Home Blog Page 1836

ಬಸ್ ಪ್ರಯಾಣ ದರ ಏರಿಕೆ ಸದ್ಯಕ್ಕಿಲ್ಲ : ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು,ನ.6-ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವ ಸದ್ಯಕ್ಕಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ನಾಲ್ಕು ಸಾರಿಗೆ ನಿಗಮಗಳನ್ನು ಆರ್ಥಿಕವಾಗಿ ಸ್ವಾಲಂಬಿಯಾಗಿ ರೂಪಿಸಲು ಅಧ್ಯಯನ ನಡೆಸಿ ವರದಿ ನೀಡುವಂತೆ ಸರ್ಕಾರದ ಮಾಜಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಎಂ.ಆರ್.ಶ್ರೀನಿವಾಸ್ ಮೂರ್ತಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದರು. ಸಮಿತಿ ಹಲವು ಶಿಫಾರಸ್ಸುಗಳನ್ನೊಳಗೊಂಡ ವರದಿಯನ್ನು ಆಗಿನ ಮುಖ್ಯಮಂತ್ರಿಯವರಿಗೂ ನೀಡಿದೆ. ತಾವು ಸಚಿವರಾದ ಮೇಲೆ ತಮಗೂ ತಲುಪಿಸಿದೆ ಎಂದು ಹೇಳಿದರು.

ಸಮಿತಿಯ ಶಿಫಾರಸ್ಸಿನಲ್ಲಿ ಪ್ರಮುಖವಾಗಿ ಪ್ರಯಾಣ ದರ ಪರಿಷ್ಕರಣೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಸಮಿತಿ ಮಾದರಿಯಲ್ಲಿ ಪ್ರತ್ಯೇಕವಾದ ಸ್ವಾಯತ್ತ ಸಮಿತಿ ರಚಿಸುವಂತೆ ಶಿಫಾರಸ್ಸು ಮಾಡಲಾಗಿದೆ. 2015ರಲ್ಲಿ ದರ ಪರಿಷ್ಕರಣೆಯಾಗಿತ್ತು. ಆ ವೇಳೆ ಡೀಸೆಲ್ ಬೆಲೆ 50ರಿಂದ 60 ರೂ.ನಷ್ಟಿತ್ತು. ಈಗ ತೀವ್ರವಾಗಿ ಏರಿಕೆಯಾಗಿದೆ. ಸಾರಿಗೆ ಸಿಬ್ಬಂದಿಗಳ ವೇತನ 2017 ಮತ್ತು 2022ರಲ್ಲಿ ಪರಿಷ್ಕರಣೆಯಾಗಿದೆ.

ಬಿಡಿಭಾಗಗಳ ಬೆಲೆ ಕೂಡ ಹೆಚ್ಚಾಗಿದೆ. ಆದರೂ ಯಾವುದೇ ಸರ್ಕಾರಗಳು ಬಸ್ ಪ್ರಯಾಣ ದರ ಪರಿಷ್ಕರಣೆಗೆ ಅನುಮತಿ ನೀಡುತ್ತಿಲ್ಲ. ಹೀಗೇ ಆದರೆ ಸಾರಿಗೆ ನಿಗಮಗಳು ಶಾಶ್ವತವಾಗಿ ನಷ್ಟದಲ್ಲಿರಬೇಕಾಗುತ್ತದೆ. ಆ ಕಾರಣಕ್ಕೆ ದರ ಪರಿಷ್ಕರಣೆಗೆ ಸ್ವಾಯತ್ತವಾಗಿ ನಿರ್ಣಯ ಕೈಗೊಳ್ಳುವ ಸಮಿತಿ ರಚಿಸುವಂತೆ ಶ್ರೀನಿವಾಸ್‍ಮೂರ್ತಿಯವರು ಶಿಫಾರಸ್ಸು ಮಾಡಿದ್ದಾರೆ.

“ಭಾರತ-ಕೆನಡಾ ಮುನಿಸು ಸದ್ಯಕ್ಕೆ ಮುಗಿಯಲ್ಲ”

ಆ ವರದಿ ಸರ್ಕಾರದ ಮುಂದಿದೆ. ಮುಖ್ಯಮಂತ್ರಿ ಹಾಗೂ ಸಂಪುಟದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ಸದ್ಯಕ್ಕೆ ನಮ್ಮ ಮುಂದೆ ದರ ಏರಿಕೆಯ ಪ್ರಸ್ತಾವನೆ ಇಲ್ಲ ಎಂದು ಹೇಳಿದರು. ರಾಜ್ಯದಲ್ಲಿರುವ 25 ಸಾವಿರ ಹಳ್ಳಿಗಳ ಪೈಕಿ 300ರಿಂದ 400 ಗ್ರಾಮಗಳನ್ನು ಹೊರುತಪಡಿಸಿ ಉಳಿದೆಲ್ಲ ಕಡೆ ಬಸ್ ಸೇವೆ ಒದಗಿಸಲಾಗುತ್ತಿದೆ. ನಷ್ಟವಾದರೂ ಕೂಡ ಜನರಿಗೆ ಸೇವೆ ನೀಡಬೇಕು ಎಂಬ ಕಾರಣಕ್ಕೆ ಸರ್ಕಾರ ಸಾರಿಗೆ ಸಂಸ್ಥೆಗಳ ಬಸ್ ಸಂಚಾರ ಮುಂದುವರೆಸುತ್ತದೆ.ಇದರಿಂದಾಗಿ ನಷ್ಟ ಸಹಜ. ಖಾಸಗಿ ಸಾರಿಗೆಯವರು ನಷ್ಟವಾಗುವ ಕಡೆ ಬಸ್ ಸೇವೆ ಒದಗಿಸುವುದಿಲ್ಲ ಎಂದರು.

ಬಿಬಿಎಂಪಿಗೆ ಚುನಾವಣೆ ನಡೆಸಲು ಎಲ್ಲ ರೀತಿಯ ತಯಾರಿಗಳಾಗಿವೆ. ಆದರೆ ಹಿಂದುಳಿದ ವರ್ಗಗಳ ಮೀಸಲಾತಿ ವಿಷಯ ಇತ್ಯರ್ಥವಾಗದ ಹಿನ್ನಲೆಯಲ್ಲಿ ವಿಳಂಬವಾಗುತ್ತಿದೆ ಎಂದು ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದರು. ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಮಹಾರಾಷ್ಟ್ರದವರು ಹಿಂದುಳಿದ ವರ್ಗಗಳ ಮೀಸಲಾತಿ ಇಲ್ಲದೆ ಚುನಾವಣೆ ನಡೆಸಿದ್ದಾರೆ. ಮಧ್ಯಪ್ರದೇಶದಲ್ಲಿ ಹಿಂದುಳಿದ ವರ್ಗಗಳ ಆಯೋಗದ ವರದಿ ಆಧರಿಸಿ ಮೀಸಲಾತಿ ನೀಡಲಾಗಿದೆ. ನಮ್ಮಲ್ಲಿ ಕಾಂತರಾಜು ಆಯೋಗದ ವರದಿ ಸಲ್ಲಿಕೆಯಾದ ಬಳಿಕ ಹಿಂದುಳಿದ ಸಮುದಾಯಗಳ ಜನಸಂಖ್ಯೆ ಎಷ್ಟು ಎಂಬುದು ಗೊತ್ತಾಗಲಿದೆ. ಅದನ್ನು ಆಧರಿಸಿ ಮೀಸಲಾತಿ ನೀಡಬಹುದು.

ಪ್ರಸ್ತುತ ಸಂದರ್ಭದಲ್ಲಿ ಒಬಿಸಿ ಮೀಸಲಾತಿ ಇಲ್ಲದೆ ಬಿಬಿಎಂಪಿ ಚುನಾವಣೆ ನಡೆಸಬೇಕಾಗುತ್ತದೆ. ಅದು ಸಾಧ್ಯವಿಲ್ಲ. ಈ ತಿಂಗಳೊಳಗೆ ಒಬಿಸಿ ಮೀಸಲಾತಿ ವಿಷಯ ಇತ್ಯರ್ಥವಾದರೆ ಒಂದು ತಿಂಗಳೊಳಗೆ ಚುನಾವಣೆ ನಡೆಸಲು ಆಯೋಗ ಸಿದ್ದವಿದೆ ಎಂದರು.

ಬರಕ್ಕಿಂತ ಜೆಡಿಎಸ್-ಬಿಜೆಪಿ ಮೈತ್ರಿಯೇ ಸರ್ಕಾರಕ್ಕೆ ದೊಡ್ಡ ಸಂಕಷ್ಟವಾಗಿದೆ : ಹೆಚ್‌ಡಿಕೆ

ಬೆಂಗಳೂರು,ನ.6- ನಾವು ಹಮ್ಮಿಕೊಳ್ಳಲಿರುವ ರೈತ ಸಾಂತ್ವನ ಯಾತ್ರೆ ಬಗ್ಗೆ ಲಘುವಾಗಿ ಹೇಳಿಕೆ ಕೊಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತಿರುಗೇಟು ಕೊಟ್ಟಿದ್ದಾರೆ. ಈ ಬಗ್ಗೆ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ನಿಮಗೆ ರಾಜ್ಯದ ಬರ ಮತ್ತಿತರೆ ಸಂಕಷ್ಟಗಳಿಗಿಂತ ಜೆಡಿಎಸ್-ಬಿಜೆಪಿ ಮೈತ್ರಿಯೇ ಬಹುದೊಡ್ಡ ಸಂಕಷ್ಟವಾಗಿ ಪರಿಣಮಿಸಿದಂತೆ ತೋರುತ್ತಿದೆ ಎಂದು ಕಾಲೆಳೆದಿದ್ದಾರೆ.

ಅಲ್ಲದೆ, ವಿಶ್ವ ವಿಖ್ಯಾತ ವಿತ್ತತಜ್ಞ ಎಂದು ಹಾಲಿ ಸಿಎಂಗೆ ಮಾಜಿ ಮುಖ್ಯಮಂತ್ರಿ ಟಾಂಗ್ ನೀಡಿದ್ದಾರೆ. ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ಹೃದಯ ವೈಶಾಲ್ಯತೆಗೆ ನಾನು ಆಭಾರಿ. ರೈತ ಸಾಂತ್ವನ ಯಾತ್ರೆಯನ್ನು ಸ್ವಾಗತ ಮಾಡಿರುವ ನಿಮ್ಮ ದೊಡ್ಡ ಗುಣವನ್ನು ಮನಸಾರೆ ಕೊಂಡಾಡುತ್ತೇನೆ. ಜೆಡಿಎಸ್ ಸಲ್ಲಿಸಲಿರುವ ಬರ ಅಧ್ಯಯನ ವರದಿಯನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದ್ದೀರಿ, ಬಹಳ ಸಂತೋಷ ಎಂದು ವ್ಯಂಗ್ಯವಾಡಿದ್ದಾರೆ.

ರೈತ ಸಾಂತ್ವನ ಯಾತ್ರೆಯ ಅನುಭವವನ್ನು ಕೇಂದ್ರದ ಜತೆಗೂ ಹಂಚಿಕೊಳ್ಳುತ್ತೇವೆ. ನಿಮಗೆ ಸಂಶಯ ಬೇಡ. ರಾಜ್ಯದ ಅಗತ್ಯಗಳಿಗೆ ಕೇಂದ್ರ ಸರ್ಕಾರ ಹೇಗೆ ಸ್ಪಂದಿಸುತ್ತಿದೆ, ಅದಕ್ಕೆ ನಿಮ್ಮ ನೇತೃತ್ವದ ಸರ್ಕಾರ ಎಷ್ಟು ಗಂಭೀರ ಪ್ರಯತ್ನ ಮಾಡಿದೆ, ಮಾಡುತ್ತಿದೆ ಎನ್ನುವುದು ನನಗೂ ತಿಳಿದಿದೆ. ಬರದ ಜತೆಗೆ, ವಿದ್ಯುತ್ ಬಿಕ್ಕಟ್ಟು, ಕಾವೇರಿ ಸಂಕಷ್ಟದ ವಿಷಯದಲ್ಲಿ ನಿಮ್ಮ ಸರ್ಕಾರ ದ ಅಪರಿಮಿತ ಅಸಡ್ಡೆಯನ್ನು ಅರಿಯದಷ್ಟು ಮುಗ್ಧನೇ ನಾನು ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ದೆಹಲಿಯ ಬಿ, ಸಿ ಗ್ರೂಪ್ ನೌಕರರಿಗೆ ದೀಪಾವಳಿ ಬೋನಸ್ ಘೋಷಣೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತ್ತವರ ಕುಟುಂಬಕ್ಕೆ ಆತ್ಮೀಯತೆ ಇದೆ ಎಂಬುದರಲ್ಲಿ ಎರಡು ಮಾತಿಲ್ಲ. ಬಿಜೆಪಿ-ಜೆಡಿಎಸ್ ನಡುವೆ ಮೈತ್ರಿ ಏರ್ಪಟ್ಟಿದೆ ಎನ್ನುವುದೂ ನಿಜ. ರಾಜ್ಯದ ಹಿತಕ್ಕಾಗಿ ನಾವು ಪ್ರಧಾನಿಯವರ ಮುಂದೆಯೂ ದನಿ ಎತ್ತುತ್ತೇವೆ, ಅದು ನಮ್ಮ ಬದ್ಧತೆ. ಆದರೆ, ನಿಮಗೆ ರಾಜ್ಯದ ಬರ ಮತ್ತಿತರೆ ಸಂಕಷ್ಟಗಳಿಗಿಂತ ಈ ಮೈತ್ರಿಯೇ ಬಹುದೊಡ್ಡ ಸಂಕಷ್ಟವಾಗಿ ಪರಿಣಮಿಸಿದಂತೆ ತೋರುತ್ತಿದೆ ಅಲ್ಲವೇ ಎಂದು ಅವರು ಕುಟುಕಿದ್ದಾರೆ.

236 ತಾಲೂಕುಗಳಲ್ಲಿ 216 ಬರಪೀಡಿತ ಎಂದು ಲೆಕ್ಕ ಕೊಟ್ಟಿದ್ದೀರಿ. 33,710 ಕೋಟಿ ರೂ. ಮËಲ್ಯದ ಬೆಳೆಹಾನಿ ಆಗಿದ್ದು, ಕೇಂದ್ರಕ್ಕೆ 17,901 ಕೋಟಿ ರೂ. ಪರಿಹಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದ್ದೀರಿ, ಸರಿ. ಜತೆಗೆ 343 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ ಎಂದೂ ತಿಳಿಸಿದ್ದೀರಿ. ಅದನ್ನು ಯಾರಿಗೆ ಹಂಚಿದ್ದೀರಿ ಎಂದು ಅವರು ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿ ವಿಶ್ವವಿಖ್ಯಾತ ವಿತ್ತತಜ್ಞರಾಗಿ ಮೆರೆಯುತ್ತಿರುವವರು ನೀವು. ಅಕಾರಕ್ಕೆ ಬಂದೊಡನೆ ವಿಶೇಷವಾಗಿ ವಿತ್ತಖಾತೆಯನ್ನು ತಮ್ಮಲ್ಲಿಯೇ ಜೋಪಾನ ಮಾಡಿಕೊಳ್ಳುವ ನಿಮಗೆ, ಕೇಂದ್ರ ಸರ್ಕಾರವು ಬರಕ್ಕೆ, ಪ್ರವಾಹಕ್ಕೆ ಯಾವ ರೀತಿ ಪರಿಹಾರ ಕೊಡುತ್ತದೆ ಎನ್ನುವ ಸಾಮಾನ್ಯ ತಿಳಿವಳಿಕೆಯೂ ಇಲ್ಲವೇ ಎಂದು ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.

ನೀವು ಕರೆದೊಯ್ಯುವ ಸರ್ವಪಕ್ಷ ನಿಯೋಗದಲ್ಲಿ ಜೆಡಿಎಸ್ ಪಕ್ಷವೂ ಇರುತ್ತದೆ, ನಮ್ಮ ಮಿತ್ರಪಕ್ಷ ಬಿಜೆಪಿಯೂ ಇರುತ್ತದೆ. ಇನ್ನೊಬ್ಬರ ಧೈರ್ಯದ ಬಗ್ಗೆ ಮಾತನಾಡುವ ನೀವು, ನಿಮ್ಮ ಸ್ಥೆ ೈರ್ಯದ ಬಗ್ಗೆಯೂ ಕೊಂಚ ಹೇಳಬೇಕಲ್ಲವೇ ಎಂದು ಪ್ರಶ್ನಿಸಿದರು.

ರಾಜ್ಯದ ನೆಲ-ಜಲ, ಇನ್ನಿತರೆ ಸಂಕಷ್ಟದ ವೇಳೆ ಈ ಇಳಿವಯಸ್ಸಿನಲ್ಲಿಯೂ ಮಾನ್ಯ ದೇವೇಗೌಡರು ನಡೆಸುತ್ತಿರುವ ಹೋರಾಟ ನಿಮಗೆ ಕಾಣಿಸಿಲ್ಲವೇ? ಕಾವೇರಿ ಬಗ್ಗೆ ಅವರು ಸಂಸತ್ತಿನಲ್ಲಿ ಸಿಡಿದೆದ್ದಾಗ ನಿಮ್ಮ ಪಕ್ಷದ ಸದಸ್ಯರೆಲ್ಲರೂ ಎಲ್ಲಿ ಅವಿತು ಕುಳಿತಿದ್ದರು ಎಂದುಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿನ್ನರ್-ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿಕೊಂಡು ಆಪರೇಷನ್ ಹಸ್ತದ ಬಗ್ಗೆಯೇ ನಿಮ್ಮ ಸಚಿವರ ಬಳಿ ಅಲವತ್ತುಕೊಳ್ಳುತ್ತಿದ್ದೀರಿ. ಪಂಚರಾಜ್ಯಗಳಿಗೆ ಹಣ ಹೊಂಚಲು ರಾಜ್ಯವನ್ನು ದೋಚುವುದು ಹೇಗೆಂದು ಗುಟ್ಟು ಗುಟ್ಟಾಗಿ ಪಾಠ ಮಾಡುತ್ತಿದ್ದೀರಿ. ಜೆಡಿಎಸ್, ಬಿಜೆಪಿ ಶಾಸಕರು ಹಾಗೂ ಸೋತ ಅಭ್ಯರ್ಥಿಗಳನ್ನು ಆಪರೇಷನ್ ಮಾಡಲು ಗುಳ್ಳೆನರಿಗಳಂತೆ ಅವರ ಮನೆಗಳ ಮುಂದೆ ಕತ್ತಲಾದ ಮೇಲೆ ಹೊಂಚು ಹಾಕಿ ಕೂರುತ್ತಿದ್ದೀರಿ ಎಂದು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

ಜರ್ಮನ್ ವಿದೇಶಾಂಗ ಸಚಿವೆಯನ್ನು ಚುಂಬಿಸಲೆತ್ನಿಸಿದ ಕ್ರೋವೆಷಿಯನ್ ಸಚಿವ

ಕುತ್ತಿಗೆಗೆ ಗ್ಯಾರಂಟಿ ಬೋರ್ಡ್ ಹಾಕಿಕೊಂಡು ಹಾದಿ-ಬೀದಿಯಲ್ಲಿ ಓಡಾಡುತ್ತಿದ್ದೀರಿ. ಐದು ತಿಂಗಳಿಗೇ ಭದ್ರತೆಯ ಗ್ಯಾರಂಟಿ ಇಲ್ಲದೆ ಬಾಲಗ್ರಹಪೀಡಿತ ನಿಮ್ಮ ಸರ್ಕಾರ ಭಿನ್ನಮತಪೀಡಿತವಾಗಿದೆ. ಕುರ್ಚಿ ಉಳಿಸಿಕೊಳ್ಳಲು ನೀವೂ ಹೆಣಗಾಡುತ್ತಿದ್ದೀರಿ. ಹೌದಲ್ಲವೇ? ಉತ್ತರ ನೀಡಿ ಸನ್ಮಾನ್ಯ ಸಿದ್ದರಾಮಯ್ಯನವರೇ ಎಂದು ಕುಮಾರಸ್ವಾಮಿ ಕೇಳಿದ್ದಾರೆ.

ಬೆಂಗಳೂರಿಗೆ ಪ್ರತ್ಯೇಕ ಚಿರತೆ ಕಾರ್ಯಪಡೆ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು,ನ.6- ನಗರದ ವಸತಿ ಪ್ರದೇಶಗಳಲ್ಲಿ ಪದೇ ಪದೇ ಚಿರತೆಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಗರಕ್ಕೆ ಪ್ರತ್ಯೇಕ ಸಮರ್ಪಿತ ಕ್ಷಿಪ್ರ ಚಿರತೆ ಕಾರ್ಯಪಡೆ ರಚಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಈ ಬಾರಿ ಮಳೆಯ ಅಭಾವ ಇರುವ ಹಿನ್ನೆಲೆಯಲ್ಲಿ ಆಹಾರ ಹುಡುಕಿಕೊಂಡು ವನ್ಯ ಮೃಗಗಳು ಕಾಡಿನಿಂದ ನಾಡಿಗೆ ಹೆಚ್ಚಾಗಿ ಬರುತ್ತಿವೆ. ಅದರಲ್ಲೂ ಬೆಂಗಳೂರು ನಗರದ ಹೊರವಲಯದಲ್ಲಿ ಕಾಡು ಮತ್ತು ಬೆಟ್ಟಗುಡ್ಡ ಇರುವ ಪ್ರದೇಶದಲ್ಲಿ ಚಿರತೆಗಳು ಕಾಣಿಸಿಕೊಳ್ಳುತ್ತಿದ್ದು, ಜನರಲ್ಲಿ ಆತಂಕ ಮೂಡಿದೆ. ಕೂಡಲೇ ಬೆಂಗಳೂರಿನಲ್ಲಿ ಒಂದು ಕ್ಷಿಪ್ರ ಚಿರತೆ ಕಾರ್ಯಪಡೆ ರಚಿಸಿ, ವನ್ಯಮೃಗಗಳು ನಾಡಿಗೆ ಬಂದರೆ ಕೂಡಲೇ ಸೆರೆ ಹಿಡಿದು ಕಾಡಿಗೆ ಅಥವಾ ಪುನರ್ವಸತಿ ಕೇಂದ್ರಕ್ಕೆ ಕಳುಹಿಸುವ ಕಾರ್ಯವನ್ನು ತ್ವರಿತವಾಗಿ ಮಾಡುವಂತೆ ಸೂಚನೆ ನೀಡಿದ್ದಾರೆ.

ದೆಹಲಿಯ ಬಿ, ಸಿ ಗ್ರೂಪ್ ನೌಕರರಿಗೆ ದೀಪಾವಳಿ ಬೋನಸ್ ಘೋಷಣೆ

ಈಗಾಗಲೇ ಹಾಲಿ ಇದ್ದ 5 ಆನೆ ಕ್ಷಿಪ್ರಕಾರ್ಯಪಡೆಗಳ ಜೊತೆಗೆ ಬೆಂಗಳೂರು (ಬನ್ನೇರುಘಟ್ಟ) ಮತ್ತು ರಾಮನಗರದಲ್ಲಿ ತಲಾ ಒಂದರಂತೆ 2 ಕಾರ್ಯಪಡೆಯನ್ನು ಹೆಚ್ಚುವರಿಯಾಗಿ ರಚಿಸಲಾಗಿದೆ. ಅದೇ ರೀತಿ ಹೆಚ್ಚು ಕಾಡಿರುವ ಮತ್ತು ಚಿರತೆಗಳು, ಕರಡಿಗಳು ಇರುವ ಬೆಟ್ಟಗುಡ್ಡದ ಪ್ರದೇಶದಲ್ಲಿ ಕನಿಷ್ಠ 3 ಜಿಲ್ಲೆಗೆ ಒಂದರಂತೆ ಕ್ಷಿಪ್ರ ಕಾರ್ಯಪಡೆ ರಚಿಸಿ, ಅತ್ಯಾಧುನಿಕ ಸಲಕರಣೆಗಳನ್ನು ಒದಗಿಸಲು ಸೂಚಿಸಿದ್ದಾರೆ.

ಚಿರತೆ ಕಾರ್ಯಪಡೆಯ ಸಿಬ್ಬಂದಿಗೆ ಸೂಕ್ತ ತರಬೇತಿ ಕೊಡಿಸುವಂತೆ ಮತ್ತು ಅಣಕು ಕಾರ್ಯಾಚರಣೆಗಳನ್ನೂ ನಡೆಸಿ ಸಿಬ್ಬಂದಿಯನ್ನು ಸಜ್ಜುಗೊಳಿಸುವಂತೆ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಭಯೋತ್ಪಾದನೆ ನಿಗ್ರಹಕ್ಕೆ ಸೇನೆಯಿಂದ AI ತಂತ್ರಜ್ಞಾನ ಅಳವಡಿಕೆ

ನವದೆಹಲಿ,ನ.6- ಭಾರತ ಸೇನೆ ಭಯೋತ್ಪಾದನೆಯ ನಿಗ್ರಹಕ್ಕೆ ಹಾಗೂ ಶತ್ರು ರಾಷ್ಟ್ರಗಳಿಂದ ರಕ್ಷಣೆಗಾಗಿ ತನ್ನ ಸಾಮಥ್ರ್ಯ ಹೆಚ್ಚಿಸಿಕೊಳ್ಳಲು ಎಐ (ಕೃತಕಬುದ್ದಿಮತ್ತೆ) ತಂತ್ರಜ್ಞಾನ ಅಳವಡಿಸಿಕೊಳ್ಳಲು ಮುಂದಾಗಿದೆ. ಭಾರತಕ್ಕೆ ಶತ್ರು ರಾಷ್ಟ್ರಗಳಾಗಿ ಕಾಡುತ್ತಿರುವ ಪಾಕಿಸ್ತಾನ ಮತ್ತು ಚೀನಾದ ಗಡಿಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ ಮೂಲಕ ದೇಶದ ಗಡಿಯೊಳಗೆ ನುಗ್ಗಲು ಭಯೋತ್ಪಾದಕರಿಗೆ ಉತ್ತೇಜಿಸುವ ಪಾಕಿಸ್ತಾನಕ್ಕೆ ಭಾರತ ಸೆಡ್ಡು ಹೊಡೆದಿದೆ. ಅಲ್ಲದೇ ಪದೇ ಪದೇ ಗಡಿಯಲ್ಲಿ ಸಮಸ್ಯೆ ಹುಟ್ಟು ಹಾಕಿ ಕಾಲು ಕೆದರಿ ಜಗಳಕ್ಕೆ ನಿಲ್ಲುವ ಚೀನಾ ತಂಟೆಯನ್ನೂ ಬಂದ್ ಮಾಡಲು ರಕ್ಷಣಾ ಇಲಾಖೆ ಮುಂದಾಗಿದೆ.

ರಕ್ಷಣೆಗೆ ಬಳಸುವ ಎಐ ತಂತ್ರಜ್ಞಾನದಲ್ಲಿ ಹೆಚ್ಚಿನ ರೆಸಲ್ಯೂಶನ್ ಹೊಂದಿರುವ ಕ್ಯಾಮೆರಾಗಳು, ಮಾನವರಹಿತ ವಿಮಾನಗಳು ಮತ್ತು ರೆಡಾರ್‍ಗಳನ್ನು ಒಳಗೊಂಡಿವೆ. ಇವುಗಳು ನೈಜ ಸಮಯದಲ್ಲಿ ಮಾನಿಟರಿಂಗ್ ಮಾಡುವ ಸಾಫ್ಟ್‍ವೇರ್‍ಗಳನ್ನು ಸಹ ಹೊಂದಿವೆ. ಈ ಮೂಲಕ ಗಡಿಯಲ್ಲಿ ಶತ್ರುಗಳ ಚಟುವಟಿಕೆಗಳ ಮೇಲೆ ತೀವ್ರ ನಿಗಾ ಇಡಲಾಗುತ್ತದೆ.

ಜರ್ಮನ್ ವಿದೇಶಾಂಗ ಸಚಿವೆಯನ್ನು ಚುಂಬಿಸಲೆತ್ನಿಸಿದ ಕ್ರೋವೆಷಿಯನ್ ಸಚಿವ

ಗಡಿಗಳಲ್ಲಿ ಗಸ್ತು ತಿರುಗಲು ಸಹ ಎಐ ಚಾಲಿತ ಡ್ರೋನ್‍ಗಳು ಮತ್ತು ರೋಬೋಟ್‍ಗಳನ್ನು ಬಳಸಲು ನಿರ್ಧರಿಸಲಾಗಿದ್ದು, ಮಾನವ ಹಸ್ತಕ್ಷೇಪ ಹಾಗೂ ಅಪಾಯಗಳ ಪ್ರಮಾಣವನ್ನು ತಗ್ಗಿಸಲಿದೆ. ಈ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು 75 ಹೊಸದಾಗಿ ಅಭಿವೃದ್ಧಿಪಡಿಸಿದ ಎಐ ತಂತ್ರಜ್ಞಾನಗಳನ್ನು ಕಳೆದ ಜುಲೈನಲ್ಲಿ ಎಐ ಇನ್ ಡಿಫೆನ್ಸ್ ವಿಚಾರ ಸಂಕಿರಣದಲ್ಲಿ ಮೊದಲ ಬಾರಿಗೆ ಮಾಹಿತಿ ನೀಡಿದ್ದರು. ಈ ವೇಳೆ ಅಲ್ಲಿ ರೋಬೋಟಿಕ್ಸ್, ಕಣ್ಗಾವಲು ಕ್ಯಾಮೆರಾಗಳನ್ನು ಪ್ರದರ್ಶಿಸಲಾಗಿತ್ತು.

ಈ ವರ್ಷದ ಆರಂಭದಲ್ಲಿ ನಡೆದ ಏಷ್ಯಾದ ಅತಿದೊಡ್ಡ ಏರ್ ಶೋಗಳಲ್ಲಿ ಒಂದಾದ ಏರೋ ಇಂಡಿಯಾದಲ್ಲಿ ಎಐ ಆಧಾರಿತ ಕಣ್ಗಾವಲು ಸಾಫ್ಟ್‍ವೇರ್ ರಕ್ಷಣಾ ಕ್ಷೇತ್ರದಲ್ಲಿ ಬಳಸುವ ವಿಧಾನವನ್ನು ಪರಿಚಯಿಸಲಾಗಿತ್ತು. ಈ ಬಗ್ಗೆ ಸೇನೆಗೆ ತರಬೇತಿ ಸಹ ನೀಡಲಾಗಿದೆ. ಹೆಚ್ಚಿನ ತರಬೇತಿಗಾಗಿ ಅಮೆರಿಕದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಲಾಗಿದೆ.

ಈಗಾಗಲೇ ಸಾಫ್ಟ್‍ವೇರ್ ಆಧಾರಿತ ಕ್ಯಾಮೆರಾಗಳನ್ನು ಪೂರ್ವ ಲಡಾಖ್ ಸೆಕ್ಟರ್‍ನಲ್ಲಿರಿಸಲಾಗಿದೆ. ಇದು ಚೀನಾಕ್ಕೆ ನಿಕಟವಾಗಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದರೊಂದಿಗೆ ಅಪಾಯದ ಸ್ಥಳಗಳಾದ ಕಾಶ್ಮೀರದಿಂದ ಸಿಕ್ಕಿಂವರೆಗೆ ಭಾರತದ ಸೂಕ್ಷ್ಮ ಗಡಿಗಳಲ್ಲಿ ಎಐ ತಂತ್ರಜ್ಞಾನ ವರದಾನವಾಗಿದೆ. ಈ ಸಾಫ್ಟ್‍ವೇರ್ ಯಾವುದೇ ಚಲನೆ, ಶಸ್ತ್ರಾಸ್ತ್ರಗಳು, ವಾಹನಗಳು, ಟ್ಯಾಂಕರ್ಗಳು ಅಥವಾ ಕ್ಷಿಪಣಿಗಳನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದು ಲೈವ್ ಮತ್ತು ರೆಕಾರ್ಡ್ ಮಾಡುತ್ತದೆ. ಅಲ್ಲದೇ ಅದರ ಸಂಪೂರ್ಣ ಮಾಹಿತಿಯನ್ನು ಸೇನೆಗೆ ರವಾನಿಸುತ್ತದೆ.

ಭಾರತೀಯ ಸೇನೆಯು ಪ್ರತಿ ವರ್ಷ ಎಐ ತಂತ್ರಜ್ಞಾನಕ್ಕಾಗಿ ಸರಿಸುಮಾರು 400 ಕೋಟಿ ರೂ.ಗಳನ್ನು ವಿನಿಯೋಗಿಸಲಿದೆ. ಈ ವಿಚಾರದಲ್ಲಿ ಅಮೆರಿಕ ಹಾಗೂ ಚೀನಾ ಮುಂದಿದ್ದರೂ ಅವುಗಳಿಗೆ ಸರಿಯಾಗಿ ನಿಲ್ಲಲು ಭಾರತ ಸಮರ್ಥವಾಗಿದೆ.

ಇಸ್ರೇಲ್‍ನಲ್ಲಿ ಪ್ಯಾಲೆಸ್ತೇನಿಯನ್ ಮಿಲಿಟರಿಗೆ ಸಂಬಂಸಿದ ವ್ಯಕ್ತಿಗಳನ್ನು ಕಂಡು ಹಿಡಿಯಲು ಮತ್ತು ಅವರ ಮೇಲೆ ನಿಗಾ ಇಡಲು ಎಐ ಬಳಕೆ ಮಾಡಲಾಗುತ್ತಿದೆ. ಈ ತಂತ್ರಜ್ಞಾನವು ಸೇನಾ ಸಿಬ್ಬಂದಿಯ ಹಾಗೂ ಅವರೊಂದಿಗೆ ಸಂಪರ್ಕದಲ್ಲಿರುವವರ ಮೊಬೈಲ್‍ಗಳನ್ನು ಅನ್‍ಲಾಕ್ ಮಾಡುವ ಮೂಲಕ ಅವರ ಮಾಹಿತಿ ಕಲೆಹಾಕುತ್ತದೆ. ಅವರ ಮೇಲೆ ಈ ಮೂಲಕ ನಿಗಾ ವಹಿಸುತ್ತದೆ.

ಟಿಎಂಸಿ ಸಂಸದೆ ಮಹುವಾ ಮೊಯಿತ್ರ ಸದಸ್ಯತ್ವ ಅನರ್ಹಗೊಳ್ಳುವ ಸಾಧ್ಯತೆ

ನವದೆಹಲಿ,ನ.6- ಲೋಕಸಭೆಯಲ್ಲಿ ಪ್ರಶ್ನೆ ಕೇಳಲು ಉದ್ಯಮಿಯಿಂದ ನಗದು ಮತ್ತು ಬೆಲೆ ಬಾಳುವ ಉಡುಗೊರೆ ಪಡೆದ ಆರೋಪಕ್ಕೆ ಸಿಲುಕಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರ ಅವರ ಸದಸ್ಯತ್ವ ಅನರ್ಹಗೊಳ್ಳುವ ಸಾಧ್ಯತೆ ಇದೆ.

ಪ್ರಸಕ್ತ ಲೋಕಸಭೆ ಅವ ಮುಗಿಯುವವರೆಗೂ ಮೊಯಿತ್ರ ಅವರ ಸದಸ್ಯತ್ವವನ್ನು ಅನರ್ಹಗೊಳಿಸಲು ಲೋಕಸಭೆಯ ನೈತಿಕ ಸಮಿತಿ ನಿರ್ಧರಿಸಿದೆ. ಈ ಸಂಬಂಧ ನಾಳೆ ನೈತಿಕ ಸಮಿತಿ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ವಿನೋದ್‍ಕುಮಾರ್ ಸೋಂಕ್ ನೇತೃತ್ವದ ಲೋಕಸಭೆಯ ನೈತಿಕ ಸಮಿತಿಯು ನಾಳೆ ಸಭೆ ಸೇರಲಿದ್ದು, ತೃಣಮೂಲ ಸಂಸದ ಮಹುವಾ ಮೊಯಿತ್ರಾ ವಿರುದ್ಧದ ಆರೋಪಗಳ ವಿಚಾರಣೆಗಾಗಿ ನಗದು ಕರಡು ವರದಿಯನ್ನು ಪರಿಗಣಿಸಲು ತೀರ್ಮಾನಿಸಿದೆ.

16 ಮಿಲಿಯನ್ ಟನ್ ಸರಕು ಸಾಗಿಸಿದ ಅದಾನಿ ಒಡೆತನದ ಮುಂದ್ರಾ ಬಂದರು

ಪ್ರಸ್ತುತ ಲೋಕಸಭೆಯ ಉಳಿದ ಅವಗೆ ಅನರ್ಹತೆ ಸೇರಿದಂತೆ ಮೊಯಿತ್ರಾ ವಿರುದ್ಧ ಕಠಿಣ ಕ್ರಮಕ್ಕೆ ಸಮಿತಿಯು ಶಿಫಾರಸು ಮಾಡಬಹುದು ಎಂದು ಮೂಲಗಳು ತಿಳಿಸಿವೆ. ಸಮಿತಿಯಲ್ಲಿ ಬಿಜೆಪಿಗೆ ಬಹುಮತ ಇರುವುದರಿಂದ ಮೊಯಿತ್ರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ವರದಿಯಲ್ಲಿ ಶಿಫಾರಸ್ಸು ಮಾಡಲಿದೆ ಎಂದು ಉನ್ನತ ಮೂಲಗಳು ಖಚಿತಪಡಿಸಿವೆ.

ಲೋಕಸಭೆಯಲ್ಲಿ ಪ್ರಶ್ನೆ ಕೇಳಲು ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ನಗದು, ಬೆಲೆ ಬಾಳುವ ಉಡುಗೊರೆ ಹಾಗೂ ವಿದೇಶಿ ಪ್ರವಾಸ ಕೈಗೊಂಡಿರುವುದಕ್ಕೆ ಸೂಕ್ತವಾದ ಸಾಕ್ಷ್ಯಾಧಾರಗಳು ಲಭ್ಯವಾಗಿವೆ. ಈ ಹಿನ್ನಲೆಯಲ್ಲಿ ಮೊಯಿತ್ರ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸುವ ಸಾಧ್ಯತೆಗಳೇ ಹೆಚ್ಚಾಗಿವೆ. ಈ ಹಿಂದೆ 2005ರಲ್ಲಿ ಪ್ರಶ್ನೆ ಕೇಳಲು ಹಣ ಪಡೆದಿದ್ದ 11 ಸಂಸದರ ಸದಸ್ಯತ್ವವನ್ನು ಅನರ್ಹಗೊಳಿಸಲಾಗಿತ್ತು. 2007ರಲ್ಲಿ ಸುಪ್ರೀಂಕೋರ್ಟ್ ಅನರ್ಹತೆಯನ್ನು ಎತ್ತಿ ಹಿಡಿದಿತ್ತು.

ಇದನ್ನೇ ಆಧಾರವಾಗಿಟ್ಟುಕೊಂಡಿರುವ ನೈತಿಕ ಸಮಿತಿಯು ಪಶ್ಚಿಮ ಬಂಗಾಳದ ಕೃಷ್ಣಾನಗರದ ಟಿಎಂಸಿ ಸಂಸದರಾಗಿರುವ ಮೊಯಿತ್ರ ಅವರನ್ನು ಅನರ್ಹಗೊಳಿಸಲು ಮುಂದಾಗಿದೆ. ಈ ಹಿಂದೆ ನೈತಿಕ ಸಮಿತಿಯ ಮುಂದೆ ವಿಚಾರಣೆಗೆ ಹಾಜರಾಗಿದ್ದ ಮೊಯಿತ್ರ ತಮಗೆ ಅಧ್ಯಕ್ಷರು ಅತ್ಯಂತ ಕೊಳಕು ಮತ್ತು ಅಸಂಬದ್ಧ ಪ್ರಶ್ನೆಗಳನ್ನು ಕೇಳಿದ್ದರೆಂದು ರಂಪಾಟ ಎಬ್ಬಿಸಿದ್ದರು.

ಟಿಡಿಪಿ ಬದಲು ಬಿಜೆಪಿಗೆ ಪವನ್ ಕಲ್ಯಾಣ್ ಬೆಂಬಲ

ಮೊಯಿತ್ರ ಉದ್ಯಮಿ ದರ್ಶನ್ ಹಿರಾನಂದಿನಿಯಿಂದ ನಗದು ಮತ್ತು ಬೆಲೆ ಬಾಳುವ ಉಡುಗೊರೆಗಳನ್ನು ಪಡೆದಿದ್ದಾರೆ ಎಂದು ಬಿಜೆಪಿ ಶಾಸಕ ಅಶ್ವಿನ್ ದುಬೆ ಆರೋಪಿಸಿ ತನಿಖೆ ನಡೆಸಬೇಕೆಂದು ದಾಖಲೆಗಳ ಸಮೇತ ಲೋಕಸಭೆಯ ನೈತಿಕ ಸಮಿತಿಗೆ ದೂರು ಸಲ್ಲಿಸಿದ್ದರು.

ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದಲ್ಲಿ ಕಾರು ಚಾಲಕ ವಶಕ್ಕೆ

ಬೆಂಗಳೂರು, ನ.6-ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಅವರ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾರು ಚಾಲಕನನ್ನು ಸುಬ್ರಮಣ್ಯಪುರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಐದು ವರ್ಷಗಳಿಂದ ಪ್ರತಿಮಾ ಅವರ ಕಾರು ಚಾಲಕನಾಗಿದ್ದ ಕಿರಣ್‍ನನ್ನು ಚಾಮರಾಜನಗರ ಜಿಲ್ಲೆಯಲ್ಲಿ ವಶಕ್ಕೆ ಪಡೆದು ನಗರಕ್ಕೆ ಕರೆ ತಂದಿದ್ದಾರೆ. ಗುತ್ತಿಗೆ ಆಧಾರದಲ್ಲಿ ಕಳೆದ ಐದು ವರ್ಷಗಳಿಂದ ಕಿರಣ್ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದನು. ಇವರ ತಂದೆ ಸುರೇಶ್ ಸಹ ಇದೇ ಇಲಾಖೆಯಲ್ಲಿ ಕಾರು ಚಾಲಕರಾಗಿದ್ದಾರೆ.

ಕೆಲ ವಿಚಾರದಲ್ಲಿ ಪ್ರತಿಮಾ ಹಾಗೂ ಕಿರಣ್ ನಡುವೆ ಭಿನ್ನಾಭಿಪ್ರಾಯ ಇದ್ದುದರಿಂದ ಹತ್ತು ದಿನಗಳ ಹಿಂದೆಯಷ್ಟೇ ಕಿರಣ್‍ನನ್ನು ಕೆಲಸದಿಂದ ತೆಗೆದು ಹಾಕಿ ಬೇರೆ ಚಾಲಕ ಚೇತನ್‍ನನ್ನು ನಿಯೋಜಿಸಿಕೊಂಡಿದ್ದರು. ಇದೇ ಕಾರಣಕ್ಕೆ ಕಿರಣ್ ಮಹಿಳಾ ಅಧಿಕಾರಿ ಪ್ರತಿಮಾ ಅವರ ಮೇಲೆ ದ್ವೇಷ ಸಾಧಿಸಿ ಈತನೇ ಅವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಳಿಸಿ ಆತನ ಹುಡುಕಾಟ ನಡೆಸುತ್ತಿದ್ದಾಗ ಕಿರಣ್ ಮೊಬೈಲ್ ಸ್ವಿಚ್‍ಆಫ್ ಮಾಡಿಕೊಂಡು ಚಾಮರಾಜನಗರ ಜಿಲ್ಲೆಯಲ್ಲಿ ತಲೆಮರೆಸಿಕೊಂಡಿರುವ ಮಾಹಿತಿಯನ್ನು ಪೊಲೀಸರು ಕಲೆ ಹಾಕಿದ್ದರು.ಖಚಿತ ಮಾಹಿತಿ ಮೇರೆಗೆ ಪೊಲೀಸರು ಚಾಮರಾಜನಗರ ಜಿಲ್ಲೆಗೆ ತೆರಳಿ ಕಿರಣ್‍ನನ್ನು ವಶಕ್ಕೆ ಪಡೆದು ನಗರಕ್ಕೆ ಕರೆ ತಂದು ತೀವ್ರ ವಿಚಾರಣೆಗೊಳಪಡಿಸಿ ಹಲವು ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ.

ಯಾತ್ರಾರ್ಥಿಗಳಿಗೆ ಚಹಾ ವಿತರಿಸಿ ಗಮನ ಸೆಳೆದ ರಾಹುಲ್ ಗಾಂಧಿ

ಹಿನ್ನೆಲೆ: ಮೊನ್ನೆ ಸಂಜೆ ಪ್ರತಿಮಾ ಅವರು ಕೆಲಸ ಮುಗಿಸಿಕೊಂಡು ಇಲಾಖೆ ಕಾರಿನಲ್ಲಿ ದೊಡ್ಡಕಲ್ಲಸಂದ್ರದ ಗೋಕುಲ ಅಪಾರ್ಟ್‍ಮೆಂಟ್ ಪಕ್ಕದ ತಮ್ಮ ಮನೆಗೆ ಡ್ರಾಪ್ ಪಡೆದ ಕೆಲವೇ ನಿಮಿಷದಲ್ಲಿ ಅವರ ಕೊಲೆ ನಡೆದು ಹೋಗಿತ್ತು.

ಪ್ರತಿಮಾ ಅವರ ಕುತ್ತಿಗೆಗೆ ಹಗ್ಗದಿಂದ ಬಿಗಿದು ಬಳಿಕ ಚಾಕುವಿನಿಂದ ಕತ್ತು ಇರಿದು ಭೀಕರವಾಗಿ ಕೊಲೆ ಮಾಡಲಾಗಿತ್ತು. ಪ್ರತಿಮಾ ಅವರ ಅಣ್ಣ, ಬಿಬಿಎಂಪಿ ಗುತ್ತಿಗೆದಾರರಾಗಿರುವ ಪ್ರತೀಶ್ ಅವರು ಸಹೋದರಿಯ ಮೊಬೈಲ್‍ಗೆ ಮೊನ್ನೆ ರಾತ್ರಿ ಕರೆ ಮಾಡಿದಾಗ ಸ್ವೀಕರಿಸಿಲ್ಲ. ಎರಡು-ಮೂರು ಬಾರಿ ಕರೆ ಮಾಡಿದರೂ ಸ್ವೀಕರಿಸದಿದ್ದಾಗ ಬೆಳಗ್ಗೆ ಹೋಗಿ ವಿಚಾರಿಸೋಣ ಎಂದು ಸುಮ್ಮನಾಗಿದ್ದಾರೆ.

ನಿನ್ನೆ ಬೆಳಗ್ಗೆ ಸಹೋದರಿ ಪ್ರತಿಮಾ ಅವರ ಮನೆಗೆ ಅಣ್ಣ ಪ್ರತೀಶ್ ಬಂದು ನೋಡಿದಾಗಲೇ ಸಹೋದರಿ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ತನಿಖೆಗಾಗಿ ರಚಿಸಲಾಗಿದ್ದ ಮೂರು ತಂಡಗಳು ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಿದ್ದಾರೆ. ವೈಯಕ್ತಿಕ ಜೀವನ, ವೃತ್ತಿ ಜೀವನ, ಹಣಕಾಸು ಈ ಮೂರು ಆಯಾಮಗಳಲ್ಲಿ ತನಿಖೆ ಕೈಗೊಂಡಿರುವ ಪೊಲೀಸರು ಹೆಚ್ಚಿನ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ.

ಪ್ಲಾಟ್‍ಫಾರ್ಮ್ ಮೇಲೆ ಬಸ್ ಉರುಳಿ ಇಬ್ಬರ ಸಾವು

ವಿಜಯವಾಡ, ನ.6 (ಪಿಟಿಐ) ಇಲ್ಲಿನ ಬಸ್ ಟರ್ಮಿನಲ್‍ನಲ್ಲಿ ಎಪಿಎಸ್‌ಆರ್‌ಟಿಸಿ ಬಸ್ ಪ್ಲಾಟ್‍ಫಾರ್ಮ್ ಮೇಲೆ ಉರುಳಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ 8.20ಕ್ಕೆ ಪಂಡಿತ್ ನೆಹರೂ ಬಸ್ ನಿಲ್ದಾಣದ ಪ್ಲಾಟ್‍ಫಾರ್ಮ್ ಸಂಖ್ಯೆ 12ಕ್ಕೆ ಬಸ್ ಡಿಕ್ಕಿ ಹೊಡೆಯಿತು ಈ ಸಂದರ್ಭದಲ್ಲಿ ನಿಲ್ದಾಣದಲ್ಲಿ ಅಪಾರ ಸಂಖ್ಯೆಯ ಪ್ರಯಾಣಿಕರು ಜಮಾಯಿಸಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಾಹನವನ್ನು ಹಿಮ್ಮೆಟ್ಟಿಸುವ ಬದಲು, ಚಾಲಕನು ಮುಂದಕ್ಕೆ ಚಲಿಸಿದನು ಮತ್ತು ಪ್ಲಾಟ್‍ಫಾರ್ಮ್ ಅನ್ನು ಅತಿಕ್ರಮಿಸಿದನು ಎಂದು ಪ್ರಾದೇಶಿಕ ವ್ಯವಸ್ಥಾಪಕ ಎಂ ಯೇಸು ದಾನಮ್ ಪಿಟಿಐಗೆ ತಿಳಿಸಿದರು.

ಪಡಿತರ ಯೋಜನೆ ವಿಸ್ತರಣೆಗೆ ಸಿಬಲ್ ಲೇವಡಿ

ವಿಜಯವಾಡ ಬಸ್ ನಿಲ್ದಾಣವು ತೆಲುಗು ರಾಜ್ಯಗಳಾದ ಆಂಧ್ರಪ್ರದೇಶ ಮತ್ತು ತೆಲಂಗಾಣ ಎರಡಕ್ಕೂ ಪ್ರಮುಖ ಸಂಪರ್ಕ ಕೇಂದ್ರವಾಗಿದೆ ಮತ್ತು ವಿಜಯವಾಡ – ಗುಂಟೂರು ಸೇವೆಯು ಪ್ರಮುಖವಾದವುಗಳಲ್ಲಿ ಒಂದಾಗಿದೆ.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

CIC ಮುಖ್ಯಸ್ಥರಾಗಿ ನೇಮಕಗೊಂಡ ದೇಶದ ಮೊದಲ ದಲಿತ ಅಧಿಕಾರಿ

ನವದೆಹಲಿ,ನ.6- ಹಿರಿಯ ಅಧಿಕಾರಿ ಹೀರಾಲಾಲ್ ಸಮರಿಯಾ ಅವರು ಇಂದು ಕೇಂದ್ರ ಮಾಹಿತಿ ಆಯೋಗದ (ಸಿಐಸಿ) ಮುಖ್ಯಸ್ಥರಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು. ಅವರು ಕೇಂದ್ರ ಮಾಹಿತಿ ಆಯೋಗದ ಹುದ್ದೆಯನ್ನು ಅಲಂಕರಿಸಿದ ಮೊದಲ ದಲಿತ ವ್ಯಕ್ತಿಯಾಗಿದ್ದಾರೆ ಎನ್ನುವುದು ಇಲ್ಲಿ ಉಲ್ಲೇಖಾರ್ಹ.

ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಸಿನ್ಹಾ ಅವರ ಅವಧಿ ಮುಗಿದ ನಂತರ ಪಾರದರ್ಶಕತೆಯ ಸಮಿತಿಯ ಉನ್ನತ ಹುದ್ದೆ ಖಾಲಿಯಾಗಿ ಉಳಿದಿತ್ತು. ಸಮರಿಯಾ ಅವರು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಸಾರ್ವಜನಿಕ ಸೇವೆಯಲ್ಲಿ ವಿಶಿಷ್ಟವಾದ ವೃತ್ತಿಜೀವನವನ್ನು ಹೊಂದಿದ್ದಾರೆ. ಆಯೋಗವು ಮುಖ್ಯ ಮಾಹಿತಿ ಆಯುಕ್ತರ ನೇತೃತ್ವದಲ್ಲಿದೆ ಮತ್ತು 10 ಮಾಹಿತಿ ಆಯುಕ್ತರನ್ನು ಹೊಂದಬಹುದಾಗಿದೆ.

2005ರ ಮಾಹಿತಿ ಹಕ್ಕು ಕಾಯಿದೆ ಇಲ್ಲದಿದ್ದರೆ ನಿಷ್ಪರಿಣಾಮಕಾರಿಯಾಗಲಿದೆ ಎಂದು ಎಚ್ಚರಿಸಿ, ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಅಕ್ಟೋಬರ್ 30ರಂದು ನೀಡಿದ ನಿರ್ದೇಶನದ ನಂತರ ಈ ನೇಮಕಾತಿ ನಡೆದಿದೆ.

ಪಡಿತರ ಯೋಜನೆ ವಿಸ್ತರಣೆಗೆ ಸಿಬಲ್ ಲೇವಡಿ

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ (ಡಿಒಪಿಟಿ) ಎಲ್ಲಾ ರಾಜ್ಯಗಳಿಂದ ರಾಜ್ಯ ಮಾಹಿತಿ ಆಯೋಗಗಳಲ್ಲಿ ಅಧಿಕೃತ ಮಾಹಿತಿ ಆಯುಕ್ತರ ಸಂಖ್ಯೆ (ಎಸ್‍ಐಸಿ), ಪ್ರಸ್ತುತ ಖಾಲಿ ಹುದ್ದೆಗಳು ಮತ್ತು ಬಾಕಿ ಇರುವ ಒಟ್ಟು ಸಂಖ್ಯೆಯ ಮಾಹಿತಿಯನ್ನು ಸಂಗ್ರಹಿಸಲು ನಿರ್ದೇಶಿಸಿದೆ. 2005ರ ಮಾಹಿತಿ ಹಕ್ಕು ಕಾಯಿದೆಯು ಡೆಡ್ ಲೆಟರ್ ಆಗಲಿದೆ ಎಂದು ಸಿಜೆಐ ಎಚ್ಚರಿಸಿದ್ದಾರೆ.

ಡಿಸೆಂಬರ್ 2019 ರಲ್ಲಿ, ಮಾಹಿತಿ ಹಕ್ಕು ಕಾಯ್ದೆಯ ದುರುಪಯೋಗವನ್ನು ತಡೆಯಲು ಮಾರ್ಗಸೂಚಿಗಳನ್ನು ಅಭಿವೃದ್ಧಿಪಡಿಸುವ ಅಗತ್ಯವನ್ನು ಉಲ್ಲೇಖಿಸಿ, ಸಿಐಸಿ ಮತ್ತು ಎಸ್‍ಐಸಿಗಳಲ್ಲಿನ ಎಲ್ಲಾ ಮಾಹಿತಿ ಆಯುಕ್ತರ ಖಾಲಿ ಹುದ್ದೆಗಳನ್ನು ಮೂರು ತಿಂಗಳೊಳಗೆ ಭರ್ತಿ ಮಾಡುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿತು.

“ಮದ್ಯ ನೀಡದಿದ್ದರೆ ವಿಮಾನ ಸ್ಪೋಟಿಸುತ್ತೇನೆ” : ವಿಮಾನದಲ್ಲಿ ರಷ್ಯಾ ಹಾಕಿ ಆಟಗಾರನ ಕಿರಿಕ್

ನವದೆಹಲಿ,ನ.6- ಮದ್ಯ ಸೇವಿಸಲು ಅವಕಾಶ ನೀಡದಿದ್ದರೆ ವಿಮಾನ ಸ್ಪೋಟಿಸುವುದಾಗಿ ರಷ್ಯಾ ಹಾಕಿ ಆಟಗಾರ ಬೆದರಿಕೆ ಹಾಕಿದ್ದಾನೆ ಎಂದು ನ್ಯೂಸ್ ವೀಕ್ ವರದಿ ಮಾಡಿದೆ. ಯೆಕಟೆರಿನ್‍ಬರ್ಗ್‍ನಲ್ಲಿರುವ ರಷ್ಯಾದ ಹಾಕಿ ಲೀಗ್ ತಂಡದ ಮೊನೆಟ್ಕಾದಿಂದ ಆಂಡ್ರೇ ಸಿಡಿಯಾಕಿನ್ ಅವರು ವಿಮಾನದಲ್ಲಿ ವೋಡ್ಕಾಗೆ ಬೇಡಿಕೆಯಿಟ್ಟರು, ಆದಾಗ್ಯೂ, ಸಿಬ್ಬಂದಿ ಅವರಿಗೆ ಆದ್ಯತೆಯ ಪಾನೀಯವನ್ನು ನೀಡಲು ನಿರಾಕರಿಸಿದ ನಂತರ ಅವರು ಈ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಆತ ಮದ್ಯಕ್ಕಾಗಿ ಬೇಡಿಕೆಯನ್ನು ಮುಂದುವರೆಸಿದರು ಕ್ರ್ಯೂ ಸಿಬ್ಬಂದಿ ಮದ್ಯ ನೀಡಲು ನಿರಾರಕರಿಸಿದಾಗ ನನ್ನ ಬಳಿ ಸ್ಪೋಟಕ ಸಾಧನವಿದೆ ಮದ್ಯ ನೀಡದಿದ್ದರೆ ವಿಮಾನ ಉಡಾಯಿಸುವುದಾಗಿ ಬೆದರಿಕೆ ಹಾಕಿದ ಎನ್ನಲಾಗಿದೆ. ತಕ್ಷಣ ಸಿಬ್ಬಂದಿಗಳು ವಿಮಾನದ ಉಳಿದ ಭಾಗಗಳಲ್ಲಿ ಬಾಂಬ್ ಅಥವಾ ಶಸ್ತ್ರಾಸ್ತ್ರಗಳನ್ನು ಹುಡುಕಲು ಮುಂದಾದರೂ ಯಾವುದೇ ಪ್ರಯೋಜನವಾಗಲಿಲ್ಲ ಎಂದು ವರದಿಯಾಗಿದೆ.

ಪಡಿತರ ಯೋಜನೆ ವಿಸ್ತರಣೆಗೆ ಸಿಬಲ್ ಲೇವಡಿ

ಇದಲ್ಲದೆ, ಮಾಸ್ಕೋಗೆ ಆಗಮಿಸಿದ ನಂತರ ಶೆರೆಮೆಟಿವೊ ವಿಮಾನ ನಿಲ್ದಾಣದಿಂದ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿಯಿಂದ ವಿಮಾನವನ್ನು ಪರೀಕ್ಷಿಸಲಾಯಿತು ಆದರೂ ಸಿಡಿಯಾಕಿನ್ ಅವರನ್ನು ಬಂಧಿಸಲಾಗಿಲ್ಲ ಮತ್ತು ಅವರು ಪ್ರಯಾಣ ಮುಂದುವರೆಸಲು ಅವಕಾಶ ನಿರಾಕರಿಸಲಾಯಿತು ಎಂದು ತಿಳಿದುಬಂದಿದೆ.

ಜರ್ಮನ್ ವಿದೇಶಾಂಗ ಸಚಿವೆಯನ್ನು ಚುಂಬಿಸಲೆತ್ನಿಸಿದ ಕ್ರೋವೆಷಿಯನ್ ಸಚಿವ

ನವದೆಹಲಿ, ನ.6- ಕ್ರೋವೆಷಿಯಾ ವಿದೇಶಾಂಗ ಸಚಿವ ಗೋರ್ಡನ್ ಗ್ರ್ಲೀಕ್ ರಾಡ್‍ಮನ್ ಅವರು ಜರ್ಮನ್ ವಿದೇಶಾಂಗ ಸಚಿವೆ ಅನ್ನಾಲೆನಾ ಬೇರ್‍ಬಾಕ್ ಅವರಿಗೆ ಚುಂಬಿಸಲು ಮುಂದಾದ ಘಟನೆ ಯುರೋಪಿಯನ್ ಯೂನಿಯನ್ ಸಭೆಯಲ್ಲಿ ನಡೆದಿದೆ.ನಂತರ ತನ್ನ ತಪ್ಪಿನ ಅರಿವಿನಿಂದಾಗಿ ರಾಡ್‍ಮನ್ ಅವರು ಕ್ಷಮೆ ಯಾಚಿಸಿದ್ದಾರೆ ಎಂದು ವರದಿಯಾಗಿದೆ.


ನವೆಂಬರ್ 2 ರಂದು ಬರ್ಲಿನ್‍ನಲ್ಲಿ ನಡೆದ ಇತರ ದೇಶಗಳ ವಿದೇಶಾಂಗ ಮಂತ್ರಿಗಳ ಸಭೆಯ ಸಂದರ್ಭದಲ್ಲಿ ಸೌಹಾರ್ದ ಸ್ವಾಗತದ ನೆಪದಲ್ಲಿ ಅವರು ಜರ್ಮನ್ ಸಚಿವೆಯನ್ನು ಚುಂಬಿಸಲು ಮುಂದಾಗಿದ್ದರು ಎಂದು ತಿಳಿದುಬಂದಿದೆ.ರಾಡ್‍ಮನ್ ಇದು ಅನುಕೂಲಕರ ಕ್ಷಣ ಎಂದು ಹೇಳಿದರು. ನಾವು ಮಂತ್ರಿಗಳು ಯಾವಾಗಲೂ ಒಬ್ಬರನ್ನೊಬ್ಬರು ಆತ್ಮೀಯವಾಗಿ ಅಭಿನಂದಿಸುತ್ತೇವೆ. ಅದರಲ್ಲಿ ಯಾರಾದರೂ ಕೆಟ್ಟದ್ದನ್ನು ಕಂಡಿದ್ದರೆ, ಅದನ್ನು ಆ ರೀತಿ ತೆಗೆದುಕೊಂಡವರಿಗೆ ಕ್ಷಮೆಯಾಚಿಸುತ್ತೇವೆ ಎಂದು ತಿಳಿಸಿದ್ದಾರೆ.

ವಿಮಾನ ತಡವಾಗಿತ್ತು, ಆದ್ದರಿಂದ ನಾವು ಜಂಟಿ ಫೋಟೋದಲ್ಲಿ ಮಾತ್ರ ಒಬ್ಬರನ್ನೊಬ್ಬರು ನೋಡಿದ್ದೇವೆ. ನನಗೆ ಗೊತ್ತಿಲ್ಲ. ಯಾರೋ ಅದನ್ನು ಹೇಗೆ ತೆಗೆದುಕೊಂಡರು. ನಾವು ಒಬ್ಬರಿಗೊಬ್ಬರು ಒಟ್ಟಿಗೆ ಕುಳಿತಿದ್ದೇವೆ, ನಾವು ನೆರೆಹೊರೆಯವರಾಗಿದ್ದೇವೆ. ಇದು ತುಂಬಾ ಒಳ್ಳೆಯ ಸಮ್ಮೇಳನವಾಗಿತ್ತು ಬಹುಶಃ ಇದು ವಿಚಿತ್ರವಾಗಿ ಹೊರಹೊಮ್ಮಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಅಂತರ್ಜಾಲದಲ್ಲಿ ಹರಿದಾಡುತ್ತಿರುವ ವೀಡಿಯೊಗಳ ಪ್ರಕಾರ, ವಿವಿಧ ದೇಶಗಳ ವಿದೇಶಾಂಗ ಮಂತ್ರಿಗಳು ಗುಂಪು ಚಿತ್ರಕ್ಕಾಗಿ ಮಾಧ್ಯಮಗಳ ಮುಂದೆ ಜಮಾಯಿಸುತ್ತಿರುವುದು ಕಂಡುಬರುತ್ತದೆ. ಕ್ರೊಯೇಷಿಯಾದ ವಿದೇಶಾಂಗ ಸಚಿವರು ಬೇರ್‍ಬಾಕ್ ಅವರೊಂದಿಗೆ ಕೈಕುಲುಕಿದ ನಂತರ ಚುಂಬನಕ್ಕಾಗಿ ಮುಂದಕ್ಕೆ ವಾಲುವುದು ಕಂಡುಬಂದಿದೆ.

ಪಡಿತರ ಯೋಜನೆ ವಿಸ್ತರಣೆಗೆ ಸಿಬಲ್ ಲೇವಡಿ

ವಿಶ್ವಕಪ್ ವಿಜೇತ ಜೆನ್ನಿ ಹೆರ್ಮೊಸೊ ಅವರ ತುಟಿಗಳಿಗೆ ಬಲವಂತವಾಗಿ ಚುಂಬಿಸಿದ ನಂತರ ಸ್ಪ್ಯಾನಿಷ್ ಮಾಜಿ ಫುಟ್‍ಬಾಲ್ ಮುಖ್ಯಸ್ಥ ಲೂಯಿಸ್ ರುಬಿಯಾಲ್ಸ್‍ಗೆ ಮೂರು ವರ್ಷಗಳ ನಿಷೇಧವನ್ನು ವಿಧಿಸಿರುವುದಾಗಿ ಫಿಫಾ ಕಳೆದ ತಿಂಗಳು ಘೋಷಿಸಿದ ನಂತರ ಈ ಬೆಳವಣಿಗೆಯಾಗಿದೆ.