Thursday, November 6, 2025
Home Blog Page 1921

8 ಅಡಿ ಎತ್ತರದ ಪುನೀತ್ ಕಂಚಿನ ಪುತ್ಥಳಿ ಲೋಕಾರ್ಪಣೆ

ಕೆಆರ್ ಪೇಟೆ ,ಅ.3- ಪಟ್ಟಣದ ಎಂ.ಕೆ.ಬೊಮ್ಮೇಗೌಡ ವೃತ್ತದಲ್ಲಿ ಪುನೀತ್ ಯುವ ಸಾಮ್ರಾಜ್ಯದ ವತಿಯಿಂದ ನೂತನವಾಗಿ ನಿರ್ಮಿಸಿರುವ ಎಂಟು ಅಡಿ ಎತ್ತರದ ಕಂಚಿನ ಪುತ್ಥಳಿಯನ್ನು ಅಶ್ವಿನಿ ಪುನೀತ್‍ರಾಜಕುಮಾರ್ ಅವರು ಲೋಕಾರ್ಪಣೆ ಮಾಡಿದರು. ಪುನೀತ್‍ಯುವ ಸಾಮ್ರಾಜ್ಯದ ಬಳಗದ ವತಿಯಿಂದ ನಿರ್ಮಾಣ ಮಾಡಿರುವ ಪುನೀತ್ ರಾಜಕುಮಾರ್ ಅವರ ಪುತ್ಥಳಿ ಲೋಕಾರ್ಪಣೆ ಸಮಾರಂಭದಲ್ಲಿ ಸ್ವತಃ ಪುನೀತ್ ಧರ್ಮಪತ್ನಿ ಅಶ್ವಿನಿ ಅವರು ಭಾಗವಹಿಸಿದ್ದು ವಿಶೇಷವಾಗಿತ್ತು.

ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಪುನೀತ್ ಸಾಮ್ರಾಜ್ಯದ ಯುವ ಬಳಗದ ಪದಾಧಿಕಾರಿಗಳು ಪಟಾಕಿಗಳನ್ನು ಸಿಡಿಸಿ ಪುಷ್ಪವೃಷ್ಟಿ ಮಾಡಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರಿಗೆ ಹೃದಯಸ್ಪರ್ಶಿ ಸ್ವಾಗತ ನೀಡಿದರು. ಈ ವೇಳೆ ಕನ್ನಡ ಬಾವುಟಗಳು ಹಾರಾಡಿದವು. ಪುನೀತ್ ಅವರ ಪರವಾಗಿ ಜಯಘೋಷಗಳು ಮೊಳಗಿದವು.

ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಡಾ.ಜಗದೀಶ್ ಮಾತನಾಡಿ, ಯುವಜನರು ಪುನೀತ್ ಅವರಂತೆಯೇ ಸೇವಾ ಮನೋಭಾವನೆ ಹಾಗೂ ಪರೋಪಕಾರ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜಮುಖಿಯಾಗಿ ಮುನ್ನ ಡೆದು ಗುರಿಸಾಧನೆ ಮಾಡಬೇಕು. ಗುರು-ಹಿರಿಯರು, ತಂದೆ-ತಾಯಿಗಳನ್ನು ಗೌರವಿಸ ಬೇಕು ಎಂದು ಮನವಿ ಮಾಡಿದರು.

ಕೃಷ್ಣರಾಜಪೇಟೆ ಪಟ್ಟಣದ ಹೈಸ್ಕೂಲ್ ಆಫ್ ಡ್ಯಾನ್ಸ್, ಪ್ರಿನ್ಸೆಸ್ ಸ್ಕೂಲ್‍ಆಫ್ ಡ್ಯಾನ್ಸ್, ನಾಟ್ಯ ನೃತ್ಯ ಶಾಲೆ, ನೃತ್ಯಪಯಣ ನಾಟ್ಯ ಶಾಲೆಯ ವಿದ್ಯಾರ್ಥಿಗಳು ಆದರ್ಶಕ ನೃತ್ಯ ಪ್ರದರ್ಶನ ಮಾಡಿ ಶಾಸ್ತ್ರೀಯ ಭರತನಾಟ್ಯ ಪ್ರದರ್ಶನ ನೀಡಿ ರಂಜಿಸಿದರು. ಜಯಕರ್ನಾಟಕ ಸಂಘಟನೆಯ ತಾಲೂಕು ಘಟಕದ ಅಧ್ಯಕ್ಷ ಸೋಮಶೇಖರ್, ಪುರಸಭೆ ಅಧ್ಯಕ್ಷ ನಟರಾಜು, ಕಾಮಿಡಿ ಕಿಲಾಡಿಗಳು ಖ್ಯಾತಿಯ ಶಿವರಾಜ್ ಕೆ.ಆರ್.ಪೇಟೆ, ಮನೋಹರಗೌಡ, ಮಂಡ್ಯ ರವಿ, ಶೀಳನೆರೆಕೇಶವ್, ಮಡವಿನಕೋಡಿ ಮಂಜುನಾಥ್, ಸಕಲೇಶಪುರದ ಜೂನಿಯರ್ ಪುನೀತ್‍ಅಪ್ಪು ಸೇರಿದಂತೆ ಸಾವಿರಾರು ಪುನೀತ್ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಹಾವು-ಮುಂಗುಸಿಗಳ ಒಗ್ಗೂಡುವಿಕೆಯೇ ಇಂಡಿಯಾ ಮೈತ್ರಿಕೂಟ ; ತೇಜಸ್ವಿ ಸೂರ್ಯ

ಕೆ.ಆರ್.ಪೇಟೆ ತಾಲೂಕಿನ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ಕಲ್ಲಹಳ್ಳಿಯ ಭೂವರಹನಾಥ ದೇವಾಲಯದ ವತಿಯಿಂದ ಸುಮಾರು 5000 ಜನರಿಗೆ ಪ್ರಸಾದದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಅಭಿಮಾನಿಗಳಿಂದ ರಕ್ತದಾನ: ಪುನೀತ್ ಪುತ್ಥಳಿ ಲೋಕಾರ್ಪಣೆ ಸಮಾರಂಭದ ಅಂಗವಾಗಿ ಮಂಡ್ಯದ ಸಂಜೀವಿನಿ ರಕ್ತನಿ ಸಂಚಾರಿ ಘಟಕದ ವತಿಯಿಂದ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.

ನೂರೈವತ್ತಕ್ಕೂ ಹೆಚ್ಚು ಅಭಿಮಾನಿಗಳು ರಕ್ತದಾನ ಮಾಡಿದರೆ, ಒಂದು ಸಾವಿರಕ್ಕೂ ಹೆಚ್ಚು ಯುವಕರು ನೇತ್ರದಾನಕ್ಕೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳುವ ಮೂಲಕ ಅಗಲಿದ ಪುನೀತ್ ರಾಜಕುಮಾರ್ ಅವರ ಮಹಾಚೇತನಕ್ಕೆ ಭಕ್ತಿ ನಮನ ಸಲ್ಲಿಸಿದರು. ಮಂಡ್ಯ ಜಿಲ್ಲಾಧ್ಯಕ್ಷ ಡಾ.ಯೋಗಣ್ಣ, ಶಾಸಕ ಎಚ್.ಟಿ.ಮಂಜು, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಸಮಾಜ ಸೇವಕರಾದ ವಿಜಯ್‍ರಾಮೇಗೌಡ, ಆಲಂಬಾಡಿಕಾವಲು ಮಲ್ಲಿಕಾರ್ಜುನ ಹಾಗೂ ಪುನೀತ್ ಯುವ ಸಾಮ್ರಾಜ್ಯದ ತಾಲೂಕು ಘಟಕದ ಅಧ್ಯಕ್ಷ ಮಹೇಶ್ ಮತ್ತಿತರರಿದ್ದರು.

ರಾಜ್ಯದಲ್ಲಿ ಮತ್ತೆ ಮಳೆ ಬರುವ ಸಾಧ್ಯತೆ ವಿರಳ

ಬೆಂಗಳೂರು,ಅ.3- ರಾಜ್ಯದಲ್ಲಿ ಇನ್ನೊಂದು ವಾರ ಕಾಲ ಒಣಹವೆ ಮುಂದುವರೆಯಲಿದ್ದು, ಮಳೆ ಬರುವ ಸಾಧ್ಯತೆಗಳು ಕಡಿಮೆ. ಕಳೆದ ಒಂದು ವಾರದಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದ ಮಳೆಯಾಗುವ ಆಶಾಭಾವನೆ ಮೂಡಿಸಿತ್ತು. ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಸದ್ಯಕ್ಕೆ ಮಳೆ ಬರುವಂತಹ ಯಾವುದೇ ರೀತಿಯ ಬದಲಾವಣೆಗಳು ಕಂಡುಬರುತ್ತಿಲ್ಲ. ಹೀಗಾಗಿ ಇನ್ನು ಒಂದು ವಾರ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ತೀರ ವಿರಳ ಎಂದು ಹವಾಮಾನ ತಜ್ಞರು ತಿಳಿಸಿದರು.

ವಾರದ ನಂತರ ಒಂದೆರಡು ದಿನ ಮಳೆಯಾಗುವ ಮುನ್ಸೂಚನೆಗಳಿವೆ. ಸದ್ಯಕ್ಕೆ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಬಲವಾದ ಮೇಲ್ಮೈ ಗಾಳಿ ಬೀಸಲಿದೆ. ಒಂದೆರಡು ಕಡೆ ಚದುರಿದಂತೆ ಸಾಧಾರಣ ಮಳೆಯಾಗಬಹುದು. ಆಗಸ್ಟ್, ಸೆಪ್ಟೆಂಬರ್‍ನಂತೆ ಅಕ್ಟೋಬರ್‍ನಲ್ಲೂ ಮಳೆ ಕೊರತೆ ಮುಂದುವರೆಯುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಅವರು ಹೇಳಿದ್ದಾರೆ.

ಭೀಕರ ಅಪಘಾತ : ತಾಯಿ-ಮಗು ಸಜೀವ ದಹನ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಸೆ.26ರಿಂದ ನಿನ್ನೆಯವರೆಗೆ ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಶೇ.65, ಉತ್ತರ ಒಳನಾಡಿನಲ್ಲಿ ಶೇ.42ರಷ್ಟು ಮಳೆ ಕೊರತೆಯಾಗಿದ್ದರೆ, ಮಲೆನಾಡಿನಲ್ಲಿ ವಾಡಿಕೆಗಿಂತ ಶೇ.10ರಷ್ಟು ಹಾಗೂ ಕರಾವಳಿಯಲ್ಲಿ ಶೇ.130ರಷ್ಟು ಹೆಚ್ಚು ಮಳೆಯಾಗಿದೆ. ರಾಜ್ಯದಲ್ಲಿ ಈ ಅವಧಿಯಲ್ಲಿ ವಾಡಿಕೆಗಿಂತ ಶೇ.17ರಷ್ಟು ಕಡಿಮೆ ಮಳೆಯಾದ ವರದಿಯಾಗಿದೆ. ಮಲೆನಾಡು ಭಾಗದಲ್ಲಿ ವಾಡಿಕೆ ಪ್ರಮಾಣದ ಮಳೆಯಾದ ಹಿನ್ನಲೆಯಲ್ಲಿ ಪ್ರಮುಖ ಜಲಾಶಯಗಳ ಒಳಹರಿವು ಸ್ವಲ್ಪ ಹೆಚ್ಚಳವಾಗಿತ್ತು.

ನಿನ್ನೆಯ ಮಾಹಿತಿ ಪ್ರಕಾರ ಜಲವಿದ್ಯುತ್ ಉತ್ಪಾದಿಸುವ ಲಿಂಗನಮಕ್ಕಿ, ವರಾಹಿ ಹಾಗೂ ಸೂಪಾ ಜಲಾಶಯಗಳಿಗೆ ಒಟ್ಟಾರೆ 22933 ಕ್ಯೂಸೆಕ್ಸ್‍ನಷ್ಟು ಒಳಹರಿವಿತ್ತು. ಕಾವೇರಿ ಕೊಳ್ಳದ ಹಾರಂಗಿ-3000, ಹೇಮಾವತಿ-8900, ಕೆಆರ್‍ಎಸ್- 5800 ಹಾಗೂ ಕಬಿನಿ ಜಲಾಶಯಕ್ಕೆ 8000 ಕ್ಯೂಸೆಕ್‍ಗೂ ಹೆಚ್ಚು ಒಳಹರಿವು ಇತ್ತು.

ತಮಿಳುನಾಡಿಗೆ ಕಾವೇರಿಕೊಳ್ಳದಿಂದ ನೀರು ಹರಿಸಿದ ಪರಿಣಾಮ ಈ ನಾಲ್ಕು ಜಲಾಶಯಗಳಲ್ಲಿ ಸಂಗ್ರಹವಾಗಿದ್ದ ನೀರಿನ ಪ್ರಮಾಣದಲ್ಲಿ ಗಣನೀಯವಾಗಿ ಇಳಿಕೆಯಾಗಿತ್ತು. ಒಟ್ಟಾರೆ ಶೇ.54ರಷ್ಟು ಮಾತ್ರ ನಾಲ್ಕು ಜಲಾಶಯಗಳಲ್ಲಿ ನೀರು ಸಂಗ್ರಹವಾಗಿದೆ.

ಹಾವು-ಮುಂಗುಸಿಗಳ ಒಗ್ಗೂಡುವಿಕೆಯೇ ಇಂಡಿಯಾ ಮೈತ್ರಿಕೂಟ ; ತೇಜಸ್ವಿ ಸೂರ್ಯ

ಈ ನಾಲ್ಕು ಜಲಾಶಯಗಳ ಒಟ್ಟು ಸಾಮಥ್ರ್ಯ 114.57 ಟಿಎಂಸಿ ಅಡಿ ಆಗಿದ್ದು, ಪ್ರಸ್ತುತ 62.38 ಟಿಎಂಸಿ ಅಡಿ ಮಾತ್ರ ಇದೆ. ಕಳೆದ ವರ್ಷ ಇದೇ ಅವಯಲ್ಲಿ 110.09 ಟಿಎಂಸಿ ಅಡಿ ನೀರಿತ್ತು. ರಾಜ್ಯದ ಪ್ರಮುಖ ಜಲಾಶಯಗಳ ಪೈಕಿ ವರಾಹಿಯನ್ನು ಹೊರತುಪಡಿಸಿದರೆ ಅತಿ ಕಡಿಮೆ ನೀರು ಸಂಗ್ರಹವಾಗಿರುವ ಜಲಾಶಯ ಕೆಆರ್‍ಎಸ್. ಈ ಜಲಾಶಯದಲ್ಲಿ ಕೇವಲ ಶೇ44ರಷ್ಟು ಮಾತ್ರ ನೀರು ಸಂಗ್ರಹವಾಗಿದೆ.

ಕಳೆದ ಎರಡು ದಿನಗಳಿಂದ ಹೆಚ್ಚಾಗಿದ್ದ ಒಳಹರಿವು ಮಳೆ ಕಡಿಮೆಯಾಗಿರುವುದರಿಂದ ಇಳಿಕೆಯಾಗಲಿದೆ. ಸದ್ಯಕ್ಕೆ ಉತ್ತಮ ಮಳೆಯಾಗುವ ಮುನ್ಸೂಚನೆಗಳು ಇಲ್ಲದಿರುವುದರಿಂದ ಜಲಾಶಯಗಳ ಒಳಹರಿವು ಹೆಚ್ಚಾಗುವ ಸಾಧ್ಯತೆಗಳು ಇಲ್ಲ ಎನ್ನಬಹುದಾಗಿದೆ.

ನಾಂದೇಡ್ : ಔಷಧಿ ಕೊರತೆಯಿಂದ ಮೃತಪಟ್ಟ ಮಕ್ಕಳ ಸಂಖ್ಯೆ 31ಕ್ಕೆ ಏರಿಕೆ

ಮುಂಬೈ,ಅ.3- ಮಹಾರಾಷ್ಟ್ರದ ನಾಂದೇಡ್ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಿ ಹಾಗೂ ಸಿಬ್ಬಂದಿ ಕೊರತೆಯಿಂದ ಮೃತಪಟ್ಟ ನವಜಾತ ಶಿಶುಗಳ ಸಂಖ್ಯೆ 31 ಕ್ಕೇರಿದೆ. ನಿನ್ನೆ ಒಂದೇ ದಿನ 12 ನವಜಾತ ಶಿಶುಗಳು ಸೇರಿದಂತೆ 24 ಮಂದಿ ಸಾವನ್ನಪ್ಪಿದ್ದರು. ಇದೀಗ ಸಾವನ್ನಪ್ಪಿದವರ ಸಂಖ್ಯೆ 31ಕ್ಕೆ ಏರಿಕೆಯಾಗಿದ್ದು, ಇದು ಇನ್ನಷ್ಟು ಹೆಚ್ಚಾಗಬಹುದು ಎಂದು ತಿಳಿದುಬಂದಿದೆ.

ಸಾವಿನ ಸಂಖ್ಯೆ ಕ್ಷಣಕ್ಷಣಕ್ಕೂ ಮುಂದುವರೆಯುತ್ತಲೇ ಇದೆ. ಕಳೆದ ರಾತ್ರಿಯಿಂದ ಈವರೆಗೂ 4 ನವಜಾತ ಶಿಶು ಸೇರಿದಂತೆ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ. ದುರದೃಷ್ಟವೆಂದರೆ ನಾಂದೇಡ್ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರೂ ಇಲ್ಲ, ಸಿಬ್ಬಂದಿಗಳೂ ಇಲ್ಲ, ರೋಗಿಗಳನ್ನು ನೋಡಿಕೊಳ್ಳುವವರಂತೂ ಮೊದಲೇ ಇಲ್ಲ. ಇದಕ್ಕೆ ಸರ್ಕಾರ ನೇರ ಹೊಣೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚೌವ್ಹಾಣ್ ಹೇಳಿದ್ದಾರೆ.

ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅಶೋಕ್ ಚೌವ್ಹಾಣ್, ನಾಂದೇಡ್ ಆಸ್ಪತ್ರೆಯಲ್ಲಿ ರೋಗಿಗಳ ಸ್ಥಿತಿ ನರಕಸದೃಶವಾಗಿದೆ. ಕಡೆ ಪಕ್ಷ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಘಟನೆಯ ಬಗ್ಗೆ ಮಾಹಿತಿಯನ್ನೂ ಪಡೆದುಕೊಂಡಿಲ್ಲ.ಆಸ್ಪತ್ರೆಯ ಡೀನ್ ಡಾ.ವಾಕೋಡೆ ಅವರು ರೋಗಿಗಳನ್ನು ಉಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇರುವ ಸಿಬ್ಬಂದಿಗಳು ಹಾಗೂ ರೋಗಿಗಳ ಸಂಖ್ಯೆಗೆ ಸಾಕಷ್ಟು ವ್ಯತ್ಯಾಸವಿದೆ. ಸರ್ಕಾರ ಕೂಡಲೇ ಈ ಬಗ್ಗೆ ಗಮನ ಹರಿಸಬೇಕೆಂದು ಮನವಿ ಮಾಡಿದ್ದಾರೆ.

ಹಾವು-ಮುಂಗುಸಿಗಳ ಒಗ್ಗೂಡುವಿಕೆಯೇ ಇಂಡಿಯಾ ಮೈತ್ರಿಕೂಟ ; ತೇಜಸ್ವಿ ಸೂರ್ಯ

ನಾವು ಘಟನೆ ಕುರಿತಂತೆ ಮೂವರ ನೇತೃತ್ವದಲ್ಲಿ ತನಿಖಾ ವರದಿಯನ್ನು ಸರ್ಕಾರಕ್ಕೆ ನೀಡಲಿದ್ದೇವೆ. ಇದನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಮುಖ್ಯಮಂತ್ರಿಗಳು ತಾಕೀತು ಮಾಡಿದ್ದಾರೆ.

ಘಟನೆ ಕುರಿತಂತೆ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಸಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕೂಡಲೇ ಸಂಪೂರ್ಣವಾದ ಮಾಹಿತಿಯನ್ನು ನೀಡಬೇಕು. ಆಸ್ಪತ್ರೆಗೆ ದಾಖಲಾಗಿರುವ ರೋಗಿಗಳು ಮತ್ತು ನವಜಾತ ಶಿಶುಗಳಿಗೆ ಗುಣಮಟ್ಟದ ಚಿಕಿತ್ಸೆಯನ್ನು ನೀಡಬೇಕು. ಉದಾಸೀನತೆ ತೋರಿದರೆ ಅಂತವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ.

ಇನ್ನು ಘಟನೆಯ ಬಗ್ಗೆ ಎನ್‍ಸಿಟಿ ಮುಖ್ಯಸ್ಥ ಶರದ್‍ಪವಾರ್ ಅವರು ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ನಿಮ್ಮ ಕುರ್ಚಿ ಉಳಿಸಿಕೊಳ್ಳುವ ಕದನದಲ್ಲಿ ಅಮಾಯಕರನ್ನು ಬಲಿ ಕೊಡಬೇಡಿ. ಮೊದಲು ರೋಗಿಗಳು ಮತ್ತು ನವಜಾತ ಶಿಶುಗಳನ್ನು ಉಳಿಸಲು ಮುಂದಾಗಿ ಎಂದು ಹೇಳಿದ್ದಾರೆ.

ಹುಬ್ಬಳ್ಳಿ – ಧಾರವಾಡದಲ್ಲಿ ಉಗ್ರರ ಕ್ಯಾಂಪ್..!

ಹುಬ್ಬಳ್ಳಿ,ಅ.3- ಅತ್ಯಂತ ದೊಡ್ಡ ಭಯೋತ್ಪಾದನಾ ನಿಗ್ರಹ ಕಾರ್ಯಾಚ ರಣೆಯೊಂದರಲ್ಲಿ ರಾಷ್ಟ್ರೀಯ ತನಿಖಾ ದಳದ (ಎನ್‍ಐಎ) ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದ ಮೂವರು ಶಂಕಿತ ಐಸಿಸ್ ಭಯೋತ್ಪಾದಕರನ್ನು ದೆಹಲಿ ವಿಶೇಷ ಘಟಕದ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಕರ್ನಾಟಕದ ಹುಬ್ಬಳ್ಳಿ-ಧಾರವಾಡ ಹಾಗೂ ಪಶ್ಚಿಮಘಟ್ಟದಲ್ಲಿ ಉಗ್ರರ ಕ್ಯಾಂಪ್ ಸ್ಥಾಪಿಸುವ ಉದ್ದೇಶ ಹೊಂದಿದ್ದರು ಎಂಬ ಸ್ಪೋಟಕ ವಿಚಾರ ಬೆಳಕಿಗೆ ಬಂದಿದೆ.

ಬಂಧಿತರನ್ನು ಶಹನವಾಜ್, ಮೊಹಮ್ಮದ್ ರಿಜ್ಜಾನ್ ಮತ್ತು ಮೊಹಮ್ಮದ್ ಅರ್ಷದ್ ವಾರ್ಸಿ ಎಂದು ಗುರುತಿಸಲಾಗಿದೆ. ಈ ಪೈಕಿ ಶಹನವಾಜ್‍ನನ್ನು 2 ದಿನದ ಹಿಂದೆಯೇ ಬಂಧಿಸಲಾಗಿತ್ತಾದರೂ ಅಧಿಕೃತವಾಗಿ ಬಂಧನವನ್ನು ಘೋಷಿಸಿರಲಿಲ್ಲ. ನಿನ್ನೆ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.

ಇದರ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್, ಸ್ಥಳೀಯರು ಇದರಲ್ಲಿ ಶಾಮೀಲಾದ ಮಾಹಿತಿ ಈವರೆಗೂ ಸಿಕ್ಕಿಲ್ಲ. ಬಂಧಿತರ ಬಗ್ಗೆ ದೆಹಲಿ ಪೊಲೀಸರ ಜತೆ ಸಂಪರ್ಕದಲ್ಲಿದ್ದೇವೆ. ನಮ್ಮ ವ್ಯಾಪ್ತಿಯಲ್ಲಿ ಅಂತಹ ಕೃತ್ಯಗಳು ನಡೆಯುತ್ತಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಇಂಡಿಯಾ ಮೈತ್ರಿಕೂಟದಿಂದ ಹೊರಬರುವುದೇ ಎಎಪಿ..?

ಇವರೆಲ್ಲ ಕರ್ನಾಟಕದ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಘಟ್ಟ ಪ್ರದೇಶದಲ್ಲಿ ತಮ್ಮ ನೆಲೆ ಸ್ಥಾಪಿಸಿ, ಬಳಿಕ ದೇಶದಲ್ಲಿ ಐಸಿಸ್ ಉಗ್ರರ ನೆಲೆ ವಿಸ್ತರಿಸಿ ಭಯೋತ್ಪಾದಕ ದಾಳಿ ನಡೆಸಲು ಹಾಗೂ ಅಶಾಂತಿ ಸೃಷ್ಟಿಸಲು ಸಂಚು ರೂಪಿಸಿದ್ದರು. ಈ ಸಂಬಂಧ ದೇಶದ ಪಶ್ಚಿಮ ಮತ್ತು ದಕ್ಷಿಣದ ಭಾಗಗಳನ್ನು ಪರಿಶೀಲನೆ ಮಾಡಿದ್ದರು ಎಂದು ದಿಲ್ಲಿ ಪೊಲೀಸ್ ವಿಶೇಷ ಸೆಲ್ ಅಧಿಕಾರಿ ಧಾಲಿವಾಲ್ ಹೇಳಿದ್ದಾರೆ.

ಈತನ ಸ್ನೇಹಿತರು ಪುಣೆ ಉಗ್ರ ಪ್ರಕರಣದಲ್ಲಿ ಕೆಲ ತಿಂಗಳ ಹಿಂದೆ ಬಂಯಾಗಿದ್ದರು. ಅವರು ಬೆಳಗಾವಿ ಸಮೀಪದ ಮಹಾರಾಷ್ಟ್ರದ ಅಂಬೋಲಿ ಅರಣ್ಯದಲ್ಲಿ ಉಗ್ರ ತರಬೇತಿ ಶಿಬಿರ ನಡೆಸಿದ್ದರು ಎಂದು ಬೆಳಕಿಗೆ ಬಂದಿದೆ. ವಿಶೇಷವೆಂದರೆ ಎಲ್ಲ ಶಂಕಿತ ಉಗ್ರರೂ ಎಂಜಿನಿಯರ್‍ಗಳಾಗಿದ್ದು, ಈ ಪೈಕಿ ವಾರ್ಸಿ ಎಂಬಾತ ಪಿಎಚ್‍ಡಿ ಕೂಡ ಮಾಡುತ್ತಿದ್ದ. ಇವರೆಲ್ಲ ಬಾಂಬ್ ತಯಾರಿಯಲ್ಲಿ ಪರಿಣತರಾಗಿದ್ದರು ಎಂದು ದೆಹಲಿ ಪೊಲೀಸ್ ವಿಶೇಷ ಘಟಕ ಮಾಹಿತಿ ನೀಡಿದೆ.ದೆಹಲಿ ಪೊಲೀಸ್ ವಿಶೇಷ ಸೆಲ್ ಹಲವಾರು ರಾಜ್ಯಗಳಲ್ಲಿನ ಭಯೋತ್ಪಾದಕ ಜಾಲಗಳನ್ನು ಭೇದಿಸಲು ಎನ್‍ಐಎಯೊಂದಿಗೆ ಕೆಲಸ ಮಾಡುವ ಹಲವಾರು ಏಜೆನ್ಸಿಗಳಲ್ಲಿ ಒಂದಾಗಿದೆ.

ಪುಣೆ ಐಸಿಸ್ ಕೇಸಿನಲ್ಲಿ ಬೇಕಾಗಿದ್ದ ಶಹನವಾಜ್:
ವೃತ್ತಿಯಲ್ಲಿ ಮೈನಿಂಗ್ ಇಂಜಿನಿಯರ್ ಆಗಿರುವ ಶಹನವಾಜ್ ಐಸಿಸ್ ಪುಣೆ ಮಾಡ್ಯೂಲ್ ಪ್ರಕರಣದಲ್ಲಿ ಬೇಕಾಗಿದ್ದ. ಮೂಲಗಳ ಪ್ರಕಾರ, ಶಹನವಾಜ್ ಮೂಲತಃ ದೆಹಲಿಯವನಾದರೂ ಪುಣೆಗೆ ತೆರಳಿದ್ದ. ಜುಲೈನಲ್ಲಿ ಪುಣೆಯಲ್ಲಿ ನಡೆದ ದಾಳಿಯ ವೇಳೆ ಆತನ ಇಬ್ಬರು ಸಹಚರರನ್ನು ಬಂಧಿಸಲಾಗಿತ್ತು. ಶಹನವಾಜ್ ಪರಾರಿಯಾಗಿ, ದೆಹಲಿಗೆ ಮರಳಿದ್ದ. ಅಂದಿನಿಂದ ಅಡಗುದಾಣದಲ್ಲಿ ಆತ ವಾಸಿಸುತ್ತಿದ್ದ. ಈತ ತನ್ನ ಹೆಂಡತಿ ಬಸಂತಿಯನ್ನು ಇಸ್ಲಾಂಗೆ ಮತಾಂತರಿಸಿದ್ದ ಎಂದು ಮೂಲಗಳು ಹೇಳಿವೆ.

ಹಾವು-ಮುಂಗುಸಿಗಳ ಒಗ್ಗೂಡುವಿಕೆಯೇ ಇಂಡಿಯಾ ಮೈತ್ರಿಕೂಟ ; ತೇಜಸ್ವಿ ಸೂರ್ಯ

ಈ ತಿಂಗಳ ಆರಂಭದಲ್ಲಿ ಶಹನವಾಜ್ ಮತ್ತು ಇತರ ಮೂವರು ಭಯೋತ್ಪಾದಕ ಶಂಕಿತರಾದ ರಿಜ್ಜಾನ್ ಅಬ್ದುಲ್ ಹಾಜಿ ಅಲಿ, ಅಬ್ದುಲ್ಲಾ ಫಯಾಜ್ ಶೇಖ್ ಅಲಿಯಾಸ್ ಡಯಾಪರ್ವಾಲಾ ಮತ್ತು ತಲ್ಹಾ ಲಿಯಾಕತ್ ಖಾನ್ ಬಗ್ಗೆ ಮಾಹಿತಿ ನೀಡಿದವರಿಗೆ ತಲಾ 3 ಲಕ್ಷ ನಗದು ಬಹುಮಾನ ನೀಡುವುದಾಗಿ ಎನ್‍ಐಎ ಘೋಷಿಸಿತ್ತು . ಈ ಪೈಕಿ ಡಯಪರ್ವಾಲಾ ಹಾಗೂ ತಲ್ಹಾ ಇನ್ನೂ ಸಿಕ್ಕಿಲ್ಲ. ಅವರಿಗಾಗಿ ಬಲೆ ಬೀಸಲಾಗಿದೆ.

ಶಹನವಾಜ್, ಅಬ್ದುಲ್ಲಾ ಮತ್ತು ರಿಜ್ಜಾನ್ ಅವರು ಐಸಿಸ್ ಸಂಬಂಧಿ ಟೆಲಿಗ್ರಾಮ್ ಅಪ್ಲಿಕೇಶನ್ ಮೂಲಕ ಬ್ರೇನ್‍ವಾಶ್ ಆಗಿ ಭಯೋತ್ಪಾದಕರಾಗಿದ್ದರು. ಮಹಾರಾಷ್ಟ್ರದ ಪುಣೆಯಲ್ಲಿರುವ ಐಸಿಸ್ ಮಾಡ್ಯೂಲ್‍ನೊಂದಿಗೆ ಇವರಿಬ್ಬರೂ ನಂಟು ಹೊಂದಿದ್ದರು. ಅವರು ದೇಶಾದ್ಯಂತ ಹಿಂಸಾಚಾರ ಮತ್ತು ಭಯೋತ್ಪಾದನೆಯನ್ನು ಪ್ರಚುರಪಡಿಸಲು ಸಂಚು ರೂಪಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಮೂಲಗಳ ಪ್ರಕಾರ, ಅಬ್ದುಲ್ಲಾ ಡಯಾಪರ್ವಾಲಾ ಪುಣೆಯಲ್ಲಿ ಡಯಾಪರ್ ಅಂಗಡಿಯನ್ನು ನಡೆಸುತ್ತಿದ್ದ. ಅದನ್ನು ಸ್ಪೋಟಕ ಸಾಧನಗಳನ್ನು ಜೋಡಿಸಲು ಬಳಸಲಾಗುತ್ತಿತ್ತು. ಬಂಧಿತರಿಂದ ಪ್ಲಾಸ್ಟಿಕ್ ಟ್ಯೂಬ್, ಕಬ್ಬಿಣದ ಪೈಪ್, ವಿವಿಧ ರೀತಿಯ ರಾಸಾಯನಿಕ, ಟೈಮಿಂಗ್ ಉಪಕರಣ ಮೊದಲಾದ ವಸ್ತುಗಳನ್ನು ವಶಪಡಿ ಸಿಕೊಳ್ಳಲಾಗಿದೆ. ಇವೆಲ್ಲವೂ ಸುಧಾರಿತ ಸೋಟಕ ತಯಾರಿಸಲು ಬಳಸುವ ವಸ್ತುಗಳಾಗಿರುವ ಕಾರಣ, ಇವರೆಲ್ಲಾ ದೊಡ್ಡ ದುಷ್ಕೃತ್ಯ ನಡೆಸಲು ಸಜ್ಜಾಗಿದ್ದರು ಎಂಬುದು ಖಚಿತಪಟ್ಟಿದೆ.

ಬಿಬಿಎಂಪಿ ಆಯುಕ್ತರ ವಿರುದ್ಧ ತನಿಖೆಗೆ ಸೂಚನೆ

ಬೆಂಗಳೂರು,ಅ.3- ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‍ಗಿರಿನಾಥ್ ಅವರ ವಿರುದ್ಧ ತನಿಖೆ ನಡೆಸಲು ಸರ್ಕಾರ ಸೂಚನೆ ನೀಡಿದೆ. ಮತದಾರರ ಖಾಸಗಿ ಮಾಹಿತಿ ಸಂಗ್ರಹಕ್ಕೆ ತುಷಾರ್‍ಗಿರಿನಾಥ್ ಅವರು ಅವಕಾಶ ನೀಡಿದ್ದರು ಎಂಬ ಗಂಭೀರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸರ್ಕಾರ ಸೂಕ್ತ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.

ಚಿಲುಮೆ ಸಂಸ್ಥೆಗೆ ಮತದಾರ ಖಾಸಗಿ ಮಾಹಿತಿ ಸಂಗ್ರಹಕ್ಕೆ ಆಯುಕ್ತರು ಅವಕಾಶ ನೀಡಿದ್ದಾರೆ ಅವರ ವಿರುದ್ಧ ಸೂಕ್ತ ತನಿಖೆ ನಡೆಸುವಂತೆ ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್‍ಬಾಬು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದರು.

ರಮೇಶ್‍ಬಾಬು ಅವರ ದೂರನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿಗಳು ಸೂಕ್ತ ತನಿಖೆ ನಡೆಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದರು.

ಆಂಧ್ರ ಸಿಎಂ ಒಬ್ಬ ಹುಚ್ಚ, ಅವನಿಂದ ಯಾರಿಗೂ ಪ್ರಯೋಜವಿಲ್ಲ : ನಾರಾ ಲೋಕೇಶ್

ಸಿಎಂ ಸೂಚನೆ ಮೇರೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಚುನಾವಣಾ ಆಯೋಗಕ್ಕೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಭೀಕರ ಅಪಘಾತ : ತಾಯಿ-ಮಗು ಸಜೀವ ದಹನ

ಬೆಂಗಳೂರು,ಸೆ.3-ವೇಗವಾಗಿ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದು, ಪಲ್ಟಿಯಾಗಿ ಬೆಂಕಿ ಹೊತ್ತಿ ಉರಿದ ಪರಿಣಾಮ ತಾಯಿ ಹಾಗೂ ಎರಡು ವರ್ಷದ ಮಗು ಸಜೀವ ದಹನವಾಗಿರುವ ಘಟನೆ ತಲಘಟ್ಟಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ಸಂಭವಿಸಿದೆ.

ರಾಮಮೂರ್ತಿ ನಗರ ಸಮೀಪದ ವಿಜಿನಾಪುರದ ನಿವಾಸಿ ಸಿಂಧು ಹಾಗೂ ಕುಶಾವಿ(2) ಮೃತಪಟ್ಟ ದುರ್ದೈವಿಗಳು. ಕಾರು ಚಾಲನೆ ಮಾಡುತ್ತಿದ್ದ ಮಹೇಂದ್ರ ಹಾಗೂ ಮತ್ತೊಂದು ಮಗು ಪ್ರಣವಿ (6) ಗಂಭೀರವಾಗಿ ಗಾಯಗೊಂಡಿದ್ದು, ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.ಮೂಲತಃ ತಮಿಳುನಾಡಿನ ಸೇಲಂನ ಅಲಮಾಡು ಕುಡು ಗ್ರಾಮದವರಾದ ಮಹೇಂದ್ರ ಅವರು ಬೆಂಗಳೂರಿನ ಖಾಸಗಿ ಕಂಪನಿಯ ಉದ್ಯೋಗಿ.

ಇಬ್ಬರು ಮಕ್ಕಳು ಹಾಗೂ ಪತ್ನಿ ಸಿಂಧು ಅವರೊಂದಿಗೆ ಮಹೇಂದ್ರ ಅವರು ಟಾಟಾ ನೆಕ್ಸಾನ್ ಕಾರಿನಲ್ಲಿ ಇಂದು ಮುಂಜಾನೆ 2.50ರ ಸುಮಾರಿನಲ್ಲಿ ಮೈಸೂರು ರಸ್ತೆ ಕಡೆಯಿಂದ ನೈಸ್‍ರಸ್ತೆಯಲ್ಲಿ ಕನಕಪುರ ಕಡೆಗೆ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಮೊದಲು ಲಾರಿಗೆ ಡಿಕ್ಕಿ ಹೊಡೆದು ಬಳಿಕ ಪಕ್ಕದ ಗೋಡೆಗೆ ಅಪ್ಪಳಿಸಿದ್ದರಿಂದ ಕಾರು ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿದೆ.

ಹಾವು-ಮುಂಗುಸಿಗಳ ಒಗ್ಗೂಡುವಿಕೆಯೇ ಇಂಡಿಯಾ ಮೈತ್ರಿಕೂಟ ; ತೇಜಸ್ವಿ ಸೂರ್ಯ

ಕಾರಿನೊಳಗೆ ಸಿಲುಕಿಕೊಂಡಿದ್ದ ಪತ್ನಿ ಸಿಂಧು ಹಾಗೂ ಕುಶಾವಿ ಸಜೀವವಾಗಿ ದಹನವಾಗಿದ್ದಾರೆ. ಮಹೇಂದ್ರ ಹಾಗೂ ಪ್ರಣವಿ ಗಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ತರ್ತು ಕರೆ ಮಾಡಿ ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಅಗ್ನಿ ಶಾಮಕ ಸಿಬ್ಬಂದಿ ಕೂಡ ಸ್ಥಳಕ್ಕೆ ದಾವಿಸಿ ಬೆಂಕಿ ನಂದಿಸಿದ್ದಾರೆ. ಘಟನೆ ಸ್ಥಳಕ್ಕೆ ತಲಘಟ್ಟಪುರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತಾಯಿ-ಮಗುವಿನ ಮೃತ ದೇಹಗಳನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಹಿಂದಿನಿಂದ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಮುಂದೆ ಸಂಚರಿಸುತ್ತಿದ್ದ ಲಾರಿ ಸಹ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ. ಈ ಬಗ್ಗೆ ತಲಘಟ್ಟಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಕಬಡ್ಡಿಯಲ್ಲಿ ಬಾಂಗ್ಲಾ ವಿರುದ್ಧ ಭಾರತ ಗೆಲುವು

ಹ್ಯಾಂಗ್‍ಝೌ, ಅ 3 (ಪಿಟಿಐ)- ಏಳು ಬಾರಿಯ ದಾಖಲೆಯ ಚಾಂಪಿಯನ್ ಆಗಿರುವ ಭಾರತೀಯ ಪುರುಷರ ಕಬಡ್ಡಿ ತಂಡವು ಇಲ್ಲಿ ನಡೆದ ಏಷ್ಯನ್ ಗೇಮ್ಸ್‍ನ ಗುಂಪಿನ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ 55-18 ಅಂಕಗಳ ಭರ್ಜರಿ ಜಯದೊಂದಿಗೆ ಅಭಿಯಾನ ಆರಂಭಿಸಿದೆ.

ಏಷ್ಯನ್ ಗೇಮ್ಸ ಚಿನ್ನದ ಪದಕವನ್ನು ಮರಳಿ ಪಡೆಯುವ ಪ್ರಯತ್ನದಲ್ಲಿ ಕಳೆದ 2018 ರ ಆವೃತ್ತಿಯಲ್ಲಿ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದ ಭಾರತೀಯರು ಈ ಬಾರಿ ಚಿನ್ನ ಗೆಲ್ಲುವ ಹುಮ್ಮಸ್ಸಿನಲ್ಲಿದ್ದಂತೆ ಕಂಡು ಬರುತ್ತಿದೆ.

ನವೀನ್ ಕುಮಾರ್ ಗೋಯತ್ ಮತ್ತು ಅರ್ಜುನ್ ದೇಶ್ವಾಲ್ ಅವರು 12 ನೇ ನಿಮಿಷದಲ್ಲಿ ಮೊದಲ ಆಲ-ಔಟ್ ಮಾಡಲು ಶೈಲಿಯಲ್ಲಿ ತಮ್ಮ ದಾಳಿಗಳನ್ನು ಮುನ್ನಡೆಸಿದರು. ಬಾಂಗ್ಲಾದೇಶವು ಮೊದಲಾರ್ಧದಲ್ಲಿ ಪವನ್ ಸೆಹ್ರಾವತ್ ಮತ್ತು ನಂತರ ಗೋಯತ್ ಮೇಲೆ ಎರಡು ಸೂಪರ್‍ಟ್ಯಾಕಲ್‍ಗಳನ್ನು ಉಂಟುಮಾಡುವಲ್ಲಿ ಯಶಸ್ವಿಯಾಯಿತು ಆದರೆ ಭಾರತವು 20 ನಿಮಿಷಗಳೊಳಗೆ 12 ಪಾಯಿಂಟ್‍ಗಳ ಮುನ್ನಡೆ ಸಾಧಿಸಿದ್ದರಿಂದ ಅದು ಸಾಕಾಗಲಿಲ್ಲ.

ಆಂಧ್ರ ಸಿಎಂ ಒಬ್ಬ ಹುಚ್ಚ, ಅವನಿಂದ ಯಾರಿಗೂ ಪ್ರಯೋಜವಿಲ್ಲ : ನಾರಾ ಲೋಕೇಶ್

ದ್ವಿತೀಯಾರ್ಧದಲ್ಲಿ ಭಾರತೀಯರು ತಮ್ಮ ಮುನ್ನಡೆಯನ್ನು ವಿಸ್ತರಿಸಿ ಸಮಸ್ಯೆಯನ್ನು ಮುಚ್ಚಿದ್ದರಿಂದ ಬಾಂಗ್ಲಾದೇಶವು ತಮ್ಮ ದಾಳಿಯಲ್ಲಿ ಎಡವಿತು. ಕಳೆದ ಆವೃತ್ತಿಯ ಬೆಳ್ಳಿ ಪದಕ ವಿಜೇತೆ ಮಹಿಳಾ ಕಬಡ್ಡಿ ತಂಡವು ಸೋಮವಾರ ಚೈನೀಸ್ ತೈಪೆ ಎದುರು 34-34 ರಿಂದ ಅನಿರೀಕ್ಷಿತ ಡ್ರಾ ಸಾಧಿಸಿದ ನಂತರ ನಿರಾಶಾದಾಯಕ ಆರಂಭವನ್ನು ಅನುಭವಿಸಿತು.

ಹಾವು-ಮುಂಗುಸಿಗಳ ಒಗ್ಗೂಡುವಿಕೆಯೇ ಇಂಡಿಯಾ ಮೈತ್ರಿಕೂಟ ; ತೇಜಸ್ವಿ ಸೂರ್ಯ

ನರ್ಮದಾಪುರಂ,ಅ.3-ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ ಒಕ್ಕೂಟ ಹಾವು ಮುಂಗುಸಿಗಳು ಒಗ್ಗೂಡುವಿಕೆಯಂತಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವ್ಯಂಗ್ಯವಾಡಿದ್ದಾರೆ. ಇಂಡಿಯಾ ಮೈತ್ರಿ ರಚನೆಗೂ ಮುನ್ನ ಗುಟ್ಟಾಗಿ ಹಿಂದೂ ವಿರೋಧಿ ರಾಜಕಾರಣ ಮಾಡುತ್ತಿದ್ದ ಇವರು, ಜಾತ್ಯತೀತತೆಯ ಬುರ್ಖಾ ಹಾಕಿಕೊಂಡು ಹಿಂದೂ ವಿರೋಧಿ ಮತ್ತು ಭಾರತ ವಿರೋಧಿ ರಾಜಕಾರಣ ಮಾಡುತ್ತಿದ್ದರು.

ಆದರೆ ಇಂದು ಅವರು ಸನಾತನ ಸಂಸ್ಕøತಿ ಮತ್ತು ಸನಾತನ ಧರ್ಮದ ವಿರುದ್ಧ ಬಹಿರಂಗವಾಗಿ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರು ನರ್ಮದಾಪುರಂನಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ತಂದೆಯಿಂದಲೇ ಅತ್ಯಾಚಾರ

ಸನಾತನ ಧರ್ಮವನ್ನು ನಿರ್ಮೂಲನೆ ಮಾಡಲು ಇಂಡಿಯಾ ಒಕ್ಕೂಟವನ್ನು ರಚಿಸಲಾಗಿದೆ ಎಂದು ಡಿಎಂಕೆ ಹೇಳುತ್ತದೆ ಕಳೆದ ಸೆಪ್ಟೆಂಬರ್ 2 ರಂದು, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರರೂ ಆಗಿರುವ ಉದಯನಿಧಿ ಅವರು ಸನಾತನಾ ನಿರ್ಮೂಲನಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡುತ್ತಾ, ಸನಾತನ ಧರ್ಮವನ್ನು ಕಿತ್ತುಹಾಕುವುದು ಮಾನವೀಯತೆ ಮತ್ತು ಮಾನವ ಸಮಾನತೆಯನ್ನು ಎತ್ತಿಹಿಡಿಯುತ್ತದೆ ಎಂದು ಹೇಳಿದ್ದರು.

ಇಂಡಿಯಾ ಮೈತ್ರಿಕೂಟದಿಂದ ಹೊರಬರುವುದೇ ಎಎಪಿ..?

ಅವರು ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ ಅಥವಾ ಕೊರೊನಾವೈರಸ್‍ನಂತಹ ಕಾಯಿಲೆಗಳಿಗೆ ಹೋಲಿಸಿದರು ಮತ್ತು ನಾವು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕರೋನಾವನ್ನು ವಿರೋಧಿಸಲು ಸಾಧ್ಯವಿಲ್ಲ; ನಾವು ಅವುಗಳನ್ನು ನಿರ್ಮೂಲನೆ ಮಾಡಬೇಕು. ಅದು ಹೇಗೆ. ನಾವು ಸನಾತನವನ್ನು ನಿರ್ಮೂಲನೆ ಮಾಡುತ್ತೇವೆ, ಸನಾತನವನ್ನು ವಿರೋಧಿಸುವ ಬದಲು ಅದನ್ನು ನಿರ್ಮೂಲನೆ ಮಾಡಬೇಕು ಎಂದಿದ್ದರು. ಇಂತಹ ಮಿತ್ರರನ್ನು ಹೊಂದಿರುವ ಇಂಡಿಯಾ ಮೈತ್ರಿಕೂಟ ಹಾವು-ಮುಂಗುಸಿಗಳಿಂದ ಕೂಡಿದ ಒಕ್ಕೂಟವಾಗಿದೆ ಎಂದು ಅವರು ಲೇವಡಿ ಮಾಡಿದ್ದಾರೆ.

ನಿಜ್ಜರ್ ಹತ್ಯೆ ತನಿಖೆಗೆ ಸಹಕರಿಸುವಂತೆ ಭಾರತಕ್ಕೆ ಅಮೆರಿಕ ಮನವಿ

ವಾಷಿಂಗ್ಟನ್,ಅ 3 (ಪಿಟಿಐ)- ಖಲಿಸ್ತಾನಿ ಪ್ರತ್ಯೇಕತಾವಾದಿಯ ಸಾವಿನ ತನಿಖೆಯಲ್ಲಿ ಕೆನಡಾದೊಂದಿಗೆ ಸಹಕರಿಸುವಂತೆ ಬಿಡೆನ್ ಆಡಳಿತವು ಭಾರತ ಸರ್ಕಾರಕ್ಕೆ ಹಲವಾರು ಬಾರಿ ಮನವಿ ಮಾಡಿಕೊಂಡಿದೆ ಎಂದು ಯುಎಸ್ ಸ್ಟೇಟ್ ಡಿಪಾಟ್ರ್ಮೆಂಟ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜೂನ್‍ನಲ್ಲಿ ಬ್ರಿಟಿಷ್ ಕೊಲಂಬಿಯಾದಲ್ಲಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಏಜೆಂಟರ ಸಂಭಾವ್ಯ ಒಳಗೊಳ್ಳುವಿಕೆಯ ಬಗ್ಗೆ ಕೆನಡಾದ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಆರೋಪಿಸಿದ ನಂತರ ಭಾರತ ಮತ್ತು ಕೆನಡಾ ನಡುವಿನ ದ್ವಿಪಕ್ಷೀಯ ಸಂಬಂಧದ ನಡುವೆ ಬಿರುಕು ಮೂಡಿದೆ.

ಭಾರತವು ಈ ಅಸಂಬದ್ಧ ಮತ್ತು ಪ್ರೇರಣೆ ಎಂದು ಆರೋಪಗಳನ್ನು ತಿರಸ್ಕರಿಸಿದೆ ಮತ್ತು ಪ್ರಕರಣಕ್ಕೆ ಸಂಬಂ„ಸಿದಂತೆ ಭಾರತೀಯ ಅ„ಕಾರಿಯನ್ನು ಒಟ್ಟಾವಾ ಉಚ್ಚಾಟನೆಗೆ ಕ್ರಮದಲ್ಲಿ ಹಿರಿಯ ಕೆನಡಾದ ರಾಜತಾಂತ್ರಿಕರನ್ನು ಹೊರಹಾಕಿದೆ.

ಆಂಧ್ರ ಸಿಎಂ ಒಬ್ಬ ಹುಚ್ಚ, ಅವನಿಂದ ಯಾರಿಗೂ ಪ್ರಯೋಜವಿಲ್ಲ : ನಾರಾ ಲೋಕೇಶ್

ಕಳೆದ ವಾರ ಇಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಕೆನಡಾದಲ್ಲಿ ನಿಜ್ಜರ್ ಹತ್ಯೆಯ ವಿಷಯವನ್ನು ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕನ್ ಪ್ರಸ್ತಾಪಿಸಿದರು.

ಅವರು ಸ್ಪಷ್ಟಪಡಿಸಿದಂತೆ, ನಾನು ಈಗ ಪುನರುಚ್ಚರಿಸುತ್ತೇನೆ, ಈ ಪ್ರಶ್ನೆಗೆ ನಾವು ನಮ್ಮ ಕೆನಡಾದ ಸಹೋದ್ಯೋಗಿಗಳೊಂದಿಗೆ ನಿಕಟ ಸಮನ್ವಯದಲ್ಲಿದ್ದೇವೆ ಎಂದು ಪಾಕಿಸ್ತಾನಿಯೊಬ್ಬರು ಎತ್ತಿರುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಿದೇಶಾಂಗ ಇಲಾಖೆಯ ವಕ್ತಾರ ಮ್ಯಾಥ್ಯೂ ಮಿಲ್ಲರ್ ಸೋಮವಾರ ತಮ್ಮ ದೈನಂದಿನ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ಇಂಡಿಯಾ ಮೈತ್ರಿಕೂಟದಿಂದ ಹೊರಬರುವುದೇ ಎಎಪಿ..?

ಭೋಪಾಲ್, ಅ 3 (ಪಿಟಿಐ)- ಬಿಜೆಪಿ ಮಣಿಸುವ ಉದ್ದೇಶದಿಂದ ಪ್ರತಿಪಕ್ಷಗಳು ರಚನೆ ಮಾಡಿಕೊಂಡಿರುವ ಇಂಡಿಯಾ ಮೈತ್ರಿಕೂಟದಲ್ಲಿ ಆಮ್ ಆದ್ಮಿ ಪಕ್ಷ ಮುಂದುವರೆಯುವ ಸಾಧ್ಯತೆಗಳ ಬಗ್ಗೆ ಅನುಮಾನ ಮೂಡತೊಡಗಿದೆ. ಆಪ್ ಪಕ್ಷದ ಇತ್ತಿಚಿನ ಬೆಳವಣಿಗೆಗಳನ್ನು ಗಮನಿಸಿದರೆ ಅವರು ಇಂಡಿಯಾ ಮೈತ್ರಿಕೂಟದಲ್ಲಿ ಮುಂದುವರೆಯುವ ಸಾಧ್ಯತೆಗಳು ಕ್ಷೀಣಿಸತೊಡಗಿದೆ. ಯಾಕೆಂದರೆ, ಮಧ್ಯಪ್ರದೇಶದಲ್ಲಿ ವರ್ಷಾಂತ್ಯದ ವಿಧಾನಸಭಾ ಚುನಾವಣೆಗೆ ವಿರೋಧ ಪಕ್ಷವಾದ ಇಂಡಿಯಾ ಮೈತ್ರಿಕೂಟ ಬಣದ ಪ್ರಮುಖ ಘಟಕವಾದ ಆಮ್ ಆದ್ಮಿ ಪಕ್ಷ (ಎಎಪಿ) ತನ್ನ 29 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷದ ಈ ಕ್ರಮವು ಎಂಪಿ ಚುನಾವಣೆಯಲ್ಲಿ ಇಂಡಿಯಾ ಮೈತ್ರಿ ಕೆಲಸ ಮಾಡುವ ಸಾಧ್ಯತೆಯನ್ನು ಮತ್ತಷ್ಟು ಕಡಿಮೆ ಮಾಡಿದೆ. ಇದುವರೆಗೆ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಆಪ್ 39 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಘೋಷಿಸಿದೆ. ಕಳೆದ ತಿಂಗಳ ಆರಂಭದಲ್ಲಿ 10 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತ್ತು.

ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಮಾಜಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಶಾಸಕಿ ಮಮತಾ ಮೀನಾ ಸೇರಿದ್ದಾರೆ, ಅವರು ಚಚೌರಾದಿಂದ ಕೇಸರಿ ಪಕ್ಷದಿಂದ ಟಿಕೆಟ್ ನಿರಾಕರಿಸಿದ ನಂತರ ಕಳೆದ ತಿಂಗಳು ಎಎಪಿಗೆ ಸೇರಿದ್ದರು. ಎಎಪಿ ಇದೇ ಕ್ಷೇತ್ರದಿಂದ ಅವರನ್ನು ಕಣಕ್ಕಿಳಿಸಿದೆ.

BIG NEWS : ಹಳಿ ತಪ್ಪಿದ ರೀರೈಲ್, ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಸೋಮವಾರ ರಾತ್ರಿ ಎಎಪಿಯ ಎಕ್ಸ್ ಖಾತೆಯ ಮೂಲಕ ಬಿಡುಗಡೆಯಾದ ಪಟ್ಟಿಯಲ್ಲಿ ಮೂರು ಪರಿಶಿಷ್ಟ ಪಂಗಡ (ಎಸ್‍ಟಿ) ಮತ್ತು ನಾಲ್ಕು ಪರಿಶಿಷ್ಟ ಜಾತಿ (ಎಸ್‍ಸಿ) ಮೀಸಲು ಸ್ಥಾನಗಳ ಅಭ್ಯರ್ಥಿಗಳನ್ನು ಸಹ ಘೋಷಿಸಲಾಗಿದೆ. ಎಎಪಿ ಭೋಪಾಲ್ ನಗರದಿಂದ ಮೊಹಮ್ಮದ್ ಸೌದ್ (ಭೋಪಾಲ್ ಉತ್ತರ) ಮತ್ತು ರೈಸಾ ಬೇಗಂ ಮಲಿಕ್ (ನರೇಲಾ) ಸೇರಿದಂತೆ ಇಬ್ಬರು ಅಭ್ಯರ್ಥಿಗಳನ್ನು ಘೋಷಿಸಿದೆ.

ಇಂದೋರ್ ಜಿಲ್ಲೆಯಿಂದ ಮೂರು ಅಭ್ಯರ್ಥಿಗಳನ್ನು ಘೋಷಿಸಲಾಗಿದೆ – ಸುನಿಲ್ ಚೌಧರಿ (ಮೊವ), ಅನುರಾಗ್ ಯಾದವ್ (ಇಂದೋರ್-1) ಮತ್ತು ಪಿಯೂಷ್ ಜೋಶಿ (ಇಂಧೋರ್-4). ಆಡಳಿತಾರೂಢ ಬಿಜೆಪಿ ಮೂರು ಪ್ರತ್ಯೇಕ ಪಟ್ಟಿಗಳಲ್ಲಿ ಇದುವರೆಗೆ 79 ಅಭ್ಯರ್ಥಿಗಳನ್ನು ಘೋಷಿಸಿದೆ, ಆದರೆ ಕಾಂಗ್ರೆಸ್ ಇದುವರೆಗೆ ಯಾವುದೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ.

ಎಎಪಿ ಮತ್ತು ಕಾಂಗ್ರೆಸ್ , ವಿರೋಧ ಪಕ್ಷದ ಇಂಡಿಯಾ ಒಕ್ಕೂಟದ ಎರಡು ಪ್ರಮುಖ ಸದಸ್ಯರಾಗಿದ್ದು, ಎಂಪಿ ಚುನಾವಣೆಯಲ್ಲಿ ಮೈತ್ರಿ ಪಾಲುದಾರರಾಗಿ ಚುನಾವಣೆಯಲ್ಲಿ ಹೋರಾಡಬೇಕೆ ಅಥವಾ ಬೇಡವೇ ಎಂದು ಇನ್ನೂ ನಿರ್ಧರಿಸಿಲ್ಲ.

ಇರುವುದೊಂದೇ ಧರ್ಮ, ಅದುವೇ ಸನಾತನ ಧರ್ಮ : ಯೋಗಿ ಆದಿತ್ಯನಾಥ್

ಕಳೆದ ತಿಂಗಳು ದೆಹಲಿಯಲ್ಲಿ ನಡೆದ ಸಭೆಯ ನಂತರ, ಅಕ್ಟೋಬರ್ ಮೊದಲ ವಾರದಲ್ಲಿ ಇಂಡಿಯಾ ಒಕ್ಕೂಟ ಭೋಪಾಲ್‍ನಲ್ಲಿ ಜಂಟಿ ರ್ಯಾಲಿಯನ್ನು ಘೋಷಿಸಿತ್ತು ಆದರೆ ಅದನ್ನು ರದ್ದುಗೊಳಿಸಲಾಗಿದೆ ಎಂದು ಸಂಸದ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ನಂತರ ಹೇಳಿದರು. ಕಳೆದ 2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ 230 ಸದಸ್ಯ ಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್ 114 ಸ್ಥಾನಗಳನ್ನು ಗೆದ್ದು ಸಮ್ಮಿಶ್ರ ಸರ್ಕಾರ ರಚಿಸಿತ್ತು.