Home Blog Page 1834

ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ ಮುಂದುವರಿಕೆ

ಬೆಂಗಳೂರು,ನ.7- ಕಳೆದ ನಾಲ್ಕೈದು ದಿನಗಳಿಂದ ಚೇತರಿಕೆ ಕಂಡಿರುವ ಹಿಂಗಾರು ನಿನ್ನೆ ಸಂಜೆ ಹಾಗೂ ರಾತ್ರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ರಾಜಧಾನಿ ಬೆಂಗಳೂರು, ರಾಮನಗರ, ಮಂಡ್ಯ ಸೇರಿದಂತೆ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿ ತಗ್ಗುಪ್ರದೇಶಗಳಿಗೆ ನೀರು ನುಗ್ಗಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದ ಉತ್ತಮ ಮಳೆಯಾಗಿದ್ದರೆ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಚದುರಿದಂತೆ ಮಳೆಯಾಗಿದೆ.

ಬೆಂಗಳೂರಿನ ಜಕ್ಕೂರಿನಲ್ಲಿ 164 ಮಿ.ಮೀನಷ್ಟು ಭಾರೀ ಮಳೆಯಾಗಿದೆ. ಉತ್ತರಕರ್ನಾಟಕ ಭಾಗದಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಿದೆ. ರಾಜ್ಯದ ಒಳನಾಡಿನಲ್ಲೂ ಮಳೆಯಾಗಿದೆ. ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ತುಮಕೂರು, ಚಿತ್ರದುರ್ಗ, ಹಾವೇರಿ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ದಾವಣಗೆರೆ ಚಿಕ್ಕಮಗಳೂರು, ದಕ್ಷಿಣ ಕನ್ನಡ, ವಿಜಯನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ.

BREAKING : ಅಮೆರಿಕದ ಒತ್ತಡಕ್ಕೆ ಮಣಿದ ಇಸ್ರೇಲ್, ಯುದ್ಧದ ಅಲ್ಪ ವಿರಾಮಕ್ಕೆ ಒಪ್ಪಿಗೆ

ನಿನ್ನೆ ಸಂಜೆ ಆರಂಭವಾದ ಮಳೆ ತಡರಾತ್ರಿಯವರೆಗೂ ಹಲವು ಕಡೆಗಳಲ್ಲಿ ನಿರಂತರವಾಗಿ ಸುರಿದಿದೆ. ಇದರಿಂದ ರಸ್ತೆಗಳು ಕಾಲುವೆಗಳಂತೆ ನೀರು ತುಂಬಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ಉಂಟಾಗಿತ್ತು. ರಾಜ್ಯದ ಒಳನಾಡಿನ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗಿರುವುದರಿಂದ ಸಣ್ಣ ಕೆರೆ-ಕಟ್ಟೆಗಳಿಗೂ ನೀರು ಬಂದಿದ್ದು, ಜನರು ನಿಟ್ಟುಸಿರು ಬಿಡುವಂತಾಗಿದೆ. ಕೆಲವೆಡೆ ಹಳ್ಳ-ಕೊಳ್ಳಗಳು ಕೂಡ ತುಂಬಿ ಹರಿದಿವೆ.

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿ ಗಾಳಿಯಿಂದಾಗಿ ರಾಜ್ಯದ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಂಜೆ ಹಾಗೂ ರಾತ್ರಿ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಹವಾಮಾನ ಮುನ್ಸೂಚನೆ ಪ್ರಕಾರ ಇನ್ನು ಮೂರು ದಿನಗಳ ಕಾಲ ಮಳೆ ನಿರೀಕ್ಷಿಸಬಹುದಾಗಿದೆ. ರಾಜ್ಯಾದ್ಯಂತ ಉತ್ತಮ ಮಳೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ ಎಂದು ತಜ್ಞರು ತಿಳಿಸಿದ್ದಾರೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯು ವಾಯುಭಾರ ಕುಸಿತವಾಗಿ ಮಾರ್ಪಡಾಗುವ ಸಾಧ್ಯತೆಗಳಿವೆ.

ಅಲ್ಲದೆ ಬಂಗಾಳಕೊಲ್ಲಿಯಲ್ಲಿ ಟ್ರಫ್ ನಿರ್ಮಾಣ ವಾಗಿರುವುದರಿಂದ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಕರಾವಳಿ ಹಾಗೂ ಮಳೆನಾಡು ಭಾಗದಲ್ಲಿ ಇಂದು ಸಂಜೆ ಹಾಗೂ ರಾತ್ರಿ ವ್ಯಾಪಕ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಅವರು ಹೇಳಿದ್ದಾರೆ.

ಹಿಂಗಾರು ಮಳೆಯ ನಿರೀಕ್ಷೆಯಲ್ಲಿದ್ದ ರೈತ ಸಮುದಾಯಕ್ಕೆ ನಿರಂತರವಾಗಿ ಬೀಳುತ್ತಿರುವ ಮಳೆಯಿಂದ ಸಂತಸವಾಗಿದೆ. ಹಿಂಗಾರು ಬೆಳೆಗಳಿಗೆ ಈ ಮಳೆ ಅನುಕೂಲವಾಗಿದ್ದರೆ ಕೊಯ್ಲಿಗೆ ಬಂದಿದ್ದ ಮುಂಗಾರು ಬೆಳೆಗಳಿಗೆ ಹಾನಿ ಉಂಟಾಗಿದೆ.

ವಾಯು ಮಾಲಿನ್ಯ ಜನರ ಆರೋಗ್ಯ ಹತ್ಯೆಗೆ ಸಮ ; ಸುಪ್ರೀಂ ಕೋರ್ಟ್

ನವದೆಹಲಿ,ನ.7- ಉಸಿರುಗಟ್ಟಿಸುವ ಗಾಳಿಯ ಗುಣಮಟ್ಟವೂ ಜನರ ಆರೋಗ್ಯದ ಹತ್ಯೆಗೆ ಕಾರಣವಾಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ರಾಜಧಾನಿ ನವದೆಹಲಿಯ ವಾಯು ಮಾಲಿನ್ಯ ರಾಜಕೀಯ ಕದನವಾಗಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದ್ದು, ಉಸಿರುಗಟ್ಟಿಸುವ ಗಾಳಿಯ ಗುಣಮಟ್ಟವು ಜನರ ಆರೋಗ್ಯದ ಹತ್ಯೆಗೆ ಕಾರಣವಾಗಿದೆ ಎಂದು ಒತ್ತಿ ಹೇಳಿದೆ.

ತೆಲಂಗಾಣ ಚುನಾವಣೆ : ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಬಿಎಸ್ವೈ ಹೆಸರು

ನೆರೆಯ ರಾಜ್ಯಗಳಾದ ಪಂಜಾಬ್ ಮತ್ತು ಹರಿಯಾಣದಲ್ಲಿ ಬೆಳೆಗಳ ಅವಶೇಷಗಳನ್ನು ಸುಡುವುದು ಪ್ರತಿ ಚಳಿಗಾಲದಲ್ಲಿ ದೆಹಲಿಯ ವಾಯುಮಾಲಿನ್ಯದಲ್ಲಿ ಭಾರಿ ಏರಿಕೆಗೆ ಪ್ರಮುಖ ಅಂಶವಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.

ಬೆಳೆ ಸುಡುವುದು ಒಂದು ಪ್ರಮುಖ ಸಮಸ್ಯೆಯಾಗಿದೆ. ಅದನ್ನು ವಿಂಗಡಿಸಬೇಕಾಗಿದೆ. ನಂತರ ವಾಹನ ಮಾಲಿನ್ಯ ಇವುಗಳನ್ನು ಸರಿಪಡಿಸಿದ ನಂತರ ನ್ಯಾಯಾಲಯವು ಏನಾದರೂ ಮಾಡಬೇಕಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಕಾಂಗ್ರೆಸ್ ಜಾತಿಗಣತಿ ಮೋಡಿಗೆ ಮರುಳಾಗಬೇಡಿ : ಮಾಯಾವತಿ

ಅಶೋಕ್ ನಗರ, ನ.7- ಕಾಂಗ್ರೆಸ್ ಪಕ್ಷದ ಜಾತಿ ಗಣತಿ ಕಾರ್ಯಕ್ಕೆ ಜನ ಮರುಳಾಗಬಾರದು ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಮನವಿ ಮಾಡಿಕೊಂಡಿದ್ದಾರೆ. ಇದೇ ನ.17 ರಂದು ನಡೆಯಲಿರುವ ಮಧ್ಯಪ್ರದೇಶದ ಚುನಾವಣೆ ಅಂಗವಾಗಿ ಅಶೋಕ್ ನಗರದಲ್ಲಿ ಆಯೋಜಿಸಿದ್ದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜಾತಿ ಗಣತಿಗಾಗಿ ಕಾಂಗ್ರೆಸ್‍ನ ಬೇಡಿಕೆಗೆ ಸಿಲುಕಿಕೊಳ್ಳಬೇಡಿ ಎಂದು ಜನರನ್ನು ಕೇಳಿಕೊಂಡಿದ್ದಾರೆ.

ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡುವುದನ್ನು ಕಾಂಗ್ರೆಸ್ ವಿಳಂಬ ಮಾಡಿರುವ ಕಾಂಗ್ರೆಸಿಗರು ಮಾಡುತ್ತಿರುವ ಜಾತಿಯಾಧಾರಿತ ಜನಗಣತಿ ಮೋಡಿಗೆ ಮಾರುಹೋಗಬೇಡಿ ಎಂದು ಅವರು ಮನವಿ ಮಾಡಿಕೊಂಡರು.

BREAKING : ಅಮೆರಿಕದ ಒತ್ತಡಕ್ಕೆ ಮಣಿದ ಇಸ್ರೇಲ್, ಯುದ್ಧದ ಅಲ್ಪ ವಿರಾಮಕ್ಕೆ ಒಪ್ಪಿಗೆ

ಸ್ವಾತಂತ್ರ್ಯದ ನಂತರ, ಕಾಂಗ್ರೆಸ್ ಆಳ್ವಿಕೆಯಲ್ಲಿ, ಕಾಕಾ ಕಾಲೇಲ್ಕರ್ ಆಯೋಗ ಮತ್ತು ಮಂಡಲ್ ಆಯೋಗವು ಒಬಿಸಿಗಳಿಗೆ ಮೀಸಲಾತಿಯನ್ನು ಶಿಫಾರಸು ಮಾಡಿತು. ಆದರೆ ಕಾಂಗ್ರೆಸ್ ಕಾರ್ಯನಿರ್ವಹಿಸಲಿಲ್ಲ ಆದರೆ ಈಗ ಗೆಲುವಿಗಾಗಿ ಕಾಂಗ್ರೆಸ್ ಜಾತಿ ಗಣತಿ ಬಯಸುತ್ತಿದೆ ಎಂದಿದ್ದಾರೆ. ದಲಿತರು ಮತ್ತು ಬುಡಕಟ್ಟು ಜನಾಂಗದವರನ್ನು ಬಿಜೆಪಿ ಶೋಷಣೆ ಮಾಡಿದೆ ಎಂದು ಅವರು ಇದೇ ಸಂದರ್ಭದಲ್ಲಿ ಆರೋಪಿಸಿದರು.

ಬಿಎಸ್‍ಪಿ ಮಧ್ಯಪ್ರದೇಶ ಚುನಾವಣೆಯಲ್ಲಿ ಗೊಂಡ್ವಾನಾ ಗಂತಂತ್ರ ಪಾರ್ಟಿ (ಜಿಜಿಪಿ) ಜೊತೆ ಮೈತ್ರಿ ಮಾಡಿಕೊಂಡು ತನ್ನ ಎಲ್ಲಾ ಶಕ್ತಿಯೊಂದಿಗೆ ಹೋರಾಡುತ್ತಿದೆ ಎಂದು ಅವರು ಹೇಳಿದರು.

ಕಸದ ಸಮಸ್ಯೆ ಉಲ್ಬಣ, ಸಾರ್ವಜನಿಕರ ಆಕ್ರೋಶ

ಬೆಂಗಳೂರು,ನ.7- ರಾಜಧಾನಿ ಬೆಂಗಳೂರಿಗೆ ಹೊಂದಿಕೊಂಡಿರುವ ಮಹದೇವಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಸದ ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದ್ದು, ತಕ್ಷಣವೇ ಕಸ ಸುರಿಯುವುದನ್ನು ನಿಲ್ಲಿಸದಿದ್ದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ಸಾರ್ವಜನಿಕರು ಎಚ್ಚರಿಸಿದ್ದಾರೆ.

ಮಹದೇವಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಿಟ್ಟಗಾನಹಳ್ಳಿ, ಕಣ್ಣೂರು, ಬಂಡೆಹೊಸೂರು ಸೇರಿದಂತೆ ಮತ್ತಿತರ ಕಡೆ ಬಿಬಿಎಂಪಿಯವರು ಪ್ರತಿದಿನ 500 ಟ್ರಕ್‍ಗಳಲ್ಲಿ ಕಸ ತಂದು ಸುರಿಯುತ್ತಿರುವುದರಿಂದ ಸುತ್ತಮುತ್ತಲಿನ ಗ್ರಾಮಗಳಲ್ಲಿ ರೋಗರುಜನೆಗಳು ಆವರಿಸಿವೆ ಎಂದು ಸಾರ್ವಜನಿಕರು ದೂರಿದ್ದಾರೆ.

ಬಿಬಿಎಂಪಿಯು ಸಂಗ್ರಹಿಸುವ ಶೇ.90ರಷ್ಟು ಕಸವನ್ನು ಕಣ್ಣೂರು, ಮಿಟಗಾನಹಳ್ಳಿಯ ಕಲ್ಲು ಕ್ವಾರಿಯಲ್ಲಿ ಘನತ್ಯಾಜ್ಯವನ್ನು ತಂದು ಸುರಿಯುತ್ತಿರುವ ಪರಿಣಾಮ ಕುಡಿಯುವ ನೀರು ಕಲುಷಿತಗೊಂಡಿದ್ದು, ಅಂತರ್ಜಲದ ಮೇಲೂ ಪರಿಣಾಮ ಬೀರಿದೆ.

5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕತ್ತು ಸೀಳಿ ಕೊಂದ ಕಾಮುಕ

ಇತ್ತೀಚಿನ ಕಳೆದ ಹಲವು ತಿಂಗಳಿನಿಂದ ಸಾರ್ವಜನಿಕರಿಗೆ ತಲೆನೋವು, ಮೈಕೈ ಅಲರ್ಜಿ, ಶೀತ, ನೆಗಡಿ, ಕೆಮ್ಮು ಸೇರಿದಂತೆ ಹಲವಾರು ರೋಗರುಜನೆಗಳು ಕಾಣಿಸಿಕೊಂಡಿದ್ದು, ಜನತೆ ಆತಂಕಗೊಂಡಿದ್ದಾರೆ. ಕಣ್ಣೂರು ಹಾಗೂ ಮಿಟಗಾನಹಳ್ಳಿಯ ಕಲ್ಲು ಕ್ವಾರಿಯಲ್ಲಿ ಬಿಬಿಎಂಪಿಯವರು ಸುರಿಯುತ್ತಿರುವ ಘನತ್ಯಾಜ್ಯದಿಂದ ಸುಮಾರು 300 ಕೋಟಿ ಲೀಟರ್ ಲಿಚಿಡ್ ಎಂಬ ವಿಷಕಾರಿ ರಾಸಾಯನಿಕ ನೀರು ಉತ್ಪತ್ತಿಯಾಗುತ್ತದೆ. ಇದರ ಒಂದು ಹನಿ ಭೂಮಿ ಮೇಲೆ ಬಿದ್ದರೆ ಮನುಷ್ಯನ ಆರೋಗ್ಯದ ಮೇಲೆ ಭಾರೀ ದುಷ್ಪರಿಣಾಮ ಬೀರುತ್ತದೆ ಎಂದು ಸ್ವತಃ ಪಾಲಿಕೆ ಅಧಿಕಾರಿಗಳೇ ಒಪ್ಪಿಕೊಳ್ಳುತ್ತಾರೆ.

2016ರಿಂದಲೂ ಇಲ್ಲಿ ಘನತ್ಯಾಜ್ಯವನ್ನು ಪಾಲಿಕೆ ಅಧಿಕಾರಿಗಳು ಸುರಿಯುತ್ತಿರುವುದರಿಂದ ಸುತ್ತಮುತ್ತಲಿನ ಕೆರೆಗಳು ಕಲುಷಿತಗೊಂಡಿವೆ. ಈ ನೀರನ್ನು ಕುಡಿದು ಜಾನುವಾರುಗಳ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರಿದೆ. ಪ್ರತಿದಿನ ಕಸ ಸುರಿಯುತ್ತಿರುವುದರಿಂದ ದುರ್ನಾತ ಬೀರುತ್ತಿದ್ದು, ಜನತೆ ಮೂಗು ಮುಚ್ಚಿಕೊಂಡು ತಿರಗಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಉಸಿರಾಡುವ ಗಾಳಿಯೂ ಕೂಡ ಕಲುಷಿತಗೊಂಡಿರುವುದರಿಂದ ಸಾರ್ವಜನಿಕರು ಅನಾರೋಗ್ಯದಿಂದ ಬಳಲುತ್ತಿದ್ದಾರೆ.

ಘನತ್ಯಾಜ್ಯವನ್ನು ತಂದು ಸುರಿಯಬೇಡಿ ಎಂದು ಸಾರ್ವಜನಿಕರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಪಾಲಿಕೆ ಅಕಾರಿಗಳು ಸಬೂಬು ಉತ್ತರ ನೀಡಿ ಸಾಗ ಹಾಕುತ್ತಿದ್ದಾರೆ. ಸೋಮವಾರ ಮಾಜಿ ಸಚಿವ ಹಾಗೂ ಟಾಸ್ಕ್‍ಫೋರ್ಸ್ ಅಧ್ಯಕ್ಷ ಅರವಿಂದ ಲಿಂಬಾವಳಿ, ಕ್ಷೇತ್ರದ ಶಾಸಕಿ ಮಂಜುಳ, ಇಒ ವಸಂತಕುಮಾರ್, ಕಣ್ಣುರು ಪಂಚಾಯ್ತಿ ಅಧ್ಯಕ್ಷ ಅಶೋಕ್ ಗೌಡ ಸೇರಿದಂತೆ ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿದ್ದರು.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಇಲ್ಲಿನ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸುವುದಾಗಿ ಭರವಸೆ ಕೊಟ್ಟಿದ್ದಾರೆ. ಘನತ್ಯಾಜ್ಯದಿಂದ ಉತ್ಪತ್ತಿಯಾಗುವ ಕೊಳಚೆ ನೀರನ್ನು ಸಮರ್ಪಕವಾಗಿ ಸಂಸ್ಕರಣೆ ಮಾಡುತ್ತಿಲ್ಲ.ಇದು ಕೆರೆಯೊಡಲು ಸೇರುತ್ತಿದ್ದು, ನೀರೆಲ್ಲ ಕಲುಷಿತಗೊಳ್ಳುತ್ತಿದೆ ಎಂದು ಸಾರ್ವಜನಿಕರು ತುಷಾರ್ ಗಿರಿನಾಥ್ ಮುಂದೆ ಅಳಲು ತೋಡಿಕೊಂಡಿದ್ದಾರೆ.

ಕೂಡಲೇ ಘನತ್ಯಾಜ್ಯ ಸುರಿಯುವುದನ್ನು ನಿಲ್ಲಿಸಬೇಕು. ಭವಿಷ್ಯದಲ್ಲಿ ಇದು ಇನ್ನಷ್ಟು ಅನಾಹುತ ಉದ್ಘವಿಸುವ ಸಾದ್ಯತೆ ಇದೆ. ನಮ್ಮ ಮಕ್ಕಳು ಬದುಕಬೇಕಾದರೆ ಇಲ್ಲಿಗೆ ಶಾಶ್ವತ ಪರಿಹಾರವನ್ನು ರೂಪಿಸಬೇಕು ಇಲ್ಲದಿದ್ದರೆ ಹೋರಾಟ ನಡೆಸುವುದು ಅನಿವಾರ್ಯ ಎಂದು ಸಾರ್ವಜನಿಕರು ಎಚ್ಚರಿಕೆ ಕೊಟ್ಟಿದ್ದಾರೆ.

ಮಿಜೋರಾಂನಲ್ಲಿ ಬಿಜೆಪಿ ಜೊತೆ ಮೈತ್ರಿಯಿಲ್ಲ : ಝೋರಾಮ್‍ತಂಗ

ಐಜ್ವಾಲ್,ನ.7- ಆಡಳಿತಾರೂಢ ಎಂಎನ್‍ಎಫ್ ಚುನಾವಣೆಯಲ್ಲಿ ಜಯಭೇರಿ ಬಾರಿಸುವುದರಿಂದ ಮಿಜೋರಾಂನಲ್ಲಿ ಹಂಗ್ ಅಸೆಂಬ್ಲಿ ಇರುವುದಿಲ್ಲ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಝೋರಾಮ್‍ತಂಗ ಅವರು, ರಾಜ್ಯದಲ್ಲಿ ಬಿಜೆಪಿಯೊಂದಿಗೆ ತಮ್ಮ ಪಕ್ಷವು ಮೈತ್ರಿ ಹೊಂದಿಲ್ಲ ಆದರೆ, ಕೇಂದ್ರದಲ್ಲಿ ಎನ್‍ಡಿಎಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ.

ಝೋ ಬುಡಕಟ್ಟುಗಳನ್ನು ಒಗ್ಗೂಡಿಸುವ ನಮ್ಮ ಪ್ರಯತ್ನಗಳು ಪಕ್ಷಕ್ಕೆ ಚುನಾವಣಾ ಲಾಭವನ್ನು ತರುತ್ತವೆ ಎಂದು ಪ್ರತಿಪಾದಿಸಿದ ಅವರು, ಮ್ಯಾನ್ಮಾರ್, ಬಾಂಗ್ಲಾದೇಶ ಮತ್ತು ಮಣಿಪುರದಿಂದ ಪಲಾಯನ ಮಾಡುವ ಜನರು ತಮ್ಮ ಪಕ್ಷವು ಆಳುವ ಮಿಜೋರಾಂನಲ್ಲಿ ಸುರಕ್ಷಿತರಾಗಿದ್ದಾರೆ ಎಂದು ಹೇಳಿದರು.

ತೆಲಂಗಾಣ ಚುನಾವಣೆ : ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಬಿಎಸ್ವೈ ಹೆಸರು

40 ಸದಸ್ಯ ಬಲದ ಮಿಜೋರಾಂ ವಿಧಾನಸಭೆಗೆ ಬಿಗಿ ಭದ್ರತೆಯ ನಡುವೆ ಮತದಾನ ನಡೆಯುತ್ತಿದ್ದು, ಸಂಜೆ 4ರವರೆಗೆ ಮತದಾನ ನಡೆಯಲಿದೆ. ಐಜ್ವಾಲ್‍ನಲ್ಲಿ ಮತ ಚಲಾಯಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಝೋರಾಮ್‍ತಂಗ, ಹಣಕಾಸಿನ ಅಡಚಣೆಗಳ ಹೊರತಾಗಿಯೂ ವಿವಿಧ ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಮತ್ತು ಉತ್ತಮ ಅಭ್ಯರ್ಥಿಗಳನ್ನು ಹಾಕುವಲ್ಲಿ ಪ್ರತಿಸ್ರ್ಪಧಿ ಪಕ್ಷಗಳ ವೈಫಲ್ಯ ಸೇರಿದಂತೆ ಹಲವಾರು ಅಂಶಗಳಿಂದಾಗಿ ತಮ್ಮ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್‍ಎಫ) ಚುನಾವಣೆಯಲ್ಲಿ ಗೆಲ್ಲುತ್ತದೆ ಎಂದು ಹೇಳಿದರು.

ತಮ್ಮ ಪಕ್ಷವನ್ನು ಕೇಸರಿ ಪಕ್ಷದಿಂದ ದೂರವಿಡುವ ಪ್ರಯತ್ನದಲ್ಲಿ, ನಾವು ಕೇಂದ್ರದಲ್ಲಿ ಎನ್‍ಡಿಎ ಜೊತೆ ಪಾಲುದಾರರಾಗಿದ್ದೇವೆ ಮತ್ತು ನಮ್ಮ ಬೆಂಬಲವು ಪ್ರಾಥಮಿಕವಾಗಿ ಸಮಸ್ಯೆ ಆಧಾರಿತವಾಗಿದೆ. ರಾಜ್ಯದಲ್ಲಿ ನಾವು ಬಿಜೆಪಿಯೊಂದಿಗೆ ಯಾವುದೇ ಸಂಬಂಧ ಅಥವಾ ಮೈತ್ರಿ ಹೊಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಾವು ಅಧಿಕಾರವನ್ನು ಉಳಿಸಿಕೊಂಡರೆ, ಅಗತ್ಯವಿದ್ದಲ್ಲಿ ಪೂರ್ವನಿರ್ಮಿತ ಮನೆಗಳನ್ನು ನಿರ್ಮಿಸುವ ಮೂಲಕ ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶದ ನಿರಾಶ್ರೀತರಿಗೆ ಮತ್ತು ಮಣಿಪುರದಿಂದ ಆಂತರಿಕವಾಗಿ ಸ್ಥಳಾಂತರಗೊಂಡ ಜನರಿಗೆ ಪುನರ್ವಸತಿ ಕಲ್ಪಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಝೋರಂತಂಗ ಹೇಳಿದರು.

ಅಮಿತ್ ಶಾಗೆ ಸವಾಲು ಹಾಕಿದ ಬಘೇಲ್

ನವದೆಹಲಿ,ನ.7-ಮಹಾದೇವ್ ಬೆಟ್ಟಿಂಗ್ ಆ್ಯಪ್ ಕುರಿತಂತೆ ಯಾವುದೇ ಚರ್ಚೆಗೆ ನಾನು ಸಿದ್ದ ಎಂದು ಛತ್ತೀಸ್‍ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಬಿಜೆಪಿ ಪಂಥಾಹ್ವಾನ ನೀಡಿದ್ದಾರೆ. ಛತ್ತೀಸ್‍ಗಢ ವಿಧಾನಸಭೆಗೆ ಮೊದಲ ಹಂತದ ಮತದಾನ ಆರಂಭವಾಗುತ್ತಿದ್ದಂತೆ ಮಹಾದೇವ್ ಆ್ಯಪ್ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಆಹ್ವಾನಕ್ಕೆ ಪ್ರತಿಕ್ರಿಯಿಸಿರುವ ಬಘೇಲ್, ತಮ್ಮ ಸರ್ಕಾರದ ಸಾಧನೆಗಳ ಕುರಿತು ಚರ್ಚೆಗೆ ಆಹ್ವಾನ, ದಿನಾಂಕ, ಸಮಯ ಮತ್ತು ಸ್ಥಳವನ್ನು ಹೆಸರಿಸಲು ಕೇಂದ್ರ ಗೃಹ ಸಚಿವರನ್ನು ಕೇಳಿಕೊಂಡಿದ್ದಾರೆ.

ಗೃಹ ಸಚಿವ ಅಮಿತ್ ಶಾ ಅವರೇ, ನಾನು ನಿಮ್ಮ ಸವಾಲನ್ನು ಸ್ವೀಕರಿಸಿದ್ದೇನೆ, ಅದೇ ಪಾಂಡರಿಯಾ ಅಸೆಂಬ್ಲಿಗೆ (ಆಸನ) ನೀವು ನನಗೆ (ನನ್ನ ಸರ್ಕಾರ ಮಾಡಿದ ಕೆಲಸದ ಬಗ್ಗೆ) ಚರ್ಚೆಗೆ ಹೋಗುತ್ತೇನೆ. ನೀವು ಇನ್ನೂ ವೇದಿಕೆ, ದಿನಾಂಕ ಮತ್ತು ಸಮಯವನ್ನು ಹೇಳಿಲ್ಲ. ಆದರೆ ಸಾರ್ವಜನಿಕರು ವೇದಿಕೆಯನ್ನು ಸಿದ್ಧಪಡಿಸಿದ್ದಾರೆ ಎಂದು ಬಘೆಲ್ ಹೇಳಿದರು.

BREAKING : ಅಮೆರಿಕದ ಒತ್ತಡಕ್ಕೆ ಮಣಿದ ಇಸ್ರೇಲ್, ಯುದ್ಧದ ಅಲ್ಪ ವಿರಾಮಕ್ಕೆ ಒಪ್ಪಿಗೆ

ಎರಡು ಆಸನಗಳ ಕಪ್ಪು ಸೋಫಾದ ಛಾಯಾಚಿತ್ರ – ಇಬ್ಬರು ನಾಯಕರ ಹೆಸರನ್ನು ಹೊಂದಿರುವ ಫಲಕಗಳಿರುವ ಚಿತ್ರ ಹಾಕಿ ದಯವಿಟ್ಟು ದಿನಾಂಕ ಮತ್ತು ಸಮಯವನ್ನು ನನಗೆ ತಿಳಿಸಿ… ಎಂದು ಅವರು ಎಕ್ಸ್ ಮಾಡಿದ್ದಾರೆ. ಆದರೆ, ಬಘೇಲ್ ಅವರ ಈ ಸವಾಲಿಗೆ ಅಮಿತ್ ಶಾ ಇನ್ನು ಪ್ರತಿಕ್ರಿಯೆ ನೀಡಿಲ್ಲ.

5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕತ್ತು ಸೀಳಿ ಕೊಂದ ಕಾಮುಕ

ಭುವನೇಶ್ವರ, ನ.7 (ಪಿಟಿಐ) ಒಡಿಶಾ ರಾಜಧಾನಿ ಭುವನೇಶ್ವರದ ಕೊಳೆಗೇರಿಯಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಆಕೆಯ ಕತ್ತು ಸೀಳಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಏರ್‍ಫೀಲ್ಡ ಪೊಲೀಸ್ ಠಾಣೆ ವ್ಯಾಪ್ತಿಯ ಸಮೀಪದ ಸುಂದರಪದ ಪ್ರದೇಶದ ಸಾಹಿಯಲ್ಲಿರುವ ತನ್ನ ಮನೆಯಲ್ಲಿ ಬಾಲಕಿ ಒಂಟಿಯಾಗಿದ್ದಾಗ ಈ ದುಷ್ಕøತ್ಯ ನಡೆಸಲಾಗಿದೆ.

ಸ್ಲಮ್‍ನ ನಿವಾಸಿಯಾಗಿರುವ ಆರೋಪಿಯು ಮನೆಗೆ ನುಗ್ಗಿ ಅಪರಾಧ ಎಸಗಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೆಲಸ ಮುಗಿಸಿ ಮರಳಿದ ಬಳಿಕ ಮನೆಯಲ್ಲಿ ಬಾಲಕಿ ಪತ್ತೆಯಾಗದಿದ್ದು, ತೀವ್ರ ಹುಡುಕಾಟ ನಡೆಸಿದ ಬಳಿಕ ಹಾಸಿಗೆಯ ಕೆಳಗೆ ಆಕೆಯ ಶವ ಪತ್ತೆಯಾಗಿದೆ ಎಂದು ಬಾಲಕಿಯ ಪೋಷಕರು ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.

ಆರೋಪಿಯೊಂದಿಗೆ ಬಾಲಕಿ ಚಾಕೊಲೇಟ್ ಖರೀದಿಸಲು ತನ್ನ ಅಂಗಡಿಗೆ ಬಂದಿದ್ದಳು ಎಂದು ಸಮೀಪದ ಅಂಗಡಿ ಮಾಲೀಕರು ಹೇಳಿದ್ದಾರೆ. ಆರೋಪಿ ಆಕೆಯ ಮನೆಗೆ ಪ್ರವೇಶಿಸಿ ಹೊರಬರುವುದನ್ನು ಇತರ ಜನರು ಸಹ ನೋಡಿದ್ದಾರೆ ಎಂದು ಅವರು ಹೇಳಿದರು.

BREAKING : ಅಮೆರಿಕದ ಒತ್ತಡಕ್ಕೆ ಮಣಿದ ಇಸ್ರೇಲ್, ಯುದ್ಧದ ಅಲ್ಪ ವಿರಾಮಕ್ಕೆ ಒಪ್ಪಿಗೆ

ಆರೋಪಿ ಪತ್ತೆಗೆ ವಿಶೇಷ ದಳ ಶೋಧ ಆರಂಭಿಸಿದೆ ಎಂದು ಏರ್‍ಫೀಲ್ಡ ಪೊಲೀಸ್ ಠಾಣೆಯ ಪ್ರಭಾರ ಅಧಿಕಾರಿ ಅಶೋಕ್ ನಾಯಕ್ ತಿಳಿಸಿದ್ದಾರೆ. ಆರೋಪಿ ಒಬ್ಬನೇ ಅಪರಾಧ ಎಸಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ನಾಯಕ್ ಹೇಳಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವೈಜ್ಞಾನಿಕ ತಂಡವು ಸ್ಥಳದಿಂದ ಪುರಾವೆಗಳನ್ನು ಸಂಗ್ರಹಿಸಲಿದೆ ಎಂದು ಅವರು ಹೇಳಿದರು.

ಮಾಹಿತಿ ಆಯುಕ್ತರ ನೇಮಕದಲ್ಲಿ ಲೋಪ : ರಾಷ್ಟ್ರಪತಿಗಳಿಗೆ ಪತ್ರ ಬರೆದ ಚೌಧರಿ

ನವದೆಹಲಿ, ನ 7 (ಪಿಟಿಐ) – ಮುಖ್ಯ ಮಾಹಿತಿ ಆಯುಕ್ತರ ನೇಮಕ ಪ್ರಕ್ರಿಯೆಯಲ್ಲಿ ತಮ್ಮನ್ನು ಕತ್ತಲೆಯಲ್ಲಿ ಇರಿಸಿ ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ಸಂಸದ ಅೀಧಿರ್ ರಂಜನ್ ಚೌಧರಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ. ಆಯ್ಕೆ ಪ್ರಕ್ರಿಯೆಯಲ್ಲಿ ತಮ್ಮನ್ನು ಕತ್ತಲೆಯಲ್ಲಿ ಇರಿಸಿ ಪ್ರಜಾಪ್ರಭುತ್ವದ ರೂಢಿಗಳು, ಪದ್ಧತಿಗಳು ಮತ್ತು ಕಾರ್ಯವಿಧಾನಗಳನ್ನು ಗಾಳಿಗೆ ತೂರಿ ಮಾಹಿತಿ ಆಯುಕ್ತರ ನೇಮಕ ಮಾಡಲಾಗಿದೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ. ಪ್ರತಿಪಕ್ಷಗಳ ಧ್ವನಿಯನ್ನು ನಿರ್ಲಕ್ಷಿಸಲಾಗಿದೆ ಮತ್ತು ಇದು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ಎಂದು ಪತ್ರದಲ್ಲಿ ಚೌಧರಿ ಹೇಳಿದ್ದಾರೆ.

ಛತ್ತೀಸ್‍ಗಢ : ಮಾವೋವಾದಿಗಳಿಂದ ಐಇಡಿ ಸ್ಫೋಟ, ಸಿಆರ್‌ಪಿಎಫ್ ಯೋಧರಿಗೆ ಗಾಯ

ಮಾಜಿ ಐಎಎಸ್ ಅಧಿಕಾರಿ ಹೀರಾಲಾಲ್ ಸಮರಿಯಾ ಅವರು ಮುಖ್ಯ ಮಾಹಿತಿ ಆಯುಕ್ತರಾಗಿ ಅಧ್ಯಕ್ಷ ಮುರ್ಮು ಅವರಿಂದ ಪ್ರಮಾಣ ವಚನ ಸ್ವೀಕರಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿಯ ಸಭೆಯ ಸಮಯವನ್ನು ಬದಲಾಯಿಸುವಂತೆ ತಮ್ಮ ಮನವಿಯನ್ನು ನವೆಂಬರ್ 3 ರ ಸಂಜೆಯಿಂದ ಬೆಳಿಗ್ಗೆಯವರೆಗೆ ಬದಲಾಯಿಸಲಾಗಿಲ್ಲ ಮತ್ತು ತೆಗೆದುಕೊಂಡ ನಿರ್ಧಾರಗಳ ಬಗ್ಗೆ ತನಗೆ ತಿಳಿಸಲಾಗಿಲ್ಲ ಎಂದು ಚೌಧರಿ ಆರೋಪಿಸಿದರು.

ಮೇಲಿನ ಸಂಪೂರ್ಣ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದ ಸಂಗತಿಗಳನ್ನು ಗಮನಿಸಿದರೆ, ನಮ್ಮ ಪ್ರಜಾಪ್ರಭುತ್ವ ಸಂಪ್ರದಾಯಗಳು ಮತ್ತು ನೀತಿಗಳು ಪ್ರತಿಪಕ್ಷಗಳಿಗೆ ಅದರ ಸರಿಯಾದ ಮತ್ತು ನ್ಯಾಯಸಮ್ಮತವಾದ ಸ್ಥಾನವನ್ನು ನೀಡದೆ ದುರ್ಬಲಗೊಳ್ಳುವುದನ್ನು ಮುಂದುವರಿಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾನು ನಿಮ್ಮನ್ನು ಒತ್ತಾಯಿಸುತ್ತೇನೆ ಎಂದು ಚೌಧರಿ ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

BREAKING : ಅಮೆರಿಕದ ಒತ್ತಡಕ್ಕೆ ಮಣಿದ ಇಸ್ರೇಲ್, ಯುದ್ಧದ ಅಲ್ಪ ವಿರಾಮಕ್ಕೆ ಒಪ್ಪಿಗೆ

ವಾಷಿಂಗ್ಟನ್, ನ.7- ಅಮೆರಿಕದ ಒತ್ತಡದಿಂದಾಗಿ ಹಮಾಸ್ ಮೇಲಿನ ದಾಳಿಗೆ ಅಲ್ಪ ವಿರಾಮ ಘೋಷಿಸಲು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸಮ್ಮತಿಸಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಹಾಗೂ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕೆನ್ ಅವರು ಕದನ ವಿರಾಮ ಘೋಷಿಸುವಂತೆ ಕಳೆದ ಒಂದು ವಾರದಿಂದಲೂ ಮನವಿ ಮಾಡಿಕೊಳ್ಳುತ್ತಿದ್ದರೂ ಕ್ಯಾರೆ ಅನ್ನದ ಇಸ್ರೇಲ್ ಇದೀಗ ಒತ್ತಡಕ್ಕೆ ಮಣಿದು ಕದನ ವಿರಾಮ ಘೋಷಿಸುವ ಬದಲು ಗಾಜಾ ಮೇಲಿನ ದಾಳಿಗೆ ಅಲ್ಪ ವಿರಾಮ ಘೋಷಿಸಲು ತೀರ್ಮಾನಿಸಿದೆ.

ಗಾಜಾದಲ್ಲಿ ಸಾವಿನ ಸಂಖ್ಯೆ 10,000 ಕ್ಕೆ ತಲುಪಿದರೂ, ಗಾಜಾದ ಮೇಲಿನ ಹಮಾಸ್ ನಿಯಂತ್ರಣವನ್ನು ಕೊನೆಗೊಳಿಸುವ ಇಸ್ರೇಲ್ ಮತ್ತು ನೆತನ್ಯಾಹು ಅವರ ಗುರಿ ಮುಂದುವರೆಯುವುದು ನಿಶ್ಚಿತ ಎಂದು ಪ್ಯಾಲೇಸ್ತಾನ್ ಆರೋಪಿಸಿದೆ.

ಛತ್ತೀಸ್‍ಗಢ : ಮಾವೋವಾದಿಗಳಿಂದ ಐಇಡಿ ಸ್ಫೋಟ, ಸಿಆರ್‌ಪಿಎಫ್ ಯೋಧರಿಗೆ ಗಾಯ

ಎಬಿಸಿ ನ್ಯೂಸ್‍ಗೆ ನೀಡಿದ ಸಂದರ್ಶನದಲ್ಲಿ ನೆತನ್ಯಾಹು, ಯಾವುದೇ ವ್ಯಾಪಕವಾದ ಕದನ ವಿರಾಮವನ್ನು ತಳ್ಳಿಹಾಕಿದರು, ಆದರೆ ಅಲ್ಪ ವಿರಾಮಗಳಿಗೆ ಮುಕ್ತತೆಯನ್ನು ಸೂಚಿಸಿದರು. ನಮ್ಮ ಒತ್ತೆಯಾಳುಗಳನ್ನು ಬಿಡುಗಡೆ ಮಾಡದೆ ಗಾಜಾದಲ್ಲಿ ಯಾವುದೇ ಕದನ ವಿರಾಮ, ಸಾಮಾನ್ಯ ಕದನ ವಿರಾಮ ಇರುವುದಿಲ್ಲ ಎಂದು ಮಾನವೀಯ ವಿರಾಮಗಳಿಗಾಗಿ ಬಿಡೆನ್ ಅವರ ಕರೆಯನ್ನು ಕೇಳಿದಾಗ ನೆತನ್ಯಾಹು ಹೇಳಿದರು.

ತಂತ್ರದ ಸಣ್ಣ ವಿರಾಮಗಳವರೆಗೆ, ಇಲ್ಲಿ ಒಂದು ಗಂಟೆ, ಅಲ್ಲಿ ಒಂದು ಗಂಟೆ. ನಾವು ಮೊದಲು ಅವುಗಳನ್ನು ಹೊಂದಿದ್ದೇವೆ, ನಾನು ಭಾವಿಸುತ್ತೇನೆ, ಸರಕುಗಳು, ಮಾನವೀಯ ಸರಕುಗಳು ಬರಲು ಅಥವಾ ನಮ್ಮ ಒತ್ತೆಯಾಳುಗಳು, ವೈಯಕ್ತಿಕ ಒತ್ತೆಯಾಳುಗಳನ್ನು ಬಿಡಲು ಅನುವು ಮಾಡಿಕೊಡಲು ನಾವು ಸಂದರ್ಭಗಳನ್ನು ಪರಿಶೀಲಿಸುತ್ತೇವೆ. ಆದರೆ ಸಾಮಾನ್ಯ ಕದನ ವಿರಾಮ ಇರುತ್ತದೆ ಎಂದು ನಾನು ಭಾವಿಸುವುದಿಲ್ಲ ಎಂದಿದ್ದಾರೆ.

ತೆಲಂಗಾಣ ಚುನಾವಣೆ : ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಬಿಎಸ್ವೈ ಹೆಸರು

ಬೆಂಗಳೂರು,ನ.7- ನವೆಂಬರ್ 30ರಂದು ನಡೆಯಲಿರುವ ತೆಲಂಗಾಣ ಚುನಾವಣೆಯ ಪ್ರಚಾರದ ಸ್ಟಾರ್ ಕ್ಯಾಂಪೇನರ್ ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಥಾನ ಪಡೆದುಕೊಂಡಿದ್ದಾರೆ. ಚುನಾವಣಾ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆಯಾಗಿದ್ದು, ಒಟ್ಟು 40 ಸ್ಟಾರ್ ಪ್ರಚಾರಕರ ಪೈಕಿ ಕರ್ನಾಟಕದಿಂದ ಯಡಿಯೂರಪ್ಪ ಅವರು ಕೂಡ ಇದ್ದಾರೆ.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್‍ವೈಗೆ ಪ್ರಮುಖ ಪಾತ್ರ ನೀಡಿರಲಿಲ್ಲ. ಯಡಿಯೂರಪ್ಪ ಅವರನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸಲಾಗಿತ್ತು ಎಂಬ ಅಭಿಪ್ರಾಯವೂ ಕೇಳಿಬಂದಿತ್ತು.

ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲಿನ ಬೆನ್ನಲ್ಲೇ ಯಡಿಯೂರಪ್ಪನವರನ್ನು ಕಡೆಗಣಿಸಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಆದರೆ ಇದೀಗ ತೆಲಂಗಾಣ ಚುನಾವಣೆಯ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಯಡಿಯೂರಪ್ಪ ಅವರಿಗೆ ಸ್ಥಾನ ಸಿಕ್ಕಿರುವುದು ಸಹಜವಾಗಿ ಕುತೂಹಲ ಕೆರಳಿಸಿದೆ.

80 ವರ್ಷ ಸಮೀಪಿಸುತ್ತಿರುವ ಯಡಿಯೂರಪ್ಪ ಸಕ್ರಿಯ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ, ಆದರೆ ಅವರ ವರ್ಚಸ್ಸು ಕುಗ್ಗಿಲ್ಲ, ಹೀಗಾಗಿ ಮತದಾರರನ್ನು ಓಲೈಸಲು ಮುಂಬರುವ ದಿನಗಳಲ್ಲಿ ತೆಲಂಗಾಣಕ್ಕೆ ಪ್ರಯಾಣಿಸುವ ನಿರೀಕ್ಷೆಯಿದೆ.

ಟೀಮ್‍ ಇಂಡಿಯಾ ಸೆಮೀಸ್‍ನಲ್ಲಿ ಸೋಲುತ್ತದೆ : ಮಿಸ್ಬಾ ಉಲ್ ಹಕ್

ಕರ್ನಾಟಕದಿಂದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ ಮತ್ತು ಭಗವಂತ ಖೂಬಾ ಸೇರಿದಂತೆ ನಾಲ್ವರು ಕೇಂದ್ರ ಸಚಿವರಿದ್ದರೂ, ಬಿಜೆಪಿ ಪಕ್ಷದ ಹೈಕಮಾಂಡ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಯಡಿಯೂರಪ್ಪ ಅವರ ಹೆಸರನ್ನು ಆಯ್ಕೆ ಮಾಡಿದೆ.

80 ವರ್ಷದ ಯಡಿಯೂರಪ್ಪ ಅವರು ಅದೇ ಉತ್ಸಾಹದಿಂದ ಕರ್ನಾಟಕದಾದ್ಯಂತ ಪ್ರವಾಸ ಮಾಡುತ್ತಿದ್ದಾರೆ ಮತ್ತು ಅವರು ತೆಲಗಾಣದಲ್ಲಿಯೂ ಅದೇ ರೀತಿ ಮಾಡಲು ಹೊರಟಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಯಡಿಯೂರಪ್ಪ ಕೇವಲ ಕರ್ನಾಟಕಕ್ಕೆ ಮಾತ್ರ ನಾಯಕರಲ್ಲ, ದಕ್ಷಿಣ ಭಾರತದ ರಾಜ್ಯಗಳಲ್ಲಿ ಪಕ್ಷದಿಂದ ಆಯ್ಕೆಯಾದ ಮೊದಲ ಮುಖ್ಯಮಂತ್ರಿ ಯಡಿಯೂರಪ್ಪ ಎಂದು ಪಕ್ಷವು ಭಾವಿಸಿದೆ.

ತೆಲಂಗಾಣ ಕರ್ನಾಟಕದೊಂದಿಗೆ ಗಡಿ ಹಂಚಿಕೊಂಡಿರುವುದರಿಂದ ಅಲ್ಲಿಯೂ ಯಡಿಯೂರಪ್ಪ ಪ್ರಭಾವ ಹೆಚ್ಚಿದೆ. ಅಲ್ಲದೆ ಹೈದರಾಬಾದ್‍ನಲ್ಲಿ ಯಡಿಯೂರಪ್ಪ ಅವರು ಪಕ್ಷಕ್ಕೆ ಮತಗಳನ್ನು ಪಡೆಯಲು ಸಹಾಯ ಮಾಡುವ ಶಕ್ತಿ ಹೊಂದಿದ್ದಾರೆ.

ಅಶ್ವತ್ಥನಾರಾಯಣ ಪ್ರಕಾರ, ತೆಲಂಗಾಣದಲ್ಲಿ ಬಿಎಸ್‍ವೈ ಅವರ ಉಪಸ್ಥಿತಿಯು ಪಕ್ಷಕ್ಕೆ ಭಾರೀ ಲಾಭ ತಂದುಕೊಡುತ್ತದೆ. ಹೀಗಾಗಿ ಪಕ್ಷದ ಹೈಕಮಾಂಡ್ ಅವರನ್ನು ಆಯ್ಕೆ ಮಾಡಿದೆ ಎಂದಿದ್ದಾರೆ. ಯಡಿಯೂರಪ್ಪ ಅವರು ಎಲೆಕ್ಟ್ರೋಲ್ ರಾಜಕೀಯದಿಂದ ಹೊರಗುಳಿದಿದ್ದರೂ ಸಾಕಷ್ಟು ಜನಪ್ರಿಯ ನಾಯಕರಾಗಿದ್ದಾರೆ.

ತೆಲಂಗಾಣದಲ್ಲಿ ಹೆಚ್ಚಿನ ಸಂಖ್ಯೆಯ ವೀರಶೈವರು ಇದ್ದಾರೆ, ಯಡಿಯೂರಪ್ಪ ಅವರ ಪ್ರಚಾರದಿಂದ ಈ ಮತದಾರರನ್ನು ಸೆಳೆಯುವ ನಿರೀಕ್ಷೆಯಿದೆ. ತೆಲಂಗಾಣದ ಒಟ್ಟು 119 ಸ್ಥಾನಗಳಿಗೆ ಇದೇ 30ರಂದು ಒಂದೇ ಹಂತದ ಮತದಾನ ನಡೆಯಲಿದೆ. ಡಿಸೆಂಬರ್ 3ರಂದು ಫಲಿತಾಂಶ ಹೊರಬೀಳಲಿದೆ.