭಿಯಾನವನ್ನು ಮಾಡಲಾಗುವುದು ಎಂದರು.

ಪ್ರತಿ ಶುಕ್ರವಾರ ಕಡ್ಡಾಯವಾಗಿ ಪೆರೇಡ್‌ನಲ್ಲಿ ಪಾಲ್ಗೊಳ್ಳಬೇಕು. ಪರೇಡ್‌ ಮಾಡುವುದರಿಂದ ಶಿಸ್ತು ಬರಲಿದೆ. ಪರೇಡ್‌ ಮೈದಾನಕ್ಕೆ ಬಂದ ತಕ್ಷಣ ತಾವು ತರಬೇತಿ ಸಮಯದಲ್ಲಿ ಕಲಿಸಿದ ಪಾಠವನ್ನು ನೆನಪಿಸಿಕೊಳ್ಳಬೇಕು. ಕಾನ್ಸ್ ಸ್ಟೇಬಲ್‌ ಮಟ್ಟದಿಂದ ಅಧಿಕಾರಿ ಮಟ್ಟದವರೆಗೂ ಪರೇಡ್‌ನಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಪ್ರತಿ ಮಂಗಳವಾರ ಮತ್ತು ಶುಕ್ರವಾರ ಇಲಾಖೆಯ ನಿಯಮಾನುಸಾರ ಎಷ್ಟು ಸಿಬ್ಬಂದಿ ಇರುತ್ತಾರೊ, ಅಷ್ಟು ಮಂದಿಯೂ ವೆಪನ್‌ ಡ್ರಿಲ್‌, ಲಾಠಿ ಡ್ರಿಲ್‌ ಮಾಡಬೇಕು ಎಂದು ಅವರು ಸೂಚಿಸಿದರು. ಇದಕ್ಕೂ ಮೊದಲು ಉತ್ತಮವಾಗಿ ಪರೇಡ್‌ ಮಾಡಿದ ಕಾನ್‌್ಸಸೇಬಲ್‌ ಹಾಗೂ ಅಧಿಕಾರಿ ವರ್ಗವನ್ನು ಆಯುಕ್ತರು ಶ್ಲಾಘಿಸಿದರು.

ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ, ಅನ್ಯಾಯದ ವಿರುದ್ಧ ನಾನು ಕಾನೂನು ಹೋರಾಟ ನಡೆಸುತ್ತೇನೆ : ಎಸ್‌‍.ನಾರಾಯನ್

ಬೆಂಗಳೂರು,ಸೆ.12– ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ, ಅನ್ಯಾಯದ ವಿರುದ್ಧ ನಾನು ಕಾನೂನು ಹೋರಾಟ ನಡೆಸುತ್ತೇನೆ, ಧರ್ಮೋ ರಕ್ಷತಿ ರಕ್ಷಿತಃ ಎಂದು ಖ್ಯಾತ ನಟ, ನಿರ್ದೇಶಕರಾದ ಎಸ್‌‍.ನಾರಾಯಣ ಹೇಳಿದ್ದಾರೆ.

ಈ ಸಂಜೆಯೊಂದಿಗೆ ಮಾತನಾಡಿದ ಅವರು, ನನ್ನ ಹಾಗೂ ನನ್ನ ಕುಟುಂಬದ ಮೇಲೆ ಸೊಸೆ ಮಾಡಿರುವ ಆರೋಪಗಳು ಶುದ್ಧ ಸುಳ್ಳು. ಆಕೆ ಪೊಲೀಸ್‌‍ ಠಾಣೆಯಲ್ಲಿ ದೂರು ನೀಡಿದ್ದಾರೆ. ಕಾನೂನು ಪ್ರಕಾರ ಪ್ರಕ್ರಿಯೆಗಳು ನಡೆಯಲಿ. ನಾನು ಅದನ್ನು ಕಾನೂನಿನ ಮೂಲಕವೇ ಎದುರಿಸಲು ಸಿದ್ಧನಿದ್ದೇನೆ ಎಂದು ತಿಳಿಸಿದ್ದಾರೆ.

ಇಂದಿನ ಸಮಾಜದಲ್ಲಿ ಮೌಲ್ಯಗಳು ಹಾಳಾಗುತ್ತಿವೆ. ಸಂಸ್ಕಾರ ಮರೆಯಾಗುತ್ತಿದೆ. ಇದು ಸಾಕಷ್ಟು ನೋವು ತರುತ್ತಿದೆ. ಇಂತಹ ಘಟನೆಗಳಿಗೆ ಪ್ರತಿಷ್ಠಿತ ವ್ಯಕ್ತಿಗಳನ್ನು ಟಾರ್ಗೆಟ್‌ ಮಾಡುವ ಪ್ರವೃತ್ತಿ ಹೆಚ್ಚುತ್ತಿರುವುದು ಆತಂಕಕಾರಿ ಎಂದು ಹೇಳಿದರು.

ಪಾಶ್ಚಿಮಾತ್ಯ ಸಂಸ್ಕೃತಿಗೆಮಾರು ಹೋಗಿ ಈಗ ಕೆಲವರು ನಮತನವನ್ನೇ ಮರೆಯುತ್ತಿದ್ದಾರೆ. ಕಾಲುಂಗುರ ತೊಡುವುದು, ಹಣೆಗೆ ಸಿಂಧೂರ, ಕೊರಳಿಗೆ ಮಾಂಗಲ್ಯ ಸರ ತೊಡುವುದನ್ನೂ ಸಹ ಕೆಲವರು ಬಿಟ್ಟಿದ್ದಾರೆ. ಇಂತಹ ಪರಿಸ್ಥಿತಿ ಮುಂದೆ ಯಾವ ಹಂತಕ್ಕೆ ತಲುಪುತ್ತದೆ ಎಂಬುದೇ ನನಗೆ ಕಳವಳ ಮೂಡಿಸಿದೆ.

ನಮ ಕುಟುಂಬದಲ್ಲಿ ಯಾರೂ ಕೂಡ ಆಕೆಗೆ ಯಾವುದೇ ಹಿಂಸೆ ನೀಡಿಲ್ಲ. ನಮ ಮನೆಯ ಹೆಣ್ಣುಮಗಳು ಎಂಬಂತೆ ನೋಡಿಕೊಂಡಿದ್ದೆವು. ಆದರೆ ಸುಮಾರು ಒಂದೂವರೆ ವರ್ಷದ ನಂತರ ಈಗ ನಮ ಕುಟುಂಬದ ಮೇಲೆ ದೂರು ನೀಡಿರುವುದರ ಹಿಂದೆ ಯಾವುದೋ ದುರುದ್ದೇಶವಿದ್ದಂತೆ ಕಾಣುತ್ತಿದೆ. ಕಾನೂನಿನ ಮೇಲೆ ನನಗೆ ನಂಬಿಕೆಯಿದ್ದು, ಸತ್ಯ ಹೊರಬರಲಿದೆ ಎಂದು ಹೇಳಿದರು. ಆದರೆ ಇಂತಹ ಘಟನೆಗಳಿಂದ ಕುಟುಂಬದಲ್ಲಿ ಮನಃಶಾಂತಿ ಹಾಳಾಗುತ್ತದೆ. ಇದರ ನೋವು ಏನು ಎಂಬುದು ಅನುಭವಿಸಿದವರಿಗೇ ತಿಳಿದಿರುತ್ತದೆ ಎಂದು ಭಾವುಕರಾದರು.

ಪೊತೀಸ್‌‍ ಬಟ್ಟೆ ಅಂಗಡಿಗಳ ಮೇಲೆ ಐಟಿ ದಾಳಿ

ಬೆಂಗಳೂರು,ಸೆ.12- ಕೋಟ್ಯಂತರ ರೂ. ವಂಚನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ತಮಿಳುನಾಡು ಮೂಲದ ಪೊತೀಸ್‌‍ ಬಟ್ಟೆ ಅಂಗಡಿಗಳ ಮೇಲೆ ಆದಾಯ ತೆರಿಗೆ ಇಲಾಖೆ(ಐಟಿ)ಯ ಅಧಿಕಾರಿಗಳು ದಿಢೀರ್‌ ದಾಳಿ ನಡೆಸಿದ್ದಾರೆ.

ಚೆನ್ನೈನಿಂದ ಆಗಮಿಸಿದ್ದ 30ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ಬೆಳಗ್ಗೆಯೇ ನಗರದ ಕೆ.ಜಿ.ರಸ್ತೆಯಲ್ಲಿರುವ ಪೊತೀಸ್‌‍ ಸೇರಿದಂತೆ ಹಲವು ಬಟ್ಟೆ ಮಳಿಗೆಗಳ ಮೇಲೆ ದಾಳಿ ನಡೆಸಿ ತೆರಿಗೆ ವಂಚನೆ ಪ್ರಕರಣ ಸಂಬಂಧ ದಾಖಲೆಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಕೆಲವು ಬಟ್ಟೆ ಮಳಿಗೆಗಳು ಇನ್ನು ಬಾಗಿಲು ತೆರೆದಿರಲಿಲ್ಲ. ಐಟಿ ಅಧಿಕಾರಿಗಳು ದೂರವಾಣಿ ಮೂಲಕ ಮಾಹಿತಿ ನೀಡಿ ಬಲವಂತವಾಗಿ ಬೀಗ ತೆರೆಸಿ ಪರಿಶೀಲನೆ ನಡೆಸಿದ್ದಾರೆ. ಮೈಸೂರುರಸ್ತೆಯ ಟೆಂಬರ್‌ ಲೇಔಟ್‌, ಗಾಂಧಿನಗರದ ಅತೀ ದೊಡ್ಡ ಶೋ ರೂಮ್‌ ಮೇಲೆ ಐಟಿ ದಾಳಿಯಾಗಿದೆ. 30ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಪ್ರತ್ಯೇಕ ತಂಡವಾಗಿ ಪೊತೀಸ್‌‍ ಮಳಿಗೆ ಮೇಲೆ ದಾಳಿ ನಡೆಸಲಾಗಿದೆ. ಆದಾಯ ತೆರಿಗೆ ವಂಚನೆ ಹಿನ್ನಲೆಯಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ.

ಚೆನ್ನೈಯಿಂದ ಬೆಂಗಳೂರಿಗೆ ಬಂದ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇನ್ನು ಟೆಂಬರ್‌ ಲೇಔಟ್‌ನಲ್ಲಿರುವ ಪೊತೀಸ್‌‍ ಮಳಿಗೆ ಮೇಲೆ 25ಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ನಗದು ವಹಿವಾಟು, ಆನ್ಲೈನ್‌ ವಹಿವಾಟು, ಮಳಿಗೆಯಲ್ಲಿರುವ ಬಟ್ಟೆಗಳು, ಮೌಲ್ಯ ಸೇರಿದಂತೆ ಮಳಿಗೆಯಲ್ಲಿನ ಎಲ್ಲಾ ದಾಖಲೆಗಳನ್ನು ಪರಿಶೀಲಿಸಿದ್ದಾರೆ.

ಈ ಪೊತೀಸ್‌‍ ಮಳಿಗೆಗಳು ಚೆನ್ನೈ ಉದ್ಯಮಿಗೆ ಸೇರಿದ ಮಳಿಗೆಗಳಾಗಿವೆ. ರೇಷೆ ಸೀರೆಗಳನ್ನು ಮಾತ್ರ ಮಾರಾಟ ಮಾಡುತ್ತಿದ್ದರು. ಆದರೆ ಇಂದು ಎಲ್ಲಾ ರೀತಿಯ ಉಡುಪುಗಳನ್ನು ಮಾರಾಟ ಮಾಡಲಾಗುತ್ತದೆ.

ಚೆನ್ನೈನಲ್ಲಿರುವ ಪ್ರಮುಖ ಅಂಗಡಿಯನ್ನು ಪೊತೀಸ್‌‍ ಪ್ಯಾಲೇಸ್‌‍ ಎಂದು ಕರೆಯಲಾಗುತ್ತದೆ. ಕೆಲವೇ ವರ್ಷಗಳಲ್ಲಿ ದೊಡ್ಡ ಮಟ್ಟದಲ್ಲಿ ಬೆಳೆದಿದ್ದ ಪೊತೀಸ್‌‍ ಬಟ್ಟೆ ಮಳಿಗೆಯ ಶೋ ರೂಮ್‌ಗಳು ಬೆಂಗಳೂರು, ತಮಿಳುನಾಡು ಸೇರಿದಂತೆ ಹಲವು ಕಡೆ ಇವೆ.

ದೆಹಲಿ ಹೈಕೋರ್ಟ್‌ಗೆ ಬಾಂಬ್‌ ಬೆದರಿಕೆ

ನವದೆಹಲಿ,ಸೆ.12- ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿರುವ ಹೈಕೋರ್ಟ್‌ಗೆ ಬಾಂಬ್‌ ಬೆದರಿಕೆ ಪತ್ರ ಬಂದಿದ್ದು, ಆವರಣದಲ್ಲಿರುವ ಎಲ್ಲರನ್ನು ಸ್ಪೋಟಿಸಿ ಕಗ್ಗೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ.

ಇದನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಪೊಲೀಸರು ಹೈಕೋರ್ಟ್‌ನಲ್ಲಿದ್ದ ನ್ಯಾಯಾಧೀಶರು, ವಕೀಲರು, ದೂರುದಾರರು, ಕಕ್ಷಿದಾರರು, ಸಾರ್ವಜನಿಕರು, ಸಿಬ್ಬಂದಿ ಸೇರಿದಂತೆ ಎಲ್ಲರನ್ನು ಹೊರ ಕಳುಹಿಸಿದ್ದಾರೆ.

ನ್ಯಾಯಾಧೀಶರ ಕೊಠಡಿಯಲ್ಲಿ ಮತ್ತು ಆವರಣದ ಇತರ ಸ್ಥಳಗಳಲ್ಲಿ ಮೂರು ಸ್ಫೋಟಕಗಳನ್ನು ಇಡಲಾಗಿದೆ ಎಂದು ಬೆದರಿಕೆ ಪತ್ರದಲ್ಲಿ ಉಲ್ಲೇಖಿಸಲಾಗಿದ್ದು, ಮಧ್ಯಾಹ್ನ 2 ಗಂಟೆಯೊಳಗೆ ಸ್ಥಳಾಂತರ ಪೂರ್ಣಗೊಳಿಸಬೇಕು ಎಂದು ಪತ್ರದಲ್ಲಿ ಎಚ್ಚರಿಸಲಾಗಿದೆ.

ನ್ಯಾಯಾಧೀಶರ ಕೊಠಡಿ ಮಧ್ಯಾಹ್ನ ಇಸ್ಲಾಮಿಕ್‌ ಪ್ರಾರ್ಥನೆಯ ನಂತರ ಸ್ವಲ್ಪ ಸಮಯದ ನಂತರ ಸ್ಫೋಟಗೊಳ್ಳುತ್ತದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಈ ಪತ್ರವು ಪಾಕಿಸ್ತಾನದ ಐಎಸ್‌‍ಐ ಕೋಶಗಳೊಂದಿಗಿನ ಸಂಪರ್ಕಗಳನ್ನು ಉಲ್ಲೇಖಿಸಿದೆ. ಇಮೇಲ್‌ ಮೂಲಕವೂ ಬೆದರಿಕೆ ಸಂದೇಶ ಬಂದಿದೆ. ಅದರಲ್ಲಿ ನ್ಯಾಯಾಲಯದ ಬಗ್ಗೆ ಉಲ್ಲೇಖಿಸಲಾಗಿದೆ. ಆದರೆ ನಿಖರವಾದ ಸ್ಥಳವನ್ನು ನಿರ್ದಿಷ್ಟಪಡಿಸಲಾಗಿಲ್ಲ.

ಬಾಂಬ್‌ ಪತ್ತೆ ಮತ್ತು ವಿಲೇವಾರಿ ದಳವನ್ನು ತಕ್ಷಣವೇ ನಿಯೋಜಿಸಲಾಯಿತು ಮತ್ತು ಸಂಪೂರ್ಣ ಶೋಧಕ್ಕಾಗಿ ಪ್ರದೇಶವನ್ನು ಸುತ್ತುವರಿಯಲಾಯಿತು.ಇತ್ತೀಚಿನ ತಿಂಗಳುಗಳಲ್ಲಿ ರಾಷ್ಟ್ರೀಯ ರಾಜಧಾನಿ ಪ್ರದೇಶದ ವಿವಿಧ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ಇದೇ ರೀತಿಯ ವಂಚನೆ ಬೆದರಿಕೆಗಳು ಬಂದಿರುವ ನಡುವೆಯೇ ಈ ಘಟನೆ ನಡೆದಿದೆ.

3 ತಿಂಗಳಲ್ಲಿ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ : ಯತ್ನಾಳ್‌ ಭವಿಷ್ಯ

ಮೈಸೂರು, ಸೆ.12- ಹಿಂದೂಗಳ ಧರ್ಮಾಚರಣೆಗೆ ಅಡ್ಡಿ ಪಡಿಸುತ್ತಿರುವ ಸಿದ್ದರಾಮಯ್ಯ ಅವರ ಸರ್ಕಾರ ಮುಂದಿನ 3 ತಿಂಗಳಲ್ಲೇ ಪತನವಾಗಲಿದೆ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಭವಿಷ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣಪತಿ ವಿಸರ್ಜನೆ ಹಾಗೂ ಇತರೆ ಸಂದರ್ಭಗಳಲ್ಲಿ ಮಸೀದಿಗಳಿಂದ ಕಲ್ಲು ತೂರಾಟ ನಡೆಸಿರುವುದು, ಹಲವು ಕಡೆ ಪಾಕಿಸ್ತಾನದ ಧ್ವಜರೋಹಣ, ಪಾಕಿಸ್ತಾನದ ಪರ ಘೋಷಣೆ ಸೇರಿದಂತೆ ಅನೇಕ ದೇಶ ವಿರೋಧಿ ಚಟುವಟಿಕೆಗಳು ನಡೆಯುತ್ತಿವೆ. ಹಿಂದೂ ವಿರೋಧಿ ಧೋರಣೆಯನ್ನು ಬದಲಾಯಿಸಿಕೊಳ್ಳದಿದ್ದರೆ 2028ಕ್ಕೂ ಮುಂಚೆಯೆ ಸಿದ್ದರಾಮಯ್ಯ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದು ಹೇಳಿದರು.

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶೋತ್ಸವದ ಮೇಲೆ ಕಲ್ಲು ತೂರಿದ ಪ್ರಕರಣದ ವಿರುದ್ಧ ಪ್ರತಿಭಟನೆಗಳಾದಾಗ ಬಿಜೆಪಿ ನಾಯಕರ ಎದುರು ಕಾರ್ಯಕರ್ತರು ಯತ್ನಾಳ್‌ ಸ್ಥಳಕ್ಕೆ ಬರಬೇಕೆಂದು ಆಗ್ರಹಿಸಿದ್ದರು. ಅದರಂತೆ ನಾನು ಅಲ್ಲಿಗೆ ಹೋಗಿದ್ದೆ. ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ರಾಜ್ಯದಲ್ಲಿ ಭ್ರಷ್ಟ ಸರ್ಕಾರ ತೊಲಗಬೇಕು, ಹೊಂದಾಣಿಕೆಯ ರಾಜಕಾರಣ ಕೊನೆಯಾಗಬೇಕು ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಹೇಳಿದರು.

ಗಣೇಶ ವಿಸರ್ಜನಾ ಸಂದರ್ಭದಲ್ಲಿ ಕಲ್ಲು ತೂರಾಟ ನಡೆಸಲು ಆಶ್ರಯ ನೀಡಿರುವ ಅಕ್ರಮ ಮಸೀದಿಗಳನ್ನು ನೆಲ ಸಮಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯುತ್ತೇನೆ. ಒಂದು ವೇಳೆ ಕ್ರಮ ತೆಗೆದುಕೊಳ್ಳದೇ ಹೋದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಹೇಳಿದರು.

ಇದೇ ಧೋರಣೆ ಮುಂದುವರೆದರೆ, ರಾಜ್ಯದಲ್ಲಿ ನೇಪಾಳದ ಮಾದರಿಯಲ್ಲಿ ಕ್ರಾಂತಿಯಾಗುತ್ತದೆ. ರಾಜ್ಯದಲ್ಲಿ ಮಸೀದಿಗಳನ್ನು ಪರಿಶೀಲನೆಗೊಳಪಡಿಸಬೇಕು. ಕಲ್ಲು ತೂರಾಟಕ್ಕೆ ಮುಂಚಿತವಾಗಿಯೇ ಮಸೀದಿಗಳಲ್ಲಿ ಕಲ್ಲುಗಳನ್ನು ಸಂಗ್ರಹಿಸಲಾಗಿದೆ. ಇದಕ್ಕೆ ಅವಕಾಶ ನೀಡಿದ ಬಗ್ಗೆ ತನಿಖೆಯಾಗಬೇಕು ಹಾಗೂ ಮಸೀದಿಗಳನ್ನು ತಪಾಸಣೆಗೊಳಪಡಿಸಬೇಕು ಎಂದರು.

ಕಾಂಗ್ರೆಸ್‌‍ ಸರ್ಕಾರ ತಮಗೆ ಮುಸ್ಲಿಮರು ಮಾತ್ರ ಮತ ಹಾಕಿದ್ದಾರೆ ಎಂಬಂತೆ ವರ್ತಿಸುತ್ತಿದೆ. ಹಿಂದೂ ವಿರೋಧಿ ನಿಲುವುಗಳನ್ನು ಪಾಲಿಸುತ್ತಿದೆ. ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ರನ್ನು ಅಹ್ವಾನಿಸುವ ಸಿದ್ದರಾಮಯ್ಯ ಅವರಿಗೆ ಚಾಮುಂಡಿ ದೇವಿಯ ಶಾಪ ತಟ್ಟಲಿದೆ ಎಂದು ಹೇಳಿದರು.
ರಾಜ್ಯದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ. ಸಾವಿರಾರು ಕೋಟಿ ಲೂಟಿಯಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನಿಗಮಗಳ ಹಣವನ್ನು ದೋಚಲಾಗಿದೆ. ಭ್ರಷ್ಟ ಸರ್ಕಾರದ ಜೊತೆ ಬಿಜೆಪಿ ನಾಯಕರು ಕೈ ಜೋಡಿಸಿದ್ದಾರೆ. ಯಡಿಯೂರಪ್ಪ ಅವರ ವಿರುದ್ಧವೂ ಸಾಕಷ್ಟು ಭ್ರಷ್ಟಚಾರ ಪ್ರಕರಣಗಳಿವೆ. ಹೀಗಾಗಿ ಭ್ರಷ್ಟರೆಲ್ಲಾ ಸೇರಿ ಲೂಟಿ ಹೊಡೆಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಂದಿನ ದಿನಗಳಲ್ಲಿ ನಮ ತಂಡದ ಸರ್ಕಾರ ರಚನೆಯಾಗಲಿದೆ. ಭ್ರಷ್ಟಾಚಾರ ರಹಿತವಾದ ಸರ್ಕಾರ ನೀಡುತ್ತೇವೆ. ಹಿಂದುತ್ವದ ರಕ್ಷಣೆ ಹಾಗೂ ಅಭಿವೃದ್ಧಿ ಪರ ಆಡಳಿತ ನಡೆಸುತ್ತೇವೆ ಎಂದು ಭರವಸೆ ನೀಡಿದರು.

ಪೂಜ್ಯ ತಂದೆ ಮತ್ತು ಮಗ ಹೊರತು ಪಡಿಸಿ ಉಳಿದ ಎಲ್ಲಾ ಬಿಜೆಪಿ ನಾಯಕರೂ ನನ್ನ ಸಂಪರ್ಕದಲ್ಲಿದ್ದಾರೆ. ಯಡಿಯೂರಪ್ಪ ಅವರು ಅಮಿತ್‌ ಶಾ ಅವರ ಮುಂದೆ ಕುಳಿತು ಯತ್ನಾಳರನ್ನು ಉಚ್ಚಾಟನೆ ಮಾಡದೇ ಇದ್ದರೆ ನಾನು ಪಕ್ಷ ಬಿಟ್ಟು ಹೋಗುತ್ತೇನೆ ಎಂದು ಬ್ಲಾಕ್‌ಮೇಲ್‌ ಮಾಡಿದ್ದರು. ಅದಕ್ಕಾಗಿ ನನ್ನನ್ನು ಬಿಜೆಪಿಯಿಂದ ಉಚ್ಚಾಟಿಸಲಾಗಿದೆ. ಈ ಕ್ರಮ ತೆಗೆದುಕೊಂಡಿದ್ದು ತಪ್ಪಾಗಿದೆ ಎಂದು ಖುದ್ದು ಅಮಿತ್‌ ಶಾ ಅವರೇ ಪಶ್ಚಾತ್ತಾಪದ ಮಾತುಗಳನ್ನಾಡಿದ್ದಾರೆ ಎಂದು ತಿಳಿದು ಬಂದಿದೆ ಎಂದರು.

ಪ್ರಧಾನ ಮಂತ್ರಿಯವರು ಭ್ರಷ್ಟಚಾರ ರಹಿತ ಹಾಗೂ ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಾರೆ. ರಾಜ್ಯ ಬಿಜೆಪಿಯಲ್ಲಿ ಈ ಎರಡೂ ಇವೆ. ಮುಂದಿನ ದಿನಗಳಲ್ಲಿ ಇದು ಸರಿ ಹೋಗದೇ ಇದ್ದರೆ 2028ರ ವೇಳೆಗೆ ಹೊಸ ಪಕ್ಷ ಸ್ಥಾಪನೆ ಮಾಡಿ, ಚುನಾವಣೆ ಎದುರಿಸುತ್ತೇವೆ. ನಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

ಧರ್ಮಾಂಧರಿಂದ ಕಲ್ಲು ತೂರಾಟ ಪ್ರಕರಣ : ಮದ್ದೂರು ಠಾಣೆ ಇನ್ಸ್ ಪೆಕ್ಟರ್‌ ಅಮಾನತು

ಬೆಂಗಳೂರು,ಸೆ.12– ಕರ್ತವ್ಯ ಲೋಪದ ಅರೋಪದ ಮೇಲೆ ಮದ್ದೂರು ಪೊಲೀಸ್‌‍ ಠಾಣೆಯ ಇನ್‌್ಸಪೆಕ್ಟರ್‌ ಶಿವಕುಮಾರ್‌ರವರನ್ನು ಅಮಾನತು ಮಾಡಲಾಗಿದೆ. ಭಾನುವಾರ ರಾತ್ರಿ ಮದ್ದೂರು ನಗರದ ಚೆನ್ನೇಗೌಡನ ದೊಡ್ಡಿಯಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ರಾಮ್‌ ರಹೀಂ ನಗರದ ಮಸೀದಿ ಮುಂದೆ ಸಾಗುತ್ತಿದ್ದಾಗ ಲೈಟ್‌ ಆಫ್‌ ಮಾಡಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು.

ಈ ಹಿನ್ನೆಲೆಯಲ್ಲಿ ಸಂಘರ್ಷ ಉಂಟಾಗಿದ್ದರಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಮಾರನೇ ದಿನ ಅಂದಿನ ಘಟನೆಯನ್ನು ಖಂಡಿಸಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದರಿಂದ ಸಾವಿರಾರು ಮಂದಿ ಜಮಾಯಿಸಿದ್ದರು.

ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಅರಿತ ಪೊಲೀಸರು ಗುಂಪನ್ನು ಚದುರಿಸಲು ಲಾಠಿಪ್ರಹಾರ ನಡೆಸಿದರು. ಆ ವೇಳೆ ಆರೇಳು ಮಂದಿ ಗಾಯಗೊಂಡರು.ಮಂಗಳವಾರ ಬಿಜೆಪಿ ಹಾಗೂ ಜೆಡಿಎಸ್‌‍ ನಾಯಕರು ಹಾಗೂ ಸಹಸ್ರಾರು ಮಂದಿ ಪಾಲ್ಗೊಂಡು ಸಾಮೂಹಿಕ ಗಣೇಶ ಮೂರ್ತಿಗಳನ್ನು ವಿಸರ್ಜಿಸಿದ್ದಾರೆ.

ಮದ್ದೂರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಇದೀಗ ಇನ್‌್ಸಪೆಕ್ಟರ್‌ರವರನ್ನು ಅಮಾನತು ಮಾಡಿದೆ.ಈ ನಡುವೆಯೇ ಮಂಡ್ಯ ಜಿಲ್ಲಾ ಅಡಿಷನಲ್‌ ಎಸ್ಪಿ ತಿಮಯ್ಯ ಅವರನ್ನೂ ಸಹ ಸರ್ಕಾರ ವರ್ಗಾವಣೆ ಮಾಡಿದೆ.

420 ಕೋಟಿ ರೂ.ವೆಚ್ಚದಲ್ಲಿ ಸೆ.22ರಿಂದ ಅ.7ರವರೆಗೆ ಮತ್ತೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ

ಬೆಂಗಳೂರು, ಸೆ.12- ಬಹು ಚರ್ಚಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಇದೇ ತಿಂಗಳ 22ರಿಂದ ಅ.7ರವರೆಗೆ ಕೈಗೊಳ್ಳಲಾಗುತ್ತಿದ್ದು, ಪ್ರತಿಯೊಬ್ಬರೂ ತಪ್ಪದೇ ಸಮೀಕ್ಷೆಯಲ್ಲಿ ಭಾಗವಹಿಸಿ ಮಾಹಿತಿ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮನವಿ ಮಾಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತಿ ಜನಗಣತಿ ಎಂದೇ ಪರಿಗಣಿಸಲಾಗುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ಸಮಗ್ರ ಮಾಹಿತಿ ನೀಡಿದರು.

ರಾಜ್ಯದಲ್ಲಿ 2 ಕೋಟಿ ಮನೆಗಳಿದ್ದು, 7 ಕೋಟಿ ಜನಸಂಖ್ಯೆ ಇದೆ. ಎಲ್ಲಾ ಮನೆಗಳ ಸಮೀಕ್ಷೆ ನಡೆಸಲು, ದಸರಾ ರಜೆಯ ಸಂದರ್ಭದಲ್ಲಿ 1.75 ಲಕ್ಷ ಶಿಕ್ಷಕರನ್ನು ಬಳಸಿಕೊಳ್ಳಲಾಗುತ್ತಿದೆ. ಪ್ರತಿ ಶಿಕ್ಷಕರಿಗೆ 120 ರಿಂದ 150 ಮನೆಗಳ ಸಮೀಕ್ಷೆಯ ಜವಾಬ್ದಾರಿಯನ್ನು ವಹಿಸಲಾಗಿದೆ ಎಂದರು.
ಶಿಕ್ಷಕರು, ಆಶಾ ಕಾರ್ಯಕರ್ತರ ಗೌರವ ಧನಕ್ಕಾಗಿಯೇ 375 ಕೋಟಿ ರೂ. ವೆಚ್ಚವಾಗಲಿದ್ದು, ಮೊದಲ ಹಂತದಲ್ಲಿ ರಾಜ್ಯ ಸರ್ಕಾರ 420 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.
ಅಗತ್ಯವಾದರೆ ಮತ್ತಷ್ಟು ಅನುದಾನ ಒದಗಿಸಲಾಗುವುದು ಎಂದರು.

ಈ ಹಿಂದೆ ಕಾಂತರಾಜು ಆಯೋಗ ನಡೆಸಿದ್ದ 15 ದಿನಗಳ ಸಮೀಕ್ಷೆಗೆ 165 ಕೋಟಿ ರೂ. ಖರ್ಚಾಗಿತ್ತು. ಆ ವರದಿಗೆ 10 ವರ್ಷ ವಾಗಿದ್ದರಿಂದಾಗಿ ಅವಧಿ ಮೀರಿದೆ ಎಂದು ತಿರಸ್ಕರಿಸಲಾಗಿದೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ಪ್ರಸ್ತುತವಾಗಿ ನಡೆಸಲಾಗುತ್ತಿರುವ ಮರು ಸಮೀಕ್ಷೆಗೆ ವೈಜ್ಞಾನಿಕ ಪದ್ಧತಿಗಳನ್ನು ಅಳವಡಿಸಿಕೊಳ್ಳಲಾಗಿದೆ. ಡಿಸೆಂಬರ್‌ ವೇಳೆಗೆ ಸಮೀಕ್ಷಾ ವರದಿ ನೀಡುವಂತೆ ಸೂಚಿಸಲಾಗಿದೆ ಎಂದರು.

ಪ್ರತಿ ಮನೆಗೂ ವಿದ್ಯುತ್‌ ಸಂಪರ್ಕದ ಜೊತೆ ಆರ್‌ಆರ್‌ ಸಂಖ್ಯೆಯನ್ನು ನೀಡಲಾಗಿರುತ್ತದೆ. ಜಿಯೋ ಟ್ಯಾಗ್‌ ಮಾಡಿ ಸಿದ್ದಪಡಿಸಲಾದ ಯೂನಿಕ್‌ ಹೌಸ್‌‍ವೊಲ್‌್ಡ ಐಡೆಂಟಿಟಿ (ಯುಎಚ್‌ಐಡಿ) ಪಟ್ಟಿಗಳನ್ನು (ಸ್ಟಿಕ್ಕರ್‌) ಮೀಟರ್‌ ರೀಡರ್‌ಗಳು ಆರ್‌ಆರ್‌ ಸಂಖ್ಯೆ ಆಧಾರಿತವಾಗಿ ಪ್ರತಿ ಮನೆಗೆ ಅಂಟಿಸಿರುತ್ತಾರೆ. ಆ ನಂತರ ಸಮೀಕ್ಷಾದಾರರು ಹೋಗುವ ಮೂರು ದಿನಗಳ ಮುಂಚಿತವಾಗಿ ಆಶಾ ಕಾರ್ಯಕರ್ತರು ಪ್ರತಿ ಮನೆಗೆ ಭೇಟಿ ನೀಡಿ, ಸಮೀಕ್ಷೆಯ ವೇಳೆ ಭರ್ತಿ ಮಾಡಿಕೊಳ್ಳುವ ಪ್ರಶ್ನಾವಳಿಗಳ ನಮೂನೆಯನ್ನು ನೀಡಿರುತ್ತಾರೆ.

ವಿದ್ಯಾವಂತರೂ ಆ ನಮೂನೆಗಳನ್ನು ಓದಿಕೊಂಡು ಸಮೀಕ್ಷದಾರರಿಗೆ ಉತ್ತರ ನೀಡಲು ಸಿದ್ಧವಾಗಲು ಇದರಿಂದ ಅನುಕೂಲವಾಗುತ್ತದೆ. ಸಮೀಕ್ಷೆಯಿಂದ ಯಾರೂ ತಪ್ಪಿಸಿಕೊಳ್ಳಬಾರದು ಎಂಬ ಕಾರಣಕ್ಕೆ ಈ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದರು.ಹಿಂದೆ ಕಾಂತರಾಜ್‌ ಆಯೋಗ 54 ಪ್ರಶ್ನೆಗಳನ್ನು ಕೇಳಿತ್ತು. ಪ್ರಸ್ತುತ ಸಮೀಕ್ಷೆಯಲ್ಲಿ 60 ಪ್ರಶ್ನೆಗಳನ್ನು ಕೇಳಲಾಗುತ್ತಿದೆ ಎಂದು ವಿವರಿಸಿದರು.

ಸಮೀಕ್ಷೆಯಲ್ಲಿ ಜಾತಿಯನ್ನು ನಮೂದಿಸಲು ಮುಜುಗರ ಪಟ್ಟುಕೊಳ್ಳುವವರಿಗೆ ಪರ್ಯಾಯ ಮಾರ್ಗಗಳಿವೆ. ಆಯೋಗದ ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡಬಹುದು ಅಥವಾ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ಸ್ಥಾಪಿಸಲಾಗಿರುವ ಸಹಾಯವಾಣಿ ಸಂಖ್ಯೆ 8050770004ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ತಿಳಿಸಿದರು.

ಮತಾಂತರಗೊಂಡಿರುವವರು ತಾವು ಅನುಸರಿಸುತ್ತಿರುವ ಧರ್ಮವನ್ನು ನಮೂದಿಸಬೇಕು. ಸಮೀಕ್ಷೆಯಲ್ಲಿ ಪ್ರಸ್ತುತ ಪಾಲಿಸುತ್ತಿರುವ ಧರ್ಮವನ್ನು ಮಾತ್ರ ಪರಿಗಣಿಸಲಾಗುತ್ತದೆ. ಜಾತಿ ಹೇಳಲು ಹಿಂಜರಿಯುವವರಿಗೆ ಸಮಾಧಾನದಿಂದ ತಿಳುವಳಿಕೆ ಹೇಳಿ ಮಾಹಿತಿ ಪಡೆದುಕೊಳ್ಳಲು ಶಿಕ್ಷಕರಿಗೆ ಅಗತ್ಯ ತರಬೇತಿ ನೀಡಲಾಗುತ್ತದೆ.

ಪ್ರತಿಯೊಂದು ಮನೆಯ ಆಧಾರ್‌ ಕಾರ್ಡ್‌, ಪಡಿತರ ಚೀಟಿಯನ್ನು ಮೊಬೈಲ್‌ ನಂಬರ್‌ ಜೊತೆ ಜೋಡಣೆ ಮಾಡಲಾಗುತ್ತದೆ. ಮೊಬೈಲ್‌ ನಂಬರ್‌ ಇಲ್ಲದೇ ಹೋದರೆ ಬೇರೆ ರೀತಿಯ ಕ್ರಮಗಳನ್ನು ಅನುಸರಿಸಲಾಗುವುದು. ಒಂದು ವೇಳೆ ಯುಎಚ್‌ಐಡಿ ನಂಬರ್‌ ಇಲ್ಲದೇ ಇದ್ದರೂ ಅಂತಹ ಮನೆಯನ್ನು ಗುರುತಿಸಿ ಸಮೀಕ್ಷೆ ನಡೆಸಲು ಶಿಕ್ಷಕರಿಗೆ ಅವಕಾಶವಿದೆ. ಅದಕ್ಕಾಗಿ ಹೆಚ್ಚುವರಿ 100 ರೂ. ಗೌರವ ಧನ ನೀಡಲಾಗುವುದು ಎಂದು ತಿಳಿಸಿದರು.

ಕೇಂದ್ರ ಸರ್ಕಾರವೂ ಜನಗಣತಿಯ ಜೊತೆ ಜಾತಿಗಣತಿ ನಡೆಸಲು ನಿರ್ಧರಿಸಿದೆ. ಒಂದು ವೇಳೆ ಜಾತಿ ಹೇಳಲು ಈಗ ಹಿಂದೇಟು ಹಾಕಿದರೆ ಕೇಂದ್ರ ಸರ್ಕಾರ ಸಮೀಕ್ಷೆ ನಡೆಸಿದಾಗಲಾದರೂ ಹೇಳಬೇಕಾಗುತ್ತದೆ. ಕೇಂದ್ರ ಸರ್ಕಾರ ಜನಗಣತಿ ನಡೆಸುತ್ತದೆಯೇ ಹೊರತು ಸಾಮಾಜಿಕ ಶೈಕ್ಷಣಿಕ ಮಾಹಿತಿಗಳನ್ನು ಕಲೆ ಹಾಕುವುದಿಲ್ಲ. ಅಸಮಾನತೆಯನ್ನು ನಿವಾರಣೆ ಮಾಡಲು ಹಾಗೂ ಸಾಮಾಜಿ ನ್ಯಾಯ ಕಾಪಾಡಲು ಈ ಸಮೀಕ್ಷೆ ಅಗತ್ಯ ಇದೆ ಎಂದು ಮುಖ್ಯಮಂತ್ರಿ ಸಮರ್ಥಿಸಿಕೊಂಡರು.

ಲಿಂಗಾಯಿತರು, ವೀರಶೈವರು ಯಾವ ಧರ್ಮ ಎಂದು ಬರೆಸಬಹುದು. ನಾವು ಸಾಮಾಜಿಕ, ಶೈಕ್ಷಣಿಕ ಮಾಹಿತಿಯನ್ನು ಸಂಗ್ರಹಿಸಲು ಸಮೀಕ್ಷೆ ನಡೆಸುತ್ತಿದ್ದೇವೆ. ಧರ್ಮವನ್ನು ನಿರ್ಧರಿಸಲು ಅಲ್ಲ, 78 ವರ್ಷವಾದರೂ ಅಸಮಾನತೆಯಿದೆ. ಅಂಬೇಡ್ಕರ್‌ ಅವರ ಆಶಯದಂತೆ ಸ್ವಾತಂತ್ರ್ಯ, ಸಮಾನತೆ, ಭಾತೃತ್ವವನ್ನು ಅನುಷ್ಠಾನಕ್ಕೆ ತರಲು ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಹೇಳಿದರು. ಹಿಂದುಳಿದ ವರ್ಗಗಳ ಅಭಿವೃದ್ಧಿ ಸಚಿವ ಶಿವರಾಜ್‌ ತಂಗಡಗಿ, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಮಧುಸೂದನ್‌, ಆಯೋಗದ ಅಧಿಕಾರಿಗಳು ಪತ್ರಿಕಾಗೊಷ್ಠಿಯಲ್ಲಿದ್ದರು.
ಇದೇ ವೇಳೆ ಶಿಕ್ಷಕರ ತರಬೇತಿಯ ಚಾಟ್‌ಬೂತ್‌ನ್ನು ಮುಖ್ಯಮಂತ್ರಿ ಅನಾವರಣಗೊಳಿಸಿದರು.

ಬೆಂಗಳೂರಿಗರೇ ಹುಷಾರ್, ಕಂಡ ಕಂಡಲ್ಲಿ ಕಸ ಎಸೆದರೆ 2000 ದಂಡ ಗ್ಯಾರಂಟಿ..!

ಬೆಂಗಳೂರು, ಸೆ.12– ಕಂಡ ಕಂಡಲ್ಲಿ ಕಸ ಎಸೆಯುವವರಿಗೆ ಭಾರಿ ಪ್ರಮಾಣದ ದಂಡ ವಿಧಿಸಲು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ತೀರ್ಮಾನಿಸಿದೆ. ಮನೆ ಮುಂದೆ ಕಸದ ವಾಹನ ಬಂದರೂ ಕಸ ಹಾಕದೆ ರಸ್ತೆ ಬದಿಗಳಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ಬಿಸಿ ಮುಟ್ಟಿಸಬೇಕು ಎಂಬ ಉದ್ದೇಶದಿಂದ ಇಂತಹ ಕಠಿಣ ತೀರ್ಮಾನ ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದು ಜಿಬಿಎ ವ್ಯಾಪ್ತಿಯಲ್ಲಿರುವ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದ ಮುಖ್ಯ ಕಾರ್ಯನಿರ್ವಾಹಕ ಕರೀಗೌಡ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ಮೊದಲ ಬಾರಿಗೆ 500 ರೂ. ದಂಡ ವಿಧಿಸಲಾಗುವುದು ಮತ್ತೆ ಅವರು ಇಂತಹದ್ದೇ ಧೋರಣೆ ಮುಂದುವರೆಸಿದರೆ 2000 ರೂ.ಗಳ ದಂಡ ವಿಧಿಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಕಂಡ ಕಂಡಲ್ಲಿ ಕಸ ಎಸೆಯುವವರ ಮೇಲೆ ನಿಗಾ ಇಡಲು ಈಗಾಗಲೇ ಮಾರ್ಷಲ್‌ಗಳನ್ನು ನೇಮಿಸಲಾಗಿದೆ. ಹೀಗಾಗಿ ಮಾರ್ಷಲ್‌ಗಳ ಮೂಲಕವೇ ಕಸ ಎಸೆಯುವವರಿಗೆ ದಂಡ ವಿಧಿಸುವ ಅಧಿಕಾರ ನೀಡಲು ನಿರ್ಧರಿಸಲಾಗಿದೆ ಎಂದು ಕರೀಗೌಡರು ಮಾಹಿತಿ ನೀಡಿದರು.
ಅದೇ ರೀತಿ ನಗರದಲ್ಲಿ ಹೆಚ್ಚಾಗ್ತಿರೋ ಪ್ಲಾಸ್ಟಿಕ್‌ ಹಾವಳಿ ಸಮರ್ಪಕ ಕಸ ನಿರ್ವಹಣೆಗೆ ಅಡ್ಡಿಯಾಗುತ್ತಿರುವ ಹಿನ್ನೆಲೆಯಲ್ಲಿ ಎಕ ಬಳಕೆ ಪ್ಲಾಸ್ಟಿಕ್‌ಗೆ ಸಂಪೂರ್ಣ ಕಡಿವಾಣ ಹಾಕುವ ನಿರ್ಧಾರ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.

ನಗರದಲ್ಲಿ ಪ್ಲಾಸ್ಟಿಕ್‌ಬಳಕೆ ತಡೆಗೆ 27 ತಂಡಗಳ ರಚನೆ ಮಾಡಲಾಗುವುದು ಈ ತಂಡಗಳು ವಾರಕ್ಕೆ ಐದು ವಾರ್ಡ್‌ ಗಳಲ್ಲಿ ತಪಾಸಣೆ ನಡೆಸುವಂತೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ಕಳೆದ 10 ದಿನದಲ್ಲಿ ಪ್ಲಾಸ್ಟಿಕ್‌ ಬಳಕೆ ಮಾಡ್ತಿದವರಿಂದ ಇದುವರೆಗೂ 49.14 ಲಕ್ಷದಂಡ ವಸೂಲಿ ಮಾಡಲಾಗಿದೆ ಎಂದು ಅವರು ವಿವರಿಸಿದರು. 281 ಸಗಟು ವ್ಯಾಪಾರಿಗಳು, 2842 ಚಿಲ್ಲರೆ ವ್ಯಾಪಾರಿಗಳಿಂದ ಈ ದಂಡ ವಸೂಲಿ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಕಸ ವಿಲೇವಾರಿ ಸಮಸ್ಯೆ ಸದ್ಯಕ್ಕಿಲ್ಲ; ನಗರದ ಕಸ ವಿಲೇವಾರಿ ಸಮಸ್ಯೆ ಸದ್ಯಕ್ಕಿಲ್ಲ. ನಗರದಲ್ಲಿ ಪ್ರತಿನಿತ್ಯ ಉತ್ಪತ್ತಿಯಾಗುವ ಕಸವನ್ನು ಕಣ್ಣೂರಿನಲ್ಲಿ ವಿಲೇವಾರಿ ಮಾಡಲಾಗ್ತಿದೆ. ಇನ್ನೆರಡು ವರ್ಷ ಅಲ್ಲೇ ವಿಲೇವಾರಿ ಮಾಡಲಾಗುವುದು ಅಲ್ಲಿಯವರೆಗೆ ಯಾವುದೇ ಸಮಸ್ಯೆ ಇಲ್ಲ. ಇದರ ಜೊತೆಗೆ ಬೆಂಗಳೂರು ದಕ್ಷಿಣ ಮತ್ತು ಉತ್ತರ ಭಾಗದಲ್ಲಿ ಕಸ ವಿಲೇವಾರಿಗೆ ಹೊಸ ಜಾಗಗಳನ್ನು ಹುಡುಕುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಮುಂಗಾರು ಚೇತರಿಕೆ : ರಾಜ್ಯದಲ್ಲಿ ಸೆ.18ರವರೆಗೂ ಮಳೆ ಸಾಧ್ಯತೆ

ಬೆಂಗಳೂರು, ಸೆ.12-ನೈಋತ್ಯ ಮುಂಗಾರು ಮತ್ತೆ ಪ್ರಬಲವಾಗಿದ್ದು, ನಾಲ್ಕೈದು ದಿನಗಳ ಕಾಲ ಒಳನಾಡಿನಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆಗಳಿವೆ. ದುರ್ಬಲಗೊಂಡಿದ್ದ ಮುಂಗಾರು ಕಳೆದ ಎರಡು ದಿನಗಳಿಂದ ಚೇತರಿಸಿಕೊಂಡಿದ್ದು, ಒಳನಾಡಿನ ಹಲವೆಡೆ ಮಳೆಯಾಗಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ಮೇಲೈ ಸುಳಿಗಾಳಿಯ ಪ್ರಭಾವದಿಂದ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಹಲವೆಡೆ ಮಳೆ ಬಿದ್ದಿದೆ.

ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ಬೀದರ್‌ ಜಿಲ್ಲೆಯಲ್ಲಿ ನಿನ್ನೆ ವ್ಯಾಪಕ ಪ್ರಮಾಣದ ಮಳೆಯಾಗಿದೆ. ರಾಯಚೂರು, ಬಳ್ಳಾರಿ, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣವಾಗಿ ವ್ಯಾಪಕ ಮಳೆ ಬಿದ್ದಿದೆ. ಮಾನ್ವಿ ತಾಲ್ಲೂಕಿನ ತೋರಂಡಿನ್ನಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ 77.5 ಮಿ.ಮೀ.ನಷ್ಟು ಅತಿ ಹೆಚ್ಚು ಮಳೆಯಾಗಿದೆ.

ಕೊಪ್ಪಳ, ಕಲಬುರಗಿ, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯಾಗಿದ್ದು, ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಬಳ್ಳಾಪುರ, ಕೋಲಾರ, ಬಾಗಲಕೋಟೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ವಿಜಯನಗರ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡೆ ಮಾತ್ರ ಮಳೆ ಬಿದ್ದಿದೆ. ಉಳಿದಂತೆ ಒಣಹವೆ ಮುಂದುವರೆದಿದ್ದು, ಅತ್ಯಲ್ಪ ಪ್ರಮಾಣದ ಮಳೆಯಾಗಿದೆ.

ಹವಾಮಾನ ಮುನ್ಸೂಚನೆ ಪ್ರಕಾರ ಸೆ.18ರವರೆಗೂ ರಾಜ್ಯದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ. ಸೆ.14ರವರೆಗೆ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕೇಂದ್ರದ ನಿರ್ದೇಶಕ ಸಿ.ಎಸ್‌‍.ಪಾಟೀಲ್‌ ತಿಳಿಸಿದ್ದಾರೆ.

ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಕರಾವಳಿ ಹಾಗೂ ಕರಾವಳಿಗೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಅವರು ಹೇಳಿದ್ದಾರೆ.

ಬಂಗಾಳಕೊಲ್ಲಿಯಲ್ಲಿ ಒಡಿಶಾ ಹಾಗೂ ಆಂಧ್ರಪ್ರದೇಶದ ಕರಾವಳಿಗೆ ಹೊಂದಿಕೊಂಡಂತೆ ವಾಯುಭಾರ ಕುಸಿತ ಹಾಗೂ ಮೇಲೈ ಸುಳಿಗಾಳಿ ಉಂಟಾಗಿರುವ ಪರಿಣಾಮದಿಂದ ರಾಜ್ಯದ ದಕ್ಷಿಣ ಹಾಗೂ ಪೂರ್ವ ಭಾಗದ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರಲಿದ್ದು, ಹಲವೆಡೆ ಮಳೆಯಾಗುವ ಸಾಧ್ಯತೆಗಳಿವೆ.

ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಅವರು ತಿಳಿಸಿದ್ದಾರೆ.

ಬಲಪಂಥೀಯ ನಾಯಕರ ಹತ್ಯೆಗೆ ಸಂಚು ನಡೆಸಿದ್ದ ಬಂಧಿತ ಶಂಕಿತ ಐಸಿಸ್‌‍ ಉಗ್ರರು

ನವದೆಹಲಿ,ಸೆ.12- ವಿವಿಧ ರಾಜ್ಯಗಳಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಲಾದ ಐವರು ಶಂಕಿತ ಐಸಿಸ್‌‍ ಉಗ್ರರು, ಕೆಲವು ಬಲಪಂಥೀಯ ನಾಯಕರನ್ನು ಗುರಿಯಾಗಿಸಿ ಹತ್ಯೆ ಮಾಡಲು ಸಂಚು ರೂಪಿಸಿರುವುದು ಬೆಳಕಿಗೆ ಬಂದಿದೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಶಂಕಿತ ಉಗ್ರರು ಚಾಟಿಂಗ್‌ ಮಾಡಿರುವುದು ತನಿಖಾ ವೇಳೆ ತಿಳಿದುಬಂದಿದೆ. ಶಂಕಿತ ಭಯೋತ್ಪಾದಕರು ಆತಹತ್ಯಾ ಜಾಕೆಟ್‌ಗಳು ಮತ್ತು ಆತಹತ್ಯಾ ಬಾಂಬರ್‌ಗಳನ್ನು ಸಹ ಸಿದ್ಧಪಡಿಸುತ್ತಿದ್ದರು.ಇವರು ಸಂಘಟನೆಗಾಗಿ ಯುವಕರನ್ನು ನೇಮಿಸಿಕೊಳ್ಳಲು ಖಿಲಾಫತ್‌ ಮಾದರಿಯನ್ನು ಅನುಸರಿಸ್ತುದ್ದರು. ಸಾಮಾಜಿಕ ಮಾಧ್ಯಮ ವೇದಿಕೆ – ಸಿಗ್ನಲ್‌ ಆ್ಯಪ್‌ ಮೂಲಕ ಸಂಪರ್ಕದಲ್ಲಿದ್ದರು.

ಈ ಮಾಡ್ಯೂಲ್‌ ಸುಮಾರು 40 ಸಕ್ರಿಯ ಸದಸ್ಯರನ್ನು ಹೊಂದಿದ್ದು, ಮಾಡ್ಯೂಲ್‌ನ ನಿರ್ವಾಹಕ ಪಾಕಿಸ್ತಾನದವರಾಗಿದ್ದಾರೆ.ಅವರಲ್ಲಿ ಐವರಿಗೆ ಮಾತ್ರ ಭಯೋತ್ಪಾದಕ ಚಟುವಟಿಕೆಯ ಬಗ್ಗೆ ತಿಳಿದಿತ್ತು. ದೆಹಲಿ, ಮಧ್ಯಪ್ರದೇಶ, ಜಾರ್ಖಂಡ್‌ ಮತ್ತು ತೆಲಂಗಾಣದಲ್ಲಿ ಐದು ಜನರನ್ನು ಬಂಧಿಸಲಾಗಿತ್ತು.

ಮುಂಬೈ ನಿವಾಸಿಗಳಾದ ಅಫ್ತಾಬ್‌ ಮತ್ತು ಅಬು ಸುಫಿಯಾನ್‌ ಎಂಬ ಇಬ್ಬರು ಆರೋಪಿಗಳನ್ನು ದೆಹಲಿಯ ನಿಜಾಮುದ್ದೀನ್‌ ರೈಲ್ವೆ ನಿಲ್ದಾಣದಿಂದ ಮುಂಬೈಗೆ ತೆರಳುತ್ತಿದ್ದ ವೇಳೆ ಶಸಾ್ತ್ರಸ್ತ್ರಗಳೊಂದಿಗೆ ಬಂಧಿಸಲಾಗಿತ್ತು. ಪ್ರಮುಖ ಆರೋಪಿ ಆಶರ್‌ ಡ್ಯಾನಿಶ್‌ನನ್ನು ರಾಂಚಿಯಲ್ಲಿ ಬಂಧಿಸಲಾಗಿತ್ತು.

ಡ್ಯಾನಿಶ್‌ ಈ ಹಿಂದೆ ಇಂಪೂವೈಸ್ಡ್‌ ಎಕ್ಸ್ ಪ್ರೋಸಿವ್‌ ಡಿವೈಸಸ್‌‍ (ಐಇಡಿ) ತಯಾರಿಸುವಾಗ ಗಾಯಗೊಂಡಿದ್ದ. ಇಂಗ್ಲಿಷ್‌ನಲ್ಲಿ ಸ್ನಾತಕೋತ್ತರ ಪದವೀಧರರಾಗಿದ್ದು, ಗಜ್ವಾ ಎಂಬ ಕೋಡ್‌ ಹೆಸರಿನೊಂದಿಗೆ ಹೋಗಿದ್ದರು. ಈ ವರ್ಷದ ಜನವರಿಯಲ್ಲಿ ನಗರಕ್ಕೆ ಆಗಮಿಸಿದ ಇವರು ವಿದ್ಯಾರ್ಥಿಯಂತೆ ವೇಷ ಧರಿಸಿಕೊಂಡಿದ್ದರು.

ಮಧ್ಯಪ್ರದೇಶದ ರಾಜ್‌ಗಢದಿಂದ ಕಮ್ರಾನ್‌ ಖುರೇಷಿ ಬಂಧಿತನಾಗಿದ್ದರೆ, ಹಜೈಫ್‌ ಯೆಮೆನ್‌ ತೆಲಂಗಾಣದಲ್ಲಿ ಪತ್ತೆಯಾಗಿದ್ದಾನೆ.ಆರೋಪಿಗಳು ರಾಸಾಯನಿಕ ಶಸಾ್ತ್ರಸ್ತ್ರಗಳ ತಯಾರಿಕೆಯಲ್ಲಿ ಪರಿಣತಿ ಹೊಂದಿದ್ದು, ಭಯೋತ್ಪಾದಕ ಸಂಘಟನೆಯ ಸ್ಲೀಪರ್‌ ಮಾಡ್ಯೂಲ್‌ನ ಭಾಗವಾಗಿದ್ದರು. ಬಾಂಬ್‌ಗಳನ್ನು ತಯಾರಿಸುವುದು, ಶಸಾ್ತ್ರಸ್ತ್ರಗಳನ್ನು ಸಂಗ್ರಹಿಸುವುದು ಮತ್ತು ಸಂಘಟನೆಯ ಬಲವನ್ನು ಹೆಚ್ಚಿಸುವ ಕೆಲಸ ಮಾಡುತ್ತಿದ್ದರುಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಯೋತ್ಪಾದಕರಿಂದ ಅಪಾರ ಪ್ರಮಾಣದ ರಾಸಾಯನಿಕಗಳು ಮತ್ತು ಶಸಾ್ತ್ರಸ್ತ್ರಗಳ ಕಾರ್ಟ್ರಿಡ್‌್ಜಗಳನ್ನು ವಶಪಡಿಸಿಕೊಂಡಿದ್ದಾರೆ. ಪಿಸ್ತೂಲ್‌, ಲ್ಯಾಪ್‌ಟಾಪ್‌, ಮೊಬೈಲ್‌ ಫೋನ್‌ಗಳು, ತೂಕದ ಯಂತ್ರ, ಬೀಕರ್‌ ಸೆಟ್‌, ಸುರಕ್ಷತಾ ಕೈಗವಸುಗಳು, ಉಸಿರಾಟದ ಮುಖವಾಡಗಳು, ಮದರ್‌ಬೋರ್ಡ್‌ ಹೊಂದಿರುವ ಪ್ಲಾಸ್ಟಿಕ್‌ ಕಂಟೇನರ್‌ ಮತ್ತು ವೈರ್‌ಗಳನ್ನು ಕೂಡ ಉಗ್ರರಿಂದ ವಶಪಡಿಸಿಕೊಳ್ಳಾಗಿದೆ.