Home Blog Page 1932

ಕರ್ನಾಟಕ ಬಂದ್‍ಗೆ ಹುಬ್ಬಳ್ಳಿಯಲ್ಲಿ ಮಿಶ್ರಪ್ರತಿಕ್ರಿಯೆ

ಹುಬ್ಬಳ್ಳಿ,ಸೆ,29-ಕಾವೇರಿ ವಿಚಾರವಾಗಿ ವಿವಿಧ ಕನ್ನಡ ಪರ ಹಾಗೂ ರೈತ ಪರ ಸಂಘಟನೆ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಿಗ್ಗೆಯಿಂದಲೇ ಬಂದ್ ಹಿನ್ನಲೆಯಲ್ಲಿ ಪೊಲೀಸರು ಬಿಗಿ ಭಧ್ರತೆ ಮಾಡಿದ್ದರು,ಕೆಲ ಶಾಲೆಗಳು ರಜೆ ನೀಡದ ಕಾರಣ ಸಾರಿಗೆ ಬಸ್ ವ್ಯವಸ್ಥೆ ಮಾಡಲಾಗಿತ್ತು ಕೆಲವೆಡೆ ಮಳಿಗೆಗಳು ಮುಚ್ಚಿದ್ದರೆ ಮಾರುಕಟ್ಟೆ ತೆರೆದಿತ್ತು.

ತಮಿಳುನಾಡಿಗೆ ಕದ್ದು ಮುಚ್ಚಿ ಕಾವೇರಿ ಹರಿಸುತ್ತಿರುವ ಸರ್ಕಾರದ ವಿರುಧ್ದ ವಾಟಾಳ್ ಕೆಂಡ

ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿತು ನಗರದ ಹೊಸೂರು ಸರ್ಕಲ್ ಬಳಿ ಸಮಗ್ರ ಕರ್ನಾಟಕ ಸೇನೆ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ಆರಂಭಿಸಿ ಚೆನ್ನಮ್ಮ ಸರ್ಕಲ್ ವರೆಗೂ ನಡೆದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು ಕಾವೇರಿ ನಮ್ಮದು, ಕಾವೇರಿ ನಮ್ಮದು ಎಂದು ಘೋಷಣೆ ಕೂಗಿ ಕೆಲ ಕಾಲ ರಸ್ತೆ ತಡೆ ನಡೆಸಿದರು.

ಪ್ರತಿಭಟನಾಕಾರರು ವಶಕ್ಕೆ:
ಹುಬ್ಬಳ್ಳಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸುತಿದ್ದ ಕನ್ನಡಪರ ಸಂಘಟನೆ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ತೆಗೆದುಕೊಂಡರು.ತಮಿಳುನಾಡು ಸಿಎಂ ಸ್ಟಾಲಿನ್ ಭಾವಚಿತ್ರ ತುಳಿದು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.ಸ್ಟಾಲಿನ್ ದಿಕ್ಕಾರ ಕೂಗಿದರು.

ಈ ನಡುವೆ ಪೊಲೀಸರು ಕಾರ್ಯಕರ್ಯರನ್ನು ವಶಕ್ಕೆ ಪೊಲೀಸರು ನಂತರ ಹೊಸ ಸಿಎಆರ್ ಹಳೆ ಮೈದಾನಕ್ಕೆ ಕರೆದುಕೊಂಡು ಹೋದರು

ಬೀದರ್ : ಭಾರಿ ಮಳೆಗೆ ಗೋಡೆ ಕುಸಿದು ಬಾಲಕಿ ಸಾವು

ಬೀದರ್,ಸೆ.29- ಜಿಲ್ಲೆಯಾದ್ಯಂತ ಸುರಿದ ಭಾರಿ ಮಳೆಯಿಂದಾಗಿ ಭಾಲ್ಕಿ ತಾಲೂಕಿನ ಬಾಜೋಳಗಾ ಗ್ರಾಮದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಗೋಡೆ ಕುಸಿದು ಬಾಲಕಿಯೊಬ್ಬಳು ಸಾವನ್ನಪ್ಪಿದ್ದಾಳೆ.

ಸಂಧ್ಯಾರಾಣಿ ಸಂಜೀವಕುಮಾರ ಕಾಂಬಳೆ (8) ಮೃತ ದುರ್ದೈವಿ. ತಹಸೀಲ್ದಾರ್ ಸೇರಿದಂತೆ ಇತರ ಅಧಿಕಾರಿಗಳು ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ, ಸಿಎಂ ಮನೆ ಮೇಲೆ ದಾಳಿಗೆ ಯತ್ನ

ಮೃತ ಸಂಧ್ಯಾರಾಣಿ ಕುಟುಂಬಕ್ಕೆ ಸರ್ಕಾರದ ವತಿಯಿಂದ ಆದಷ್ಟು ಬೇಗ ಪರಿಹಾರ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ., ಜಿಲ್ಲೆಯ ಹಲವಾರು ತಾಲೂಕುಗಳಲ್ಲಿ ಭರಿ ಮಳೆಯಾಗಿದೆ ಹಲವೆಡೆ ರಸ್ತೆ ಬದಿಯ ಅಂಗಡಿ ಮುಂಗಟ್ಟುಗಳಿಗೆ ಮಳೆ ನೀರು ನುಗ್ಗಿ ಅಪಾರ ಹಾನಿಯುಂಟಾಗಿದೆ.

ಮೋದಿಜಿಯವರೇ, ಕರ್ನಾಟಕ ಇರೋದು ರೋಡ್ ಶೋ ನಡೆಸಲು ಮಾತ್ರನಾ..?

ಬೆಂಗಳೂರು, ಸೆ.29- ಕೇಂದ್ರದಿಂದ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದ್ದರೂ, ಸಂಸದರು ಮೌನವಹಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರ್ನಾಟಕ ರೋಡ್ ಶೋ ನಡೆಸಲು ಮಾತ್ರ ಇದೆ ಎಂದು ಭಾವಿಸಿದ್ದಾರೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಎಸಗಿದ ಅನ್ಯಾಯ ಒಂದೆರಡಲ್ಲ ಎಂದು ಎಂದಿರುವ ಕಾಂಗ್ರೆಸ್, ನೆರೆ ಪರಿಹಾರದಲ್ಲೂ ಅನ್ಯಾಯ, ಬರ ಪರಿಹಾರದಲ್ಲೂ ಅನ್ಯಾಯ, ಜಿಎಸ್‍ಟಿ ಹಂಚಿಕೆಯಲ್ಲೂ ಅನ್ಯಾಯ, ಕೇಂದ್ರದ ಯೋಜನೆಗಳ ಅನುದಾನದಲ್ಲೂ ಅನ್ಯಾಯ, ಈಗ ಕಾವೇರಿ ವಿಚಾರದಲ್ಲೂ ಅನ್ಯಾಯ ಮಾಡಿದೆ ಎಂದು ಆರೋಪಿಸಿದೆ.

ತಮಿಳುನಾಡಿಗೆ ಕದ್ದು ಮುಚ್ಚಿ ಕಾವೇರಿ ಹರಿಸುತ್ತಿರುವ ಸರ್ಕಾರದ ವಿರುಧ್ದ ವಾಟಾಳ್ ಕೆಂಡ

ಈ ಎಲ್ಲಾ ಅನ್ಯಾಯಕ್ಕೂ ಕರ್ನಾಟಕದ ಬಿಜೆಪಿಯ ಸಂಸದರದ್ದು ಮೌನ ಮಾತ್ರ. ಕರ್ನಾಟಕ ಇರುವುದು ಚುನಾವಣಾ ರೋಡ್ ಶೋ ಮಾಡಲು ಮಾತ್ರ ಎಂದು ನರೇಂದ್ರ ಮೋದಿ ತಿಳಿದಿದ್ದಾರಾ ಎಂದು ಪ್ರಶ್ನಿಸಲಾಗಿದೆ.

ಕರ್ನಾಟಕ ಬಂದ್ : ಸಿಎಂ ನಿವಾಸಕ್ಕೆ ಬಿಗಿ ಭದ್ರತೆ

ಬೆಂಗಳೂರು, ಸೆ.29- ಕಾವೇರಿ ಕಿಚ್ಚು ಹೆಚ್ಚಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿ ಹಾಗೂ ಗೃಹ ಕಚೇರಿ ಕೃಷ್ಣಗೆ ಬಿಗಿ ಭದ್ರತೆ ಒದಗಿಸಲಾಗಿತ್ತು. ಕನ್ನಡಪರ ಸಂಘಟನೆಗಳ ಒಕ್ಕೂಟ ಕರೆ ನೀಡಿದ್ದ ಬಂದ್ ಹಿನ್ನೆಲೆಯಲ್ಲಿ ಕಾರ್ಯಕರ್ತರು ಮುಖ್ಯಮಂತ್ರಿ ಕಚೇರಿ ಹಾಗೂ ನಿವಾಸದ ಎದುರು ಪ್ರತಿಭಟನೆ ನಡೆಸಬಹುದು ಎಂಬ ಹಿನ್ನೆಲೆಯಲ್ಲಿ ಮುಂಜಾಗೃತೆ ವಹಿಸಲಾಗಿತ್ತು.

ನಾಲ್ಕಕ್ಕೂ ಹೆಚ್ಚು ಬಿಎಂಟಿಸಿ ಬಸ್‍ಗಳು ಹಾಗೂ ಪೊಲೀಸ್ ವ್ಯಾನ್‍ಗಳನ್ನು ಮುಖ್ಯಮಂತ್ರಿ ಮನೆ ಎದುರು ಕಾಯ್ದಿರಿಸಲಾಗಿತ್ತು. ಅನಿರೀಕ್ಷಿತವಾಗಿ ನುಗ್ಗುವ ಕಾರ್ಯಕರ್ತರನ್ನು ನಿರ್ಬಂಧಿಸಲು ಮತ್ತು ಅವರನ್ನು ವಶಕ್ಕೆ ತೆಗೆದುಕೊಳ್ಳಲು ಅನುಕೂಲವಾಗುವಂತೆ ಅಗತ್ಯ ಪೊಲೀಸ್ ಸಿಬ್ಬಂದಿ ಮತ್ತು ವಾಹನ ವ್ಯವಸ್ಥೆಗಳನ್ನು ಸಿದ್ಧವಾಗಿಟ್ಟುಕೊಳ್ಳಲಾತ್ತು.

ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ, ಸಿಎಂ ಮನೆ ಮೇಲೆ ದಾಳಿಗೆ ಯತ್ನ

ಈ ಮೊದಲು ಸೆ.26ರಂದು ಬೆಂಗಳೂರು ಬಂದ್ ನಡೆಸಿದ್ದ ಕಬ್ಬುಬೆಳೆಗಾರರ ಸಂಘ ಹಾಗೂ ಇತರ ಕೆಲ ಸಂಘಟನೆಗಳ ಮುಖಂಡರು ತಮ್ಮ ಬೇಡಿಕೆ ಈಡೇರಿಕೆಗೆ ರಾಜ್ಯ ಸರ್ಕಾರಕ್ಕೆ ಮೂರು ದಿನಗಳ ಗಡುವು ನೀಡಿದ್ದವು.

ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ತಕ್ಷಣವೇ ನಿಲ್ಲಸಬೇಕು ಎಂಬ ಪ್ರಮುಖ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಸಂಘಟನೆಗಳು ಇಂದು ಮುಖ್ಯಮಂತ್ರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿವೆ. ಈ ಹಿನ್ನೆಲೆಯಲ್ಲಿ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿತ್ತು. ಮುಖ್ಯಮಂತ್ರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ನಿಯೋಗದ ಜೊತೆಗೆ ಮುಖ್ಯಮಂತ್ರಿ ಮಧ್ಯಾಹ್ನ ಮಾತುಕತೆ ನಡೆಸಲಿದ್ದಾರೆ.

ತಮಿಳುನಾಡಿಗೆ ಕದ್ದು ಮುಚ್ಚಿ ಕಾವೇರಿ ಹರಿಸುತ್ತಿರುವ ಸರ್ಕಾರದ ವಿರುಧ್ದ ವಾಟಾಳ್ ಕೆಂಡ

ಬೆಂಗಳೂರು,ಸೆ.29- ರಾಜ್ಯ ಸರ್ಕಾರ ಜನರನ್ನು ಕತ್ತಲಿಟ್ಟು ಕದ್ದು ಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿದೆ ಎಂದು ಕನ್ನಡ ಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಆರೋಪಿಸಿದ್ದಾರೆ.ಕರ್ನಾಟಕ ಬಂದ್ ಬಂದ್ ಸಂದರ್ಭದಲ್ಲಿ ಬುರ್ಕಾ ಧರಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅವರು, ರಾಜ್ಯ ಸರ್ಕಾರದ ಅಸಹಕಾರ, ಪೊಲೀಸರ ವಿರೋಧದ ನಡುವೆಯೂ ಕನ್ನಡಪರ ಸಂಘಟನೆಗಳ ಒಕ್ಕೂಟ ಕರೆ ನೀಡಿದ್ದ ಕರ್ನಾಟಕ ಬಂದ್ ಯಶಸ್ವಿಯಾಗಿದೆ. ದೇಶಕ್ಕೆ ನಮ್ಮ ಶಕ್ತಿ ಪ್ರದರ್ಶನವಾಗಿದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ 50 ಸಾವಿರ, ರಾಜ್ಯಾದ್ಯಂತ ಲಕ್ಷಾಂತರ ಪೊಲೀಸರನ್ನು ನಿಯೋಜಿಸಿ ರಾಜ್ಯ ಸರ್ಕಾರ ಹೋರಾಟಗಾರರನ್ನು ಬಂದ್ ಮಾಡಿದೆ. ನಾವು ಕಾವೇರಿಗಾಗಿ ಕರ್ನಾಟಕ ಬಂದ್ ಮಾಡಿದ್ದೇವೆ. ಸರ್ಕಾರ ನಮ್ಮನ್ನೆ ಬಂದ್ ಮಾಡಿದೆ. ತಮಿಳುನಾಡಿನಲ್ಲಿ ಪೊಲೀಸರು ರಸ್ತೆ ತಡೆ ಅವರ ರಾಜ್ಯ ಪರವಾಗಿ ನಿಂತಿದ್ದಾರೆ. ಕರ್ನಾಟಕದಲ್ಲಿ ಪೊಲೀಸರು ಹೋರಾಟಗಾರರನ್ನೇ ಬಂಸುತ್ತಿದ್ದಾರೆ. ಇದು ನೋವಿನ ಸಂಗತಿ. ಹೋರಾಟದ ಹಿನ್ನೆಲೆಯಲ್ಲಿ ಇರುವ ಶಿವರಾಮೇಗೌಡ, ಪ್ರವೀಣ್ ಶೆಟ್ಟಿ ಸೇರಿದಂತೆ ಅನೇಕರನ್ನು ಕಾರಣ ಇಲ್ಲದೆ ಬಂಸಲಾಗಿದೆ ಎಂದು ವಾಗ್ದಾಳಿ ನಡೆಸಿದರು.

ಕೆಂಪೇಗೌಡ ವಿಮಾನ ನಿಲ್ದಾಣಕ್ಕೂ ತಟ್ಟಿದ ಕರ್ನಾಟಕ ಬಂದ್ ಬಿಸಿ

ಕನ್ನಡ ಪರ ಸಂಘಟನೆಗಳು ಟೌನ್ ಹಾಲ್‍ನಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ್ದರೆ ರಾಜ್ಯ ಸರ್ಕಾರಕ್ಕೆ ಏನು ತೊಂದರೆಯಾಗುತ್ತಿತ್ತು. ಆದರೆ ನಿಷೇಧಾಜ್ಞೆ ಜಾರಿಗೆ ತಂದು ಅಡ್ಡಿ ಪಡಿಸಲಾಗಿದೆ. ಟೌನ್‍ಹಾಲ್‍ನಿಂದ ಶಾಂತಿಯುತವಾಗಿ ಮೆರವಣಿಗೆ ನಡೆಸಿದ್ದರೆ ಸರ್ಕಾರದ ಮಡಿ ಹಾಳಾಗುತ್ತಿತ್ತೆ. ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ಮಾಡಿದರೆ ಮೈಲಿಗೆಯಾಗುವುದಿಲ್ಲವೇ. ಈ ದ್ವಿಮುಖ ನೀತಿ ಏಕೆ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಏನು ಬೇಕಾದರೂ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಶ್ವಸಂಸ್ಥೆ ಪರವಾನಗಿ ನೀಡಿದೆಯೇ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.

ರಾಜ್ಯ ಸರ್ಕಾರದ ಸಚಿವರು ಪಾಳೇಗಾರರಂತೆ ವರ್ತಿಸುತ್ತಿದ್ದಾರೆ. ಗೃಹ ಸಚಿವ ಪರಮೇಶ್ವರ್ ಯಾವತ್ತೂ ಹೋರಾಟ ಮಾಡಿಲ್ಲ. ಅವರಿಗೆ ಪ್ರತಿಭಟನೆಗಳ ಹಿನ್ನೆಲೆ ಗೋತ್ತಿಲ್ಲ. ಅದಕ್ಕಾಗಿ ಬಂದ್‍ಗೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ. ಮತ್ತೊಂದೆಡೆ ಶಿವನ ಪುತ್ರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡ ಕರುಣೆ ತೋರಿಸಲಿಲ್ಲ. ಕನಿಷ್ಠ ಸಿದ್ದರಾಮೇಶ್ವರನೂ ದಾರಿ ತೋರಿಸಲಿಲ್ಲ. ಸಿದ್ಧರಾಮೇಶ್ವರ ನಿಮ್ಮನ್ನು ನಾವು ಎಷ್ಟು ನೆನಪಿಸಿಕೊಳ್ಳುತ್ತೇವೆ. ನಿಮ್ಮ ಕಣ್ಣಿಗೆ ನಾವು ಬೀಳಲೇ ಇಲ್ಲವೇ ಎಂದು ನಾಟಕೀಯವಾಗಿ ಆಕ್ಷೇಪ ವ್ಯಕ್ತಪಡಿಸಿದರು.

ಮುಸ್ಲಿಂ ಮಹಿಳೆಯರು ಧರಿಸುವ ಬುರ್ಕಾ ಧರಿಸಿ ಇಂದು ತಾವು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ಇದು ಮಹಿಳೆಯರ ಪಾಲ್ಗೋಳ್ಳುವಿಕೆ ಮತ್ತು ನ್ಯಾಯದ ಸಂದೇಶ ಸಂದೇಶವಾಗಿದೆ. ಮಹಿಳೆಯರಿಗೆ ಶಾಸನ ಸಭೆಯಲ್ಲಿ ಶೇ.33ರಷ್ಟು ಮೀಸಲಾತಿ ನೀಡುವ ಕಾಯ್ದೆ ಸಂಸತ್‍ನಲ್ಲಿ ಅಂಗೀಕಾರಗೊಂಡಿದೆ. ಅದಕ್ಕಾಗಿ ಮಹಿಳೆಯರಿಗೆ ಆದ್ಯತೆ ನೀಡುವ ಅಗತ್ಯವಿದೆ. ರಾಜ್ಯ ಸರ್ಕಾರ ಕನ್ನಡಿಗರನ್ನು ಕತ್ತಲಿನಲ್ಲಿಟ್ಟು ತಮಿಳುನಾಡಿಗೆ ನೀರು ಬೀಡುತ್ತಿದೆ ಎಂಬುದರ ಆಕ್ರೋಶವೂ ಇದರಲ್ಲಿ ಅಡಗಿದೆ ಎಂದರು.

ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ, ಸಿಎಂ ಮನೆ ಮೇಲೆ ದಾಳಿಗೆ ಯತ್ನ

ಇಂಫಾಲ,ಸೆ.29- ಮಣಿಪುರದಲ್ಲಿ ಪ್ರತಿಭಟನೆಗಳು ತೀವ್ರಗೊಳ್ಳುತ್ತಿದ್ದು, ಕಫ್ರ್ಯೂ ಉಲ್ಲಂಘನೆ ಮಾಡಿ ಸಿಎಂ ಮನೆ ಮೇಲೆ ದಾಳಿಗೆ ಗುಂಪೊಂದು ಯತ್ನಿಸಿದೆ. ಆದರೆ,ಭದ್ರತಾ ಪಡೆಗಳು ಈ ಯತ್ನವನ್ನು ವಿಫಲಗೊಳಿಸಿವೆ.ಇಂಫಾಲದಲ್ಲಿರುವ ಸಿಎಂ ಬಿರೇನ್ ಸಿಂಗ್ ಅವರ ಪೂರ್ವಜರ ಮನೆ ಮೇಲೆ ದಾಳಿ ಯತ್ನ ನಡೆದಿದ್ದು, ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಅಧಿಕಾರಿಗಳು ಯತ್ನವನ್ನು ವಿಫಲಗೊಳಿಸಿದ್ದಾರೆ.

ಘಟನೆ ನಡೆದಾಗ ಸಿಎಂ ತಮ್ಮ ಗೃಹ ಕಚೇರಿಯಲ್ಲಿದ್ದರು. ಮನೆಯಿಂದ 100-150 ಮೀಟರ್ ದೂರದಲ್ಲೇ ಭದ್ರತಾ ಪಡೆಗಳು ಗುಂಪನ್ನು ತಡೆದಿದೆ. ಗುಂಪನ್ನು ಚದುರಿಸಲು ರಾಜ್ಯ ಪೊಲೀಸ್ ಸಿಬ್ಬಂದಿ ಹಾಗೂ ಆರ್ ಎಫ್ ಅಶ್ರುವಾಯುವನ್ನು ಪ್ರಯೋಗಿಸಿದ್ದಾರೆ.

ಏಷ್ಯನ್ ಕ್ರೀಡಾಕೂಟದಲ್ಲಿ ಭಾರತೀಯರ ಪದಕಗಳ ಬೇಟಿಯಾಡಿದ ಶೂಟರ್‌ಗಳು

ಅಧಿಕಾರಿಗಳು ಇಡೀ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಿದ್ದರು. ಮನೆಯ ಬಳಿ ಹಿಂದಿನ ಬ್ಯಾರಿಕೇಡ್ಗಳಿಗೆ ಹೆಚ್ಚಿನ ಬ್ಯಾರಿಕೇಡ್‍ಗಳನ್ನು ನಿಯೋಜಿಸಲಾಯಿತು. ಪ್ರತಿಭಟನಾಕಾರರು ರಸ್ತೆಯ ಮಧ್ಯದಲ್ಲಿ ಟೈರ್‍ಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

ಮಣಿಪುರದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಸಿದಂತೆ ಮಣಿಪುರದಲ್ಲಿ ಪ್ರತಿಭಟನೆಗಳು ತೋವ್ರಗೊಂಡಿದೆ. ಇದಕ್ಕೂ ಮುನ್ನ ಇಂಫಾಲದ ಪಶ್ಚಿಮ ಜಿಲ್ಲೆಯಲ್ಲಿ ಡಿಸಿ ಕಚೇರಿಯನ್ನು ಪ್ರತಿಭಟನಾನಿರತರು ಧ್ವಂಸಗೊಳಿಸಿ, ವಾಹನಗಳಿಗೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು.

ಏಷ್ಯನ್ ಕ್ರೀಡಾಕೂಟದಲ್ಲಿ ಭಾರತೀಯರ ಪದಕಗಳ ಬೇಟಿಯಾಡಿದ ಶೂಟರ್‌ಗಳು

ಹ್ಯಾಂಗ್ಝೌ,ಸೆ.29-ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ 2023 ಏಷ್ಯನ್ ಕ್ರೀಡಾಕೂಟದ ಪುರುಷರ 50 ಮೀ ರೈಫಲ್ ತಂಡದ ಸ್ಪರ್ಧೆಯಲ್ಲಿ ಭಾರತೀಯ ತಂಡವು ಅಗ್ರಸ್ಥಾನ ಪಡೆದು ಚಿನ್ನದ ಪದಕಕ್ಕೆ ಕೊರಳೊಡ್ಡಿದೆ. ಐಶ್ವರಿ ಪ್ರತಾಪ್ ಸಿಂಗ್ ತೋಮರ್, ಸ್ವಪ್ನಿಲ್ ಕುಸಾಲೆ ಮತ್ತು ಅಖಿಲ್ ಶೆಯೋರಾನ್ ಅವರ 50 ಮೀಟರ್ ರೈಫಲ್ 3ಕೆ ಪುರುಷರ ಭಾರತ ತಂಡವು ಚಿನ್ನದ ಪದಕವನ್ನು ಗೆದ್ದುಕೊಂಡಿತು.

2023ರ ಏಷ್ಯನ್ ಗೇಮ್ಸ್‍ನಲ್ಲಿ ಭಾರತಕ್ಕೆ ಶೂಟಿಂಗ್‍ನಲ್ಲಿ ಇದು 15ನೇ ಪದಕ ಮತ್ತು 7ನೇ ಚಿನ್ನವಾಗಿದೆ. ಭಾರತವು 1769 ಅಂಕಗಳ ಗಮನಾರ್ಹ ಅಂಕಗಳಿಸಿತು, ಕಳೆದ ವರ್ಷ ಪೆರುವಿನಲ್ಲಿ ಯುಎಸ್‍ಎನ ಹಿಂದಿನ ದಾಖಲೆಯನ್ನು 8 ಅಂಕಗಳಿಂದ ಮೀರಿಸಿದೆ.

ಈ ನಡುವೆ ಇಶಾ ಸಿಂಗ್, ಪಾಲಕ್ ಮತ್ತು ದಿವ್ಯಾ ಸೇರಿ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಒಟ್ಟು 1731 ಅಂಕ ಗಳಿಸಿದ್ದು, ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ. ಚೀನಾ 1736 ಅಂಕಗಳೊಂದಿಗೆ ಚಿನ್ನ ಪಡೆದುಕೊಂಡಿದೆ.

ಮನೆಯಲ್ಲಿ ಪಾಕ್ ಧ್ವಜ ಹಾರಿಸಿದ ತಂದೆ-ಮಗ ಅಂದರ್

ಗ್ರೂಪ್ ವಿಭಾಗದಲ್ಲಿ ಬೆಳ್ಳಿ ಪದಕ ಜಯಿಸುವುದರೊಂದಿಗೆ ಇಶಾ ಮತ್ತು ಪಾಲಕ್ ವೈಯಕ್ತಿಕ ಸ್ಪರ್ಧೆಯಲ್ಲೂ ಫೈನಲ್ ತಲುಪಿದ್ದಾರೆ. 10 ವರ್ಷದ ಇಶಾ ಸಿಂಗ್ ಈಗ ಏಷ್ಯನ್ ಗೇಮ್ಸ್ 2023 ರಲ್ಲಿ ತನ್ನ ನಾಲ್ಕನೇ ಪದಕ ಗೆಲ್ಲುವ ಅವಕಾಶವನ್ನು ಹೊಂದಿದ್ದಾರೆ. ಈ ಹಿಂದೆ 25 ಮೀಟರ್ ಪಿಸ್ತೂಲ್ ಟೀಮ್ ವಿಭಾಗದಲ್ಲಿ ಚಿನ್ನ ಹಾಗೂ ವೈಯಕ್ತಿಕ ವಿಭಾಗದಲ್ಲಿ ಬೆಳ್ಳಿ ಗೆದ್ದಿದ್ದರು.

ಪ್ರಧಾನಿ ಮೋದಿ ಅಭಿನಂದನೆ :ಚೀನಾದ ಹ್ಯಾಂಗ್‍ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2023ರಲ್ಲಿ ಶೂಟಿಂಗ್ ನಲ್ಲಿ ಬೆಳ್ಳಿ ಪದಕ ಗೆದ್ದ ವನಿತೆಯರ ತಂಡವನ್ನು ಪ್ರಧಾನಿ ಮೋದಿಯವರು ಶ್ಲಾಘಿಸಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್‍ನಲ್ಲಿ ಟ್ವೀಟ್ ಮಾಡಿರುವ ಮೋದಿಯವರು, ಏಷ್ಯನ್ ಗೇಮ್ಸ್ ನಲ್ಲಿ ಶೂಟಿಂಗ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಬಂದಿದೆ. 10 ಮೀಟರ್ ಏರ್ ಪಿಸ್ತೂಲ್ ಮಹಿಳಾ ತಂಡ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ದಿವ್ಯಾ ತಾಡಿಗೋಳ್, ಇಶಾ ಸಿಂಗ್ ಮತ್ತು ಪಾಲಕ್ ಅವರಿಗೆ ಅಭಿನಂದನೆಗಳು.

ಅವರ ಮುಂದಿನ ಪ್ರಯತ್ನಗಳಿಗೆ ಶುಭ ಕೋರುತ್ತಿದ್ದೇನೆ. ಅವರ ಯಶಸ್ಸು ಮುಂಬರುವ ಹಲವಾರು ಕ್ರೀಡಾ ಪಟುಗಳಿಗೆ ಪ್ರೇರಣೆ ನೀಡಲಿದೆ ಎಂದು ಹೇಳಿದ್ದಾರೆ.ಮತ್ತೊಂದು ಟ್ವೀಟ್‍ನಲ್ಲಿ ಪುರುಷರ 50 ಮೀ ರೈಫಲ್ ತಂಡದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಭಾರತದ ತಂಡವನ್ನು ಶ್ಲಾಘಿಸಿದ್ದಾರೆ.

ಇದು ಅದ್ಭುತ ಗೆಲುವು, ಪ್ರತಿಷ್ಠಿತ ಮತ್ತು ವಿಶ್ವ ದಾಖಲೆಯಾಗಿದೆ. ಏಷ್ಯನ್ ಗೇಮ್ಸ್‍ನಲ್ಲಿ ಪುರುಷರ 50 ಮೀಟರ್ ರೈಫಲ್ 3ಕೆ ಟೀಮ್ ಈವೆಂಟ್‍ನಲ್ಲಿ ಗೆಲುವು ಸಾಸಿದ ಸ್ವಪ್ನಿಲ್ ಕುಸಾಲೆ, ಐಶ್ವರಿ ಪ್ರತಾಪ್ ಸಿಂಗ್ ತೋಮರ್ ಮತ್ತು ಅಖಿಲ್ ಶೆರಾನ್ ಅವರಿಗೆ ಅಭಿನಂದನೆಗಳು. ಅತ್ಯುತ್ತಮ ಪ್ರದರ್ಶನದ ಮೂಲಕ ಭಾರತದ ತಂಡ ಅಸಾಧಾರಣ ಸಂಕಲ್ಪ ಮತ್ತು ಟೀಮ್‍ವರ್ಕ್ ತೋರಿಸಿದೆ ಎಂದು ಹೇಳಿದ್ದಾರೆ

ಕೆಂಪೇಗೌಡ ವಿಮಾನ ನಿಲ್ದಾಣಕ್ಕೂ ತಟ್ಟಿದ ಕರ್ನಾಟಕ ಬಂದ್ ಬಿಸಿ

ಬೆಂಗಳೂರು,ಸೆ.29-ತಮಿಳುನಾಡಿಗೆ ಕಾವೇರಿ ನದಿಯಿಂದ ನೀರು ಹರಿಸುವುದನ್ನು ವಿರೋಸಿ ಕನ್ನಡ ಪರ ಸಂಘಟನೆಗಳು ಕರೆ ಕೊಟ್ಟಿದ್ದ ಆಖಂಡ ಕರ್ನಾಟಕ ಬಂದ್‍ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಬಿಸಿ ತಟ್ಟಿದೆ. ಪ್ರಯಾಣಿಕರು ಇಲ್ಲದ ಕಾರಣ ಬೆಂಗಳೂರಿಗೆ ಆಗಮಿಸುವ ಮತ್ತು ನಿರ್ಗಮಿಸುವ ಒಟ್ಟು 44 ವಿಮಾನಗಳನ್ನು ರದ್ದುಗೊಳಿಸಲಾಗಿದೆ.

ದೆಹಲಿ, ಮುಂಬೈ, ಕೊಲ್ಕತ್ತಾ ಮಂಗಳೂರು ಸೇರಿದಂತೆ ವಿವಿದೆಡೆಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ಒಟ್ಟು 22 ವಿಮಾನಗಳು ರದ್ದಾಗಿವೆ. ಇನ್ನು ಬೆಂಗಳೂರಿನಿಂದ ವಿವಿಧೆಡೆಗೆ ಹೋಗಬೇಕಿದ್ದ 22 ವಿಮಾನಗಳ ಹಾರಾಟ ಸ್ಥಗಿತಗೊಂಡಿದ್ದವು.

ಮನೆಯಲ್ಲಿ ಪಾಕ್ ಧ್ವಜ ಹಾರಿಸಿದ ತಂದೆ-ಮಗ ಅಂದರ್

ಇನ್ನು ಬೇರೆ ಬೇರೆ ಕಡೆಗಳಿಂದ ಬೆಂಗಳೂರಿಗೆ ಬರಬೇಕಿದ್ದ ವಿಮಾನಗಳು ಸಹ ರದ್ದಾಗಿದ್ದವು. ಕರ್ನಾಟಕ ಬಂದ್ ಸಂದರ್ಭದಲ್ಲಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದರೆ, ಅಲ್ಲಿಂದ ಬೇರೆ ಕಡೆ ಹೋಗಲು ಯಾವುದೇ ವಾಹನಗಳು ಇರುವುದಿಲ್ಲ ಎಂಬುದನ್ನು ಅರಿತ ಪ್ರಯಾಣಿಕರು ಬೆಂಗಳೂರು ಪ್ರವಾಸವನ್ನೂ ಸಹ ರದ್ದುಗೊಳಿಸಿದ್ದಾರೆ. ಇದರಿಂದ ಪ್ರಯಾಣಿಕರಿಲ್ಲದೇ ಒಟ್ಟು 44 ವಿಮಾನಗಳು ರದ್ದುಗೊಂಡಿವೆ.

ಬಂದ್‍ಗೆ ಕರೆ ಕೊಟ್ಟಿದ್ದರಿಂದ ಯಾರು ಇಂದಿನ ದಿನಕ್ಕೆ ವಿಮಾನದ ಟಿಕೆಟ್ ಬುಕ್ ಮಡಿಕೊಂಡಿರಲಿಲ್ಲ. ಇನ್ನೂ ಕೆಲವರು ಬುಕ್ ಮಾಡಿದ್ದರೂ ವಿಮಾನ ನಿಲ್ದಾಣಕ್ಕೆ ಹೋಗಲು ವಾಹನಗಳು ಇಲ್ಲದಿದ್ದರಿಂದ ಕೊನೆ ಕ್ಷಣದಲ್ಲಿ ವಿಮಾನದ ಟಿಕೆಟ್ ರದ್ದು ಮಾಡಿದ್ದಾರೆ ಎಂದು ಅಕಾರಿಗಳು ತಿಳಿಸಿದ್ದಾರೆ.

ಮನೆಯಲ್ಲಿ ಪಾಕ್ ಧ್ವಜ ಹಾರಿಸಿದ ತಂದೆ-ಮಗ ಅಂದರ್

ಲಖ್ನೋ,ಸೆ.29-ಉತ್ತರ ಪ್ರದೇಶದ ಮೊರಾದಾಬಾದ್‍ನ ಮನೆಯೊಂದರಲ್ಲಿ ಪಾಕಿಸ್ತಾನದ ಧ್ವಜ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಯೀಸ್ ಮತ್ತು ಅವರ ಮಗ ಸಲ್ಮಾನ್ ಅವರನ್ನು ಬಂಧಿಸಿದ್ದಾರೆ. ಈ ಕೃತ್ಯದ ಹಿಂದಿನ ಉದ್ದೇಶವೇನು ಎಂಬುದನ್ನು ತಿಳಿಯಲು ಪೊಲೀಸರು ಇಬ್ಬರನ್ನೂ ವಿಚಾರಣೆ ನಡೆಸುತ್ತಿದ್ದಾರೆ. ಮೊರಾದಾಬಾದ್‍ನ ಭಗತ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬುರ್ಹಾನ್ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಇಲ್ಲಿನ ಭಗತ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬುರ್ಹಾನ್ಪುರ ಗ್ರಾಮದಲ್ಲಿ ಬಟ್ಟೆ ಅಂಗಡಿ ನಡೆಸುತ್ತಿರುವ ರಯೀಸ್ ಮತ್ತು ಅವರ ಪುತ್ರ ಸಲ್ಮಾನ್, ಬಿಳಿ ಮತ್ತು ಹಸಿರು ಬಟ್ಟೆಯಿಂದ ಪಾಕಿಸ್ತಾನಿ ಧ್ವಜವನ್ನು ತಯಾರಿಸಿ ಮನೆಯ ಮೇಲ್ಛಾವಣಿಯ ಮೇಲೆ ಹಾಕಿದ್ದರು.

ಇದರಿಂದ ಈ ಪ್ರದೇಶದಲ್ಲಿ ಕೋಲಾಹಲ ಉಂಟಾಗಿತ್ತು. ಜನರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರು, ನಂತರ ಪೊಲೀಸರು ಸ್ಥಳಕ್ಕಾಗಮಿಸಿ, ಮನೆಯಲ್ಲಿದ್ದ ಪಾಕಿಸ್ತಾನಿ ಧ್ವಜವನ್ನು ತೆಗೆದುಹಾಕಿದ್ದಾರೆ ಮತ್ತು ಅವರ ಮನೆಯಲ್ಲಿ ಪಾಕಿಸ್ತಾನಿ ಧ್ವಜವನ್ನು ಹಾರಿಸಿರುವುದು ಪತ್ತೆಯಾಗಿದೆ.

6 ಮಂದಿ ನಿಫಾ ಸೋಂಕಿತರಲ್ಲಿ ಇಬ್ಬರ ಸಾವು, ನಾಲ್ವರು ಗುಣಮುಖ

ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸ್ ತಂಡ ಮನೆಯಲ್ಲಿ ಹಾರಾಡುತ್ತಿದ್ದ ಪಾಕಿಸ್ತಾನದ ಧ್ವಜವನ್ನು ಕೆಳಗಿಳಿಸಿ, ರಯೀಸ್ ಹಾಗೂ ಆತನ ಪುತ್ರ ಸಲ್ಮಾನ್ ನನ್ನು ಬಂಧಿಸಲಾಯಿತು.

ಈ ಪ್ರಕರಣದಲ್ಲಿ ಅವರ ವಿರುದ್ಧ ಭಗತ್ಪುರ ಪೊಲೀಸ್ ಠಾಣೆಯಲ್ಲಿ ಕಲಂ 153 ಎ ಮತ್ತು 153 ಬಿ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರೂ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಇಬ್ಬರೂ ಆರೋಪಿಗಳನ್ನು ಅವರ ಮನೆಯಲ್ಲಿ ಪಾಕಿಸ್ತಾನಿ ಧ್ವಜವನ್ನು ಹಾಕಲು ಕಾರಣವನ್ನು ಕೇಳಿದಾಗ ಯಾವುದೇ ಉತ್ತರವನ್ನು ನೀಡಿಲ್ಲ.

ಮೇಲ್ಛಾವಣಿಯ ಮೇಲೆ ಪಾಕಿಸ್ತಾನದ ಧ್ವಜವನ್ನು ಸ್ಥಾಪಿಸಿರುವುದನ್ನು ನೋಡಿ ಎಲ್ಲರೂ ಆಶ್ಚರ್ಯಚಕಿತರಾದರು ಮತ್ತು ಯಾರೋ ಒಬ್ಬರು ಪಾಕಿಸ್ತಾನಿ ಧ್ವಜದ ವೀಡಿಯೊವನ್ನು ಮಾಡಿದ್ದು, ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡಿದ್ದರು.

ಕರ್ನಾಟಕ ಬಂದ್ : KSRTC-BMTC ಬಸ್‍ಗಳಿದ್ದರೂ ಪ್ರಯಾಣಿಕರೇ ಇಲ್ಲ

ಬೆಂಗಳೂರು, ಸೆ.29- ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ವಿವಿಧ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆ ವಿರಳವಾಗಿತ್ತು. ಬಿಎಂಟಿಸಿ, ಕೆಎಸ್‍ಆರ್‍ಟಿಸಿ ಬಸ್‍ಗಳಲ್ಲಿ ಪ್ರಯಾಣಿಕರ ಸಂಖ್ಯೆ ಬೆರಳೆಣಿಕೆಯಷ್ಟು ಇದದ್ದು ಕಂಡು ಬಂದಿತು. ಕೆಂಪೇಗೌಡ ಬಸ್ ನಿಲ್ದಾಣ, ವಿಜಯನಗರ, ಜಯನಗರ, ಶಿವಾಜಿ ನಗರ, ಕಲಾಸಿಪಾಳ್ಯ, ಕೆಆರ್ ಮಾರುಕಟ್ಟೆ ಸೇರಿದಂತೆ ವಿವಿಧ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರು ವಿರಳವಾಗಿರುವುದು ಎದ್ದು ಕಾಣುತ್ತಿತ್ತು.

ಸದಾ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದ ಬಿಎಂಟಿಸಿ ಹಾಗೂ ಕೆಎಸ್‍ಆರ್‍ಟಿಸಿ ಬಸ್‍ಗಳಲ್ಲಿ ಆಸನೆಗಳೇ ಭರ್ತಿಯಾಗದಷ್ಟು ಪ್ರಯಾಣಿಕರಿದ್ದರು. ಬಂದ್ ಇದ್ದರೂ ಎಂದಿನಂತೆ ಬಿಎಂಟಿಸಿ, ಕೆಎಸ್‍ಆರ್‍ಟಿಸಿ ಬಸ್‍ಗಳ ಸೇವೆಯನ್ನು ಒದಗಿಸಲಾಗಿತ್ತು. ಶಾಲಾ- ಕಾಲೇಜುಗಳಿಗೆ ರಜೆ ನೀಡಿರುವುದು, ವಿವಿಧ ವಾಣಿಜ್ಯ ಸಂಸ್ಥೆಗಳು ಸ್ವಯಂ ಪ್ರೇರಿತವಾಗಿ ಮುಚ್ಚಿರುವುದರಿಂದ ಸಹಜವಾಗಿಯೇ ಪ್ರಯಾಣಿಕರ ಹೋರಾಟ ಕಡಿಮೆಯಾಗಿದೆ.

ವಾಹನಗಳ ದಟ್ಟಣೆಯಿಂದ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದ ಬೆಂಗಳೂರು ನಗರದ ಪ್ರಮುಖ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಸಾರಿಗೆ ಸಂಸ್ಥೆಯ ವಾಹನಗಳು ಹಾಗೂ ಕೆಲವು ಖಾಸಗಿ ವಾಹನಗಳು ಮಾತ್ರ ವಿರಳವಾಗಿ ಸಂಚರಿಸುತ್ತಿದ್ದು, ಎಲ್ಲೂ ಕೂಡ ಟ್ರಾಫಿಕ್ ಜಾಮ್ ಆದ ವರದಿಯಾಗಿಲ್ಲ.

6 ಮಂದಿ ನಿಫಾ ಸೋಂಕಿತರಲ್ಲಿ ಇಬ್ಬರ ಸಾವು, ನಾಲ್ವರು ಗುಣಮುಖ

ದೈನಂದಿನ ಬಸ್ ಸೇವೆಯಲ್ಲಿ ಯಾವುದೇ ರೀತಿಯ ಕಡಿತ ಮಾಡಿಲ್ಲ. ಎಂದಿನಂತೆ ಬಸ್‍ಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ. ಆದರೆ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆ ಅತ್ಯಂತ ಕಡಿಮೆ ಇದೆ ಎಂದು ಕೆಎಸ್‍ಆರ್‍ಟಿಸಿ ಮತ್ತು ಬಿಎಂಟಿಸಿ ಮೂಲಗಳು ತಿಳಿಸಿವೆ.
ಇಂದು ಬೆಳಗ್ಗೆ 9 ಗಂಟೆ ವೇಳೆಗೆ ಕೆಎಸ್‍ಆರ್‍ಟಿಸಿಯ 82 ಘಟಕಗಳಿಂದ 1948 ಕಾರ್ಯಾಚರಣೆ ಮಾಡಲಾಗಿತ್ತು. ಶೇ. 60ರಷ್ಟು ಬಸ್ ಸಂಚಾರ ಎಂದಿನಂತೆ ಇದೆ ಎಂದು ಕೆಸ್‍ಆರ್‍ಟಿಸಿ ಪ್ರಕಟಣೆ ತಿಳಿಸಿದೆ.