Home Blog Page 1824

ನ.15ಕ್ಕೆ ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಪದಗ್ರಹಣ

ಬೆಂಗಳೂರು, ನ.11- ರಾಜ್ಯ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ವೈ. ವಿಜಯೇಂದ್ರ ಇದೇ 15ರಂದು ಅಕೃತವಾಗಿ ಪಕ್ಷದ ಸಾರಥ್ಯ ವಹಿಸಿಕೊಳ್ಳಲಿದ್ದಾರೆ. ದೀಪಾವಳಿ ಹಬ್ಬದ ನಂತರ ಪಕ್ಷದ ಕಚೇರಿಯಲ್ಲಿ ನಡೆಯಲಿರುವ ಅದ್ಧೂರಿ ಕಾರ್ಯಕ್ರಮದಲ್ಲಿ ಹಲವು ರಾಷ್ಟ್ರೀಯ ನಾಯಕರು ಹಾಗೂ ಪಕ್ಷದ ಪ್ರಮುಖರ ಸಮ್ಮುಖದಲ್ಲಿ ನಿರ್ಗಮಿತ ಅಧ್ಯಕ್ಷ ನಳಿನ್ಕುಮಾರ್ ಕಟಿಲ್ ಅವರಿಂದ ಅಧಿಕಾರ ಸ್ವೀಕರಿಸಲಿದ್ದಾರೆ.

ಕಾರ್ಯಕ್ರಮವನ್ನು ಅತ್ಯಂತ ಅದ್ಧೂರಿಯಾಗಿ ನಡೆಸಲು ಉದ್ದೇಶಿಸಿರುವ ವಿಜಯೇಂದ್ರ ಅಭಿಮಾನಿಗಳು ಭರ್ಜರಿ ಕಾರ್ಯಕರ್ತರನ್ನು ಸೇರಿಸಿ ಹೊಸ ಸಂದೇಶ ರವಾನಿಸಲು ಮುಂದಾಗಿದ್ದಾರೆ.ಈ ಹಿಂದೆ ಕೆಪಿಸಿಸಿ ಅಧ್ಯಕ್ಷರಾಗಿದ್ದ ವೇಳೆ ಡಿ.ಕೆ.ಶಿವಕುಮಾರ್ ಯಾವ ರೀತಿ ಕಾರ್ಯಕ್ರಮ ಆಯೋಜಿಸಿದ್ದರೋ ಅದೇ ಮಾದರಿಯಲ್ಲಿ ವಿಜಯೇಂದ್ರ ಕಾರ್ಯಕ್ರಮ ಆಯೋಜಿಸಲು ಮುಂದಾಗಿದ್ದು, ಪಕ್ಷದ ಎಲ್ಲ ನಾಯಕರನ್ನು ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಲಿದ್ದಾರೆ.

80 ಭಾರತೀಯ ಮೀನುಗಾರರ ಬಿಡುಗಡೆ ಮಾಡಿದ ಪಾಕ್

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಸೇರಿದಂತೆ ಹಲವು ಗಣ್ಯರು ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಂಡಿರುವುದರಿಂದ ರಾಜ್ಯಕ್ಕೆ ಆಗಮಿಸುವ ಸಾಧ್ಯತೆಗಳು ತೀರಾ ಕಡಿಮೆ.

ಕಾರ್ಯಕರ್ತರಿಗೆ ಹೊಸ ಹುಮ್ಮಸ್ಸು ನೀಡುವ ಉದ್ದೇಶದಿಂದ ಜೆ.ಪಿ.ನಡ್ಡಾ ಅವರು ವರ್ಚುಯಲ್ ಮೂಲಕ ಭಾಗಿಯಾಗುವ ಸಂಭವವಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಸದಾನಂದಗೌಡ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ಸಿಂಗ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ನಿರ್ಮಲಾ ಸೀತಾರಾಮನ್, ರಾಜೀವ್ ಚಂದ್ರಶೇಖರ್, ಭಗವಂತ ಖೂಬಾ, ಶೋಭಾ ಕರಂದ್ಲಾಜೆ, ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸಚಿವರು, ಶಾಸಕರು, ಪಕ್ಷದ ಪದಾಕಾರಿಗಳು ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜತೆಗೆ ರಾಜ್ಯಾದ್ಯಂತ ಬಿಎಸ್ವೈ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಕೂಡ ಈ ಸಮಾರಂಭಕ್ಕೆ ಆಗಮಿಸಲಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಸೋತ ನಂತರ ಕಳೆಗುಂದಿರುವ ಬಿಜೆಪಿಗೆ ನವ ಚೈತನ್ಯ ನೀಡುವ ಉದ್ದೇಶದಿಂದಲೇ ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ನಡೆಸಲು ಪಕ್ಷ ತೀರ್ಮಾನಿಸಿದೆ.

ರಾಜ್ಯದಲ್ಲಿ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಅದ್ಧೂರಿ ಸಮಾರಂಭ ಬೇಡ ಎಂದು ಯಡಿಯೂರಪ್ಪ ತಮ್ಮ ಪುತ್ರ ವಿಜಯೇಂದ್ರಗೆ ಸಲಹೆ ಕೊಟ್ಟಿದ್ದರು. ಆಡಂಬರವಿಲ್ಲದೆ ಕಾರ್ಯಕರ್ತರಿಗೆ ಶಕ್ತಿ ತುಂಬುವ ಹಾಗೂ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಹೊಸ ಸಂದೇಶ ನೀಡಬೇಕೆಂದು ಅಭಿಮಾನಿಗಳು ಒತ್ತಾಯಿಸಿದ್ದಾರೆ.

ಹೀಗಾಗಿ ವಿಜಯೇಂದ್ರ ತಮ್ಮ ಅಧಿಕಾರ ಸ್ವೀಕಾರ ಸಮಾರಂಭವನ್ನು ಪಕ್ಷದ ಎಲ್ಲರ ಸಮ್ಮುಖದಲ್ಲೂ ಸ್ವೀಕರಿಸಿ ಕಾರ್ಯಕರ್ತರಿಗೂ ಹೊಸ ಸಂದೇಶ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಕಾರ್ಯಕ್ರಮಕ್ಕೆ ಬೇಕಾದ ರೂಪುರೇಷೆಗಳ ನೀಲನಕ್ಷೆ ಸಿದ್ಧಪಡಿಸಲಾಗಿದ್ದು, ದೊಡ್ಡಮಟ್ಟದಲ್ಲಿ ಕಾರ್ಯಕರ್ತರನ್ನು ಕರೆತರುವ ಹೊಣೆಗಾರಿಕೆಯನ್ನು ಪದಾಕಾರಿಗಳಿಗೆ ನೀಡಲಾಗಿದೆ.

ಪ್ರತಿಪಕ್ಷ ನಾಯಕನ ರೇಸ್‌ನಲ್ಲಿ ಅಶ್ವತ್ಥ್, ಅರಗ, ಅಶೋಕ್

ಬೆಂಗಳೂರು, ನ.11- ಪ್ರತಿಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಕೊನೆಗೂ ಎಚ್ಚೆತ್ತುಕೊಂಡಿದ್ದು, ವಿಧಾನಮಂಡಲದ ಉಭಯ ಸದನಗಳ ಪ್ರತಿಪಕ್ಷದ ನಾಯಕನ ಆಯ್ಕೆ ಸಂಬಂಧ ಶುಕ್ರವಾರ ಶಾಸಕಾಂಗ ಸಭೆ ಆಯೋಜಿಸಿದೆ.ಶುಕ್ರವಾರ ಸಂಜೆ ಬೆಂಗಳೂರಿನ ಖಾಸಗಿ ಹೊಟೇಲ್ನಲ್ಲಿ ನಡೆಯಲಿರುವ ಶಾಸಕಾಂಗ ಸಭೆಗೆ ಶಾಸಕರು, ವಿಧಾನ ಪರಿಷತ್ ಸದಸ್ಯರು ಕಡ್ಡಾಯವಾಗಿ ಭಾಗವಹಿಸುವಂತೆ ಸೂಚನೆ ಕೊಡಲಾಗಿದ್ದು, ಕೇಂದ್ರದಿಂದ ವೀಕ್ಷಕರು ಕೂಡ ಆಗಮಿಸಲಿದ್ದಾರೆ.

ಮೂಲಗಳ ಪ್ರಕಾರ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ಸಿಂಗ್, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಭಾಗವಹಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಈಗಾಗಲೇ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನವನ್ನು ಲಿಂಗಾಯತ ಸಮುದಾಯಕ್ಕೆ ನೀಡಿರುವುದರಿಂದ ವಿಧಾನಸಭೆ ಪ್ರತಿಪಕ್ಷದ ನಾಯಕನ ಸ್ಥಾನವನ್ನು ಈ ಸಮುದಾಯ ಹೊರತುಪಡಿಸಿ ಒಕ್ಕಲಿಗ ಇಲ್ಲವೆ ಹಿಂದುಳಿದ ಸಮುದಾಯಕ್ಕೆ ಸೇರಿದವರನ್ನು ಆಯ್ಕೆ ಮಾಡುವ ಸಾಧ್ಯತೆಗಳಿವೆ.

ಹಿರಿತನವೇ ಮಾನದಂಡವಾದರೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವರಾದ ಆರಗ ಜ್ಞಾನೇಂದ್ರ, ಆರ್.ಅಶೋಕ್, ಬಸನಗೌಡ ಪಾಟೀಲ್ ಯತ್ನಾಳ್ ಈ ಸ್ಥಾನಕ್ಕೆ ಅರ್ಹರೂ ಹೌದು. ಆದರೆ, ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿರುವುದರಿಂದ ಬೊಮ್ಮಾಯಿ ಮತ್ತು ಯತ್ನಾಳ್ ರೇಸ್ನಿಂದ ಹೊರಬಿದ್ದಿದ್ದಾರೆ.

80 ಭಾರತೀಯ ಮೀನುಗಾರರ ಬಿಡುಗಡೆ ಮಾಡಿದ ಪಾಕ್

ಉಳಿದಂತೆ ಒಕ್ಕಲಿಗ ಸಮುದಾಯಕ್ಕೆ ಮಣೆ ಹಾಕುವುದಾದರೆ ಸದ್ಯ ಬಿಜೆಪಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ನಿರಂತರವಾಗಿ ಟೀಕೆ ಮಾಡುತ್ತ ಬಂದಿರುವ ಮಲ್ಲೇಶ್ವರಂ ಶಾಸಕ, ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ, ಹಿರಿಯರಾದ ಆರ್.ಅಶೋಕ್, ಆರಗ ಜ್ಞಾನೇಂದ್ರ ಹೆಸರುಗಳು ಪ್ರಬಲವಾಗಿ ಕೇಳಿಬರುತ್ತಿವೆ.

ಈಗಾಗಲೇ ಕುಮಾರಸ್ವಾಮಿ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದು, ಅವರು ಕೂಡ ಒಕ್ಕಲಿಗ ಸಮುದಾಯವನ್ನು ಪ್ರತಿನಿಸುತ್ತಾರೆ. ಪುನಃ ಅದೇ ಸಮುದಾಯಕ್ಕೆ ವಿಪಕ್ಷ ನಾಯಕ ಸ್ಥಾನ ನೀಡುವುದು ಬೇಡ ಎಂಬ ತೀರ್ಮಾನಕ್ಕೆ ಬಂದರೆ ವಿ.ಸುನಿಲ್ಕುಮಾರ್ಗೆ ಅದೃಷ್ಟ ಒಲಿಯಬಹುದು. ಹಿಂದುಳಿದ ಸಮುದಾಯಕ್ಕೂ ಸಾಮಾಜಿಕ ನ್ಯಾಯ ಒದಗಿಸಿದ್ದೇವೆ ಎಂಬ ಸಂದೇಶವನ್ನು ರವಾನಿಸಲು ಬಿಜೆಪಿ ಮುಂದಾಗಿದೆ.

ಇನ್ನು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಕೋಟಾ ಶ್ರೀನಿವಾಸ ಪೂಜಾರಿ, ಸದಸ್ಯರಾದ ತೇಜಸ್ವಿನಿ ರಮೇಶ್ಗೌಡ, ಶಶೀಲ್ ನಮೋಶಿ ಹೆಸರುಗಳು ಕೇಳಿಬಂದಿವೆ. ಅಂತಿಮವಾಗಿ ಶುಕ್ರವಾರ ನಡೆಯಲಿರುವ ಶಾಸಕಾಂಗ ಸಭೆಯಲ್ಲಿ ಯಾರ ಪರವಾಗಿ ಹೆಚ್ಚಿನ ಬೆಂಬಲ ಸಿಗಲಿದೆಯೋ ಅವರಿಗೆ ಈ ಸ್ಥಾನಗಳು ಒಲಿಯಲಿವೆ.

ಯಾವುದೇ ರೀತಿಯ ಅಪಸ್ವರ, ಅಸಮಾಧಾನಕ್ಕೆ ಅವಕಾಶವಿಲ್ಲದಂತೆ ಪ್ರಜಾಸತ್ತಾತ್ಮಕ ಮಾರ್ಗದಲ್ಲೇ ಎಲ್ಲರ ಅಭಿಪ್ರಾಯಕ್ಕೆ ಮನ್ನಣೆ ಕೊಟ್ಟು ಎರಡೂ ಸದನಗಳ ನಾಯಕ ಮತ್ತು ಉಪನಾಯಕನನ್ನು ಆಯ್ಕೆ ಮಾಡಲು ಬಿಜೆಪಿ ಗಮನ ಹರಿಸಿದೆ.

ಲಾಲು ಪ್ರಸಾದ್ ಯಾದವ್ ಸಹವರ್ತಿ ಸೆರೆ

ನವದೆಹಲಿ, ನ.11- (ಪಿಟಿಐ) ಭೂ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ಅವರ ಪುತ್ರ ತೇಜಸ್ವಿ ಯಾದವ್ ಅವರ ಸಹವರ್ತಿ ಅಮಿತ್ ಕತ್ಯಾಲ್ ಎಂಬುವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ ಎಂದು ಅಕೃತ ಮೂಲಗಳು ತಿಳಿಸಿವೆ.

ಕತ್ಯಾಲ್ ಅವರನ್ನು ಶುಕ್ರವಾರ ಏಜೆನ್ಸಿ ವಶಕ್ಕೆ ತೆಗೆದುಕೊಂಡಿತು ಮತ್ತು ವಿಚಾರಣೆಯ ನಂತರ ಬಂಸಲಾಯಿತು ಎನ್ನಲಾಗಿದ್ದು, ಅವರನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಇಡಿ ವಿಚಾರಣೆಗಾಗಿ ಆತನನ್ನು ಕಸ್ಟಡಿಗೆ ತೆಗೆದುಕೊಳ್ಳುವ ಸಾಧ್ಯತೆಗಳಿವೆ. ಸುಮಾರು ಎರಡು ತಿಂಗಳ ಕಾಲ ವಿಚಾರಣೆಗಾಗಿ ಏಜೆನ್ಸಿಯ ಸಮನ್ಸ್ನಿಂದ ಕತ್ಯಾಲ್ ತಪ್ಪಿಸಿಕೊಳ್ಳುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಈ ಪ್ರಕರಣದಲ್ಲಿ ತನ್ನ ವಿರುದ್ಧದ ಇಡಿ ಸಮನ್ಸ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಇತ್ತೀಚೆಗೆ ತಿರಸ್ಕರಿಸಿತ್ತು.

80 ಭಾರತೀಯ ಮೀನುಗಾರರ ಬಿಡುಗಡೆ ಮಾಡಿದ ಪಾಕ್

ಲಾಲು ಪ್ರಸಾದ್, ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ಸಹೋದರಿಯರು ಮತ್ತು ಇತರರ ಆವರಣಗಳ ಮೇಲೆ ಏಜೆನ್ಸಿಯು ಮಾರ್ಚ್ನಲ್ಲಿ ಕಟ್ಯಾಲ್ನ ಆವರಣದ ಮೇಲೆ ದಾಳಿ ನಡೆಸಿತು. ಇಡಿ ಪ್ರಕಾರ ಕತ್ಯಾಲ್ ಅವರು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಸುಪ್ರೀಂ ಲಾಲೂ ಅವರ ಆಪ್ತ ಸಹವರ್ತಿ ಮತ್ತು ಎ ಕೆ ಇನೋಸಿಸ್ಟಮ್ಸï ಪ್ರೈವೇಟ್ ಲಿಮಿಟೆಡ್ನ ಮಾಜಿ ನಿರ್ದೇಶಕರಾಗಿದ್ದಾರೆ.

ಎ ಕೆ ಇನೋಸಿಸ್ಟಮ್ಸï ಪ್ರೈವೇಟ್ ಲಿಮಿಟೆಡ್ ಪ್ರಕರಣದಲ್ಲಿ ಫಲಾನುಭವಿ ಕಂಪನಿ ಎಂದು ಹೇಳಲಾಗಿದೆ ಮತ್ತು ಅದರ ನೋಂದಾಯಿತ ವಿಳಾಸವು ದಕ್ಷಿಣ ದೆಹಲಿಯ ನ್ಯೂ ಫ್ರೆಂಡ್ಸ್ ಕಾಲೋನಿಯಲ್ಲಿರುವ ವಸತಿ ಕಟ್ಟಡವಾಗಿದೆ, ಇದನ್ನು ತೇಜಸ್ವಿ ಯಾದವ್ ಬಳಸುತ್ತಿದ್ದರು.
ಲಾಲೂ ಪ್ರಸಾದ್ ಅವರು ಯುಪಿಎ-1 ಸರ್ಕಾರದಲ್ಲಿ ರೈಲ್ವೇ ಸಚಿವರಾಗಿದ್ದ ಅವಗೆ ಸಂಬಂಧಿಸಿದ ಹಗರಣವಾಗಿದೆ.

80 ಭಾರತೀಯ ಮೀನುಗಾರರ ಬಿಡುಗಡೆ ಮಾಡಿದ ಪಾಕ್

ಅಮೃತಸರ, ನ.11- ಮೀನುಗಾರಿಕೆ ವೇಳೆ ಅಂತಾರಾಷ್ಟ್ರೀಯ ಗಡಿ ದಾಟಿ ಬಂತರಾಗಿದ್ದ 80 ಭಾರತೀಯ ಮೀನುಗಾರರನ್ನು ಪಾಕಿಸ್ತಾನ ಸರ್ಕಾರ ಬಿಡುಗಡೆ ಮಾಡಿದೆ.ಪಂಜಾಬ್‍ನ ಅಮೃತಸರದ ಅಟ್ಟಾರಿ-ವಾಘಾ ಗಡಿಯಲ್ಲಿ ಭಾರತೀಯ ಸೇನೆಯ ಅಧಿಕಾರಿಗಳು ಮೀನುಗಾರರನ್ನು ಬರಮಾಡಿಕೊಂಡರು. ಬಿಡುಗಡೆಯಾದ ಮೀನುಗಾರರು ತಮ್ಮ ಅನುಭವವನ್ನು ಎಎನ್‍ಐಗೆ ತಿಳಿಸಿದ್ದು, ಮೀನುಗಾರಿಕೆ ಮಾಡುವಾಗ ತಪ್ಪಾಗಿ ಪಾಕಿಸ್ತಾನದ ಗಡಿ ದಾಟಿದ್ದೇವೆ ಎಂದು ಹೇಳಿದ್ದಾರೆ.

ಪಾಕಿಸ್ತಾನದ ಜೈಲುಗಳಲ್ಲಿ ಬಂಯಾಗಿರುವ ಇತರ ಭಾರತೀಯ ಮೀನುಗಾರರನ್ನೂ ಬಿಡುಗಡೆ ಮಾಡುವಂತೆ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.ಮಾಧ್ಯಮದ ಜೊತೆ ಮಾತನಾಡಿದ ಮೀನುಗಾರರೊಬ್ಬರು, ನಾವು ಆಕಸ್ಮಿಕವಾಗಿ ಚಂಡಮಾರುತದ ನಡುವೆ ಅಂತರರಾಷ್ಟ್ರೀಯ ಗಡಿಯನ್ನು ದಾಟಿದ್ದೇವೆ. ನಾವು ಮೂರು ವರ್ಷಗಳ ಕಾಲ ಜೈಲಿನಲ್ಲಿದ್ದೆವು. ನಾವು ಒಟ್ಟು 12 ಜನರಿದ್ದೇವೆ ಮತ್ತು ಈಗ ಎಲ್ಲರೂ ಹಿಂತಿರುಗಿದ್ದಾರೆ ಎಂದರು.

ಬಿಬಿಎಂಪಿ ಪೌರ ಕಾರ್ಮಿಕರಿಗೆ ಇಲ್ಲಿದೆ ಗುಡ್ ನ್ಯೂಸ್

ಇನ್ನೂ 184 ಮಂದಿ ಜೈಲಿನಲ್ಲಿದ್ದಾರೆ. ಅವರನ್ನೂ ವಾಪಸ್ ಕರೆತರುವಂತೆ ನಾನು ಸರ್ಕಾರವನ್ನು ಒತ್ತಾಯಿಸಲು ಬಯಸುತ್ತೇನೆ. ಅವರಲ್ಲಿ ಹಲವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಮತ್ತು ಇತರ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಅವರು ಹೇಳಿದರು.

ನಾವು ಗಡಿ ದಾಟಿದಾಗ ನಮಗೆ ಅರ್ಥವಾಗಲಿಲ್ಲ. ಪಾಕಿಸ್ತಾನ ನೌಕಾಪಡೆ ಬಂದು ನಮ್ಮನ್ನು ಬಂಸಿತು. ನಾನು ಬಂದು ಸುಮಾರು 3 ವರ್ಷ, 3 ತಿಂಗಳ ನಂತರ. ನಮ್ಮ ದೋಣಿಗಳನ್ನು ಬಿಡುಗಡೆ ಮಾಡಲು ನಾನು ಸರ್ಕಾರವನ್ನು ಒತ್ತಾಯಿಸುತ್ತೇನೆ. ಅವು ತುಂಬಾ ದುಬಾರಿಯಾಗಿದೆ ಎಂದು ಇನ್ನೊಬ್ಬ ಮೀನುಗಾರ ಹೇಳಿದರು.

ಮಧ್ಯಪ್ರದೇಶ ಸಿಎಂ ರೇಸ್‍ನಲ್ಲಿ ನಾನಿಲ್ಲ : ಜ್ಯೋತಿರಾದಿತ್ಯ ಸಿಂಧಿಯಾ

ಭೋಪಾಲ್,ನ.11- ಮಧ್ಯಪ್ರದೇಶದ ಮುಖ್ಯಮಂತ್ರಿಯಾಗುವ ರೇಸ್‍ನಲ್ಲಿ ನಾನಿಲ್ಲ ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸ್ಪಷ್ಟಪಡಿಸಿದ್ದಾರೆ.ಮಾಧ್ಯಮವೊಂದಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ನಾಗರಿಕ ವಿಮಾನಯಾನ ಸಚಿವರು, ಮುಖ್ಯಮಂತ್ರಿ ಹುದ್ದೆಗೆ ಸ್ರ್ಪಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಏಕೆಂದರೆ ಅವರು ಯಾವಾಗಲೂ ಪಕ್ಷದ ಕಾರ್ಯಕರ್ತರಾಗಿದ್ದಾರೆ ಮತ್ತು ಹಾಗೆಯೇ ಉಳಿಯುತ್ತಾರೆ ಎಂದು ಹೇಳಿದರು.

ಕಾಂಗ್ರೆಸ್‍ನಲ್ಲಿ ಅಕಾರಕ್ಕಾಗಿ ಪೈಪೋಟಿ ನಡೆಸುವ ಜನರಿದ್ದಾರೆ, ಅವರಲ್ಲಿ ಗುಂಪುಗಳಿವೆ, ಅವರು ಮುಖ್ಯಮಂತ್ರಿಯಾಗಲು ಸ್ಕೀಮ್‍ಗಳನ್ನು ಹೊಂದಿದ್ದಾರೆ, ಮತ್ತು ಚುನಾವಣೆಗೆ ಮುನ್ನ ಕಾಂಗ್ರೆಸ್‍ನಲ್ಲಿ ಎಂಟು ನಾಯಕರು ಮುಖ್ಯಮಂತ್ರಿ ಎಂದು ಹೇಳಿಕೊಳ್ಳುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರ ಪಕ್ಷವಾಗಿದೆ. ನಾವೆಲ್ಲರೂ ಕಾರ್ಯಕರ್ತರು ಮತ್ತು ಹಾಗೆಯೇ ಉಳಿಯುತ್ತೇವೆ ಎಂದು ಸಿಂಧಿಯಾ ತಿಳಿಸಿದ್ದಾರೆ.

ಮಧ್ಯಪ್ರದೇಶದ ಸಂಪೂರ್ಣ ಬಿಜೆಪಿಯು ಪ್ರಧಾನಿ ನೇತೃತ್ವದಲ್ಲಿ ಚುನಾವಣೆಯಲ್ಲಿ ಹೋರಾಡುತ್ತಿದೆ… ನಾನು ಈ ರೇಸ್‍ನಲ್ಲಿ (ಮುಖ್ಯಮಂತ್ರಿ ಸ್ಥಾನಕ್ಕಾಗಿ) ಇಲ್ಲ. ನಾನು ಸೇವಕ, ನಾನು ರೇಸ್‍ನಲ್ಲಿ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬಿಬಿಎಂಪಿ ಪೌರ ಕಾರ್ಮಿಕರಿಗೆ ಇಲ್ಲಿದೆ ಗುಡ್ ನ್ಯೂಸ್

ನ. 2 ರಂದು ಬಿಜೆಪಿ ನಾಯಕರು ಸಿಂಯಾ ಕುಟುಂಬವನ್ನು ಕುರ್ಚಿಯ ರೇಸ್‍ನಲ್ಲಿ ಸೇರಿಸದಿರುವ ಬಗ್ಗೆ ಇದೇ ರೀತಿಯ ಹೇಳಿಕೆ ನೀಡಿದ್ದರು. ಸಿಂಧ್ಯಾ ಕುಟುಂಬವನ್ನು ಕುರ್ಚಿಯ ರೇಸ್‍ನಲ್ಲಿ ಎಂದಿಗೂ ಸೇರಿಸಬೇಡಿ (ಮುಖ್ಯಮಂತ್ರಿ ಸ್ಥಾನವನ್ನು ಉಲ್ಲೇಖಿಸಿ) ಸಿಂಯಾ ಕುಟುಂಬವು ಅಭಿವೃದ್ಧಿ, ಪ್ರಗತಿ ಮತ್ತು ಸಾರ್ವಜನಿಕ ಸೇವೆಯ ಉತ್ಸಾಹದಿಂದ ಹಗಲಿರುಳು ಕೆಲಸ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.

ಇತರ ಹಿಂದುಳಿದ ವರ್ಗಗಳ (ಒಬಿಸಿ) ಮತದಾರರ ಬೆಂಬಲವನ್ನು ಪಡೆಯಲು ಪ್ರಯತ್ನಿಸುತ್ತಿರುವ ಇಂಡಿಯಾ ಒಕ್ಕೂಟದಲ್ಲಿ ಭ್ರಷ್ಟಾಚಾರ ತುಂಬಿತುಳುಕುತ್ತಿದೆ ಎಂದು ಕೇಂದ್ರ ಸಚಿವರು ತಮ್ಮ ಹಿಂದಿನ ಪಕ್ಷವಾದ ಕಾಂಗ್ರೆಸ್‍ಗೆ ತಿರುಗೇಟು ನೀಡಿದರು.

ಬಿಬಿಎಂಪಿ ಪೌರ ಕಾರ್ಮಿಕರಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು,ನ.11- ಪೌರ ಕಾರ್ಮಿಕರ ಕುಟುಂಬಕ್ಕೆ ಗುಡ್ ನ್ಯೂಸ್ ನೀಡಿರುವ ಬಿಬಿಎಂಪಿಯವರು ಪರಿಶಿಷ್ಟ ಜಾತಿ ಮತ್ತು ಪಂಗಡದವರ ಹೆಣ್ಣು ಮಕ್ಕಳ ಮದುವೆಗೆ ಪಾಲಿಕೆಯಿಂದ ಒಂದು ಲಕ್ಷ ಉಚಿತ ಸಹಾಯಧನ ನೀಡುವುದಾಗಿ ಘೋಷಿಸಿದ್ದಾರೆ. ಪಾಲಿಕೆಯ ಪೌರಕಾರ್ಮಿಕರು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ಕುಟುಂಬದ ಹೆಣ್ಣು ಮಗಳ ಸರಳ ವಿವಾಹಕ್ಕೆ ಪಾಲಿಕೆಯಿಂದ ರೂ.1.00 ಲಕ್ಷಗಳ ಸಹಾಯಧನ ನೀಡಲಾಗುತ್ತಿದೆ.

ಇದೇ ಸಂದರ್ಭದಲ್ಲಿ ಸಹಾಯಧನಕ್ಕೆ ಕೆಲವು ಷರತ್ತುಗಳನ್ನು ಪಾಲಿಕೆ ವಿಸಿದೆ. ಅರ್ಜಿದಾರರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸುಮಾರು ಮೂರು ವರ್ಷಕ್ಕೂ ಮೇಲ್ಪಟ್ಟು ವಾಸಿಸುತ್ತಿರಬೇಕು. ಸದರಿ ಸೌಲಭ್ಯವನ್ನು ಖಾಯಂ ಹಾಗೂ ನೇರ ವೇತನ ಪೌರಕಾರ್ಮಿಕರು ಮಾತ್ರ ಪಡೆಯಲು ಅರ್ಹರು.

4 ವರ್ಷದ ಬಾಲಕಿ ಮೇಲೆ ಪೊಲೀಸ್ ಸಬ್​ಇನ್ಸ್‌ಪೆಕ್ಟರ್‌ ಅತ್ಯಾಚಾರ

ಸೇವಾ ಪುಸ್ತಕದಲ್ಲಿ ವಿವಾಹ ಆಗುವ ಮಗಳು ನಾಮಿನಿ ಆಗಿರುವುದು ಕಡ್ಡಾಯವಾಗಿರುತ್ತದೆ, ನೇರ ವೇತನ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಗಳು ಎಂದು ಖಚಿತಪಡಿಸಲು ಆಧಾರ್ ಹಾಗೂ ಪಡಿತರ ಚೀಟಿಯನ್ನು ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.,

ತಹಶೀಲ್ದಾರ್ ರವರಿಂದ ಚಾಲ್ತಿಯಲ್ಲಿರುವ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ಸಲ್ಲಿಸುವುದು, ಪೌರಕಾರ್ಮಿಕರು ಗುರುತಿನ ಚೀಟಿ ಕಡ್ಡಾಯ, ಪರಿಶಿಷ್ಟ ಜಾತಿ ಮತ್ತು ಪಂಗಡ ವರ್ಗದವರಿಗೆ ಸೌಲಭ್ಯವನ್ನು ಪಡೆಯಲು ಕುಟುಂಬದ ವಾರ್ಷಿಕ ವರಮಾನ ರೂ.3.00 ಲಕ್ಷ ಮೀರಿರಬಾರದು ಎಂಬ ನಿಯಮ ಹಾಕಲಾಗಿದೆ.

ಆದರೆ, ಪೌರಕಾರ್ಮಿಕರಿಗೆ ಆದಾಯ ಮಿತಿ ಅನ್ವಯಿಸುವುದಿಲ್ಲ, ವಿವಾಹ ನಿಶ್ಚಯವಾಗಿರುವ ಬಗ್ಗೆ ಮದುವೆಯ ಆಮಂತ್ರಣ ಪತ್ರವನ್ನು ಸಲ್ಲಿಸುವುದು, ವಿಧವಾ ಹೆಣ್ಣು ಮಗಳು ಸದರಿ ಸೌಲಭ್ಯವನ್ನು ಪಡೆಯಲು ಅರ್ಹರಿರುತ್ತಾರೆ, ಸಹಾಯಧನವನ್ನು ವಧುವಿನ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು. ಒಂದು ವೇಳೆ ಸಲ್ಲಿಸಲಾಗಿರುವ ದಾಖಲೆಗಳು ನಕಲಿ ಅಥವಾ ಸುಳ್ಳು ಎಂದು ಕಂಡು ಬಂದಲ್ಲಿ ಕಾನೂನಿನ ರೀತಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.

ನ.18ರಂದು ಪುನೀತ್ ರಾಜ್‍ಕುಮಾರ್ ಪ್ರಶಸ್ತಿ ಪ್ರದಾನ

ಬೆಂಗಳೂರು,ನ.11-ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಡಾ.ಪುನೀತ್ ರಾಜ್‍ಕುಮಾರ್ ಪ್ರಶಸ್ತಿ ನೀಡಿ ಗೌರವಿಸಲು ಬಿಬಿಎಂಪಿ ನೌಕರರ ಕನ್ನಡ ಸಂಘ ತೀರ್ಮಾನಿಸಿದೆ.ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ನ.18 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಅಮೃತ್‍ರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಯಕ್ರಮವನ್ನು ಬಿಬಿಎಂಪಿ ಆಡಳಿತಾಗಾರ ರಾಕೇಶ್‍ಸಿಂಗ್ ಉದ್ಘಾಟಿಸಲಿದ್ದಾರೆ. ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಖ್ಯಾತ ಚಿತ್ರ ನಟ ರಮೇಶ್ ಅರವಿಂದ್, ನಟಿಯರಾದ ಭವ್ಯ, ಭಾವನಾ ಮತ್ತಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುತ್ತಿದ್ದಾರೆ.

ಸಮಾರಂಭದ ಅಧ್ಯಕ್ಷತೆಯನ್ನು ಮಾಜಿ ಮೇಯರ್ ಜೆ.ಹುಚ್ಚಪ್ಪ ವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ವಿಶೇಷ ಆಯುಕ್ತರಾದ ತ್ರಿಲೋಕ್ ಚಂದ್ರ, ಮೌನೀಶ್ ಮೌದ್ಗಿಲ್, ಹರೀಶ್ ಕೆ, ಉಪ ಅಯುಕ್ತ ಮಂಜುನಾಥ್ ಸ್ವಾಮಿ, ಜಂಟಿ ಆಯುಕ್ತೆ ಪಲ್ಲವಿ, ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ರಮೇಶ್ ಸಂಗಾ ಮತ್ತಿರರು ಹಾಜರಿರಲಿದ್ದಾರೆ.

4 ವರ್ಷದ ಬಾಲಕಿ ಮೇಲೆ ಪೊಲೀಸ್ ಸಬ್​ಇನ್ಸ್‌ಪೆಕ್ಟರ್‌ ಅತ್ಯಾಚಾರ

ಕರ್ನಾಟಕ ವಿಚಾರ ವೇದಿಕೆ ಅಧ್ಯಕ್ಷ ಪಾಲನೇತ್ರ, ಕನ್ನಡ ಚಳವಳಿ ಕೇಂದ್ರ ಸಮಿತಿ ಅಧ್ಯಕ್ಷ ಗುರುದತ್ತ, ಕರ್ನಾಟಕ ಅಮೆಚೂರ್ ಯೋಗ ಕ್ರೀಡಾ ಸಂಘದ ಅಧ್ಯಕ್ಷ ಜಿ.ಎನ್.ಕೃಷ್ಣ ಮೂರ್ತಿ, ಖ್ಯಾತ ಚಿತ್ರನಟ, ನಟಿಯರಾದ ಸುಂದರ್ ರಾಜ್,ಪ್ರಮೀಳಾ ಜೋಷಾಯಿ, ರಕ್ಷಾ, ರಿಷಿಗೌಡ, ಪ್ರೇಮಗೌಡ, ಅಪೂರ್ವ, ಪ್ರತಿಭಾ, ಸಿಂ ಆಸ್ಪತ್ರೆ ಸಾರ್ವಜನಿಕ ಸಂಪರ್ಕಾಕಾರಿ ಸುಚಿತ್ರಾ, ಅಂತಾರಾಷ್ಟ್ರೀಯ ಡೊಳ್ಳು ಕುಣಿತ ಕಲಾವಿದ ಡೊಳ್ ಚಂದ್ರು ಸೇರಿದಂತೆ ಮಾಧ್ಯಮ ಲೋಕದ ಹಲವಾರು ಮಂದಿಗೆ ಡಾ.ಪುನೀತ್ ರಾಜ್‍ಕುಮಾರ್ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಅದೇ ರೀತಿ ಬಿಬಿಎಂಪಿಯ ಉತ್ತಮ ಸೇವೆ ಸಲ್ಲಿಸಿರುವ ದಕ್ಷ ಅಕಾರಿಗಳಿಗೂ ಪುನೀತ್‍ರಾಜ್‍ಕುಮಾರ್ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಅಮೃತ್‍ರಾಜ್ ವಿವರಣೆ ನೀಡಿದ್ದಾರೆ.

4 ವರ್ಷದ ಬಾಲಕಿ ಮೇಲೆ ಪೊಲೀಸ್ ಸಬ್​ಇನ್ಸ್‌ಪೆಕ್ಟರ್‌ ಅತ್ಯಾಚಾರ


ದೌಸಾ,ನ.11- ನಾಲ್ಕು ವರ್ಷದ ಬಾಲಕಿ ಮೇಲೆ ಸಬ್ ಪೊಲೀಸ್ ಸಬ್​ಇನ್ಸ್‌ಪೆಕ್ಟರ್‌ ಅ ಒಬ್ಬ ಅತ್ಯಾಚಾರ ನಡೆಸಿರುವ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ನಡೆದಿದೆ.ನಾಲ್ಕು ವರ್ಷದ ಬಾಲಕಿಯ ಮೇಲೆ ಎಸ್‍ಐ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿ ಪೊಲೀಸ್ ಠಾಣೆಯ ಹೊರಗೆ ಬೃಹತ್ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಎಸ್‍ಐನನ್ನು ಥಳಿಸಿದ್ದಾರೆ.

ಚುನಾವಣಾ ಕರ್ತವ್ಯದಲ್ಲಿದ್ದ ಸಬ್ ಇನ್ಸ್ ಪೆಕ್ಟರ್ ಭೂಪೇಂದ್ರ ಸಿಂಗ್ ಬಾಲಕಿಯನ್ನು ತನ್ನ ಕೋಣೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಆರೋಪಿಯನ್ನು ಬಂಸಿ ತನಿಖೆ ನಡೆಸಲಾಗುತ್ತಿದೆ ಎಂದು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಬಜರಂಗ್ ಸಿಂಗ್ ತಿಳಿಸಿದ್ದಾರೆ.

ನೂತನ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮುಂದಿವೆ ಬೆಟ್ಟದಷ್ಟು ಸವಾಲುಗಳು

ಸಮೀಪದಲ್ಲಿ ವಾಸಿಸುವ ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ ಭೂಪೇಂದ್ರ ಎಂದು ಗುರುತಿಸಲಾದ ಎಸ್‍ಐ ವಿರುದ್ಧ ರಾಹುವಾಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವರು ಅತ್ಯಾಚಾರ ಆರೋಪ ಮಾಡಿರುವ ಬಗ್ಗೆ ಅಪ್ರಾಪ್ತ ಬಾಲಕಿಯ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ. ಅಗತ್ಯ ಕ್ರಮ ಕೈಗೊಳ್ಳಲಾಗುವುದು ಸಿಂಗ್ ಹೇಳಿದರು.

ಸುದ್ದಿ ತಿಳಿಯುತ್ತಿದ್ದಂತೆ ರಾಹುವಾಸ್ ಪೊಲೀಸ್ ಠಾಣೆಯ ಸುತ್ತ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ಪೊಲೀಸರ ವಿರುದ್ಧ ಘೋಷಣೆ ಕೂಗಿದ ರು. ಅವರು ಭೂಪೇಂದ್ರ ಸಿಂಗ್ ಅವರನ್ನು ಪೊಲೀಸರಿಗೆ ಒಪ್ಪಿಸುವ ಮೊದಲು ಥಳಿಸಿದರು.

ಸ್ಥಳಕ್ಕಾಗಮಿಸಿದ ಬಿಜೆಪಿ ಸಂಸದ ಕಿರೋಡಿ ಲಾಲ್ ಮೀನಾ ಮಾತನಾಡಿ, ಲಾಲ್ಸೋಟ್‍ನಲ್ಲಿ ಏಳು ವರ್ಷದ ದಲಿತ ಬಾಲಕಿಯ ಮೇಲೆ ಪೊಲೀಸರೊಬ್ಬರು ಅತ್ಯಾಚಾರವೆಸಗಿದ ಘಟನೆಯಿಂದ ಜನರಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಅದನ್ನು ಪಡೆಯಲು ನಾನು ಸ್ಥಳಕ್ಕೆ ಬಂದಿದ್ದೇನೆ. ಅಮಾಯಕ ಮಗುವಿಗೆ ನ್ಯಾಯ ಕೊಡಿ ಎಂದ ಬಿಜೆಪಿ ಸಂಸದರು ಬಾಲಕಿಯ ಕುಟುಂಬಕ್ಕೆ 50 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಸಾಲು ಸಾಲು ರಜೆ : ಊರುಗಳತ್ತ ಹೊರಟ ಬೆಂಗಳೂರಿನ ಜನ, ಬಸ್ಸು, ರೈಲುಗಳು ಪುಲ್ ರಶ್, ಟ್ರಾಫಿಕ್ ಜಾಮ್

ಬೆಂಗಳೂರು, ನ.11- ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಹಿನ್ನೆಲೆಯಲ್ಲಿ ಜನರು ಊರುಗಳತ್ತ ತೆರಳುತ್ತಿದ್ದು, ಬಸ್‍ಗಳು ಪ್ರಯಾಣಿಕರಿಂದ ತುಂಬಿ ತುಳುಕುತ್ತಿವೆ.ನಿನ್ನೆ ಕೆಲಸ ಮುಗಿಸಿಕೊಂಡು ಬಹುತೇಕ ಜನರು ನಿನ್ನೆ ರಾತ್ರಿಯೇ ಪ್ರಯಾಣಿ ಬೆಳೆಸಿದ್ದು, ನಗರದ ಮೆಜೆಸ್ಟಿಕ್ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ, ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣ ಶಾಂತಿನಗರ ಸೇರಿದಂತೆ ವಿವಿಧ ನಿಲ್ದಾಣಗಳಲ್ಲಿ ಬಾರಿ ಸಂಖ್ಯೆಯಲ್ಲಿ ಪ್ರಯಾಣಿಕರು ಜಮಾಯಿಸಿದ್ದು, ತಮ್ಮ ತಮ್ಮ ಊರುಗಳತ್ತ ತೆರಳುತ್ತಿದ್ದ ದೃಶ್ಯಗಳು ಕಂಡುಬಂತು.

ಹಬ್ಬದ ಹಿನ್ನೆಲೆಯಲ್ಲಿ ಕೆಎಸ್‍ಆರ್‍ಟಿಸಿ ಜೊತೆಗೆ ಬಿಎಂಟಿಸಿ ಬಸ್‍ಗಳನ್ನು ಸಹ ವಿವಿಧ ಜಿಲ್ಲೆಗಳಿಗೆ ಸಂಚರಿಸುತ್ತಿದ್ದು, ಎಲ್ಲಾ ಬಸ್‍ಗಳಲ್ಲಿ ಪ್ರಯಾಣಿಕರು ತುಂಬಿ ತುಳುಕುತ್ತಿದ್ದರು. ಶಕ್ತಿಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ ಇರುವ ಹಿನ್ನೆಲೆಯಲ್ಲಿ ಸಾಮಾನ್ಯ ಬಸ್‍ಗಳಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಾಗಿ ಕಂಡು ಬಂತು.

ನೂತನ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮುಂದಿವೆ ಬೆಟ್ಟದಷ್ಟು ಸವಾಲುಗಳು

ಕಳೆದ ಒಂದು ತಿಂಗಳ ಹಿಂದೆಯೇ ಶಿವಮೊಗ್ಗ, ಹುಬ್ಬಳ್ಳಿ, ಧಾರಾವಾಡ, ರಾಯಚೂರು, ಗುಲ್ಬರ್ಗ, ಮಡಿಕೇರಿ, ಮಂಗಳೂರು, ಕೊಡಗು ಸೇರಿದಂತೆ ದೂರದ ಊರುಗಳಿಗೆ ತೆರಳುವ ಪ್ರಯಾಣಿಕರು ಮುಂಗಡವಾಗಿ ಟಿಕೇಟ್‍ಗಳನ್ನು ಕಾಯ್ದಿರಿಸಿದ್ದರು. ಪ್ರಯಾಣಿಕರ ಸಂಖ್ಯೆಗಣುಗುಣವಾಗಿ ಕೆಎಸ್‍ಆರ್‍ಟಿಸಿ ವತಿಯಿಂದ ಯಾವುದೇ ತೊಂದರೆಯಾಗದಂತೆ ಹೆಚ್ಚುವರಿ ವಿಶೇಷ ಬಸ್‍ಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.

ರೈಲುಗಳು ಪುಲ್ ರಶ್
ದೇಶದಾದ್ಯಂತ ಸಡಗರದಿಂದ ದೀಪಾವಳಿ ಹಬ್ಬವನ್ನು ಆಚರಿಸಲಿದ್ದು, ಉದ್ಯೋಗಕ್ಕಾಗಿ ರಾಜಧಾನಿಯಲ್ಲಿ ನೆಲೆಸಿರುವ ವಿವಿಧ ರಾಜ್ಯಗಳ ಜನರು ಸಹ ತಮ್ಮ ತಮ್ಮ ಊರುಗಳತ್ತ ತೆರಳುತ್ತಿದ್ದು, ರೈಲುಗಳಲ್ಲೂ ಸಹ ಜಾಗವಿಲ್ಲದಂತೆ ಪ್ರಯಾಣಿಸುತ್ತಿದ್ದಾರೆ. ಕಳೆದ ಒಂದು ತಿಂಗಳ ಹಿಂದೆಯೇ ಮುಂಗಡ ಟಿಕೇಟ್ ಕೂಡ ಕಾಯ್ದಿರಿಸಿಕೊಂಡು ಪ್ರಯಾಣ ಬೆಳೆಸುತ್ತಿದ್ದಾರೆ.

ಖಾಸಗಿ ಬಸ್‍ಗಳಿಗೂ ಡಿಮಾಂಡ್
ಹೆಚ್ಚಿನ ಸಂಖ್ಯೆಯಲ್ಲಿ ಜನರು ಊರುಗಳತ್ತ ತೆರಳುತ್ತಿದ್ದು ಇದನ್ನೇ ಬಂಡವಾಳ ಮಾಡಿಕೊಂಡ ಕೆಲ ಖಾಸಗಿ ಬಸ್ ಮಾಲೀಕರು ಟಿಕೇಟ್ ದರವನ್ನು ದುಪ್ಪಟ್ಟು ಮಾಡಿದ್ದು, ಜಗಳ ಮಾತಿನ ಚಕಮಕಿಯೊಂದಿಗೆ ವಿ ಇಲ್ಲದೆ ಪ್ರಯಾಣಿಸುವಂತಾಗಿತ್ತು.

ಟ್ರಾಫಿಕ್ ಜಾಮ್
ಕಳೆದ ರಾತ್ರಿಯಿಂದಲೇ ಮೆಜೆಸ್ಟಿಕ್ ಹಾಗೂ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಅಪಾರ ಸಂಖ್ಯೆಯಲ್ಲಿ ಜನರು ಬಂದಿದ್ದರಿಂದ ಮೆಜೆಸ್ಟಿಕ್ ಸುತ್ತಮುತ್ತ ತಡರಾತ್ರಿಯವರೆಗೂ ಸಂಚಾರಿ ದಟ್ಟಣೆ ಉಂಟಾಗಿತ್ತು. ಇನ್ನೂ ತುಮಕೂರು ರಸ್ತೆ ಗೊರಗುಂಟೆ ಪಾಳ್ಯ, ನೆಲಮಂಗಲ ಟೋಲ್, ಅತ್ತಿಬೆಲೆ, ಆನೇಕಲ್ ಟೋಲ್, ದೇವನಹಳ್ಳಿ ಟೋಲ್‍ಗಳಲ್ಲೂ ಸಹ ಕಾರು ಬಸ್‍ಗಳು ಕಿಲೋಮೀಟರ್‍ಗಟ್ಟಲೇ ಸಾಲುಗಟ್ಟಿ ನಿಂತಿದ್ದ ದೃಶ್ಯಗಳು ಕಂಡುಬಂದವು.

ನೂತನ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮುಂದಿವೆ ಬೆಟ್ಟದಷ್ಟು ಸವಾಲುಗಳು

ಬೆಂಗಳೂರು, ನ.11- ಸಾಕಷ್ಟು ಸವಾಲುಗಳ ನಡುವೆಯೇ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕವಾಗಿರುವ ಬಿ.ವೈ.ವಿಜಯೇಂದ್ರ ಅವರಿಗೆ ಭವಿಷ್ಯದಲ್ಲಿ ಬೆಟ್ಟದಷ್ಟು ಸವಾಲುಗಳಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಮುನ್ನಡೆಸುವುದು ಅಷ್ಟು ಸರಳವಾಗಿಲ್ಲ.
ವಿಧಾನಸಭಾ ಚುನಾವಣೆ ಸೋಲಿನ ನಂತರ ಬಿಜೆಪಿ ಮನೆಯೊಂದು ಮೂರು ಬಾಗಿಲು ಎನ್ನುವುದಂತಾಗಿದೆ. ಈಗಾಗಲೇ ಅನೇಕರು ಪಕ್ಷ ಬಿಟ್ಟು ಅನ್ಯ ಪಕ್ಷಗಳ ಕಡೆ ಮುಖ ಮಾಡಿದ್ದಾರೆ, ಉಳಿದವರು ಕೂಡಾ ಕಮಲಕ್ಕೆ ಗುಡ್ ಬೈ ಹೇಳುವ ಲೆಕ್ಕಾಚಾರದಲ್ಲಿ ಇದ್ದಾರೆ.

ಬಿಜೆಪಿಯಲ್ಲಿ ಬಹಿರಂಗವಾಗಿ ಎಲ್ಲವೂ ಚೆನ್ನಾಗಿದ್ದಂತೆ ಕಾಣಿಸಿದರೂ ಎಲ್ಲ ಪಕ್ಷಗಳಲ್ಲಿ ಇರುವಂತೆ ಇಲ್ಲಿಯೂ ಆಂತರಿಕ ಸಂಘರ್ಷ, ಗುಂಪುಗಾರಿಕೆ ಸಾಕಷ್ಟಿದೆ. ಜಾತಿ, ಸಂಘ ಪರಿವಾರ, ವಲಸೆ ಬಂದವರು.. ಹೀಗೆ ನಾನಾ ಸಂಗತಿಗಳನ್ನು ಅವಲಂಬಿಸಿ ಇರುವ ಈ ಗುಂಪುಗಾರಿಕೆ ನಿಯಂತ್ರಣ ಕೂಡ ವೈಯಕ್ತಿಕ ಸಾಮಥ್ರ್ಯಕ್ಕೆ ಒಂದು ಅಳತೆಗೋಲಿನಂತೆ ಇರುವುದರಿಂದ ಇದು ಕೂಡ ಅವರಿಗೆ ಸವಾಲಾಗಿ ಪರಿಣಮಿಸಲಿದೆ.

ರಾಜ್ಯಾಧ್ಯಕ್ಷ ಪಟ್ಟಕ್ಕೇರುತ್ತಿದಂತೆ ವಿಜಯೇಂದ್ರಗೆ ತಲೆನೋವು ಶುರು, ಸ್ವಪಕ್ಷದವರಿಂದಲೇ ಅಸಮಾಧಾನ

ಬಿಜೆಪಿ ಎಂದರೆ ಕಾರ್ಯಕರ್ತರ ಪಕ್ಷ ಎಂದೇ ಹೆಸರುವಾಸಿ. ಚುನಾವಣೆ ಸಂದರ್ಭದಲ್ಲಿ ಮಾತ್ರವಲ್ಲ, ಪಕ್ಷಕ್ಕಾಗಿ ಏನೇ ಮಾಡಬೇಕಾಗಿ ಬಂದರೂ ಬಿಜೆಪಿಯ ತಳಮಟ್ಟದ ಕಾರ್ಯಕರ್ತರ ಪಾತ್ರ, ಅವರ ಸಂಘಟಿತ ಪ್ರಯತ್ನ ಮಹತ್ವದ್ದು. ಅಪಾರ ಸಂಖ್ಯೆಯಲ್ಲಿರುವ ಈ ಕಾರ್ಯಕರ್ತರನ್ನು ಒಗ್ಗೂಡಿಸಿ, ಉತ್ಸಾಹ ತುಂಬಿ, ಪಕ್ಷಕ್ಕಾಗಿ ಇನ್ನಷ್ಟು ಪರಿಣಾಮಕಾರಿಯಾಗಿ ಶ್ರಮಿಸುವಂತೆ ಮಾಡುವ ಸವಾಲನ್ನೂ ವಿಜಯೇಂದ್ರ ನಿಭಾಯಿಸಬೇಕಾಗಿದೆ.

ಪಕ್ಷದಲ್ಲಿ ಅನೇಕ ಹಿರಿತಲೆಗಳಿದ್ದು, ಪ್ರಭಾವಿಗಳಾಗಿರುವ ಅವರ ಮಾತನ್ನು ಅಷ್ಟು ಸುಲಭದಲ್ಲಿ ತೆಗೆದುಹಾಕಲು ಸಾಧ್ಯವಿಲ್ಲ. ಅಲ್ಲದೆ, ಈಗಾಗಲೇ ಕೆಲವರು ಮಾಜಿ ಸಿಎಂ ಬಿಎಸ್‍ವೈ ಅಕಾರದಲ್ಲಿದ್ದಾಗಲೇ ಬಹಿರಂಗವಾಗಿ ಅಸಮಾಧಾನ ತೋರ್ಪಡಿಸಿದ್ದು, ಅಂಥವರನ್ನು ಬಿಎಸ್‍ವೈ ಪುತ್ರ ನಿಭಾಯಿಸುವುದು ಸುಲಭವಲ್ಲ. ಇನ್ನೊಂದೆಡೆ ಬಿಜೆಪಿ ಹೈಕಮಾಂಡ್ ಹೊಸ ಮುಖಗಳಿಗೆ, ಯುವಕರಿಗೆ ಹೆಚ್ಚಿನ ಆದ್ಯತೆ ನೀಡುವುದರಿಂದ ಯುವ ನಾಯಕರನ್ನೂ ಕಡೆಗಣಿಸುವಂತಿಲ್ಲ. ಹೀಗೆ ಹಿರಿ-ಕಿರಿಯರಿಬ್ಬರನ್ನೂ ಒಟ್ಟಿಗೇ ಸಾಮರಸ್ಯದಲ್ಲಿ ಇರಿಸಿಕೊಂಡು ಪಕ್ಷವನ್ನು ಮುನ್ನಡೆಸುವುದು ಕೂಡ ದೊಡ್ಡ ಸವಾಲೇ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತು ಅಕಾರ ಕಳೆದುಕೊಂಡಿರುವ ಬಿಜೆಪಿಗೆ ಈ ಲೋಕಸಭಾ ಚುನಾವಣೆಯ ಗೆಲುವು ಮಹತ್ವದ್ದು ಹಾಗೂ ಪ್ರತಿಷ್ಠೆಯ ಸಂಗತಿ ಆಗಿರುವುದರಿಂದ ವಿಜಯೇಂದ್ರ ಅವರಿಗೆ ಸಂಸತ್ ಚುನಾವಣೆ ಸಂಕಟ ಎನಿಸಿದರೂ ಅಚ್ಚರಿ ಏನಿಲ್ಲ. ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಏನೆಲ್ಲ ತಪ್ಪುಗಳಾದವು, ಹಿನ್ನಡೆಗೆ ಕಾರಣಗಳು ಏನು ಎಂಬುದನ್ನೆಲ್ಲ ತಿಳಿದು ಲೋಕಸಭೆ ಚುನಾವಣೆಯಲ್ಲಿ ಪಕ್ಷ ಭರ್ಜರಿ ಗೆಲವು ಸಾಸುವಂತೆ ಮಾಡುವ ದೊಡ್ಡ ಸವಾಲು ವಿಜಯೇಂದ್ರ ಮುಂದಿದೆ.

ರಾಜ್ಯದಲ್ಲಿ ಸ್ಪಷ್ಟ ಬಹುಮತದಿಂದ ಗೆದ್ದು ಅಕಾರ ಪಡೆದು, ಗ್ಯಾರಂಟಿಗಳ ಜÁರಿಯಿಂದ ಹಿಗ್ಗಿರುವ ಕಾಂಗ್ರೆಸ್ ಪಕ್ಷ ಈ ಸಲ ಬಿಜೆಪಿಗೆ ಭಾರಿ ಪ್ರತಿಸ್ರ್ಪ ಆಗಿರಲಿದೆ. ಅಕಾರದಲ್ಲಿ ಇರುವುದರಿಂದ ಈಗಾಗಲೇ ಒಂದಷ್ಟು ಆಯಕಟ್ಟಿನ ಜಾಗ-ಕ್ಷೇತ್ರಗಳ ಮೇಲೆ ಹಿಡಿತ ಸಾಸಿರುವ ಕಾಂಗ್ರೆಸ್ ವಿರುದ್ಧ ಕಾರ್ಯತಂತ್ರ ಹೆಣೆಯುವುದು ಕೂಡ ಭಾರಿ ಸಂಗತಿಯೇ. ಅದರಲ್ಲೂ ಸಿದ್ದರಾಮಯ್ಯ-ಡಿ.ಕೆ. ಶಿವಕುಮಾರ್ ಅವರಂಥ ಎರಡು ಪ್ರಬಲ ಸಮುದಾಯದ ನಾಯಕರ ನೇತೃತ್ವದಲ್ಲಿ ರಾಜ್ಯದಲ್ಲಿರುವ ಕಾಂಗ್ರೆಸ್ ಪಕ್ಷವನ್ನು ಮಣಿಸಲು ವಿಜಯೇಂದ್ರ ಕೈಮೀರಿದ ಪ್ರಯತ್ನ ಮಾಡಬೇಕಾಗಿರುವುದು ಮತ್ತೊಂದು ಸವಾಲು.

ನೂತನ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡುವ ಮೂಲಕ ರಾಜ್ಯ ಬಿಜೆಪಿಯ ಚುಕ್ಕಾಣಿಯನ್ನು ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಮುಂತಾದವರು ವಿಜಯೇಂದ್ರ ಅವರಿಗೆ ನೀಡಿದ್ದಾರೆ. ಪಕ್ಷದ ವರಿಷ್ಠರು, ಕೇಂದ್ರ ನಾಯಕರು ಇಂಥ ದೊಡ್ಡ ಜವಾಬ್ದಾರಿ ಕೊಟ್ಟಿದ್ದು, ಇದನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಅವರು ತಮ್ಮ ಮೇಲೆ ಇರಿಸಿರುವ ವಿಶ್ವಾಸವನ್ನು ಉಳಿಸಿಕೊಳ್ಳಲೇಬೇಕಾದ ಅತ್ಯಂತ ಮಹತ್ವದ ಸವಾಲು ವಿಜಯೇಂದ್ರ ಮುಂದಿದೆ.