Thursday, November 6, 2025
Home Blog Page 1867

ಬೆಳಗಾವಿಯ ಬೆಂಕಿ ತಣಿಸಲು ಹೈಕಮಾಂಡ್ ಮೊರೆ

ಬೆಂಗಳೂರು,ಅ.23-ರಾಜ್ಯದ ರಾಜಕಾರಣದಲ್ಲಿ ಸಣ್ಣದಾಗಿ ಹೊಗೆಯಾಡಲಾರಂಭಿಸಿರುವ ಬೆಳಗಾವಿಯ ಬೆಂಕಿ ರಾಜಕಾರಣವನ್ನು ಆರಂಭದಲ್ಲೇ ತಣಿಸಲು ಹೈಕಮಾಂಡ್ ಮಧ್ಯಪ್ರವೇಶ ಮಾಡಬೇಕೆಂದು ಕಾಂಗ್ರೆಸಿಗರು ಒತ್ತಾಯಿಸಿದ್ದಾರೆ. ಕಳೆದ ಒಂದು ವಾರದಿಂದೀಚೆಗೆ ಹೊಗೆಯಾಡುತ್ತಿರುವ ಬೆಳಗಾವಿಯ ಬೇಗುದಿ ರಾಜ್ಯಾದ್ಯಂತ ವ್ಯಾಪಿಸಿ ಸಮಸ್ಯೆ ಸೃಷ್ಟಿಸುವ ಮೊದಲೇ ಎಚ್ಚೆತ್ತುಕೊಳ್ಳಬೇಕು. ಜಿಲ್ಲಾ ರಾಜಕಾರಣದಲ್ಲಿ ಗೊಂದಲ ಸೃಷ್ಟಿಸುತ್ತಿರುವವರಿಗೆ ಕಡಿವಾಣ ಹಾಕಬೇಕೆಂದು ಹಲವು ನಾಯಕರು ಹೈಕಮಾಂಡ್‍ಗೆ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೆಳಗಾವಿಯಲ್ಲಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸತೀಶ್ ಜಾರಕಿಹೊಳಿ ನಡುವೆ ಅಸಮಾಧಾನಗಳು ತಲೆ ಎತ್ತಿವೆ. ಪಿಎಲ್‍ಡಿ ಬ್ಯಾಂಕ್ ಚುನಾವಣೆಯಿಂದ ಆರಂಭಗೊಂಡು ಅಧಿಕಾರಿಗಳ ವರ್ಗಾವಣೆ, ವಿವಿಧ ನಿಗಮ ಮಂಡಳಿಗಳ ನೇಮಕಾತಿ ಸೇರಿದಂತೆ ಹಲವು ವಿಚಾರಣೆಗಳಿಗೆ ಪರಸ್ಪರ ಅಸಹಕಾರಗಳು ಕಂಡುಬಂದಿವೆ.

ಇಬ್ಬರು ತಮ್ಮ ಮೌನ ದೌರ್ಬಲ್ಯವಲ್ಲ ಎಂಬ ಸಂದೇಶದ ಮೂಲಕ ಸಂಘರ್ಷದ ರಾಜಕಾರಣಕ್ಕೆ ಮುನ್ನುಡಿ ಬರೆದಿದ್ದಾರೆ. ಇದಕ್ಕೆ ತುಪ್ಪ ಸುರಿಯುವಂತೆ ಕೆ.ಎನ್.ರಾಜಣ್ಣ, ಬಸವರಾಜರಾಯರೆಡ್ಡಿ, ಎಂ.ಬಿ.ಪಾಟೀಲ್ ಸೇರಿದಂತೆ ಹಲವು ನಾಯಕರು ಒಡಕಿನ ಧ್ವನಿಯೆತ್ತಿದ್ದಾರೆ.

ವಿಶ್ವವಿಖ್ಯಾತ ಜಂಬೂ ಸವಾರಿಗೆ ಸಾಂಸ್ಕೃತಿಕ ನಗರಿ ಸಜ್ಜು

ಪರಿಸ್ಥಿತಿ ಕೈಮೀರುತ್ತಿರುವುದನ್ನು ಕುರಿತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಕ್ಷದ ನಾಯಕರುಗಳ ಬಹಿರಂಗ ಹೇಳಿಕೆಗಳಿಗೆ ಕಡಿವಾಣ ಹಾಕಿದ್ದಾರೆ. ಅದರ ಹೊರತಾಗಿಯೂ ಸಚಿವ ಸ್ಥಾನದ ಆಕಾಂಕ್ಷಿಗಳು ಪದೇಪದೇ ಮಾತನಾಡುತ್ತಲೇ ಇರುವುದು ಮುಜುಗರ ಉಂಟುಮಾಡಿದೆ.

ಡಿ.ಕೆ.ಶಿವಕುಮಾರ್ ಅವರ ಬೆಳಗಾವಿ ಪ್ರವಾಸ ಉದ್ದೇಶಪೂರ್ವಕವಾಗಿಯೇ ಇದ್ದು, ಜಾರಕಿಹೊಳಿ ಸಹೋದರರ ಕುಟುಂಬಕ್ಕೆ ಸವಾಲೆಸೆದಿದೆ ಎಂದು ಪರಿಭಾವಿಸಲಾಗಿದೆ. ಈ ಹಿಂದೆ ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಡಿ.ಕೆ.ಶಿವಕುಮಾರ್ ಅವರ ಹಸ್ತಕ್ಷೇಪದಿಂದಾಗಿಯೇ ಜೆಡಿಎಸ್, ಕಾಂಗ್ರೆಸ್ ಸರ್ಕಾರ ಪತನವಾಗಿತ್ತು. ಅನಂತರ ತಪ್ಪನ್ನು ತಿದ್ದಿಕೊಂಡಿದ್ದ ಕಾಂಗ್ರೆಸ್ ನಾಯಕರು ಜಿಲ್ಲೆಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರತಿಹಂತದಲ್ಲೂ ನಿರ್ಣಯ ಕೈಗೊಳ್ಳುತ್ತಾ ಬಂದರು.

ಪರಿಸ್ಥಿತಿ ಸುಧಾರಿಸುತ್ತಿರುವ ಹಂತದಲ್ಲೇ ಲಕ್ಷ್ಮಿ ಹೆಬ್ಬಾಳ್ಕರ್‍ರವರು ಹಿರಿಯ ನಾಯಕ ಜಾರಕಿಹೊಳಿ ಸೆಡ್ಡು ಹೊಡೆಯುವ ಪ್ರಯತ್ನ ಮಾಡಿದ್ದಾರೆ. ಅದಕ್ಕೆ ಡಿ.ಕೆ.ಶಿವಕುಮಾರ್‍ರವರ ಬೆಂಬಲವಿದೆ ಎಂಬುದು ಬಹಳಷ್ಟು ನಾಯಕರನ್ನು ಕೆರಳಿಸಿದೆ. ಹೀಗಾಗಿ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸುವ ಸತೀಶ್ ಜಾರಕಿಹೊಳಿಯವರು ಪಕ್ಷಕ್ಕೆ ತಾವು ಸಾಕಷ್ಟು ಹೊಂದಾಣಿಕೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದರು. ಮತ್ತೂ ಒಂದು ಹೆಜ್ಜೆ ಮುಂದೆ ಹೋಗಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಮೀರಿ ನಾವು ಬೆಳೆದಿದ್ದೇವೆ, ಅವರು ನಮಗೆ ಸ್ರ್ಪಧಿ ಅಲ್ಲ ಎಂಬ ಉದಾಸೀನದ ಮಾತುಗಳನ್ನಾಡಿದ್ದಾರೆ.

ಇದಕ್ಕೆ ಪ್ರತ್ಯುತ್ತರಿಸಿರುವ ಲಕ್ಷ್ಮಿ ಹೆಬ್ಬಾಳ್ಕರ್, ತಮ್ಮ ಮೌನ ಕೂಡ ದೌರ್ಬಲ್ಯ ಅಲ್ಲ ಎಂದು ತಿರುಗೇಟು ನೀಡಿರುವುದು ಕುತೂಹಲಕಾರಿಯಾಗಿದೆ. ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಬೆಳಗಾವಿಗೆ ಆಗಮಿಸಿದ ವೇಳೆ ಸ್ಥಳೀಯ ಶಾಸಕರೊಬ್ಬರೂ ಕೂಡ ಅವರ ಜೊತೆಗಿಲ್ಲದಿರುವುದು ಹಲವು ಅನುಮಾನಗಳನ್ನು ಹುಟ್ಟಿಹಾಕಿತ್ತು. ಆದರೆ ಎಲ್ಲಾ ಶಾಸಕರು ದಸರಾ ಹಬ್ಬದ ಸಂಭ್ರಮದಲ್ಲಿದ್ದು, ಅಧ್ಯಕ್ಷರ ಭೇಟಿ ದಿಢೀರ್ ನಿಗದಿಯಾದ್ದರಿಂದ ಅವರನ್ನು ಬರಮಾಡಿಕೊಳ್ಳಲು ಯಾರೂ ಹೋಗಿರಲಿಲ್ಲ ಎಂಬ ಸಬೂಬು ಹೇಳಲಾಗಿದೆ.

ಮಣಿಪುರದಲ್ಲಿ ಸ್ಪೋಟಕಗಳೊಂದಿಗೆ ಉಗ್ರನ ಬಂಧನ

ವಾಸ್ತವವಾಗಿ ಡಿ.ಕೆ.ಶಿವಕುಮಾರ್‍ರ ಬೆಳಗಾವಿಯಲ್ಲನ ಕಾರ್ಯಕ್ರಮ ಸುಮಾರು 15 ದಿನಗಳ ಹಿಂದೆಯೇ ನಿಗದಿಯಾಗಿತ್ತು. ಕೊನೆ ಹಂತದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸತೀಶ್ ಜಾರಕಿಹೊಳಿ ಅವರ ನಡುವಿನ ಮುಸುಕಿನ ಗುದ್ದಾಟ ತೀವ್ರವಾಗಿದ್ದರಿಂದ ಡಿ.ಕೆ.ಶಿವಕುಮಾರ್ ಅವರು ಜಿಲ್ಲೆಗೆ ಭೇಟಿ ನೀಡಬಾರದು ಎಂಬ ಸಂದೇಶವನ್ನು ಸತೀಶ್ ಜಾರಕಿಹೊಳಿ ರವಾನಿಸಿದ್ದರು ಎನ್ನಲಾಗಿದೆ.

ಅದನ್ನು ಮೀರಿ ಆಗಮಿಸಿದ್ದರಿಂದಾಗಿ ಸ್ಥಳೀಯ ಶಾಸಕರನ್ನು ಡಿ.ಕೆ.ಶಿವಕುಮಾರ್ ಅವರ ಭೇಟಿಯಿಂದ ದೂರ ಇರುವಂತೆ ಸತೀಶ್ ಜಾರಕಿಹೊಳಿ ನೋಡಿಕೊಂಡರು ಎಂದು ಹೇಳಲಾಗಿದೆ. ಈ ಸಂಘರ್ಷದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಂಡೂ ಕಾಣದಂತೆ ಜಾಣ ಮೌನಕ್ಕೆ ಶರಣಾಗಿದ್ದಾರೆ.

ಇತ್ತ ಕೆಲವು ಶಾಸಕರು ಡಿ.ಕೆ.ಶಿವಕುಮಾರ್‍ರಿಗೆ 70 ಕ್ಕೂ ಅಕ ಶಾಸಕರ ಬೆಂಬಲವಿದೆ ಎಂದು ಹೇಳುವ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ. ದಿನೇದಿನೇ ಬೆಳಗಾವಿಯ ರಾಜಕಾರಣದ ಕಿಚ್ಚು ಹೆಚ್ಚುತ್ತಿದ್ದು, ಇದನ್ನು ಆರಂಭದಲ್ಲೇ ತಣಿಸಲು ಹೈಕಮಾಡ್ ಮಧ್ಯಪ್ರವೇಶ ಅನಿವಾರ್ಯ ಎಂಬ ಅಭಿಪ್ರಾಯಗಳು ಕೇಳಿಬರುತ್ತಿವೆ.

ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ ಕಾಂಗ್ರೆಸ್ ಸರ್ಕಾರ

ಬೆಂಗಳೂರು,ಅ.23- ಹಿಂದಿನ ಬಿಜೆಪಿ ಸರ್ಕಾರದಲ್ಲಿ ಭಾರೀ ಸದ್ದು ಮಾಡಿದ್ದ ಹಿಜಾಬ್ ಮತ್ತೆ ಮುನ್ನೆಲೆಗೆ ಬಂದಿದೆ. ನೀಟ್ ಪರೀಕ್ಷೆಯಲ್ಲಿ ಹಿಜಾಬ್ ಧರಿಸಿ ಭಾಗವಹಿಸುವುದನ್ನು ಅನುಮತಿಸಿರುವುದಕ್ಕೆ ಕೆಲವು ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸುತ್ತಿವೆ.

ಈ ಹಿಂದೆ ತರಗತಿಗಳಲ್ಲಿ ಹಿಜಾಬ್ ಧರಿಸುವುದನ್ನು ವಿರೋಧಿಸಿ ಭಾರೀ ಪ್ರಮಾಣದ ಪ್ರತಿಭಟನೆಗಳಾಗಿದ್ದವು. ಇದು ಹಂತಹಂತವಾಗಿ ಬೆಳೆದು ಹಲವು ರೀತಿಯ ಕೋಮು ಸ್ವರೂಪಗಳನ್ನು ಪಡೆದುಕೊಂಡಿತ್ತು. ಸರ್ಕಾರ ಬದಲಾದ ಬಳಿಕ ಒಂದಷ್ಟು ದಿನ ಈ ರೀತಿಯ ಗದ್ದಲಗಳಿಗೆ ಕಡಿವಾಣ ಬಿದ್ದಿತ್ತು. ಆದರೆ ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೀಟ್ ಪರೀಕ್ಷೆಯಲ್ಲಿ ಭಾಗವಹಿಸುವುದಕ್ಕೆ ಹಿಜಾಬ್ ಧರಿಸಲು ಅವಕಾಶ ನೀಡಿದೆ ಎಂಬ ಹಿನ್ನೆಲೆಯಲ್ಲಿ ಪ್ರತಿಭಟನೆಗಳು ಮತ್ತೆ ಮುನ್ನೆಲೆಗೆ ಬರುತ್ತಿವೆ.

ವಿಶ್ವವಿಖ್ಯಾತ ಜಂಬೂ ಸವಾರಿಗೆ ಸಾಂಸ್ಕೃತಿಕ ನಗರಿ ಸಜ್ಜು

ಈ ಬಗ್ಗೆ ಪ್ರತಿಕ್ರಿಯಿಸಿರುವ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಪ್ರತಿಭಟನೆ ಮಾಡುತ್ತಿರುವವರು ನೀಟ್ ಪರೀಕ್ಷೆಯ ನಿಯಮಾವಳಿಗಳನ್ನು ಪರಿಶೀಲನೆ ಮಾಡಬೇಕು. ಇದನ್ನು ಏಕೆ ವಿವಾದ ಮಾಡಲಾಗುತ್ತಿದೆ ಎಂದು ಗೊತ್ತಿಲ್ಲ. ನೀಟ್ ಪರೀಕ್ಷೆಯಲ್ಲಿ ಹಿಜಾಬ್ ಧರಿಸಲು ಅವಕಾಶವಿದೆ. ನೀಟ್ ಪರೀಕ್ಷೆಯಲ್ಲಿರುವ ಮಾರ್ಗಸೂಚಿಗಳನ್ನೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅನುಸರಣೆ ಮಾಡುತ್ತಿದೆ. ನಾವು ವಿಶೇಷವಾದ ಯಾವುದೇ ನಿಯಮಾವಳಿಗಳನ್ನೂ ರೂಪಿಸಿಲ್ಲ ಮತ್ತು ಯಾವುದೇ ತಪ್ಪು ಮಾಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಪ್ರತಿಭಟನೆ ಮಾಡುವವರು ಮೊದಲು ನೀಟ್ ಪರೀಕ್ಷೆಯ ನಿಯಮಾವಳಿಗಳನ್ನು ಅಧ್ಯಯನ ಮಾಡಲಿ, ನಂತರ ಅವರು ಏಕೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ತಿಳಿಸಲಿ ಎಂದು ತಿರುಗೇಟು ನೀಡಿದರು.

ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್

ಬೆಂಗಳೂರು,ಅ.23- ಕಾನೂನು ಬಹಿರವಾಗಿ ಕುತ್ತಿಗೆಯಲ್ಲಿ ಹುಲಿಯ ಉಗುರು ಇರುವ ಲಾಕೆಟ್ ಧರಿಸಿಕೊಂಡ ಹಿನ್ನಲೆಯಲ್ಲಿ ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10ರಲ್ಲಿ ಸ್ರ್ಪಧಿ ವರ್ತೂರು ಸಂತೋಷ್ ಅವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.

ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ರ್ಪಯೊಬ್ಬರನ್ನು ಬಂಸಿರುವ ಪ್ರಕರಣ ಇದಾಗಿದೆ. ಹುಲಿ ಉಗುರಿರುವ ಪೆಂಡೆಂಟ್ ಹಾಕಿಕೊಂಡ ಅವರನ್ನು ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಬಂಧಿಸಲಾಗಿದೆ. ಜಾಮೀನು ರಹಿತ ಸೆಕ್ಷನ್‍ಗಳಡಿ ಎಫ್‍ಐಆರ್ ದಾಖಲಿಸಲಾಗಿದೆ.

ಹುಲಿ ಉಗುರುಗಳನ್ನು ಹೊಂದುವುದು ಕಾನೂನಿಗೆ ವಿರುದ್ಧವಾಗಿದೆ. ಅಲ್ಲದೆ ಉಗುರುಗಳನ್ನು ಮಾರಾಟ ಮಾಡಲು ಅಥವಾ ಖರೀದಿಸುವಂತಿಲ್ಲ. ಬಿಗ್ ಬಾಸ್ ಪ್ರದರ್ಶನದ ವೇಳೆ ಅವರು ಲಾಕೆಟ್ ಧರಿಸಿರುವುದು ಕಂಡುಬಂದಿದೆ. ಇದನ್ನು ಆಧರಿಸಿ ಎಫ್‍ಐಆರ್ ದಾಖಲಾಗಿದ್ದು, ಅರಣ್ಯಾಧಿಕಾರಿಗಳು ಆತನನ್ನು ಬಂಧಿಸಿದ್ದಾರೆ.
ತಡರಾತ್ರಿ ಬಿಗ್ ಬಾಸ್ ಮನೆಗೆ ತಲುಪಿದ ಅರಣ್ಯ ಇಲಾಖೆ ಪರೀಕ್ಷೆ ನಡೆಸಲು ಸ್ರ್ಪಧಿಯಿಂದ ಸರಪಳಿಯನ್ನು ಹೊರಗೆ ತರುವಂತೆ ಸೂಚಿಸಿದೆ. ಪರಿಶೀಲನೆ ಬಳಿಕ ಇದು ಅಸಲಿ ಹುಲಿ ಮೊಳೆ ಎಂದು ಅಧಿಕಾರಿಗಳು ಖಚಿತಪಡಿಸಿಕೊಂಡಿದ್ದಾರೆ. ನಂತರ ಬಿಗ್ ಬಾಸ್ ಆಯೋಜಕರಿಗೆ ಸ್ರ್ಪಧಿಯನ್ನು ಹಸ್ತಾಂತರಿಸುವಂತೆ ಕೇಳಿಕೊಂಡರು.

ಸಂಸದೆ ಶೋಭಾ ಕರಂದ್ಲಾಜೆಗೆ ಬಿಜೆಪಿ ರಾಜ್ಯಾಧ್ಯಕ್ಷೆ ಪಟ್ಟ..?

ಬಿಗ್ ಬಾಸ್ ಮನೆಯಿಂದ ಹೊರ ಕರೆತಂದು ಬಂಧಿಸಲಾಗಿದ್ದು, ಸದ್ಯ ರಾಮೋಹಳ್ಳಿ ಅರಣ್ಯಾಧಿಕಾರಿಗಳ ಕಷ್ಟಡಿಯಲ್ಲಿದ್ದಾರೆ. ಆದರೆ, ವಾಹಿನಿ ಕಡೆಯಿಂದ ಈ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಕುತ್ತಿಗೆಯಲ್ಲಿ ಹುಲಿ ಉಗುರು ಇರುವ ಲಾಕೆಟ್ ಹಾಕಿಕೊಂಡಿದ್ದರು. ಈ ಕುರಿತು ಎಫ್‍ಐಆರ್ ದಾಖಲಾಗಿತ್ತು. ಈ ಹಿನ್ನೆಲೆ ವರ್ತೂರು ಸಂತೋಷ್‍ನನ್ನ ಬಂಧಿಸಿರುವ ಅರಣ್ಯಾಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ವರ್ತೂರು ಸಂತೋಷ್ ಮೂಲತ: ರೈತರಾಗಿದ್ದಾರೆ. ಅವರು ಹಲವು ಪ್ರಾಣಿಗಳನ್ನು ಸಾಕಿದ್ದಾರೆ. ಜೊತೆಗೆ ಕೈ ಹಾಗೂ ಕತ್ತಿಗೆ ಹಲವಾರು ಚಿನ್ನದ ಆಭರಣಗಳನ್ನು ಹಾಕಿರುತ್ತಾರೆ. ಅಖಿಲ ಭಾರತ ಹಳ್ಳಿಕಾರ್ ತಳಿ ಸಂರಕ್ಷಣಾ ಸಮಿತಿಯ ಅಧ್ಯಕ್ಷರಾದ ಸಂತೋಷ್ ಸದಾ ಒಂದು ಚೈನ್ ಧರಿಸುತ್ತಿದ್ದರು. ಅದರಲ್ಲಿ ಹುಲಿಯ ಉಗುರು ಕಾಣಿಸಿದೆ.

ಈ ಕಾರಣಕ್ಕಾಗಿ ಅವರನ್ನು ವನ್ಯಜೀವಿ ಕಾಯಿದೆ ಉಲ್ಲಂಘನೆ ಮಾಡಿದ್ದರಿಂದ ಸಂತೋಷ್ ಅವರನ್ನು ಬಂಧಿಸಲಾಗಿದೆ. ವಿಚಾರಣೆ ವೇಳೆ ಹುಲಿ ಉಗುರು ಧರಿಸಿರುವುದು ಸ್ಪಷ್ಟವಾಗಿದೆ ಎಂದು ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಸ್ಪಷ್ಟಪಡಿಸಿದ್ದಾರೆ.

ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ. ಒಮ್ಮೆ ಬಿಗ್ ಬಾಸ್ ಮನೆಯಿಂದ ಹೊರಬಂದರೆ ಅವರಿಗೆ ಮತ್ತೆ ಮನೆ ಒಳಗೆ ಪ್ರವೇಶ ಸಿಗುವುದಿಲ್ಲ. ಆದರೆ ವರ್ತೂರು ಸಂತೋಷ್ ಅರೆಸ್ಟ್ ಮಾಡಿರುವುದರಿಂದ ಅವರು ಮತ್ತೆ ಬಿಗ್ಬಾಸ್ ಮನೆಗೆ ಬರುತ್ತಾರಾ ಎಂಬ ಪ್ರಶ್ನೆ ಮೂಡಿದೆ.

ವಿಶ್ವವಿಖ್ಯಾತ ಜಂಬೂ ಸವಾರಿಗೆ ಸಾಂಸ್ಕೃತಿಕ ನಗರಿ ಸಜ್ಜು

ಮೈಸೂರು, ಅ. 23- ಜಗದ್ವಿಖ್ಯಾತ ಜಂಬೂ ಸವಾರಿ ಕ್ಷಣಗಣನೆ ಆರಂಭವಾಗಿದ್ದು, ಸಾಂಸ್ಕøತಿಕ ನಗರಿ ಸಜ್ಜಾಗಿದ್ದು, ಮನಮೋಹಕ ದೃಶ್ಯವನ್ನು ಕಣ್ತುಂಬಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ. ನಾಳೆ ಮಧ್ಯಾಹ್ನ 1:46 ರಿಂದ 2.08 ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜ ಪೂಜೆಯನ್ನು ಅರಮನೆಯ ಬಲದ್ವಾರದ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೆರವೇರಿಸಲಿದ್ದಾರೆ. ನಂತರ ಅರಮನೆಯ ಆವರಣದಲ್ಲಿ ಸಂಜೆ 4:40 ರಿಂದ ಐದರವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

750 ಕೆ ಜಿ ತೂಕದ ಚಿನ್ನದ ಅಂಬಾರಿ ಹೊತ್ತ ಕ್ಯಾಪ್ಟನ್ ಅಭಿಮನ್ಯು ನಾಡು ಅದೇವತೆ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಬನ್ನಿಮಂಟಪದ ಪಂಜಿನ ಕವಾಯತು ಮೈದಾನ ತಲುಪಲಿದೆ. ಈ ಅದ್ಭುತ ಮೆರವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯ ಅತಿಥಿಗಳಾಗಿ ಮೈಸೂರು ರಾಜವಂಶಸ್ಥರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಸಚಿವರುಗಳಾದ ಮಹದೇವಪ್ಪ, ವೆಂಕಟೇಶ್, ಶಿವರಾಜ್ ತಂಗಡಗಿ ಮತ್ತಿತರ ಗಣ್ಯರು ಭಾಗವಹಿಸಲಿದ್ದು ಅಧ್ಯಕ್ಷತೆಯನ್ನು ಶಾಸಕ ಶ್ರೀವತ್ಸ ಅವರು ವಹಿಸಲಿದ್ದಾರೆ.

ಸಂಜೆ ಮೈಸೂರಿನ ಬನ್ನಿಮಂಟಪದಲ್ಲಿ ಮೈನವಿರೇಳಿಸುವ ಪಂಜಿನ ಕವಾಯತು ನಡೆಯಲಿದೆ. ಸಂಜೆ 7:30ಕ್ಕೆ ನಡೆಯುವ ಪಂಜಿನ ಕವಾಯತು ಕಾರ್ಯಕ್ರಮದಲ್ಲಿ ರಾಜ್ಯಪಾಲ ತಾವರ್‍ಚಂದ್ ಗೆಹ್ಲೋಟ್ ಅವರು ಕವಾಯತು ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಲಿದ್ದಾರೆ.

ಇಸ್ರೇಲ್ ವೈಮಾನಿಕ ದಾಳಿಯಲ್ಲಿ 30 ಮಂದಿ ಪ್ಯಾಲೆಸ್ತೇನಿಯರ ಸಾವು

ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸಿಎಂ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವರಾ ನಿರ್ಮಲಾ ಸೀತಾರಾಮನ್, ಶೋಭಾ ಕರಂದ್ಲಾಜೆ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ಸೇರಿದಂತೆ ಇತರ ಗಣ್ಯರು ಭಾಗವಹಿಸಲಿದ್ದು ಅಧ್ಯಕ್ಷತೆಯನ್ನು ಶಾಸಕ ತನ್ರ್ವೀ ಸೇಟ್ ವಹಿಸಲಿದ್ದಾರೆ.

ಈ ಬಾರಿಯ ಜಂಬೂ ಸವಾರಿ ಮೆರವಣಿಗೆಯಲ್ಲಿ ಯುನೆಸ್ಕೋ ದಿಂದ ಗುರುತಿಸಲ್ಪಟ್ಟ ವಿಶ್ವ ಪಾರಂಪರಿಕ ಹೊಯ್ಸಳ ದೇವಸ್ಥಾನ, ಬೇಲೂರು, ಹಳೇಬೀಡು, ಮತ್ತು ಸೋಮನಾಥಪುರ ದೇವಾಲಯ ಮಾದರಿ ಸೇರಿದಂತೆ 49 ಸ್ತಬ್ಧಚಿತ್ರಗಳು ಸಾಗಿ ಬರಲಿವೆ.

ಸ್ತಬ್ಧ ಚಿತ್ರದೊಂದಿಗೆ ಗೊರವರ ಕುಣಿತ, ಪಟ್ಟದಕುಣಿತ, ಕರಡಿ ಕುಣಿತ, ಗಾರುಡಿ ಗೊಂಬೆ ಸೇರಿದಂತೆ 10 ಹಲವು ಜಾನಪದ ಕಲಾತಂಡಗಳು ಮೆರವಣಿಗೆಯಲ್ಲಿ ಸಾಗಿ ಜನಮನ ಸೂರೆಗೊಳ್ಳಲಿವೆ. ಈ ಬಾರಿಯ ಜಂಬೂಸವಾರಿಯ ಮೆಳವಣಿಗೆಯಲ್ಲಿ ರಾಜರ ಕಾಲದ ಗತವೈಭವ ಮರುಕಳಿಸಲಿದೆ. ಅಂಬಾರಿ ಹೊತ್ತ ಕ್ಯಾಪ್ಟನ್ ಅಭಿಮನ್ಯು ಸುತ್ತ ರಾಜ ಪೋಷಾಕು ಧರಿಸಿದ 200 ಮಂದಿ ಮೆರವಣಿಗೆಯಲ್ಲಿ ಸಾಗಿ ಬರಲಿದ್ದಾರೆ.

ಗೋವಾದ ವಿಮಾನ ನಿಲ್ದಾಣದಲ್ಲಿ 4 ಕೋಟಿ ಮೌಲ್ಯದ ಚಿನ್ನ, ಐಫೋನ್ ವಶ

ರಾಜರ ಕಾಲದ ಸೈನಿಕರು ವಿವಿಧ ಲಾಂಛನ ಹಿಡಿದು ಬರುತ್ತಿದ್ದ ಹಾಗೆ ಈ ಬಾರಿಯ ದಸರಾ ಮೆರವಣಿಗೆಯಲ್ಲಿ ವಿವಿಧ ಲಾಂಛನಗಳನ್ನು ನೋಡುವ ಭಾಗ್ಯ ನಮ್ಮದಾಗಲಿದೆ. ಮೆರವಣಿಗೆಯಲ್ಲಿ ಸಾಗಲು ಸೂರ್ಯ, ನೀರು, ವರಹ ಚಂದ್ರ ಮಂಡಲ ಗರುಡ, ಮಾರುತಿ ತ್ರಿಶೂಲ ಸೇರಿದಂತೆ ಇನ್ನೂ ಹತ್ತು ಹಲವು ಲಾಂಛನಗಳನ್ನು ಸಿದ್ಧಪಡಿಸಲಾಗಿದೆ. ಇವುಗಳನ್ನು ಹಿಡಿದು ರಾಜರ ಕಾಲದಲ್ಲಿ ಹೊತ್ತು ಬರುವ ಮಾದರಿಯಲ್ಲಿ ಈ ಬಾರಿ ಮೆರವಣಿಗೆಯಲ್ಲಿ ಸಾಗಿ ಬರುವುದು ವಿಶೇಷವಾಗಿದೆ ಗತಕಾಲದ ದಸರಾ ಮೆರವಣಿಗೆಯನ್ನು ನೆನಪಿಸಲಿದೆ.

ಈ ಬಾರಿಯ ದಸರಾ ಉತ್ಸವವನ್ನು ವೀಕ್ಷಿಸಲು ಲಕ್ಷಾಂತರ ಮಂದಿ ಆಗಮಿಸಲಿದ್ದಾರೆ. ಮುಂಜಾಗ್ರತ ಕ್ರಮವಾಗಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಸಾಂಸ್ಕೃತಿಕ ನಗರಿಗೆ ಹರಿದುಬಂದ ಪ್ರವಾಸಿಗರ ಸಾಗರ

ಮೈಸೂರು,ಅ.23- ನಾಡಹಬ್ಬ ಮೈಸೂರು ದಸರಾ ಹಾಗೂ ಸಾಲು ಸಾಲು ರಜೆ ಹಿನ್ನಲೆಯಲ್ಲಿ ಸಾಂಸ್ಕøತಿಕ ನಗರಿಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಮಧುವಣಗಿತ್ತಿಯಂತೆ ಸಾಂಸ್ಕøತಿಕ ನಗರಿ ಶೃಂಗಾರಗೊಂಡಿದೆ. ಶನಿವಾರದಿಂದಲೇ ನಗರಕ್ಕೆ ಪ್ರವಾಸಿಗರು ಆಗಮಿಸುತ್ತಿದ್ದು, ಹೋಟೆಲ್, ವಸತಿಗೃಹಗಳು, ಪರಿವೀಕ್ಷಣ ಮಂದಿರಗಳು ಭರ್ತಿಯಾಗಿವೆ.

ಈ ಬಾರಿ ಹೊರರಾಜ್ಯಗಳ ವಾಹನಗಳಿಗೆ ತೆರಿಗೆ ವಿನಾಯ್ತಿ ನೀಡಿರುವ ಹಿನ್ನಲೆಯಲ್ಲಿ ತಮಿಳುನಾಡು, ಕೇರಳದಿಂದ ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡಿದ್ದಾರೆ. ಅದರಲ್ಲೂ ವಿದ್ಯುತ್ ದೀಪಾಲಂಕಾರ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಕುಪ್ಪಣ್ಣ ಪಾರ್ಕ್‍ನಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಈ ಬಾರಿ ಹೂವಿನಲ್ಲಿ ಪಂಚಖಾತ್ರಿ ಯೋಜನೆಗಳ ಅನಾವರಣಗೊಂಡಿರುವುದು ವಿಶೇಷ.

ಮಣಿಪುರದಲ್ಲಿ ಸ್ಪೋಟಕಗಳೊಂದಿಗೆ ಉಗ್ರನ ಬಂಧನ

ಚಾಮರಾಜೇಂದ್ರ ಮೃಗಾಲಯ, ಕೆಆರ್‍ಎಸ್, ಚಾಮುಂಡಿ ಬೆಟ್ಟ ಸೇರಿದಂತೆ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರು ಭೇಟಿ ನೀಡಿದ್ದಾರೆ.

ಭರ್ಜರಿ ವ್ಯಾಪಾರ:
ದಸರಾ ಹಿನ್ನಲೆಯಲ್ಲಿ ವಸ್ತುಪ್ರದರ್ಶನದ ಆವರಣ ಸೇರಿದಂತೆ ನಗರದೆಲ್ಲೆಡೆ ಗೃಹಾಲಂಕಾರ, ಮಕ್ಕಳ ಆಟಿಕೆ ಸಾಮಗ್ರಿಗಳ ಅಂಗಡಿಗಳು ತೆರೆದಿದ್ದು, ವ್ಯಾಪಾರ ಕೂಡ ಜೋರಾಗಿ ನಡೆದಿದೆ. ಹೋಟೆಲ್‍ಗಳಲ್ಲಿ ವಿವಿಧ ಬಗೆಯ ಖಾದ್ಯಗಳಿಗೆ ಭಾರೀ ಬೇಡಿಕೆ ಹೆಚ್ಚಿದೆ. ಒಟ್ಟಿನಲ್ಲಿ ಸರಣಿ ರಜೆ ಹಿನ್ನಲೆಯಲ್ಲಿ ಸಾಂಸ್ಕøತಿಕ ನಗರಿ ಈ ಬಾರಿ ಜನಸ್ತೋಮದಿಂದ ತುಂಬಿ ತುಳುಕುತ್ತಿದೆ.

ಟ್ರಾಫಿಕ್‍ಜಾಮ್:
ರಾಜ್ಯದ ವಿವಿಧ ಜಿಲ್ಲೆ, ತಾಲ್ಲೂಕು ಕೇಂದ್ರ ಹಾಗೂ ಹೊರರಾಜ್ಯಗಳಿಂದ ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ ಹಿನ್ನಲೆಯಲ್ಲಿ ನಗರದ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ರಾಜಧಾನಿ ಬೆಂಗಳೂರಿನಿಂದ ಮೈಸೂರಿಗೆ ಕೆಎಸ್‍ಆರ್‍ಟಿಸಿ ಹೆಚ್ಚಿನ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಎಲ್ಲ ಬಸ್ಸುಗಳು ಸಹ ತುಂಬಿ ತುಳುಕುತ್ತಿವೆ. ಇಂದು ಮತ್ತಷ್ಟು ಜನಜಂಗುಳಿ ಹೆಚ್ಚಾಗಲಿದೆ.

ಸಂಸದೆ ಶೋಭಾ ಕರಂದ್ಲಾಜೆಗೆ ಬಿಜೆಪಿ ರಾಜ್ಯಾಧ್ಯಕ್ಷೆ ಪಟ್ಟ..?

ಬೆಂಗಳೂರು,ಅ.23- ಕೇಂದ್ರ ಸಚಿವೆ ಹಾಗೂ ಬಿಜೆಪಿಯ ಫೈರ್ ಬ್ರಾಂಡ್ ನಾಯಕಿ ಎಂದೇ ರಾಜಕೀಯ ವಲಯದಲ್ಲಿ ಗುರುತಿಸಿಕೊಂಡಿರುವ ಹಾಲಿ ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೇಮಿಸಲು ಪಕ್ಷದ ಹೈಕಮಾಂಡ್ ಒಲವು ತೋರಿದೆ.

ಶೋಭಾ ಕರಂದ್ಲಾಜೆ ನೇಮಕವಾದರೆ ಮೊದಲ ಬಾರಿಗೆ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಮಹಿಳೆಯೊಬ್ಬರು ಅಧಿಕಾರ ವಹಿಸಿಕೊಂಡಂತಾಗುತ್ತದೆ. 2 ದಿನಗಳೊಳಗಾಗಿ ನೇಮಕಾತಿ ಆಗಬಹುದು ಎಂಬ ನಿರೀಕ್ಷೆಯನ್ನು ರಾಜ್ಯ ಬಿಜೆಪಿ ನಾಯಕರು ಹೊಂದಿದ್ದಾರೆ. ಶೀಘ್ರವೇ ಘೋಷಣೆ ಆಗಬಹುದು ಎಂಬ ನಿರೀಕ್ಷೆಯನ್ನೂ ಇರಿಸಿಕೊಂಡಿದ್ದಾರೆ.

ಬಿಜೆಪಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ತಮ್ಮ ಹೆಸರು ಮುನ್ನೆಲೆಯಲ್ಲಿದ್ರೂ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತ್ರ, ಆ ಬಗ್ಗೆ ಗೊತ್ತೇ ಇಲ್ಲ ಎಂದೇ ದಸರಾ ಮಹೋತ್ಸವದಲ್ಲಿ ಭಾಗಿಯಾಗಿದ್ದಾರೆ.

ಈ ಸಂಬಂಧ ಮಾಜಿ ಸಿಎಂ B S.ಯಡಿಯೂರಪ್ಪ ಸೇರಿದಂತೆ ಪ್ರಮುಖರ ಅಭಿಪ್ರಾಯ ಕೇಳಲಾಗಿದ್ದು,ಪಕ್ಷ ಸಂಘಟನೆ ದೃಷ್ಟಿಯಿಂದ ಬಿವೈ ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಲು ಪರಿಗಣಿಸುವಂತೆ ದೆಹಲಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಆದರೆ, ಇದಕ್ಕೆ ಬಿಜೆಪಿಯ ಒಂದು ಬಣ ತೀವ್ರ ವಿರೋಧ ವ್ಯಕ್ತಪಡಿಸಿರುವುದರಿಂದ ಬಿಜೆಪಿ ಹೈಕಮಾಂಡ್ ಶೋಭಾ ಕರಂದ್ಲಾಜೆ ನೇಮಿಸಿದರೆ ಹೆಚ್ಚಿನ ವಿರೋಧ ಇರುವುದಿಲ್ಲ ಎನ್ನುವ ಲೆಕ್ಕಾಚಾರಕ್ಕೆ ಬಂದಿದೆ. ಬಿಎಸ್‍ವೈ ಕೂಡ ಶೋಭಾ ಅವರ ನೇಮಕಕ್ಕೆ ಒಮ್ಮತ ಮೂಡಬಹುದು ಎನ್ನಲಾಗಿದೆ.

ಇನ್ನು ನೇರವಾಗಿ ದೆಹಲಿಯಿಂದಲೇ ಅಧ್ಯಕ್ಷರ ಹೆಸರನ್ನು ಹೈಕಮಾಂಡ್ ಘೋಷಣೆ ಮಾಡಲಿದೆ. ಆದರೆ, ರಾಜ್ಯ ಬಿಜೆಪಿ ನಾಯಕರಿಗೆ ಈ ನೇಮಕಾತಿ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಇಲ್ಲದಷ್ಟು, ವರಿಷ್ಠರು ಗೌಪ್ಯತೆ ಕಾಯ್ದುಕೊಂಡಿದ್ದಾರೆ. ಶೋಭಾ ಕರಂದ್ಲಾಜೆ ಹೆಸರು ಮುಂಚೂಣಿಗೆ ಬರುತ್ತಿದ್ದಂತೆಯೇ ಒಕ್ಕಲಿಗ ಕೋಟಾವೇ ಮಾನದಂಡವಾದರೆ ನಾವ್ಯಾಕೆ ಆಗಬಾರದು ಎಂಬ ಪ್ರಶ್ನೆಯನ್ನು ಪಕ್ಷದ ಒಕ್ಕಲಿಗ ನಾಯಕರು ಹೊಂದಿದ್ದಾರೆ.

ಇಸ್ರೇಲ್ ವೈಮಾನಿಕ ದಾಳಿಯಲ್ಲಿ 30 ಮಂದಿ ಪ್ಯಾಲೆಸ್ತೇನಿಯರ ಸಾವು

ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟದ ಮೇಲೆ ಹಲವು ನಾಯಕರ ಕಣ್ಣು ಹಾಕಿದ್ದರು. ರಾಜ್ಯಾಧ್ಯಕ್ಷ ರೇಸ್ನಲ್ಲಿ ಸಿ.ಟಿ.ರವಿ, ಬಿ.ವೈ.ವಿಜಯೇಂದ್ರ, ಬಸನಗೌಡ ಪಾಟೀಲ್ ಯತ್ನಾಳ್, ಅಶ್ವತ್ಥ್ ನಾರಾಯಣ, ವಿ.ಸೋಮಣ್ಣದಿಂದಲೂ ಸರ್ವಪ್ರಯತ್ನ ನಡೆದಿದೆ. ಈ ಈ ಹಿನ್ನಲೆಯಲ್ಲಿ ನಾಯಕರ ನಡುವೆ ಪಕ್ಷದ ಅಧ್ಯಕ್ಷಗಿರಿಗಾಗಿ ತೀವ್ರ ಪೈಪೋಟಿ ನಡೆದಿದ್ದು, ನಾಯಕರ ಮಧ್ಯೆ ಬಣ ನಿರ್ಮಾಣವಾಗಿದೆ. ಹೀಗಾಗಿ ಮಹಿಳಾ ಅಧ್ಯಕ್ಷೆ ಮೂಲಕ ಬಣ ಬಡಿದಾಟಕ್ಕೆ ಕಡಿವಾಣ ಹಾಕಲು ಬಿಜೆಪಿ ಹೈಕಮಾಂಡ್ ಪ್ಲ್ಯಾನ್ ರೂಪಿಸಿದೆ. ಇನ್ನೂ ಬಹುಮುಖ್ಯವಾಗಿ ಶೋಭಾ ಕರಂದ್ಲಾಜೆ ಹೆಸರಿಗೆ ಮಾಜಿ ಸಿಎಂ ಯಡಿಯೂರಪ್ಪ ವಿರೋಧಿಸಲ್ಲ ಎನ್ನುವುದು ವರಿಷ್ಠರ ತಂತ್ರವಾಗಿದೆ.

ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಯಡಿಯೂರಪ್ಪ ಸಹಕಾರ ಅವಶ್ಯಕ. ಹಾಗಾಗಿ ವಿಜಯೇಂದ್ರ ಬದಲಿಗೆ ಬಿಎಸ್‍ವೈ ಅವರ ಹಿರಿಯ ಪುತ್ರ ಬಿ.ವೈ.ರಾಘವೇಂದ್ರ ಅವರಿಗೆ ಪ್ರಮುಖ ಜವಾಬ್ದಾರಿ ನೀಡಲು ಹೈಕಮಾಂಡ್ ಪರಿಶೀಲಿಸಿತ್ತು. ಈ ಪ್ರಸ್ತಾಪವನ್ನು ಬಿಎಸ್‍ವೈ ಸ್ಪಷ್ಟವಾಗಿ ತಳ್ಳಿ ಹಾಕಿದ್ದರು ಎಂದು ಹೇಳಲಾಗಿತ್ತು.

ಶೋಭಾ ನಿಯೋಜನೆ ಸಂಬಂಧದಲ್ಲಿ ಬಿಎಸ್‍ವೈ ಅವರನ್ನು ಸಂಪರ್ಕಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಭಿಪ್ರಾಯ ಪಡೆದಿದ್ದಾರೆ ಎಂದು ಉನ್ನತ ಮೂಲಗಳು ಹೇಳುತ್ತವೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರ್ನಾಟಕ ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಆಗಿದ್ದಾರೆ. ಇವರು ಒಕ್ಕಲಿಗ ಸಮುದಾಯಕ್ಕೆ ಸೇರಿದವರು. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಒಕ್ಕಲಿಗ ಸಮುದಾಯದ ಮತಗಳು ಪ್ರಮುಖ ಪಾತ್ರ ವಹಿಸಿದ್ದವು.

ಅದೇ ಒಕ್ಕಲಿಗ ಸಮುದಾಯಕ್ಕೆ ಸೇರಿದ ಕೇಂದ್ರ ಸಚಿವೆ ಶೋಭಾ ಅವರನ್ನು ಕರ್ನಾಟಕ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಒಕ್ಕಲಿಗರ ಮತಗಳು ಸಿಗಬಹುದು ಎನ್ನುವ ಲೆಕ್ಕಾಚಾರ ಹೈಕಮಾಂಡ್‍ದ್ದಾಗಿದೆ ಎಂದು ಹೇಳಲಾಗಿದೆ. ಜೆಡಿಎಸ್ ಕೂಡ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಕಾರಣ ಒಕ್ಕಲಿಗರ ಮತಗಳನ್ನು ಸೆಳೆಯುವುದು ಸುಲಭವಾಗಲಿದೆ ಎಂದು ಹೇಳಲಾಗಿದೆ.

1980 ರಿಂದ ಇಲ್ಲಿಯವರೆಗೆ ಹಳೇ ಮೈಸೂರು ಭಾಗದ ಒಕ್ಕಲಿಗರಿಗೆ ಸೂಕ್ತ ಪ್ರಾತಿನಿಧ್ಯ ಸಿಗುತ್ತಿಲ್ಲ. ಈ ಸಂಬಂಧ ಕೇಂದ್ರ ಬಿಜೆಪಿಯ ವರಿಷ್ಠರು ರಾಜ್ಯ ಬಿಜೆಪಿಯಿಂದ ವರದಿ ಪಡೆದಿದ್ದಾರೆ. ಈವರೆಗೆ ಸಮುದಾಯದ ಆಧಾರವಾಗಿ ನೋಡುವುದಾದರೆ ಒಕ್ಕಲಿಗ ಸಮುದಾಯದಿಂದ ಕೇಂದ್ರ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಒಬ್ಬರೇ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದರು.

ಕೊಡವ ಸಮುದಾಯದ ಎ.ಕೆ.ಸುಬ್ಬಯ್ಯ ಅವರು ಬಿಜೆಪಿಯ ಮೊದಲ ಅಧ್ಯಕ್ಷರಾಗಿದ್ದವರು. ನಂತರ ವೀರಶೈವ ಲಿಂಗಾಯತ ಸಮುದಾಯದ ಬಿ.ಎಸ್. ಯಡಿಯೂರಪ್ಪ 3 ಬಾರಿ ಅಧ್ಯಕ್ಷರಾಗಿದ್ದಾರೆ. ಅದೇ ಸಮುದಾಯದ ಬಿ.ಬಿ. ಶಿವಪ್ಪ, ಬಸವರಾಜ ಪಾಟೀಲ್ ಸೇಡಂ, ಜಗದೀಶ ಶೆಟ್ಟರ್ ಅಧ್ಯಕ್ಷರಾಗಿದ್ದಾರೆ. ಕುರುಬ ಸಮುದಾಯದ ಕೆ.ಎಸ್. ಈಶ್ವರಪ್ಪ ಎರಡು ಬಾರಿ ಅಧ್ಯಕ್ಷರಾಗಿದ್ದರು. ಬ್ರಾಹ್ಮಣ ಸಮುದಾಯದ ಅನಂತಕುಮಾರ್, ಪ್ರಲ್ಹಾದ ಜೋಶಿ ತಲಾ ಒಂದು ಬಾರಿ ಅಧ್ಯಕ್ಷ ಹುದ್ದೆಯನ್ನು ಅಲಂಕರಿಸಿದ್ದರು.

ಒಕ್ಕಲಿಗರು ಬಿಜೆಪಿಗೆ ಮತ ನೀಡುವುದಿಲ್ಲ ಎಂದು ನಿರ್ಧರಿಸಿದ್ದ ಬಿಜೆಪಿ ಆ ಸಮುದಾಯವನ್ನು ಅಧ್ಯಕ್ಷ ಪಟ್ಟಕ್ಕೆ ಹೆಚ್ಚು ಪರಿಗಣಿಸುತ್ತಿರಲಿಲ್ಲ. ಆದರೆ, ಈ ವಿಧಾನಸಭೆ ಚುನಾವಣೆಯಲ್ಲಿ ಆಶಾಕಿರಣ ಕಂಡುಬಂದಿದೆ. ಒಕ್ಕಲಿಗ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಬಿಜೆಪಿ ಗಣನೀಯ ಸಾಧನೆ ಮಾಡಿದೆ. ಹೆಚ್ಚಿನ ಮತವನ್ನು ಗಳಿಕೆ ಮಾಡಿದೆ. ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರದಲ್ಲೂ ಸಾಕಷ್ಟು ಮತಗಳು ಲಭಿಸಿವೆ.

ಗೆಲ್ಲುವಷ್ಟು ಮತ ಸಿಕ್ಕಿಲ್ಲವಾದರೂ ಒಕ್ಕಲಿಗ ಮತವನ್ನು ಬಿಜೆಪಿ ಪಡೆದಿದ್ದರಿಂದ ಜೆಡಿಎಸ್ ಸೋತಿದೆ. ಅಲ್ಲಿನ ಮತದಾರರ ವಿಶ್ವಾಸವನ್ನು ಉಳಿಸಿಕೊಂಡರೆ ಮುಂದಿನ ಚುನಾವಣೆಗಳಲ್ಲಿ ಲಾಭ ಕಟ್ಟಿಟ್ಟ ಬುತ್ತಿ ಎಂಬ ತೀರ್ಮಾನಕ್ಕೆ ಕಮಲ ಪಕ್ಷ ಬಂದಿದೆ. ಹೀಗಾಗಿ ಒಕ್ಕಲಿಗರನ್ನೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪರಿಗಣಿಸಬೇಕು ಎಂಬ ಚರ್ಚೆ ನಡೆಯುತ್ತಿದೆ.

ಗೋವಾದ ವಿಮಾನ ನಿಲ್ದಾಣದಲ್ಲಿ 4 ಕೋಟಿ ಮೌಲ್ಯದ ಚಿನ್ನ, ಐಫೋನ್ ವಶ

ಈಗಾಗಲೇ ಜತೆಗಿರುವ ವೀರಶೈವ ಲಿಂಗಾಯತ ಸಮುದಾಯವನ್ನು ಕಡೆಗಣಿಸಬಾರದು ಎಂಬ ಎಚ್ಚರಿಕೆ ಸಹ ವರಿಷ್ಠರಲ್ಲಿ ಮೂಡಿದೆ. ಲಿಂಗಾಯತ ಸಮುದಾಯಕ್ಕೆ ಕಾರ್ಯಾಧ್ಯಕ್ಷ ಹುದ್ದೆಯನ್ನು ಸೃಜಿಸುವ ಚಿಂತನೆ ಸಹ ನಡೆದಿದೆ. ಒಂದು ವೇಳೆ ಅದೂ ಆಗದಿದ್ದರೆ ಪ್ರಧಾನ ಕಾರ್ಯದರ್ಶಿ ಸ್ಥಾನದಲ್ಲಿ ಹೆಚ್ಚಿನ ಆದ್ಯತೆ ನೀಡುವ ತೀರ್ಮಾನಕ್ಕೆ ಬರಲಾಗಿದೆ.

ಮಣಿಪುರದಲ್ಲಿ ಸ್ಪೋಟಕಗಳೊಂದಿಗೆ ಉಗ್ರನ ಬಂಧನ

ಇಂಫಾಲ, ಅ.23 -ಕಾರಿನಲ್ಲಿ 1,200ಕ್ಕೂ ಹೆಚ್ಚು ಗುಂಡಿನ ಕಾಟ್ರಿಡ್ಜ್‍ಗಳು ಮತ್ತು 68 ಸ್ಪೋಟಕಗಳನ್ನು ಸಾಗಿಸುತ್ತಿದ್ದ ಉಗ್ರನೊಬ್ಬನನ್ನು ಬಂಧಿಸಿರುವ ಎಂದು ಪೊಲೀಸರು ಭಾರಿ ವಿದ್ವಂಸಕ ಕೃತ್ಯ ತಡೆದಿದ್ದಾರೆ.

ಇಂಫಾಲ್ ಪಶ್ಚಿಮ ಜಿಲ್ಲೆಯ ಮೊಯಿರಾಂಗ್‍ಖೋಮ್ ಕಳೆದ ರಾತ್ರಿ ಟ್ರಾಫಿಕ್ ಪೊಲೀಸರು ವೇಗವಾಗಿ ಬರುತ್ತಿದ್ದ ಕಾರನ್ನು ತಡೆದರು ಆದರೆ ಅದು ಪರಾರಿಯಾಗಲು ಯತ್ನಿಸಿದಾಗ ಎಚ್ಚೆತ್ತ ಸಿಬ್ಭಂದಿಗಳು ಬೆನ್ನಟ್ಟಿ ಹಿಡಿದಿದ್ದಾರೆ.

ಗೋವಾದ ವಿಮಾನ ನಿಲ್ದಾಣದಲ್ಲಿ 4 ಕೋಟಿ ಮೌಲ್ಯದ ಚಿನ್ನ, ಐಫೋನ್ ವಶ

ಕಾರಿನಲ್ಲಿ 7.62 ಎಂಎಂ ಕಾಟ್ರ್ರಿಡ್ಜ್‍ನ 573 ಸುತ್ತುಗಳು ಮತ್ತು 5.56 ಎಂಎಂ ಕ್ಯಾಲಿಬರ್‍ನ 294 ಸುತ್ತುಗುಂಡುಗಳು ಮತ್ತು 40 ಎಂಎಂ ಲ್ಯಾಥೋಡ್ ಸ್ಪೋಟಕಗಳನ್ನು ಸಾಗಿಸುತ್ತಿರುವುದು ಕಂಡುಬಂದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಉಗ್ರಗಾಮಿ ಎಂದು ಗುರುತಿಸಲಾಗಿದೆ ಆದರೆ ಆತನ ವಿವವರವನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಇಂಫಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಜೆಪಿಗೆ ನಟಿ ಗೌತಮಿ ತಡಿಮಲ್ಲ ಗುಡ್‍ಬೈ

ಚೆನ್ನೈ,ಅ.23- ತನ್ನ ಆಸ್ತಿಯನ್ನು ಕಬಳಿಸಿದ ವ್ಯಕ್ತಿಗೆ ಪಕ್ಷದವರೇ ಸಹಕಾರ ನೀಡುತ್ತಿದ್ದಾರೆ ಎಂದು ಆರೋಪಿಸಿ ದಕ್ಷಿಣ ಭಾರತದ ಹೆಸರಾಂತ ಚಿತ್ರನಟಿ ಗೌತಮಿ ತಡಿಮಲ್ಲ ಬಿಜೆಪಿಯ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಗುಡ್‍ಬೈ ಹೇಳಿದ್ದಾರೆ. ಈ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಸುದೀರ್ಘ ಹಾಗೂ ಭಾವನಾತ್ಮಕವಾದ ಪತ್ರ ಬರೆದಿರುವ ಗೌತಮಿ ತಡಿಮಲ್ಲ, ಅತ್ಯಂತ ಭಾರವಾದ ಹೃದಯದಿಂದ ಪಕ್ಷ ಬಿಡುವ ತೀರ್ಮಾನಕ್ಕೆ ಬಂದಿದ್ದೇನೆ, ಸಹಕರಿಸಿದ ಎಲ್ಲರಿಗೂ ಧನ್ಯವಾದ ಎಂದಿದ್ದಾರೆ.

ನನ್ನ ಆಸ್ತಿಯನ್ನೇ ಕಬಳಿಸಿದ ವ್ಯಕ್ತಿಗೆ ಪಕ್ಷದವರೇ ಬೆನ್ನೆಲುಬಾಗಿ ನಿಂತಿದ್ದಾರೆಂದರೆ ಯಾರನ್ನು ನಂಬಬೇಕು. ಯಾರನ್ನು ನಂಬಬಾರದು ಎಂಬುದೇ ತಿಳಿಯುತ್ತಿಲ್ಲ. ಪಕ್ಷವು ನೀಡಿದ ಜವಾಬ್ದಾರಿಯನ್ನು ತಕ್ಕಮಟ್ಟಿಗೆ ನಿಭಾಯಿಸಿದ್ದೇನೆ ಎಂಬ ತೃಪ್ತಿ ಎಂದು ಹೇಳಿದ್ದಾರೆ.

ಪ್ಯಾರಾ ಏಷ್ಯನ್ ಗೇಮ್ಸ್​​ನಲ್ಲಿ ಭಾರತೀಯರ ಪದಕ ಭೇಟೆ ಶುರು

ನಾನು 25 ವರ್ಷಗಳ ಹಿಂದೆ ರಾಷ್ಟ್ರ ನಿರ್ಮಾಣಕ್ಕೆ ತನ್ನ ಪ್ರಯತ್ನಗಳನ್ನು ಕೊಡುಗೆ ನೀಡಲು ಪಕ್ಷಕ್ಕೆ ಸೇರಿದ್ದೆ. ನನ್ನ ಜೀವನದಲ್ಲಿ ನಾನು ಎದುರಿಸಿದ ಎಲ್ಲಾ ಸವಾಲುಗಳ ಹೊರತಾಗಿಯೂ, ನಾನು ಆ ಬದ್ಧತೆಯನ್ನು ಗೌರವಿಸಿದ್ದೇನೆ. ಆದರೂ ಇಂದು ನಾನು ನನ್ನ ಜೀವನದಲ್ಲಿ ಊಹಿಸಲಾಗದ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ನಿಂತಿದ್ದೇನೆ. ಪಕ್ಷ ಮತ್ತು ಮುಖಂಡರಿಂದ ಯಾವುದೇ ರೀತಿಯ ಬೆಂಬಲ ಪಡೆಯಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ.

ನನ್ನ ನಂಬಿಕೆ ಮುರಿದು ದ್ರೋಹ ಬಗೆದಿರುವ ವ್ಯಕ್ತಿಗೆ ಕೆಲವರು ಬೆಂಬಲ ನೀಡುತ್ತಿದ್ದಾರೆ ಎಂದು ತಿಳಿದು ಬಂದಿದೆ ಎಂದು ಗೌತಮಿ ತಡಿಮಲ್ಲ ಪತ್ರದಲ್ಲಿ ಆರೋಪಿಸಿದ್ದಾರೆ.

ವಿಶ್ವಾಸ ದ್ರೋಹ:
ನಾನು 17 ನೇ ವಯಸ್ಸಿನಿಂದ ಕೆಲಸ ಮಾಡುತ್ತಿದ್ದೇನೆ. ನನ್ನ ವೃತ್ತಿಜೀವನವು 37 ವರ್ಷಗಳ ಕಾಲ ಸಿನಿಮಾ, ದೂರದರ್ಶನ, ರೇಡಿಯೋ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ವ್ಯಾಪಿಸಿದೆ. ಈ ವಯಸ್ಸಿನಲ್ಲಿ ಆರ್ಥಿಕವಾಗಿ ಸುಭದ್ರವಾಗಿರಲು ಮತ್ತು ನನ್ನ ಮಗಳ ಭವಿಷ್ಯಕ್ಕಾಗಿ ನಾನು ನನ್ನ ಇಡೀ ಜೀವನ ಕೆಲಸ ಮಾಡಿದ್ದೇನೆ. ನಾನು ಮತ್ತು ನನ್ನ ಮಗಳು ಸ್ಥಿರವಾಗಿ ಮತ್ತು ಸುರಕ್ಷಿತವಾಗಿರಬೇಕಾದ ಸ್ಥಳದಲ್ಲಿ ನಾನು ಈಗ ನಿಂತಿದ್ದೇನೆ.

ಮಾನಸಿಕ ನೆಮ್ಮದಿ ಕಳೆದುಕೊಂಡ ಭಾರತದಲ್ಲಿರುವ ಪ್ಯಾಲೆಸ್ಟೀನಿಯಸ್ ವಿದ್ಯಾರ್ಥಿಗಳು

ಆದರೆ ಸಿ.ಅಳಗಪ್ಪನ್ ನನಗೆ ಮೋಸ ಮಾಡಿ ನನ್ನ ಹಣ, ಆಸ್ತಿ, ದಾಖಲೆಗಳನ್ನು ದೋಚಿದ್ದಾರೆ ಎಂದು ಹೇಳಿದ್ದಾರೆ. ಈ ವಿಚಾರದಲ್ಲಿ ನ್ಯಾಯಕ್ಕಾಗಿ ಮುಖ್ಯಮಂತ್ರಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಗೌತಮಿ ತಡಿಮಲ್ಲ ಮನವಿ ಮಾಡಿದ್ದಾರೆ. ಎಫ್‍ಐಆರ್ ದಾಖಲಾಗಿದೆ, ಮುಖ್ಯಮಂತ್ರಿ ಮತ್ತು ಪೊಲೀಸ್ ಅಧಿಕಾರಿಗಳು ನನಗೆ ನ್ಯಾಯ ಕೊಡಿಸುತ್ತಾರೆ ಎಂಬ ಭರವಸೆ ನನಗಿದೆ ಎಂದು ತಡಿಮಲ್ಲ ಹೇಳಿದ್ದಾರೆ.

ಇಸ್ರೇಲ್ ವೈಮಾನಿಕ ದಾಳಿಯಲ್ಲಿ 30 ಮಂದಿ ಪ್ಯಾಲೆಸ್ತೇನಿಯರ ಸಾವು

ಟೆಲ್ ಅವಿವ್,ಅ.23- ಗಾಜಾ ಪಟ್ಟಣದ ಮೇಲೆ ತನ್ನ ದಾಳಿಯನ್ನು ಮುಂದುವರೆಸಿರುವ ಇಸ್ರೇಲ್ ಇಂದು ಮುಂಜಾನೆ ಮತ್ತೆ ವೈಮಾನಿಕ ದಾಳಿ ನಡೆಸಿದ ಪರಿಣಾಮ 30 ಮಂದಿ ಘಟನೆಯಲ್ಲಿ ಸಾವನ್ನಪ್ಪಿ, ಹಲವು ಮಂದಿ ಗಾಯಗೊಂಡಿದ್ದಾರೆ.

ವಸತಿ ಪ್ರದೇಶ ಹಾಗೂ ನಾಗರಿಕರನ್ನು ಗುರಿಯಾಗಿಟ್ಟುಕೊಂಡು ಗಾಜಾ ಪಟ್ಟಣದ ಅಲ್‍ಸುಹಾದ ಪ್ರದೇಶ ಮತ್ತು ಜಬಾಲಿಯಾ ನಿರಾಶ್ರಿತರ ತಾಣದಲ್ಲಿ ನಡೆದ ದಾಳಿಯಲ್ಲಿ 30 ಮಂದಿ ಪ್ಯಾಲೆಸ್ತೇನಿಯರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ.

ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಮುಂಜಾನೆ ಗಾಜಾ ಪಟ್ಟಿಯಲ್ಲಿರುವ ಮೂರು ಆಸ್ಪತ್ರೆಗಳ ಸಮೀಪದಲ್ಲಿ ಇಸ್ರೇಲ್ ಬಾಂಬ್ ದಾಳಿ ನಡೆಸಿದೆ ಎಂದು ಪ್ಯಾಲೇಸ್ತೀನಿಯನ್ ಮಾಧ್ಯಮ ವರದಿ ಮಾಡಿದೆ. ಆದರೆ ಬಾಂಬ್ ದಾಳಿಯಿಂದ ಆಸ್ಪತ್ರೆ ಹಾನಿಗೊಳಗಾಗಿದೆ ಎಂಬುದು ಸ್ಪಷ್ಟವಾಗಿಲ್ಲ. ಇಸ್ರೇಲ್ ಗಾಜಾ ನಗರದ ಶಿಫಾ ಮತ್ತು ಅಲ-ಕುದ್ಸ್ ಆಸ್ಪತ್ರೆಗಳ ಬಳಿ ಮತ್ತು ಉತ್ತರದಲ್ಲಿರುವ ಇಂಡೋನೇಷಿಯನ್ ಆಸ್ಪತ್ರೆಯ ಬಳಿ ದಾಳಿ ಮಾಡಿದೆ ಎಂದು ವರದಿ ಹೇಳಿದೆ.

ಪ್ಯಾರಾ ಏಷ್ಯನ್ ಗೇಮ್ಸ್​​ನಲ್ಲಿ ಭಾರತೀಯರ ಪದಕ ಭೇಟೆ ಶುರು

ಇದಕ್ಕೂ ಮೊದಲು, ಅಲ-ಕುಡ್ಸ್ ಆಸ್ಪತ್ರೆಯನ್ನು ಸ್ಥಳಾಂತರಿಸಲು ಇಸ್ರೇಲ್ ಆದೇಶಿಸಿದೆ ಎಂದು ಪ್ಯಾಲೆಸ್ತೀನಿಯನ್ ರೆಡ್ ಕ್ರೆಸೆಂಟ್ ಸೊಸೈಟಿ ಹೇಳಿದೆ. ಗಾಜಾದಲ್ಲಿನ ವಸತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ ನಡೆಸಿದ ಪರಿಣಾಮ ಕನಿಷ್ಠ 30 ಪ್ಯಾಲೆಸ್ತೀನಿಯಾದವರು ಸಾವನ್ನಪ್ಪಿದ್ದಾರೆ. ಜಬಾಲಿಯಾ ನಿರಾಶ್ರಿತರ ಶಿಬಿರದ ಅಲ-ಶುಹಾದಾ ಪ್ರದೇಶದಲ್ಲಿ ಈ ಕಟ್ಟಡವಿತ್ತು.

ಕಳೆದ 24 ಗಂಟೆಗಳಲ್ಲಿ ಇಸ್ರೇಲ್ ವೈಮಾನಿಕ ದಾಳಿಯಿಂದ 117 ಮಕ್ಕಳು ಸೇರಿದಂತೆ 266 ಪ್ಯಾಲೆಸ್ತೀನಿಯಾದವರು ಸಾವನ್ನಪ್ಪಿದ್ದಾರೆ ಎಂದು ಗಾಜಾದ ಆರೋಗ್ಯ ಸಚಿವಾಲಯ ತಿಳಿಸಿದೆ. ಹಮಾಸ್‍ನ ರಾಜಕೀಯ ಬ್ಯೂರೋ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಮತ್ತು ಇರಾನ್ ವಿದೇಶಾಂಗ ಸಚಿವ ಹೊಸೈನ್ ಅಮೀರ್-ಅಬ್ದುಲ್ಲಾಹಿಯಾನ್ ಅವರು ಗಾಜಾದ ಮೇಲೆ ಇಸ್ರೇಲಿ ದಾಳಿಯನ್ನು ಹೇಗೆ ನಿಲ್ಲಿಸಬೇಕು ಎಂಬುದರ ಕುರಿತು ಚರ್ಚಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಅಕ್ಟೋಬರ್ 7 ರಂದು ಪ್ಯಾಲೇಸ್ತೀನಿಯನ್ ಗುಂಪು ಹಮಾಸ್ ಇಸ್ರೇಲ್ ಮೇಲೆ ಹಠಾತ್ ದಾಳಿಯನ್ನು ಪ್ರಾರಂಭಿಸಿ 1,400 ಜನರನ್ನು ಕೊಂದ ನಂತರ ಇಸ್ರೇಲ್ ತನ್ನ ದಾಳಿಯನ್ನು ಪ್ರಾರಂಭಿಸಿದೆ. ಎರಡು ವಾರಗಳ ಬಾಂಬ್ ದಾಳಿಯಲ್ಲಿ ಕನಿಷ್ಠ 4,600 ಜನರು ಸಾವನ್ನಪ್ಪಿದ್ದಾರೆ ಎಂದು ಗಾಜಾದ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಗೋವಾದ ವಿಮಾನ ನಿಲ್ದಾಣದಲ್ಲಿ 4 ಕೋಟಿ ಮೌಲ್ಯದ ಚಿನ್ನ, ಐಫೋನ್ ವಶ

ಪಣಜಿ, ಅ. 23- ಅಬುಧಾಬಿಯಿಂದ ಗೋವಾದ ಮನೋಹರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೂವರು ಪ್ರಯಾಣಿಕರಿಂದ ಸುಮಾರು 4 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ಐಫೋನ್‍ಗಳನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ ವಶಪಡಿಸಿಕೊಂಡಿದೆ.

ಉತ್ತರ ಪ್ರದೇಶದ ಪ್ರಯಾಣಿಕರಾದ ಇರ್ಫಾನ್ (30), ಮುಂಬೈನ ಕಮ್ರಾನ್ ಅಹ್ಮದ್ (38) ಮತ್ತು ಗುಜರಾತ್‍ನ ಮೊಹಮ್ಮದ್ ಇರ್ಫಾನ್ ಗುಲಾಮ್ (37) ಅವರನ್ನು ಉತ್ತರ ಗೋವಾದ ವಿಮಾನ ನಿಲ್ದಾಣದಲ್ಲಿ ಕಳ್ಳಸಾಗಣೆ ತಡೆ ಸಂಸ್ಥೆ ಬಂಧಿಸಿದೆ ಎಂದು ಡಿಆರ್‍ಐ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶೋಧದ ವೇಳೆ, ಮೂವರಿಂದ ಒಟ್ಟು 3.92 ಕೋಟಿ ರೂಪಾಯಿ ಮೌಲ್ಯದ ಪೇಸ್ಟ್ ರೂಪದಲ್ಲಿ 5.7 ಕೆಜಿ ಚಿನ್ನ ಮತ್ತು 28 ಅತ್ಯಾಧುನಿಕ ಐಫೋನ್ 15 ಪ್ರೊ ಮ್ಯಾಕ್ಸ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು. ಆರೋಪಿಗಳು ಮುಂಬೈ ಮತ್ತು ದುಬೈ ನಡುವೆ ಕಾರ್ಯನಿರ್ವಹಿಸುತ್ತಿರುವ ಕಳ್ಳಸಾಗಾಣಿಕೆ ಜಾಲದ ಭಾಗವಾಗಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.

ಮಾನಸಿಕ ನೆಮ್ಮದಿ ಕಳೆದುಕೊಂಡ ಭಾರತದಲ್ಲಿರುವ ಪ್ಯಾಲೆಸ್ಟೀನಿಯಸ್ ವಿದ್ಯಾರ್ಥಿಗಳು

ಬಂಧಿತ ಆರೋಪಿಗಲು ಕಳೆದ ಅ. 12 ರಂದು ಮುಂಬೈನಿಂದ ಅಬುಧಾಬಿಗೆ ಪ್ರಯಾಣಿಸಿದರು ಮತ್ತು ಕಳೆದ ಶನಿವಾರ ರಾತ್ರಿ ಭಾರತಕ್ಕೆ ಗೋವಾ ವಿಮಾನ ನಿಲ್ದಾಣದಲ್ಲಿ ಇಳಿದು ಕಳ್ಳಸಾಗಾಣಿಕೆ ಸರಕುಗಳೊಂದಿಗೆ ಪರಾರಿಯಾಗಲು ಪ್ರಯತ್ನಿಸಿದರು.

ಚೆಕ್-ಇನ್ ಬ್ಯಾಗೇಜ್‍ನಲ್ಲಿ ಇರಿಸಲಾದ ಪ್ಯಾಕೆಟ್‍ಗಳಲ್ಲಿ ಐಫೋನ್‍ಗಳನ್ನು ಸುತ್ತಿಡಲಾಗಿತ್ತು ಮತ್ತು ಇಬ್ಬರು ಪ್ರಯಾಣಿಕರ ಸೊಂಟದ ಪಟ್ಟಿಯಲ್ಲಿ ಚಿನ್ನದ ಪೇಸ್ಟ್ ಅನ್ನು ಮರೆಮಾಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ