Home Blog Page 1880

ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಸಿಕ್ತು ದಸರಾ ಗಿಫ್ಟ್

ನವದೆಹಲಿ,ಅ.18-ದಸರಾ ಹಬ್ಬಕ್ಕೂ ಮುನ್ನವೇ ಕೇಂದ್ರ ನೌಕರರು ಮತ್ತು ಪಿಂಚಣಿದಾರರಿಗೆ ಶುಭ ಸುದ್ದಿ ನೀಡಿರುವ ಕೇಂದ್ರ ಸರ್ಕಾರ ಶೇ.4ರಷ್ಟು ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡಲು ನಿರ್ಧರಿಸಿದೆ. 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ಕೇಂದ್ರ ನೌಕರರು ಮತ್ತು ಪಿಂಚಣಿದಾರರಿಗೆ ಶೇ.4ರಷ್ಟು ತುಟ್ಟಿಭತ್ಯೆಯನ್ನು ಹೆಚ್ಚಿಸಲು ಇಂದು ನಡೆಯುವ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗುತ್ತಿದೆ.

ಪ್ರಧಾನಿ ನರೇಂದ್ರಮೋದಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆ ಹೆಚ್ಚಳಕ್ಕೆ ಸಮ್ಮತಿ ನೀಡಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಒಂದು ವೇಳೆ ಕೇಂದ್ರ ಸರ್ಕಾರ ತುಟ್ಟಿಭತ್ಯೆ ಹೆಚ್ಚಳಕ್ಕೆ ಸಮ್ಮತಿಸಿದರೆ ಕೇಂದ್ರ ಸರ್ಕಾರಿ ನೌಕರರ ಹಾಲಿ ಇರುವ ಶೇ.42ರಿಂದ 46ಕ್ಕೆ ಏರಿಕೆಯಾಗಲಿದೆ.

ಇಂಧನವಿಲ್ಲದ ಕಾರಣ 48 ವಿಮಾನ ಹಾರಾಟ ರದ್ದು ಮಾಡಿದ ಪಾಕಿಸ್ತಾನ

ಕೇಂದ್ರ ಸರ್ಕಾರದ 47 ಲಕ್ಷ ನೌಕರರು ಹಾಗೂ 68 ಲಕ್ಷ ಪಿಂಚಣಿದಾರರಿಗೆ ಇದರ ಲಾಭ ಸಿಗಲಿದೆ. ಅನುಮೋದಿತ ಡಿಎ ಹೆಚ್ಚಳವು ಜುಲೈ 1, 2023ರಿಂದ ಜಾರಿಗೆ ಬರಲಿದೆ. ಕೇಂದ್ರ ಸರ್ಕಾರಿ ನೌಕರರು ಜುಲೈ ಮತ್ತು ಅಕ್ಟೋಬರ್ ನಡುವಿನ ಅವಗೆ ಬಾಕಿಯಿರುವ ಜೊತೆಗೆ ನವೆಂಬರ್ ತಿಂಗಳಿನಿಂದ ರ್ವತ ವೇತನವನ್ನು ಪಡೆಯುತ್ತಾರೆ.

ಕ್ರೀಡಾಪಟುಗಳಿಗೆ ಸರ್ಕಾರೀ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ : ಸಿಎಂ

ಬೆಂಗಳೂರು, ಅ.18- ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ನೇಮಕಾತಿಯಲ್ಲಿ ಕ್ರೀಡಾಳುಗಳಿಗೆ ಶೇ.2ರಷ್ಟು ಮೀಸಲಾತಿ ನೀಡುವ ಕುರಿತು ಸಕಾರಾತ್ಮಕವಾಗಿ ಪರಿಶೀಲನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಕಾರ್ಯಕ್ರದಲ್ಲಿ 19 ಏಷಿಯನ್ ಗೇಮ್ಸ್‍ನಲ್ಲಿ ವಿಜೇತರಾದ ಎಂಟು ಮಂದಿ ಕ್ರೀಡಾಪಟುಗಳು ಹಾಗೂ ಮೂವರು ಕೋಚ್‍ಗಳನ್ನು ಸನ್ಮಾನಿಸಿದರು.

ಚೀನಾ ಹಾಂಗ್‍ಝೌನಲ್ಲಿ ಸೆಪ್ಟಂಬರ್ .23ರಿಂದ ಅಕ್ಟೋಬರ್ 8ರವರೆಗೂ ನಡೆದ ಏಷ್ಯನ್ ಗೇಮ್ಸ್‍ನಲ್ಲಿ ಭಾರತ 28 ಚಿನ್ನ, 38 ಬೆಳ್ಳಿ, 41 ಕಂಚಿನ ಪದಕ ಸೇರಿ ಭಾರತೀಯ ಕ್ರೀಡಾಳುಗಳು 107 ಪದಕ ಗೆದ್ದರಿಂದ ಭಾರತ ಪದಕ ಪಟ್ಟಿಯಲ್ಲಿ ನಾಲ್ಕನೇ ಪಡೆಯುವಂತೆ ಮಾಡಿದ್ದಾರೆ. ಕರ್ನಾಟಕದ ಕೀಡಾಪಟುಗಳ ಪೈಕಿ ನಾಲ್ಕು ಚಿನ್ನ, ನಾಲ್ಕು ಬೆಳ್ಳಿ ಗೆದ್ದಿದ್ದಾರೆ ಎಂದು ಹೇಳಿದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಸ್ಪರ್ಧೆ ಇರುತ್ತದೆ. ಅಲ್ಲಿ ಚಿನ್ನ, ಬೆಳ್ಳಿ ಪದಕ ಗೆಲ್ಲುವುದು ಸಾಧನೆಯಲ್ಲ. ನಿಮ್ಮ ಪರಿಶ್ರಮದ ಫಲ ಇದೆ. ಮುಂದಿನ ಒಲಿಂಪಿಕ್‍ನಲ್ಲೂ ಭಾಗವಹಿಸಿ ಇನ್ನಷ್ಟು ಪದಕಗಳನ್ನು ಗೆದ್ದು ನಾಡಿನ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿ ಎಂದು ಹಾರೈಸಿದರು.

ಪ್ರಸ್ತುತ ಪೊಲೀಸ್ ಮತ್ತು ಅರಣ್ಯ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಶೇ.3 ರಷ್ಟು ಮೀಸಲಾತಿ ನೀಡಲಾಗುತ್ತಿದ್ದು, ಇತರ ಇಲಾಖೆಗಳಲ್ಲಿಯೂ ಶೇ.2 ರಷ್ಟು ಮೀಸಲಾತಿ ನೀಡುವ ಕುರಿತು ಸಕಾರಾತ್ಮಕವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ದೇಶ ಮತ್ತು ರಾಜ್ಯದ ಗೌರವ ಹೆಚ್ಚು ಮಾಡಿದ್ದೀರಿ. ಸಮಸ್ತ ಕನ್ನಡಿಗರಿಗೆ ಹೆಮ್ಮೆಯ ವಿಷಯ. ಈ ಬಾರಿ ಚೀನಾದಲ್ಲಿ ನಡೆದ ಏಷ್ಯನ್ ಗೇಮ್ಸ್‍ನಲ್ಲಿ ಭಾರತೀಯ ಕ್ರೀಡಾಪಟುಗಳು ಅಧಿತ್ಯಕ ಪದಕಗಳನ್ನು ಗೆದ್ದಿದ್ದಾರೆ. ಕಳೆದ ಬಾರಿ 70, ಈ ಬಾರಿ 107 ಪದಕ ಗೆದ್ದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇಡೀ ಜಗತ್ತಿನಲ್ಲಿ ಜನಸಂಖ್ಯೆಯಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಏಷ್ಯನ್ ಗೇಮ್ಸ್‍ನಲ್ಲಿಯೂ ಮೊದಲ-ಎರಡನೇ ಸ್ಥಾನ ಬಂದರೆ ಗೌರವ ಹೆಚ್ಚಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ರಾಜ್ಯ ಸರ್ಕಾರ ಕ್ರೀಡೆಗೆ ಉತ್ತೇಜನ ನೀಡಲು ಬದ್ಧವಾಗಿದ್ದು, ತಾವು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಏಷ್ಯನ್ ಗೇಮ್ಸ್, ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಬಹುಮಾನ ಮೊತ್ತ ನೀಡುವ ಕುರಿತು ಘೋಷಿಸಲಾಗಿತ್ತು. ಅತಿ ಹೆಚ್ಚು ಮೊತ್ತದ ಬಹುಮಾನ ಘೋಷಿಸಿದ ಮೊದಲ ರಾಜ್ಯ ನಮ್ಮದು ಎಂದು ಅವರು ವಿವರಿಸಿದರು.

ಪದಕ ವಿಜೇತರು:
ಕ್ರಿಕೆಟ್‍ನಲ್ಲಿ ಚಿನ್ನ ಗೆದ್ದ ರಾಜೇಶ್ವರಿ ಗಾಯಕ್ವಾಡ್ ಪರವಾಗಿ ಅವರ ಸಹೋದರಿ ಭುವನೇಶ್ವರಿ ಗಾಯಕ್ ವಾಡ್ ಸನ್ಮಾನ ಸ್ವೀಕರಿಸಿದರು. ಟೆನ್ನಿಸ್ ಆಟಗಾರ ರೋಹನ್ ಬೋಪಣ್ಣ, ಅಥ್ಲೇಟಿಕ್ಸ್ ಪುರುಷರ 4400 ಮೀಟರ್ ರಿಲೆಯಲ್ಲಿ ಮಿಜೋ ಚಾಕೋ ಕುರಿಯನ್, ನಿಹಾಲ್‍ಜೋಯಲ್ ಚಿನ್ನದ ಪದಕ ಗೆದ್ದಿದ್ದಾರೆ. ಬ್ಯಾಡ್ಮಿಂಟನ್‍ನಲ್ಲಿ ಮಿಥುನ್ ಮಂಜುನಾಥ್, ಸಾಯಿ ಪ್ರತೀಕ್, ಗಾಲನಲ್ಲಿ ಅದಿತಿ ಅಶೋಕ್ ಬೆಳ್ಳಿ ಪದಕ ಗೆದ್ದಿದ್ದಾರೆ. ಕುಮಾರಿ ದಿವ್ಯ ಶೂಟಿಂಗ್ ಎರಡು ಬೆಳ್ಳಿ ಪದಕ ಪಡೆದಿದ್ದಾರೆ. ತಲಾ ಒಂದು ಪದಕಕ್ಕೆ 15 ಲಕ್ಷದಂತೆ 30 ಲಕ್ಷ ರೂಪಾಯಿಯ ಚೆಕ್ ವಿತರಿಸಲಾಯಿತು.

“ಕಾಂಗ್ರೆಸ್ ಬಂದಿದೆ, ಲೂಟಿ ಜೋರಾಗಿದೆ, ಹೈಕಮಾಂಡ್ ಜೇಬು ತುಂಬಿದೆ”

ತರಬೇತುದಾರರಾದ ಕಬ್ಬಡಿ ಕ್ರೀಡೆಯ ವಿ.ತೇಜಸ್ವಿನಿ, ಹಾಕಿ ತರಬೇತುದಾರರಾದ ಬಿ.ಎಸ್.ಅಂಕಿತ, ಬಾಕ್ಸಿಂಗ್ ತರಬೇತುದಾರರಾದ ಸಿ.ಎ.ಕುಟ್ಟಪ್ಪ ಅವರಿಗೂ 5 ಲಕ್ಷ ರೂಪಾಯಿ ನಗದು ಪುರಷ್ಕಾರ ನೀಡಿ ಸನ್ಮಾನಿಸಲಾಯಿತು. ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾಗೇಂದ್ರ, ಕೃಷಿ ಸಚಿವ ಚಲುವರಾಯಸ್ವಾಮಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ನಸೀರ್ ಅಹ್ಮದ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ವಿದ್ಯುತ್ ಚಾಲಿತ ವಾಹನಗಳ ನೋಂದಣಿಯಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ

ಬೆಂಗಳೂರು, ಅ.18- ರಾಜ್ಯದಲ್ಲಿ ಸದ್ಯಕ್ಕೆ 2 ಲಕ್ಷ ವಿದ್ಯುತ್ ಚಾಲಿತ ವಾಹನಗಳು ನೋಂದಣಿಯಾಗಿದ್ದು, ದೇಶಕ್ಕೆ ಮೂರನೇ ಸ್ಥಾನದಲ್ಲಿದ್ದೇವೆ. ಮುಂಬರುವ ದಿನಗಳಲ್ಲಿ ಇ.ವಿ.ವಾಹನಗಳು ಮತ್ತಷ್ಟು ಜನಪ್ರಿಯವಾಗಲಿದ್ದು, ಸುಗಮ, ತ್ವರಿತ, ಸುರಕ್ಷಿತ ಮತ್ತು ಮಾಲಿನ್ಯರಹಿತ ಸಂಚಾರವನ್ನು ಸಾಧ್ಯವಾಗಿಸಲಿವೆ. ಇನ್ನು ಒಂದು ದಶಕದಲ್ಲಿ ಸಾಂಪ್ರದಾಯಿಕ ಇಂಧನದ ವಾಹನಗಳು ನೇಪಥ್ಯಕ್ಕೆ ಸರಿಯಲಿವೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ.ಪಾಟೀಲ್ ವಿವರಿಸಿದರು.

ಕೆಂಗೇರಿ ಸಮೀಪದ ಮೈಲಸಸಂದ್ರದಲ್ಲಿರುವ ಜೆಎಸ್‍ಎಸ್ ತಾಂತ್ರಿಕ ಶಿಕ್ಷಣ ಅಕಾಡೆಮಿ ಸ್ಥಾಪಿಸಿರುವ ಜಾಗತಿಕ ಮಟ್ಟದ ವಿದ್ಯುತ್ ಚಾಲಿತ ವಾಹನಗಳ ಉತ್ಕೃಷ್ಟತಾ ಮತ್ತು ನಾವೀನ್ಯತಾ ಕೇಂದ್ರವನ್ನು ಲೋಕಾರ್ಪಣೆ ಮಾಡಿದ ಬಳಿಕ ಮಾತನಾಡಿದ ಅವರು, ಕರ್ನಾಟಕದಲ್ಲಿ ಸದ್ಯಕ್ಕೆ 7 ಒಇಎಂ, ಬಿಡಿಭಾಗಗಳನ್ನು ತಯಾರಿಸುವ 50 ಕಂಪನಿಗಳು, 45 ನವೋದ್ಯಮಗಳು, ಅತ್ಯಕ ಆರ್. ಡಿ.ಕೇಂದ್ರಗಳು ಇವೆ. ಈ ಕ್ಷೇತ್ರವು ಸಾವಿರಾರು ಸಂಖ್ಯೆಯ ಉದ್ಯೋಗಗಳನ್ನು ಸೃಷ್ಟಿಸುವ ಸಾಮಥ್ರ್ಯ ಹೊಂದಿದ್ದು, ಇದಕ್ಕೆ ತಕ್ಕಂತೆ ಮಾನವ ಸಂಪನ್ಮೂಲವನ್ನು ಸಜ್ಜುಗೊಳಿಸುವ ಉಪಕ್ರಮವನ್ನು ಶಿಕ್ಷಣ ಕ್ರಮದಲ್ಲೇ ಅಳವಡಿಸಿಕೊಳ್ಳಲಾಗಿದೆ ಎಂದು ಹೇಳಿದರು.

ವಿದ್ಯುತ್ ಚಾಲಿತ ವಾಹನಗಳ ಕ್ಷೇತ್ರಕ್ಕೆ ಸಂಬಂಧಿಸಿದಂತೆ ದೇಶದಲ್ಲಿ ಸಮರ್ಪಕ ನೀತಿಯನ್ನು ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕವಾಗಿದೆ. ಈಗ ಈ ಕ್ಷೇತ್ರದಲ್ಲಿ ರಾಜ್ಯವು ಈಗಾಗಲೇ 25 ಸಾವಿರ ಕೋಟಿ ರೂ. ಹೂಡಿಕೆಯನ್ನು ಆಕರ್ಷಿಸಿದೆ. ಮುಂಬರುವ ದಿನಗಳಲ್ಲಿ ಇನ್ನೂ 15 ಸಾವಿರ ಕೂಟಿ ರೂ. ಹೂಡಿಕೆ ಇಲ್ಲಿ ಸಾಧ್ಯವಾಗಲಿದೆ ಎಂದರು.

“ಕಾಂಗ್ರೆಸ್ ಬಂದಿದೆ, ಲೂಟಿ ಜೋರಾಗಿದೆ, ಹೈಕಮಾಂಡ್ ಜೇಬು ತುಂಬಿದೆ”

ಮೊದಲಿಗೆ ನಮ್ಮಲ್ಲಿ 2017ರಲ್ಲಿ ವಿದ್ಯುತ್ ಚಾಲಿತ ವಾಹನಗಳ ನೀತಿಯನ್ನು ಜಾರಿಗೆ ತರಲಾಯಿತು. 2021ರಲ್ಲಿ ಇದನ್ನು ಜಾಗತಿಕ ಮಟ್ಟಕ್ಕೆ ತಕ್ಕಂತೆ ಪರಿಷ್ಕರಿಸಲಾಯಿತು. ರಾಜ್ಯದ ನೀತಿಯು ಇ.ವಿ.ಬ್ಯಾಟರಿ ಮತ್ತು ಕೋಶಗಳ ಉತ್ಪಾದನೆ, ಬಿಡಿಭಾಗಗಳ ತಯಾರಿಕೆ, ಒಇಎಂ (ಒರಿಜನಲ್ ಎಕ್ವಿಪ್ಮೆಂಟ್ ಮ್ಯಾನುಫ್ಯಾಕ್ಚರರ್ಸ್), ಚಾರ್ಜಿಂಗ್ ಮತ್ತು ಪರೀಕ್ಷಾರ್ಥ ಮೂಲಸೌಲಭ್ಯ, ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಹೂಡಿಕೆಯ ಸಮಗ್ರ ಮೌಲ್ಯ ಸರಪಳಿಯನ್ನು ಒಳಗೊಂಡಿದೆ. ಹೀಗಾಗಿ, ಇ.ವಿ. ಕ್ಷೇತ್ರದಲ್ಲಿ ರಾಜ್ಯವು ದೇಶಕ್ಕೇ ಪ್ರಥಮ ಸ್ಥಾನದಲ್ಲಿದೆ ಎಂದು ನುಡಿದರು.

ಜೆಎಸ್‍ಎಸ್ ತಾಂತ್ರಿಕ ಶಿಕ್ಷಣ ಅಕಾಡೆಮಿಯಲ್ಲಿ ಸ್ಥಾಪಿಸಿರುವ ಉತ್ಕೃಷ್ಟತಾ ಮತ್ತು ನಾವೀನ್ಯತಾ ಕೇಂದ್ರವು ಅತ್ಯುತ್ತಮ ಗುಣಮಟ್ಟದಿಂದ ಕೂಡಿದೆ. ಇದು ತರಬೇತಿ, ಸಂಶೋಧನೆ, ಕೌಶಲಾಭಿವೃದ್ಧಿ, ಸಹಭಾಗಿತ್ವ ಮತ್ತು ಪರಿಪೋಷಣೆಗಳಿಗೆ ಉತ್ತಮ ವೇದಿಕೆಯಾಗಿ ಒದಗಿ ಬರಲಿದೆ. ಇದು ಅಂತಿಮವಾಗಿ ಸುಸ್ಥಿರ ಅಭಿವೃದ್ಧಿಯ ಗುರಿಯನ್ನು ಸಾಧಿಸಲು ಚಿಮ್ಮುಹಲಗೆಯಾಗಿ ಕೆಲಸ ಮಾಡಲಿದೆ ಎಂದು ಪಾಟೀಲ ಭರವಸೆ ವ್ಯಕ್ತಪಡಿಸಿದರು.

ಕಾರ್ಯಕ್ರಮಕ್ಕೂ ಮೊದಲು ಸಚಿವರು ಉತ್ಕೃಷ್ಟತಾ ಕೇಂದ್ರದಲ್ಲಿರುವ 3ಡಿ ಎಕ್ಸಪೀರಿಯನ್ಸ್ ಲ್ಯಾಬ್, ಸರ್ವೀಸ್ ಲ್ಯಾಬ್, ಬಿಡಿಭಾಗಗಳ ಲ್ಯಾಬ್ ಸೇರಿದಂತೆ ಪ್ರತಿಯೊಂದು ವಿಭಾಗಕ್ಕೂ ಭೇಟಿ ನೀಡಿ, ಅಲ್ಲಿನ ಸಾಧನ-ಸಲಕರಣೆಗಳು ಮತ್ತು ಸೌಲಭ್ಯಗಳನ್ನು ವೀಕ್ಷಿಸಿ, ವಿವರಣೆ ಪಡೆದುಕೊಂಡರು.

ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಸಂಸದ ಡಿ.ವಿ.ಸದಾನಂದ ಗೌಡ, ಶಾಸಕ ಎಸ್ ಟಿ ಸೋಮಶೇಖರ್ ಮುಂತಾದವರು ಉಪಸ್ಥಿತರಿದ್ದರು.

ಬಿಜೆಪಿ ಮತ್ತು ಭ್ರಷ್ಟಚಾರಕ್ಕೆ ಜನ್ಮಜನ್ಮದ ನಂಟಿದೆ : ಕಾಂಗ್ರೆಸ್

ಬೆಂಗಳೂರು, ಅ.18- ಆದಾಯ ತೆರಿಗೆ ದಾಳಿಯನ್ನು ನೆಪ ಮಾಡಿಕೊಂಡು ಕಾಂಗ್ರೆಸ್ ನಾಯಕರ ವಿರುದ್ಧ ಪೋಸ್ಟರ್ ವಾರ್ ಶುರು ಮಾಡಿದ್ದ ಬಿಜೆಪಿಗೆ, ತೀರುಗೇಟು ನೀಡಲಾಗಿದ್ದು, ಬಿಜೆಪಿ ಮತ್ತು ಭ್ರಷ್ಟಚಾರ.. ಇದು ಜನ್ಮಜನ್ಮದ ನಂಟು ಎಂದು ಆರೋಪಿಸಲಾಗಿದೆ.

ಕಾಂಗ್ರೆಸ್ ನಾಯಕರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಪೋಸ್ಟರ್‍ನಲ್ಲಿ ಹಗರಣಗಳಲ್ಲಿ ಸಿಲುಕಿದ ಬಿಜೆಪಿಯವರ ಹೆಸರು ಮತ್ತು ಭಾವಚಿತ್ರವನ್ನು ಹಾಕಲಾಗಿದೆ. ಬಿಜೆಪಿ ನಾಯಕರೇ ನಿಮಗೆ ಆತ್ಮಸಾಕ್ಷಿ ಇದ್ದರೆ ಮಾಡಿದ ಪಾಪಕ್ಕೆ ಪ್ರಾಯಶ್ಚಿತವಾಗಿ ಇಷ್ಟೊತ್ತಿಗೆ ಪಕ್ಷ ವಿಸರ್ಜನೆ ಮಾಡಬೇಕಿತ್ತು ಎಂದು ಟಾಂಗ್ ನೀಡಲಾಗಿದೆ.

ಜೈಲು ಪಾಲಾದ ಬಿಜೆಪಿ ನಾಯಕರು ಎಂಬ ತಲೆಬಹರದಡಿ ಮಾಜಿಮುಖ್ಯಮಂತ್ರಿ ಯಡಿಯೂರಪ್ಪ. ಜನಾರ್ದನ ರೆಡ್ಡಿ, ಕಟ್ಟಾಸುಬ್ರಮಣ್ಯನಾಯ್ಡು, ಕೃಷ್ಣಯ್ಯ ಶೆಟ್ಟಿ ಹೆಸರು ಮತ್ತು ಪೋಟೋ ಹಾಕಲಾಗಿದೆ.

“ಕಾಂಗ್ರೆಸ್ ಬಂದಿದೆ, ಲೂಟಿ ಜೋರಾಗಿದೆ, ಹೈಕಮಾಂಡ್ ಜೇಬು ತುಂಬಿದೆ”

ಶೇ.40ರಷ್ಟು ಕಮಿಷನ್ ಆರೋಪದಲ್ಲಿ ಈಶ್ವರಪ್ಪ, ಮುನಿರತ್ನ, ಡಾ.ಕೆ.ಸುಧಾಕರ್, ಬಿ.ಸಿ.ಪಾಟೀಲ್, ಪಿಎಸ್‍ಐ ನೇಮಕಾತಿ ಹಗರಣದಲ್ಲಿ ಡಾ.ಸಿ.ಎನ್.ಅಶ್ವಥ್‍ನಾರಾಯಣ್, ಬಿ.ವೈ.ವಿಜಯೇಂದ್ರ, ಅರಗಜ್ಞಾನೇಂದ್ರ ಅವರ ಹೆಸರುಗಳು, ಬಿಟ್‍ಕಾಯಿನ್ ಹಗರಣದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ರಾಯರೆಡ್ಡಿ, ನಳೀನ್‍ಕುಮಾರ್ ಕಟೀಲ್, ಲಂಚ ಸ್ವಿಕರಿಸುವಾಗ ಸಿಕ್ಕಿ ಬಿದ್ದವರ ಸಾಲಿನಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಮಗ ಪ್ರಶಾಂತ್ ಮಾಡಾಳ್ ಹೆಸರು ಕೇಳಿ ಬಂದಿದೆ ಎಂದು ಪೋಸ್ಟರ್‍ನಲ್ಲಿ ವಿವರಿಸಲಾಗಿದೆ.

ವಿಧಾನಸಭೆ ಚುನಾವಣೆಯಲ್ಲಿ ಸ್ರ್ಪಧಿಸಲು ಹಣ ಪಡೆದು ವಂಚಿಸಿದ್ದ ಚೈತ್ರಾ ಕುಂದಾಪುರ ಪ್ರಕರಣದಲ್ಲಿ ಬಿ.ಎಲ್.ಸಂತೋಶ್, ಸುನೀಲ್ ಕುಮಾರ್, ಸಿ.ಟಿ.ರವಿ ಹೆಸರು ಹೇಳಿ ಬಂದಿದೆ ಎಂದು ದೂರಲಾಗಿದೆ.

ಹಿಂಗಾರು ಮಳೆ ಮತ್ತಷ್ಟು ವಿಳಂಬ

ಬೆಂಗಳೂರು, ಅ.18- ಮುಂಗಾರು ಮಳೆಯಂತೆ ಹಿಂಗಾರು ಮಳೆಯ ಆರಂಭವೂ ವಿಳಂಬವಾಗಿದ್ದು, ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗಿದೆ. ಕಳೆದ ಎರಡು ವಾರದಲ್ಲಿ ಒಣಹವೆ ಹೆಚ್ಚಾಗಿದ್ದು, ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಇದರಿಂದ ಹಿಂಗಾರು ಹಂಗಾಮಿನ ಬಿತ್ತನೆಯೂ ವಾಡಿಕೆಯಂತೆ ಆಗುತ್ತಿಲ್ಲ.

ಉತ್ತರ ಕರ್ನಾಟಕ ಭಾಗದಲ್ಲಿ ಅಕ್ಟೋಬರ್ ಆರಂಭದಿಂದಲೂ ಸಾಕಷ್ಟು ಮಳೆಯಾಗಿಲ್ಲ. ಒಳನಾಡಿನ ಹಲವೆಡೆ ಮಳೆಯಾಗಿದ್ದರೂ ವಾಡಿಕೆ ಪ್ರಮಾಣದಲ್ಲಿ ಆಗುತ್ತಿಲ್ಲ. ಈ ನಡುವೆ ಬಂಗಾಳಕೊಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆಯೇ ಎಂಬುದು ಸದ್ಯಕ್ಕೆ ಗೊಚರವಾಗುತ್ತಿಲ್ಲ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕ ಹಾಗೂ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದರು.

ಶೆಟ್ಟರ್ – ಸಾಹುಕಾರ್ ಭೇಟಿ ಬಗ್ಗೆ ಡಿಕೆಶಿ ಹೇಳಿದ್ದೇನು..?

ಹವಾಮಾನದಲ್ಲಿ ಉಂಟಾಗಿರುವ ವೈಪರಿತ್ಯದಿಂದ ನೈರುತ್ಯ ಮುಂಗಾರು ಮಳೆಯಲ್ಲೂ ವ್ಯತ್ಯಯವಾಗಿ ರಾಜ್ಯದಲ್ಲಿ ಬರದ ಛಾಯೆ ಆವರಿಸಿದೆ. ಈಶಾನ್ಯ ಹಿಂಗಾರು ಹಂಗಾಮಿನಲ್ಲೂ ಹವಾಮಾನದ ವೈಪರಿತ್ಯ ಮುಂದುವರೆಯಲಿದೆ. ಅಂದರೆ ಮುಂದಿನ ಜನವರಿವರೆಗೂ ಹೆಚ್ಚುಕಡಿಮೆ ಹವಾಮಾನ ವೈಪರಿತ್ಯದ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು ಎಂದರು.

ಸಾಮಾನ್ಯವಾಗಿ ಸೆಪ್ಟೆಂಬರ್ ಅಂತ್ಯಕ್ಕೆ ಮುಂಗಾರು ಮುಕ್ತಾಯಗೊಂಡು ಅಕ್ಟೋಬರ್ ಮೊದಲ ವಾರದಲ್ಲಿ ಹಿಂಗಾರು ಆರಂಭವಾಗಬೇಕಿತ್ತು. ಆದರೆ, ಹವಾಮಾನ ವೈಪರಿತ್ಯದಿಂದ ಇನ್ನೂ ಮುಂಗಾರು ಮಳೆ ಮುಕ್ತಾಯಗೊಂಡಿಲ್ಲ. ಮುಂಗಾರು ಮಾರುತಗಳ ಮರಳುವಿಕೆ ಆರಂಭಗೊಂಡಿದೆ. ಇನ್ನೆರಡು ದಿನದಲ್ಲಿ ಮುಂಗಾರು ಮರಳುವಿಕೆ ಪೂರ್ಣಗೊಳ್ಳಲಿದೆ.

ವಾಯುಭಾರ ಕುಸಿತಗಳು ಉಂಟಾಗಿರುವುದರಿಂದ ಮುಂಗಾರು ಮುಗಿಯುತ್ತಿದ್ದಂತೆ ಈ ಶಾನ್ಯ ಹಿಂಗಾರು ಆರಂಭಗೊಳ್ಳಬಹುದು. ವಾಯುಭಾರ ಕುಸಿತದಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಉತ್ತಮ ಮಳೆಯಾಗಲಿದೆಯೆ ಅಥವಾ ಇಲ್ಲವೆ ಎಂಬುದು ನಾಳೆ ಸ್ಪಷ್ಟವಾಗಲಿದೆ ಎಂದು ಅವರು ಹೇಳಿದರು.

ಅಕ್ಟೋಬರ್ ತಿಂಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಅಂದರೆ ಶೇ.50ಕ್ಕಿಂತಲೂ ಹೆಚ್ಚು ಮಳೆ ಕೊರತೆ ರಾಜ್ಯದಲ್ಲಿ ಕಂಡುಬರುತ್ತಿದೆ. ಹೀಗಾಗಿ ಹಿಂಗಾರು ಹಂಗಾಮಿನ ಬೆಳೆಗಳ ಬಿತ್ತನೆಗೆ ತೊಂದರೆಯಾಗಿದೆ. ಮುಂಗಾರು ಹಂಗಾಮಿನ ಬೆಳೆಗಳು ಸಹ ತೇವಾಂಶ ಕೊರತೆಯಿಂದ ಒಣಗುತ್ತಿವೆ.

ಇಂಧನವಿಲ್ಲದ ಕಾರಣ 48 ವಿಮಾನ ಹಾರಾಟ ರದ್ದು ಮಾಡಿದ ಪಾಕಿಸ್ತಾನ

ಮಳೆಗಾಲ ಮುಕ್ತಾಯಗೊಂಡು ಚಳಿಗಾಲ ಆರಂಭವಾಗುವ ಈ ಸಂದರ್ಭದಲ್ಲಿ ರಾಜ್ಯದಲ್ಲಿ ಬೇಸಿಗೆಯ ವಾತಾವರಣ ಕಂಡುಬರುತ್ತಿದೆ. ಭಾಗಶಃ ಮೋಡ ಕವಿದಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಎಲ್ಲೆಡೆ ಒಣ ಹವೆಯೇ ಮುಂದುವರೆದಿದೆ. ಮಳೆ ಕೊರತೆಯಿಂದಾಗಿ ಜಲಾಶಯಗಳ ಒಳ ಹರಿವು ಕ್ಷೀಣಿಸಿದ್ದು, ಮುಂದಿನ ದಿನಗಳು ಇನ್ನಷ್ಟು ಕಷ್ಟದಾಯಕವಾಗಲಿವೆ.

ಸಿಬಿಐ ತನಿಖೆ ಅಗತ್ಯತೆ ಕುರಿತು ಐಟಿ ಅಧಿಕಾರಿಗಳೇ ನಿರ್ಧರಿಸುತ್ತಾರೆ : ಪರಮೇಶ್ವರ್

ಬೆಂಗಳೂರು, ಅ.18- ಶೋಧ ಕಾರ್ಯಾಚರಣೆಯಲ್ಲಿ ಸಿಕ್ಕಿರುವ ಹಣ ಅಥವಾ ಇನ್ಯಾವುದೇ ಮಾಹಿತಿಯ ಬಗ್ಗೆ ಸಿಬಿಐ ತನಿಖೆ ಅಗತ್ಯವಾದರೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳೇ ನಿರ್ಧರಿಸುತ್ತಾರೆ. ಯಾರನ್ನೂ ಹೇಳಿ-ಕೇಳಿ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಆದಾಯ ತೆರಿಗೆ ಅಧಿಕಾರಿಗಳು ಹಣ ಯಾರಿಗೆ ಸಂಬಂಧಪಟ್ಟಿದೆ ಎಂಬುದನ್ನು ಅಗತ್ಯ ಸಂದರ್ಭದಲ್ಲಿ ಬಹಿರಂಗ ಮಾಡುತ್ತಾರೆ. ಬಹುಶಃ ಸದ್ಯದಲ್ಲಿ ತನಿಖೆ ನಡೆಯುತ್ತಿರುವುದರಿಂದ ಈವರೆಗೂ ಮಾಹಿತಿ ಹೊರ ಬಂದಿಲ್ಲ ಇರಬಹುದು ಎಂದರು. ಹಲವಾರು ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳೇ ಅಗತ್ಯ ಮಾಹಿತಿ ನೀಡುತ್ತಾರೆ. ಅಧಿಕೃತ ಮಾಹಿತಿ ಪ್ರಕಟವಾಗದ ಹೊರತು ಹಣ ಅವರಿಗೆ ಸೇರಿದೆ, ಇವರಿಗೆ ಸೇರಿದೆ ಎಂದು ಊಹೆ ಮಾಡಿ ತೇಜೋವಧೆ ಮಾಡುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.

ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಹಣ ಸಂಗ್ರಹಿಸಲಾಗಿದೆ ಎಂಬ ಆರೋಪ ನಿರಾಧಾರ, ಬಿಜೆಪಿಯವರು ಸುಳ್ಳು ಆರೋಪ ಮಾಡುತ್ತಾರೆ. ಬಿಜೆಪಿಯವರು ಅಧಿಕಾರದಲ್ಲಿದ್ದಾಗಲೂ ಈ ರೀತಿಯ ಬೆಳವಣಿಗೆಗಳಾಗಿರಲಿಲ್ಲವೇ ಎಂದು ಪ್ರಶ್ನಿಸಿದರು.

ಪ್ರಕರಣದಲ್ಲಿ ಗಂಭೀರತೆ ಇದೆ ಎಂದಾದರೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳೇ ಸಿಬಿಐ ಸೇರಿದಂತೆ ಅಗತ್ಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಯಾರನ್ನೂ ಹೇಳಿ-ಕೇಳಿ ಮಾಡುವುದಿಲ್ಲ ಎಂದರು. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್-ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಭೇಟಿಯ ಬಗ್ಗೆ ತಮಗೆ ಮಾಹಿತಿ ಇಲ್ಲ. ವಿದೇಶ ಪ್ರವಾಸಕ್ಕೆ ತೆರಳಿದ್ದ ತಾವು ನಿನ್ನೆ ರಾತ್ರಿಯಷ್ಟೆ ಬಂದಿದ್ದೇನೆ. ಯಾವ ವಿಚಾರಗಳು ಗೊತ್ತಿಲ್ಲ. ಕಾಂಗ್ರೆಸ್ ಶಾಸಕರನ್ನು ಬಿಜೆಪಿ ನಾಯಕರು ಭೇಟಿ ಮಾಡಿರುವ ಬಗ್ಗೆ ನನಗೆ ತಿಳಿದಿಲ್ಲ ಎಂದು ಸ್ಪಷ್ಟಪಡಿಸಿದರು.

ಶೆಟ್ಟರ್ – ಸಾಹುಕಾರ್ ಭೇಟಿ ಬಗ್ಗೆ ಡಿಕೆಶಿ ಹೇಳಿದ್ದೇನು..?

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮಾಹಿತಿ ಇರಬೇಕು. ಒಂದು ವೇಳೆ ಆಪರೇಷ್ ಕಮಲ ನಡೆಯುತ್ತಿದ್ದರೆ ಹೈಕಮಾಂಡ್ ಗಮನಕ್ಕೆ ತರುತ್ತೇವೆ. ಜೊತೆಗೆ ಅಗತ್ಯ ಕ್ರಮ ಕೈಗೊಳ್ಳತ್ತೇವೆ ಎಂದಿದ್ದಾರೆ. ಹಲವಾರು ಸಂದರ್ಭದಲ್ಲಿ ಶಾಸಕ ಸ್ನೇಹಿತರು ಸಿಂಗಪೂರ್, ಮಲೇಶಿಯಾ ಸೇರಿದಂತೆ ವಿವಿಧ ಕಡೆ ಪ್ರವಾಸಕ್ಕೆ ಹೋಗಿದ್ದನ್ನು ನೋಡಿದ್ದೇವೆ. ಅದೇ ರೀತಿಯ ಪ್ರವಾಸವನ್ನು ಸತೀಶ್ ಜಾರಕಿಹೊಳಿ ಮತ್ತು ಸ್ನೇಹಿತರು ಪ್ರವಾಸಕ್ಕೆ ಹೋಗಬಹುದು. ಅದಕ್ಕೆ ವಿಶೇಷ ಅರ್ಥ ಕಲ್ಪಸಬೇಕಿಲ್ಲ ಎಂದರು.

ಮೆಟ್ರೋದಲ್ಲಿ ಪ್ರಯಾಣಿಸಿದ ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು,ಅ.18- ಇಲ್ಲಿನ ಕೆಂಗೇರಿ ಸಮೀಪದ ಮೈಲಸಂದ್ರ- ಶ್ರೀನಿವಾಸಪುರದಲ್ಲಿ ಬುಧವಾರ ನಿಗದಿಯಾಗಿದ್ದ ಜೆಎಸ್‍ಎಸ್ ಶಿಕ್ಷಣ ಸಂಸ್ಥೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರು ವಿಧಾನಸೌಧದಿಂದ ಕೆಂಗೇರಿ ಬಸ್ ಟರ್ಮಿನಲ್ ವರೆಗೆ ನಮ್ಮ ಮೆಟ್ರೋದಲ್ಲಿ ಪ್ರಯಾಣ ಮಾಡಿದರು.

ಈ ಬಗ್ಗೆ ಮಾತನಾಡಿದ ಸಚಿವರು, ದೇಶದ ಬೇರೆ ಬೇರೆ ಭಾಗಗಳಲ್ಲಿ ನಾನು ಮೆಟ್ರೋದಲ್ಲಿ ಸಂಚರಿಸಿ, ಅನುಭವ ಪಡೆದಿದ್ದೇನೆ. ಆದರೆ, ಬೆಂಗಳೂರಿನಲ್ಲಿ ನಮ್ಮ ಮನೆಗೆ ಹತ್ತಿರದಲ್ಲಿ ಇನ್ನೂ ಮೆಟ್ರೋ ಬಂದಿಲ್ಲ. ಹೀಗಾಗಿ, ನಮ್ಮ ರಾಜಧಾನಿಯಲ್ಲಿ ಈವರೆಗೆ ಮೆಟ್ರೋದಲ್ಲಿ ಸಂಚರಿಸುವ ಅವಕಾಶ ಸಿಕ್ಕಿರಲಿಲ್ಲ. ಇವತ್ತು ವಾರದ ದಿನವಾದ್ದರಿಂದ ಸಂಚಾರ ದಟ್ಟಣೆ ಇರುತ್ತದೆ ಎನ್ನುವುದು ಗೊತ್ತಿತ್ತು. ಹೀಗಾಗಿ, ಮೊದಲೇ ನಮ್ಮ ಮೆಟ್ರೋದಲ್ಲಿ ಸಂಚರಿಸಲು ನಿರ್ಧರಿಸಿದ್ದೆ. ಇದರಂತೆ ವಿಧಾನಸೌಧದಿಂದ ಮೈಲಸಂದ್ರಕ್ಕೆ ಕೇವಲ 30 ನಿಮಿಷಗಳಲ್ಲಿ ತಲುಪಿದೆ. ಮುಂದಿನ ದಿನಗಳಲ್ಲಿ ನಮ್ಮ ಮೆಟ್ರೋ ನಗರದ ಜೀವನಾಡಿಯಾಗಲಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಪ್ರಯಾಣದುದ್ದಕ್ಕೂ ಸಹ ಪ್ರಯಾಣಿಕರ ಜೊತೆ ಮಾತನಾಡಿಕೊಂಡು, ನಮ್ಮ ಮೆಟ್ರೋದ ಬಗ್ಗೆ ಕೇಳಿಕೊಂಡು ಬಂದೆ. ಪ್ರತಿಯೊಬ್ಬರೂ ಇದರಿಂದ ಸುಗಮ ಸಂಚಾರ ಸಾಧ್ಯವಾಗಿದೆ ಎಂದು ಹೇಳಿದರು. ಸಂಚಾರ ದಟ್ಟಣೆಯ ಸಮಸ್ಯೆ ಆಧುನಿಕ ನಗರಗಳ ಭಾಗವಾಗಿ ಬಿಟ್ಟಿದೆ. ಮೆಟ್ರೋ ಸೌಲಭ್ಯವು ನಗರದ ಸಂಚಾರ ವ್ಯವಸ್ಥೆಯ ರೂಪುರೇಷೆಗಳನ್ನೇ ಆಮೂಲಾಗ್ರವಾಗಿ ಬದಲಿಸುತ್ತಿದೆ.

ಶಹನವಾಜ್ ಹುಸೇನ್ ವಿರುದ್ಧದ ಸಮನ್ಸ್ ಗೆ ವಿಶೇಷ ಕೋರ್ಟ್ ತಡೆ

ಇದರಿಂದ ಬೆಂಗಳೂರಿನ ಉತ್ಪಾದಕತೆ ಗಣನೀಯವಾಗಿ ಹೆಚ್ಚಲಿದೆ. ಜೊತೆಗೆ ಇದು ಶಬ್ದ, ಧೂಳು ಮತ್ತು ಇಂಗಾಲದ ಮಾಲಿನ್ಯಗಳಿಗೆ ಪರಿಹಾರವಾಗಿದೆ. ಅಲ್ಲದೆ, ಆರೋಗ್ಯದ ಸಮಸ್ಯೆಗಳಿಂದಲೂ ತಕ್ಕ ಮಟ್ಟಿಗೆ ಪಾರಾಗಬಹುದು ಎಂದು ಪಾಟೀಲ ವಿವರಿಸಿದರು.

ಕೆಂಗೇರಿಯಲ್ಲಿ ಇಳಿದ ಅವರು, ಅಲ್ಲಿಂದ ಮುಂದಕ್ಕೆ ಜೆಎಸ್‍ಎಸ್ ತಾಂತ್ರಿಕ ಶಿಕ್ಷಣ ಅಕಾಡೆಮಿಯ ಕಾರ್ಯಕ್ರಮಕ್ಕೆ ತೆರಳಿದರು.

ಇಂಧನವಿಲ್ಲದ ಕಾರಣ 48 ವಿಮಾನ ಹಾರಾಟ ರದ್ದು ಮಾಡಿದ ಪಾಕಿಸ್ತಾನ

ಇಸ್ಲಾಮಬಾದ್,ಅ.18- ಈಗಾಗಲೇ ಆರ್ಥಿಕ ದಿವಾಳಿಯಾಗಿರುವ ಪಾಕಿಸ್ತಾನದ ಹೆಸರಾಂತ ವಿಮಾನಯಾನ ಸಂಸ್ಥೆ ಪಾಕಿಸ್ತಾನ್ ಇಂಟರ್‌ನ್ಯಾಶನಲ್ ಏರ್‌ಲೈನ್ಸ್ (ಪಿಐಎ) ಇಂಧನ ಲಭ್ಯವಿಲ್ಲದ ಕಾರಣ 48 ವಿಮಾನಗಳನ್ನು ರದ್ದುಗೊಳಿಸಿದೆ. ಈ ಬೆಳವಣಿಗೆಯು ಇತರೆ ವಿಮಾನಯಾನ ಸಂಸ್ಥೆಗಳ ಮೇಲೂ ಪರಿಣಾಮ ಬೀರಬಹುದೆಂದು ಅಂದಾಜಿಸಲಾಗಿದೆ.

ದೈನಂದಿನ ವಿಮಾನಗಳಿಗೆ ಸೀಮಿತ ಇಂಧನ ಪೂರೈಕೆ ಮತ್ತು ಕಾರ್ಯಾಚರಣೆಯ ಸಮಸ್ಯೆಗಳಿಂದ ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಕೆಲವು ವಿಮಾನಗಳ ನಿರ್ಗಮನವನ್ನು ಮರುಹೊಂದಿಸಲಾಗಿದೆ ಎಂದು ಪಿಐಎ ವಕ್ತಾರರು ತಿಳಿಸಿದ್ದಾರೆ. ಇಂಧನದ ಅಲಭ್ಯತೆಯಿಂದಾಗಿ 13 ದೇಶೀಯ ವಿಮಾನಗಳು ಮತ್ತು ಅವುಗಳಲ್ಲಿ 11 ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ರದ್ದುಗೊಳಿಸಲಾಗಿದೆ ಇತರ ಹನ್ನೆರಡು ವಿಮಾನಗಳು ವಿಳಂಬವಾಗಿವೆ ಎಂದು ಅವರು ಹೇಳಿದ್ದಾರೆ.

ಇಸ್ಲಾಮಿಕ್ ಉಗ್ರರ ರಾಕೆಟ್ ಮಿಸ್‍ಫೈರ್, ಗಾಜಾದಲ್ಲಿ 500ಕ್ಕೂ ಹೆಚ್ಚು ಮಂದಿ ಸಾವು

ಪಿಐಎ ಪ್ರಕಾರ, ರದ್ದಾದ ವಿಮಾನಗಳ ಪ್ರಯಾಣಿಕರನ್ನು ಪರ್ಯಾಯ ವಿಮಾನಗಳಿಗೆ ಸ್ಥಳಾಂತರಿಸಲಾಗಿದೆ. ಈ ನಿರ್ಧಾರದ ನಂತರ ತಮ್ಮ ವಿಮಾನದ ಸ್ಥಿತಿಯನ್ನು ಪರಿಶೀಲಿಸಲು ವಿಮಾನ ನಿಲ್ದಾಣಕ್ಕೆ ಆಗಮಿಸುವ ಮೊದಲು ಕಸ್ಟಮರ್ ಕೇರ್, ಕಚೇರಿಗಳು ಅಥವಾ ಅವರ ಟ್ರಾವೆಲ್ ಏಜೆಂಟ್‍ನ್ನು ಸಂಪರ್ಕಿಸಲು ಪ್ರಯಾಣಿಕರಿಗೆ ಸಲಹೆ ನೀಡಿದ್ದಾರೆ.

ಇಂದು ಪಿಐಎ ಒಂದು ಡಜನ್‍ಗಿಂತಲೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಿದೆ. 16 ಅಂತಾರಾಷ್ಟ್ರೀಯ ಮತ್ತು 8 ದೇಶೀಯ ವಿಮಾನಗಳು ಸೇರಿ ಕೆಲವು ವಿಮಾನಗಳು ವಿಳಂಬವಾಗುವ ನಿರೀಕ್ಷೆಯಿದೆ. ವಿಮಾನಗಳಿಗೆ ಇಂಧನ ಕೊರತೆಯು ಸರ್ಕಾರಿ ಸ್ವಾಮ್ಯದ ಪಾಕಿಸ್ತಾನ್ ಸ್ಟೇಟ್ ಆಯಿಲ್ ಪಾವತಿಸದ ಬಾಕಿಗಳ ಮೇಲೆ ಅದರ ಪೂರೈಕೆಯನ್ನು ಸ್ಥಗಿತಗೊಳಿಸಿದ್ದರಿಂದ ಈ ಸಮಸ್ಯೆ ಉಂಟಾಗಿದೆ. ಈಗಾಗಲೇ ಕುಸಿತದ ಅಂಚಿನಲ್ಲಿರುವ ಮತ್ತು ಸಂಗ್ರಹವಾದ ಸಾಲಗಳಿಂದ ಖಾಸಗೀಕರಣದತ್ತ ಸಾಗುತ್ತಿರುವ ವಿಮಾನಯಾನದ ಭವಿಷ್ಯವು ಅನಿಶ್ಚಿತವಾಗಿಯೇ ಉಳಿದಿದೆ ಎಂದು ಕೆಲವರು ಆತಂಕ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಏರ್‍ಲೈನ್‍ನ ಮನವಿಯ ಹೊರತಾಗಿಯೂ, ಕಾರ್ಯಾಚರಣೆಯ ವೆಚ್ಚಗಳಿಗಾಗಿ 23 ಶತಕೋಟಿ ಬೆಂಬಲವನ್ನು ನೀಡಲು ಪಾಕಿಸ್ತಾನ ಸರ್ಕಾರ ನಿರಾಕರಿಸಿದ್ದರಿಂದ ಪರಿಸ್ಥಿತಿಯನ್ನು ಇನ್ನಷ್ಟು ಇಕ್ಕಟ್ಟಿಗೆ ಸಿಲುಕಿಸಿದೆ. ಪಿಐಎನಿಂದ ಇಂಧನಕ್ಕಾಗಿ ಪಾವತಿಸಲು ಏರ್‍ಲೈನ್‍ಗೆ ದಿನಕ್ಕೆ 100 ಮಿಲಿಯನ್ ಅಗತ್ಯವಿದೆ. ಆದರೆ ನಂತರದವು ಮುಂಗಡ ನಗದು ಪಾವತಿಗಳನ್ನು ಮಾತ್ರ ಬೇಡಿಕೆ ಮಾಡುವುದರಿಂದ, ಪಿಐಎ ಈ ಅಗತ್ಯವನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ, ಇದು ಭವಿಷ್ಯದಲ್ಲಿ ಹೆಚ್ಚು ಸಂಭಾವ್ಯ ವಿಮಾನ ರದ್ದತಿಗೆ ಕಾರಣವಾಗುತ್ತದೆ.

ಶೆಟ್ಟರ್ – ಸಾಹುಕಾರ್ ಭೇಟಿ ಬಗ್ಗೆ ಡಿಕೆಶಿ ಹೇಳಿದ್ದೇನು..?

ಬೆಂಗಳೂರು, ಅ.18- ಕಾಂಗ್ರೆಸ್ ಸರ್ಕಾರ ಪತನಗೊಳಿಸಲು ಬಿಜೆಪಿ-ಜೆಡಿಎಸ್ ನಾಯಕರು ಹುನ್ನಾಡ ನಡೆಸುತ್ತಿದ್ದಾರೆ, ನಮ್ಮ ಪಕ್ಷದ ಶಾಸಕರನ್ನು ಭೇಟಿ ಮಾಡಿ ಏನೆಲ್ಲಾ ಆಮಿಷವೊಡ್ಡುತ್ತಿದ್ದಾರೆ ಎಂಬುದನ್ನು ಖುದ್ದು ಶಾಸಕರಿಂದಲೇ ಹೇಳಿಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಜನತಾದಳದವರು ಹತಾಶೆಯ ಅಂತಿಮ ಸ್ಥಿತಿ ತಲುಪಿದ್ದಾರೆ. ಅವರಿಗೆ ಡಾಕ್ಟರ್‍ಗಳೇ ಅಳೆಯಬೇಕು ಮತ್ತು ಮೇಜರ್ ಆಪರೇಶನ್ ಮಾಡಬೇಕು ಎಂದಿದ್ದಾರೆ.

ಜಗದೀಶ್ ಶೆಟ್ಟರ್ ಹಾಗೂ ರಮೇಶ್ ಜಾರಕಿಹೊಳಿ ಭೇಟಿ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಹಾಗೆಲ್ಲ ಎಲ್ಲದರಲ್ಲೂ ಅನುಮಾನಪಡಲು ಆಗುವುದಿಲ್ಲ. ಜಗದೀಶ್ ಶೆಟ್ಟರ್ ಅವರು, ತಮ್ಮ ಶಕ್ತಿ ಏನಿದೆ ಎಂದು ತೋರಿಸಿದ್ದಾರೆ. ಈ ಬಗ್ಗೆ ನಾನೇನು ಹೆಚ್ಚು ಮಾತನಾಡುವುದಿಲ್ಲ ಎಂದರು.

ಇಸ್ಲಾಮಿಕ್ ಉಗ್ರರ ರಾಕೆಟ್ ಮಿಸ್‍ಫೈರ್, ಗಾಜಾದಲ್ಲಿ 500ಕ್ಕೂ ಹೆಚ್ಚು ಮಂದಿ ಸಾವು

ಬಿಜೆಪಿಯ ತಂಡವೊಂದು ಸರ್ಕಾರ ಬೀಳಿಸಲು ಕೆಲಸ ಮಾಡುತ್ತಿದೆ ಎನ್ನುವ ಬಗ್ಗೆ ತಮಗೆ ಎಲ್ಲಾ ಗೊತ್ತಿದೆ ನನಗೆ. ಯಾವ ಶಾಸಕರನ್ನು, ಯಾರು ಯಾವಾಗ ಭೇಟಿ ಮಾಡಿದರು, ಮಾಡುತ್ತಿದ್ದಾರೆ ಎಂದು ಸಂಬಂಧಪಟ್ಟವರೇ ನನಗೆ ಮತ್ತು ಸಿಎಂಗೆ ದೂರು ನೀಡುತ್ತಿದ್ದಾರೆ. ಬಿಜೆಪಿಯವರು ಏನು ಆಫರ್ ಕೊಡುತ್ತಿದ್ದಾರೆ ಅನ್ನೋದನ್ನೂ ಹೇಳಿದ್ದಾರೆ. ನಮ್ಮ ಬಳಿ ಪ್ರತಿಯೊಂದು ಮಾಹಿತಿ ಇದೆ. ಯಾರನ್ನೆಲ್ಲ ಭೇಟಿಯಾಗಿದ್ದಾರೆ ಎಂಬುದನ್ನು ಅಧಿವೇಶನ ನಡೆದ ವೇಳೆ ನಮ್ಮ ಶಾಸಕರಿಂದಲೇ ಹೇಳಿಸುತ್ತೇನೆ ಎಂದು ಹೇಳಿದರು.

ಇತ್ತೀಚೆಗೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿಯೂ ಡಿ.ಕೆ.ಶಿವಕುಮಾರ್ ಇದೇ ರೀತಿಯ ಆರೋಪ ಮಾಡಿದ್ದರು. ಸರ್ಕಾರ ಪತನಗೊಳಿಸಲು ಬಿಜೆಪಿಯ ಒಂದು ತಂಡ ಪ್ರಯತ್ನಿಸುತ್ತಿದೆ ಎಂದು ದೂರಿದರು. ಅದನ್ನು ಇಂದು ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.

“ಕಾಂಗ್ರೆಸ್ ಬಂದಿದೆ, ಲೂಟಿ ಜೋರಾಗಿದೆ, ಹೈಕಮಾಂಡ್ ಜೇಬು ತುಂಬಿದೆ”

ಬೆಂಗಳೂರು,ಅ.18-ಕಾಂಗ್ರೆಸ್ ಬಂದಿದೆ ಕಲೆಕ್ಷನ್ ಮಾಡಿದೆ. ಕಾಂಗ್ರೆಸ್ ಬಂದಿದೆ ಕಮಿಷನ್ ತಿಂದಿದೆ. ಕಾಂಗ್ರೆಸ್ ಬಂದಿದೆ ಲೂಟಿ ಜೋರಾಗಿದೆ. ಕಾಂಗ್ರೆಸ್ ಬಂದಿದೆ ಹೈಕಮಾಂಡ್ ಜೇಬು ತುಂಬಿದೆ. ಕಾಂಗ್ರೆಸ್ ಬಂದಿದೆ ಕರ್ನಾಟಕ ದಿವಾಳಿ ಆಗಿದೆ ಎಂದು ಪ್ರತಿಪಕ್ಷ ಬಿಜೆಪಿ ಪೋಸ್ಟ್ ಮಾಡುವ ಮೂಲಕ ಕಾಂಗ್ರೆಸ್ ನಾಯಕರನ್ನು ಕೆಣಕಿದೆ.

ಈ ಕುರಿತು ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಚುನಾವಣೆಗೂ ಮುನ್ನ ರಾಜ್ಯದ ಜನತೆಯ ಕಿವಿ ಮೇಲೆ ಕಲರ್ ಕಲರ್ ಹೂವಿಟ್ಟು, ನಂಗೂ ಫ್ರೀ, ನಿಂಗೂ ಫ್ರೀ ಎಂದು ಬೊಗಳೆ ಬಿಟ್ಟಿದ್ದ ಸಿದ್ದರಾಮಯ್ಯ ಅವರೇ ಇಲ್ಲಿ ನೋಡಿ, ನಿಮ್ಮ ಸರ್ಕಾರದ ಅಸಲಿ ತಾಕತ್ತು ಏನೆಂಬುದು ತಿಳಿಯುತ್ತದೆ.

ನೇಕಾರರ ಮಕ್ಕಳಿಗೆ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರೈತ ವಿದ್ಯಾನಿಧಿ ಯೋಜನೆಯನ್ನು ವಾಪಸ್ ಪಡೆದಿದ್ದೀರಿ, ಈಗ ನೇಕಾರರಿಗೆ ಉಚಿತ ವಿದ್ಯುತ್ ಹಾಗಿರಲಿ, ಕನಿಷ್ಟ ಒಂದು ತಾಸು ವಿದ್ಯುತ್ ನೀಡಲು ನಿಮ್ಮ ಸರ್ಕಾರಕ್ಕೆ ಯೋಗ್ಯತೆಯೂ ಇಲ್ಲ, ಸಾಮಥ್ರ್ಯವೂ ಇಲ್ಲ. ಅಂತಹ ಅಸಮರ್ಥ ಸರ್ಕಾರ ನಿಮ್ಮದು ಎಂದು ಆರೋಪ ಮಾಡಿದೆ.

ಮಲಮಗನನ್ನು ಕೊಂದು ಶವವನ್ನು ತೊಟ್ಟಿಯಲ್ಲಿ ಬಚ್ಚಿಟ್ಟಿದ್ದ ಮಲತಾಯಿ

ಒಟ್ಟಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನಡೆಯುತ್ತಿರುವ ಕಿರಿಕ್ ದೊಡ್ಡದಾಗುತ್ತಿದೆ. ಈ ನಡುವೆ ಲೋಕಸಭೆ ಚುನಾವಣೆಗೆ ಇದೇ ಅಸ್ತ್ರವನ್ನು ದೊಡ್ಡದಾಗಿ ಬಳಸಿಕೊಳ್ಳಲು ಬಿಜೆಪಿ ರಾಜ್ಯ ನಾಯಕರು ಪ್ಲ್ಯಾನ್ ಮಾಡಿದಂತೆ ತೋರುತ್ತಿದೆ. ಹೀಗೆ ಕಾಂಗ್ರೆಸ್ ಬಿಜೆಪಿ ನಡುವೆ ನಡೆಯುತ್ತಿರುವ ಐಟಿ ಜಟಾಪಟಿ ಸದ್ಯಕ್ಕೆ ಮುಗಿಯುವ ಯಾವುದೇ ಸಾಧ್ಯತೆ ಇಲ್ಲ. ಅಷ್ಟೇ ಅಲ್ಲ ಗ್ಯಾರಂಟಿ ವಾರ್ ಕೂಡ ಮುಂದುವರಿಯುವುದು ಗ್ಯಾರಂಟಿಯಾಗಿದೆ.