Thursday, November 6, 2025
Home Blog Page 1807

ಸಿದ್ದರಾಮಯ್ಯರನ್ನು ದೃತರಾಷ್ಟ್ರನಿಗೆ ಹೋಲಿಸಿದ ಬಿಜೆಪಿ

ಬೆಂಗಳೂರು,ನ.19- ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪುತ್ರ ಯತೀಂದ್ರ ಅವರನ್ನು ಸಮರ್ಥನೆ ಮಾಡಿಕೊಳ್ಳುತ್ತಿರುವ ಪರಿ ದೃತರಾಷ್ಟ್ರನಿಗೂ ಅವರಿಗೂ ಯಾವುದೇ ವ್ಯತ್ಯಾಸವಿಲ್ಲ ಎಂದು ಬಿಜೆಪಿ ಕಿಡಿಕಾರಿದೆ.

ತನ್ನ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ವರ್ಗಾವಣೆಗೆ ಫೋನ್ ಕರೆ ಮಾಡಿ ಹಲೋ ಅಪ್ಪ ಎಂದ ಪುತ್ರ ಡಾ.ಯತೀಂದ್ರ ಅವರನ್ನು ಸಿಎಂ ಸಿದ್ದರಾಮಯ್ಯ ಅವರು ಸಮರ್ಥನೆ ಮಾಡುತ್ತಿರುವ ಪರಿ ದೃತರಾಷ್ಟ್ರನಿಗೂ, ಸಿದ್ದರಾಮಯ್ಯನಿಗೂ ಯಾವುದೇ ವ್ಯತ್ಯಾಸವಿಲ್ಲ ಎಂದು ಟೀಕಿಸಿದೆ.

ಡಾ.ಯತೀಂದ್ರ ಅವರನ್ನು ಸಮರ್ಥಿಸಿಕೊಳ್ಳುತ್ತಿರುವ ಪರಿ ಹೇಗಿದೆ ಎಂದರೆ ಸ್ವಾತಂತ್ರ ಇಲ್ವಾ? ಅಧಿಕಾರ ಇಲ್ವಾ? ಶ್ಯಾಡೊ ಸಿಎಂ ಅಲ್ವಾ? ಮುಖ್ಯಮಂತ್ರಿ ಮಗ ಅಲ್ವಾ? ಕ್ಷೇತ್ರ ನೋಡಿಕೊಳ್ಳಬಾರದ?ನನಗೆ ಕ್ಷೇತ್ರ ಬಿಟ್ಟು ಕೊಟ್ಟಿಲ್ವಾ? ಎಂದು ಸಿದ್ದರಾಮಯ್ಯನವರಿಗೆ ಎಕ್ಸ್ ಮೂಲಕ ಟಾಂಗ್ ಕೊಟ್ಟಿದೆ.

ವಿಶ್ವಕಪ್: ಭಾರತದ ಗೆಲುವಿಗೆ ದೇಶಾದ್ಯಂತ ವಿಶೇಷ ಪೂಜೆ, ಹೋಮ-ಹವನ

ಪೆನ್‍ಡ್ರೈವ್ ಇದೆ, ಕಳೆದಿಲ್ಲ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು,ನ.19-ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪೆನ್‍ಡ್ರೈವ್ ಇದೆ, ಕಳೆದಿಲ್ಲ. ಅದನ್ನು ತೋರಿಸಿದೊಡನೆ ನನ್ನಲ್ಲಿಗೆ ಓಡಿ ಬಂದವರ ಪಟ್ಟಿ ಕೊಡಲೇ ಎಂದು ಪ್ರಶ್ನಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಸುದೀರ್ಘ ಪೋಸ್ಟ್ ಮಾಡಿರುವ ಅವರು, ನನ್ನ ಮಾನಸಿಕ ಸ್ವಾಸ್ಥ್ಯಇರಲಿ. ನಿಮ್ಮ ಅಕಾರದ ಅಂಟುರೋಗಕ್ಕೆ ಮದ್ದೇನು? ನಿಮಗಿರುವ ಧನದಾಹ ಜಾಡ್ಯಕ್ಕೆ ಚಿಕಿತ್ಸೆ ಪಡೆಯಬಾರದೇ? ಮಾನಸಿಕ ಅಸ್ವಾಸ್ಥ್ಯಕ್ಕಿಂತ ಇದು ಮಾರಕ ಮನೋರೋಗವಲ್ಲವೇ? ಮುಖ್ಯಮಂತ್ರಿಯೇ ಇಂಥ ವಿನಾಶಕಾರಿ ಕಾಯಿಲೆಗೆ ತುತ್ತಾದರೆ ನಾಡಿನ ಪಾಡೇನು? ತುರ್ತು ಚಿಕಿತ್ಸೆ ನಿಮಗೆ ಅಗತ್ಯವಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ವಿಡಿಯೋ ವಿಷಯ ವಿಷಯಾಂತರ ಮಾಡಬೇಡಿ. ನಾನು ಕೇಳಿದ್ದೇನು? ನೀವು ಹೇಳುತ್ತಿರುವುದೇನು? ತಿರುಚುವ, ವಕ್ರೀಕರಿಸುವ ಚಾಳಿ ಬಿಡಿ. ನೀವು ಈ ರಾಜ್ಯದ ಆರೂವರೆ ಕೋಟಿ ಕನ್ನಡಿಗರ ಪ್ರತಿನಿಧಿ ಮತ್ತು ಉತ್ತರದಾಯಿ. ಉತ್ತರ ಕೊಡಿ ಸಿದ್ದರಾಮಯ್ಯನವರೇ? ಎಂದು ಪ್ರಶ್ನಿಸಿದ್ದಾರೆ.

ಒಂದು ವಿಡಿಯೋ ಬಗ್ಗೆ ಪ್ರಶ್ನಿಸಿದ್ದಕ್ಕೆ ನಿಮಗೆ, ನಿಮ್ಮ ಸಂಪುಟಕ್ಕೆ ನಿದ್ದೆಯೇ ಹಾರಿ ಹೋಗಿದೆ. ಸಚಿವರನ್ನು ಗುಂಪು ಗುಂಪಾಗಿ ವಾಗ್ದಾಳಿ ಮಾಡಿದರೆ ಕುಮಾರಸ್ವಾಮಿ ಹೆದರಿ ಓಡಿ ಹೋಗುವುದಿಲ್ಲ. ವರುಣಾದ ಜನ ನಿಮ್ಮನ್ನು ಆಯ್ಕೆ ಮಾಡಿಕೊಂಡಿದ್ದಾರೆ. ನೀವೇ ಅವರ ಕೆಲಸ ಮಾಡಬೇಕು. ನಿಮ್ಮ ಪುತ್ರನಿಗೆ ಕ್ಷೇತ್ರದ ಹೊರಗುತ್ತಿಗೆ ಯಾಕೆ? ಸಿಎಂ ಆಗಿದ್ದಾಗ ನಾನು ನನ್ನ ಮಗನಿಗೆ ಕ್ಷೇತ್ರದ ಹೊರಗುತ್ತಿಗೆ ನೀಡಿದ್ದಿಲ್ಲ. ನೀವು ಮಗನಿಗೆ ವರುಣಾದ ಹೊರಗುತ್ತಿಗೆ ನೀಡಿದ್ದೀರಿ.

ಅಷ್ಟೇ ಅಲ್ಲ ನಿಮ್ಮ ಪುತ್ರ ಮಹಾಶಯರನ್ನು ಆಶ್ರಯ ಸಮಿತಿ ಅಧ್ಯಕ್ಷರನ್ನಾಗಿ ಮಾಡಿ, ಅವರ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆಸಲು ಹಾಗೂ ಸರ್ಕಾರಿ ಅಧಿಕಾರಿಗಳ ಸಭೆ ನಡೆಸಿ ದರ್ಬಾರ್ ಮಾಡಲು ಅನುವು ಮಾಡಿಕೊಟ್ಟಿದ್ದೀರಿ. ಇದಕ್ಕೆ ಕಾನೂನಿನಲ್ಲಿ ಅವಕಾಶ ಇದೆಯಾ? ಇದ್ದರೆ ತಿಳಿಸಿ ಎಂದು ಆಗ್ರಹಿಸಿದ್ದಾರೆ.

ವಿಶ್ವಕಪ್: ಭಾರತದ ಗೆಲುವಿಗೆ ದೇಶಾದ್ಯಂತ ವಿಶೇಷ ಪೂಜೆ, ಹೋಮ-ಹವನ

ನನಗೆ ತಿಳಿದಮಟ್ಟಿಗೆ ಈವರೆಗೆ ಯಾವ ಸಿಎಂ ಕೂಡ ಸ್ವಕ್ಷೇತ್ರದ ಹೊರಗುತ್ತಿಗೆ ಮಕ್ಕಳಿಗೆ ಕೊಟ್ಟಿದ್ದಿಲ್ಲ. ನೀವು ಕೊಟ್ಟು ಮೇಲ್ಪಂಕ್ತಿ ಹಾಕಿದ್ದೀರಿ. ಹಿಂಬಾಗಿಲಿನಿಂದ ಮಗನಿಗೆ ಅಧಿಕಾರ ಕೊಡಲು ಕೆಡಿಪಿ ಪಟ್ಟ ಕಟ್ಟಿದ್ದೀರಿ. ಸಂವಿಧಾನದಲ್ಲಿ ಇದಕ್ಕೆ ಅವಕಾಶವಿರುವ ಯಾವುದಾದರೂ ವಿಧಿ-ವಿಧಾನ ಇದೆಯಾ? ಇದ್ದರೆ ತಿಳಿಸಿ ಎಂದು ಅವರು ಒತ್ತಾಯಿಸಿದ್ದಾರೆ.

ನಿಮ್ಮ ಸಚಿವಾಲಯದ ಅಧಿಕಾರಿಗಳ ಕರ್ತವ್ಯ ಹಂಚಿಕೆ ಪಟ್ಟಿ ಪ್ರಕಾರ, ವಿಶೇಷ ಕರ್ತವ್ಯಾಧಿಕಾರಿ ಆರ್.ಮಹದೇವುಗೆ ಶಿಕ್ಷಣ ಇಲಾಖೆ ಹೊಣೆ ಇಲ್ಲ. ಜಂಟಿ ಕಾರ್ಯದರ್ಶಿ ಎಂ.ರಾಮಯ್ಯಗೆ ಆ ಹೊಣೆ ಇದೆ. ವರುಣಾ ಹೊಣೆ ಇನ್ನೊಬ್ಬ ವಿಶೇಷ ಕರ್ತವ್ಯಾಕಾರಿ ಕೆ.ಎನ್.ವಿಜಯ್ ರದ್ದು. ಇದು ಸತ್ಯಸ್ಥಿತಿ. ಅಪರ ಸತ್ಯಹರಿಶ್ಚಂದ್ರರಾದ ನೀವೇ ಸುಳ್ಳು ಹೇಳೋದೇ? ಎಂದು ಪ್ರಶ್ನಿಸಿದ್ದಾರೆ.

ಯತೀಂದ್ರರು ಶಿಕ್ಷಣದ ಕುರಿತು ಎಂ.ರಾಮಯ್ಯ ಜತೆ, ವರುಣಾ ಬಗ್ಗೆ ಕೆ.ಎನ್.ವಿಜಯ್ ಜತೆ ಚರ್ಚಿಸದೆ, ಇವೆರಡಕ್ಕೂ ಸಂಬಂಧವಿಲ್ಲದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸಚಿವರ ಆಪ್ತಶಾಖೆ, ವರ್ಗಾವಣೆ -ಸೇವಾ ಹೊಣೆಯ ಮಹದೇವು ಜತೆ ಫೋನ್ ಚರ್ಚೆ ನಡೆಸಿದ್ದೇಕೆ? ಸಿಎಸ್‍ಆರ್‍ಗೂ ಅವರಿಗೂ ಸಂಬಂಧವೇನು? ಸಿಎಸ್‍ಆರ್ ಶಿಕ್ಷಣ ಇಲಾಖೆಗೆ ಸಂಬಂಧಿಸಿದ್ದಲ್ಲ ಎಂದು ಮಧು ಬಂಗಾರಪ್ಪ ಕೂಡ ಹೇಳಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಮಾಡದ ತಪ್ಪಿಗೆ ವಿದ್ಯುತ್ ಪ್ರಕರಣದಲ್ಲಿ ದಂಡ ತೆತ್ತಿದ್ದೇನೆ, ವಿಷಾದಿಸಿದ್ದೇನೆ. ಈಗ ನಿಮ್ಮ ಪ್ರತಿಷ್ಠೆ ಮೂರಾಬಟ್ಟೆಯಾಗಿದ್ದು ಇರಲಿ, ನಿಮ್ಮ ಪುತ್ರನಿಂದ ಇಡೀ ಕರ್ನಾಟಕ ತಲೆ ತಗ್ಗಿಸುವಂತೆ ಆಗಿದೆ. ಕಾಸಿಗಾಗಿ ಹುದ್ದೆ ದಂಧೆಯಿಂದ ಹೋದ ಮಾನ ವಾಪಸ್ ಪಡೆಯಲಿಕ್ಕೇನು ಮಾಡುತ್ತೀರಿ? ಎಂದು ಪ್ರಶ್ನಿಸಿದ್ದಾರೆ.

ಕುಮಾರಸ್ವಾಮಿ ಹಣ ಪಡೆದು ವರ್ಗಾವಣೆ ಮಾಡುತ್ತಿದ್ದರು : ಸಿಎಂ ಸಿದ್ದರಾಮಯ್ಯ

ಬೆಂಗಳೂರು,ನ.19- ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಣ ಪಡೆದು ವರ್ಗಾವಣೆ ಮಾಡುತ್ತಿದ್ದರು. ಅದೇ ಅನುಭವವನ್ನು ಪದೇ ಪದೇ ಕೇಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಾರಿರುವ ಟ್ವೀಟ್ ವಾರ್‍ಗೆ ಸಿಡಿಮಿಡಿಗೊಂಡಿರುವ ಸಿದ್ದರಾಮಯ್ಯ ಇಂದು ಪ್ರತ್ಯಾರೋಪದ ಮೂಲಕ ತಿರುಗೇಟು ನೀಡಿದ್ದಾರೆ.
ನಾನು ಈಗಾಗಲೇ ಮೂರು ಬಾರಿ ಸ್ಪಷ್ಟನೆ ನೀಡಿದ್ದೇನೆ. ಆದರೂ ಪದೇ ಪದೇ ಕುಮಾರಸ್ವಾಮಿ ಹೇಳಿದ್ದನ್ನೇ ಹೇಳುತ್ತಿದ್ದಾರೆ. ಇನ್ನು ಮುಂದೆ ಅವರು ನೂರು ಟ್ವೀಟ್ ಮಾಡಲಿ ನಾನು ಪ್ರತಿಕ್ರಿಯಿಸುವುದಿಲ್ಲ ಎಂದರು.

ಪದೇ ಪದೇ ಪ್ರಶ್ನೆಗಳು ಎದುರಾದಾಗ ಸಿಟ್ಟಾದ ಸಿದ್ದರಾಮಯ್ಯ ಅವರು ನಮ್ಮ ಅಕಾರ ಅವಯಲ್ಲಿ ಹಣ ಪಡೆದು ವರ್ಗಾವಣೆ ಮಾಡಿರುವ ಒಂದೇ ಒಂದು ಪ್ರಕರಣವನ್ನು ತೋರಿಸಿದರೂ ರಾಜಕೀಯವಾಗಿ ನಾನು ನಿವೃತ್ತಿ ಹೊಂದುತ್ತೇನೆ ಎಂದು ಈಗಾಗಲೇ ಹೇಳಿದ್ದೇನೆ. ಅದರ ನಂತರ ಪದೇ ಪದೇ ಮಾತನಾಡುವುದರಲ್ಲಿ ಅರ್ಥವಿಲ್ಲ ಎಂದು ಹೇಳಿದರು.

ವಿಶ್ವಕಪ್: ಭಾರತದ ಗೆಲುವಿಗೆ ದೇಶಾದ್ಯಂತ ವಿಶೇಷ ಪೂಜೆ, ಹೋಮ-ಹವನ

ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಮೈಸೂರಿನ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಜನಸಂಪರ್ಕ ಸಭೆಯಲ್ಲಿ ಮಾತನಾಡುವ ವೇಳೆ ಐದು ಹೆಸರನ್ನು ಕೊಟ್ಟಿದ್ದೇನೆ. ಅದನ್ನು ಹೊರತುಪಡಿಸಿ ಬೇರೆ ಸೇರಬಾರದು ಎಂದು ತಾಕೀತು ಮಾಡಿದರು.

ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಆನಂತರ ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯ ಅಕಾರಿ ಮಹದೇವ್ ಅವರೊಂದಿಗೆ ಯತೀಂದ್ರ ಸಮಾಲೋಚನೆ ನಡೆಸಿದರು. ಈ ವಿಡಿಯೋ ಬಹಿರಂಗವಾಗುತ್ತಿದ್ದಂತೆ ನಾನಾ ರೀತಿಯ ವ್ಯಾಖ್ಯಾನಗಳು ಕೇಳಿಬಂದವು. ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಸರ್ಕಾರದಲ್ಲಿ ವರ್ಗಾವಣೆ ನಡೆಯುತ್ತಿದೆ ಎಂಬ ಗಂಭೀರ ಆರೋಪ ಮಾಡಿದವು.

ಅದಕ್ಕೆ ಸ್ಪಷ್ಟನೆ ನೀಡಿದ ಮುಖ್ಯಮಂತ್ರಿಯವರು ತಮ್ಮ ಪುತ್ರ ವರುಣಾ ವಿಧಾನಸಭಾ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಸಾಮಾಜಿಕ ಹೊಣೆಗಾರಿಕೆ ನಿಯಡಿ ಶಾಲೆಗಳ ಅಭಿವೃದ್ಧಿಗೆ ಪಟ್ಟಿ ತಯಾರಿಸಲಾಗಿದ್ದು, ಆ ಕುರಿತಂತಹ ಹೆಸರುಗಳ ಬಗ್ಗೆ ಯತೀಂದ್ರ ಪ್ರಸ್ತಾಪಿಸಿದ್ದಾರೆ. ಅದು ಅಧಿಕಾರಿಗಳ ವರ್ಗಾವಣೆ ವಿಷಯವಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.

ನಿನ್ನೆ ಮೈಸೂರಿನಲ್ಲಿ ಹೇಳಿಕೆ ನೀಡಿ ಇದೇ ವಿಚಾರವನ್ನು ಪುನರುಚ್ಚರಿಸಿದರು. ಅದರ ಹೊರತಾಗಿಯೂ ಇಂದು ಬೆಳಗ್ಗೆ ಕುಮಾರಸ್ವಾಮಿ ಮತ್ತೆ ಟ್ವೀಟ್ ಮಾಡಿ ಹಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು ಇನ್ನು ಮುಂದೆ ಕುಮಾರಸ್ವಾಮಿ ನೂರು ಟ್ವೀಟ್ ಮಾಡಲಿ ನಾನು ಉತ್ತರಿಸುವುದಿಲ್ಲ ಎಂಬ ನಿರ್ಧಾರಕ್ಕೆ ಬಂದಿದ್ದಾರೆ.

ಏರ್ ಶೋ ಮೂಲಕ ವಿಶ್ವಕಪ್ ಫೈನಲ್ ಪಂದ್ಯ ಆರಂಭ

ನವದೆಹಲಿ,ನ.19- ಇಂದು ನಡೆಯುವ ಆಸ್ಟ್ರೇಲಿಯಾ ಮತ್ತು ಭಾರತ ನಡುವಣ ಫೈನಲ್ ಪಂದ್ಯದ ವೇಳೆ ಹಲವು ಮನರಂಜನಾ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಈ ಸಂಬಂಧ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ( ಬಿಸಿಸಿಐ ) ತನ್ನ ಅಕೃತ ಟ್ವೀಟರ್ ಖಾತೆಯಲ್ಲಿ ಪ್ರಕಟಿಸಿದೆ.

ಕಾರ್ಯಕ್ರಮದ ಸಮಯವನ್ನು ನಿಗದಿಪಡಿಸಿದ್ದು, ಪಂದ್ಯಕ್ಕೂ ಮೊದಲು ಟಾಸ್, ಬಳಿಕ ಅಂದರೆ 1.35ರಿಂದ 1.50ರವರೆಗೆ ಭಾರತೀಯ ವಾಯುಪಡೆಯ ಸೂರ್ಯಕಿರಣ್ ತಂಡದಿಂದ ಏರ್ ಶೋ ನಡೆಯಲಿದೆ. ನರೇಂದ್ರಮೋದಿ ಸ್ಟೇಡಿಯಂನಲ್ಲಿ ಲೋಹದ ಹಕ್ಕಿಗಳು ಹಾರಾಟ ನಡೆಸಲಿವೆ.

ಮೊದಲು ಇನ್ನಿಂಗ್‍ನ ಡ್ರಿಂಕ್ಸ್ ಬ್ರೇಕ್ ವೇಳೆ ಆದಿತ್ಯ ಗ್ವ ಅವರು ಪ್ರದರ್ಶನ ನೀಡಲಿದ್ದಾರೆ. ಮೊದಲು ಇನ್ನಿಂಗ್ ಮುಗಿದ ಬಳಿಕ ಸಿಗುವ ಸಮಯದಲ್ಲಿ ಪ್ರೀತಮ್ ಚಕ್ರವರ್ತಿ, ಜೋನಿತಾ ಗಾಂ, ನಕಾಶ್ ಅಜೀಜ್, ಅಮಿತ್ ಮಿಶ್ರಾ, ಅಕಾಸ ಸಿಂಗ್ ಮತ್ತು ತುಷಾರ್ ಜೋಶಿ ಪ್ರದರ್ಶನಗಳು ನಡೆಯಲಿವೆ.

ಎರಡನೇ ಇನ್ನಿಂಗ್ಸ್ ನ ಡ್ರಿಂಕ್ಸ್ ಬ್ರೇಕ್ ವೇಳೆ ಲೇಸರ್ ಮತ್ತು ಲೈಟ್ ಶೋ ನಡೆಯಲಿದೆ ಎಂದು ಬಿಸಿಸಿಐ ಹೇಳಿದೆ. ಖ್ಯಾತ ಗಾಯಕಿ ದುವಾ ಲಿಪಾ ಪ್ರದರ್ಶನ ನೀಡಲಿದ್ದಾರೆ ಎಂದು ಸುದ್ದಿಯಾಗಿತ್ತು, ಆದರೆ ಬಿಸಿಸಿಐ ಇಂದು ಬಿಡುಗಡೆ ಮಾಡಿ ಪಟ್ಟಿಯಲ್ಲಿ ದುವಾ ಲಿಪಾ ಹೆಸರಿಲ್ಲ.

ಈಗಾಗಲೇ ಇದ್ದಕ್ಕೆ ಬೇಕಾದ ಪೂರ್ವ ಸಿದ್ಧತಾ ತಯಾರಿಯನ್ನು ಸೂರ್ಯಕಿರಣ್ ತಂಡ ನಡೆಸಿದೆ. ಕಳೆದ 2 ದಿನಗಳಿಂದ ಇಲ್ಲಿ ಪ್ರಾಯೋಗಿಕ ಹಾರಾಟ ನಡೆಸಿ ಸರ್ವ ಸನ್ನದ್ಧವಾಗಿ ನಿಂತಿದೆ. ಈ ಬಾರಿಯ ಎಲ್ಲ ಲೀಗ್ ಪಂದ್ಯದ ವೇಳೆಯೂ ಬಿಸಿಸಿಐ ಸ್ಟೇಡಿಯಂಗಳಲ್ಲಿ ವಿನೂತನ ಶೈಲಿಯ ಲಸರ್ ಶೋಗಳ ಮೂಲಕ ನೆರದಿದ್ದ ಪ್ರೇಕ್ಷಕರನ್ನು ರಂಜಿಸಿತ್ತು. ಇದೀಗ ಫೈನಲ್ ಪಂದ್ಯದಲ್ಲೂ ವಿಶಿಷ್ಠ ಶೈಲಿಯ ಲೇಸರ್ ಮತ್ತು ಲೈಟ್ ಶೋ ನಡೆಯಲಿದೆ. ಇದು ಎರಡನೇ ಇನ್ನಿಂಗ್ಸ್ನ ಡ್ರಿಂಕ್ಸ್ ಬ್ರೇಕ್ ವೇಳೆ ಪ್ರದರ್ಶನಗೊಳ್ಳಲಿದೆ ಎಂದು ಬಿಸಿಸಿಐ ತನ್ನ ಅಕೃತ ಪ್ರಕಟನೆಯಲ್ಲಿ ತಿಳಿಸಿದೆ.

ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ 2023 ಕೂಟದ ಉದ್ಘಾಟನ ಸಮಾರಂಭ ಮಾಡದೇ ಇದ್ದ ಬಿಸಿಸಿಐ ವಿರುದ್ಧ ಹಲವು ಟೀಕೆಗಳು ಕೇಳಿಬಂದಿತ್ತು. ಮೊದಲ ಬಾರಿಗೆ ಸಂಪೂರ್ಣವಾಗಿ ಕೂಟದ ಆತಿಥ್ಯ ಸಿಕ್ಕರೂ, ಅತ್ಯಂತ ಶ್ರೀೀಮಂತ ಕ್ರಿಕೆಟ್ ಮಂಡಳಿ ಎನಿಸಿಕೊಂಡಿದ್ದರೂ ಬಿಸಿಸಿಐಗೆ ಉದ್ಘಾಟನ ಕಾರ್ಯಕ್ರಮ ನಡೆಸಲಾಗದಷ್ಟು ಕಷ್ಟ ಎದುರಾಯಿತೇ ಎಂಬ ಟಾಕ್ ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದು ಮಾಡಿತ್ತು.

ಇದೀಗ ಸಮಾರೋಪ ಸಮಾರಂಭವನ್ನು ಅದ್ಧೂರಿಯಾಗಿ ನಡೆಸಲು ಬಿಸಿಸಿಐ ಸಕಲ ಸಿದ್ಧತೆ ಪೂರ್ಣಗೊಳಿಸಿದ್ದು ಸಮಾರೋಪ ಕಾರ್ಯಕ್ರಮದ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.

ವಿಪಕ್ಷ ನಾಯಕನ ಆಯ್ಕೆ: ಸ್ವಲ್ಪ ದಿನ ಕಾದು ನೋಡಿ ಎಂದ ಸಿಎಂ ಸಿದ್ದರಾಮಯ್ಯ

ಮೋದಿ-ಅಲ್ಬನೀಸ್‍ಗೆ ಆಹ್ವಾನ:
ಫೈನಲ್ ಪಂದ್ಯಕ್ಕೆ ಉಭಯ ದೇಶಗಳ ಪ್ರಧಾನಿಗಳಾದ ನರೇಂದ್ರ ಮೋದಿ ಮತ್ತು ಆಂಥೋನಿ ಅಲ್ಬನೀಸ್ ಅವರಿಗೆ ವಿಶೇಷ ಆಹ್ವಾನ ನೀಡಲಾಗಿದೆ. ಆದರೆ ಇವರಿಬ್ಬರ ಉಪಸ್ಥಿತಿಯ ಬಗ್ಗೆ ಇದುವರೆಗೂ ಯಾವುದೇ ಅಕೃತ ಮಾಹಿತಿ ಲಭ್ಯವಾಗಿಲ್ಲ. ಈ ವರ್ಷದ ಆರಂಭದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಸಾಕ್ಷಿಯಾಗಿದ್ದರು.

ಕ್ರೀಡಾಂಗಣಕ್ಕೆ ಭೇಟಿ ಎರಡೂ ತಂಡಗಳ ಆಟಗಾರರ ಜತೆ ಕುಶಲೋಪರಿ ನಡೆಸಿದ್ದರು. ಈವರೆಗಿನ ವಿಶ್ವಕಪ್ ವಿಜೇತ ತಂಡಗಳ ನಾಯಕರೆಲ್ಲರಿಗೂ ಆಹ್ವಾನ ನೀಡಲಾಗಿದೆ. ಈ ನಾಯಕರೆಂದರೆ ಕ್ಲೈವ್ ಲಾಯ್ಡ್, ಕಪಿಲ್ದೇವ್, ಅಲನ್ ಬಾರ್ಡರ್, ಇಮ್ರಾನ್ ಖಾನ್, ಅರ್ಜುನ ರಣತುಂಗ, ಸ್ಟೀವ್ ವಾ, ರಿಕಿ ಪಾಂಟಿಂಗ್, ಮೈಕೆಲ್ ಕ್ಲಾರ್ಕ್, ಇಯಾನ್ ಮಾರ್ಗನ್. ಮಾಜಿ ಕ್ರಿಕೆಟಿಗರಾದ ಸಚಿನ್ ತೆಂಡುಲ್ಕರ್, ಯುವರಾಜ್ ಸಿಂಗ್, ವೀರೇಂದ್ರ ಸೆಹವಾಗ್, ಅನಿಲ್ ಕುಂಬ್ಳೆ, ಸೌರವ್ ಗಂಗೂಲಿ ಮೊದಲಾದವರು ಫೈನಲ್ ಪಂದ್ಯಕ್ಕೆ ಸಾಕ್ಷಿಯಾಗಲಿದ್ದಾರೆ.

ತಾರೆಗಳಾದ ಅಮಿತಾಭ್ ಬಚ್ಚನ್, ರಜನೀಕಾಂತ್, ಕಮಲಹಾಸನ್, ಮೋಹನ್ಲಾಲ್, ರಾಮ್ಚರಣ್ ಕೂಡ ಸ್ಟೇಡಿಯಂಗೆ ಆಗಮಿಸಲಿದ್ದಾರೆ.

ವಿಶ್ವಕಪ್: ಭಾರತದ ಗೆಲುವಿಗೆ ದೇಶಾದ್ಯಂತ ವಿಶೇಷ ಪೂಜೆ, ಹೋಮ-ಹವನ

ನವದೆಹಲಿ,ನ.19-ಆಹಮದಾಬಾದಿನ ನರೇಂದ್ರಮೋದಿ ಕ್ರೀಡಾಂಗಣದಲ್ಲಿಂದು ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಗೆದ್ದು ಬರಲೆಂದು ಹಾರೈಸಿ ದೇಶಾದ್ಯಂತ ವಿಶೇಷ ಪೂಜೆ, ಹೋಮ-ಹವನ ನಡೆಯುತ್ತಿವೆ.

ಉತ್ತರ ಪ್ರದೇಶದ ವಾರಾಣಸಿಯಲ್ಲಿ ಅಭಿಮಾನಿಗಳು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ತ್ರಿವರ್ಣ ಧ್ವಜದೊಂದಿಗೆ ಭಾರತದ 11 ಮಂದಿ ಆಟಗಾರರ ಫೋಟೋಗಳನ್ನು ನದಿ ಬಳಿ ಹಿಡಿದುಕೊಂಡು ಫೈನಲ್‍ನಲ್ಲಿ ಭಾರತ ತಂಡ ಗೆದ್ದು ಬರಲಿ ಎಂದು ವಿಶೇಷ ಪೂಜೆ ಸಲ್ಲಿಸಲಾಯಿತು.

ವಿಪಕ್ಷ ನಾಯಕನ ಆಯ್ಕೆ: ಸ್ವಲ್ಪ ದಿನ ಕಾದು ನೋಡಿ ಎಂದ ಸಿಎಂ ಸಿದ್ದರಾಮಯ್ಯ

ಮಹಾರಾಷ್ಟ್ರದ ಪುಣೆಯಲ್ಲಿರುವ ಶ್ರೀ ಸಿದ್ಧಿವಿನಾಯಕ ದೇವಾಲಯದಲ್ಲಿ ಕ್ರಿಕೆಟ್ ಅಭಿಮಾನಿಗಳಿಂದ ಭಾರತ ಗೆಲುವಿಗಾಗಿ ಪ್ರಾರ್ಥಿಸಿ ವಿಶೇಷ ಆರತಿ ಬೆಳಗಲಾಯಿತು. ಇದೇ ರೀತಿ ದೇಶದ ವಿವಿಧ ಕಡೆ ಅಭಿಮಾನಿಗಳು ಪೂಜೆ, ಹೋಮಹವನಗಳನ್ನು ನಿನ್ನೆಯಿಂದಲೇ ಮಾಡುತ್ತಿದ್ದು, ಟೀಮ್ ಇಂಡಿಯಾ ಗೆದ್ದು ಬರಲಿ ಎಂದು ಹಾರೈಸುತ್ತಿದ್ದಾರೆ.

ಬೆಂಗಳೂರು ಸೇರಿದಂತೆ ವಿವಿಧ ಕಡೆಯೂ ಕ್ರಿಕೆಟ್ ಅಭಿಮಾನಿಗಳು ದೇವರಿಗೆ ಮೊರೆಹೋಗಿದ್ದು, ಈ ಬಾರಿ ನಮ್ಮ ತಂಡ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಲಿ ಎಂದು ಪ್ರಾರ್ಥಿಸುತ್ತಿದ್ದಾರೆ.

ಬಿಹಾರದಲ್ಲಿ ನಕಲಿ ಮದ್ಯ ಸೇವಿಸಿ ಮೂವರ ಸಾವು

ಸಿತಾಮರ್ಹಿ (ಬಿಹಾರ), ನ.19 ಬಿಹಾರದ ಸಿತಾಮರ್ಹಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿದ ಆರೋಪದ ಮೇಲೆ ಮೂವರು ಸಾವನ್ನಪ್ಪಿದ್ದು, ಓರ್ವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಕಲಿ ಮದ್ಯ ಮಾರಾಟ ಆರೋಪದ ಮೇಲೆ ಇದುವರೆಗೆ ಮೂವರನ್ನು ಬಂಧಿಸಲಾಗಿದೆಸುಮಾರು 90 ಮದ್ಯದ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರು ವ್ಯಕ್ತಿಗಳು ನಕಲಿ ಮದ್ಯ ಸೇವಿಸಿ ಸೀತಾಮರ್ಹಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಸುಳಿವಿನ ಮೇರೆಗೆ ಮಧ್ಯರಾತ್ರಿ ಪೊಲೀಸರು ಸ್ಥಳಕ್ಕೆ ತಲುಪಿದರು. ಆದಾಗ್ಯೂ, ಅವರು ಆಸ್ಪತ್ರೆಗೆ ಬರುವ ಹೊತ್ತಿಗೆ, ಅವದೇಶ್ ಕುಮಾರ್ ಎಂದು ಗುರುತಿಸಲಾದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರು. ಮರಣೋತ್ತರ ಪರೀಕ್ಷೆಯ ನಂತರವಷ್ಟೇ ಸಾವಿಗೆ ನಿಖರ ಕಾರಣ ತಿಳಿಯಬಹುದು ಎಂದು ಪೊಲೀಸ್ ಹೇಳಿಕೆ ತಿಳಿಸಿದೆ.

ವಿಪಕ್ಷ ನಾಯಕನ ಆಯ್ಕೆ: ಸ್ವಲ್ಪ ದಿನ ಕಾದು ನೋಡಿ ಎಂದ ಸಿಎಂ ಸಿದ್ದರಾಮಯ್ಯ

ರೋಶನ್ ರೈ ಎಂದು ಗುರುತಿಸಲಾದ ಇನ್ನೊಬ್ಬ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪೊಲೀಸರು ಆತನ ಕುಟುಂಬ ಸದಸ್ಯರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಅದು ಹೇಳಿದೆ.

ತನಿಖೆಯ ವೇಳೆ ಈ ಪ್ರದೇಶದಲ್ಲಿ ಮತ್ತಿಬ್ಬರು ನಕಲಿ ಮದ್ಯ ಸೇವಿಸಿ ಮೃತಪಟ್ಟಿರುವುದು ಪೊಲೀಸರಿಗೆ ತಿಳಿದು ಬಂದಿದೆ.ಈ ಪ್ರದೇಶದಲ್ಲಿ ಇನ್ನಿಬ್ಬರು ಸಾವನ್ನಪ್ಪಿರುವ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದರು. ಆದರೆ ಶವಗಳನ್ನು ಸುಟ್ಟುಹಾಕಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-11-2023)

ನಿತ್ಯ ನೀತಿ: ಮಡಿ ಎನ್ನುವುದು ಮನಸ್ಸಿನ ಭಾವಸ್ಥರ. ಕೇವಲ ಸ್ನಾನ ಮಾಡಿದ ಮಾತ್ರಕ್ಕೆ ಮಡಿಯಾಗದು. ಮನಸ್ಸು ಮಲಿನ ಮಾಡಿಕೊಂಡು ಮಾಡುವ ಪೂಜೆ ದೇವರಿಗೆ ಪ್ರಿಯವಾಗುವುದಿಲ್ಲ. ಕೇವಲ ವ್ಯಾವಹಾರಿಕ ಪೂಜೆಯಾಗುತ್ತದೆ.

ಪಂಚಾಂಗ ಭಾನುವಾರ 19-11-2023
ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಕಾರ್ತಿಕ ಮಾಸ / ಶುಕ್ಲ ಪಕ್ಷ / ತಿಥಿ: ಷಷ್ಠಿ / ನಕ್ಷತ್ರ: ಶ್ರವಣ / ಯೋಗ: ವೃದ್ಧಿ / ಕರಣ: ಗರಜೆ

ಸೂರ್ಯೋದಯ : ಬೆ.06.20
ಸೂರ್ಯಾಸ್ತ : 05.50
ರಾಹುಕಾಲ : 4.30-6.00
ಯಮಗಂಡ ಕಾಲ : 12.00-1.30
ಗುಳಿಕ ಕಾಲ : 3.00-4.30

ರಾಶಿ ಭವಿಷ್ಯ
ಮೇಷ
: ವಿವಾಹಿತರು ಉತ್ತಮ ದಾಂಪತ್ಯ ಜೀವನವನ್ನು ಆನಂದಿಸುವರು.
ವೃಷಭ: ಸ್ಥಗಿತಗೊಂಡ ಕೆಲಸಗಳು ಮುಂದುವರಿಯಲಿವೆ.
ಮಿಥುನ: ಯಾವುದೇ ನಿರ್ಧಾರವನ್ನು ಅವಸರದಲ್ಲಿ ತೆಗೆದುಕೊಳ್ಳದಿರಿ. ಅತಿಯಾದ ಆತ್ಮವಿಶ್ವಾಸ ಬೇಡ.

ಕಟಕ: ಕುಟುಂಬದ ಸದಸ್ಯರಿಂದ ಒಳ್ಳೆಯ ಸುದ್ದಿ ಕೇಳುವಿರಿ. ಅತ್ತಿಗೆಯಿಂದ ಲಾಭವಾಗಲಿದೆ.
ಸಿಂಹ: ಕೌಟುಂಬಿಕ ಮತ್ತು ವೈವಾಹಿಕ ಜೀವನವು ಆಹ್ಲಾದಕರವಾಗಿರುತ್ತದೆ.
ಕನ್ಯಾ: ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.

ತುಲಾ: ನಿಮ್ಮ ಶ್ರಮ ಮತ್ತು ಅದೃಷ್ಟ ಎಲ್ಲಾ ರೀತಿಯಲ್ಲೂ ಬೆಂಬಲ ನೀಡುತ್ತದೆ.
ವೃಶ್ಚಿಕ: ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಿ.
ಧನುಸ್ಸು: ಹಿರಿಯ ಅಧಿಕಾರಿಗಳು, ಕುಟುಂಬದವರು ನಿಮ್ಮ ವ್ಯಕ್ತಿತ್ವವನ್ನು ಪ್ರಶಂಸಿಸುವರು.

ಮಕರ: ವಿವಿಧ ಕ್ಷೇತ್ರ ಗಳಲ್ಲಿ ಅನೇಕ ರೀತಿಯ ಸವಾಲುಗಳನ್ನು ಎದುರಿಸಬೇಕಾಗುತ್ತದೆ.
ಕುಂಭ: ಯೋಜಿತ ರೀತಿಯಲ್ಲಿ ಹೋದರೆ ಸಮಸ್ಯೆ ಗಳು ನಿವಾರಣೆಯಾಗುವುದರಲ್ಲಿ ಸಂದೇಹವಿಲ್ಲ.
ಮೀನ: ವ್ಯವಹಾರದಲ್ಲಿನ ನಿಮ್ಮ ನಿರ್ಧಾರಗಳು ಲಾಭ ತಂದುಕೊಡಲು ಕಾರಣವಾಗುತ್ತವೆ.

ಸರ್ಕಾರದ ವಿರುದ್ಧ ಬಿಜೆಪಿ ಪೋಸ್ಟರ್ ಸಮರ

ಬೆಂಗಳೂರು,ನ.18- ರಾಜ್ಯ ಕಾಂಗ್ರೆಸ್ ಸರಕಾರ ಘೋಷಿಸಿದ ಗ್ಯಾರಂಟಿಗಳ ವಿರುದ್ಧ ಬಿಜೆಪಿ ಸರಕಾರ ಪೋಸ್ಟರ್ ಅಭಿಯಾನ ಆರಂಭಿಸಿದ್ದು, ಶ್ಯಾಡೋ ಸಿಎಂ ಎಂಬ ವ್ಯಂಗ್ಯಚಿತ್ರದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಟೀಕಾಪ್ರಹಾರ ನಡೆಸಿದೆ.

ಚಿಕ್ಕಮಗಳೂರಿನಲ್ಲಿ ಬಿಜೆಪಿ ವತಿಯಿಂದ ಪೋಸ್ಟರ್ ಅಭಿಯಾನವನ್ನು ಆರಂಭಿಸಲಾಗಿದ್ದು, ತಾಲೂಕು ಆಫೀಸ್, ಮೆಸ್ಕಾಂ ಕಚೇರಿ, ತಾಲೂಕು ಪಂಚಾಯಿತಿ, ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಅಭಿಯಾನ ನಡೆಸಿದ ಬಿಜೆಪಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಶ್ಯಾಡೋ ಸಿಎಂ ಎಂಬ ವ್ಯಂಗ್ಯಚಿತ್ರದ ಮೂಲಕ ವ್ಯಂಗ್ಯವಾಡಿದ್ದಾರೆ.

ಎರಡು ದಿನಗಳ ಹಿಂದೆ ಯತೀಂದ್ರ ಸಿದ್ದರಾಮಯ್ಯ ಅವರು ಫೋನ್ ಮೂಲಕ ಮಾತನಾಡುವ ವಿಡಿಯೋ ವೈರಲ್ಲಾಗಿತ್ತು. ಇದರ ವಿರುದ್ದವೂ ಶ್ಯಾಡೋ ಸಿಎಂ ಫೋಸ್ಟರ್ ಅಂಟಿಸಿ ಬಿಜೆಪಿ ಟೀಕೆ ಮಾಡಿದೆ.
ಇಂಧನ ಸಚಿವ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೆ.ಜೆ ಜಾರ್ಜ್ ವಿರುದ್ಧವೂ ಪೋಸ್ಟರ್ ಹಾಕಿದ್ದು, ರಾಜ್ಯವನ್ನ ಕತ್ತಲೆಗೆ ದೂಡಿ ಇಂಧನ ಸಚಿವರು ನಾಪತ್ತೆಯಾಗಿದ್ದಾರೆ ಎಂಬ ಪೋಸ್ಟರ್ ಹಾಕಿದೆ.

ಈ ಅಭಿಯಾನದಲ್ಲಿ ಸೋನಿಯಾ ಗಾಂಧಿ ಸಿ.ಎಂ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಯತೀಂದ್ರ ಸಿದ್ದರಾಮಯ್ಯ, ಕೆ.ಜೆ. ಜಾರ್ಜ್ ವಿರುದ್ಧ ಪೋಸ್ಟರ್ ವಾರ್ ನಡೆಸಿದ್ದಾರೆ. ಸರ್ಕಾರ ಒಂದೆಡೆ ಉಚಿತ ಎಂದು ಹೇಳಿಕೊಂಡು ಮತ್ತೊಂದೆಡೆ ಸುಲಿಗೆ ಮಾಡುತ್ತಿದೆ ಎಂದು ಲೇವಡಿ ಮಾಡಿದ್ದಾರೆ.

ಇದು ಫ್ರೀ ಭಾಗ್ಯವಲ್ಲ. ಹಗಲು ದರೋಡೆ ಎಂದು ಚಿಕ್ಕಮಗಳೂರು ನಗರದಾದ್ಯಂತ ಅಲ್ಲಲ್ಲೇ ಪೆÇೀಸ್ಟರ್ ಹಾಕಿದ್ದಾರೆ. ಅದೇ ರೀತಿ, ವೈಎಸ್‍ಟಿ (ಯತೀಂದ್ರ ಸಿದ್ದರಾಮಯ್ಯ ಟ್ಯಾಕ್ಸ್) ಸಂಗ್ರಹ ಸಮಿತಿಯ ಸುತ್ತೋಲೆ ಎಂಬ ಶೀರ್ಷಿಕೆ ನೀಡಿ, ಯಾವುದೇ ಸರ್ಕಾರಿ ಸಂಬಂತ ಸೇವೆಗಳಿಗಾಗಿ ಹಲೋ ಅಪ್ಪಾ.. ಆಪ್ ಡೌನ್‍ಲೋಡ್ ಮಾಡಿಕೊಳ್ಳಿ ಹಾಗೂ ಪೇಮೆಂಟ್ ಮಾಡಿ ಎಂದು ಬರೆಯಲಾಗಿದೆ. ಈ ಪೋಸ್ಟರ್‍ನಲ್ಲಿ ಯತೀಂದ್ರ ಅವರನ್ನು ಶ್ಯಾಡೋ ಸಿಎಂ ಎಂದು ಕರೆಯಲಾಗಿದೆ.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂ ಮತ್ತು ಕೆಜೆ ಜಾರ್ಜ್ ಸಂಭಾಷಣೆ ನಡೆಸುವ ರೀತಿಯಲ್ಲಿ ಪೋಸ್ಟರ್ ಅಂಟಿಸಲಾಗಿದೆ. ಈ ತಿಂಗಳ ಕಪ್ಪ ಎಲ್ಲಿ ಎಂದು ಸೋನಿಯಾ ಗಾಂ ಕೇಳುತ್ತಾರೆ. ಇದಕ್ಕೆ ಕೆಜೆ ಜಾರ್ಜ್, ಈಗ ತಾನೇ ವಿದ್ಯುತ್ ಬಿಲ್ ಜಾಸ್ತಿ ಮಾಡಿದ್ದೀವಿ. ಬರುತ್ತೆ ತಡೀರಿ ಮೇಡಂ ಎಂದು ಹೇಳುವ ರೀತಿ ಬರೆಯಲಾಗಿದೆ.
ಅಲ್ಲದೆ ಬಸ್ ಟಿಕೆಟ್ ದರಗಳನ್ನು ಸದ್ದಿಲ್ಲದೆ ಏರಿಸಿದ್ದನ್ನು ಮುಂದಿಟ್ಟುಕೊಂಡು ಪೋಸ್ಟರ್ ಅಂಟಿಸಲಾಗಿದೆ.

ಸಂಸದ ಪುತ್ರನ ಲವ್ವಿ-ಡವ್ವಿ ಪ್ರಕರಣ ಮೈಸೂರಿಗೆ ಹಸ್ತಾಂತರಿಸಲು ಸಿದ್ಧತೆ

ಫ್ರೀ ಬಸ್ ಟಿಕೆಟ್ ಅಂತಾ ನಂಬಿಸಿ 3 ಬಾರಿ ಬಸ್ ಟಿಕೆಟ್ ದರ ಏರಿಸಲಾಗಿದೆ. ಮೈಸೂರು-ಬೆಂಗಳೂರಿಗೆ 160 ರೂ. ಇದ್ದ ಟಿಕೆಟ್ ದರ ಈಗ 200 ರೂ. ಆಗಿದೆ. ಒಂದು ಕಡೆ ಸುಲಿಗೆ.. ಇನ್ನೊಂದು ಕಡೆ ಉಚಿತ.. ಇದು ಫ್ರೀ ಭಾಗ್ಯವಲ್ಲ, ಹಗಲು ದರೋಡೆ ಎಂದು ಪೋಸ್ಟರ್‍ನಲ್ಲಿ ಬರೆಯಲಾಗಿದೆ.

ಕಾಂಗ್ರೆಸ್ ಸರ್ಕಾರ ಕನ್ನಡಿಗರಿಗೆ ಕಪಟ ಐದು ಗ್ಯಾರಂಟಿಗಳು ಎಂದು ಶೀರ್ಷಿಕೆಯುಳ್ಳ ಪೋಸ್ಟರ್ ಕೂಡ ಅಂಟಿಸಲಾಗಿದೆ. ಅಧಿಕಾರಕ್ಕೆ ಬರುತ್ತಿದ್ದಂತೆಯೇ ಕರೆಂಟ್ ಬಿಲ್ ಏರಿಕೆ, ಲೋಡ್ ಶೆಡ್ಡಿಂಗ್ ಶುರು, ಸದ್ದಿಲ್ಲದೇ ಬಸ್ ದರ ಏರಿಕೆ ಮಾಡಿದ್ದು, ಕಾವೇರಿ ನೀರನ್ನು ಬೇಕಾಬಿಟ್ಟಿ ತಮಿಳುನಾಡಿಗೆ ದಾನ ನೀಡಿದ್ದು, ಸರ್ಕಾರಿ ಕಾರ್ಯಕ್ರಮಗಳ ಆಚರಣೆಗೆ ಅನುದಾನ ನೀಡದೆ ಸುಮ್ಮನೆ ಕೂತಿದ್ದು, ಆಸ್ತಿ ನೋಂದಣಿ ದರ ಏರಿಕೆ, ಗೃಹಲಕ್ಷ್ಮಿ ಬರುತ್ತಿಲ್ಲ, ಶಕ್ತಿ ಯೋಜನೆಗೆ ಬಸ್ ಸಾಲುತ್ತಿಲ್ಲ. ಯುವನಿಯಿನ್ನೂ ಶುರುವೇ ಆಗಿಲ್ಲ ಎಂದು ಪೋಸ್ಟರ್‍ನಲ್ಲಿ ಬರೆಯಲಾಗಿದೆ.

ಭ್ರಷ್ಟಾಚಾರದ ಆರೋಪಗಳ ಸುರಿಮಳೆಗೈದು ಪೇಸಿಎಮ್, 40 ಪರ್ಸೆಂಟ್ ಪೋಸ್ಟರ್ ಸೇರಿದಂತೆ ಹಲವು ಪೋಸ್ಟರ್‍ಗಳನ್ನು ಬಿಜೆಪಿ ಸರ್ಕಾರದ ವಿರುದ್ಧ ಅಂಟಿಸಿ ಚುನಾವಣೆಯಲ್ಲಿ ಲಾಭ ಪಡೆದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದ ವಿರುದ್ಧವೇ ಇದೀಗ ಬಿಜೆಪಿ ಕಾರ್ಯಕರ್ತರು ಪೋಸ್ಟರ್ ವಾರ್ ಆರಂಭಿಸಿದ್ದಾರೆ.

ವಿಪಕ್ಷ ನಾಯಕನ ಆಯ್ಕೆ: ಸ್ವಲ್ಪ ದಿನ ಕಾದು ನೋಡಿ ಎಂದ ಸಿಎಂ ಸಿದ್ದರಾಮಯ್ಯ

ಮೈಸೂರು, ನ.18- ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕರ ಆಯ್ಕೆಯ ನಂತರ ಅಸಮಾಧಾನಗಳು ಹೊರ ಬಂದಿದ್ದು, ಸ್ವಲ್ಪ ದಿನ ಕಾದು ನೋಡಿದರೆ ಮತ್ತಷ್ಟು ಬೆಳವಣಿಗೆಗಳಾಗುತ್ತವೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಅಶೋಕ್ ಅವರನ್ನು ಪ್ರತಿಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಪ್ರತಿಪಕ್ಷದ ನಾಯಕರು ಯಾರಾದರೂ ನಮಗೆ ಅಭ್ಯಂತರವಿಲ್ಲ. ಅದು ಅವರ ಪಕ್ಷಕ್ಕೆ ಸಂಬಂಧಿಸಿದ ವಿಷಯ. ಜನರ ಆಶೀರ್ವಾದದಿಂದ ಸರ್ಕಾರ ರಚಿಸಿರುವ ನಮ್ಮ ಕಾಂಗ್ರೆಸ್ ಜನರಿಗೆ ನೀಡಿರುವ ಆಶ್ವಾಸನೆಗಳನ್ನು ಈಡೇರಿಸುತ್ತಿದೆ. ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡದೇ, ಶಾಂತಿಯುತವಾದ ವಾತಾವರಣವನ್ನು ಸರ್ಕಾರ ನಿರ್ಮಿಸುತ್ತಿದೆ.

ಬಿಜೆಪಿಯವರು ಸರ್ಕಾರದ ವಿರುದ್ಧ ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳಿಗೆ ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಉತ್ತರವನ್ನು ನೀಡಲಾಗುವುದು ಎಂದು ಹೇಳಿದರು.

ಇಂದು ಚುನಾವಣೆ ನಡೆದರೂ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಯಡಿಯೂರಪ್ಪ ಹೇಳಿರುವುದು ಭ್ರಮೆ, ಚುನಾವಣೆಯಲ್ಲಿ ಕೇವಲ 66 ಸೀಟು ಪಡೆದು ವಿರೋಧ ಪಕ್ಷದಲ್ಲಿ ಕುಳಿತಿದ್ದಾರೆ. ಅವರ ಮಗ ವಿಜಯೇಂದ್ರರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವುದರಿಂದ ಅವರ ಪಕ್ಷದ ರಮೇಶ್ ಜಾರಕಿಹೊಳಿ, ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಸೇರಿದಂತೆ ಅನೇಕ ನಾಯಕರು ಅಸಮಧಾನಗೊಂಡಿದ್ದಾರೆ.

ವಿಜೆಯೆಂದ್ರರನ್ನು ರಾಜ್ಯಾಧ್ಯಕ್ಷರನ್ನಾಗಿ, ಆರ್.ಅಶೋಕರನ್ನು ವಿಪಕ್ಷ ನಾಯಕನ್ನಾಗಿ ಮಾಡಿರುವುದಕ್ಕೆ ಅವರೆಲ್ಲಾ ಅಸಮಧಾನಗೊಂಡಿದ್ದಾರೆ. ಇನ್ನು ಸ್ಪಲ್ಪ ಕಾದು ನೋಡಿ ಬಿಜೆಪಿಯ ಪರಿಸ್ಥಿತಿ ಗೋತ್ತಾಗಲಿದೆ ಎಂದರು.

ಮಾಜಿ ಸಿಎಂ ಕುಮಾರಸ್ವಾಮಿ ಯವರು ವಿವೇಕಾನಂದ ಎಂಬುವವರ ವರ್ಗಾವಣೆ ಬಗ್ಗೆ ಟ್ವೀಟ್ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವಿವೇಕಾನಂದ ಎಂಬುವವರು ಮೈಸೂರು ಗ್ರಾಮಾಂತರ ಕ್ಷೇತ್ರಶಿಕ್ಷಣಾಧಿಕಾರಿಗಳಾಗಿದ್ದಾರೆ. ಅವರ ಬಗ್ಗೆ ಮಾತನಾಡಲಾಗಿದೆಯೆ ಹೊರತು ಪೋಲಿಸ್ ಅಧಿಕಾರಿ ಬಗ್ಗೆಯಲ್ಲ, ವಿವಿಪುರಂ ಇನ್ಸ್ ಪೆಕ್ಟರ್ ವಿವೇಕಾನಂದ ಚಾಮರಾಜ ವಿಧಾನಸಭಾ ಕ್ಷೇತ್ರಕ್ಕೆ, ವರ್ಗಾವಣೆಯಾಗಿರುವ ಬಗ್ಗೆ ಸ್ಥಳೀಯ ಶಾಸಕ ಹರೀಶ್‍ಗೌಡರನ್ನು ಕೇಳಿ ಎಂದರು.

ವಿಪಕ್ಷ ನಾಯಕನ ಆಯ್ಕೆ ಬಿಜೆಪಿಯಲ್ಲಿನ ಬೆಂಕಿಗೆ ತುಪ್ಪ ಸುರಿದಂತೆ: ಸಚಿವ ಖರ್ಗೆ

ಕಾಂಗ್ರೆಸ್ ವಿರುದ್ಧ ಬಿಜೆಪಿ ಪೋಸ್ಟರ್ ಚಳವಳಿ ಪ್ರಾರಂಭಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಯವರು, ಜನ ಬಿಜೆಪಿಯವರಿಗೆ ತಕ್ಕ ಪಾಠ ಕಲಿಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಸೇರಿ ಸಮ್ಮಿಶ್ರ ಸರ್ಕಾರ ರಚಿಸುವ ಕನಸು ಕಂಡಿದ್ದರು. ಆದರೆ ಜನ ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನಗಳನ್ನು ನೀಡಿರುವುದು ಅವರನ್ನು ಆತಂಕಕ್ಕೆ ದೂಡಿದ್ದು, ಇದರಿಂದ ಹತಾಶರಾದ ಅವರು ಅರ್ಥವಿಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಸುಳ್ಳು ಆರೋಪಗಳಿಗೆ ಉತ್ತರ ನೀಡುವುದಿಲ್ಲ: ಕಾಂಗ್ರೆಸ್ ನವರು ಕೌರವ ಸಂಸ್ಕøತಿಯನ್ನು ನನ್ನ ಬಳಿ ತೋರಿಸುವುದು ಬೇಡ ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಉತ್ತರಿಸುತ್ತಾ, ಕುಮಾರಸ್ವಾಮಿಯವರು ಎಂದಿಗೂ ತಾವು ಮಾಡಿರುವ ಆರೋಪಗಳನ್ನು ಸಾಬೀತು ಪಡಿಸಿಲ್ಲ. ದ್ವೇಷ ಹಾಗೂ ಅಸೂಯೆಯ ರಾಜಕಾರಣ ಮಾಡುತ್ತಿದ್ದಾರೆ. 38 ಸ್ಥಾನದಲ್ಲಿದ್ದ ಜೆಡಿಎಸ್ ನವರು ಈಗ 19 ಸ್ಥಾನಕ್ಕೆ ಇಳಿದಿದ್ದಾರೆ. ಅವರು ಮಾಡುವ ಸುಳ್ಳು ಆರೋಪಗಳಿಗೆ ಉತ್ತರ ನೀಡುವ ಅವಶ್ಯಕತೆ ಇಲ್ಲ. ಸುಳ್ಳು ಹೇಳುವುದರಿಂದಲೇ 38 ಕ್ಷೇತ್ರಗಳಲ್ಲಿ ಗೆದ್ದಿದ್ದವು 19 ಸ್ಥಾನಕ್ಕೆ ಕುಸಿದಿದ್ದಾರೆ ಎಂದರು.

ತಮ್ಮ ಪುತ್ರ ಮಾಜಿ ಶಾಸಕ ಯತೀಂದ್ರರನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದರೆ ಅಂತಹ ವ್ಯತ್ಯಾಸವೇನು ಆಗುವುದಿಲ್ಲ ಎಂದ ಅವರು, ಮೈಸೂರು ಸ್ಥಳೀಯ ಸಂಸ್ಥೆಗಳ ಅವಧಿ ಮುಗಿದಿದ್ದು, ಚುನಾವಣೆ ನಡೆಸುವ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಪೆನ್ ಡ್ರೈವ್ ನಲ್ಲಿ ಸಾಕಷ್ಟು ಮಾಹಿತಿಗಳಿದ್ದು, ಆಡಳಿತ ಪಕ್ಷದವರು ಅದನ್ನು ಬಹಿರಂಗಗೊಳಿಸದಂತೆ ಮನವಿ ಮಾಡಿದ್ದಾರೆ ಎಂಬ ಕುಮಾರಸ್ವಾಮಿಯವರ ಹೇಳಿಕೆ ಬಾಲಿಶವಾದದ್ದು, ಪೆನ್ ಡ್ರೈವ್ ತೋರಿಸಿದ ಬಳಿಕ ವಿಧಾನಸಭೆ ಅಧಿವೇಶನ ನಡೆದಿತ್ತು. ಅಲ್ಲಿ ಏಕೆ ಪ್ರಸ್ತಾಪ ಮಾಡಲಿಲ್ಲ. ಪೆನ್ ಡ್ರೈವ್ ಬಹಿರಂಗಗೊಳಿಸಬೇಡಿ ಎಂದು ಕುಮಾರಸ್ವಾಮಿಯವರಿಗೆ ಯಾರು ಮನವಿ ಮಾಡಿದವರು ಎಂಬ ಮಾಹಿತಿಯನ್ನು ಬಹಿರಂಗ ಪಡಿಸಲಿ.

ಮಾಜಿ ಮುಖ್ಯಮಂತ್ರಿಯಾಗಿದ್ದುಕೊಂಡು ವಿದ್ಯುತ್ ಕಳವು ಮಾಡಿರುವ ಕುಮಾರಸ್ವಾಮಿಯವರಿಗೆ ಇಂತಹ ಹೇಳಿಕೆಗಳನ್ನು ನೀಡಲು ಯಾವ ನೈತಿಕತೆಯೂ ಇಲ್ಲ. ದಂಡ ಕಟ್ಟುವ ಮೂಲಕ ವಿದ್ಯುತ್ ಕಳುವು ಮಾಡಿರುವ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಅಪರಾಧ ಚಿಕ್ಕದಾಗಲಿ, ದೊಡ್ಡದಾಗಲಿ ಅಪರಾಧವೇ ಆಗಿದೆ. ಅವರಿಗೆ ಟೀಕೆ ಮಾಡುವ ನೈತಿಕತೆ ಇಲ್ಲ ಎಂದರು.

ಸಂಸದ ಪುತ್ರನ ಲವ್ವಿ-ಡವ್ವಿ ಪ್ರಕರಣ ಮೈಸೂರಿಗೆ ಹಸ್ತಾಂತರಿಸಲು ಸಿದ್ಧತೆ

ಬೆಂಗಳೂರು, ನ.18- ಬಳ್ಳಾರಿ ಸಂಸದ ದೇವೇಂದ್ರಪ್ಪರ ಪುತ್ರ, ಉಪನ್ಯಾಸಕ ರಂಗನಾಥ್ ವಿರುದ್ಧ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸ್ನೇಹ, ಪ್ರೀತಿ, ವಂಚನೆ ಪ್ರಕರಣವನ್ನು ಮೈಸೂರಿಗೆ ವರ್ಗಾಯಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಬೆಂಗಳೂರಿನ ವಿಜಯನಗರದ ನಿವಾಸಿ, 24 ವರ್ಷದ ಸಂತ್ರಸ್ತೆ ದೂರು ನೀಡಿದ್ದು, ಉಪನ್ಯಾಸಕನ ಜೊತೆ ಆಕೆಗೆ ಮೈಸೂರಿನಲ್ಲಿ ಒಡನಾಟವಿದುದ್ದು. ಬೆಂಗಳೂರಿನಲ್ಲಿ ಈ ಸಂಬಂಧ ಯಾವುದೇ ದಾಖಲೆಗಳಿಲ್ಲ. ಹಾಗಾಗಿ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಈ ಪ್ರಕರಣವನ್ನು ಮೈಸೂರಿಗೆ ವರ್ಗಾವಣೆ ಮಾಡಲು ಪೊಲೀಸರು ಮುಂದಾಗಿದ್ದಾರೆ.

ವಿಪಕ್ಷ ನಾಯಕನ ಆಯ್ಕೆ ಬಿಜೆಪಿಯಲ್ಲಿನ ಬೆಂಕಿಗೆ ತುಪ್ಪ ಸುರಿದಂತೆ: ಸಚಿವ ಖರ್ಗೆ

ಉಪನ್ಯಾಸಕ ರಂಗನಾಥ್ ಆಕೆಯ ಸ್ನೇಹ ಬೆಳೆಸಿ ಮದುವೆಯಾಗುವುದಾಗಿ ನಂಬಿಸಿ ಮೈಸೂರಿಗೆ ಕರೆಸಿಕೊಂಡು ಅಲ್ಲಿನ ಹೊಟೇಲ್‍ಗೆ ಕರೆದೊಯ್ದು ಲೈಂಗಿಕ ಸಂಪರ್ಕ ಹೊಂದಿ ನಂತರ ಆಕೆಗೆ ವಂಚಿಸಿರುವ ಬಗ್ಗೆ ಆರೋಪ ಕೇಳಿ ಬಂದಿದೆ. ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ ತನಿಖೆ ಕೈಗೊಂಡಿರುವ ಪೊಲೀಸರು, ಈ ಪ್ರಕರಣವನ್ನು ಇದೀಗ ಮೈಸೂರು ನಗರ ಪೊಲೀಸರಿಗೆ ವರ್ಗಾಯಿಸಲು ಸಿದ್ಧತೆ ನಡೆಸಿದ್ದಾರೆ.

ಈ ನಡುವೆ ಯುವತಿಯು ಫೋಟೋ, ಆಡಿಯೋ ಇಟ್ಟುಕೊಂಡು 15 ಲಕ್ಷ ಕೊಡುವಂತೆ ಬ್ಲಾಕ್‍ಮೇಲ್ ಮಾಡುತ್ತಿದ್ದಾರೆಂದು ಆಕೆ ವಿರುದ್ಧ ರಂಗನಾಥ್ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.