Home Blog Page 1830

ತನ್ನ ನಿಲುವು ಸ್ಪಷ್ಟಪಡಿಸಲು ಭಾರತ ಸ್ವತಂತ್ರವಾಗಿದೆ : ಅಮೆರಿಕ

ವಾಷಿಂಗ್ಟನ್, ನ.9 (ಪಿಟಿಐ) ಅಮೆರಿಕದ ಕಾರ್ಯತಂತ್ರದ ಪಾಲುದಾರನಾಗಿ ಉಳಿದಿರುವ ಭಾರತವು ಮಧ್ಯಪ್ರಾಚ್ಯ ಸೇರಿದಂತೆ ವಿಶ್ವದಾದ್ಯಂತ ಯಾವುದೇ ನಿರ್ದಿಷ್ಟ ಬಿಕ್ಕಟ್ಟು ಅಥವಾ ಆಕಸ್ಮಿಕತೆಯ ಬಗ್ಗೆ ತನ್ನ ನಿಲುವನ್ನು ನಿರ್ಧರಿಸಲು ಸ್ವತಂತ್ರವಾಗಿದೆ ಎಂದು ಶ್ವೇತಭವನ ಹೇಳಿದೆ.

ಮಧ್ಯಪ್ರಾಚ್ಯ ಬಿಕ್ಕಟ್ಟು ಪರಿಹರಿಸುವಲ್ಲಿ ಭಾರತದ ಪಾತ್ರ ಕುರಿತಂತೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಶ್ವೇತಭವನದಲ್ಲಿ ರಾಷ್ಟ್ರೀಯ ಭದ್ರತಾ ಮಂಡಳಿಯ ಕಾರ್ಯತಂತ್ರದ ಸಂವಹನಗಳ ಸಂಯೋಜಕ ಜಾನ್ ಕಿರ್ಬಿ ಅವರು ಈ ಹೇಳಿಕೆ ನೀಡಿದ್ದಾರೆ.

ಹಮಾಸ್ ಬಂದೂಕುಧಾರಿಗಳು ಅಕ್ಟೋಬರ್ 7 ರಂದು ಗಾಜಾ ಪಟ್ಟಿಯಿಂದ ಇಸ್ರೇಲ್ ಮೇಲೆ ಅಭೂತಪೂರ್ವ ದಾಳಿಯನ್ನು ಪ್ರಾರಂಭಿಸಿದರು, 1,400 ಕ್ಕೂ ಹೆಚ್ಚು ಜನರನ್ನು ಕೊಂದರು ಮತ್ತು 200 ಕ್ಕೂ ಹೆಚ್ಚು ಒತ್ತೆಯಾಳುಗಳನ್ನು ತೆಗೆದುಕೊಂಡರು. ಅಂದಿನಿಂದ ಇಸ್ರೇಲ್ ಪ್ರತಿಯಾಗಿ ಗಾಜಾ ಮೇಲೆ ದಾಳಿಗಳನ್ನು ನಡೆಸುತ್ತಿದೆ ಮತ್ತು ಈಗ ನೆಲದ ಆಕ್ರಮಣವನ್ನು ಪ್ರಾರಂಭಿಸಿದೆ. ಹಮಾಸ್ ನಡೆಸುತ್ತಿರುವ ಆರೋಗ್ಯ ಸಚಿವಾಲಯದ ಪ್ರಕಾರ ಗಾಜಾದಲ್ಲಿ 10,500 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಐಸಿಸಿ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ನಂಬರ್ 1 ಸ್ಥಾನಕ್ಕೇರಿದ ಗಿಲ್, ಸಿರಾಜ್

ಮೋದಿ ಅವರ ಅಮೆರಿಕ ಪ್ರವಾಸವನ್ನು ಉಲ್ಲೇಖಿಸಿ ಮಾತನಾಡಿದ ಅವರು, ಭಾರತವು ಪ್ರಮುಖ ಕಾರ್ಯತಂತ್ರದ ಪಾಲುದಾರ, ಮತ್ತು ಮೋದಿ ಇಲ್ಲಿದ್ದಾಗ ನೀವು ಅದನ್ನು ಸಂಪೂರ್ಣ ಪ್ರದರ್ಶನದಲ್ಲಿ ನೋಡಿದ್ದೀರಿ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

ಆದರೆ ಮಧ್ಯಪ್ರಾಚ್ಯವನ್ನು ಸೇರಿಸಲು ಪ್ರಪಂಚದಾದ್ಯಂತ ಯಾವುದೇ ನಿರ್ದಿಷ್ಟ ಬಿಕ್ಕಟ್ಟು ಅಥವಾ ಆಕಸ್ಮಿಕವಾಗಿ ಅವರ ನಿಲುವು ಏನಾಗಲಿದೆ ಎಂಬುದನ್ನು ನಿರ್ಧರಿಸಲು ನಾವು ಅದನ್ನು ಭಾರತ ಸರ್ಕಾರ ಮತ್ತು ಪ್ರಧಾನ ಮಂತ್ರಿಗಳಿಗೆ ಬಿಡುತ್ತೇವೆ ಎಂದು ಕಿರ್ಬಿ ಹೇಳಿದರು.

ಅಕ್ಟೋಬರ್ 7 ರಂದು ಇಸ್ರೇಲಿ ನಗರಗಳ ಮೇಲೆ ಹಮಾಸ್‍ನ ಬಹು-ಹಂತದ ದಾಳಿಯನ್ನು ಭಯೋತ್ಪಾದಕ ದಾಳಿ ಎಂದು ಭಾರತ ವಿವರಿಸಿದೆ ಆದರೆ ಅದೇ ಸಮಯದಲ್ಲಿ ಇಸ್ರೇಲ್‍ನ ಪ್ರತಿದಾಳಿಯ ದೃಷ್ಟಿಯಿಂದ ಗಾಜಾದಲ್ಲಿ ನಾಗರಿಕರ ಸಾವುನೋವುಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ನಂತರ ಅಂತರರಾಷ್ಟ್ರೀಯ ಮಾನವೀಯ ಕಾನೂನನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕರೆ ನೀಡಿದೆ.

ಅಮೆರಿಕದಲ್ಲಿ ಇರಿತಕ್ಕೊಳಗಾಗಿದ್ದ ಭಾರತೀಯ ವಿದ್ಯಾರ್ಥಿ ವರಣ್ ಸಾವು

ವಾಷಿಂಗ್ಟನ್, ನ.9 (ಪಿಟಿಐ) – ಅಮೆರಿಕದ ಇಂಡಿಯಾನಾ ರಾಜ್ಯದ ಫಿಟ್‍ನೆಸ್ ಸೆಂಟರ್‌ನಲ್ಲಿ ಇರಿತಕ್ಕೊಳಗಾದ 24 ವರ್ಷದ ಭಾರತೀಯ ವಿದ್ಯಾರ್ಥಿ ವರುಣ್ ರಾಜ್ ಪುಚಾ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಅವರು ಓದುತ್ತಿದ್ದ ವಿಶ್ವವಿದ್ಯಾಲಯ ತಿಳಿಸಿದೆ.

ವಾಲ್ಪಾರೈಸೊ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿ ವರುಣ್ ಕಳೆದ ಅಕ್ಟೋಬರ್ 29 ರಂದು ಸಾರ್ವಜನಿಕ ಜಿಮ್‍ನಲ್ಲಿ ದುಷ್ಕರ್ಮಿ ಜೋರ್ಡಾನ್ ಆಂಡ್ರೇಡ್ (24) ಎಂಬಾತ ಚಾಕುವಿನಿಂದ ತಲೆಗೆ ಇರಿದಿದ್ದ ಎನ್ನಲಾಗಿದೆ.

ಐಸಿಸಿ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ನಂಬರ್ 1 ಸ್ಥಾನಕ್ಕೇರಿದ ಗಿಲ್, ಸಿರಾಜ್

ವರುಣ್ ರಾಜ್ ಪುಚ್ಚಾ ಅವರ ಅಗಲಿಕೆಯನ್ನು ನಾವು ಭಾರವಾದ ಹೃದಯದಿಂದ ಹಂಚಿಕೊಳ್ಳುತ್ತೇವೆ. ನಮ್ಮ ಕ್ಯಾಂಪಸ್ ಸಮುದಾಯವು ತನ್ನದೇ ಆದ ಒಂದನ್ನು ಕಳೆದುಕೊಂಡಂತಾಗಿದೆ ಎಂದು ಕಾಗೋ ಬಳಿಯ ವಾಲ್‍ಪಾರೈಸೊದಲ್ಲಿರುವ ಖಾಸಗಿ ವಿಶ್ವವಿದ್ಯಾಲಯ ವಲ್ಪರೈಸೊ ವಿಶ್ವವಿದ್ಯಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಘಟನೆಯ ನಂತರ, ದಾಳಿಕೋರನನ್ನು ಬಂಧಿಸಲಾಯಿತು ಮತ್ತು ಮಾರಕ ಆಯುಧದಿಂದ ಬ್ಯಾಟರಿಯನ್ನು ಉಲ್ಬಣಗೊಳಿಸಿರುವ ಮತ್ತು ಕೊಲೆ ಯತ್ನದ ಆರೋಪವನ್ನು ಎದುರಿಸುತ್ತಿದ್ದಾರೆ.

ವಿಶ್ವವಿದ್ಯಾನಿಲಯವು ವರುಣ್ ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದೆ ಮತ್ತು ಅವರು ಈ ಅತ್ಯಂತ ಕಷ್ಟಕರ ಸಮಯದಲ್ಲಿ ನ್ಯಾವಿಗೇಟ್ ಮಾಡಲು ಸಾಧ್ಯವಿರುವ ನಾವು ಸಹಾಯ ಮತ್ತು ಬೆಂಬಲವನ್ನು ನೀಡುವುದನ್ನು ಮುಂದುವರಿಸುತ್ತೇವೆ. ನಿಮ್ಮ ಆಲೋಚನೆಗಳು ಮತ್ತು ಪ್ರಾರ್ಥನೆಗಳಲ್ಲಿ ಅವರನ್ನು ಇರಿಸಿಕೊಳ್ಳಲು ನೀವು ನಮ್ಮೊಂದಿಗೆ ಸೇರಬೇಕೆಂದು ನಾವು ಕೇಳುತ್ತೇವೆ, ವಿಶ್ವವಿದ್ಯಾಲಯವು ಹೇಳಿದೆ.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (09-11-2023)

ನಿತ್ಯ ನೀತಿ : ಆದಾಯ ಎನ್ನುವುದು ಒಂದು ಪಾದರಕ್ಷೆ ಇದ್ದಂತೆ… ಚಿಕ್ಕದಾದರೆ ಕಚ್ಚುತ್ತದೆ.. ದೊಡ್ಡದಾದರೆ ಹೆಜ್ಜೆ ತಪ್ಪುತ್ತದೆ..!

ಪಂಚಾಂಗ ಗುರುವಾರ 09-11-2023
ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಆಶ್ವಯುಜ ಮಾಸ / ಕೃಷ್ಣ ಪಕ್ಷ / ತಿಥಿ: ಏಕಾದಶಿ / ನಕ್ಷತ್ರ: ಉತ್ತರಾ / ಯೋಗ: ವೈಧೃತಿ / ಕರಣ: ಕೌಲವ

ಸೂರ್ಯೋದಯ : ಬೆ.06.16
ಸೂರ್ಯಾಸ್ತ : 05.51
ರಾಹುಕಾಲ : 1.30-3.00
ಯಮಗಂಡ ಕಾಲ : 6.00-7.30
ಗುಳಿಕ ಕಾಲ : 9.00-10.30

ರಾಶಿ ಭವಿಷ್ಯ
ಮೇಷ
: ಪೋಷಕರ ಸೇವೆಯನ್ನು ಆಸಕ್ತಿ ವಹಿಸಿ ಮಾಡುವುದರಿಂದ ತೊಂದರೆಗಳಿಂದ ಮುಕ್ತರಾಗುವಿರಿ.
ವೃಷಭ: ಹೊಸ ಉದ್ಯೋಗ ಹುಡುಕುತ್ತಿದ್ದವರಿಗೆ ಉತ್ತಮ ಅವಕಾಶಗಳು ಸಿಗುವ ಸಾಧ್ಯತೆ ಇದೆ.
ಮಿಥುನ: ಪಿತ್ರಾರ್ಜಿತ ಆಸ್ತಿಯಿಂದ ಉತ್ತಮ ಲಾಭ ದೊರೆಯಲಿದೆ. ಮಕ್ಕಳಿಂದ ಸಂತೋಷ ಸಿಗಲಿದೆ.

ಕಟಕ: ವಾಹನಗಳು ಮತ್ತು ಯಂತ್ರೋಪಕರಣ ಗಳಿಂದ ಗಾಯವಾಗುವ ಸಂಭವವಿದೆ, ಎಚ್ಚರವಿರಲಿ.
ಸಿಂಹ: ಇಲ್ಲಸಲ್ಲದ ವಿಚಾರ ಗಳಿಗೆ ಕಿವಿಗೊಟ್ಟು ಮನಸ್ಸಿನ ನೆಮ್ಮದಿ ಹಾಳುಕೊಳ್ಳಬೇಡಿ.
ಕನ್ಯಾ: ಆರ್ಥಿಕ ನಷ್ಟ ಉಂಟಾಗಬಹುದು. ಗೌರವಕ್ಕೆ ಧಕ್ಕೆಯಾಗಲಿದೆ.

ತುಲಾ: ವಿನಾಕಾರಣ ವಿವಾದಗಳಲ್ಲಿ ಸಿಲುಕುವ ಸಾಧ್ಯತೆಗಳಿವೆ.
ವೃಶ್ಚಿಕ: ಒಡಹುಟ್ಟಿದವರಿಂದ ದೂರವಾಗಿದ್ದರೆ ಅವರೊಂದಿಗೆ ಮಾತನಾಡುವ ಮೂಲಕ ಪರಿಸ್ಥಿತಿ ತಿಳಿಗೊಳಿಸಿ.
ಧನುಸ್ಸು: ದಾಂಪತ್ಯ ಜೀವನದಲ್ಲಿ ಭಿನ್ನಾಭಿಪ್ರಾಯ ಗಳು ದೂರವಾಗಿ ಉತ್ತಮ ಬದಲಾವಣೆಗಳಾಗಲಿವೆ.

ಮಕರ: ಹಣ ಸುಲಭವಾಗಿ ದೊರೆಯುತ್ತದೆ ಎಂಬ ಕಾರಣಕ್ಕೆ ಬೇಕಾಬಿಟ್ಟಿ ಖರ್ಚು ಮಾಡದಿರಿ
ಕುಂಭ: ಹಣದ ಕೊರತೆ ಇರುವುದಿಲ್ಲ. ಹಿಂದೆ ಮಾಡಿದ್ದ ಸಾಲವನ್ನು ಸಹ ತೀರಿಸುವಿರಿ.
ಮೀನ: ಉದ್ಯೋಗಸ್ಥರಿಗೆ ವಿಶೇಷ ಲಾಭದ ಅವಕಾಶಗಳು ಸಿಗಲಿವೆ. ಉತ್ತಮವಾದ ದಿನ.

ಐಸಿಸಿ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ನಂಬರ್ 1 ಸ್ಥಾನಕ್ಕೇರಿದ ಗಿಲ್, ಸಿರಾಜ್

ಬೆಂಗಳೂರು, ನ. 8 – ಐಸಿಸಿ ಪ್ರಕಟಿಸಿರುವ ನೂತನ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಯಂಗ್ ಓಪನರ್ ಶುಭಮನ್ ಹಾಗೂ ಯುವ ವೇಗಿ ಮೊಹಮ್ಮದ್ ಸಿರಾಜ್ ಅವರು ನಂಬರ್ 1 ಬ್ಯಾಟರ್ ಹಾಗೂ ಬೌಲರ್ ಆಗಿ ಹೊರಹೊಮ್ಮಿದ್ದಾರೆ.

ಎಂ.ಎಸ್.ಧೋನಿ ತಮ್ಮ 31 ಒಡಿಐ ಇನಿಂಗ್ಸ್‍ನಲ್ಲೇ ನಂಬರ್ 1 ಶ್ರೇಯಾಂಕ ಪಟ್ಟಿ ಅಲಂಕರಿಸಿದ್ದರೆ, ಶುಭಮನ್ ಗಿಲ್ 41 ಇನಿಂಗ್ಸ್ ನಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ವಿಶ್ವಕಪ್‍ನಲ್ಲಿ ಉತ್ತಮ ಪ್ರದರ್ಶನ ತೋರುತ್ತಿರುವ ಗಿಲ್ 830 ರೇಟಿಂಗ್ ಅಂಕಗಳೊಂದಿಗೆ ಪಾಕಿಸ್ತಾನ ನಾಯಕ ಬಾಬರ್ ಅಝಮ್ (824)ರನ್ನು ಹಿಂದಿಕ್ಕಿ ಟಾಪ್ 1 ಬ್ಯಾಟ್ಸ್ ಮನ್ ಪಟ್ಟ ಅಲಂಕರಿಸಿದ್ದಾರೆ.

ಅಡ್ವಾಣಿ ಹುಟ್ಟುಹಬ್ಬಕ್ಕೆ ಮೋದಿ, ಶಾ ಸೇರಿ ಗಣ್ಯರಿಂದ ಶುಭಾಶಯ

ಪ್ರಸಕ್ತ ವಿಶ್ವಕಪ್‍ನಲ್ಲಿ ಬಾಂಗ್ಲಾದೇಶ (53 ರನ್) ಹಾಗೂ ಶ್ರೀಲಂಕಾ (95 ರನ್) ವಿರುದ್ಧದ ಪಂದ್ಯಗಳಲ್ಲಿ ಗಿಲ್ ಅರ್ಧಶತಕ ಸಿಡಿಸಿದ ಪ್ರದರ್ಶನ ಅವರಿಗೆ ನಂಬರ್ 1 ಸ್ಥಾನ ತಂದುಕೊಟ್ಟಿದೆ.

ಸಿರಾಜ್ ನಂ.1 ಬೌಲರ್:
ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಪ್ರಮುಖ 3 ವಿಕೆಟ್ ಕಬಳಿಸಿದ ಮೊಹಮ್ಮದ್ ಸಿರಾಜ್ ಪಾಕಿಸ್ತಾನದ ವೇಗಿ ಶಾಹೀನ್ ಶಾ ಅಫ್ರಿದಿಯನ್ನು ಹಿಂದಿಕ್ಕುವ ಮೂಲಕ ವಿಶ್ವದ ನಂಬರ್ 1 ಬೌಲರ್ ಆಗಿ ರೂಪುಗೊಂಡಿದ್ದಾರೆ. ಅಫ್ರಿದಿ 5ನೇ ಸ್ಥಾನಕ್ಕೆ ಕುಸಿದಿದ್ದರೆ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಶಮಿ ಟಾಪ್ 10ರಲ್ಲಿ ಗುರುತಿಸಿಕೊಂಡಿದ್ದಾರೆ.

ಬಿಬಿಎಂಪಿಯಲ್ಲಿ 10 ಸಾವಿರ ಕೋಟಿ ರೂ. ಅವ್ಯವಹಾರ: ಪ್ರಧಾನಿಗೆ ದೂರು ಸಲ್ಲಿಕೆ

ಬೆಂಗಳೂರು, ನ.8- ಬಿಬಿಎಂಪಿ ಯಲ್ಲಿ ನಡೆದಿದೆ ಎನ್ನಲಾದ 10 ಸಾವಿರ ಕೋಟಿ ರೂ.ಗಳ ಬಿಗ್ ಸ್ಕ್ಯಾಮ್ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ದೂರು ನೀಡಲಾಗಿದೆ. ಬಿಬಿಎಂಪಿಯಲ್ಲಿ ಅಧಿಕಾರಿಗಳು ಬ್ರಹ್ಮಾಂಡ ಭ್ರಷ್ಟಾಚಾರ ನಡೆಸುತ್ತಿ ದ್ದಾರೆ ಆದರೂ ಸಂಬಂಧಪಟ್ಟವರು ಅವರ ಮೇಲೆ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರುವುದರಿಂದ ಈ ವಿಚಾರದಲ್ಲಿ ಮೋದಿ ಅವರು ಮಧ್ಯ ಪ್ರವೇಶಿಸಬೇಕು ಎಂದು ಆಗ್ರಹಿಸಿ ಮಾಹಿತಿ ಹಕ್ಕು ಅಧ್ಯಯನ ಕೇಂದ್ರದ ವೀರೇಶ್ ಎಂಬುವರು ಪ್ರಧಾನಿ ಕಾರ್ಯಲಯಕ್ಕೆ ಪತ್ರ ಬರೆದಿದ್ದಾರೆ.

ಅಡ್ವಾಣಿ ಹುಟ್ಟುಹಬ್ಬಕ್ಕೆ ಮೋದಿ, ಶಾ ಸೇರಿ ಗಣ್ಯರಿಂದ ಶುಭಾಶಯ

ಬೆಂಗಳೂರಿನಲ್ಲಿ ರಾಜಕಾಲುವೆ ನಿರ್ವಹಣೆ ನೆಪದಲ್ಲಿ ಹಣ ದುರು ಪಯೋಗದ ಮೆಗಾ ಸ್ಕ್ಯಾಮ್ ಬಗ್ಗೆ ಮೋದಿಯಂಗಳಕ್ಕೆ ದೂರು ಸಲ್ಲಿಸಲಾಗಿದೆ. ಕಳೆದ 10 ವರ್ಷ ದಿಂದ ಬಿಬಿಎಂಪಿಯಲ್ಲಿ ರಾಜ ಕಾಲುವೆ ದುರಸ್ತಿ, ನಿರ್ವಹಣೆ ಹೆಸರಲ್ಲಿ 10 ಸಾವಿರ ಕೋಟಿ ರೂ.ಗಳನ್ನು ದುರುಪಯೋಗಪಡಿಸಿಕೊಂಡಿರುವ ಬಗ್ಗೆ ಪ್ರಧಾನಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ವೀರೇಶ್ ತಿಳಿಸಿದ್ದಾರೆ.

ಹತ್ತು ಸಾವಿರ ಕೋಟಿ ಹಣ ವಿನಿಯೋಗ ಮಾಡಿ ಅಭಿವೃದ್ಧಿ ಕಾರ್ಯ ನಡೆಸಿದ್ದರೆ ಒಂದು ಸಣ್ಣ ಮಳೆಗೆ ನಗರ ಅಧ್ವಾನಾವಾಗುವುದು ಏಕೆ ಎಂದು ಅವರು ಪ್ರಶ್ನಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರಾಜಕಾಲುವೆ ನಿರ್ವಹಣೆಗಾಗಿ ಕೋಟಿ ಕೋಟಿ ಹಣ ಮೀಸಲಿಡುತ್ತವೆ ಆದರೆ, ಹಣ ವಿನಿಯೋಗವಾಗುತ್ತಿಲ್ಲ ಬಿಬಿಎಂಪಿಯ ಈ ಕರ್ಮಕಾಂಡದ ಬಗ್ಗೆ ಈಗಾಗಲೇ ಸಿಎಜಿ ರಿಪೋರ್ಟ್ ನಲ್ಲಿಯೂ ಬಹಿರಂಗಗೊಂಡಿದೆ ಎಂದು ಅವರು ಮಾಹಿತಿ ನೀಡಿದರು.

ಸಾವಿರಾರು ಕೋಟಿ ರೂ.ಗಳ ಈ ಹಗರಣವನ್ನು ಗಂಭೀರವಾಗಿ ಪರಿಗಣಿಸಿ ಕೇಂದ್ರ ಸರ್ಕಾರ ಇಡಿ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ದೂರಿನಲ್ಲಿ ಮನವಿ ಮಾಡಿಕೊಂಡಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ. ಬಿಬಿಎಂಪಿಯಲ್ಲಿ ನಡೆಯುತ್ತಿ ರುವ ಕಾಮಗಾರಿಗಳ ಬಗ್ಗೆ ವಿಶೇಷ ತನಿಖಾ ಸಂಸ್ಥೆ ನಿಯೋಜನೆ ಮಾಡಲಾಗಿದೆ. ಸಾರ್ವಜನಿಕರು ಎಸ್‍ಐಟಿ ಅಕಾರಿಗಳಿಗೆ ದೂರು ನೀಡಬಹುದು ಆದರೂ ಕೆಲವರು ಪ್ರಧಾನ ಮಂತ್ರಿಗಳಿಗೆ ದೂರು ನೀಡಿದ್ದಾರೆ.

ಅವರು ಏನು ದೂರು ನೀಡಿದ್ದಾರೆ ಎನ್ನುವುದು ನಮಗೆ ತಿಳಿದಿಲ್ಲ. ಪ್ರಧಾನಿ ಕಾರ್ಯಲಯದಿಂದ ಬರುವ ಆದೇಶದಂತೆ ಮುಂದಿನ ಕ್ರಮ ವಹಿಸಲಿದ್ದೇವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಜನವರಿ 2ನೇ ವಾರದಲ್ಲಿ ಲೋಕಸಭೆ ಚುನಾವಣೆಗೆ ಕೈ ಅಭ್ಯರ್ಥಿಗಳ ಘೋಷಣೆ

ಬೆಂಗಳೂರು, ನ.8- ಲೋಕಸಭೆ ಚುನಾವಣೆಗೆ ಮುಂದಿನ ವರ್ಷದ ಜನವರಿ 2ನೇ ವಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆಯಾಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲಿಂ ಅಹ್ಮದ್ ತಿಳಿಸಿದ್ದಾರೆ.ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲಾ ಜಿಲ್ಲೆಗಳಿಗೆ ಸಚಿವರುಗಳನ್ನು ನಿಯೋಜನೆ ಮಾಡಲಾಗಿದ್ದು, ಶೇ.75ರಷ್ಟು ಸಚಿವರು ಜಿಲ್ಲೆಗಳಲ್ಲಿ ಸಭೆ ಮಾಡಿದ್ದಾರೆ.

ಮುಂದಿನ ಒಂದು ವಾರಗಳಲ್ಲಿ ಮಂತ್ರಿಗಳು ಹಾಗೂ ವೀಕ್ಷಕರುಗಳು ಲೋಕಸಭೆ ಚುನಾವಣೆಯ ಸಂಭಾವ್ಯ ಅಭ್ಯರ್ಥಿ ಕುರಿತು ವರದಿ ಸಲ್ಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷರು ಸೂಚನೆ ನೀಡಿದ್ದಾರೆ. ನಂತರ ಕೆಪಿಸಿಸಿ ಅಧ್ಯಕ್ಷರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಉಸ್ತುವಾರಿ ಸಚಿವರಾದ ರಣದೀಪ್ ಸಿಂಗ್ ಸುರ್ಜೆವಾಲ ಅವರು ಚರ್ಚೆ ಮಾಡಿ ನಂತರ ನಮ್ಮ ಹೈಕಮಾಂಡ್ ಗೆ ವರದಿ ಸಲ್ಲಿಸಲಿದ್ದಾರೆ ಎಂದರು.

ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ನಾವು ಲೋಕಸಭೆ ಚುನಾವಣೆ ತಯಾರಿ ಮಾಡಿದ್ದೇವೆ. ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ನಮ್ಮ ನಾಲ್ಕು ಗ್ಯಾರಂಟಿ ಯೋಜನೆಗಳು ಜಾರಿ ಆಗಿದ್ದು, ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ನಮ್ಮ ಸರ್ಕಾರ ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿ ರೂಪಿಸುತ್ತಿದೆ. ಹೀಗಾಗಿ ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡುವ ವಿಶ್ವಾಸವಿದೆ. ನಮ್ಮ ಪಕ್ಷ ಕನಿಷ್ಠ 20 ಸೀಟುಗಳನ್ನು ರಾಜ್ಯದಲ್ಲಿ ಗೆದ್ದು, ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ವಹಣೆಗೆ 17,900 ಕೋಟಿ ಹಣವನ್ನು ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದರೂ ಇದುವರೆಗೂ ಕೇಂದ್ರದಿಂದ ಸ್ಪಂದನೆ ಸಿಗದಿರುವುದು ದುರದೈವ. ರಾಜ್ಯದಿಂದ 25 ಬಿಜೆಪಿ ಸಂಸದರು ಆಯ್ಕೆಯಾಗಿದ್ದರೂ ಹಾಗೂ 5 ಜನ ಕೇಂದ್ರ ಸಚಿವರಿದ್ದು ಇಲ್ಲಿಯವರೆಗೂ ಹಣ ಬಿಡುಗಡೆ ಮಾಡಿಲ್ಲ. ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರು ರಾಜ್ಯದವರೇ ಆಗಿದ್ದರೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ ಎಂಬ ಕಾರಣಕ್ಕೆ ಮಲತಾಯಿ ಧೋರಣೆ ತೋರುತ್ತಿದೆ. ಈ ವಿಚಾರದಲ್ಲಿ ರಾಜಕಾರಣ ಮಾಡದೇ ಪರಿಹಾರ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.

ನವೆಂಬರ್ 9ರಂದು ಅರಮನೆ ಮೈದಾನದಲ್ಲಿ ಸೇವಾದಳದ ಶತಮಾನೋತ್ಸವ ಹಾಗೂ ರಾಜ್ಯ ಮಟ್ಟದ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ರಾಷ್ಟ್ರೀಯ ಸೇವಾದಳದ ಅಧ್ಯಕ್ಷರಾದ ಲಾಲ್ ಜಿ ಅವರು ಧ್ವಜಾರೋಹಣ ಮಾಡಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ವಹಿಸಿಕೊಳ್ಳಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ. ಸಚಿವರುಗಳು ಪಕ್ಷದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ ಎಂದರು.

ಮದುವೆ ದಿನವೇ ಪ್ರೇಯಸಿಗೆ ಕೈಕೊಟ್ಟು ಪ್ರಿಯಕರ ಪರಾರಿ

ಇದೇ ತಿಂಗಳ 28ರಂದು ಸೇವಾದಳ ನೂರು ವರ್ಷಗಳನ್ನು ಪೂರೈಸಲಿದ್ದು, ಈ ಹಿನ್ನೆಲೆಯಲ್ಲಿ ದೇಶದ ಎಲ್ಲಾ ರಾಜ್ಯಗಳಲ್ಲೂ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಆಮೂಲಕ ಸೇವಾದಳದ ಇತಿಹಾಸದ ಬಗ್ಗೆ ದೇಶಕ್ಕೆ ಸಂದೇಶ ರವಾನಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಸೇವಾದಳದ 3 ಸಾವಿರ ಪ್ರತಿನಿಗಳು ಭಾಗವಹಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಸೇವಾದಳ ಯಾವ ರೀತಿ ಕೆಲಸ ಮಾಡಬೇಕು, ಲೋಕಸಭೆ ಚುನಾವಣೆ ಹಾಗೂ ಪಕ್ಷ ಸಂಘಟನೆ ಮಾಡಬೇಕು ಎಂದು ಈ ಕಾರ್ಯಕ್ರಮದಲ್ಲಿ ಚರ್ಚೆಯಾಗಲಿದೆ.

ಸೇವಾದಳದ ಅಧ್ಯಕ್ಷರಾದ ರಾಮಚಂದ್ರಪ್ಪ ಮಾತನಾಡಿ, 1923ರಲ್ಲಿ ಸೇವಾದಳ ಸ್ಥಾಪನೆಯಾಗಿದ್ದು, ಹರ್ಡಿಕರ್ ಅವರು ಜೈಲಿನಲ್ಲಿ ಈ ಸಂಘಟನೆ ಆರಂಭಿಸಿದರು. ಆರಂಭದಲ್ಲಿ ಹಿಂದುಸ್ಥಾನಿ ಸೇವಾದಳ ಎಂದು ಸ್ಥಾಪನೆಯಾಗಿತ್ತು. ನಂತರ 1930-31ರಲ್ಲಿ ಗಾಂಜಿ, ನೆಹರೂ ಸೇರಿದಂತೆ ಅನೇಕ ನಾಯಕರು ಸೇವಾದಳವನ್ನು ಕಾಂಗ್ರೆಸ್ ಗೆ ವಿಲೀನ ಮಾಡುತ್ತಾರೆ. ಅಲ್ಲಿಂದ ಇಲ್ಲಿಯವರೆಗೂ ಸೇವಾದಳ ಕಾಂಗ್ರೆಸ್ ವಿಭಾಗವಾಗಿ ಸಂಘಟನೆ ಮಾಡಿಕೊಂಡು ಬಂದಿದೆ ಎಂದರು.

ಬ್ರಿಟೀಷರ ಹಿಂಸೆ ತಾಳಲಾರದೆ ಹುಟ್ಟುಕೊಂಡ ಸಂಘಟನೆ ಇದಾಗಿದೆ. ಸ್ವಾತಂತ್ರ್ಯ ಪೂರ್ವದಿಂದ ಇಲ್ಲಿಯವರೆಗೂ ಸೇವಾದಳ ಬೆಳೆದುಕೊಂಡು ಬಂದಿದೆ. ನಾನು ಇದರ ಅಧ್ಯಕ್ಷನಾಗಿ 2 ವರ್ಷಗಳಾಗಿದ್ದು, ಈ ಅವಯಲ್ಲಿ ರಾಜ್ಯಮಟ್ಟದ ಜಿಲ್ಲಾಮಟ್ಟದ ಪದಾಕಾರಿಗಳ ನೇಮಕ ಮಾಡಿ ಈ ಕಾರ್ಯಕ್ರಮವನ್ನು ದೊಡ್ಡ ಮಟ್ಟದಲ್ಲಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಜೆಡಿಎಸ್ ಬಿಟ್ಟು ಹೋಗುವವ ಶಾಸಕರು ಯಾರೂ ಇಲ್ಲ : ಹೆಚ್ಡಿಕೆ

ಹಾಸನ, ನ.8- ಕಾಂಗ್ರೆಸ್ ಪಕ್ಷದ ಆಮಿಷಗಳಿಗೆ ಒಳಗಾಗಿ ಜೆಡಿಎಸ್ ಬಿಟ್ಟು ಹೋಗುವ ಶಾಸಕರು ಯಾರೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ಜೆಡಿಎಸ್ ಶಾಸಕರೊಂದಿಗೆ ಹಾಸನಾಂಬೆ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಶಾಸಕರ ಬಗ್ಗೆ ಅನುಮಾನ ಪಡುವ ಪರಿಸ್ಥಿತಿಯಿಲ್ಲ. ಎಲ್ಲರೂ ಒಂದು ಕುಟುಂಬದ ಸದಸ್ಯರಂತೆ ಇದ್ದೇವೆ. ಪಕ್ಷದಲ್ಲಿ ಅಸಮಾಧಾನಗೊಂಡು ಬಿಟ್ಟು ಹೋಗುವವರು ಯಾರೂ ಇಲ್ಲ. ಆದರೂ ಕಾಂಗ್ರೆಸ್‍ನವರು ವಿನಾಕಾರಣ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆಂದು ಆರೋಪಿಸಿದರು.

ಪದೇಪದೇ ಕಾಂಗ್ರೆಸ್‍ನವರು ಇಂತಹ ಗೊಂದಲದ ಸುದ್ದಿಯನ್ನು ಹರಡುತ್ತಿದ್ದಾರೆ ಇದಕ್ಕೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ . ಎಲ್ಲರೂ ಒಗ್ಗಟ್ಟಾಗಿದ್ದೇವೆ. ಗೊಂದಲಗಳಿಗೆ ತೆರೆ ಎಳೆಯುವ ಉದ್ದೇಶದಿಂದಲೇ ಸಭೆ ನಡೆಸಿ ಶಾಸಕರ ಅಭಿಪ್ರಾಯಗಳನ್ನು ಪಡೆಯಲಾಗಿದೆ ಎಂದರು.

ರಾಜ್ಯಕ್ಕಾಗಿರುವ ಅನ್ಯಾಯ ಸರಿ ಪಡಿಸಲು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲಾಗಿದೆ. ರಾಜ್ಯದ ಹಿತಕ್ಕಾಗಿ ಹೊಂದಾಣಿಕೆ ಹೊರತು ಬೇರೆನೂ ಇಲ್ಲ. ಈ ಹೊಂದಾಣಿಕೆ ಅಧಿಕಾರ, ಚುನಾವಣೆಗೆ ಮಾತ್ರ ಸೀಮಿತವಾಗಿಲ್ಲ ಎಂದು ಹೇಳಿದರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಎಷ್ಟು ಸೀಟು ಗಳಿಸಲಿದೆ ಎಂಬುದು ಮುಖ್ಯವಲ್ಲ. ಜೆಡಿಎಸ್, ಬಿಜೆಪಿ ಸೇರಿ ರಾಜ್ಯದ 28 ಲೋಕಸಭಾ ಕ್ಷೇತ್ರವನ್ನು ಗೆಲ್ಲುವುದೇ ನಮ್ಮ ಮೊದಲ ಗುರಿಯಾಗಿದೆ.

ಮುಖ್ಯಮಂತ್ರಿ ನಿವಾಸದಲ್ಲಿ ಉಪಹಾರ ಸಭೆ ನಡೆಸಿ ಕೆಲವು ಮಂತ್ರಿಗಳಿಗೆ ಪಕ್ಷಕ್ಕೆ ಬರುವವರನ್ನು ಕರೆ ಕರಲು ಟಾಸ್ಕ್ ಕೊಟ್ಟಿದ್ದಾರೆ. ಅಲ್ಲದೇ ಉಪಮುಖ್ಯಮಂತ್ರಿಗಳು ಪದೇ ಪದೇ 45 ಮಂದಿ ಬಿಜೆಪಿ, ಜೆಡಿಎಸ್ ಪಕ್ಷದ ಶಾಸಕರು ಕಾಂಗ್ರೆಸ್ ಸೇರುತ್ತಾರೆಂದು ಹೇಳುತ್ತಿದ್ದಾರೆ ಇದನ್ನು ತಡೆಯಲು ಯಾರೂ ಕಸರತ್ತು ಮಾಡುತ್ತಿದ್ದಾರೆಂದು ಪ್ರಶ್ನಿಸಿದರು.

ಅಡ್ವಾಣಿ ಹುಟ್ಟುಹಬ್ಬಕ್ಕೆ ಮೋದಿ, ಶಾ ಸೇರಿ ಗಣ್ಯರಿಂದ ಶುಭಾಶಯ

ಉಪಮುಖ್ಯ ಮಂತ್ರಿಗಳು, ಮುಖ್ಯಮಂತ್ರಿಯಾಗುವುದಾದರೆ ನಮ್ಮ ಪಕ್ಷದ ಶಾಸಕರನ್ನು ಕಳುಹಿಸುವುದಾಗಿ ನಾನೇ ಹೇಳಿದ್ದೇನೆ. ರಾಜ್ಯದ ಜನ ಬಹುಮತ ಕೊಟ್ಟಿದ್ದರು. ಏಕೆ ಇಂತಹ ಕೆಲಸ ಮಾಡಲಾಗುತ್ತಿದೆ. ಪ್ರಾಮಾಣಿಕವಾಗಿ ನಾಡಿನ ಅಭಿವೃದ್ಧಿ ಕೆಲಸ ಮಾಡಲು ಕಾಂಗ್ರೆಸ್ ನಾಯಕರಿಗೆ ಸಲಹೆ ಮಾಡುವುದಾಗಿ ಹೇಳಿದರು. ಬರ ಪರಿಹಾರ ಕೇಳಲು ನಾವ್ಯಾಕೆ ಹೋಗಬೇಕು. 136 ಶಾಸಕರಿರುವ ನೀವು ಪ್ರಧಾನಿಯವರ ಬಳಿಗೆ ಹೋಗಿ ಪರಿಹಾರ ಕೇಳಿ ಎಂದು ಕಾಂಗ್ರೆಸ್ ನಾಯಕರಿಗೆ ತಿರುಗೇಟು ಕೊಟ್ಟರು.

ನಾನು ಬರಿ ಸತ್ಯ ಹೇಳುತ್ತೇನೆಂದು ಎದೆ ಮೇಲೆ ಹಾಕಿಕೊಂಡಿಲ್ಲ. ಸತ್ಯಹರಿಶ್ಚಂದ್ರ ಕಾಡಿಗೆ ಹೋಗುವಾಗ ನಿಮ್ಮ ಮನೆ ಹಿತ್ತಲಿನಿಂದಲೇ ಹೋಗಿದ್ದು ಅಲ್ಲವೇ ಎಂದು ವ್ಯಂಗ್ಯವಾಡಿದರು. ತಾನೊಂದು ಬಗೆದರೆ ದೈವವೊಂದು ಬಗೆಯುತ್ತದೆ ಎಂಬ ಹಾಡಿದೆ. ನಾಡಿನ ಜನ 136 ಶಾಸಕರನ್ನು ಆಯ್ಕೆ ಮಾಡಿ ನಿಮಗೆ ಕೊಟ್ಟಿದ್ದರೂ ಏಕೆ ಆಪರೇಷನ್ ಹಸ್ತ ಮಾಡುತ್ತೀರೆಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರನ್ನು ಪ್ರಶ್ನಿಸಿದರು. ಈ ಸರ್ಕಾರ 5 ವರ್ಷ ಇದ್ದರೆ 10 ಲಕ್ಷ ಕೋಟಿ ಸಾಲ ಮಾಡುತ್ತೀರಿ. ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ಎಂಬಂತಾಗಿದೆ ಗ್ಯಾರಂಟಿ ಯೋಜನೆಗಳು.

ಬರವೀಕ್ಷಣೆ ನೆಪದಲ್ಲಿ ಎಲ್ಲೆಲ್ಲಿ ಸಮರ್ಥ ನಾಯಕರು ಇರುತ್ತಾರೋ, ಅವರನ್ನು ಹುಡುಕಿಕೊಂಡು ಕರೆದುಕೊಂಡು ಬನ್ನಿ ಎಂದು ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ಜಿ.ಟಿ. ದೇವೇಗೌಡರು ಹಾಸನ ಶಾಸಕ ಸ್ವರೂಪ್ ಪ್ರಕಾಶ್ ಸೇರಿದಂತೆ ಪಕ್ಷದ ಶಾಸಕರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ಸದ್ದು ಗದ್ದಲವಿಲ್ಲದೆ ನಡೆಯುತ್ತಿದೆಯಾ ಆಪರೇಷನ್ ಕಮಲ..?

ಬೆಂಗಳೂರು, ನ.8- ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಭಾಗವಾಗಿ ಸದ್ದು ಮಾಡುತ್ತಿರುವ ಆಪರೇಷನ್ ಕಮಲ ತೆರೆಮರೆಯಲ್ಲಿ ಚಾಲ್ತಿಯಲ್ಲಿದ್ದು, ಕಾಂಗ್ರೆಸ್‍ನ 50ಕ್ಕೂ ಹೆಚ್ಚು ಮಂದಿ ಅಸಮಧಾನಿತ ಶಾಸಕರನ್ನು ಬಿಜೆಪಿ ನಾಯಕರು ಸಂಪರ್ಕ ಮಾಡುತ್ತಿದ್ದಾರೆ.

ಲೋಕಸಭೆ ಚುನಾವಣೆಗೂ ಮುನ್ನವೇ ಸರ್ಕಾರವನ್ನು ಪತನಗೊಳಿಸಲು ಸಂಚು ನಡೆದಿದ್ದು, ಅದಕ್ಕಾಗಿ ಬೇರೆ ಬೇರೆ ರಾಜ್ಯಗಳ ಬಿಜೆಪಿ ಹಾಗೂ ಸಂಘ ಪರಿವಾರದ ಕಾರ್ಯಕರ್ತರು ಕಾಂಗ್ರೆಸ್‍ನ ಅಸಮಧಾನಿತ ಶಾಸಕರನ್ನು ಸಂಪರ್ಕ ಮಾಡುತ್ತಿದ್ದಾರೆ ಎನ್ನಲಾಗಿದೆ. ರಾಜ್ಯ ಬಿಜೆಪಿಯ ಎಲ್ಲಾ ನಾಯಕರು 17 ತಂಡಗಳನ್ನು ಮಾಡಿಕೊಂಡು ಬರ ಅಧ್ಯಯನ ಮಾಡುತ್ತಿರುವುದರಿಂದ ಕಾಂಗ್ರೆಸ್ ನಿರಾಳವಾಗಿದೆ. ಆದರೆ ಬೆಜೆಪಿ ನಾಯಕರು ಬರ ಅಧ್ಯಯನ ನಡೆಸುತ್ತಿದ್ದರೆ, ಒಳಗೊಳಗೆ ಅನಾಮಧೇಯರು ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಯತ್ನಿಸುತ್ತಿದ್ದಾರೆ ಎಂಬ ಮಾಹಿತಿಯಿದೆ.

ಕಾಂಗ್ರೆಸ್ ಶಾಸಕರ ಬಳಿ ಚರ್ಚೆ ನಡೆಸುವಾಗ ಈಗಾಗಲೇ ತಮ್ಮೊಂದಿಗೆ 50ಕ್ಕೂ ಹೆಚ್ಚು ಶಾಸಕರು ಸಂಪರ್ಕದಲ್ಲಿದ್ದಾರೆ. ನೀವು ಒಪ್ಪಿಕೊಂಡರೆ 51ನೇಯವರಾಗುತ್ತಿರಾ ? ಮುಂದಿನ ದಿನಗಳಲ್ಲಿ ನಿಮ್ಮ ಭವಿಷ್ಯವನ್ನು ರಕ್ಷಣೆ ಮಾಡುವ ಹೊಣೆಗಾರಿಕೆಯನ್ನು ಬಿಜೆಪಿ ನಿರ್ವಹಣೆ ಮಾಡಲಿದೆ, ಯಾವುದೇ ಅನುಮಾನ ಇಲ್ಲದೆ ನಮ್ಮ ಜೊತೆ ಕೈ ಜೋಡಿಸಿ ಎಂದು ಕಾಂಗ್ರೆಸ್‍ನ ಅತೃಪ್ತ ಹಾಗೂ ಹೊಸ ಶಾಸಕರಿಗೆ ಹೇಳಲಾಗುತ್ತಿದೆ ಎಂಬ ಮಾಹಿತಿ ಇದೆ.

ಮಹಾರಾಷ್ಟ್ರ ಸೇರಿದಂತೆ ಬೇರೆ ಬೇರೆ ರಾಜ್ಯಗಳ ನಾಯಕರು ರಂಗ ಪ್ರವೇಶ ಮಾಡಿದ್ದಾರೆ. ನೇರವಾಗಿ ದೆಹಲಿಯ ಬಿಜೆಪಿ ನಾಯಕರನ್ನು ಭೇಟಿ ಮಾಡಿಸುವುದಾಗಿ ಹಾಗೂ ಯಾವುದೇ ತೊಂದರೆಯಾಗದಂತೆ ರಕ್ಷಣೆ ಕೊಡಿಸುವುದಾಗಿ ಭರವಸೆ ನೀಡುತ್ತಿದ್ದಾರೆ ಎಂದು ಹೇಳಲಾಗಿದೆ.

ಹಿಂದೆ ಮಹಾರಾಷ್ಟ್ರ ಸರ್ಕಾರ ಪತನಗೊಳಿಸುವಾಗಿ ಶಿವಸೇನೆಯ 47ಕ್ಕೂ ಹೆಚ್ಚು ಶಾಸಕರನ್ನು ಕೇಂದ್ರ ಮೀಸಲು ಪಡೆಯ ರಕ್ಷಣೆಯೊಂದಿಗೆ ಅಸ್ಸಾಂನಲ್ಲಿರಿಸಲಾಗಿತ್ತು. ಉಗ್ರ ಹೋರಾಟಕ್ಕೆ ಹೆಸರಾಗಿದ್ದ ಶಿವಸೇನೆಯೇ ಅಸಹಾಯಕತೆ ಸಿಲುಕಿ ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇಲ್ಲಿಯೂ ಅದೇ ಮಾದರಿಯಲ್ಲಿ ಕಾರ್ಯಚರಣೆಯಾಗುತ್ತದೆ, ನಿಮಗೆ ಸಂಪೂರ್ಣ ರಕ್ಷಣೆ ಕೊಡಿಸುತ್ತೇವೆ, ಮಹಾರಾಷ್ಟ್ರ ಅಸ್ಸಾಂ, ಗುಜರಾತ್, ಉತ್ತರ ಪ್ರದೇಶ ಸೇರಿದಂತೆ ನಿಮಗೆ ಬೇಕಾದ ಕಡೆ ಇರಿಸುತ್ತೇವೆ. ಧೈರ್ಯವಾಗಿ ನಮ್ಮ ಜೊತೆ ಬನ್ನಿ ಎಂದು ಹೇಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್‍ನಲ್ಲಿ ಕೆಲವೇ ಕೆಲವು ಕುಟುಂಬಗಳ ಪ್ರಾಬಲ್ಯದಿಂದ ಬೇಸರಗೊಂಡಿರುವವರು, ಸಚಿವ ಸ್ಥಾನ ಸಿಗದೆ ಅತೃಪ್ತಗೊಂಡಿರುವವರು, ಅಭಿವೃದ್ಧಿಗೆ ಹಣ ನೀಡುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಮಾತು ಕೇಳುತ್ತಿಲ್ಲ, ಅಧಿಕಾರಿಗಳ ವರ್ಗಾವಣೆಯಲ್ಲಿ ತಮ್ಮ ಮಾತು ನಡೆಯುತ್ತಿಲ್ಲ ಎಂಬೆಲ್ಲಾ ಆಕ್ಷೇಪಗಳು ಹೊಂದಿರುವವರನ್ನು ಸಂಪರ್ಕಿಸಲಾಗುತ್ತಿದೆ.

ದುಗುಡ ಹುಟ್ಟಿಸಿರುವ ಬೆಳವಣಿಗೆ:
ಕಾಂಗ್ರೆಸ್ ನಾಯಕರಿಗೆ ದುಗುಡ ಹುಟ್ಟಿಸಿರುವ ಮತ್ತೊಂದು ಬೆಳವಣಿಗೆ ಎಂದರೆ, ಬಿಜೆಪಿ ನಾಯಕರು ತಮ್ಮನ್ನು ಸಂಪರ್ಕಿಸಿರುವ ಬಗ್ಗೆ ಕೆಲವು ಶಾಸಕರು ಹೇಳಿಕೊಳ್ಳದೆ, ತಮಗೆ ಏನು ಗೋತ್ತಿಲ್ಲ ಎಂಬಂತೆ ತಟಸ್ಥವಾಗಿರುವುದು.

ಬಿಜೆಪಿಯವರು ಚರ್ಚೆ ಮಾಡುವ ವೇಳೆ ಕಾಂಗ್ರೆಸ್ ಶಾಸಕರ ಬಳಿ, ತಾವು ಯಾರನ್ನೆಲ್ಲಾ ಸಂಪರ್ಕ ಮಾಡಿದ್ದೇವೆ ಎಂದು, ಬಿಜೆಪಿ ಜೊತೆ ಕೈಜೋಡಿಸಲು ಯಾರೆಲ್ಲಾ ಸಿದ್ಧರಿದ್ದಾರೆ ಎಂಬ ವಿಚಾರಗಳನ್ನು ಅನೌಪಚಾರಿಕವಾಗಿ ಹೇಳಿಕೊಳ್ಳುತ್ತಿದ್ದಾರೆ. ಪಕ್ಷ ನಿಷ್ಠ ಹಾಗೂ ಪ್ರಾಮಾಣಿಕ ಶಾಸಕರು ಕಾಂಗ್ರೆಸ್ ನಾಯಕರಿಗೆ ಮಾಹಿತಿ ನೀಡುವಾಗ ಬಿಜೆಪಿಯ ಮುಖಂಡರು ತಮ್ಮನ್ನು ಸಂಪರ್ಕ ಮಾಡಿರುವುದು, ಏನೆಲ್ಲಾ ಆಮಿಶವೊಡ್ಡಿದ್ಧಾರೆ ಎಂಬುದನ್ನು ಹೇಳಿಕೊಳ್ಳುತ್ತಿದ್ದಾರೆ.

ಜೊತೆಗೆ ಬಿಜೆಪಿಯವರು ಯಾರನ್ನೆಲ್ಲಾ ಸಂಪರ್ಕ ಮಾಡಿರುವುದಾಗಿ ಹೇಳಿದ್ದಾರೆ ಎಂದನ್ನು ಬಾಯಿ ಬಿಡುತ್ತಿದ್ದಾರೆ. ಪಕ್ಷ ನಿಷ್ಠರು ಹೇಳಿದಂತೆ ಬಿಜೆಪಿಯವರು ಸಂಪರ್ಕ ಮಾಡಿರುವ ಬಗ್ಗೆ ಬಹಳಷ್ಟು ಶಾಸಕರು ಮಾಹಿತಿ ನೀಡದೆ ಇರುವುದು ಕಾಂಗ್ರೆಸ್ ನಾಯಕರ ನಿದ್ದೆ ಗೆಡಿಸಿದೆ. ಬಿಜೆಪಿಯವರು ಉದ್ದೇಶಪೂರ್ವಕವಾಗಿ ಗೊಂದಲ ಮೂಡಿಸಲು ಹೆಸರುಗಳನ್ನು ತೇಲಿ ಬಿಡುತ್ತಿದ್ದಾರೆಯೇ ? ಅಥವಾ ಅದರಲ್ಲೇನ್ನಾದರೂ ಸತ್ಯಾಂಶ ಇದೆಯೇ ಎಂಬ ಗೊಂದಲ ಕಾಂಗ್ರೆಸಿಗರನ್ನು ಕಾಡುತ್ತಿದೆ.

ಅಡ್ವಾಣಿ ಹುಟ್ಟುಹಬ್ಬಕ್ಕೆ ಮೋದಿ, ಶಾ ಸೇರಿ ಗಣ್ಯರಿಂದ ಶುಭಾಶಯ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಪರೇಷನ್ ಕಮಲದ ಮೇಲೆ ನಿಗಾವಹಿಸುವಂತೆ ಸಿಐಡಿಗೆ ಆದೇಶಿಸಿದ್ದು, ಬಿಜೆಪಿ ನಾಯಕರ ಚಲನವಲನಗಳ ಮೇಲೆ ನಿಗಾ ವಹಿಸುವ ಜೊತೆಗೆ ಕಾಂಗ್ರೆಸ್ ನಾಯಕರನ್ನು ಯಾರೆಲ್ಲಾ ಸಂಪರ್ಕ ಮಾಡಲಾಗಿದೆ ಎಂಬ ಬಗ್ಗೆ ಮಾಹಿತಿ ಕಲೆ ಹಾಕುವಂತೆ ಸೂಚಿಸಲಾಗಿದೆ. ಆಪರೇಷನ್ ಕಮಲದ ಪ್ರತಿ ಮಾಹಿತಿ ಮೇಲೂ ಕಣ್ಣಿಡಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಗುಪ್ತಚರ ಇಲಾಖೆಗೆ ತಾಕೀತು ಮಾಡಲಾಗಿದೆ.

ಇತ್ತೀಚಿನ ದಿನಗಳಲ್ಲಿ ವಾಟ್ಸ್‍ಅಪ್ ಕಾಲ್‍ಗಳಲ್ಲಿ ಸಮಾಲೋಚನೆಗಳಾಗುತ್ತಿರುವುದರಿಂದ ಮಾಹಿತಿ ಮೇಲೆ ನಿಗಾವಹಿಸುವುದು ದೊಡ್ಡ ಸಲಾವಾಗಿದೆ. ಆದರೂ ತಮ್ಮದೇ ಆದ ಮೂಲದಿಂದ ಚಲನವಲನಗಳ ಮೇಲೆ ಗುಪ್ತದಳ ನಿಗಾ ಇಟ್ಟಿದ್ದಾರೆ ಎಂದು ಹೇಳಲಾಗಿದೆ.

ಮೂಲಗಳ ಪ್ರಕಾರ 50 ಮಂದಿ ಶಾಸಕರನ್ನು ಬಿಜೆಪಿ ಪರವಾಗಿ ಅನಾಮದೇಯರು ಸಂಪರ್ಕ ಮಾಡಿದ್ದಾರೆ. ಗುತ್ತಿಗೆ ಟೆಂಡರ್, ವರ್ಗಾವಣೆ ಸೇರಿದಂತೆ ಇತರ ವಿಚಾರಗಳ ನೆಪದಲ್ಲಿ ಶಾಸಕ ಬಳಿ ಬರುವ ಅನಾಮದೇಯರು, ಅಲ್ಲಿಂದ ಬಿಜೆಪಿ ಮತ್ತು ಸಂಘ ಪರಿವಾರದ ಪ್ರಭಾವಿಗಳಿಗೆ ಕರೆ ಮಾಡಿ, ಕಾಂಗ್ರೆಸ್ ಶಾಸಕರೊಂದಿಗೆ ಮಾತನಾಡಿಸುತ್ತಿದ್ದಾರೆ. ಅನಂತರ ಚರ್ಚೆಗಳು ಮುಂದುವರೆಯುತ್ತಿವೆ ಎಂದು ಹೇಳಲಾಗುತ್ತಿದೆ.

ಕೆಲವು ಶಾಸಕರು ಮಾಹಿತಿ ಹಂಚಿಕೊಳ್ಳುತ್ತಿರುವುದು, ಇನ್ನೂ ಕೆಲವರು ಏನು ಗೋತ್ತಿಲ್ಲದಂತೆ ಮೌನವಾಗಿರುವುದು ಪರಿಸ್ಥಿತಿಯ ಗಂಭೀರತೆಯನ್ನು ಹೆಚ್ಚಿಸಿದೆ. ತಮ್ಮನ್ನು ಭೇಟಿ ಮಾಡಿದವರು ಯಾರು ಎಂಬ ತಲೆಬುಡವೂ ಅರ್ಥವಾಗದೆ ಕೆಲವು ಶಾಸಕರು ಗೊಂದಲದಲ್ಲಿರುವುದಾಗಿಯೂ ಹೇಳಲಾಗುತ್ತಿದೆ.

ಬೆಳಗಾವಿ ಅವೇಶನದಲ್ಲಿ ಆಪರೇಶನ್ ಕಮಲ ಚರ್ಚೆ ಮಾಡಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಲೋಕಸಭೆ ಚುನಾವಣೆಯಲ್ಲಿ ಫಲಿತಾಂಶ ಏನಾಗಲಿದೆಯೋ ಗೋತ್ತಿಲ್ಲ, ಅದಕ್ಕೂ ಮುನ್ನಾ ಆಪರೇಷನ್ ಕಮಲ ನಡೆಸಿ ಕರ್ನಾಟಕ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಬೇಕು ಎಂಬ ಉಮೇದಿನಲ್ಲಿ ಕಾರ್ಯಚರಣೆ ನಡೆಯುತ್ತಿದೆ. ಕೆಲವು ಶಾಸಕರು ಲೋಕಸಭೆ ಚುನಾವಣೆವರೆಗೂ ತಾವು ಏನನ್ನೂ ಹೇಳುವುದಿಲ್ಲ ಎಂದು ಹೇಳಿ ಕಳುಹಿಸುತ್ತಿದ್ದಾರೆ ಎಂದು ಹೇಳಲಾಗಿದೆ.

ಪೈಂಟ್ ಮಿಕ್ಸರ್ ಗ್ರೈಂಡರ್‌ಗೆ ಕೂದಲು ಸಿಲುಕಿ ಮಹಿಳೆ ಕತ್ತು ತುಂಡು

ಬೆಂಗಳೂರು, ನ.8 – ಪೈಂಟ್ ಮಿಕ್ಸ್ ಮಾಡುವ ಗ್ರೈಂಡರ್‌ಗೆ ಮಹಿಳೆಯ ಕೂದಲು ಸಿಕ್ಕಿಕೊಂಡ ಪರಿಣಾಮ ತಲೆ ತುಂಡಾಗಿ ದಾರುಣವಾಗಿ ಮೃತಪಟ್ಟಿರುವ ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ ಸಂಭವಿಸಿದೆ. ರಾಮನಗರ ಮೂಲದ ಶ್ವೇತಾ (33) ಮೃತಪಟ್ಟಿರುವ ಮಹಿಳೆ. ಇವರು ನಗರದ ಮಲ್ಲತ್ತಹಳ್ಳಿಯಲ್ಲಿ ವಾಸವಾಗಿದ್ದರು. ನೆಲಗದರನಹಳ್ಳಿಯಲ್ಲಿ ಶ್ರೀ ಪೈಂಟ್ಸ್ ಎಂಬ ಸಣ್ಣ ಪೈಂಟಿಂಗ್ಸ್ ಕಾರ್ಖಾನೆ ಇದೆ. ಈ ಕಾರ್ಖಾನೆಯಲ್ಲಿ ಮೂರ್ನಾಲ್ಕು ಮಂದಿ ಕೆಲಸ ಮಾಡುತ್ತಿದ್ದಾರೆ.

ನಿನ್ನೆ ಎಂದಿನಂತೆ ಶ್ವೇತಾ ಅವರು ಪೈಂಟ್ ಕಾರ್ಖಾನೆಗೆ ಕೆಲಸಕ್ಕೆ ಬಂದಿದ್ದಾರೆ. ನಿನ್ನೆ ಸಂಜೆ 4 ಗಂಟೆ ಸುಮಾರಿನಲ್ಲಿ ಪೈಂಟ್ ಮಿಕ್ಸಿಂಗ್ ಗ್ರೈಂಡರ್ ಹಾಕಲಾಗಿತ್ತು. ಆ ವೇಳೆ ಗ್ರೈಂಡರ್ ಸ್ವಿಚ್ ಆಫ್ ಮಾಡಿ ಪೈಂಟ್ ತೆಗೆದುಕೊಳ್ಳುವ ಬದಲು ಹಾಗೆಯೇ ಬಗ್ಗಿಕೊಂಡು ಪೈಂಟ್ ತೆಗೆಯುತ್ತಿದ್ದಾಗ ಕೂದಲು ಜಾರಿ ಗ್ರೈಂಡರ್‌ಗೆ ಸುತ್ತಿಕೊಂಡಿದೆ.

ಬೆಂಗಳೂರಿಗೆ 24 ಟಿಎಂಸಿ ನೀರು ಮೀಸಲಿಡಲು ಸರ್ಕಾರ ಆದೇಶ : ಡಿಸಿಎಂ

ಆಗ ಸಹಾಯಕ್ಕಾಗಿ ಕೂಗಿಕೊಂಡರಾದರೂ ಯಾರಿಗೂ ಕೇಳಿಸಿಲ್ಲ. ಪರಿಣಾಮ ಗ್ರೈಂಡರ್ ಸುತ್ತುತ್ತಾ ಆಕೆಯ ಕತ್ತು ತುಂಡರಿಸಿದ್ದು. ದಾರುಣವಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಕ್ಷಣ ನೋಡಿ ಸಹಕಾರ್ಮಿಕರು ಮಾಲೀಕರು ಹಾಗೂ ಪೊಲೀಸರಿಗೆ ತಿಳಿಸಿದ್ದಾರೆ.

ಸುದ್ದಿ ತಿಳಿದು ಪೀಣ್ಯ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಕಾರ್ಖಾನೆ ಮಾಲೀಕರ ವಿರುದ್ಧ ನಿರ್ಲಕ್ಷ್ಯತೆ ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಪೋಕ್ಸೋ ಪ್ರಕರಣದಲ್ಲಿ ಬಂಧನದಲ್ಲಿದ್ದ ಮುರುಘಾ ಶರಣರಿಗೆ ಜಾಮೀನು ಮಂಜೂರು

ಬೆಂಗಳೂರು,ನ.8- ಮಹತ್ವದ ಬೆಳವಣಿಗೆಯಲ್ಲಿ ಮುರುಘ ಮಠದ ಡಾ. ಶ್ರೀ ಶಿವಮೂರ್ತಿ ಮುರುಘ ಶರಣರಿಗೆ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಪೋಕ್ಸೊ ಪ್ರಕರಣದಲ್ಲಿ ಬಂಧಿಯಾಗಿದ್ದ ಮುರುಘ ಮಠದ ಶ್ರೀಗಳಿಗೆ ಹೈಕೋರ್ಟ್ ಇಂದು ಷರತ್ತು ಬದ್ದ ಮಧ್ಯಂತರ ಜಾಮೀನು ನೀಡಿದೆ.

ಜಾಮೀನು ಪಡೆದ ನಂತರ ಅವರು ಯಾವುದೇ ಕಾರಣಕ್ಕೂ ಚಿತ್ರದುರ್ಗ ಜಿಲ್ಲೆ ಪ್ರವೇಶಿಸುವಂತಿಲ್ಲ ಮತ್ತು ಸಾಕ್ಷಿ ನಾಶ ಮಾಡುವಂತಹ ಪ್ರಕರಣ ಕಂಡು ಬಂದಲ್ಲಿ ಜಾಮೀನು ರದ್ದುಗೊಳ್ಳಲಿದೆ ಎಂದು ನ್ಯಾಯಾಲಯ ಎಚ್ಚರಿಕೆ ನೀಡಿದೆ.

ಮಾನವಕಳ್ಳ ಸಾಗಾಣಿಕೆ ದಂಧೆ : ಬೆಂಗಳೂರು ಸೇರಿ ದೇಶದ ಹಲವೆಡೆ NIA ದಾಳಿ

ಪ್ರಸ್ತುತ ಒಂದು ಪ್ರಕರಣದಲ್ಲಿ ಅವರಿಗೆ ಜಾಮೀನು ಸಿಕ್ಕಿದ್ದು, ಇನ್ನೊಂದು ಪ್ರಕರಣ ವಿಚಾರಣೆ ಹಂತದಲ್ಲಿ ಇರುವುದರಿಂದ ಅವರು ಜೈಲಿನಿಂದ ಬಿಡುಗಡೆಯಾಗುವುದು ಅನುಮಾನ ಎನ್ನಲಾಗಿದೆ. ಪಾಸ್ ಪೋರ್ಟ್ ವಶಕ್ಕೆ ನೀಡುವುದರ ಜೊತೆಗೆ ಒಟ್ಟು ಏಳು ಷರತ್ತುಗಳನ್ನ ನ್ಯಾಯಾಲಯ ವಿಧಿಸಿದೆ. ಸದ್ಯದಲ್ಲಿಯೇ ಮೊತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಮೀಜಿಗಳ ಪರವಾಗಿ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಲಿದ್ದಾರೆ