Thursday, November 6, 2025
Home Blog Page 1898

ನವೆಂಬರ್‌ನಲ್ಲಿ ಜಾತಿಗಣತಿ ವರದಿ ಬಹಿರಂಗ..!?

ಬೆಂಗಳೂರು,ಅ.11- ಬಿಹಾರದ ನಂತರ ಕರ್ನಾಟಕದಲ್ಲಿ ನವೆಂಬರ್ ವೇಳೆಗೆ ಜಾತಿ ಜನಗಣತಿಯ ವರದಿಯನ್ನು ಬಹಿರಂಗಗೊಳ್ಳುವ ಸಾಧ್ಯತೆಗಳಿವೆ. ಹಿಂದುಳಿದ ವರ್ಗಗಳ ಅಭಿವೃದ್ಧಿ ಸಚಿವ ಶಿವರಾಜ್ ತಂಗಡಗಿ, ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆಯನ್ನು ಭೇಟಿ ಮಾಡಿ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿರುವುದು ಇದಕ್ಕೆ ಪುಷ್ಟಿ ನೀಡಿದೆ.

ಪ್ರಸ್ತುತ ಸನ್ನಿವೇಶದಲ್ಲಿ ವರದಿ ಬಿಡುಗಡೆಯ ಸಾಧ್ಯತೆಗಳು ಹೆಚ್ಚಾಗಿ ಕಂಡುಬರುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಜೊತೆ ಚರ್ಚೆ ನಡೆಸಿದ್ದು, ಈ ಹಿಂದೆ ಕಾಂತರಾಜು ನೇತೃತ್ವದ ಆಯೋಗ ನಡೆಸಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯನ್ನು ಯಥಾವತ್ತು ಸಲ್ಲಿಕೆ ಮಾಡುವಂತೆ ಸೂಚನೆ ನೀಡಿದ್ದಾರೆ.

ಕಾಂತರಾಜು ಅವರ ಆಯೋಗ ಸಮೀಕ್ಷೆ ನಡೆಸಿ ತಯಾರಿಸಿದ ವರದಿಗೆ ಆಗಿನ ಆಯೋಗದ ಕಾರ್ಯದರ್ಶಿ ಸಹಿ ಹಾಕಿರಲಿಲ್ಲ. ಅದರ ಹೊರತಾಗಿಯೂ ವರದಿಯನ್ನು ಕಾಂತರಾಜು ಅವರು ಸರ್ಕಾರದ ಮುಖ್ಯಕಾರ್ಯದರ್ಶಿ ಅವರಿಗೆ ನೀಡಿದ್ದರು. ಅದು ಊರ್ಜಿತವಲ್ಲ ಎಂಬ ತಾಂತ್ರಿಕ ಅಂಶಗಳು ಎದುರಾಗಿವೆ. ಕಾರ್ಯದರ್ಶಿಯವರ ಸಹಿಯನ್ನೊಳಗೊಂಡ ಕ್ರಮಬದ್ಧವಾದ ವರದಿಯನ್ನು ಮತ್ತೊಮ್ಮೆ ಸರ್ಕಾರಕ್ಕೆ ಸಲ್ಲಿಸುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ.

ಮನವೊಲಿಸಿದ ಬಿಎಸ್‌ವೈ, ಧರಣಿ ಕೈಬಿಟ್ಟ ಶಾಸಕ ಮುನಿರತ್ನ

ನವೆಂಬರ್‍ವರೆಗೂ ಕಾಲಾವಕಾಶ ನೀಡುವಂತೆ ಆಯೋಗದ ಅಧ್ಯಕ್ಷರು ಮನವಿ ಮಾಡಿಕೊಂಡಿದ್ದಾರೆ. ಸರಿಪಡಿಸಿದ ತಾಂತ್ರಿಕ ಅಂಶಗಳನ್ನು ಪರಿಗಣಿಸಿ ವರದಿ ಸಲ್ಲಿಕೆಯಾಗುವ ನಿರೀಕ್ಷೆಗಳಿವೆ. ಕಳೆದ ಎಂಟು ವರ್ಷಗಳ ಹಿಂದೆ ನಡೆದಿದ್ದ ಸಮೀಕ್ಷೆ ವರದಿಯನ್ನು ಪ್ರಸ್ತುತ ಅಂಗೀಕರಿಸಲು ಸಾಧ್ಯವೇ ಎಂಬ ಗೊಂದಲಗಳು ತಲೆ ಎತ್ತಿವೆ.

ಕಾಂತರಾಜು ಅವರ ಆಯೋಗದಲ್ಲಿ ಕೆಲವು ಜಾತಿಗಳ ಸಂಖ್ಯಾವಾರು ಪ್ರಮಾಣದ ಬಗ್ಗೆ ಆಕ್ಷೇಪಗಳೆವೆ. ಕೆಲವು ಸಮುದಾಯಗಳು ಇದನ್ನು ತೀವ್ರವಾಗಿ ವಿರೋಧಿಸಿಯೂ ಇವೆ. ಮನೆ ಮನೆ ಸಮೀಕ್ಷೆ ಸರಿಯಾಗಿ ನಡೆದಿಲ್ಲ. ಸಮೀಕ್ಷಾ ವರದಿಯಲ್ಲಿ ಕೆಲವು ಮಾಹಿತಿಗಳನ್ನು ಆ ವೇಳೆ ತಿರುಚಲಾಗಿದೆ ಎಂಬ ಆರೋಪಗಳಿವೆ. ಹಲವು ಗಂಭೀರ ಆರೋಪಗಳಿಂದ ಕೂಡಿರುವ ಸಮೀಕ್ಷಾ ವರದಿಯನ್ನು ಅಂಗೀಕರಿಸುವುದು ಸರಿಯಲ್ಲ ಎಂಬ ವಾದಗಳು ಕೇಳಿಬಂದಿವೆ.

ರಾಜ್ಯಸರ್ಕಾರ ಸಮೀಕ್ಷೆ ನಡೆಸುವಾಗ ಆರ್ಥಿಕ, ಸಾಮಾಜಿಕ ಮಾಹಿತಿ ಸಂಗ್ರಹ ಎಂದು ಹೇಳಿತ್ತು. ವರದಿ ಸಿದ್ಧಗೊಂಡ ಬಳಿಕ ಅದನ್ನು ಜಾತಿ ಜನಗಣತಿ ಎಂದು ಪ್ರತಿಪಾದಿಸಲಾಗುತ್ತಿದೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯಾವುದೇ ಸೌಲಭ್ಯಗಳ ಹಂಚಿಕೆ ಹಾಗೂ ಸಾಮಾಜಿಕ ನ್ಯಾಯಗಳ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಜಾತಿ ಜನಸಂಖ್ಯೆಯ ಮಾಹಿತಿಗಳು ಅಗತ್ಯ. ಆದರೆ ಅದನ್ನು ಕ್ರೂಢೀಕರಿಸಲು ಕರಾರುವಕ್ಕಾದ ಸಮೀಕ್ಷೆಗಳು ನಡೆಯಬೇಕು. ದೇಶದಲ್ಲಿ ಜನಗಣತಿಗೆ ಭಾರತೀಯ ಗಣತಿ ಆಯೋಗಕ್ಕೆ ಮಾತ್ರ ಅಕಾರ ಇದೆ ಎಂದು ಸುಪ್ರೀಂಕೋರ್ಟ್ ತೀಪೆರ್ದರಲ್ಲಿ ಸ್ಪಷ್ಟಪಡಿಸಿದೆ.

ಹೀಗಿರುವಾಗ ಹಿಂದುಳಿದ ವರ್ಗಗಳ ಆಯೋಗದ ನೇತೃತ್ವದಲ್ಲಿ ನಡೆದಿದೆ ಎಂದು ಹೇಳಲಾದ ಸಮೀಕ್ಷಾ ವರದಿ ಕಾನೂನಾತ್ಮಕವಾಗಿ ಊರ್ಜಿತವೇ ಎಂಬುದು ಪ್ರಶ್ನಾರ್ಹವಾಗಿದೆ. ಸಮೀಕ್ಷಾ ವರದಿಯನ್ನು ಬಿಡುಗಡೆ ಮಾಡಿ ಜಾರಿಗೊಳಿಸಲು ಮುಂದಾದರೆ ಮತ್ತಷ್ಟು ಪ್ರತಿಭಟನೆಗಳು ಎದುರಾಗುವ ಸಾಧ್ಯತೆಯಿದೆ.

ಜೆಡಿಎಸ್, ಬಿಜೆಪಿ ಅಕಾರ ನಡೆಸಿದ ಸಂದರ್ಭದಲ್ಲಿ ವರದಿಯ ತಂಟೆಗೆ ಹೋಗಿರಲಿಲ್ಲ. ಸಿದ್ಧರಾಮಯ್ಯ ಅದನ್ನೇ ಗುರಿಯಾಗಿಟ್ಟುಕೊಂಡು ಹಲವು ಬಾರಿ ತಗಾದೆ ತೆಗೆದಿದ್ದರು. ಈಗ ಸಿದ್ದರಾಮಯ್ಯನವರೇ ಅಧಿಕಾರದಲ್ಲಿರುವುದರಿಂದ ವರದಿಯ ಅಂಗೀಕಾರದ ಅನಿವಾರ್ಯತೆ ಎದುರಾಗಿದೆ.

ಇದಕ್ಕೆ ಪೂರಕವಾಗಿ ಎಐಸಿಸಿ ಕೂಡ ದೇಶಾದ್ಯಂತ ಜಾತಿ ಜನಗಣತಿ ನಡೆಯಬೇಕು ಎಂದು ಪ್ರತಿಪಾದಿಸಿದೆ. ಕಾಂಗ್ರೆಸ್ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಈ ರೀತಿಯ ಸಮೀಕ್ಷೆ ನಡೆಯಲಿದೆ ಮತ್ತು ಅವು ಅಂಗೀಕಾರಗೊಳ್ಳಲಿವೆ ಎಂದು ರಾಹುಲ್‍ಗಾಂಧಿ ತಿಳಿಸಿದ್ದಾರೆ. ಸಿದ್ದರಾಮಯ್ಯ ಕೂಡ ಅದಕ್ಕೆ ದನಿಗೂಡಿಸಿದ್ದಾರೆ.

ಪಟಾಕಿ ದುರಂತ : ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ

ಆದರೆ ಕಾನೂನಾತ್ಮಕವಾಗಿ ಸಾಕಷ್ಟು ತೊಂದರೆಗಳು, ಗೊಂದಲಗಳು ಇರುವುದರಿಂದ ರಾಜ್ಯಸರ್ಕಾರ ವರದಿ ಅಂಗೀಕರಿಸಿದರೆ ನ್ಯಾಯಾಲಯದಲ್ಲಿ ಅದು ಮೇಲುಗೈ ಸಾಧಿಸಲಿದೆಯೇ ಎಂಬುದು ಚರ್ಚೆಗೊಳಗಾಗುತ್ತಿದೆ. ಒಂದು ವೇಳೆ ಸರ್ಕಾರ ಹಿಂದಿನ ವರದಿಯನ್ನು ಅಂಗೀಕರಿಸಿ ಲೋಪದೋಷಗಳ ಪರಿಷ್ಕರಣೆಗೆ ಮತ್ತೊಂದು ಸಮೀಕ್ಷೆ ನಡೆಸುವ ಸಾಧ್ಯತೆಗಳ ಬಗ್ಗೆಯೂ ಸಮಾಲೋಚನೆ ನಡೆದಿವೆ ಎಂದು ಹೇಳಲಾಗುತ್ತಿದೆ.

ನಿಷೇಧಿತ PFI ಮುಖಂಡರ ಮನೆ ಮೇಲೆ NIA ದಾಳಿ

ನವದೆಹಲಿ,ಅ.11- ನಿಷೇಧಿತ ಪಿಎಫ್‍ಐ ಸಂಘಟನೆಯ ಮುಖಂಡರ ಮೇಲೆ ದೇಶದ ವಿವಿಧೆಡೆ ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ದೇಶದ ವಿವಿಧೆಡೆ ದಾಳಿ ನಡೆಸಿದ್ದಾರೆ. ಕೆಲ ದಿನಗಳ ಹಿಂದೆ ಚೆನ್ನೈ, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ಮತ್ತಿತರ ಕಡೆ ಎನ್‍ಐಎ ದಾಳಿ ನಡೆಸಿತ್ತು. ಇದರ ಬೆನ್ನಲೇ ಇಂದು ಹಲವಾರು ರಾಜ್ಯಗಳಲ್ಲಿ ದಾಳಿ ನಡೆಸಿ ಕೆಲವರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಮಿಳುನಾಡಿನ ಮಧುರೈ ಜಿಲ್ಲೆಯ ಹಲವು ಕಡೆಗಳಲ್ಲಿ ಎನ್‍ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಇಲ್ಲಿನ ಕಜಿಮಾರ್ ಸ್ಟ್ರೀಟ್‍ನಲ್ಲೂ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಜಮಾತ್ ಹಿಂದ್ ಮೂವ್‍ಮೆಂಟ್ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ತಾಜುದ್ದೀನ್ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಸಂಘಟನೆ ಹಲವರು ಸರ್ಕಾರದ ವಿರುದ್ಧ ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಡ್ರಗ್ಸ್ ಕಳ್ಳಸಾಗಣಿಕೆದಾರನಿಂದ 4.94 ಕೋಟಿ ರೂ.ನಗದು ಸೀಜ್

ಮಹಾರಾಷ್ಟ್ರದ ಮುಂಬೈ ಸೇರಿದಂತೆ ಹಲವು ಕಡೆಗಳಲ್ಲಿ ಎನ್‍ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 2006ರ ಮುಂಬೈ ರೈಲ್ ಬಾಂಬ್ ಸ್ಪೋಟ ಪ್ರಕರಣದ ಪ್ರಮುಖ ಆರೋಪಿ ವಾಹಿದ್ ಶೇಖ್‍ನ ಮನೆ ಮೇಲೆ ದಾಳಿ ನಡೆಸಿದೆ. ವಿಖ್ರೋಲಿಯಲ್ಲಿರುವ ಆರೋಪಿಯ ಮನೆಯಲ್ಲಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ.

ಯುವ ದಸರಾ, ಏರ್ ಶೋ : ಕಂಗೊಳಿಸಲಿದೆ ಸಾಂಸ್ಕೃತಿಕ ನಗರಿ

ಮೈಸೂರು, ಅ. 11- ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಆರಂಭಗೊಂಡಿದ್ದು, ಅ. 18ರಿಂದ ಯುವ ದಸರಾ ನಡೆಯಲಿದ್ದು ಅ. 23ರಂದು ಏರ್ ಶೋ ಹಮ್ಮಿಕೊಳ್ಳಲಾಗಿದೆ. ದಸರಾ ಸಿದ್ಧತೆ ಕುರಿತು ಅರಮನೆ ಮಂಡಳಿ ಕಚೇರಿಯಲ್ಲಿ ಜಿಲ್ಲಾಕಾರಿ ಡಾ. ಕೆ. ವಿ. ರಾಜೇಂದ್ರ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.

ಐದು ವರ್ಷಗಳ ಬಳಿಕ ದಸರಾ ಮಹೋತ್ಸವದಲ್ಲಿ ಏರ್ ಶೋ ಆಯೋಜಿಸಲಾಗಿದೆ. ಅ. 22ರಂದು ಏರ್ ಶೋ ರಿಹರ್ಸಲ್ ಹಾಗೂ ಅ.23ರಂದು ಪೂರ್ಣಪ್ರಮಾಣದ ಏರ್ ಶೋ ಆಯೋಜನೆ ಮಾಡಲಾಗಿದೆ ಎಂದು ಅವರು ವಿವರಿಸಿದರು. ಬನ್ನಿಮಂಟಪದ ಕವಾಯತು ಮೈದಾನದಲ್ಲಿ ಸಂಜೆ 4 ಗಂಟೆಗೆ ಏರ್ ಶೋ ಆರಂಭವಾಗಲಿದ್ದು, ಒಟ್ಟು 45 ನಿಮಿಷ ಏರ್ ಶೋ ನಡೆಯಲಿದೆ ಎಂದು ಅವರು ತಿಳಿಸಿದರು.

ಪಟಾಕಿ ದುರಂತ : ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ

ಈ ಬಾರಿ ಬರದ ಪರಿಣಾಮ ಸರ್ಕಾರದ ಮಾರ್ಗಸೂಚಿಯನ್ವಯ ಸಾಂಪ್ರದಾಯಿಕ ದಸರಾವನ್ನು ವ್ಯವಸ್ಥಿತವಾಗಿ ಆಚರಿಸಲು ಸಿದ್ದತೆ ಮಾಡಲಾಗುತ್ತಿದೆ, ದಸರಾಗೆ ಜನರನ್ನು ಆಕರ್ಷಿಸಲು ಕ್ರಮ ಕೈಗೊಳ್ಳಲಾಗುವುದು. ಹೊರ ರಾಜ್ಯಗಳಿಂದ ಮೈಸೂರಿಗೆ ಬರುವ ಪ್ರವಾಸಿಗರ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡುವ ಚಿಂತನೆಯಿದೆ ಎಂದು ಡಿಸಿ ರಾಜೇಂದ್ರ ಹೇಳಿದರು.

ಎಸ್‍ಪಿ ಸೀಮಾ ಲಾಟ್ಕರ್ ಮಾತನಾಡಿ, ಅ. 18 ರಿಂದ 21ರವರೆಗೆ ಯುವ ದಸರಾ ಆಯೋಜನೆ ಮಾಡಲಾಗಿದ್ದು ಉದ್ಘಾಟನೆಯಲ್ಲಿ ನಟ ಶಿವರಾಜ್ ಕುಮಾರ್ ಭಾಗಿಯಾಗಲಿದ್ದಾರೆ. ಕನ್ನಡ ಹಿನ್ನೆಲೆ ಗಾಯಕ ಸಂಚಿತ್ ಹೆಗ್ಡೆ ಮತ್ತು ಅವರ ತಂಡ ಯುವ ದಸರಾದಲ್ಲಿ ಪಾಲ್ಗೊಳ್ಳಲಿದೆ ಎಂದು ತಿಳಿಸಿದರು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಯುವ ದಸರಾ ಸಂಭ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್. ಸಿ. ಮಹದೇವಪ್ಪ ಉದ್ಘಾಟಿಸಲಿದ್ದಾರೆ. ಸಂಜೆ 6.30 ರಿಂದ ರಾತ್ರಿ 10.30 ರವರಿಗೆ ಯುವ ದಸರಾ ನಡೆಯಲಿದೆ ಎಂದು ಹೇಳಿದರು.

ಪಾಕ್‌ನಲ್ಲಿ ಭಾರತದ ಮತ್ತೊಬ್ಬ ಮೋಸ್ಟ್ ವಾಂಟೆಡ್ ಉಗ್ರನನ್ನ ಹತ್ಯೆಮಾಡಿದ ‘ಅಪರಿಚಿತರು’

ಮೊದಲ ದಿನ ಹಾಸ್ಯನಟ ಹಾಗೂ ಸಂಗೀತ ನಿರ್ದೇಶಕರಾದ ಸಾಧು ಕೋಕಿಲ ಮತ್ತು ತಂಡದಿಂದ ಸಂಗೀತ ಸಂಜೆ, ಕನ್ನಡದಾಲ್ ಒಕೆ ತಂಡದಿಂದ ಸಂಗೀತ ಕಾರ್ಯಕ್ರಮ, ಬಾಲಿವುಡ್ ಹಾಡುಗಾರರು ಕೂಡ ಈ ಬಾರಿ ಯುವ ದಸರಾದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ. ಸ್ಥಳೀಯ ಪ್ರತಿಭೆಗಳಿಗೂ ಯುವ ದಸರಾ ಸಂಭ್ರಮದಲ್ಲಿ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಸೀಮಾ ಲಾಟ್ಕರ್ ತಿಳಿಸಿದರು.

ಕೈ ಕೊಡುವುದರಲ್ಲಿ ಡಿಕೆಶಿ ನಿಸ್ಸೀಮ : ಜೆಡಿಎಸ್

ಬೆಂಗಳೂರು,ಅ.11- ಕೈ ಅಭಯದ ಸಂಕೇತವೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಂಬಿದ್ದರು. ಆದರೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರದ್ದು ಕೈ ಎತ್ತುವು ದಷ್ಟೇ ಅಲ್ಲ, ಕೈ ಕೊಡುವುದರಲ್ಲೂ ಎತ್ತಿದ ಕೈ ಎಂದು ಕಾಂಗ್ರೆಸ್ ವಿರುದ್ಧ ಜೆಡಿಎಸ್ ಆರೋಪಿಸಿದೆ.

ವಿಧಾನಸಭೆಯಲ್ಲೂ ಕೈ ಎತ್ತಿದರು, ಮಂಡ್ಯದಲ್ಲೂ ಕೈ ಎತ್ತಿದರು. ಬೆಂಗಳೂರು ಗ್ರಾಮಾಂತರದಲ್ಲಿ ಕುಮಾರಸ್ವಾಮಿಯವರು ಅವರ ಕೈ ಹಿಡಿದರು. ಆದರೆ ಮಂಡ್ಯದಲ್ಲಿ ಅದೇ ಕೈ ಅವರನ್ನು ನಡುರಸ್ತೆಯಲ್ಲಿ ಬಿಟ್ಟು ಜಾರಿಕೊಂಡಿತು.

ಇದೆಂತಾ ಕೈಚಳಕ? ಅವರ ಹಸ್ತವಾಸಿ ವಿಸ್ವಾಶಘಾತುಕಕ್ಕೇ ಹೆಸರುವಾಸಿಯಲ್ಲವೇ? ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರಶ್ನಿಸಿದೆ. 4 ವರ್ಷದ ಹಿಂದೆ ಸರ್ಕಾರ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮನೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬಂದಿದ್ದರಾ? ಸುಳ್ಳು ಹೇಳುವುದಕ್ಕೆ ಸಾಧಿಸಿವೆ ಕಾಳಿನಷ್ಟಾದರೂ ಸಂಕೋಚ ಬೇಡವೇ? ಎಂದು ವಾಗ್ದಾಳಿ ನಡೆಸಿದೆ.

135 ಸೀಟು ಗೆದ್ದಿದ್ದೇವೆ ಎನ್ನುವ ಮಾಕಿನಲ್ಲಿ ಏನು ಹೇಳಿದರೂ ಜನ ನಂಬುತ್ತಾರೆಂಬ ಅಹಂಕಾರವೇ? ಆಗ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಮನೆ ಅಂಗಳದಲ್ಲಿ ಅಂಗಿ ಮಡಚಿ ಮುಖ ಒಣಗಿಸಿಕೊಂಡು ನಿಂತರರು ಯಾರೆಂದು ಗೊತ್ತಿಲ್ಲವೇ? ಎಲ್ಲೋ ಇದ್ದ ಕುಮಾರಸ್ವಾಮಿ ಅವರನ್ನು ಬೆನ್ನು ಹತ್ತಿ, ಆಮೇಲೆ ಕಾಡಿ ಬೇಡಿ ದೇವೇಗೌಡರ ಪದತಲಕ್ಕೆ ಬಿದ್ದವರ ಪುರಾಣ ಬಿಚ್ಚಿಡಬೇಕೆ? ಎಂದು ಪ್ರಶ್ನಿಸಿದೆ.

ಮಾತೆತ್ತಿದರೆ ಜಾತಿಗಳನ್ನು ಎಳೆದು ತರುತ್ತೀರಿ. ಕನಕಪುರ ಸುತ್ತಮುತ್ತ ಅದೇ ಮಹಾನುಭಾವರಿಂದ ಒಕ್ಕಲೆದ್ದವರು ಎಷ್ಟೋ ಜನ. ಅವರೆಲ್ಲ ಯಾವ ಜಾತಿಯವರು? ಅಧಿಕಾರಕ್ಕೊಂದು ಜಾತಿ, ಕೊಳ್ಳೆ ಹೊಡೆಯುವುದಕ್ಕೊಂದು ಜಾತಿಯೇ ಎಂದು ಟೀಕಿಸಿದೆ.

ಜಾತ್ಯತೀತ ಎಂದ ಪೆನ್ನು ಜಾತಿ ಜಾತಿ ಎಂದು ಗೀಚುತ್ತಿದೆ! ಮಿದುಳಿಗೂ ಪೆನ್ನಿಗೂ ಲಿಂಕ್ ತಪ್ಪಿದೆಯಾ ಹೇಗೆ? ಅಥವಾ ಬೇರೆಯವರು ಬೆಪ್ಪರು ಎನ್ನುವ ಮದವೇ? ಅಧಿಕಾರಕ್ಕಾಗಿ ಶಿವಸೇನೆಯ ಜತೆ ಮಹಾ ಶೋ ನಡೆಸಿದಾಗ ಆ ಜಾತ್ಯತೀತತೆಯನ್ನು ಯಾವ ಶೋಕೇಸಿನಲ್ಲಿ ಇಟ್ಟಿದ್ದಿರಿ? ಬಿಜೆಪಿ ಜತೆ ಸುದೀರ್ಘ ಕಾಲ ಅಧಿಕಾರದ ಸುಖ ಅನುಭವಿಸಿದ ನಿತೀಶ್ ಕುಮಾರ್ ಪಕ್ಕದಲ್ಲಿ ಆಸೀನರಾದಾಗ ಜಾತ್ಯತೀತವನ್ನು ಎಲ್ಲಿ ಜೀತಕ್ಕೆ ಇಟ್ಟಿದ್ದಿರಿ? ಐಎನ್ ಡಿಐಎಕೂಟದಲ್ಲಿರುವ ಬಿಜೆಪಿಯ ಎಲ್ಲಾ ನೇರ ಫಲಾನುಭವಿಗಳ ಪದತಲದಲ್ಲಿ ಹಣೆ ಇಟ್ಟಾಗ ಹಸ್ತದ ಜಾತ್ಯತೀತತೆಯನ್ನು ಮಡಚಿ ಯಾರ ಜೇಬಿನಲ್ಲಿ ಇಟ್ಟಿದ್ದಿರಿ? ಎಂದು ತೀವ್ರ ವಾಗ್ದಾಳಿ ನಡೆಸಿದೆ.

ಪಟಾಕಿ ದುರಂತ : ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ

ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಕುಮಾರಸ್ವಾಮಿ ಅವರ ಷಡ್ಯಂತ್ರ ಆರೋಪದ ವಿಚಾರಕ್ಕೆ ತಿರುಗಿಬಿದ್ದಿರುವ ಜೆಡಿಎಸ್ ಕಾಂಗ್ರೆಸ್ಸಿಗೆ ಸದಾ ಕಾಲಮಾನವೂ ಕಾಮಾಲೆ ರೋಗ ಬಡಿದಿರುತ್ತದೆ ಎನ್ನುವುದಕ್ಕೆ ಇದೇ ಸಾಕ್ಷಿ. ತನ್ನ ತಟ್ಟೆಯಲ್ಲಿ ಸತ್ತ ಹೆಗ್ಗಣವಿದ್ದರೂ, ಪಕ್ಕದ ಎಲೆಯ ಬಗ್ಗೆ ಎಲ್ಲಿಲ್ಲದ ಕಾಳಜಿ, ಚಿಂತೆ, ತೋರಿಕೆ. ಇದು ಆ ಪಕ್ಷದ ಪಾರಂಪರಿಕ ವಾಡಿಕೆ. 75 ವರ್ಷಗಳಿಂದ ಅದನ್ನೇ ಮಾಡಿದೆ ಎಂದು ಟೀಕಿಸಿದೆ.

ಪ್ರಾದೇಶಿಕ ಪಕ್ಷಗಳ ಪಟ್ಟುಗಳಿಗೆ ಸೂತ್ರವಿಲ್ಲದ ಪತಂಗದಂತೆ ಪತರಗುಟ್ಟುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಹೆಸರು ದುಃಸ್ವಪ್ನದಂತೆ ಕಾಡುತ್ತಿದೆ. ರಾಜಕೀಯ ಸ್ವಾರ್ಥಕ್ಕಾಗಿ ಭಯೋತ್ಪಾದಕರನ್ನೂ ಸಮರ್ಥಿಸುತ್ತಾ; ಈಗ ಭಯ, ಒತ್ತಡ, ಷರತ್ತು ಎಂದು ಪಠಿಸುತ್ತಿದೆ ಎಂದು ಆರೋಪಿಸಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಪಮಾನಕರವಾಗಿ ದೆಹಲಿಗೆ ಅಟ್ಟಿದವರು ಯಾರು? ಸಿದ್ದವನದಲ್ಲಿ ಸಿದ್ದಸೂತ್ರ ಹೆಣೆದು ಮೈತ್ರಿ ಸರ್ಕಾರವನ್ನು ತೆಗೆದವರು ಯಾರು? ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರೇ ಕಾಡಿ-ಬೇಡಿ ತಂದ ಸರಕಾರಕ್ಕೆ ಅಂತ್ಯ ಕಾಣಿಸಿದ ಆ ಹ್ಯೂಬ್ಲೆಟ್ ವೀರನ ಬಗ್ಗೆ ಗೊತ್ತಿಲ್ಲವೇ? ಲೋಕಸಭೆ ಚುನಾವಣೆ ಹೊತ್ತಿಗೆ ಮೈತ್ರಿಗೆ ಪಿಂಡ ಪ್ರದಾನ ಮಾಡಿ ಸ್ವಪಕ್ಷವನ್ನೇ ಬೀದಿಯಲ್ಲಿ ನಿಲ್ಲಿಸಿದ ಆ ಲೋಕೋತ್ತರ ಜಾತ್ಯತೀತವಾದಿಯ ಅಸಲಿಮುಖ ಗೋಚರವಾಗಿಲ್ಲವೇ ಎಂದು ಪ್ರಶ್ನಿಸಿದೆ.

ಪಾಕ್‌ನಲ್ಲಿ ಭಾರತದ ಮತ್ತೊಬ್ಬ ಮೋಸ್ಟ್ ವಾಂಟೆಡ್ ಉಗ್ರನನ್ನ ಹತ್ಯೆಮಾಡಿದ ‘ಅಪರಿಚಿತರು’

ನಂಬಿಕೆ, ಪ್ರಾಮಾಣಿಕತೆ, ನಿಷ್ಠೆ, ನಿಯತ್ತನ್ನು ಗುಜರಿಗೆ ಹಾಕಿ ಸಂಡೇ ಬಜಾರ್ ನಂತೆ ವಿಧಾನಸೌಧವನ್ನೇ ಗುರುವಾರದ ಬಜಾರ್ ಮಾಡಿಕೊಂಡವರು ನೀವು. ನಿಜಕ್ಕೂ ನಿಮಗೆ ಲಜ್ಜೆ ಇದೆಯಾ? ವಾರಕ್ಕೊಂದು ದಿನ, ಅದೂ ಗುರುವಾರದ ದಿನವಷ್ಟೇ ಸಂಪುಟ ನೆಪದಲ್ಲಿ 3ನೇ ಮಹಡಿಯಲ್ಲಿ ಕೆಲ ಹೊತ್ತಷ್ಟೇ ಠಳಾಯಿಸಿ, 24/7 ರಾಜ್ಯವನ್ನು ಗುಡಿಸಿ ಗುಂಡಾಂತರ ಮಾಡುತ್ತಿರುವವರು ಲಜ್ಜೆಯಲ್ಲೂ ಕನಿಷ್ಠ-ಗರಿಷ್ಠ ಎಂದು ಅಳತೆ ಮಾಡುತ್ತಿರುವುದು ಅದ್ಭುತ ಎಂದು ತೀವ್ರ ಟೀಕಾ ಪ್ರಹಾರ ನಡೆಸಿದೆ.

ಆಫ್ಘಾನಿಸ್ತಾನದಲ್ಲಿ ಮತ್ತೆ ಭೂಕಂಪ

ಕಾಬೂಲ್,ಅ.11- ವಾಯುವ್ಯ ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಮತ್ತೊಂದು ಪ್ರಬಲ ಭೂಕಂಪ ಸಂಭವಿಸಿದ್ದು, 10 ಕಿಮೀ (6.21 ಮೈಲಿ) ಆಳದಲ್ಲಿ ಕಂಪನದ ಅನುಭವವಾಗಿದೆ ಎಂದು ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋಸೈನ್ ಸಂಶೋಧನಾ ಕೇಂದ್ರ ವರದಿ ಮಾಡಿದೆ.

ಈ ಬಾರಿ ಭೂಕಂಪದಿಂದ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ಇನ್ನೂ ಯಾವುದೇ ವರದಿಗಳು ಬಂದಿಲ್ಲ. ಈಗಾಗಲೇ ಭೂಕಂಪದಿಂದ ತತ್ತರಿಸಿರುವ ದೇಶಕ್ಕೆ ಇಂದು ಕೂಡ ಭೂಮಿ ಕಂಪಿಸಿರುವುದು ಆತಂಕ ಮತ್ತಷ್ಟು ಹೆಚ್ಚಿಸಿದೆ. ಶನಿವಾರದಂದು ಹೆರಾತ್ ನಗರದ ವಾಯುವ್ಯದಲ್ಲಿ ಅನೇಕ ಭೂಕಂಪಗಳಲ್ಲಿ ಸಾವಿರಾರು ಮನೆಗಳನ್ನು ನೆಲಸಮಗೊಂಡವು, ಸುಮಾರು 4000 ಕ್ಕೂ ಹೆಚ್ಚು ಮಂದಿ ಈ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.

ಟರ್ಕಿ ಮತ್ತು ಸಿರಿಯಾದಲ್ಲಿ ಸುಮಾರು 50,000 ಜನರನ್ನು ಕೊಂದ ಭೂಕಂಪಗಳ ನಂತರ ಶನಿವಾರದ ಕಂಪನಗಳು 6.3 ತೀವ್ರತೆಯೊಂದಿಗೆ ಈ ವರ್ಷ ವಿಶ್ವದ ಅತ್ಯಂತ ಮಾರಕ ಭೂಕಂಪ ಎನಿಸಿಕೊಂಡಿವೆ. ಶನಿವಾರದ ಕಂಪನದಿಂದಾಗಿ ಸಾವಿನ ಸಂಖ್ಯೆ 4,000 ಮೀರಿದೆ. ಇದಲ್ಲದೆ, ಸುಮಾರು 20 ಹಳ್ಳಿಗಳಲ್ಲಿ ಸುಮಾರು 2,000 ಮನೆಗಳು ಸಂಪೂರ್ಣವಾಗಿ ಕುಸಿದಿವೆ ಎಂದು ಅಫ್ಘಾನಿಸ್ತಾನದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ವಕ್ತಾರ ಮುಲ್ಲಾ ಸೈಕ್ ಹೇಳಿದ್ದಾರೆ.

ಪಾಕ್‌ನಲ್ಲಿ ಭಾರತದ ಮತ್ತೊಬ್ಬ ಮೋಸ್ಟ್ ವಾಂಟೆಡ್ ಉಗ್ರನನ್ನ ಹತ್ಯೆಮಾಡಿದ ‘ಅಪರಿಚಿತರು’

ಏತನ್ಮಧ್ಯೆ, ವಿಶ್ವಸಂಸ್ಥೆಯ ಮಾನವೀಯ ಕಚೇರಿಯು ಭೂಕಂಪನ ಪರಿಹಾರಕ್ಕಾಗಿ 5 ಮಿಲಿಯನ್ ನೆರವು ಘೋಷಿಸಿದೆ. ಅಫ್ಘಾನಿಸ್ತಾನದ ಆರೋಗ್ಯ ವ್ಯವಸ್ಥೆ, ಹೆಚ್ಚಾಗಿ ವಿದೇಶಿ ನೆರವಿನ ಮೇಲೆ ಅವಲಂಬಿತವಾಗಿದೆ. ತಾಲಿಬಾನ್ ವಹಿಸಿಕೊಂಡ ನಂತರ ಎರಡು ವರ್ಷಗಳಲ್ಲಿ ಆರ್ಥಿಕ ಸಂಕಷ್ಟ ಎದುರಿಸಿದೆ ಮತ್ತು ಹೆಚ್ಚಿನ ಅಂತಾರಾಷ್ಟ್ರೀಯ ನೆರವು ಸ್ಥಗಿತಗೊಂಡಿದೆ.

ವೈದ್ಯಕೀಯ ಮತ್ತು ಆಹಾರದ ನೆರವಿನ ಜೊತೆಗೆ, ಬದುಕುಳಿದವರು ತಾಪಮಾನ ಕಡಿಮೆಯಾಗುತ್ತಿದ್ದಂತೆ ಆಶ್ರಯದ ಅವಶ್ಯಕತೆಯಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ತುರ್ತು ಪ್ರತಿಕ್ರಿಯೆಯ ಮುಖ್ಯಸ್ಥರು ತಿಳಿಸಿದ್ದಾರೆ.

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಭಿನ್ನಮತದ ಭೀತಿ

ನವದೆಹಲಿ,ಅ.11- ಹಿಂದಿ ಹೃದಯ ರಾಜ್ಯದಲ್ಲಿ ಗೆದ್ದು ಲೋಕಸಭೆ ಚುನಾವಣೆಯಲ್ಲಿ ಮೂರನೇ ಬಾರಿಗೆ ಅಧಿಕಾರ ಹಿಡಿಯಲು ಹವಣಿಸುತ್ತಿರುವ ಬಿಜೆಪಿಗೆ ಒಳ ಹೊಡೆತವೇ ಮುಂದಿನ ವಿಧಾನಸಭೆ ಚುನಾವಣಾ ಫಲಿತಾಂಶದ ಮೇಲೆ ತೀವ್ರ ಪರಿಣಾಮ ಬೀರುವ ಸಾಧ್ಯತೆ ಇದೆ. ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‍ಘಡದಲ್ಲಿ ಆಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ಹನುಮಂತನ ಬಾಲದಂತೆ ಬೆಳೆಯುತ್ತಲೇ ಇದೆ.

ಟಿಕೆಟ್ ಸಿಗದಿರುವವರು ಬೇರೆ ಪಕ್ಷಗಳತ್ತ ಮುಖ ಮಾಡುತ್ತಿದ್ದರೆ ಇನ್ನು ಕೆಲವರು ಪಕ್ಷೇತರ ಅಭ್ಯರ್ಥಿಗಳಾಗಿ ಕಣಕ್ಕಿಳಿಯುವುದಾಗಿ ಸೆಡ್ಡು ಹೊಡೆದಿದ್ದಾರೆ. ಬಿಜೆಪಿಯ ನಡೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಕಾಂಗ್ರೆಸ್ ಮೂರು ರಾಜ್ಯಗಳಲ್ಲಿ ನವರಾತ್ರಿ ಹಬ್ಬದ ನಂತರ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸುವ ರಾಜಕೀಯ ಜಾಣ್ಮೆಯನ್ನು ಪ್ರದರ್ಶಿಸಿದೆ.

ಬಿಜೆಪಿ ಆಡಳಿತ ಇರುವ ಮಧ್ಯಪ್ರದೇಶದಲ್ಲಿ ಈ ಬಾರಿ ಆಡಳಿತ ವಿರೋಧಿ ಅಲೆ ಪ್ರಬಲವಾಗಿದೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್ ವಿರುದ್ಧ ಜನಾಕ್ರೋಶ ಇರುವುದರಿಂದ ಹಾಲಿ ಕೆಲವು ಸಚಿವರು ಮತ್ತು ಶಾಸಕರಿಗೆ ಟಿಕೆಟ್ ನೀಡದೆ ಕೋಕ್ ಕೊಡಲಾಗಿದೆ. ಆಡಳಿತ ವಿರೋಧಿ ಅಲೆಯನ್ನು ತಗ್ಗಿಸುವ ಕಾರಣಕ್ಕಾಗಿಯೇ ಈ ಬಾರಿ ಬಿಜೆಪಿ ಕೇಂದ್ರ ಸಚಿವರು ಮತ್ತು ಸಂಸದರನ್ನು ಕಣಕ್ಕಿಳಿಸಿದೆ. ಶಿವರಾಜ್ ಚವ್ಹಾಣ್ ಸಂಪುಟದಲ್ಲಿದ್ದ 24 ಸಚಿವರಿಗೆ ಮಾತ್ರ ಟಿಕೆಟ್ ನೀಡಿದ್ದರೆ ಉಳಿದವರಿಗೆ ಅರ್ಧ ನಾಮ ಹಾಕಲಾಗಿದೆ.

ಸದ್ಯದ ಪರಿಸ್ಥಿತಿಯಲ್ಲಿ ಶಿವರಾಜ್ ಸಿಂಗ್ ಚವ್ಹಾಣ್ ತಮ್ಮ ಬೆಂಬಲಿಗರಿಗೂ ಟಿಕೆಟ್ ಕೊಡಿಸುವ ಪರಿಸ್ಥಿತಿಯಲ್ಲಿಲ್ಲ. ಸ್ವತಃ ಅವರಿಗೆ ಪಕ್ಷವು 3ನೇ ಪಟ್ಟಿಯಲ್ಲಿ ಟಿಕೆಟ್ ಘೋಷಣೆ ಮಾಡಿತ್ತು. ಅರಮನೆಗಳ ನಗರಿ ಎಂದೇ ಖ್ಯಾತಿಯಾಗಿರುವ ರಾಜಸ್ಥಾನದಲ್ಲೂ ಬಿಜೆಪಿ, ಕಾಂಗ್ರೆಸ್ ಆಡಳಿತ ವಿರೋಧಿ ಅಲೆಯನ್ನು ಬಳಸಿಕೊಳ್ಳುವ ಹವಣಿಕೆಯಲ್ಲಿದೆ.

ಆದರೆ ರಾಜ್ಯದ ಪ್ರಭಾವಿ ನಾಯಕಿ ರಾಜವಂಶಸ್ಥೆ ಮತ್ತು ಮಾಜಿ ಮುಖ್ಯಮಂತ್ರಿ ವಸುಂಧರ ರಾಜೆಗೆ ಟಿಕೆಟ್ ಕೊಡದಿರುವುದು ಪಕ್ಷದಲ್ಲಿ ಅವರನ್ನು ಕಡೆಗಣಿಸುತ್ತಿರುವುದು ಬಿಜೆಪಿಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ.

ವಸುಂಧರ ರಾಜೆ ಅವರ ಆಪ್ತರಾದ ರಾಜ್‍ಗೋಪಾಲ್ ಶೇಖಾವತ್ ಮೂರು ಬಾರಿ ಶಾಸಕರಾಗಿರುವ ನರಾಪಥ್ ಸಿಂಗ್ ರಾಜ್ವಿ ಸೇರಿದಂತೆ ಹಲವರಿಗೆ ಟಿಕೆಟ್ ಕೊಟ್ಟಿಲ್ಲ. ಇದು ಸಹಜವಾಗಿ ವಸುಂಧರ ರಾಜೇಯ ಪಿತ್ತ ನೆತ್ತಿಗೇರುವಂತೆ ಮಾಡಿದೆ. ಶತಾಯಗತಾಯ ಗೆಲ್ಲಲೇಬೇಕೆಂದು ಪಣ ತೊಟ್ಟಿರುವ ಬಿಜೆಪಿ ಹಲವು ಸಂಸದರನ್ನು ಅಖಾಡಕ್ಕಿಳಿಸಿದೆ.

ಪಾಕ್‌ನಲ್ಲಿ ಭಾರತದ ಮತ್ತೊಬ್ಬ ಮೋಸ್ಟ್ ವಾಂಟೆಡ್ ಉಗ್ರನನ್ನ ಹತ್ಯೆಮಾಡಿದ ‘ಅಪರಿಚಿತರು’

ಜೋತ್ವಾರ ಕ್ಷೇತ್ರದಿಂದ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ರಾಜವರ್ಧನ್ ಸಿಂಗ್ ರಾಥೋಡ್, ದಿವ್ಯಾ ಕುಮಾರಿ ಸೇರಿದಂತೆ ಮತ್ತಿತರರಿಗೆ ಟಿಕೆಟ್ ಕೊಡಲಾಗಿದೆ. ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ ಎಂದು ಸ್ವತಃ ವಸುಂಧರ ರಾಜೇ ಹೇಳಿಕೊಂಡಿದ್ದರೂ ಪರಿಸ್ಥಿತಿ ಮಾತ್ರ ಬೂದಿಮುಚ್ಚಿದ ಕೆಂಡದಂತಿದೆ.

ನಕ್ಸಲ್ ಪೀಡಿತ ಛತ್ತೀಸ್‍ಘಡದಲ್ಲೂ ಬಿಜೆಪಿ ಪರಿಸ್ಥಿತಿ ಭಿನ್ನವಾಗಿಲ್ಲ. ರಾಜ್ಯದಲ್ಲಿ ನವೆಂಬರ್ 7 ಮತ್ತು 17ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಏಕೆಂದರೆ ಬಿಜೆಪಿ ಛತ್ತೀಸ್‍ಗಢ ಚುನಾವಣೆಗೆ 64 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ಬಿಡುಗಡೆ ಮಾಡಿರುವ ಎರಡನೇ ಪಟ್ಟಿ ಬಳಿಕ ದಾಂತೇವಾಡದಲ್ಲಿ ಅಭ್ಯರ್ಥಿಗಳ ಅತೃಪ್ತಿ ಬಯಲಿಗೆ ಬರುತ್ತಿದೆ.

ದಾಂತೇವಾಡ ಮಾಜಿ ಶಾಸಕ ಭೀಮಾ ಮಾಂಡವಿ ಅವರ ಪುತ್ರಿ ದೀಪಾ ಮಾಂಡವಿ ಅವರಿಂದ ಇದೀಗ ಮೊದಲ ಪ್ರತಿಕ್ರಿಯೆ ಬಂದಿದ್ದು, ನನ್ನ ತಂದೆ ಬಿಜೆಪಿಗಾಗಿ ಪ್ರಾಣ ತ್ಯಾಗ ಮಾಡಿದ್ದಾರೆ. ತಂದೆಯ ಮರಣದ ನಂತರ ತಾಯಿ ಓಜಸ್ವಿ ಪಕ್ಷದಲ್ಲಿ ಸಕ್ರಿಯರಾಗಿದ್ದರು, ಆದರೂ ಪಕ್ಷವು ಆ ತ್ಯಾಗವನ್ನು ಒಪ್ಪಿಕೊಂಡಿಲ್ಲ. ಟಿಕೆಟ್ ಕೊಡದೆ ಅವಮಾನ ಮಾಡಿದ್ದಾರೆ ಎಂದುಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ಬಿಡುಗಡೆ ಮಾಡುವ ಮೂಲಕ ಅಸಮಾಧಾನವನ್ನು ಹೊರ ಹಾಕಿದ್ದಾರೆ.

ಇಂದಿರಾ ಕ್ಯಾಂಟಿನ್ ರೀ ಓಪನ್‍ಗೆ ಅಡ್ಡಿಯಾಯ್ತೇ ಗ್ಯಾರಂಟಿ ಯೋಜನೆಗಳು..?

ಶಾಸಕರಾಗಿ ಆಯ್ಕೆಯಾಗಿದ್ದ ಭೀಮಾ ಮಾಂಡವಿ:
ದಿವಂಗತ ಭೀಮಾ ಮಾಂಡವಿ 2018ರ ಚುನಾವಣೆಯಲ್ಲಿ ದಂತೇವಾಡ ಕ್ಷೇತ್ರದಿಂದ ಗೆದ್ದಿದ್ದರು. ಭೀಮಾ ಕಾಂಗ್ರೆಸ್‍ನ ದೇವಿತ್ ಕರ್ಮ ಅವರನ್ನು ಸೋಲಿಸುವ ಮೂಲಕ ವಿಜಯಶಾಲಿಯಾಗಿದ್ದರು, ಆದರೆ ಲೋಕಸಭೆ ಚುನಾವಣೆಯ ಸಮಯದಲ್ಲಿ ಅವರು ನಕ್ಸಲೈಟ್ ದಾಳಿಯಲ್ಲಿ ನಿಧನರಾದರು. ನಂತರ ಪಕ್ಷವು ಅವರ ಪತ್ನಿ ಓಜಸ್ವಿ ಅವರನ್ನು ದಂತೇವಾಡದಲ್ಲಿ ಉಪ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಮಾಡಿತು. ಇದರಲ್ಲಿ ಓಜಸ್ವಿ ಮಾಂಡವಿ ಕಾಂಗ್ರೆಸ್‍ನ ದೇವ್ತಿ ಕರ್ಮಾ ವಿರುದ್ಧ ಸೋತರು, ಆದರೆ ಅವರ ಪತಿಗಿಂತ ಹೆಚ್ಚು ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾದರು.

ದಾಂತೇವಾಡದಲ್ಲಿ ಬಿಜೆಪಿ ಟಿಕೆಟ್‍ಗಾಗಿ ನಾಲ್ವರು ಪ್ರಮುಖ ಸ್ರ್ಪಗಳಿದ್ದು, ಓಜಸ್ವಿ ಮಾಂಡವಿ, ಚೈತ್ರಂ ಅಟಾಮಿರ್, ರಾಮು ನೇತಮ್, ನಂದಲಾಲ್ ಮುದಾಮಿ ಈ ಪಟ್ಟಿಯಲ್ಲಿದ್ದಾರೆ. ಆದರೆ ಓಜಸ್ವಿ ಮತ್ತು ನಂದಲಾಲ್ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ.

ಮನವೊಲಿಸಿದ ಬಿಎಸ್‌ವೈ, ಧರಣಿ ಕೈಬಿಟ್ಟ ಶಾಸಕ ಮುನಿರತ್ನ

ಬೆಂಗಳೂರು,ಅ.11- ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ನೀಡಲಾಗಿದ್ದ ಅನುದಾನವನ್ನು ಸರ್ಕಾರ ವಾಪಸ್ ಪಡೆದಿದೆ ಎಂದು ಆರೋಪಿಸಿ ಬಿಜೆಪಿ ಶಾಸಕ ಮುನಿರತ್ನ ವಿಧಾನಸೌಧ, ವಿಕಾಸಸೌಧ ನಡುವೆ ಇರುವ ಮಹಾತ್ಮ ಗಾಂಧೀಜಿ ಪ್ರತಿಮೆ ಬಳಿ ಇಂದು ಕೆಲಕಾಲ ಧರಣಿ ನಡೆಸಿದರು.

ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ನೀಡಿದ್ದ ಅನುದಾನವನ್ನು ರದ್ದುಗೊಳಿಸಿ ಬೇರೆ ಕ್ಷೇತ್ರಕ್ಕೆ ಕೊಟ್ಟಿರುವುದು ನ್ಯಾಯವೇ ಎಂದು ಪ್ರಶ್ನಿಸುವ ಫಲಕವನ್ನು ಹಿಡಿದು ಧರಣಿ ನಡೆಸಿದರು. ಆ ಫಲಕದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಅವರ ಭಾವಚಿತ್ರವೂ ಇತ್ತು.

ಇಂದಿರಾ ಕ್ಯಾಂಟಿನ್ ರೀ ಓಪನ್‍ಗೆ ಅಡ್ಡಿಯಾಯ್ತೇ ಗ್ಯಾರಂಟಿ ಯೋಜನೆಗಳು..?

ಆರಂಭದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಮುನಿರತ್ನ ಅವರನ್ನು ಬೆಂಬಲಿಸಿ ಧರಣಿ ನಡೆಸಲು ಮುಂದಾದರು. ಮಾಜಿ ಮೇಯರ್ ನಾರಾಯಣಸ್ವಾಮಿ, ಮಾಜಿ ಪಾಲಿಕೆ ಸದಸ್ಯಜಿ.ಕೆ.ವೆಂಕಟೇಶ್ ಸೇರಿದಂತೆ ಹಲವರು ಧರಣಿಯಲ್ಲಿ ಪಾಲ್ಗೊಂಡಿದ್ದರು. ಆದರೆ ಪೊಲೀಸರು ಮುನಿರತ್ನ ಅವರನ್ನು ಬಿಟ್ಟು ಉಳಿದ ಕಾರ್ಯಕರ್ತರಿಗೆ ಧರಣಿ ಮಾಡಲು ಅವಕಾಶ ನೀಡದೆ, ಶಾಸಕರು, ಮಾಜಿ ಶಾಸಕರನ್ನು ಹೊರತುಪಡಿಸಿ ಉಳಿದವರಿಗೆ ಇಲ್ಲಿ ಧರಣಿ ನಡೆಸಲು ಅವಕಾಶವಿಲ್ಲ ಎಂದು ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದರು.

ಪ್ರತಿಭಟನಾ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗಮಿಸಿ, ಶಾಸಕ ಮುನಿರತ್ನ ಅವರನ್ನು ಧರಣಿ ಹಿಂಪಡೆಯುವಂತೆ ಮನವೊಲಿಸಿದರು. ಬಿಎಸ್‍ವೈ ಮಾತಿಗೆ ಗೌರವ ಕೊಟ್ಟು ಪ್ರತಿಭಟನೆಯನ್ನು ಹಿಂಪಡೆದರು. ಇದಕ್ಕೂ ಮುನ್ನ ತಮ್ಮ ಕ್ಷೇತ್ರಕ್ಕೆ ಹಿಂದಿನ ಸರ್ಕಾರದ ಅವಧಿಯಲ್ಲಿ ಮಂಜೂರಾಗಿದ್ದ ಅನುದಾನವನ್ನು ಮರಳಿ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಬಾವುಟ ಹಿಡಿದು ಮುನಿರತ್ನ ಅವರು ಏಕಾಂಗಿಯಾಗಿ ಧರಣಿ ನಡೆಸಿದರು.

ಚೆನ್ನೈನಿಂದ ಅಹಮದಾಬಾದ್‍ಗೆ ಶುಭ್‍ಮನ್ ಗಿಲ್ ಶಿಫ್ಟ್

ಅಹ್ಮದಾಬಾದ್,ಅ.11- ಡೆಂಗ್ಯೂ ಜ್ವರಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಟೀಂ ಇಂಡಿಯಾ ಸ್ಟಾರ್ ಆಟಗಾರ ಶುಭ್‍ಮನ್ ಗಿಲ್ ಚೇತರಿಸಿಕೊಂಡಿದ್ದು, ವಿಶ್ರಾಂತಿಗಾಗಿ ಚೆನ್ನೈನಿಂದ ಅಹ್ಮದಾಬಾದ್‍ಗೆ ಶಿಫ್ಟ್ ಆಗಲಿದ್ದಾರೆ. ಮೂಲಗಳ ಪ್ರಕಾರ ಶುಭ್‍ಮನ್ ಗಿಲ್ ಇಂದು ವಾಣಿಜ್ಯ ವಿಮಾನದಲ್ಲಿ ಚೆನ್ನೈನಿಂದ ಅಹಮದಾಬಾದ್‍ಗೆ ಪ್ರಯಾಣಿಸಲಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಬಿಸಿಸಿಐ ಮೂಲಗಳು 24 ವರ್ಷದ ಆಟಗಾರ ಶುಭ್ ಮನ್ ಗಿಲ್ ಡೆಂಗ್ಯೂನಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಶೀಘ್ರದಲ್ಲೇ ಅವರು ಟ್ರ್ಯಾಕ್‍ಗೆ ಮರಳುವ ಉತ್ತೇಜಕ ಲಕ್ಷಣಗಳನ್ನು ತೋರಿಸುತ್ತಿದ್ದಾರೆ.ಅಫ್ಘಾನಿಸ್ತಾನ ವಿರುದ್ಧದ ಪಂದ್ಯಕ್ಕಾಗಿ ಪ್ರಸ್ತುತ ದೆಹಲಿಯಲ್ಲಿರುವ ಭಾರತೀಯ ತಂಡದ ಆಡಳಿತವು ಯುವ ಆಟಗಾರರ ಮೇಲೆ ನಿಗಾ ಇರಿಸುವುದನ್ನು ಮುಂದುವರೆಸಿದೆ.

ಇಂದಿರಾ ಕ್ಯಾಂಟಿನ್ ರೀ ಓಪನ್‍ಗೆ ಅಡ್ಡಿಯಾಯ್ತೇ ಗ್ಯಾರಂಟಿ ಯೋಜನೆಗಳು..?

ಅಕ್ಟೋಬರ್ 10 ರಂದು ಕ್ರಿಕೆಟ್ ನೆಕ್ಸ್ಟ್ ವರದಿಯಂತೆ, ಗಿಲ್ ಅವರ ಪ್ಲೇಟ್‍ಲೆಟ್‍ಗಳು ಪ್ರತಿ ಮೈಕ್ರೋಲೀಟರ್‍ಗೆ 1,00,000 ಕ್ಕಿಂತ ಕಡಿಮೆಯಾದ ನಂತರ ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಒಂದು ದಿನದಲ್ಲಿ ಡಿಸ್ಚಾರ್ಜ್ ಮಾಡಲಾಗಿತ್ತು.

ಆದರೆ ಹೋಟೆಲ್‍ನಲ್ಲಿ ಚಿಕಿತ್ಸೆ ಪಡೆಯುವುದನ್ನು ಮುಂದುವರೆಸಲಾಗಿತ್ತು. ಇದೀಗ ಗಿಲ್ ಚೇತರಿಕೆಯಲ್ಲಿದ್ದು, ಅಹಮದಾಬಾದ್‍ಗೆ ತೆರಳಿ ವಿಶ್ರಾಂತಿ ಪಡೆಯಲಿದ್ದಾರೆ. ಈಗಾಗಲೇ ಇಂದಿನ ಅಫ್ಘಾನಿಸ್ತಾನ ವಿರುದ್ಧದ ಪಂದ್ಯಕ್ಕೂ ಗಿಲ್ ಅಲಭ್ಯತೆ ಖಚಿತವಾಗಿದ್ದು ಮುಂದಿನ ಪಾಕಿಸ್ತಾನ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಗಿಲ್ ಲಭ್ಯತೆ ಅಸ್ಪಷ್ಟವಾಗಿದೆ.

ಪಾಕ್‌ನಲ್ಲಿ ಭಾರತದ ಮತ್ತೊಬ್ಬ ಮೋಸ್ಟ್ ವಾಂಟೆಡ್ ಉಗ್ರನನ್ನ ಹತ್ಯೆಮಾಡಿದ ‘ಅಪರಿಚಿತರು’

ಗಿಲ್ ಶೇ. 70-80%ರಷ್ಟು ಚೇತರಿಸಿಕೊಂಡಿದ್ದಾರೆ. ಆದರೆ ಈಗಲೇ ಅವರು ಯಾವಾಗ ತಂಡಕ್ಕೆ ಮರಳಲಿದ್ದಾರೆ ಎಂದು ಹೇಳಲು ಕಷ್ಟಕರ ಎಂದು ತಂಡದ ಮೂಲಗಳು ತಿಳಿಸಿವೆ. ಶುಭ್ ಮನ್ ಗಿಲ್ ಚೇತರಿಸಿಕೊಳ್ಳಲು ಮತ್ತು ಫಿಟ್ನೆಸ್ ಅನ್ನು ಮರಳಿ ಪಡೆಯಲು ಎಲ್ಲಾ ಸಮಯವನ್ನು ನೀಡಲಾಗುವುದು. ಈ ಹಂತದಲ್ಲಿ ಬದಲಿಗಳನ್ನು ಹುಡುಕುವ ಅಥವಾ ಚರ್ಚಿಸುವ ಯಾವುದೇ ಆಲೋಚನೆಯಿಲ್ಲ. ಗಿಲ್ ಈಗಾಗಲೇ ಸಕಾರಾತ್ಮಕ ಚಿಹ್ನೆಗಳನ್ನು ತೋರಿಸುತ್ತಿದ್ದಾರೆ ಮತ್ತು ಶೀಘ್ರದಲ್ಲೇ ತಂಡಕ್ಕೆ ಮರಳುವ ಸಾಧ್ಯತೆಯಿದೆ ಎಂದು ಬಿಸಿಸಿಐನ ಹಿರಿಯ ಅಕಾರಿಯೊಬ್ಬರು ತಿಳಿಸಿದ್ದಾರೆ.

ಪಟಾಕಿ ದುರಂತ : ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ

ಬೆಂಗಳೂರು,ಅ.11- ಅತ್ತಿಬೆಲೆ ಪಟಾಕಿ ಬೆಂಕಿ ದುರಂತದ ಹಿನ್ನಲೆಯಲ್ಲಿ ಆನೇಕಲ್ ತಹಸೀಲ್ದಾರ್(ಹಿಂದಿನ) ಶಶಿಧರ ಮಾಡ್ಯಾಳ್ ಸೇರಿದಂತೆ ನಾಲ್ವರು ಅಧಿಕಾರಿ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಬೆಂಗಳೂರು ನಗರ ಜಿಲ್ಲಾಧಿಕಾರಿ ನೀಡಿರುವ ವರದಿ ಆಧರಿಸಿ ಕರ್ತವ್ಯ ನಿರ್ಲಕ್ಷ್ಯತೆ ಆರೋಪದ ಮೇಲೆ ತಹಸೀಲ್ದಾರ್ ಶಶಿಧರ ಮಾಡ್ಯಾಳ್ ಅತ್ತಿಬೆಲೆ ನಾಡಕಚೇರಿ ಉಪತಹಸೀಲ್ದಾರ್ ಶ್ರೀಧರ್.ವಿ.ಸಿ ಅತ್ತಿಬೆಲೆ ವೃತ್ತದ ರಾಜಸ್ವ ನಿರೀಕ್ಷಕ ಪುಷ್ಪರಾಜ್.ಎ ಹಾಗೂ ಗ್ರಾಮ ಆಡಳಿತಾಧಿಕಾರಿ ಭಾಗೇಶ್ ಹೊಸಮನೆ ಅವರನ್ನು ಇಲಾಖೆ ವಿಚಾರಣೆ ಕಾಯ್ದಿರಿಸಿ ಸೇವೆಯಿಂದ ಅಮಾನತು ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.

ಇಂದಿರಾ ಕ್ಯಾಂಟಿನ್ ರೀ ಓಪನ್‍ಗೆ ಅಡ್ಡಿಯಾಯ್ತೇ ಗ್ಯಾರಂಟಿ ಯೋಜನೆಗಳು..?

ಅಮಾನತು ಅವಧಿಯಲ್ಲಿ ನಿಯಮಾನುಸಾರ ಜೀವನ ಆಧಾರ ಭತ್ಯೆಯನ್ನು ಪಡೆಯಲು ಅರ್ಹರಾಗಿದ್ದು, ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡುವಂತಿಲ್ಲ ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ಹಸಿರು ಪಟಾಕಿ ಗೋದಾಮಿಗೆ ಬೆಂಕಿ ತಗುಲಿ ಕಾರಣರಾದ ಮತ್ತು ಅಸಮರ್ಪಕ ವರದಿ ಸಲ್ಲಿಸಲು ಕಾರಣರಾದ ಆರೋಪದ ಮೇಲೆ ಶಿಸ್ತು ಕ್ರಮ ಜರುಗಿಸಲು ತೀರ್ಮಾನಿಸಿ ಜಂಟಿ ಇಲಾಖೆ ವಿಚಾರಣೆಯನ್ನು ಬಾಕಿ ಇರಿಸಿ ಸೇವಾ ನಿಯಮಗಳ ಅನ್ವಯ ಅಮಾನತುಗೊಳಿಸಲಾಗಿದೆ.

ಅ.7ರಂದು ಆನೇಕಲ್ ತಾಲ್ಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿಗೆ ಬೆಂಕಿ ತಗುಲಿ 14 ಮಂದಿ ಮೃತಪಟ್ಟಿದ್ದು, ಕೆಲವರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದುರಂತಕ್ಕೆ ಮೇಲಿನ ಅಧಿಕಾರಿಗಳೇ ಕಾರಣ ಎಂದು ಆದೇಶದಲ್ಲಿ ಪ್ರಸ್ತಾಪಿಸಲಾಗಿದೆ.

ಡ್ರಗ್ಸ್ ಕಳ್ಳಸಾಗಣಿಕೆದಾರನಿಂದ 4.94 ಕೋಟಿ ರೂ.ನಗದು ಸೀಜ್

ಚಂಡೀಗಢ, ಅ 11 (ಪಿಟಿಐ)- ಶಂಕಿತ ಮಾದಕ ವಸ್ತು ಕಳ್ಳಸಾಗಾಣೆದಾರರನ್ನು ಬಂಧಿಸಿರುವ ಪಂಜಾಬ್ ಮತ್ತು ಜಮ್ಮು ಕಾಶ್ಮೀರದ ಪೊಲೀಸರು 4.94 ಕೋಟಿ ರೂ ನಗದನ್ನು ವಶಪಡಿಸಿಕೊಂಡಿದ್ದಾರೆ. ಲೂಧಿಯಾನಾದ ಮುಲ್ಲನ್‍ಪುರ್ ದಖಾದಿಂದ ಶಂಕಿತ ಮಾದಕವಸ್ತು ಕಳ್ಳಸಾಗಣೆದಾರನನ್ನು ಬಂಧಿಸಲಾಗಿದೆ.

ಆತನಿಂದ ರಿವಾಲ್ವರ್ ಮತ್ತು 38 ನಕಲಿ ವಾಹನ ನಂಬರ್ ಪ್ಲೇಟ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪಂಜಾಬ್ ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ತಿಳಿಸಿದ್ದಾರೆ. ಇತ್ತೀಚೆಗೆ ಜಮ್ಮುವಿನಿಂದ 30 ಕಿಲೋಗ್ರಾಂಗಳಷ್ಟು ಹೆರಾಯಿನ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದ ಹೆಸರುಗಳಲ್ಲಿ ಆರೋಪಿಯೂ ಒಬ್ಬರು ಎಂದು ಅವರು ಮಾಹಿತಿ ನೀಡಿದ್ದಾರೆ.

ಇಸ್ರೇಲ್ ಪರ ಭಾರತೀಯ ಅಮೆರಿಕನ್ನರ ರ‍್ಯಾಲಿ

ಜಮ್ಮುವಿನಲ್ಲಿ ಇತ್ತೀಚಿಗೆ ಪತ್ತೆಯಾದ 30 ಕಿಲೋಗ್ರಾಂಗಳಷ್ಟು ಹೆರಾಯಿನ್‍ನ ಪ್ರಮುಖ ಆರೋಪಿಗಳಲ್ಲಿ ಈತನೂ ಒಬ್ಬ. ಹಿಂದಕ್ಕೆ ಮತ್ತು ಮುಂದಕ್ಕೆ ಸಂಬಂಧವನ್ನು ಸ್ಥಾಪಿಸಲು ತನಿಖೆ ನಡೆಯುತ್ತಿದೆ ಎಂದು ಯಾದವ್ ಹೇಳಿದರು.