Home Blog Page 1835

ಟೀಮ್‍ ಇಂಡಿಯಾ ಸೆಮೀಸ್‍ನಲ್ಲಿ ಸೋಲುತ್ತದೆ : ಮಿಸ್ಬಾ ಉಲ್ ಹಕ್

ನವದೆಹಲಿ, ನ.7- ತವರಿನ ಅಂಗಳದಲ್ಲಿ ಉತ್ತಮ ಪ್ರದರ್ಶನ ತೋರುತ್ತಿರುವ ರೋಹಿತ್ ಶರ್ಮಾ ಸಾರಥ್ಯದ ಟೀಮ್ ಇಂಡಿಯಾ ಸೆಮಿಫೈನಲ್ ಪಂದ್ಯದಲ್ಲಿ ಸೋಲುವ ಮೂಲಕ ಟ್ರೋಫಿ ಗೆಲ್ಲುವ ಅವಕಾಶವನ್ನು ಕೈಚೆಲ್ಲಿಕೊಳ್ಳಲಿದೆ ಎಂದು ಪಾಕಿಸ್ತಾನದ ಮಾಜಿ ನಾಯಕ ಮಿಸ್ಬಾ ಉಲ್ ಹಕ್ ಹೇಳಿದ್ದಾರೆ.

ಬಲಿಷ್ಠ ದಕ್ಷಿಣ ಆಫ್ರಿಕಾ ವಿರುದ್ಧ 243 ರನ್‍ಗಳ ಭಾರೀ ಗೆಲುವು ಸಾಧಿಸಿರುವ ಟೀಮ್ ಇಂಡಿಯಾ ಉಳಿದಿರುವ ತನ್ನ ಲೀಗ್ ಪಂದ್ಯದಲ್ಲಿ ನೆದರ್‍ಲ್ಯಾಂಡ್ಸ್ ವಿರುದ್ಧವು ಗೆಲುವು ಸಾಧಿಸಿ ಅಜೇಯರಾಗಿ ಸೆಮಿಫೈನಲ್‍ಗೆ ಲಗ್ಗೆ ಇಡಲಿದೆ.

ಒಂದು ವಿಷಯ ದೃಢಪಟ್ಟಿದೆ. ಹೌದು, ಇದು ಗುಂಪು ಹಂತ, ಉತ್ತಮವಾಗಿದೆ, ಆದರೆ ಅವರು ನಾಕೌಟ್ ಹಂತಕ್ಕೆ ಹೋದಾಗ, ಹೆಚ್ಚು ತಂಡವು ಉತ್ತಮವಾಗಿ ಆಡುತ್ತದೆ ಮತ್ತು ನೆಚ್ಚಿನ ತಂಡವಾಗುತ್ತದೆ, ಹೆಚ್ಚು ಒತ್ತಡ ಹೆಚ್ಚಾಗುತ್ತದೆ. ಮತ್ತು ಒಮ್ಮೆ ತಂಡವು ಅವರನ್ನು 1-2 ಓವರ್ಗಳಲ್ಲಿ ಒತ್ತಡಕ್ಕೆ ಒಳಪಡಿಸಿದರೆ, ಅವರು ಕಳೆದುಕೊಳ್ಳಲು ಸಾಕಷ್ಟು ಇರುತ್ತದೆ. ಇತರ ತಂಡಗಳಿಗೆ ಇನ್ನೂ ಹೊರಗಿನ ಅವಕಾಶವಿದೆ' ಎಂದು ಮಿಸ್ಬಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪಾಯಿಂಟ್ಸ್ ಟೇಬಲ್‍ನ ಆಧಾರದ ಮೇಲೆ ಸೆಮಿಫೈನಲ್‍ನಲ್ಲಿ ಟೀಮ್ ಇಂಡಿಯಾಗೆ 5 ಬಾರಿ ಚಾಂಪಿಯನ್ಸ್ ಆಸ್ಟ್ರೇಲಿಯಾ ಸವಾಲು ಎದುರಾಗಲಿದೆ. ಹಾಗಾದರೆ ಟೀಮ ಇಂಡಿಯಾ ನಾಕೌಟ್ ಪಂದ್ಯದಲ್ಲಿ ಸೋತು ಟೂರ್ನಿಯಿಂದ ಹೊರಬೀಳಲಿದೆ ಎಂದು ಹೇಳಿದ್ದಾರೆ.

ಬೆಂಗಳೂರು : ಲಿವಿಂಗ್ ಟು ಗೆದರ್‌ನಲ್ಲಿದ್ದ ಪ್ರೇಮಿಗಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ನೀವು ಮೊದಲು ಮಾನಸಿಕವಾಗಿ ಪರಿಸ್ಥಿತಿಯಿಂದ ಹೊರಬರಬೇಕು ಎಂದು ನಾನು ಭಾವಿಸುತ್ತೇನೆ. ಇದುವರೆಗಿನ ಪಂದ್ಯಾವಳಿಯಲ್ಲಿ ಉತ್ತಮವಾಗಿ ಆಡುವ ಮೂಲಕ ಪ್ರತಿ ತಂಡವನ್ನು ಒತ್ತಡಕ್ಕೆ ಸಿಲುಕಿಸುವ ಮೂಲಕ ಅವರು ಈಗಾಗಲೇ 50 ಪ್ರತಿಶತದಷ್ಟು ಯುದ್ಧವನ್ನು ಗೆದ್ದಿದ್ದಾರೆ. ಆದ್ದರಿಂದ ಗೆಲ್ಲಲು, ತಂಡಗಳು ಇದನ್ನು ಮಾನಸಿಕವಾಗಿ ಜಯಿಸಿ ಭಾರತವನ್ನು ಸೋಲಿಸಬಹುದು ಎಂದು ನಂಬಬೇಕು’ ಎಂದು ಪಾಕ್ ಮಾಜಿ ನಾಯಕ ಹೇಳಿದ್ದಾರೆ.

ಮಾಜಿ ಸಚಿವ, ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡ ಇನ್ನಿಲ್ಲ

ಚಿಕ್ಕಮಗಳೂರು, ನ.7- ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡರು(87) ಇಂದು ಮುಂಜಾನೆ 12.20 ಕ್ಕೆ ದಾರದಹಳ್ಳಿಯ ತಮ್ಮ ನಿವಾಸದಲ್ಲಿ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ.ಮಂಗಳವಾರ ಮಧ್ಯಾಹ್ನ 2 ರಿಂದ ಸಂಜೆ 6ರ ವರೆಗೆ ಮೂಡಿಗೆರೆ ಅಡ್ಯಂತಾಯ ರಂಗದಮಂದಿರದಲ್ಲಿ ಡಿ.ಬಿ. ಚಂದ್ರೇಗೌಡರ ಪಾರ್ಥಿವ ಶರೀರವನ್ನು ಸಾರ್ವಜನಿಕ ಅಂತಿಮ ದರ್ಶನಕ್ಕೆ ಇಡಲಾಗುವುದು.

ಬುಧವಾರ ಮಧ್ಯಾಹ್ನ ದಾರದಹಳ್ಳಿಯ ಅವರ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.ಪತ್ನಿ ಶ್ರೀಮತಿ ಪೂರ್ಣಿಮಾ, ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ದಾರದಹಳ್ಳಿಯಲ್ಲಿ 26 ಆಗಸ್ಟ್ 1936 ರಂದು ಜನಿಸಿದರು . ಬೆಂಗಳೂರಿನ ರೇಣುಕಾಚಾರ್ಯ ಕಾಲೇಜಿನಲ್ಲಿ ತಮ್ಮ ಬಿಎಸ್ಸಿ ಶಿಕ್ಷಣವನ್ನು ಮತ್ತು ಬೆಳಗಾವಿಯ ಆರ್ಎಲ್ ಕಾನೂನು ಕಾಲೇಜಿನಲ್ಲಿ ಎಲ್‌ಎಲ್‌ಬಿಯನ್ನು ಪಡೆದರು . 22 ಮೇ 1966 ರಂದು ಪೂರ್ಣ ಚಂದ್ರೇಗೌಡರನ್ನು ವಿವಾಹವಾದರು ಮತ್ತು ನಾಲ್ಕು ಹೆಣ್ಣು ಮಕ್ಕಳನ್ನು ಹೊಂದಿದ್ದರು.

ತಮ್ಮ ಕಾಲೇಜು ದಿನಗಳಲ್ಲಿ ಸುದೀರ್ಘ ರಾಜಕೀಯ ವೃತ್ತಿಜೀವನಕ್ಕೆ ದಾರಿ ಮಾಡಿಕೊಡುವ ಮೂಲಕ ತಮ್ಮ ನಾಯಕತ್ವ ಕೌಶಲ್ಯಗಳನ್ನು ಕಲಿತರು; ರೇಣುಕಾಚಾರ್ಯ ಕಾಲೇಜು ವಿದ್ಯಾರ್ಥಿಗಳ ಸಂಘದ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಆರ್ ಎಲ್ ಲಾ ಕಾಲೇಜಿನಲ್ಲಿದ್ದಾಗ ಕಾಲೇಜಿನ ಪ್ರಧಾನ ಕಾರ್ಯದರ್ಶಿಯಾದರು .

1967 ರವರೆಗೆ ಪ್ರಜಾ ಸೋಷಿಯಲಿಸ್ಟ್ ಪಕ್ಷದಲ್ಲಿದ್ದರು. 1971 ರಲ್ಲಿ, ಅವರು INC – ಕಾಂಗ್ರೆಸ್ ಪಕ್ಷವನ್ನು ಪ್ರತಿನಿಧಿಸುವ ಚಿಕ್ಕಮಗಳೂರು ಕ್ಷೇತ್ರದಿಂದ 5 ನೇ ಲೋಕಸಭೆಗೆ ಆಯ್ಕೆಯಾದರು . ಚಿಕ್ಕಮಗಳೂರಿನಿಂದ 6 ನೇ ಲೋಕಸಭೆಗೆ ಮರು ಆಯ್ಕೆಯಾದರು , ಆದರೆ ಇಂದಿರಾ ಗಾಂಧಿಯವರು ಅಲ್ಲಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ಮತ್ತು ಗೆಲ್ಲಲು ಅವಕಾಶ ಮಾಡಿಕೊಡಲು ನಂತರ ತಮ್ಮ ಸ್ಥಾನವನ್ನು ತೆರವು ಮಾಡಿದರು.

1978 ಮತ್ತು 1983 ರ ನಡುವೆ ಅವರು ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾದರು ಮತ್ತು 1979 ರಿಂದ 1980 ರವರೆಗೆ ಕರ್ನಾಟಕ ಸರ್ಕಾರದಲ್ಲಿ ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡಿದರು. 1980 ರಲ್ಲಿ ಅವರು ಕಾಂಗ್ರೆಸ್ಗೆ ರಾಜೀನಾಮೆ ನೀಡಿದರು ಮತ್ತು ಕರ್ನಾಟಕ ಕ್ರಾಂತಿ ರಂಗಕ್ಕೆ ಸೇರಿದರು, ಕರ್ನಾಟಕ ರಾಜ್ಯ ಕಾಂಗ್ರೆಸ್ (ಯು) ಅಧ್ಯಕ್ಷರಾದರು . ಮತ್ತು 1980 ರಿಂದ 1981 ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದರು.

ಬೆಂಗಳೂರು : ಲಿವಿಂಗ್ ಟು ಗೆದರ್‌ನಲ್ಲಿದ್ದ ಪ್ರೇಮಿಗಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

1983 ರಲ್ಲಿ ತೀರ್ಥಹಳ್ಳಿ ಕ್ಷೇತ್ರವನ್ನು ಪ್ರತಿನಿಧಿಸಿ ಶಾಸಕರಾಗಿ ಕರ್ನಾಟಕ ವಿಧಾನಸಭೆಗೆ ಪ್ರವೇಶಿಸಿದರು ಮತ್ತು 1983 ರಿಂದ 1985 ರವರೆಗೆ ವಿಧಾನಸಭೆಯಲ್ಲಿ ಸ್ಪೀಕರ್ ಆಗಿ ಸೇವೆ ಸಲ್ಲಿಸಿದರು. 1986 ರಲ್ಲಿ ಅವರು ಜನತಾ ದಳದ ರಾಜಕೀಯ ಪಕ್ಷವನ್ನು ಪ್ರತಿನಿಧಿಸಿ ರಾಜ್ಯಸಭೆಯಲ್ಲಿ ಸಂಸದರಾಗಿ ಆಯ್ಕೆಯಾದರು. 1989ರಲ್ಲಿ ತೀರ್ಥಹಳ್ಳಿ ಕ್ಷೇತ್ರದಿಂದ ಶಾಸಕರಾಗಿ ಪುನರಾಯ್ಕೆಗೊಂಡು ವಿರೋಧ ಪಕ್ಷದ ನಾಯಕರಾದರು. 1999 ರಲ್ಲಿ, ಅವರು ಶೃಂಗೇರಿ ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕರಾಗಿ ಮೂರನೇ ಅವಧಿಗೆ ಆಯ್ಕೆಯಾದರು ಮತ್ತು 2004 ರವರೆಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದರು.

2008 ರಲ್ಲಿ ಅವರು ಕಾಂಗ್ರೆಸ್ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದರು ; ತರುವಾಯ, ಅವರು 2009 ರಲ್ಲಿ ಬಿಜೆಪಿಯಿಂದ ಬೆಂಗಳೂರು ಉತ್ತರವನ್ನು ಪ್ರತಿನಿಧಿಸುವ 15 ನೇ ಲೋಕಸಭೆಯಲ್ಲಿ ಸಂಸದರಾದರು. ಸಾರ್ವಜನಿಕ ಕುಂದುಕೊರತೆಗಳು, ಕಾನೂನು ಮತ್ತು ನ್ಯಾಯ ಸಮಿತಿಯ ಸದಸ್ಯರಾಗಿದ್ದರು.

1971 : ಚಿಕ್ಕಮಗಳೂರಿನ ಲೋಕಸಭಾ ಸದಸ್ಯ (ಕಾಂಗ್ರೆಸ್) 1977 : ಚಿಕ್ಕಮಗಳೂರಿನ ಲೋಕಸಭಾ ಸದಸ್ಯ (ಕಾಂಗ್ರೆಸ್) 1978 ರಲ್ಲಿ ಇಂದಿರಾ ಗಾಂಧಿಯವರು ಲೋಕಸಭೆಗೆ ಸ್ಪರ್ಧಿಸಲು ಮತ್ತು ಪ್ರವೇಶಿಸಲು ರಾಜೀನಾಮೆ ನೀಡಿದರು 1978-1983 : ಕರ್ನಾಟಕ ವಿಧಾನ ಪರಿಷತ್ತಿನಲ್ಲಿ (ಕಾಂಗ್ರೆಸ್) MLC ದೇವರಾಜ್ ಅರಸರ ಕರ್ನಾಟಕ ಕ್ರಾಂತಿ ರಂಗಕ್ಕೆ ಕಾಂಗ್ರೆಸ್ ತೊರೆದರು

1983-1985 : 1983 ರಲ್ಲಿ ತೀರ್ಥಹಳ್ಳಿ ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕ (ಜನತಾ ಪಕ್ಷ) 1986 : ರಾಜ್ಯಸಭಾ ಸಂಸದ (ಜನತಾ ಪಕ್ಷ, ನಂತರ ಜನತಾದಳ ಎಂದು ಮರುನಾಮಕರಣ ಮಾಡಲಾಯಿತು ) 1989 : ತೀರ್ಥಹಳ್ಳಿ ಕ್ಷೇತ್ರವನ್ನು ಪ್ರತಿನಿಧಿಸುವ ಕರ್ನಾಟಕ ವಿಧಾನಸಭಾ ಸದಸ್ಯ (ಜನತಾ ದಳ) 1999 : ಶೃಂಗೇರಿ (ಕಾಂಗ್ರೆಸ್) ಪ್ರತಿನಿಧಿಸುವ ಶಾಸಕ 2009 : ಬಿಜೆಪಿಗೆ ಬೆಂಗಳೂರು (ಉತ್ತರ) ಲೋಕಸಭಾ ಸದಸ್ಯ.

ಸಮಾಜವಾದಿ ಚಿಂತಕರಾಗಿದ್ದ ಡಿ.ಬಿ.ಚಂದ್ರೇಗೌಡರು ನಾಲ್ಕೂವರೆ ದಶಕಗಳ ಕಾಲ ರಾಜ್ಯ ಮತ್ತು ರಾಷ್ಟ್ರ ಮಟ್ಟದ ರಾಜಕೀಯ ಮತ್ತು ಸಾರ್ವಜನಿಕ ಜೀವನದಲ್ಲಿ ತಮ್ಮನ್ನು ವೈವಿದ್ಯಮಯವಾಗಿ ತೊಡಗಿಸಿಕೊಂಡಿದ್ದರು. 2014 ರಿಂದೀಚೆಗೆ ಸಕ್ರಿಯ ರಾಜಕೀಯದಿಂದ ಹಿಂದೆ ಸರಿದಿದ್ದರು. ದಾರದಹಳ್ಳಿಯ ತಮ್ಮ ಪೂರ್ಣಚಂದ್ರ ನಿವಾಸದಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (07-11-2023)

ನಿತ್ಯ ನೀತಿ : ಮೌನ ಕಲಿಸುವಷ್ಟು ಪಾಠ, ಮೌನ ಕೊಡುವಷ್ಟು ನೆಮ್ಮದಿ, ಮೌನದಿಂದ ಬರುವಷ್ಟು ತಾಳ್ಮೆ ಯಾವುದರಲ್ಲೂ ಸಿಗುವುದಿಲ್ಲ.

ಪಂಚಾಂಗ ಮಂಗಳವಾರ 07-11-2023
ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಆಶ್ವಯುಜ ಮಾಸ / ಕೃಷ್ಣ ಪಕ್ಷ / ತಿಥಿ: ದಶಮಿ / ನಕ್ಷತ್ರ: ಮಘಾ ಯೋಗ: ಬ್ರಹ್ಮ / ಕರಣ: ವಣಿಜ್
ಸೂರ್ಯೋದಯ : ಬೆ.06.15
ಸೂರ್ಯಾಸ್ತ : 05.52
ರಾಹುಕಾಲ : 3.00-4.30
ಯಮಗಂಡ ಕಾಲ : 9.00-10.30
ಗುಳಿಕ ಕಾಲ : 12.00-1.30

ರಾಶಿ ಭವಿಷ್ಯ
ಮೇಷ
: ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ನಿರ್ಲಕ್ಷ್ಯ ವಹಿಸದಿರುವುದು ಉತ್ತಮ.
ವೃಷಭ: ದಿನವು ಸಂತೋಷದಿಂದ ಪ್ರಾರಂಭವಾಗಲಿದೆ. ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯುವಿರಿ.
ಮಿಥುನ: ನೀವು ಮಾಡುವ ಕೆಲಸ-ಕಾರ್ಯಗಳಿಗೆ ಮನೆಯ ಸದಸ್ಯರ ಬೆಂಬಲ ದೊರೆಯಲಿದೆ.

ಕಟಕ: ಕಚೇರಿಯಲ್ಲಿ ಕೆಲವು ಹೊಸ ಜವಾಬ್ದಾರಿಗಳು ನಿಮ್ಮ ಮೇಲೆ ಬೀಳಲಿವೆ.
ಸಿಂಹ: ವ್ಯಾಪಾರದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು ಸಂಪೂರ್ಣ ವಾಗಿ ಬೆಂಬಲಿಸುವರು.
ಕನ್ಯಾ: ಬರುವ ಆದಾಯದಲ್ಲಿ ಹೆಚ್ಚಳವಾಗುವ ಲಕ್ಷಣಗಳಿವೆ.

ತುಲಾ: ಉದ್ಯೋಗದಲ್ಲಿರುವವರು ಕೆಲಸದಲ್ಲಿನ ಅಡೆತಡೆಗಳಿಂದ ತೊಂದರೆಗೊಳಗಾಗುವರು.
ವೃಶ್ಚಿಕ: ನಿಮ್ಮ ಎಲ್ಲಾ ಚಿಂತೆ, ತೊಂದರೆಗಳು ಕೊನೆಗೊಳ್ಳುತ್ತವೆ. ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಧನುಸ್ಸು: ಷೇರು ಮಾರುಕಟ್ಟೆಯಲ್ಲಿ ಕೆಲಸ ಮಾಡುವವರಿಗೆ ನಿರೀಕ್ಷಿತ ಲಾಭ ಸಿಗಲಿದೆ.

ಮಕರ: ಗಂಟಲು ಮತ್ತು ಹೊಟ್ಟೆಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳು ಕಾಡಬಹುದು.
ಕುಂಭ: ಆದಾಯದಲ್ಲಿನ ಸ್ವಲ್ಪ ಹಣ ಉಳಿಯಲಿದ್ದು, ಎಚ್ಚರಿಕೆಯಿಂದ ವಿನಿಯೋಗಿಸಿ.
ಮೀನ: ಬಂಧುಗಳ ಆಗಮನದಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಆರೋಗ್ಯ ಸುಧಾರಣೆಗಾಗಿ ಯೋಗ ಮಾಡಿ.

ಸುಳ್ಳು ಆರೋಪ ಪ್ರಧಾನಿ ಹುದ್ದೆಗೆ ಶೋಭೆ ತರುವುದಿಲ್ಲ : ಸಿದ್ದರಾಮಯ್ಯ

ಬೆಂಗಳೂರು, ನ.6- ಪ್ರಧಾನಮಂತ್ರಿಯವರು ಆಧಾರ ರಹಿತವಾಗಿ ತಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುವುದು ಆ ಹುದ್ದೆಗೆ ಶೋಭೆ ತರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಧಾನ ವ್ಯಕ್ತಪಡಿಸಿದ್ದಾರೆ. ಗೃಹ ಕಚೇರಿ ಕೃಷ್ಣದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಧ್ಯಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಪ್ರಧಾನಿ ರಾಜಕೀಯ ಭಾಷಣ ಮಾಡಿ, ಸುಳ್ಳು ಹೇಳಿದ್ದಾರೆ. ಅವರ ಆರೋಪಗಳು ಸುಳ್ಳಿನ ಕಂತೆ ಎಂದರು. ಕರ್ನಾಟಕ ರಾಜ್ಯ ವಿಧಾನಸಭೆ ಫಲಿತಾಂಶ ಪ್ರಧಾನಿಯವರಿಗೆ ನಿರಾಶೆ ಮೂಡಿಸಿದೆ. 48 ಬಾರಿ ಬಂದು ಪ್ರಚಾರ ಮಾಡಿದರು, ಅವರು ಬಂದ ಕಡೆಯಲೆಲ್ಲಾ ಬಿಜೆಪಿ ಸೋಲು ಕಂಡಿದೆ. ಅದರಿಂದ ನಿರಾಶರಾಗಿ ಈವರೆಗೂ ವಿರೋಧ ಪಕ್ಷದ ನಾಯಕರನ್ನು ನೇಮಕ ಮಾಡಿಲ್ಲ.

ಹಿಂದಿನ ಸರ್ಕಾರ ಶೇ.40ರಷ್ಟು ಕಮಿಷನ್ ಆರೋಪ ಇತ್ತಲ್ಲ,ಅದನ್ನು ಹೇಳಬೇಕಲ್ಲ. ನಾವು ತನಿಖೆ ಮಾಡಿಸುತ್ತಿದ್ದೇವೆ. ನಮ್ಮ ಸರ್ಕಾರದ ಬಗ್ಗೆ ಆರೋಪಗಳ ಬಗ್ಗೆ ದಾಖಲೆಗಳಿದ್ದರೆ ಸಾಬೀತು ಪಡಿಸಲಿ. ಕೇಂದ್ರ ಸರ್ಕಾರದ ನೀತಿಯಾಗಳಿಂದ ದೇಶ ಆರ್ಥಿಕವಾಗಿ ದಿವಾಳಿಯಾಗಿದೆ, ರಾಜ್ಯಕ್ಕೆ ಕೊಡಬೇಕಾಗಿದ್ದನ್ನೇ ಕೊಡಲಾಗುತ್ತಿಲ್ಲ. ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ. ಈವರೆಗೂ ಬರಕ್ಕೆ ಪರಿಹಾರ ಕೊಡಲಾಗಿಲ್ಲ. ಐದು ಖಾತ್ರಿಗಳನ್ನು ಜಾರಿ ಮಾಡಲು ಸಾಧ್ಯವೇ ಇಲ್ಲ ಎಂದಿದ್ದರು.

ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದಲ್ಲಿ ಕಾರು ಚಾಲಕ ವಶಕ್ಕೆ

ಈಗ ನಾವು ಜಾರಿ ಮಾಡಿಲ್ಲವೇ. ದೇಶದ ಪ್ರಧಾನಿಯಿಂದ ಇಂತಹ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ. ಶೋಭೆ ತರುವುದಿಲ್ಲ.ಮಧ್ಯ ಪ್ರದೇಶಕ್ಕೆ ಹೋಗಿ ರಾಜಕೀಯ ಭಾಷಣ ಮಾಡಿದ್ದಾರೆ. ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯಡಿ ಸರ್ಕಾರ ಹಣ ನೀಡುತ್ತೇವೆ. ಅದನ್ನು ಬಳಕೆ ಮಾಡಿಕೊಳ್ಳುವುದು ಅವರಿಗೆ ಸೇರಿದ ವಿಷಯ. ನಾವು ಯಾವುದೇ ರೀತಿಯ ಸೂಚನೆ ನೀಡುವುದಿಲ್ಲ ಎಂದರು.

ಉಪಹಾರ ಕೂಟ ಲೋಕಸಭೆ ಚುನಾವಣೆ ಕುರಿತು ಚರ್ಚಿಸಲು ಕರೆಯಲಾಗಿತ್ತು. ಜೊತೆಗೆ ಬರಗಾಲದ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ಬರ ಅಧ್ಯಯನ ನಡೆದು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಕುಮಾರಸ್ವಾಮಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ. ಪ್ರಧಾನಿ ಜೆಡಿಎಸ್ ನಾಯಕರ ಮಾತುಗಳನ್ನು ಕೇಳುತ್ತಾರೆ, ಪ್ರಭಾವ ಬೀರಿ ರಾಜ್ಯಕ್ಕೆ ಹಣ ಕೊಡಿಸಲಿ. ರಾಜ್ಯದಲ್ಲೂ ಬರ ಸಾಂತ್ವಾನ ಯಾತ್ರೆ ಮಾಡಲಿ ಎಂದರು.

ಪ್ರತಿಮಾ ಕೊಲೆ ಆರೋಪಿ ಒಬ್ಬ ಸಿಕ್ಕಿದ್ದಾರೆ. ಚಾಲಕನಾಗಿದ್ದನ್ನು, ಇತ್ತೀಚೆಗೆ ಆತನ್ನು ತೆಗೆದು ಹಾಕಿದ್ದರು ಎಂದು ವರದಿಯಾಗಿದೆ. ತನೀಖೆ ನಡೆಯುತ್ತಿದೆ. ಒಬ್ಬನೆ ಒಬ್ಬ ಚಾಲಕ ಕೊಲೆ ಮಾಡಿದ್ದಾರೆ ಎಂಬ ಮಾಹಿತಿ ಇದೆ. ನಿನ್ನೆ ಆತನನ್ನು ಬಂಧಿಸಲಾಗಿದೆಎಂದು ಮಾಹಿತಿ ನೀಡಿದರು.

ಬಿಜೆಪಿ ಜೆಡಿಎಸ್ ಪಕ್ಷಗಳಿಂದ ಶಾಸಕರು, ಮಾಜಿ ಶಾಸಕರು, ಮುಖಂಡರು, ಕಾರ್ಯಕರ್ತರು ಸೇರಿ ಅನೇಕ ಮಂದಿ ಕಾಂಗ್ರೆಸ್ ಸೇರಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಲು ಗುರಿ ನೀಡಲಾಗಿದೆ.

ಲೋಕಸಭೆ ಚುನಾವಣೆ ಬಳಿಕ ಮುಖ್ಯಮಂತ್ರಿ ಬದಲಾಗಲಿದ್ದಾರೆ ಎಂದು ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ನಮ್ಮ ಪಕ್ಷದ ಬಗ್ಗೆ ಯಾಕೆ ಮಾತನಾಡುತ್ತಾರೆ. ನಮ್ಮಲ್ಲಿ ಹೈಕಮಾಂಡ್ ಇದೆ, ಅವರು ತೀರ್ಮಾನ ಮಾಡುತ್ತಾರೆ. ಅದರ ಬಗ್ಗೆ ಬಿಜೆಪಿಯವರು ಏಕೆ ಮಾತನಾಡುತ್ತಾರೆ ಎಂದು ಪ್ರಶ್ನಿಸಿದರು.

ಬೆಂಗಳೂರು : ಲಿವಿಂಗ್ ಟು ಗೆದರ್‌ನಲ್ಲಿದ್ದ ಪ್ರೇಮಿಗಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಬೆಂಗಳೂರು, ನ.6- ಪತಿಯನ್ನು ಬಿಟ್ಟು ಸಹಜೀವನ ನಡೆಸುತ್ತಿದ್ದ ನರ್ಸಿಂಗ್‍ ವಿದ್ಯಾರ್ಥಿನಿ ಹಾಗೂ ಆಕೆಯ ಪ್ರಿಯತಮ ಒಟ್ಟಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಸೌಮಿನಿ ದಾಸ್ (20) ಹಾಗೂ ಹೋಂ ನರ್ಸ್ ಮಾಡುತ್ತಿದ್ದ ಕೇರಳ ಮೂಲದ ಅಭಿಲ್ ಅಬ್ರಹಾಂ (29) ಮೃತಪಟ್ಟವರು.

ಸೌಮಿನಿ ದಾಸ್ ವಿವಾಹವಾಗಿದ್ದು, ನರ್ಸಿಂಗ್ ವಿದ್ಯಾಭ್ಯಾಸ ಸಂಬಂಧ ನಗರದಲ್ಲಿ ವಾಸವಾಗಿದ್ದಳು. ಆ ಸಂದರ್ಭದಲ್ಲಿ ಕೇರಳ ಮೂಲದ ಹೋಂ-ನರ್ಸಿಂಗ್ ಕೆಲಸ ಮಾಡುತ್ತಿದ್ದ ಅಭಿಲ್ ಅಬ್ರಹಾಂ ಪರಿಚಯವಾಗಿದೆ. ಸೌಮಿನಿ ದಾಸ್ ಮೂರು ತಿಂಗಳ ಹಿಂದೆ ವೆಸ್ಟ್ ಬೆಂಗಾಲ್‍ಗೆ ಹೋಗಿ ವಾಪಸ್ಸು ನಗರಕ್ಕೆ ಬಂದಿದ್ದಾರೆ.

ತದನಂತರದಲ್ಲಿ ಅಬ್ರಹಾಂ ಜೊತೆ ಸ್ನೇಹ ಬೆಳೆದು, ಪ್ರೀತಿಗೆ ತಿರುಗಿದೆ. ಬಳಿಕ ಈಕೆ ದೊಡ್ಡಗುಬ್ಬಿ ಗ್ರಾಮದ ಡಿಎಸ್ ಮ್ಯಾಕ್ಸ್ ಸ್ಟ್ರಿಂಗ್ ಫೀಲ್ಡ್ ಅಪಾರ್ಟ್‍ಮೆಂಟ್‍ನ ನಾಲ್ಕನೇ ಮಹಡಿಯ ಬಿ ಬ್ಲಾಕ್ ಪ್ಲಾಟ್ ನಂ. 422ರಲ್ಲಿ ವಾಸವಾಗಿ ಸಹಜೀವನ ನಡೆಸುತ್ತಿದ್ದರು.

ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದಲ್ಲಿ ಕಾರು ಚಾಲಕ ವಶಕ್ಕೆ

ಈ ನಡುವೆ ಸೌಮಿನಿ ದಾಸ್ ಅವರ ಪತಿ ಫೋನ್ ಮಾಡಿದಾಗ ನಿನ್ನ ಜೊತೆ ನಾನಿರುವುದಿಲ್ಲ. ನೀನು ನನಗೆ ಸ್ವತಂತ್ರವಾಗಿರಲು ಬಿಡಲ್ಲ, ನಾನು ಸ್ನೇಹಿತನ ಜೊತೆಯೇ ಇರುವುದಾಗಿ ತಿಳಿಸಿದ್ದಾಳೆ. ಪ್ಲಾಟ್‍ನಲ್ಲಿದ್ದ ಇವರಿಬ್ಬರ ನಡುವೆ ಏನಾಯಿತೇನೋ ಗೊತ್ತಿಲ್ಲ, ನಿನ್ನೆ ಮಧ್ಯಾಹ್ನ 12.45ರ ಸುಮಾರಿನಲ್ಲಿ ಸೌಮಿನಿ ದಾಸ್ ಹಾಗೂ ಅಭಿಲ್ ಅಬ್ರಹಾಂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದಾರೆ.

ಇವರ ಪ್ಲಾಟ್‍ನಿಂದ ಕಿರುಚಾಟ ಕೇಳಿ ಅಕ್ಕಪಕ್ಕದವರು ಬಂದು ನೋಡುವಷ್ಟರಲ್ಲಿ ಸೌಮಿನಿ ದಾಸ್ ಸಂಪೂರ್ಣ ಸುಟ್ಟು ಮೃತಪಟ್ಟಿದ್ದಳು. ಗಂಭೀರ ಸ್ವರೂಪದ ಗಾಯಗಳಾಗಿದ್ದ ಅಭಿಲ್ ಅಬ್ರಹಾಂನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ರಾತ್ರಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ಈಸಂಜೆಗೆ ತಿಳಿಸಿದ್ದಾರೆ.

ಸುದ್ದಿ ತಿಳಿದು ಕೊತ್ತನೂರು ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಪರೀಕ್ಷಾ ಅಕ್ರಮದಲ್ಲಿ 32 ಮಂದಿ ಸೆರೆ : ಸಚಿವ ಪ್ರಿಯಾಂಕ್ ಖರ್ಗೆ

ಕಲ್ಬುರ್ಗಿ,ನ.6- ಸರ್ಕಾರದ ವಿವಿಧ ಹುದ್ದೆಗಳಿಗೆ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾದ ಪರೀಕ್ಷೆಯಲ್ಲಿನ ಅಕ್ರಮಗಳಿಗೆ ಸಂಬಂಧಪಟ್ಟಂತೆ ಕಲ್ಬುರ್ಗಿಯಲ್ಲಿ 13 ಜನ, ಯಾದಗಿರಿಯಲ್ಲಿ 19 ಮಂದಿಯನ್ನು ಬಂಧಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಅಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷೆ ಅಕ್ರಮ ತಡೆಗೆ ಸಾಕಷ್ಟು ಮುಂಜಾಗ್ರತೆ ವಹಿಸಲಾಗಿತ್ತು. 24 ಗಂಟೆಗೂ ಮುನ್ನ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲಾಗಿತ್ತು. 200 ಮೀಟರ್ ಅಂತರದಲ್ಲಿ ವಾಹನ ನಿಲುಗಡೆ ನಿಷೇಧ, ಪ್ರತಿಯೊಂದು ವಸತಿ ಗೃಹ ಹಾಗೂ ವಾಹನಗಳ ತಪಾಸಣೆ, ಪರೀಕ್ಷಾ ಕೇಂದ್ರದಲ್ಲಿ ಮೆಟಲ್ ಡಿಟಕ್ಟರ್ ಮತ್ತು ಹ್ಯಾಂಡ್‍ಹೆಲ್ಡ್ ಡಿಟಕ್ಟರ್‍ಗಳನ್ನು ಅಳವಡಿಸಲಾಗಿತ್ತು.

ಅದರ ಹೊರತಾಗಿಯೂ ಅಕ್ರಮ ನಡೆಸುವವರು ವಿಶೇಷವಾದ ಶರ್ಟ್‍ಗಳನ್ನು ಧರಿಸಿದ್ದಾರೆ. ಬ್ಲೂಟೂತ್ ಸಲಕರಣೆ ಅತ್ಯಂತ ಚಿಕ್ಕದಾಗಿದ್ದು, ಪತ್ತೆಹಚ್ಚಲು ಕಷ್ಟಸಾಧ್ಯವಾಗುವಂತೆ ಬಳಕೆ ಮಾಡಿದ್ದಾರೆ. ಆದರೂ ಪೊಲೀಸರು ಮತ್ತು ಪರೀಕ್ಷಾ ಕೇಂದ್ರದ ಉಸ್ತುವಾರಿಗಳು ತೀವ್ರ ತಪಾಸಣೆ ನಡೆಸಿದಾಗ ನಗರದಲ್ಲಿ ಒಂದು ಪ್ರಕರಣ, ಯಾದಗಿರಿಯಲ್ಲಿ ಮೂರ್ನಾಲ್ಕು ಕಡೆ ಅಕ್ರಮಗಳು ಪತ್ತೆಯಾಗಿವೆ. ಕಲ್ಬುರ್ಗಿಯಲ್ಲಿ 13, ಯಾದಗಿರಿಯಲ್ಲಿ 19 ಮಂದಿಯನ್ನು ಬಂಸಲಾಗಿದೆ ಎಂದು ತಿಳಿಸಿದರು.

CIC ಮುಖ್ಯಸ್ಥರಾಗಿ ನೇಮಕಗೊಂಡ ದೇಶದ ಮೊದಲ ದಲಿತ ಅಧಿಕಾರಿ

ಹಿಂದಿನ ಸರ್ಕಾರದ ಅವಧಿಯಲ್ಲಿ ಪರೀಕ್ಷಾ ಅಕ್ರಮಗಳ ತಡೆಗೆ ಮುಂಜಾಗ್ರತೆ ವಹಿಸಿರಲಿಲ್ಲ. ನಾವು ಬಿಗಿ ಕ್ರಮ ಕೈಗೊಂಡಿದ್ದರಿಂದಾಗಿ ಅಕ್ರಮಗಳು ಕಡಿಮೆಯಾಗಿವೆ. ಸಾಮಾನ್ಯವಾಗಿ ಪರೀಕ್ಷೆಗೆ ಶೇ.15ರಿಂದ 20ರಷ್ಟು ಜನ ಗೈರು ಹಾಜರಾಗುತ್ತಾರೆ. ಪರೀಕ್ಷಾ ಅಕ್ರಮ ನಡೆಸಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಈ ಬಾರಿ ಗೈರು ಹಾಜರಿಯ ಪ್ರಮಾಣ ಶೇ.40ರಷ್ಟಾಗಿದೆ ಎಂದು ಹೇಳಿದರು.

ಮೂಲಗಳ ಪ್ರಕಾರ ಪರೀಕ್ಷಾ ಅಕ್ರಮಗಳಲ್ಲಿ ಬಂತರಾಗಿರುವವರ ಪೈಕಿ ಶೇ.90ರಷ್ಟು ಅಫ್ಜಲಪುರ ತಾಲ್ಲೂಕಿನವರಾಗಿದ್ದಾರೆ. ಬಹುತೇಕ ಆರೋಪಿಗಳ ವಾಟ್ಸಪ್‍ಗೆ ಪರೀಕ್ಷೆಯ ಹಿಂದಿನ ದಿನ ಕರೆ ಬಂದಿದೆ. ಕೆಲವರು ಆ ಸಂಖ್ಯೆಯನ್ನು ಸರ್ಕಾರ್ ಎಂದು ಸೇವ್ ಮಾಡಿಕೊಂಡಿದ್ದಾರೆ. ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ಜತೆಗೂ ಈ ಸಂಖ್ಯೆಯಲ್ಲಿ ಸಂವಹನ ನಡೆದಿರುವ ಸಾಕ್ಷ್ಯಗಳು ಲಭ್ಯವಾಗಿದೆ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸಕ್ಕೆ ಬ್ರೇಕ್

ಬೆಂಗಳೂರು, ನ.6- ಕಾಂಗ್ರೆಸ್‍ನ ಶಾಸಕರ ವಿದೇಶಿ ಪ್ರವಾಸ ಸದ್ಯಕ್ಕಿಲ್ಲ. ಮುಂದೆ ಅವಕಾಶ ಬಂದಾಗ ನೋಡೋಣ, ವರಿಷ್ಠರ ಗಮನಕ್ಕೆ ತಂದು ಪ್ರವಾಸ ಮಾಡುತ್ತೇವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾನಮನಸ್ಕರು ಸೇರಿದಾಕ್ಷಣ ಅದನ್ನು ಗುಂಪು ಅಥವಾ ಪಕ್ಷ ವಿರೋಧಿ ಚಟುವಟಿಕೆ ಎಂದು ಬಿಂಬಿಸಲಾಗುವುದಿಲ್ಲ. ಸದ್ಯಕ್ಕೆ ಕದನ ವಿರಾಮ ಜಾರಿಯಲ್ಲಿದೆ, ಎಲ್ಲವೂ ತಣ್ಣಗಿದೆ, ಬಹಳಷ್ಟು ಕೆಲಸ ಮಾಡಬೇಕಿದೆ ಎಂದರು.

ದಲಿತ ಮುಖ್ಯಮಂತ್ರಿ ವಿಚಾರ 2013ರಲ್ಲೂ ಚಾಲನೆಯಲ್ಲಿತ್ತು, ಐದು ವರ್ಷ ಪೂರ್ತಿ ಚರ್ಚೆಯಲ್ಲಿತ್ತು. ಕೊನೆಗೆ ಫಿಚ್ಚರ್ ರಿಲೀಸ್ ಆಗಲಿಲ್ಲ, ಹಾಗಿದೆ ನಮ್ಮ ಪರಿಸ್ಥಿತಿ. 2008ರಿಂದ ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಬೇಕು ಎಂದಿತ್ತು ಅವಕಾಶ ಸಿಗಲಿಲ್ಲ, ಪರಮೇಶ್ವರ್ ಎಂಟು ವರ್ಷ ಕೆಪಿಸಿಸಿ ಅಧ್ಯಕ್ಷರಾಗಿದ್ದರೂ ಸಿಎಂ ಆಗಲಿಲ್ಲ. ಆ ಸಮುದಾಯದಲ್ಲಿ ಅವಕಾಶಕ್ಕಾಗಿ ಕೂಗು ಕೇಳಿ ಬರುತ್ತಲೇ ಇದೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡಬೇಕಿದೆ ಎಂದರು.

ವಾಲ್ಮಿಕಿ ಸಮುದಾಯದ ಸ್ವಾಮೀಜಿ ಯವರು ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಯಾಗಬೇಕು ಎಂದು ಮೊದಲಿನಿಂದಲೂ ಹೇಳುತ್ತಲೇ ಬಂದಿದ್ದಾರೆ. ಸಮುದಾಯದ ಸಭೆ ನಡೆದಾಗಲೆಲ್ಲಾ ಈ ವಿಚಾರ ಚರ್ಚೆಯಾಗುತ್ತದೆ. ಅದೇ ರೀತಿ ದಲಿತರಲ್ಲಿ, ಲಿಂಗಾಯಿತರಲ್ಲಿ, ಒಕ್ಕಲಿಗರಲ್ಲೂ ಮುಖ್ಯಮಂತ್ರಿ ಹುದ್ದೆಗೆ ಬೇಡಿಕೆ ಇದೆ. ಅದೇ ರೀತಿ ನನ್ನ ಹೆಸರು ರೇಸ್‍ನಲ್ಲಿ ಇದೆ, ಅದರಲ್ಲಿ ವಿಶೇಷವೇನು ಇಲ್ಲ ಎಂದರು.

ಮುಖ್ಯಮಂತ್ರಿಯವರು ಕರೆದಿದ್ದ ಉಪಹಾರ ಕೂಟದಲ್ಲಿ ಭಾಗವಹಿಸಲು ಆಗಲಿಲ್ಲ. ಅಂದು ನನಗೆ ಆರೋಗ್ಯ ಸರಿ ಇರಲಿಲ್ಲ, ಹಾಗಾಗಿ ಭಾಗವಹಿಸಲಿಲ್ಲ. ಸಭೆಯಲ್ಲಿ ಇರಲಿಲ್ಲ ಎಂದಾಕ್ಷಣ ನಾವು ಹೊರಗಿದ್ದೇವೆ ಎಂದರ್ಥವಲ್ಲ. ಏನೇ ತೀರ್ಮಾನವಾದರೂ ಅದಕ್ಕೆ ನಾವು ಬದ್ಧರಾಗಿರುತ್ತೇವೆ, ತೀರ್ಮಾನಗಳನ್ನು ಪಾಲನೆ ಮಾಡುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್‍ನಲ್ಲಿ ಎರಡು ಮೂರು ಶಕ್ತಿ ಕೇಂದ್ರಗಳು ಇವೆ ಎಂಬುದು ವದ್ಧಂತಿ ಮಾತ್ರ. ನಮ್ಮಲ್ಲಿ ಇರುವುದು ಒಂದೇ ಶಕ್ತಿ ಕೇಂದ್ರ, ಅದು ದೆಹಲಿಯಲ್ಲಿದೆ. ಅಧಿಕಾರ ಹಂಚಿಕೆಯ ಬಗ್ಗೆ ಯಾರು ಚರ್ಚೆ ಮಾಡಬಾರದು ಎಂಬದಕ್ಕೆ ಎಲ್ಲರೂ ಬದ್ಧರಾಗಿಬೇಕಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಪಂಚರಾಜ್ಯಗಳ ಚುನಾವಣಾ ಪ್ರಚಾರದಲ್ಲಿ ರಾಜಕೀಯ ಕಾರಣಕ್ಕಾಗಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಪ್ರಸ್ತಾಪಿಸಿದ್ದಾರೆ. ಕಾಂಗ್ರೆಸ್ ಲೂಟಿ ಮಾಡುತ್ತಿದೆ ಎಂದು ಪ್ರಧಾನಿ ಮಾಡಿರುವ ಆರೋಪದಲ್ಲಿ ಹುರುಳಿಲ್ಲ, ಹಿಂದೆ ನಾವು ಬಿಜೆಪಿ ಸರ್ಕಾರದ ವಿರುದ್ಧ ಶೇ.40ರಷ್ಟು ಕಮಿಷನ್ ಪಡೆದ ಹಾಗೂ ಪೇ ಸಿಎಂ ಆರೋಪ ಮಾಡಿದ್ದೇವು. ಪ್ರಧಾನಿಯವರು ಅದನ್ನು ಒಪ್ಪಿಕೊಳ್ಳುತ್ತಾರೆಯೇ, ರಾಜಕೀಯದಲ್ಲಿ ಆರೋಪ ಮಾಡುವುದು ಸುಲಭ ಸಾಬೀತು ಪಡಿಸುವುದು ಕಷ್ಟ ಎಂದು ಪ್ರಶ್ನಿಸಿದರು.

ರಾಜಕೀಯದಲ್ಲಿ ಮಾತನಾಡುವವರಿಗೆ ಪ್ರಾಮುಖ್ಯತೆ ಸಿಗಬಾರದು. ಟಿವಿ ಮುಂದೆ ಬಂದವರು ಮಾತ್ರವೇ ನಾಯಕರಲ್ಲ. ಮಾತನಾಡದವರಿಗೂ ಅವಕಾಶಗಳು ಸಿಗಬೇಕು. ಕೆಲವರಿಗೆ ಪ್ರಾಕ್ಟಿಕಲ್ ಗೋತ್ತಿರುತ್ತದೆ, ಇನ್ನೂ ಕೆಲವರಿಗೆ ಥಿಯೆರಿ ಗೋತ್ತಿರುತ್ತದೆ. ಎಲ್ಲರಿಗೂ ಸಮಾನ ಅವಕಾಶಗಳು ಸಿಗಬೇಕು ಎಂದರು.

ಜಾತಿ ಜನಗಣತಿ ವರದಿ ಇನ್ನೂ ಸರ್ಕಾರಕ್ಕೆ ಸಲ್ಲಿಸಬೇಕಿದೆ. ಬಳಿಕ ಸಂಪುಟದಲ್ಲಿ ಚರ್ಚೆಯಾಗಬೇಕು. ಒಮ್ಮೇಲೆ ಒಪ್ಪಿಕೊಳ್ಳುವುದಿಲ್ಲ. ವಿಧಾನಮಂಡಲದ ಉಭಯ ಸದನಗಳಲ್ಲೂ ಚರ್ಚೆಯಾಗಬೇಕು. ಅಲ್ಲಿ ಸಮುದಾಯಗಳವಾರು ಇರುವ ಆಕ್ಷೇಪಗಳನ್ನು ಹೇಳಬಹುದಾಗಿದೆ, ಸರಿ ಇದ್ದರೆ ಒಪ್ಪಿಕೊಳ್ಳಬಹುದು, ಇಲ್ಲವಾದರೆ ಮರು ಸಮೀಕ್ಷೆ ನಡೆಸಬಹುದು ಎಂದರು.

ಪ್ಲಾಟ್‍ಫಾರ್ಮ್ ಮೇಲೆ ಬಸ್ ಉರುಳಿ ಇಬ್ಬರ ಸಾವು

ಎಂಟು ವರ್ಷಗಳ ಹಿಂದೆ ನಡೆಸಿದ ಸಮೀಕ್ಷೆ ಸರಿಯಾಗಿತ್ತು. ಜನಗಣತಿ ವರದಿಗಳನ್ನು ಸಾಮಾನ್ಯವಾಗಿ ಐದಾರು ವರ್ಷಗಳ ಹಿಂದಿನದವುಗಳನ್ನೇ ಪರಿಗಣಿಸಲಾಗುತ್ತದೆ. ಒಕ್ಕಲಿಗ, ಲಿಂಗಾಯಿತ ಸಮುದಾಯಕ್ಕೆ ತಮ್ಮ ಜನಸಂಖ್ಯೆ ಕಡಿಮೆ ತೋರಿಸಲಾಗಿದೆ ಎಂಬ ಆತಂಕ ಇದೆ, ಉಪಜಾತಿಗಳನ್ನು ಕೈ ಬಿಡಲಾಗಿದೆ ಎಂಬ ಆಕ್ಷೇಪ ಇದೆ.

ಈಗಲೂ ಉಪಜಾತಿಗಳನ್ನು ಸೇರಿಸಿ ಲೆಕ್ಕ ಮಾಡಬಹುದು. ವರದಿ ಜಾರಿಯಾದರೆ ರಾಜಕೀಯವಾಗಿ ಮಹತ್ವದ ಬದಲಾವಣೆಯೇನು ಆಗುವುದಿಲ್ಲ. ಹೆಚ್ಚೆಂದರೆ ಜನಸಂಖ್ಯೆಗೆ ಅನುಗುಣವಾಗಿ ಕಾರ್ಯಕ್ರಮಗಳನ್ನು ರೂಪಿಸಬಹುದು. ಬಹಳಷ್ಟು ಸಣ್ಣಪುಟ್ಟ ಜಾತಿಗಳು ಪರಿಗಣನೆಯಾಗಿ ಉಳಿದಿಲ್ಲ. ಎಸ್‍ಸಿ ಎಂದರೆ ನಾಲ್ಕೈದು ಜಾತಿ, ಪರಿಶಿಷ್ಟ ಪಂಗಡ ಎಂದರೆ ಮೂರ್ನಾಲ್ಕು ಸಮುದಾಯಗಳ ಹೆಸರುಗಳಷ್ಟೆ ಕೇಳಿ ಬರುತ್ತವೆ.

50 ಸಾವಿರ, ಲಕ್ಷದಷ್ಟು ಜನಸಂಖ್ಯೆ ಹೊಂದಿರುವ ಬಹಳಷ್ಟು ಸಮುದಾಯಗಳು ಪರಿಗಣನೆಗೆ ಒಳಗಾಗುತ್ತಿಲ್ಲ. ಈ ಕಾರಣಕ್ಕಾಗಿ ಜಾತಿ ಜನಗಣತಿ ವರದಿ ಚರ್ಚೆಯಾಗಿ ದಾಖಲೆಯಾಗಿ ಉಳಿಯಬೇಕು, ವರದಿಯಿಂದ ಸಾಮಾಜಿಕ ನ್ಯಾಯ ಸಿಗಲಿದೆ ಎಂಬ ನಂಬಿಕೆ ಇದೆ, ಅದರಿಂದ ಯಾರಿಗೂ ತೊಂದರೆಯಾಗುವುದಿಲ್ಲ ಎಂದರು.

ರೈತರ ಪಂಪ್ ಸೆಟ್‍ಗಳಿಗೆ ಪ್ರತಿದಿನ 7 ತಾಸು ವಿದ್ಯುತ್ ಪೂರೈಕೆ

ಬೆಂಗಳೂರು,ನ.6- ರಾಜ್ಯದಲ್ಲಿ ಸೃಷ್ಟಿಯಾಗಿರುವ ವಿದ್ಯುತ್ ಅಭಾವವನ್ನು ನೀಗಿಸಲು 1500 ಕೋಟಿ ರೂ.ಗಳ ಅಗತ್ಯವಿದ್ದು, ಅದನ್ನು ಅನುದಾನದ ಉಳಿತಾಯ ಹಾಗೂ ಮರು ಹಂಚಿಕೆ ಮೂಲಕ ಭರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಇಂದು ಗೃಹಕಚೇರಿ ಕೃಷ್ಣಾದಲ್ಲಿ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ಸಂದರ್ಭದಲ್ಲಿ ವಿದ್ಯುತ್ ಬೇಡಿಕೆ ಮತ್ತು ಪೂರೈಕೆ ನಡುವಿನ ವ್ಯತ್ಯಾಸದ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಗಿದೆ. ರಾಜ್ಯದಾದ್ಯಂತ ಐಪಿ ಸೆಟ್‍ಗಳಿಗೆ ನಿರಂತರ ಏಳು ಗಂಟೆಗಳ ಅವಧಿಗೆ ವಿದ್ಯುತ್ ಒದಗಿಸಲು ಗಂಟೆಗೆ 600 ಮೆಗಾವ್ಯಾಟ್ ಹಾಗೂ ಪ್ರತಿದಿನಕ್ಕೆ 14 ಮಿಲಿಯನ್ ಯುನಿಟ್‍ಗಳ ಅಗತ್ಯವಿದೆ. ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಪ್ರತಿದಿನ ಏಳು ತಾಸು ವಿದ್ಯುತ್ ನೀಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಯಿತು.

2022ನೇ ಇಸವಿಗೆ ಹೋಲಿಸಿದರೆ 2023 ರಲ್ಲಿ ವಿದ್ಯುತ್ ಬೇಡಿಕೆ ಸರಾಸರಿ ಶೇ. 43 ರಷ್ಟು ಹೆಚ್ಚಿದೆ. ಅಕ್ಟೋಬರ್ ತಿಂಗಳಲ್ಲಿ 15,978 ಮೆಗಾವ್ಯಾಟ್ ಬೇಡಿಕೆ ದಾಖಲಾಗಿದೆ. ವಿದ್ಯುತ್ ಬಳಕೆಯಲ್ಲಿ ಕಳೆದ ವರ್ಷಕ್ಕಿಂತ ಶೇ.45ರಷ್ಟು ಹೆಚ್ಚಿದೆ.

ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದಲ್ಲಿ ಕಾರು ಚಾಲಕ ವಶಕ್ಕೆ

ಕೃಷಿ ಬಳಕೆಯಲ್ಲಿ ಶೇ. 55ರಿಂದ 119 ರಷ್ಟು ಹೆಚ್ಚಳವಾಗಿದೆ. ಇತರ ವಿಭಾಗಗಳಲ್ಲಿ ಶೇ. 9 ರಿಂದ 14 ರಷ್ಟು ಹೆಚ್ಚಳವಾಗಿದೆ. ಮಳೆ ಕೊರತೆ, ವಾಡಿಕೆಗಿಂತ ಮೊದಲೇ ಐಪಿ ಸೆಟ್ ಗಳ ಬಳಕೆ ಪ್ರಾರಂಭವಾಗಿರುವುದು ಹಾಗೂ ಕೋವಿಡ್ 19 ರ ನಂತರದ ಆರ್ಥಿಕ ಪುನಶ್ಚೇತನ ಇದಕ್ಕೆ ಕಾರಣವಾಗಿದೆ ಎಂದರು.ಕಳೆದ ಬಾರಿ ಪ್ರಗತಿ ಪರಿಶೀಲನೆಯ ನಂತರ ರಾಯಚೂರು, ಬಳ್ಳಾರಿ ಉಷ್ಣವಿದ್ಯುತ್ ಸ್ಥಾವರಗಳ ಉತ್ಪಾದನೆ ಹೆಚ್ಚಾಗಿದೆ.

ಉತ್ತರ ಪ್ರದೇಶ, ಪಂಜಾಬ್ ಮತ್ತು ಹಿಮಾಚಲ ಪ್ರದೇಶಗಳಿಂದ ವಿದ್ಯುತ್ ಪಡೆಯಲಾಗುತ್ತಿದೆ ಎಂದು ತಿಳಿಸಿದರು.
ಸೆಕ್ಷನ್ 11 ಅಡಿ ಬೇರೆ ರಾಜ್ಯಗಳಿಗೆ ವಿದ್ಯುತ್ ನೀಡದಂತೆ ಆದೇಶ ಹೊರಡಿಸಿ, ವಿದ್ಯುತ್ ಪಡೆಯಲಾಗುತ್ತಿದೆ. ಆ ಮೂಲಕ ವಿದ್ಯುತ್ ವಿತರಣೆ ಸಹಜ ಸ್ಥಿತಿಗೆ ಬಂದಿದೆ. ನೋಡಲ್ ಅಧಿಕಾರಿಗಳು ನಿರಂತರವಾಗಿ ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ ಎಂದರು.

ವಿವಿಧ ವಿದ್ಯುತ್ ಸರಬರಾಜು ಕಂಪೆನಿಗಳ ವ್ಯಾಪ್ತಿಯಲ್ಲಿ ರೈತರ ಅಗತ್ಯತೆಗನುಗುಣವಾಗಿ ಐದರಿಂದ ಏಳು ಗಂಟೆಗಳ ಅವಗೆ ನಿರಂತರ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ಸಭೆಯಲ್ಲಿ ವಿವರಿಸಲಾಗಿದೆ.
ಮುಂದಿನ ವರ್ಷದಲ್ಲಿ ಐಪಿ ಸೆಟ್‍ಗಳಿಗೆ ವಿದ್ಯುತ್ ಪೂರೈಕೆಯನ್ನು ಸೌರವಿದ್ಯುತ್ ಮೂಲದಿಂದ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮುಂದಿನ ವರ್ಷದ ವೇಳೆಗೆ ಹಗಲು ವೇಳೆಯಲ್ಲಿಯೇ ರೈತರಿಗೆ ವಿದ್ಯುತ್ ನೀಡಲು ಇದರಿಂದ ಅನುಕೂಲವಾಗಲಿದೆ ಎಂದು ಹೇಳಿದರು.

ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಮತ್ತು ಸರ್ಕಾರದ ಇತರ ಹಿರಿಯ ಅಕಾರಿಗಳು ಭಾಗವಹಿಸಿದ್ದರು.

ಪ್ರತಿ ತಿಂಗಳು 20ರೊಳಗೆ ಸಂದಾಯವಾಗಲಿದೆ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆ ಹಣ

ಬೆಂಗಳೂರು,ನ.6- ರಾಜ್ಯ ಸರ್ಕಾರದ ಬಹುನಿರೀಕ್ಷಿತ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಗಳಿಗೆ ಪ್ರತಿ ತಿಂಗಳ 20ರೊಳಗೆ ಹಣ ಸಂದಾಯ ಮಾಡುವುದಾಗಿ ಆರ್ಥಿಕ ಇಲಾಖೆ ತಿಳಿಸಿದೆ. ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯಿಂದ ಜಾರಿಗೊಳಿಸುತ್ತಿರುವ ಅನ್ನಭಾಗ್ಯಯೋಜನೆಯಲ್ಲಿ ಅಕ್ಕಿ ಬದಲಾಗಿ ನಗದು ಪಾವತಿ ಸಲಾಗುತ್ತಿದೆ. ಅದನ್ನು ತಿಂಗಳ ಆರಂಭದ 10ರಿಂದ 15ರೊಳಗೆ ಪಾವತಿಸಬೇಕು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ಗೃಹಲಕ್ಷ್ಮಿ ಯೋಜನೆಯಲ್ಲಿ ಪಡಿತರಚೀಟಿ ಹೊಂದಿರುವ ಪ್ರತಿ ಕುಟುಂಬದ ಮನೆಯ ಯಜಮಾನಿಗೆ ಪ್ರತಿ ತಿಂಗಳು ಎರಡು ಸಾವಿರ ನಗದನ್ನು ಏಕೀಕೃತ ನೇರ ನಗದು ರೂಪದಲ್ಲಿ ವರ್ಗಾವಣೆ ಮಾಡಲಾಗುತ್ತಿದ್ದು ಅದನ್ನು 15ರಿಂದ 20ರೊಳಗೆ ಪಾವತಿಸಬೇಕಿದೆ. ಈ ಎರಡೂ ಯೋಜನೆಗಳಿಗೂ ಆರ್ಥಿಕ ಇಲಾಖೆ ಪ್ರತಿ ತಿಂಗಳ 20ರೊಳಗೆ ಪಾವತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದಾಗಿ ತಿಳಿಸಲಾಗಿದೆ.

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿ ನೀಡಲಾಗುತ್ತಿರುವ ಹಲವಾರು ಮಾಸಾಶನಗಳನ್ನು 1ರಿಂದ 5ನೇ ತಾರೀಖಿನೊಳಗೆ ಪಾವತಿ ಪ್ರಕ್ರಿಯೆಯನ್ನು ನಡೆಸಲಾಗುವುದು ಎಂದು ತಿಳಿಸಲಾಗಿದೆ. ಪ್ರತಿ ಕಲ್ಯಾಣ ಯೋಜನೆಯ ಹಾಗೂ ಸಬ್ಸಿಡಿ ಸ್ಕೀಮ್‍ಗಳಲ್ಲಿ ಫಲಾನುಭವಿಗಳ ಆಧಾರ್ ಮತ್ತು ಬ್ಯಾಂಕ್ ಖಾತೆಗಳ ಜೋಡನೆ ಮಾಡಿ ಡಿಬಿಟಿ ಮೂಲಕ ಅಡೆತಡೆ ಇಲ್ಲದೆ ಹಣ ಪಾವತಿಸಲಾಗುತ್ತಿದೆ.

ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದಲ್ಲಿ ಕಾರು ಚಾಲಕ ವಶಕ್ಕೆ

ಸರ್ಕಾರ ನೌಕರರ ವೇತನ ಪಾವತಿ ಸಮಯದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಬಿಲ್‍ಗಳನ್ನು ಪಾವತಿಸಬೇಕಾದರೆ ಒತ್ತಡ ಹೆಚ್ಚಾಗುತ್ತದೆ. ಡಿಬಿಟಿಯಲ್ಲಿ ವಿಳಂಬವಾಗುತ್ತಿದೆ. ಪ್ರತಿ ಕಡತದ ಪರಿಶೀಲನೆಗೂ ವಿಳಂಬವಾಗುತ್ತದೆ ಎಂದು ವಿವರಿಸಲಾಗಿದೆ.

ಪಾವತಿ ಮತ್ತು ವಿತರಣೆ ವ್ಯವಸ್ಥೆಗಳ ನಡುವೆ ಸಮನ್ವಯೀಕರಣ ಅಗತ್ಯವಿದೆ ಗೃಹಲಕ್ಷ್ಮಿ, ಅನ್ನಭಾಗ್ಯಮತ್ತು ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳ ಫಲಾನುಭವಿಗಳ ಸಂಖ್ಯೆಹೆಚ್ಚಾಗಿದೆ. ಆದ್ದರಿಂದ ಆರ್ಥಿಕ ಇಲಾಖೆಯ ಖಜಾನೆ ಘಟಕಕ್ಕೆ ಫಲಾನುಭವಿಗಳ ಪಟ್ಟಿಯನ್ನು ನಿಗದಿತ ಅವಯೊಳಗೆ ತಲುಪಿಸಬೇಕು. ಸದರಿ ಬಿಲ್‍ಗಳನ್ನು ಸೃಷ್ಟಿಸಿ ಪಾವತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಲಾಗಿದೆ.

ಬಸ್ ಪ್ರಯಾಣ ದರ ಏರಿಕೆ ಸದ್ಯಕ್ಕಿಲ್ಲ : ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು,ನ.6-ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವ ಸದ್ಯಕ್ಕಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ನಾಲ್ಕು ಸಾರಿಗೆ ನಿಗಮಗಳನ್ನು ಆರ್ಥಿಕವಾಗಿ ಸ್ವಾಲಂಬಿಯಾಗಿ ರೂಪಿಸಲು ಅಧ್ಯಯನ ನಡೆಸಿ ವರದಿ ನೀಡುವಂತೆ ಸರ್ಕಾರದ ಮಾಜಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಎಂ.ಆರ್.ಶ್ರೀನಿವಾಸ್ ಮೂರ್ತಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದರು. ಸಮಿತಿ ಹಲವು ಶಿಫಾರಸ್ಸುಗಳನ್ನೊಳಗೊಂಡ ವರದಿಯನ್ನು ಆಗಿನ ಮುಖ್ಯಮಂತ್ರಿಯವರಿಗೂ ನೀಡಿದೆ. ತಾವು ಸಚಿವರಾದ ಮೇಲೆ ತಮಗೂ ತಲುಪಿಸಿದೆ ಎಂದು ಹೇಳಿದರು.

ಸಮಿತಿಯ ಶಿಫಾರಸ್ಸಿನಲ್ಲಿ ಪ್ರಮುಖವಾಗಿ ಪ್ರಯಾಣ ದರ ಪರಿಷ್ಕರಣೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಸಮಿತಿ ಮಾದರಿಯಲ್ಲಿ ಪ್ರತ್ಯೇಕವಾದ ಸ್ವಾಯತ್ತ ಸಮಿತಿ ರಚಿಸುವಂತೆ ಶಿಫಾರಸ್ಸು ಮಾಡಲಾಗಿದೆ. 2015ರಲ್ಲಿ ದರ ಪರಿಷ್ಕರಣೆಯಾಗಿತ್ತು. ಆ ವೇಳೆ ಡೀಸೆಲ್ ಬೆಲೆ 50ರಿಂದ 60 ರೂ.ನಷ್ಟಿತ್ತು. ಈಗ ತೀವ್ರವಾಗಿ ಏರಿಕೆಯಾಗಿದೆ. ಸಾರಿಗೆ ಸಿಬ್ಬಂದಿಗಳ ವೇತನ 2017 ಮತ್ತು 2022ರಲ್ಲಿ ಪರಿಷ್ಕರಣೆಯಾಗಿದೆ.

ಬಿಡಿಭಾಗಗಳ ಬೆಲೆ ಕೂಡ ಹೆಚ್ಚಾಗಿದೆ. ಆದರೂ ಯಾವುದೇ ಸರ್ಕಾರಗಳು ಬಸ್ ಪ್ರಯಾಣ ದರ ಪರಿಷ್ಕರಣೆಗೆ ಅನುಮತಿ ನೀಡುತ್ತಿಲ್ಲ. ಹೀಗೇ ಆದರೆ ಸಾರಿಗೆ ನಿಗಮಗಳು ಶಾಶ್ವತವಾಗಿ ನಷ್ಟದಲ್ಲಿರಬೇಕಾಗುತ್ತದೆ. ಆ ಕಾರಣಕ್ಕೆ ದರ ಪರಿಷ್ಕರಣೆಗೆ ಸ್ವಾಯತ್ತವಾಗಿ ನಿರ್ಣಯ ಕೈಗೊಳ್ಳುವ ಸಮಿತಿ ರಚಿಸುವಂತೆ ಶ್ರೀನಿವಾಸ್‍ಮೂರ್ತಿಯವರು ಶಿಫಾರಸ್ಸು ಮಾಡಿದ್ದಾರೆ.

“ಭಾರತ-ಕೆನಡಾ ಮುನಿಸು ಸದ್ಯಕ್ಕೆ ಮುಗಿಯಲ್ಲ”

ಆ ವರದಿ ಸರ್ಕಾರದ ಮುಂದಿದೆ. ಮುಖ್ಯಮಂತ್ರಿ ಹಾಗೂ ಸಂಪುಟದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ಸದ್ಯಕ್ಕೆ ನಮ್ಮ ಮುಂದೆ ದರ ಏರಿಕೆಯ ಪ್ರಸ್ತಾವನೆ ಇಲ್ಲ ಎಂದು ಹೇಳಿದರು. ರಾಜ್ಯದಲ್ಲಿರುವ 25 ಸಾವಿರ ಹಳ್ಳಿಗಳ ಪೈಕಿ 300ರಿಂದ 400 ಗ್ರಾಮಗಳನ್ನು ಹೊರುತಪಡಿಸಿ ಉಳಿದೆಲ್ಲ ಕಡೆ ಬಸ್ ಸೇವೆ ಒದಗಿಸಲಾಗುತ್ತಿದೆ. ನಷ್ಟವಾದರೂ ಕೂಡ ಜನರಿಗೆ ಸೇವೆ ನೀಡಬೇಕು ಎಂಬ ಕಾರಣಕ್ಕೆ ಸರ್ಕಾರ ಸಾರಿಗೆ ಸಂಸ್ಥೆಗಳ ಬಸ್ ಸಂಚಾರ ಮುಂದುವರೆಸುತ್ತದೆ.ಇದರಿಂದಾಗಿ ನಷ್ಟ ಸಹಜ. ಖಾಸಗಿ ಸಾರಿಗೆಯವರು ನಷ್ಟವಾಗುವ ಕಡೆ ಬಸ್ ಸೇವೆ ಒದಗಿಸುವುದಿಲ್ಲ ಎಂದರು.

ಬಿಬಿಎಂಪಿಗೆ ಚುನಾವಣೆ ನಡೆಸಲು ಎಲ್ಲ ರೀತಿಯ ತಯಾರಿಗಳಾಗಿವೆ. ಆದರೆ ಹಿಂದುಳಿದ ವರ್ಗಗಳ ಮೀಸಲಾತಿ ವಿಷಯ ಇತ್ಯರ್ಥವಾಗದ ಹಿನ್ನಲೆಯಲ್ಲಿ ವಿಳಂಬವಾಗುತ್ತಿದೆ ಎಂದು ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದರು. ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಮಹಾರಾಷ್ಟ್ರದವರು ಹಿಂದುಳಿದ ವರ್ಗಗಳ ಮೀಸಲಾತಿ ಇಲ್ಲದೆ ಚುನಾವಣೆ ನಡೆಸಿದ್ದಾರೆ. ಮಧ್ಯಪ್ರದೇಶದಲ್ಲಿ ಹಿಂದುಳಿದ ವರ್ಗಗಳ ಆಯೋಗದ ವರದಿ ಆಧರಿಸಿ ಮೀಸಲಾತಿ ನೀಡಲಾಗಿದೆ. ನಮ್ಮಲ್ಲಿ ಕಾಂತರಾಜು ಆಯೋಗದ ವರದಿ ಸಲ್ಲಿಕೆಯಾದ ಬಳಿಕ ಹಿಂದುಳಿದ ಸಮುದಾಯಗಳ ಜನಸಂಖ್ಯೆ ಎಷ್ಟು ಎಂಬುದು ಗೊತ್ತಾಗಲಿದೆ. ಅದನ್ನು ಆಧರಿಸಿ ಮೀಸಲಾತಿ ನೀಡಬಹುದು.

ಪ್ರಸ್ತುತ ಸಂದರ್ಭದಲ್ಲಿ ಒಬಿಸಿ ಮೀಸಲಾತಿ ಇಲ್ಲದೆ ಬಿಬಿಎಂಪಿ ಚುನಾವಣೆ ನಡೆಸಬೇಕಾಗುತ್ತದೆ. ಅದು ಸಾಧ್ಯವಿಲ್ಲ. ಈ ತಿಂಗಳೊಳಗೆ ಒಬಿಸಿ ಮೀಸಲಾತಿ ವಿಷಯ ಇತ್ಯರ್ಥವಾದರೆ ಒಂದು ತಿಂಗಳೊಳಗೆ ಚುನಾವಣೆ ನಡೆಸಲು ಆಯೋಗ ಸಿದ್ದವಿದೆ ಎಂದರು.