Home Blog Page 1825

ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಹರಿದು ಬಂದ ಅಭಿನಂದನೆಗಳ ಮಹಾಪೂರ

ಬೆಂಗಳೂರು, ನ 11 (ಪಿಟಿಐ) : ಬಿಜೆಪಿ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಬಿ ವೈ ವಿಜಯೇಂದ್ರ ಅವರನ್ನು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮತ್ತಿತರ ನಾಯಕರು ಅಭಿನಂದಿಸಿದ್ದಾರೆ. ಬಿಜೆಪಿಯ ಹೊಸ ಪಾಲುದಾರ ಪಕ್ಷವಾಗಿರುವ ಜೆಡಿಎಸ್ ಪಕ್ಷದ ವರಿಷ್ಠ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಆ ಪಕ್ಷದ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಅವರು ವಿಜಯೇಂದ್ರ ಅವರಿಗೆ ದೂರವಾಣಿ ಕರೆ ಮಾಡಿ ಅಭಿನಂದಿಸಿದ್ದಾರೆ ಎಂದು ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಈಗಾಗಲೇ ಯುವ ನಾಯಕರಾಗಿ (ಬಿಜೆಪಿ) ಸಂಘಟನೆಯಲ್ಲಿ ಸಕ್ರಿಯರಾಗಿರುವ ಅವರಿಗೆ ಚಿಕ್ಕವಯಸ್ಸಿನಲ್ಲೇ ಬಹುದೊಡ್ಡ ಜವಾಬ್ದಾರಿ ನೀಡಲಾಗಿದೆ. ತಮಗೆ ವಹಿಸಿರುವ ಈ ಗುರುತರ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವ ವಿಶ್ವಾಸವಿದೆ ಹೀಗಾಗಿ ವಿಜಯೇಂದ್ರ ಅವರಿಗೆ ನಾನು ಶುಭ ಹಾರೈಸುತ್ತೇನೆ ಎಂದು ಕುಮಾರಸ್ವಾಮಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

    ನವದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಕುಮಾರಸ್ವಾಮಿ ನಡೆಸಿದ ಸಭೆಯ ನಂತರ ಜೆಡಿಎಸ್ ಮತ್ತು ಬಿಜೆಪಿ ಸೆಪ್ಟೆಂಬರ್‍ನಲ್ಲಿ ಮೈತ್ರಿಯನ್ನು ಘೋಷಿಸಿದ್ದವು ಮತ್ತು ಎನ್‍ಡಿಎಗೆ ಸೇರ್ಪಡೆಗೊಂಡವು.

ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಸೇರಿದಂತೆ ಮೈತ್ರಿಯ ವಿವರಗಳನ್ನು ಉಭಯ ಪಕ್ಷಗಳು ಇನ್ನೂ ಔಪಚಾರಿಕಗೊಳಿಸಬೇಕಾಗಿಲ್ಲ, ಇದರಲ್ಲಿ ವಿಜಯೇಂದ್ರ ನಿರ್ಣಾಯಕ ಪಾತ್ರ ವಹಿಸುವ ಸಾಧ್ಯತೆಯಿದೆ.ಯಡಿಯೂರಪ್ಪನವರ ಮಗ ಎಂಬ ಅರ್ಹತೆಯ ಮೇರೆಗೆ ಬಿಜೆಪಿಯ ಹೊಸ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ವಿಜಯೇಂದ್ರ ಅವರಿಗೆ ಅಭಿನಂದನೆಗಳು ಎಂದು ಕಾಂಗ್ರೆಸ್ ಎಕ್ಸ್ ನಲ್ಲಿ ಕಾಲೇಳೆದಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಸೇರಿದಂತೆ ಪ್ರಮುಖ ನಾಯಕರು ವಿಜಯೇಂದ್ರ ಅವರನ್ನು ದೂರವಾಣಿ ಮೂಲಕ ಅಭಿನಂದಿಸಿದರು.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (11-11-2023)

ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ನಾಯಕ ಎಸ್ ಎಂ ಕೃಷ್ಣ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಕೂಡ ಅವರಿಗೆ ದೂರವಾಣಿ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ ಎಂದು ಅವರ ಕಚೇರಿ ತಿಳಿಸಿದೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಿಂದ ಮೊದಲ ಬಾರಿಗೆ ಶಾಸಕರಾಗಿರುವ 47 ವರ್ಷ ವಯಸ್ಸಿನವರು, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮೂರು ವರ್ಷಗಳ ಅವಯನ್ನು ಪೂರ್ಣಗೊಳಿಸಿದ ದಕ್ಷಿಣ ಕನ್ನಡದಿಂದ ಮೂರು ಬಾರಿ ಲೋಕಸಭಾ ಸದಸ್ಯರಾಗಿದ್ದ ನಳಿನ್ ಕುಮಾರ್ ಕಟೀಲ್ ಅವರ ಸ್ಥಾನಕ್ಕೆ ಬಂದಿದ್ದಾರೆ. ಮತ್ತು ಮುಂಬರುವ ವಿಧಾನಸಭಾ ಚುನಾವಣೆಯ ದೃಷ್ಟಿಯಿಂದ ಕಳೆದ ವರ್ಷ ವಿಸ್ತರಣೆಯನ್ನು ನೀಡಲಾಗಿತ್ತು.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಟೀಲ್, ವಿಜಯೇಂದ್ರ ಅವರು ಸಾಮಾನ್ಯ ಕಾರ್ಯಕರ್ತರಿಂದ ಪಕ್ಷದಲ್ಲಿ ಬೆಳೆದ ಸಂಘಟನಾ ಪುರುಷ ಎಂದು ಕರೆದರು ಮತ್ತು ಅವರ ನೇಮಕವು ಪಕ್ಷಕ್ಕೆ ಹೊಸ ಚೈತನ್ಯವನ್ನು ತಂದಿದೆ.ವಿಜಯೇಂದ್ರ ನೇತೃತ್ವದಲ್ಲಿ ಬೂತ್ ಮಟ್ಟದಿಂದ ಪಕ್ಷವನ್ನು ಒಗ್ಗಟ್ಟಿನಿಂದ ಬಲಪಡಿಸಲಾಗುವುದು ಮತ್ತು ಕಾಂಗ್ರೆಸ್ ದುರಾಡಳಿತದ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ ಎಂದರು.

ಆಯೋಧ್ಯೆ ಮಹಾಮಸ್ತಕಾಭಿಷೇಕ ಎಲ್ಲರಿಗೂ ಸಂತೋಷದ ಕ್ಷಣ : ಆರ್‌ಎಸ್‌ಎಸ್

ನವದೆಹಲಿ, ನ.11 (ಪಿಟಿಐ) : ಅಯೋಧ್ಯೆಯ ರಾಮಮಂದಿರದಲ್ಲಿ ಜನವರಿ 22 ರಂದು ನಡೆಯುವ ಮಹಾಮಸ್ತಕಾಭಿಷೇಕ ಸಮಾರಂಭವು ಎಲ್ಲ ದೇಶವಾಸಿಗಳಿಗೆ ಸಂತೋಷದ ಮಹಾನ್ ಕ್ಷಣ ಎಂದು ಆರ್‌ಎಸ್‌ಎಸ್ ಹೇಳಿದೆ ಮತ್ತು ಈ ದಿನವನ್ನು ಹಬ್ಬ ವಾಗಿ ಆಚರಿಸಲು ಜನರಿಗೆ ಕರೆ ನೀಡಿದೆ.

ಈ ವಾರದ ಆರಂಭದಲ್ಲಿ ಗುಜರಾತ್‍ನ ಕಚ್ ಜಿಲ್ಲೆಯ ಭುಜ್‍ನಲ್ಲಿ ತನ್ನ ರಾಷ್ಟ್ರೀಯ ಕಾರ್ಯಕಾರಿಣಿಯ ಮೂರು ದಿನಗಳ ಸಭೆಯಲ್ಲಿ, ರಾಷ್ಟ್ರೀಯ ಸ್ವಯಂಸೇವಕ ಸಂಘ ದೇವಾಲಯದ ಉದ್ಘಾಟನೆ ಮತ್ತು ದೇಶಾದ್ಯಂತ ಅದಕ್ಕೆ ಸಂಬಂಸಿದ ಕಾರ್ಯಕ್ರಮಗಳ ಕುರಿತು ಚರ್ಚಿಸಿತು.

ಮಹಾಮಸ್ತಕಾಭಿಷೇಕದ ಪೂರ್ವಭಾವಿಯಾಗಿ, ಆರ್‍ಎಸ್‍ಎಸ್ ಕಾರ್ಯಕರ್ತರು ಜನವರಿ 1 ರಿಂದ 15 ರ ನಡುವೆ ರಾಷ್ಟ್ರವ್ಯಾಪಿ ಮನೆ-ಮನೆ ಪ್ರಚಾರವನ್ನು ಆರಂಭಿಸಲಿದ್ದು, ಉದ್ಘಾಟನೆಗೆ ಜನರಿಗೆ ಆಹ್ವಾನ ನೀಡಲಿದ್ದಾರೆ ಎಂದು ಅದರ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಸುದ್ದಿಗಾರರಿಗೆ ತಿಳಿಸಿದರು.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (11-11-2023)

ನಮ್ಮ ಪೂಜ್ಯ ಶ್ರೀರಾಮನ ಭವ್ಯವಾದ ದೇವಾಲಯವನ್ನು ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿದೆ ಮತ್ತು ಮೂರ್ತಿ ಪ್ರತಿಷ್ಠಾಪನೆ ಸಮಾರಂಭವು ಜನವರಿ 22 ರಂದು ನಡೆಯಲಿದೆ. ನಂತರ ವಿದೇಶದಲ್ಲಿ ವಾಸಿಸುವವರು ಸೇರಿದಂತೆ ನಮಗೆಲ್ಲರಿಗೂ ಇದು ಸಂತೋಷದ ಕ್ಷಣವಾಗಿದೆ. ವರ್ಷಗಳ ಪ್ರಯತ್ನದಿಂದ ಅಯೋಧ್ಯೆಯಲ್ಲಿ ನಮ್ಮ ಭಗವಾನ್ ಶ್ರೀರಾಮನ ಭವ್ಯವಾದ ಮಂದಿರವನ್ನು ನಿರ್ಮಿಸಲಾಗುತ್ತಿದೆ ಎಂದು ಆರ್‍ಎಸ್‍ಎಸ್‍ನ ರಾಷ್ಟ್ರೀಯ ಪ್ರಚಾರ ಮುಖ್ಯಸ್ಥ ಸುನೀಲ್ ಅಂಬೇಕರ್ ಇಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಹೇಳಿದರು.

ದೇಶಾದ್ಯಂತ ಜನರು ತಮ್ಮ ತಮ್ಮ ಪ್ರದೇಶಗಳಲ್ಲಿನ ಹತ್ತಿರದ ದೇವಾಲಯಗಳಿಗೆ ಭೇಟಿ ನೀಡುವ ಮೂಲಕ ಈ ಆಚರಣೆ ಯಲ್ಲಿ ಪಾಲ್ಗೊಳ್ಳುತ್ತಾರೆ ಎಂದು ಅವರು ಹೇಳಿದರು.ಇದು ಉತ್ಸವದ ಸಂದರ್ಭವಾಗಿದೆ. ಎಲ್ಲರೂ ಅಯೋಧ್ಯೆಗೆ ಹೋಗುವುದಿಲ್ಲ. ಜನರು ಈ ಹಬ್ಬವನ್ನು ತಮ್ಮ ಹತ್ತಿರದ ದೇವಾಲಯಗಳಿಗೆ ಭೇಟಿ ನೀಡುವ ಮೂಲಕ ಆಚರಿಸುತ್ತಾರೆ. ರಾತ್ರಿ ಸಮಯದಲ್ಲಿ ಎಲ್ಲರೂ ತಮ್ಮ ಮನೆಗಳಲ್ಲಿ ದೀಪಗಳನ್ನು ಬೆಳಗಿಸಬೇಕು. ಇಂತಹ ಮನವಿಯನ್ನು ಆರ್‍ಎಸ್‍ಎಸ್ ಮಾಡಿದೆ ಎಂದು ಅಂಬೇಕರ್ ಹೇಳಿದರು.

ಭಗವಾನ್ ರಾಮನು ಗೌರವ, ಪ್ರೀತಿ ಮತ್ತು ಧರ್ಮ ದ ಸಂಕೇತವಾಗಿದೆ ಮತ್ತು ಪಟ್ಟಾಭಿಷೇಕ ಸಮಾರಂಭವನ್ನು ಹಬ್ಬದಂತೆ ಆಚರಿಸಲು ಜನರಿಗೆ ಕರೆ ನೀಡಿದರು.ಇದು ನಮಗೆಲ್ಲರಿಗೂ ಸಂತೋಷದ ಕ್ಷಣವಾಗಿರುತ್ತದೆ. ಇದು ಸಾಮರಸ್ಯದ ಕ್ಷಣವಾಗಿರುತ್ತದೆ ಎಂದು ಅವರು ಹೇಳಿದರು ಮತ್ತು ಮತ್ತು, ದೇವಸ್ಥಾನದಲ್ಲಿ ವಿಗ್ರಹದ ಪ್ರತಿಷ್ಠಾಪನೆಯೊಂದಿಗೆ, ಭಾರತವು ತನ್ನ ಮೆರವಣಿಗೆಯನ್ನು ಮುಂದುವರೆಸುತ್ತದೆ ಎಂದು ನಾನು ಭಾವಿಸುತ್ತೇನೆ. ಮಹಾಮಸ್ತಕಾಭಿಷೇಕ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ದೇಶಾದ್ಯಂತ ಸಾವಿರಾರು ಭಕ್ತರನ್ನು ಆಹ್ವಾನಿಸಲಾಗಿದೆ.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (11-11-2023)

ನಿತ್ಯ ನೀತಿ: ಇತಿಹಾಸ ಹೇಳುತ್ತೆ ಕಳೆದುಹೋದ ದಿನ ಸುಖವಾಗಿತ್ತು ಅಂತ. ವಿಜ್ಞಾನ ಹೇಳುತ್ತೆ ನಾಳೆ ಬರುವ ದಿನ ಸುಖವಾಗಿರುತ್ತದೆ ಅಂತ. ಆದರೆ ಧರ್ಮ ಹೇಳುತ್ತೆ ಸತ್ಯವಾದ ಮನಸ್ಸು ಹಾಗೂ ಸ್ವಚ್ಛವಾದ ಹೃದಯವಿದ್ದರೆ ಪ್ರತಿಕ್ಷಣ ಸುಖವಾಗಿರುತ್ತೆ ಎಂದು.

ಪಂಚಾಂಗ ಶನಿವಾರ 11-11-2023
ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಆಶ್ವಯುಜ ಮಾಸ / ಕೃಷ್ಣ ಪಕ್ಷ / ತಿಥಿ: ತ್ರಯೋದಶಿ / ನಕ್ಷತ್ರ: ಚಿತ್ತಾ / ಯೋಗ: ಪ್ರೀತಿ / ಕರಣ: ವಿಷ್ಟಿ

ಸೂರ್ಯೋದಯ ; ಬೆ.06.16
ಸೂರ್ಯಾಸ್ತ : 05.51
ರಾಹುಕಾಲ : 9.00-10.30
ಯಮಗಂಡ ಕಾಲ : 1.30-3.00
ಗುಳಿಕ ಕಾಲ : 6.00-7.30

ರಾಶಿ ಭವಿಷ್ಯ
ಮೇಷ
: ಕುಟುಂಬದವರೊಂದಿಗೆ ಏನಾದರೂ ವಿವಾದವಿದ್ದರೆ, ಸಂಭಾಷಣೆಯ ಮೂಲಕ ಬಗೆಹರಿಸಿಕೊಳ್ಳುವುದು ಒಳ್ಳೆಯದು.
ವೃಷಭ: ವ್ಯಾಪಾರ-ವ್ಯವಹಾರ ಕ್ಷೇತ್ರಗಳಲ್ಲಿ ನಿಮಗೆ ಉತ್ತಮ ಫಲಿತಾಂಶ ದೊರೆಯುವುದು.
ಮಿಥುನ: ಕೋಪ ನಿಯಂತ್ರಣದಲ್ಲಿದ್ದರೆ ಸಾಮಾಜಿಕ ಮಟ್ಟದಲ್ಲಿ ಉತ್ತಮ ಫಲಿತಾಂಶ ಸಿಗಲಿದೆ.
ಕಟಕ: ಧಾರ್ಮಿಕ ಚಟುವಟಿಕೆಗಳಲ್ಲಿ ನಿಮ್ಮ ಆಸಕ್ತಿ ಹೆಚ್ಚಾಗುತ್ತದೆ.

ಸಿಂಹ: ವಿದ್ಯಾರ್ಥಿಗಳು ಏಕಾಗ್ರತೆಯ ಕೊರತೆಯಿಂದ ಓದಬೇಕಾಗುತ್ತದೆ.
ಕನ್ಯಾ: ಬೀದಿ ಬದಿಯ ಆಹಾರ ಸೇವಿಸುವುದನ್ನು ತಪ್ಪಿಸಿದರೆ ಒಳ್ಳೆಯದು.

ತುಲಾ: ಪ್ರೇಮ ಜೀವನದಲ್ಲಿ ಉತ್ತಮ ಬದಲಾವಣೆಗಳು ಕಂಡುಬರುತ್ತವೆ.
ವೃಶ್ಚಿಕ: ಮಾನಸಿಕ ಶಾಂತಿ ಗಾಗಿ ಏಕಾಂತದಲ್ಲಿ ಸಮಯ ಕಳೆಯಲು ಬಯಸುವಿರಿ.
ಧನುಸ್ಸು: ವಿರೋಧಿಗಳಿಂದ ದೂರವಿರಿ. ಆರೋಗ್ಯದಲ್ಲೂ ಏರುಪೇರು ಉಂಟಾಗಬಹುದು.

ಮಕರ: ಸಂಗಾತಿಯಿಂದ ನಿಮಗೆ ಆಶ್ಚರ್ಯಕರ ಉಡುಗೊರೆ ದೊರೆಯುವುದರಿಂದ ಸಂತಸವಾಗಲಿದೆ.
ಕುಂಭ: ಪತ್ನಿಯ ಸಹಾಯದಿಂದ ಹಣಕಾಸಿನ ವಿಷಯದಲ್ಲಿ ಸುಧಾರಣೆ ಕಂಡುಬರಲಿದೆ.
ಮೀನ: ಅವಸರದಲ್ಲಿ ಯಾವುದೇ ನಿರ್ಧಾರ ಬೇಡ.

ಡಿಕೆಶಿ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ : ಸಿಬಿಐ ಮೇಲ್ಮನವಿ ಅರ್ಜಿ ಹೈಕೋರ್ಟ್ ಅಂಗಳಕ್ಕೆ

ನವದೆಹಲಿ,ನ.10- ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್‍ನಲ್ಲಿ ಇತ್ಯರ್ಥಪಡಿಸಿಕೊಳ್ಳಲು ಸುಪ್ರೀಂಕೋರ್ಟ್ ಸೂಚಿಸಿದೆ.

ಪ್ರಕರಣದ ಚಾರಣೆಯನ್ನು ನ್ಯಾ. ಬೇಲಾ ಎಂ ತ್ರಿವೇದಿ ನೇತೃತ್ವದ ದ್ವಿಸದಸ್ಯ ಪೀಠ ನಡೆಸಿತು. ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ಹೈಕೋರ್ಟ್ ವಿಭಾಗೀಯ ಪೀಠ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಹೈಕೋರ್ಟ್‍ನಲ್ಲಿ ಇತ್ಯರ್ಥಪಡಿಸಿಕೊಳ್ಳಲು ಸಿಬಿಐಗೆ ಸೂಚನೆ ನೀಡಿದೆ.

ಡಿ.ಕೆ.ಶಿವಕುಮಾರ್ ಅವರ ವಿಚಾರಣೆ ನಡೆಸದೆ ಹೈಕೋರ್ಟ್ ತನಿಖೆಗೆ ತಡೆಯಾಜ್ಞೆ ನೀಡಿದೆ ಎಂದು ಈ ಹಿಂದೆ ಸಿಬಿಐ ನ್ಯಾಯಾಲಯಕ್ಕೆ ತಿಳಿಸಿತ್ತು. ಸುಳ್ಳಿನ ಆಧಾರದಲ್ಲಿ ಸಂಪೂರ್ಣ ತನಿಖೆಗೆ ತಡೆ ನೀಡಲಾಗಿದೆ ಎಂದು ಸಿಬಿಐ ಪರ ವಾದ ಮಂಡಿಸಿದ ಎಎಸ್‍ಜಿ ಎಸ್.ರಾಜು ನ್ಯಾಯಾಲಯಕ್ಕೆ ತಿಳಿಸಿದ್ದರು. ಹಿರಿಯ ವಕೀಲ ಮುಕುಲ್ ರೋಹಟಗಿ ಅವರು, ಡಿ.ಕೆ. ಶಿವಕುಮಾರ್ ಪರ ವಾದ ಮಂಡಿಸಿದ್ದರು. ಈ ಪ್ರಕರಣ ಸಂಬಂಧ ಜೂನ್‍ನಲ್ಲಿ ಹೈಕೋರ್ಟ್ ಸಿಬಿಐ ತನಿಖೆಗೆ ತಡೆ ನೀಡಿತ್ತು. ನಂತರ ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.

ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಸಂಪಾದನೆ ಪ್ರಕರಣದ ತನಿಖೆಗೆ ತಡೆ ನೀಡಿರುವ ಕರ್ನಾಟಕ ಹೈಕೋರ್ಟ್‍ನ ಮಧ್ಯಂತರ ಆದೇಶವನ್ನು ತೆರವು ಮಾಡಲು ಅ.17ರಂದು ನ್ಯಾಯಾಲಯ ನಿರಾಕರಿಸಿತ್ತು.
ಏಪ್ರಿಲ್ 2013ರಿಂದ ಏಪ್ರಿಲ್ 2018ರ ನಡುವೆ ಡಿ.ಕೆ.ಶಿವಕುಮಾರ್ ಮತ್ತು ಅವರ ಕುಟುಂಬ ಸದಸ್ಯರಿಂದ ಸ್ವಾೀನಕ್ಕೆ ಪಡೆಯಲಾದ ಒಟ್ಟು ಮೌಲ್ಯವು 128 ಕೋಟಿಯಿಂದ 162 ಕೋಟಿಗೆ ಏರಿಕೆಯಾಗಿದೆ.

ಇದು ಸುಮಾರು ಶೇ. 45 ಅಥವಾ ರೂ. 75 ಕೋಟಿಯಷ್ಟು ಏರಿಕೆಯಾಗಿದೆ ಎಂದು ಸಿಬಿಐ ತನ್ನ ಅರ್ಜಿಯಲ್ಲಿ ಆರೋಪಿಸಿತ್ತು. ಈಗಲ್ಟನ್ ರೆಸಾರ್ಟ್‍ನಲ್ಲಿ ನಡೆದ ದಾಳಿಯನ್ನು ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಸಿಬಿಐ ತನಿಖೆಗೆ ನೀಡಿತ್ತು. ಸರ್ಕಾರದ ನಡೆಯನ್ನು ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು.

ಒತ್ತಡಕ್ಕೆ ಮಣಿದು ರಾಜಕೀಯ ನಿವೃತ್ತಿ ಘೋಷಿಸಿಲ್ಲ : ಡಿ.ವಿ.ಸದಾನಂದಗೌಡ

ಅರ್ಜಿ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ ಅರ್ಜಿ ವಜಾ ಮಾಡಿತ್ತು. ಇದನ್ನು ಪ್ರಶ್ನೆ ಮಾಡಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ವಿಭಾಗೀಯ ಪೀಠ ತನಿಖೆಗೆ ತಡೆ ನೀಡಿತ್ತು.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಸಿಬಿಐ ತನಿಖೆ ತಡೆ ಕೋರಿ ಡಿ.ಕೆ ಶಿವಕುಮಾರ್ ಮತ್ತೊಂದು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು. ಈ ಮೊದಲು ತಡೆ ನೀಡಿದ್ದ ಕೋರ್ಟ್ ಇತ್ತಿಚೀಗೆ ತಡೆ ರದ್ದು ಮಾಡಿ ಸಿಬಿಐ ತನಿಖೆಗೆ ಆದೇಶ ನೀಡಿತ್ತು.

ಏನಿದು ಪ್ರಕರಣ?
2017ರಲ್ಲಿ ಡಿ.ಕೆ ಶಿವಕುಮಾರ್ ವಾಸ್ತವ್ಯವಿದ್ದ ಈಗಲ್ಟನ್ ರೆಸಾರ್ಟ್ ಮತ್ತು ಅವರ ಸಹಚರರ ಮೇಲೆ ದಾಳಿ ಮೇಲೆ ದಾಳಿ ಮಾಡಿದ್ದ ಆದಾಯ ತೆರಿಗೆ ಇಲಾಖೆ ಸುಮಾರು 8.59 ಕೋಟಿ ಹಣ ವಶಪಡಿಸಿಕೊಂಡಿತ್ತು. ಲೆಕ್ಕಕ್ಕೆ ಸಿಗದ ಈ ಹಣವನ್ನು ಡಿ.ಕೆ ಶಿವಕುಮಾರ್ ತಮ್ಮ ಸಹಚರರ ಬಳಿ ಇರಿಸಿದ್ದರು ಎಂದು ಆರೋಪಿಸಿತ್ತು.

ಇದೇ ಪ್ರಕರಣದಲ್ಲಿ ಇಡಿ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ವಿರುದ್ಧ ತನಿಖೆ ಆರಂಭಿಸಿತ್ತು. ಇಡಿ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಎಫ್‍ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು.

ಸರ್ಕಾರ 2019ರ ಸೆ.25ರಂದು ಅನುಮತಿ ನೀಡಿದ ಬೆನ್ನಲ್ಲೇ 2020ರ ಅಕ್ಟೋಬರ್ 3 ರಂದು ಡಿಕೆ ಶಿವಕುಮಾರ್ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. 2013ರಿಂದ 2018ರ ವರೆಗಿನ ಆದಾಯಗಳಿಕೆ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ.

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ, ಮೂವರ ಸೆರೆ

ಮದ್ದೂರು,ನ.10- ಮೈಸೂರಿನಲ್ಲಿ ನಡೆದ ಯುವ ದಸರಾ ವೇಳೆ ಅಪ್ರಾಪ್ತ ಯುವತಿಯನ್ನು ಪರಿಚಯಿಸಿಕೊಂಡು, ಪುಸಲಾಯಿಸಿ ಲಾಡ್ಜ್‍ಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ವೆಸಗಿದ್ದ ಇಬ್ಬರು ಅಪ್ರಾಪ್ತ ಯುವಕರು ಸೇರಿದಂತೆ ಮೂವರನ್ನು ಮದ್ದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇಬ್ಬರು ಅಪ್ರಾಪ್ತ ಯುವಕರು ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಮತ್ತೊಬ್ಬ ಆರೋಪಿ 19 ವರ್ಷದ ಯುವಕನಾಗಿದ್ದು, ಈತ ವಿದ್ಯಾಭ್ಯಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿ ಊರಿನಲ್ಲಿದ್ದನು. ಇವರೆಲ್ಲರೂ ಸಂತ್ರಸ್ತೆಯ ಅಕ್ಕಪಕ್ಕದ ಗ್ರಾಮದವರು.ಮೈಸೂರಿನಲ್ಲಿ ಆಯೋಜಿಸಿದ್ದ ಯುವ ದಸರಾ ಕಾರ್ಯಕ್ರಮ ವೀಕ್ಷಿಸಲು ಹೋಗಿದ್ದ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ತಾಲ್ಲೂಕಿನ ಅಪ್ರಾಪ್ತೆಯನ್ನು ಯುವಕ ಪರಿಚಯಿಸಿಕೊಂಡು ಪ್ರೀತಿಸುವುದಾಗಿ ಪೀಡಿಸಿದ್ದಾನೆ.

ಒತ್ತಡಕ್ಕೆ ಮಣಿದು ರಾಜಕೀಯ ನಿವೃತ್ತಿ ಘೋಷಿಸಿಲ್ಲ : ಡಿ.ವಿ.ಸದಾನಂದಗೌಡ

ನಂತರ ಆಕೆಯನ್ನು ಪುಸಲಾಯಿಸಿ ಇಲ್ಲಿನ ಲಾಡ್ಜ್‍ವೊಂದಕ್ಕೆ ಕರೆದೊಯ್ದು ನಂತರ ಇನ್ನಿಬ್ಬರು ಅಪ್ರಾಪ್ತ ಯುವಕರನ್ನು ಕರೆಸಿಕೊಂಡು ಸಾಮೂಹಿಕವಾಗಿ ಆಕೆ ಮೇಲೆ ಅತ್ಯಾಚಾರವೆಸಗಿದ್ದಾರೆ. ಅಲ್ಲದೆ ಅತ್ಯಾಚಾರದ ವಿಡಿಯೋ ಮಾಡಿಕೊಂಡಿದ್ದ ಕಿರಾತಕರು ಆ ವಿಡಿಯೋವನ್ನು ಆಕೆಗೆ ತೋರಿಸಿ, ನಾವು ಕರೆದಾಗ ಬರಬೇಕೆಂದು ಬೆದರಿಕೆ ಹಾಕಿದ್ದಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ಆ ವಿಡಿಯೋವನ್ನು ವೈರಲ್ ಮಾಡುವುದಾಗಿ ಹೆದರಿಸಿದ್ದಾರೆ.

ಅಪ್ರಾಪ್ತೆಯ ಮೊಬೈಲ್‍ಗೂ ಸಹ ವಿಡಿಯೋ ಕಳಿಸಿ ಬೆದರಿಕೆ ಹಾಕಿದ್ದರು. ಇದರಿಂದ ಗಾಬರಿಯಾದ ಸಂತ್ರಸ್ತೆ ತನ್ನ ಪೋಷಕರಿಗೆ ನಡೆದ ವಿಷಯವನ್ನು ತಿಳಿಸಿದ್ದಾಳೆ. ತಕ್ಷಣ ಸಂತ್ರಸ್ತೆಯ ತಂದೆ ಇಲ್ಲಿನ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತಾಲ್ಲೂಕಿನ ಮೂವರನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸಿಸಿಬಿ ಪೊಲೀಸರ ಕಾರ್ಯಾಚರಣೆ : 10 ಕೋಟಿ ಮೌಲ್ಯದ ಡ್ರಗ್ಸ್ ವಶ

ಬೆಂಗಳೂರು,ನ.10- ನಗರದ ಹೊರವಲ ಯದ ಮನೆಯೊಂದರಲ್ಲಿ ಅಡುಗೆ ಮಾಡುವ ಪ್ರೆಜರ್‍ಕುಕ್ಕರ್ ಬಳಸಿ ಸಿಂಥೆಟಿಕ್ ಡ್ರಗ್ಸ್ ತಯಾರು ಮಾಡಿ ದೇಶ-ವಿದೇಶಗಳಿಗೆ ಸರಬರಾಜು ಮಾಡಿ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಯನ್ನು ಸಿಸಿಬಿ ಪೊಲೀಸರು ಬಂಧಿಸಿ 10 ಕೋಟಿ ಮೌಲ್ಯದ ಎಂಡಿಎಂಎ ಮಾದಕವಸ್ತು ಹಾಗೂ ತಯಾರಿಕೆಗೆ ಬಳಸುತ್ತಿದ್ದ ರಾಸಾಯನಿಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ನೈಜೀರಿಯ ದೇಶದ ಪ್ರಜೆ ಬೆಂಜಮಿನ್(40) ಬಂಧಿತ ಡ್ರಗ್ ಪೆಡ್ಲರ್. ಈತ ಬಿಸ್ನೆಸ್ ವೀಸಾದಡಿ ಭಾರತಕ್ಕೆ ಬಂದಿದ್ದನು. ವೀಸಾ ಅವಧಿ ಮುಗಿದಿದ್ದರೂ ಅನಧಿಕೃತವಾಗಿ ನಗರದಲ್ಲಿ ನೆಲೆಸಿದ್ದು,
ಬಟ್ಟೆ ವ್ಯಾಪಾರಿ ಎಂದು ಮನೆ ಬಾಡಿಗೆ ಪಡೆದುಕೊಂಡಿದ್ದನು.

ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿದೇಶಿ ಮೂಲದ ವ್ಯಕ್ತಿಯೊಬ್ಬ ನಿಷೇಧಿತ ಮಾದಕವಸ್ತು ಮನೋಪರಿಣಾಮಕ ವಸ್ತುವಾದ ಎಂಡಿಎಂಎ ಕ್ರಿಸ್ಟಲ್ ತಯಾರು ಮಾಡಿ ನಗರ ಸೇರಿದಂತೆ ರಾಜ್ಯ ಹಾಗೂ ದೇಶವಿದೇಶಗಳಲ್ಲಿ ಇರುವ ಗಿರಾಕಿಗಳಿಗೆ ಮತ್ತು ಸಬ್ ಪೆಡ್ಲರ್‍ಗಳಿಗೆ ಸರಬರಾಜು ಹಾಗೂ ಮಾರಾಟ ಮಾಡಿ ಅಕ್ರಮವಾಗಿ ಹಣ ಸಂಪಾದಿಸುತ್ತಿದ್ದ ಬಗ್ಗೆ ಸಿಸಿಬಿ ಪೊಲೀಸರಿಗೆ ಮಾಹಿತಿ ಲಭಿಸಿದೆ.

ರಾಜ್ಯದ 1673 ಸಣ್ಣ ಕೆರೆಗಳಲ್ಲಿ ಭರ್ತಿಯಾಗಿದ್ದು ಕೇವಲ 428 ಮಾತ್ರ

ತಕ್ಷಣ ಖಚಿತ ಮಾಹಿತಿ ಮೇರೆಗೆ ಕೇಂದ್ರ ಅಪರಾಧ ವಿಭಾಗದ ಮಾದಕದ್ರವ್ಯ ನಿಗ್ರಹದ ದಳದ ಅಧಿಕಾರಿಗಳು ಕ್ಷಿಪ್ರ ಕಾರ್ಯಾಚರಣೆ ನಡೆಸಿ ವಿದೇಶಿ ಪ್ರಜೆಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ವಿಚಾರಣೆಗೊಳಪಡಿಸಿ ಆತ ನೀಡಿದ ಮಾಹಿತಿ ಮೇರೆಗೆ ನಗರದ ಹೊರವಲಯದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತನ್ನ ಮನೆಯಲ್ಲಿ ಕುಕ್ಕರ್ ಬಳಸಿ ಸಿಂಥೆಟಿಕ್ ಡ್ರಗ್ಸ್ ತಯಾರು ಮಾಡಿ ಸಂಗ್ರಹಿಸಿಟ್ಟುಕೊಂಡಿದ್ದ 10 ಕೋಟಿ ರೂ. ಮೌಲ್ಯದ 5 ಕೆಜಿ ಎಂಡಿಎಂಎ ಮಾದಕವಸ್ತು, ಎಂಡಿಎಂಎ ತಯಾರು ಮಾಡಲು ಬೇಕಾದ ಕಚ್ಚಾ ಪದಾರ್ಥಗಳಾದ ಎಂಎಸ್‍ಎಂ 12.450 ಕೆಜಿ, ಸೋಡಿಯಂ ಹೈಡ್ರಾಕ್ಸೈಡ್ ಕ್ರಿಸ್ಟಲ್ 5 ಕೆಜಿ, ಹೈಡ್ರೋಕ್ಲೋರಿಕ್‍ಆ್ಯಸಿಡ್ 5 ಲೀಟರ್, ಅಸೆಟ್‍ಟೊನ್ 2.5 ಲೀಟರ್ ಹಾಗೂ 5 ಲೀಟರ್ ಕುಕ್ಕರ್, ಸ್ಟವ್, ಗ್ಯಾಸ್ ಸಿಲಿಂಡರ್ ಮತ್ತು ಕೃತ್ಯಕ್ಕೆ ಬಳಸುತ್ತಿದ್ದ ಮೊಬೈಲ್, 2 ಡಿಜಿಟಲ್ ತೂಕದ ಯಂತ್ರ, ಒಂದು ಎನ್‍ಟ್ರಾಕ್ ದ್ವಿಚಕ್ರ ವಾಹನ ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿಯು ಡ್ರಗ್ಸ್ ತಯಾರಿಕೆಗೆ ಬಳಸುವ ಕಚ್ಚಾ ಸಾಮಾಗ್ರಿಗಳನ್ನು ದೆಹಲಿ ಹಾಗೂ ಇನ್ನಿತರೆ ಕಡೆಗಳಿಂದ ತರಿಸಿಕೊಳ್ಳುತ್ತಿದುದ್ದು ವಿಚಾರಣೆಯಿಂದ ಗೊತ್ತಾಗಿದೆ. ಆರೋಪಿ ವಿರುದ್ಧ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಎನ್‍ಡಿಪಿಎಸ್ ಕಾಯ್ದೆ ಹಾಗೂ 14 ಫಾರಿರ್ನರ್ಸ್ ಆಕ್ಟ್‍ನಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ನ.20ರವರೆಗೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದ್ದು, ವಿಚಾರಣೆ ಮುಂದುವರೆದಿದೆ.

ಪಶ್ಚಿಮ ವಿಭಾಗದ ಅಪರ ಪೊಲೀಸ್ ಆಯುಕ್ತರಾದ ಸತೀಶ್‍ಕುಮಾರ್, ಉಪಪೊಲೀಸ್ ಆಯುಕ್ತರು ಅಪರಾಧ-2 ಶ್ರೀನಿವಾಸ್ ಗೌಡ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಮಾದಕದ್ರವ್ಯ ನಿಗ್ರಹದಳದ ಅಧಿಕಾರಿ ಹಾಗೂ ಸಿಬ್ಬಂದಿ ತಂಡವು ಕಾರ್ಯಾಚರಣೆ ಕೈಗೊಂಡಿರುತ್ತದೆ.

ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಡಿಸಿಎಂಗೆ ದೂರು

ಬೆಂಗಳೂರು,ನ.10- ಶಿವಮೊಗ್ಗದ ಜಿಲ್ಲಾ ಉಸ್ತುವಾರಿ ಸಚಿವರು ಯಾರಿದ್ದಾರೋ ಗೊತ್ತಿಲ್ಲ ಎಂದು ವಿವಾದಿತ ಹೇಳಿಕೆ ನೀಡಿ, ಗೊಂದಲ ಮೂಡಿಸುತ್ತಿರುವ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ದೂರು ನೀಡಿದ್ದಾರೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿರುವ ಮಧು ಬಂಗಾರಪ್ಪ, ಅಧ್ಯಕ್ಷರ ಬಳಿ ಏನು ಹೇಳಬೇಕೋ ಹೇಳಿದ್ದೇನೆ. ಬಹಿರಂಗವಾಗಿ ಮಾತನಾಡುವುದಿಲ್ಲ ಎಂದಿದ್ದಾರೆ. ಇದೆಲ್ಲ ಪಕ್ಷದ ಆಂತರಿಕ ವಿಚಾರ, ಏನೇ ಇದ್ದರೂ ಪಕ್ಷವೇ ನಿರ್ಣಯ ಕೈಗೊಳ್ಳುತ್ತದೆ, ನನಗೆ ಬೇರೆ ಕೆಲಸ ಕೊಟ್ಟಿದ್ದಾರೆ. ನಾನಾಗಲಿ ಬೇಳೂರಾಗಲಿ ಹುಷಾರಾಗಿ ಮಾತನಾಡುವುದು ಒಳ್ಳೆಯದು. ಬೇಳೂರು ಬಹಿರಂಗ ಪ್ರತಿಕ್ರಿಯೆ ನೀಡುವುದಿಲ್ಲ. ಎಲ್ಲಿ ಉತ್ತರ ಕೊಡಬೇಕೋ ಅಲ್ಲಿ ಕೊಡುತ್ತೇನೆ ಎಂದರು.

ಮತ್ತೊಬ್ಬ ಮೋಸ್ಟ್ ವಾಂಟೆಡ್ ಉಗ್ರನನ್ನ ಬೇಟೆಯಾಡಿದ ‘ಅಪರಿಚಿತ’ ಬಂಧೂಕುದಾರಿ

ಹಸ್ತದ ಆಶೀರ್ವಾದ, ಪಕ್ಷದ ಅಂಬ್ರೆಲ್ಲಾ ಅಡಿ ನಾವೆಲ್ಲ ಗೆದ್ದು ಬಂದಿದ್ದೇವೆ. ವೈಯಕ್ತಿಕವಾಗಿ ನಾವು ಯಾರೂ ಗೆದ್ದವರಲ್ಲ, ಹೀಗಾಗಿ ಹೇಗಿರಬೇಕು ಅನ್ನೋದು ಮುಖ್ಯವಾಗಿದೆ. ಇಲ್ಲಿ ವ್ಯಕ್ತಿಗಿಂತ ಪಕ್ಷ ಬಹಳ ಮುಖ್ಯ ಎಂದರು.
ಅಧ್ಯಕ್ಷರು, ಮುಖ್ಯಮಂತ್ರಿಯವರು ಕಟ್ಟುನಿಟ್ಟಾಗಿ ಸೂಚನೆ ನೀಡಿದ್ದಾರೆ. ಅವರ ಮುಂದೆ ನಾನು ಏನು ಹೇಳಬೇಕೋ ಅದನ್ನು ಹೇಳಿದ್ದೇನೆ.

ಮಾಧ್ಯಮದ ಮುಂದೆ ಉತ್ತರ ಕೊಡುವ ಅವಶ್ಯಕತೆ ಇಲ್ಲ. ಶಿವಮೊಗ್ಗದಲ್ಲಿ ಈಗಲೂ ಕಾಂಗ್ರೆಸ್ ಪರ ವಾತಾವರಣವಿದೆ. ಮಾಧ್ಯಮದಲ್ಲಿ ಬೇಳೂರುರನ್ನು ಹೆಚ್ಚಾಗಿ ತೋರಿಸಲಾಗುತ್ತದೆ, ಜನ ನೋಡುತ್ತಾರೆ. ಶಿವಮೊಗ್ಗದ ಬಗ್ಗೆ ಯಾರು ತಲೆ ಕೆಡಿಸಿಕೊಳ್ಳಬೇಕಿಲ್ಲ. ನಾವು ಸರಿ ಮಾಡಿಕೊಳ್ತೇವೆ, ಪಕ್ಷ ಇದೆ. ಅಲ್ಲಿ ಉತ್ತರ ಕೊಟ್ಟುಕೊಳ್ತೇವೆ ಎಂದರು.

ಪಿಎಸ್‍ಐ ನೇಮಕಾತಿ ಮರು ಪರೀಕ್ಷೆಗೆ ಹೈಕೋರ್ಟ್ ಆದೇಶ

ಬೆಂಗಳೂರು,ನ.10- ಹಿಂದಿನ ಬಿಜೆಪಿ ಸರ್ಕಾರವನ್ನು ಬಿಟ್ಟುಬಿಡದಂತೆ ಪೆಡಂಬೂತವಾಗಿ ಕಾಡಿದ್ದ 545 ಪಿಎಸ್‍ಐ ನೇಮಕಾತಿ ಪರೀಕ್ಷೆ ರದ್ದುಪಡಿಸಿದ್ದ ಸರ್ಕಾರದ ಕ್ರಮವನ್ನು ಎತ್ತಿಹಿಡಿದಿರುವ ಹೈಕೋರ್ಟ್, ಮರುಪರೀಕ್ಷೆ ನಡೆಸಲು ಆದೇಶ ನೀಡಿದೆ. ಸ್ವತಂತ್ರ ಸಂಸ್ಥೆಯಿಂದ ಪಿಎಸ್‍ಐ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಬೇಕೆಂದು ಹೈಕೋರ್ಟ್ ಆದೇಶಿಸಿದೆ. ನ್ಯಾಯಾಲಯದ ಈ ತೀರ್ಪಿನಿಂದ ಈ ಹಿಂದೆ ಪರೀಕ್ಷೆ ಬರೆದು ನೇಮಕಗೊಂಡಿದ್ದ ಅಭ್ಯರ್ಥಿಗಳಿಗೆ ತೀವ್ರ ನಿರಾಸೆಯಾಗಿದೆ.

ಸುದೀರ್ಘ ವಿಚಾರಣೆ ನಡೆಸಿ ಇಂದಿಗೆ ತೀರ್ಪು ಕಾಯ್ದಿರಿಸಿದ್ದ ಹೈಕೋರ್ಟ್ ನ್ಯಾಯಮೂರ್ತಿಗಳಾದ ದಿನೇಶ್‍ಕುಮಾ, ಟಿ.ಜಿ.ಶಿವಶಂಕರೇಗೌಡ ಅವರನ್ನೊಳಗೊಂಡ ದ್ವಿಸದಸ್ಯಪೀಠ ಹಿಂದಿನ ಬಿಜೆಪಿ ಸರ್ಕಾರ ಪಿಎಸ್‍ಐ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಹಿನ್ನಲೆಯಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ರದ್ದುಪಡಿಸಿದ್ದನ್ನು ಎತ್ತಿ ಹಿಡಿಯಿತು.

ಸರ್ಕಾರದ ಆದೇಶ ರದ್ದು ಕೋರಿ ಎನ್.ವಿ.ಚಂದನ್ ಸೇರಿದಂತೆ ಪಿಎಸ್‍ಐ ಆಯ್ಕೆ ಪಟ್ಟಿಯಲ್ಲಿ ಹೆಸರಿದ್ದ 100 ಅಕ ಅಭ್ಯರ್ಥಿಗಳು ಸಲ್ಲಿಸಿರುವ ತಕರಾರು ಅರ್ಜಿಗಳ ವಿಚಾರಣೆಯನ್ನು 2023ರ ಅ.26ರಂದು ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಲಾಗಿತ್ತು. ಮೇಲ್ನೋಟಕ್ಕೆ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಕಂಡುಬಂದಿರುವುದರಿಂದ ರದ್ದುಪಡಿಸಿರುವ ಸರ್ಕಾರದ ಕ್ರಮ ಸರಿಯಾಗಿದೆ ಎಂದು ತೀರ್ಪಿನಲ್ಲಿ ನ್ಯಾಯಾೀಧಿಶರು ಉಲ್ಲೇಖಿಸಿದ್ದಾರೆ.

ಸುಮಾರು 3600ಕ್ಕೂ ಹೆಚ್ಚು ಪುಟಗಳ ದೋಷಾರೋಪ ಪಟ್ಟಿಯಲ್ಲಿ ಈಗಾಗಲೇ ಬಂಧನಕ್ಕೊಳಪಟ್ಟಿರುವ ಆರೋಪಿಗಳಿಂದ ಹೇಳಿಕೆಗಳನ್ನು ಪಡೆಯಲಾಗಿದ್ದು, ಕೆಲವರು ತಪ್ಪು ಒಪ್ಪಿಕೊಂಡಿದ್ದಾರೆ. ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಕಂಡುಬಂದಿರುವುದರಿಂದ ಮುಂದೆ ಸ್ವತಂತ್ರ ಸಂಸ್ಥೆಯಿಂದ ಮರುಪರೀಕ್ಷೆ ನಡೆಸಬೇಕೆಂದು ಆದೇಶ ಮಾಡಿತು.

ಒತ್ತಡಕ್ಕೆ ಮಣಿದು ರಾಜಕೀಯ ನಿವೃತ್ತಿ ಘೋಷಿಸಿಲ್ಲ : ಡಿ.ವಿ.ಸದಾನಂದಗೌಡ

ಪ್ರಕರಣದ ಹಿನ್ನಲೆ: ಪಿಎಸ್‍ಐ ನೇಮಕಾತಿಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರುಪರೀಕ್ಷೆ ನಡೆಸುವುದಾಗಿ 2022ರ ಏ.29ರಂದು ಅಂದಿನ ಬಿಜೆಪಿ ಸರ್ಕಾರ ಆದೇಶಿಸಿತ್ತು. ಇದಕ್ಕೆ ಪಿಎಸ್‍ಐ ಆಗಿ ಆಯ್ಕೆಯಾಗಿದ್ದ ಅಭ್ಯರ್ಥಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ಕಳಂಕಿತ ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ ನೀಡುವಂತೆ ಒತ್ತಾಯಿಸಿದ್ದರು. ಬಳಿಕ ಸರ್ಕಾರದ ಆದೇಶ ರದ್ದು ಕೋರಿ ಆಯ್ಕೆಯಾಗಿದ್ದ ಕೆಲ ಅಭ್ಯರ್ಥಿಗಳು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಗೆ (ಕೆಎಟಿ) ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು 2022ರ ಜು.19ರಂದು ಕೆಎಟಿ ವಜಾಗೊಳಿಸಿತ್ತು. ಇದರಿಂದ ಅಭ್ಯರ್ಥಿಗಳು ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಪಿಎಸ್‍ಐ ನೇಮಕಾತಿಗೆ ಹೊಸದಾಗಿ ಲಿಖಿತ ಪರಿಕ್ಷೆ ನಡೆಸುವ ಸರ್ಕಾರದ ಆದೇಶಕ್ಕೆ 2022ರ ಸೆ.27ರಂದು ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಬಳಿಕ ಆ ತಡೆಯಾಜ್ಞೆ ವಿಸ್ತರಣೆಯಾಗುತ್ತಾ ಬಂದಿದೆ. ವಿಭಾಗೀಯ ಪೀಠವು ಅರ್ಜಿಗಳ ವಿಚಾರಣೆಯನ್ನು 2023ರ ಅ.26ರಂದು ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು.

ಅರ್ಜಿ ಕುರಿತು ಆಗಸ್ಟ್ ತಿಂಗಳಿನಲ್ಲಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಅಕ್ರಮ ನಡೆದ ಹಿನ್ನೆಲೆಯಲ್ಲಿ ಪಿಎಸ್‍ಐ ಮರುಪರೀಕ್ಷೆ ನಡೆಸಬಹುದು ಎಂದು ಮೌಖೀಕವಾಗಿ ಅಭಿಪ್ರಾಯಪಟ್ಟಿತ್ತು. ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಎಡಿಜಿಪಿ ಅಮೃತ್ ಪೌಲ್ ಸೇರಿ ಹಲವರನ್ನು ಸಿಐಡಿ ಬಂಧಿಸಿ ವಿಚಾರಣೆ ನಡೆಸಿತ್ತು. ಜೊತೆಗೆ ಅಕ್ರಮ ಎಸಗಿ ಪರೀಕ್ಷೆಯಲ್ಲಿ ಪಾಸ್ ಆಗಿ ಪಿಎಸ್‍ಐ ಆಗಿ ಆಯ್ಕೆಯಾಗಿದ್ದವರನ್ನು ಮತ್ತು ಅಕ್ರಮಕ್ಕೆ ಸಹಾಯ ಮಾಡಿದ್ದವರನ್ನು ಬಂಧಿಸಲಾಗಿತ್ತು.

ಮರುಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶಿಸಿರುವುದರಿಂದ ಹೊಸದಾಗಿ ಅರ್ಜಿ ಹಾಕಲು ಅವಕಾಶ ಇರುವುದಿಲ್ಲ. ಏಕೆಂದರೆ ಈ ಹಿಂದೆ ಯಾವೆಲ್ಲ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರೋ ಪುನಃ ಅವರೇ ಮರುಪರೀಕ್ಷೆಗೆ ಹಾಜರಾಗಬೇಕು. ಇಡೀ ಅಧಿಸೂಚನೆಯನ್ನೇ ಹಿಂದಿನ ಸರ್ಕಾರ ರದ್ದುಪಡಿಸಿದ್ದರೂ ಹೊಸದಾಗಿ ಮತ್ತೆ ಅಧಿಸೂಚನೆ ಹೊರಡಿಸುವ ಸಾಧ್ಯತೆಗಳಿಲ್ಲ. ಹಿಂದಿನ ಅಧಿಸೂಚನೆಗೆ ಅನುಗುಣವಾಗಿಯೇ ಸ್ವತಂತ್ರ ಸಂಸ್ಥೆಯಿಂದ ಮರುಪರೀಕ್ಷೆಯನ್ನು ನಡೆಸಬೇಕಾಗುತ್ತದೆ.

ಹಿಂದಿನ ಬಿಜೆಪಿ ಸರ್ಕಾರಕ್ಕೆ ಪಿಎಸ್‍ಐ ಹಗರಣ ದೊಡ್ಡ ಕಂಟಕವಾಗಿ ಪರಿಣಮಿಸಿತ್ತು. ಅಂದು ಪ್ರತಿಪಕ್ಷದಲ್ಲಿದ್ದ ಕಾಂಗ್ರೆಸ್ ಇದನ್ನು ದೊಡ್ಡ ಅಸ್ತ್ರವಾಗಿ ಮಾಡಿಕೊಂಡು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಸೇರಿದಂತೆ ಇಡೀ ಸರ್ಕಾರದ ವಿರುದ್ಧ ಮುಗಿಬಿದ್ದಿತ್ತು. ಚುನಾವಣಾ ಪ್ರಚಾರದಲ್ಲಿ ಇದನ್ನೇ ದೊಡ್ಡ ಅಸ್ತ್ರವನ್ನಾಗಿ ಮಾಡಿಕೊಂಡು ಬಿಜೆಪಿಗೆ ಹಣ್ಣುಗಾಯಿ ನೀರುಗಾಯಿ ಮಾಡಿತ್ತು.

ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪಿಎಸ್‍ಐ ಹಗರಣವನ್ನು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದೆ. ಈ ತಿಂಗಳ ಅಂತ್ಯಕ್ಕೆ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವುದಾಗಿ ಅವರು ಹೇಳಿರುವುದರಿಂದ ಯರ ಯಾರ ಕೊರಳಿಗೆ ಉರುಳಾಗಲಿದೆ ಎಂಬುದು ಕುತೂಹಲ ಮೂಡಿಸಿದೆ.

ಉದ್ಯೋಗ ಖಾತ್ರಿ ದಿನಗಳನ್ನು 150ಕ್ಕೆ ಹೆಚ್ಚಿಸಲು ಪ್ರಸ್ತಾವನೆ : ಡಿಸಿಎಂ

ಬೆಂಗಳೂರು, ನ.10- ಬರದ ಹಿನ್ನೆಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನೀಡಲಾಗುತ್ತಿರುವ ಮಾನವ ದಿನಗಳ ಉದ್ಯೋಗವನ್ನು 100ರಿಂದ 150 ದಿನಗಳಿಗೆ ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ, ಅಲ್ಲಿಂದ ಒಪ್ಪಿಗೆ ಸಿಗಬೇಕು, ಇಲ್ಲವಾದರೆ ನಾವೇ ಉದ್ಯೋಗ ದಿನಗಳನ್ನು ಹೆಚ್ಚಿಸುವ ಚಿಂತನೆ ನಡೆಸಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 200ಕ್ಕೂ ಹೆಚ್ಚು ತಾಲ್ಲೂಕುಗಳನ್ನು ಬರ ಭಾದಿತ ಎಂದು ಘೋಷಿಸಲಾಗಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ಮಾನವ ದಿನಗಳ ಉದ್ಯೋಗ 100ದಿನಗಳಿಗೆ ಸೀಮಿತವಾಗಿದೆ. ಅದನ್ನು 150 ದಿನಗಳಿಗೆ ಹೆಚ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಅದಕ್ಕೆ ಕೇಂದ್ರ ಅನುಮತಿ ನೀಡಬೇಕು, ಇಲ್ಲವಾದರೆ ರಾಜ್ಯ ಸರ್ಕಾರವೇ 150 ದಿನಗಳಿಗೆ ಹೆಚ್ಚಿಸಲು ಚಿಂತನೆ ನಡೆಸಿದೆ. ಆದರೆ ಅದಕ್ಕೂ ಮೊದಲು ಕೇಂದ್ರ ಸರ್ಕಾರ ತಮ್ಮಿಂದ ಆಗುವುದಿಲ್ಲ ಎಂದು ಹೇಳಬೇಕು ಎಂದರು.

ಬಿಜೆಪಿ, ಜನತಾದಳಕ್ಕೆ ಈಗ ಅನುಕಂಪ ಬಂದು ಬರ ಅಧ್ಯಯನ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ ಉತ್ತಮ ಅಧ್ಯಯನ ನಡೆಸಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಅದನ್ನು ಕೇಂದ್ರ ಸ್ವೀಕರಿಸಿ, ಅಧಿಕಾರಿಗಳ ತಂಡವನ್ನು ಕಳುಹಿಸಿಕೊಟ್ಟಿತ್ತು. ಕೇಂದ್ರ ತಂಡವೂ ಇಲ್ಲಿ ಅಧ್ಯಯನ ಮಾಡಿ ಹೋಗಿದೆ. ಈಗ ಬಿಜೆಪಿ-ಜೆಡಿಎಸ್‍ನವರು ಕಾಟಾಚಾರಕ್ಕೆ ಹೋಗಿ ಗಿಡ ನೋಡುವುದಲ್ಲ, ನಾವು ಈಗಾಗಲೇ ಗಿಡ ನೋಡಿದ್ದೇವೆ. ಬಿಜೆಪಿಯ 66. ಜೆಡಿಎಸ್‍ನ 19 ಶಾಸಕರು ಹಾಗೂ ಬಿಜೆಪಿಯ 26 ಜನ ಸಂಸದರು ದೆಹಲಿಗೆ ಹೋಗಿ ಕೇಂದ್ರ ಸಚಿವರು, ಪ್ರಧಾನಿಯನ್ನು ಭೇಟಿ ಮಾಡಿ ರಾಜ್ಯಕ್ಕೆ ಪರಿಹಾರ ಕೊಡಿಸಲಿ ಎಂದು ಒತ್ತಾಯಿಸಿದರು.

ಸಂಪೂರ್ಣ ಕಣ್ಣು ಕಸಿ ಮಾಡುವಲ್ಲಿ ಅಮೆರಿಕ ವೈದ್ಯರು ಯಶಸ್ವಿ

ವಿರೋಧ ಪಕ್ಷಗಳು ರಾಜಕಾರಣ ಮಾಡಲಿ ಅಭ್ಯಂತರ ಇಲ್ಲ, ರಾಜ್ಯದ ಹಿತಕ್ಕೆ ಬದ್ಧರಾಗಿದ್ದೇವೆ ಎಂದಾದರೆ ಮೊದಲು ಪರಿಹಾರ ಕೊಡಿಸಿ, ಉದ್ಯೋಗ ಖಾತ್ರಿಯಡಿ 150 ದಿನಗಳನ್ನು ಮಂಜೂರು ಮಾಡಿಸಿ ಎಂದರು. ಬರ ಅಧ್ಯಯನ ನಡೆಸುವವರು ತಮ್ಮಿಂದ ರಾಜ್ಯಕ್ಕೆ ಏನು ಅನುಕೂಲವಾಗಿದೆ ಎಂದು ಆತ್ಮಾವಲೋಕನ ಮಾಡಿಕೊಳ್ಳಲಿ. ನಾವು ಪರಿಹಾರಕ್ಕಾಗಿ ಕೇಂದ್ರದ ಬಲಿ ಭಿಕ್ಷೆ ಬೇಡುತ್ತಿಲ್ಲ. ಕಾನೂನು ಪ್ರಕಾರ ಪರಿಹಾರ ನೀಡುವ ಬದ್ಧತೆ ಕೇಂದ್ರ ಸರ್ಕಾರದ ಮೇಲಿದೆ. ಅದರಂತೆ ಹಣ ಬಿಡುಗಡೆ ಮಾಡಲಿ ಎಂದು ಆಗ್ರಹಿಸಿದ್ದರು.

ರಾಜ್ಯ ಸರ್ಕಾರ 800 ಕೋಟಿ ಹಣ ಒದಗಿಸಿದ್ದು, ಅದನ್ನು ಕುಡಿಯುವ ನೀರು, ಮೇವು ಸರಬರಾಜಿಗೆ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಕೇಂದ್ರ ಸರ್ಕಾರ ಕರ್ನಾಟಕದ ವಿಷಯದಲ್ಲಿ ತಾರತಮ್ಯ ಮಾಡುತ್ತಿದೆ. ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ಜೆಡಿಎಸ್ ಸೇರಿ ಕೇಂದ್ರದ ಮೇಲೆ ಒತ್ತಡ ಹೇರಲಿ ಎಂದರು.

ತೆಲಂಗಾಣದ ವಿಧಾನಸಭೆ ಚುನಾವಣೆಗೆ ರಾಜ್ಯ ಸರ್ಕಾರದ ನಾಲೈದು ಜನ ಸಚಿವರನ್ನು ನಿಯೋಜನೆ ಮಾಡಲಾಗಿದೆ. ಹೆಚ್ಚು ಸಚಿವರನ್ನು ನಿಯೋಜನೆ ಮಾಡಿಲ್ಲ. ಕಂದಾಯ ಸಚಿವರನ್ನು ತೆಲಂಗಾಣ ಚುನಾವಣೆಗೆ ನಿಯೋಜಿಸಲಾಗಿತ್ತು. ರಾಜ್ಯದಲ್ಲಿ ಬರ ಇರುವುದರಿಂದ ಅವರಿಗೆ ವಿನಾಯಿತಿ ನೀಡಲಾಗಿದೆ. 40 ಮಂದಿ ಶಾಸಕರನ್ನು ನಿಯೋಜಿಸಲಾಗಿದೆ. ಅವರಲ್ಲಿ ಅನಾರೋಗ್ಯದ ಕಾರಣಕ್ಕೆ ಎನ್.ವೈ.ಗೋಪಾಲಕೃಷ್ಣ ಸೇರಿ ಮೂರು ನಾಲ್ಕು ಜನ ಹೋಗುತ್ತಿಲ್ಲ. ಉಳಿದ ಎಲ್ಲರೂ ಸಕ್ರಿಯವಾಗಿ ಭಾಗವಹಿಸಲಿದ್ದಾರೆ. ಬಿಜೆಪಿಯವರು ಕೂಡ ಚುನಾವಣೆಗೆ ರಾಜ್ಯದ ನಾಯಕರನ್ನು ನಿಯೋಜನೆ ಮಾಡಿದ್ದರು ಎಂದರು.

ನಾನು ಇಂದು ವಿಜಯವಾಡ ಮೂಲಕ ತೆಲಂಗಾಣಕ್ಕೆ ಹೋಗುತ್ತಿದ್ದೇನೆ. ಮೂರು ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದೇನೆ. ನಾಳೆ ಶ್ರೀಶೈಲ ದೇವಸ್ಥಾನಕ್ಕೆ ಹೋಗಿ ನಾಡಿದ್ದು ವಾಪಾಸ್ ಬರುತ್ತೇನೆ ಎಂದು ಸ್ಪಷ್ಟ ಪಡಿಸಿದರು.

ಹಿಂದುಳಿದ ವರ್ಗಗಳಿಂದ ನಡೆಸಿರುವ ಸಾಮಾಜಿಕ, ಆರ್ಥಿಕ ಸಮೀಕ್ಷೆ ಅವೈಜ್ಞಾನಿಕವಾಗಿದ್ದು, ಮರು ಸಮೀಕ್ಷೆ ನಡೆಸಬೇಕು ಎಂದು ವೀರಶೈವ ಲಿಂಗಾಯಿತ ಮಹಾ ಸಭಾದ ಅಧ್ಯಕ್ಷ ಹಾಗೂ ಕಾಂಗ್ರೆಸ್‍ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನೀಡಿರುವ ಹೇಳಿಕೆ ಕುರಿತು ಬೇರೊಂದು ದಿನ ಚರ್ಚೆ ಮಾಡುವುದಾಗಿ ಹೇಳಿದ ಡಿ.ಕೆ.ಶಿವಕುಮಾರ್, ಸದಸ್ಯಕ್ಕೆ ಬರ ಹಾಗೂ ರಾಜ್ಯದ ಇತರ ಗಂಭೀರ ಸಮಸ್ಯೆಗಳ ಬಗ್ಗೆ ಗಮನ ಹರಿಸುವುದಾಗಿ ತಿಳಿಸಿದರು.

ಕಾಂಗ್ರೆಸ್‍ನಲ್ಲಿ ಯಾವ ಗೊಂದಲವೂ ಇಲ್ಲ. ಶಿವಮೊಗ್ಗ ರಾಜಕಾರಣದ ವಿಷಯವಾಗಿ ಯಾವುದೇ ವಿಚಾರಗಳಿದ್ದರೂ ತಮ್ಮೊಂದಿಗೆ ಚರ್ಚೆ ಮಾಡಬಹುದು, ಅದನ್ನು ಬಿಟ್ಟು ಬೀದಿಯಲ್ಲಿ ಮಾತನಾಡುವುದು ಸರಿಯಲ್ಲ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಎಚ್ಚರಿಕೆ ನೀಡಿದರು.

ಬೆಂಗಳೂರಿನಲ್ಲಿ ಬೀದಿ ಬದಿ ವ್ಯಾಪಾರಿಗಳು ನೋಂದಣಿ ಮಾಡಿಕೊಳ್ಳಬೇಕು, ಅಗಲ ಇರುವ ಪುಟ್‍ಪಾತ್‍ನ ಪಕ್ಕದಲ್ಲಿ ನಿಂತು ವ್ಯಾಪಾರ ಮಾಡಿಕೊಂಡರೆ ಅಭ್ಯಂತರ ಇಲ್ಲ. ರಸ್ತೆಯಲ್ಲೇ ವ್ಯಾಪಾರ ಮಾಡುತ್ತಿದ್ದಾರೆ. ಮಲ್ಲೇಶ್ವರಂ, ಮಡಿವಾಳದಂತಹ ಪ್ರದೇಶಗಳಲ್ಲಿ ಇದರಿಂದ ತೊಂದರೆಯಾಗುತ್ತಿದೆ. ಅಧಿಕಾರಿಗಳು ಫೋಟೋ ವಿಡಿಯೋ ಸಹಿತಿ ನನಗೆ ಮಾಹಿತಿ ನೀಡಿದ್ದಾರೆ. ಹೈಕೋರ್ಟ್ ಸೂಚನೆ ನೀಡಿದೆ, ಅದರ ಆಧಾರದ ಮೇಲೆ ಪಾಲಿಕೆ ಅಧಿಕಾರಿಗಳು ತೆರವು ಮಾಡುತ್ತಿದ್ದಾರೆ. ಇಲ್ಲಿ ಪಕ್ಷಪಾತ ಇಲ್ಲ. ಎಲ್ಲಾ ಕಡೆ ಒಂದೇ ರೀತಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಲೋಕ ಚುನಾವಣೆಗೆ ಬಿಜೆಪಿ ರಣತಂತ್ರ, 12 ಹಾಲಿ ಸಂಸದರಿಗೆ ಕೊಕ್

ಬೀದಿ ಬದಿ ವ್ಯಾಪಾರಿಗಳು ತಮ್ಮನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ. ರಸ್ತೆಯಲ್ಲಿ ವ್ಯಾಪಾರ ಮಾಡುವುದರಿಂದ ಸಂಚಾರಕ್ಕೆ ಅಡಚಣೆಯಾಗುತ್ತಿದೆ, ಅಪಘಾತಗಳಾಗುತ್ತಿವೆ. ರಸ್ತೆ ಬದಿಯಲ್ಲಿ ವ್ಯಾಪಾರ ಮಾಡಲು ನಮ್ಮ ಅಕ್ಷೇಪ ಇಲ್ಲ ಎಂದು ಮನವರಿಕೆ ಮಾಡಿಕೊಟ್ಟಿದ್ದೇನೆ. ಹಿಂದೊಮ್ಮೆ ಅವರೊಂದಿಗೆ ಚರ್ಚೆ ನಡೆಸಿದ್ದೆ, ಮತ್ತೊಮ್ಮೆಯೂ ಚರ್ಚೆ ಮಾಡುತ್ತೇನೆ. ಅವರ ಜೀವನವೂ ನಡೆಯಬೇಕು, ಅವರಿಗೆ 10 ಸಾವಿರ ರೂಪಾಯಿ ಆರ್ಥಿಕ ನೆರವು ನೀಡಲು ನಾವು ಸಿದ್ಧರಿದ್ದೇವೆ ಎಂದರು.

ಬಿಜೆಪಿಯವರು ಆಪರೇಷನ್ ಕಮಲ ಮಾಡುವ ಅವರ ವೃತ್ತಿ ಬಿಡುವುದಿಲ್ಲ. ಸುಮ್ಮನ್ನೆ ನಮ್ಮನ್ನು ಕೆಣಕುತ್ತಾರೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ತೆಲಂಗಾಣದಲ್ಲಿ ಕರ್ನಾಟಕ ಸಿಎಂ, ಡಿಸಿಎಂ, ಸಚಿವರು ಸೇರಿ ಕಾಂಗ್ರೆಸ್ ನಾಯಕರಿಂದ ಮತಬೇಟೆ

ಬೆಂಗಳೂರು, ನ.10- ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಐದು ಮಂದಿ ಸಚಿವರು, ನಲವತ್ತಕ್ಕೂ ಅಧಿಕ ಶಾಸಕರು ಸೇರಿದಂತೆ ನೂರಕ್ಕೂ ಹೆಚ್ಚು ಮಂದಿ ಪ್ರಮುಖ ಕಾಂಗ್ರೆಸಿಗರು ತೆಲಂಗಾಣ ರಾಜ್ಯದ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ.

ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರೊಂದಿಗೆ ವಿಶೇಷ ವಿಮಾನದಲ್ಲಿ ತೆಲಂಗಾಣಕ್ಕೆ ತೆರಳಿದರು. ಡಿ.ಕೆ.ಶಿವಕುಮಾರ್ ಪ್ರತ್ಯೇಕವಾಗಿ ವಿಜಯವಾಡದ ಮೂಲಕ ತೆರಳಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡರು. ಕರ್ನಾಟಕದ ಮಾದರಿಯಲ್ಲಿ ತೆಲಂಗಾಣದಲ್ಲೂ ಗೆಲುವು ಸಾಧಿಸಬೇಕು ಎಂದು ಹಠಕ್ಕೆ ಬಿದ್ದಿರುವ ಕಾಂಗ್ರೆಸ್ ತನ್ನಲ್ಲೆಲ್ಲಾ ಬಲವನ್ನೂ ಕ್ರೋಢಿಕರಿಸಿದೆ.

ಸಂಪೂರ್ಣ ಕಣ್ಣು ಕಸಿ ಮಾಡುವಲ್ಲಿ ಅಮೆರಿಕ ವೈದ್ಯರು ಯಶಸ್ವಿ

ಕೆಪಿಸಿಸಿ ಪದಾಧಿಕಾರಿಗಳು, ಸಚಿವರು, ಶಾಸಕರು ಅಲ್ಲಿನ ಕ್ಷೇತ್ರವಾರು ಉಸ್ತುವಾರಿ ವಹಿಸಿಕೊಂಡು ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದರೂ ಸಚಿವರು, ಶಾಸಕರು ಚುನಾವಣೆಯತ್ತ ಗಮನ ಹರಿಸಿದ್ದಾರೆ ಎಂದು ವಿರೋಧ ಪಕ್ಷಗಳು ಟೀಕಿಸುತ್ತವೆ, ಅದಕ್ಕೆ ತಲೆ ಕೆಡಿಸಿಕೊಳ್ಳದ ಕಾಂಗ್ರೆಸಿಗರು ತೆಲಂಗಾಣ ಚುನಾವಣೆ ಗೆಲ್ಲಲು ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ.