Friday, November 7, 2025
Home Blog Page 1802

ವಿದ್ಯುತ್ ಅವಘಡದಿಂದ ತಾಯಿ-ಮಗು ಸಾವು ಪ್ರಕರಣ 4 ಮಾದರಿಯ ತನಿಖೆ: ಕೆ.ಜೆ.ಜಾರ್ಜ್

ಬೆಂಗಳೂರು, ನ.21- ಕಾಡುಗೋಡಿಯಲ್ಲಿ ವಿದ್ಯುತ್ ಅವಘಡದಿಂದ ತಾಯಿ ಮಗು ಸಾವನ್ನಪ್ಪಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿರುವ ರಾಜ್ಯ ಸರ್ಕಾರ, ನಾಲ್ಕು ಮಾದರಿಯ ತನಿಖೆ ನಡೆಸುತ್ತಿದೆ. ವರದಿಯ ನಂತರ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಘಟನೆಗೆ ಸಂಬಂಧಿಸಿದಂತೆ ಬೆಸ್ಕಾಂ, ಪೊಲೀಸ್, ಇಂಧನ ಇಲಾಖೆ ಹಾಗೂ ಸ್ವತಂತ್ರ ಮಾದರಿಯ ತನಿಖೆಗಳು ನಡೆಯುತ್ತಿವೆ ಎಂದು ಹೇಳಿದರು. ಇಂತಹ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಬೆಸ್ಕಾಂ ಅಧಿಕಾರಿಗಳ ವಿರುದ್ಧ ಪೊಲೀಸ್ ಕ್ರಮ ಕೈಗೊಳ್ಳಲು ನಾವು ಯಾವುದೇ ಅಡ್ಡಿ ಪಡಿಸಿಲ್ಲ. ತನಿಖಾ ವರದಿ ನೀಡಲು ಸಮಿತಿಗಳಿಗೆ ಕಾಲಮಿತಿ ನಿಗದಿ ಪಡಿಸಲಾಗಿದೆ ಎಂದರು.

ವಿದ್ಯುತ್ ತಂತಿ ಕಡಿತಗೊಂಡಿರುವುದನ್ನು ನೋಡಿಕೊಳ್ಳದೆ ಇರುವುದು ಲೋಪವಾಗಿದೆ. ಇದನ್ನು ತಾಂತ್ರಿಕ ಸಮಸ್ಯೆ ಎಂದು ಪರಿಗಣಿಸಲಾಗಿದೆ. ಒಂದು ಕಡೆ ವಿದ್ಯುತ್ ತಂತಿಗಳ ಸಮಸ್ಯೆಯಾದರೆ ಮತ್ತೊಂದು ಆಫ್ಟಿಕಲ್ ಫೈಬರ್ ಕೇಬಲ್‍ಗಳದು ಸಮಸ್ಯೆ ಇದೆ. ಏಕಾಏಕಿ ಎಲ್ಲವನ್ನೂ ಒಮ್ಮಲೆ ಕಿತ್ತು ಹಾಕಲು ಆಗಲ್ಲ. ಅದಕ್ಕಾಗಿ ಆಪ್ಟಿಕಲ್ ಕೇಬಲ್‍ಗಳನ್ನು ಭೂಮಿ ಒಳಗಿನ ಮಾರ್ಗಗಳಲ್ಲಿ ಅಳವಡಿಸಲು ಹದಿನೈದು ದಿನಗಳ ಕಾಲಾವಕಾಶ ನೀಡಲಾಗುತ್ತಿದೆ.

ನಿಗದಿತ ಕಾಲಾವಧಿಯಲ್ಲಿ ನೆಲ ಮಾರ್ಗದಲ್ಲಿ ಅಳವಡಿಸದಿದ್ದರೆ ನಂತರ ಕ್ರಮ ಕೈಗೊಳ್ಳುತ್ತೇವೆ. ವಿದ್ಯುತ್ ತಂತಿ ಕಂಬಿಯ ಮೇಲಿರುವ ಎಲ್ಲಾ ಆಫ್ಟಿಕಲ್ ಕೇಬಲ್‍ಗಳನ್ನು ಕಡಿತ ಮಾಡಲಾಗುವುದು ಎಂದರು. ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ, ವಾಡಿಕೆಗಿಂತ ಮಳೆ ಕಡಿಮೆ ಇದೆ. ಕಳೆದ ಬಾರಿಗಿಂತ ಡಬಲ್ 16.900 ಮೆ.ವ್ಯಾ ಬೇಡಿಕೆ ಇದೆ, ಗಣಿಗಾರಿಕೆ ಪ್ರದೇಶಗಳಲ್ಲಿ ಮಳೆಯಾದ ಹಿನ್ನಲೆ ಕಲ್ಲಿದ್ದಲು ಒದ್ದೆಯಾಗಿದೆ. ಇದರಿಂದ ಥರ್ಮಲ್ ಪ್ಲ್ಯಾಂಟ್ ಗೆ ಕಲ್ಲಿದ್ದಲು ಸಮಸ್ಯೆ ಎದುರಾಗಿದೆ. ಸೋಲಾರ್ ವಿದ್ಯುತ್ ಉತ್ಪತ್ತಿಯೂ ಕಡಿಮೆಯಾಗಿದೆ. ಕರ್ನಾಟಕ ಕತ್ತಲೆಗೆ ಹೋಗಿದೆ ಎಂಬ ಆರೋಪ ಸರಿಯಲ್ಲ ಎಂದರು.

ಹೆಚ್‌ಡಿಕೆ ಆರೋಪ ಸಾಬೀತು ಪಡಿಸಿದರೆ ನಾನು ರಾಜಕೀಯ ನಿವೃತ್ತನಾಗುತ್ತೇನೆ: ಡಿಸಿಎಂ

ರೈತರಿಗೆ 5 ಗಂಟೆ ವಿದ್ಯುತ್ ಕೊಡ್ತೇವೆ ಎಂದಿದ್ದೆವು, ಕಬ್ಬು, ಬತ್ತಕ್ಕೆ ಹೆಚ್ಚು ನೀರು ಕೊಡಲು ಕ್ರಮ ಕೈಗೊಂಡಿದ್ದೇವೆ, ದಾಖಲೆ ಮಟ್ಟದಲ್ಲಿ ಥರ್ಮಲ್ ವಿದ್ಯುತ್ ಉತ್ಪಾದನೆ ಆಗಿದೆ, ಬಳ್ಳಾರಿ,ರಾಯಚೂರಿನಲ್ಲಿ ಉತ್ಪಾದನೆಯಾಗಿದೆ. ಕಲ್ಲಿದ್ದಲು ಖರೀದಿಗೆ ಕ್ರಮ ಕೈಗೊಳ್ಳಲಾಗಿದೆ. ಕೊ ಜನರೇಷನ್ ಮೂಲಕ ವಿದ್ಯುತ್ ಉತ್ಪಾದನೆ ಹೆಚ್ಚಾಗುತ್ತಿದೆ. ವಿದ್ಯುತ್ ಕೊರತೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಜೆಡಿಎಸ್ ನಾಯಕರ ತೇಜೋವಧೆ ನಿಲ್ಲಿಸದಿದ್ದರೆ ಉಗ್ರ ಹೋರಾಟ..

ಬೆಂಗಳೂರು,ನ.21-ಆಕ್ಷೇಪಾರ್ಹ ಪೋಸ್ಟರ್ ಮೂಲಕ ನಮ್ಮ ನಾಯಕರ ತೇಜೋವಧೆ ಮಾಡಲಾಗುತ್ತಿದ್ದು, ಇದನ್ನು ಕೂಡಲೇ ನಿಲ್ಲಿಸಬೇಕೆಂದು ಮಾಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎ.ಮಂಜುನಾಥ್ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‍ನಿಂದ ಆಕ್ಷೇಪಾರ್ಹ ಪೋಸ್ಟ್ ಅಂಟಿಸಲಾಗುತ್ತಿದೆ. ಇದು ಜನರನ್ನು ದಿಕ್ಕು ತಪ್ಪಿಸುವ ಕೆಲಸ. ಉಪಮುಖ್ಯಮಂತ್ರಿಯವರು ಪೋಸ್ಟರ್ ಅಂಟಿಸಬೇಡಿ, ಬ್ಯಾನರ್ ಹಾಕಬೇಡಿ ಎಂದು ಹೇಳಿದ್ದರು. ಆದರೆ ಪೋಸ್ಟರ್ ಅಂಟಿಸುವವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಪಂಚತಾರಾ ಹೊಟೇಲ್‌ಗಳ ನಿರ್ಮಾಣಕ್ಕೆ ಮುಂದಾದ ಸರ್ಕಾರ

ಹಿಂದಿನ ಬಿಜೆಪಿ ಸರ್ಕಾರದ ಅವಯಲ್ಲಿ ರಾತ್ರೋರಾತ್ರಿ ಪೇಸಿಎಂ ಪೋಸ್ಟರ್‍ಗಳನ್ನು ಅಂಟಿಸಿದ್ದರು. ಸರ್ಕಾರವನ್ನು ಈಗ ಟೀಕೆ ಮಾಡುವವರ ಬಗ್ಗೆ ವ್ಯಂಗ್ಯವಾದ ಪೋಸ್ಟರ್ ಅಂಟಿಸಿದರೆ ಮೇಲುಗೈ ಸಾಧಿಸಬಹುದೆಂಬ ಭ್ರಮೆಯಲ್ಲಿದ್ದಾರೆ. ಇದನ್ನು ಕೂಡಲೇ ನಿಲ್ಲಿಸಬೇಕು. ಇಲ್ಲದಿದ್ದರೆ ನಿಮ್ಮ ಪೋಸ್ಟರ್‍ಗಳನ್ನು ಅಂಟಿಸುವುದು ದೊಡ್ಡ ವಿಚಾರವಲ್ಲ.

ರಾಜಕಾರಣದಲ್ಲಿ ಅಕಾರ ಶಾಶ್ವತವಲ್ಲ. ಗೃಹ ಇಲಾಖೆ ಹಾಗೂ ಪೊಲೀಸ್ ಮಹಾನಿರ್ದೇಶಕರು ಇಂಥವುಗಳಿಗೆ ಕೂಡಲೇ ಕಡಿವಾಣ ಹಾಕಬೇಕು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬಗ್ಗೆ ಆಕ್ಷೇಪಾರ್ಹ ಪೋಸ್ಟರ್ ಅಂಟಿಸಿದಾಗ ಏನು ಮಾಡುತ್ತಿದ್ದರು? ಮತ್ತದೇ ಪ್ರವೃತ್ತಿ ನಿನ್ನೆಯೂ ಮುಂದುವರೆದಿದೆ. ಇಂಥದ್ದನ್ನು ಕೂಡಲೇ ನಿಲ್ಲಿಸಬೇಕು. ಇದು ನಿಲ್ಲಿಸದಿದ್ದರೆ ನಾವು ಅದೇ ರೀತಿ ಮುಂದುವರೆಯಬೇಕಾಗುತ್ತದೆ.

ಹೆಚ್‌ಡಿಕೆ ಆರೋಪ ಸಾಬೀತು ಪಡಿಸಿದರೆ ನಾನು ರಾಜಕೀಯ ನಿವೃತ್ತನಾಗುತ್ತೇನೆ: ಡಿಸಿಎಂ

ಕುಮಾರಸ್ವಾಮಿಯವರು ಭ್ರಷ್ಟಾಚಾರದ ಬಗ್ಗೆ ದಾಖಲೆ ಸಹಿತ ಆರೋಪ ಮಾಡಿದ್ದಾರೆ. ಆರೋಪ ಮಾಡಿದ ಕೂಡಲೇ ಸರ್ಕಾರ ನಡೆಸುವವರಿಗೆ ಭಯವೇಕೆ? ತಪ್ಪು ಮಾಡದಿದ್ದರೆ ಅವರೇಕೆ ಭಯಪಡಬೇಕು ಎಂದ ಅವರು ಇದನ್ನು ಇಲ್ಲಿಗೆ ನಿಲ್ಲಿಸದಿದ್ದರೆ ನಾವು ಕೂಡ ಅದೇ ರೀತಿ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಅಶ್ವಿನ್‍ಕುಮಾರ್, ಜೆಡಿಎಸ್ ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷ ರಮೇಶ್‍ಗೌಡ ಉಪಸ್ಥಿತರಿದ್ದರು.

ಬೆಂಗಳೂರು ಕಂಬಳ ಉತ್ಸವದಿಂದ ಬ್ರಿಜ್ ಭೂಷಣ್‍ಗೆ ಕೋಕ್

ಬೆಂಗಳೂರು,ನ.21-ಇದೇ ತಿಂಗಳ 25ರಂದು ನಗರದ ಅರಮನೆ ಮೈದಾನದಲ್ಲಿ ನಡೆಯಲಿರುವ ಕರಾವಳಿಯ ಹೆಮ್ಮೆ ಕಂಬಳ ಉತ್ಸವಕ್ಕೆ ವಿವಾದಿತ ವ್ಯಕ್ತಿ ಬ್ರಿಜ್ ಭೂಷಣ್ ಅವರನ್ನು ಕಾರ್ಯಕ್ರಮದಿಂದ ಆಯೋಜಕರು ಕೈಬಿಟ್ಟಿದ್ದಾರೆ.

ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಸಿಲುಕಿರುವ ಬಿಜೆಪಿ ಸಂಸದರಾಗಿರುವ ಬ್ರಿಜ್ ಭೂಷಣ್ ಅವರನ್ನು ಕಂಬಳ ಉತ್ಸವಕ್ಕೆ ವಿಶೇಷ ಅತಿಥಿಯನ್ನಾಗಿ ಆಹ್ವಾನಿಸಿದ್ದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಸಾಮಾಜಿಕ ಜಾಲತಾಣ ಮತ್ತಿತರ ಕಡೆ ಬ್ರಿಡ್ಜ್ ಭೂಷಣ್ ಅವರನ್ನು ಯಾವುದೇ ಕಾರಣಕ್ಕೂ ಕಂಬಳ ಉತ್ಸವಕ್ಕೆ ಆಹ್ವಾನಿಸಬಾರದೆಂದು ಅನೇಕರು ಮನವಿ ಮಾಡಿದ್ದರು.

ಇದಕ್ಕೆ ಅಂತಿಮ ತೆರೆ ಎಳೆದ ಕಂಬಳ ಸಮಿತಿ ಅಧ್ಯಕ್ಷರೂ ಆಗಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಶೋಕ್ ರೈ, ಕಂಬಳ ಒಂದು ಜನಪ್ರಿಯ ಕ್ರೀಡೆ. ಇದೊಂದು ದೊಡ್ಡ ಕಾರ್ಯಕ್ರಮ. ಹೀಗಾಗಿ ಬೇರೆಯವರು ಬಂದು ಮನವಿ ಮಾಡಿದ್ದರಿಂದ ಬ್ರಿಜ್ ಭೂಷಣ್ ಅವರನ್ನು ಆಹ್ವಾನಿಸಲಾಗಿತ್ತು ಎಂದು ಸಮರ್ಥಿಸಿಕೊಂಡರು.

ಪುನೀತ್ ರಾಜ್‍ಕುಮಾರ್ ಅಭಿಮಾನಿಗಳು ಬಂದು ವೇದಿಕೆಗೆ ಅವರ ಹೆಸರನ್ನು ಇಡಬೇಕೆಂದು ಮನವಿ ಮಾಡಿದರೆ ಸಿದ್ದಿ ಜನಾಂಗದವರು ಬಂದು ಮತ್ತೊಂದು ಮನವಿ ಮಾಡುತ್ತಾರೆ. ಹೀಗೆ ಎಲ್ಲರ ಮನವಿಯನ್ನು ಸಮಿತಿಯು ಪರಿಗಣಿಸಬೇಕಾಗುತ್ತದೆ ಎಂದು ಹೇಳಿದೆ. ಬ್ರಿಜ್ ಭೂಷಣ್ ಅವರನ್ನು ಸಮಿತಿಯಿಂದ ಕೈಬಿಡಲು ತೀರ್ಮಾನಿಸಲಾಗಿದೆ. ಈಗಾಗಲೇ ಮುದ್ರಣಗೊಂಡಿರುವ ಆಹ್ವಾನ ಪತ್ರಿಕೆಗಳನ್ನು ಹೊಸದಾಗಿ ಮುದ್ರಣ ಮಾಡುತ್ತೇವೆ. ಕಂಬಳ ಉತ್ಸವಕ್ಕೆ ಅವರನ್ನು ಆಹ್ವಾನಿಸುವುದಿಲ್ಲ ಎಂದು ಅಶೋಕ್ ರೈ ಸ್ಪಷ್ಟಪಡಿಸಿದರು.

ನಿಗಮ – ಮಂಡಳಿಗಳ ನೇಮಕ: ಸುರ್ಜೆವಾಲ ಜೊತೆ ಸಮಾಲೋಚನೆ

ಇದು ಗೊತ್ತಿದ್ದೋ ಅಥವಾ ಗೊತ್ತಿಲ್ಲದೆಯೇ ಆಗಿರುವ ಅಚಾತುರ್ಯ. ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುತ್ತೇವೆ. ಗೋವಾದಲ್ಲಿ ಕುಡುವಿ ಮತ್ತು ಸಿದ್ದಿ ಜನಾಂಗದವರಿಗೆ ಅವರು ಕುಸ್ತಿ ತರಬೇತಿಯನ್ನು ನೀಡಿದ್ದರು. ಹೀಗಾಗಿ ಅವರ ಸೇವೆಯನ್ನು ಪರಿಗಣಿಸಿ ಇದೇ 25ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಕಂಬಳ ಉತ್ಸವಕ್ಕೆ ಆಹ್ವಾನಿಸಲಾಗಿತ್ತು.

ಅಂದು ಅವರು ಕುಸ್ತಿಪಟುಗಳನ್ನು ಸನ್ಮಾನಿಸುವ ಕಾರ್ಯಕ್ರಮವಿತ್ತು. ಆದರೆ ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತವಾಗಿದ್ದರಿಂದ ಬ್ರಿಜ್ ಭೂಷಣ್ ಹೆಸರನ್ನು ಕೈಬಿಡಲಾಗಿದೆ. ಎಂದಿನಂತೆ ಕಂಬಳ ಉತ್ಸವಕ್ಕೆ ಎಲ್ಲರೂ ಪಕ್ಷಾತೀತವಾಗಿ ಸಹಕಾರ ನೀಡಬೇಕೆಂದು ಅಶೋಕ್ ರೈ ಮನವಿ ಮಾಡಿದರು.

ಹೆಚ್‌ಡಿಕೆ ಆರೋಪ ಸಾಬೀತು ಪಡಿಸಿದರೆ ನಾನು ರಾಜಕೀಯ ನಿವೃತ್ತನಾಗುತ್ತೇನೆ: ಡಿಸಿಎಂ

ಬೆಂಗಳೂರು, ನ.21- ಬ್ಲೂಫಿಲಂ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾಡುತ್ತಿರುವ ಆರೋಪ ಸಾಬೀತು ಪಡಿಸಿದರೆ ನಾನು ರಾಜಕೀಯದಿಂದ ನಿವೃತ್ತನಾಗುತ್ತೇನೆ. ನೀವು ಏನು ಮಾಡಿಕೊಳ್ಳುತ್ತೀರಾ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಹತಾಶರಾಗಿದ್ದಾರೆ. ಬಾಯಿಗೆ ಬಂದಂತೆ ಮಾತನಾಡಿ ಜನರ ನಡುವೆ ನಗೆ ಪಾಟಲಿಗೆ ಈಡಾಗುತ್ತಿದ್ದಾರೆ ಎಂದರು. ರಾಜಕಾರಣದಲ್ಲಿ ನಾನು ಅಂತ ಕೆಲಸ ಮಾಡಿಲ್ಲ, ಮಾಡಿದ್ದನ್ನು ಸಾಬೀತು ಪಡಿಸಿ ಇಂದೇ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ. ಈ ಹಿಂದೆ ಅವರ ತಂದೆ ತಮ್ಮ ವಿರುದ್ಧ ಚುನಾವಣೆಗೆ ನಿಂತು ಸೋಲು ಕಂಡಿದ್ದರು. ಆಗ ಏಕೆ ಈ ವಿಚಾರ ಪ್ರಸ್ತಾಪ ಮಾಡಲಿಲ್ಲ. ಮಾಜಿ ಮುಖ್ಯಮಂತ್ರಿ ಎಂದರೆ ಒಂದು ಘನತೆ, ಗೌರವ ಇರಬೇಕು. ಕುಮಾರಸ್ವಾಮಿ ಹತಾಶರಾಗಿ ನೀಡುತ್ತಿರುವ ಹೇಳಿಕೆಗಳು ಅವರನ್ನು ನಾಚಿಕೆಗೀಡು ಮಾಡುತ್ತಿವೆ ಎಂದರು.

ಕುಮಾರಸ್ವಾಮಿಯವರು ಕನಕಪುರಕ್ಕೆ ಹೋಗಲಿ ನಮ್ಮ ಪಕ್ಷದ ಕಾರ್ಯಕರ್ತರು ಬೇಡ, ಅವರ ಪಕ್ಷ ಕಾರ್ಯಕರ್ತರನ್ನೇ ಕೇಳಿ ನನ್ನ ಬಗ್ಗೆ ತಿಳಿದುಕೊಳ್ಳಲಿ. ಕನಕಪುರದ ಜನ ನಾನು ಚುನಾವಣೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡದೆ ಇದ್ದರೂ 1.23,000 ಮತಗಳ ಅಂತರದಿಂದ ಗೆಲ್ಲಿಸಿದ್ದಾರೆ. ಈವರೆಗೂ ಸಾಕಿ ಸಲಹಿದ್ದಾರೆ ಎಂದರು.
ಕುಮಾರಸ್ವಾಮಿಯವರ ವರ್ತನೆ ಸರಿಯಲ್ಲ. ಕುಮಾರಸ್ವಾಮಿ ವಿರುದ್ಧ ನಡೆದಿರುವ ಪೋಸ್ಟರ್ ವಾರ್ ಬಗ್ಗೆಯೂ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ಯಾರೇ ಇಂತಹ ಕೆಲಸ ಮಾಡಿದ್ದರೂ ಅದು ತಪ್ಪು. ಅಂತ ಕೀಳು ರಾಜಕಾರಣಕ್ಕೆ ನಾನು ಪ್ರೋತ್ಸಾಹ ಕೊಡುವುದಿಲ್ಲ ಎಂದರು.

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ರಾಜ್ಯದಲ್ಲಿ ಬರ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಪ್ರವಾಸ ಮಾಡುವವರನ್ನು ಬೇಡ ಎನ್ನಲ್ಲ. ಪ್ರವಾಸ ಮಾಡುವ ಜೊತೆಗೆ ಎಲ್ಲರನ್ನು ಕರೆದು ಕೊಂಡು ದೆಹಲಿಗೆ ಹೋಗಲಿ, ಕೇಂದ್ರದಿಂದ ಹಣ ಬಿಡುಗಡೆ ಮಾಡಿಸಿಕೊಂಡು ಬರಲಿ ಎಂದರು.

ರಾಜ್ಯದಲ್ಲಿ ಬರ ಹಿನ್ನೆಲೆಯಲ್ಲಿ ಉದ್ಯೋಗ ಖಾತ್ರಿಯಡಿ 150 ದಿನಕ್ಕೆ ಹೆಚ್ಚಿಸಲು ಅವಕಾಶ ಇದೆ. ಅದಕ್ಕೆ ಮಂಜೂರಾತಿ ಮಾಡಿಸಲಿ, ಅದರ ಜೊತೆಗೆ ಪ್ರವಾಸ ಮಾಡಲಿ, ಪಕ್ಷ ಕಟ್ಟಲಿ ಅದಕ್ಕೂ ಮೊದಲು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯ ಸರಿಪಡಿಸಲಿ. ಆಗ ಇವರು ಒಳ್ಳೆಯದು ಮಾಡ್ತಾರೆ ಎಂದು ಕೊಳ್ಳುತ್ತೇವೆ ಎಂದರು.

ಕೇಂದ್ರದ ಹಣ ಬಿಡುಗಡೆ ವಿಳಂಬವಾದರೆ ರಾಜ್ಯ ಸರ್ಕಾರದಿಂದಲೇ ಬರ ಪರಿಹಾರ: ಸಚಿವ ಚಲುವರಾಯಸ್ವಾಮಿ

ಬೆಂಗಳೂರಿನಲ್ಲಿ ವಿದ್ಯುತ್ ಶಾಕ್‍ನಿಂದ ತಾಯಿ ಮಗು ಸಾವು ಗಂಭೀರ ವಿಚಾರವಾಗಿದೆ. ಇದು ನಮ್ಮ ಗಮನದಲ್ಲಿದೆ, ಹಾದಿಯಲ್ಲಿ ಬಿದ್ದಿರುವ ಅಪಾಯಕಾರಿ ಕೇಬಲ್‍ಗಳನ್ನು ತೆಗೆಯಲು ಆಗ್ರಹಗಳು ಬರುತ್ತಿವೆ. ಅದರ ವಿಚಾರವಾಗಿ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರ ಸಿದ್ಧವಿದೆ. ಆದರೆ ಆ ರೀತಿಯ ಕೇಬಲ್‍ಗಳನ್ನು ಕತ್ತರಿಸಿದ ತಕ್ಷಣ ಟಿವಿಯ ಸಂಪರ್ಕಗಳು ಕಡಿತಗೊಳ್ಳುತ್ತವೆ. ನಮಗೆ ಟಿವಿಯವರದೆ ಕಾಟವಾಗಿದೆ, ಟಿವಿಯವರನ್ನು ಚೆನ್ನಾಗಿ ಇಟ್ಟುಕೊಳ್ಳಬೇಕು ಎಂದು ಈ ರೀತಿಯ ಕೇಬಲ್‍ಗಳನ್ನು ಉಳಿಸಿಕೊಂಡಿದ್ದೇವೆ. ನಿನ್ನೆ ಮುದ್ರಣ ಮಾಧ್ಯಮದವರು ನಮಗೆ ಸೇರಿದ ಕೇಬಲ್‍ಗಳನ್ನು ಕತ್ತರಿಸಿ ಅಡ್ಡಿ ಪಡಿಸುವುದಿಲ್ಲ ಎಂದಿದ್ದಾರೆ. ಟಿವಿಯವರು ಒಪ್ಪಿಕೊಂಡರೆ ಸಂಜೆಯ ಒಳಗೆ ಎಲ್ಲವನ್ನೂ ಕತ್ತರಿಸಿ ಹಾಕುತ್ತೇವೆ ಎಂದರು.

ವಿದ್ಯುತ್‍ನಿಂದ ಮೃತಪಟ್ಟವರಿಗೆ 5 ಲಕ್ಷ ಪರಿಹಾರ ನೀಡುತ್ತಿರುವ ಹಾಗೂ ಅದನ್ನು ಹೆಚ್ಚಿಸುವ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‍ಸಿಂಗ್ ಸುರ್ಜೆವಾಲ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಪಕ್ಷದ ಕೆಲವು ವಿಚಾರಗಳ ಬಗ್ಗೆ ಚರ್ಚೆ ಮಾಡಲಿದ್ದಾರೆ. ಅವರು ಬಂದು ಹೋದ ಮೇಲೆ ಎಲ್ಲಾ ವಿಷಯದ ಬಗ್ಗೆ ಮಾಹಿತಿ ನೀಡುತ್ತೇನೆ. ಸಭೆಯಲ್ಲಿ ನಿಗಮ ಮಂಡಳಿ ಬಗ್ಗೆಯೂ ಚರ್ಚೆ ಮಾಡುತ್ತೇನೆ.

ಉದ್ಯಮಿಗಳು, ಆಭರಣ ಮಳಿಗೆಗಳ ಮೇಲೆ ಐಟಿ ದಾಳಿ

ಕಾರ್ಯಕರ್ತರು ಸೇರಿದಂತೆ ಎಲ್ಲರಿಗೆ ನಿಗಮ ಮಂಡಳಿಯಲ್ಲಿ ಅವಕಾಶ ನೀಡಬೇಕಿದೆ. ಆದರೆ ಎಲ್ಲರಿಗೂ ಒಮ್ಮೆಲೆ ಅವಕಾಶ ನೀಡಲಾಗುವುದಿಲ್ಲ. ಎರಡು ಮೂರು ಹಂತದಲ್ಲಿ ನೇಮಕಾತಿಗಳಾಗುತ್ತವೆ ಎಂದರು.
ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿಯಾಗಲಿ ಎಂದು ಕಾಂಗ್ರೆಸ್ ಶಾಸಕರು ನೀಡಿದ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಆ ವಿಚಾರ ನನಗೆ ಗೊತ್ತಿಲ್ಲ ಎಂದರು.

ಅಧಿವೇಶನ ಅರ್ಥಪೂರ್ಣವಾಗಿ ನಡೆಸಲು ಮುಖ್ಯಮಂತ್ರಿಗೆ ಸಭಾಪತಿ ಸಲಹಾ ಪತ್ರ

ಬೆಂಗಳೂರು, ನ. 21- ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4ರಿಂದ 10 ದಿನಗಳ ಕಾಲ ನಡೆಯುವ ಚಳಿಗಾಲದ ಅಧಿವೇಶನವನ್ನು ವ್ಯವಸ್ಥಿತ ಹಾಗೂ ಅರ್ಥಪೂರ್ಣವಾಗಿ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರಿಗೆ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಎಸ್. ಹೊರಟ್ಟಿ ಅವರು ಸಲಹೆ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದಿರುವ ಸಭಾಪತಿ, ಅಧಿವೇಶನದ ಅತ್ಯಮೂಲ್ಯವಾದ ಸಮಯವು ಕೇವಲ ಪ್ರತಿಭಟನೆ, ಸತ್ಯಾಗ್ರಹ, ಧರಣಿಗಳಿಗೆ ವ್ಯರ್ಥವಾಗುತ್ತಿದೆ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಈ ಹಿನ್ನೆಲೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುವ ಅಧಿವೇಶನ ವ್ಯವಸ್ಥಿತ ಹಾಗೂ ಅರ್ಥಪೂರ್ಣವಾಗಿ ನಡೆಸಲು ಸಲಹೆ ನೀಡಿದ್ದಾರೆ.

ಅಧಿವೇಶನದ ಸಂದರ್ಭದಲ್ಲಿ ಕೃಷಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಲವಾರು ಸಂಘಟನೆಗಳು ಧರಣಿ, ಸತ್ಯಾಗ್ರಹ ನಡೆಸುವುದು ಸಾಮಾನ್ಯವಾಗಿದೆ.

ಕೇಂದ್ರದ ಹಣ ಬಿಡುಗಡೆ ವಿಳಂಬವಾದರೆ ರಾಜ್ಯ ಸರ್ಕಾರದಿಂದಲೇ ಬರ ಪರಿಹಾರ: ಸಚಿವ ಚಲುವರಾಯಸ್ವಾಮಿ

ಈ ಹಿನ್ನಲೆಯಲ್ಲಿ ಅಧಿವೇಶನ ಆರಂಭಗೊಳ್ಳುವ ಮುಂಚೆಯೇ ಸಂಬಂಧಪಟ್ಟ ಸಂಘಟನೆಗಳ ಪ್ರಮುಖರ ಸಭೆ ಕರೆದು ಅವರ ಬೇಡಿಕೆ ಕುರಿತು ಸವಿಸ್ತಾರವಾಗಿ ಚರ್ಚೆ ನಡೆಸಿ ಅವುಗಳ ಪರಿಹಾರಕ್ಕೆ ಪ್ರಯತ್ನಿಸಬೇಕು. ಆ ಮೂಲಕ ಸಂಘಟನೆಗಳು ಅಧಿವೇಶನದ ಸಂದರ್ಭದಲ್ಲಿ ಸುವರ್ಣ ವಿಧಾನಸೌಧದ ಹೊರಗಡೆ ಧರಣಿ, ಸತ್ಯಾಗ್ರಹ ನಡೆಸದಂತೆ ಸಂಘಟನೆಗಳ ಮುಖಂಡರಲ್ಲಿ ಮನವಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಚಿವ ಸಂಪುಟದ ಸಚಿವರಿಗೆ ಸೂಚಿಸಬೇಕು ಹಾಗೂ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಪತ್ರದಲ್ಲಿ ಕೋರಿದ್ದಾರೆ.

ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಸುವರ್ಣ ವಿಧಾನಸೌಧದ ಹೊರಗಡೆ ಪ್ರತಿಭಟನೆಗಳ ಸಂಖ್ಯೆ ಇಳಿಮುಖವಾದರೆ ಹಾಗೂ ಸದನದ ಒಳಗಡೆ ಜನಸಾಮಾನ್ಯರ ಹಾಗೂ ಜ್ವಲಂತ ಸಮಸ್ಯೆಗಳ ಕುರಿತು ಅರ್ಥಪೂರ್ಣ ಹಾಗೂ ಗಂಭೀರ ಚರ್ಚೆ ನಡೆದು ಪರಿಹಾರ ಕಂಡುಕೊಂಡರೆ ಉತ್ತರ ಕರ್ನಾಟಕ ಭಾಗದಲ್ಲಿ ವಿಧಾನ ಮಂಡಲದ ಅಧಿವೇಶನ ನಡೆಸಿದ್ದು ಸಾರ್ಥಕವಾಗುತ್ತದೆ.

ಇದರಿಂದ ಸರ್ಕಾರಕ್ಕೆ ಗೌರವ ಹಾಗೂ ಒಳ್ಳೆಯ ಹೆಸರು ಬರುತ್ತದೆ ಎಂದು ಬಸವರಾಜ ಎಸ್. ಹೊರಟ್ಟಿ ಅವರು ಪತ್ರದ ಮೂಲಕ ಕೋರಿದ್ದಾರೆ ಎಂದು ಸಭಾಪತಿಯವರ ಕಚೇರಿ ಪ್ರಕಟಣೆ ತಿಳಿಸಿದೆ.

ನಿಗಮ – ಮಂಡಳಿಗಳ ನೇಮಕ: ಸುರ್ಜೆವಾಲ ಜೊತೆ ಸಮಾಲೋಚನೆ

ಬೆಂಗಳೂರು,ನ.21- ಕಾಂಗ್ರೆಸ್‍ನಲ್ಲಿ ಕಾರ್ಯಕರ್ತರು, ಮುಖಂಡರು ಜಾತಕ ಪಕ್ಷಿಗಳಂತೆ ಕಾಯುತ್ತಿರುವ ನಿಗಮ ಮಂಡಳಿಗಳ ನೇಮಕಾತಿಗೆ ಮುಹೂರ್ತ ಕೂಡಿಬಂದಂತೆ ಇದ್ದು, ಎಐಸಿಸಿಯ ಪ್ರಧಾನ ಕಾರ್ಯದರ್ಶಿ ರಣದೀಪ್‍ಸಿಂಗ್ ಸುರ್ಜೆವಾಲ ಇಂದು ಹಿರಿಯ ನಾಯಕರ ಜತೆ ಸಮಾಲೋಚನೆ ನಡೆಸುವ ಸಾಧ್ಯತೆ ಇದೆ.

ಸರ್ಕಾರ ರಚನೆಯಾಗಿ ಆರು ತಿಂಗಳು ಕಳೆದಿದ್ದರೂ ಕಾರ್ಯಕರ್ತರಿಗೆ ಹಾಗೂ ನಾಯಕರಿಗೆ ಇನ್ನು ಸರ್ಕಾರದಲ್ಲಿ ಸಹಭಾಗಿತ್ವ ದೊರೆತಿಲ್ಲ. ಹೀಗಾಗಿ ಬಹಳಷ್ಟು ಮಂದಿ ಅಸಮಾಧಾನದಿಂದ ಕುದಿಯುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಸಚಿವರಾಗಿರುವವರು ಮಾತ್ರ ಅಧಿಕಾರದ ಅವಕಾಶಗಳನ್ನು ಅನುಭವಿಸುತ್ತಿದ್ದಾರೆ.

ನಿಗಮ ಮಂಡಳಿಗಳ ನೇಮಕಾತಿಯಿಂದ ಆಡಳಿತ ಯಂತ್ರ ಚುರುಕುಗೊಳ್ಳುವುದಷ್ಟೇ ಅಲ್ಲ ಜನಸಾಮಾನ್ಯರಿಗೆ ಹೆಚ್ಚಿನ ಸೇವೆ ಒದಗಿಸಲು ಸಹಾಯವಾಗುತ್ತದೆ. ಪಕ್ಷ ಸಂಘಟನೆಗೂ ಅನುಕೂಲವಾಗಲಿದೆ. ಆದರೆ, ಪ್ರತಿ ಬಾರಿಯೂ ಉದ್ದೇಶ ಪೂರ್ವಕವಾಗಿಯೇ ನಿಗಮ ಮಂಡಳಿಗಳ ನೇಮಕಾತಿಯನ್ನು ವಿಳಂಬ ಮಾಡಲಾಗುತ್ತಿದೆ ಎಂಬ ಆಕ್ಷೇಪಗಳು ವ್ಯಾಪಕವಾಗಿ ಕೇಳಿ ಬರುತ್ತಿವೆ.

ಈ ಹಿಂದೆ ಮೈಸೂರು ಸೋಪ್‍ನ ನಿಗಮದ ಅಧ್ಯಕ್ಷರಾಗಿದ್ದ ಚನ್ನಗಿರಿ ಕ್ಷೇತ್ರದ ಶಾಸಕರಾಗಿದ್ದ ಮಾಡಾಳು ವಿರೂಪಾಕ್ಷಪ್ಪ ಅವರು ಗುತ್ತಿಗೆಯಲ್ಲಿ ಲಂಚ ಸ್ವೀರಿಸಿದ ಪ್ರಕರಣದಲ್ಲಿ ಸಿಕ್ಕಿಬಿದ್ದು, ಬಿಜೆಪಿ ಸರ್ಕಾರಕ್ಕೆ ವಿಧಾನಸಭೆ ಚುನಾವಣೆಯಲ್ಲಿ ಭಾರಿ ಹಿನ್ನಡೆಯಾಗಲು ಕಾರಣವಾದರು. ಅಂತಹದ್ದೇ ಘಟನೆಗಳು ಮರುಕಳುಹಿಸಬಹುದು ಎಂಬ ಭಯ ಕಾಂಗ್ರೆಸ್ ನಾಯಕರಲ್ಲೂ ಕಾಡುತ್ತಿದೆ. ಹೀಗಾಗಿ ಅಳೆದು-ತೂಗಿ ನೇಮಕಾತಿಗೆ ಕ್ರಮ ಕೈಗೊಳ್ಳುತ್ತಿದ್ದಾರೆ.

ಶೇ.50:50ರ ಅನುಪಾತದಲ್ಲಿ ಶಾಸಕರು ಮತ್ತು ಕಾರ್ಯಕರ್ತರ ನಡುವೆ ಅಧಿಕಾರ ಹಂಚಿಕೆಗೆ ನಿರ್ಣಯಿಸಲಾಗಿದೆ. ಈಗಾಗಲೇ 30 ಮಂದಿ ಶಾಸಕರು ನಿಗಮ ಮಂಡಳಿಗೆ ನೇಮಿಸಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಂಭವನೀಯ ಶಾಸಕರ ಪಟ್ಟಿಯನ್ನು ತಯಾರಿಸಿದ್ದು, ಹೈಕಮಾಂಡ್ ನಾಯಕರ ಸಮ್ಮುಖದಲ್ಲಿ ಚರ್ಚೆ ನಡೆಸಿ ಅಖೈರುಗೊಳಿಸುವ ಸಾಧ್ಯತೆ ಇದೆ.

ಜಿಲ್ಲಾಧ್ಯಕ್ಷರ ಪೈಕಿ 18 ಮಂದಿಗೆ ನಿಗಮ ಮಂಡಳಿಯಲ್ಲಿ ಅವಕಾಶ ಕಲ್ಪಿಸಲು ಚರ್ಚಿಸಲಾಗಿದೆ. ಉಳಿದಂತೆ ಪ್ರಮುಖ ಕಾರ್ಯಕರ್ತರಿಗೆ ಅಕಾರ ನೀಡುವ ಚಿಂತನೆ ನಡೆದಿದೆ. ಆದರೆ, ಲೋಕಸಭೆ ಚುನಾವಣೆಗೂ ಮುನ್ನ ನೇಮಕಾತಿಗಳಾದರೆ ಅಸಮಾಧಾನಗಳು ಸೊಟಗೊಳ್ಳಬಹುದು ಎಂಬ ಅಳಕು ಕೂಡ ಕಾಡುತ್ತಿದ್ದು, ಈ ನಿಟ್ಟಿನಲ್ಲಿ ನಿಧಾನದ ಕ್ರಮ ಅನುಸರಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ.

ಕಾರ್ಯಕರ್ತರ ಒತ್ತಡ ದಿನೇ ದಿನೇ ಹೆಚ್ಚುತ್ತಿದ್ದು, ಅದನ್ನು ನಿಭಾಯಿಸಲು ನಾಯಕರು ಪರದಾಡುತ್ತಿದ್ದಾರೆ. ಇಂದು ಸಂಜೆ ನಡೆಯುವ ಸಭೆಯಲ್ಲಿ ಮಹತ್ವದ ಚರ್ಚೆಯಾಗಲಿದ್ದು, ಸೂಕ್ತ ನಿರ್ಣಯ ಕೈಗೊಳ್ಳುವ ನಿರೀಕ್ಷೆಗಳಿವೆ.

ಬೆಂಗಳೂರು,ನ.21- ಕಾಂಗ್ರೆಸ್‍ನಲ್ಲಿ ಕಾರ್ಯಕರ್ತರು, ಮುಖಂಡರು ಜಾತಕ ಪಕ್ಷಿಗಳಂತೆ ಕಾಯುತ್ತಿರುವ ನಿಗಮ ಮಂಡಳಿಗಳ ನೇಮಕಾತಿಗೆ ಮುಹೂರ್ತ ಕೂಡಿಬಂದಂತೆ ಇದ್ದು, ಎಐಸಿಸಿಯ ಪ್ರಧಾನ ಕಾರ್ಯದರ್ಶಿ ರಣದೀಪ್‍ಸಿಂಗ್ ಸುರ್ಜೆವಾಲ ಇಂದು ಹಿರಿಯ ನಾಯಕರ ಜತೆ ಸಮಾಲೋಚನೆ ನಡೆಸುವ ಸಾಧ್ಯತೆ ಇದೆ.
ಸರ್ಕಾರ ರಚನೆಯಾಗಿ ಆರು ತಿಂಗಳು ಕಳೆದಿದ್ದರೂ ಕಾರ್ಯಕರ್ತರಿಗೆ ಹಾಗೂ ನಾಯಕರಿಗೆ ಇನ್ನು ಸರ್ಕಾರದಲ್ಲಿ ಸಹಭಾಗಿತ್ವ ದೊರೆತಿಲ್ಲ.

ಹೀಗಾಗಿ ಬಹಳಷ್ಟು ಮಂದಿ ಅಸಮಾಧಾನದಿಂದ ಕುದಿಯುತ್ತಿದ್ದಾರೆ. ಕಾಂಗ್ರೆಸ್ ಅಕಾರಕ್ಕೆ ಬಂದ ನಂತರ ಸಚಿವರಾಗಿರುವವರು ಮಾತ್ರ ಅಕಾರದ ಅವಕಾಶಗಳನ್ನು ಅನುಭವಿಸುತ್ತಿದ್ದಾರೆ. ನಿಗಮ ಮಂಡಳಿಗಳ ನೇಮಕಾತಿಯಿಂದ ಆಡಳಿತ ಯಂತ್ರ ಚುರುಕುಗೊಳ್ಳುವುದಷ್ಟೇ ಅಲ್ಲ ಜನಸಾಮಾನ್ಯರಿಗೆ ಹೆಚ್ಚಿನ ಸೇವೆ ಒದಗಿಸಲು ಸಹಾಯವಾಗುತ್ತದೆ. ಪಕ್ಷ ಸಂಘಟನೆಗೂ ಅನುಕೂಲವಾಗಲಿದೆ. ಆದರೆ, ಪ್ರತಿ ಬಾರಿಯೂ ಉದ್ದೇಶ ಪೂರ್ವಕವಾಗಿಯೇ ನಿಗಮ ಮಂಡಳಿಗಳ ನೇಮಕಾತಿಯನ್ನು ವಿಳಂಬ ಮಾಡಲಾಗುತ್ತಿದೆ ಎಂಬ ಆಕ್ಷೇಪಗಳು ವ್ಯಾಪಕವಾಗಿ ಕೇಳಿ ಬರುತ್ತಿವೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮರಾಠ ಮೀಸಲಾತಿ

ಈ ಹಿಂದೆ ಮೈಸೂರು ಸೋಪ್‍ನ ನಿಗಮದ ಅಧ್ಯಕ್ಷರಾಗಿದ್ದ ಚನ್ನಗಿರಿ ಕ್ಷೇತ್ರದ ಶಾಸಕರಾಗಿದ್ದ ಮಾಡಾಳು ವಿರೂಪಾಕ್ಷಪ್ಪ ಅವರು ಗುತ್ತಿಗೆಯಲ್ಲಿ ಲಂಚ ಸ್ವೀರಿಸಿದ ಪ್ರಕರಣದಲ್ಲಿ ಸಿಕ್ಕಿಬಿದ್ದು, ಬಿಜೆಪಿ ಸರ್ಕಾರಕ್ಕೆ ವಿಧಾನಸಭೆ ಚುನಾವಣೆಯಲ್ಲಿ ಭಾರಿ ಹಿನ್ನಡೆಯಾಗಲು ಕಾರಣವಾದರು.

ಅಂತಹದ್ದೇ ಘಟನೆಗಳು ಮರುಕಳುಹಿಸಬಹುದು ಎಂಬ ಭಯ ಕಾಂಗ್ರೆಸ್ ನಾಯಕರಲ್ಲೂ ಕಾಡುತ್ತಿದೆ. ಹೀಗಾಗಿ ಅಳೆದು-ತೂಗಿ ನೇಮಕಾತಿಗೆ ಕ್ರಮ ಕೈಗೊಳ್ಳುತ್ತಿದ್ದಾರೆ. ಶೇ.50:50ರ ಅನುಪಾತದಲ್ಲಿ ಶಾಸಕರು ಮತ್ತು ಕಾರ್ಯಕರ್ತರ ನಡುವೆ ಅಧಿಕಾರ ಹಂಚಿಕೆಗೆ ನಿರ್ಣಯಿಸಲಾಗಿದೆ. ಈಗಾಗಲೇ 30 ಮಂದಿ ಶಾಸಕರು ನಿಗಮ ಮಂಡಳಿಗೆ ನೇಮಿಸಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಂಭವನೀಯ ಶಾಸಕರ ಪಟ್ಟಿಯನ್ನು ತಯಾರಿಸಿದ್ದು, ಹೈಕಮಾಂಡ್ ನಾಯಕರ ಸಮ್ಮುಖದಲ್ಲಿ ಚರ್ಚೆ ನಡೆಸಿ ಅಖೈರುಗೊಳಿಸುವ ಸಾಧ್ಯತೆ ಇದೆ.

ಜಿಲ್ಲಾಧ್ಯಕ್ಷರ ಪೈಕಿ 18 ಮಂದಿಗೆ ನಿಗಮ ಮಂಡಳಿಯಲ್ಲಿ ಅವಕಾಶ ಕಲ್ಪಿಸಲು ಚರ್ಚಿಸಲಾಗಿದೆ. ಉಳಿದಂತೆ ಪ್ರಮುಖ ಕಾರ್ಯಕರ್ತರಿಗೆ ಅಧಿಕಾರ ನೀಡುವ ಚಿಂತನೆ ನಡೆದಿದೆ. ಆದರೆ, ಲೋಕಸಭೆ ಚುನಾವಣೆಗೂ ಮುನ್ನ ನೇಮಕಾತಿಗಳಾದರೆ ಅಸಮಾಧಾನಗಳು ಸ್ಪೋಟಗೊಳ್ಳಬಹುದು ಎಂಬ ಅಳಕು ಕೂಡ ಕಾಡುತ್ತಿದ್ದು, ಈ ನಿಟ್ಟಿನಲ್ಲಿ ನಿಧಾನದ ಕ್ರಮ ಅನುಸರಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ.

ಕಾರ್ಯಕರ್ತರ ಒತ್ತಡ ದಿನೇ ದಿನೇ ಹೆಚ್ಚುತ್ತಿದ್ದು, ಅದನ್ನು ನಿಭಾಯಿಸಲು ನಾಯಕರು ಪರದಾಡುತ್ತಿದ್ದಾರೆ. ಇಂದು ಸಂಜೆ ನಡೆಯುವ ಸಭೆಯಲ್ಲಿ ಮಹತ್ವದ ಚರ್ಚೆಯಾಗಲಿದ್ದು, ಸೂಕ್ತ ನಿರ್ಣಯ ಕೈಗೊಳ್ಳುವ ನಿರೀಕ್ಷೆಗಳಿವೆ.

ಪಂಚತಾರಾ ಹೊಟೇಲ್‌ಗಳ ನಿರ್ಮಾಣಕ್ಕೆ ಮುಂದಾದ ಸರ್ಕಾರ

ಬೆಂಗಳೂರು,ನ.21- ಪ್ರತಿವರ್ಷ ವಿಧಾನಮಂಡಲದ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತದೆ. ಈ ಸಂದರ್ಭದಲ್ಲಿ ಶಾಸಕರು ಹಾಗೂ ಅಧಿಕಾರಿಗಳ ವಾಸ್ತವ್ಯಕ್ಕೆ ಕೋಟಿ ಕೋಟಿ ಹಣ ಖರ್ಚು ಮಾಡಲಾಗುತ್ತದೆ. ಇದೀಗ ಇಂಥ ಖರ್ಚು ಕಡಿಮೆಗೊಳಿಸುವುದು, ವಾಸ್ತವ್ಯದ ಅನಾನುಕೂಲತೆ, ವೆಚ್ಚವನ್ನು ತಗ್ಗಿಸಲು ಬೆಳಗಾವಿ ಸುವರ್ಣಸೌಧದ ಸಮೀಪದಲ್ಲೇ ಪಂಚತಾರಾ ಹೊಟೇಲ್ ನಿರ್ಮಿಸಲು ಸರ್ಕಾರ ಮುಂದಾಗಿದೆ.

ಡಿ.4ರಿಂದ ಡಿ.15ರವರೆಗೆ 10 ದಿನಗಳ ಕಾಲ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಕಳೆದ ವರ್ಷ ನಡೆದ ಅಧಿವೇಶನಕ್ಕೆ ಅಂದಾಜು 37 ಕೋಟಿ ರೂ. ವೆಚ್ಚವಾಗಿತ್ತು. 2021ರಲ್ಲಿ ಸುಮಾರು 30 ಕೋಟಿ ರೂ. ಖರ್ಚು ಮಾಡಲಾಗಿತ್ತು. 2018ರಲ್ಲಿ 17 ಕೋಟಿ ರೂ. ಖರ್ಚಾಗಿತ್ತು. ವರ್ಷಂಪ್ರತಿ ಅಧಿವೇಶನದ ವೆಚ್ಚದಲ್ಲಿ ಗಣನೀಯ ಏರಿಕೆ ಕಾಣುತ್ತಿದೆ. ಒಟ್ಟು ಖರ್ಚಿನಲ್ಲಿ ಬಹುಪಾಲು ವಾಸ್ತವ್ಯದ್ದಾಗಿದೆ.

ಅಧಿವೇಶನದ ಎರಡು ವಾರಗಳ ಕಾಲ ಬೆಳಗಾವಿ ನಗರದ ಎಲ್ಲಾ ಹೊಟೇಲ್ ಹಾಗೂ ರೆಸಾರ್ಟ್‍ಗಳನ್ನು ಜಿಲ್ಲಾಡಳಿತ ಶಾಸಕರು, ಅಧಿಕಾರಿಗಳು, ಗಣ್ಯರ ವಾಸ್ತವ್ಯಕ್ಕಾಗಿ ವಶಕ್ಕೆ ಪಡೆಯುತ್ತದೆ. ಅಧಿವೇಶನದ ವೇಳೆ ಅಧಿಕಾರಿಗಳ ವರ್ಗ ಹಾಗೂ ಸಿಬ್ಬಂದಿ, ಮಾಧ್ಯಮ ಸಿಬ್ಬಂದಿಗಳ ವಾಸ್ತವ್ಯಕ್ಕಾಗಿ ಸುಮಾರು 2000 ಹೊಟೇಲ್ ಕೊಠಡಿಗಳನ್ನು ಬುಕ್ ಮಾಡಲಾಗುತ್ತದೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮರಾಠ ಮೀಸಲಾತಿ

2022ರಲ್ಲಿ ನಗರದ ಸುಮಾರು 80 ಹೊಟೇಲ್‍ಗಳನ್ನು ವಾಸ್ತವ್ಯಕ್ಕಾಗಿ ಬಳಸಲಾಗಿತ್ತು. ಶಾಸಕರು, ವಿಐಪಿಗಳು, ಅಧಿಕಾರಿಗಳ ವಾಸ್ತವ್ಯಕ್ಕಾಗಿ 67 ಐಷಾರಾಮಿ ಹೊಟೇಲ್‍ಗಳನ್ನು ಬಳಸಲಾಗುತ್ತದೆ. ಇದಕ್ಕಾಗಿ ಕಳೆದ ವರ್ಷ ಸುಮಾರು 6 ಕೋಟಿ ರೂ. ವೆಚ್ಚವಾಗಿದೆ. ಸರಾಸರಿ ಸರ್ಕಾರ ಶಾಸಕರ ವಾಸ್ತವ್ಯಕ್ಕೆ ಸುಮಾರು 10-12 ಲಕ್ಷ ರೂ. ಖರ್ಚು ಮಾಡುತ್ತದೆ. ಬೆಳಗಾವಿ ನಗರದಲ್ಲಿನ ಲಕ್ಸುರಿ ಹೊಟೇಲ್‍ಗಳು ಸುಮಾರು 20 ಲಕ್ಷ ರೂ.ನಿಂದ 70 ಲಕ್ಷ ರೂ.ವರೆಗೆ ಬಿಲ್ ಮಾಡುತ್ತವೆ ಎಂದು ತಿಳಿದುಬಂದಿದೆ.

ಸುವರ್ಣಸೌಧದ ಬಳಿ 10 ಎಕರೆ ಸರ್ಕಾರಿ ಜಮೀನಿನಲ್ಲಿ ಹೊಟೇಲ್ ನಿರ್ಮಾಣಕ್ಕೆ ಚಿಂತನೆ ನಡೆದಿದೆ. ಪಬ್ಲಿಕ್-ಪ್ರೈವೇಟ್ ಪಾಟ್ನರ್‍ಶಿಪ್ ಮಾದರಿಯಲ್ಲಿ ನಿರ್ಮಾಣಕ್ಕೆ ಚಿಂತನೆ ನಡೆದಿದೆ. ಜಮೀನು ಸರ್ಕಾರದ್ದಾಗಿದ್ದು, ಖಾಸಗಿಯವರು ಹೊಟೇಲ್ ನಿರ್ಮಿಸಲಿದ್ದಾರೆ. 30 ವರ್ಷಗಳ ಕಾಲ ಖಾಸಗಿಯವರಿಗೆ ಕಟ್ಟಡ ಗುತ್ತಿಗೆ ನೀಡುವ ಯೋಚನೆ ಇದೆ.

ಅಧಿವೇಶನ ವೇಳೆ ಈ ಹೊಟೇಲ್‍ನ್ನು ಶಾಸಕರು, ಅಧಿಕಾರಿಗಳು, ಗಣ್ಯರ ವಾಸ್ತವ್ಯಕ್ಕೆ ಬಳಸಲಾಗುವುದು. ಉಳಿದ ಅವಧಿಗಳಲ್ಲಿ ಸಾರ್ವಜನಿಕರ ಬಳಕೆಗೆ ಮುಕ್ತವಾಗಿರಲಿದೆ. ಅಂದಾಜು 300 ಕೋಟಿ ರೂ. ವೆಚ್ಚದಲ್ಲಿ ವಸತಿ ಹೊಟೇಲ್ ನಿರ್ಮಾಣಕ್ಕೆ ಚಿಂತನೆ ನಡೆದಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಕೇಂದ್ರದ ಹಣ ಬಿಡುಗಡೆ ವಿಳಂಬವಾದರೆ ರಾಜ್ಯ ಸರ್ಕಾರದಿಂದಲೇ ಬರ ಪರಿಹಾರ: ಸಚಿವ ಚಲುವರಾಯಸ್ವಾಮಿ

ಮಳವಳ್ಳಿ,ನ.21- ರಾಜ್ಯದ 224 ತಾಲ್ಲೂಕುಗಳು ಕೂಡ ಬರ ಪೀಡಿತ ಎಂದು ಘೋಷಣೆಯಾಗಿದೆ. ಈಗಾಗಲೇ ಕೇಂದ್ರ ತಂಡ ರಾಜ್ಯದಲ್ಲಿ ಅಧ್ಯಯನ ನಡೆಸಿ ವರದಿ ಸಲ್ಲಿಸಿದೆ. ಕೇಂದ್ರದಿಂದ ಹಣ ಬಿಡುಗಡೆ ವಿಳಂಬವಾದರೆ ರಾಜ್ಯ ಸರ್ಕಾರವೇ ರೈತರ ನೆರವಿಗೆ ನಿಲ್ಲಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ತಾಲ್ಲೂಕಿನ ಹಲಗೂರು, ಬಿ.ಜಿ.ಪುರ ಹೋಬಳಿಯಲ್ಲಿ ಬರ ಪರಿಸ್ಥಿತಿ ವೀಕ್ಷಿಸಿ ಮಾತನಾಡಿ, ರೈತರಿಗೆ ಧೈರ್ಯ ತುಂಬಿದರು. ಈ ಬಾರಿ ಮಳೆ ಕೊರತೆಯಿಂದ ಬೆಳೆಗಳು ಒಣಗಿ ರೈತರಿಗೆ ತುಂಬಾ ನಷ್ಟವಾಗಿದೆ. ಅನ್ನದಾತರ ಸಂಷ್ಟಕ್ಕೆ ನಮ್ಮ ಸರ್ಕಾರ ಸ್ಪಂದಿಸಲಿದೆ. ಇಂದಿನ ವರದಿಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ 18 ಸಾವಿರ ಕೋಟಿ ರೂ. ಅನುದಾನವನ್ನು ಕೇಳಲಾಗಿದೆ.

ಉದ್ಯಮಿಗಳು, ಆಭರಣ ಮಳಿಗೆಗಳ ಮೇಲೆ ಐಟಿ ದಾಳಿ

ಹಣ ಬಿಡುಗಡೆಯಾದ ನಂತರ ಹಂತ ಹಂತವಾಗಿ ಪರಿಹಾರ ವಿತರಿಸುವ ಕಾರ್ಯ ನಡೆಯಲಿದೆ ಎಂದರು.
ಒಣಗಿದ ಮುಸುಕಿನ ಜೋಳ, ರಾಗಿ ಸೇರಿದಂತೆ ಮತ್ತಿತರ ಬೆಳೆಗಳನ್ನು ವೀಕ್ಷಿಸಿ ರೈತರಿಗೆ ಪರಿಹಾರದ ಭರವಸೆ ನೀಡಿದ ಸಚಿವರು, ರೈತರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಬೇಕೆಂದು ಸೂಚಿಸಿದರು.

ಈ ವೇಳೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ, ಜಿಲ್ಲಾಧಿಕಾರಿ ಕುಮಾರ್, ಜಿಪಂ ಸಿಇಒ ಶೇಕ್ ತನ್ವೀರ್ ಆಸಿಫ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್, ಮಂಡ್ಯ ಜಿಲ್ಲಾಧಿಕಾರಿ ಕುಮಾರ್, ತಹಸೀಲ್ದಾರ್ ಲೋಕೇಶ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು.

ಉದ್ಯಮಿಗಳು, ಆಭರಣ ಮಳಿಗೆಗಳ ಮೇಲೆ ಐಟಿ ದಾಳಿ

ಬೆಂಗಳೂರು,ನ.21-ತೆರಿಗೆ ವಂಚನೆ ಆರೋಪದ ಹಿನ್ನಲೆಯಲ್ಲಿ ಉದ್ಯಮಿಗಳು ಮತ್ತು ಚಿನ್ನಾಭರಣ ತಯಾರಕರ ಅಂಗಡಿ ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ(ಐಟಿ)ಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ಮಾಗಡಿ ರಸ್ತೆ, ಆಡುಗೋಡಿಯ ಆ್ಯಕ್ರೋಪೊಲಿಸ್ ಅಪಾಟ್ರ್ಮೆಂಟ್‍ನಲ್ಲಿರುವ ಮನೆ ಸೇರಿದಂತೆ ಹಲವೆಡೆ ಉದ್ಯಮಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಬೆಳಿಗ್ಗೆ 7 ಗಂಟೆಗೆ ಎರಡು ಇನೋವಾ ಕಾರ್‍ನಲ್ಲಿ ಬಂದ ಆರು ಅಧಿಕಾರಿಗಳ ತಂಡ ಮಾಗಡಿರಸ್ತೆಯಲ್ಲಿರುವ ಉದ್ಯಮಿ ಪುನೀತ್ ಬೊರಾ ಎನ್ನುವರ ಅಪಾರ್ಟ್‍ಮೆಂಟ್ ಮೇಲೆ ದಾಳಿ ಮಾಡಿದ್ದು, ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ.

ಹಿಂದುತ್ವ ಪ್ರತಿಪಾದಕರಿಗೆ ಅನ್ಯಾಯ ಮಾಡಿತೇ ಹೈಕಮಾಂಡ್

ಕೆಲ ದಿನಗಳ ಹಿಂದೆ ಜ್ಯುವೆಲ್ಲರಿ ಅಂಗಡಿ ಮಾಲೀಕರು, ಗುತ್ತಿಗೆದಾರರ ಮನೆ-ಕಚೇರಿಗಳ ಮೇಲೆ ಐಟಿ ದಾಳಿ ನಡೆದಿತ್ತು. ರಾಜಾಜಿನಗರದ ಇಂಡಸ್ಟ್ರಿಯಲ್ ಎಸ್ಟೇಟ್ ಬಳಿಯಿರುವ ಪಿ.ಎಸ್.ಆಗ್ರೋ ಫುಡ್ ಎಲ್‍ಎಲ್‍ಪಿ ಕಾರ್ಖಾನೆ, ಬಿ.ವಿ.ಕೆ.ಅಯ್ಯಂಗಾರ್ ರಸ್ತೆಯಲ್ಲಿರುವ ಮಾಣಿಕ್ ಮೇವಾ ಸ್ಟೋರ್ ಮೇಲೆ ದಾಳಿ ನಡೆದಿತ್ತು.

ಈ ಎರಡು ಆಹಾರ ಕಂಪನಿಗಳು ಒಣ ಹಣ್ಣುಗಳ ವ್ಯಾಪಾರ ನಡೆಸುತ್ತಿವೆ. ಆದಾಯಕ್ಕೆ ಪ್ರತಿಯಾಗಿ ತೆರಿಗೆ ಪಾವತಿಸದ ಆರೋಪದ ಹಿನ್ನೆಲೆಯಲ್ಲಿ ಅ.16ರ ಬೆಳಗಿನಜಾವ ಸುಮಾರು 10ಕ್ಕೂ ಹೆಚ್ಚು ಕಾರುಗಳಲ್ಲಿ ಆಗಮಿಸಿದ ಐಟಿ ಅಧಿಕಾರಿಗಳು ಶೋಧ ನಡೆಸಿದ್ದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮರಾಠ ಮೀಸಲಾತಿ

ಮುಂಬೈ,ನ.21- ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಅವರು ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಜಾತಿ ಗಣತಿ ಆಧಾರದ ಮೇಲೆ ಮರಾಠಾ ಮೀಸಲಾತಿ ನೀಡಲಿದೆ ಎಂದು ಭರವಸೆ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ಆಧಾರದ ಮೇಲೆ ಮರಾಠಾ ಮೀಸಲಾತಿ ನೀಡುತ್ತೇವೆ ಎಂದು ನಾನಾ ಪಟೋಲೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ಸಮಸ್ಯೆಗಳನ್ನು ಬಗೆಹರಿಸಲು ಕೇಂದ್ರ ಮತ್ತು ಮಹಾರಾಷ್ಟ್ರ ಸರ್ಕಾರಗಳು ಸಿದ್ಧರಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಆರೋಪಿಸಿದರು.

ಕೇಂದ್ರ ಮತ್ತು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ನಾವು ಖಂಡಿತವಾಗಿಯೂ ಈ ಬಾಕಿ ಉಳಿದಿರುವ ಸಮಸ್ಯೆಗಳನ್ನು ಪರಿಹರಿಸುತ್ತೇವೆ. ಜಾತಿ ಗಣತಿಗಾಗಿ ನಮ್ಮ ನಾಯಕ ರಾಹುಲ್ ಗಾಂಧಿ ಅವರ ಬೇಡಿಕೆಯು ಈ ಸಮಸ್ಯೆಗಳ ಮೂಲವನ್ನು ಪಡೆಯಲು ಮತ್ತು ಪರಿಹಾರವನ್ನು ನೀಡುವ ನಮ್ಮ ಸಂಕಲ್ಪಕ್ಕೆ ಅನುಗುಣವಾಗಿದ್ದೇವೆ ಎಂದಿದ್ದಾರೆ.

ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಬಸ್ ಕಂಡಕ್ಟರ್ ಬಂಧನ

ಏಕನಾಥ್ ಶಿಂಧೆ ನೇತೃತ್ವದ ಸರ್ಕಾರವು ಅನಿಯಮಿತ ಮಳೆಯಿಂದ ಬೆಳೆ ಕಳೆದುಕೊಂಡ ರೈತರ ಬಗ್ಗೆ ಅಸಡ್ಡೆ ತೋರುತ್ತಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥರು ಆರೋಪಿಸಿದ್ದಾರೆ. ರಾಜ್ಯದಲ್ಲಿ ಕೈಗಾರಿಕಾ ಹೂಡಿಕೆ ಇಳಿಮುಖವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರಕ್ಕೆ ಪ್ರತಿ ಬಾರಿ ಭೇಟಿ ನೀಡಿದಾಗ, ಗುಜರಾತ್‍ಗೆ ಕೆಲವು ಹೂಡಿಕೆ ಅವಕಾಶವನ್ನು ಕಸಿದುಕೊಳ್ಳುತ್ತಾರೆ, ಇದು ರಾಜ್ಯ ಸರ್ಕಾರದ ಆದಾಯದ ಮೇಲೆ ಪರಿಣಾಮ ಬೀರಿದೆ ಎಂದು ಕಾಂಗ್ರೆಸ್ ನಾಯಕ ಹೇಳಿದರು.

ಒಬಿಸಿ ವರ್ಗದಡಿಯಲ್ಲಿ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಕೋರಿ ಹೋರಾಟಗಾರ ಮನೋಜ್ ಜಾರಂಗೆ ನೇತೃತ್ವದ ಮರಾಠ ಸಮುದಾಯದ ಪ್ರತಿಭಟನೆಗಳಿಗೆ ಮಹಾರಾಷ್ಟ್ರ ಸಾಕ್ಷಿಯಾಗಿದೆ.