Home Blog Page 1928

ಪ್ರಪಾತಕ್ಕೆ ಬಸ್ ಬಿದ್ದು 8 ಮಂದಿ ಸಾವು

ಚೆನ್ನೈ, ಅ.1- ಪ್ರವಾಸಿ ಬಸ್ಸೊಂದು ಪ್ರಪಾತಕ್ಕೆ ಬಿದ್ದು 8 ಮಂದಿ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ನೀಲಗಿರೀಸ್‍ನಲ್ಲಿ ನಡೆದಿದೆ. ಊಟಿಯಿಂದ ವಾಪಸ್ ಆಗುತ್ತಿದ್ದಾಗ ಸುಮಾರು 55 ಜನ ಪ್ರವಾಸಿಗರಿದ್ದ ಬಸ್ ನೀಲಗಿರೀಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಆಳದ ಪ್ರಪಾತಕ್ಕೆ ಉರುಳಿಬಿದ್ದಿದೆ. ಈ ಸಂದರ್ಭದಲ್ಲಿ ಸ್ಥಳದಲ್ಲಿ ಆರು ಮಂದಿ ಸಾವನ್ನಪ್ಪಿದರೆ, ಇಬ್ಬರು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ.

ಸ್ಥಳೀಯರು, ಪೊಲೀಸ್ ಸಿಬ್ಬಂದಿ, ಅಗ್ನಿಶಾಮಕ ಪಡೆ ಮತ್ತು ಪರಿಹಾರ ತಂಡಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ನಿನ್ನೆ ಸಂಜೆ 5.15 ರ ಸುಮಾರಿನಲ್ಲಿ ಊಟಿಯಿಂದ ತೆಂಕೇಶಿ ಕಡೆಗೆ ಬಸ್ ಬರುತ್ತಿತ್ತು. ಈ ಸಂದರ್ಭದಲ್ಲಿ ಕುನೂರಿನಿಂದ ಮೆಟ್ಟುಪಾಳ್ಯಂ ರಸ್ತೆಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿಬಿದ್ದಿದೆ. ಬಸ್ ಉರುಳಿಬಿದ್ದ ರಭಸಕ್ಕೆ ಹಲವಾರು ಪಲ್ಟಿಯಾಗಿ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಬಸ್ಸಿನಲ್ಲಿ ಸಿಕ್ಕಿಹಾಕಿಕೊಂಡಿದ್ದ ಪ್ರಯಾಣಿಕರನ್ನು ಹೊರತೆಗೆಯಲು ಬಸ್ಸನ್ನು ರೋಪ್ ಸಹಾಯದಿಂದ ಮೇಲೆತ್ತಬೇಕಾಯಿತು. ಗಾಯಾಳುಗಳನ್ನು ಕೊಯಮತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ನಾಲೆಗೆ ಬಿದ್ದ ಪುತ್ರಿಯನ್ನು ರಕ್ಷಿಸಲು ಹೋದ ತಂದೆ, ತಾಯಿ ಸೇರಿ ಮೂವರೂ ನೀರುಪಾಲು

ಘಟನೆ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ, ಗಂಭೀರವಾಗಿ ಗಾಯಗೊಂಡವರಿಗೆ 1 ಲಕ್ಷ ಹಾಗೂ ಸಣ್ಣಪುಟ್ಟ ಗಾಯಗಳಾಗಿರುವವರಿಗೆ 50 ಸಾವಿರ ರೂ. ಪರಿಹಾರ ಪ್ರಕಟಿಸಿದ್ದಾರೆ.

ಅರಣ್ಯ ಇಲಾಖೆಯ ಕಾರ್ಯಕ್ಕೆ ರಾಜ್ಯಪಾಲರ ಮೆಚ್ಚುಗೆ

ಬೆಂಗಳೂರು, ಅ.1- ರಾಜ್ಯದ ಹಸಿರು ಹೊದಿಕೆ ಹೆಚ್ಚಿಸಲು ಅರಣ್ಯ ಇಲಾಖೆ ಮಾಡುತ್ತಿರುವ ಕಾರ್ಯಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಜಭವನದಲ್ಲಿಂದು ಅರಣ್ಯ ಇಲಾಖೆ 69ನೇ ವನ್ಯಜೀವಿ ಸಪ್ತಾಹದ ಬಗ್ಗೆ ಜನಜಾಗೃತಿ ಮೂಡಿಸಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಂಟೇಜ್ ವಾಹನ ಯಾನಕ್ಕೆ ಹಸಿರು ನಿಶಾನೆ ನೀಡುವ ಮೂಲಕ ಮಾತನಾಡಿದ ಅವರು, ತಾವು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಶ್ರೀ ವೀರೇಂದ್ರ ಹೆಗ್ಗಡೆಯವರ ಸಂಗ್ರಾಹಾಲಯದಲ್ಲಿ ಹಳೆಯ ವಾಹನಗಳನ್ನು ನೋಡಿದ್ದೆ.

ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ವನ್ಯಜೀವಿ ಸಂರಕ್ಷಣೆಯ ಅರಿವು ಮೂಡಿಸಲು ಹಳೆಯ ವಾಹನ ಯಾನ ಆಯೋಜಿಸಿರುವುದಕ್ಕೆ ಸಂತಸ ತಂದಿದೆ ಎಂದರು.ಪ್ರಕೃತಿ ಪರಿಸರ ಉಳಿಸುವ ಅಗತ್ಯವನ್ನು ರಾಜ್ಯಪಾಲರು ಪ್ರತಿಪಾದಿಸಿದರು. ಅರಣ್ಯ ಸಚಿವ ಈಶ್ವರ ಖಂಡ್ರೆ ಮಾತನಾಡಿ, ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯಲ್ಲಿ ರಾಜ್ಯ ಮಾದರಿಯಾಗಿದೆ. 6395 ಆನೆಗಳು ರಾಜ್ಯದಲ್ಲಿದ್ದು, ದೇಶದಲ್ಲೇ ನಾವು ಗಜ ಗಣತಿಯಲ್ಲಿ ಮೊದಲಿಗರಾಗಿದ್ದೇವೆ ಎಂದರು.

ಸಿಖ್ ಸಮುದಾಯ ಸಮಸ್ಯೆ ನಿವಾರಣೆಗೆ ಪ್ರಧಾನಿ ಮೋದಿ ಆದ್ಯತೆ : ಜೈಶಂಕರ್

ಅದೇ ರೀತಿ ಹುಲಿ ಗಣತಿಯಲ್ಲೂ ರಾಜ್ಯ ನಂ.2 ಸ್ಥಾನ ಪಡೆದಿದೆ. ಇಲಾಖೆಯ ಹಸಿರು ಹೊದಿಕೆ ವ್ಯಾಪ್ತಿಯನ್ನು ಹೆಚ್ಚಿಸಲು ಮತ್ತು ನಗರ ಪ್ರದೇಶಗಳಲ್ಲಿ ಕೂಡ ಜನರು ನೆಮ್ಮದಿಯಿಂದ ಉಸಿರಾಡಲು ಸಾಮಾಜಿಕ ಅರಣ್ಯ ಪ್ರದೇಶ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗಿದೆ.

ಕಳೆದ ಜುಲೈ 1ರಿಂದ ಇಲ್ಲಿಯವರೆಗೆ 4 ಕೋಟಿ 75 ಲಕ್ಷ ಸಸಿಗಳನ್ನು ನೆಡಲಾಗಿದೆ. ಮುಂದಿನ ಒಂದು ವಾರದಲ್ಲಿ ಉಳಿದ 25 ಲಕ್ಷ ಸಸಿ ನೆಟ್ಟು ಈ ವರ್ಷ 5 ಕೋಟಿ ಗಿಡ ನೆಡಬೇಕು ಎಂಬ ಗುರಿಯನ್ನು ಪೂರೈಸಲಾಗುವುದು ಎಂದರು.

ಹಳೆಯ ವಾಹನಗಳನ್ನು ಸುಸ್ಥಿತಿಯಲ್ಲಿಟ್ಟು, ಅವುಗಳನ್ನು ಸಂಚಾರ ಯೋಗ್ಯವಾಗಿರುವಂತೆ ನಿರ್ವಹಣೆ ಮಾಡುತ್ತಿರುವ ಹಳೆಯ ವಾಹನಗಳ ಮಾಲೀಕರಿಗೆ ಅವರು ಇದೇ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದರು.

ನಾಲೆಗೆ ಬಿದ್ದ ಪುತ್ರಿಯನ್ನು ರಕ್ಷಿಸಲು ಹೋದ ತಂದೆ, ತಾಯಿ ಸೇರಿ ಮೂವರೂ ನೀರುಪಾಲು

ಮೈಸೂರು,ಅ.1- ಆಕಸ್ಮಿಕವಾಗಿ ಕಾಲು ಜಾರಿ ನಾಲೆಗೆ ಬಿದ್ದ ಪುತ್ರಿಯನ್ನು ರಕ್ಷಿಸಲು ಹೋದ ತಂದೆ, ತಾಯಿ ಸೇರಿದಂತೆ ಮೂವರೂ ನೀರು ಪಾಲಾಗಿರುವ ಹೃದಯವಿದ್ರಾವಕ ಘಟನೆ ಸರಗೂರು ತಾಲೂಕಿನ ಚಂಗೋಡನಹಳ್ಳಿಯಲ್ಲಿ ನಡೆದಿದೆ.ಶಾವರಬಾನು (35), ಮಹಮ್ಮದ್ ಕಪಿಲ್ (42), ಶಾಹಿರಾಬಾನು(20) ಮೃತಪಟ್ಟ ದುರ್ದೈವಿಗಳು.

ಬೆಂಗಳೂರು ಮೂಲದವರಾದ ಇವರು ಸಂಬಂಕರೊಬ್ಬರ ತಿಥಿ ಕಾರ್ಯಕ್ಕೆ ಚಂಗೋಡನಹಳ್ಳಿಗೆ ಬಂದಿದ್ದರು. ಕಾರ್ಯದ ನಂತರ ನುಗು ಜಲಾಶಯದ ಬಲದಂಡೆ ನಾಲೆಯಲ್ಲಿ ಶಾಹಿರಾಬಾನು ಕೈಕಾಲು ತೊಳೆಯಲು ಇಳಿದಾಗ ನೀರಿನ ರಭಸಕ್ಕೆ ಕಾಲು ಜಾರಿ ನಾಲೆಗೆ ಬಿದ್ದಿದ್ದು, ಪುತ್ರಿಯನ್ನು ರಕ್ಷಿಸಲು ಮುಂದಾದ ತಂದೆ ಹಾಗೂ ತಾಯಿ ಕೂಡ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(01-10-2023)

ಸುದ್ದಿ ತಿಳಿಯುತ್ತಿದ್ದಂತೆ ಸರಗೂರು ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಮೂವರ ಮೃತದೇಹಗಳನ್ನು ಹೊರತೆಗೆದು, ಸರಗೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಪಟ್ಟ ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ.ಈ ಸಂಬಂಧ ಸರಗೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(01-10-2023)

ನಿತ್ಯ ನೀತಿ :
ವ್ಯಕ್ತಿಯ ಗುರಿ ಮತ್ತು ಉದ್ದೇಶ ಸ್ಪಷ್ಟವಾಗಿದ್ದಲ್ಲಿ ಬುದ್ಧಿಯ ನಿರ್ಣಯವು ಸ್ಪಷ್ಟವಾಗಿರುತ್ತದೆ.

ಪಂಚಾಂಗ : 01-10-2023, ಭಾನುವಾರ
ಶೋಭಕೃತ್ನಾಮ ಸಂವತ್ಸರ / ದಕ್ಷಿಣಾಯನ / ವರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷ
ತಿಥಿ: ದ್ವಿತೀಯಾ / ನಕ್ಷತ್ರ: ಅಶ್ವಿನಿ / ಯೋಗ: ವ್ಯಾಘಾತ / ಕರಣ: ವಣಿಜ್

ಸೂರ್ಯೋದಯ : ಬೆ.06.09
ಸೂರ್ಯಾಸ್ತ : 06.10
ರಾಹುಕಾಲ : 4.30-6.00
ಯಮಗಂಡ ಕಾಲ : 12.00-1.30
ಗುಳಿಕ ಕಾಲ : 3.00-4.30

ಮೇಷ: ವೃತ್ತಿ ಜೀವನದಲ್ಲಿ ಉತ್ತಮ ಪ್ರಗತಿ ಸಾಸುವಿರಿ. ಆರೋಗ್ಯದ ಕಡೆ ಗಮನ ಹರಿಸಿ.
ವೃಷಭ: ಹೊಸ ಉದ್ಯಮ ಪ್ರಾರಂಭಿಸಲು ಬಯಸುವವರಿಗೆ ಉತ್ತಮ ಯಶಸ್ಸು ಸಿಗಲಿದೆ.
ಮಿಥುನ: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳು ಆಗಲಿವೆ.

ಕಟಕ: ಪತ್ನಿಯ ಕುಟುಂಬ ಸದಸ್ಯರೊಂದಿಗೆ ದೂರ ಪ್ರಯಾಣ ಮಾಡುವ ಸಾಧ್ಯತೆಗಳಿವೆ.
ಸಿಂಹ: ಹಣ ಹೇಗೆ ವಿನಿಯೋಗವಾಗಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಬಹಳ ಮುಖ್ಯ.
ಕನ್ಯಾ: ಷೇರು ಮಾರು ಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವವರು ಎಚ್ಚರಿಕೆಯಿಂದಿರಿ.

ತುಲಾ: ಹಿತವಾದ ಮಾತು ಗಳಿಂದ ಸಂಗಾತಿ, ಪ್ರೀತಿಪಾತ್ರರನ್ನು ಮೆಚ್ಚಿಸುವಿರಿ.
ವೃಶ್ಚಿಕ: ಸಹೋದ್ಯೋಗಿಗಳೊಂದಿಗೆ ಹಲವಾರು ವಿಷಯಲ್ಲಿ ಭಿನ್ನಾಭಿಪ್ರಾಯ ಉಂಟಾಗಬಹುದು.
ಧನುಸ್ಸು: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳು ಆಗಲಿವೆ.

ಮಕರ: ಹಣಕಾಸು ಸಮಸ್ಯೆಯಿದ್ದರೂ ಹೇಗಾದರೂ ಹಣ ಹೊಂದಾಣಿಕೆಯಾಗುತ್ತದೆ.
ಕುಂಭ: ನೀವು ಹಿಂದೆ ಮಾಡಿದ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಶತ್ರುಗಳ ಕಾಟ ತಪ್ಪಲಿದೆ.
ಮೀನ: ದಾಂಪತ್ಯ ಜೀವನದಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.

ಕಾಂಗ್ರೆಸ್ ನಾಯಕರು ಸ್ಟಾಲಿನ್ ಗುಲಾಮರಾಗಿದ್ದಾರೆ : ಬಿಜೆಪಿ ಟೀಕೆ

ಬೆಂಗಳೂರು,ಸೆ.30- ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪರ ಪ್ರಚಾರ ಮಾಡಿದ್ದ ಸಿದ್ದರಾಮಯ್ಯನವರಿಗೆ ಹೈಕಮಾಂಡ್ ತಮ್ಮ ಬುಡ ಅಲುಗಾಡಿಸಬಹುದೆಂಬ ಭಯ..! ತಮಿಳುನಾಡಿನಲ್ಲಿ ಡಿಎಂಕೆ ಪರ ಪ್ರಚಾರ ಮಾಡಿದ್ದ ಡಿ.ಕೆ. ಶಿವಕುಮಾರ್ ತಮ್ಮ ಸ್ವಾರ್ಥ ಮಹತ್ವಾಕಾಂಕ್ಷೆಗಾಗಿ ಹೈಕಮಾಂಡ್ಗೆ ನಿಯತ್ತು ತೋರಿಸಲೇಬೇಕಿದೆ..! ರಾಹುಲ್ ಗಾಂಧಿ ಸ್ನೇಹಿತ ಸ್ಟಾಲಿನ್ ಎದುರು ನಿಂತರೆ ಸಂಪುಟದಲ್ಲಿ ತಮ್ಮ ತಮ್ಮ ಕುರ್ಚಿಗಳು ಉಳಿಯವುದಿಲ್ಲವೆಂದು ನಮ್ಮ ಸಚಿವರುಗಳಿಗೆ ಭಯ..! ಎಂದು ಬಿಜೆಪಿ ಟೀಕೆ ಮಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಇಂಡಿಯಾ ಮೈತ್ರಿಕೂಟದಲ್ಲಿ ಬಿರುಕು ಬಂದರೆ ತಮಿಳುನಾಡಿನಲ್ಲಿ ಎಂಪಿ ಸೀಟು ಸಿಗುವುದಿಲ್ಲವೆಂಬ ಆತಂಕ..! ಕರ್ನಾಟಕದ ಚುನಾವಣೆಗೆ ಕಾಂಗ್ರೆಸ್ ಸ್ಟಾಲಿನ್ ಸರ್ಕಾರದಿಂದ ದೊಡ್ಡ ಮಟ್ಟದ ಸಹಾಯಹಸ್ತ ಪಡೆದಿರುವುದು ಹಾಗೂ ಸ್ಟಾಲಿನ್ರಿಗೆ ನೀರು ಬಿಡದಿದ್ದರೂ ಕರ್ನಾಟಕದಲ್ಲಿ ಕಾಂಗ್ರೆಸ್ ಒಂದೇ ಒಂದು ಎಂಪಿ ಸ್ಥಾನ ಗೆಲ್ಲುವುದಿಲ್ಲವೆಂಬ ಗ್ಯಾರಂಟಿ.

ಬಿಜೆಪಿ ಬೆಂಕಿ ಇದ್ದಂತೆ, ಜೆಡಿಎಸ್ ಅದನ್ನು ತಬ್ಬಿಕೊಳ್ಳುತ್ತಿದೆ : ಸಿಎಂ ಸಿದ್ದರಾಮಯ್ಯ

ಅಧಿಕಾರ ಸಿಕ್ಕಿದೆ ನಮ್ಮನ್ನು ಯಾವ ಕನ್ನಡಿಗರು, ಕರ್ನಾಟಕ ಇನ್ನೈದು ವರ್ಷ ಏನು ಮಾಡಿಕೊಳ್ಳಲು ಸಾಧ್ಯವಿಲ್ಲವೆಂಬ ಅಹಂ, ಭ್ರಮೆ..! ಎಂದು ಕಾಂಗ್ರೆಸ್ ವಿರುದ್ದ ಸ್ಟಾಲಿನ್ ಗುಲಾಮರು ಎಂದು ಕಿಡಿಕಾರಿದೆ.

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಉಪಕಾರ ಮಾಡಿದ ಕೇಂದ್ರ ಸರ್ಕಾರವನ್ನೇ ದೂಷಿಸುವ ಸಿದ್ದರಾಮಯ್ಯ ಅವರು ಮೇಕೆದಾಟು ಯೋಜನೆಗೆ ತಮ್ಮ ಆಪ್ತರಾದ ಸ್ಟಾಲಿನ್ ಜತೆ ಮಾತನಾಡಿ ಅವರಿಂದ ಅನುಮತಿ ಪಡೆಯುವ ಪ್ರಯತ್ನವನ್ನೂ ಮಾಡುತ್ತಿಲ್ಲ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಬಿಜೆಪಿ ಬೆಂಕಿ ಇದ್ದಂತೆ, ಜೆಡಿಎಸ್ ಅದನ್ನು ತಬ್ಬಿಕೊಳ್ಳುತ್ತಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಸೆ.30- ಬಿಜೆಪಿ ಬೆಂಕಿ ಇದ್ದಂತೆ, ಜೆಡಿಎಸ್ ಅದನ್ನು ತಬ್ಬಿಕೊಳ್ಳಲು ಹೋಗುತ್ತಿದೆ, ಕಾಂಗ್ರೆಸ್ ಕೋಮುವಾದಿ ಪಕ್ಷದೊಂದಿಗೆ ಇಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಎಚ್ಬಿಆರ್ ಲೇಔಟ್ನಲ್ಲಿ ನಿರ್ಮಿಸಲಾಗಿರುವ ಬ್ಯಾರಿಸ್ ಸೌಹಾರ್ದ ಭವನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭಾರತ ಜಾತ್ಯತೀತ ರಾಷ್ಟ್ರವಾಗಿದ್ದು, ಇಲ್ಲಿ ಬದುಕುವ ಎಲ್ಲರೂ ಜಾತಿ ಹಾಗೂ ಧರ್ಮಾತೀತರಾಗಿರಬೇಕು. ಅಲ್ಪಸಂಖ್ಯಾತರೂ ಸೇರಿದಂತೆ ಎಲ್ಲಾ ಸಮುದಾಯಗಳು ಪರಸ್ಪರ ಸೌಹಾರ್ದತೆಯಿಂದ ಬದುಕಬೇಕು. ಪರಸ್ಪರ ನಂಬಿಕೆ, ಮಾನವೀಯತೆ ಇಲ್ಲದೆ ಹೋದರೆ ಸಮಾಜದಲ್ಲಿ ಶಾಂತಿ, ನೆಮ್ಮದಿ ಉಳಿಯು ವುದಿಲ್ಲ. ಅದು ದೇಶದ ಅಭಿವೃದ್ಧಿ ಹಾಗೂ ಪ್ರಗತಿಗೆ ಧಕ್ಕೆ ತರಲಿದೆ ಎಂದು ಹೇಳಿದರು.

ಜನತಾದಳ ವಿಭಜನೆಯಾದಾಗ ಸಂಯುಕ್ತ ಜನತಾದಳ ಬಿಜೆಪಿ ಜೊತೆ ಕೈಜೋಡಿಸುವ ಸಾಧ್ಯತೆ ಇದ್ದುದರಿಂದಾಗಿ ತಾವು ಆ ಗುಂಪಿನಲ್ಲಿ ಗುರುತಿಸಿಕೊಳ್ಳಲಿಲ್ಲ. ಜಾತ್ಯತೀತ ಜನತಾದಳದಲ್ಲಿ ನಾನೂ ಸೇರಿದಂತೆ ಅನೇಕರು ಉಳಿದುಕೊಂಡಿದ್ದೆವು. ನಾನು ಪಕ್ಷದ ರಾಜ್ಯಾಧ್ಯಕ್ಷನಾಗಿದ್ದೆ ಎಂದು ಸ್ಮರಿಸಿಕೊಂಡರು.

ಕುಮಾರಸ್ವಾಮಿ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿದಾಗ ದೇವೇಗೌಡರು ಹೇಳಿದ ಮಾತುಗಳನ್ನು ಮತ್ತೆ ಸ್ಮರಿಸಿಕೊಳ್ಳಬೇಕು. ಈಗ ಜನತಾದಳದ ಉಳಿವಿಗಾಗಿ ಬಿಜೆಪಿ ಜೊತೆ ಹೋಗುವುದಾಗಿ ದೇವೇಗೌಡರು ಹೇಳುತ್ತಿದ್ದಾರೆ. ಅಧಿಕಾರಕ್ಕಾಗಿ ಯಾರ ಜೊತೆ ಯಾದರೂ ಹೊಂದಾಣಿಕೆ ಮಾಡಿಕೊಳ್ಳುವುದು ಸರಿಯಲ್ಲ. ಕಾಂಗ್ರೆಸ್ ಪಕ್ಷ ಎಂದಿಗೂ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಅದು ಕೋಮುವಾದಿ ಪಕ್ಷ ಎಂದು ದೂರಿದರು.

ಬಿಜೆಪಿಯವರೇಕೆ ಮುಸ್ಲಿಮರನ್ನು ದ್ವೇಷಿಸುತ್ತಾರೆ. ಸಂವಿಧಾನವನ್ನು ಒಪ್ಪದೇ ಇರುವವರು ಪ್ರಜಾಪ್ರಭುತ್ವದಲ್ಲಿರುವುದು ಒಳ್ಳೆಯದಲ್ಲ. ಒಬ್ಬರ ಮೇಲೆ ಮತ್ತೊಬ್ಬರನ್ನು ಎತ್ತಿ ಕಟ್ಟುವುದು, ಧರ್ಮ, ಜಾತಿಗಳ ನಡುವೆ ಸಂಘರ್ಷ ಸೃಷ್ಟಿಸುವುದು ರಾಜಕಾರಣವಲ್ಲ. ಜನರಿಗಾಗಿ ರಾಜಕಾರಣ ಮಾಡಬೇಕೆ ಹೊರತು ಜನ ಹಾಗೂ ಸಮಾಜವನ್ನು ಬಿಟ್ಟು ರಾಜಕಾರಣ ಮಾಡಬಾರದು ಎಂದು ಹೇಳಿದರು.

ರಾಜ್ಯಸಭಾ ಸದಸ್ಯರಾಗಿದ್ದ ಫಾರುಖ್ ಅಬ್ದುಲ್ಲಾ ಜೆಡಿಎಸ್ನಲ್ಲಿ ಮೂಲೆಗುಂಪಾಗಿದ್ದಾರೆ. ತಮ್ಮ ಪಕ್ಷಕ್ಕೆ ಬರುವಂತೆ ಅವರನ್ನು ಆಹ್ವಾನಿಸಲಾಗಿತ್ತು. ಆದರೂ ಅವರು ಬರಲಿಲ್ಲ ಎಂದು ಹಾಸ್ಯಚಟಾಕಿ ಹಾರಿಸಿದರು.

ಬಿಜೆಪಿ ಸಂಸದರ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಜೆಡಿಎಸ್ ತನ್ನ ಉಳಿವಿಗಾಗಿ ಬಿಜೆಪಿಯನ್ನು ತಬ್ಬಿಕೊಳ್ಳುತ್ತಿರುವುದಾಗಿ ಹೇಳುತ್ತಿದೆ. ಆದರೆ ಬಿಜೆಪಿ ಬೆಂಕಿ ಇದ್ದಂತೆ. ಅವರಿಗೆ ಸಮಾಜದ ನಡುವೆ ಬೆಂಕಿ ಹಚ್ಚುವುದೇ ಕೆಲಸ. ನಮ್ಮ ಸರ್ಕಾರದಲ್ಲಿ ಯಾರೂ ಆತಂಕಪಡುವ ಅಗತ್ಯವಿಲ್ಲ. ಎಲ್ಲರಿಗೂ ರಕ್ಷಣೆ ಇದೆ. ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ನೀಡಬಾರದು ಎಂದು ಪೊಲೀಸರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ತಾವು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಅಲ್ಪಸಂಖ್ಯಾತರಿಗೆ ಬಜೆಟ್ನಲ್ಲಿ 3 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಅನುದಾನ ನೀಡಿದ್ದೆ. ಅದನ್ನು ಕಾಂಗ್ರೆಸೇತರ ಸರ್ಕಾರಗಳು ಕಡಿಮೆ ಮಾಡಿವೆ. ಸಾಮಾಜಿಕ ನ್ಯಾಯ, ಸಮಾನತೆ, ಸಂಪತ್ತಿನ ಹಂಚಿಕೆ ಸರ್ಕಾರಗಳ ಜವಾಬ್ದಾರಿ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಸೇರಿದಂತೆ ಎಲ್ಲರಿಗೂ ನ್ಯಾಯ ದೊರಕಿಸುವುದು ತಮ್ಮ ಆದ್ಯತೆ. ಪಂಚಖಾತ್ರಿ ಸೇರಿದಂತೆ ಸರ್ಕಾರದ ಎಲ್ಲಾ ಯೋಜನೆಗಳು ಜಾತ್ಯತೀತವಾಗಿವೆ ಎಂದು ಹೇಳಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯ ಅನುಭವಿಸಿದ್ದ ಆತಂಕದ ವಾತಾವರಣ ನಿವಾರಣೆಯಾಗಿದೆ. ತಮ್ಮ ಸರ್ಕಾರ ಅಲ್ಪಸಂಖ್ಯಾತರನ್ನು ಸೇರಿ ಎಲ್ಲಾ ಸಮುದಾಯಗಳಿಗೂ ರಕ್ಷಣೆ ನೀಡಲಿದೆ ಎಂದು ಹೇಳಿದರು.
ಈ ಹಿಂದೆ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆದಿತ್ತು. ಅದರಲ್ಲಿ 10 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯಾಗಿದೆ ಎಂದು ಅಂದಿನ ಬಿಜೆಪಿ ಸರ್ಕಾರ ಹೇಳಿಕೊಂಡಿತ್ತು. ಆದರೆ ಕರಾವಳಿಯ ಮಂಗಳೂರು, ಉಡುಪಿ, ಉತ್ತರಕನ್ನಡ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ನಿರೀಕ್ಷಿತ ಪ್ರಮಾಣದ ಹೂಡಿಕೆ ಬರಲಿಲ್ಲ. ಕಾರಣ ಅಲ್ಲಿ ನಡೆಯುತ್ತಿದ್ದ ಕೋಮುಗಲಭೆಗಳು ಎಂದು ಹೇಳಿದರು.

ತಮ್ಮ ಸರ್ಕಾರ ಕೋಮು ಪ್ರಚೋದಿತ ವಿಷಯಗಳಿಗೆ ಅವಕಾಶ ನೀಡುವುದಿಲ್ಲ. ಉದ್ಯೋಗ ಸೃಷ್ಟಿಗೆ ಒತ್ತು ನೀಡುತ್ತದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಮತ್ತು ತಾವು ಚರ್ಚೆ ನಡೆಸಿದ್ದೇವೆ. ಗೋವಾ ಮಾದರಿಯಲ್ಲಿ ಕರಾವಳಿ ಭಾಗದ ಪ್ರವಾಸೋದ್ಯಮ ಅಭಿವೃದ್ಧಿಗೆ ರಾಜ್ಯದಲ್ಲಿ ಹೊಸ ನೀತಿ ರೂಪಿಸಲಾಗುವುದು ಎಂದು ಭರವಸೆ ನೀಡಿದರು.

ಸಮುದಾಯದ ಯು.ಟಿ.ಖಾದರ್ ಅವರು ವಿಧಾನಸಭೆ ಅಧ್ಯಕ್ಷ ಸ್ಥಾನದಂತಹ ಉನ್ನತ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಈ ಹಿಂದೆ ಸ್ಪೀಕರ್ ಆಗಿದ್ದ ಎಸ್.ಎಂ.ಕೃಷ್ಣ, ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿಗಳಾದರು. ಸಚಿವ ಸ್ಥಾನ ಸಿಗಲಿಲ್ಲ ಎಂದು ಯು.ಟಿ.ಖಾದರ್ ಕೊರಗುವುದು ಬೇಡ. ಯಾರ ಹಣೆಯಲ್ಲಿ ಏನು ಬರೆದಿದೆಯೋ ಯಾರಿಗೆ ಗೊತ್ತು ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಸಚಿವರಾದ ಕೆ.ಜೆ.ಜಾರ್ಜ್, ದಿನೇಶ್ಗುಂಡೂರಾವ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮ್ಮದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ಸೌಹಾರ್ದ ಭವನ ಸಮಿತಿಯ ಅಧ್ಯಕ್ಷ ಸಯ್ಯದ್ ಮಹಮ್ಮದ್ ಬ್ಯಾರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಸಿಖ್ ಸಮುದಾಯ ಸಮಸ್ಯೆ ನಿವಾರಣೆಗೆ ಪ್ರಧಾನಿ ಮೋದಿ ಆದ್ಯತೆ : ಜೈಶಂಕರ್

ವಾಷಿಂಗ್ಟನ್ ಡಿಸಿ,ಸೆ.30- ಸಿಖ್ ಸಮುದಾಯದ ಸಮಸ್ಯೆ ನಿವಾರಣೆಗಳಿಗೆ ಮೋದಿ ಸರ್ಕಾರ ಹೆಚ್ಚಿನ ಗಮನ ನೀಡಿದೆ ಎಂದು ಒತ್ತಿ ಹೇಳಿದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಉಗ್ರಗಾಮಿಗಳು ಕೇವಲ ಸಣ್ಣ ಅಲ್ಪಸಂಖ್ಯಾತರು ಮತ್ತು ಇಡೀ ಸಮುದಾಯವನ್ನು ಪ್ರತಿನಿಸುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಖಾಲಿಸ್ತಾನ್ ಸಮಸ್ಯೆಯ ಮಧ್ಯೆ ಸಿಖ್ ಸಮುದಾಯದ ಕಾಳಜಿಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಜೈಶಂಕರ್ ಅವರು ಈ ಸಮಸ್ಯೆಯು ಇಡೀ ಸಮುದಾಯದ ಅಭಿಪ್ರಾಯಗಳನ್ನು ಪ್ರತಿನಿಸುವುದಿಲ್ಲ ಎಂದು ಹೇಳಿದರು.ಕಳೆದ 10 ವರ್ಷಗಳಲ್ಲಿ ಮೋದಿ ಸರ್ಕಾರವು ಸಿಖ್ ಸಮುದಾಯದ ಸಮಸ್ಯೆಗಳಿಗೆ ಎಷ್ಟು ಗಮನ ನೀಡಿದೆ ಮತ್ತು ಅದು ನೀಡಿದ ಸಲಹೆಗಳ ಬಗ್ಗೆ ಎಲ್ಲರಿಗೂ ತಿಳಿದಿದೆ.

ಕಾಂಗ್ರೆಸ್‌ನಲ್ಲಿ ಸಂಚಲನ ಸೃಷ್ಟಿಸಿದ ಶ್ಯಾಮನೂರು ಶಿವಶಂಕರಪ್ಪ ಹೇಳಿಕೆ

ಸದ್ಯ ನಡೆಯುತ್ತಿರುವ ಚರ್ಚೆಗಳು ಇಡೀ ಸಮುದಾಯದ (ಸಿಖ್ಖರ) ಪ್ರಾತಿನಿಕ ಸಮಸ್ಯೆಗಳು ಎಂದು ನಾನು ನಂಬುವುದಿಲ್ಲ. ಭಯೋತ್ಪಾದನೆಯ ಬಗ್ಗೆ ಮಾತನಾಡುವವರು, ಪ್ರತ್ಯೇಕತಾವಾದಿಗಳ ಬಗ್ಗೆ ಮಾತನಾಡುವವರು, ಅವರ ವಾದಗಳು ಹಿಂಸೆಯನ್ನು ಒಳಗೊಂಡಿವೆ. ಇದು ಸಣ್ಣ ಅಲ್ಪಸಂಖ್ಯಾತರು ಮತ್ತು ಆಯಾ ಸರ್ಕಾರಗಳು ನಿಷ್ಪಕ್ಷಪಾತ ಕ್ರಮಗಳನ್ನು ತೆಗೆದುಕೊಳ್ಳಬೇಕು, ನಾವು ಇದನ್ನು ಇಡೀ ಸಮುದಾಯದ ವಿಷಯವಾಗಿ ತೆಗೆದುಕೊಳ್ಳಬಾರದು ಎಂದಿದ್ದಾರೆ.

ಕೆನಡಾದಲ್ಲಿ ಭಯೋತ್ಪಾದನೆ,
ಉಗ್ರವಾದ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸರ್ಕಾರವು ಅನುಮತಿ ನೀಡುವುದರಿಂದ ಕೆಲವು ವರ್ಷಗಳಿಂದ ಕೆನಡಾದೊಂದಿಗೆ ನಡೆಯುತ್ತಿರುವ ಸಮಸ್ಯೆ ಇದೆ ಎಂದು ವಿದೇಶಾಂಗ ಸಚಿವರು ಹೇಳಿದರು. ಕೆನಡಾದೊಂದಿಗೆ ನಡೆಯುತ್ತಿರುವ ಸಮಸ್ಯೆಯು ದೇಶದಲ್ಲಿ ಭಯೋತ್ಪಾದನೆ, ಉಗ್ರವಾದ ಮತ್ತು ಹಿಂಸಾಚಾರದ ಬಗ್ಗೆ ಅನುಮತಿ ಯಿಂದ ಎಂದು ಅವರು ಹೇಳಿದರು.

ನಾವು ಕೆಲವು ವರ್ಷಗಳಿಂದ ಕೆನಡಾ ಮತ್ತು ಕೆನಡಾದ ಸರ್ಕಾರದೊಂದಿಗೆ ನಿರಂತರ ಸಮಸ್ಯೆಯನ್ನು ಹೊಂದಿದ್ದೇವೆ ಎಂಬುದು ಸತ್ಯ. ಮತ್ತು ನಡೆಯುತ್ತಿರುವ ಸಮಸ್ಯೆಯು ನಿಜವಾಗಿಯೂ ಭಯೋತ್ಪಾದನೆ, ಉಗ್ರವಾದ ಮತ್ತು ಹಿಂಸೆಗೆ ಸಂಬಂಧಿಸಿದಂತೆ ಅನುಮತಿಯ ಸುತ್ತ ಸುತ್ತುತ್ತದೆ ಎಂದು ಜೈಶಂಕರ್ ಹೇಳಿದರು.

ನ.10ಕ್ಕೆ ತೆರೆ ಮೇಲೆ ‘ಗರಡಿ’ ಮನೆ ದರ್ಶನ

0

ವನಜಾ ಬಿ.ಸಿ.ಪಾಟೀಲ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ ಗರಡಿ ಚಿತ್ರದ ಟೈಟಲ್ ಟ್ರ್ಯಾಕ್ ಇತ್ತೀಚೆಗೆ ಸರೆಗಮ ಕನ್ನಡ ಯೂಟ್ಯೂಬ್ ಚಾನಲ್ ಮೂಲಕ ಬಿಡುಗಡೆಯಾಗಿದೆ. ಯೋಗರಾಜ್ ಭಟ್ ಅವರು ಬರೆದಿರುವ ಲೋಕಾನೆ ಗರಡಿ.. ಬಾಳೇ ಅಖಾಡ ಎಂಬ ಅದ್ಭುತ ಹಾಗೂ ಅರ್ಥಗರ್ಭಿತ ಗೀತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರಕ್ಕೆ ಸಂಗೀತ ಸಂಯೋಜಿಸಿರುವ ವಿ.ಹರಿಕೃಷ್ಣ ಅವರೇ ಮುಖ್ಯ ಗಾಯಕರಾಗಿ ಹಾಡನ್ನು ಹಾಡಿದ್ದಾರೆ. ಹರಿಕೃಷ್ಣ ಅವರ ಜೊತೆಗೆ ಸಾಕಷ್ಟು ಪ್ರತಿಭಾವಂತ ಗಾಯಕರು ಸಹ ಈ ಹಾಡಿಗೆ ಧ್ವನಿಯಾಗಿದ್ದಾರೆ. ಇತ್ತೀಚೆಗೆ ನಡೆದ ಈ ಹಾಡಿನ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದರು.

ಗರಡಿ ಎಂದರೆ ಒಂದು ಊರನ್ನು ಕಾಯುವ ಪೊಲೀಸ್ ಠಾಣೆ ಇದ್ದ ಹಾಗೆ ಎಂದು ಮಾತು ಆರಂಭಿಸಿದ ನಿರ್ದೇಶಕ ಯೋಗರಾಜ್ ಭಟï, ಹಿಂದೆ ಒಂದು ಊರಿನ ರಕ್ಷಣೆಗೆ ಗರಡಿ ಬಹು ಮುಖ್ಯವಾಗಿತ್ತು. ಊರಿನವರು ಸಹ ಗರಡಿ ಮನೆಯ ಕುಸ್ತಿಪಟುಗಳನ್ನು ತಮ್ಮ ಮನೆಯವರಂತೆಯೇ ನೋಡಿಕೊಳ್ಳುತ್ತಿದ್ದರು. ಅಂತಹ ಗರಡಿ ಸುತ್ತ ನಮ್ಮ ಚಿತ್ರದ ಕಥೆ ಸಾಗುತ್ತದೆ.

ಗರಡಿ ಮನೆಯ ಯಜಮಾನನಾಗಿ ಬಿ.ಸಿ.ಪಾಟೀಲ್ ಅಭಿನಯಿಸಿದ್ದಾರೆ. ಅವರ ಶಿಷ್ಯನಾಗಿ ಸೂರ್ಯ ಅಭಿನಯಿಸಿದ್ದಾರೆ. ಇದು ಒಂದು ರೀತಿ ದ್ರೋಣಾಚಾರ್ಯ ಹಾಗೂ ಏಕಲವ್ಯನ ಕಥೆ ಎನ್ನಬಹುದು. ಇನ್ನು ಇಂದು ಬಿಡುಗಡೆಯಾಗಿರುವ ಹಾಡನ್ನು ಹರಿಕೃಷ್ಣ ಅದ್ಭುತವಾಗಿ ಸಂಯೋಜಿಸಿ ಹಾಡಿದ್ದಾರೆ. ಚಿತ್ರ ನವೆಂಬರ್ 10ರಂದು ಬಿಡುಗಡೆಯಾಗುತ್ತಿದೆ. ಎಲ್ಲರೂ ನೋಡಿ ಹಾರೈಸಿ ಎಂದರು.

ಗರಡಿ ಚಿತ್ರ ಆರಂಭವಾಗಿ ಈ ನವೆಂಬರ್ 14ಕ್ಕೆ ಎರಡು ವರ್ಷಗಳಾಗುತ್ತದೆ. ನನ್ನ ಹುಟ್ಟುಹಬ್ಬಕ್ಕೆ ಈ ಚಿತ್ರ ಆರಂಭವಾಗಿತ್ತು. ದರ್ಶನ್ ಅವರು ಶೀರ್ಷಿಕೆ ಅನಾವರಣ ಮಾಡಿದ್ದರು. ಈ ಬಾರಿಯ ಹುಟ್ಟುಹಬ್ಬದ ಸಂದರ್ಭದಲ್ಲಿ (ನವೆಂರ್ಬ 10) ಚಿತ್ರ ಬಿಡುಗಡೆಯಾಗುತ್ತದೆ. ಯೋಗರಾಜ್ ಭಟ್ ಅವರು ಬಹಳ ಶ್ರಮವಹಿಸಿ ಚಿತ್ರವನ್ನು ಉತ್ತಮವಾಗಿ ನಿರ್ದೇಶನ ಮಾಡಿದ್ದಾರೆ. ನಾನು ಈಗಾಗಲೇ ಚಿತ್ರವನ್ನು ಸಾಕಷ್ಟು ಸಲ ನೋಡಿ ಖುಷಿ ಪಟ್ಟಿದ್ದೇನೆ.

ಕಾಂಗ್ರೆಸ್‌ನಲ್ಲಿ ಸಂಚಲನ ಸೃಷ್ಟಿಸಿದ ಶ್ಯಾಮನೂರು ಶಿವಶಂಕರಪ್ಪ ಹೇಳಿಕೆ

ನಿಮಗೂ ಚಿತ್ರ ಹಿಡಿಸಲಿದೆ ಎಂದರು ಹಿರಿಯ ನಟ ಬಿ.ಸಿ.ಪಾಟೀಲï. ಈ ಚಿತ್ರದಲ್ಲೂ ನನ್ನ ಹೆಸರು ಸೂರ್ಯ ಅಂತ. ಎಲ್ಲರೂ ಗರಡಿ ಸೂರಿ ಅಂತ ಕರೆಯುತ್ತಿರುತ್ತಾರೆ. ಈ ಚಿತ್ರದಲ್ಲಿ ನನಗೆ ಅವಕಾಶ ಸಿಗಲು ದರ್ಶನ್ ಅವರು ಕಾರಣ. ಅವರು ಸಹ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಇಂದು ಬಿಡುಗಡೆಯಾಗಿರುವ ಟೈಟಲ್ ಸಾಂಗ್ ನಲ್ಲಿ ನಾನು ಸಖತ್ ಡಾನ್ಸ್ ಮಾಡಿದ್ದೇನೆ. ಯೋಗರಾಜ್ ಭಟ್ ಅವರ ಸಾಹಿತ್ಯ ಹಾಗೂ ಹರಿಕೃಷ್ಣ ಅವರ ಸಂಗೀತದಲ್ಲಿ ಹಾಡು ಅದ್ಭುತವಾಗಿ ಮೂಡಿಬಂದಿದೆ ಎನ್ನುತ್ತಾರೆ ನಾಯಕ ಸೂರ್ಯ.

ನಾಯಕಿ ಸೋನಾಲ್ ಮಾಂತೆರೊ, ಚಿತ್ರದಲ್ಲಿ ನಟಿಸಿರುವ ಸುಜಯï, ಧರ್ಮಣ್ಣ, ರಾಘು, ಛಾಯಾಗ್ರಾಹಕ ನಿರಂಜನ್ ಬಾಬು, ನೃತ್ಯ ನಿರ್ದೇಶಕ ಧನಂಜಯ ಚಿತ್ರದ ಕುರಿತು ಮಾತನಾಡಿದರು. ನಿರ್ಮಾಪಕಿ ವನಜಾ ಪಾಟೀಲ್ ಎಲ್ಲರಿಗೂ ಧನ್ಯವಾದ ತಿಳಿಸಿದರು. ಕಾರ್ಯಕಾರಿ ನಿರ್ಮಾಪಕಿ ಸೃಷ್ಟಿ ಪಾಟೀಲ್ ಗರಡಿ ಚಿತ್ರ ಸಾಗಿ ಬಂದ ಬಗ್ಗೆ ವಿವರಣೆ ನೀಡಿದರು.

ಇನ್ಪೋಸಿಸ್ ಫೌಂಡೇಶನ್‌ನಿಂದ 55 ಕೋಟಿ ವೆಚ್ಚದಲ್ಲಿ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣ

ಕುಣಿಗಲï,ಸೆ.30- ಮಾಹಿತಿ ತಂತ್ರಜ್ಞಾನದಲ್ಲಿ ಇಡೀ ವಿಶ್ವವೇ ಬೆಂಗಳೂರು ಕಡೆಗೆ ತಿರುಗಿ ನೋಡುವಂತೆ ಮಾಡಿದ ಪ್ರತಿಷ್ಠಿತ ಇನ್ಪೋಸಿಸ್ ಫೌಂಡೇಷನ್ ಸಂಸ್ಥೆ 55 ಕೋಟಿ ವೆಚ್ಚದಲ್ಲಿ 100 ಹಾಸಿಗೆಯ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣ ಮಾಡಿಕೊಡಲು ಮುಂದೆ ಬಂದಿರುವುದು ಸಂಸ್ಥೆಯ ಮಾನವೀಯತೆಗೆ ಸಾಕ್ಷಿಯಾಗಿದೆ ಎಂದು ಸಂಸದ ಡಿ.ಕೆ.ಸುರೇಶ್ ಅಭಿಪ್ರಾಯಪಟ್ಟರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಅವರಣದಲ್ಲಿ ಇನೋಸಿಸ್ ಫೌಂಡೇಷನ್ ವತಿಯಿಂದ ನಿರ್ಮಾಣ ಮಾಡುತ್ತಿರುವ ತಾಯಿ ಮಕ್ಕಳ ಆಸ್ಪತ್ರೆಗೆ ಭೂಮಿ ಪೂಜೆ ನೇರವೇರಿಸಿ ಮಾತನಾಡಿದ ಅವರು, ಇನೋಸಿಸ್ ಸಂಸ್ಥೆಯನ್ನು ಕಟ್ಟಿಬೆಳಿಸಿದ ನಾರಾಯಣ್ ಮೂರ್ತಿ ಹಾಗೂ ಸುಧಾ ನಾರಾಯಣ್ ಮೂರ್ತಿ ಅವರು ಫೌಂಡೇಷನ್ ಸ್ಥಾಪನೆ ಮಾಡಿ ಸಮಾಜಮುಖಿ ಕೆಲಸಗಳಿಗೆ ಮುಂದಾಗಿದ್ದಾರೆ. ಅದರಲ್ಲಿಯೂ ಗ್ರಾಮೀಣ ಭಾಗದ ಜನರಿಗೆ ಉತ್ತಮ ರೀತಿಯ ಆರೋಗ್ಯ ಸೌಲಭ್ಯಗಳು ದೊರಕಬೇಕು ಆರೋಗ್ಯ ಕ್ಷೇತ್ರದಲ್ಲಿ ಬದಲಾವಣೆ ತರಬೇಕು ಎಂದು ಅವರ ಉದ್ದೇಶವಾಗಿದೆ.

ಬಿಜೆಪಿ ಸಂಸದರ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಈ ಸಂಬಂಧ ಸುಧಾಮೂರ್ತಿ ಅವರ ಬಳಿ ಮೊದಲು ಕನಕಪುರಕ್ಕೆ ಸಮುದಾಯ ಭವನ ಹಾಗೂ ದೇವಸ್ಥಾನಕ್ಕೆ ಸಹಾಯ ಕೇಳಲು ಹೋದಾಗ ಅವರು ದೇವಸ್ಥಾನ ಹಾಗೂ ಸಮುದಾಯ ಭವನಗಳಿಗೆ ಬೇಡ ಬೇರೆ ಯಾವುದಾರು ಹೇಳಿ ಅಂದರು ಆಗ ನಾನು ಕನಕಪುರಕ್ಕೆ ತಾಯಿ ಮಕ್ಕಳ ಆಸ್ಪತ್ರೆಗೆ ಸಹಾಯ ಮಾಡುವಂತೆ ಕೇಳಿಕೊಂಡಾಗ ಒಪ್ಪಿಸಿಕೊಂಡು ಕನಕಪುರಕ್ಕೆ ಮೊದಲ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣ ಮಾಡಿಕೊಟ್ಟರು ಅಲ್ಲಿ ಈಗಾಗಲೇ ಉದ್ಘಾಟನೆಯಾಗಿ ಸಾರ್ವಜನಿಕರಿಗೆ ಸೌಲಭ್ಯ ಲಭ್ಯವಾಗುತ್ತಿದೆ ಪ್ರತಿ ತಿಂಗಳು 150ಕ್ಕೂ ಹೆಚ್ಚು ಹೆರಿಗಳು ನಡೆಯುತ್ತಿವೆ ಎಂದು ತಿಳಿಸಿದರು.

ಇನೋಸಿಸ್ ಫೌಂಡೇಷನ್ಉಪಾಧ್ಯಕ್ಷ ಸುನೀಲ್ ಕುಮಾರ್ ತಾರೇಶ್ ಮಾತನಾಡಿ, ಕುಣಿಗಲ್ ಕ್ಷೇತ್ರದಲ್ಲಿ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಮುಂದ್ದಾಗಿದ್ದೇವೆ. ಇನ್ನೂ ಎರಡು ವರ್ಷದಲ್ಲಿ ಆಸ್ಪತ್ರೆ ನಿರ್ಮಾಣ ಮಾಡಿ ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡಲಿದ್ದೇವೆ ಎಂದು ತಿಳಿಸಿದರು.

ಶಾಸಕ ಡಾ.ರಂಗನಾಥ್, ಇನ್ಪೋಸಿಸ್ ಪೌಂಡೇಷನ್ ನಿರ್ದೇಶಕ ಸಂತೋಷ ಅನಂತಪು, ತಹಸೀಲ್ದಾರ್ ವಿಶ್ವನಾಥ್, ಡಿಹೆಚ್ಓ ಮಂಜುನಾಥ್, ಇಒ ಜೋಸೆಫ್, ಟಿಹೆಚ್ಓ ಡಾ.ಮರಿಯಪ್ಪ, ಸಾರ್ವಜನಿಕ ಆಸ್ಪತ್ರೆಯ ಅಡಳಿತಾಕಾರಿ ಡಾ.ಗಣೇಶ್ ಬಾಬು, ಪುರಸಭೆ ಮುಖ್ಯಾಕಾರಿ ಶಿವಪ್ರಸಾದï, ಪುರಸಭೆ ಮಾಜಿ ಅಧ್ಯಕ್ಷ ರಂಗಸ್ವಾಮಿ ಮುಂತಾದವರು ಹಾಜರಿದ್ದರು.

ಬಿಜೆಪಿ ಸಂಸದರ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಬೆಂಗಳೂರು,ಸೆ.30- ಬಿಜೆಪಿಯ 25 ಮಂದಿ ಸಂಸದರು, ನಾಲ್ಕೈದು ಮಂದಿ ಸಚಿವರು ಕಾವೇರಿ ವಿವಾದ ಬಗೆಹರಿಸುವ ಸಂದರ್ಭದಲ್ಲಿ ಅಲ್ಲದೆ ಮತ್ತಿನ್ಯಾವಾಗ ರಾಜ್ಯಕ್ಕೆ ಬಳಕೆಯಾಗುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರು ನಿಯಂತ್ರಣಾ ಸಮಿತಿ ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಕಾರದ ಆದೇಶಗಳ ವಿರುದ್ಧ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುವ ಆಯ್ಕೆ ಬಿಟ್ಟರೆ ನಮ್ಮ ಬಳಿ ಬೇರೆ ಮಾತುಗಳಿಲ್ಲ. ಬಿಜೆಪಿಯವರು ಕಾನೂನು ತಂಡ ಸರಿಯಾಗಿ ವಾದ ಮಾಡಿಲ್ಲ, ಅದಕ್ಕಾಗಿ ರಾಜ್ಯಕ್ಕೆ ಇಂತಹ ತೀರ್ಪು ಬಂದಿದೆ ಎಂದು ಆರೋಪ ಮಾಡುತ್ತಿದ್ದಾರೆ. ಹಾಗಾದರೆ ಯಾವ ತಜ್ಞರನ್ನು ನೇಮಿಸಬೇಕೆಂದು ಬಿಜೆಪಿಯವರೇ ಸಲಹೆ ಕೊಡಲಿ. ರಾಜ್ಯದ ಪರವಾಗಿ ತೀರ್ಪು ಬರುತ್ತದೆ ಎಂದಾದರೆ ಅವರು ಹೇಳಿದ ವಕೀಲರನ್ನೇ ನೇಮಿಸುತ್ತೇವೆ ಎಂದರು.

ಈ ಹಿಂದೆ ಬಿಜೆಪಿ ಆಡಳಿತದಲ್ಲಿದ್ದಾಗ ವಾದ ಮಾಡಿದ ವಕೀಲರ ತಂಡವೇ ಈಗಲೂ ಮುಂದುವರೆದಿದೆ. ಒಂದು ವೇಳೆ ಈ ಬಗ್ಗೆ ಆಕ್ಷೇಪವಿದ್ದರೆ ದೆಹಲಿಯಲ್ಲಿ ನಡೆದ ಸರ್ವಪಕ್ಷಗಳ ಸಂಸದ ಸಭೆಯಲ್ಲಿ ಮತ್ತು ಬೆಂಗಳೂರಿನಲ್ಲಿ ನಡೆದ ಎರಡು ಸರ್ವಪಕ್ಷ ಸಭೆಯಲ್ಲಿ ಬಿಜೆಪಿಯವರು ಸಲಹೆ ನೀಡಬಹುದಿತ್ತಲ್ಲವೇ ಎಂದು ಪ್ರಶ್ನಿಸಿದರು.

ಕಾವೇರಿ ವಿಷಯದಲ್ಲಿ ರಾಜಕೀಯ ಬೇಡ. ಒಟ್ಟಾಗಿ ಕೆಲಸ ಮಾಡೋಣ ಎಂಬುದು ನಮ್ಮ ನಿಲುವು. ಮುಖ್ಯಮಂತ್ರಿ ನೇತೃತ್ವದಲ್ಲಿ ರಾಜ್ಯದಲ್ಲಿ ನಡೆದ ದೆಹಲಿಯಲ್ಲಿ ಎರಡು ದಿನಕ್ಕಾದರೂ ಪ್ರಧಾನಿ ಭೇಟಿಗೆ ಸಮಯ ಸಿಗಲಿಲ್ಲ. ಬಿಜೆಪಿಯ ಭಕ್ತರು ಪ್ರಧಾನಿ ಮೋದಿ ವಿಶ್ವಗುರು ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸಿದ್ದಾರೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಮೋದಿಯವರು ಅದೇ ರೀತಿ ರಾಷ್ಟ್ರಗುರುವಾಗಿ ಎರಡು ರಾಜ್ಯಗಳ ನಡುವಿನ ಸಮಸ್ಯೆ ಬಗೆಹರಿಸಲು ಸಾಧ್ಯವಾಗುವುದಿಲ್ಲವೇ ಎಂದು ಕಿಡಿಕಾರಿದರು.

ಕಾಂಗ್ರೆಸ್‌ನಲ್ಲಿ ಸಂಚಲನ ಸೃಷ್ಟಿಸಿದ ಶ್ಯಾಮನೂರು ಶಿವಶಂಕರಪ್ಪ ಹೇಳಿಕೆ

ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಅವರು ಇಂಡಿಯಾ ಕೂಟದಲ್ಲಿರುವ ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್ ಜೊತೆ ಮಾತುಕತೆ ನಡೆಸಿ ವಿವಾದ ಬಗೆಹರಿಸಬೇಕೆಂದು ಬೆಂಗಳೂರಿನ ಸಂಸದರೊಬ್ಬರು ಹೇಳಿಕೆ ನೀಡಿದ್ದಾರೆ. ಅದೇ ಸಂಸದರು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷನನ್ನು ಬ್ರದರ್ ಎಂದು ಹೇಳಿಕೊಂಡು ಜೊತೆಯಲ್ಲಿ ತಿರುಗಾಡುತ್ತಾರೆ. ಅವರನ್ನೂ ಜೊತೆಯಲ್ಲಿ ಕರೆದುಕೊಂಡು ಪ್ರಧಾನಿ ಬಳಿ ಹೋಗಿ.

ಬಿಜೆಪಿಯವರು ತಮಿಳುನಾಡಿನ ನಿರ್ಮಲಾ ಸೀತಾರಾಮನ್ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಮಾಡಿದ್ದಾರೆ. ಅವರು ಈಗ ಕೇಂದ್ರದ ಆರ್ಥಿಕ ಸಚಿವರೂ ಕೂಡ. ರಾಜ್ಯದಿಂದ ನಾಲ್ಕು ಮಂದಿ ಕೇಂದ್ರ ಸಚಿವರಿದ್ದಾರೆ, 25 ಸಂಸದರೂ ಸೇರಿ ಆಯ್ಕೆಯಾಗಿದ್ದಾರೆ, ಇವರೆಲ್ಲಾ ರಾಜ್ಯಕ್ಕೆ ಯಾವಾಗ ಉಪಯೋಗಕ್ಕೆ ಬರುತ್ತಾರೆ, ಕನ್ನಡದ ಪರವಾಗಿ ಯಾವಾಗ ನಿಲ್ಲುತ್ತಾರೆ ಎಂದು ಪ್ರಶ್ನಿಸಿದರು.

ರಾಜ್ಯಸರ್ಕಾರ ಕಾವೇರಿ ವಿಷಯದಲ್ಲಿ ನಡೆದ ಪ್ರತಿಭಟನೆಗಳಿಗೆ ಅಡ್ಡಿಪಡಿಸಿಲ್ಲ. ಬಂದ್ನಿಂದಾಗಿ ನಿನ್ನೆ ಒಂದೇ ದಿನ 5 ಸಾವಿರ ಕೋಟಿ ರೂ.ಗಳ ಆರ್ಥಿಕ ನಷ್ಟವಾಗಿದೆ ಎಂದು ಎಫ್ಕೆಸಿಸಿಐ ಹೇಳಿಕೆ ನೀಡಿದೆ.ಈ ಹಿನ್ನೆಲೆಯಲ್ಲಿ ಬಂದ್ ಬೇಡ ಎಂದು ಹೇಳಿದ್ದರು. ಉಳಿದಂತೆ ರಾಜ್ಯಸರ್ಕಾರ ಕಾವೇರಿ ವಿಷಯದಲ್ಲಿ ನಾಡಿನ ಹಿತಾಸಕ್ತಿ ಕಾಪಾಡಲು ಬದ್ಧವಾಗಿದೆ. ಅಗತ್ಯ ಕಾನೂನು ಹೋರಾಟ ಮುಂದುವರೆಸಿದೆ ಎಂದು ಹೇಳಿದ್ದಾರೆ.

ಹಿಂದಿನ ಬಿಜೆಪಿ ಸರ್ಕಾರದ ಹಗರಣಗಳ ಸ್ವರೂಪ ಆಧರಿಸಿ ತನಿಖೆ ನಡೆಯುತ್ತಿವೆ. ವಿಶೇಷ ತನಿಖಾ ದಳ, ಪ್ರಾದೇಶಿಕ ಆಯುಕ್ತರು, ನ್ಯಾಯಾಂಗ ಸಮಿತಿಗಳನ್ನು ರಚಿಸಿ ಪ್ರಕರಣಗಳ ಆಳ ಹಾಗೂ ಸ್ವರೂಪ ಆಧರಿಸಿ ತನಿಖೆ ನಡೆಸಲಾಗುತ್ತಿದೆ. ವರದಿ ಸಂಬಂಧಪಟ್ಟ ಸಚಿವರಿಗೆ ತಲುಪಿದ ಬಳಿಕ ಮುಖ್ಯಮಂತ್ರಿ ಬಳಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.


ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ ನಡೆದಿದ್ದ ನೂರಾರು ಕೋಟಿ ರೂ.ಗಳ ಹಗರಣ ಪ್ರಾಥಮಿಕ ವರದಿಯಲ್ಲಿ ಸಾಬೀತಾಗಿದೆ. ಅದನ್ನು ಪ್ರಾದೇಶಿಕ ಆಯುಕ್ತರು ಪರಿಶೀಲನೆ ನಡೆಸಿದ್ದಾರೆ. ಯಾವುದನ್ನೂ ಮುಚ್ಚಿ ಹಾಕುವ ಉದ್ದೇಶ ತಮ್ಮದಲ್ಲ
ಎಂದರು.

ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು. ಆದರೆ ಯಾವುದನ್ನೂ ಸಾಬೀತುಪಡಿಸಲಿಲ್ಲ. ಪ್ರತಿಬಾರಿ ಪೆನ್ಡ್ರೈವ್ ಅನ್ನು ತೋರಿಸಿ ಹೆದರಿಸಿದರು. ಆದರೆ ಈವರೆಗೂ ಬಿಡುಗಡೆ ಮಾಡಿಲ್ಲ. ಶಾಸನ ಸಭೆಯಲ್ಲಿ ಆರೋಪಗಳ ಕುರಿತು ಎರಡು ದಿನ ಚರ್ಚೆಗೆ ನಾವು ಸಿದ್ಧರಿದ್ದೆವು. ಆದರೆ ಅವರು ಫಲಾಯನವಾದ ಅನುಸರಿಸಿದರು. ಬಸವರಾಜು ಬೊಮ್ಮಾಯಿ ಅವರ ಅನುಭವ ನನ್ನ ವಯಸ್ಸಿಗಿಂತಲೂ ಹೆಚ್ಚಿದೆ. ನನ್ನಂತಹ ಕಿರಿಯರಿಂದ ಅವರು ಹೇಳಿಸಿಕೊಳ್ಳಬಾರದು, ಆರೋಪ ಮಾಡುವಾಗ ಗಟ್ಟಿತನ ಇರಬೇಕು, ಗಾಳಿಯಲ್ಲಿ ಗುಂಡು ಹಾರಿಸಬಾರದು, ಯಾವುದೇ ದಾಖಲೆ ಇದ್ದರೂ ತನಿಖೆ ನಡೆಸಲು ನಾವು ಸಿದ್ಧ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ಕುರಿತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ನಿರಾಧಾರ. ಹಾಗೆಯೇ ಸರ್ಕಾರ ಪತನವಾಗಲಿದೆ ಎಂಬ ಅವರ ಹೇಳಿಕೆಯೂ ಪ್ರಜಾಪ್ರಭುತ್ವ ವಿರೋಯಾಗಿದೆ.

ಚುನಾಯಿತ ಸರ್ಕಾರವನ್ನು ಪತನಗೊಳಿಸುವ ಸಲುವಾಗಿಯೇ ಕುಮಾರಸ್ವಾಮಿ ದೆಹಲಿಗೆ ಹೋಗಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ ಎನ್ನಿಸುತ್ತಿದೆ. ಕೇಂದ್ರ ಸರ್ಕಾರ ತನ್ನ ಬಳಿ ಇರುವ ಸಿಬಿಐ, ಇಡಿ ಯಂತಹ ಸಂಸ್ಥೆಗಳನ್ನು ಛೂಬಿಟ್ಟು ಬ್ಲಾಕ್ಮೇಲ್ ಮಾಡಬೇಕು ಅಥವಾ ಕುದುರೆ ವ್ಯಾಪಾರ ಮಾಡಿ ಶಾಸಕರನ್ನು ಖರೀದಿಸಬೇಕು. ಇದನ್ನು ಹೊರತುಪಡಿಸಿದರೆ ಇನ್ನಾವ ಮಾರ್ಗದಲ್ಲಿ ಸರ್ಕಾರ ಪತನ ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.

ಜಾತ್ಯತೀತ ತತ್ವ ಎಂದು ಹೇಳುತ್ತಿದ್ದ ಜೆಡಿಎಸ್ನವರು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಅನಿವಾರ್ಯತೆ ಇದ್ದು, ಅಧಿಕಾರ ದಾಹದಿಂದ ಸಂವಿಧಾನದ ಆಶಯಗಳನ್ನು ತೂರಿ ಬಿಜೆಪಿ ತಾಳಕ್ಕೆ ಕುಣಿಯುತ್ತಿದೆ ಎಂದು ನೇರವಾಗಿ ಹೇಳಲಿ ಎಂದು ಸವಾಲು ಹಾಕಿದರು.