Home Blog Page 1833

ಎರಡು ತಲೆ ಹಾವು, ಜಿಂಕೆ ಕೊಂಬು, ಆನೆ ದಂತ ವಶ

ಬೆಂಗಳೂರು, ನಂ.7- ವನ್ಯಮೃಗಗಳಾದ ಎರಡು ತಲೆಯ ಹಾವು, ಜಿಂಕೆ ಕೊಂಬುಗಳು ಹಾಗೂ ಆನೆಯ ದಂತ ಮಾರಾಟ ಮಾಡಲು ಯತ್ನಿಸುತ್ತಿದ್ದ ಐದು ಮಂದಿ ಆರೋಪಿಗಳನ್ನು ವೈಯಾಲಿಕಾವಲ್ ಠಾಣೆ ಪೊಲೀಸರು ಬಂಧಿಸಿ ಸುಮಾರು 27 ಲಕ್ಷ ರೂ. ಮೌಲ್ಯದ ಮಾಲನ್ನು ವಶಪಡಿಸಿಕೊಂಡಿದ್ದಾರೆ.

ವೈಯಾಲಿಕಾವಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ಅಕ್ರಮವಾಗಿ ಎರಡು ತಲೆಯ ಎರಡು ಜೀವಂತ ಹಾವುಗಳ ಮಾರಾಟ, ಇಬ್ಬರು ವ್ಯಕ್ತಿಗಳು ಜಿಂಕೆ ಕೊಂಬು ಹಾಗೂ ಮತ್ತಿಬ್ಬರು ಆನೆ ದಂತವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾರೆಂಬ ಪ್ರತ್ಯೇಕ ಮಾಹಿತಿಗಳು ಪೊಲೀಸರಿಗೆ ಲಭಿಸಿದೆ.

ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಪ್ರತ್ಯೇಕವಾಗಿ ದಾಳಿ ಮಾಡಿ ಐದು ಮಂದಿ ಆರೋಪಿಯನ್ನು ಬಂಧಿಸಿ 10 ಲಕ್ಷ ರೂ. ಬೆಲೆಬಾಳುವ ಎರಡು ತಲೆಯ ಎರಡು ಹಾವುಗಳು, ಸುಮಾರು 12 ಲಕ್ಷ ರೂ. ಬೆಲೆಬಾಳುವ 12 ಜಿಂಕೆ ಕೊಂಬುಗಳನ್ನು ಹಾಗೂ ಸುಮಾರು 5 ಲಕ್ಷ ರೂ ಬೆಲೆಬಾಳುವ ಆನೆಯ ದಂತವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಕಾಂಗ್ರೆಸ್ ಜಾತಿಗಣತಿ ಮೋಡಿಗೆ ಮರುಳಾಗಬೇಡಿ : ಮಾಯಾವತಿ

ಬಂಧಿತ ಆರೋಪಿಗಳು ಕನಕಪುರ, ರಾಮನಗರ ಮತ್ತು ತುಮಕೂರು ಹಾಗೂ ತಮಿಳುನಾಡಿನ ನಿವಾಸಿಗಳೆಂದು ಪೊಲೀಸರು ತಿಳಿಸಿದ್ದಾರೆ. ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶೇಖರ್ ತೆಕ್ಕಣ್ಣನವರ್ ಮಾರ್ಗದರ್ಶನದಲ್ಲಿ, ಶೇಷಾದ್ರಿಪುರಂ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಪ್ರಕಾಶ್ ಅವರ ನೇತೃತ್ವದಲ್ಲಿ ಇನ್ಸ್‍ಪೆಕ್ಟರ್ ಶಂಕರಗೌಡ ಬಸನಗೌಡರ, ಮತ್ತು ಸಿಬ್ಬಂದಿ ಆರೋಪಿಗಳನ್ನು ಬಂಧಿಸಿ ಜಿಂಕೆ ಕೊಂಬುಗಳು, ಆನೆ ದಂತ ಹಾಗೂ ಎರಡು ತಲೆಯ ಹಾವನ್ನು ವಶಪಡಿಸಿಕೊಂಡಿದ್ದಾರೆ.

ಮಳೆಗೆ ತತ್ತರಿಸಿದ ಸಿಲಿಕಾನ್ ಸಿಟಿ

ಬೆಂಗಳೂರು,ನ.7- ನಗರದಲ್ಲಿ ನಿನ್ನೆ ಬಿಟ್ಟು ಬಿಡದೆ ಸುರಿದ ಭಾರಿ ಮಳೆಗೆ ಸಿಲಿಕಾನ್ ಸಿಟಿ ತತ್ತರಿಸಿ ಹೋಗಿದೆ.
ಹಲವಾರು ಗಂಟೆಗಳ ಕಾಲ ಬಿಟ್ಟುಬಿಡದೆ ಸುರಿದ ಮಳೆ ಹಲವಾರು ಪ್ರದೇಶಗಳಲ್ಲಿ ಅವಾಂತರ ಸೃಷ್ಟಿಸಿದೆ. ರಾತ್ರಿ ಸುರಿದ ಮಳೆಗೆ ಸಹಕಾರ ನಗರದ ಜೆ.ಬ್ಲಾಕ್ ನ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಜನ ರಾತ್ರಿಯಿಡಿ ಜಾಗರಣೆ ನಡೆಸುವಂತಾಗಿತ್ತು.

ಸಹಕಾರ ನಗರದ ಬಿಗ್ ಮಾರ್ಕೇಟ್ ಹಿಂಭಾಗದ ಮನೆಗಳಿಗೆ ನುಗ್ಗಿದ ಚರಂಡಿ ನೀರನ್ನು ಬೆಳಗ್ಗೆಯಾದರೂ ಅಲ್ಲಿನ ನಿವಾಸಿಗಳು ಮಳೆ ನೀರು ಹೊರ ಹಾಕುತ್ತಿರುವ ದೃಶ್ಯಗಳು ಕಂಡುಬಂದಿದೆ. ಅಲ್ಲಿನ ಸುಮಾರು 50ಕ್ಕೂ ಹೆಚ್ಚು ಮನೆಗಳಿಗೆ ಡ್ರೈನೇಜ್ ನೀರು ನುಗ್ಗಿರುವುದು ಮಾತ್ರವಲ್ಲದೆ ಸಂಪ್ ಗಳಿಗೂ ಸೇರಿರುವುದರಿಂದ ಇಡೀ ಸಂಪ್ ನೀರನ್ನು ಜನ ಹೊರ ಹಾಕುತ್ತಿದ್ದಾರೆ. ಕೆಲವರು ಮೋಟರ್ ಪಂಪ್ ಬಳಸಿ ಸಂಗ್ರಹವಾಗಿರುವ ಎಲ್ಲ ನೀರನ್ನು ಮೋರಿಗಳಿಗೆ ಹರಿ ಬಿಡುತ್ತಿದ್ದಾರೆ.

ಇನ್ನು ಕುರುಬರ ಹಳ್ಳಿಯಲ್ಲಿ ಮನೆಗಳಿಗೆ ನುಗ್ಗಿದ ನೀರು ಹಾಸಿಗೆ, ದಿನಸಿ ಪದಾರ್ಥಗಳನ್ನು ಹಾಳು ಮಾಡಿದೆ. ಪಾತ್ರೆ, ಸಿಲಿಂಡರ್ ಮ ತ್ತಿತರ ವಸ್ತುಗಳು ನೀರಿನಲ್ಲಿ ತೇಲಾಡುತ್ತಿರುವ ದೃಶ್ಯಗಳು ಕಂಡು ಬಂದಿದ್ದು, ಅಲ್ಲಿನ ನಿವಾಸಿಗಳ ಪರದಾಟ ಹೇಳತೀರದಾಗಿದೆ. ನಿನ್ನೆ ಅತಿ ಹೆಚ್ಚು ಮಳೆಯಾಗಿರುವ ಯಲಹಂಕದ ಕೋಗಿಲು ಕ್ರಾಸ್‍ನ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಬೆಳಿಗ್ಗೆಯಾದರೂ ಹಾಳುದ್ದ ನೀರು ನಿಂತಿದ್ದರಿಂದ ವಾಹನ ಸವಾರರು ಮುಂದೆ ಸಂಚರಿಸಲು ಪರದಾಡುವಂತಹ ಸನ್ನಿವೇಶ ನಿರ್ಮಾಣವಾಗಿತ್ತು.

ಬೈಯಪ್ಪನಹಳ್ಳಿ ಭಾಗದಲ್ಲಿ ರಸ್ತೆಯಲ್ಲಿ ಈಗಲೂ ನಿಂತಿರುವ ಮಳೆ ನೀರಿನಿಂದ ವಾಹನ ಸಂಚಾರಕ್ಕೆ ತೀವ್ರ ಅಡಚಣೆಯಾಗಿತ್ತು. ಅದೇ ರೀತಿ ಬಸವೇಶ್ವರನಗರ, ರಾಜಾಜಿನಗರ, ಶಿವಾಜಿನಗರ ಮತ್ತಿತರ ಪ್ರದೇಶಗಳಲ್ಲೂ ಮಳೆಯಿಂದ ಸಾಕಷ್ಟು ಅವಘಡಗಳು ಸಂಭವಿಸಿವೆ ಎಂದು ವರದಿಯಾಗಿದೆ.

ಅಂಡರ್‍ಪಾಸ್‍ಗಳು ಬಂದ್: ಕೆಲ ತಿಂಗಳ ಹಿಂದೆ ಅಂಡರ್‍ಪಾಸ್‍ನಲ್ಲಿ ನಿಂತಿದ್ದ ಹಾಳುದ್ದ ನೀರಿನಲ್ಲಿ ಯುವತಿಯೊಬ್ಬರು ಸಾವನ್ನಪ್ಪಿದ ಘಟನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪೆÇಲೀಸರು ನಗರದ ಬಹುತೇಕ ಅಂಡರ್‍ಪಾಸ್‍ಗಳನ್ನು ಕ್ಲೋಸ್ ಮಾಡಿದ್ದಾರೆ. ಯಲಹಂಕ ಬಳಿಯ ಕೇಂದ್ರಿಯ ವಿಹಾರ ಅಪಾಟ್ರ್ಮೆಂಟ್‍ಗೂ ನೀರು ನುಗ್ಗಿರುವುದರಿಂದ ಬೇಸ್ಮೆಂಟ್‍ನಲ್ಲಿ ನಿಲ್ಲಿಸಿದ್ದ ಕಾರು, ಬೈಕ್‍ಗಳು ನೀರಿನಲ್ಲಿ ಮುಳುಗಿವೆ. ಹೀಗಾಗಿ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮಳೆ ನೀರನ್ನು ಹೊರ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ.

ಮಿಜೋರಾಂನಲ್ಲಿ ಬಿಜೆಪಿ ಜೊತೆ ಮೈತ್ರಿಯಿಲ್ಲ : ಝೋರಾಮ್‍ತಂಗ

ಡಿಕೆಶಿ ಭೇಟಿ: ಅತಿ ಹೆಚ್ಚು ಮಳೆ ಹಾನಿ ಸಂಭವಿಸಿರುವ ಇಂಟಿಗ್ರೇಟೆಡ್ ಕಮಾಂಡ್ ಅಂಡ್ ಕಂಟ್ರೋಲ್ ಸೆಂಟರ್‍ಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಎಲ್ಲೆಲ್ಲಿ ಎಷ್ಟೆಷ್ಟು ಮಳೆಯಾಗಿದೆ ಎನ್ನುವುದನ್ನು ತೋರಿಸುವ ಮಳೆ ಗ್ರಾಫ್ ಸ್ಕ್ರೀನ್ ವಿಕ್ಷಣೆ ಮಾಡಿದ ಡಿಸಿಎಂ ಅವರಿಗೆ ಅಕಾರಿಗಳು ಮೊಬೈಲ್ ಮುಖಾಂತರ ಮಾಹಿತಿ ನೀಡಿದರು.

ಇನ್ನು ಐದು ದಿನ ಮಳೆ : ರಾಜ್ಯದಾದ್ಯಂತ ಇನ್ನು ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಕೋಲಾರ ಜಿ¯್ಲÉಗಳಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಿದ್ದರೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆ ಇದ್ದು, ಎರಡೂ ದಿನ ಮೋಡ ಕವಿದ ವಾತಾವರಣ, ಕೆಲವೆಡೆ ಗುಡುಗು ಸಹಿತ ಮಳೆಯಾಗಲಿದೆಯಂತೆ.

ಎಲ್ಲೆಲ್ಲಿ ಎಷ್ಟು ಮಳೆ
ಯಲಹಂಕ -14.7ಸೆಂಮಿ
ಹಂಪಿನಗರ 9.4ಸೆಂಮಿ
ನಾಗಪುರ (ವೆಸ್ಟï ಜೋನ್ ) 8.95ಸೆಂಮಿ
ಜಕ್ಕೂರು- 8.65ಸೆಂಮಿ
ನಂದಿನಿ ಲೇಔಟ್ -8.55
ವಿಶ್ವನಾಥ್ ನಾಗೇನಹಳ್ಳಿ (ಈಸ್ಟ್ ಜೋನ್ ) -7.5ಸೆಂಮಿ
ರಾಜ್ ಮಹಲ್ ಗುಟ್ಟಳ್ಳಿ -7.6
ಗಾಳಿ ಆಂಜನೇಯ ಟೆಂಪಲ್ -7.5ಸೆಂಮಿ
ಕೊಟ್ಟಿಗೆಪಾಳ್ಯ -7ಸೆಂಮಿ
ಕಮ್ಮನಹಳ್ಳಿ (ಈಸ್ಟ್ ಜೋನ್ )-6.95
ಮಾರುತಿ ಮಂದಿರ ವಾರ್ಡ್ -6.8ಸೆಂಮಿ
ಪೀಣ್ಯ ಇಂಡಸ್ಟ್ರಿಯಲ್ ಏರಿಯಾ -6.75ಸೆಂಮಿ
ಅಗ್ರಹಾರ ದಾಸರಹಳ್ಳಿ -6.7 ಸೆಂ ಮೀಟರ್‍ನಷ್ಟು ಮಳೆಯಾಗಿದೆ.

ಯಲಹಂಕ ಶಾಸಕ ವಿಶ್ವನಾಥ್ ಸಂಬಂಧಿ ಮನೆಯಲ್ಲಿ 2 ಕೋಟಿ ಮೌಲ್ಯದ ಚಿನ್ನಾಭರಣ ಕಳವು

ಬೆಂಗಳೂರು, ನ.7- ಯಲಹಂಕ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಅವರ ಸಂಬಂಧಿಕರ ನಿವಾಸದ ಬಾಗಿಲು ಮೀಟಿ ಒಳ ನುಗ್ಗಿರುವ ಚೋರರು ನಗದು ಸೇರಿದಂತೆ 2 ಕೋಟಿ ರೂ. ಮೌಲ್ಯದ ಚಿನ್ನಾಭರಣ, ವಜ್ರ ಬೆಲೆಬಾಳುವ ವಾಚ್‍ಗಳು ಹಾಗೂ ಇತರೆ ವಸ್ತುಗಳನ್ನು ದೋಚಿ ಪರಾರಿಯಾಗಿರುವ ಘಟನೆ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನ್ಯಾಯಾಂಗ ಬಡಾವಣೆಯಲ್ಲಿರುವ ರಾಮಮೂರ್ತಿ ಅವರ ನಿವಾಸದಲ್ಲಿ ಈ ಬಾರಿ ಕಳ್ಳತನ ನಡೆದಿದೆ. ಇವರು ರಿಯಲ್ ಎಸ್ಟೇಟ್ ಹಾಗೂ ಗುತ್ತಿಗೆದಾರರಾಗಿದ್ದು, ಶಾಸಕ ವಿಶ್ವನಾಥ್ ಅವರ ಸಂಬಂಧಿ. ಕುಟುಂಬ ಸಮೇತರಾಗಿ ಬೇರೆ ಊರಿಗೆ ತೆರಳಿದ್ದ ರಾಮಮೂರ್ತಿ ಅವರು ಮನೆಗೆ ಬಂದಾಗ ಬಾಗಿಲು ತೆರೆದಂತಿತ್ತು. ಒಳ ಹೋಗಿ ನೋಡಿದಾಗ ಕೆಲ ವಸ್ತುಗಳು ಚಿಲ್ಲಾಪಿಲ್ಲಿಯಾಗಿ ಬಿದಿದ್ದವು.

ಮಿಜೋರಾಂನಲ್ಲಿ ಬಿಜೆಪಿ ಜೊತೆ ಮೈತ್ರಿಯಿಲ್ಲ : ಝೋರಾಮ್‍ತಂಗ

ಬಾಗಿಲ ಡೋರ್‍ಲಾಕ್‍ನ್ನು ಮೀಟಿ ಒಳನುಗ್ಗಿರುವ ಚೋರರು ಸುಮಾರು 15 ಲಕ್ಷ ರೂ. ನಗದು, ಅಪರ ಪ್ರಮಾಣದ ಚಿನ್ನಾಭರಣ, ವಜ್ರದ ಆಭರಣಗಳು, ಬೆಲೆಬಾಳುವ ವಾಚ್‍ಗಳು ಹಾಗೂ ಇತರೆ ವಸ್ತುಗಳನ್ನು ದೋಚಿ ಪರಾರಿಯಾಗಿರುವುದು ಗೊತ್ತಾಗಿದೆ.

ತಕ್ಷಣ ಅವರು ಯಲಹಂಕ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಸ್ಥಳಕ್ಕೆ ಬೆರಳಚ್ಚು ತಜ್ಞರು, ಶ್ವಾನದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ. ಸ್ಥಳೀಯ ಸಿಸಿ ಟವಿಗಳನ್ನು ಪರಿಶೀಲಿಸಿ ಚೋರರ ಪತ್ತೆಗೆ ಬಲೆಬೀಸಲಾಗಿದೆ.

ಕೇಂದ್ರದಿಂದ ಆರ್ಥಿಕ ನೆರವು ಕೊಡಿಸಲಿ : ಬಿಜೆಪಿಗೆ ಸಿಎಂ ತಿರುಗೇಟು

ಬೆಂಗಳೂರು,ನ.7- ಬಿಜೆಪಿಯವರು ರಾಜಕೀಯವಾಗಿ ಬರ ಅಧ್ಯಯನ ಮಾಡುವ ಬದಲು ಕೇಂದ್ರ ಸರ್ಕಾರದಿಂದ ಆರ್ಥಿಕ ನೆರವು ಕೊಡಿಸಲಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕೇಂದ್ರದಿಂದ ಅಧಿಕಾರಿಗಳ ತಂಡ ಬಂದು ರಾಜ್ಯದಲ್ಲಿ ಅಧ್ಯಯನ ನಡೆಸಿದೆ. ನಾವು ಕೂಡ ಅಧ್ಯಯನ ನಡೆಸಿದ್ದೇವೆ. ಕೇಂದ್ರದ ತಂಡ ಈವರೆಗೂ ವರದಿ ನೀಡಿಲ್ಲ ಎಂದು ಹೇಳಿದರು.

ಬಿಜೆಪಿಯವರು ಪದೇ ಪದೇ ಅಧ್ಯಯನ ಮಾಡುತ್ತೇವೆ ಎಂದು ಹೇಳುವ ಬದಲು ಕೇಂದ್ರದ ಬಳಿಗೆ ಹೋಗಿ ರಾಜ್ಯಕ್ಕೆ ಬರ ಪರಿಹಾರ ಕೊಡಿಸಲಿ. ಮಳೆ ಕೊರತೆಯಿಂದಾಗಿ ರಾಜ್ಯದಲ್ಲಿ 33,700 ಕೋಟಿ ರೂ. ನಷ್ಟವಾಗಿದೆ. 17900 ಕೋಟಿ ರೂ.ಗಳ ಪರಿಹಾರ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಬಿಜೆಪಿಯ 25 ಮಂದಿ ಸಂಸದರಿದ್ದಾರೆ. ಅವರು ಕೇಂದ್ರದ ಮೇಲೆ ಪ್ರಭಾವ ಬೀರಿ ಹಣಕೊಡಿಸಬೇಕು.ಅದರ ಹೊರತಾಗಿ ರಾಜಕೀಯ ಕಾರಣಕ್ಕೆ ಬರ ಅಧ್ಯಯನ ಮಾಡುವುದಾದರೆ ನಮ್ಮ ತಕರಾರು ಇಲ್ಲ ಎಂದರು.

ಬರ ಅಧ್ಯಯನ ವೈಜ್ಞಾನಿಕವಾಗಿ ಇರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಟೀಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯನವರು, ಅಧ್ಯಯನ ನಡೆಸಿದ್ದು ಕೇಂದ್ರ ಅಧಿಕಾರಿಗಳ ತಂಡ. ಕೇಂದ್ರದಲ್ಲಿ ಯಾವ ಪಕ್ಷ ಅಧಿಕಾರದಲ್ಲಿದೆ ಎಂದು ಗೊತ್ತಿದೆ. ಕುಮಾರಸ್ವಾಮಿ ಅವರು ವೈಜ್ಞಾನಿಕವಾಗಿ ಅಧ್ಯಯನ ನಡೆದಿಲ್ಲ ಎನ್ನುವುದಾದರೆ ಕೇಂದ್ರ ಸರ್ಕಾರವನ್ನು ಟೀಕೆ ಮಾಡಲಿ ಎಂದು ತಿರುಗೇಟು ನೀಡಿದರು.

ಮಾಜಿ ಸಂಸದ ಡಿ.ಬಿ.ಚಂದ್ರೇಗೌಡ ನಿಧನಕ್ಕೆ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದರು. ಹಿರಿಯ ಹಾಗೂ ಬುದ್ದಿವಂತ ರಾಜಕಾರಣಿಯಾಗಿದ್ದ ಚಂದ್ರೇಗೌಡರು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಇಂದಿರಾಗಾಂಧಿ ಅವರಿಗಾಗಿ ಬಿಟ್ಟುಕೊಟ್ಟಿದ್ದರು. ಆನಂತರ ಜನತಾದಳಕ್ಕೆ ಬಂದರು . ಸ್ಪೀಕರ್ ಮತ್ತು ವಿರೋಧ ಪಕ್ಷದ ನಾಯಕರಾಗಿದ್ದರು. ಮರಳಿ ಕಾಂಗ್ರೆಸ್ ಸೇರಿದ ಚಂದ್ರೇಗೌಡರು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದರು. ಬಿಜೆಪಿಗೆ ಹೋದ ಬಳಿಕ ಸಂಸದರಾ ಆಯ್ಕೆಯಾಗಿದ್ದರು.

ಸಾಹಿತ್ಯದ ಬಗ್ಗೆ ಅಪಾರ ತಿಳುವಳಿಕೆ ಯುಳ್ಳವರಾಗಿದ್ದರು. ಅವರ ನಿಧನದಿಂದಾಗಿ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ನಾಳೆ ಮೂಡಿಗೆರೆಯಲ್ಲಿ ನಡೆಯುವ ಅಂತ್ಯಕ್ರಿಯೆಯಲ್ಲಿ ತಾವು ಭಾಗವಹಿಸುವುದಾಗಿ ತಿಳಿಸಿದರು.

ಬೆಳಗಾವಿ ಅಧಿವೇಶನದಲ್ಲಿ ಸದಾಶಿವ ಆಯೋಗದ ವರದಿ ಮಂಡನೆ : ಪರಮೇಶ್ವರ್

ಬೆಂಗಳೂರು,ನ.7- ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸದಾಶಿವ ಆಯೋಗದ ವರದಿಯನ್ನು ಬೆಳಗಾವಿಯ ಅಧಿವೇಶನದಲ್ಲಿ ಮಂಡಿಸಲು ಪ್ರಯತ್ನಗಳು ನಡೆದಿವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‍ನ ಎಸ್‍ಸಿ-ಎಸ್‍ಟಿ ಘಟಕದಿಂದ ಚಿತ್ರದುರ್ಗದಲ್ಲಿ ಸಮಾವೇಶ ನಡೆಸಿ ಹತ್ತು ಘೋಷಣೆ ಮಾಡಲಾಯಿತು. ಚಿತ್ರದುರ್ಗದ ಘೋಷಣೆ ಪ್ರಕಾರ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಮೊದಲ ಅಧಿವೇಶನದಲ್ಲೇ ಸದಾಶಿವ ಆಯೋಗದ ವರದಿ ಮಂಡಿಸುವುದಾಗಿ ಭರವಸೆ ನೀಡಲಾಗಿತ್ತು.

ಮಿಜೋರಾಂನಲ್ಲಿ ಬಿಜೆಪಿ ಜೊತೆ ಮೈತ್ರಿಯಿಲ್ಲ : ಝೋರಾಮ್‍ತಂಗ

ಈಗ ನಾವು ಅಧಿಕಾರಕ್ಕೆ ಬಂದಿದ್ದೇವೆ. ಮೊದಲ ಅಧಿವೇಶನದಲ್ಲಿ ವರದಿ ಮಂಡಿಸಲಾಗಿಲ್ಲ. ಬೆಳಗಾವಿಯಲ್ಲಿ ನಡೆಯುತ್ತಿರುವ 2ನೇ ಅಧಿವೇಶನದಲ್ಲಿ ಮಂಡನೆ ಮಾಡಲು ಒತ್ತಡ ಹೇರುತ್ತಿದ್ದೇವೆ ಎಂದರು. ಸಚಿವರಾದ ಕೆ.ಎಚ್.ಮುನಿಯಪ್ಪ, ಎಚ್.ಸಿ. ಮಹದೇವಪ್ಪ, ಪ್ರಿಯಾಂಕ್ ಖರ್ಗೆ ಮತ್ತು ತಾವು ಮುಖ್ಯಮಂತ್ರಿಯರ ಜೊತೆ ಚರ್ಚೆ ನಡೆಸಿದ್ದು, ವರದಿ ಮಂಡನೆಗೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದೇವೆ. ಇತರ ಸಮುದಾಯಗಳ ಮುಖಂಡರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ.

ವರದಿ ಮಂಡನೆ ಯಾಗಬೇಕು, ಚರ್ಚೆಯಾಗಬೇಕು ಎಂಬುದು ಎಲ್ಲರ ಒತ್ತಾಸೆ. ಆದರೆ ಅದಕ್ಕೂ ಮುನ್ನ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಖ್ಯಮಂತ್ರಿಯವರು, ಶಾಸಕರು, ಸಚಿವರು, ಮುಖಂಡರೊಂದಿಗೆ ಚರ್ಚೆ ಮಾಡಲಿದ್ದಾರೆ ಎಂದು ತಿಳಿಸಿದರು.

ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಡಿಸಿಎಂ ಹಸ್ತಕ್ಷೇಪ ಮಾಡಿಲ್ಲ : ಸತೀಶ್ ಜಾರಕಿಹೊಳಿ

ಬೆಂಗಳೂರು, ನ.7- ಕೆಪಿಸಿಸಿ ಅಧ್ಯಕ್ಷರ ಸ್ಥಾನಕ್ಕೆ ತಾವು ಆಕಾಂಕ್ಷಿಯಲ್ಲ. ತಮ್ಮ ಸಾಮಥ್ರ್ಯಕ್ಕೆ ತಕ್ಕಷ್ಟು ಜವಾಬ್ದಾರಿ (ಲೋಡ್ ) ಇದೆ. ಸದ್ಯಕ್ಕೆ ನಾನು ಅಷ್ಟಕ್ಕೇ ಸೀಮಿತವಾಗಿದ್ದೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಬೆಳಗ್ಗೆ ಸತೀಶ್ ಜಾರಕಿಹೊಳಿ ಅವರ ಮನೆಗೆ ದಿಢೀರ್ ಭೇಟಿ ನೀಡಿ ಚರ್ಚೆ ನಡೆಸಿದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಉಪಮುಖ್ಯ ಮಂತ್ರಿಗಳು ರಾಜಕೀಯ ವಿಚಾರವಾಗಿ ಚರ್ಚೆ ನಡೆಸಿದ್ದಾರೆ. ಲೋಕಸಭೆ ಚುನಾವಣೆ, ಕೆಲವು ಜಿಲ್ಲಾಧ್ಯಕ್ಷರ ಬದಲಾವಣೆ ಕುರಿತು ಮಾಲೋಚನೆಗಳಾಗಿವೆ. ಬಂದಷ್ಟೇ ವೇಗವಾಗಿ ವಾಪಸ್ ಹೋಗಿದ್ದಾರೆ. ನಮ್ಮ ಚರ್ಚೆಯ ವೇಳೆ ಬೆಳಗಾವಿ ಜಿಲ್ಲಾ ರಾಜಕಾರಣ ಕುರಿತು ಚರ್ಚೆ ನಡೆದಿಲ್ಲ ಎಂದರು.

ಬೆಳಗಾವಿ ಜಿಲ್ಲಾ ಮಟ್ಟದಲ್ಲಿ ಕೆಲ ಸಮಸ್ಯೆಗಳಿವೆ. ಕಾಲಕಾಲಕ್ಕೆ ಅವು ಉದ್ಭವಿಸು ತ್ತವೆ ಮತ್ತು ಬಗೆಹರಿಯುತ್ತದೆ. ಅದನ್ನು ನಾವು ಸ್ಥಳೀಯವಾಗಿಯೇ ಬಗೆಹರಿಸಿಕೊಳ್ಳುತ್ತೇವೆ. ಉಪಮುಖ್ಯಮಂತ್ರಿಯವರು ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಹಸ್ತಕ್ಷೇಪ ಮಾಡಿಲ್ಲ. ಈ ಬಗ್ಗೆ ಅವರೊಂದಿಗೆ ಚರ್ಚಿ ಸುವ ಅಗತ್ಯವೂ ಇಲ್ಲ. ಬೆಳಗಾವಿ ಯೊಂದೇ ಅಲ್ಲ ಎಲ್ಲ ಜಿಲ್ಲೆಗಳಲ್ಲೂ ಸ್ಥಳೀಯ ಸಮಸ್ಯೆಗಳು ಇದ್ದೇ ಇರುತ್ತವೆ. ನಮ್ಮ ಸರ್ಕಾರವಷ್ಟೇ ಅಲ್ಲ ಹಿಂದಿನ ಸರ್ಕಾರದಲ್ಲೂ ಆ ರೀತಿಯ ಸಮಸ್ಯೆಗಳಿದ್ದವು ಎಂದು ಹೇಳಿದರು.

ಸದ್ಯಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷರ ಬದಲಾವಣೆ ಇಲ್ಲ ಎಂದು ದೆಹಲಿ ಮಟ್ಟದಲ್ಲಿ ಹೈಕಮಾಂಡ್ ನಿರ್ಧರಿಸಿದೆ. ಲೋಕಸಭೆ ಚುನಾವಣೆವರೆಗೂ ಯಥಾಸ್ಥಿತಿಯೇ ಮುಂದುವರೆಯುವ ಸಾಧ್ಯತೆಗಳಿವೆ. ಚಂದ್ರಪ್ಪ ಅವರನ್ನು ಹೊರತುಪಡಿಸಿದರೆ ಉಳಿದ ನಾಲ್ವರು ಕಾರ್ಯಾಧ್ಯಕ್ಷರು ಒಂದಲ್ಲ ಒಂದು ಹುದ್ದೆಯಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡುವವರಿಗೆ ಅವಕಾಶ ಮಾಡಿಕೊಡಿ ಎಂದು ಎಲ್ಲರೂ ಹೇಳಿದ್ದಾರೆ. ಅದು ಚರ್ಚೆಯ ಹಂತದಲ್ಲೂ ಇದೆ ಎಂದು ಹೇಳಿದರು.

ಮಿಜೋರಾಂನಲ್ಲಿ ಬಿಜೆಪಿ ಜೊತೆ ಮೈತ್ರಿಯಿಲ್ಲ : ಝೋರಾಮ್‍ತಂಗ

ಕೆಪಿಸಿಸಿ ಅಧ್ಯಕ್ಷರ ರೇಸ್‍ನಲ್ಲಿ ನನ್ನ ಹೆಸರಿಲ್ಲ. ನಾನು ಆಕಾಂಕ್ಷಿಯೂ ಅಲ್ಲ. ನನ್ನ ಸಾಮಥ್ರ್ಯಕ್ಕೆ ಅನುಗುಣವಾಗಿ ಕಾರ್ಯಭಾರಗಳಿವೆ. ಅವುಗಳನ್ನೇ ನಿಭಾಯಿಸುತ್ತೇನೆ. ನಾವಿನ್ನು ಬಹಳಷ್ಟು ದೂರ ಪ್ರಯಾಣ ಮಾಡಬೇಕು. ಟ್ರಾಕ್‍ಗೆ ಬರಬೇಕು. ಆವರೆಗೂ ಇರುವ ಜವಾಬ್ದಾರಿಗಳನ್ನೇ ನಿಭಾಯಿಸುತ್ತೇನೆ. ಸದ್ಯಕ್ಕೆ ನಮ್ಮ ಗಾಡಿ ಆರಾಮಾಗಿ ಚಲಿಸುತ್ತಿದೆ ಎಂದು ತಮ್ಮದೇ ಶೈಲಿಯಲ್ಲಿ ಹೇಳಿದರು.

ಬೆಂಗಳೂರಿನಲ್ಲಿ ಸುರಂಗಮಾರ್ಗ ರಸ್ತೆಗಳ ನಿರ್ಮಾಣದ ಮೂಲಕ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಬಗ್ಗೆ ಚರ್ಚೆಗಳು ನಡೆದಿವೆ. ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಯೋಜನೆ ಬಗ್ಗೆ ಆಸಕ್ತಿ ಹೊಂದಿದ್ದಾರೆ. ಆದರೆ ಯಾವ ಇಲಾಖೆ ಕಾಮಗಾರಿಯನ್ನು ಕೈಗೊಳ್ಳಬೇಕು ಎಂಬ ಬಗ್ಗೆ ನಿರ್ಧಾರವಾಗಿಲ್ಲ.

ಬಿಬಿಎಂಪಿಯೇ ಅಥವಾ ಲೋಕೋಪಯೋಗಿ ಇಲಾಖೆಯೇ ಎಂಬುದನ್ನು ಸರ್ಕಾರದ ಮಟ್ಟದಲ್ಲಿ ಮುಖ್ಯಮಂತ್ರಿಯವರು ಚರ್ಚಿಸಿ ನಿರ್ಧರಿಸಬೇಕಾಗುತ್ತದೆ. ಈ ವಿಷಯದಲ್ಲಿ ತಮ್ಮ ಹಾಗೂ ಡಿ.ಕೆ.ಶಿವಕುಮಾರ್ ಅವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸದಾಶಿವ ಆಯೋಗದ ವರದಿ ಜಾರಿಯಾಗ ಬೇಕು ಎಂಬುದು ಹಲವು ವರ್ಷಗಳ ಬೇಡಿಕೆ. ಒಮ್ಮೆ ಈ ಬಗ್ಗೆ ನಿರ್ಧಾರ ತೆಗೆದುಕೊಂಡು ಆ ಸಮುದಾಯಗಳಿಗೆ ನ್ಯಾಯ ದೊರಕಿಸಬೇಕಿದೆ. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಅವರು ವರದಿ ಜಾರಿಗೆ ಒತ್ತಾಯಿಸಿ ಮಾದಿಗ ಸಮುದಾಯದ ಮುಖಂಡರು, ಶಾಸಕರು ಮತ್ತು ಸಚಿವರ ಮನೆಗಳಿಗೆ ಮುತ್ತಿಗೆ ಹಾಕಬೇಕು ಎಂದು ಕರೆ ನೀಡಿರುವುದು ತಪ್ಪಲ್ಲ.

ಮಾಹಿತಿ ಆಯುಕ್ತರ ನೇಮಕದಲ್ಲಿ ಲೋಪ : ರಾಷ್ಟ್ರಪತಿಗಳಿಗೆ ಪತ್ರ ಬರೆದ ಚೌಧರಿ

ಸಚಿವರಾಗಿದ್ದರೂ ಕೆಲವೊಮ್ಮೆ ಸಮುದಾಯದ ಜೊತೆಯಲ್ಲೂ ನಿಲ್ಲಬೇಕಾಗುತ್ತದೆ. ಇದನ್ನು ಸರ್ಕಾರದ ವಿರುದ್ಧ ಎಂದು ಭಾವಿಸಲಾಗುವುದಿಲ್ಲ ಎಂದರು. ಮಾದಿಗ ಸಮುದಾಯದವರು ಶಾಸಕರ ಮನೆಗೆ ಮುತ್ತಿಗೆ ಹಾಕುವುದು ಹೊಸದೇನಲ್ಲ. ಎಷ್ಟು ಜನ ಬರುತ್ತಾರೋ ಬರಲಿ ನಾನು ಸಿದ್ದನಿದ್ದೇನೆ. ಊಟ ಉಪಚಾರ ಎಲ್ಲವನ್ನು ತಯಾರಿ ಮಾಡಿಕೊಂಡು ಅವರ ಜೊತೆ ಒಂದು ಗಂಟೆ ನಾನು ಕೂಡ ಸಾಂಕೇತಿಕವಾಗಿ ಧರಣಿ ಮಾಡುತ್ತೇನೆ ಎಂದು ಹೇಳಿದರು.

ಕಾಂತರಾಜು ಆಯೋಗದ ವರದಿಯಿಂದ ಯಾರಿಗೂ ಅನ್ಯಾಯವಾಗುವುದಿಲ್ಲ. ಮೊದಲು ಅದು ಸರ್ಕಾರಕ್ಕೆ ಸಲ್ಲಿಕೆಯಾಗಲಿ. ಆ ಬಳಿಕ ವಿಧಾನಸಭೆಯಲ್ಲಿ ಒಂದು ವಾರ ಕಾಲ ನಿರಂತರ ಚರ್ಚೆಯಾಗಲಿ ಎಲ್ಲ ಸಮುದಾಯಗಳು ಅಭಿಪ್ರಾಯ ಹೇಳುವ ಮೂಲಕ ಯಾರಿಗೂ ಅನ್ಯಾಯವಾಗದಂತೆ ನಿರ್ಧಾರ ತೆಗೆದುಕೊಳ್ಳಬೇಕಿದೆ. ಲೋಪವಿದ್ದರೆ ಸಾರಸಗಟಾಗಿ ತಿರಸ್ಕಾರ ಮಾಡಬಹುದು ಇಲ್ಲವಾದರೆ ಅಂಗೀಕಾರದ ಬಗ್ಗೆ ಚರ್ಚೆಯಾಗಲಿ ಎಂದು ಹೇಳಿದರು.

ಐಸಿಸಿ ಪ್ರತಿಷ್ಠಿತ ಪ್ರಶಸ್ತಿ ಪಟ್ಟಿಯಿಂದ ಕೊಹ್ಲಿ, ರೋಹಿತ್ ಔಟ್

ಬೆಂಗಳೂರು,ನ.7- ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿಯು ಅಕ್ಟೋಬರ್ ತಿಂಗಳ ಉತ್ತಮ ಆಟಗಾರರ ಪ್ರಶಸ್ತಿಯ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅವರನ್ನು ಹೆಸರನ್ನು ಹೊರಗಿಡಲಾಗಿದೆ.

2023ರ ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಫಾರ್ಮ್‍ನಲ್ಲಿರುವ ದಕ್ಷಿಣ ಆಫ್ರಿಕಾದ ಆರಂಭಿಕ ಆಟಗಾರ ಕ್ವಿಂಟನ್ ಡಿ ಕಾಕ್ ಅವರು ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 174 ರನ್ ಗಳಿಸಿರುವುದಲ್ಲದೆ ವಿಕೆಟ್ ಕೀಪರ್ ಹಾಗೂ ಫೀಲ್ಡರ್ ರೂಪದಲ್ಲಿ ಒಟ್ಟು 10 ಕ್ಯಾಚ್‍ಗಳನ್ನು ಪಡೆದಿರುವುದಲ್ಲದೆ ಅಕ್ಟೋಬರ್ ತಿಂಗಳಿನಲ್ಲಿ 3 ಶತಕ ಸೇರಿದಂತೆ 431 ರನ್‍ಗಳನ್ನು ಬಾರಿಸಿದ್ದು ಪ್ರಶಸ್ತಿ ಪಟ್ಟಿಯಲ್ಲಿ ಸ್ಥಾನ ಪಡೆಯಲು ಕಾರಣವಾಗಿದೆ.

ಇನ್ನು ಭಾರತೀಯ ಸಂಜಾತ ನ್ಯೂಜಿಲೆಂಡ್‍ನ ಯುವ ಆಟಗಾರ ರಚಿನ್ ರವೀಂದ್ರ ಅವರು ಕೂಡ ವಿಶ್ವಕಪ್ ಟೂರ್ನಿಯಲ್ಲಿ ಆಕ್ಟೋಬರ್ ಮಾಸದಲ್ಲಿ ಆಡಿದ 6 ಪಂದ್ಯಗಳಿಂದ 81.20 ಸರಾಸರಿಯಲ್ಲಿ 406 ರನ್ ಗಳಿಸಿದ್ದು 2 ಶತಕ ಗಳಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ರಚಿನ್ 389 ರನ್ ಬಾರಿಸಿದ್ದರು.

ಮಿಜೋರಾಂನಲ್ಲಿ ಬಿಜೆಪಿ ಜೊತೆ ಮೈತ್ರಿಯಿಲ್ಲ : ಝೋರಾಮ್‍ತಂಗ

ಟೀಮ್ ಇಂಡಿಯಾದ ವೇಗಿ ಜಸ್ಪ್ರೀತ್ ಬುಮ್ರಾ ವಿಶ್ವಕಪ್ ಟೂರ್ನಿಯಲ್ಲಿ ಅತ್ಯಮೋಘ ಬೌಲಿಂಗ್ ಪ್ರದರ್ಶನ ತೋರುತ್ತಿದ್ದು ಅಕ್ಟೋಬರ್ ತಿಂಗಳಿನಲ್ಲಿ 3.91 ಸರಾಸರಿಯಲ್ಲಿ 14 ವಿಕೆಟ್ ಪಡೆದಿದ್ದಾರೆ. ಅಫಾಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ 39 ರನ್‍ಗಳನ್ನು ನೀಡಿ ಪ್ರಮುಖ 4 ವಿಕೆಟ್ ಪಡೆದಿದ್ದಲ್ಲದೆ 16 ರನ್ ಗಳಿಸುವ ಮೂಲಕ ಆಲ್‍ರೌಂಡ್ ಪ್ರದರ್ಶನ ನೀಡಿ ತಂಡದ ಗೆಲುವಿಗೆ ಸಹಕರಿಸಿದ್ದರು.

ಅಲ್ಲದೆ ಡಿಫೆಂಡಿಂಗ್ ಚಾಂಪಿಯನ್ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ 32 ರನ್ ನೀಡಿ ಪ್ರಮುಖ 3 ವಿಕೆಟ್ ಕಬಳಿಸಿದ್ದರು. ಈ ಪ್ರದರ್ಶನದ ಆಧಾರದ ಮೇಲೆಯೇ ಐಸಿಸಿ ಪ್ರಕಟಿಸಿರುವ ಅಕ್ಟೋಬರ್ ತಿಂಗಳ ಪ್ರಶಸ್ತಿಗೆ ಬುಮ್ರಾ ಹೆಸರು ಪಾತ್ರವಾಗಿದೆ.

ಸಚಿನ್ ಪುತ್ರಿ ಜೊತೆ ಸಪ್ತಪದಿ ತುಳಿಯಲಿದ್ದಾರಂತೆ ಶುಭಮನ್ ಗಿಲ್..?!

ಬೆಂಗಳೂರು,ನ.7- ಟೀಮ್ ಇಂಡಿಯಾದ ಯುವ ಕ್ರಿಕೆಟಿಗ ಶುಭಮನ್ ಗಿಲ್ ಹಾಗೂ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಅವರು ಸದ್ಯದಲ್ಲೇ ವಿವಾಹವಾಗಲಿದ್ದಾರೆ ಎಂದು ಯುಎಇಯ ಖ್ಯಾತ ಕ್ರಿಕೆಟಿಗ ಚಿರಾಗ್ ಸೂರಿ ಅವರು ಅಚ್ಚರಿ ಹೇಳಿಕೆ ನೀಡಿದ್ದಾರೆ.

ಕಳೆದ ಕೆಲವು ವಷಗಳಿಂದ ಗಿಲ್ ಹಾಗೂ ಸಾರಾ ನಡುವೆ ಕುಚು ಕುಚು ನಡೆಯುತ್ತಿದೆ ಎಂಬ ಸುದ್ದಿಗಳು ಗುಟ್ಟಾಗೇನೂ ಉಳಿದಿಲ್ಲ. ಐಪಿಎಲ್ ಹಾಗೂ ಟಿ20 ವಿಶ್ವಕಪ್ ಟೂರ್ನಿಯ ವೇಳೆಯೂ ಅಭಿಮಾನಿಗಳು ಗಿಲ್ , ಫೀಲ್ಡಿಂಗ್ ಮಾಡುವಾಗ ಅಭಿಮಾನಿಗಳು ಸಾರಾ ಎಂದು ಕೂಗುವ ಮೂಲಕ ಕಿಚಾಯಿಸಿದ್ದರು.

ಈಗ ಶುಭಮನ್ ಗಿಲ್ ಅವರು ಭಾರತದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ತಲ್ಲೀನನಾಗಿದ್ದು, ಈ ನಡುವೆಯೇ ಇತ್ತೀಚೆಗೆ ಮುಂಬೈನ ಜಿಯೋ ವಲ್ರ್ಡ್ ಪ್ಲಾಜಾದಲ್ಲಿ ನಡೆದ ಸಮಾರಂಭದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು.

ಅಲ್ಲದೆ ಬಾಂಗ್ಲಾದೇಶ ವಿರುದ್ಧದ ಪಂದ್ಯದ ವೇಳೆ ಕ್ರೀಡಾಂಗಣಕ್ಕೆ ಆಗಮಿಸಿದ್ದ ಸಾರಾ, ಗಿಲ್ ಅವರನ್ನು ಹುರಿದುಂಬಿಸಿದ್ದರು. ಆ ಪಂದ್ಯದಲ್ಲಿ ಯುವ ಆರಂಭಿಕ ಅರ್ಧಶತಕ ಸಿಡಿಸಿದ್ದರು. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಪಂದ್ಯದ ವೇಳೆ ಗಿಲ್ 95 ರನ್‍ಗಳಿಗೆ ಔಟಾಗಿದ್ದಾಗ ಸಾರಾ ಸ್ಟ್ಯಾಡಿಂಗ್ ಎವಿಯೇಷನ್ ನೀಡಿದ್ದರು. ಈ ಘಟನೆಗಳಿಂದ ಗಿಲ್ ಹಾಗೂ ಸಾರಾ ವಿವಾಹವಾಗುತ್ತಾರೆ ಎಂಬ ಸುದ್ದಿಗಳಿಗೆ ರೆಕ್ಕೆಪುಕ್ಕಗಳು ಹುಟ್ಟಿಕೊಂಡಿವೆ.

ಮಿಜೋರಾಂನಲ್ಲಿ ಬಿಜೆಪಿ ಜೊತೆ ಮೈತ್ರಿಯಿಲ್ಲ : ಝೋರಾಮ್‍ತಂಗ

ಸಂದರ್ಶನವೊಂದರಲ್ಲಿ ಮುಂದೆ ಮದುವೆಯಾಗುವ ಕ್ರಿಕೆಟಿಗ ಯಾರು ಎಂಬ ಪ್ರಶ್ನೆಯನ್ನು ಯುಎಇ ಕ್ರಿಕೆಟಿಗ ಚಿರಾಗ್ ಸೂರಿಗೆ ಕೇಳಲಾಗಿದ್ದು, ಅದಕ್ಕೆ ಶುಭಮನ್ ಗಿಲ್ ಅವರು ತಮ್ಮ ಸುದೀರ್ಘ ಕಾಲದ ಗೆಳತಿಯನ್ನು ವಿವಾಹ ಆಗಲಿದ್ದಾರೆ ಎಂಬ ಉತ್ತರ ನೀಡಿದ್ದಾರೆ.

`ಕ್ರಿಕೆಟ್ ಲೋಕದ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ, ಬಹುಶಃ ತನ್ನ ತಂದೆಯನನು ಕಳೆದ 40-50 ವರ್ಷಗಳಿಂದ ಕ್ರಿಕೆಟ್ ಆಡುವುದನ್ನು ನೋಡಿರಬಹುದು. ಈಗ ತಮ್ಮ ಮುಂದಿನ ಜೀವನದಲ್ಲೂ ಮತ್ತೊಬ್ಬ ಕ್ರಿಕೆಟಿಗನ ಆಟವನ್ನು ನೋಡಬಹುದು’ ಎಂದು ಚಿರಾಗ್ ಹೇಳಿದ್ದಾರೆ. ಚಿರಾಗ್ ಅವರು ತಮ್ಮ ವೃತ್ತಿ ಜೀವನದಲ್ಲಿ ಆಡಿರುವ 18 ಪಂದ್ಯಗಳಿಂದ 2 ಶತಕ ಹಾಗೂ 3 ಅರ್ಧಶತಕಗಳ ನೆರವಿನಿಂದ 500 ರನ್‍ಗಳನ್ನು ಬಾರಿಸಿದ್ದಾರೆ.

ಪರೀಕ್ಷಾ ಅಕ್ರಮ ಪ್ರಕರಣ ಸಿಐಡಿ ತನಿಖೆ

ಬೆಂಗಳೂರು,ನ.7-ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ನಡೆಸಲಾದ ಪರೀಕ್ಷಾ ಅಕ್ರಮ ಕುರಿತು ಅಗತ್ಯಬಿದ್ದರೆ ಸಿಐಡಿ ತನಿಖೆ ನಡೆಸಲು ಸಿದ್ದ ಇರುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ಗೋಡೆ ಹಾರಿ ತಪ್ಪಿಸಿಕೊಂಡು ಹೋಗಲು ಅಧಿಕಾರಿಗಳೇ ಸಹಕರಿಸಿದ್ದಾರೆ.

ಆತ ಇರುವ ಬಗ್ಗೆ ಐಪಿಎಸ್ ಅಧಿಕಾರಿಯೇ ಮಾಹಿತಿ ನೀಡಿದರೂ ಬಂಧಿಸದೆ ನಾಪತ್ತೆಯಾಗಲು ನೆರವು ನೀಡಲಾಗಿದೆ ಎಂಬ ಕುರಿತು ತನಿಖೆ ನಡೆಸುತ್ತೇವೆ. ಯಾವುದೇ ಅಧಿಕಾರಿ ಶಾಮೀಲಾಗಿದ್ದರೆ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ಎಚ್ಚರಿಸಿದರು.

ಈಗಾಗಲೇ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆರ್.ಡಿ.ಪಾಟೀಲ್ ಹೆಸರು ಪದೇ ಪದೇ ಇಂಥ ಪ್ರಕರಣಗಳಲ್ಲಿ ಕೇಳಿಬರುತ್ತಿದೆ. ಇನ್ನು ಮುಂದೆ ಕಠಿಣ ಕ್ರಮ ಕೈಗೊಂಡು ಆರೋಪಿಗಳಿಗೆ ಭಯ ಹುಟ್ಟುವಂತೆ ಮಾಡಲಾಗುವುದು. ನಮ್ಮ ಸರ್ಕಾರದಲ್ಲಿ ಇಂಥದ್ದಕ್ಕೆಲ್ಲ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕತ್ತು ಸೀಳಿ ಕೊಂದ ಕಾಮುಕ

ಅಕ್ರಮದ ಹಿನ್ನಲೆಯಲ್ಲಿ ಮರುಪರೀಕ್ಷೆ ನಡೆಸುವ ಬಗ್ಗೆ ಗೃಹ ಇಲಾಖೆ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಅದು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸಂಬಂಧಿಸಿದ ವಿಷಯ ಎಂದು ಸ್ಪಷ್ಟಪಡಿಸಿದರು. ತನಿಖೆ ಉತ್ತಮ ಹಾದಿಯಲ್ಲಿದೆ ಎಲ್ಲ ರೀತಿಯ ಮಾಹಿತಿಗಳನ್ನು ಕಲೆ ಹಾಕಲಾಗುತ್ತಿದೆ.

ಒಂದು ವೇಳೆ ಸಿಐಡಿ ತನಿಖೆ ಅಗತ್ಯವಾದರೆ ಅದಕ್ಕೂ ಸರ್ಕಾರ ಕ್ರಮ ಕೈಗೊಳ್ಳಲಿದೆ. ನಮಗೆ ಪ್ರಕರಣದಲ್ಲಿ ಸತ್ಯಾಂಶ ಗೊತ್ತಾಗಬೇಕು. ಮುಂದಿನ ದಿನಗಳಲ್ಲಿ ಇಂತಹ ಕೃತ್ಯಗಳು ಮರುಕಳಿಸಬಾರದು ಎಂಬ ನಿಟ್ಟಿನಲ್ಲಿ ಎಚ್ಚರಿಕೆ ವಹಿಸುತ್ತಿದ್ದೇವೆ ಎಂದು ಹೇಳಿದರು.

ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ ಮುಂದುವರಿಕೆ

ಬೆಂಗಳೂರು,ನ.7- ಕಳೆದ ನಾಲ್ಕೈದು ದಿನಗಳಿಂದ ಚೇತರಿಕೆ ಕಂಡಿರುವ ಹಿಂಗಾರು ನಿನ್ನೆ ಸಂಜೆ ಹಾಗೂ ರಾತ್ರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ರಾಜಧಾನಿ ಬೆಂಗಳೂರು, ರಾಮನಗರ, ಮಂಡ್ಯ ಸೇರಿದಂತೆ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿ ತಗ್ಗುಪ್ರದೇಶಗಳಿಗೆ ನೀರು ನುಗ್ಗಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದ ಉತ್ತಮ ಮಳೆಯಾಗಿದ್ದರೆ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಚದುರಿದಂತೆ ಮಳೆಯಾಗಿದೆ.

ಬೆಂಗಳೂರಿನ ಜಕ್ಕೂರಿನಲ್ಲಿ 164 ಮಿ.ಮೀನಷ್ಟು ಭಾರೀ ಮಳೆಯಾಗಿದೆ. ಉತ್ತರಕರ್ನಾಟಕ ಭಾಗದಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಿದೆ. ರಾಜ್ಯದ ಒಳನಾಡಿನಲ್ಲೂ ಮಳೆಯಾಗಿದೆ. ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ತುಮಕೂರು, ಚಿತ್ರದುರ್ಗ, ಹಾವೇರಿ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ದಾವಣಗೆರೆ ಚಿಕ್ಕಮಗಳೂರು, ದಕ್ಷಿಣ ಕನ್ನಡ, ವಿಜಯನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ.

BREAKING : ಅಮೆರಿಕದ ಒತ್ತಡಕ್ಕೆ ಮಣಿದ ಇಸ್ರೇಲ್, ಯುದ್ಧದ ಅಲ್ಪ ವಿರಾಮಕ್ಕೆ ಒಪ್ಪಿಗೆ

ನಿನ್ನೆ ಸಂಜೆ ಆರಂಭವಾದ ಮಳೆ ತಡರಾತ್ರಿಯವರೆಗೂ ಹಲವು ಕಡೆಗಳಲ್ಲಿ ನಿರಂತರವಾಗಿ ಸುರಿದಿದೆ. ಇದರಿಂದ ರಸ್ತೆಗಳು ಕಾಲುವೆಗಳಂತೆ ನೀರು ತುಂಬಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ಉಂಟಾಗಿತ್ತು. ರಾಜ್ಯದ ಒಳನಾಡಿನ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗಿರುವುದರಿಂದ ಸಣ್ಣ ಕೆರೆ-ಕಟ್ಟೆಗಳಿಗೂ ನೀರು ಬಂದಿದ್ದು, ಜನರು ನಿಟ್ಟುಸಿರು ಬಿಡುವಂತಾಗಿದೆ. ಕೆಲವೆಡೆ ಹಳ್ಳ-ಕೊಳ್ಳಗಳು ಕೂಡ ತುಂಬಿ ಹರಿದಿವೆ.

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿ ಗಾಳಿಯಿಂದಾಗಿ ರಾಜ್ಯದ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಂಜೆ ಹಾಗೂ ರಾತ್ರಿ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಹವಾಮಾನ ಮುನ್ಸೂಚನೆ ಪ್ರಕಾರ ಇನ್ನು ಮೂರು ದಿನಗಳ ಕಾಲ ಮಳೆ ನಿರೀಕ್ಷಿಸಬಹುದಾಗಿದೆ. ರಾಜ್ಯಾದ್ಯಂತ ಉತ್ತಮ ಮಳೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ ಎಂದು ತಜ್ಞರು ತಿಳಿಸಿದ್ದಾರೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯು ವಾಯುಭಾರ ಕುಸಿತವಾಗಿ ಮಾರ್ಪಡಾಗುವ ಸಾಧ್ಯತೆಗಳಿವೆ.

ಅಲ್ಲದೆ ಬಂಗಾಳಕೊಲ್ಲಿಯಲ್ಲಿ ಟ್ರಫ್ ನಿರ್ಮಾಣ ವಾಗಿರುವುದರಿಂದ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಕರಾವಳಿ ಹಾಗೂ ಮಳೆನಾಡು ಭಾಗದಲ್ಲಿ ಇಂದು ಸಂಜೆ ಹಾಗೂ ರಾತ್ರಿ ವ್ಯಾಪಕ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಅವರು ಹೇಳಿದ್ದಾರೆ.

ಹಿಂಗಾರು ಮಳೆಯ ನಿರೀಕ್ಷೆಯಲ್ಲಿದ್ದ ರೈತ ಸಮುದಾಯಕ್ಕೆ ನಿರಂತರವಾಗಿ ಬೀಳುತ್ತಿರುವ ಮಳೆಯಿಂದ ಸಂತಸವಾಗಿದೆ. ಹಿಂಗಾರು ಬೆಳೆಗಳಿಗೆ ಈ ಮಳೆ ಅನುಕೂಲವಾಗಿದ್ದರೆ ಕೊಯ್ಲಿಗೆ ಬಂದಿದ್ದ ಮುಂಗಾರು ಬೆಳೆಗಳಿಗೆ ಹಾನಿ ಉಂಟಾಗಿದೆ.