Home Blog Page 1908

ಪಶ್ಚಿಮ ಬಂಗಾಳದ ನಗರಾಭಿವೃದ್ಧಿ ಸಚಿವ ನಿವಾಸದ ಮೇಲೆ ಸಿಬಿಐ ದಾಳಿ

ಕೋಲ್ಕತ್ತಾ, ಅ.8- ರಾಜ್ಯದಲ್ಲಿನ ಪೌರ ಸಂಸ್ಥೆಗಳ ನೇಮಕಾತಿಯಲ್ಲಿನ ಅಕ್ರಮಗಳ ತನಿಖೆಗೆ ಸಂಬಂಧಿಸಿದಂತೆ ಸಿಬಿಐ ಇಂದು ಬೆಳಿಗ್ಗೆ ಇಲ್ಲಿ ಹಿರಿಯ ಸಚಿವ ಫಿರ್ಹಾದ್ ಹಕೀಮ್ ಅವರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೋಲ್ಕತ್ತಾದ ಮೇಯರ್ ಆಗಿದ್ದ ಹಕೀಮ್ ಅವರು ಪ್ರಸ್ತುತ ಮಮತಾ ಸರ್ಕಾರದಲ್ಲಿ ನಗರಾಭಿವೃದ್ಧಿ ಮತ್ತು ಮುನ್ಸಿಪಲ್ ವ್ಯವಹಾರಗಳ ಸಚಿವರಾಗಿದ್ದರೆ.

ಸಿಬಿಐ ಅಧಿಕಾರಿಗಳ ತಂಡವು ಕೇಂದ್ರ ಪಡೆಗಳ ದೊಡ್ಡ ತುಕಡಿಯೊಂದಿಗೆ ದಕ್ಷಿಣ ಕೋಲ್ಕತ್ತಾದ ಚೆಟ್ಲಾ ಪ್ರದೇಶದಲ್ಲಿ ಹಕೀಮ್ ಅವರ ನಿವಾಸ ಇಂದು ಬೆಳ್ಳಂಬೆಳಿಗೆ ತಲುಪಿ ಶೋಧ ಕಾರ್ಯ ನಡೆಸಿದ್ದಾರೆ. ಇಬ್ಬರು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮನೆಯ ಹೊರಗೆ ಜಮಾಯಿಸಿ ಟಿಎಂಸಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಸೋಮಶೇಖರ್ ಅಸಮಾಧಾನ ತಣಿಸುವ ಜವಾಬ್ದಾರಿ ಬಿಎಸ್‍ವೈ ಹೆಗಲಿಗೆ

ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಗುರುವಾರ, ಜಾರಿ ನಿರ್ದೇಶನಾಲಯ (ಇಡಿ) ಆಹಾರ ಮತ್ತು ಸರಬರಾಜು ಸಚಿವ ರಥಿನ್ ಘೋಷ್ ಅವರ ನಿವಾಸ ಸೇರಿದಂತೆ ಅನೇಕ ಸ್ಥಳಗಳಲ್ಲಿ ಶೋಧ ನಡೆಸಿತು.

ಕಳೆದ 2014 ಮತ್ತು 2018 ರ ನಡುವೆ ರಾಜ್ಯದ ವಿವಿಧ ನಾಗರಿಕ ಸಂಸ್ಥೆಗಳು ವಿತ್ತೀಯ ಪರಿಗಣನೆಗೆ ವಿರುದ್ಧವಾಗಿ ಸುಮಾರು 1,500 ಜನರನ್ನು ಅಕ್ರಮವಾಗಿ ನೇಮಕ ಮಾಡಿಕೊಂಡಿವೆ ಎಂದು ಕೇಂದ್ರ ತನಿಖಾ ಸಂಸ್ಥೆಗಳು ಆರೋಪಿಸಿವೆ.

ಪಟಾಕಿ ದುರಂತದಲ್ಲಿ ಮೃತರ ಸಂಖ್ಯೆ 14ಕ್ಕೆರಿಕೆ, ಇಬ್ಬರ ಬಂಧನ

ಬೆಂಗಳೂರು, ಅ.8- ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಮೃತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ನಿನ್ನೆ ರಾತ್ರಿ 12 ಶವಗಳನ್ನು ಗೋದಾಮಿನಿಂದ ಹೊರತೆಗೆಯಲಾಗಿದ್ದು, ತಡರಾತ್ರಿ ಇನ್ನೆರಡು ಶವಗಳು ಸಿಕ್ಕಿವೆ. ಎಲ್ಲ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇದರಲ್ಲಿ ಇನ್ನೂ ಕೆಲವರ ಗುರುತು ಸಿಕ್ಕಿಲ್ಲ. ಅವರುಗಳ ಗುರುತುಗಳನ್ನು ಪತ್ತೆಹಚ್ಚುವ ಕಾರ್ಯದಲ್ಲಿ ಪೊಲೀಸರು ತೊಡಗಿದ್ದಾರೆ. ದುರಂತದಲ್ಲಿ ನಾಲ್ಕು ಮಂದಿ ಗಾಯಗೊಂಡಿದ್ದು, ಸೆಂಟ್‍ಜಾನ್ ಮತ್ತು ಆಕ್ಸ್‍ಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಬಗ್ಗೆ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್‍ಐಆರ್ ದಾಖಲಾಗಿದ್ದು, ಇಬ್ಬರನ್ನು ಬಂಧಿಸಿದ್ದೇವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್‍ಪಿ ಅವರು ತಿಳಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಅವರು, ರಾಮಸ್ವಾಮಿ ರೆಡ್ಡಿ ಮತ್ತು ನವೀನ್ ಅವರನ್ನು ಬಂಧಿಸಿದ್ದು, ಉಳಿದವರಿಗಾಗಿ ಶೋಧ ನಡೆಸುತ್ತಿದ್ದೇವೆ ಎಂದು ವಿವರಿಸಿದರು.

ಉತ್ತಮ ಪ್ರದರ್ಶನ ನೀಡಿದ ಕ್ರೀಡಾಪಟುಗಳನ್ನು ಪ್ರಶಂಸಿಸಿದ ರಾಜ್ಯಪಾಲ ಗೆಹ್ಲೋಟ್

ಘಟನೆಗೆ ಇನ್ನೂ ನಿಖರವಾದ ಕಾರಣ ತಿಳಿದುಬಂದಿಲ್ಲ. ನಮ್ಮ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ಅವರು ಹೇಳಿದರು. ನಿನ್ನೆ ಮಧ್ಯಾಹ್ನ 3.30ರ ಸಂದರ್ಭದಲ್ಲಿ ಪಟಾಕಿ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುದ್ದಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಏಳು ವಾಹನಗಳೊಂದಿಗೆ ಸ್ಥಳಕ್ಕೆ ದಾವಿಸಿ ಸತತ ಪ್ರಯತ್ನ ನಡೆಸಿ ತಡರಾತ್ರಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆದರೂ 14 ಜೀವಗಳು ಬಲಿಯಾಗಿದ್ದು, ಕೆಲವು ಶವಗಳು ಗುರುತು ಸಿಗದ ರೀತಿಯಲ್ಲಿ ಸುಟ್ಟುಹೋಗಿವೆ.

ಭೇಟಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ತಮಿಳುನಾಡಿನ ಸಚಿವರು, ಶಾಸಕರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮುನ್ನೆಚ್ಚರಿಕೆ ಕ್ರಮ ವಹಿಸದೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಪಟಾಕಿಯನ್ನು ಸಂಗ್ರಹಿಸಲು ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಕೆಲವರು ತಮಿಳುನಾಡಿನ ಹೊಸೂರು, ಶಿವಕಾಶಿ ಸೇರಿದಂತೆ ಹಲವೆಡೆ ಪಟಾಕಿ ಖರೀದಿಸಲು ತೆರಳುತ್ತಾರೆ. ಅದನ್ನು ಕರ್ನಾಟಕದ ಗಡಿಭಾಗ ಅತ್ತಿಬೆಲೆಯಲ್ಲಿ ಸಂಗ್ರಹಿಸಿದರೆ ಹೆಚ್ಚಿನ ಹಣ ಸಂಪಾದಿಸಬಹುದು ಎಂದು ಕೆಲವರು ಗೋದಾಮುಗಳಲ್ಲಿ ಇದನ್ನು ಶೇಖರಿಸಿಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

ಪಟಾಕಿ ದುರಂತ : ಉನ್ನತ ಮಟ್ಟದ ತನಿಖೆಗೆ ಹೆಚ್‌ಡಿಕೆ ಆಗ್ರಹ

ಅಕ್ಕಪಕ್ಕದಲ್ಲಿರುವುದರಿಂದ ಸ್ಥಳೀಯ ನಿವಾಸಿಗಳನ್ನು ಅಲ್ಲಿಂದ ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಒಟ್ಟಾರೆ ಸಂಭವಿಸಿದ ಈ ಘೋರ ದುರಂತದಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಳಕ್ಕೆ ಭೇಟಿ ನೀಡುವ ಸಾಧ್ಯತೆ ಇದ್ದು, ಮೃತರಿಗೆ 5 ಲಕ್ಷ ರೂ. ಹಾಗೂ ಗಾಯಗೊಂಡಿರುವವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಲಾಗಿದೆ.

ಮನೆಗೆ ಆಕಸ್ಮಿಕ ಬೆಂಕಿ : ಒಂದೇ ಕುಟುಂಬದ ಮೂವರು ಸಜೀವ ದಹನ

ಶಿವಮೊಗ್ಗ, ಅ.8- ಮನೆಗೆ ಬೆಂಕಿ ಬಿದ್ದು ಒಂದೇ ಕುಟುಂಬದ ಮೂವರು ಸಜೀವವಾಗಿ ದಹನಗೊಂಡಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಅರಳಸುರಳಿ ಸಮೀಪದ ಕೆಕೋಡ್‍ನಲ್ಲಿ ಇಂದು ಮುಂಜಾನೆ ನಡೆದಿದೆ.

ರಾಘವೇಂದ್ರ ಕೆಕೋಡ್ (65), ಪತ್ನಿ ನಾಗರತ್ನಾ (55), ಹಿರಿಯ ಪುತ್ರ ಶ್ರೀರಾಮ್(30) ಮೃತ ದುರ್ದೈವಿಗಳು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಇನ್ನೊಬ್ಬ ಪುತ್ರ ಭರತ್ (28)ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅರ್ಚಕರಾಗಿದ್ದ ರಾಘವೇಂದ್ರ ಅವರು ಕುಟುಂಬ ಸಮೇತ ಹೊಸನಗರ ರಸ್ತೆಯ ಅರಳಸುರಳಿ ಗಣಪತಿ ಕಟ್ಟೆ ರೈಸ್ ಮಿಲ್ ಸಮೀಪ ಮನೆ ಮಾಡಿಕೊಂಡು ವಾಸಿಸುತ್ತಿದ್ದರು. ಇತ್ತೀಚೆಗೆ ಮನೆಯ ಕೋಣೆಯಲ್ಲಿ ಕಟ್ಟಿಗೆ ಸಂಗ್ರಹಿಸಿಟ್ಟಿದ್ದರು. ಅದಕ್ಕೆ ಬೆಂಕಿ ಬಿದ್ದು ಪೂರ್ತಿ ಮನೆ ಆವರಿಸಿ ಈ ಅವಘಡ ಸಂಭವಿಸಿದೆ.

ಸೋಮಶೇಖರ್ ಅಸಮಾಧಾನ ತಣಿಸುವ ಜವಾಬ್ದಾರಿ ಬಿಎಸ್‍ವೈ ಹೆಗಲಿಗೆ

ಸ್ಥಳಕ್ಕೆ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಅಧಿಕಾರಿ ಮಿಥುನ್ ಕುಮಾರ್ , ತೀರ್ಥಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದು ಸಾಮೂಹಿಕ ಆತ್ಮಹತ್ಯೆ ಎಂಬ ಶಂಕೆ ವ್ಯಕ್ತವಾಗಿದೆ.

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ, ಸಾವಿನ ಸಂಖ್ಯೆ 2,000 ಕ್ಕೆ ಏರಿಕೆ

ಇಸ್ಲಾಮಾಬಾದ್, ಅ.8- ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಪ್ರಬಲ ಭೂಕಂಪಗಳಿಂದ ಮೃತಪಟ್ಟವರ ಸಂಖ್ಯೆ 2,000 ಕ್ಕೆ ಏರಿದೆ ಎಂದು ತಾಲಿಬಾನ್ ವಕ್ತಾರರು ತಿಳಿಸಿದ್ದಾರೆ.

ಭೂಕಂಪದ ಕಂಪನಕ್ಕೆ 465 ಮನೆಗಳು ನಾಶವಾಗಿದ್ದು, 135 ಮನೆಗಳು ಹಾನಿಗೊಳಗಾಗಿವೆ. ಕೆಲವರು ಕುಸಿದ ಕಟ್ಟಡಗಳ ಅಡಿಯಲ್ಲಿ ಸಿಲುಕಿರುವವರ ಹುಡುಕಾಟ ಮತ್ತು ರಕ್ಷಣಾ ಪ್ರಯತ್ನಗಳು ಮುಂದುವರೆದಿದ್ದು, ಸಾವು-ನೋವುಗಳ ಸಂಖ್ಯೆ ಇನ್ನೂ ಹೆಚ್ಚುವ ನಿರೀಕ್ಷೆಯಿದೆ ಎಂದು ಯುಎನ್ ಹೇಳಿದೆ.

ಉತ್ತಮ ಪ್ರದರ್ಶನ ನೀಡಿದ ಕ್ರೀಡಾಪಟುಗಳನ್ನು ಪ್ರಶಂಸಿಸಿದ ರಾಜ್ಯಪಾಲ ಗೆಹ್ಲೋಟ್

ವಿಪತ್ತು ಪ್ರಾಧಿಕಾರದ ವಕ್ತಾರ ಮೊಹಮ್ಮದ್ ಅಬ್ದಲ್ ಜಾನ್ ಅವರು ಹೆರಾತ್ ಪ್ರಾಂತ್ಯದ ಝೆಂಡಾ ಜಾನ್ ಜಿಲ್ಲೆಯ ನಾಲ್ಕು ಗ್ರಾಮಗಳು ಭೂಕಂಪ ಮತ್ತು ನಂತರದ ಆಘಾತಗಳ ತೀವ್ರತೆಯನ್ನು ಅನುಭವಿಸಿವೆ.

ಭೂಕಂಪದ ಕೇಂದ್ರಬಿಂದು ಹೆರಾತ್ ನಗರದ ವಾಯುವ್ಯಕ್ಕೆ ಸುಮಾರು 40 ಕಿಲೋಮೀಟರ್ (25 ಮೈಲಿ) ದೂರದಲ್ಲಿದೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ ಹೇಳಿದೆ. ಇದು 6.3, 5.9 ಮತ್ತು 5.5 ರ ತೀವ್ರತೆಯ ಮೂರು ಪ್ರಬಲವಾದ ನಂತರದ ಆಘಾತಗಳನ್ನು ಮತ್ತು ಕಡಿಮೆ ಆಘಾತಗಳನ್ನು ಅನುಸರಿಸಿತು.

ಸೋಮಶೇಖರ್ ಅಸಮಾಧಾನ ತಣಿಸುವ ಜವಾಬ್ದಾರಿ ಬಿಎಸ್‍ವೈ ಹೆಗಲಿಗೆ

ಬೆಂಗಳೂರು, ಅ.8-ಮುಂಬರುವ ಲೋಕಸಭೆ ಚುನಾವಣೆಗೆ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವುದನ್ನು ಬರಂಗವಾಗಿ ವಿರೋಧಿಸಿದ ಮಾಜಿ ಸಚಿವ, ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್ ಬಿಜೆಪಿಗೆ ಕಂಟಕವಾಗಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿಗೆ ಸೋಮಶೇಖರ್ ಅಪಸ್ವರ ಎತ್ತಿದ ಬೆನ್ನಲ್ಲೇ, ಇನ್ನು ಮುಂದೆ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುವ ಹೇಳಿಕೆ ನೀಡದಂತೆ ಸೋಮಶೇಖರ್ ಅವರಿಗೆ ಮನವರಿಕೆ ಮಾಡಿಕೊಡುವ ಮತ್ತು ಸೂಚನೆ ನೀಡುವ ಜವಾಬ್ದಾರಿಯನ್ನು ಬಿಜೆಪಿ ರಾಜ್ಯ ಶಿಸ್ತು ಸಮಿತಿಯು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನೀಡಿದೆ.

2018 ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡ 17 ವಿರೋಧ ಪಕ್ಷದ ಶಾಸಕರಲ್ಲಿ ಸೋಮಶೇಖರ್ ಅವರು ಯಡಿಯೂರಪ್ಪ ಅವರಿಗೆ ಸರ್ಕಾರ ರಚಿಸಲು ಸಹಾಯ ಮಾಡಿದ್ದರು. ಸೋಮಶೇಖರ್ ಅವರು ಉಪ ಚುನಾವಣೆಯಲ್ಲಿ ಗೆದ್ದು ಮಾಸ್ ಲೀಡರ್ ಆಗಿ ತಮ್ಮ ಸಾಮಥ್ರ್ಯವನ್ನು ಸಾಬೀತುಪಡಿಸಿದ್ದಾರೆ. ಆದ್ದರಿಂದ ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ವಿರುದ್ಧವಾಗಿ ಹೋದರೂ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಬಿಜೆಪಿ ಹಿಂದೇಟು ಹಾಕಿದೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವ ಸೋಮಶೇಖರ್, ಕಾಂಗ್ರೆಸ್ ಸೇರುವ ಸುಳಿವು ನೀಡಿದ್ದರು. ಹೀಗಾಗಿ ರಾಜ್ಯ ಬಿಜೆಪಿ ನಾಯಕರು ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

`ನಾವು ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರಬೇಕು. ಸೋಮಶೇಖರ್ ಕೂಡ ಇದಕ್ಕೆ ಹೊರತಾಗಿಲ್ಲ. ಒಂದು ವೇಳೆ ಅವರು ಬಯಸಿದರೇ ಪಕ್ಷ ತೊರೆದು ಸಂತೋಷವಾಗಿರುವ ಪಕ್ಷಕ್ಕೆ ಸೇರಲಿ ಎಂದು ಮಾಜಿ ಸಚಿವ, ಬಿಜೆಪಿ ರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಸೋಮಶೇಖರ್ ಯಾವಾಗಲೂ ತಮ್ಮ ನಿಷ್ಠೆಯನ್ನು ಬದಲಾಯಿಸುತ್ತಿದ್ದಾರೆ ಎಂದು ಮತ್ತೊಬ್ಬ ಹಿರಿಯ ನಾಯಕ ಸಿ.ಟಿ. ರವಿ ಟೀಕಿಸಿದ್ದಾರೆ. ಅಕಾರ ಇಲ್ಲವೆಂದರೆ ಕೆಲವರಿಗೆ ಉಸಿರು ಕಟ್ಟುತ್ತೆ, ಎಸಿ ರೂಮ್‍ನಲ್ಲಿದ್ದರೆ ವಾತಾವರಣ ಚೆನ್ನಾಗಿರುತ್ತದೆ ಎಂದು ಮಾಜಿ ಶಾಸಕ ಸಿ.ಟಿ. ರವಿ ಹೇಳಿದ್ದಾರೆ. ಇವರಿಗೆ ಯಾವಾಗಲೂ ಅಕಾರದಲ್ಲಿರಬೇಕು.

ಆಗ ಎಲ್ಲವೂ ಚೆನ್ನಾಗಿರುತ್ತದೆ. ಬಿಜೆಪಿಯಲ್ಲಿ ಉಸಿರುಗಟ್ಟಿಸುವ ವಾತಾವರಣವಿದೆ ಎಂಬ ಮಾಜಿ ಸಚಿವ ಎಸ್‍ಟಿ ಸೋಮಶೇಖರ್ ಹೇಳಿಕೆಗೆ ಸಿ.ಟಿ. ರವಿ ತಿರುಗೇಟು ನೀಡಿದ್ದಾರೆ. ಮೈತ್ರಿ ಕುರಿತು ವರಿಷ್ಠರ ನಿರ್ಧಾರವನ್ನು ಪ್ರಶ್ನಿಸುವ ಸ್ವಾತಂತ್ರ್ಯವನ್ನು ಸೋಮಶೇಖರ್ ತೆಗೆದುಕೊಂಡಿದ್ದಾರೆ ಎಂದು ಮಾಜಿ ಡಿಸಿಎಂ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಸೋಮಶೇಖರ್ ಹೇಳಿದ್ದೇನು? ಮೇಲಿನವರು ಸುಲಭವಾಗಿ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ.

ಅಂಡಮಾನ್ ಸಮುದ್ರದಲ್ಲಿ ಭೂಕಂಪ

ಕೆಳಹಂತದ ಕಾರ್ಯಕರ್ತರು ಹಿಂಸೆ ಅನುಭವಿಸುತ್ತಾರೆ. ಉಸಿರುಕಟ್ಟುವ ವಾತಾವರಣ ಸೃಷ್ಟಿಯಾಗಿದೆ. ಮೈತ್ರಿಗೆ ವೈಯಕ್ತಿಕವಾಗಿ ನನ್ನ ವಿರೋಧದೆ. ಅಧಿಕೃತ ಘೋಷಣೆ ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳುವೆ ಎಂದಿದ್ದರು. ಮೈತ್ರಿ ಅಧಿಕೃತವಾಗಿ ಘೋಷಣೆಯಾದ ಬಳಿಕ ತಮ್ಮ ನಿರ್ಧಾರ ಪ್ರಕಟಿಸುವುದಾಗಿ ಶಾಸಕ ಸೋಮಶೇಖರ್, ಪಕ್ಷ ತೊರೆಯುವ ಸುಳಿವು ನೀಡಿದ್ದಾರೆ. ನಾನು ನನ್ನ ರಾಜಕೀಯ ಜೀವನದುದ್ದಕ್ಕೂ ಜೆಡಿಎಸ್ ವಿರುದ್ಧ ಆರು ವಿಧಾನಸಭಾ ಚುನಾವಣೆಗಳಲ್ಲಿ ಹೋರಾಡಿದ್ದೇನೆ. ಬಿಜೆಪಿ ಮತ್ತು ಜೆಡಿಎಸ್‍ನ ಹಲವು ಶಾಸಕರು ಮೈತ್ರಿಗೆ ವಿರುದ್ಧವಾಗಿದ್ದರೂ ಬರಂಗವಾಗಿ ಮಾತನಾಡುತ್ತಿಲ್ಲ ಎಂದು ಸ್ವಪಕ್ಷೀಯರ ವಿರುದ್ದವೇ ಗುಡುಗಿದ್ದರು.

ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಮೊದಲಿನಿಂದಲೂ ಪರಸ್ಪರ ರುದ್ಧವಾಗಿ ಇದ್ದವರು. ಪಕ್ಷದ ಕಾರ್ಯಕರ್ತರು ಅನುಭಸಿದ ಕಿರುಕುಳವನ್ನು ಹತ್ತಿರದಿಂದ ಕಂಡಿದ್ದೇನೆ. ಪಕ್ಷಗಳು ಒಂದಾದರೂ, ಕಾರ್ಯಕರ್ತರ ಮಧ್ಯೆ ಹೊಂದಾಣಿಕೆ ಅಸಾಧ್ಯವಾಗಿದೆ. ಮೈತ್ರಿ ವಿರೋಧಿಸಿ ಈಗಾಗಲೇ ಹಲವು ಕಾರ್ಯಕರ್ತರು, ಬೆಂಬಲಿಗರು ಕಾಂಗ್ರೆಸ್ ಸೇರುವ ನಿರ್ಧಾರ ಮಾಡಿದ್ದಾರೆ. ಇದು ನನ್ನ ಕ್ಷೇತ್ರದ ಸಮಸ್ಯೆ ಮಾತ್ರವಲ್ಲ. ಇತರೆ ಶಾಸಕರೂ ತಮ್ಮ ಕ್ಷೇತ್ರಗಳಲ್ಲಿ ಇಂತಹ ಸಮಸ್ಯೆ ಎದುರಿಸುತ್ತಿದ್ದಾರೆ’ ಎಂದು ಹೇಳಿದ್ದರು.

ಪಟಾಕಿ ದುರಂತ : ಉನ್ನತ ಮಟ್ಟದ ತನಿಖೆಗೆ ಹೆಚ್‌ಡಿಕೆ ಆಗ್ರಹ

`ನಾನೂ ಸಹ 20 ವರ್ಷಗಳಿಂದ ಜೆಡಿಎಸ್ ಜತೆ ಸೆಣಸಾಟ ನಡೆಸಿಕೊಂಡು ಬಂದಿದ್ದೇನೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮಧ್ಯೆ ಹೊಂದಾಣಿಕೆಯಾದರೂ, ಕಾರ್ಯಕರ್ತರು ಪರಸ್ಪರ ಮತ ಚಲಾಯಿಸಲಿಲ್ಲ. ಇದರಿಂದ ಮೈತ್ರಿ ಎಷ್ಟು ಸ್ಥಾನದಲ್ಲಿ ಗೆಲುವು ಪಡೆಯಿತು ಎನ್ನುವುದು ಎಲ್ಲರಿಗೂ ಗೊತ್ತಿದೆ’ ಎಂದು ಗತ ಮೈತ್ರಿ ನೆನಪಿಸಿದ್ದರು.

2019ರಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಾಗ ಏನಾಯಿತು? ಅವರು ಗೆದ್ದಿದ್ದು ಒಂದೇ ಒಂದು ಸ್ಥಾನ ಎಂದ ಅವರು, ಜೆಡಿಎಸ್-ಬಿಜೆಪಿ ಮೈತ್ರಿಕೂಟಕ್ಕೂ ಇದೇ ಫಲಿತಾಂಶ ಬರಲಿದೆ ಎಂದು ಭವಿಷ್ಯ ನುಡಿದ್ದಾರೆ.

ಉತ್ತಮ ಪ್ರದರ್ಶನ ನೀಡಿದ ಕ್ರೀಡಾಪಟುಗಳನ್ನು ಪ್ರಶಂಸಿಸಿದ ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು, ಅ. 8- ಭಾರತವು ಒಲಿಂಪಿಕ್ಸ್, ಕಾಮನ್ವೆಲ್ತ್ ಕ್ರೀಡಾಕೂಟಗಳಲ್ಲಿ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾ ಸ್ಪರ್ಧೆಗಳಲ್ಲಿ ಉತ್ತಮ ಪ್ರದರ್ಶನ ನೀಡಿದೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಂಸಿಸಿದರು. ನಗರದ ಕಂಠೀರವ ಕ್ರೀಡಾಗಂಣದಲ್ಲಿ 62 ನೇ ಓಪನ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ ಅಡಿಯಲ್ಲಿ ಆಯೋಜಿಸಲಾದ ಬೆಂಗಳೂರು ಮ್ಯಾರಥಾನ್ ಅನ್ನು ಇಂದು ಉದ್ಘಾಟಿಸಿ ಮಾತನಾಡಿದ ಅವರು, 19ನೇ ಏಷ್ಯನ್ ಗೇಮ್ಸ್‍ನಲ್ಲಿ ಭಾರತೀಯ ಆಟಗಾರರು ತಮ್ಮ ದಾಖಲೆ ಮುರಿದ ಪ್ರದರ್ಶನದ ಮೂಲಕ ದೇಶಕ್ಕೆ ಹೆಮ್ಮೆ ತಂದಿದ್ದಾರೆ ಎಂದು ಶ್ಲಾಘಿಸಿದರು.

ಬೆಂಗಳೂರು ಮ್ಯಾರಥಾನ್‍ನಲ್ಲಿ ವಿಶ್ವದ ವಿವಿಧ ಭಾಗಗಳಿಂದ ಸಾವಿರಾರು ಸ್ರ್ಪಧಿಗಳು ಭಾಗವಹಿಸುತ್ತಿರುವುದು ಸಂತಸದ ವಿಷಯ. ಈ ಘಟನೆಯು ಕರ್ನಾಟಕವನ್ನು ಅಂತಾರಾಷ್ಟ್ರೀಯ ಕ್ರೀಡಾ ಹಬ್ ಆಗಿ ಮಾಡುವ ನಿಟ್ಟಿನಲ್ಲಿ ಮತ್ತೊಂದು ಪ್ರಮುಖ ಹೆಜ್ಜೆಯಾಗಿದೆ ಎಂದರು.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (08-10-2023)

ಭಾರತ ಸರ್ಕಾರದ ಕ್ರೀಡಾ ಸಚಿವಾಲಯ ಮತ್ತು ಕ್ರೀಡಾ ಸಂಸ್ಥೆಗಳು ಹಾಗೂ ಕರ್ನಾಟಕ ಸರ್ಕಾರವು ಅನೇಕ ಕ್ರೀಡಾ ಯೋಜನೆಗಳನ್ನು ಮಾಡಿವೆ. ಆಟಗಾರರು ಅವುಗಳ ಲಾಭವನ್ನು ಪಡೆಯುತ್ತಿದ್ದಾರೆ. ಇದರಿಂದಾಗಿ ಕ್ರೀಡೆಯ ಮಟ್ಟ ಸುಧಾರಿಸಿದೆ. ಅದರ ಫಲಿತಾಂಶ ಇಂದು ನಮ್ಮೆಲ್ಲರ ಮುಂದಿದೆ ಎಂದರು.

ಈ ಮ್ಯಾರಾಥಾನ್ ನಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬರಿಗೂ ಶುಭಕೋರಿದ ರಾಜ್ಯಪಾಲರು, ಅತ್ಯುತ್ತಮ ಪ್ರದರ್ಶನ ಮತ್ತು ಉಜ್ವಲ ಭವಿಷ್ಯಕ್ಕಾಗಿ ಭಾಗವಹಿಸುವ ಎಲ್ಲಾ ಆಟಗಾರರಿಗೆ ಶುಭ ಹಾರೈಸಿದರು.

ಜೆಸಿ ರಸ್ತೆ ಸ್ಟೀಲ್ ಬ್ರಿಡ್ಜ್ ಬದಲಿಗೆ ಕಾಂಕ್ರಿಟ್ ಸೇತುವೆ ನಿರ್ಮಾಣ

ಈ ಸಂದರ್ಭದಲ್ಲಿ ಕ್ರೀಡಾ ಸಚಿವರಾದ ಬಿ. ನಾಗೇಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ , ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಕೆ. ಗೋವಿಂದರಾಜ್, ಓಟದ ನಿರ್ದೇಶಕ ನಾಗರಾಜ್, ಅರ್ಜುನ್ ಪ್ರಶಸ್ತಿ ಪುರಸ್ಕೃತ ಡಾ. ರೀತ್ ಅಬ್ರಹಾಂ, ವಿಪ್ರೋ ಮುಖ್ಯಸ್ಥ ಎಚ್.ಆರ್. ಸೌರಭ್ ಗೋವಿಲ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

ಪಟಾಕಿ ದುರಂತ : ಉನ್ನತ ಮಟ್ಟದ ತನಿಖೆಗೆ ಹೆಚ್‌ಡಿಕೆ ಆಗ್ರಹ

ಬೆಂಗಳೂರು, ಅ.8-ಆನೇಕಲ್ ತಾಲೂಕಿನ ಅತ್ತಿಬೆಲೆಯ ಪಟಾಕಿ ಸಂಗ್ರಹಗಾರದಲ್ಲಿ ಸಂಭವಿಸಿರುವ ಅಗ್ನಿ ದುರಂತದ ಬಗ್ಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕು ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಆಗ್ರಹಿಸಿದ್ದಾರೆ.

ದುರಂತದಿಂದ ಬದುಕು ಕಳೆದುಕೊಂಡ ಕುಟುಂಬಗಳಿಗೆ ರಾಜ್ಯ ಸರ್ಕಾರ ಆಸರೆಯಾಗಿ ನಿಲ್ಲಬೇಕು ಎಂದಿದ್ದಾರೆ. ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಸಂಭವಿಸಿರುವ ಈ ಘಟನೆ ಅನೇಕ ಪ್ರಶ್ನೆಗಳಿಗೆ ದಾರಿ ಮಾಡಿಕೊಟ್ಟಿದೆ. ಸುರಕ್ಷತೆಯ ಬಗ್ಗೆ ಮುನ್ನೆಚ್ಚರಿಕೆ ವಹಿಸದೆ ಇದ್ದುದ್ದೇ ದುರಂತಕ್ಕೆ ಕಾರಣ ಎಂಬುದರಲ್ಲಿ ಎರಡು ಮಾತಿಲ್ಲ ಎಂದು ಅವರು ತಿಳಿಸಿದ್ದಾರೆ.

ಪ್ರೊಫೆಸರ್ ಕಾರು ಡಿಕ್ಕಿ : ಇಬ್ಬರು ವಿದ್ಯಾರ್ಥಿನಿಯರು ಸೇರಿ ಮೂವರಿಗೆ ಗಾಯ

ಪಟಾಕಿ ಸಂಗ್ರಹಗಾರದಲ್ಲಿ ಸಂಭವಿಸಿರುವ ಅಗ್ನಿ ದುರಂತದಲ್ಲಿ 14 ಜನ ಕಾರ್ಮಿಕರು ದುರಂತದ ಸಾವು ಕಂಡಿರುವ ಘಟನೆ ತಿಳಿದು ನನಗೆ ತೀವ್ರ ದಿಗ್ಭ್ರಮೆ ಉಂಟಾಗಿದೆ. ದೀಪಾವಳಿಗೆ ಬದುಕು ಕಟ್ಟಿಕೊಳ್ಳಲು ಹೊರಟಿದ್ದ ಈ ಮುಗ್ಧ ಜೀವಗಳು ಬೆಂಕಿಯ ಕೆನ್ನಾಲಿಗೆಗೆ ಸಿಕ್ಕಿ ಬಲಿಯಾಗಿರುವ ಘಟನೆ ನನ್ನ ಮನವನ್ನು ಕಲಕಿದೆ ಎಂದು ಅವರು ಹೇಳಿದ್ದಾರೆ.

ಜೀವ ಕಳೆದುಕೊಂಡ ಎಲ್ಲಾ ನತದೃಷ್ಟ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಕುಟುಂಬಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ಅವರು ತಿಳಿಸಿದ್ದಾರೆ.

ಅಂಡಮಾನ್ ಸಮುದ್ರದಲ್ಲಿ ಭೂಕಂಪ

ನವದೆಹಲಿ,ಅ.8-ಅಂಡಮಾನ್ ಸಮುದ್ರದಲ್ಲಿ ಇಂದು ಮುಂಜಾನೆ ಭೂಕಂಪ ಸಂಭವಿಸಿದೆ. ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರ ಪ್ರಕಾರ, ಮುಂಜಾನೆ 3:20 ಕ್ಕೆ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಕಂಪನಸಂಭವಿಸಿದ್ದು ಭೂಕಂಪವು ಸಮುದ್ರದ 10 ಕಿಮೀ ಆಳದಲ್ಲಿ ದಾಖಲಾಗಿದೆ.

ಕಳೆದ ತಿಂಗಳು ಕೂಡ ಇಷ್ಟೇ ತೀವ್ರತೆಯ ಕಂಪನ ಸಂಭವಿಸಿದ್ದವು ಆದರೆ ಯಾವುದೇ ಅಪಾಯವಾಗಿರಲಿಲ್ಲ ಆದರು ಈಗ ಕಟ್ಟೆಚರದಿಂದ ಇರುವಂತೆ ಸೂಚಿಸಲಾಗಿದೆ ಸಮುದ್ರದ ಅಲೆಗಳ ಅಬ್ಬರ ಹಚ್ಚಾಗಿದ್ದು ಪ್ರವಾಸಿಗರು ಹಾಗು ಸ್ಥಳೀಯರಿಗೆ ಕಡಲ ಬಳಿ ತೆರಳದಂತೆ ಮಾಹಿತಿ ನೀಡಲಾಗಿದೆ.

ಪ್ರೊಫೆಸರ್ ಕಾರು ಡಿಕ್ಕಿ : ಇಬ್ಬರು ವಿದ್ಯಾರ್ಥಿನಿಯರು ಸೇರಿ ಮೂವರಿಗೆ ಗಾಯ

ಇನ್ನು ಮತ್ತೊಂದೆಡೆ ಪಶ್ಚಿಮ ಅಫ್ಘಾನಿಸ್ತಾನದಲ್ಲಿ ರಾತ್ರಿ 11 ಗಂಟೆ ವೇಳೆಯಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದ್ದುಕಟ್ಟಡಗಳು ಕುಸಿದು ಸುಮಾರು 320 ಜನರು ಸಾವನ್ನಪ್ಪಿದ್ದಾರೆ. ಮತ್ತು ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವಿಶ್ವಸಂಸ್ಥೆ ತಿಳಿಸಿದೆ.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (08-10-2023)

ನಿತ್ಯ ನೀತಿ : ಯಾರು ತನ್ನ ಸುಖವನ್ನು ಸಮಾಜಕ್ಕಾಗಿ ತ್ಯಾಗ ಮಾಡುವುದಕ್ಕೆ ಮುಂದಾಗುತ್ತಾರೋ ಅವರಿಗೆ ಸಮಾಜವನ್ನು ಉದ್ಧರಿಸುವಂತಹ ಕೆಲಸಗಳು ಅವರ ಕಣ್ಮುಂದೆ ಹೊಳೆಯುವುದಕ್ಕೆ ಆರಂಭಿಸುತ್ತವೆ.

ಪಂಚಾಂಗ ಭಾನುವಾರ 08-10-2023
ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ವರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷ / ತಿಥಿ: ನವಮಿ / ನಕ್ಷತ್ರ: ಪುಷ್ಯ / ಯೋಗ: ಸಿದ್ಧ / ಕರಣ: ವಣಿಜ್

ಸೂರ್ಯೋದಯ : ಬೆ.06.09
ಸೂರ್ಯಾಸ್ತ : 06.05
ರಾಹುಕಾಲ : 4.30-6.00
ಯಮಗಂಡ ಕಾಲ : 12.00-1.30
ಗುಳಿಕ ಕಾಲ : 3.00-4.30

ರಾಶಿ ಭವಿಷ್ಯ
ಮೇಷ
: ವ್ಯಾಪಾರ ಕ್ಷೇತ್ರದಲ್ಲಿ ಲಾಭವಾಗಲಿದೆ. ಅಗತ್ಯ ವಸ್ತುಗಳನ್ನು ಖರೀದಿಸುವಿರಿ.
ವೃಷಭ: ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸವಾಗಬಹುದು.
ಮಿಥುನ: ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ ಸಿಗಲಿದೆ. ಮನೆಯಲ್ಲಿ ಶಾಂತಿಯುತ ವಾತಾವರಣ.

ಕಟಕ: ದಾಯಾದಿ ಕಲಹ. ದುಷ್ಟ ಜನರಿಂದ ದೂರವಿರಿ.
ಸಿಂಹ: ಕೌಟುಂಬಿಕ ಅಗತ್ಯತೆ ಮತ್ತು ಜವಾಬ್ದಾರಿ ಪೂರೈಸಲು ಹಣ ಖರ್ಚು ಮಾಡಬೇಕಾಗುತ್ತದೆ.
ಕನ್ಯಾ: ಹಣದ ಒಳಹರಿವು ಉತ್ತಮವಾಗಿರುತ್ತದೆ.

ತುಲಾ: ಹಿತಶತ್ರುಗಳಿಂದ ತೊಂದರೆ. ಊರೂರು ಸುತ್ತಾಟ. ಮನಸ್ಸಿನಲ್ಲಿ ಭೀತಿ.
ವೃಶ್ಚಿಕ: ಬೆನ್ನು ಮತ್ತು ಸ್ನಾಯು ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ಕಾರಣ ನೀವು ಕೆಲವು ಆರೋಗ್ಯ ಸಮಸ್ಯೆ ಎದುರಿಸಬೇಕಾಗುತ್ತದೆ.
ಧನುಸ್ಸು: ಮನೆಯ ಜವಾಬ್ದಾರಿಗಳನ್ನು ಅರ್ಥ ಮಾಡಿಕೊಂಡು ಅವುಗಳನ್ನು ನಿಭಾಯಿಸಬೇಕು.

ಮಕರ: ಹೊಸ ಉದ್ಯಮ ಪ್ರಾರಂಭಿಸುವಿರಿ.ಮನೆ ಖರೀದಿ. ಆರೋಗ್ಯ ಪ್ರಾಪ್ತಿ.
ಕುಂಭ: ವ್ಯವಹಾರದಲ್ಲಿ ಹೂಡಿಕೆ ಮಾಡುವ ಮುನ್ನ ನಾಲ್ಕು ಬಾರಿ ಆಲೋಚಿಸುವುದು ಸೂಕ್ತ.
ಮೀನ: ಕುಟುಂಬದವರೊಂದಿಗೆ ಸಾಕಷ್ಟು ಸಮಯ ಕಳೆಯಲು ಬಯಸುವಿರಿ.

ಜೆಸಿ ರಸ್ತೆ ಸ್ಟೀಲ್ ಬ್ರಿಡ್ಜ್ ಬದಲಿಗೆ ಕಾಂಕ್ರಿಟ್ ಸೇತುವೆ ನಿರ್ಮಾಣ

ಬೆಂಗಳೂರು,ಅ.7- ನಗರದ ಜೆಸಿ ರಸ್ತೆಯಲ್ಲಿ ನಿರ್ಮಿಸಲು ಉದ್ದೇಶಿಸಿದ್ದ ಸ್ಟೀಲ್ ಬ್ರಿಡ್ಜ್ ಬದಲಿಗೆ ಹೊಸ ವಿನ್ಯಾಸದ ಕಾಂಕ್ರಿಟ್ ಸೇತುವೆ ನಿರ್ಮಿಸಲು ಸರ್ಕಾರ ತೀರ್ಮಾನಿಸಿದೆ. ರಾಜಧಾನಿ ಬೆಂಗಳೂರು ದಕ್ಷಿಣ ದಿಕ್ಕಿನ ಹೃದಯ ಭಾಗಕ್ಕೆ ಸಂಪರ್ಕ ಕಲ್ಪಿಸೋ ಜೆ.ಸಿ.ರಸ್ತೆಯಲ್ಲಿ ನಿರ್ಮಾಣ ಮಾಡಬೇಕಿದ ಸ್ಟೀಲ್ ಬ್ರಿಡ್ಜ್ ಬದಲಿಗೆ ಕಾಂಕ್ರಿಟ್ ಫ್ಲೈಓವರ್ ನಿರ್ಮಾಣಕ್ಕೆ ಸರ್ಕಾರ ಅಸ್ತು ಎಂದಿದ್ದು ಬರೋಬ್ಬರಿ 350 ಕೋಟಿ ರು. ವೆಚ್ಚದಲ್ಲಿ ಯೋಜನೆ ರೂಪಿಸಿ ಟೆಂಡರ್ ಪ್ರಕ್ರಿಯೆ ಆರಂಭಿಸಲು ಬಿಬಿಎಂಪಿಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ.

ಜೆ.ಸಿ.ರಸ್ತೆಯಲ್ಲಿ ಫ್ಲೈಓವರ್ ನಿರ್ಮಾಣ ಮಾಡಬೇಕೆಂಬ ಯೋಜನೆ ಕಳೆದ 5 ವರ್ಷಗಳಿಂದ ಇತ್ತು, ಸ್ಟೀಲ್ ಬ್ರಿಡ್ಜ್ ಎಂಬ ಕಾರಣಕ್ಕೆ ಹಾಗೂ ವಿವಿಧ ತಾಂತ್ರಿಕ ಕಾರಣಕ್ಕೆ ಯೋಜನೆ ಹಲವು ಬಾರಿ ನಿಂತು ಹೋಗಿತ್ತು. ಇದೀಗ ಬಿಬಿಎಂಪಿ ಸ್ಟೀಲ್ ಬ್ರಿಡ್ಜ್ ಪ್ರಸ್ತಾವನೆಯನ್ನು ಸಂಪೂರ್ಣವಾಗಿ ಕೈ ಬಿಟ್ಟು ಮೈಸೂರು ರಸ್ತೆಯ ಸಿರ್ಸಿ ಸರ್ಕಲ್ ಫ್ಲೈಓವರ್ ಮಾದರಿಯಲ್ಲಿ ಜೆ.ಸಿ.ರಸ್ತೆಯಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ.

ರಾಜ್ಯ ಸರ್ಕಾರ ಈ ಪ್ರಸ್ತಾವನೆಗೆ ತಾತ್ವಿಕ ಒಪ್ಪಿಗೆ ನೀಡಿದೆ, ಹೀಗಾಗಿ ಜೆಸಿ.ರಸ್ತೆಫ್ಲೈ ಓವರ್ ನಿರ್ಮಾಣಕ್ಕೆ ಟೆಂಡರ್ ಆಹ್ವಾನಕ್ಕೆ ತಯಾರಿ ಮಾಡಿಕೊಂಡಿದ್ದು, ಮುಖ್ಯ ಆಯುಕ್ತರು ಈಗಾಗ್ಲೇ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಇನ್ನೂ 2.8 ಕಿ.ಮೀ ಉದ್ದದ ಫ್ಲೈಓವರ್ ಒಟ್ಟು 88 ಪಿಲ್ಲರ್ಗಳನ್ನು ಒಳಗೊಂಡಿದ್ದು , ಪ್ಲೈಓವರ್ ಎರಡು ಭಾಗಗಳಲ್ಲಿ ಹಾಗೂ ಪ್ಲೈಓವರ್ ನ್ನ ಕೆಳ ಭಾಗದಲ್ಲಿ ಬರುವ ರಸ್ತೆಗಳಿಗೆ ವೈಟ್ ಟ್ಯಾಪಿಂಗ್ ರಸ್ತೆ ಮಾಡಲು ತೀರ್ಮಾನಿಸಲಾಗಿದೆ.

ಬಿಜೆಪಿ ಪೋಸ್ಟರ್ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಮಿನರ್ವ ವೃತ್ತದಿಂದ ಹಡ್ಸನ್ ವೃತ್ತ ತಲುಪಲು ಕನಿಷ್ಠ 30-40 ನಿಮಿಷ ಬೇಕಾಗುತ್ತಿದೆ. ಒಟ್ಟು ಏಳು ಸಿಗ್ನಲ್ಗಳನ್ನು ದಾಟಿಕೊಂಡು ಕೆ.ಜಿ.ರಸ್ತೆಗೆ ತಲುಪುವಷ್ಟರಲ್ಲಿ ವಾಹನ ಸವಾರರು ಸುಸ್ತಾಗಿರ್ತಾರೆ, ಈ ಪ್ಲೈಓವರ್ ನಿರ್ಮಾಣವಾದ್ರೆ ವಾಹನ ಸವಾರರು ಮಿನರ್ವ ವೃತ್ತದಿಂದ ಹಡ್ಸನ್ ವೃತ್ತದ ತುದಿಗೆ ಕೇವಲ ಐದು ನಿಮಿಷಗಳಲ್ಲಿ ತಲುಪಬಹುದಾಗಿದೆ.

ಸಾರ್ವಜನಿಕರಿಗೆ ಮೈಸೂರು ಅರಮನೆ ಪ್ರವೇಶ ನಿರ್ಬಂಧ

ಆರ್.ವಿ.ರಸ್ತೆ, ಡಯಾಗ್ನಲ್ ರಸ್ತೆ ಹಾಗೂ ನೃಪತುಂಗ ರಸ್ತೆಯಲ್ಲಿ ಅಪ್ ರ್ಯಾಂಪ್ ನಿರ್ಮಾಣವಾಗಲಿದ್ದು, ಕೆ.ಜಿ.ರಸ್ತೆ, ಕಸ್ತೂರ ಬಾ ರಸ್ತೆ ಹಾಗೂ ಆರ್.ವಿ ರಸ್ತೆಯ ಬಳಿ ಡೌನ್ ರ್ಯಾಂಪ್ ನಿರ್ಮಾಣಕ್ಕೆ ವ್ಯವಸ್ಥೆ ಮಾಡಲಾಗಿದೆ. ಒಟ್ಟು ನಾಲ್ಕು ಪಥದ ರಸ್ತೆ ನಿರ್ಮಾಣಕ್ಕೆ ಬಿಬಿಎಂಪಿ ಮುಂದಾಗಿದೆ, ಅಂದುಕೊಂಡಂತೆ ಅದ್ರೆ ಇದೆ ತಿಂಗಳ ಅಂತ್ಯದೋಳಗೆ ಕಾಮಗಾರಿ ಪ್ರರಂಭವಾಗುವ ಎಲ್ಲ ಲಕ್ಷಣಗಳು ಕಾಣಿಸ್ತಿವೇ,,