Home Blog Page 1941

ಆರ್‌ಬಿಐ ಡೆಪ್ಯುಟಿ ಗವರ್ನರ್ ಅವಧಿ ವಿಸ್ತರಣೆ

ನವದೆಹಲಿ,ಸೆ.26-ಭಾರತೀಯ ರಿಸರ್ವ್ ಬ್ಯಾಂಕ್ ಡೆಪ್ಯುಟಿ ಗವರ್ನರ್ ಎಂ ರಾಜೇಶ್ವರ್ ರಾವ್ ಅವರ ಅವಧಿಯನ್ನು ಸರಕಾರ ಸೋಮವಾರ ಒಂದು ವರ್ಷದ ಅವಧಿಗೆ ವಿಸ್ತರಿಸಿದೆ. ಅಕ್ಟೋಬರ್ 9, 2023 ರಿಂದ ಜಾರಿಗೆ ಬರುವಂತೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಡೆಪ್ಯುಟಿ ಗವರ್ನರ್ ಎಂ ರಾಜೇಶ್ವರ್ ರಾವ್ ಅವರನ್ನು ಒಂದು ವರ್ಷದ ಅವಧಿಗೆ ಮರು ನೇಮಕ ಮಾಡಲು ಸಂಪುಟದ ನೇಮಕಾತಿ ಸಮಿತಿಯು ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಅವರನ್ನು ಮೂರು ವರ್ಷಗಳ ಅವಧಿಗೆ ಅಕ್ಟೋಬರ್ 2020 ರಲ್ಲಿ RBI ಡೆಪ್ಯುಟಿ ಗವರ್ನರ್ ಆಗಿ ನೇಮಿಸಿಕೊಳ್ಳಲಾಗಿತ್ತು. ಕೊಚ್ಚಿನ್ ವಿಶ್ವವಿದ್ಯಾನಿಲಯದಿಂದ ಅರ್ಥಶಾಸ ಪದವೀಧರ ಮತ್ತು ಮಾಸ್ಟರ್ ಆಫ್ ಬ್ಯುಸಿನೆಸ್ ಅಡ್ಮಿನಿಸ್ಟ್ರೇಷನ್ ಪದವಿ ಪಡೆದಿರುವ ರಾವ್ ಅವರು 1984 ರಲ್ಲಿ ಕೇಂದ್ರೀಯ ಬ್ಯಾಂಕ್‍ಗೆ ಸೇರಿದ್ದರು. ವೃತ್ತಿಜೀವನದ ಕೇಂದ್ರ ಬ್ಯಾಂಕರ್ ಆಗಿ, ಅವರು ಕಾರ್ಯನಿರ್ವಹಣೆಯ ವಿವಿಧ ಅಂಶಗಳನ್ನು ಬಹಿರಂಗಪಡಿಸಿದ್ದಾರೆ. ಅವರು ಈ ಹಿಂದೆ ರಿಸ್ಕ್ ಮಾನಿಟರಿಂಗ್ ವಿಭಾಗದ ಉಸ್ತುವಾರಿ ವಹಿಸಿದ್ದರು.

ಬೆಂಗಳೂರು ಬಂದ್‍ಗೆ ಜೆಡಿಎಸ್ ಸಂಪೂರ್ಣ ಬೆಂಬಲ

ಅವರು ನವದೆಹಲಿಯಲ್ಲಿ ಬ್ಯಾಂಕಿಂಗ್ ಒಂಬುಡ್ಸ್‍ಮನ್ ಆಗಿ ಮತ್ತು ಅಹಮದಾಬಾದ್, ಹೈದರಾಬಾದ್, ಚೆನ್ನೈ ಮತ್ತು ರಾಷ್ಟ್ರ ರಾಜಧಾನಿಯಲ್ಲಿ ರಿಸರ್ವ್ ಬ್ಯಾಂಕ್‍ನ ಪ್ರಾದೇಶಿಕ ಕಚೇರಿಗಳಲ್ಲಿ ಕೆಲಸ ಮಾಡಿದ್ದಾರೆ. ಕಾಯಿದೆ 1934 ರ ಪ್ರಕಾರ, ಕೇಂದ್ರ ಬ್ಯಾಂಕ್ ನಾಲ್ಕು ಡೆಪ್ಯುಟಿ ಗವರ್ನರ್‍ಗಳನ್ನು ಹೊಂದಿರಬೇಕು — ಇಬ್ಬರು ಶ್ರೇಣಿಯೊಳಗಿನವರು, ಒಬ್ಬರು ವಾಣಿಜ್ಯ ಬ್ಯಾಂಕರ್ ಮತ್ತು ಇನ್ನೊಬ್ಬರು ಅರ್ಥಶಾಸಜ್ಞರು ವಿತ್ತೀಯ ನೀತಿ ವಿಭಾಗದ ಮುಖ್ಯಸ್ಥರಾಗಿರುತ್ತಾರೆ

ಬಾಲಕಿ ಅಪಹರಿಸಿ ಚಲಿಸುವ ವಾಹನದಲ್ಲಿ ಗ್ಯಾಂಗ್ ರೇಪ್ ಮಾಡಿದ್ದ ಅತ್ಯಾಚಾರಿಗಳು ಅರೆಸ್ಟ್

ಕುಶಿನಗರ,ಸೆ.26- ಉತ್ತರ ಪ್ರದೇಶದ ಕುಶಿನಗರದಲ್ಲಿ ಈ ತಿಂಗಳ ಆರಂಭದಲ್ಲಿ 16 ವರ್ಷದ ಬಾಲಕಿಯನ್ನು ಅಪಹರಿಸಿ ಚಲಿಸುವ ವಾಹನದಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿ ತಲೆಮರೆಸಿಕೊಂಡಿದ್ದ ಮೂವರು ಕಾಮುಕರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಗೋಶಾಲೆಯನ್ನು ಸ್ವಚ್ಛಗೊಳಿಸಲು ಅಪ್ರಾಪ್ತ ಬಾಲಕಿಯನ್ನು ಕರೆದು ನಂತರ ಸಾಮೂಹಿಕ ಅತ್ಯಾಚಾರ ನಡಸಿ ಪರಾರಿಯಾಗಿದ್ದ ಘಟನೆ ಕಳೆದ 9 ರಂದು ನಡೆದಿತ್ತು.

ಸಂತ್ರಸ್ಥೆ ನೆರೆಮನೆಯಾತ ಅತ್ಯಾಚಾರ ನಡೆಸಿದ ನಂತರ ಆತನ ಇಬ್ಬರು ಸಹಚರರು ಸ್ಥಳಕ್ಕೆ ಆಗಮಿಸಿ, ಆಕೆಯನ್ನು ಅಪಹರಿಸಿ, ಚಲಿಸುವ ವಾಹನದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದರು. ನಂತರ ಮೂವರು ಆರೋಪಿಗಳು ಆಕೆಯನ್ನು ಗೋಶಾಲೆಯ ಹೊರಗೆ ಬಿಸಾಡಿದ್ದರು. ಪ್ರಜ್ಞೆ ಮರಳಿದ ನಂತರ ಬಾಲಕಿ ಮನೆಗೆ ತಲುಪುವಲ್ಲಿ ಯಶಸ್ವಿಯಾದಳು ಮತ್ತು ತನ್ನ ಪೋಷಕರಿಗೆ ವಿಷಯ ತಿಳಿಸಿದ್ದಳು.

ಜನವರಿಯಲ್ಲಿ ರಾಮಮಂದಿರ ಲೋಕಾರ್ಪಣೆ

ಕಪ್ತಂಗಂಜ್ ಪೊಲೀಸ್ ಠಾಣೆಯು ಆರಂಭದಲ್ಲಿ FIR ದಾಖಲಿಸಲಿಲ್ಲ ಎಂದು ಅವರು ತಮ್ಮ ದೂರಿನಲ್ಲಿ ಹೇಳಿದ್ದಾರೆ. ಸಂತ್ರಸ್ತೆ ಮತ್ತು ಆಕೆಯ ಕುಟುಂಬ ಹಿರಿಯ ಅಧಿಕಾರಿಗಳನ್ನು ಸಹಾಯಕ್ಕಾಗಿ ತಲುಪಿದ ನಂತರವೇ ಅಧಿಕೃತ ದೂರು ದಾಖಲಿಸಲಾಗಿದೆ.

ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮೂವರು ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.ಮುಂಗಡ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಖುಷಿನಗರ ಜಿಲ್ಲಾ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮನಮೋಹನ್‍ಸಿಂಗ್ ಹುಟ್ಟುಹಬ್ಬಕ್ಕೆ ಶುಭ ಕೋರಿದ ಪ್ರಧಾನಿ ಮೋದಿ

ನವದೆಹಲಿ,ಸೆ.26- ಮಾಜಿ ಪ್ರಧಾನಿ ಮನಮೋಹನ್‍ಸಿಂಗ್ ಅವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 91ನೇ ಜನ್ಮದಿನದ ಶುಭಾಷಯ ಕೋರಿದ್ದಾರೆ. ಈಗ ಪಾಕಿಸ್ತಾನದ ಭಾಗವಾಗಿರುವ ಪ್ರದೇಶದಲ್ಲಿ 1932 ರಲ್ಲಿ ಜನಿಸಿದ ಮನಮೋಹನ್ ಸಿಂಗ್ 2004-14ರ ಅವಧಿಯಲ್ಲಿ ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು.

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಜಿ ಅವರಿಗೆ ಜನ್ಮದಿನದ ಶುಭಾಶಯಗಳು. ಅವರ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಮೋದಿ ಎಕ್ಸ್ ಮಾಡಿದ್ದಾರೆ.

ಸೆ.29 ರಂದು ಕರ್ನಾಟಕ ಬಂದ್ ಫಿಕ್ಸ್

1991-1996ರ ಅವಧಿಯಲ್ಲಿ ಆಗಿನ ಪ್ರಧಾನಿ ಪಿ ವಿ ನರಸಿಂಹ ರಾವ್ ನೇತೃತ್ವದ ಆಡಳಿತದಲ್ಲಿ ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ್ದ ಸಿಂಗ್ ಅವರು ಆರ್ಥಿಕ ಸುಧಾರಣೆಗಳ ಪ್ರಮುಖ ವಾಸ್ತುಶಿಲ್ಪಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಮಗಳಿಗೆ ರಬಿಯಾ ಎಂದು ಹೆಸರಿಟ್ಟ ನಟಿ ಸ್ವರಾ ಭಾಸ್ಕರ್

ಸಮಾಜವಾದಿ ಪಕ್ಷದ ನಾಯಕ ಫಹಾದ್ ಝಿರಾರ್ ಅಹ್ಮದ್ ಅವರೊಂದಿಗೆ ಕಳೆದ ಜನವರಿ 6 ರಂದು ಮದುವೆಯಾಗಿದ್ದ ಬಾಲಿವುಡ್​ ನಟಿ ಸ್ವರಾ ಭಾಸ್ಕರ್, ಇದೀಗ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ. ಸೆಪ್ಟೆಂಬರ್​ 23ರಂದು ಮಗುವಿಗೆ ಜನ್ಮ ನೀಡಿರುವ ಸ್ವರಾ ಅವರು ಈ ಖುಷಿಯ ವಿಷಯವನ್ನು ಮೂರು ದಿನಗಳ ಬಳಿಕ ಇನ್​ಸ್ಟಾಗ್ರಾಮ್​ನಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಈ ಜೋಡಿ ಈ ಹಿಂದೆ ದಿಢೀರ್​ ಆಗಿ ಈ ಬಗ್ಗೆ ಘೋಷಿಸಿತ್ತು. ಸ್ವರಾ ತಮ್ಮ ಪೋಷಕರೊಂದಿಗೆ ಹಾಜರಾಗಿ ರಿಜಿಸ್ಟ್ರಾರ್ ಕಚೇರಿಯಲ್ಲಿ ಮದುವೆ ನೋಂದಾಯಿಸಿದ್ದ ಫೋಟೋ ಶೇರ್​ ಮಾಡಿದ್ದರು. ನಂತರ ಫೆಬ್ರುವರಿ ತಿಂಗಳಿನಲ್ಲಿ ಇವರ ಮದುವೆ ಮುಸ್ಲಿಂ ಸಂಪ್ರದಾಯದಂತೆ ನಡೆದಿತ್ತು.

ಸ್ವರಾ ಮತ್ತು ಫಹಾದ್ ಇಬ್ಬರೂ ಮಗುವಿನ ನಿರೀಕ್ಷೆಯಲ್ಲಿದ್ದಾಗ ಸಾಕಷ್ಟು ಫೋಟೋ ಶೂಟ್​ ಮಾಡಿಸಿಕೊಂಡಿದ್ದರು. ಟ್ರೋಲಿಗರು, ನಿಮ್ಮ ಪ್ರೀತಿ ನಿಜವಾಗಿದ್ದರೆ, ಧೈರ್ಯವಿದ್ದರೆ ಮಗುವಿಗೆ ಹಿಂದೂ ಹೆಸರು ಇಡಿ ನೋಡೋಣ ಎಂದಿದ್ದರು. ಆದರೆ ಇದೀಗ ಹೆಸರು ಕೂಡ ರಿವೀಲ್​ ಆಗಿದೆ. ಮಗಳಿಗೆ ರಬಿಯಾ ಎಂದು ಹೆಸರು ಇಡಲಾಗಿದೆ.

ಡಾ.ರಾಜ್ ನೆನಪಿಸಿದ ಕಾವೇರಿ ಹೋರಾಟ

ಮುಸ್ಲಿಂ ಯುವಕನ ಜೊತೆ ಮದುವೆಯಾಗಿರುವುದಕ್ಕೆ ಈ ಟೀಕೆಗಳು ಎದ್ದಿದ್ದವು. ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗುವ ನಿರ್ಧಾರ ತೆಗೆದುಕೊಳ್ಳುವ ಮೊದಲು ಸ್ವರಾ ಫ್ರಿಡ್ಜ್ ನೋಡಬೇಕಿತ್ತು ಎಂದು ಹೇಳಿ ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ ಸ್ವರಾ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳಲಿಲ್ಲ. ಮದುವೆಯಾದ ಆರು ತಿಂಗಳಿಗೆ ತಾವು ಗರ್ಭಿಣಿ ಎನ್ನುವ ಫೋಟೋ ಶೇರ್​ ಮಾಡಿಕೊಂಡಿದ್ದರು.

ಡಾ.ರಾಜ್ ನೆನಪಿಸಿದ ಕಾವೇರಿ ಹೋರಾಟ

ಬೆಂಗಳೂರು,ಸೆ.26- ನೆಲ,ಜಲ ಭಾಷೆಗೆ ದಕ್ಕೆ ಬಂದಾಗಲೆಲ್ಲ ಡಾ. ರಾಜ್ ಕುಮಾರ್ ಸಿಡಿದೇಳುತ್ತಿದ್ದರು. ಅವರು ಒಂದು ಕರೆ ನೀಡಿದ್ದರೆ ಇಡೀ ಕನ್ನಡಿಗರು ಜೊತೆಗೂಡುತ್ತಿದ್ದರು. ಈ ಹಿಂದೆ ಕಾವೇರಿ ಘಟನೆಗಳು ನಡೆದಾಗಲೆಲ್ಲಾ ಡಾ.ರಾಜ್ ಅವರ ಹೋರಾಟ ಈಗಲೂ ನೆನಪಿಗೆ ಬರುತ್ತದೆ.

ಅದು ಗೋಕಾಕ್ ಚಳುವಳಿ ಆಗಲಿ ಕನ್ನಡ ಚಿತ್ರರಂಗರದ ಸಮಸ್ಯೆಯಾಗಲಿ ಯಾವಾಗಲೂ ಅವರು ನೇತೃತ್ವ ವಹಿಸುತ್ತಿದ್ದರು. ಭಾಷಾ ಪ್ರೇಮ ಮತ್ತು ಕನ್ನಡ ನಾಡಿನ ಮೇಲೆ ಅವರಿಗಿದ್ದ ಅಪಾರ ಪ್ರೇಮವನ್ನು ಕೊನೆಯ ಉಸಿರಿರುವರೆಗೂ ಉಳಿಸಿಕೊಂಡಿದ್ದರು.

ಸೆ.29 ರಂದು ಕರ್ನಾಟಕ ಬಂದ್ ಫಿಕ್ಸ್

ಇಂದು ಬೆಂಗಳೂರು ಬಂದ್ ಸಂದರ್ಭದಲ್ಲಿ ಕೆಲವೆಡೆ ಅಂಗಡಿ ಮುಂಗಟ್ಟುಗಳು ಮುಚ್ಚಿದರೆ, ಪ್ರತಿಭಟನೆಗಳು ಸೀಮಿತವಾಗಿದೆ. ನಮ್ಮ ಜೀವಜವ ಕಾವೇರಿಗಾಗಿ ಬೆಂಗಳೂರಿನ ಜನರು ಸ್ಪಂದಿಸಿದ್ದಾರೆ. ಆದರೆ ಇದರ ಬಿಸಿ ದೆಹಲಿಗೆ ತಟ್ಟುವಂತಹ ಗಟ್ಟಿ ದ್ವನಿ ಯಾರ ಬಳಿ ಇದೆ ಎಂದು ಈಗ ದೊಡ್ಡ ಪ್ರಶ್ನೆಯಾಗಿದೆ.

ಅಣ್ಣ ಅವರು ಯಾವಾಗಲೂ ಇಂತಹ ಸಂದರ್ಭದಲ್ಲಿ ನೆನಪಿಗೆ ಬರುತ್ತಾರೆ. ಅವರು ಒಂದು ಕರೆ ನೀಡಿದರೆ ಕೆಂಪೇಗೌಡ ರಸ್ತೆ ತುಂಬಿ ತುಳುಕುತ್ತಿತ್ತು. ಆಳುವವರಿಗೆ ಬಿಸಿ ಮುಟ್ಟುತ್ತಿತ್ತು,

ಜನವರಿಯಲ್ಲಿ ರಾಮಮಂದಿರ ಲೋಕಾರ್ಪಣೆ

ನವದೆಹಲಿ,ಸೆ.26- ಆಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಮಮಂದಿರ ನಿಗಧಿತ ಸಮಯದಲ್ಲಿ ಪೂರ್ಣಗೊಳ್ಳಲಿದ್ದು, ಬರುವ ಜನವರಿಯಲ್ಲಿ ಲೋಕಾರ್ಪಣೆಗೊಳ್ಳುವುದು ಬಹುತೇಕ ಖಚಿತಗೊಂಡಿದೆ. ದೇವಾಲಯದ ನಿರ್ಮಾಣವು ನಿಗದಿತ ಸಮಯದಲ್ಲಿ ಪೂರ್ಣಗೊಳ್ಳುವ ಹಾದಿಯಲ್ಲಿದೆ ಎಂದು ಟ್ರಸ್ಟ್ ಹೇಳಿದೆ.

ನೆಲ ಅಂತಸ್ತಿನ ಕಾಮಗಾರಿಯನ್ನು ನವೆಂಬರ್‍ನಲ್ಲಿ ಪೂರ್ಣಗೊಳಿಸಲು ನಿರ್ಧರಿಸಲಾಗಿದ್ದು, ಮೊದಲ ಅಂತಸ್ತಿನ ಶೇ.50ರಷ್ಟು ಪಿಲ್ಲರ್‍ಗಳು ಪೂರ್ಣಗೊಂಡಿವೆ. ಡಿಸೆಂಬರ್ ಅಂತ್ಯದೊಳಗೆ ಮೊದಲ ಮಹಡಿಯ ಕಾಮಗಾರಿಯನ್ನು ಪೂರ್ಣಗೊಳಿಸುವ ಗುರಿಯನ್ನು ಟ್ರಸ್ಟ್ ಹೊಂದಿದ್ದು, 2024ರ ಜನವರಿಯಲ್ಲಿ ರಾಮಮಂದಿರ ಉದ್ಘಾಟನೆಗೊಳ್ಳಲಿದೆ.

ಈ ಹಿಂದೆ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಈ ಹಿಂದೆ 2024 ರ ಜನವರಿ 21-23 ರಂದು ದೇವಾಲಯದ ಶಂಕುಸ್ಥಾಪನೆ ಸಮಾರಂಭ ನಡೆಯಲಿದೆ ಎಂದು ಘೋಷಿಸಿತ್ತು. 136 ಸನಾತನ ಸಂಪ್ರದಾಯಗಳ 25,000 ಕ್ಕೂ ಹೆಚ್ಚು ಹಿಂದೂ ಧಾರ್ಮಿಕ ಮುಖಂಡರನ್ನು ಪವಿತ್ರ ಸಮಾರಂಭಕ್ಕೆ ಆಹ್ವಾನಿಸಲು ಟ್ರಸ್ಟ್ ಯೋಜಿಸಿದೆ. ಪಟ್ಟಾಭಿಷೇಕ ಸಮಾರಂಭದಲ್ಲಿ ಪಾಲ್ಗೊಳ್ಳುವ 25,000 ಸಂತರ ಜೊತೆಗೆ, 10,000 ವಿಶೇಷ ಅತಿಥಿಗಳು ಸಹ ಇರುತ್ತಾರೆ.

ಸೆ.29 ರಂದು ಕರ್ನಾಟಕ ಬಂದ್ ಫಿಕ್ಸ್

ರಾಮ ಜನ್ಮಭೂಮಿಯ ಶಂಕುಸ್ಥಾಪನೆ ಸಮಾರಂಭವು ಮುಂದಿನ ವರ್ಷ ಜನವರಿ ಮೂರನೇ ವಾರದಲ್ಲಿ ನಡೆಯಲಿದೆ. ಮೂರು ದಿನಾಂಕಗಳನ್ನು – 21, 22 ಮತ್ತು 23 ಜನವರಿ – ಶಂಕುಸ್ಥಾಪನೆ ಸಮಾರಂಭಕ್ಕೆ ನಿಗದಿಪಡಿಸಲಾಗಿದೆ. ಸಮಾರಂಭಕ್ಕೆ ನಾವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸುತ್ತೇವೆ, ಪ್ರಮುಖ ಸಾಧುಗಳು ಮತ್ತು ಇತರ ಗಣ್ಯರು ಸಹ ಭಾಗವಹಿಸಲಿದ್ದಾರೆ ಎಂದು ರಾಮಮಂದಿರ ಟ್ರಸ್ಟ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ.

ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಉದ್ಘಾಟನೆಗೂ ಮುನ್ನ ಅಯೋಧ್ಯೆಯನ್ನು ಸುಂದರಗೊಳಿಸಲು ಮತ್ತು ಅತ್ಯಾಧುನಿಕ ನಗರ ಸೌಕರ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.

ಬೆಂಗಳೂರು ಬಂದ್‍ಗೆ ಜೆಡಿಎಸ್ ಸಂಪೂರ್ಣ ಬೆಂಬಲ

ಬೆಂಗಳೂರು, ಸೆ. 26- ಕಾವೇರಿ ನೀರು ಉಳಿವಿಗಾಗಿ ನಡೆಯುತ್ತಿರುವ ಬೆಂಗಳೂರು ಬಂದ್‍ಗೆ ಜೆಡಿಎಸ್ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ. ಬಂದ್‍ನಲ್ಲಿ ಜೆಡಿಎಸ್ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಕಾವೇರಿ ನೀರಿಗಾಗಿ ನಡೆಯುತ್ತಿರುವ ಬಂದ್‍ಗೆ ನನ್ನ ಪೂರ್ಣ ಬೆಂಬಲವಿದೆ. ಹೋರಾಟಗಾರರು ಶಾಂತಿಯುತವಾಗಿ ವರ್ತಿಸಬೇಕು. ಬಂದ್ ಯಶಸ್ವಿಯಾಗಲು ಜೆಡಿಎಸ್ ಕಾರ್ಯಕರ್ತರು ಕೂಡ ಸಹಕಾರ ನೀಡಲಿದ್ದಾರೆ ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ತಿಳಿಸಿದ್ದಾರೆ.

ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಪೊಲೀಸರಿಂದ ಬಿಗಿ ಬಂದೋಬಸ್ತ್

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯಸರ್ಕಾರದ ವಿರುದ್ಧ ವಿವಿಧ ಸಂಘಟನೆಗಳು ನೀಡಿರುವ ಬಂದ್ ಕರೆಗೆ ಬೆಂಬಲ ವ್ಯಕ್ತಪಡಿಸಿ ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಜೆಡಿಎಸ್ ಕೇಂದ್ರ ಕಚೇರಿ ಜೆ.ಪಿ.ಭವನದಿಂದ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡು ರಾಜ್ಯಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಸೆ.29 ರಂದು ಕರ್ನಾಟಕ ಬಂದ್ ಫಿಕ್ಸ್

ಬೆಂಗಳೂರು,ಸೆ.25- ಕನ್ನಡಪರ ಸಂಘಟನೆಗಳ ನಡುವೆಯೇ ಗೊಂದಲಕ್ಕೆ ಕಾರಣವಾಗಿದ್ದ ಕರ್ನಾಟಕ ಬಂದ್ ಇದೇ 29ರಂದು ನಡೆಯುವುದು ಖಚಿತವಾಗಿದ್ದು, ಒಂದೇ ವಾರದಲ್ಲಿ ಎರಡೆರಡು ಬಂದ್ ಎದುರಿಸುವ ಪರಿಸ್ಥಿತಿ ಎದುರಾಗಿದೆ. ಮಂಗಳವಾರ ಕರ್ನಾಟಕ ಕಬ್ಬು ಬೆಳೆಗಾರರ ಸಂಘ ಹಾಗೂ ಜಲಶಕ್ತಿ ಸಂರಕ್ಷಣಾ ಸಮಿತಿ ಬೆಂಗಳೂರು ಬಂದ್‍ಗೆ ಕರೆ ಕೊಟ್ಟಿರುವ ಬೆನ್ನಲ್ಲೇ ಕನ್ನಡಪರ ಸಂಘಟನೆಗಳು ಇದೇ 29ರಂದು ಕರ್ನಾಟಕ ಬಂದ್‍ಗೂ ಕರೆ ಕೊಟ್ಟಿವೆ.

ಕನ್ನಡ ಚಳುವಳಿ ಪಕ್ಷದ ಮುಖಂಡ ವಾಟಾಳ್ ನಾಗರಾಜ್ ಹಾಗೂ ಕನ್ನಡ ಒಕ್ಕೂಟ ಮುಖಂಡರ ನೇತೃತ್ವದಲ್ಲಿ ಸಭೆ ನಡೆಸಿ 29ರಂದು ಕರೆ ನೀಡಿರುವ ಕರ್ನಾಟಕ ಬಂದ್ ಹಿಂತೆಗೆದುಕೊಳ್ಳಬಾರದು ಎಂಬ ಒಮ್ಮತದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ನಾಳೆ ನಡೆಯಲಿರುವ ಬೆಂಗಳೂರು ಬಂದ್‍ಗೆ ನಮ್ಮ ಬೆಂಬಲವಿಲ್ಲ. ಸೆ.29ಕ್ಕೆ ಅಖಂಡ ಕರ್ನಾಟಕ ಬಂದ್ ಮಾಡುತ್ತೇವೆ. ರಾಜಭವನವನ್ನು ಮುತ್ತಿಗೆ ಹಾಕುತ್ತೇವೆ ಎಂದು ಘೋಷಣೆ ಮಾಡಿದರು. ಶುಕ್ರವಾರ ನಡೆಯುವ ಅಖಂಡ ಕರ್ನಾಟಕ ಬಂದ್ ಸೇರಿದಂತೆ ರಾಜ್ಯಾದ್ಯಂತ ಭಾರೀ ಚಳವಳಿ ನಡೆಸುವ ಬಗ್ಗೆ ಕನ್ನಡ ಒಕ್ಕೂಟದ ಆಶ್ರಯದಲ್ಲಿ ನಡೆದ ಕನ್ನಡಪರ ಸಂಘಟನೆಗಳ ಮಹತ್ತರವಾದ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಹೇಳಿದರು.

ರಾಹುಲ್ ಗಾಂಧಿಗೆ ಹೈದರಾಬಾದ್‍ನಲ್ಲಿ ಸ್ಪರ್ಧಿಸುವಂತೆ ಓವೈಸಿ ಚಾಲೆಂಜ್

ಬಂದ್ ಎಂದರೆ ಕನ್ನಡ ಒಕ್ಕೂಟ, ಎಲ್ಲಾ ಕನ್ನಡ ಪರ ಸಂಘಟನೆಗಳು ಸೆ.29ಕ್ಕೆ ಬಂದ್ ನಡೆಸಲು ತೀರ್ಮಾನಿಸಿರುವ ಸಂದರ್ಭದಲ್ಲಿ ಇದನ್ನು ತಿಳಿದು ಆಮ್ ಆದ್ವಿ ಪಕ್ಷ ಮತ್ತು ರೈತ ಸಂಘಟನೆಯೊಂದು ನಾಳೆ ಬೆಂಗಳೂರು ಬಂದ್ ಕರೆಕೊಟ್ಟು ರಾಜಕೀಯ ಮಾಡುತ್ತಿವೆ. ನಾವೆಲ್ಲಾ ಸಂಘಟನೆಗಳು ನಾಳೆ ಬಂದ್ ಬೇಡ ಎಂದು ಕೈ ಮುಗಿದು ಕೇಳಿಕೊಂಡರು ಅವರು ಒಪ್ಪಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕೇವಲ ಬೆಂಗಳೂರು ಮಾತ್ರ ಕರ್ನಾಟಕವಲ್ಲ ಅಖಂಡ ಕರ್ನಾಟಕ ಸೇರಿ ಕರ್ನಾಟಕವಾಗಿದೆ. ಆದ್ದರಿಂದ ನಮ್ಮ ಕೂಗು, ದೇಶದ ಪ್ರಧಾನಿಗಳಿಗೆ ಮುಟ್ಟಬೇಕು ದೆಹಲಿಯಲ್ಲಿ ನಮ್ಮ ಹೋರಾಟದ ಕಿಚ್ಚು ಹೆಚ್ಚಾಗಬೇಕು ಎಂದರು. ರಾಜ್ಯದ ಸುಮಾರು 12 -16 ಸಂಘಟನೆಗಳು ನಮಗೆ ಬೆಂಬಲ ನೀಡವೆ. ಇದೇ 29ರಂದು ಕರೆ ಕೊಟ್ಟಿರುವ ಅಖಂಡ ಕರ್ನಾಟಕ ಬಂಧಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕೂಡ ಬೆಂಬಲ ವ್ಯಕ್ತಪಡಿಸಿದ್ದು, ಅಂದು ಮಲ್ಟಿಪ್ಲೆಕ್ಸ್ ಮತ್ತು ಚಿತ್ರಮಂದಿರಗಳಲ್ಲಿ ಯಾವುದೇ ಚಲನಚಿತ್ರಗಳು ಪ್ರದರ್ಶನವಾಗುವುದಿಲ್ಲ ಹಾಗೆಯೇ ರಾಷ್ಟ್ರೀಯ ಹೆದ್ದಾರಿಗಳು ಕೂಡ ಬಂದ್ ಆಗಲಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲೂ ಬಂದ್ ಮಾಡಲು ಪ್ರಯತ್ನಿಸುತ್ತೇವೆ ಎಂದು ಹೇಳಿದರು.

ಡಾಕ್ಟರ್ ರಾಜಕುಮಾರ್ ಅಭಿಮಾನಿಗಳ ಸಂಘ ಅಧ್ಯಕ್ಷ ಸಾರಾ ಗೋವಿಂದ್ ಮಾತನಾಡಿ, ಕುಡಿಯು ನೀರಿಗೆ ಮೇಕೆದಾಟು ಅಣೆಕಟ್ಟು ಕಟ್ಟಲು ತೊಂದರೆ ಕೊಡುತ್ತಿರುವ ತಮಿಳು ನಾಡಿಗೆ ಕಾವೇರಿ ನೀರಿನ ಬಗ್ಗೆ ಮಾತನಾಡುವ ಯಾವುದೇ ನೈತಿಕ ಹಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇವತ್ತು ಅಧಿಕಾರದಲ್ಲಿ ಇಲ್ಲದೇ ಇರುವವರು ಹೋರಾಟಕ್ಕೆ ಬೆಂಬಲ ಕೊಡುತ್ತೇವೆಂದು ಹೇಳುತ್ತಿದ್ದಾರೆ. ಇವರು ಅಧಿಕಾರದಲ್ಲಿದ್ದಾಗ ನೀರನ್ನು ತಮಿಳುನಾಡಿಗೆ ನೀರು ಹರಿಸಿ ದ್ರೋಹವೆಸಗಿದ್ದಾರೆ ಅವರಿಗೆ ಮಾತನಾಡುವ ಹಕ್ಕಿಲ್ಲ. ಹೋರಾಟಗಳನ್ನು ಮಾಡಿಕೊಂಡು ಬಂದಿರುವ ಕನ್ನಡಪರ ಸಂಘಟನೆಗಳಿಗೆ ಮಾತ್ರ ನೈತಿಕ ಹಕ್ಕಿದೆ ಎಂದು ಪರೋಕ್ಷವಾಗಿ ಬಿಜೆಪಿ ಪಕ್ಷವನ್ನು ದೂರಿದರು. ಅಷ್ಟೇ ಅಲ್ಲದೆ ನಾಳೆ ನಡೆಯುವ ಬಂದ್ ಗೆ ಬೆಂಬಲವಾಗಿ ನಿಂತಿರುವ ಆಮ್ ಆದ್ಮಿ ಪಕ್ಷದ ನಿರ್ಣಯವನ್ನು ಖಂಡಿಸಿದರು.

ಕಾವೇರಿ ವಿವಾದದಲ್ಲಿ ಬಿಜೆಪಿ-ಜೆಡಿಎಸ್ ರಾಜಕೀಯ ಮಾಡುತ್ತಿವೆ : ಸಿಎಂ

ಸಭೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಶಿವರಾಮೇಗೌಡ, ಪ್ರವೀಣ್ ಕುಮಾರ್ ಶೆಟ್ಟಿ, ಕನ್ನಡ ಸೇನೆಯ ರಾಜ್ಯಾಧ್ಯಕ್ಷರಾದ ಕೆ.ಆರ್. ಕುಮಾರ್, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಅಧ್ಯಕ್ಷ ಎನ್.ಮೂರ್ತಿ, ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷರಾದ ಮಂಜುನಾಥ್ ದೇವ್, ಹಾಗೂ ಹೆಚ್.ವಿ. ಗಿರೀಶ್ ಗೌಡ ಹಾಗೂ ಅನೇಕ ಕನ್ನಡಪರ ಸಂಘಟನೆಗಳ ಮುಖಂಡರು, ಹೋರಾಟಗಾರರು ಸೇರಿದಂತೆ ಮತ್ತಿತರರು ಇದ್ದರು.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (26-09-2023)

ನಿತ್ಯ ನೀತಿ : ಭಕ್ತಿಯಿಂದ ಸಮರ್ಪಿಸಿಕೊಂಡವರನ್ನು ಭಗವಂತನೆಂದೂ ಕೈ ಬಿಡುವುದಿಲ್ಲ. ಭಕ್ತನು ಭಕ್ತಿ ಸಂಪತ್ತಿನ ಸದುಪಯೋಗವನ್ನು ಪಡೆದುಕೊಳ್ಳಬೇಕು. ಭಗವಂತ ಭಕ್ತರ ಪರಾಧೀನ.

ಪಂಚಾಂಗ ಮಂಗಳವಾರ 26-09-2023
ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ವರ್ಷ ಋತು / ಭಾದ್ರಪದ ಮಾಸ / ಶುಕ್ಲ ಪಕ್ಷ / ತಿಥಿ: ದ್ವಾದಶಿ / ನಕ್ಷತ್ರ: ಶ್ರವಣ / ಯೋಗ: ಸುಕರ್ಮಾ / ಕರಣ: ಭವ

ಸೂರ್ಯೋದಯ ; ಬೆ.06.09
ಸೂರ್ಯಾಸ್ತ : 06.13
ರಾಹುಕಾಲ : 3.00-4.30
ಯಮಗಂಡ ಕಾಲ : 9.00-10.30
ಗುಳಿಕ ಕಾಲ : 12.00-1.30

ರಾಶಿ ಭವಿಷ್ಯ
ಮೇಷ
: ಕಾರ್ಯ ಸಾಮಥ್ರ್ಯವನ್ನು ಅರ್ಥಮಾಡಿ ಕೊಂಡು ಆದಾಯ ಹೆಚ್ಚಿಸುವ ಕೆಲಸ ಮಾಡಿ.
ವೃಷಭ: ನಿಮ್ಮಿಂದ ಕೆಟ್ಟ ಕೆಲಸ ಮಾಡಿಸುವ ಪ್ರಯತ್ನಕ್ಕೆ ನಿಮ್ಮ ಸ್ನೇಹಿತರೇ ಯತ್ನ ನಡೆಸುವರು.
ಮಿಥುನ: ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಮೊದಲು ಹಿರಿಯರ ಸಲಹೆ ಪಡೆಯುವುದು ಸೂಕ್ತ.

ಕಟಕ: ಸಾಲಗಾರರ ಕಿರಿಕಿರಿ ಉಂಟಾಗಲಿದೆ. ಮಕ್ಕಳ ವಿಷಯದಲ್ಲಿ ಚಿಂತೆ ಕಾಡಲಿದೆ. ಸಣ್ಣ ಸಣ್ಣ ವಿಚಾರಕ್ಕೂ ನೆರೆಹೊರೆ ಯವರ ಕಿರಿಕಿರಿ ತಪ್ಪದು.
ಸಿಂಹ: ಜವಾಬ್ದಾರಿ ಯುತವಾದ ಕಾರ್ಯಗಳ ಬಗ್ಗೆ ಗಮನ ಹರಿಸಿ.
ಕನ್ಯಾ: ಮನೆಯ ವಿಷಯದಲ್ಲಿ ಯಾವುದೇ ಚಿಂತೆ ಬೇಡ. ವ್ಯಾಪಾರ- ವ್ಯವಹಾರಗಳು ಸರಾಗವಾಗಿ ನಡೆಯಲಿವೆ.

ತುಲಾ: ಆರ್ಥಿಕ ತಾಪತ್ರಯಗಳ ಬಗ್ಗೆ ಬೇರೆಯವರೊಂದಿಗೆ ಹೇಳಿಕೊಳ್ಳಲಾಗದು.
ವೃಶ್ಚಿಕ: ವಿದ್ಯಾರ್ಥಿಗಳಿಗೆ ಓದಿನಲ್ಲಿ ಆಸಕ್ತಿ ಹೆಚ್ಚಾಗಲಿದೆ. ಕಂದಾಯ ಅಕಾರಿಗಳಿಗೆ ಕೆಲಸದ ಹೊಣೆ ಹೆಚ್ಚಾಗುವುದು. ಉತ್ತಮ ದಿನ.
ಧನುಸ್ಸು: ಹಲವಾರು ಆಸಕ್ತಿದಾಯಕ ವಿಚಾರಗಳು ನಿಮ್ಮ ಕಿವಿಗೆ ಬೀಳಲಿವೆ. ದೂರ ಪ್ರಯಾಣ ಬೇಡ.

ಮಕರ: ಲೆಕ್ಕ ಪರಿಶೋಧಕರಿಗೆ ಮತ್ತು ನ್ಯಾಯವಾದಿಗಳಿಗೆ ತೃಪ್ತಿಕರವಾದ ದಿನ.
ಕುಂಭ: ಕೆಲಸದಲ್ಲಿ ಹೆಚ್ಚಿನ ಸ್ವಾತಂತ್ರ್ಯ ಸಿಗಲಿದೆ.
ಮೀನ: ಒಂದು ವಿಚಾರದ ಬಗ್ಗೆ ತಿಳಿದುಕೊಳ್ಳದೆ ಯಾವುದೇ ರೀತಿಯ ತೀರ್ಮಾನ ಕೈಗೊಳ್ಳದಿರಿ.

ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಪೊಲೀಸರಿಂದ ಬಿಗಿ ಬಂದೋಬಸ್ತ್

ಬೆಂಗಳೂರು,ಸೆ.25- ಬಂದ್ ಹಿನ್ನೆಲೆಯಲ್ಲಿ ನಾಳೆ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಬಂದ್ ಸಂದರ್ಭದಲ್ಲಿ ಯಾರಾದರೂ ಬಲವಂತವಾಗಿ ಅಂಗಡಿ-ಮುಂಗಟ್ಟು ಮುಚ್ಚಿಸಲು ಯತ್ನಿಸಿದರೆ ಮುಲಾಜಿಲ್ಲದೆ ಸೂಕ್ತ ಕಾನೂನು ಕ್ರಮ ಕೈಗೊಳ್ಳ ಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಎಚ್ಚರಿಸಿದ್ದಾರೆ.

ಈ ಸಂಜೆಯೊಂದಿಗೆ ಮಾತನಾಡಿದ ಅವರು, ಬಂದ್ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ನಗರದ ಎಲ್ಲ ಡಿಸಿಪಿಗಳಿಗೆ ಸೂಚನೆ ನೀಡಲಾಗಿದೆ. ಎಲ್ಲಾ ಉಪ ವಲಯದ ಎಸಿಪಿಗಳು, ಠಾಣೆಗಳ ಇನ್ಸ್‍ಪೆಕ್ಟರ್‍ಗಳು ನಾಳೆ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.
ಮುನ್ನೆಚ್ಚರಿಕೆ ಕ್ರಮವಾಗಿ ಕ್ಷಿಪ್ರ ಕಾರ್ಯಚರಣೆ ಪಡೆ (ಆರ್‍ಎಎಫ್) 3 ಕಂಪನಿಗಳನ್ನು ಕರೆಸಿಕೊಳ್ಳಲಾಗಿದೆ. 60 ಕೆಎಸ್‍ಆರ್‍ಪಿ ಹಾಗೂ ಸಿಎಆರ್ ತುಕಡಿಗಳನ್ನು ಬಂದೋಬಸ್ತ್‍ಗಾಗಿ ನಿಯೋಜನೆ ಮಾಡಲಾಗಿದೆ ಎಂದು ಅವರು ವಿವರಣೆ ನೀಡಿದರು.

ನಾಳೆ ಬೆಂಗಳೂರು ಬಂದ್ : ಏನಿರುತ್ತೆ..? ಏನಿರಲ್ಲ..? ಇಲ್ಲಿದೆ ಮಾಹಿತಿ

ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದ್ದು, ಸಣ್ಣಪುಟ್ಟ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಬಂದ್‍ನಲ್ಲಿ ಯಾರು ಬೇಕಾದರೂ ಭಾಗವಹಿಸಬಹುದು. ಸ್ವಪ್ರೇರಣೆಯಿಂದ ಬಂದ್ ಮಾಡಬೇಕು. ಒಂದು ವೇಳೆ ಯಾರಾದರೂ ಬಲವಂತವಾಗಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿಸಲು ಯತ್ನಿಸಿದರೆ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ಎಚ್ಚರಿಸಿದರು.