Thursday, November 6, 2025
Home Blog Page 1917

ಜಾತ್ಯತೀತ ಸಿದ್ಧಾಂತ ಬಿಟ್ಟುಕೊಡಲು ಸಾಧ್ಯವಾಗುತ್ತಿಲ್ಲ : ಸಿ.ಎಂ.ಇಬ್ರಾಹಿಂ

ಬೆಂಗಳೂರು,ಅ.4-ಬಿಜೆಪಿ ಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡ ಬಳಿಕ ನಮ್ಮ ಪಕ್ಷದ ಚಿಹ್ನೆ ಉಳಿಯಲಿದೆಯೇ ಎಂಬ ಪ್ರಶ್ನೆ ಕಾಡುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡರೂ ನಾವು ಜಾತ್ಯತೀತ ಸಿದ್ದಾಂತ ಬಿಟ್ಟುಕೊಡಲು ಆಗುವುದಿಲ್ಲ ಎಂದರು.

ಜೆಡಿಎಸ್ ಸಿದ್ದಾಂತವನ್ನು ಮೆಚ್ಚಿ ಬಿಜೆಪಿಯವರು ಬಂದಿದ್ದಾರೆಯೇ ಅಥವಾ ಬಿಜೆಪಿ ಸಿದ್ದಾಂತವನ್ನು ಮೆಚ್ಚಿ ಜೆಡಿಎಸ್‍ನವರು ಹೋಗಿದ್ದಾರಾ? ಎಂಬ ಪ್ರಶ್ನೆ ಎದುರಾಗಿದೆ. ಈ ಬಗ್ಗೆ ಎಲ್ಲ ಕಡೆ ಅಭಿಪ್ರಾಯ ಸಂಗ್ರಹಿಸುತ್ತಿದ್ದೇವೆ. ಅಕ್ಟೋಬರ್ 16ರಂದು ಮೈತ್ರಿ ಕುರಿತಂತೆ ಸವಿಸ್ತಾರವಾಗಿ ಚರ್ಚೆ ಮಾಡುತ್ತೇವೆ. ಎಲ್ಲರೂ ಸಲಹೆ ಕೊಡಲು ಕಾತುರದಿಂದ ಕಾಯುತ್ತಿದ್ದಾರೆ. ಆ ಸಭೆಯ ನಂತರ ಅಭಿಪ್ರಾಯವನ್ನು ಸಂಗ್ರಹಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ತಿಳಿಸುವುದಾಗಿ ಹೇಳಿದರು.

ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ ಪ್ರತಿಪಕ್ಷದ ಹಾಲಿ, ಮಾಜಿ ಶಾಸಕರು

ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿಯಾದ ಬಳಿಕ ನಾನು ಪಕ್ಷದಲ್ಲಿ ಕಾಣಿಸುತ್ತಿಲ್ಲ ಎಂಬುದು ತಪ್ಪು. ಎಲ್ಲ ಜಿಲ್ಲೆಯವರು ನಮ್ಮ ಸಂಪರ್ಕದಲ್ಲಿದ್ದಾರೆ. ನಾನು ಕೂಡ ಎಲ್ಲ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತಿದ್ದೇನೆ. ಈ ಮೈತ್ರಿ ಕಾಂಗ್ರೆಸಿಗೆ ಬೇಕು, ಬಿಜೆಪಿಗೆ ಬೇಕೊ ಎಂಬುದು ಗೊತ್ತಿಲ್ಲ ಎಂದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಶೇ.20ರಷ್ಟು ಮತಗಳು ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಬಂದಿದೆ. ಇದನ್ನು ಶಾಸಕರು ಒಪ್ಪಿದ್ದಾರೆ. ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಹೆಚ್ಚು ಮತಗಳು ಬರಲಿಲ್ಲ, ಏಕೆ ಬರಲಿಲ್ಲ ಎಂಬುದರ ಕಾರಣ ಹುಡುಕಬೇಕಿದೆ ಎಂದರು.

ನಾನು ಪಕ್ಷದ ರಾಜ್ಯಾಧ್ಯಕ್ಷನಾಗಿ ಏನು ಅಡುಗೆ ಮಾಡಬೇಕೊ ಅದನ್ನು ಮಾಡಿದ್ದೇನೆ. ಬಿರಿಯಾನಿಯನ್ನೇ ಯಾಕೆ ಮಾಡಿಲ್ಲ ಎಂದರೆ ಅದು ನನಗೆ ಗೊತ್ತಿಲ್ಲ. ಮೈತ್ರಿ ಬಗ್ಗೆ ಕೆಲವರಿಗೆ ಅಸಮಾಧಾನವಿದೆ. ಆದರೆ ಅವರ ಹೆಸರನ್ನು ಬಹಿರಂಗಪಡಿಸುವುದಿಲ್ಲ ಎಂದು ತಿಳಿಸಿದರು.

ಮೈಸೂರು ದಸರಾ : ಅ.6ರಿಂದ 13ರವರೆಗೆ ಯುವ ಸಂಭ್ರಮ

ವಿಧಾನಪರಿಷತ್ ಸದಸ್ಯ ಸ್ಥಾನವನ್ನೇ ಬಿಟ್ಟು ಬಂದಿದ್ದೇನೆ. ನಾನು ಅಧಿಕಾರಕ್ಕಾಗಿ ಪಕ್ಷಾಂತರ ಮಾಡಿದವನಲ್ಲ ನಾಡಿನ ಜನರ ಹೃದಯದಲ್ಲಿದ್ದೇನೆ ಎಂದು ರಾಯಭಾರ ಹುದ್ದೆಯ ಬೇಡಿಕೆ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.

ರಾಜ್ಯ ಸರ್ಕಾರದ ಬಗ್ಗೆ ಸಂಸದ ಪ್ರತಾಪ್ ಸಿಂಹ ಅವರು ನೀಡಿದ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ. ಶಿವಾಜಿ, ಮಹಾತ್ಮ ಗಾಂೀಧಿಜಿ, ಟಿಪ್ಪು ಸುಲ್ತಾನ್ ಕಟೌಟ್‍ಗಳನ್ನು ಹಾಕಿದರೆ ತಪ್ಪೇ? ಟಿಪ್ಪು, ಔರಂಗಜೇಬ್ ಯಾರು ಎಂದು ಗೊತ್ತೆ? ಔರಂಗಜೇಬ್ ಹಿಂದೂಸ್ಥಾನದ ದೊರೆಯಾಗಿದ್ದರು. ಅವರ ಕಟೌಟ್ ಹಾಕಿದರೆ ತಪ್ಪೇನು ಎಂದು ಇದೇ ಸಂದರ್ಭದಲ್ಲಿ ಪ್ರಶ್ನಿಸಿದರು.

ಬಿಎಂಟಿಸಿಗೆ ಕೋಟ್ಯಾಂತರ ರೂ. ವಂಚಿಸಿದ್ದ ಅಧಿಕಾರಿ ಬಂಧನ

ಬೆಂಗಳೂರು, ಅ.4- ಬಿಎಂಟಿಸಿ ಎಂಡಿ ಮತ್ತು ನಿರ್ದೇಶಕರ ಹೆಸರಿನಲ್ಲಿ ನಕಲು ಸಹಿ ಮಾಡಿ ಸಂಸ್ಥೆಗೆ ಕೋಟ್ಯಾಂತರ ರೂ. ವಂಚಿಸಿದ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು ಒಬ್ಬನನ್ನು ಬಂಧಿಸಿ, ತಲೆಮರೆಸಿಕಕೊಂಡಿರುವ ಆರು ಮಂದಿಗಾಗಿ ಶೋಧ ನಡೆಸುತ್ತಿದ್ದಾರೆ.

ಬಿಎಂಟಿಸಿ ಸಂಸ್ಥೆಯಲ್ಲಿ ಅಂದಿನ ಮುಖ್ಯ ಸಂಚಾರ ವ್ಯವಸ್ಥಾಪಕರಾಗಿದ್ದ ಶ್ರೀರಾಮ್ ಮುಲ್ಕಾವನ್ ಬಂಧಿತ ಅಧಿಕಾರಿ. ಪ್ರಸ್ತುತ ಇವರು ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು. ತಲೆಮರೆಸಿಕೊಂಡಿರುವ ಶ್ಯಾಮಲಾ ಎಸ್ ಮದ್ದೋಡಿ, ಮಮತಾ, ಅನಿತಾ, ಗುಣಶೀಲ, ವೆಂಕಟೇಶ್ ಹಾಗೂ ಪ್ರಕಾಶ್ ಕೊಪ್ಪಳರವರಿಗಾಗಿ ಶೋಧ ಮುಂದುವರಿದಿದೆ.

ಸುದ್ದಿ ಸಂಸ್ಥೆಗಳ ಮೇಲಿನ ದಾಳಿ ಸತ್ಯವನ್ನು ಹತ್ತಿಕ್ಕುವ ಪ್ರಯತ್ನ : ಸಚಿವ ಗುಂಡೂರಾವ್

ಬಿಎಂಟಿಸಿ ಸಂಸ್ಥೆಯ ಉನ್ನತಾಧಿಕಾರಿಗಳ ಸಹಿಗಳನ್ನುನಕಲು ಮಾಡಿ ಸಂಸ್ಥೆಗೆ ಸುಮಾರು 17.62 ಕೋಟಿ ರೂ. ಆರ್ಥಿಕ ನಷ್ಟವುಂಟುಮಾಡಿರುವ ಅಧಿಕಾರಿಗಳ ವಿರುದ್ಧ ಬಿಎಂಟಿಸಿ ಅಸಿಸ್ಟೆಂಟ್ ಸೆಕ್ಯೂರಿಟಿ ಅಂಡ್ ವಿಜಿಲೆನ್ಸ್ ಅಧಿಕಾರಿ ಸಿಕೆ ರಮ್ಯಾ ಅವರು ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರಿಗೆ ದೂರು ನೀಡಿದ್ದರು.

ಈ ಬಗ್ಗೆ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಫ್‍ಐಆರ್‍ನಲ್ಲಿ 7 ಮಂದಿಯ ಹೆಸರಿದೆ. ವಾಣಿಜ್ಯ ಶಾಖೆಯಲ್ಲಿ ನಿರ್ವಹಣೆ ಮಾಡುವ ಕಡತಕ್ಕೆ ಸಂಬಂಧಿಸಿದಂತೆ ಈ ಹಿಂದಿನ ಭದ್ರತೆ ಮತ್ತು ಜಾಗೃತ ದಳದ ನಿರ್ದೇಶರಾದ ಅರುಣ್ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಶಿಖಾ ಅವರ ಅನ್ಯ ಕಡತದಲ್ಲಿ ಅನುಮೋದಿಸಿದ ಸಹಿಗಳನ್ನು ಕಲರ್ ಜೆರಾಕ್ಸ್ ಮಾಡುವ ಮೂಲಕ ಸಂಸ್ಥೆಗೆ ಕ್ರಮವಾಗಿ 10.50 ಕೋಟಿ ಹಾಗೂ 6.91 ಕೋಟಿ ರೂ. ಆರ್ಥಿಕ ನಷ್ಟವುಂಟಾಗಿತ್ತು.

ಲಾಲೂಪ್ರಸಾದ್ ಯಾದವ್ ಕುಟುಂಬಕ್ಕೆ ಬಿಗ್ ರಿಲೀಫ್

ಲಾಕ್‍ಡೌನ್ ಅವಧಿಯಲ್ಲಿ ಪರವಾನಿಗೆದಾರರಿಗೆ ವಿನಾಯಿತಿ ನೀಡುವ ಸಂಬಂಧ ಸದರಿ ಕಡತದ ಟಿಪ್ಪಣಿಯಲ್ಲಿ ಪರವಾನಿಗೆ ಶುಲ್ಕವನ್ನು ಸಂಪೂರ್ಣವಾಗಿ ಮನ್ನ ಮಾಡಬಹುದೆಂದು ಷರಾ ಬರೆದು ಸದರಿ ಕಡತದ ಟಿಪ್ಪಣಿಯಲ್ಲಿ ವ್ಯವಸ್ಥಾಪಕ ನಿರ್ದೇಶಕರಾದ ರೇಜು ಅವರು ಅನ್ಯ ಕಡತದಲ್ಲಿ ಅನುಮೋದಿಸಿದ ಸಹಿಗಳನ್ನು ಕಲರ್ ಜೆರಾಕ್ಸ್ ಮೂಲಕ ಸದರಿ ಕಡತದ ಟಿಪ್ಪಣಿ ಪುಟಗಳಲ್ಲಿ ಅಳವಡಿಸಿಕೊಂಡು ಸಂಸ್ಥೆಗೆ 21.64 ಲಕ್ಷ ಆರ್ಥಿಕ ನಷ್ಟವುಂಟಾಗಲು ಕಾರಣರಾಗಿರುವುದು ದೃಡಪಟ್ಟಿತ್ತು.

ಅಲ್ಲದೆ ಯಶವಂತಪುರ ಟಿಟಿಎಂಸಿ ಸ್ವಚ್ಛತಾ ನಿರ್ವಹಣೆಯ ಪರವಾನಿಗೆದಾರರಾದ ಲಕ್ಷ್ಮೀ ಎಂಟರ್‍ಪ್ರೈಸಸ್ ಅವರು ಕರಾರು ಅವ ಮುಕ್ತಾಯವಾಗಿದ್ದರೂ, ಸೂಕ್ತ ಅಧಿಕಾರಿಗಳ ಅನುಮತಿಯಿಲ್ಲದೆ ಪರವಾನಿಗೆಯನ್ನು ತಾತ್ಕಾಲಿಕವಾಗಿ ಮುಂದುವರಿಸಿರುವುದಲ್ಲದೆ ಕರಾರು ಒಪ್ಪಂದದ ನಿಯಮದಂತೆ ಮಿನಿಮಮ್ ಲೇಬರ್ ಹೊರತುಪಡಿಸಿ ಸ್ವಚ್ಛತಾ ಕಾರ್ಯ ನಿರ್ವಹಣೆಗೆ ಅನುಕೂಲ ಮಾಡಿ ಕೊಡುವ ಸಂಬಂಧ ನಿರ್ದೇಶಕರಾಗಿದ್ದ ಅರುಣ್ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶಿಖಾ ಅವರು ಅನ್ಯ ಕಡತದಲ್ಲಿ ಅನುಮೋದಿಸಿದ ಸಹಿಗಳನ್ನು ಕಲರ್ ಜೆರಾಕ್ಸ್ ಮೂಲಕ ಕಡತದ ಟಿಪ್ಪಣಿ ಪುಟಗಳಲ್ಲಿ ಅಳವಡಿಸಿಕೊಂಡು ಸಂಸ್ಥೆಗೆ 1.5 ಲಕ್ಷ ಆರ್ಥಿಕ ನಷ್ಟವುಂಟಾಗಲು ಕಾರಣರಾಗಿದ್ದು ಕಂಡು ಬಂದಿತ್ತು. ಆರೋಪಿಗಳು 4 ಕಡತಗಳಲ್ಲಿ ಸಂಸ್ಥೆಗೆ ಒಟ್ಟು 17.62 ಕೋಟಿ ರೂ. ನಷ್ಟವುಂಟು ಮಾಡಿದ್ದಾರೆ ಎಂದು ಅಂದಾಜಿಸಲಾಗಿದೆ.

ಪ್ರಕರಣದ ಗಂಭೀರತೆಯನ್ನು ಅರಿತು ತನಿಖೆ ಚುರುಕುಗೊಳಿಸಿರುವ ಪೊಲೀಸರು ಒಬ್ಬರನ್ನು ಬಂಧಿಸಿ ಉಳಿದವರಿಗಾಗಿ ಶೋಧ ನಡೆಸುತ್ತಿದ್ದಾರೆ.

ಲಿಕ್ಕರ್ ನೀತಿ ಹಗರಣ : ಎಎಪಿ ರಾಜ್ಯಸಭೆ ಸಂಸದ ಸಂಜಯ್ ಸಿಂಗ್ ನಿವಾಸದ ಮೇಲೆ ಇ.ಡಿ ದಾಳಿ

ಹೊಸದಿಲ್ಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಪ್ ಸಂಸದ ಸಂಜಯ್ ಸಿಂಗ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಶೋಧ ನಡೆಸಿದರು.

ರಾಜ್ಯಸಭೆ ಸಂಸದರೂ ಆಗಿರುವ ಸಂಜಯ್ ಸಿಂಗ್ ಅವರ ದಿಲ್ಲಿ ನಿವಾಸಕ್ಕೆ ಇ.ಡಿ ಅಧಿಕಾರಿಗಳು ಮುಂಜಾನೆ ತೆರಳಿದ್ದಾರೆ. ರಾಜಧಾನಿ ದಿಲ್ಲಿಯ ಎಎಪಿ ಸರ್ಕಾರದ ಉಪ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರಾಗಿದ್ದ ಮನೀಶ್ ಸಿಸೋಡಿಯಾ ಅವರನ್ನು ಕೇಂದ್ರ ತನಿಖಾ ದಳ ಫೆಬ್ರವರಿಯಲ್ಲಿ ಬಂಧಿಸಿತ್ತು. ಅದರ ಬಳಿಕ ಅಬಕಾರಿ ನೀತಿ ಹಗರಣದಲ್ಲಿ ಕೇಂದ್ರ ಸಂಸ್ಥೆಗಳು ಸಂಜಯ್ ಸಿಂಗ್ ಅವರಿಗೆ ಆಘಾತ ನೀಡಿವೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯ್ ಸಿಂಗ್ ಆಪ್ತ ಸಿಬ್ಬಂದಿ ಮತ್ತು ಅವರೊಂದಿಗೆ ಸಂಬಂಧ ಹೊಂದಿರುವವರನ್ನು ಈ ಹಿಂದೆ ಇಡಿ ವಿಚಾರಣೆ ನಡೆಸಿತ್ತು. ದಾಳಿ ಬಗ್ಗೆ ಮಾತನಾಡಿರುವ ಆಪ್ ವಕ್ತಾರೆ ರೀನಾ ಗುಪ್ತಾ, ಸಂಜಯ್ ಸಿಂಗ್ ಅವರು ಪ್ರಧಾನಿ ಮೋದಿ ಮತ್ತು ಅದಾನಿ ವಿಷಯದ ಬಗ್ಗೆ ನಿರಂತರವಾಗಿ ಪ್ರಶ್ನೆಗಳನ್ನು ಎತ್ತುತ್ತಿದ್ದರಿಂದ ಅವರ ನಿವಾಸದ ಮೇಲೆ ದಾಳಿ ನಡೆಸಲಾಗುತ್ತಿದೆ.

ಆಭರಣ ಮಳಿಗೆ, ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ಐಟಿ ದಾಳಿ

2021ರಲ್ಲಿ ದಿಲ್ಲಿ ಸರ್ಕಾರ ಅಬಕಾರಿ ನೀತಿ ರೂಪಿಸಿತ್ತು. ಇದಕ್ಕೆ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ಆದರೆ ಲಿಕ್ಕರ್ ನೀತಿಗೆ ಸಂಬಂಧಿಸಿದಂತೆ ಆಗಲೇ ಸಾವಿರಾರು ಕೋಟಿ ರೂ ಹಗರಣ ನಡೆದಿರುವುದು ಬೆಳಕಿಗೆ ಬಂದಿತ್ತು. ಈ ವಿಚಾರವಾಗಿ ಜಾರಿ ನಿರ್ದೇಶನಾಲಯ ಹಾಗೂ ಸಿಬಿಐ ಎರಡೂ ಪ್ರತ್ಯೇಕವಾಗಿ ಪ್ರಕರಣಗಳನ್ನು ದಾಖಲಿಸಿಕೊಂಡಿವೆ. ಇದೇ ಪ್ರಕರಣದಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಕೂಡ ಏಪ್ರಿಲ್‌ನಲ್ಲಿ ಸುಮಾರು 9 ಗಂಟೆ ವಿಚಾರಣೆಗೆ ಒಳಪಡಿಸಲಾಗಿತ್ತು.

ಅಬಕಾರಿ ನೀತಿಯನ್ನು ರೂಪಿಸುವುದರಲ್ಲಿ ಲಿಕ್ಕರ್ ಕಂಪೆನಿಗಳು ಭಾಗಿಯಾಗಿದ್ದವು. ಇದರ ಪ್ರಕಾರ, ಸಂಸ್ಥೆಗಳಿಗೆ ಶೇ 12ರಷ್ಟು ಲಾಭ ದೊರಕುವಂತೆ ಮಾಡಲಾಗಿತ್ತು. ‘ಸೌತ್ ಗ್ರೂಪ್’ ಎಂದು ಕರೆಯಲಾಗಿರುವ ವ್ಯಕ್ತಿಗಳ ಗುಂಪು ಲಾಬಿ ನಡೆಸಲು ಕಿಕ್ ಬ್ಯಾಕ್ ಕೂಡ ನೀಡಿತ್ತು. ಶೇ 12ರ ಲಾಭದಲ್ಲಿ ಶೇ 6ರಷ್ಟನ್ನು ಮಧ್ಯವರ್ತಿಗಳ ಮುಖಾಂತರ ರಾಜಕಾರಣಿಗಳಿಗೆ ತಲುಪುವಂತೆ ವ್ಯವಸ್ಥೆ ಮಾಡಲಾಗಿತ್ತು ಎಂದು ಸಿಬಿಐ ಆರೋಪಿಸಿದೆ.

ಆಭರಣ ಮಳಿಗೆ, ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ಐಟಿ ದಾಳಿ

ಬೆಂಗಳೂರು,ಅ.4-ತೆರಿಗೆ ಕಟ್ಟದೆ ವಂಚನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ನಗರದ 50 ಕಡೆ ಏಕಕಾಲಕ್ಕೆ ಆಭರಣ ಮಾಲೀಕರ ಅಂಗಡಿ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಅಲ್ಲದೆ, ವ್ಯಾಪಾರಿಗಳು, ವರ್ತಕರು, ದಂತ ವೈದ್ಯರು, ಮಾಲೀಕರು, ಖಾಸಗಿ ಕಂಪನಿಗಳು, ಮನೆ ಮತ್ತು ಕಚೇರಿಗಳ ಮೇಲೆ 15 ಕ್ಕೂ ಹೆಚ್ಚು ಅಧಿಕಾರಿಗಳು ದಿಢೀರ್ ದಾಳಿ ಮಾಡಿ ತೆರಿಗೆ ವಂಚನೆ ಸಂಬಂಧ ಕೆಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ದಾಳಿಗೆ ಒಳಗಾಗಿರುವ ಆಭರಣ ಅಂಗಡಿ ಮಾಲೀಕರು, ದಂತ ವೈದ್ಯರು, ಖಾಸಗಿ ವ್ಯಕ್ತಿಗಳಿಗೆ ಸದ್ಯದಲ್ಲೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಐಟಿ ಮುಂದಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ ವಿಜಯನಗರ, ಬಿಟಿಎಂ ಲೇಔಟ್, ಸದಾಶಿವನಗರ, ಹುಳಿಮಾವು ಸೇರಿದಂತೆ ಮತ್ತಿತರ ಕಡೆ ಒಟ್ಟು 50 ಅಧಿಕಾರಿಗಳ ತಂಡ ಚಿನ್ನದ ಅಂಗಡಿಗಳು, ಮೆಡಿಕಲ್ ಶಾಪ್‍ಗಳು, ಖಾಸಗಿ ಆಸ್ಪತ್ರೆಗಳ ಮಾಲಕರ ಮನೆ, ಉದ್ಯಮ ಸಂಸ್ಥೆಗಳ ಮೇಲೆ ದಾಳಿ ನಡೆಸಿ ಚಿರ, ಚರಾಸ್ತಿ ಪತ್ತೆ ಮಾಡಿದ್ದಾರೆ.

ಸುದ್ದಿ ಸಂಸ್ಥೆಗಳ ಮೇಲಿನ ದಾಳಿ ಸತ್ಯವನ್ನು ಹತ್ತಿಕ್ಕುವ ಪ್ರಯತ್ನ : ಸಚಿವ ಗುಂಡೂರಾವ್

ಗೋವಾ ಮತ್ತು ಚೆನ್ನೈನಿಂದ ಆಗಮಿಸಿದ್ದ ಐಟಿ ಅಧಿಕಾರಿಗಳು ಸ್ಥಳೀಯ ಪೊಲೀಸರಿಗೆ ಸಣ್ಣದೊಂದು ಮಾಹಿತಿಯನ್ನೂ ನೀಡದೆ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ. ವಿಜಯನಗರ ಮತ್ತು ಶಾಂತಿನಗರದಲ್ಲಿ ವೈದ್ಯೆಯರ ಮನೆ ಮೇಲೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ತೆರಿಗೆ ವಂಚನೆಗೆ ಸಂಬಂಧಿಸಿದ ದಾಖಲೆಗಳನ್ನು ಪತ್ತೆ ಮಾಡಿದ್ದಾರೆ.

ಮೇಕ್ರಿ ಸರ್ಕಲ್ ಬಳಿಯ ಗಜರಾಜ ಜ್ಯುವೆಲರ್ಸ್ ಮೇಲೂ ದಾಳಿ ನಡೆಸಲಾಗಿದೆ. ಕಳೆದ ಒಂದೂವರೆ ವರ್ಷದಿಂದ ತೆರಿಗೆ ಕಟ್ಟಿರಲಿಲ್ಲ ಎಂದು ತಿಳಿದುಬಂದಿದೆ. ದಾಳಿ ಸಂದರ್ಭದಲ್ಲಿ ಅಂಗಡಿಯ ಬಾಗಿಲು ಹಾಕಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ಅಂಗಡಿ ಮಾಲೀಕರು ಪ್ರತಿರೋಧ ತೋರಿದರೂ ಐಟಿ ಅಧಿಕಾರಿಗಳು ಯಾವುದಕ್ಕೂ ಜಗ್ಗಲಿಲ್ಲ.

ಪ್ರಭಾವಿ ರಾಜಕಾರಣಿ ಸಂಬಂಧಿಕರ ಆಭರಣ ಅಂಗಡಿ ಮತ್ತು ಕಚೇರಿಗಳ ಮೇಲೆ ದಾಳಿಯನ್ನು ನಡೆಸಲಾಗಿದೆ. ಸದಾಶಿವನಗರದ ಸ್ಯಾಂಕಿಟ್ಯಾಂಕಿ ರಸ್ತೆಯಲ್ಲಿರುವ ಲಕ್ಷ್ಮಿಲಾಲ ಜೈನ್‍ಗಣೇಶ್ ಆಭರಣದ ಅಂಗಡಿಗಳ ಮೇಲೂ ದಾಳಿ ನಡೆಸಲಾಗಿದೆ. ಎರಡು ಖಾಸಗಿ ಇನ್ನೋವ ಕಾರಿನಲ್ಲಿ ಬಂದಿದ್ದ ಐಟಿ ಅಧಿಕಾರಿಗಳು ಸುಮಾರು 3 ಗಂಟೆಗೂ ಹೆಚ್ಚು ಕಾಲ ದಾಖಲೆಗಳನ್ನು ಪರಿಶೀಲಿಸಿ ವಶಕ್ಕೆ ಪಡೆದಿದ್ದಾರೆ.

ತಿಂಗಳಾಂತ್ಯಕ್ಕೆ ಪಂಚರಾಜ್ಯ ಚುನಾವಣೆ ಘೋಷಣೆ ಸಾಧ್ಯತೆ

ವಿಜಯನಗರದ ಖ್ಯಾತ ದಂತ ವೈದ್ಯೆ ಸಂಧ್ಯಾ ಪಾಟೀಲ್ ಅವರು ನಡೆಸುತ್ತಿರುವ ಕ್ಲಿನಿಕ್ ಹಾಗೂ ಪ್ರಶಾಂತನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಲಾಗಿದೆ. ಶಾಂತಿನಗರದಲ್ಲಿ ನವೀನ್ ಎಂಬುವರಿಗೆ ಸೇರಿದ ಕಚೇರಿ ಮೇಲೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬಿಗಿ ಭದ್ರತೆ ನಡುವೆ ಎರಡು ಇನ್ನೋವಾ ಕಾರಿನಲ್ಲಿ 10 ಅಧಿಕಾರಿಗಳ ತಂಡ ದಿಢೀರ್ ದಾಳಿ ನಡೆಸಿ ನವೀನ್‍ರಿಗೆ ಸೇರಿದ ಬ್ಯಾಂಕ್ ಖಾತೆಗಳು, ಚಿರ, ಚರಾಸ್ತಿಗಳ ಬಗ್ಗೆ ಪರಿಶೀಲನೆ ಮಾಡಿ, ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಕಳೆದ ತಿಂಗಳು ಸೆಪ್ಟೆಂಬರ್ 27ರಂದು ಬೆಂಗಳೂರಿನ ಹಲವು ಕಂಪೆನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಬೆಂಗಳೂರಿನ 10ಕ್ಕೂ ಹೆಚ್ಚು ಖಾಸಗಿ ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ, ಆದಾಯ ತೆರಿಗೆ ತಪ್ಪು ಮಾಹಿತಿ, ಸುಳ್ಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ದಾಳಿ ನಡೆದಿತ್ತು. ಅದಾಗಿ ಒಂದು ವಾರದ ನಂತರ ಮತ್ತೊಮ್ಮೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ ಪ್ರತಿಪಕ್ಷದ ಹಾಲಿ, ಮಾಜಿ ಶಾಸಕರು

ಬೆಂಗಳೂರು,ಅ.4- ಜೆಡಿಎಸ್, ಬಿಜೆಪಿ ನಾಯಕರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ವದಂತಿಗಳಿಗೆ ಪೂರಕವಾಗಿ ಮತ್ತಷ್ಟು ಪ್ರಮುಖ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ರವರನ್ನು ಭೇಟಿ ಮಾಡಿದ್ದಾರೆ. ಹನೂರಿನ ಶಾಸಕ ಮಂಜುನಾಥ್ ಅವರು ಸಿಎಂ ಸಿದ್ದರಾಮಯ್ಯನವರ ಜೊತೆ ರಹಸ್ಯ ಮಾತುಕತೆ ನಡೆಸಿದ್ದಾರೆ.

ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‍ರೊಂದಿಗೆ ಸಿದ್ದರಾಮಯ್ಯನವರನ್ನು ಭೇಟಿ ಮಾಡಿರುವ ಜೆಡಿಎಸ್‍ನ ಶಾಸಕರು ರಾಜಕೀಯ ಆಗುಹೋಗುಗಳ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಮತ್ತೊಂದೆಡೆ ಬಿಜೆಪಿಯ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ರವರನ್ನು ಭೇಟಿ ಮಾಡಿದ್ದಾರೆ.

ಕಾಂಗ್ರೆಸಿಗರು ಹಾಲಿ ಶಾಸಕರನ್ನು ಪಕ್ಷಕ್ಕೆ ಸೆಳೆದುಕೊಳ್ಳುವ ಬದಲಾಗಿ ಮಾಜಿ ಶಾಸಕರು, ಪ್ರಭಾವಿ ಮುಖಂಡರನ್ನು ಕೇಂದ್ರೀಕರಿಸಿದ್ದಾರೆ. ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುತ್ತಿದ್ದಂತೆ ಜೆಡಿಎಸ್‍ನಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ಅತೃಪ್ತ ಪ್ರಮುಖ ನಾಯಕರು ಕಾಂಗ್ರೆಸ್‍ನತ್ತ ಮುಖ ಮಾಡಿದ್ದಾರೆ.

ಸುದ್ದಿ ಸಂಸ್ಥೆಗಳ ಮೇಲಿನ ದಾಳಿ ಸತ್ಯವನ್ನು ಹತ್ತಿಕ್ಕುವ ಪ್ರಯತ್ನ : ಸಚಿವ ಗುಂಡೂರಾವ್

ಈಗಾಗಲೇ ಬಿಬಿಎಂಪಿ ಸೇರಿದಂತೆ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ನಾಯಕರುಗಳು ಹಂತ ಹಂತವಾಗಿ ಕಾಂಗ್ರೆಸ್‍ಗೆ ಸೇರ್ಪಡೆಯಾಗುತ್ತಿದ್ದಾರೆ. ಕೆಲವು ಪ್ರಭಾವಿ ನಾಯಕರುಗಳನ್ನು ವರಿಷ್ಠ ನಾಯಕರು ಕೆಪಿಸಿಸಿಯಲ್ಲಿ ಪಕ್ಷಕ್ಕೆ ಸೇರ್ಪಡೆ ಮಾಡಿಸಿಕೊಂಡರೆ ಕೆಳ ಹಂತದ ನಾಯಕರನ್ನು ಜಿಲ್ಲಾ ಮಟ್ಟದಲ್ಲೇ ಕರೆದುಕೊಳ್ಳಲಾಗುತ್ತಿದೆ.

ಹನೂರಿನ ಹಾಲಿ ಶಾಸಕ ಮಂಜುನಾಥ್ ಅವರು ಮುಖ್ಯಮಂತ್ರಿಯವರನ್ನು ಭೇಟಿಯಾಗಿದ್ದರ ಹಿಂದೆ ರಾಜಕೀಯ ಉದ್ದೇಶವಿಲ್ಲ. ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಮಾತುಕತೆ ನಡೆಸಿದ್ದಾರೆ ಎಂಬ ಅಭಿಪ್ರಾಯಗಳು ಕೇಳಿಬಂದಿವೆ. ಆದರೆ ಸಚಿವ ಭೈರತಿ ಸುರೇಶ್ ಜೊತೆಗೆ ಹೋದ ಶಾಸಕರು ಮುಖ್ಯಮಂತ್ರಿಯವರ ರಹಸ್ಯ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸಿದೆ.

ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಪಕ್ಷವನ್ನು ದುರ್ಬಲಗೊಳಿಸಲು ಸಿದ್ದರಾಮಯ್ಯ ತೆರೆಮರೆಯ ಕಾರ್ಯತಂತ್ರವನ್ನು ರೂಪಿಸಿದ್ದಾರೆಯೇ ಎಂಬ ಅನುಮಾನ ರಹಸ್ಯ ಮಾತುಕತೆ ಹುಟ್ಟುಹಾಕಿದೆ.

2024ರ ವೇಳೆಗೆ ಅತ್ಯಾಕರ್ಷಕ ಸ್ಲೀಪರ್ ಕೋಚ್ ವಂದೇ ಭಾರತ್

ನವದೆಹಲಿ,ಅ.4- ಈಗಾಗಲೇ ದೇಶಾದ್ಯಂತ ವಂದೇ ಭಾರತ್ ರೈಲುಗಳನ್ನು ಪರಿಚಯಿಸುವ ಮೂಲಕ ಪ್ರಯಾಣಿಕರಿಗೆ ಅತ್ಯಾಕರ್ಷಕ ಪ್ರಯಾಣದ ಸೌಲಭ್ಯ ಒದಗಿಸಿರುವ ರೈಲ್ವೆ ಇಲಾಖೆ ಇದೀಗ ಆಧುನಿಕ ಸೌಲಭ್ಯವುಳ್ಳ ಸ್ಲೀಪರ್ ಕೋಚ್ ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲು ಮುಂದಾಗಿದೆ.

2024ರ ವೇಳೆಗೆ ದೇಶದಾದ್ಯಂತ ವಂದೇ ಭಾರತ್ ಸ್ಲೀಪರ್ ಕೋಚ್ ರೈಲುಗಳನ್ನು ಪ್ರಯಾಣಿಕರಿಗೆ ಪರಿಚಯಿಸಲಾಗುವುದು. ಈಗಾಗಲೇ ಇದಕ್ಕಾಗಿ ಅಗತ್ಯ ಪೂರ್ವ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಕೂನಲ್ಲಿ ಕೆಲವು ಸ್ಲೀಪರ್ ಕೋಚ್‍ನ ರೈಲ್ವೆ ಚಿತ್ರಗಳನ್ನು ಶೇರ್ ಮಾಡಿಕೊಂಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ಲಾಗಿದೆ. ನೂತನ ಸ್ಲೀಪರ್ ಕೋಚ್ ವಂದೇ ಭಾರತ್ ಹೊಸ ರೈಲುಗಳನ್ನು 2024ರ ವೇಳೆಗೆ ನಾವು ಪ್ರಯಾಣಿಕರ ಸೇವೆಗೆ ಒದಗಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇವೆ ಇದು ಅತಿ ವೇಗ ಮತ್ತು ಹೆಚ್ಚಿನ ಆರಾಮದಾಯಕ ಪ್ರಯಾಣದ ಅನುಭವ ನೀಡುತ್ತದೆ ಎಂದು ಹೇಳಿದ್ದಾರೆ.

ಕಿಡಿಗೇಡಿತನ ಬಿಜೆಪಿಯವರ ಹುಟ್ಟುಗುಣ : ಸಚಿವ ರಾಮಲಿಂಗಾರೆಡ್ಡಿ

ವಂದೇ ಭಾರತ್ ಪರಿಕಲ್ಪನೆಯ ರೈಲು ಶೀಘ್ರದಲ್ಲೇ ಬರಲಿದೆ. ಈ ರೈಲುಗಳು ವಿಶಾಲವಾದ ಬರ್ತ್‍ಗಳು, ಸುಂದರವಾದ ಒಳಾಂಗಣಗಳು, ವಿಶಾಲವಾದ ಶೌಚಾಲಯಗಳು, ಮಿನಿಪ್ಯಾಂಟ್ರಿ ಮತ್ತು ಸುಧಾರಿತ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ ಎಂದು ಅಶ್ವಿನಿ ವೈಷ್ಣವು ಹೇಳಿದ್ದಾರೆ.

ವೇಗವಾಗಿ ತಲುಪುವುದರಿಂದ ಸಮಯವಕಾಶವೂ ಉಳಿಯುವುದರ ಜೊತೆಗೆ ಆರಾಮದಾಯಕವಾಗಿಯೂ ಪ್ರಯಾಣ ಮಾಡುವ ಅವಕಾಶ ಇರುವುದರಿಂದ ಇದು ರೈಲ್ವೆ ಪ್ರಯಾಣಿಕರ ಸಂಖ್ಯೆಯನ್ನು ಹೆಚ್ಚಿಸಲಿದೆ. ಪ್ರಗತಿಪರ ಮತ್ತು ಸ್ವಾವಲಂಬಿ ಭಾರತದ ಸಂಕೇತವೆನಿಸಿರುವ ಸ್ಥಳೀಯ ಹೈ ಸ್ಪೀಡ್ ರೈಲು ಪ್ರಯಾಣಿಕರಿಗೆ ಸಂಪೂರ್ಣವಾಗಿ ಹೊಸ ಪ್ರಯಾಣದ ಅನುಭವವನ್ನು ಒದಗಿಸುವ ಗುರಿಯನ್ನು ಹೊಂದಿದೆ. ವೇಗ, ಸುರಕ್ಷತೆ, ಹಾಗೂ ಸೇವೆ ಈ ರೈಲಿನ ಹಾಲ್‍ಮಾರ್ಕ್ ಆಗಲಿದೆ.

ಸಿಕ್ಕಿಂನಲ್ಲಿ ಮೇಘಸ್ಪೋಟ, 23 ಸೇನಾ ಸಿಬ್ಬಂದಿ ನಾಪತ್ತೆ

ವಿಶ್ವದರ್ಜೆಯ ವೈಶಿಷ್ಟ್ಯಗಳೊಂದಿಗೆ ಸಜ್ಜುಗೊಂಡಿರುವ ವಂದೇ ಭಾರತ್ ಎಕ್ಸ್‍ಪ್ರೆಸ್ ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣದ ಭರವಸೆ ನೀಡುತ್ತದೆ. 2019ರಲ್ಲಿ ದೇಶದ ಮೊದಲ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲು ಆರಂಭವಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಈ ರೈಲಿಗೆ ಚಾಲನೆ ನೀಡಿದ್ದರು.

ಫೆಬ್ರವರಿ 15, 2019ರಂದು ನವದೆಹಲಿ ಮತ್ತು ವಾರಣಾಸಿ ನಡುವೆ ಮೊದಲ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲು ಆರಂಭವಾಗಿತ್ತು. ಈ ರೈಲನ್ನು ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿ ತಯಾರಿಸಲಾಗಿತ್ತು.

ಲಾಲೂಪ್ರಸಾದ್ ಯಾದವ್ ಕುಟುಂಬಕ್ಕೆ ಬಿಗ್ ರಿಲೀಫ್

ನವದೆಹಲಿ,ಅ.4- ಉದ್ಯೋಗಕ್ಕಾಗಿ ಭೂಮಿ ಪ್ರಕರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿಗಳಾದ ಲಾಲೂಪ್ರಸಾದ್ ಯಾದವ್ ಪತ್ನಿ ರಾಬ್ಡಿದೇವಿ ಹಾಗೂ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‍ಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. 2004ರಿಂದ 2009ರವರೆಗೆ ಕೇಂದ್ರ ರೈಲ್ವೇ ಸಚಿವರಾಗಿದ್ದ ಅವಧಿಯಲ್ಲಿ ಲಾಲು ಪ್ರಸಾದ್ ಅವರ ಕುಟುಂಬಕ್ಕೆ ಭೂಮಿ ಹಸ್ತಾಂತರಿಸಿದ್ದಕ್ಕೆ ಪ್ರತಿಯಾಗಿ ಭಾರತೀಯ ರೈಲ್ವೆಯಲ್ಲಿ ಕೆಲವರಿಗೆ ಉದ್ಯೋಗ ನೀಡಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು.

ಹೀಗಾಗಿ ಲಾಲುಪ್ರಸಾದ್ ಯಾದವ್, ರಾಬ್ಡಿದೇವಿ ಮತ್ತು ಡಿಸಿಎಂ ತೇಜಸ್ವಿ ಯಾದವ್ ವಿರುದ್ಧ ಸಿಬಿಐ ನ್ಯಾಯಾಲಯಕ್ಕೆ ಚಾರ್ಜ್‍ಶೀಟ್ ಸಲ್ಲಿಸಿತ್ತು. ಕಳೆದ ಜುಲೈ 3ರಂದು ಲಾಲುಪ್ರಸಾದ್ ಮತ್ತು ಇತರರ ವಿರುದ್ಧ ಹೊಸ ಚಾರ್ಜ್ ಶೀಟ್ ಸಲ್ಲಿಸಿದ್ದ ಸಿಬಿಐ ಕೇಂದ್ರ ರೈಲ್ವೆಯಲ್ಲಿ ಅಭ್ಯರ್ಥಿಗಳ ಅನಿಯಮಿತ/ಅಕ್ರಮ ನೇಮಕಾತಿಗಳನ್ನು ಮಾಡಲಾಗಿದೆ, ರೈಲ್ವೆಯ ನಿಯಮಗಳು, ಮಾರ್ಗಸೂಚಿಗಳು ಮತ್ತು ಕಾರ್ಯವಿಧಾನಗಳನ್ನು ಉಲ್ಲಂಘಿಸಲಾಗಿದೆ ಎಂದು ಉಲ್ಲೇಖಿಸಿತ್ತು.

ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಸಾಧಕ-ಬಾಧಕಗಳ ಕುರಿತು ಚರ್ಚೆ : ಪರಮೇಶ್ವರ್

ಜುಲೈ 3ರಂದು ನ್ಯಾಯಾಲಯಕ್ಕೆ ಸಲ್ಲಿಸಿದ್ದ ಎರಡನೇ ಚಾರ್ಜ್‍ಶೀಟ್‍ನಲ್ಲಿ ತೇಜಸ್ವಿ ಯಾದವ್ ಅವರ ಹೆಸರು ಪ್ರಸ್ತಾಪವಾಗಿತ್ತು. ಆದರೆ ಮೊದಲ ಚಾರ್ಜ್‍ಶೀಟ್‍ನಲ್ಲಿ ಅವರನ್ನು ಆರೋಪಿ ಎಂದು ಹೆಸರಿಸಿರಲಿಲ್ಲ. ಮೂವರು ಕುಟುಂಬ ಸದಸ್ಯರ ಜೊತೆಗೆ 14 ವ್ಯಕ್ತಿಗಳು ಮತ್ತು ಘಟಕಗಳನ್ನು ಚಾರ್ಜ್‍ಶೀಟ್‍ನಲ್ಲಿ ಹೆಸರಿಸಲಾಗಿತ್ತು.

ಲಾಲುಪ್ರಸಾದ್ ಅವರನ್ನು ವಿಚಾರಣೆಗೆ ಒಳಪಡಿಸಲು ಸಕ್ಷಮ ಅಧಿಕಾರಿಗಳಿಂದ ಅಗತ್ಯ ಅನುಮತಿಯನ್ನು ಪಡೆಯಲಾಗಿದೆ ಎಂದು ಸಿಬಿಐ ಇತ್ತೀಚೆಗೆ ನ್ಯಾಯಾಲಯಕ್ಕೆ ತಿಳಿಸಿದ ನಂತರ ವಿಶೇಷ ಸಿಬಿಐ ನ್ಯಾಯಾೀಧಿಶರಾದ ನ್ಯಾಯಮೂರ್ತಿ ಗೀತಾಂಜಲಿ ಗೋಯೆಲ್ ಅವರು ಲಾಲು ಮತ್ತು ಇತರರಿಗೆ ಸಮನ್ಸ್ ನೀಡಿದ್ದರು.

ಸಮನ್ಸ್ ನೀಡುವಾಗ, ಭ್ರಷ್ಟಾಚಾರ, ಕ್ರಿಮಿನಲ್ ಪಿತೂರಿ, ವಂಚನೆ ಮತ್ತು ಫೋರ್ಜರಿ ಸೇರಿದಂತೆ ವಿವಿಧ ಅಪರಾಧಗಳ ಆಯೋಗವನ್ನು ಪ್ರಾಥಮಿಕವಾಗಿ ಸಾಕ್ಷ್ಯ ತೋರಿಸಿರುವುದನ್ನು ನ್ಯಾಯಾಲಯ ಗಮನಿಸಿತ್ತು. ಇನ್ನು ನ್ಯಾಯಾಲಯ ತಮಗೆ ಜಾಮೀನು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ತೇಜಸ್ವಿ ಯಾದವ್, ಇದು ಕಾನೂನಿನ ವಿಷಯ. ನಾವು ನ್ಯಾಯಾಲಯದ ಮುಂದೆ ಹಾಜರಾಗಿದ್ದೇವೆ. ನಮಗೆ ನ್ಯಾಯಾಲಯವು ಜಾಮೀನು ನೀಡಿದೆ ಎಂದಷ್ಟೇ ಹೇಳಿದರು.

ಸಿಕ್ಕಿಂನಲ್ಲಿ ಮೇಘಸ್ಪೋಟ, 23 ಸೇನಾ ಸಿಬ್ಬಂದಿ ನಾಪತ್ತೆ

ಲಾಲು ಪ್ರಸಾದ್ ಯಾದವ್ ಮತ್ತು ಇತರರು ತಮ್ಮ ವಿರುದ್ಧ ನೀಡಲಾದ ಸಮನ್ಸ್‍ನ ಅನ್ವಯ ಇಂದು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಮೈಸೂರು ದಸರಾ : ಅ.6ರಿಂದ 13ರವರೆಗೆ ಯುವ ಸಂಭ್ರಮ

ಮೈಸೂರು, ಅ. 4- ಮೈಸೂರು ದಸರಾ ಅಂಗವಾಗಿ ಯುವ ಸಂಭ್ರಮ ಕಾರ್ಯಕ್ರಮ ಅ. 6ರಿಂದ 13ರವರೆಗೆ ನಡೆಯಲಿದೆ ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಟ್ಕರ್ ತಿಳಿಸಿದರು. ನಗರದ ಎಸ್ಪಿ ಕಚೇರಿಯಲ್ಲಿಂದು ಬೆಳಿಗ್ಗೆ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಯುವ ಸಂಭ್ರಮ ಕುರಿತ ಮಾಹಿತಿ ನೀಡಿದರು.

ಅ. 6ರಿಂದ 13ರವರೆಗೆ ಮೈಸೂರಿನ ಮಾನಸಗಂಗೋತ್ರಿಯ ಬಯಲು ರಂಗ ಮಂದಿರದಲ್ಲಿ ಯುವ ಸಂಭ್ರಮ ಕಾರ್ಯಕ್ರಮ ನಡೆಯಲಿದೆ ಎಂದು ಅವರು ತಿಳಿಸಿದರು. ಉದ್ಘಾಟನಾ ಸಮಾರಂಭ ಅ.6ರಂದು ಸಂಜೆ ನಡೆಯಲಿದ್ದು, ಈ ಸಮಾರಂಭವನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದವರು ಹೇಳಿದರು. ಉದ್ಘಾಟನೆಯ ದಿನದಂದು ಚಿತ್ರ ನಟ ವಶಿಷ್ಟ ಸಿಂಹ ಹಾಗೂ ಹರಿಪ್ರಿಯ ತಾರಾ ಮೆರಗು ನೀಡಲಿದ್ದಾರೆ ಎಂದವರು ತಿಳಿಸಿದರು.

ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಸಾಧಕ-ಬಾಧಕಗಳ ಕುರಿತು ಚರ್ಚೆ : ಪರಮೇಶ್ವರ್

ಈ ಸಂಭ್ರಮದಲ್ಲಿ ಪಾಲ್ಗೊಳ್ಳಲು ರಾಜ್ಯದ ವಿವಿಧಡೆಯಿಂದ 400ಕ್ಕೂ ಹೆಚ್ಚು ಅರ್ಜಿಗಳು ಬಂದಿದೆ. ರಾಜ್ಯದಲ್ಲಿನ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಉತ್ಸುಕರಾಗಿದ್ದಾರೆ ಎಂದವರು ತಿಳಿಸಿದರು.

ಸಿಕ್ಕಿಂನಲ್ಲಿ ಮೇಘಸ್ಪೋಟ, 23 ಸೇನಾ ಸಿಬ್ಬಂದಿ ನಾಪತ್ತೆ

ಈ ಬಾರಿ ಚಂದ್ರಯಾನ, ರಾಷ್ಟ್ರೀಯ ಭಾವೈಕ್ಯತೆ, ನಾಡು ನುಡಿಗಾಗಿ ಹೋರಾಡಿದವರು ಸೇರಿದಂತೆ 20 ವಿಷಯ ಕುರಿತು ನೃತ್ಯ ಪ್ರದರ್ಶನ ನೀಡಲು ಕಾಲೇಜು ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ ಎಂದವರು ತಿಳಿಸಿದರು. ಪ್ರತಿ ಕಾಲೇಜಿಗೆ 5 ನಿಮಿಷ ಕಾಲಾವಕಾಶವನ್ನು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಪ್ರತಿದಿನ ಸಂಜೆ 5ರಿಂದ ರಾತ್ರಿ 10 ಗಂಟೆಯವರೆಗೆ ಈ ಸಮಾರಂಭ ನಡೆಯಲಿದೆ ಎಂದವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸುದ್ದಿ ಸಂಸ್ಥೆಗಳ ಮೇಲಿನ ದಾಳಿ ಸತ್ಯವನ್ನು ಹತ್ತಿಕ್ಕುವ ಪ್ರಯತ್ನ : ಸಚಿವ ಗುಂಡೂರಾವ್

ಬೆಂಗಳೂರು,ಅ.4- ಕೇಂದ್ರ ಸರ್ಕಾರದ ಲೋಪದೋಷಗಳನ್ನು ಬಹಿರಂಗಪಡಿಸಿದ ಸುದ್ದಿ ಸಂಸ್ಥೆಗಳ ವಿರುದ್ಧ ತನಿಖಾ ಸಂಸ್ಥೆಗಳಿಂದ ದಾಳಿ ನಡೆಸುವ ಮೂಲಕ ಸತ್ಯವನ್ನು ಹತ್ತಿಕ್ಕುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‍ಗುಂಡೂರಾವ್ ಆರೋಪಿಸಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಈ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ದೆಹಲಿಯ ಪೊಲೀಸರ ಮೂಲಕ ಸುದ್ದಿ ಸಂಸ್ಥೆಯ ಮೇಲೆ ದಾಳಿ ನಡೆಸಿರುವುದು ಕೇಂದ್ರದ ಸರ್ವಾಧಿಕಾರಿ ಮನಸ್ಥಿತಿಯ ಪ್ರತೀಕ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಸಾಧಕ-ಬಾಧಕಗಳ ಕುರಿತು ಚರ್ಚೆ : ಪರಮೇಶ್ವರ್

ದಾಳಿಗೊಳಗಾದ ಸುದ್ದಿ ಸಂಸ್ಥೆ ಸಿಎಎ ಮತ್ತು ಕೃಷಿ ಕಾಯ್ದೆ ವಿರೋಸಿ ನಡೆದಿದ್ದ ರೈತರ ಹೋರಾಟದಲ್ಲಿ ಕೇಂದ್ರ ಸರ್ಕಾರದ ಹುಳುಕುಗಳನ್ನು ಎತ್ತಿ ತೋರಿಸಿತ್ತು. ಅದರ ಅಸಹನೆಯ ಫಲವಾಗಿ ಈ ಮಾಧ್ಯಮ ಸಂಸ್ಥೆಯ ಮೇಲೆ ಕೇಂದ್ರ ಸರ್ಕಾರ ದಾಳಿ ನಡೆಸಿದೆ ಎಂದು ದೂರಿದ್ದಾರೆ.

ಇಡಿ, ಸಿಬಿಐ, ಐಟಿಯಂತಹ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ಇಲ್ಲಿಯವರೆಗೂ ತನ್ನ ರಾಜಕೀಯ ವಿರೋಧಿಗಳ ವಿರುದ್ಧ ಬಳಸುತಿತ್ತು. ಈಗ ತನ್ನ ಹುಳುಕುಗಳನ್ನು ಎತ್ತಿ ತೋರಿಸುವ ಮಾಧ್ಯಮ ಸಂಸ್ಥೆಗಳ ಮೇಲೂ ಈ ಸಂಸ್ಥೆಗಳನ್ನು ಛೂ ಬಿಡುತ್ತಿದೆ. ತಾನು ಪ್ರಶ್ನಾತೀತ, ತನ್ನನ್ನು ಯಾರೂ ಪ್ರಶ್ನಿಸಬಾರದು ಎಂಬ ಕೇಂದ್ರದ ಧೋರಣೆಯೇ ದಾಳಿಗೆ ಕಾರಣ. ಮಾಧ್ಯಮಗಳನ್ನು ಹೆದರಿಕೆಯಿಂದ ಬಾಯಿ ಮುಚ್ಚಿಸುವ ತಂತ್ರ ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಚುನಾವಣಾ ಸಮೀಪದಲ್ಲೇ ಕೇಂದ್ರ ಕೆಲವು ಮಾಧ್ಯಮಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ. ತನ್ನ ಹುಳುಕುಗಳು ಬಯಲಾಗುವ ಭಯದಿಂದ ಸತ್ಯ ಹೇಳುವ ಮಾಧ್ಯಮಗಳನ್ನು ಮಟ್ಟ ಹಾಕುವ ಕೆಲಸವನ್ನು ಕೇಂದ್ರ ವ್ಯವಸ್ಥಿತವಾಗಿ ಮಾಡುತ್ತಿದೆ ಎಂದು ದೂರಿದ್ದಾರೆ.

ಬಾಲ ಕಾರ್ಮಿಕರ ರಕ್ಷಣೆಗೆ ಸಚಿವ ಸಂತೋಷ್ ಲಾಡ್ ಸೂಚನೆ

ಬೆಳಗಾವಿ,ಅ.4- ಬಾಲ ಕಾರ್ಮಿಕರನ್ನು ಬಳಸಿಕೊಳ್ಳುತ್ತಿರುವ ಸ್ಥಳಗಳನ್ನು ಗುರತಿಸಿ ಕಾರ್ಯಾಚರಣೆ ನಡೆಸುವ ಮೂಲಕ ಮಕ್ಕಳನ್ನು ರಕ್ಷಣೆ ಮಾಡುವಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸೂಚನೆ ನೀಡಿದ್ದಾರೆ. ಬೆಳಗಾವಿ ಜಿಲ್ಲಾ ಪ್ರವಾಸದಲ್ಲಿರುವ ಸಚಿವರು, ಹಿರಿಯ ಅಧಿಕಾರಿಗಳ ಹಾಗೂ ಸ್ಥಳೀಯ ಜನಾಪ್ರತಿನಿಧಿಗಳ ಜೊತೆ ಚರ್ಚೆ ನಡೆಸಿದರು. ಶಾಸಕರಾದ ಮಹಂತೇಶ್ ಕೌಜಲಗಿ, ಮಹೇಂದ್ರ ತಮ್ಮಣ್ಣನವರ್, ಕಾರ್ಮಿಕ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಿಸಿನ್, ಇಲಾಖೆ ಆಯುಕ್ತರಾದ ಗೋಪಾಲ ಕೃಷ್ಣ, ಜಿಲ್ಲಾಧಿಕಾರಿ ನಿತೇಶ್ ಪಟೇಲ್, ಎಸ್‍ಪಿ ಡಾ.ಭೀಮಾಶಂಕರ್ ಗುಳೇದ, ಸಿಇಒ ಗೋಯೆಲ್ ಹರ್ಷಲ್ ನಾರಾಯಣರಾವ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಸಿಕ್ಕಿಂನಲ್ಲಿ ಮೇಘಸ್ಪೋಟ, 23 ಸೇನಾ ಸಿಬ್ಬಂದಿ ನಾಪತ್ತೆ

ಬಾಲಕಾರ್ಮಿಕ ಪದ್ಧತಿ ಸಾಮಾಜಿಕ ಪಿಡುಗಾಗಿದೆ. ಓದುವ ಮಕ್ಕಳನ್ನು ದುಡಿಮೆಗೆ ತೊಡಗಿಸುವುದು ಕಾನೂನು ಬಾಹಿರ. ಇದರ ವಿರುದ್ಧ ನಿರಂತರವಾದ ಕಾರ್ಯಾಚರಣೆ ನಡೆಯಬೇಕು. ಬಾಲಕಾರ್ಮಿಕರನ್ನು ಗುರುತಿಸುವ ಸಲುವಾಗಿ ಅಸ್ತಿತ್ವದಲ್ಲಿರುವ ವಿಶೇಷ ಕಾರ್ಯಪಡೆಗಳನ್ನು ಸಕ್ರಿಯಗೊಳಿಸಬೇಕು ಎಂದು ಸೂಚಿಸಿದರು.

ಮಕ್ಕಳನ್ನು ಬಾಲಕಾರ್ಮಿಕರನ್ನಾಗಿ ದುಡಿಸಿಕೊಳ್ಳುತ್ತಿರುವ ಸ್ಥಳಗಳನ್ನು ಗುರುತಿಸಿ ನಿಗಾ ವಹಿಸಬೇಕು. ಸಂರಕ್ಷಿಸಲಾದ ಮಕ್ಕಳನ್ನು ಶಾಲೆಗೆ ಸೇರಿಸಿ ವಿದ್ಯಾಭ್ಯಾಸ ಕೊಡಿಸುವ ಮೂಲಕ ಪುನರ್‍ವಸತಿ ಕಲ್ಪಿಸಬೇಕು. ಅವರ ಪೋಷಕರಿಗೆ ಹೆಚ್ಚಿನ ತಿಳುವಳಿಕೆ ನೀಡಿ ಮಕ್ಕಳ ಭವಿಷ್ಯ ರೂಪಿಸಲು ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.