Friday, November 7, 2025
Home Blog Page 1869

ಸಿಸಿಬಿ ಭರ್ಜರಿ ಕಾರ್ಯಾಚರಣೆ : 8 ವಿದೇಶಿ ಡ್ರಗ್ ಪೆಡ್ಲರ್ ಸೇರಿ 10 ಮಂದಿ ಬಂಧನ, 5 ಕೋಟಿ ರೂ. ಮೌಲ್ಯದ ಮಾದಕ ವಶ

ಬೆಂಗಳೂರು,ಅ.22- ಸಿಸಿಬಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ 8 ವಿದೇಶಿ ಡ್ರಗ್ಸ್ ಪೆಡ್ಲರ್ಗಳು ಸೇರಿದಂತೆ 10 ಮಂದಿಯನ್ನು ಬಂಧಿಸಿ, 5 ಕೋಟಿ ಗೂ ಹೆಚ್ಚು ರೂ.ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ನೈಜೀರಿಯಾದ 6, ಸಿನಿಗಲ್ ಹಾಗೂ ಐವರಿಕೋಸ್ಟ್ನ ತಲಾ ಒಬ್ಬರು ಮತ್ತು ಕರ್ನಾಟಕದ ಇಬ್ಬರು ಆರೋಪಿಗಳನ್ನು ಬಂಸಲಾಗಿದೆ ಎಂದು ಸಿಸಿಬಿ ಮಾದಕದ್ರವ್ಯ ನಿಗ್ರಹ ದಳದ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ 15 ದಿನಗಳಲ್ಲಿ ಕಾಡುಗೋಡಿ, ಕೆ.ಆರ್.ಪುರ, ಸೋಲದೇವನಹಳ್ಳಿ, ಎಚ್.ಎಸ್.ಆರ್. ಲೇ ಔಟ್, ವೈಟ್ಫೀಲ್ಡ್, ಬಾಣಸವಾಡಿ, ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸಿಸಿಬಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಈ 10 ಡ್ರಗ್ಸ್ಪೆಡ್ಲರ್ ಆರೋಪಿಗಳನ್ನು ಬಂಧಿಸಿ 5,04,30,000 ರೂ. ಮೌಲ್ಯದ ಎನ್ಡಿಎಂಎ ಕ್ರಿಸ್ಟೆಲ್ ಮಾದಕ 3,806 ಕೆ.ಜಿ. ಕೊಕ್ಕೇನ್ 50 ಗ್ರಾಂ., ಎಕ್ಸ್ಟಸಿ ಪಿಲ್ಸ್ 25, ಎಲ್.ಎಸ್ಡಿ ಸ್ಟ್ರಿಪ್ಸ್-50, ಗಾಂಜಾ 5.100 ಕೆ.ಜಿ., ಒಂದು ಕಾರು, ಮೂರು ಬೈಕ್, ಒಂಭತ್ತು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ.

ಕಾಡುಗೋಡಿ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ 76,20,000 ರೂ. ಮೌಲ್ಯದ ಮಾದಕ ವಸ್ತು, ಮೊಬೈಲ್ ಫೋನ್, ಕಾರು, ಮೊಬೈಲ್ ಫೋನ್ಗಳನ್ನು ಮತ್ತು ಕೆ.ಆರ್.ಪುರ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ 73,20,000 ಮೌಲ್ಯದ ಮಾದಕ ವಸ್ತು ಹಾಗೂ ಎರಡು ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.

ಸೋಲದೇವನಹಳ್ಳಿಯಲ್ಲಿ ಒಬ್ಬ ಆರೋಪಿ 50,40,000 ರೂ. ಮೌಲ್ಯದ ಮಾದಕ ಹಾಗೂ ಮೊಬೈಲ್ ಫೋನ್, ಎಚ್ಎಸ್ಆರ್ ಲೇ ಔಟ್ನಲ್ಲಿ ಒಬ್ಬ ಆರೋಪಿಯಿಂದ 6,00,000 ರೂ. ಮೌಲ್ಯದ ಗಾಂಜಾ, ಮೊಬೈಲ್ ಫೋನ್, ಒಂದು ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.


ವೈಟ್ಫೀಲ್ಡ್ನಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ 36,00,000 ರೂ. ಮೌಲ್ಯದ ಮಾದಕ ವಸ್ತು, ಎರಡು ಮೊಬೈಲ್ ಫೋನ್ ಹಾಗೂ ಎರಡು ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ.ಬಾಣಸವಾಡಿಯಲ್ಲಿ 4,00,000 ರೂ. ಮೌಲ್ಯದ ಮಾದಕವಸ್ತು, ಮೊಬೈಲ್ ಫೋನ್, ಒಂದು ದ್ವಿಚಕ್ರ ವಾಹನ ಮತ್ತು ಪರಪ್ಪನ ಅಗ್ರಹಾರದಲ್ಲಿ 2.45 ಕೋಟಿ ರೂ. ಮೌಲ್ಯದ ಮಾದಕ ವಸ್ತು, ಒಂದು ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದಾರೆ.

ಬಂತ ಆರೋಪಿಗಳು ಕಡಿಮೆ ಸಮಯದಲ್ಲಿ ಹೆಚ್ಚಿನ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಕಡಿಮೆ ಬೆಲೆಗೆ ನಿಷೇತ ಮಾದಕ ವಸ್ತುಗಳನ್ನು ಖರೀದಿಸಿ ಅವುಗಳನ್ನು ಪರಿಚಯಸ್ಥ ಗಿರಾಕಿಗಳಿಗೆ, ಕಾಲೇಜು ವಿದ್ಯಾರ್ಥಿಗಳಿಗೆ, ಐಟಿಬಿಟಿ ಉದ್ಯೋಗಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಕಾಡುಗೋಡಿ, ಕೆ.ಆರ್.ಪುರ, ಸೋಲದೇವನಹಳ್ಳಿ, ಎಚ್.ಎಸ್.ಆರ್ ಲೇ ಔಟ್, ವೈಟ್ ಫೀಲ್ಡ್, ಬಾಣಸವಾಡಿ, ಪರಪ್ಪನ ಅಗ್ರಹಾರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಬಿಬಿಎಂಪಿ ವಾರ್ಡ್‍ಗಳ ಹೆಸರು ಬದಲಾವಣೆಗೆ ಸಾರ್ವಜನಿಕರ ಆಕ್ರೋಶ

ಬೆಂಗಳೂರು,ಅ.22- ಬಸವನಗುಡಿ ವಿಧಾನಸಭಾ ಕ್ಷೇತ್ರದ ವಾರ್ಡ್‍ಗಳ ಹೆಸರು ಬದಲಾವಣೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಬಸವನಗುಡಿ ವಿಧಾನಸಭಾ ಕ್ಷೇತ್ರದ 198ನೇ ವಾರ್ಡ್ ಬಸವನಗುಡಿಗೆ ತನ್ನದೇ ಆದ ಇತಿಹಾಸವಿದೆ. ಇಲ್ಲಿಯ ನಿವಾಸಿಗಳು 130 ವರ್ಷಗಳಿಗೂ ಹಿಂದಿನ ಇತಿಹಾಸವಿರುವ ಹೆಸರಿಗೆ ಭಾವನಾತ್ಮಕವಾಗಿ ಬೆಸೆದುಕೊಂಡಿದ್ದಾರೆ.

ಕಡಲೆಕಾಯಿ ಪರಷೆ ನಡೆಯುವುದು ದೊಡ್ಡ ಬಸವನಗುಡಿಯ ಹೆಸರಿನಲ್ಲೇ , ನಂತರದ್ದು ದೊಡ್ಡ ಗಣಪತಿ ದೇವಸ್ಥಾನದ ಹೆಸರು ಬರಬಹುದು.ಅಷ್ಟಕ್ಕೂ ವಾರ್ಡ್ ಹೆಸರು ಹೀಗೆ ಬದಲಾಯಿಸುವುದರಿಂದ ಸರ್ಕಾರಕ್ಕೆ ಇರುವ ಲಾಭವಾದರೂ ಏನು? ಮತ್ತು ಇದೇ ಹೆಸರು ಮುಂದುವರೆದರೆ ನಷ್ಟವೇನು? ಎಂಬುದು ಬಸವನಗುಡಿ ನಿವಾಸಿಗಳ ಪ್ರಶ್ನೆಯಾಗಿದೆ.

ಸರ್ಕಾರಕ್ಕೆ ಇಂಥ ಸಂರ್ಭದಲ್ಲಿ ಮತದಾರರು ಮುಖ್ಯವಲ್ಲ ಎಂದು ಭಾವಿಸಿದಂತಿದೆ. ಬಸವನಗುಡಿಯಲ್ಲಿ ಎಂತೆಂಥ ಮಹನೀಯರು, ಸಾಹಿತಿಗಳು, ಕವಿಗಳು, ಬುದ್ಧಿಜೀವಿಗಳು ಇದ್ದಾರೆ. ಇಂಥ ಹಿರಿಯರು ಹಾಗೂ ಇಲ್ಲಿನ ಜನಸಾಮಾನ್ಯರ ಅರಿವಿಗೆ ಬಾರದಂತೆ ಈ ಕೆಲಸ ಮಾಡಿದ್ದಾರೆ.

ಪ್ಯಾಲೆಸ್ತೇನಿಯರಿಗೆ ಸಹಾಯಹಸ್ತ ಚಾಚಿದ ಭಾರತ, ಅಗತ್ಯ ವಸ್ತುಗಳ ರವಾನೆ

ಯಾವುದೆ ಬದಲಾವಣೆ, ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಹಿರಿಯರು, ಅನುಭವಿಗಳನ್ನು ಸಂಪರ್ಕಿಸಿದರೆ ತಪ್ಪೇನು? ಅಂದರೆ ಯಾರಿಗೂ ತಿಳಿಯದೆ ವಾಮ ಮಾರ್ಗದಲ್ಲಿ, ಅಂದರೆ ಕಳ್ಳದಾರಿಯಲ್ಲಿ ವಾರ್ಡ್ ಹೆಸರು ಬದಲಿಸುವ ಜರೂರತ್ತು ಏನಿದೆ? ಈ ಬದಲಾವಣೆ ಬಗ್ಗೆ ಬಿಬಿಎಂಪಿ ಆಯುಕ್ತರು, ಸ್ಥಳೀಯ ಎಂಎಲ್‍ಎ, ಮಾಜಿ ಕಾರ್ಪೊರೇಟರ್ ಗಳಿಗೂ ಮಾಹಿತಿ ಇಲ್ಲ.

ಇದರ ಜೊತೆಗೆ ಗಿರಿನಗರವನ್ನು ಸ್ವಾಮಿ ವಿವೇಕಾನಂದ ಅಂತ, ಹನುವಂತನಗರವನ್ನು ಗವಿ ಗಂಗಾಧರೇಶ್ವರ ಎಂದೂ ಬದಲಾಯಿಸುತ್ತಿದ್ದಾರಂತೆ. ಇದು ಹೀಗೇ ಮುಂದುವರೆದರೆ, ನಾಳೆ ಬಸವನಗುಡಿ ವಿಧಾನಸಭಾ ಕ್ಷೇತ್ರದ ಹೆಸರನ್ನೂ ಇವರು ಬದಲಿಸಲು ಮುಂದಾಗಬಹುದೇನೋ? ಹಾಗೆಯೇ ಮುಂದುವರೆದು ಬೆಂಗಳೂರು ಹೆಸರನ್ನು ಬದಲಿಸಿದರೂ ಆಶ್ವರ್ಯವಿಲ್ಲ ಎಂದು ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆ ಅಧ್ಯಕ್ಷ ಕೆಎನ್‍ಸಿ ಸುರೇಶ್ ಪ್ರಶ್ನಿಸಿದ್ದಾರೆ.

ವಿದ್ಯುತ್ ಕ್ಷಾಮದ ಬಗ್ಗೆ ಶ್ವೇತಪತ್ರ ಹೊರಡಿಸುವಂತೆ ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ

ಬೆಂಗಳೂರು, ಅ.22-ರಾಜ್ಯದ ವಿದ್ಯುತ್ ಕ್ಷಾಮದ ವಾಸ್ತವತೆ ಬಗ್ಗೆ ಶ್ವೇತಪತ್ರ ಹೊರಡಿಸುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.ಅಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ವೆಸ್ಟ್ ಎಂಡ್ ನಲ್ಲಿ ಆಡಳಿತ ನಡೆಸಿಲ್ಲ ಎನ್ನುವ ಗಿಲೀಟು ಗಿರಾಕಿ, ಆವತ್ತು ಮುಖ್ಯಮಂತ್ರಿ ನಿವಾಸವನ್ನೇಕೆ ತೆರವು ಮಾಡಲಿಲ್ಲ? 5 ವರ್ಷ ಸರ್ಕಾರ ಕೊಟ್ಟ ಸಿದ್ದಪುರುಷ ಇನ್ನೊಬ್ಬರ ಹೆಸರಿನಲ್ಲಿ ಬಂಗಲೆ ಪಡೆದು ಸಾಸಿವೆ ಕಾಳಷ್ಟೂ ಸಂಕೋಚವಿಲ್ಲದೆ ಅದೇ ಜಾಗದಲ್ಲಿ ಹೆಗ್ಗಣವಾಗಿ ಮೈತ್ರಿ ಸರ್ಕಾರಕ್ಕೆ ಕನ್ನ ಕೊರೆದಿದ್ದನ್ನು ಕನ್ನಡಿಗರು ಮರೆತಿಲ್ಲ. ಹೇಳಿದ್ದೇ ಹೇಳುವ ಕಿಸುಬಾಯಿ ದಾಸನಿಗೆ ಗೊತ್ತಿರುವುದು ಒಂದು ವೆಸ್ಟ್ ಎಂಡ್, ಎರಡು ಬಿಜೆಪಿ ಬಿ ಟೀಂ ಮಾತ್ರ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.

ಡೋಂಗೀ ಸಮಾಜವಾದಿ, ಪುಲ್ ಟೈಂ ಮೀರುಸಾದಿಕವಾದಿಗೆ ವೆಸ್ಟ್ ಎಂಡ್ ಸೋಂಕು ಮತ್ತೆ ತಗುಲಿದೆ. ಐಎನ್ ಡಿಐಎ ಕೂಟದ ಸಭೆಯನ್ನು ಇದೇ ವೆಸ್ಟ್ ಎಂಡ್ ಬದಲಿಗೆ, ತಮ್ಮ ಸುತ್ತ ಕೆನೆಪದರ, ಒಳಪದರ, ತೆಳುಪದರದಂತೆ ತಲೆ ಎತ್ತಿರುವ ಪರ್ಸಂಟೇಜ್ ಪಟಾಲಂ ಏಳು ಸುತ್ತಿನ ಕೋಟೆಯ ವಠಾರದಲ್ಲಿಯೇ ನಡೆಸಬೇಕಿತ್ತು. ಏಕೆ ನಡೆಸಲಿಲ್ಲ ಎಂದು ಪ್ರಶ್ನಿಸಿದ್ದಾರೆ.

ಆಧುನಿಕ ಭಾರತದ ಈಸ್ಟ್ ಇಂಡಿಯಾ ಕಂಪನಿ ಕಾಂಗ್ರೆಸ್‍ಗೆ ಕರ್ನಾಟಕ ಪೊಗರದಸ್ತು ಹುಲ್ಲುಗಾವಲು. ಸಿದ್ದಪುರುಷ, ಶೋಕಿ ಪುರುಷನೇ ಈ ಹುಲ್ಲುಗಾವಲಿನ ಮೇಟಿ. ವಿದ್ಯುತ್ ಕ್ಷಾಮ ಮತ್ತು ಬರದಲ್ಲಿ ಜನರು ಬೆಯುತ್ತಿದ್ದರೆ ದಿನಪೂರ್ತಿ ಕೂತು ಕ್ರಿಕೆಟ್ ನೋಡುವಷ್ಟು ಶೋಕಿದಾರ ಎಂದು ಟೀಕಿಸಿದ್ದಾರೆ.

ಪ್ಯಾಲೆಸ್ತೇನಿಯರಿಗೆ ಸಹಾಯಹಸ್ತ ಚಾಚಿದ ಭಾರತ, ಅಗತ್ಯ ವಸ್ತುಗಳ ರವಾನೆ

ರೋಮ್ ನಗರ ಹೊತ್ತಿ ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದ. ಜನ ಸಂಕಷ್ಟದಲ್ಲಿದ್ದರೆ ಕರ್ನಾಟಕದ ನೀರೋ ಕ್ರಿಕೆಟ್ ಮ್ಯಾಚ್ ನೋಡುತ್ತಿದ್ದ ಎಂದು ವ್ಯಂಗ್ಯವಾಡಿದ್ದಾರೆ. 5 ತಿಂಗಳಿಂದ ವಿದ್ಯುತ್ ಉತ್ಪಾದನೆ ಅಲಕ್ಷಿಸಿದ್ದೇಕೆ? ಹಾಹಾಕಾರ ಎದ್ದ ಮೇಲೆ ಅದು ಮಾಡಿದ್ದೇವೆ, ಇದು ಮಾಡಿದ್ದೇವೆ ಎಂದರೆ ಲೋಡ್ ಶೆಡ್ಡಿಂಗ್ ಏಕೆ ಬಂತು? 2013-2018ರಲ್ಲಿ 12,000 ಮೆ.ವ್ಯಾ. ಉತ್ಪಾದಿಸಿದ್ದೇವೆ ಎಂದು ನೀವೇ ಹೇಳಿದ್ದೀರಿ, ಸರಿ.

ಈಗ ಮಳೆ ಕಡಿಮೆಯಾಗಿ ಜಲವಿದ್ಯುತ್ ಉತ್ಪಾದನೆ ಕುಸಿದಿದೆ,ಅದರಲ್ಲಿ 3,000 ಮೆ.ವ್ಯಾ. ಇಲ್ಲ ಎಂದರೂ ಸಾರ್ವಜನಿಕ ಮತ್ತು ಖಾಸಗಿ ವಲಯ ಸೇರಿ ಒಟ್ಟು 29,000 ಮೆ.ವ್ಯಾ. ವಿದ್ಯುತ್ ಉತ್ಪಾದನೆ ಆಗಲೇಬೇಕಿತ್ತು. ಆಗಿಲ್ಲವೇಕೆ? ಏಕಾಏಕಿ ಉತ್ಪಾದನೆ ನಿಲ್ಲಿಸಿದ್ದೇಕೆ? ಜಲವಿದ್ಯುತ್ ಕೈಕೊಡುತ್ತದೆ ಎಂದು ಗೊತ್ತಿದ್ದರೂ ಕಲ್ಲಿದ್ದಲ ಸಂಗ್ರಹ ಇಟ್ಟುಕೊಳ್ಳಲಿಲ್ಲವಲ್ಲ, ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಜಲ ವಿದ್ಯುತ್ ಹೊರತುಪಡಿಸಿ ಇತರೆ ಮೂಲಗಳ ವಿದ್ಯುತ್ ಉತ್ಪಾದನೆಗೂ ಖೋತಾ ಬೀಳಲಿಕ್ಕೆ ಪ್ರಕೃತಿ ಕಾರಣವೋ? ಅಥವಾ ನಿಮ್ಮ ಕೈ ಚಳಕವೇ ಕಾರಣವೋ? ಸತ್ಯ ಹೇಳಿದರೆ ನನ್ನ ಕಡೆಗೇ ಬೊಟ್ಟು ಮಾಡುತ್ತೀರಿ, ನಿಮ್ಮ ಸಚಿವರನ್ನು ನನ್ನ ಮೇಲೆ ಛೂ ಬಿಡುತ್ತೀರಿ. ಎಷ್ಟು ದಿನ ನೆಪಗಳ ನಾಜೂಕತನ ಎಂದು ವಾಗ್ದಾಳಿ ನಡೆಸಿದ್ದಾರೆ.

ಮತ್ತೆ ಮತ್ತೆ ನಾನು ಹೇಳುತ್ತೇನೆ, ವಿದ್ಯುತ್ ಕೃತಕ ಅಭಾವ ಸೃಷ್ಟಿ ನಿಮ್ಮದೇ ಷಡ್ಯಂತ್ರ. ಅದು ಉಲ್ಬಣಿಸಿದಷ್ಟೂ ನಿಮಗೆ ಕಲೆಕ್ಷನ್ ಹೆಚ್ಚು. ಖಾಸಗಿ ಕಂಪನಿಗಳಿಂದ ಖರೀದಿಸಿ ಕೈ ತುಂಬಾ ಕಮೀಷನ್ ಎತ್ತಲು ಹೊರಟಿದ್ದೀರಿ. ಇಲ್ಲ ಎಂದಾದರೆ ವಿದ್ಯುತ್ ಕ್ಷಾಮದ ವಾಸ್ತವತೆ ಬಗ್ಗೆ ಶ್ವೇತಪತ್ರ ಹೊರಡಿಸಿ. ಈ ಬಗ್ಗೆ ನಿಮ್ಮ ಮೌನ ಏಕೆ ಎಂದು ಅವರು ಪ್ರಶ್ನಿಸಿದ್ದಾರೆ. ಬೆಂಗಳೂರು ನಗದು ಅಭಿವೃದ್ಧಿ ಇಲಾಖೆ ನಂತರ ಇಂಧನ ಇಲಾಖೆಯಲ್ಲೂ ನೀವು ನಗದೀಕರಣಕ್ಕೆ ನಾಂದಿ ಹಾಡಿದ್ದೀರಿ. ಖರೀದಿ ಖುಷಿಯಲ್ಲಿ ಪರ್ಸಂಟೇಜ್ ಪಟಾಲಂ ಸಂಭ್ರಮಿಸುತ್ತಿದೆ ಎಂದು ಎಚ್.ಡಿ.ಕೆ ಆರೋಪಿಸಿದ್ದಾರೆ.

ಪ್ಯಾಲೆಸ್ತೇನಿಯರಿಗೆ ಸಹಾಯಹಸ್ತ ಚಾಚಿದ ಭಾರತ, ಅಗತ್ಯ ವಸ್ತುಗಳ ರವಾನೆ

ಟೆಲ್‍ಅವೀವ್,ಅ.22- ಹಮಾಸ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಮಧ್ಯೆ ಗಾಜಾ ಪಟ್ಟಿಯಲ್ಲಿರುವ ಕಲಹದಿಂದ ನಲುಗುತ್ತಿರುವ ಪ್ಯಾಲೆಸ್ತೇನಿಯಾದವರಿಗೆ ಭಾರತ ಇಂದು ಮಾನವೀಯ ನೆರವು ಕಳುಹಿಸಿದೆ. ಪ್ಯಾಲೆಸ್ತೀನ್ ಜನರಿಗಾಗಿ ಸುಮಾರು 6.5 ಟನ್‍ಗಳಷ್ಟು ವೈದ್ಯಕೀಯ ನೆರವು ಮತ್ತು 32 ಟನ್‍ಗಳಷ್ಟು ವಿಪತ್ತು ಪರಿಹಾರ ಸಾಮಗ್ರಿಗಳನ್ನು ಹೊತ್ತ ಐಎಎಫ್‍ಸಿ-17 ವಿಮಾನವು ಈಜಿಪ್ಟ್‍ನ ಎಲ್-ಅರಿಶ್ ವಿಮಾನ ನಿಲ್ದಾಣಕ್ಕೆ ಹೊರಟಿದೆ.

ವಸ್ತುವು ಅಗತ್ಯ ಜೀವ ಉಳಿಸುವ ಔಷಗಳು, ಶಸ್ತ್ರಚಿಕಿತ್ಸಾ ವಸ್ತುಗಳು, ಟೆಂಟ್‍ಗಳು, ಮಲಗಲು ಒಳಗೊಂಡಿದೆ ಬ್ಯಾಗ್‍ಗಳು, ಟಾರ್ಪೌಲಿನ್‍ಗಳು, ಸ್ಯಾನಿಟರಿ ಯುಟಿಲಿಟೀಸ್, ನೀರು ಶುದ್ಧೀಕರಣ ಮಾತ್ರೆಗಳು ಇತರ ಅಗತ್ಯ ವಸ್ತುಗಳನ್ನು ರವಾನಿಸಲಾಗಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸುಮಾರು 6.5 ಟನ್ ವೈದ್ಯಕೀಯ ನೆರವು ಮತ್ತು 32 ಟನ್ ವಿಪತ್ತು ಪರಿಹಾರ ಸಾಮಗ್ರಿಗಳನ್ನು ಪ್ಯಾಲೆಸ್ತೈನ್‍ಗೆ ಕಳುಹಿಸಲಾಗಿದೆ, ಅದು ಈಜಿಪ್ಟ್ ಮೂಲಕ ಆ ದೇಶವನ್ನು ತಲುಪಲಿದೆ ಎಂದು ತಿಳಿಸಿದ್ದಾರೆ.

ಗಾಜಾವನ್ನು ಸಂಪೂರ್ಣ ವಶಕ್ಕೆ ಪಡೆದಿರುವುದಾಗಿ ಇಸ್ರೇಲ್ ಘೋಷಣೆ ಮಾಡಿದ್ದು, ನೀರು, ವಿದ್ಯುತ್, ಇಂಧನ ಮತ್ತು ಆಹಾರ ಪೂರೈಕೆಯನ್ನು ಸ್ಥಗಿತಗೊಳಿಸಿದ್ದು, ದೀರ್ಘಕಾಲ ಕೊರತೆಯನ್ನು ಸೃಷ್ಟಿಸುತ್ತಿದೆ. ಇಸ್ರೇಲ್ ನಿಯಂತ್ರಣಕ್ಕೆ ಒಳಗಾಗದ ರಫಾ ಗಡಿ ಒಂದೇ ಗಾಜಾಗೆ ಇರುವ ಏಕೈಕ ಮಾರ್ಗವಾಗಿದೆ.

ತಮ್ಮ ಮಿತ್ರ ದೇಶವಾಗಿರುವ ಯುನೈಟೆಡ್ ಸ್ಟೇಟ್ಸ್ ಮನವಿಯ ಮೇರೆಗೆ ಈಜಿಪ್ಟ್‍ನಿಂದ ಗಾಜಾಗೆ ನೆರವು ಸಾಗಿಸಲು ಇಸ್ರೇಲ್ ಅನುಮತಿಸಿದೆ. ಭಾರತ ಕಳುಹಿಸಿಕೊಟ್ಟಿರುವ ಅಗತ್ಯ ವಸ್ತುಗಳು ರಫಾ ಗಡಿಯ ಮೂಲಕ ಗಾಜಾಗೆ ತಲುಪಲಿದೆ.

ಬ್ರೇಕಿಂಗ್ : ಮೈಸೂರು ದಸರಾ ಮೇಲೆ ಉಗ್ರರ ಕಣ್ಣು, ಹೈಅಲರ್ಟ್ ಘೋಷಣೆ..!

ವಿಶ್ವಸಂಸ್ಥೆಯ ವಿವಿಧ ಏಜೆನ್ಸಿಗಳಿಂದ ಬಂದ ನೆರವನ್ನು ಗಾಜಾಗೆ ತಲುಪಿಸುವ ಜವಾಬ್ದಾರಿಯನ್ನು ಈಜಿಪ್ಟಿನ ರೆಡ್ ಕ್ರೆಸೆಂಟ್ ಕಚೇರಿಯು ಹೊತ್ತಿದೆ. ನಿನ್ನೆ ಇಪ್ಪತ್ತು ಟ್ರಕ್‍ಗಳು ಈಜಿಪ್ಟಿನ ಟರ್ಮಿನಲ್‍ನ್ನು ಪ್ರವೇಶಿಸಿದ್ದವು. ಪ್ಯಾಲೆಸ್ತೀನ್ ಕಡೆಯ 36 ಖಾಲಿ ಟ್ರೇಲರ್‍ಗಳು ಟರ್ಮಿನಲ್‍ಗೆ ಪ್ರವೇಶಿಸಿ ಈಜಿಪ್ಟಿನ ಕಡೆಗೆ ಹೋಗಿ, ನೆರವನ್ನು ಲೋಡ್ ಮಾಡಿಕೊಂಡು ರಫಾ ಗಡಿಯ ಮೂಲಕ ಗಾಜಾಗೆ ತೆರಳಿದವು.

ವಿಶ್ವಸಂಸ್ಥೆಯ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಸಹ ಈಜಿಪ್ಟ್ ಕ್ರಾಸಿಂಗ್ ಬದಿಗೆ ಭೇಟಿ ನೀಡಿ ನೆರವು ವಿತರಣೆಯ ಸಿದ್ಧತೆಗಳನ್ನು ಮೇಲ್ವಿಚಾರಣೆ ಮಾಡಿದರು. ಇವು ಕೇವಲ ಟ್ರಕ್‍ಗಳಲ್ಲ, ಜೀವರಕ್ಷಕಗಳು ಎಂದು ಮಾಧ್ಯಮಗಳಿಗೆ ಇದೇ ಸಂದರ್ಭದಲ್ಲಿ ತಿಳಿಸಿದರು.

ಅ.7ರ ದಾಳಿಗೆ ಪ್ರತಿಯಾಗಿ ಇಸ್ರೇಲ್ ನಡೆಸುತ್ತಿರುವ ದಾಳಿಗೆ ಗಾಜಾ ಸಂಪೂರ್ಣ ನಲುಗಿ ಹೋಗಿದೆ. ವೆಸ್ಟ್ ಬ್ಯಾಂಕ್‍ನಲ್ಲೂ ಇಸ್ರೇಲ್ ರಕ್ಷಣಾ ಪಡೆಗಳು ದಾಳಿ ನಡೆಸುತ್ತಿವೆ. ಇಸ್ರೇಲ್ ನಡೆಸಿದ ಬಾಂಬ್ ದಾಳಿಯಲ್ಲಿ ಈವರೆಗೂ 4300ಕ್ಕೂ ಅಕ ಮಂದಿ ಪ್ಯಾಲೆಸ್ತೀನ್‍ನಲ್ಲಿ ಮೃತಪಟ್ಟಿದ್ದಾರೆ. ಅದರಲ್ಲಿ ಹೆಚ್ಚಿನವರು ನಾಗರಿಕರು ಎಂದು ಹಮಾಸ್ ನಡೆಸುವ ಆರೋಗ್ಯ ಸಚಿವಾಲಯ ತಿಳಿಸಿದೆ.

ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧವೂ ಎರಡು ವಾರಗಳನ್ನು ಪೂರೈಸಿ ಮೂರನೇ ವಾರಕ್ಕೆ ಕಾಲಿಟ್ಟಿದ್ದರೂ ಕದನ ಕಾರ್ಮೋಡ ಮಾತ್ರ ತಿಳಿಯಾಗಿಲ್ಲ. ಈಜಿಪ್ಟ್‍ನಲ್ಲಿ ನಡೆದ ಶಾಂತಿ ಶೃಂಗಸಭೆಯಲ್ಲಿ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರು ಮಾನವೀಯ ಕದನ ವಿರಾಮಕ್ಕಾಗಿ ಒತ್ತಾಯಿಸಿದ್ದಾರೆ. ಆದರೂ ಇಸ್ರೇಲ್ ಮಾತ್ರ ಗಾಜಾ ಮೇಲಿನ ತನ್ನ ದಾಳಿಯನ್ನು ಮುಂದುವರಿಸಿದೆ.

ಮಹಾರಾಷ್ಟ್ರ : ತರಬೇತಿ ವಿಮಾನ ಪತನ

ಪುಣೆ, ಅ. 22- ಮಹಾರಾಷ್ಟ್ರದ ಪುಣೆ ಜಿಲ್ಲೆಯ ಹಳ್ಳಿಯೊಂದರ ಬಳಿ ಖಾಸಗಿ ವಿಮಾನಯಾನ ಅಕಾಡೆಮಿಗೆ ಸೇರಿದ ತರಬೇತಿ ವಿಮಾನ ಇಂದು ಬೆಳಗ್ಗೆ ಪತನಗೊಂಡಿದ್ದು ಇದರಲ್ಲಿದ್ದ ತರಬೇತಿ ಪೈಲಟ್ ಮತ್ತು ಬೋಧಕ ಗಾಯಗೊಂಡಿದ್ದಾರೆ. ಬಾರಾಮತಿ ತಾಲೂಕಿನ ಗೋಜುಬಾವಿ ಗ್ರಾಮದ ಬಳಿ ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ರೆಡ್‍ಬರ್ಡ್ ಫ್ಲೈಟ್ ಟ್ರೈನಿಂಗ್ ಅಕಾಡೆಮಿಗೆ ಸೇರಿದ ತರಬೇತಿ ವಿಮಾನವು ಗೊಜುಬಾವಿ ಗ್ರಾಮದ ಬಳಿ ಪತನದ ನಂತರ ಗಾಯಗೊಂಡಿದ್ದ ಇಬ್ಬರನ್ನು ಇಬ್ಬರನ್ನೂ ಸ್ಥಳೀಯರ ನೆರವಿನೊಂದಿದೆ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಬಾರಾಮತಿ ಪೊಲೀಸ್ ಠಾಣೆಯ ಇನ್‍ಸ್ಪೆಕ್ಟರ್ ಪ್ರಭಾಕರ್ ಮೋರೆ ತಿಳಿಸಿದ್ದಾರೆ.

ಬ್ರೇಕಿಂಗ್ : ಮೈಸೂರು ದಸರಾ ಮೇಲೆ ಉಗ್ರರ ಕಣ್ಣು, ಹೈಅಲರ್ಟ್ ಘೋಷಣೆ..!

ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ, ನಾವು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಅವರು ಹೇಳಿದರು.ವಿಮಾನ ಬೆಂಕಿ ಹೊತ್ತಿಕೊಂಡಿಲ್ಲ ಹಾಗಾಗಿ ಜೀವಹಾನಿ ಸಂಭವಿಸಿಲ್ಲ.ಪ್ರಸ್ತುತ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮುಂಬೈಗೆ ಏರ್ ಲಿಪ್ಟ್ ಮಾಡುವ ಸಾಧ್ಯತೆ ಇದೆ.

ಕಳೆದ ಗುರುವಾರ ಸಂಜೆ,ಖಾಸಗಿ ತರಬೇತಿ ವಿಮಾನವು ಬಾರಾಮತಿ ತಾಲೂಕಿನ ಕಫ್ತಾಲ್ ಗ್ರಾಮದ ಬಳಿ ಪತನಗೊಂಡಿತ್ತು ಅದರಲ್ಲಿ ಪೈಲಟ್ ಗಾಯಗೊಂಡಿದ್ದರು.

ಶೇ.25ರಷ್ಟು ಮುಂಗಾರು ಮಳೆ ಕೊರತೆ, ಹಿಂಗಾರು ಕೂಡ ದುರ್ಬಲ

ಬೆಂಗಳೂರು, ಅ.22- ನೈರುತ್ಯ ಮುಂಗಾರು ಅವ ಮುಗಿದಿದ್ದು, ಹಿಂಗಾರು ಮಳೆ ಆರಂಭಗೊಂಡಿದೆ. ಆದರೆ, ಮುಂಗಾರಿನಂತೆ ಹಿಂಗಾರು ಮಳೆಯು ಕೈಕೊಟ್ಟಿದೆ. ಮುಂಗಾರು ಅವಯಲ್ಲಿ ರಾಜ್ಯದಲ್ಲಿ ಶೇ.25ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಜೂನ್ ಒಂದರಿಂದ ಸೆಪ್ಟೆಂಬರ್ ಅಂತ್ಯವರೆಗೆ ರಾಜ್ಯದಲ್ಲಿ 852 ಮಿ.ಮೀ. ವಾಡಿಕೆ ಮಳೆ ಪ್ರಮಾಣವಿದ್ದು, ಕೇವಲ 642 ಮಿ.ಮೀ.ನಷ್ಟು ಮಾತ್ರ ಮಳೆಯಾಗಿದೆ.

ಇದರಿಂದ ರಾಜ್ಯ ತೀವ್ರ ಸ್ವರೂಪದ ಬರಕ್ಕೆ ತುತ್ತಾಗಿದೆ. 216 ತಾಲ್ಲೂಕುಗಳನ್ನು ರಾಜ್ಯ ಸರ್ಕಾರ ಬರಪೀಡಿತವೆಂದು ಘೋಷಣೆ ಮಾಡಿದೆ. ಮುಂಗಾರು ಹಂಗಾಮಿನಲ್ಲಿ ಬಿತ್ತಿದ್ದ ಬಹುತೇಕ ಬೆಳೆಗಳು ಹಾನಿಗೀಡಾಗಿವೆ. ಆಗಸ್ಟ್ ನಿಂದ ನಿರಂತರ ಮಳೆ ಕೊರತೆ ರಾಜ್ಯದಲ್ಲಿ ಕಂಡುಬಂದಿದೆ. ರೈತರು ಕಂಗಾಲಾಗಿದ್ದಾರೆ.

ಚದುರಿದಂತೆ ಅಲ್ಲಲ್ಲಿ ಮಳೆಯಾಗುತ್ತಿದ್ದರೂ ವಾಡಿಕೆ ಪ್ರಮಾಣದ ಮಳೆಯಾಗಿಲ್ಲ. ಮುಂಗಾರು ನಿರ್ಗಮನವಾಗಿದ್ದು, ಹಿಂಗಾರು ಮಳೆ ಆರಂಭವಾಗಿದೆ. ಅಂದರೆ ಮುಂಗಾರಿನಂತೆ ಹಿಂಗಾರು ಮಳೆಯೂ ಕೂಡ ವಾಡಿಕೆಗಿಂತ ಎರಡು ವಾರ ವಿಳಂಬವಾಗಿದೆ. ಹಿಂಗಾರಿನ ಆರಂಭವೂ ದುರ್ಬಲವಾಗಿರುವುದರಿಂದ ವಾಡಿಕೆ ಪ್ರಮಾಣದ ಮಳೆಯಾಗದೆ ಒಣ ಹವೆ ಮುಂದುವರೆದಿದೆ.

ಬ್ರೇಕಿಂಗ್ : ಮೈಸೂರು ದಸರಾ ಮೇಲೆ ಉಗ್ರರ ಕಣ್ಣು, ಹೈಅಲರ್ಟ್ ಘೋಷಣೆ..!

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಜೂನ್ ಒಂದರಿಂದ ಸೆಪ್ಟೆಂಬರ್ ಅಂತ್ಯದವರೆಗೆ ದಕ್ಷಿಣ ಒಳನಾಡಿನಲ್ಲಿ ಶೇ.26ರಷ್ಟು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಶೇ.19ರಷ್ಟು ಹಾಗೂ ಅತಿ ಹೆಚ್ಚು ಮಳೆಯಾಗುತ್ತಿದ್ದ ಮಲೆನಾಡಿನಲ್ಲಿ ಶೇ.39ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಜನವರಿ ಒಂದರಿಂದ ನಿನ್ನೆವರೆಗಿನ ಮಾಹಿತಿ ಪರಿಗಣಿಸಿದರೂ ಶೇ.25ರಷ್ಟು ವಾಡಿಕೆಗಿಂತ ಕಡಿಮೆಯಾಗಿದೆ.

ಕಳೆದ ಒಂದು ವಾರದಲ್ಲಿ ಶೇ.87ರಷ್ಟು ಮಳೆ ಕೊರತೆ ರಾಜ್ಯದಲ್ಲಿದ್ದು, ಅಲ್ಪ-ಸ್ವಲ್ಪ ಉಳಿದಿರುವ ಬೆಳೆಯೂ ರೈತರ ಕೈಸೇರುವ ಲಕ್ಷಣಗಳು ಗೋಚರಿಸುತ್ತಿಲ್ಲ. ಇನ್ನು ಅಕ್ಟೋಬರ್ ಒಂದರಿಂದ ನಿನ್ನೆವರೆಗೆ ಮಾಹಿತಿ ಪರಿಗಣಿಸಿದರೂ 100 ಮಿ.ಮೀ.ನಷ್ಟು ವಾಡಿಕೆ ಮಳೆ ಇದ್ದು, ಕೇವಲ 40ಮಿ.ಮೀ.ನಷ್ಟು ಮಾತ್ರ ಮಳೆಯಾಗಿದೆ. ಇದರಿಂದ ಶೇ.60ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ.

ಈ ಅವಯಲ್ಲಿ ದಕ್ಷಿಣ ಒಳನಾಡಿನಲ್ಲಿ ಶೇ.55ರಷ್ಟು, ಉತ್ತರ ಒಳನಾಡಿನಲ್ಲಿ ಶೇ.89ರಷ್ಟು, ಮಲೆನಾಡಿನಲ್ಲಿ ಶೇ.36ರಷ್ಟು ಹಾಗೂ ಕರಾವಳಿಯಲ್ಲಿ ಶೇ.12ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಇನ್ನೂ ಒಂದು ವಾರ ಕಾಲ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆಗಳು ಇಲ್ಲ. ಚದುರಿದಂತೆ ಅಲ್ಲಲ್ಲಿ ಹಗರದಿಂದ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಕರೆಮಾಡಿ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಬೆಂಗಳೂರು, ಅ.22- ಶಸ್ತ್ರಚಿಕಿತ್ಸೆಗೆ ಒಳಗಾಗಿ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದರು.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಶುಭ ಅಷ್ಟಮಿ ದಿನ, ನನಗೆ ಅಷ್ಟೆ ೈಶ್ವರ್ಯ ಒಲಿದ ಸಂಭ್ರಮ ಎಂದು ತಿಳಿಸಿದ್ದಾರೆ.

ಬ್ರೇಕಿಂಗ್ : ಮೈಸೂರು ದಸರಾ ಮೇಲೆ ಉಗ್ರರ ಕಣ್ಣು, ಹೈಅಲರ್ಟ್ ಘೋಷಣೆ..!

ಶಸ್ತ್ರ ಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿ ಪಡೆಯುತ್ತಿರುವ ಈ ಸಂದರ್ಭದಲ್ಲಿ ನನಗೆ ದೂರವಾಣಿ ಕರೆ ಮಾಡಿ ನನ್ನ ಆರೋಗ್ಯ ಕುಶಲೋಪರಿ ವಿಚಾರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಕಾಳಜಿ ಮತ್ತು ಶುಭ ಹಾರೈಕೆ ನನ್ನ ಆತ್ಮಸ್ಥೆ ೈರ್ಯವನ್ನು ಹೆಚ್ಚಿಸಿದ್ದು, ಆದಷ್ಟು ಬೇಗ ಸಂಪೂರ್ಣ ಗುಣಮುಖನಾಗಿ ಜನಸೇವೆಗೆ ಮರಳುತ್ತೇನೆ ಎಂದು ತಿಳಿಸಿದ್ದಾರೆ.

ಅಮೆರಿಕದಲ್ಲಿ ಯಹೂದಿ-ಮುಸ್ಲಿಂ ಸಂಘರ್ಷ, ಮಹಿಳೆಯೊಬ್ಬರ ಕೊಲೆ

ಡೆಟ್ರಾಯಿಟ್,ಅ.22- ಹಮಾಸ್-ಇಸ್ರೇಲ್ ಸಂಘರ್ಷದ ನಂತರ ಅಮೆರಿಕದಲ್ಲಿ ಯಹೂದಿ ಮತ್ತು ಮುಸ್ಲೀಂ ಸಮುದಾಯಗಳ ನಡುವೆ ಉದ್ವಿಗ್ನತೆ ಹೆಚ್ಚಿರುವ ಸಂದರ್ಭದಲ್ಲೇ ಅಮೆರಿಕ ರಾಜಕೀಯದಲ್ಲಿ ಸಕ್ರಿಯವಾಗಿರುವ ನಾಯಕಿಯೊಬ್ಬರ ಕೊಲೆಯಾಗಿದೆ. ಸಮಂತಾ ವೋಲ್ ಎಂಬುವರ ದೇಹಕ್ಕೆ ಇರಿಯಲಾಗಿದ್ದು, ಅವರ ಶವ ಆಕೆಯ ಮನೆಯ ಹೊರಗಡೆ ಪತ್ತೆಯಾಗಿರುವುದು ಕಂಡು ಬಂದಿದೆ.

ಈ ಕೊಲೆ ಏಕೆ ನಡೆಯಿತು ಎಂಬ ಬಗ್ಗೆ ಇನ್ನೂ ತಿಳಿದುಬಂದಿಲ್ಲ ಇಂತಹ ಸಂದರ್ಭದಲ್ಲಿ ಎಲ್ಲರೂ ತಾಳ್ಮೆಯಿಂದಿರಬೇಕು ಎಂದು ಪೊಲೀಸ್ ಮುಖ್ಯಸ್ಥ ಜೇಮ್ಸ್ ವೈಟ್ ಮನವಿ ಮಾಡಿಕೊಂಡಿದ್ದಾರೆ.ಲಭ್ಯವಿರುವ ಎಲ್ಲಾ ಸಂಗತಿಗಳನ್ನು ಪರಿಶೀಲಿಸುವವರೆಗೆ ಯಾವುದೇ ತೀರ್ಮಾನಗಳನ್ನು ತೆಗೆದುಕೊಳ್ಳದಿರುವುದು ಮುಖ್ಯವಾಗಿದೆ ಎಂದು ವೈಟ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ತಿಂಗಳು ಸಾವಿರಾರು ಜೀವಗಳನ್ನು ತೆಗೆದುಕೊಂಡ ಇಸ್ರೇಲ್ -ಹಮಾಸ್ ಸಂಘರ್ಷದ ಕುರಿತು ಯುನೈಟೆಡ್ ಸ್ಟೇಟ್ಸ್‍ನಾದ್ಯಂತ ಯಹೂದಿ ಮತ್ತು ಮುಸ್ಲಿಂ ಸಮುದಾಯಗಳಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ ಈ ಕೊಲೆ ನಡೆದಿದೆ.ತುರ್ತು ಸಿಬ್ಬಂದಿ ವೋಲ್‍ಳನ್ನು ಆಕೆಯ ದೇಹಕ್ಕೆ ಅನೇಕ ಬಾರಿ ಇರಿದು ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಕ್ತದ ಜಾಡು ಅಧಿಕಾರಿಗಳನ್ನು ವೋಲ್ ಅವರ ಹತ್ತಿರದ ಮನೆಗೆ ಕರೆದೊಯ್ಯಿತು, ಅಲ್ಲಿಯೇ ಅಪರಾಧ ಸಂಭವಿಸಿದೆ ಎಂದು ನಂಬಲಾಗಿದೆ.

ಹಮಾಸ್-ಇಸ್ರೇಲ್ ಮಾದರಿ ಯುದ್ಧವನ್ನು ಭಾರತ ಕಂಡಿಲ್ಲ : ಭಾಗವತ್

ಹತ್ಯೆಯ ಉದ್ದೇಶವು ಅಜ್ಞಾತವಾಗಿದೆ ಎಂದು ಪೊಲೀಸ್ ಹೇಳಿಕೆಯಲ್ಲಿ ಸೇರಿಸಲಾಗಿದೆ.ಎಫ್ ಬಿಐನ ಡೆಟ್ರಾಯಿಟ್ ಕಚೇರಿಯು ಎಎಫ್ ಪಿಗೆ ಇಮೇಲ್‍ನಲ್ಲಿ ಕೋರಿಕೆಯಂತೆ ಡೆಟ್ರಾಯಿಟ್ ಪೊಲೀಸ್ ಇಲಾಖೆಗೆ ಸಹಾಯ ಮಾಡುತ್ತದೆ ಎಂದು ತಿಳಿಸಿದೆ.ನಮ್ಮ ಮಂಡಳಿಯ ಅಧ್ಯಕ್ಷರಾದ ಸಮಂತಾ ವೋಲ್ ಅವರ ಅನಿರೀಕ್ಷಿತ ಸಾವಿನ ಸುದ್ದಿ ತಿಳಿದು ನಮಗೆ ಆಘಾತ ಮತ್ತು ದುಃಖವಾಗಿದೆ ಎಂದು ಸಿನಗಾಗ್ ತನ್ನ -ಫೇಸ್‍ಬುಕ್ ಪುಟದಲ್ಲಿ ಪೋಸ್ಟ್ ಮಾಡಿದೆ.

2022 ರಿಂದ ಸಿನಗಾಗ್ ಅನ್ನು ಮುನ್ನಡೆಸಿರುವ ವೋಲ್ ಅವರು ಡೆಮಾಕ್ರಟಿಕ್ ಪಕ್ಷದ ವ್ಯವಹಾರಗಳಲ್ಲಿ ಸಕ್ರಿಯರಾಗಿದ್ದರು, ಯುಎಸ್ ಕಾಂಗ್ರೆಸ್ ಮಹಿಳೆ ಎಲಿಸಾ ಸ್ಲಾಟ್ಕಿನ್ ಮತ್ತು ಮಿಚಿಗನ್ ಅಟಾರ್ನಿ ಜನರಲ್ ಡಾನಾ ನೆಸ್ಸೆಲ್ ಅವರ ಪ್ರಚಾರದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಡೆಟ್ರಾಯಿಟ್ ಫ್ರೀ ಪ್ರೆಸ್ ತಿಳಿಸಿದೆ.

ಬ್ರೇಕಿಂಗ್ : ಮೈಸೂರು ದಸರಾ ಮೇಲೆ ಉಗ್ರರ ಕಣ್ಣು, ಹೈಅಲರ್ಟ್ ಘೋಷಣೆ..!

ನವದೆಹಲಿ,ಅ.22- ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಹಬ್ಬದ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಮೇಲೆ ಉಗ್ರರ ಕರಿನೆರಳು ಆವರಿಸಿದ್ದು, ತತ್‍ಕ್ಷಣವೇ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಬಿಗಿಭದ್ರತೆ ಕೈಗೊಳ್ಳುವಂತೆ ಕೇಂದ್ರ ಗುಪ್ತಚರ ವಿಭಾಗ ಸೂಚನೆ ಕೊಟ್ಟಿದೆ.

ಪಾಕಿಸ್ತಾನ ಹಾಗೂ ಐಸಿಸ್ ಉಗ್ರಗಾಮಿ ಸಂಘಟನೆಯ 70 ಉಗ್ರರು ನಕಲಿ ಪಾಸ್‍ ಪೋರ್ಟ್ ಪಡೆದು ಭಾರತದೊಳಗೆ ನುಸುಳಿದ್ದು, ನವರಾತ್ರಿ ಸಂದರ್ಭದಲ್ಲಿ ಕರ್ನಾಟಕದ ಮೈಸೂರು, ಪಶ್ಚಿಮ ಬಂಗಾಳದ ಕೋಲ್ಕತ್ತಾ ಹಾಗೂ ಗುಜರಾತ್‍ನ ಅಹದಾಬಾದ್ ನಗರಗಳ ಮೇಲೆ ಉಗ್ರರು ಕಣ್ಣಿಟ್ಟಿದ್ದಾರೆಂದು ಎಚ್ಚರಿಕೆ ಕೊಟ್ಟಿದೆ.

ವಿಶ್ವವಿಖ್ಯಾತ ಮೈಸೂರಿನ ದಸರಾದಂತೆ ಪಶ್ಚಿಮ ಬಂಗಾಳದ ಕಾಳಿ ಉತ್ಸವ ಹಾಗೂ ಗುಜರಾತ್‍ನ ನವರಾತ್ರಿ ಉತ್ಸವದ ಸಂದರ್ಭದಲ್ಲಿ ರಕ್ತದೋಕುಳಿ ನಡೆಸಲು ಪಾಕ್ ಹಾಗೂ ಐಸಿಸ್‍ನ 70 ಉಗ್ರರು ನಕಲಿ ಪಾಸ್‍ ಪೋರ್ಟ್ ಪಡೆದು ಒಳನುಸುಳಿರುವ ಸಾಧ್ಯತೆ ಇದೆ ಎಂದು ಗುಪ್ತಚರ ವಿಭಾಗ ಕೇಂದ್ರ ಗೃಹ ಇಲಾಖೆಗೆ ಮಾಹಿತಿ ನೀಡಿದೆ.

ಈ ಹಿನ್ನಲೆಯಲ್ಲಿ ಕೇಂದ್ರ ಗುಪ್ತಚರ ವಿಭಾಗದ ಮುಖ್ಯಸ್ಥರು ಕರ್ನಾಟಕದ ಗೃಹ ಇಲಾಖೆ ಕಾರ್ಯದರ್ಶಿ ಹಾಗೂ ಗುಪ್ತಚರ ವಿಭಾಗದ ಮುಖ್ಯಸ್ಥರು ಮತ್ತು ಪೊಲೀಸ್ ಮಹಾನಿರ್ದೇಶಕರ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಮೈಸೂರು ಮತ್ತು ಮಂಗಳೂರಿನಲ್ಲಿ ಭದ್ರತೆ ಹೆಚ್ಚಳ ಮಾಡಬೇಕೆಂದು ಸೂಚನೆ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಹಿನ್ನಲೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿ ಮೈಸೂರು ಹಾಗೂ ಮಂಗಳೂರಿನಲ್ಲಿ ದಸರಾ ಹಬ್ಬದ ಕೊನೆಯ ದಿನದವರೆಗೂ ಎಲ್ಲೆಡೆ ಬಿಗಿಭದ್ರತೆ ಕೈಗೊಂಡು ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಬೇಕೆಂದು ತಾಕೀತು ಮಾಡಿದ್ದಾರೆ.

ದಸರಾ ವೀಕ್ಷಣೆಗೆ ದೇಶ-ವಿದೇಶದಿಂದ ಲಕ್ಷಾಂತರ ಸಂಖ್ಯೆ ಸಾರ್ವಜನಿಕರು ಆಗಮಿಸುತ್ತಿರುವ ಹಿನ್ನಲೆಯಲ್ಲಿ ಸಣ್ಣದೊಂದು ಅಹಿತಕರ ಘಟನೆ ನಡೆಯದಂತೆ ಭದ್ರತೆ ಹೆಚ್ಚಿಸಲು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್‍ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸಿಎಂ ಸೂಚನೆ ಹಿನ್ನಲೆಯಲ್ಲಿ ಮೈಸೂರು, ಕೆಎಸ್‍ಆರ್ ಅಣೆಕಟ್ಟು, ಎಲ್ಲೆಡೆ ಬಿಗಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ನಗರಕ್ಕೆ ಆಗಮಿಸುವ ಹೊರರಾಜ್ಯದ ವಿದೇಶಿ ಪ್ರವಾಸಿಗರ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಮೈಸೂರಿನ ಲಾಡ್ಜ್ , ಹೋಂ ಸ್ಟೇ, ಹೋಟೆಲ್‍ಗಳು, ಐಬಿ ಸೇರಿದಂತೆ ಮತ್ತಿತರ ಕಡೆ ಕಳೆದ ರಾತ್ರಿಯಿಂದಲೇ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಶಂಕಾಸ್ಪದ ವ್ಯಕ್ತಿಗಳ ಚಲನವಲನಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ.

ಕಠ್ಮಂಡು ಕಣಿವೆಯಲ್ಲಿ 6.1 ತೀವ್ರತೆಯ ಭೂಕಂಪ

ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಮತ್ತಿತರ ಕಡೆ ನಗರಕ್ಕೆ ಬರುವವರ ಗುರುತಿನ ಚೀಟಿ, ಆಧಾರ್ ಕಾರ್ಡ್ ಪ್ರತಿಯೊಂದನ್ನು ತಪಾಸಣೆ ನಡೆಸಲಾಗುತ್ತಿದೆ. ಅಲ್ಲದೆ ಈಗಾಗಲೇ ಲಾಡ್ಜ್ ಹೋಂ ಸ್ಟೇ ಮತ್ತಿತರ ಕಡೆ ಉಳಿದುಕೊಂಡಿರುವವರ ಮಾಹಿತಿಯನ್ನು ಕಲೆ ಹಾಕಲಾಗಿದೆ.

ಉಗ್ರರು ಸ್ಥಳೀಯರ ರೂಪದಲ್ಲಿ ಹೊಂಚು ಹಾಕಿ ದಾಳಿ ಮಾಡಬಹುದೆಂಬ ಹಿನ್ನಲೆಯಲ್ಲಿ ಭದ್ರತೆಗಾಗಿ ಮೂರುವರೆ ಸಾವಿರ ಪೊಲೀಸರು, ಕೆಎಸ್‍ಆರ್‍ಪಿ, ಆರ್‍ಎಎಫ್, ಗುಪ್ತಚರ ವಿಭಾಗದವರು ದಸರಾ ಹಬ್ಬ ಮುಗಿಯುವವರೆಗೂ ಕರ್ತವ್ಯದಲ್ಲಿರಬೇಕೆಂದು ಸೂಚನೆ ಕೊಡಲಾಗಿದೆ.ಮೈಸೂರು ಮಾತ್ರವಲ್ಲದೆ ಶ್ರೀರಂಗಪಟ್ಟಣ, ಮಡಿಕೇರಿ, ಕೆಆರ್‍ಎಸ್ ಅಣೆಕಟ್ಟಿನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಮೂಲಗಳ ಪ್ರಕಾರ ಕೇಂದ್ರದಿಂದಲೂ ಮೈಸೂರಿಗೆ ಕ್ಷಿಪ್ರ ಕಾರ್ಯಪಡೆಯ ಒಂದು ತಂಡ ಆಗಮಿಸಿದೆ ಎಂದು ಹೇಳಲಾಗುತ್ತಿದೆ.

ಉಗ್ರರ ಹಿಟ್ ಲಿಸ್ಟ್‍ನಲ್ಲಿ ಮೈಸೂರು ಇರುವ ಕಾರಣ ಸಂಭಾವ್ಯ ದಾಳಿಯನ್ನು ತಡೆಯಲು ಕೇಂದ್ರ ಗೃಹ ಇಲಾಖೆ ಸೂಚನೆ ಮೇರೆಗೆ ನುರಿತ ತಂಡವನ್ನು ಕಳುಹಿಸಿಕೊಡಲಾಗಿದೆ.ದಸರಾ ಹಬ್ಬದ ಜೊತೆಗೆ ಪ್ರಸ್ತುತ ದೇಶದಲ್ಲಿ ಐಸಿಸಿ ವಿಶ್ವಕಪ್ ಪಂದ್ಯ ನಡೆಯುತ್ತಿರುವುದರಿಂದ ಪಂದ್ಯವನ್ನು ವೀಕ್ಷಿಸಲು ವಿದೇಶಗಳಿಂದ ಭಾರತಕ್ಕೆ ಆಗಮಿಸಿದ್ದಾರೆ.

ಕೆಲ ಉಗ್ರರು ಪ್ರೇಕ್ಷಕರ ಸೋಗಿನಲ್ಲಿ ನಕಲಿ ಪಾಸ್‍ ಪೋರ್ಟ್ ಪಡೆದು ಭಾರತದೊಳಗೆ ಒಳನಸುಳುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಹೀಗಾಗಿಯೇ ಕೇಂದ್ರ ಗುಪ್ತಚರ ವಿಭಾಗ ಕರ್ನಾಟಕ ಸರ್ಕಾರಕ್ಕೆ ನಾಡಹಬ್ಬ ಮೈಸೂರು ದಸರಾಕ್ಕೆ ಯಾವುದೇ ರೀತಿಯ ಸಣ್ಣ ಚ್ಯುತಿಯೂ ಬಾರತದಂತೆ ಬಿಗಿ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಕಠ್ಮಂಡು ಕಣಿವೆಯಲ್ಲಿ 6.1 ತೀವ್ರತೆಯ ಭೂಕಂಪ

ಕಠ್ಮಂಡು, ಅ. 22- ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಇಂದು ಬೆಳಿಗ್ಗೆ ತೀವ್ರತೆಯ ಭೂಕಂಪ ಸಂಭವಿಸಿದೆ.ರಾಷ್ಟ್ರೀಯ ಭೂಕಂಪ ಮಾನಿಟರಿಂಗ್ ಮತ್ತು ಸಂಶೋಧನಾ ಕೇಂದ್ರದ ಪ್ರಕಾರ, ಧಾಡಿಂಗ್ ಜಿಲ್ಲೆಯಲ್ಲಿ ಬೆಳಗ್ಗೆ 7:39 ಕ್ಕೆ ಭೂಮಿ ನಡುಗಿದೆ.

ರಿಕ್ಟರ್ ಮಾಪಕದಲ್ಲಿ 6.1 ರಷ್ಟು ತೀವ್ರತೆಯ ಭೂಕಂಪನ ದಾಖಲಾಗಿದೆ. ಬಾಗ್ಮತಿ ಮತ್ತು ಗಂಡಕಿ ಪ್ರಾಂತ್ಯಗಳ ಇತರ ಜಿಲ್ಲೆಗಳಲ್ಲೂ ಕಂಪನದ ಅನುಭವವಾಗಿದೆ ಜನರು ಆತಂಕಗೊಂಡಿದ್ದಾರೆ.

ತುಮಕೂರು : ನಡು ರಸ್ತೆಯಲ್ಲೇ ರೌಡಿಶೀಟರ್‌ನನ್ನ ಕೊಚ್ಚಿ ಕೊಂದ ಸಹಚರರು

ಕಂಪನದಿಂದ ಯಾವುದೇ ಸಾವು ಅಥವಾ ಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.,ಇದು ಟಿಬೆಟಿಯನ್ ಮತ್ತು ಭಾರತೀಯ ಟೆಕ್ಟೋನಿಕ್ ಪ್ಲೇಟ್‍ಗಳು ಸಂಸುವ ಪರ್ವತ ಶ್ರೇಣಿಯ ಮೇಲೆ ನೆಲೆಗೊಂಡಿದೆ ಇದರಿಂದ ನೇಪಾಳದಲ್ಲಿ ಭೂಕಂಪಗಳು ಸಾಮಾನ್ಯವಾಗಿದೆ ಎಂದು ಹೇಳಲಾಗುತ್ತಿದೆ.

ಕಳೆದ 2015 ರಲ್ಲಿ 7.8 ತೀವ್ರತೆಯ ಭೂಕಂಪನ ಸಂಭವಿಸಿ ಇದರಲ್ಲಿ ಸುಮಾರು 9,000 ಜನರನ್ನು ಸಾವನ್ನಪಿದ್ದರು.ನೇಪಾಳವು ವಿಶ್ವದ 11 ನೇ ಅತಿ ಹೆಚ್ಚು ಭೂಕಂಪನ ಪೀಡಿತ ರಾಷ್ಟ್ರವಾಗಿದೆ.