Home Blog Page 1843

ಅಂಗಾಂಗ ದಾನ ಮಾಡುವವರಿಗೆ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ

ಬೆಂಗಳೂರು,ನ.3- ಪ್ರತಿಫಲಾಪೇಕ್ಷೆ ಇಲ್ಲದೆ ಅಂಗಾಂಗ ದಾನ ಮಾಡುವ ವ್ಯಕ್ತಿಗಳ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ ನೀಡುವ ಕುರಿತಂತೆ ನೀತಿ ರೂಪಿಸಲು ಪರಿಶೀಲಿಸುತ್ತಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಸಚಿವರು, ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮಾನವೀಯ ನೆಲೆಯಲ್ಲಿ ಅಂಗಾಂಗ ದಾನ ಮಾಡಿ ಇನ್ನೊಬ್ಬರ ಜೀವ ಉಳಿಸಲು ನೆರವಾಗುವ ವ್ಯಕ್ತಿಗಳು ಮತ್ತು ಕುಟುಂಬದವರನ್ನು ಗುರುತಿಸಿ ಗೌರವಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ.

ಬಂಡೆಗೆ ಉಂಡೆ ನಾಮ ಗ್ಯಾರಂಟಿ : ಯತ್ನಾಳ್ ವ್ಯಂಗ್ಯ

ಅಂಗಾಂಗ ದಾನ ಮಾಡುವ ವ್ಯಕ್ತಿ ಅಥವಾ ಕುಟುಂಬಗಳಿಗೆ ಪ್ರಮಾಣಪತ್ರಗಳನ್ನು ನೀಡಿ ಗೌರವಿಸುವ ಹಾಗು ತಮಿಳುನಾಡು ಮಾದರಿಯಲ್ಲಿ ಅಂಗಾಂಗ ದಾನಿಗಳ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವಗಳೊಂದಿಗೆ ನಡೆಸುವ ಬಗ್ಗೆಯೂ ಸರ್ಕಾರ ಪರಿಶೀಲಿಸುತ್ತಿದೆ ಎಂದು ಹೇಳಿದ್ದಾರೆ.

ಈ ಮೂಲಕ ಸರ್ಕಾರ ಅಂಗಾಂಗ ದಾನದ ಮಹತ್ವವನ್ನು ಸಾರಲು ಮತ್ತು ಮತ್ತಷ್ಟು ಜನರಿಗೆ ಅಂಗಾಂಗ ದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಲು ಶೀಘ್ರದಲ್ಲೇ ನೀತಿಯೊಂದನ್ನು ರೂಪಿಸಲಿದೆ ಎಂದಿದ್ದಾರೆ. ಅಂಗಾಂಗಗಳ ವೈಫಲ್ಯದಿಂದ ಪ್ರತಿನಿತ್ಯ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸಾವು ಅನಿವಾರ್ಯವಾದಾಗ ಸಕ್ರಿಯ ಹಾಗು ಉತ್ತವ ಸ್ಥಿತಿಯಲ್ಲಿರುವ ಅಂಗಾಂಗ ದಾನದಿಂದ ಬಹಳಷ್ಟು ಜೀವಗಳ ರಕ್ಷಣೆ ಸಾಧ್ಯವಾಗುತ್ತದೆ.

ಹೀನಾಯ ಸ್ಥಿತಿಗೆ ತಲುಪಿದ ದೆಹಲಿಗಾಳಿ ಗುಣಮಟ್ಟ, ಜೀವನ ದುಸ್ತರ

ಪ್ರಸ್ತುತ ಸಂದರ್ಭದಲ್ಲಿ ಅಂಗಾಂಗಗಳ ಬೇಡಿಕೆ ಮತ್ತು ಪೂರೈಕೆ ನಡುವೆ ಅಜಗಜಾಂತರ ವ್ಯತ್ಯಾಸವಿದ್ದು, ಅದನ್ನು ಸರಿದೂಗಿಸಲು ಸರ್ಕಾರ ಸಾಕಷ್ಟು ಪ್ರಯತ್ನಗಳನ್ನು ನಡೆಸುತ್ತಿದೆ. ಈ ನಿಟ್ಟಿನಲ್ಲಿ ಅಂಗಾಂಗಗಳ ದಾನಿಗಳ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ ನೀಡುವ ನಿರ್ಣಯ ಮಹತ್ವದ ಉತ್ತೇಜನವಾಗಲಿದೆ ಎಂದು ಹೇಳಲಾಗುತ್ತಿದೆ.

ಒಳಬೇಗುದಿ ಮುಚ್ಚಿಡಲು ಡಿಕೆಶಿ ಯತ್ನ

ಹುಬ್ಬಳ್ಳಿ,ನ.3- ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ ಎಂದು ಪರೋಕ್ಷವಾಗಿ ಹೇಳಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒಳ ಬೇಗುದಿಯನ್ನು ಮುಚ್ಚಿಡುವ ಪ್ರಯತ್ನ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪತ್ರಕರ್ತರ ಪ್ರಶ್ನೆಗಳಿಗೆ ಕಾಂಗ್ರೆಸ್‍ನಲ್ಲಿ ಅಸಮಾಧಾನ ಎಲ್ಲಿದೆ ಎಂದು ಮರುಪ್ರಶ್ನಿಸಿದ್ದಾರೆ. ಮುಂದಿನ ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ ಎಂದು ಸಿದ್ದರಾಮಯ್ಯ ಅವರು ಪ್ರಥಮ ಬಾರಿಗೆ ಘೋಷಿಸಿದ ಬಳಿಕ ಮೊದಲ ಪ್ರತಿಕ್ರಿಯೆಯಲ್ಲೇ ಡಿ.ಕೆ.ಶಿವಕುಮಾರ್ ನುಣುಚಿಕೊಳ್ಳುವ ಯತ್ನ ಮಾಡಿದ್ದಾರೆ.

ಪಕ್ಷದಲ್ಲಿ ಇರುವ ಅಸಮಾಧಾನ ಹೇಗೆ ಪರಿಹರಿಸಿಕೊಳ್ಳುತ್ತೀರಿ ಎಂದು ಕೇಳಿದಾಗ, ನಮ್ಮ ಪಕ್ಷದಲ್ಲಿ ಎಲ್ಲಿ ಅಸಮಾಧಾನ ಇದೆ? ಬಿಜೆಪಿಯಲ್ಲಿ ಅಸಮಾಧಾನ ಇದ್ದು, ಅದರಿಂದ ಅವರ ನಾಯಕರ ಆಯ್ಕೆ ಮಾಡಲು ಆಗುತ್ತಿಲ್ಲ. ಈ ಬಗ್ಗೆ ನೀವು ಪ್ರಶ್ನೆ ಮಾಡುತ್ತಿಲ್ಲ. ಸರ್ಕಾರ ರಚನೆ ಆಗಿ ಐದಾರು ತಿಂಗಳು ಕಳೆದರೂ ವಿರೋಧ ಪಕ್ಷದ ನಾಯಕ ಸ್ಥಾನ ಆಯ್ಕೆ ಆಗದ ಇತಿಹಾಸವನ್ನು ರಾಜ್ಯ ಅಥವಾ ದೇಶದಲ್ಲಿ ನೋಡಿದ್ದೀರಾ? ಎಂದು ತಿಳಿಸಿದರು.

ಒಕ್ಕಲಿಗ ಸಮುದಾಯಕ್ಕೆ ಮುಖ್ಯಮಂತ್ರಿ ಹುದ್ದೆ ನೀಡಬೇಕೆಂಬ ಹಕ್ಕೊತ್ತಾಯಗಳ ಬಗ್ಗೆ ಪ್ರತಿಕ್ರಿಯಿಸದೆ ನಿರ್ಗಮಿಸಿದ್ದಾರೆ. ಲೋಕಸಭೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸಮೀಕ್ಷೆ ಚಾಲ್ತಿಯಲ್ಲಿವೆ. ಈಗಾಗಲೇ ಮಂತ್ರಿಗಳನ್ನು ಆಯಾ ಜಿಲ್ಲೆಗೆ ಕಳುಹಿಸಿದ್ದೇವೆ. ಅವರು ನಮಗೆ ವರದಿ ನೀಡಲಿದ್ದಾರೆ. ಶೇ.75ರಷ್ಟು ಮಂದಿ ನಮ್ಮ ಕಾರ್ಯಕರ್ತರು, ಶಾಸಕರು, ಸ್ಥಳೀಯ ನಾಯಕರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ದೆಹಲಿ ನಾಯಕರು ನಮಗೆ ಕೆಲವು ಮಾರ್ಗದರ್ಶನ ನೀಡಿದ್ದಾರೆ. ಅದರ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಮೂರ್ನಾಲ್ಕು ದಿನಗಳಲ್ಲಿ ಕೆಲವು ಮಾನದಂಡ ನಿಗದಿ ಮಾಡಿದ್ದೇವೆ ಎಂದು ತಿಳಿಸಿದರು.

ಡಿಎಂಕೆ ಸಚಿವ ವೇಲು ಮನೆ ಮೇಲೆ ಐಟಿ ದಾಳಿ

ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ಕ್ಷೇತ್ರದಲ್ಲಿ ಸ್ಥಳೀಯ ವರ್ಚಸ್ಸು, ಜನಪ್ರಿಯತೆ, ವಾಕ್‍ಚಾತುರ್ಯ, ಪಕ್ಷ ನಿಷ್ಠೆ ಸೇರಿದಂತೆ ಹಲವು ಮಾನದಂಡಗಳನ್ನು ಪರಿಗಣಿಸಲಾಗುವುದು ಎಂದು ಹೇಳಿದರು.

ಬಿಜೆಪಿ ಬರ ಅಧ್ಯಯನ ಪ್ರವಾಸದ ಬಗ್ಗೆ ಕೇಳಿದಾಗ, ಅವರು ಅಧ್ಯಯನ ಮಾಡಿ ಕೇಂದ್ರ ಸರ್ಕಾರಕ್ಕೆ ವರದಿ ನೀಡಲಿ. ನಮ್ಮ ಸಚಿವರಾದ ಚೆಲುವರಾಯ ಸ್ವಾಮಿ ಹಾಗೂ ಕೃಷ್ಣಭೈರೇಗೌಡ ಅವರು ಅಧ್ಯಯನ ಮಾಡಿ ಸುಮಾರು 200 ತಾಲೂಕುಗಳನ್ನು ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಿದ್ದಾರೆ. ಅವರು ಸುಮ್ಮನೆ ಘೋಷಣೆ ಮಾಡಿದ್ದಾರಾ? ಮಂಡ್ಯ, ಹಾವೇರಿ ಹಾಗೂ ಇತರ ಜಿಲ್ಲೆಗಳಲ್ಲಿ ಪರಿಶೀಲನಾ ಸಭೆ ನಡೆಯುತ್ತಿದೆ ಎಂದು ತಿಳಿಸಿದರು.

ಕೇಂದ್ರ ಬರ ಅಧ್ಯಯನ ತಂಡ ಭೇಟಿ ನೀಡಿ ಹೋಗಿದೆ ನಂತರ ಏನಾಯ್ತು ಎಂದು ಕೇಳಿದಾಗ, ನಾವು ಬರ ಪರಿಹಾರಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಿದ್ದೇವೆ. ನಾವು ಸಾವಿರ ಕೋಟಿಯಷ್ಟು ಹಣವನ್ನು ಮೀಸಲು ಇಟ್ಟಿದ್ದೇವೆ ಎಂದು ತಿಳಿಸಿದರು.

ಮುಂದುವರೆದು ಮಾತನಾಡಿದ ಅವರು, ರಾಜ್ಯವನ್ನು ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷಗಳಾಗಿವೆ. ರಾಜ್ಯದ ಜನ ಹಾಗೂ ಸರ್ಕಾರಕ್ಕೆ ಈ ಸುವರ್ಣ ಹಬ್ಬ ಆಚರಿಸಲು ಒಂದು ಅವಕಾಶವಿದೆ. ಇಡೀ ವರ್ಷ ಸಂಭ್ರಮಾಚರಣೆಗೆ ಸರ್ಕಾರ ತೀರ್ಮಾನ ಮಾಡಿದೆ. ಕನ್ನಡ ಜ್ಯೋತಿಗೆ ನಿನ್ನೆ ಚಾಲನೆ ನೀಡಲಾಗಿದೆ. ಅದರ ಮುಂದುವರಿದ ಭಾಗವಾಗಿ ಗದಗದಲ್ಲಿ ಕಾರ್ಯಕ್ರಮ ಇಟ್ಟುಕೊಂಡಿದ್ದೇವೆ. ಈ ಸುವರ್ಣ ವರ್ಷಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈಗಾಗಲೇ ಭುವನೇಶ್ವರಿ ಭವನ ನಿರ್ಮಾಣ ಘೋಷಣೆ ಮಾಡಿದ್ದಾರೆ ಎಂದರು.

ಕುಡಿಯುವ ನೀರಿನ ಸಮಸ್ಯೆ ಯಾಗದಂತೆ ನೋಡಿಕೊಳ್ಳಿ : ಸಿಎಂ ಎಚ್ಚರಿಕೆ

ಬೆಂಗಳೂರು,ನ.3- ರಾಜ್ಯದಲ್ಲಿ ಸೃಷ್ಟಿಯಾಗಿರುವ ಬರ ಪರಿಸ್ಥಿತಿಯನ್ನು ನಿಭಾಯಿಸಲು ಕೇಂದ್ರದ ಅನುದಾನದ ಹೊರತಾಗಿಯೂ ರಾಜ್ಯ ಸರ್ಕಾರ ಮುಂದಾಗಿದ್ದು, ಕುಡಿಯುವ ನೀರಿನ ಬವಣೆ ನೀಗಿಸಲು 900 ಕೋಟಿ ರೂ.ಗೂ ಹೆಚ್ಚು ಅನುದಾನ ನೀಡಿದೆ. ಯಾವುದೇ ಭಾಗದಲ್ಲಿ ಸಮಸ್ಯೆಯಾಗದಂತೆ ಕಟ್ಟೆಚ್ಚರ ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ.

ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯಾದ್ಯಂತ ಬರಪೀಡಿತ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಳ್ಳುತ್ತಿದೆ. ಮಳೆ ಕೊರತೆಯಿಂದಾಗಿ ಜಲಮೂಲಗಳು ಬತ್ತಿದ್ದು, ಹಾಹಾಕಾರ ಹೆಚ್ಚಾಗಿದೆ. ಸುಮಾರು ಸಾವಿರಕ್ಕೂ ಹೆಚ್ಚು ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಬೇಕಾದಂತಹ ಪರಿಸ್ಥಿತಿ ಇದೆ. ಈ ನಿಟ್ಟಿನಲ್ಲಿ ಈಗಾಗಲೇ ಸರ್ಕಾರ 900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು, ಜಿಲ್ಲಾಧಿಕಾರಿಗಳ ವೈಯಕ್ತಿಕ ಖಾತೆಯಲ್ಲಿ ಸಾಕಷ್ಟು ಹಣ ಲಭ್ಯವಿದೆ. ಜೊತೆಗೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಗೆ ತಲಾ ಒಂದು ಕೋಟಿ ರೂ. ಬಿಡುಗಡೆ ಮಾಡಲಾಗಿದೆ.

ಅದರ ಹೊರತಾಗಿಯೂ ಅನುದಾನದ ಕೊರತೆ ಎಂದು ಹಲವು ಕಡೆ ಆಕ್ಷೇಪಗಳು ಕೇಳಿಬರುತ್ತಲೇ ಇವೆ. ರಾಜ್ಯ ಸರ್ಕಾರ ಪಂಚ ಖಾತ್ರಿ ಯೋಜನೆಗಳಿಗೆ ಹಣ ಬಳಕೆ ಮಾಡಿ ಕುಡಿಯುವ ನೀರಿಗೆ ಸಂಕಷ್ಟದ ಸ್ಥಿತಿ ನಿರ್ಮಿಸಿದೆ ಎಂದು ವಿರೋಧ ಪಕ್ಷಗಳು ಟೀಕೆ ಮಾಡುತ್ತಿವೆ.

ಬಂಡೆಗೆ ಉಂಡೆ ನಾಮ ಗ್ಯಾರಂಟಿ : ಯತ್ನಾಳ್ ವ್ಯಂಗ್ಯ

ಬಿಜೆಪಿ ಹಲವಾರು ತಂಡಗಳನ್ನು ರಚಿಸಿಕೊಂಡು ಬರ ಅಧ್ಯಯನಕ್ಕೆ ಮುಂದಾಗಿದೆ. ಈ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಬರ ಪರಿಹಾರ ಕಾಮಗಾರಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಅಗತ್ಯವಿರುವ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಲು ಇಲಾಖೆಯ ಹಿರಿಯ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಬರಗಾಲ ಮತ್ತು ಅದರ ಪರಿಣಾಮಗಳ ಬಗ್ಗೆ ತೀವ್ರ ನಿಗಾ ಇಡಬೇಕು. ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಬೇಕು, ನರೇಗಾ ಯೋಜನೆಯಡಿ ಕೇಂದ್ರದಿಂದ ಆರ್ಥಿಕ ನೆರವು ದೊರೆಯುವುದು ವಿಳಂಬವಾದರೂ ಕೂಡ ರಾಜ್ಯದ ಬೊಕ್ಕಸದಿಂದಲೇ ಉದ್ಯೋಗ ಸೃಷ್ಟಿಗೆ ಹಣ ನೀಡಬೇಕು. ಕುಡಿಯುವ ನೀರಿನ ವಿಚಾರದಲ್ಲಿ ಯಾವುದೇ ಕಾರಣಕ್ಕೂ ತಡೆ ನೀಡಬಾರದು ಎಂದು ಕಟ್ಟಪ್ಪಣೆ ಮಾಡಿದ್ದಾರೆ.

ಮಹಾರಾಷ್ಟ್ರ ಮಾದರಿ ರಾಜ್ಯದಲ್ಲೂ ಕಾಂಗ್ರೆಸ್ ಪತನವಾಗುತ್ತೆ : ಈಶ್ವರಪ್ಪ ಭವಿಷ್ಯ

ಬೆಂಗಳೂರು,ನ.3- ಆಡಳಿತಾರೂಢ ಕಾಂಗ್ರೆಸ್‍ನಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್‍ರಂತೆ ಇಲ್ಲೂ ಕೂಡ ಅನೇಕ ಮಂದಿ ಹುಟ್ಟಿಕೊಂಡಿರುವ ಕಾರಣ ಈ ಸರ್ಕಾರ ಹೆಚ್ಚು ದಿನ ಉಳಿಯುವ ಸಾಧ್ಯತೆಗಳು ಇಲ್ಲ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೆದ್ದ ಶಾಸಕರ ಕ್ಷೇತ್ರಗಳಿಗೆ ನಯಾಪೈಸೆ ಅನುದಾನವೂ ಬಿಡುಗಡೆಯಾಗಿಲ್ಲ. ನಾವು ಯಾಕಾದರೂ ಗೆದ್ದಿದ್ದೇವೊ ಎಂದು ಅಳಲು ತೋಡಿಕೊಂಡಿದ್ದಾರೆ. ಪ್ರತಿಯೊಬ್ಬರಿಗೂ ಅಧಿಕಾರ ಬೇಕು, ಇಲ್ಲಿ ಹೆಚ್ಚು ಮಂದಿ ಅಜಿತ್ ಪವಾರ್‍ಗಳು ಇರುವುದರಿಂದ ನಾನು ಸರ್ಕಾರದ ಗ್ಯಾರಂಟಿ ಬಗ್ಗೆ ಹೇಳುವುದಿಲ್ಲ ಎಂದು ಸೂಚ್ಯವಾಗಿ ಹೇಳಿದರು.

ಜನರ ಮೂಗಿಗೆ ತುಪ್ಪ ಸವರಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಈಗ ಅಧಿಕಾರಕ್ಕಾಗಿ ಅವರವರಲ್ಲೇ ಬಣಗಳು ಸೃಷ್ಟಿಯಾಗಿವೆ. ಸ್ವತಃ ರಾಜ್ಯದ ಜನತೆಯೇ ಯಾಕಾದಾರು ಕಾಂಗ್ರೆಸ್‍ಗೆ ಅಕಾರ ಕೊಟ್ಟೆವೊ ಎಂದು ಹಿಡಿಶಾಪ ಹಾಕುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ರಾಜ್ಯ ಕಾಂಗ್ರೆಸ್ ಅಭಿವೃದ್ಧಿ ನಿನ್ನೆಯಿಂದ ಆರಂಭವಾಗಿದೆ. ಸಿಎಂ ಆಗಿರುವ ಸಿದ್ದರಾಮಯ್ಯ ನಾನೇ ಐದು ವರ್ಷ ಸಿಎಂ ಎಂದು ಹೇಳಿದ್ದಾರೆ.

ಅದಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇದರ ತೀರ್ಮಾನ ಕೇಂದ್ರ ನಾಯಕರು ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ. ಇದರ ಅರ್ಥ ಐದು ವರ್ಷ ಸಿಎಂ ಅಗಿರುವುದಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ವ್ಯಂಗ್ಯವಾಡಿದರು.

ಶಾಸಕರಿಗೆ ಕ್ಷೇತ್ರಕ್ಕೆ ಹಣ ಕೊಟ್ಟಿಲ್ಲ. ಒಂದು ರೂಪಾಯಿ ಹಣ ಬಿಡುಗಡೆ ಆಗಿಲ್ಲ. ಇದೊಂದು ಆರ್ಥಿಕವಾಗಿ ಪಾಪರ್ ಆಗಿರುವ ಸರ್ಕಾರ ಎಂದು ಟೀಕಿಸಿದ್ದಾರೆ. ಮುಖ್ಯಮಂತ್ರಿಗಲೇ ಅತೃಪ್ತ ಶಾಸಕರ ದೊಡ್ಡ ಪಟ್ಟಿಯೇ ಇದೆ. ನಾನೇ ಮುಖ್ಯಮಂತ್ರಿ ಎನ್ನುತ್ತಿದ್ದೀರಿ, ನಿಮಗೆ ಈ ದೌರ್ಭಾಗ್ಯ ಬರಬಾರದಿತ್ತು. ಇದಕ್ಕಿಂತ ನೀವು ರಾಜೀನಾಮೆ ಕೊಡುವುದೇ ಸೂಕ್ತ. ಸಿಎಂ, ಡಿಸಿಎಂ ಇಬ್ಬರೂ ರಾಜೀನಾಮೆ ಕೊಡಿ. ಕೂಡಲೇ ಕ್ಯಾಬಿನೆಟ್ ವಿಸರ್ಜಿಸಿ ಚುನಾವಣೆಗೆ ಹೋಗುವುದು ಸೂಕ್ತ ಎಂದಿದ್ದಾರೆ.

ಪ್ರಿಯಾಂಕ್ ಖರ್ಗೆ ಸಿಎಂ ಅಭ್ಯರ್ಥಿ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಪರಮೇಶ್ವರ್ ಹಾಗೂ ಪ್ರಿಯಾಂಕ್ ಖರ್ಗೆಗೆ ನಾಚಿಕೆ ಆಗಬೇಕು. ದಲಿತರ ಹೆಸರೇಳಿ ವೋಟ್ ಪಡೆಯುತ್ತಿದ್ದಾರೆ. ನಮ್ಮನ್ನ ಕೋಮುವಾದಿಗಳು ಎನ್ನುತ್ತಾರೆ. ಇವರು ದಲಿತರ ಹೆಸರೇಳಿ ಸಿಎಂ ಅಂತಿದ್ದಾರೆ. ಜಾತಿಯ ಹೆಸರಲ್ಲಿ ಸ್ವತಂತ್ರ ಬಂದ ಬಳಿಕವೂ ಮತ ಪಡೆಯುತ್ತಿದ್ದಾರೆ ಅಪಹಾಸ್ಯ ಮಾಡಿದರು.

ಬಂಡೆಗೆ ಉಂಡೆ ನಾಮ ಗ್ಯಾರಂಟಿ : ಯತ್ನಾಳ್ ವ್ಯಂಗ್ಯ

ಕಾಂಗ್ರೆಸ್‍ಗೆ ಮುಕ್ತಿ ಕೊಡಬೇಕಿದೆ. ಈಗಲ್ಲ ಹಿಂದೆ ಸಿಎಂ ಆಗಿದ್ದಾಗಲು ನಾನು, ರೇವಣ್ಣ, ಉಗ್ರಪ್ಪ ಮೂವರು ವಿಧಾನಪರಿಷತ್‍ನಲ್ಲಿ ಜಾತಿ ಜನಗಣತಿ ಚರ್ಚೆಗೆ ಅವಕಾಶ ಕೇಳಿದೆವು. ಕೂಡಲೇ ಬಿಡುಗಡೆ ಮಾಡಿ ಎಂದು ಒತ್ತಾಯಿಸಿದ್ದೆವು. ಸಿಎಂ ಬಂದ್ರು. ಇನ್ನೆರಡು ತಿಂಗಳಲ್ಲಿ ಸರ್ಕಾರ ಮುಗಿಯುತ್ತೆ. ನಾನು ಇರುವಾಗಲೇ ವರದಿ ಬಿಡುಗಡೆ ಮಾಡುತ್ತೇನೆ ಎಂದಿದ್ದರು.

ಸಚಿವ ಆಂಜನೇಯ ಕೂಡ ಅದನ್ನೇ ಹೇಳಿದ್ದರು. ಇದಾದ ಬಳಿಕ ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಬಂತು. ಆಗಲೂ ಚರ್ಚೆಗೆ ಬರಲಿಲ್ಲ. ಸಿಎಂ ಆಗಿದ್ದ ಕುಮಾರಸ್ವಾಮಿ ಜಾರಿಗೆ ತರಲು ಬಿಡಲಿಲ್ಲ. ಸಮ್ಮಿಶ್ರ ಸರ್ಕಾರದ ಛೇರ್ಮನ್ ಆಗಿದ್ದವರು ಇದೇ ಸಿದ್ದರಾಮಯ್ಯ ಎಂದರು.

ಬಿಜೆಪಿ ಬರ ಅಧ್ಯಯನ ನಾಟಕ ಶುರು : ಗುಂಡೂರಾವ್ ವ್ಯಂಗ್ಯ

ಬೆಂಗಳೂರು,ನ.3- ಬರ ಅಧ್ಯಯನ ಪ್ರವಾಸ ಎಂಬ ಹೊಸ ನಾಟಕ ಶುರುಮಾಡಿದ್ದಾರೆ. ಈ ಪ್ರವಾಸದಿಂದ ಬಿಜೆಪಿ ನಾಯಕರು ಏನು ಕಡಿದು ಕಟ್ಟೆ ಹಾಕಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಈಗಾಗಲೇ ಕೇಂದ್ರದ ಅಧಿಕಾರಿಗಳ ತಂಡ ರಾಜ್ಯಕ್ಕೆ ಬಂದು ಬರ ಅಧ್ಯಯನ ಮಾಡಿ ಹೋಗಿದೆ. ಕೇಂದ್ರದ ತಂಡ ರಾಜ್ಯಕ್ಕೆ ಬಂದು ಹೋದದಷ್ಟೆ ಗೊತ್ತು. ಆದರೆ ಈವರೆಗೂ ಬರದ ಬಗ್ಗೆ ಕೇಂದ್ರದ ತಂಡ ಏನು ವರದಿ ನೀಡಿದೆ ಎಂಬ ಸುಳಿವೇ ಇಲ್ಲ ಎಂದಿದ್ದಾರೆ.

ರಾಜ್ಯ ಬಿಜೆಪಿ ನಾಯಕರು ಇಲ್ಲಿ ಬರ ಪ್ರವಾಸದ ನಾಟಕ ಮಾಡುವ ಬದಲು ಕೇಂದ್ರ ಸರ್ಕಾರಕ್ಕೆ ಅಧಿಕಾರಿಗಳ ವರದಿ ಆಧರಿಸಿ ಪರಿಹಾರ ಕೊಡಲು ಒತ್ತಾಯಿಸಬಹುದಲ್ಲವೆ ಎಂದು ಪ್ರಶ್ನಿಸಿದ್ದಾರೆ.

ಡಿಎಂಕೆ ಸಚಿವ ವೇಲು ಮನೆ ಮೇಲೆ ಐಟಿ ದಾಳಿ

ಬಿಜೆಪಿ ನಾಯಕರು ಬರ ಅಧ್ಯಯನ ಪ್ರವಾಸ ಮಾಡಿ ಏನು ವರದಿ ನೀಡಲಿದ್ದಾರೆ? ರಾಜ್ಯದಲ್ಲಿ ಬರ ಇದೆ ಎಂದು ವರದಿ ನೀಡುವರೋ ಅಥವಾ ಇಲ್ಲ ಎಂದು ವರದಿ ನೀಡುವರೋ? ವಿರೋಧ ಪಕ್ಷದ ನಾಯಕರೇನು ಜನಪರ ಕಾಳಜಿಯಿಂದ ಈ ಅಧ್ಯಯನ ಪ್ರವಾಸ ಮಾಡುತ್ತಿಲ್ಲ. ಬದಲಿಗೆ ಕಳೆದು ಹೋಗಿರುವ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಪ್ರವಾಸದ ಪ್ರಹಸನ ಮಾಡುತ್ತಿದ್ದಾರಷ್ಟೆ ಎಂದು ದಿನೇಶ್ ಗುಂಡುರಾವ್ ಕಾಲೆಳೆದಿದ್ದಾರೆ.

ನಿಯಮದ ಅನುಸಾರ ಕೇಂದ್ರ ಬರ ಪರಿಹಾರದ ಹಣ ಬಿಡುಗಡೆ ಮಾಡಬೇಕು. ಅದರೆ ಇಲ್ಲಿಯವರೆಗೂ ಪರಿಹಾರದ ಹಣ ಬಿಡುಗಡೆಯಾಗಿಲ್ಲ. ಯಾಕೆಂದರೆ ಮೋದಿ ಸರ್ಕಾರಕ್ಕೆ ಕರ್ನಾಟಕ ನೆನಪಾಗುವುದು ಚುನಾವಣಾ ಸಂದರ್ಭದಲ್ಲಿ ಮಾತ್ರ ಎಂದು ಲೇವಡಿ ಮಾಡಿದ್ದಾರೆ.

ಕರ್ನಾಟಕ ಸಂಕಷ್ಟದಲ್ಲಿದ್ದಾಗಲೆಲ್ಲಾ ಕೇಂದ್ರ ಕೈ ಕೊಡುವುದು ಸಾಮಾನ್ಯ ಸಂಗತಿ. ಬಿಜೆಪಿ ನಾಯಕರು ಬರ ಅಧ್ಯಯನಕ್ಕಾಗಿ ರಾಜ್ಯ ಪ್ರವಾಸ ಮಾಡುವುದು ಬಿಟ್ಟು ದೆಹಲಿ ಪ್ರವಾಸ ಮಾಡಲಿ. ಆಗಲಾದರೂ ಕೇಂದ್ರ ಪರಿಹಾರ ಹಣ ಬಿಡುಗಡೆ ಮಾಡಬಹುದೇನೋ ಎಂದು ನಿರೀಕ್ಷೆಗಳನ್ನು ವ್ಯಕ್ತಪಡಿಸಿದ್ದಾರೆ.

ಹಾಸನಾಂಬೆ ದರ್ಶನ ಪಡೆದ ಎಚ್‍ಡಿಡಿ

ಹಾಸನ, ನ.3- ಪರಮೇಶ್ವರನ ಅನುಗ್ರಹದಿಂದ ಮುಂದಿನ ಬಾರಿ ಮೆಟ್ಟಿಲು ಹತ್ತಿ ಬರಲು ತಾಯಿ ಹಾಸನಾಂಬೆ ಶಕ್ತಿ ನೀಡುವ ನಂಬಿಕೆ ಇದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರು ಹೇಳಿದರು. ಹಾಸನಾಂಬೆಯ ದರ್ಶನದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಆರೋಗ್ಯವಾಗಿ ಮುಂದಿನ ಬಾರಿ ಬರುವಂತೆ ತಾಯಿಯಲ್ಲಿ ಆಶೀರ್ವಾದ ಬೇಡುತ್ತೇನೆ ಎಂದು ಹೇಳಿದರು.

ಶ್ರೀಕ್ಷೇತ್ರ ಐತಿಹಾಸಿಕವಾಗಿದ್ದು, ಬಹಳ ವಿಜೃಂಭಣೆಯಿಂದ ದೀಪದ ಅಲಂಕಾರವನ್ನು ಬೀದಿ ಬೀದಿಗಳಲ್ಲಿ ಸೊಗಸಾಗಿ ಮಾಡಿದ್ದಾರೆ. ಕುಡಿಯುವ ನೀರು ಸೇರಿದಂತೆ ಎಲ್ಲ ರೀತಿಯ ಸೌಲಭ್ಯ ಒದಗಿಸಿ ಬಹಳ ಶ್ರದ್ಧೆಯಿಂದ ಕೆಲಸ ಮಾಡಿದ್ದಾರೆ. ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಉಸ್ತುವಾರಿ ಸಚಿವರಾದ ರಾಜಣ್ಣನವರು ಮುಂದೆ ನಿಂತು ಅಧಿಕಾರಿಗಳ ಸಹಕಾರದಲ್ಲಿ ಒಳ್ಳೆಯ ಕೆಲಸ ಮಾಡಿದ್ದಾರೆ. ಆಡಳಿತ ಮಂಡಳಿ ಹಾಗೂ ಜನತೆ ಪರವಾಗಿ ಎಲ್ಲರಿಗೂ ಅಭಿನಂದಿಸುವುದಾಗಿ ಹೇಳಿದರು.

ಡಿಎಂಕೆ ಸಚಿವ ವೇಲು ಮನೆ ಮೇಲೆ ಐಟಿ ದಾಳಿ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಶ್ರೀಕ್ಷೇತ್ರದ ಪ್ರಚಾರ ಮಾಡಿರುವುದರಲ್ಲಿ ಮಾಧ್ಯಮದ ಕೊಡುಗೆ ಅಪಾರವಾಗಿದೆ ಎಂದು ದೇವೇಗೌಡರು ತಿಳಿಸಿದರು. ಶಾಸಕ ಸ್ವರೂಪ್, ಜಿಲ್ಲಾಧಿಕಾರಿ ಸತ್ಯಭಾಮ, ಎಸ್‍ಪಿ ಸುಜಿತಾ ಶಾಂತಲಾ, ಎಸಿ ಮಾರುತಿ, ತಹಸೀಲ್ದಾರ್ ಶ್ವೇತಾ ಎಲ್ಲರೂ ಒಂದೇ ಮನಸ್ಸಿನಲ್ಲಿ ದೇಗುಲದ ಬಾಗಿಲು ಮುಚ್ಚುವವರೆಗೆ ಭಕ್ತಿಪೂರ್ವಕವಾಗಿ ಕಾರ್ಯ ನಡೆಸಿಕೊಡಬೇಕು ಎಂದು ದೇವೇಗೌಡರು ಹೇಳಿದರು.

ದೀಪಾವಳಿ ವೇಳೆ ಪಟಾಕಿ ಸಿಡಿಸಲು ಮಾರ್ಗಸೂಚಿ ಬಿಡುಗಡೆ

ಬೆಂಗಳೂರು,ನ.3- ಅತ್ತಿಬೆಲೆ ಪಟಾಕಿ ದುರಂತದ ಬಳಿಕ ಎಚ್ಚೆತ್ತುಕೊಂಡಿರುವ ವಾಯು ಮಾಲಿನ್ಯ ನಿಯಂತ್ರಣ ಮಂಡಳಿ ನಗರದಲ್ಲಿ ಪಟಾಕಿ ಸಿಡಿಸಲು ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹಸಿರು ಪಟಾಕಿಗಳ ಮೇಲೆ ಹಾಗು ಅವುಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿಹ್ನೆಯಿರಬೇಕು ಹಾಗು ಕ್ಯೂಆರ್ ಕೋಡ್ ಸಹಾ ಇರುತ್ತದೆ, ಸದರಿ ಚಿಹ್ನೆಯ ಬಗ್ಗೆ ಸಂಬಂಧಪಟ್ಟ, ಜಿಲ್ಲೆಯ ಪರಿಸರ ಅಧಿಕಾರಿಗಳಿಂದ ಖಚಿತ ಪಡಿಸಿಕೊಳ್ಳುವುದು, ಸದರಿ ಚಿಹ್ನೆ ಇಲ್ಲದ ಯಾವುದೇ ಪಟಾಕಿ ಹಸಿರು ಪಟಾಕಿಯೆನಿಸುವುದಿಲ್ಲ. ಮತ್ತು ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ.

ಯಾವುದೇ ಹಸಿರು ಪಟಾಕಿಗಳ ಪ್ಯಾಕೆಟ್ಟುಗಳನ್ನು ರ್ಯಾಂಡಮ್ ಆಗಿ ಸಂಗ್ರಹಿಸಿ ನಿಗತ ವಿಧಿ ವಿಧಾನಗಳ ಮೂಲಕ ಅವುಗಳ ಶಬ್ದ ಮಟ್ಟವನ್ನು ಮಾಪನ ಮಾಡಬೇಕು ಮತ್ತು ನಿಗದಿತ ಗುಣಮಾಪನಗಳಿಗೆ ಸರಿಹೊಂದಿದ್ದಲ್ಲಿ, ಅವುಗಳನ್ನು ಸಹಾ ಕೂಡಲೆ ಮುಟ್ಟುಗೋಲು ಹಾಕಿಕೊಳ್ಳಬೇಕು.

ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಹಾಗು ಇವುಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿಗಳು, ಮಕ್ಕಳು ಹಾಗು ವೃದ್ಧರಿಗೆ ತೊಂದರೆಯಾಗದಂತೆ ಬಳಸಬೇಕು.

ಮಾನ್ಯ ಸರ್ವೋಚ್ಛ ನ್ಯಾಯಾಲಯದ ನಿರ್ದೇಶನಗಳ ಕುರಿತಂತೆ ಸಾರ್ವಜನಿಕರಿಗೆ ಮತ್ತು ಮಕ್ಕಳಲ್ಲಿ ಅರಿವು ಮೂಡಿಸಲು ಪರಿಣಾಮಾಕಾರಿಯಾಗಿ ಜಾಗೃತಿ ಕಾರ್ಯಕ್ರಮಗಳನ್ನು ಜಿಲ್ಲಾಡಳಿತ ಮತ್ತು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳುವುದು.

ಮೂವರು ಮುಖ್ಯನ್ಯಾಯಮೂರ್ತಿಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸು

ಯಾವುದೇ ಸ್ಥಳೀಯ ಆಸ್ಪತ್ರೆ ಹಾಗು ಶಿಕ್ಷಣ ಸಂಸ್ಥೆಗಳ ಸುತ್ತಮುತ್ತಲಿನ ಹಾಗು ಇನ್ನಾವುದೇ ನಿಷೇತ ಪ್ರದೇಶದಲ್ಲಿ ಯಾವುದೇ ರೀತಿಯ ಪಟಾಕಿಗಳನ್ನು ಸೋಟಿಸುವಂತಿಲ್ಲ ಅಥವಾ ಬಳಸುವಂತಿಲ್ಲ. ಇದನ್ನು ಎಲ್ಲಾ ಸ್ಥಳೀಯ ಸಂಸ್ಥೆ ಹಾಗು ಪೊಲೀಸ್ ಇಲಾಖೆಗಳು ಇದನ್ನು ಕಡ್ಡಾಯವಾಗಿ ಪಾಲಿಸಬೇಕು.

ಪರಿಸರ ಸ್ನೇಹಿ ದೀಪಾವಳಿ ಹಬ್ಬದ ಕುರಿತು ಸಾರ್ವಜನಿಕ ಸ್ಥಳಗಳಾದ ಮೆಟ್ರೋ ನಿಲ್ದಾಣ, ರೈಲು, ಬಸ್ ನಿಲ್ದಾಣ, ಮಾಲ್‍ಗಳಲ್ಲಿ ಕರಪತಭಿತ್ತಿಪತ್ರಗಳನ್ನು ಹಂಚುವ ಮೂಲಕ ಆಡಿಯೋ ಮತ್ತು ಆಡಿಯೋ ಮುಖಾಂತರ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕ್ರಮವಹಿಸುವುದು.

ಸ್ಥಳೀಯ ಟಿ.ವಿ. ಹಾಗೂ ರೇಡಿಯೋ ಮುಖಾಂತರ ಸಾರ್ವಜನಿಕರಿಗೆ ಪರಿಸರ ಸ್ನೇಹಿ ದೀಪಾವಳಿ ಹಬ್ಬ ಆಚರಿಸುವ ಬಗ್ಗೆ ಜಾಗೃತಿ ಮೂಡಿಸುವುದು. ದೀಪಾವಳಿಯ ಸಮಯದಲ್ಲಿ ಉತ್ಪಾದನೆಯಾಗುವಂತಹ ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಅಗತ್ಯ ಕ್ರಮವಹಿಸುವುದು.

ಹೊರ ರಾಜ್ಯಗಳಿಂದ ಅನಧಿಕೃತವಾಗಿ ಯಾವುದೇ ರೀತಿಯ ನಿಷೇಧಿತ ಪಟಾಕಿಗಳನ್ನು ಸಾಗಾಣೆ ಮಾಡುತ್ತಿದ್ದಲ್ಲಿ ಕೂಡಲೆ ವಾಣಿಜ್ಯ ತೆರಿಗೆ ಇಲಾಖೆಯವತಿಯಿಂದ ರಾಜ್ಯದ ಗಡಿಗಳಲ್ಲಿರುವ ತಮ್ಮ ತನಿಖಾ ಠಾಣೆಗಳ ಮುಖಾಂತರ ನಿಷೇಧಿತ ಪಟಾಕಿಗಳು ಹಾಗು ಸಂಬಂಧಿತ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದು ಹಾಗು ಸಾಗಾಣೆ ಮಾಡುವ ವಾಹನಗಳನ್ನು ಸಾರಿಗೆ ಇಲಾಖೆಯಿಂದ ಮುಟ್ಟುಗೋಲು ಹಾಕಿಕೊಳ್ಳುವುದು.

ಇದಕ್ಕೆ ಅವಶ್ಯಕತೆಯಿದ್ದಲ್ಲಿ ಸಂಬಂಧಪಟ್ಟ ಇಲಾಖೆಗಳ ಸಹಯೋಗವನ್ನು ಪಡೆದುಕೊಳ್ಳಬಹುದು.ಸದರಿ ಆದೇಶದಲ್ಲಿ ಮಾನ್ಯ ಸರ್ವೋಚ್ಛ ನ್ಯಾಯಾಲಯವು ಸಮಯ: ರಾತ್ರಿ 8.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸ್ಪೋಟಿಸಲು ಅವಕಾಶ ನೀಡಿದೆ. ಉಳಿದ ಸಮಯದಲ್ಲಿ ಪಟಾಕಿಗಳ ಸ್ಪೋಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಇದಲ್ಲದೆ ಮಾನ್ಯ ಸರ್ವೋಚ್ಛ ನ್ಯಾಯಾಲಯವು ಮೇಲ್ಯಾಣಿಸಿದ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು, ಬಿಟ್ಟು ಉಳಿದ ಯಾವುದೇ ಇತರೆ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಹ ನಿಷೇಸಿರುತ್ತದೆ.

ತಮ್ಮ ವ್ಯಾಪ್ತಿಯಲ್ಲಿನ ಎಲ್ಲಾ ಪಟಾಕಿ ಮಾರಾಟಗಾರರ ಗೋದಾಮುಗಳನ್ನು ಪರಿಶೀಲಿಸಬೇಕು ಹಾಗು ಅಲ್ಲಿ ಹಸಿರು ಪಟಾಕಿಯಲ್ಲದೆ, ಇನ್ನಾವುದಾದರೂ ನಿಷೇತ ಪಟಾಕಿಗಳನ್ನು ದಾಸ್ತಾನು ಮಾಡಿದ್ದಲ್ಲಿ ಅಂತಹ ಗೋದಾಮನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಹಾಗು ಸಂಬಂಧಿತ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆಯನ್ನು ಹೊಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಝೀಕಾ ವೈರಸ್ ಗೈಡ್‍ಲೈನ್ಸ್ ಪಾಲಿಸುವಂತೆ ಆರೋಗ್ಯ ಇಲಾಖೆ ಕರೆ

ಬೆಂಗಳೂರು,ನ.3- ಝೀಕಾ ವೈರಸ್‍ನಿಂದ ಪಾರಾಗಲು ಜನ ಕೆಲ ಗೈಡ್‍ಲೈನ್ಸ್‍ಗಳನ್ನು ಫಾಲೋ ಮಾಡುವಂತೆ ಆರೋಗ್ಯ ಇಲಾಖೆ ಮನವಿ ಮಾಡಿಕೊಂಡಿದೆ. ವೈರಸ್ ಬಗ್ಗೆ ಸ್ವಲ್ಪ ಯಾಮಾರಿದರೂ ಪ್ರಾಣಕ್ಕೆ ಸಂಚಕಾರ ಎದುರಾಗುವ ಸಾಧ್ಯತೆ ಇರುವುದರಿಂದ ಜನ ರೋಗ ಲಕ್ಷಣ ಕಂಡು ಬಂದ ಕೂಡಲೇ ಸಮೀಪದ ಆಸ್ಪತ್ರೆಗೆ ತೆರಳಿ ಪರೀಕ್ಷಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಕಣ್ಣು ಕೆಂಪಾಗುವಿಕೆ, ತಲೆ ನೋವು, ಜ್ವರ, ಕೀಲುಗಳಲ್ಲಿ ನೋವು, ಗಂಧೆಯೇಳುವುದು ಹಾಗೂ ಸ್ನಾಯುಗಳಲ್ಲಿ ನೋವು ಕಾಣಿಸಿಕೊಳ್ಳುವುದು ಸೋಂಕಿನ ಲಕ್ಷಣವಾಗಿದ್ದು, ಇಂತಹ ಲಕ್ಷಣಗಳು ಕಾಣಿಸಿಕೊಂಡವರು ತಕ್ಷಣ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಲಾಗಿದೆ.

ಝೀಕಾ ವೈರಸ್ ತಡೆಗಟ್ಟಲು ನೀರು ಶೇಖರಣಾ ಪರಿಕರಗಳನ್ನು ಮುಚ್ಚಳದಿಂದ ಮುಚ್ಚಿಡಬೇಕು ಮತ್ತು ವಾರಕ್ಕೊಮ್ಮೆ ಸ್ವಚ್ಛಗೊಳಿಸಿ, ಮನೆಯ ಸುತ್ತ-ಮುತ್ತ ನೀರು ನಿಲ್ಲದಂತೆ ಎಚ್ಚರವಹಿಸಬೇಕು. ಘನತ್ಯಾಜ್ಯ ವಸ್ತುಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವ ಮೂಲಕ ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸಿ, ಮಕ್ಕಳು, ವಯೋವೃದ್ದರು ವಿಶ್ರಾಂತಿ ಪಡೆಯುವಾಗ ಸೊಳ್ಳೆ ಪರದೆ, ಸೊಳ್ಳೆ ನಿರೋಧಕಗಳನ್ನು ಬಳಸಬೇಕು ಎಂದು ಸಲಹೆ ನೀಡಲಾಗಿದೆ.

ಮೂವರು ಮುಖ್ಯನ್ಯಾಯಮೂರ್ತಿಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸು

ಸೊಳ್ಳೆಗಳು ಸಾಮಾನ್ಯವಾಗಿ ಸಂತಾನೋತ್ಪತ್ತಿ ಮಾಡುವುದು ನಿಂತ ನೀರಲ್ಲಿ. ಹೀಗಾಗಿ ಮನೆಯ ಸುತ್ತಲೂ ನೀರು ನಿಲ್ಲದಂತೆ ಮುಂಜಾಗ್ರತೆ ವಹಿಸಬೇಕು. ಪ್ರತಿಯೊಬ್ಬ ವ್ಯಕ್ತಿಯೂ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೆ, ವೈರಸ್ ಹರಡುವ ಸಾಧ್ಯತೆ ಕಡಿಮೆಯಾಗುತ್ತೆ.

ರೋಗ ಲಕ್ಷಣಗಳು ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದ್ದು, 2 ರಿಂದ 7 ದಿನಗಳವರೆಗೆ ಇರುತ್ತದೆ. ಗರ್ಭಿಣಿಯರು ವಿಶೇಷವಾಗಿ ಎಚ್ಚರಿಕೆ ವಹಿಸಬೇಕು. ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ. ಯಾವುದೇ ರೋಗ ಲಕ್ಷಣಗಳು ಕಂಡುಬಂದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆ ವೈದ್ಯರನ್ನು ಸಂಪರ್ಕ ಮಾಡಲು ಆರೋಗ್ಯ ಇಲಾಖೆ ಮನವಿ ಮಾಡಿಕೊಂಡಿದೆ.

ಆಹಾರ ಕ್ಷೇತ್ರಕ್ಕೆ ಹರಿದುಬಂದಿದೆ 50 ಸಾವಿರ ಕೋಟಿ ಎಫ್‍ಡಿಐ : ಮೋದಿ

ನವದೆಹಲಿ, ನ.3 (ಪಿಟಿಐ) ಭಾರತದ ಆಹಾರ ಸಂಸ್ಕರಣಾ ಕ್ಷೇತ್ರವು ಸೂರ್ಯೋದಯ ಉದ್ಯಮವಾಗಿ ಹೊರಹೊಮ್ಮಿದೆ ಮತ್ತು ಕಳೆದ ಒಂಬತ್ತು ವರ್ಷಗಳಲ್ಲಿ 50,000 ಕೋಟಿ ವಿದೇಶಿ ನೇರ ಹೂಡಿಕೆಯನ್ನು (ಎಫ್‍ಡಿಐ) ಆಕರ್ಷಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ರಾಷ್ಟ್ರ ರಾಜಧಾನಿಯ ಭಾರತ್ ಮಂಟಪದಲ್ಲಿ ನಡೆದ ವಲ್ಡರ್ ಫುಡ್ ಇಂಡಿಯಾದ ಎರಡನೇ ಆವೃತ್ತಿಯನ್ನು ಉದ್ದೇಶಿಸಿ ಮೋದಿ ಮಾತನಾಡಿದರು. ಮೂರು ದಿನಗಳ ಈ ಕಾರ್ಯಕ್ರಮ ನ.5 ರಂದು ಮುಕ್ತಾಯಗೊಳ್ಳಲಿದೆ.
ಕಳೆದ ಒಂಬತ್ತು ವರ್ಷಗಳಲ್ಲಿ ಆಹಾರ ಸಂಸ್ಕರಣಾ ವಲಯಕ್ಕೆ 50,000 ಕೋಟಿ ರೂಪಾಯಿಗಳ ಎಫ್‍ಡಿಐ ಬಂದಿದೆ. ಇದು ಸರ್ಕಾರದ ಕೈಗಾರಿಕೆ ಮತ್ತು ರೈತರ ಪರವಾದ ನೀತಿಗಳ ಪರಿಣಾಮವಾಗಿದೆ ಎಂದು ಮೋದಿ ಹೇಳಿದರು.

ಕಳೆದ ಒಂಬತ್ತು ವರ್ಷಗಳಲ್ಲಿ ಸಂಸ್ಕರಿಸಿದ ಆಹಾರದ ರಫ್ತು ಶೇ. 150 ರಷ್ಟು ಹೆಚ್ಚಾಗಿದೆ ಮತ್ತು ದೇಶೀಯ ಸಂಸ್ಕರಣಾ ಸಾಮಥ್ರ್ಯವು ಗಣನೀಯವಾಗಿ ಹೆಚ್ಚಾಗಿದೆ ಎಂದು ಅವರು ಹೇಳಿದರು. ಪ್ರಧಾನ ಮಂತ್ರಿಗಳು ಒಂದು ಲಕ್ಷಕ್ಕೂ ಹೆಚ್ಚು ಸ್ವಸಹಾಯ ಗುಂಪುಗಳಿಗೆ ಬೀಜ ಬಂಡವಾಳ ಸಹಾಯವನ್ನು ವಿತರಿಸಿದರು ಮತ್ತು ವಿಶ್ವ ಆಹಾರ ಭಾರತ 2023 ಭಾಗವಾಗಿ ಆಹಾರ ಬೀದಿಯನ್ನು ಉದ್ಘಾಟಿಸಿದರು.

ವೈಯಕ್ತಿಕ ಮೈಲಿಗಲ್ಲಿಗೆ ಆದ್ಯತೆ ನೀಡಲ್ಲ : ಶ್ರೇಯಸ್ ಆಯ್ಯರ್

ಈ ಕಾರ್ಯಕ್ರಮ ಭಾರತವನ್ನು ವಿಶ್ವದ ಆಹಾರದ ಬುಟ್ಟಿ ಎಂದು ಪ್ರದರ್ಶಿಸುವ ಗುರಿಯನ್ನು ಹೊಂದಿದೆ ಮತ್ತು 2023 ಅನ್ನು ಅಂತರರಾಷ್ಟ್ರೀಯ ರಾಗಿ ವರ್ಷ ಎಂದು ಆಚರಿಸುತ್ತದೆ. ಮೊದಲ ಆವೃತ್ತಿಯನ್ನು 2017 ರಲ್ಲಿ ನಡೆಸಲಾಯಿತು, ಆದರೆ ಸತತ ವರ್ಷಗಳಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಅಂತರರಾಷ್ಟ್ರೀಯ ಕಾರ್ಯಕ್ರಮವನ್ನು ಆಯೋಜಿಸಲಾಗಲಿಲ್ಲ.

ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಪಶುಪತಿ ಕುಮಾರ್ ಪಾರಸ್ ಅವರು ವಿದೇಶಿ ಹೂಡಿಕೆದಾರರು ಈ ಕ್ಷೇತ್ರದಲ್ಲಿ ಹೂಡಿಕೆ ಮಾಡುವಂತೆ ಮನವಿ ಮಾಡಿಕೊಂಡರು.

ಅಕ್ರಮವಾಗಿ ಅಮೆರಿಕ ಪ್ರವೇಶಿಸುತ್ತಿದ್ದಾಗ ಸಿಕ್ಕಿಬಿದ್ದ 96 ಸಾವಿರ ಭಾರತೀಯರು

ವಾಷಿಂಗ್ಟನ್, ನ. 3 (ಪಿಟಿಐ) ಕಳೆದ ಒಂದು ವರ್ಷದಲ್ಲಿ ಅಕ್ರಮವಾಗಿ ಅಮೆರಿಕ ಪ್ರವೇಶಿಸಲು ಯತ್ನಿಸಿದ 96 ಸಾವಿರ ಭಾರತೀಯರನ್ನ ಬಂಧಿಸಲಾಗಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಬಾರ್ಡರ್ ಪ್ರೊಟೆಕ್ಷನ್ ದತ್ತಾಂಶದಲ್ಲಿ ಬಹಿರಂಗಗೊಂಡಿದೆ. ಯುಎಸ್ ಕಸ್ಟಮ್ಸ್ ಮತ್ತು ಬಾರ್ಡರ್ ಪ್ರೊಟೆಕ್ಷನ್ (ಯುಸಿಬಿಪಿ) ದತ್ತಾಂಶದ ಪ್ರಕಾರ 2022 ರ ಅಕ್ಟೋಬರ್ ಮತ್ತು 2023 ರ ಸೆಪ್ಟೆಂಬರ್‍ವರೆಗೆ ದಾಖಲೆಯ 96,917 ಭಾರತೀಯರನ್ನು ಅಕ್ರಮವಾಗಿ ಯುಎಸ್‍ಗೆ ದಾಟುವಾಗ ಬಂಧಿಸಲಾಗಿದೆಯಂತೆ.

ಕಾನೂನುಬಾಹಿರವಾಗಿ ಯುಎಸ್ ಗಡಿಯನ್ನು ದಾಟುತ್ತಿದ್ದಾಗ ಬಂಧಿತರಾದ ಭಾರತೀಯರು ಕಳೆದ ವರ್ಷಗಳಲ್ಲಿ ಐದು ಪಟ್ಟು ಹೆಚ್ಚಳವನ್ನು ಕಂಡಿದೆ ಎಂದು ವರದಿಯಾಗಿದೆ. 2019-20ರಲ್ಲಿ 19,883 ಭಾರತೀಯರನ್ನು ಬಂಧಿಸಲಾಗಿದೆ. 2020-21ರಲ್ಲಿ 30,662 ಭಾರತೀಯರನ್ನು ಬಂಧಿಸಲಾಗಿದ್ದು, 2021-22ರಲ್ಲಿ ಈ ಸಂಖ್ಯೆ 63,927 ಆಗಿತ್ತು ಎಂದು ಅಂಕಿಅಂಶಗಳು ತಿಳಿಸಿವೆ.

ಹಿಂದೂ ದೇವರುಗಳ ಆಶ್ಲೀಲ ಚಿತ್ರ ಮಾರಾಟ ಮಾಡುತ್ತಿದ್ದವನ ಬಂಧನ

ಅಕ್ಟೋಬರ್ 2022 ಮತ್ತು ಸೆಪ್ಟೆಂಬರ್ ನಡುವೆ ಬಂಧಿಸಲಾದ 96,917 ಭಾರತೀಯರಲ್ಲಿ 30,010 ಕೆನಡಾದ ಗಡಿಯಲ್ಲಿ ಮತ್ತು 41,770 ಮೆಕ್ಸಿಕೊ ಗಡಿಯಲ್ಲಿ ಸಿಕ್ಕಿಬಿದ್ದಿದ್ದಾರೆ. ಬಂಧಿತರನ್ನು ನಾಲ್ಕು ವರ್ಗಗಳ ಅಡಿಯಲ್ಲಿ ವರ್ಗೀಕರಿಸಲಾಗಿದೆ – ಜೊತೆಗಿರುವ ಅಪ್ರಾಪ್ತ ವಯಸ್ಕರು, ಕುಟುಂಬ ಘಟಕದಲ್ಲಿರುವ ವ್ಯಕ್ತಿಗಳು, ಒಂಟಿ ವಯಸ್ಕರು ಮತ್ತು ಜೊತೆಯಲ್ಲಿಲ್ಲದ ಮಕ್ಕಳು ಎಂದು ಗುರುತಿಸಲಾಗಿದೆ.

ಒಂಟಿ ವಯಸ್ಕರು ದೊಡ್ಡ ವರ್ಗವನ್ನು ಮಾಡುತ್ತಾರೆ. 2023 ರ ಆರ್ಥಿಕ ವರ್ಷದಲ್ಲಿ, 84,000 ಭಾರತೀಯ ವಯಸ್ಕರು ಅಕ್ರಮವಾಗಿ ಯುಎಸ್ ಅನ್ನು ದಾಟಿದ್ದಾರೆ. ಬಂಧಿತರಲ್ಲಿ 730 ಅಪ್ರಾಪ್ತ ವಯಸ್ಕರು ಸೇರಿದ್ದಾರೆ.