Home Blog Page 1857

ವಿಧಾನ ಪರಿಷತ್‍ನ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಕಾಂಗ್ರೆಸ್

ಬೆಂಗಳೂರು, ಅ.29- ವಿಧಾನ ಪರಿಷತ್‍ನ ಐದು ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆಗೆ ಕಾಂಗ್ರೆಸ್ ತನ್ನ ಅಧಿಕೃತ ಅಭ್ಯರ್ಥಿಗಳನ್ನು ಘೋಷಿಸಿದೆ. ಬೆಂಗಳೂರು ಪದವಿಧರರ ಕ್ಷೇತ್ರಕ್ಕೆ ರಾಮೋಜಿ ಗೌಡ, ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಪುಟ್ಟಣ್ಣ, ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಕೆ.ಕೆ ಮಂಜುನಾಥ್, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಡಿ.ಟಿ ಶ್ರೀನಿವಾಸ್, ಈಶಾನ್ಯ ಪದವಿಧರರ ಕ್ಷೇತ್ರಕ್ಕೆ ಡಾ. ಚಂದ್ರಶೇಖರ್ ಬಿ. ಪಾಟೀಲ್ ಅವರಿಗೆ ಟಿಕೇಟ್ ನೀಡಲಾಗಿದೆ.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದಿಂದ ಸ್ರ್ಪಧಿಸುವ ಸಲುವಾಗಿ ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್‍ನ ಬಿಜೆಪಿಯಿಂದ ಸದಸ್ಯರಾಗಿದ್ದ ಪುಟ್ಟಣ್ಣ ರಾಜೀನಾಮೆ ನೀಡಿದರು.

ವಿಧಾನ ಚುನಾವಣೆಯಲ್ಲಿ ಅದೃಷ್ಟ ಕೈಹಿಡಿಯಲಿಲ್ಲ. ಈಗ ಮರಳಿ ಅದೇ ವಿಧಾನ ಪರಿಷತ್ ಕ್ಷೇತ್ರದಲ್ಲಿ ಸ್ರ್ಪಧಿಸಲು ಕಾಂಗ್ರೆಸ್ ಟಿಕೆಟ್ ನೀಡಿದೆ. ರಾಮೋಜಿ ಗೌಡ ಬೆಂಗಳೂರು ಪದವಿಧರರ ಕ್ಷೇತ್ರದಲ್ಲಿ ಈ ಮೊದಲು ಸ್ರ್ಪಧಿಸಿ ಹಿನ್ನೆಡೆ ಅನುಭವಿಸಿದ್ದರು. ಈಗ ಮತ್ತೆ ಅದೇ ಕ್ಷೇತ್ರದಲ್ಲಿ ಅದೃಷ್ಟ ಪರೀಕ್ಷೆಗೆ ಅವಕಾಶ ಪಡೆದಿದ್ದಾರೆ.

BREAKING : ಕೇರಳದ ಎರ್ನಾಕುಲಂನಲ್ಲಿ ಬಾಂಬ್ ಬ್ಲಾಸ್ಟ್, ಓರ್ವ ಸಾವು, 20 ಹೆಚ್ಚು ಮಂದಿಗೆ ಗಾಯ

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ವ್ಯಾಪ್ತಿಯನ್ನೊಳಗೊಂಡ ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಸ್ರ್ಪಧಿಸಲು ಕೆ.ಕೆ. ಮಂಜುನಾಥ್ ಅವರಿಗೆ ಅವಕಾಶ ನೀಡಿದೆ. ಕೋಲಾರ, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆಯ ಕೆಲವು ಭಾಗಗಳ ವ್ಯಾಪ್ತಿಯನ್ನು ಒಳಗೊಂಡ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಳೆದ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ರ್ಪಧಿಸಿದ ಡಿ.ಟಿ. ಶ್ರೀನಿವಾಸ್ ಅವರಿಗೆ ಈ ಬಾರಿ ಟಿಕೆಟ್ ನೀಡಲಾಗಿದೆ.

ಹಿರಿಯೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮಾ ತಮ್ಮ ಪತಿ ಶ್ರೀನಿವಾಸ್ ಅವರೊಂದಿಗೆ ಇತ್ತೀಚೆಗೆ ಕಾಂಗ್ರೆಸ್ ಸೇರಿದ್ದರು. ತಿಂಗಳ ಒಳಗಾಗಿಯೇ ಕಾಂಗ್ರೆಸ್ ಶ್ರೀನಿವಾಸ್ ಅವರಿಗೆ ಟಿಕೆಟ್ ಘೋಷಣೆ ಮಾಡುವ ಮೂಲಕ ಅಚ್ಚರಿ ಮೂಡಿಸಿದೆ.

ಬೀದರ್, ಕಲಬುರಗಿ, ಯಾದಗಿರ್, ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ ಜಿಲ್ಲಾ ವ್ಯಾಪ್ತಿಗಳನ್ನೊಳಗೊಂಡ ಈಶಾನ್ಯ ಪದವಿಧರರ ಕ್ಷೇತ್ರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತ ಚಂದ್ರಶೇಖರ್ ಪಾಟೀಲ್ ಅವರಿಗೆ ಟಿಕೆಟ್ ನೀಡಲಾಗಿದೆ.

ಹುಲಿ ಉಗುರು ಪೆಂಡೆಂಟ್ ವಿಚಾರದಲ್ಲಿ ಸಿಎಂ ಮಧ್ಯಪ್ರವೇಶಕ್ಕೆ ಶರವಣ ಆಗ್ರಹ

ಬೆಂಗಳೂರು, ಅ.29- ಹುಲಿ ಉಗುರು ಪೆಂಡೆಂಟ್ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಪ್ರವೇಶ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಮತ್ತು ಕರ್ನಾಟಕ ಜುವೆಲರಿ ಅಸೋಸಿಯೇಷನ್ ಅಧ್ಯಕ್ಷ ಟಿ.ಎ.ಶರವಣ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಹುಲಿ ಉಗುರು ಪೆಂಡೆಂಟ್ ಹೆಸರಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಆಭರಣ ಮಾಲೀಕರಿಗೆ ಕಿರುಕುಳ ನೀಡುತ್ತಿದ್ದಾರೆ. ಇದರಿಂದ ರಾಜ್ಯದ ಚಿನ್ನಾಭರಣ ಅಂಗಡಿಗಳ ಮಾಲೀಕರು ಮತ್ತು ಅಕ್ಕಸಾಲಿಗರು ಭಯ ಭೀತರಾಗಿದ್ದಾರೆ ಎಂದರು.

ಈಗಾಗಲೇ ಸರ್ಕಾರ ಹಲವು ವಿಚಾರಗಳಲ್ಲಿ ವೈಫಲ್ಯ ಕಂಡಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ನಾಡಿನ ಜ್ವಲಂತ ಸಮಸ್ಯೆಗಳನ್ನು ಮರೆಮಾಚಲು ಅರಣ್ಯ ಇಲಾಖೆ ಹುಲಿ ಉಗುರಿನ ಪೆಂಡೆಂಟ್ ವಿಚಾರದ ಹಿನ್ನೆಲೆಯಲ್ಲಿ ಜನರನ್ನು ದಿಕ್ಕು ತಪ್ಪಿಸಲು ಹೊರಟಿದೆ. ಹಿಂದೂ ಧರ್ಮದ ಆರ್ಚಕರನ್ನು, ಸಿನಿಮಾ ತಾರೆಯರನ್ನು, ರಾಜಕಾರಣಿಗಳನ್ನು ಟಾರ್ಗೆಟ್ ಮಾಡಲಾಗಿದೆ. ವನ್ಯಜೀವಿ ಕಾಯ್ದೆಗಳ ಬಗ್ಗೆ ಜನರಿಗೆ ಅರಿವು ಮೂಡಿಸದೇ ದಿಢೀರ್ ದಾಳಿ ನಡೆಸಲಾಗುತ್ತಿದೆ ಎಂದು ದೂರಿದರು.

ಅರಣ್ಯ ಇಲಾಖೆಯ ಅಧಿಕಾರಿಗಳು ಹುಲಿ ಉಗುರಿನ ಪೆಂಡೆಂಟ್ ಬಗ್ಗೆ ಆಭರಣ ಮಾಲೀಕರಿಗೆ ನೋಟಿಸ್ ನೀಡದೆ ಏಕಾಏಕಿ ದಾಳಿ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ನೋಟಿಸ್ ನೀಡದೆ ಅರಣ್ಯ ಇಲಾಖೆಯ ಅಧಿಕಾರಿಗಳು ತಪಾಸಣೆ ಮಾಡಬಾರದು. ಪೆಂಡೆಂಟ್ ವಿಚಾರದಲ್ಲಿ ವಜಾಭರಣ ಅಂಗಡಿಗಳ ಮಾಲೀಕರಿಗೆ ಮಾನಸಿಕ ಕಿರುಕುಳ ನೀಡಿದರೆ. ರಾಜ್ಯವ್ಯಾಪಿ ಸರ್ಕಾರದ ವಿರುದ್ಧ ಹೋರಾಟಕ್ಕೆ ಕರೆ ಕೊಡಬೇಕಾದಿತು ಎಂದು ಎಚ್ಚರಿಸಿದರು.

ಕಾನೂನು ಎಲ್ಲರಿಗೂ ಸಮಾನ ಎಂದು ಹೇಳುತ್ತಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮತ್ತು ಅಧಿಕಾರಿಗಳು ಈ ಬಗ್ಗೆ ಜಾಗೃತಿ ಮೂಡಿಸಲಿ. ಅರಣ್ಯ ಉತ್ಪನ್ನ ಹೊಂದಿರುವ ವ್ಯಕ್ತಿಗಳು ತಾವಾಗಿಯೇ ಅದನ್ನು ಸರ್ಕಾರಕ್ಕೆ ವಾಪಸ್ ನೀಡಲು ಒಂದು ಗಡುವು ನೀಡಲಿ. ಜನರಿಗೆ ತಿಳುವಳಿಕೆ ನೀಡದೆ ಸಾರ್ವಜನಿಕರ ಮೇಲೆ ದಾಳಿ ನಡೆಸಿ, ಮೊಕದ್ದಮೆ ಹೂಡಲು ಹೊರಟಿರುವುದು ಸರಿಯಲ್ಲ.

ಭಾರತದಲ್ಲಿ ಮಹಿಳಾ ಉದ್ಯೋಗಿಗಳ ಸಂಖ್ಯೆ ಶೇ.37ಕ್ಕೆ ಏರಿಕೆ

ಹುಲಿ ಉಗುರು ಸೇರಿದಂತೆ ಕೆಲ ವನ್ಯಜೀವಿ ಉತ್ಪನ್ನಗಳಿಗೆ ಬಂಗಾರದ ಅಲಂಕಾರಿಕ ವಿನ್ಯಾಸ ಮಾಡುವ ಸಂಪ್ರದಾಯವಿದೆ. ಇದನ್ನು ಬಂಗಾರದ ಕವಚದಿಂದಲೂ ಅಲಂಕಾರ ಮಾಡುತ್ತಾರೆ ಎಂಬ ಕಾರಣಕ್ಕಾಗಿ ಚಿನ್ನಾಭರಣ ಮಾರಾಟಗಾರರ ಮೇಲೆ ಕ್ರಮ ಜರುಗಿಸಲು ಹೊರಟಿರುವುದು ಸರಿಯಲ್ಲ ಎಂದರು.

ಇಂಡಿಯನ್ ಜ್ಯೂವೆಲರಿ ಅಸೋಸಿಯೇಷನ್ ಉಪಾಧ್ಯಕ್ಷ ಚೇತನ್ ಕುಮಾರ್ ಮೆಹ್ತಾ, ಬೆಂಗಳೂರು ಜ್ಯೂವೆಲರಿ ಅಸೋಸಿಯೇಷನ್ ಅಧ್ಯಕ್ಷ ಸುರೇಶ್ ಗನ್ನಾ, ಸುಮೇಶ್ ವಡೇರಾ ಮತ್ತತಿರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ರಾಜಸ್ಥಾನ : ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಸಾವು

ಜೈಪುರ, ಅ.29-ರಾಜಸ್ಥಾನದ ಹನುಮಾನ್‍ಗಢ ಜಿಲ್ಲೆಯಲ್ಲಿ ಕಾರು ಮತ್ತು ಟ್ರಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಒಂದೇ ಕುಟುಂಬದ ಏಳು ಜನರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಕುಟುಂಬ ಸಮೇತರಾಗಿ ಕಾರ್ಯಕ್ರಮವೊಂದಲ್ಲಿ ಬಾಗಿಯಾಗಿ ಮನೆಗೆ ಮರಳುತ್ತಿದ್ದಾಗ ಮುಂಜಾನೆ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಪರಮ್‍ಜೀತ್ ಕೌರ್ (60), ಖುಶ್ವಿಂದರ್ ಸಿಂಗ್ (25), ಅವರ ಪತ್ನಿ ಪರಮ್‍ಜೀತ್ ಕೌರ್ (22), ಮಗ ಮಂಜೋತ್ ಸಿಂಗ್ (5), ರಾಂಪಾಲ್ (36), ಅವರ ಪತ್ನಿ ರೀನಾ (35) ಮತ್ತು ಮಗಳು ರೀತ್ ಎಂದು ಗುರುತಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ವೇದ್ ಪಾಲ್ ತಿಳಿಸಿದ್ದಾರೆ.

“ಡಿಕೆಶಿಯವರಿಗೆ 70 ಶಾಸಕರ ಬೆಂಬಲವಿದೆ, ಅವರನ್ನು ಸಿಎಂ ಮಾಡೇ ತೀರುತ್ತೇವೆ”

ಗಂಭೀರವಾಗಿ ಗಾಯಗೊಂಡಿರುವ ಆಕಾಶದೀಪ್ ಸಿಂಗ್ (14) ಮತ್ತು ಮನರಾಜ್ ಕೌರ್ (2) ನನ್ನು ಬಿಕಾನೇರ್‍ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಲಾಗಿದ್ದು ಘಟನೆಯಿಂದ ಹೆದ್ದಾರಿಯಲ್ಲಿ ಕೆಲ ಸಮಯ ವಾಹನಗಳ ಸಂಚಾರಕ್ಕೆ ಅಡಚಣೆಯಾಗಿತ್ತು

BREAKING : ಕೇರಳದ ಎರ್ನಾಕುಲಂನಲ್ಲಿ ಬಾಂಬ್ ಬ್ಲಾಸ್ಟ್, ಓರ್ವ ಸಾವು, 20 ಹೆಚ್ಚು ಮಂದಿಗೆ ಗಾಯ

ಕೊಚ್ಚಿ, ಅ.29- ಕ್ರೈಸ್ತ ಸಮುದಾಯದ ಪ್ರಾರ್ಥನೆ ವೇಳೆ ಬಾಂಬ್ ದಾಳಿ ನಡೆದು ಒಬ್ಬರು ಸಾವನ್ನಪ್ಪಿ 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಯರ್ನಾಕುಲಂನಲ್ಲಿ ನಡೆದಿದೆ. ಇಂದು ಬೆಳಗ್ಗೆ ಯೆಹೋವನ ಸಾಕ್ಷಿ ಸಮಾವೇಶಕ್ಕಾಗಿ ಸಮುದಾಯ ಕೇಂದ್ರದಲ್ಲಿ ವಿಶೇಷ ಪ್ರಾರ್ಥನೆ ನಡೆಯುತ್ತಿತ್ತು. ಈ ವೇಳೆ ಈ ದಾಳಿ ನಡೆದಿದೆ ಎಂದು ಪೆಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಇದು ಉಗ್ರರ ಕೃತ್ಯ ಎಂದು ತಿಳಿದುಬಂದಿದ್ದು, ಸುಮಾರು ಮೂರು ಬಾರಿ ಸ್ಪೋಟ ಸಂಭವಿಸಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ನಿನ್ನೆಯಷ್ಟೆ ಪ್ಯಾಲಸ್ಟೇನ್ ಬೆಂಬಲಿಸಿ ಬೃಹತ್ ರ್ಯಾಲಿ ನಡೆದಿತ್ತು. ಈ ನಡುವೆ ಇಂದು ಬೆಳಗ್ಗೆ ನಡೆದಿರುವ ಉಗ್ರರ ದಾಳಿ ಭಾರೀ ಆತಂಕ ಸೃಷ್ಟಿಸಿದೆ. ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಹಾಗೂ ಭದ್ರತಾ ಪಡೆಗಳು ಕೂಡ ದೌಡಾಯಿಸಿವೆ.

ಸರ್ಕಾರಿ ಸೇವೆ ಪರೀಕ್ಷೆಯಲ್ಲಿ ವಂಚನೆ : 10 ಜನರ ಬಂಧನ

ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ತಪಾಸಣೆ ವೇಳೆ ಸ್ಥಳೀಯವಾಗಿ ಸಿದ್ಧಪಡಿಸಿರುವ ಸ್ಪೋಟಕವನ್ನು ಈ ದಾಳಿಗೆ ಬಳಸಲಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗಿದ್ದು, ಅದರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಘಟನೆಯಿಂದಾಗಿ ಕೇರಳದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದ್ದು, ಹಲವು ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಕೇಂದ್ರ ತನಿಖಾ ತಂಡ ಹಾಗೂ ಭಯೋತ್ಪಾದನಾ ನಿಗ್ರಹ ದಳದ ಹಿರಿಯ ಅಧಿಕಾರಿಗಳು ಕೂಡ ಕೇರಳಕ್ಕೆ ಭೇಟಿ ನೀಡಿದ್ದು, ಇದು ಪೂರ್ವ ನಿಯೋಜಿತ ಉಗ್ರರ ಕೃತ್ಯ ಎಂದು ಅಂದಾಜಿಸಿದೆ.

ಕಳೆದ ಶುಕ್ರವಾರದಿಂದ ಈ ಸಮಾವೇಶ ನಡೆಯುತ್ತಿದ್ದು, ಇಂದು ಅಂತಿಮಗೊಳ್ಳುತ್ತಿರುವ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ಮೂಲಗಳ ಪ್ರಕಾರ, ಒಂದು ಹಾಲ್‍ನಲ್ಲಿ ಅನೇಕ ಸ್ಪೋಟಗಳು ಸಂಭವಿಸಿವೆ. ಕೆಲ ಸಮುದಾಯವನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಈಗ ದಕ್ಷಿಣ ಭಾರತದ ಹಲವು ರಾಜ್ಯಗಳಿಗೂ ಈಗ ಕೇಂದ್ರ ಸರ್ಕಾರ ಕಟ್ಟೆಚ್ಚರಕ್ಕೆ ಸೂಚನೆ ನೀಡಿದ್ದು, ಗಡಿಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಭಾರತದಲ್ಲಿ ಮಹಿಳಾ ಉದ್ಯೋಗಿಗಳ ಸಂಖ್ಯೆ ಶೇ.37ಕ್ಕೆ ಏರಿಕೆ

ಭುವನೇಶ್ವರ್, ಅ. 29-ಕಳೆದ 2022-23 ರ ಆರ್ಥಿಕ ವರ್ಷದಲ್ಲಿ ದೇಶದ ಉದ್ಯೋಗಿಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಶೇಕಡಾ 37 ಕ್ಕೆ ಏರಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಇಲ್ಲಿ ನಡೆದ ರೋಜ್‍ಗಾರ್ ಮೇಳ ದಲ್ಲಿ ಮಾತನಾಡಿದ ಅವರು ಕಳೆದ 2017-18ರಲ್ಲಿ ಈ ಪ್ರಮಾಣ ಶೇ.23ರಷ್ಟಿತ್ತು 5 ವರ್ಷದಲ್ಲಿ ಶೇ.10 ಕಿಂತ ಹೆಚ್ಚು ಏರಿಕೆಯಾಗಿದೆ ಇದರ ನಡುವೆ 2017-18ರಲ್ಲಿ ಶೇ.6ರಷ್ಟಿದ್ದ ನಿರುದ್ಯೋಗ ದರವು 2022-23ರಲ್ಲಿ ಶೇ.3.7ಕ್ಕೆ ಇಳಿದಿದೆ ಎಂದರು.

ಉದ್ಯೋಗಿಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚುತ್ತಿದೆ ಇದರ ಜೊತೆಗೆ ಮಹಿಳೆಯರು ಹೆಚ್ಚು ಕಷ್ಟಪಟ್ಟು ಕೆಲಸ ಮಾಡುತ್ತಾರೆ,ಸಮಾಜದಲ್ಲಿ ಸಮತೋಲಿತ ಬೆಳವಣಿಗೆ ಕಂಡುಬಂದಿದೆ, ಎಂದು ಅವರು ಹೇಳಿದರು,
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮಹಿಳಾ ಕೇಂದ್ರಿತ ಯೋಜನೆಗಳು ಉದ್ಯೋಗಿಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಸಹಾಯ ಮಾಡಿದೆ ಎಂದು ತಿಳಿಸಿದ್ದಾರೆ.

SC-ST ಸಮುದಾಯದ ಅಭಿವೃದ್ಧಿಗಾಗಿ ಪರಿಶಿಷ್ಟ ವರ್ಗಗಳಿಗೆ ಪ್ರತ್ಯೇಕ ಸಚಿವಾಲಯ

ಕೇಂದ್ರವು ನೀತಿ ನಿರೂಪಣೆ ಮತ್ತು ನಾಯಕತ್ವದ ಪಾತ್ರಗಳಲ್ಲಿ ಮಹಿಳೆಯರಿಗೆ ಆದ್ಯತೆ ನೀಡುತ್ತಿದೆ, ಬದಲಾಗುತ್ತಿರುವ ತಂತ್ರಜ್ಞಾನಗಳಿಗೆ ಹೊಂದಿಕೊಳ್ಳಲು ಕೆಲಸ ಮಾಡುವ ಮಹಿಳೆಯರಿಗೆ ಕೌಶಲ್ಯವನ್ನು ಹೆಚ್ಚಿಸಲು ಪ್ರಾಮುಖ್ಯತೆಯನ್ನು ನೀಡಲಾಗಿತ್ತಿದೆ ಎಂದು ಸಚಿವರು ಒತ್ತಿ ಹೇಳಿದರು. ಎಂದು ಅವರು ಹೇಳಿದರು.ಕಾರ್ಯಕ್ರಮದಲ್ಲಿ ಸಚಿವರು 172 ಮಂದಿಗೆ ವಿವಿಧ ಕೇಂದ್ರೀಯ ಸಂಸ್ಥೆಗಳ ನೇಮಕಾತಿ ಪತ್ರಗಳನ್ನು ವಿತರಿಸಿದರು.

ಸರ್ಕಾರಿ ಸೇವೆ ಪರೀಕ್ಷೆಯಲ್ಲಿ ವಂಚನೆ : 10 ಜನರ ಬಂಧನ

ಲಕ್ನೋ, ಅ.29- ರಾಜ್ಯಸರ್ಕಾರಿ ಸೇವೆಗಳ ಆಯ್ಕೆಗಾಗಿ ಉತ್ತರ ಪ್ರದೇಶ ಸಾರ್ವಜನಿಕ ಸೇವಾ ಆಯೋಗ ನಡೆಸಿದ ಪ್ರಾಥಮಿಕ ಅರ್ಹತಾ ಪರೀಕ್ಷೆಯಲ್ಲಿ ಅಕ್ರಮದಲ್ಲಿ ಬಾಗಿಯಾಗಿದ್ದ ಆರೋಪದ ಮೇಲೆ ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆ 10 ಜನರನ್ನು ಬಂಧಿಸಿದೆ.

ಕೇಂದ್ರವೊಂದರಲ್ಲಿ ಆರೋಪಿಗಳು ಪರೀಕ್ಷೆಯ ಸಮಯದಲ್ಲಿ ಬ್ಲೂಟೂತ್ ಸಾಧನಗಳು ಸೇರಿದಂತೆ ವಿವಿಧ ಅಕ್ರಮ ವಿಧಾನಗಳನ್ನು ಬಳಸುತ್ತಿರುವುದು ಕಂಡುಬಂದಿದೆ. ಎಸ್‍ಟಿಎಫ್ ಅಧಿಕಾರಿಗಳು ತಿಳಿಸಿದ್ದಾರೆ.

ಬಂಧಿತರ ಗ್ಯಾಂಗ್ ನಾಯಕರಾದ ದೀಪಕ್ ಕುಮಾರ್ ಪಟೇಲ್ ಮತ್ತು ಅಜಯ್ ಕುಮಾರ್ ಪಟೇಲ್ ಎಂದು ಗುರುತಿಸಲಾಗಿದೆ. ದೀಪಕ್‍ನನ್ನು ಪ್ರತಾಪ್‍ಗಢದಲ್ಲಿ ಅಜಯ್ ಕುಮಾರ್ ಪಟೇಲ್‍ನನ್ನು ಪ್ರಯಾಗ್‍ರಾಜ್‍ನಲ್ಲಿ ಬಂಧಿಸಲಾಗಿದೆ ಇತರೆ ಆರೋಪಿಗಳಾದ ದಿಲೀಪ್, ಸುಜಿತ್ ಕುಮಾರ್, ಪಂಕಜ್ ಕುಮಾರ್, ಜಿತೇಂದ್ರ ಕುಮಾರ್ ವರ್ಮಾ, ಅನುರಾಗ್ ಕುಮಾರ್, ರವೀಂದ್ರ ಸಿಂಗ್ ಮತ್ತು ಉದಯವೀರ್ ಸಿಂಗ್ ಲಕ್ನೋ ನಗರದಲ್ಲೇ ಸಿಕ್ಕಿಬಿದ್ದಿದ್ದಾರೆ ಎಂದು ಹೇಳಿದ್ದಾರೆ.

“ಡಿಕೆಶಿಯವರಿಗೆ 70 ಶಾಸಕರ ಬೆಂಬಲವಿದೆ, ಅವರನ್ನು ಸಿಎಂ ಮಾಡೇ ತೀರುತ್ತೇವೆ”

ವಾರಣಾಸಿಯ ಪರೀಕ್ಷಾ ಕೇಂದ್ರದ ಉಸ್ತುವಾರಿಯನ್ನು ಸಹ ಬಂಧಿಸಲಾಗಿದೆ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಕಾಯ್ಧೆ ಅಡಿ ಎಫ್‍ಐಆರ್‍ಗಳನ್ನು ದಾಖಲಿಸಿ ,ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಂಧಿತರು ಪರೀಕ್ಷೆ ಬರೆಯಲು ಕಿವಿಯೊಳಗಿನ ಬ್ಲೂಟೂತ್ ಸಾಧನವನ್ನು ಬಳಸಿ ಉಳಿದವರು ಕಾಪಿ ಮಾಡ,ಕೆಲವರಿಗೆ ಉತ್ತರ ಹೇಳಿಕೊಡಲಾಗಿದೆಎಂದು ಮೂಲಗಳು ತಿಳಿಸಿವೆ. 8 ಮೊಬೈಲ್ ಫೋನ್‍ಗಳು ಮತ್ತು ಇತರ ವಸ್ತುಗಳನ್ನು ಎಸ್‍ಟಿಎಫ್ ವಶಪಡಿಸಿಕೊಂಡಿದೆ.

ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಸಿದ್ದು-ಪರಂ ರಹಸ್ಯ ಸಭೆ

ಉತ್ತರ ಪ್ರದೇಶ ಅೀನ ಸೇವೆಗಳ ಆಯ್ಕೆ ರಾಜ್ಯದ 35 ಜಿಲ್ಲೆಗಳಾದ್ಯಂತ 1,058 ಕೇಂದ್ರಗಳಲ್ಲಿ ಪರೀಕ್ಷೆಯನ್ನು ನಡೆಸಿತು.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-10-2023)

ನಿತ್ಯ ನೀತಿ : ಸಂಸ್ಕಾರ, ಸಂಸ್ಕøತಿಗಳು ನಮ್ಮ ನಡವಳಿಕೆಗಳನ್ನು ತಿದ್ದುವುದಕ್ಕಿವೆಯೇ ಹೊರತು ನಮ್ಮ ಅನ್ಯೋನ್ಯತೆಯನ್ನು ದೂರ ಮಾಡುವುದಕ್ಕಲ್ಲ.

ಪಂಚಾಂಗ ಭಾನುವಾರ 29-10-2023
ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಆಶ್ವಯುಜ ಮಾಸ / ಕೃಷ್ಣ ಪಕ್ಷ / ತಿಥಿ: ಪ್ರತಿಪದ್ / ನಕ್ಷತ್ರ: ಭರಣಿ / ಯೋಗ: ಸಿದ್ಧಿ / ಕರಣ: ಬಾಲವ

ಸೂರ್ಯೋದಯ : ಬೆ.06.12
ಸೂರ್ಯಾಸ್ತ : 05.54
ರಾಹುಕಾಲ : 4.30-6.00
ಯಮಗಂಡ ಕಾಲ : 12.00-1.30
ಗುಳಿಕ ಕಾಲ : 3.00-4.30

ರಾಶಿ ಭವಿಷ್ಯ
ಮೇಷ
: ಸ್ನೇಹಿತರು ನೀವು ಮಾಡುವ ಕೆಲಸದಲ್ಲಿ ಯಶಸ್ಸನ್ನು ಸಾಧಿಸಲು ಸಹಾಯ ಮಾಡುವರು.
ವೃಷಭ: ಇತರರೊಂದಿಗೆ ಸೇರಿ ಮಾಡುವ ಕೆಲಸದಲ್ಲಿ ಉತ್ತಮ ಲಾಭ ದೊರೆಯಲಿದೆ.
ಮಿಥುನ: ನೆರೆಹೊರೆಯವರೊಂದಿಗಿನ ಸಂಬಂಧ ಸೌಹಾರ್ದಯುತವಾಗಿರುತ್ತದೆ.

ಕಟಕ: ದಿನದ ಆರಂಭ ಉತ್ತಮವಾಗಿರಲಿದೆ. ಕೈಗೊಂಡ ಯಾವುದೇ ಕಾರ್ಯದಲ್ಲಿ ಯಶಸ್ವಿಯಾಗುತ್ತೀರಿ.
ಸಿಂಹ: ಸಹೋದ್ಯೋಗಿ ಗಳೊಂದಿಗೆ ಮಾತುಕತೆ ನಡೆಸುವಾಗ ಪದಗಳನ್ನು ಎಚ್ಚರಿಕೆಯಿಂದ ಬಳಸಿ.
ಕನ್ಯಾ: ನಿಮ್ಮ ಉಜ್ವಲ ಭವಿಷ್ಯಕ್ಕೆ ಹೊಸ ಸ್ನೇಹ ಸಹಕಾರಿಯಾಗಲಿದೆ.

ತುಲಾ: ಸಂಭಾಷಣೆ ನಡೆಸುವುದರಿಂದ ಉತ್ತಮ ರೀತಿಯ ಸಂಬಂಧಗಳು ರೂಪುಗೊಳ್ಳುತ್ತವೆ.
ವೃಶ್ಚಿಕ: ಸ್ನೇಹಿತರು ಮತ್ತು ಪರಿಚಯಸ್ಥರೊಂದಿಗೆ ಹೆಚ್ಚು ಸಮಯವನ್ನು ಕಳೆಯುತ್ತೀರಿ.
ಧನುಸ್ಸು: ಶ್ರಮ ಮತ್ತು ಅದೃಷ್ಟ ಎಲ್ಲಾ ರೀತಿಯಲ್ಲೂ ಬೆಂಬಲ ನೀಡುತ್ತದೆ.

ಮಕರ: ಹಿರಿಯರು ಹಾಗೂ ಸಜ್ಜನರನ್ನು ಗೌರವಿಸುವಿರಿ. ಉತ್ತಮ ಪ್ರಗತಿ ಸಾಧಿಸುವಿರಿ.
ಕುಂಭ: ಹಿಂದೆ ಎದುರಿಸಿದ ತೊಂದರೆಗಳು ನಿವಾರಣೆಯಾಗುತ್ತವೆ ಮತ್ತು ಸ್ಥಗಿತಗೊಂಡ ಕೆಲಸ-ಕಾರ್ಯಗಳು ಸಹ ಪ್ರಗತಿಯಾಗುತ್ತವೆ.
ಮೀನ: ಹೊಸ ಉದ್ಯೋಗಗಳು ಮತ್ತು ಉದ್ಯೋಗ ಬದಲಾವಣೆಗೆ ಇದು ಉತ್ತಮ ದಿನವಾಗಿದೆ.

SC-ST ಸಮುದಾಯದ ಅಭಿವೃದ್ಧಿಗಾಗಿ ಪರಿಶಿಷ್ಟ ವರ್ಗಗಳಿಗೆ ಪ್ರತ್ಯೇಕ ಸಚಿವಾಲಯ

ಬೆಂಗಳೂರು, ಅ.28- ಪರಿಶಿಷ್ಟ ವರ್ಗಗಳಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದರು. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ, ವರ್ಗಗಳಿಗೆ ಇದುವರೆಗೂ ಪ್ರತ್ಯೇಕ ಸಚಿವಾಲಯ ಇರಲಿಲ್ಲ ಎಂದರು.

ಸಚಿವಾಲಯ ಸ್ಥಾಪಿಸಿರುವುದರಿಂದ ಆ ವರ್ಗದ ಅಭಿವೃದ್ಧಿ ಸಾಧ್ಯವಾಗಲಿದೆ. ಎಸ್‍ಇಪಿ ಟಿಎಸ್‍ಪಿ ಹಣ ಆ ಸಮುದಾಯದ ಅಭಿವೃದ್ಧಿಗೆ ಖರ್ಚು ಆಗಬೇಕು. ಆರೇಳು ಸಾವಿರ ಇದ್ದ ಅನುದಾನವು ನಾನು ಮೊದಲ ಬಾರಿ ಅಧಿಕಾರದಿಂದ ಕೆಳಗಿಳಿಯುವ ವೇಳೆ 30 ಸಾವಿರ ಕೋಟಿ ರೂ. ಆಗಿತ್ತು. ಈಗ 34 ಸಾವಿರ ಕೋಟಿ ಹಣ ಅನುದಾನ ಇದೆ ಎಂದು ಹೇಳಿದರು.

ಬೆಂಗಳೂರು ವ್ಯಾಪ್ತಿಯ ಹೋಟೆಲ್, ಬಾರ್ ಮತ್ತು ಅಂಗಡಿಗಳಲ್ಲಿ CCTV ಕಡ್ಡಾಯ

ಹೆಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಅನುದಾನ ಹೆಚ್ಚು ಆಗಲಿಲ್ಲ. ಶೇ. 24.1 ರಷ್ಟು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಜನಸಂಖ್ಯೆ ಇದ್ದಾರೆ, ಜನಸಂಖ್ಯೆಗೆ ಅನುಗುಣವಾಗಿ ಹಣ ಇಡಲಾಗುತ್ತದೆ ಎಂದರು.

ಇಡೀ ದೇಶದಲ್ಲಿ ಕರ್ನಾಟಕ ರಾಜ್ಯದಲ್ಲೇ ಹೆಚ್ಚು ಹಣ ಈ ವರ್ಗಗಳಿಗೆ ನೀಡಲಾಗಿದೆ. ಯಾವುದೇ ಸರ್ಕಾರ ಬಂದರೂ ಕಾನೂನು ಬದಲಾವಣೆ ಇಲ್ಲ. ನಾವು 88 ಸಾವಿರ ಕೋಟಿ ರೂ. ಈ ವರ್ಗಗಳಿಗೆ ಖರ್ಚು ಮಾಡಿದ್ದೇವೆ. ಇದಕ್ಕೆ ನೀವು ಅರ್ಹರು ಹಾಗಾಗಿ ಖರ್ಚು ಮಾಡಿದ್ದೇವೆ ಎಂದು ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪುರಸ್ಕøತರ ಪ್ರತಿ ಸಾಧಕರಿಗೆ ರೂ. 5 ಲಕ್ಷ ನಗದು ಮತ್ತು 20 ಗ್ರಾಂ ಚಿನ್ನದ ಪದಕ ನೀಡಿ ಗೌರವಿಸಲಾಯಿತು.

ಇದೇ ವೇಳೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಪ್ರತ್ಯೇಕ ಸಚಿವಾಲಯಕ್ಕೆ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪುಷ್ಪಾರ್ಚಾನೆ ಮಾಡುವ ಮೂಲಕ ಮುಖ್ಯಮಂತ್ರಿ ಚಾಲನೆ ನೀಡಿದರು. ಬಳಿಕ ರಿಮೋಟ್ ಒತ್ತುವುದರ ಮೂಲಕ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ನೂತನ ಸಚಿವಾಲಯದ ಕೊಠಡಿಯನ್ನು ಉದ್ಘಾಟಿಸಿದರು.

2 ಎಸೆತದಲ್ಲಿ 21 ಸಿಡಿಸಿ ದಾಖಲೆ ಬರೆದ ಟ್ರಾವಿಸ್ ಹೆಡ್

ಕಾರ್ಯಕ್ರಮದಲ್ಲಿ ರಾಜನಹಳ್ಳಿಯ ಮಹರ್ಷಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್.ಸಿ.ಮಹದೇವಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಬಿ.ನಾಗೇಂದ್ರ, ಸಹಕಾರ ಸಚಿವ ಕೆ. ಎನ್. ರಾಜಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕ ನರೇಂದ್ರಸ್ವಾಮಿ, ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್, ಮಾಜಿ ಸಚಿವ ಆಂಜನೇಯ, ಮಾಜಿ ಸಂಸದರಾದ ಚಂದ್ರಪ್ಪ, ವಿ.ಎಸ್. ಉಗ್ರಪ್ಪ, ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

“ಡಿಕೆಶಿಯವರಿಗೆ 70 ಶಾಸಕರ ಬೆಂಬಲವಿದೆ, ಅವರನ್ನು ಸಿಎಂ ಮಾಡೇ ತೀರುತ್ತೇವೆ”

ಬೆಂಗಳೂರು, ಅ.28- ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕಾಂಗ್ರೆಸ್‍ನಲ್ಲಿನ 70 ಶಾಸಕರ ಬೆಂಬಲ ಇದೆ ಎಂದು ಪುನರುಚ್ಚರಿಸಿರುವ ಚೆನ್ನಗಿರಿ ಕ್ಷೇತ್ರದ ಶಾಸಕ ಶಿವಗಂಗಾ ಬಸವರಾಜ್, ಈ ಐದು ವರ್ಷದ ಅವಧಿಯಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡೇ ಮಾಡುತ್ತೇವೆ ಎಂದಿದ್ದಾರೆ.

ಅಧಿಕಾರ ಹಂಚಿಕೆ, ಪಕ್ಷ ಹಾಗೂ ಸರ್ಕಾರದ ಕುರಿತಂತೆ ಶಾಸಕರು ಹಾಗೂ ನಾಯಕರು ಬಹಿರಂಗ ಹೇಳಿಕೆ ನೀಡಬಾರದು ಎಂದು ಇಂದು ಬೆಳಗ್ಗೆಯಷ್ಟೆ ಕಟ್ಟಪ್ಪಣೆ ಮಾಡಿದರು. ಅದರ ಹೊರತಾಗಿಯೂ ಮತ್ತೆ ಶಿವಗಂಗಾ ಬಸವರಾಜ್ ಸುದ್ದಿಗಾರರೊಂದಿಗೆ ಮಾತನಾಡಿದ್ದು ಡಿ.ಕೆ.ಶಿವಕುಮಾರ್ ನೂರಕ್ಕೆ ನೂರರಷ್ಟು ಮುಖ್ಯಮಂತ್ರಿಯಾಗೇ ಆಗುತ್ತಾರೆ ಎಂದು ಹೇಳಿದ್ದಾರೆ.

ಪಾಕ್ ವಿರುದ್ಧ ಗೆದ್ದು ‘ಜೈ ಹನುಮಾನ್’ ಎಂದ ದಕ್ಷಿಣ ಆಫ್ರಿಕಾ ಆಟಗಾರ

ನಾನು ಮತ್ತು ನಮ್ಮ ಸ್ನೇಹಿತರು ಬಣ ರಾಜಕೀಯದ ಬಗ್ಗೆ ಮಾತನಾಡಿಲ್ಲ. ನಾವು ಹೇಳಿರುವುದು ಒಂದೇ ಬಣ, ಕಾಂಗ್ರೆಸ್ ಬಣ. 60ರಿಂದ 70 ಶಾಸಕರು ಡಿ.ಕೆ.ಶಿವಕುಮಾರ್ ಬೆಂಬಲಕ್ಕೆ ಇದ್ದೇವೆ ಎಂದು ನಾನು ಸಹಜವಾಗಿ ಹೇಳಿದ್ದೇನೆ. ಉಳಿದವರ ಬೆಂಬಲ ಇಲ್ಲ ಎಂದಲ್ಲ. 135 ಶಾಸಕರು ಡಿ.ಕೆ.ಶಿವಕುಮಾರ್ ಅವರ ಬೆಂಬಲಕ್ಕೆ ಇದ್ದಾರೆ. ಇದರಲ್ಲಿ ಹಿರಿಯರು, ಕಿರಿಯರು ಎಂಬುದಿಲ್ಲ ಎಂದರು.

ಪ್ರಮುಖವಾಗಿ ನಮ್ಮ ಚುನಾವಣೆಯ ಸಂದರ್ಭದಲ್ಲಿ ಟಿಕೆಟ್ ಕೊಟ್ಟು, ಕ್ಷೇತ್ರಕ್ಕೆ ಬಂದು ಪ್ರಚಾರ ಮಾಡಿ ಗೆಲ್ಲಿಸಿದ ಡಿ.ಕೆ.ಶಿವಕುಮಾರ್ ಅವರ ಪರವಾಗಿ 70 ಶಾಸಕರಿದ್ದೇವೆ ಎಂದು ಹೇಳುವುದರಲ್ಲಿ ತಪ್ಪಿಲ್ಲ. ಪರ-ವಿರೋಧ ಎಂದು ಹೇಳಲು ನಾವು ಬಯಸುವುದಿಲ್ಲ. ನಾವು ಡಿ.ಕೆ.ಶಿವಕುಮಾರ್ ಪರವಾಗಿದ್ದೇವೆ ಎಂದು ಹೇಳಿದ್ದೇವೆಯೇ ಹೊರತು ಮತ್ತೊಬ್ಬರಿಗೆ ವಿರುದ್ಧವಾಗಿದ್ದೇವೆ ಎಂದು ಹೇಳಿಲ್ಲ. ನಾವು ಎಲ್ಲರೂ ಒಂದು ಎಂದರು.

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ. ನಾನು ಮೊದಲೇ ಈ ಬಗ್ಗೆ ಹೇಳಿದ್ದೇನೆ. ಚುನಾವಣೆ ಫಲಿತಾಂಶದ ಬಳಿಕ ಅವರೇ ಮುಖ್ಯಮಂತ್ರಿಯಾಗಬೇಕಿತ್ತು. ಕೆಪಿಸಿಸಿ ಅಧ್ಯಕ್ಷರೇ ಮುಖ್ಯಮಂತ್ರಿಯಾಗುವ ವಾಡಿಕೆ ಕಾಂಗ್ರೆಸ್‍ನಲ್ಲಿ ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಆದರೆ ಈ ಬಾರಿ ಸಿದ್ದರಾಮಯ್ಯಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ.

ಕೊನೆಯ ಅವಕಾಶ ಎಂದು ಮತ್ತು ಹಿಂದಿನ ಐದು ವರ್ಷ ಮುಖ್ಯಮಂತ್ರಿಯಾಗಿ ಒಳ್ಳೆಯ ಆಡಳಿತ ನೀಡಿದ್ದಾರೆ ಎಂಬ ಕಾರಣಕ್ಕೆ ಎಲ್ಲಾ ಶಾಸಕರು ಗೌರವಯುತವಾಗಿ ಬೆಂಬಲ ನೀಡಿದ್ದರು. ಅದನ್ನು ಪರಿಗಣಿಸಿ ಹೈಕಮಾಂಡ್ ಕೂಡ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಿದೆ. ತದನಂತರ ಡಿ.ಕೆ.ಶಿವಕುಮಾರ್ ಅವರನ್ನು ನಾವೇಲ್ಲಾ ಸೇರಿ ನೂರಕ್ಕೆ ನೂರು ಮುಖ್ಯಮಂತ್ರಿ ಮಾಡೇ ಮಾಡುತ್ತೇವೆ ಎಂದರು.

ಸಹಜವಾಗಿ ಅಧಿಕಾರದ ಅವಧಿಯನ್ನು ಎರಡು ಭಾಗವಾಗಿ ವಿಂಗಡಿಸುತ್ತೇವೆ. ಐದು ವರ್ಷ ಇದ್ದರೆ ಅದರಲ್ಲಿ ಎರಡುವರೆ ವರ್ಷ ಅಧಿಕಾರ ಹಂಚಿಕೆಯಾಗುವ ಸಾಧ್ಯತೆ ಇರುತ್ತದೆ. ಆ ಹಿನ್ನೆಲೆಯಲ್ಲಿ ಈ ಐದು ವರ್ಷದ ಒಳಗೆ ಡಿ.ಕೆ.ಶಿವಕುಮಾರ್‍ರನ್ನು ಮುಖ್ಯಮಂತ್ರಿ ಮಾಡುತ್ತೇವೆ. ಪಕ್ಷ ಸಂಘಟನೆ ಮಾಡಿ ಡಿ.ಕೆ.ಶಿವಕುಮಾರ್ ನಮ್ಮನ್ನು ಗೆಲ್ಲಿಸಿದ್ದಾರೆ ಎಂಬ ಭಾವನೆ ಇರುವ ಎಲ್ಲರೂ ಅವರಿಗೆ ಬೆಂಬಲವಾಗಿದ್ದಾರೆ ಎಂದಿದ್ದಾರೆ.

2 ಎಸೆತದಲ್ಲಿ 21 ಸಿಡಿಸಿ ದಾಖಲೆ ಬರೆದ ಟ್ರಾವಿಸ್ ಹೆಡ್

ಧರ್ಮಶಾಲಾ, ಅ. 28- ಗಾಯದ ಸಮಸ್ಯೆ ಯಿಂದ ಬಳಲಿ 2023ರ ಏಕದಿನ ವಿಶ್ವಕಪ್ ಟೂರ್ನಿಯ ಆರಂಭಿಕ 5 ಪಂದ್ಯಗಳಿಂದ ಹೊರಗುಳಿದಿದ್ದ ಆಸ್ಟ್ರೇಲಿಯಾದ ಸ್ಪೋಟಕ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಅವರು 2 ಮಹತ್ತರ ದಾಖಲೆ ಬರೆಯುವ ಮೂಲಕ ಬಲವಾಗಿ ಕಮ್ ಬ್ಯಾಕ್ ಮಾಡಿದ್ದಾರೆ.

2 ಎಸೆತಗಳಲ್ಲಿ 21 ರನ್ ಸಿಡಿಸಿದ ಟ್ರಾವಿಸ್ ಹೆಡ್:
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪರ ಸ್ಪೋಟಕ ಆಟಗಾರರಾದ ಡೇವಿಡ್ ವಾರ್ನರ್ ಹಾಗೂ ಟ್ರಾವಿಸ್ ಹೆಡ್ ಆರಂಭಿಕ 2 ಓವರ್‍ಗಳಲ್ಲಿ ಎಚ್ಚರಿಕೆ ಆಟ ಪ್ರದರ್ಶಿಸಿದರು. ಆದರೆ 3ನೇ ಓವರ್‍ನಲ್ಲಿ ನ್ಯೂಜಿಲೆಂಡ್‍ನ ವೇಗಿ ಮ್ಯಾಟ್ ಹೆನ್ರಿ ಓವರ್‍ನಲ್ಲಿ 2 ನೋಬಾಲ್‍ನ ಲಾಭ ಪಡೆದ ಟ್ರಾವಿಸ್ ಹೆಡ್ ನೋ ಬಾಲ್ ಎಸೆತದಲ್ಲಿ 2 ಭರ್ಜರಿ ಸಿಕ್ಸರ್ ಸಿಡಿಸುವ ಮೂಲಕ ಆಸ್ಟ್ರೇಲಿಯಾ 2 ಎಸೆತಗಳಲ್ಲೇ 21 ರನ್ ಗಳಿಸಿ ವಿಶ್ವದಾಖಲೆ ಬರೆಯಲು ವಾರ್ನರ್‍ರೊಂದಿಗೆ ಕೈಜೋಡಿಸಿದರು.

ಸರ್ಕಾರ ಬೀಳಿಸಲು ಷಡ್ಯಂತ್ರ, ಕಾಂಗ್ರೆಸ್ ನಾಯಕರಿಗೆ ಡಿಕೆಶಿ ಖಡಕ್ ವಾರ್ನಿಂಗ್

59 ಎಸೆತಗಳಲ್ಲೇ ಶತಕ:
ಧರ್ಮಶಾಲಾದ ಬ್ಯಾಟಿಂಗ್ ಪಿಚ್‍ನಲ್ಲಿ ಸಿಡಿಲಬ್ಬರದ ಪ್ರದರ್ಶನ ತೋರಿದ ಟ್ರಾವಿಸ್ ಹೆಡ್ 59 ಎಸೆತಗಳಲ್ಲೇ ಶತಕ ಸಿಡಿಸುವ ಮೂಲಕ ಮತ್ತೊಂದು ವಿಶ್ವದಾಖಲೆ ನಿರ್ಮಿಸಿದರು. ನೆದರ್‍ಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್‍ವೆಲ್ 40 ಎಸೆತಗಳಲ್ಲೇ ಶತಕ ಸಿಡಿಸಿ ವಿಶ್ವದಾಖಲೆ ಬರೆದಿದ್ದರೆ, ದಕ್ಷಿಣ ಆಫ್ರಿಕಾದ ಐಡೆನ್ ಮ್ಯಾರ್ಕಮ್ ( 48 ಎಸೆತ), ಆಸೀಸ್‍ನ ಟ್ರಾವಿಸ್ ಹೆಡ್ (59 ಎಸೆತ), ಹರಿಣ ನಾಡಿನ ಹೆನ್ರಿಚ್ ಕ್ಲಾಸೆನ್ ( 61 ಎಸೆತ), ರೋಹಿತ್ ಶರ್ಮಾ (63 ಎಸೆತ) ವೇಗದ ಶತಕ ಸಿಡಿಸಿದ ಟಾಪ್ 5 ಬ್ಯಾಟರ್‍ಗಳಾಗಿದ್ದಾರೆ.