Friday, November 7, 2025
Home Blog Page 42

ರಾಜ್ಯ ಸರ್ಕಾರ ನಡೆಸುತ್ತಿರುವ ಸಮೀಕ್ಷೆಯಲ್ಲಿ ಭಾಗವಹಿಸಲು ಇನ್ಫೋಸಿಸ್‌‍ ನಾರಾಯಣಮೂರ್ತಿ ದಂಪತಿ ನಿರಾಕರಣೆ

ಬೆಂಗಳೂರು,ಅ.16- ಕರ್ನಾಟಕ ರಾಜ್ಯ ಸರಕಾರ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಲು ಇನ್ಫೋಸಿಸ್‌‍ ಸಂಸ್ಥಾಪಕ ನಾರಾಯಣಮೂರ್ತಿ ಹಾಗೂ ಸುಧಾ ಮೂರ್ತಿ ನಿರಾಕರಿಸಿದ್ದಾರೆ.

ನಾವು ಹಿಂದುಳಿದ ವರ್ಗದ ಯಾವ ಜಾತಿಗೂ ಸೇರುವವರಲ್ಲ. ಆದ್ದರಿಂದ ಈ ಸಮೀಕ್ಷೆಯಿಂದ ಸರ್ಕಾರಕ್ಕೆ ಏನೂ ಉಪಯೋಗವಿಲ್ಲ. ಆದ್ದರಿಂದ ನಾವು ಈ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸ್ವಯಂ ದೃಢೀಕರಣ ಪತ್ರದಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಅಕ್ಟೋಬರ್‌ 10ರಂದು ಸುಧಾಮೂರ್ತಿ ದಂಪತಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸ್ವಯಂ ದೃಢೀಕರಣ ಪತ್ರ ಬರೆದಿದ್ದಾರೆ.ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಯುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನನ್ನ ಕೆಲವು ವೈಯಕ್ತಿಕ ಕಾರಣಗಳಿಂದ ಮಾಹಿತಿ ನೀಡಲು ನಿರಾಕರಿಸುತ್ತೇವೆ. ನಾನು ಮತ್ತು ನನ್ನ ಕುಟುಂಬ ಈ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಮತ್ತು ನಮ ಮಾಹಿತಿಯನ್ನು ನೀಡಲು ನಿರಾಕರಿಸಿದ್ದೇನೆ ಎಂದು ದಂಪತಿ ತಿಳಿಸಿದ್ದಾರೆ.

ಬೆಂಗಳೂರಿನ ಜಯನಗರದಲ್ಲಿ ಸುಧಾಮೂರ್ತಿ ಅವರ ನಿವಾಸವಿದ್ದು, ಇಬ್ಬರೂ ಕರ್ನಾಟಕದ ನಿವಾಸಿಗಳಾಗಿದ್ದಾರೆ. ಕರ್ನಾಟಕ ಹೈಕೋರ್ಟ್‌ ಸಮೀಕ್ಷೆಯಲ್ಲಿ ಭಾಗವಹಿಸುವುದು ಕಡ್ಡಾಯವಲ್ಲ ಮತ್ತು ಗಣತಿದಾರರು ಸಾರ್ವಜನಿಕರಿಂದ ಉತ್ತರಗಳನ್ನು ಒತ್ತಾಯಿಸುವಂತಿಲ್ಲ ಎಂದು ತೀರ್ಪು ನೀಡಿರುವುದರಿಂದ ದಂಪತಿಗಳು ಸಮೀಕ್ಷೆಯಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ.

ಜಯನಗರ 4ನೇ ಟಿ ಬ್ಲಾಕ್‌ನಲ್ಲಿರುವ ತಮ ನಿವಾಸದಲ್ಲಿ ಸಮೀಕ್ಷೆಗೆ ಹೋದ ಗಣತಿದಾರರಿಗೆ ಅವರು ಯಾವುದೇ ಹಿಂದುಳಿದ ಜಾತಿಗೆ ಸೇರಿದವರಲ್ಲ ಮತ್ತು ಸಮೀಕ್ಷೆಯಲ್ಲಿ ಭಾಗವಹಿಸಲು ಬಯಸುವುದಿಲ್ಲ ಎಂದು ಹೇಳಿರುವುದಾಗಿ ವರದಿಯಾಗಿದೆ. ಏತನಧ್ಯೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಗರದಲ್ಲಿ ಇಲ್ಲಿಯವರೆಗೆ 15.42 ಲಕ್ಷ ಮನೆಗಳನ್ನು ಸಮೀಕ್ಷೆ ಮಾಡಲಾಗಿದೆ ಎಂದು ಹೇಳಿದೆ.

ಬೆಂಗಳೂರು ರಸ್ತೆಗುಂಡಿ, ಉದ್ಯಮಗಳ ಸ್ಥಳಾಂತರದ ಬಗ್ಗೆ ಆಂಧ್ರ ಸಚಿವ ನಾರಾ ಲೋಕೇಶ್‌ ಹೊಸ ಬಾಂಬ್‌..!

ಹೈದರಾಬಾದ್‌,ಅ.16– ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಹಾಳುಬಿದ್ದ ರಸ್ತೆಗಳು, ಸಂಚಾರ ದಟ್ಟಣೆ, ಮೂಲಭೂತ ಸೌಕರ್ಯಗಳ ಕೊರತೆ ಇತ್ಯಾದಿ ಕಾರಣಗಳಿಂದ ಕೆಲವು ಐಟಿಬಿಟಿ ಕಂಪನಿಗಳು ರಾಜ್ಯದಿಂದ ಬೇರೆ ಕಡೆ ಮುಖ ಮಾಡುತ್ತಿವೆ.

ಸಿಲಿಕಾನ್‌ ಸಿಟಿ ಎಂದೇ ಖ್ಯಾತಿಯಾಗಿರುವ ಬೆಂಗಳೂರಿನಲ್ಲಿ ನೆಲೆಗೊಂಡಿರುವ ಪ್ರತಿಷ್ಠಿತ ಐಟಿ ಕಂಪನಿಗಳು ಮೂಲಭೂತ ಸೌಕರ್ಯಗಳ ಕೊರತೆ, ಸಂಚಾರ ದಟ್ಟಣೆ ಹಾಗೂ ನಗರದಲ್ಲಿ ರಸ್ತೆಗಳ ಹಾಳುಬಿದ್ದ ಕಾರಣ ಐಟಿಬಿಟಿ ಕಂಪನಿಗಳು ಕರ್ನಾಟಕದಿಂದ ಕಾಲು ಕೀಳಲು ಮುಂದಾಗಿವೆ.
ಇದರ ನಡುವೆ ಕರ್ನಾಟಕದಲ್ಲಿನ ವೈಫಲ್ಯಗಳನ್ನೇ ಬಂಡವಾಳ ಮಾಡಿಕೊಂಡಿರುವ ನೆರೆಯ ಆಂಧ್ರಪ್ರದೇಶ ರಾಜ್ಯದಲ್ಲಿರುವ ಐಟಿ ಕಂಪನಿಗಳನ್ನು ತನ್ನತ್ತ ಸೆಳೆಯಲು ಮುಂದಾಗಿದೆ.

ಬೆಂಗಳೂರು ಮೂಲದ ನವೋದ್ಯಮಗಳನ್ನು ಆಂಧ್ರಪ್ರದೇಶಕ್ಕೆ ವಿಸ್ತರಿಸುವ ಅಥವಾ ಸ್ಥಳಾಂತರಿಸುವ ಕುರಿತು ಮಾತುಕತೆಗಳು ನಡೆಯುತ್ತಿವೆ ಎಂದು ಆಂಧ್ರಪ್ರದೇಶದ ಐಟಿ ಸಚಿವ ನಾರಾ ಲೋಕೇಶ್‌ ಬಾಂಬ್‌ ಸಿಡಿಸಿದ್ದಾರೆ.

ನಾವು ಪ್ರತಿ ರೂಪಾಯಿ ಹೂಡಿಕೆಗೂ ಸ್ಪರ್ಧಿಸುತ್ತೇವೆ. ನಾವು ಉದ್ಯೋಗ ಸೃಷ್ಟಿ ಮತ್ತು ಉತ್ತಮ ವ್ಯಾಪಾರ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವತ್ತ ಗಮನಹರಿಸಿದ್ದೇವೆ. ಬಲವಾದ ಮೂಲಭೂತ ಸೌಕರ್ಯ, 24*7 ವಿದ್ಯುತ್‌ ಸರಬರಾಜು ಅನಂತಪುರದಲ್ಲಿರುವ ಕಿಯಾ ಕೇಂದ್ರದಂತಹ ಅಭಿವೃದ್ಧಿ ಹೊಂದುತ್ತಿರುವ ಕ್ಲಸ್ಟರ್‌ಗಳಿಂದ ಬೆಂಬಲಿತವಾಗಿದೆ. ಆಂಧ್ರಪ್ರದೇಶಕ್ಕೆ ವಿಸ್ತರಣೆ ಅಥವಾ ಸ್ಥಳಾಂತರವನ್ನು ಅನ್ವೇಷಿಸುವ ಬೆಂಗಳೂರು ಮೂಲದ ಸ್ಟಾರ್ಟ್‌ಅಪ್‌ಗಳೊಂದಿಗೆ ಮಾತುಕತೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಇಂಟರ್ನೆಟ್‌ ದೈತ್ಯ ಗೂಗಲ್‌ ಮೆಗಾ ಡೇಟಾ ಮತ್ತು ಐಟಿ ಹಬ್‌ಗಾಗಿ 15 ಬಿಲಿಯನ್‌ ಡಾಲರ್‌ ಹೂಡಿಕೆ ಮಾಡಲು ಆಂಧ್ರಪ್ರದೇಶದ ವಿಶಾಖಪಟ್ಟಣವನ್ನು ಆಯ್ಕೆ ಮಾಡಿದ ನಂತರ ಮತ್ತಷ್ಟು ಉದ್ಯಮಗಳ ಆಕರ್ಷಿಸುವ ಕೆಲಸ ಕೂಡ ಭರದಿಂದ ಸಾಗಿದೆ.

ಈ ಬಗ್ಗೆಯೂ ಮಾತನಾಡಿರುವ ನಾರಾ ಲೋಕೇಶ್‌, ಅವರು (ಕರ್ನಾಟಕ ಸರ್ಕಾರ) ಅಸಮರ್ಥರಾಗಿದ್ದರೆ, ನಾನು ಏನು ಮಾಡಲು ಸಾಧ್ಯ? ಅವರ ಸ್ವಂತ ಕೈಗಾರಿಕೋದ್ಯಮಿಗಳು ಮೂಲಸೌಕರ್ಯ ಕೆಟ್ಟದಾಗಿದೆ ಎಂದು ಹೇಳುತ್ತಿದ್ದಾರೆ. ವಿದ್ಯುತ್‌ ಕಡಿತ, ಮೂಲಭೂತ ಸೌಕರ್ಯ ಕೊರತೆಗಳಂತಹ ಸಮಸ್ಯೆಗಳನ್ನು ಸರಿಪಡಿಸಬೇಕು ಎಂದು ಹೇಳಿದ್ದಾರೆ.

ಅಲ್ಲದೆ ತಮ ರಾಜ್ಯವು ಈಗಾಗಲೇ 120 ಬಿಲಿಯನ್‌ ಹೂಡಿಕೆಯನ್ನು ಆಕರ್ಷಿಸಿದ್ದು, ಆಂಧ್ರಪ್ರದೇಶದಲ್ಲಿನ ಸುಧಾರಣೆಗಳ ತ್ವರಿತ ವೇಗವು ಕರ್ನಾಟಕದೊಂದಿಗೆ ಸ್ಪರ್ಧಿಸುವಂತೆ ಮಾಡಿದೆ. ಆದಾಗ್ಯೂ ಈ ವೇಗದಿಂದ ಚಿಂತಿತರಾಗಿರುವ ರಾಜ್ಯಗಳು ಪ್ರತಿಕ್ರಿಯಿಸಬೇಕಾಯಿತು. ಅದು ಅವರ ಸವಾಲು ಎಂದು ಕರ್ನಾಟಕ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಹೆಸರು ಉಲ್ಲೇಖಿಸದೇ ನಾರಾ ಹೇಳಿದ್ದಾರೆ.

ರಾಜ್ಯವು ಹೂಡಿಕೆದಾರರಿಗೆ ಹೆಚ್ಚು ಆಕರ್ಷಕವಾಗಿದೆ. ನಮ ಡಬಲ್‌-ಎಂಜಿನ್‌ ಸರ್ಕಾರ, ತ್ವರಿತ ಕಾರ್ಮಿಕ ಸುಧಾರಣೆಗಳು ಮತ್ತು ಬುಲೆಟ್‌ ಟ್ರೈನ್‌ ವೇಗದಲ್ಲಿ ಅಭಿವೃದ್ಧಿಯನ್ನು ಚಾಲನೆ ಮಾಡುವ ಬಲವಾದ ಕೇಂದ್ರ-ರಾಜ್ಯ ಸಮನ್ವಯಕ್ಕೆ ಮನ್ನಣೆ ನೀಡುತ್ತಿದೆ. ವಿಶಾಖಪಟ್ಟಣಂನಲ್ಲಿರುವ ಗೂಗಲ್‌ನ 15 ಬಿಲಿಯನ್‌ ಡಾಲರ್‌ ಡೇಟಾ ಸೆಂಟರ್‌ ಅಮೆರಿಕದ ಹೊರಗೆ ಭಾರತದ ಅತಿದೊಡ್ಡ ಯೋಜನೆಯಾಗಿದೆ ಮತ್ತು 1.8 ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸುತ್ತದೆ ಎಂದು ಹೇಳಿದ್ದಾರೆ.

ಈ ಹಿಂದೆ ಬೆಂಗಳೂರಿನಲ್ಲಿರುವ ಎಚ್‌ಎಎಲ್‌ ಉತ್ಪಾದನಾ ಘಟಕವನ್ನು ಕೂಡ ಆಂಧ್ರಪ್ರದೇಶಕ್ಕೆ ಸ್ಥಳಾಂತರಿಸುವ ಬಗ್ಗೆ ಉತ್ಸಾಹ ತೋರಿತ್ತು. ಇದಕ್ಕೆ ಎಲ್ಲಡೆ ವಿರೋಧ ಕೇಳಿಬಂದಿದ್ದರಿಂದ ತಣ್ಣಗಾಗಿತ್ತು. ಇನ್ನು ಮಂಗಳವಾರವಷ್ಟೇ ರೈತರ ವಿರೋಧದ ಕಾರಣಕ್ಕೆ ದೇವನಹಳ್ಳಿ ತಾಲ್ಲೂಕಿನ ವ್ಯಾಪ್ತಿಯಲ್ಲಿ ಏರೋಸ್ಪೇಸ್‌‍ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆ ರದ್ದು ಮಾಡಿರುವುದಾಗಿ ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ಘೋಷಿಸಿದ್ದರು. ಇದನ್ನು ರೈತರು ಸಂಭ್ರಮಿಸುತ್ತಿರುವಾಗಲೇ ಆಂಧ್ರಪ್ರದೇಶದ ಸಚಿವರ ಕಣ್ಣು ಕರ್ನಾಟಕದ ಉದ್ಯಮಗಳ ಮೇಲೆ ಬಿದ್ದಿದೆ.

ಈ ಬಗ್ಗೆ ಸಚಿವ ನಾರಾ ಲೋಕೇಶ್‌ ಎಕ್‌್ಸನಲ್ಲಿ ಬಹಿರಂಗವಾಗಿ ಉದ್ಯಮಿಗಳನ್ನು ಆಹ್ವಾನಿಸಿದ್ದರು. 1,777 ಎಕರೆಯಷ್ಟು ಜಮೀನು ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಸ್ವಾಧೀನಪಡಿಸಿಕೊಂಡು ಅಲ್ಲಿ ಏರೋಸ್ಪೇಸ್‌‍ ಪ್ರಾರಂಭಿಸಲು ರಾಜ್ಯ ಸರ್ಕಾರ ಉದ್ದೇಶಿಸಿತ್ತು. ಆದರೆ ಇದನ್ನು ವಿರೋಧಿಸಿ ರೈತರು, ರೈತ ಸಂಘಟನೆಗಳು ಬೃಹತ್‌ ಪ್ರತಿಭಟನೆ ನಡೆಸಿದ್ದವು.

ಯಾವ ಕಾರಣಕ್ಕೂ ಭೂಮಿ ಕೊಡಲ್ಲ ಎಂದು ರೈತರು ಪಟ್ಟು ಹಿಡಿದಿದ್ದರು. ಸರ್ಕಾರದ ವಿರುದ್ಧ ದಂಗೆ ಎದ್ದ ಕಾರಣ ಕೊನೆಗೂ ಮಣಿದ ಸರ್ಕಾರ, ಭೂ ಸ್ವಾಧೀನ ಪ್ರಕ್ರಿಯೆ ರದ್ದು ಮಾಡುವುದಾಗಿ ಘೋಷಿಸಿತ್ತು. ಇದರ ಬೆನ್ನಲ್ಲೇ ಆಂಧ್ರಪ್ರದೇಶದ ಸಚಿವ ತನ್ನ ಅವಕಾಶವಾದಿತನವನ್ನು ಪ್ರದರ್ಶಿಸಿದ್ದಾರೆ. ಇಲ್ಲಿ ರೈತರ ವಿರೋಧ, ಸರ್ಕಾರದ ನಿರ್ಧಾರವನ್ನೇ ಮುಂದಿಟ್ಟುಕೊಂಡು ಲಾಭ ಮಾಡಿಕೊಳ್ಳಲು ಹೊರಟಿದ್ದರು.

ಬೆಂಗಳೂರು ಆಂಧ್ರಪ್ರದೇಶದ ಗಡಿಗೆ ಸಮೀಪದಲ್ಲಿರುವುದಿರಂದ ಈ ಭಾಗದಲ್ಲೇ ಏರೋಸ್ಪೇಸ್‌‍ ಉದ್ಯಮಗಳಿಗೆ ನೆಲೆ ನೀಡುವ ಮೂಲಕ ಲಾಭ ಮಾಡಿಕೊಳ್ಳಲು ಆಂಧ್ರ ಕುತಂತ್ರ ಹೆಣೆದಿದೆ. ಈ ಆಹ್ವಾನವನ್ನು ಉದ್ಯಮಿಗಳು ಸ್ವೀಕರಿಸುತ್ತಾರಾ? ಅಥವಾ ಕರ್ನಾಟಕದಲ್ಲೇ ಬೇರೆ ಕಡೆ ಭೂಮಿ ಪಡೆಯುತ್ತಾರಾ ಎಂಬುದು ಸದ್ಯದ ಪ್ರಶ್ನೆಯಾಗಿದೆ.

56 ಇಂಚಿನ ಮೋದಿ ಎದೆ ಕುಗ್ಗಿದೆ ; ಕಾಂಗ್ರೆಸ್‌‍ ಲೇವಡಿ

ನವದೆಹಲಿ, ಅ. 16 (ಪಿಟಿಐ) ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರ ಹೇಳಿಕೆಯಿಂದ ಭಯಗೊಂಡಿದ್ದಾರೆ ಎಂದು ಕಾಂಗ್ರೆಸ್‌‍ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ಭಾರತ ರಷ್ಯಾದ ತೈಲವನ್ನು ಖರೀದಿಸುವುದಿಲ್ಲ ಎಂದು ಅವರು ನಿರ್ಧರಿಸಲು ಮತ್ತು ಘೋಷಿಸಲು ಅವಕಾಶ ನೀಡಿದ್ದಾರೆ ಮತ್ತು ಪದೇ ಪದೇ ನಿಂದನೆಗಳ ಹೊರತಾಗಿಯೂ ಅಭಿನಂದನಾ ಸಂದೇಶಗಳನ್ನು ಕಳುಹಿಸುತ್ತಲೇ ಇದ್ದಾರೆ ಎಂದು ಹೇಳಿದ್ದಾರೆ.

ತಮ್ಮ ಸ್ನೇಹಿತ ಪ್ರಧಾನಿ ಮೋದಿ ರಷ್ಯಾದಿಂದ ತೈಲ ಖರೀದಿಸುವುದನ್ನು ಭಾರತ ನಿಲ್ಲಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಟ್ರಂಪ್‌ ಹೇಳಿಕೊಂಡ ನಂತರ ಅವರ ಹೇಳಿಕೆ ಬಂದಿದ್ದು, ಉಕ್ರೇನ್‌ ಮೇಲಿನ ಆಕ್ರಮಣದ ಬಗ್ಗೆ ಮಾಸ್ಕೋ ಮೇಲೆ ಒತ್ತಡ ಹೆಚ್ಚಿಸುವತ್ತ ಒಂದು ದೊಡ್ಡ ಹೆಜ್ಜೆ ಎಂದು ಅವರು ಬಣ್ಣಿಸಿದ್ದಾರೆ.

ಪ್ರಧಾನಿ ಮೋದಿ ಟ್ರಂಪ್‌ಗೆ ಹೆದರಿದ್ದಾರೆ. ಭಾರತ ರಷ್ಯಾದ ತೈಲವನ್ನು ಖರೀದಿಸುವುದಿಲ್ಲ ಎಂದು ಟ್ರಂಪ್‌ ನಿರ್ಧರಿಸಲು ಮತ್ತು ಘೋಷಿಸಲು ಅನುವು ಮಾಡಿಕೊಡುತ್ತದೆ. ಪದೇ ಪದೇ ನಿಂದನೆಗಳ ಹೊರತಾಗಿಯೂ ಅಭಿನಂದನಾ ಸಂದೇಶಗಳನ್ನು ಕಳುಹಿಸುತ್ತಲೇ ಇದೆ. ಹಣಕಾಸು ಸಚಿವರ ಅಮೆರಿಕ ಭೇಟಿಯನ್ನು ರದ್ದುಗೊಳಿಸಲಾಗಿದೆ.

ಅದೇ ರೀತಿ ಕಾಂಗ್ರೆಸ್‌‍ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಕೂಡ ಈ ವಿಷಯದ ಬಗ್ಗೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಭಾರತೀಯ ಕಾಲಮಾನ ಮೇ 10, 2025 ರಂದು ಸಂಜೆ 5:37 ಕ್ಕೆ, ಭಾರತ ಆಪರೇಷನ್‌ ಸಿಂದೂರ್‌ ಅನ್ನು ಸ್ಥಗಿತಗೊಳಿಸಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಮೊದಲು ಘೋಷಿಸಿದರು.

ತರುವಾಯ, ಅಧ್ಯಕ್ಷ ಟ್ರಂಪ್‌ 5 ವಿಭಿನ್ನ ದೇಶಗಳಲ್ಲಿ 51 ಬಾರಿ ಸುಂಕ ಮತ್ತು ವ್ಯಾಪಾರವನ್ನು ಒತ್ತಡದ ಅಸ್ತ್ರವಾಗಿ ಬಳಸಿಕೊಂಡು ಆಪರೇಷನ್‌ ಸಿಂದೂರ್‌ ಅನ್ನು ನಿಲ್ಲಿಸಲು ಮಧ್ಯಪ್ರವೇಶಿಸಿರುವುದಾಗಿ ಹೇಳಿಕೊಂಡಿದ್ದಾರೆ. ಆದರೂ ನಮ್ಮ ಪ್ರಧಾನಿ ಮೌನವಾಗಿದ್ದರು ಎಂದು ರಮೇಶ್‌ ಎಕ್ಸ್ ಮಾಡಿದ್ದಾರೆ.

ಈಗ ಟ್ರಂಪ್‌ ನಿನ್ನೆ ಮೋದಿ ಭಾರತ ರಷ್ಯಾದಿಂದ ತೈಲವನ್ನು ಆಮದು ಮಾಡಿಕೊಳ್ಳುವುದಿಲ್ಲ ಎಂದು ಭರವಸೆ ನೀಡಿದ್ದಾರೆ ಎಂದು ಘೋಷಿಸಿದ್ದಾರೆ. ಮೋದಿ ಪ್ರಮುಖ ನಿರ್ಧಾರಗಳನ್ನು ಅಮೆರಿಕಕ್ಕೆ ಹೊರಗುತ್ತಿಗೆ ನೀಡಿದ್ದಾರೆ ಎಂದು ತೋರುತ್ತದೆ. 56 ಇಂಚಿನ ಎದೆ ಕುಗ್ಗಿದೆ ಎಂದು ಅವರು ತಿಳಿಸಿದ್ದಾರೆ.

ಬಿಹಾರ ಚುನಾವಣಾ ಆಖಾಡಕ್ಕೆ ಅಮಿತ್ ಶಾ ಎಂಟ್ರಿ

ಪಾಟ್ನಾ, ಅ. 16 (ಪಿಟಿಐ) ಬಿಹಾರ ಚುನಾವಣಾ ಆಖಾಡಕ್ಕೆ ರಾಜಕೀಯ ಚಾಣಾಕ್ಷ ಅಮಿತ್‌ ಶಾ ಎಂಟ್ರಿ ಕೊಟ್ಟಿದ್ದಾರೆ.ಕೇಂದ್ರ ಗೃಹ ಸಚಿವ ಅಮಿತ್‌ ಶಾ ಇಂದಿನಿಂದ ಮೂರು ದಿನಗಳ ಬಿಹಾರ ಭೇಟಿ ಕಾರ್ಯಕ್ರಮ ಹಮಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರು ಸಾಂಸ್ಥಿಕ ಸಭೆಗಳನ್ನು ನಡೆಸಲಿದ್ದಾರೆ, ಮೈತ್ರಿಕೂಟದ ಪಾಲುದಾರರ ನಾಯಕರನ್ನು ಭೇಟಿ ಮಾಡಲಿದ್ದಾರೆ ಮತ್ತು ಕೆಲವು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಬಿಹಾರದಲ್ಲಿ ವಿಧಾನಸಭಾ ಚುನಾವಣೆಗಳು ನವೆಂಬರ್‌ 6 ಮತ್ತು ನವೆಂಬರ್‌ 11 ರಂದು ನಡೆಯಲಿವೆ. ಫಲಿತಾಂಶಗಳು ನವೆಂಬರ್‌ 14 ರಂದು ಪ್ರಕಟವಾಗಲಿದೆ.ಶಾ ಅವರು ಕೆಲವು ಅಭ್ಯರ್ಥಿಗಳ ನಾಮನಿರ್ದೇಶನ ಸಭೆಗಳಲ್ಲಿಯೂ ಭಾಗವಹಿಸುವ ಸಾಧ್ಯತೆಯಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಮುಂದಿನ ನಾಲ್ಕು ದಿನಗಳಲ್ಲಿ, ರಾಜ್ಯ ವಿಧಾನಸಭೆಯ ಎಲ್ಲಾ 243 ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆ ಪೂರ್ಣಗೊಳ್ಳುತ್ತದೆ. ಚುನಾವಣೆಯ ಸಮಯದಲ್ಲಿ ಎನ್‌ಡಿಎ ಪಾಲುದಾರರ ನಡುವೆ ಉತ್ತಮ ಸಮನ್ವಯವನ್ನು ಖಚಿತಪಡಿಸಿಕೊಳ್ಳಲು ಶಾ ಅವರು ಎಲ್ಲಾ ಪಕ್ಷದ ನಾಯಕರಿಗೆ ಸೂಚನೆಗಳನ್ನು ನೀಡಲಿದ್ದಾರೆ ಎಂದು ಹಿರಿಯ ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.

ಅಕ್ಟೋಬರ್‌ 20 ರವರೆಗೆ ಎರಡೂ ಹಂತಗಳ ಚುನಾವಣೆಗೆ ನಾಮಪತ್ರ ಸಲ್ಲಿಸುವ ಸಮಯದಲ್ಲಿ ಎನ್‌ಡಿಎ ಅಭ್ಯರ್ಥಿಗಳ ನೈತಿಕತೆಯನ್ನು ಹೆಚ್ಚಿಸಲು ಸುಮಾರು ಒಂದು ಡಜನ್‌ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರು ಸೇರಿದಂತೆ ಹಲವಾರು ಉನ್ನತ ಬಿಜೆಪಿ ನಾಯಕರು ರಾಜ್ಯಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆಗೆ ಪೂರ್ವಭಾವಿಯಾಗಿ ಬಿಹಾರದಲ್ಲಿ ರ್ಯಾಲಿಗಳನ್ನು ನಡೆಸಲಿದ್ದಾರೆ ಎಂದು ಅವರು ಹೇಳಿದರು.

ಫೆನಾಯಿಲ್‌ ಕುಡಿದು ಆತಹತ್ಯೆಗೆ ಯತ್ನಿಸಿದ ಮಂಗಳಮುಖಿಯರು

ಇಂದೋರ್‌, ಅ. 16 (ಪಿಟಿಐ) ಇಪ್ಪತೈದಕ್ಕೂ ಹೆಚ್ಚು ಮಂಗಳಮುಖಿಯರು ಫೆನಾಯಿಲ್‌ ಕುಡಿದು ಆತಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಇಂದೋರ್‌ನಲ್ಲಿ ನಡೆದಿದೆ. ಇಂದೋರ್‌ನಲ್ಲಿ ಟ್ರಾನ್ಸ್ ಜೆಂಡರ್‌ ಸಮುದಾಯದ ಸುಮಾರು 25 ಜನರು ಫಿನೈಲ್‌ ಸೇವಿಸಿದ್ದಾರೆಂದು ಹೇಳಿಕೊಂಡಿದ್ದು, ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಯಾವುದೇ ರೋಗಿಗಳ ಸ್ಥಿತಿ ಗಂಭೀರವಾಗಿಲ್ಲ ಎಂದು ಸರ್ಕಾರಿ ಸ್ವಾಮ್ಯದ ಮಹಾರಾಜ ಯಶವಂತರಾವ್‌ ಆಸ್ಪತ್ರೆಯ ಉಸ್ತುವಾರಿ ವೈದ್ಯ ಡಾ. ಬಸಂತ್‌ ಕುಮಾರ್‌ ನಿಂಗ್ವಾಲ್‌ ಪಿಟಿಐಗೆ ತಿಳಿಸಿದ್ದಾರೆ.

ಟ್ರಾನ್‌್ಸಜೆಂಡರ್‌ ಸಮುದಾಯದ ಸುಮಾರು 25 ಜನರನ್ನು ನಮ್ಮ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ರಾತ್ರಿ ಒಟ್ಟಿಗೆ ಫಿನೈಲ್‌ ಸೇವಿಸಿದ್ದಾರೆಂದು ಹೇಳಿಕೊಂಡಿದ್ದಾರೆ, ಆದರೆ ಇದನ್ನು ತಕ್ಷಣವೇ ದೃಢೀಕರಿಸಲು ಸಾಧ್ಯವಿಲ್ಲ ಎಂದು ಅಧಿಕಾರಿ ಹೇಳಿದರು.

ಹೆಚ್ಚುವರಿ ಪೊಲೀಸ್‌‍ ಉಪ ಆಯುಕ್ತ ರಾಜೇಶ್‌ ದಂಡೋಟಿಯಾ, ತನಿಖೆಯ ನಂತರವೇ ಮಂಗಳಮುಖಿ ಸಮುದಾಯದ ಜನರು ಯಾವ ವಸ್ತುವನ್ನು ಸೇವಿಸಿದ್ದಾರೆ ಮತ್ತು ಏಕೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಹೇಳಿದರು.

ಇನ್ನೊಬ್ಬ ಪೊಲೀಸ್‌‍ ಅಧಿಕಾರಿ, ಈ ಘಟನೆಯು ಟ್ರಾನ್‌್ಸಜೆಂಡರ್‌ ಸಮುದಾಯದ ಎರಡು ಸ್ಥಳೀಯ ಗುಂಪುಗಳ ನಡುವಿನ ವಿವಾದಕ್ಕೆ ಸಂಬಂಧಿಸಿರಬಹುದು ಎಂದು ಹೇಳಿದರು.

ವಾಲ್ಮೀಕಿ ನಿಗಮ ಹಗರಣ : ಮಾಜಿ ಸಚಿವ ನಾಗೇಂದ್ರ ಆಪ್ತನಿಗೆ ಇ.ಡಿ ಶಾಕ್‌

ಬೆಂಗಳೂರು,ಅ.16- ಕರ್ನಾಟಕ ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಭ್ರಷ್ಟಾಚಾರ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಆಪ್ತ ನೆಕ್ಕುಂಟಿ ನಾಗರಾಜ್‌ ಮನೆ ಮೇಲೆ ಜಾರಿನಿರ್ದೇಶನಾಲಯ(ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬಳ್ಳಾರಿಯಲ್ಲಿರುವ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಏಕಾಏಕಿ ದಿಢೀರನೆ 10ಕ್ಕೂ ಹೆಚ್ಚು ಇ.ಡಿ ಅಧಿಕಾರಿಗಳು ದಾಳಿ ನಡೆಸಿ ಕೆಲವು ಮಹತ್ವದ ದಾಖಲೆಗಳು, ಬ್ಯಾಂಕ್‌ ಖಾತೆಗಳು, ಚರಸ್ಥಿರ ಆಸ್ತಿ ಸೇರಿದಂತೆ ಮತ್ತಿತರ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

ಮಾಜಿ ಸಚಿವ ಹಾಗೂ ಹಾಲಿ ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕನಾಗಿರುವ ಬಿ.ನಾಗೇಂದ್ರ ಅವರ ಬಲಗೈ ಭಂಟನೆಂದೇ ಗುರುತಿಸಿಕೊಂಡಿದ್ದ ನೆಕ್ಕುಂಟಿ ನಾಗರಾಜ ಈ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಲ್ಲಿ ಒಬ್ಬರಾಗಿದ್ದಾರೆ ಎನ್ನಲಾಗಿದೆ.

ಹಣದ ವಹಿವಾಟು, ಬಳ್ಳಾರಿ ಲೋಕಸಭೆ ಚುನಾವಣಾ ವೇಳೆ ಮತದಾರರಿಗೆ ಅಕ್ರಮವಾಗಿ ಹಣ ಹಂಚಿಕೆ ಸೇರಿದಂತೆ ನಾಗೇಂದ್ರ ಅವರ ನಿರ್ದೇಶನದಂತೆ ಇವರು ಕೆಲಸ ಮಾಡಿದ್ದರು ಎಂದು ತಿಳಿದುಬಂದಿದೆ. ಕಳೆದ ಸೆ.16ರಂದು ಇ.ಡಿ ಅಧಿಕಾರಿಗಳು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು, ಬಳ್ಳಾರಿ ಸೇರಿದಂತೆ ಒಟ್ಟು 16 ಕಡೆ ದಾಳಿ ನಡೆಸಿದ್ದರು.

ಕರ್ನಾಟಕದ 12 ಮತ್ತು ಆಂಧ್ರಪ್ರದೇಶದ 4 ಸ್ಥಳಗಳು ಸೇರಿದಂತೆ ಒಟ್ಟು 16 ಕಡೆ ದಾಳಿಯಾಗಿತ್ತು. ತನಿಖೆಯ ಸಂದರ್ಭದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಮತ್ತು ಕೆಜಿಟಿಟಿಐಗೆ ಸೇರಿದ ಹಣವನ್ನು ಅಕ್ರಮವಾಗಿ ಬೇರೆಡೆಗೆ ವರ್ಗ ಮಾಡಿರುವುದು ಪತ್ತೆಯಾಗಿತ್ತು. ಆ ವೇಳೆ ಬಿ.ನಾಗೇಂದ್ರ ಅವರು ಪರಿಶಿಷ್ಟ ಪಂಗಡ ಕಲ್ಯಾಣ ಖಾತೆಯ ಸಚಿವರಾಗಿದ್ದರು.

ಬ್ಯಾಂಕ್‌ ಆಫ್‌ ಬರೋಡಾದ ಸಿದ್ದಯ್ಯ ರಸ್ತೆ ಶಾಖೆಯಲ್ಲಿನ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಖಾತೆಯಿಂದ ಎಸ್‌‍ಕೆಆರ್‌ ಇನ್‌ಫ್ರಾಸ್ಟ್ರಕ್ಚರ್‌ ಮತ್ತು ಗೋಲ್ಡನ್‌ ಎಸ್ಟಾಬ್ಲಿಷ್‌ಮೆಂಟ್‌ ಸಂಸ್ಥೆಗಳಿಗೆ 2.17 ಕೋಟಿ ಹಣ ವರ್ಗಾವಣೆಯಾಗಿತ್ತು. ಈ ಸಂಸ್ಥೆಗಳು ಬಿ.ನಾಗೇಂದ್ರ ಅವರ ಆಪ್ತರಾದ ನೆಕ್ಕುಂಟಿ ನಾಗರಾಜ್‌ ಅವರಿಗೆ ಸೇರಿದ್ದಾಗಿವೆ. ಈ ಮೊತ್ತದಲ್ಲಿ ಸುಮಾರು 1.20 ಕೋಟಿಯಷ್ಟು ನಾಗೇಂದ್ರ ಅವರ ಸಹೋದರಿ, ಸೋದರ ಮಾವ ಮತ್ತು ಆಪ್ತ ಸಹಾಯಕ ಸೇರಿದಂತೆ ಅವರ ಸಹಚರರು ಹಾಗೂ ಸಂಬಂಧಿಕರ ಖಾತೆಗಳಿಗೆ ವರ್ಗವಾಗಿದೆ.

ಕೆನರಾ ಬ್ಯಾಂಕ್‌ನ ವಿಲ್ಸನ್‌ಗಾರ್ಡನ್‌ ಶಾಖೆಯ ಕೆಜಿಟಿಟಿಐಯ ಖಾತೆಯಿಂದ 64 ಲಕ್ಷವನ್ನು ಸದ್ಗುರು ಶಿಕ್ಷಣ ಟ್ರಸ್ಟ್‌ ಮತ್ತು ಸದ್ಗುರು ಸೊಲ್ಯೂಷನ್‌್ಸಗೆ, ನಂತರ ಸ್ಕಿಲ್‌ ಪಾಯಿಂಟ್‌ ತರಬೇತಿ ಮತ್ತು ಸ್ಟೈಲ್‌ ಮಷೀನ್‌ ಸಂಸ್ಥೆ, ಮೆಸರ್ಸ್‌ ಧನಲಕ್ಷಿ ಎಂಟರ್‌ಪ್ರೈಸಸ್‌‍ ಖಾತೆಗೆ ವರ್ಗಾಯಿಸಿರುವುದು ತನಿಖೆ ವೇಳೆ ಗೊತ್ತಾಗಿದೆ.

ಬಳಿಕ ಈ ಮೊತ್ತವು ಎನ್‌.ರವಿಕುಮಾರ್‌ (ನೆಕ್ಕುಂಟಿ ನಾಗರಾಜ್‌ ಅವರ ಸಹೋದರ) ಮತ್ತು ಎನ್‌.ಯಶವಂತ್‌ ಚೌಧರಿ (ನೆಕ್ಕುಂಟಿ ನಾಗರಾಜ್‌ ಅವರ ಸೋದರಳಿಯ) ಅವರಿಗೆ ತಲುಪಿರುವುದು ಪತ್ತೆಯಾಗಿತ್ತು.

2024ರ ಫೆಬ್ರವರಿ 21ರಿಂದ ಮೇ6ರ ನಡುವೆ ನಿಗಮದ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾವಣೆ ಮೂಲಕ 84.63 ರೂ. ಕೋಟಿ ವಂಚನೆ ಮತ್ತು ದುರುಪಯೋಗದ ಬಗ್ಗೆ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದ ಡಿಜಿಎಂ ದೂರು ನೀಡಿದ್ದರು. ಅದರ ಆಧಾರದ ಮೇಲೆ ಅದೇ ವರ್ಷ ಜೂನ್‌ 3ರಂದು ಸಿಬಿಐ ಪ್ರಕರಣ ದಾಖಲಿಸಿತ್ತು. ಈ ಪ್ರಕರಣದ ತನಿಖೆಯ ವೇಳೆ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಕೆಜಿಟಿಟಿಐನ ಖಾತೆಗಳಿಂದಲೂ ನಾಗೇಂದ್ರ ಆಪ್ತರಿಗೆ ಹಣ ವರ್ಗಾವಣೆಯಾಗಿರುವುದು ಪತ್ತೆಯಾಗಿತ್ತು.

ಸಿಬಿಐ ಸಲ್ಲಿಸಿದ ವಸ್ತುಸ್ಥಿತಿ ವರದಿಯ ಆಧಾರದ ಮೇಲೆ, ರಾಜ್ಯದ ಹೈಕೋರ್ಟ್‌, ವಾಲೀಕಿ ಅಭಿವೃದ್ಧಿ ನಿಗಮದ ಮೇಲಿನ ಆರೋಪಗಳ ತನಿಖೆ ನಡೆಸಲು ಸಿಬಿಐಗೆ ಅನುಮತಿ ನೀಡಿತ್ತು.
ಬಳ್ಳಾರಿ ಮಹಾನಗರಪಾಲಿಕೆಯ 11ನೇ ವಾರ್ಡ್‌ನ ಬಿಜೆಪಿ ಸದಸ್ಯ ಗೋವಿಂದರಾಜು ಹಾಗೂ ಅವರ ತಂದೆ, ಮೊಟ್ಟೆ ವ್ಯಾಪಾರಿ ಕುಮಾರಸ್ವಾಮಿ ನಿವಾಸದಲ್ಲಿ ಕೇಂದ್ರ ತನಿಖಾ ದಳ (ಸಿಬಿಐ)ದ ಅಧಿಕಾರಿಗಳು ಶೋಧ ನಡೆಸಿದ್ದರು.

ಗಾಂಧಿನಗರದ 2ನೇ ತಿರುವಿನಲ್ಲಿರುವ ಗೋವಿಂದರಾಜು ನಿವಾಸದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿ, ದಾಖಲೆ ಪತ್ರಗಳನ್ನು ಸಂಗ್ರಹಿಸಿದ್ದರು. ಗೋವಿಂದ ರಾಜು ಅವರು ಮನೆ ಖರೀದಿಗಾಗಿ ಹಗರಣದ ಆರೋಪಿ ಶಾಸಕ ಬಿ.ನಾಗೇಂದ್ರ, ನೆಕ್ಕುಂಟಿ ನಾಗರಾಜ್‌ ಮೂಲಕ ವ್ಯವಹಾರ ನಡೆಸಿದ್ದರು. ಅದಕ್ಕೆ ವಾಲೀಕಿ ನಿಗಮದ ಹಣ ಬಳಕೆಯಾಗಿರುವ ಆರೋಪ ಇದೆ.

ರಷ್ಯಾ ತೈಲ ಖರೀದಿ ನಿಲ್ಲಿಸುವುದಾಗಿ ಮೋದಿ ಭರವಸೆ ನೀಡಿದ್ದಾರೆ ; ಟ್ರಂಪ್‌

ವಾಷಿಂಗ್ಟನ್‌, ಅ. 16 (ಎಪಿ) ಭಾರತದ ಪ್ರಧಾನಿ ನರೇಂದ್ರ ಮೋದಿ ತಮ್ಮ ದೇಶವು ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸುವುದಾಗಿ ವೈಯಕ್ತಿಕವಾಗಿ ಭರವಸೆ ನೀಡಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್‌್ಡ ಟ್ರಂಪ್‌ ಹೇಳಿದ್ದಾರೆ.

ಭಾರತ ಸರ್ಕಾರವು ದೃಢೀಕರಿಸದ ಈ ಬದಲಾವಣೆಯು, ಉಕ್ರೇನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸಲು ಮಾತುಕತೆ ನಡೆಸಲು ಮಾಸ್ಕೋ ಮೇಲೆ ಒತ್ತಡ ಹೇರುವ ಟ್ರಂಪ್‌ ಅವರ ಪ್ರಯತ್ನಗಳನ್ನು ಹೆಚ್ಚಿಸುತ್ತದೆ.

ತೈಲ ಇರುವುದಿಲ್ಲ. ಅವರು ತೈಲ ಖರೀದಿಸುತ್ತಿಲ್ಲ ಎಂದು ಟ್ರಂಪ್‌ ಹೇಳಿದರು. ಬದಲಾವಣೆ ತಕ್ಷಣವೇ ಆಗುವುದಿಲ್ಲ ಎಂದು ಅವರು ಹೇಳಿದರು, ಆದರೆ ಕಡಿಮೆ ಅವಧಿಯಲ್ಲಿ ಅದು ಸಾಧ್ಯವಾಗಲಿದೆ ಎಂದಿದ್ದಾರೆ.

ವಾಷಿಂಗ್ಟನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಕಾಮೆಂಟ್‌ಗಾಗಿ ತಕ್ಷಣ ಪ್ರತಿಕ್ರಿಯಿಸಲಿಲ್ಲ.ಸುಮಾರು ನಾಲ್ಕು ವರ್ಷಗಳ ಹಿಂದೆ ರಷ್ಯಾದ ಆಕ್ರಮಣದೊಂದಿಗೆ ಪ್ರಾರಂಭವಾದ ಉಕ್ರೇನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸಲು ಒತ್ತಾಯಿಸಲು ಟ್ರಂಪ್‌ ಅಸಮರ್ಥತೆಯಿಂದ ನಿರಾಶೆಗೊಂಡಿದ್ದಾರೆ.

ನಿರ್ಣಯಕ್ಕೆ ಪ್ರಾಥಮಿಕ ಅಡಚಣೆ ಎಂದು ಅವರು ಹೆಚ್ಚಾಗಿ ವಿವರಿಸುವ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಬಗ್ಗೆ ಅವರು ಅತೃಪ್ತಿ ವ್ಯಕ್ತಪಡಿಸಿದ್ದಾರೆ ಮತ್ತು ಅವರು ನಾಳೆ ಉಕ್ರೇನಿಯನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್ಸ್ಕಿ ಅವರನ್ನು ಭೇಟಿಯಾಗಲಿದ್ದಾರೆ. ಚೀನಾ ನಂತರ ಭಾರತವು ರಷ್ಯಾದ ತೈಲವನ್ನು ಖರೀದಿಸುವ ಎರಡನೇ ಅತಿದೊಡ್ಡ ದೇಶವಾಗಿದೆ ಮತ್ತು ಆಗಸ್ಟ್‌ನಲ್ಲಿ ಟ್ರಂಪ್‌ ಭಾರತವನ್ನು ಹೆಚ್ಚಿನ ಸುಂಕಗಳೊಂದಿಗೆ ಶಿಕ್ಷಿಸಿದ್ದರು.

ವರದಾನವಾಯಿತು ಶಕ್ತಿ ಯೋಜನೆ, ಶೇ.80 ರಷ್ಟು ಮಹಿಳಾ ಭಕ್ತರಿಂದಲೇ ಹಾಸನಾಂಬ ದರ್ಶನ

ಹಾಸನ,ಅ.16-ವರ್ಷಕ್ಕೊಮೆ ದರ್ಶನ ಭಾಗ್ಯ ನೀಡುವ ಶಕ್ತಿ ದೇವತೆ ಹಾಸನಾಂಬ ದರ್ಶನಕ್ಕೆ ರಾಜ್ಯದ ವಿವಿಧ ಮೂಲಗಳಿಂದ ಲಕ್ಷಾಂತರ ಮಹಿಳಾ ಭಕ್ತರು ಆಗಮಿಸುತ್ತಿದ್ದು, ಶಕ್ತಿ ಯೋಜನೆ ವರದಾನವಾಗಿದೆ.ಸಾರ್ವಜನಿಕ ದರ್ಶನ ಪ್ರಾರಂಭವಾದ ಕಳೆದ 6 ದಿನಗಳಿಂದ ಭೇಟಿ ನೀಡಿದ ಭಕ್ತರಲ್ಲಿ ಶೇ.80 ರಷ್ಟು ಮಹಿಳಾ ಭಕ್ತರೆ ಇದ್ದಾರೆ. ಸಾರಿಗೆ ಬಸ್‌‍ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯವಿರುವುದರಿಂದ ಕಳೆದ ವರ್ಷಕ್ಕಿಂತ ಈ ಭಾರಿ ಭಕ್ತರ ಸಂಖ್ಯೆ ಹೆಚ್ಚಳವಾಗಿದೆ.

ಉತ್ತರ ಕರ್ನಾಟಕ ಭಾಗದ ಹುಬ್ಬಳ್ಳಿ, ರಾಯಚೂರು, ಯಾದಗಿರಿ,ದಾರವಾಡ, ಚಿತ್ರದುರ್ಗ, ತುಮಕೂರು, ಕೋಲಾರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧ ಜಿಲ್ಲೆ ,ತಾಲ್ಲೂಕುಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ.

ಆ.10 ರಿಂದ 15 ರ ವರೆಗೆ ಸುಮಾರು 8,84,503 ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. ಮಳೆ, ಗಾಳಿ, ಹಗಲು-ರಾತ್ರಿ ಲೆಕ್ಕಿಸದೇ ಸರದಿ ಸಾಲಿನಲ್ಲಿ ನಿಂತು ದರ್ಶನ ಪಡೆದು ಪುನೀತರಾಗಿದ್ದಾರೆ. ಈ ಭಾರಿ ಜಿಲ್ಲಾಡಳಿತ ವತಿಯಿಂದ ಬಹಳ ಅಚ್ಚುಕಟ್ಟಾಗಿ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದು, ನಿರಾಸದಾಯಕವಾಗಿ ದರ್ಶನ ಪಡೆಯುತ್ತಿದ್ದಾರೆ.

ಇನ್ನು 7 ದಿನಗಳ ಕಾಲ ದರ್ಶನಕ್ಕೆ ಅವಕಾಶವಿದ್ದು, ನಿರೀಕ್ಷೆಗೂ ಮೀರಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ.ಈ ಭಾರಿ ಚಲನಚಿತ್ರ ನಟ-ನಟಿಯರು ,ಜನಪ್ರತಿನಿಧಿಗಳು, ಗಣ್ಯರು ಭೇಟಿ ನೀಡಿ ಶಿಸ್ತಾಗಿ ಶಿಷ್ಟಾಚಾರ ಪಾಲನೆ ಮಾಡುತ್ತಾ ದರ್ಶನ ಪಡೆದಿದ್ದಾರೆ.

ದೇವಿಯ ಅಲಂಕಾರ ಬದಲಾವಣೆ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 2 ರಿಂದ 3.30 ರ ವರೆಗೆ ದರ್ಶನ ವಿರಲಿಲ್ಲ. ಅದೆ ರೀತಿ ರಾತ್ರಿ 12 ರಿಂದ ಬೆಳಗ್ಗೆ 5 ರವರೆಗೆ ದರ್ಶನ ಸೌಲಭ್ಯವಿರುವುದಿಲ್ಲ.
ಪುನಃ ನಾಳೆ ಬೆಳಗ್ಗೆ ಎಂದಿನಂತೆ ದರ್ಶನ ಸಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣಬೈರೇಗೌಡ ರವರು ತಿಳಿಸಿದ್ದಾರೆ.

ಸಂಘ-ಸಂಸ್ಥೆಗಳ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸದಂತೆ ನಿಷೇಧಿಸಲು ಸಿಎಂಗೆ ಪ್ರಿಯಾಂಕ ಖರ್ಗೆ ಮತ್ತೊಂದು ಪತ್ರ

ಬೆಂಗಳೂರು, ಅ.16- ಶಾಲಾ ಕಾಲೇಜು, ಪಾರ್ಕ್‌ ಸೇರಿದಂತೆ ಸರ್ಕಾರಿ ಸ್ವತ್ತುಗಳಲ್ಲಿ ಆರ್‌ಎಸ್‌‍ಎಸ್‌‍ನ ಚಟುವಟಿಕೆಗಳನ್ನು ನಿರ್ಬಂಧಿಸಬೇಕೆಂದು ಪತ್ರ ಬರೆದು, ವಿವಾದ ಸೃಷ್ಟಿಸಿರುವ ಸಚಿವ ಪ್ರಿಯಾಂಕ ಖರ್ಗೆ ಮತ್ತೂ ಒಂದು ಹೆಜ್ಜೆ ಮುಂದೆ ಹೋಗಿ ಸರ್ಕಾರಿ ನೌಕರರು ಯಾವುದೇ ಸಂಘಸಂಸ್ಥೆಗಳ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಕಟ್ಟು ನಿಟ್ಟಿನ ನಿಷೇಧ ಜಾರಿಗೊಳಿಸಲು ಮತ್ತೊಂದು ಪತ್ರ ಬರೆದಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆಯಲಾಗಿರುವ ಪತ್ರದಲ್ಲಿ ಪ್ರಿಯಾಂಕ ಖರ್ಗೆ, ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ನೌಕರರುಗಳಿಗೆ ಕರ್ನಾಟಕ ನಾಗರಿಕ ಸೇವಾ(ನಡತೆ) ನಿಯಮಗಳು, 2021 ಅಡಿ ನಿಯಮ 5(1) ಪ್ರಕಾರ ಜಾರಿಯಲ್ಲಿರುವ ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲಿಸಲು ಆದೇಶಿಸಬೇಕು ಎಂದಿದ್ದಾರೆ.

ಯಾರೇ ಸರ್ಕಾರಿ ನೌಕರನು, ಯಾವುದೇ ರಾಜಕೀಯ ಪಕ್ಷದ ಅಥವಾ ರಾಜಕಾರಣದಲ್ಲಿ ಭಾಗವಹಿಸುವಂಥ ಯಾವುದೇ ಸಂಘ ಸಂಸ್ಥೆಯ ಸದಸ್ಯನಾಗಿರತಕ್ಕದ್ದಲ್ಲ ಅಥವಾ ಅವುಗಳೊಂದಿಗೆ ಅನ್ಯಥಾ ಸಂಬಂಧ ಹೊಂದಿರತಕ್ಕದ್ದಲ್ಲ ಅಥವಾ ಯಾವುದೇ ರಾಜಕೀಯ ಚಳುವಳಿ ಅಥವಾ ಚಟುವಟಿಕೆಯಲ್ಲಿ ಭಾಗವಹಿಸತಕ್ಕದ್ದಲ್ಲ, ಅದರ ಸಹಾಯಾರ್ಥ ವಂತಿಗೆ ನೀಡತಕ್ಕದ್ದಲ್ಲ ಅಥವಾ ಅದಕ್ಕೆ ಯಾವುದೇ ರೀತಿಯ ನೆರವು ನೀಡತಕ್ಕದ್ದಲ್ಲ ಎಂದು ಸ್ಪಷ್ಟವಾಗಿ ನಿರ್ದೇಶನ ನೀಡಲಾಗಿದೆ.

ಆದರು ಸಹ ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳು ಹಮಿಕೊಳ್ಳುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಭಾಗವಹಿಸುತ್ತಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ರಾಜ್ಯದ ಸರ್ಕಾರಿ ಅಧಿಕಾರಿ ಮತ್ತು ನೌಕರರು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳು ಹಮಿಕೊಳ್ಳುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಹಾಗೂ ಇದನ್ನು ಉಲ್ಲಂಘಿಸುವ ಅಧಿಕಾರಿ ನೌಕರರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದೆಂದು ತಿಳಿಸುವ ಸುತ್ತೋಲೆಯನ್ನು ಹೊರಡಿಸಲು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಮುಖ್ಯಮಂತ್ರಿ ಅವರಿಗೆ ಪ್ರಿಯಾಂಕ ಖರ್ಗೆ ಮನವಿ ಮಾಡಿಕೊಂಡಿದ್ದಾರೆ.

ಸರ್ಕಾರಿ ಸ್ವತ್ತುಗಳಲ್ಲಿ ಸಂಘ ಪರಿವಾರದ ಚಟುವಟಿಕೆಗಳನ್ನು ನಿರ್ಬಂಧಿಸುವಂತೆ ಪತ್ರ ಬರೆದಿದ್ದ ಪ್ರಿಯಾಂಕ ಖರ್ಗೆ ಅವರ ವಿರುದ್ಧ ನಾನಾ ರೀತಿಯ ಟೀಕೆಗಳು ಕೇಳಿ ಬಂದಿದ್ದವು. ಕೆಲವು ದುಷ್ಕರ್ಮಿಗಳು ನಿರಂತರವಾಗಿ ಕರೆ ಮಾಡಿ ತಮಗೆ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ಖುದ್ದು ಸಚಿವರು ಹೇಳಿಕೊಂಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ಪ್ರಿಯಾಂಕ ವಿರುದ್ದ ಬಾರಿ ಪ್ರಮಾಣದ ಟೀಕೆಗಳೇ ಕೇಳಿ ಬರುತ್ತಲೇ ಇವೆ. ಇಂತಹ ಸೂಕ್ಷ್ಮ ಸನ್ನಿವೇಶದಲ್ಲೂ ತಾವು ಬೆದರಿಕೆಗಳಿಗೆ ಜಗ್ಗುವುದಿಲ್ಲ ಎಂದು ಹೇಳುತ್ತಲೇ ಸಚಿವರು ಮತ್ತೊಂದು ಪತ್ರ ಬರೆಯುವ ಮೂಲಕ ಸಂಘ ಪರಿವಾರದ ಬೆಂಬಲಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (16-10-2025)

ನಿತ್ಯ ನೀತಿ : ಅವಿಶ್ರಾಂತ, ನಿಷ್ಕಾಮ ಕರ್ಮಯೋಗಿಗಳಾದ ಸೈನಿಕರ ತ್ಯಾಗ, ಬಲಿದಾನವು ನಮ್ಮ ನೆಮ್ಮದಿಗೆ ಕಾರಣವಾಗಿದೆ. ಅವರನ್ನು ನಮ್ಮ ಹೃನ್ಮನಗಳಲ್ಲಿ ಸದಾ ಸ್ಮರಿಸಬೇಕು.

ಪಂಚಾಂಗ : ಗುರುವಾರ, 16-10-2025
ವಿಶ್ವಾವಸುನಾಮ ಸಂವತ್ಸರ / ಅಯನ:ದಕ್ಷಿಣಾಯನ / ಋತು:ಸೌರ ಶರದ / ಮಾಸ: ಆಶ್ವಯುಜ / ಪಕ್ಷ:ಕೃಷ್ಣ / ತಿಥಿ: ದಶಮಿ / ನಕ್ಷತ್ರ: ಆಶ್ಲೇಷಾ / ಯೋಗ: ಶುಭ / ಕರಣ: ಬವ

ಸೂರ್ಯೋದಯ – ಬೆ.06.10
ಸೂರ್ಯಾಸ್ತ – 06.00
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30

ರಾಶಿಭವಿಷ್ಯ :
ಮೇಷ
: ಕೆಲವು ದಾಖಲೆಗಳ ಹುಡುಕಾಟದಲ್ಲೇ ಹೆಚ್ಚು ಸಮಯ ಕಳೆಯುವುದರಿಂದ ಸಮಯ ವ್ಯರ್ಥವಾಗಲಿದೆ.
ವೃಷಭ: ಆಹಾರ ವ್ಯತ್ಯಾಸ ದಿಂದ ಪಿತ್ತ ಸಂಬಂ ಅನಾರೋಗ್ಯ ಕಾಡಬಹುದು.
ಮಿಥುನ: ಕಾನೂನು ವ್ಯವಹಾರಗಳು ಶೀಘ್ರವಾಗಿ ಇತ್ಯರ್ಥವಾಗಲಿವೆ. ದೂರ ಪ್ರಯಾಣ ಮಾಡುವಿರಿ.

ಕಟಕ: ಯಾವುದೇ ಪರಿಸ್ಥಿತಿಯಲ್ಲೂ ಅವಸರದ ತೀರ್ಮಾನ ಕೈಗೊಳ್ಳುವುದು ಸೂಕ್ತವಲ್ಲ.
ಸಿಂಹ:ಸಣ್ಣಪುಟ್ಟ ವಿಷಯಗಳಿಗೂ ಹೆಚ್ಚಿನ ಮಹತ್ವ ಕೊಡುವಿರಿ. ಮಕ್ಕಳಿಂದ ಸಂತಸ ಸಿಗಲಿದೆ.
ಕನ್ಯಾ: ಹೊಸ ವ್ಯವಹಾರ ವನ್ನು ಪ್ರಾರಂಭಿಸಿದ್ದರೆ, ಪ್ರಚಾರ ಮಾಡುವ ಬಗ್ಗೆ ಹೆಚ್ಚು ಗಮನ ಹರಿಸಿ.

ತುಲಾ: ಬೇರೆಯವರು ನಿಮ್ಮೊಂದಿಗೆ ಗೆಳೆತನ ಬೆಳೆಸಲು ಬಯಸುತ್ತಾರೆ.
ವೃಶ್ಚಿಕ: ವಿದ್ಯಾರ್ಥಿಗಳಿಗೆ ಪಠ್ಯದ ವಿಚಾರಕ್ಕಿಂತ ಪಠ್ಯೇತರ ವಿಚಾರದಲ್ಲಿ ಆಸಕ್ತಿ ಮೂಡಲಿದೆ.
ಧನುಸ್ಸು: ಮನೆ ನಿರ್ಮಾಣ ಕೆಲಸದಲ್ಲಿರುವ ಅಡೆತಡೆಗಳು ಸಹೋದರರು, ಬಂಧುಗಳು ನೀಡುವ ಸಲಹೆ-ಸೂಚನೆಗಳಿಂದ ದೂರವಾಗಲಿವೆ.

ಮಕರ: ಸ್ವ ಉದ್ಯೋಗಿ ಗಳಿಗೆ ಉತ್ತಮ ಅವಕಾಶಗಳು ಲಭ್ಯವಾಗಲಿವೆ.
ಕುಂಭ: ಉನ್ನತ ಅ ಕಾರಿಗಳಿಗೆ ಹೊರ ರಾಜ್ಯಗಳಿಗೆ ವರ್ಗಾವಣೆಯಾಗುವ ಸಾಧ್ಯತೆಗಳಿವೆ.
ಮೀನ: ಕೆಲಸಗಳು ನಿಧಾನಗತಿಯಲ್ಲಿ ಸಾಗಲಿವೆ. ಮನದಲ್ಲಿರುವ ದುಗುಡ ನಿವಾರಿಸಿಕೊಳ್ಳಲು ಯತ್ನಿಸುವಿರಿ.