Home Blog Page 67

ರಾಜ್ಯದಲ್ಲೂ ಕೆಮ್ಮಿನ ಸಿರಪ್‌ಗಳ ಮೇಲೆ ನಿಗಾ ವಹಿಸುವಂತೆ ಸಚಿವ ಗುಂಡೂರಾವ್‌ ಸೂಚನೆ

ಬೆಂಗಳೂರು,ಅ.5- ರಾಜ್ಯದಲ್ಲೂ ಕೆಮ್ಮಿನ ಸಿರಪ್‌ಗಳ ಮೇಲೆ ನಿಗಾ ವಹಿಸುವಂತೆ ರಾಜ್ಯದ ಔಷಧಿ ನಿಯಂತ್ರಣ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ರಾಜಸ್ಥಾನ, ಮಧ್ಯಪ್ರದೇಶ ಮತ್ತಿತರ ಕಡೆ ಕೆಮ್ಮಿನ ಸಿರಪ್‌ನಿಂದಾಗಿ ಮಕ್ಕಳು ಮೃತಪಟ್ಟ ಪ್ರಕರಣಗಳ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.
ನಮ ರಾಜ್ಯಕ್ಕೆ ಕೋಲ್ಡ್ರೀಫ್‌ ಕಫ್‌ ಸಿರಪ್‌ ಪೂರೈಕೆ ಆಗಿಲ್ಲ. ಖಾಸಗಿಯಾಗಿ ತರಿಸಿಕೊಂಡಿದ್ದಾರಾ ಎಂಬ ಬಗ್ಗೆ ಪರೀಶೀಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ ಬೇರೆ ಬ್ರಾಂಡ್‌ಗಳ ಕೆಮಿನ ಸಿರಪ್‌ಗಳ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ಹೆಚ್ಚಿನ ಮಾಹಿತಿ ಸಿಗಲಿದೆ ಎಂದರು.

ತಮಿಳುನಾಡಿನ ಕೆಲ ಜಿಲ್ಲೆಗಳಿಗೆ ಮಾತ್ರ ಈ ಸಿರಪ್‌ ಸರಬರಾಜಾಗಿದ್ದು, ಲ್ಯಾಬ್‌ ವರದಿಗಳಲ್ಲಿ ಔಷಧಿಯಿಂದ ತೊಂದರೆಯಾಗಿರುವುದು ದೃಢಪಟ್ಟಿದೆ. ಇದರ ಪರಿಣಾಮವಾಗಿ ಔಷಧಿ ತಯಾರಿಕೆ ನಿಲ್ಲಿಸಲಾಗಿದೆ. ದೇಶಾದ್ಯಂತ ಕೋಲ್ಡ್ರೀಫ್‌ ಸಿರಪ್‌ನ ಮಾರಾಟ ನಿಷೇಧಿಸಲಾಗಿದ್ದು, ಜನರಿಗೆ ಈ ಬಗ್ಗೆ ಅರಿವು ಮೂಡಿಸಲಾಗಿದೆ ಎಂದರು.

ಯಾರೇ ಆಕ್ಷೇಪ ವ್ಯಕ್ತಪಡಿಸಿದರೂ ಸಮೀಕ್ಷೆಯಂತೂ ನಿಲ್ಲಲ್ಲ : ಡಿಕೆಶಿ

ಬೆಂಗಳೂರು, ಅ.5- ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ವಿರೋಧಿಸುವುದರಲ್ಲಿ ಅರ್ಥವಿಲ್ಲ, ಎಲ್ಲರೂ ಅಗತ್ಯ ಮಾಹಿತಿ ನೀಡುವುದು ಸೂಕ್ತ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಲಹೆ ನೀಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ವಿ.ಸೋಮಣ್ಣ ಸೇರಿದಂತೆ ಯಾರು ಬೇಕಾದರೂ ಆಕ್ಷೇಪ ವ್ಯಕ್ತಪಡಿಸಬಹುದು, ಅಪೇಕ್ಷೆಯನ್ನೂ ಪಡಬಹುದು. ಆದರೆ ಸಮೀಕ್ಷೆಯಂತೂ ನಡೆಯುತ್ತದೆ ಎಂದರು.

ಈ ಹಿಂದೆ ನಡೆದಿದ್ದಂತಹ ಸಮೀಕ್ಷೆ ಸರಿಯಿಲ್ಲ ಎಂದು ಹೇಳಿದ್ದಕ್ಕಾಗಿಯೇ ನಮ ಸರ್ಕಾರ ಹೊಸದಾಗಿ ಸಮೀಕ್ಷೆ ನಡೆಸುತ್ತಿದೆ. ಈಗಲೂ ವಿರೋಧ ಮಾಡುವುದು ಅರ್ಥಹೀನ ಎಂದು ತಿರುಗೇಟು ನೀಡಿದರು.

ಸಮೀಕ್ಷೆಯಲ್ಲಿ ಕೆಲವು ಖಾಸಗಿ ಮಾಹಿತಿಯ ಪ್ರಶ್ನೆಗಳಿವೆ. ಅವುಗಳಿಗೆ ಉತ್ತರ ನೀಡಬೇಕಿಲ್ಲ. ನ್ಯಾಯಾಲಯ ಕೂಡ ಈ ವಿಚಾರವನ್ನು ಸ್ಪಷ್ಟ ಪಡಿಸಿದೆ. ಕುರಿ, ಕೋಳಿ ಬಗ್ಗೆ, ವಾಚು, ಉಂಗುರ, ಫ್ರಿಡ್‌್ಜ, ಚಿನ್ನ ಎಷ್ಟಿವೆ ಎಂಬ ಬಗ್ಗೆ ಮಾಹಿತಿ ಕೇಳಬೇಡಿ, ಅವೆಲ್ಲಾ ಖಾಸಗಿ ವಿಚಾರ ಎಂದು ಅಧಿಕಾರಿಗಳಿಗೆ ನಾನು ಕೂಡ ಸೂಚನೆ ನೀಡಿದ್ದೇನೆ. ಅವರು ಯಾವ ರೀತಿ ಪರಿಗಣಿಸುತ್ತಾರೋ ಗೊತ್ತಿಲ್ಲ ಎಂದರು.

ಹೊಸದಾಗಿ ನಡೆಯುತ್ತಿರುವ ಸಮೀಕ್ಷೆಯಲ್ಲಿ ಎಲ್ಲರೂ ಭಾಗವಹಿಸಬೇಕು. ನಿಗದಿತ ಅವಧಿಯಲ್ಲಿ ಸಮೀಕ್ಷೆ ಮುಗಿಯದಿದ್ದರೆ ಸಮಯ ವಿಸ್ತರಣೆಯ ಬಗ್ಗೆ ನಾನು ಉತ್ತರ ನೀಡಲು ಸಾಧ್ಯವಾಗುವುದಿಲ್ಲ. ಆಯೋಗ ಮತ್ತು ಇಲಾಖೆ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಶಿವಮೊಗ್ಗದಲ್ಲಿ ನಾಲ್ಕು ಗ್ರಾಮಗಳು ಸಮೀಕ್ಷೆಯನ್ನು ಬಹಿಷ್ಕರಿಸಿರುವುದಕ್ಕೆ ಹಾಗೂ ಸಿದ್ದರಾಮಯ್ಯ ಮುಂದಿನ ಎರಡು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಸಚಿವ ಜಮೀರ್‌ ಅಹಮದ್‌ ಖಾನ್‌ ನೀಡಿರುವ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಲು ಡಿ.ಕೆ.ಶಿವಕುಮಾರ್‌ ನಿರಾಕರಿಸಿದರು. ಖಾಸಗಿ ಕೆಲಸಕ್ಕಾಗಿ ತಾವು ಹೊರ ರಾಜ್ಯಕ್ಕೆ ಪ್ರವಾಸ ತೆರಳುತ್ತಿದ್ದು, ನಾಳೆ ವಾಪಾಸ್‌‍ ಬರುತ್ತೇನೆ ಎಂದು ಹೇಳಿ ನಿರ್ಗಮಿಸಿದರು.

ಉತ್ತರ ಬಂಗಾಳದಾದ್ಯಂತ ನಿರಂತರ ಮಳೆ, ಭೂಕುಸಿತದಲ್ಲಿ 15ಕ್ಕೂ ಹೆಚ್ಚು ಮಂದಿ ಸಾವು

ಕೋಲ್ಕತ್ತ, ಅ.5-ಉತ್ತರ ಬಂಗಾಳದಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಡಾರ್ಜಿಲಿಂಗ್‌ನ ಮಿರಿಕ್‌ ಮತ್ತು ಸುಖಿಯಾ ಪೋಖಾರಿಯಲ್ಲಿ ಭೂಕುಸಿತ ಸಂಭವಿಸಿದ ಪರಿಣಾಮ 15 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಸಂಭವಿಸಿದೆ.

ಕುರ್ಸಿಯೊಂಗ್‌ ಬಳಿಯ ರಾಷ್ಟ್ರೀಯ ಹೆದ್ದಾರಿ 110 ರ ಉದ್ದಕ್ಕೂ ಇರುವ ಹುಸೇನ್‌ ಖೋಲಾದಲ್ಲಿ ಭಾರೀ ಮಳೆಯಿಂದ ಉಂಟಾದ ಭೂಕುಸಿತದಿಂದ ಈ ಅವಘಡ ಸಂಭವಿಸಿದೆ. ಡಾರ್ಜಿಲಿಂಗ್‌ ಜಿಲ್ಲಾ ಪೊಲೀಸರ ರಕ್ಷಣಾ ಕಾರ್ಯಾಚರಣೆ ಮುಂದುವರಿದಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಭಾರಿ ಮಳೆಯಿಂದ ಸಂಭವಿಸುತ್ತಿರುವ ಈ ಭೂಕುಸಿತಗಳಲ್ಲಿ ಮಿರಿಕ್‌ನ ಜಸ್ಬೀರ್‌ ಬಸ್ತಿ ಪ್ರದೇಶದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಇದರ ಜೊತೆಗೆ ಸುಖಿಯಾ ಪೊಖರಿ ಬ್ಲಾಕ್‌ನ ಬಿಜುವಾ ಗ್ರಾಮದ 78 ವರ್ಷದ ರಾಘುಬೀರ್‌ ರೈ ಅವರ ಮನೆಯ ಮೇಲೆ ಭೂಕುಸಿತವಾಗಿ ಮೃತಪಟ್ಟಿದ್ದಾರೆ. ಅವರ ಕುಟುಂಬದ ನಾಲ್ಕು ಸದಸ್ಯರು ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೇ ರೀತಿ, ಕಾಲಿಂಪಾಂಗ್‌ನಲ್ಲಿ ಒಂದು ಮಗು ಸೇರಿದಂತೆ ಹಲವರು ಸಾವನ್ನಪ್ಪಿದ್ದಾರೆ.

ಭಾರಿ ಮಳೆಯಿಂದ ಉಂಟಾದ ಭೂಕುಸಿತದಿಂದಾಗಿ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದೆ.ಡಾರ್ಜಿಲಿಂಗ್‌ ಮತ್ತು ಸಿಲಿಗುರಿ ನಡುವಿನ ಮುಖ್ಯ ರಸ್ತೆ ಸಂಪರ್ಕ ಕಡಿತಗೊಂಡಿದೆ. ಜಲ್ಪೈಗುರಿ, ಸಿಲಿಗುರಿ ಮತ್ತು ಕೂಚ್‌ಬೆಹಾರ್‌ಗಳಲ್ಲಿಯೂ ಮಳೆಯಾಗಿದ್ದು, ಹಲವಾರು ಪ್ರದೇಶಗಳು ಜಲಾವೃತಗೊಂಡಿವೆ. ನಿರಂತರ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ರಸ್ತೆಗಳು ಕುಸಿದು ಹೋಗಿವೆ, ಮನೆಗಳು ನಾಶಗೊಂಡಿವೆ.

ಡಾರ್ಜಿಲಿಂಗ್‌ ಜಿಲ್ಲಾ ಪೊಲೀಸ್‌‍ ತಂಡಗಳು ಪ್ರತಿಕೂಲ ಹವಾಮಾನದ ನಡುವೆ ರಕ್ಷಣಾ ಕಾರ್ಯಗಳ ನೇತೃತ್ವ ವಹಿಸಿವೆ. ಮಳೆ ಎಡೆಬಿಡದೇ ಸುರಿಯುತ್ತಿದ್ದು, ಮತ್ತಷ್ಟು ಭೂಕುಸಿತಗಳು ಸಂಭವಿಸಿದೆ. ಇದರಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರಕ್ಷಣಾ ಕಾರ್ಯಾಚರಣೆಗೂ ಮಳೆ ಅಡ್ಡಿ ಮಾಡಿದೆ.

ರಬಿಜ್ಹೋರಾ ಬಳಿ ಮತ್ತು ನದಿಯ ಉದ್ದಕ್ಕೂ ಇರುವ ತೀಸ್ತಾ ಬಜಾರ್‌ ಬಳಿ ಪ್ರವಾಹ ಉಂಟಾದ ಕಾರಣ, ಕಾಲಿಂಪಾಂಗ್‌ನಿಂದ ತೀಸ್ತಾ ಬಜಾರ್‌ ಮೂಲಕ ಡಾರ್ಜಿಲಿಂಗ್‌ಗೆ ಹೋಗುವ ರಸ್ತೆ ಮುಚ್ಚಲ್ಪಟ್ಟಿದೆ. ಕೊರೊನೇಷನ್‌ ಸೇತುವೆಯ ಮೂಲಕ ಸಿಕ್ಕಿಂ ಮತ್ತು ಡಾರ್ಜಿಲಿಂಗ್‌ ಬೆಟ್ಟಗಳ ಕಡೆಗೆ ಸಂಪರ್ಕ ಕಡಿತಗೊಂಡಿದೆ. ಪರ್ಯಾಯವಾಗಿ ಕಾಲಿಂಪಾಂಗ್‌ ಜಿಲ್ಲೆಯ ಲಾವಾ-ಗೋರುಬಥನ್‌ ಮಾರ್ಗವನ್ನು ಬಳಸುವಂತೆ ಪೊಲೀಸರು ಪ್ರಯಾಣಿಕರಿಗೆ ಮನವಿ ಮಾಡಿಕೊಂಡಿದ್ದಾರೆ.

ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಈ ಪ್ರದೇಶದಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಸೋಮವಾರ ಬೆಳಿಗ್ಗೆಯವರೆಗೆ ಉಪ-ಹಿಮಾಲಯನ್‌, ಪಶ್ಚಿಮ ಬಂಗಾಳದಲ್ಲಿ ಕಡಿಮೆ ಒತ್ತಡದ ಪ್ರದೇಶವು ಭಾರಿ ಅಥವಾ ಅತಿ ಹೆಚ್ಚಿನ ಮಳೆಯನ್ನು ತರಲಿದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ.

ಡಾರ್ಜಿಲಿಂಗ್‌ನ ನೆರೆಯ ಜಿಲ್ಲೆಯಾದ ಉತ್ತರ ಬಂಗಾಳದ ಅಲಿಪುರ್‌ದಾರ್‌ನಲ್ಲಿ ಸೋಮವಾರ ಬೆಳಿಗ್ಗೆ ತನಕ ಭಾರೀ ಮಳೆ ಮುಂದುವರಿಯಲಿದೆ. ಗುಡ್ಡಗಾಡುಗಳಿರುವ ಜಿಲ್ಲೆಗಳಲ್ಲಿ ರಾತ್ರಿಯಿಡೀ ನಿರಂತರ ಮಳೆಯಾಗುತ್ತಿರುವುದರಿಂದ, ನೆರೆಯ ಜಿಲ್ಲೆಯಾದ ಜಲ್ಪೈಗುರಿಯ ಮಲ್ಬಜಾರ್‌ನ ದೊಡ್ಡ ಪ್ರದೇಶವು ನೀರಿನಲ್ಲಿ ಮುಳುಗಿದೆ.

ತೀಸ್ತಾ, ಮಾಲ್‌ ಮತ್ತು ಇತರ ಬೆಟ್ಟದ ನದಿಗಳ ನೀರಿನ ಮಟ್ಟವು ಅಪಾಯದ ಮಟ್ಟಕ್ಕಿಂತ ಹೆಚ್ಚಾಗಿ ಹರಿಯುತ್ತಿದ್ದು, ಪ್ರವಾಹದಂತಹ ಪರಿಸ್ಥಿತಿಯನ್ನು ತಂದಿದೆ. ಬೆಳಿಗ್ಗೆ ತನಕ ಈ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ ಡಾರ್ಜಿಲಿಂಗ್‌ನಲ್ಲಿ 184.4 ಮಿ.ಮೀ ಮಳೆ ಸುರಿದಿದ್ದು, ಇದು ಸಾಮಾನ್ಯ ತಿಂಗಳ ಮಳೆಯ ಅರ್ಧ ಭಾಗಕ್ಕೂ ಹೆಚ್ಚು. ಹವಾಮಾನ ಇಲಾಖೆಯು ಜನರಿಗೆ ಮರಗಳು, ವಿದ್ಯುತ್‌ ಕಂಬಗಳ ಕೆಳಗೆ ಆಶ್ರಯ ಪಡೆಯದಂತೆ ಮತ್ತು ನೀರಿನ ಸಂಪರ್ಕವನ್ನು ತಪ್ಪಿಸುವಂತೆ ಸಲಹೆ ನೀಡಿದೆ. ಭೂಕುಸಿತ ಸಾಧ್ಯತೆ ಹೆಚ್ಚಾಗಿದೆ. ಸ್ಥಳೀಯರು ಎಚ್ಚರಿಕೆ ವಹಿಸಲು ತಿಳಿಸಲಾಗಿದೆ.

ಪಶ್ಚಿಮ ಬಂಗಾಳ ಸರ್ಕಾರ ಈ ಪರಿಸ್ಥಿತಿಗೆ ತಕ್ಕಂತೆ ರಕ್ಷಣಾ ಕಾರ್ಯಗಳನ್ನು ತೀವ್ರಗೊಳಿಸಿದ್ದು, ಪೊಲೀಸ್‌‍, ಫೈರ್‌ ಸರ್ವೀಸ್‌‍ಗಳು ಈ ತಂಡಗಳನ್ನು ಸ್ಥಳಕ್ಕೆ ಕಳುಹಿಸಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ದುರಂತಕ್ಕೆ ಸಂತಾಪ ವ್ಯಕ್ತಪಡಿಸಿ, ನೆರೆ ಪೀಡಿತ ಕುಟುಂಬಗಳಿಗೆ ಆರ್ಥಿಕ ನೆರವು ಘೋಷಿಸಿದ್ದಾರೆ.

ಜೋಳದ ದಂಟಿನಿಂದ ಸಿಹಿಬೆಲ್ಲ ತಯಾರಿಸಿದ ಪ್ರಗತಿಪರ ರೈತ ಮಹಾಲಿಂಗಪ್ಪ ಇಟ್ನಾಳ ಸಾಹಸ

ಹುಬ್ಬಳ್ಳಿ ಅ.5- ಮನಸಿದ್ದರೆ ಮಾರ್ಗ ಎಂಬಂತೆ ಬಾಗಲಕೋಟೆಯ ಪ್ರಗತಿಪರ ರೈತ ಮಹಾಲಿಂಗಪ್ಪ ಇಟ್ನಾಳ ಅವರು ಜೋಳದ ದಂಟಿನಿಂದ ಸಿಹಿಬೆಲ್ಲ ತಯಾರಿ ಅಚ್ಚರಿ ಮೂಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಬ್ಬಿನಿಂದ ಬೆಲ್ಲ ತಯಾರಿಸುತ್ತಾರೆ ಆದರೆ ಸಿಹಿ ಜೋಳದ ದಂಟಿನಿಂದ ಬೆಲ್ಲ ತಯಾರಿಸಬಹುದು ಎಂದರು.ರೈತರು ತಮ ಜಾನುವಾರುಗಳಿಗೆ ಅಗತ್ಯವಾದ ಜೋಳದ ದಂಟನ್ನು ಇಟ್ಟುಕೊಂಡು ಉಳಿದದ್ದನ್ನು ಮಾರಾಟ ಮಾಡುತ್ತಿದ್ದರು.ಇಲ್ಲವೇ, ಸುಟ್ಟು ಹಾಕುತ್ತಿದ್ದರು, ಆದರೆ, ಇದೀಗ ಜೋಳ ಬೆಳೆದ 120 ದಿನಗಳ ಒಳಗಾಗಿ ಕಟಾವು ಮಾಡಿ ಕೊಟ್ಟರೆ ಪ್ರತಿ ಟನ್‌ಗೆ 3,000 ಲಾಭ ಗಳಿಸಬಹುದಾಗಿದೆ ಎಂದರು.

ಕುತೂಹಲದಿಂದ ಜೋಳದ ದಂಟಿನಿಂದ ತಯಾರಿಸಿದ ಬೆಲ್ಲವನ್ನು ಲ್ಯಾಬ್‌ನಲ್ಲಿ ಪರೀಕ್ಷೆ ಮಾಡಿಸಿದೆ , ಕಬ್ಬಿನ ಬೆಲ್ಲಕ್ಕಿಂತ ಜೋಳದಿಂದ ತಯಾರಿಸಿದ ಬೆಲ್ಲ ಉತ್ತಮ ಎಂಬುದು ಸಾಬೀತಾಗಿದೆ ಎಂದರು.

ಇತ್ತೀಚೆಗೆ ಅಭಿವೃದ್ಧಿಗೊಂಡಿರುವ ಹೊಸ ತಳಿಯ ಸಿಹಿ ಜೋಳಗಳಲ್ಲಿ ಕಡ್ಡಿಯ ಗಾತ್ರ ದೊಡ್ಡದಾಗಿದ್ದು, ಸಿಹಿಯ ಅಂಶವೂ ಶೇ 70ರಷ್ಟಿದೆ ಇದನ್ನು ಗಮನಿಸಿ, ಕಬ್ಬಿನಿಂದ ಬೆಲ್ಲ ತಯಾರಿಸುವ ವಿಧಾನವನ್ನು ಅಳವಡಿಸಿಕೊಂಡು ಅ.8ರಂದು ಕೃಷಿ ವಿಜ್ಞಾನಿಗಳ ಸಮ್ಮುಖದಲ್ಲಿ ಮತ್ತೊಮೆ ಜೋಳದ ದಂಟಿನಿಂದ ರಸ ತೆಗೆದು ಬೆಲ್ಲ ತಯಾರಿಸುವ ಮೂಲಕ ಪ್ರಾತ್ಯಕ್ಷಿಕೆ ತೋರಿಸಲು ಉತ್ಸುಕನಾಗಿದ್ದೇನೆ.ಮುಂದೆ ಇದನ್ನು ಮಾರಾಟದ ಬಗ್ಗೆಯೂ ಯೋಜಿಸಿದ್ದೇನೆ ಎಂದು ರೈತ ಮಹಾಲಿಂಗಪ್ಪ ಇಟ್ನಾಳ ಹೇಳಿದರು.

ಶಿವಾರ್ಜುನ್‌ ಅವರಿಗೆ 2021ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ

ಬೆಂಗಳೂರು, ಅ.5- ಕಳೆದ 2021ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ಹಿರಿಯ ನಿರ್ಮಾಣ ನಿರ್ವಾಹಕ ಶಿವಕುಮಾರ್‌ ಎಸ್‌‍(ಶಿವಾರ್ಜುನ್‌) ಪೊಗರು ಚಿತ್ರಕ್ಕಾಗಿ ರಾಜ್ಯ ಪ್ರಶಸ್ತಿ ಪಡೆದುಕೊಂಡಿದ್ದಾರೆ.

40 ವರ್ಷಗಳ ಹಿಂದೆ ಸಂಸಾರದ ಗುಟ್ಟು, ಪ್ರೇಮ ಪರ್ವ ಮುಂತಾದ ಚಿತ್ರಗಳಲ್ಲಿ ನಟನಾಗಿ ಕಾಣಿಸಿಕೊಂಡಿದ್ದ ಶಿವಾರ್ಜುನ್‌ ಅವರು ನಂತರ ಗೌರಿಶಂಕರ್‌, ಎಸ್‌‍.ರಾಮಚಂದ್ರ, ಮಧುಸೂದನ್‌, ಸುಂದರನಾಥ ಸುವರ್ಣ ಅವರಂತಹ ಹಿರಿಯ ಛಾಯಾಗ್ರಾಹಕರ ಬಳಿ ಸಹಾಯಕ ಛಾಯಾಗ್ರಾಹಕರಾಗಿ ಕಾರ್ಯ ನಿರ್ವಹಿಸಿದ್ದಾರೆ.

ಆನಂತರ ನಿರ್ಮಾಣ ನಿರ್ವಾಹಕರಾಗಿ ಕನ್ನಡದ ಖ್ಯಾತ ಚಲನಚಿತ್ರ ನಿರ್ಮಾಣ ಸಂಸ್ಥೆಗಳಾದ ವಜ್ರೇಶ್ವರಿ, ಈಶ್ವರಿ, ರಾಮು ಫಿಲಂಸ್‌‍, ಕೆ.ಸಿ.ಎನ್‌.ಮೂವೀಸ್‌‍ ಹಾಗೂ ಅರ್ಜುನ್‌ ಸರ್ಜಾ ಅವರ ಶ್ರೀರಾಮ ಫಿಲಂಸ್‌‍ ನಿರ್ಮಾಣದ ಚಿತ್ರಗಳಿಗೆ ಶಿವಾರ್ಜುನ್‌ ನಿರ್ಮಾಣ ನಿರ್ವಾಹಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಅಷ್ಟೇ ಅಲ್ಲದೆ ಹೆಸರಾಂತ ನಿರ್ದೇಶಕ ರಾಜಮೌಳಿ ಅವರ ಸಿಂಹಾದ್ರಿ, ವಿಕ್ರಮಾರ್ಕುಡು, ಸ್ಟೂಡೆಂಟ್‌ ನಂ.1, ಛತ್ರಪತಿ ಚಿತ್ರಗಳಿಗೆ ಹಾಗೂ ತೆಲುಗು, ತಮಿಳಿನ ಸೂಪರ್‌ ಹಿಟ್‌ ಚಿತ್ರಗಳಿಗೂ ನಿರ್ಮಾಣ ನಿರ್ವಾಹಕರಾಗಿ(ಕರ್ನಾಟಕದಲ್ಲಿ) ಕೆಲಸ ಮಾಡಿದ್ದಾರೆ.

ಕನ್ನಡದ ಸುಮಾರು 600 ಚಿತ್ರಗಳಿಗೆ ಹಾಗೂ ಪರಭಾಷೆಯ ಸುಮಾರು 150ಕ್ಕೂ ಹೆಚ್ಚು ಚಿತ್ರಗಳಿಗೆ ನಿರ್ಮಾಣ ನಿರ್ವಾಹಕರಾಗಿ ಕೆಲಸ ಮಾಡಿರುವ ಶಿವಾರ್ಜುನ್‌, ಚಿರಂಜೀವಿ ಸರ್ಜಾ ಅಭಿನಯದ ಶಿವಾರ್ಜುನ ಚಿತ್ರವನ್ನು ನಿರ್ಮಾಣ ಕೂಡ ಮಾಡಿದ್ದಾರೆ.

ಲಾಕಪ್‌ ಡೆತ್‌, ಸಿಂಹದ ಮರಿ, ಎಕೆ 47, ಮೋಜುಗಾರ ಸೊಗಸುಗಾರ ಹೀಗೆ ಕನ್ನಡದ ಅನೇಕ ಸೂಪರ್‌ ಹಿಟ್‌ ಚಿತ್ರಗಳಿಗೆ ನಿರ್ಮಾಣ ನಿರ್ವಹಣೆ ಮಾಡಿರುವ ಶಿವಾರ್ಜುನ್‌ ಅವರಿಗೆ ಪ್ರಸ್ತುತ 2021 ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಯಲ್ಲಿ ಧ್ರುವ ಸರ್ಜಾ ಅಭಿನಯದ ಪೊಗರು ಚಿತ್ರದ ನಿರ್ಮಾಣ ನಿರ್ವಹಣೆಗಾಗಿ ರಾಜ್ಯ ಪ್ರಶಸ್ತಿ ಬಂದಿದೆ.

ಕೈಕೊಟ್ಟ ಎಂಜಿನ್‌, ತುರ್ತು ಎಂಜಿನ್ ಸಹಾಯದಿಂದ ಲ್ಯಾಂಡ್ ಆದ ಏರ್‌ ಇಂಡಿಯಾ ವಿಮಾನ, ತಪ್ಪಿದ ಅನಾಹುತ

ಮುಂಬೈ, ಅ.5- ಅಮೃತಸರದಿಂದ ಬ್ರಿಟನ್‌ನ ಬರ್ಮಿಂಗ್ಹ್ಯಾಮ್‌ಗೆ ಹೋಗುತ್ತಿದ್ದ ಬೋಯಿಂಗ್‌ 787 ಏರ್‌ ಇಂಡಿಯಾ ವಿಮಾನ ಲ್ಯಾಂಡಿಂಗ್‌ ಸಮಯದಲ್ಲಿ ಇಂಜಿನ್‌ ಕೈಕೊಟ್ಟು ಸಂದರ್ಭದಲ್ಲಿ ಪೈಲಟ್‌ಗಳು ಸಯಂಚಾಲಿತ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ವಿಮಾನ ನಿಲ್ದಾಣದಲ್ಲಿ ಇಳಿಸಿದ್ದಾರೆ.

ಎರಡು ಎಂಜಿನ್‌ ವೈಫಲ್ಯ ಅಥವಾ ಸಂಪೂರ್ಣ ಎಲೆಕ್ಟ್ರಾನಿಕ್ಸ್ ಅಥವಾ ಹೈಡ್ರಾಲಿಕ್‌ ವೈಫಲ್ಯದ ಸಂದರ್ಭದಲ್ಲಿ ವಿಮಾನವನ್ನು ಸ್ವಯಂಚಾಲಿತಕ್ಕೆ ನಿಯೋಜಿಸಲ್ಪಡುತ್ತದೆ. ಇದು ತುರ್ತು ವಿದ್ಯುತ್‌ ಉತ್ಪಾದಿಸಲು ಗಾಳಿಯ ವೇಗವನ್ನು ಬಳಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶನಿವಾರ ಸಂಜೆ ಅಮೃತಸರದಿಂದ ಬರ್ಮಿಂಗ್ಹ್ಯಾಮ್‌ಗೆ ತೆರಳಿದ್ದ ವಿಮಾನದ ಅಂತಿಮ ಹಂತದ ಸಮೀಪಿಸುತ್ತಿದಂತೆ ಏರ್‌ ಟರ್ಬೈನ್‌ ಚಾಲನೆಗೊಳಿಸಿದಾಗ ವಿದ್ಯುತ್‌ ಮತ್ತು ಹೈಡ್ರಾಲಿಕ್‌ ಸಾಮಾನ್ಯವಾಗಿದ್ದವು ಮತ್ತು ವಿಮಾನವು ಬರ್ಮಿಂಗ್ಹ್ಯಾಮ್‌ನಲ್ಲಿ ಸುರಕ್ಷಿತ ಇಳಿಯಿತು ಏರ್‌ ಇಂಡಿಯಾ ಹೇಳಿಕೆಯಲ್ಲಿ ತಿಳಿಸಿದೆ.

ಆದಾಗ್ಯೂ, ವಿಮಾನದಲ್ಲಿದ್ದ ಜನರ ಸಂಖ್ಯೆ ಸೇರಿದಂತೆ ನಿರ್ದಿಷ್ಟ ವಿವರಗಳನ್ನು ವಿಮಾನಯಾನ ಸಂಸ್ಥೆ ಹಂಚಿಕೊಂಡಿಲ್ಲ.ಪ್ರಯಾಣಿಕರಿಗೆ ಯಾವುದೇ ಸಮಸ್ಯೆ ಆಗದಂತೆ ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಏರ್‌ ಇಂಡಿಯಾ ಹೇಳಿಕೆಯಲ್ಲಿ ತಿಳಿಸಿದೆ.ವಿಮಾನವನ್ನು ಸಂಪೂರ್ಣ ತಪಾಸಣೆಗಾಗಿ ಬರ್ಮಿಂಗ್ಹ್ಯಾಮ್‌ನಿಂದ ನವದೆಹಲಿ ಹಾರಾಟವನ್ನು ರದ್ದುಗೊಳಿಸಲಾಗಿದೆ ಎಂದು ಏರ್‌ ಇಂಡಿಯಾ ಹೇಳಿದೆ.

ಸಚಿವ ಜಮೀರ್‌ ಹೇಳಿಕೆಗೆ ಸಂಸದ ಇ.ತುಕಾರಾಂ ತಿರುಗೇಟು

ಬೆಂಗಳೂರು, ಅ.5– ಸಂಪುಟದಲ್ಲಿ ಸಚಿವರಾಗಲು ಶುದ್ಧ ಚಾರಿತ್ರ್ಯದ ಅಗತ್ಯ ಇದೆ ಎಂದು ಹೇಳುವ ಮೂಲಕ ಸಂಸದ ಇ.ತುಕಾರಾಂ, ಸಚಿವ ಜಮೀರ್‌ ಅಹಮದ್‌ಖಾನ್‌ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನು ಇಂದು ಬೆಂಗಳೂರಿನಲ್ಲಿ ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಲ್ಲಿ ಜವಾಹರ್‌ಲಾಲ್‌ ನೆಹರು ಅವರ ಕಾಲದಿಂದಲೂ ಹೈಕಮಾಂಡ್‌ ಸಂಸ್ಕೃತಿಯಿದೆ. ಮನಮೋಹನ್‌ಸಿಂಗ್‌ ಪ್ರಧಾನಿಯಾಗಿದ್ದಾಗಲೂ ಇದು ಜಾರಿಯಲ್ಲಿತ್ತು. ಸಂಪುಟ ಸೇರ್ಪಡೆಯ ಬಗ್ಗೆ ಹಿರಿಯ ವರಿಷ್ಠ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ. ನಮ್ಮ ಹಂತದಲ್ಲಿ ಈ ವಿಚಾರಗಳು ನಿರ್ಧಾರವಾಗುವುದಿಲ್ಲ ಎಂದರು.

ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವಾಗ ಸರ್ಕಾರಕ್ಕೆ ಯಾರಿಂದ ಒಳ್ಳೆಯದಾಗಲಿದೆ. ಯಾರಿಗೆ ಕ್ಲೀನ್‌ ಇಮೇಜಿದೆ, ಪಕ್ಷಕ್ಕೆ ಯಾರು ನಿಷ್ಠರಾಗಿದ್ದಾರೆ ಎಂಬ ವಿಷಯಗಳನ್ನು ಪರಾಮರ್ಶಿಸಲಾಗುತ್ತದೆ ಎಂದರು.

ಪಕ್ಷ ಮತ್ತು ಆಡಳಿತಕ್ಕೆ ಒಳ್ಳೆಯ ಹೆಸರು ಬರಬೇಕು ಎಂದರೆ ತಿರುಪತಿಯ ವೆಂಕಟೇಶ್ವರ ಸ್ವಾಮಿಯ ಕಿರೀಟದಲ್ಲಿರುವ ವಜ್ರದಂತೆ ಶುದ್ಧವಾಗಿರಬೇಕು. ಸಚಿವ ಜಮೀರ್‌ ಅಹಮದ್‌ಖಾನ್‌ ಹೇಳಿಕೆ ನೀಡಿ, ಬಿ.ನಾಗೇಂದ್ರ ಮತ್ತೆ ಸಚಿವರಾಗುತ್ತಾರೆ ಎಂದಿರುವುದು ಸಂಪೂರ್ಣ ವೈಯಕ್ತಿಕ ಹೇಳಿಕೆ. ಅಂತಿಮ ತೀರ್ಮಾನವನ್ನು ಕಾಂಗ್ರೆಸ್‌‍ ಹೈಕಮಾಂಡ್‌ ತೆಗೆದುಕೊಳ್ಳುತ್ತದೆ ಎಂದಿದ್ದಾರೆ.
ಬಿ. ನಾಗೇಂದ್ರ ಮಹರ್ಷಿ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಗಳ ಹಗರಣದ ಆರೋಪಕ್ಕೆ ಗುರಿಯಾಗಿ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರನ್ನು ಮರಳಿ ಸಂಪುಟಕ್ಕೆ ಸೇರಿಸಿಕೊಳ್ಳುವಪ್ರಯತ್ನಗಳು ನಡೆಯುತ್ತಿವೆ.

ಈ ಹಂತದಲ್ಲಿ ಅದೇ ಜಿಲ್ಲೆಯ ಸಂಸದರು ಆಗಿರುವ ತುಕಾರಾಂ, ಸಂಪುಟಕ್ಕೆ ಸೇರಲು ಶುದ್ಧ ಚಾರಿತ್ರ್ಯ ಅಗತ್ಯವಿದೆ ಎಂದು ಹೇಳುವ ಮೂಲಕ ಬಿ. ನಾಗೇಂದ್ರ ಅವರ ಸೇರ್ಪಡೆಗೆ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.ಸಿದ್ದರಾಮಯ್ಯ ಅವರ ಸರ್ಕಾರ 5 ವರ್ಷಗಳ ಕಾಲ ಹೆಚ್ಚು ಸಕ್ರಿಯವಾಗಿ, ಚುರುಕಾಗಿ ಜನಪರ ಕೆಲಸಗಳನ್ನು ಮುಂದುವರೆಸಲಿ ಎಂದು ಅವರು ಹೇಳಿದರು.

ಖ್ಯಾತ ಸಾಹಿತಿ, ಕತೆಗಾರ ಪ್ರೊ.ಮೊಗಳ್ಳಿ ಗಣೇಶ್‌ ವಿಧಿವಶ

ಬೆಂಗಳೂರು, ಅ.5-ಖ್ಯಾತ ಸಾಹಿತಿ, ಹಿರಿಯ ಕತೆಗಾರ ಪ್ರೊ.ಮೊಗಳ್ಳಿ ಗಣೇಶ್‌ (64) ಅವರು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಅವರಿಗೆ ಪತ್ನಿ, ಮೂವರು ಪುತ್ರಿಯರು ಸೇರದಂತೆ ಆಪಾರ ಸಂಖ್ಯೆಯ ಓದುಗರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮಾದನಾಯಕನಹಳ್ಳಿಯಲ್ಲಿ ನಡೆಸಲಾಗುತ್ತದೆ. ಕಳೆದ ಹಲವು ದಿನಗಳಿಂದ ಅವರು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು.ಇದಕ್ಕಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಶಿವರಾಜ್‌ ತಂಗಡಿಗಿ ಸೇರಿದಂತೆ ಅನೇಕ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

1963ರ ಜುಲೈ 1ರಂದು ಚನ್ನಪಟ್ಟಣ ತಾಲೂಕಿನ ಸಂತೆಮೊಗೇನಹಳ್ಳಿಯಲ್ಲಿ ಜನಿಸಿದ ಡಾ.ಮೊಗಳ್ಳಿ ಗಣೇಶ್‌ ಕನ್ನಡದ ಪ್ರಮುಖ ಕಥೆಗಾರ, ಪ್ರಬಂಧಕಾರ, ಕಾದಂಬರಿ ಮತ್ತು ವೈಚಾರಿಕ ಚಿಂತಕರಾಗಿದ್ದರು.ಡಾ. ಮೊಗಳ್ಳಿ ಗಣೇಶ್‌ ಅವರ ನಿಧನ ಕನ್ನಡ ಸಾಹಿತ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕೃತಿಗಳು ದಲಿತ ಅಸಿತೆ, ಸಾಮಾಜಿಕ ನ್ಯಾಯ ಮತ್ತು ದೇಸಿ ಚಿಂತನೆಯನ್ನು ಶಾಶ್ವತಗೊಳಿಸುತ್ತವೆ. ಸಾಹಿತ್ಯ ಅಕಾಡಮಿ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳು ಅವರಿಗೆ ಸಂದಿವೆ.

ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಸುಮಾರು 28 ವರ್ಷಗಳ ಕಾಲ ಪ್ರಾಧ್ಯಾಪಕರಾಗಿದ್ದ ಮೊಗಳ್ಳಿ ಗಣೇಶ್‌ ತಮ ವಿಶಿಷ್ಟ ಶೈಲಿಯ ಕಥೆಗಳ ಮೂಲಕ ಅವರು ಸಾಹಿತ್ಯ ಲೋಕದಲ್ಲಿ ತಮದೇ ಆದ ಛಾಪು ಮೂಡಿಸಿದ್ದವರು. ಹಂಪಿಯ ಕನ್ನಡ ವಿಶ್ವವಿದ್ಯಾನಿಲಯದಲ್ಲಿ ಸೇವೆ ಸಲ್ಲಿಸಿದ್ದ ಅವರು ಸೂರ್ಯನನ್ನು ಬಚ್ಚಿಡಬಹುದೆ? ಮತ್ತು ಅನಾದಿ ಕಾವ್ಯ ಸಂಕಲನಗಳ ಮೂಲಕ ಹೆಸರು ಮಾಡಿದರು.

ಹಳ್ಳಿಯ ಸರಳ ಜೀವನದ ಅನುಭವಗಳು ಅವರ ಸಾಹಿತ್ಯದಲ್ಲಿ ಮಣ್ಣಿನ ವಾಸನೆಯನ್ನು ತುಂಬಿದವು. ಪ್ರಾಥಮಿಕ ಶಿಕ್ಷಣವನ್ನು ಹಳ್ಳಿಯಲ್ಲೇ ಪಡೆದ ಅವರು, ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿದ್ದರು. ನಂತರ ಜಾನಪದ ಅಧ್ಯಯನದಲ್ಲಿ ಡಾಕ್ಟರೇಟ್‌ ಪದವಿ ಪಡೆದರು. ಪ್ರಬಲ ದಲಿತ ಚಿಂತಕರಾಗಿದ್ದ ಅವರು ದೇಶದ ಪ್ರತಿಷ್ಠತ ವಿಶ್ವವಿದ್ಯಾಲಯಗಳಿಗೆ ಆಹ್ವಾನಿತರಾಗಿ ಹೋಗುತ್ತಿದ್ದರು.

ಬುಗುರಿ, ಮಣ್ಣು, ಅತ್ತೆ, ಭೂಮಿ, ಕನ್ನೆಮಳೆ, ದೇವರ ದಾರಿ, ಮೊಗಳ್ಳಿ ಕಥೆಗಳು ಮುಂತಾದವು ಮೊಗಳ್ಳಿ ಗಣೇಶ್‌ ಅವರ ಕಥಾ ಸಂಕಲನಗಳು. ತೊಟ್ಟಿಲು, ಕಿರೀಟ ಅವರ ಕಾದಂಬರಿಗಳು. ಬೇರು ಅವರ ಬೃಹತ್‌ ಕಾದಂಬರಿ. ಕಥನ ಅವರ ಪ್ರಬಂಧ ಸಂಕಲನ. ಸೊಲ್ಲು, ವಿಮರ್ಶೆ, ಶಂಬಾ ಭಾಷಿಕ ಸಂಶೋಧನೆ, ತಕರಾರು ಅವರ ವಿಮರ್ಶಾ ಕೃತಿಗಳು. ವಿಶ್ಲೇಷಣೆ ಎಂಬ ಅಂಕಣ ಕೂಡಾ ಜನಪ್ರಿಯ. ಅಂಬೇಡ್ಕರ್‌ ಎಂಬ ಮಹಾನದಿ ಮತ್ತು ದಲಿತೀಕರಣಗೊಂಡ ಗಾಂಧೀಜಿ ಅವರ ಚಿಂತನ ಕೃತಿ. ಗಣೇಶ್‌ ಇತರ ಭಾಷೆಗಳ ಕೃತಿಗಳನ್ನು ಕನ್ನಡಕ್ಕೆ ತಂದರೆ, ಅವರ ಅನೇಕ ಬರಹಗಳು ಇತರ ಭಾಷೆಗಳಿಗೆ ಅನುವಾದಗೊಂಡಿದೆ.

ಸಾಹಿತ್ಯ ಸಾಧನೆಯಲ್ಲಿ ಅವರು ಕಥೆ, ಕವನ, ವಿಮರ್ಶೆ ಮತ್ತು ಆತಕಥನದಲ್ಲಿ ತಮ ಛಾಪು ಮೂಡಿಸಿದರು. ಬುಗುರಿ ಕಥೆಯಲ್ಲಿ ಬಾಲಕನ ಮನಸ್ಥಿತಿ ಮತ್ತು ಕ್ರೂರ ಪ್ರಪಂಚದ ಆಘಾತವನ್ನು ಅಪೂರ್ವವಾಗಿ ಚಿತ್ರಿಸಿದ್ದಾರೆ. ಭತ್ತ ಕಥೆಯು ಹಸಿವು, ಅವಮಾನ ಮತ್ತು ದಸಂಸ ಹೋರಾಟದ ಹಿನ್ನೆಲೆಯಲ್ಲಿ ಸಾಹಿತ್ಯದ ಮೂಲಕ ಹರಡಿದೆ. ಇದು ಓದುಗರಲ್ಲಿ ಬಾಲ್ಯದ ನೆನಪುಗಳನ್ನು ಉದ್ದೀಪಿಸುವಂತಿದೆ. ಅವರ ಇತರ ಕಥಾ ಸಂಕಲನಗಳಾದ ಮಣ್ಣು, ಅತ್ತೆ, ಭೂಮಿ, ಕನ್ನೆಮಳೆ, ದೇವರ ದಾರಿ ಮತ್ತು ಮೊಗಳ್ಳಿ ಕಥೆಗಳು ದೇಸಿ ಜೀವನದ ಸೂಕ್ಷ್ಮತೆಗಳನ್ನು ಬಿಂಬಿಸುತ್ತವೆ. ದೇವರ ದಾರಿಗೆ ಡಾ. ಬೆಸಗರಹಳ್ಳಿ ರಾಮಣ್ಣ ಪ್ರಶಸ್ತಿ ಲಭಿಸಿತು.

ಮೊಗಳ್ಳಿ ಗಣೇಶ್‌ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ವರನಟ ಡಾ.ರಾಜಕುಮಾರ್‌ ಹೆಸರಿನಲ್ಲಿರುವ ಅಧ್ಯಯನ ಪೀಠಕ್ಕೆ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಕಾವ್ಯ ಕ್ಷೇತ್ರದಲ್ಲಿ ದೇವಸ್ಮಶಾನ ಸಂಕಲನ ಮಹತ್ವದ್ದು. ಇದಕ್ಕೆ ಪು.ತಿ.ನ. ಕಾವ್ಯ ಪ್ರಶಸ್ತಿ ಲಭಿಸಿತು.

ಸಚಿವ ಶಿವರಾಜ್‌ ತಂಗಡಗಿ ಸಂತಾಪ
ಕನ್ನಡದ ಖ್ಯಾತ ಕಥೆಗಾರ,ವಿಮರ್ಶಕ ಡಾ. ಮೊಗಳ್ಳಿ ಗಣೇಶ್‌ ಅವರ ನಿಧನಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್‌ ತಂಗಡಗಿ ಶೋಕ ವ್ಯಕ್ತಪಡಿಸಿದ್ದಾರೆ. ಕನ್ನಡ ಸಾಹಿತ್ಯಕ್ಕೆ ಮೊಗಳ್ಳಿ ಗಣೇಶ್‌ ಅವರ ಕೊಡುಗೆ ಗಮನಾರ್ಹ. ತಮ ವಿಶಿಷ್ಟ ಶೈಲಿಯ ಕಥೆಗಳ ಮೂಲಕ ಅವರು ಸಾಹಿತ್ಯ ಲೋಕದಲ್ಲಿ ತಮದೇ ಆದ ಛಾಪು ಮೂಡಿಸಿದ್ದವರು. ಹಂಪಿಯ ಕನ್ನಡ ವಿಶ್ವವಿದ್ಯಾನಿಲಯದಲ್ಲಿ ಸೇವೆ ಸಲ್ಲಿಸಿದ್ದ ಅವರು ಸೂರ್ಯನನ್ನು ಬಚ್ಚಿಡಬಹುದೆ? ಮತ್ತು ಅನಾದಿ ಕಾವ್ಯ ಸಂಕಲನಗಳ ಮೂಲಕ ಹೆಸರು ಮಾಡಿದರು.

ಬುಗುರಿ, ಮಣ್ಣು, ಅತ್ತೆ, ಭೂಮಿ, ಕನ್ನೆಮಳೆ, ದೇವರ ದಾರಿ, ಮೊಗಳ್ಳಿ ಕಥೆಗಳು (ಆ ವರೆಗಿನ ಬಹುಪಾಲು ಕಥೆಗಳ ಸಂಕಲನ) ಮುಂತಾದವು ಮೊಗಳ್ಳಿ ಗಣೇಶ್‌ ಅವರ ಕಥಾ ಸಂಕಲನಗಳು. ತೊಟ್ಟಿಲು, ಕಿರೀಟ ಅವರ ಕಾದಂಬರಿಗಳು. ಬೇರು ಅವರ ಬೃಹತ್‌ ಕಾದಂಬರಿ. ಕಥನ ಅವರ ಪ್ರಬಂಧ ಸಂಕಲನ. ಸೊಲ್ಲು, ವಿಮರ್ಶೆ, ಶಂಬಾ ಭಾಷಿಕ ಸಂಶೋಧನೆ, ತಕರಾರು ಅವರ ವಿಮರ್ಶಾ ಕೃತಿಗಳು. ವಿಶ್ಲೇಷಣೆ ಎಂಬ ಅಂಕಣ ಕೂಡಾ ಜನಪ್ರಿಯ. ಅಂಬೇಡ್ಕರ್‌ ಎಂಬ ಮಹಾನದಿ ಮತ್ತು ದಲಿತೀಕರಣಗೊಂಡ ಗಾಂಧೀಜಿ ಅವರ ಚಿಂತನ ಕೃತಿ. ಗಣೇಶ್‌ ಇತರ ಭಾಷೆಗಳ ಕೃತಿಗಳನ್ನು ಕನ್ನಡಕ್ಕೆ ತಂದರೆ, ಅವರ ಅನೇಕ ಬರಹಗಳು ಇತರ ಭಾಷೆಗಳಿಗೆ ಅನುವಾದಗೊಂಡಿದೆ.

ಮೊಗಳ್ಳಿ ಗಣೇಶ್‌ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ವರನಟ ಡಾ.ರಾಜ್‌ಕುಮಾರ್‌ ಹೆಸರಿನಲ್ಲಿರುವ ಅಧ್ಯಯನ ಪೀಠಕ್ಕೆ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರೂ.ಆಗಿದ್ದ ಮೊಗಳ್ಳಿ ಗಣೇಶ್‌ ಅವರ ನಿಧನದಿಂದ ಕನ್ನಡ ಸಾಹಿತ್ಯ ಒಬ್ಬ ಅತ್ಯುತ್ತಮ ಬರಹಗಾರನನ್ನು ಕಳೆದುಕೊಂಡಿದೆ ಎಂದು ಸಚಿವರು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ಕೆಮ್ಮಿನ ಸಿರಪ್‌ ದುರಂತ : 14 ಮಕ್ಕಳು ಸಾವಿನ ಬಗ್ಗೆ ತನಿಖೆ ವೇಳೆ ಸ್ಪೋಟಕ ಅಂಶ ಬಹಿರಂಗ

ಭೋಪಾಲ್‌‍,ಅ.5-ಮಧ್ಯಪ್ರದೇಶದಲ್ಲಿ 14 ಮಕ್ಕಳು ಸಾವಿನ ಬಗ್ಗೆ ತನಿಖೆ ವೇಳೆ ಕೋಲ್ಡ್ರಿಫ್‌ ಕೆಮ್ಮಿನ ಸಿರಪ್‌ನಲ್ಲಿ ಹೆಚ್ಚು ವಿಷಕಾರಿ ವಸ್ತು ಇರುವುದು ಕಂಡುಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (ಸಿಡಿಎಸ್‌‍ಸಿಒ) ಸುಮಾರು 6 ರಾಜ್ಯಗಳಲ್ಲಿ ಸಿರಪ್‌ಗಳು,ಮಾತ್ರೆ ಸೇರಿದಂತೆ 19 ಔಷಧಿಗಳ ಉತ್ಪಾದನಾ ಘಟಕಗಳಲ್ಲಿ ಅಪಾಯ ಆಧಾರಿತ ತಪಾಸಣೆಗಳನ್ನು ಪ್ರಾರಂಭಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಚೆನ್ನೈನ ಔಷಧ ಪರೀಕ್ಷಾ ಪ್ರಯೋಗಾಲಯದಲ್ಲಿ ಸರ್ಕಾರಿ ಔಷಧ ವಿಶ್ಲೇಷಕರು ಪರೀಕ್ಷಿಸಿದ ಸಿರಪ್‌ನ ಮಾದರಿಯನ್ನು ತಮಿಳುನಾಡು ಔಷಧ ನಿಯಂತ್ರಣ ನಿರ್ದೇಶನಾಲಯವು ಪ್ರಮಾಣಿತ ಗುಣಮಟ್ಟದಲ್ಲಿಲ್ಲ ಎಂದು ಘೋಷಿಸಿದೆ ಎಂದು ಅಧಿಕಾರಿಗಳು ಇಲ್ಲಿ ತಿಳಿಸಿದ್ದಾರೆ.

ಈ ಸಿರಪ್‌ ಕುಡಿದು ಮೂತ್ರಪಿಂಡ ವೈಫಲ್ಯದಿಂದಾಗಿ ಚಿಂದ್ವಾರ ಜಿಲ್ಲೆಯಲ್ಲಿ 14 ಮಕ್ಕಳು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮಧ್ಯಪ್ರದೇಶ ಸರ್ಕಾರ ಈ ಕ್ರಮ ಕೈಗೊಂಡಿದೆ.
ಇನ್ನು ನಾಗ್ಪುರದಲ್ಲಿ ದಾಖಲಾಗಿರುವ ಮೂವರು ಮಕ್ಕಳ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿದರು.

ಮೃತ ಮಕ್ಕಳ ಪೋಷಕರಿಗೆ ತಲಾ 4 ಲಕ್ಷ ರೂ ತಾತ್ಕಾಲಿಕ ಪರಿಹಾರ ಮಂಜೂರು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಮುನ್ನೆಚ್ಚರಿಕೆ ಕ್ರಮವಾಗಿ, ಸ್ಥಳೀಯ ಆಡಳಿತವು ಈಗಾಗಲೆ ಕೋಲ್ಡ್ರಿಫ್‌ ಮತ್ತು ಇನ್ನೊಂದು ಕೆಮ್ಮಿನ ಸಿರಪ್‌ ನೆಕ್ಸಾ-ಡಿಎಸ್‌‍ಮಾರಾಟವನ್ನು ನಿಷೇಧಿಸಿದೆ ಎಂದು ಎಸ್‌‍ಡಿಎಂ ಯಾದವ್‌ ಹೇಳಿದರು. ಕೋಲ್ಡ್ರಿಫ್‌ನ ಪರೀಕ್ಷಾ ವರದಿ ಬಂದಿದ್ದು ಆದರೆ ನೆಕ್ಸಾ-ಡಿಎಸ್‌‍ನ ವರದಿಗಾಗಿ ಕಾಯಲಾಗಿದೆ.

ತಮಿಳುನಾಡು ಔಷಧ ನಿಯಂತ್ರಣ ಅಧಿಕಾರಿಗಳು, ಅ.2 ರಂದು ತಮ್ಮ ವರದಿಯಲ್ಲಿ, ಕಾಂಚೀಪುರಂನ ಸ್ರೆಸನ್‌ ಫಾರ್ಮಾಸ್ಯುಟಿಕಲ್ಸ್ ತಯಾರಿಸಿದ ಕೋಲ್ಡ್ರಿಫ್‌ ಸಿರಪ್‌ ಮಾದರಿಯನ್ನು (ಬ್ಯಾಚ್‌ ಸಂಖ್ಯೆ -13; : ಮೇ 2025; ಅವಧಿ: ಏಪ್ರಿಲ್‌ 2027) ಕಲಬೆರಕೆ ಮಾಡಲಾಗಿದೆ ಎಂದು ಘೋಷಿಸಿದರು

ಲಭ್ಯವಿರುವ ಯಾವುದೇ ಸ್ಟಾಕ್‌ ಅನ್ನು ತಕ್ಷಣವೇ ವಶಪಡಿಸಿಕೊಳ್ಳಲು ಸೂಚನೆಗಳನ್ನು ನೀಡಿತು. ಸ್ರೆಸನ್‌ ಫಾರ್ಮಾಸ್ಯುಟಿಕಲ್‌್ಸ ತಯಾರಿಸಿದ ಇತರ ಉತ್ಪನ್ನಗಳನ್ನು ಪರೀಕ್ಷೆಯ ಬಾಕಿ ಇರುವಾಗ ಮಾರಾಟದಿಂದ ತೆಗೆದುಹಾಕುವಂತೆಯೂ ಆದೇಶಿಸಿತು. ಮಧ್ಯಪ್ರದೇಶವಲ್ಲದೆ ಮತ್ತು ರಾಜಸ್ಥಾನದಲ್ಲಿ ಮೂರು ಮಕ್ಕಳುಇದೇ ರೀತಿಯ ಸಾವುಗಳು ವರದಿಯಾಗಿದೆ. ಮಾದರಿಗಳನ್ನು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ, ಆದರೆ ಸಿರಪ್‌ನ ಕಲಬೆರಕೆ ಮತ್ತು ಮಾಲಿನ್ಯದ ಕುರಿತು ಹೆಚ್ಚಿನ ಪರೀಕ್ಷೆಗಳು ನಡೆಯುತ್ತಿವೆ.

ಕಾಂಗ್ರೆಸ್‌‍ ಸರ್ಕಾರ ಜಾತಿ ಗಣತಿ ಹೆಸರಿನಲ್ಲಿ ಅಹಿಂದ ಓಲೈಸಲು ಯತ್ನಿಸುತ್ತಿದೆ : ಬಿ.ವೈ.ರಾಘವೇಂದ್ರ

ಶಿವಮೊಗ್ಗ,ಅ.5-ರಾಜ್ಯದ ಕಾಂಗ್ರೆಸ್‌‍ ಸರ್ಕಾರ ಜಾತಿ ಗಣತಿ ಹೆಸರಿನಲ್ಲಿ ಅಹಿಂದವನ್ನು ಓಲೈಸಲು ಮುಂದಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ,ಜಾತಿ ಸಮೀಕ್ಷೆ ಸಂಪೂರ್ಣ ಅವೈಜ್ಞಾನಿಕ ವಾಗಿದೆ. ಕಾಂಗ್ರೆಸ್‌‍ ಸಚಿವರೇ ಈ ಸಮೀಕ್ಷೆ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದರು ಇನ್ನು . ರಾಜ್ಯ ಹೈಕೋರ್ಟ್‌ ಕೂಡ ಈ ಸಮೀಕ್ಷೆಯಲ್ಲಿ ಎಲ್ಲಾ ಪ್ರಶ್ನೆಗಳಿಗೂ ಕಡ್ಡಾಯವಾಗಿ ಮಾಹಿತಿ ನೀಡುವ ಅವಶ್ಯಕತೆ ಇಲ್ಲ ಎಂದು ತೀರ್ಪು ನೀಡಿದೆ,ಜನರಿಗೂ ಇದರಲ್ಲಿ ಆಸಕ್ತಿ ಇಲ್ಲ ಎಂದು ಟೀಕಿಸಿದರು.

ಹೀಗಿದ್ದಾಗ ವಾಸ್ತವವಾಗಿ ಜಾತಿಗಣತಿ ಮಾಡಿ ಪ್ರಯೋಜನವೇನು ಎಂದು ಸಂಸದ ಬಿ.ವೈ. ರಾಘವೇಂದ್ರ ಪ್ರಶ್ನಿಸಿದ್ದರೆ.ಸಂವಿಧಾನದ ಬಗ್ಗೆ ಮಾತನಾಡುವ ಕಾಂಗ್ರೆಸ್ಸಿಗರು ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್‌ ಅವರಿಗೇ ಚುನಾವಣೆಯಲ್ಲಿ ಟಿಕೇಟ್‌ ನೀಡದೆ ಸಂಸತ್‌ ಒಳಗೆ ಪ್ರವೇಶಿಸದಂತೆ ಕುತಂತ್ರ ಮಾಡಿದ್ದರು.

ಹಿಂದುಳಿದ ವರ್ಗಗಳ ಬಗ್ಗೆ ಕಾಕಾ ಕಾಲೇಕರ್‌ ವರದಿಯನ್ನು ಕಾಂಗ್ರೆಸ್‌‍ 40 ವರ್ಷಗಳ ಕಾಲ ಕತ್ತಲಲ್ಲಿಟ್ಟಿದ್ದು ಐತಿಹಾಸಿಕ ದ್ರೋಹ ಎಂದು ದೂರಿದರು.ಊಳುವವನೇ ಒಡೆಯ ಎಂಬ ಕಾನೂನನ್ನು ತಂದು ಹಿಂದುಳಿದವರ ಉನ್ನತಿಗೆ ಕಾರಣರಾದ ಡಿ.ದೇವರಾಜ್‌ ಅರಸು ಅವರನ್ನೇ ಪಕ್ಷದಿಂದ ಹೊರಗೆ ಹಾಕಿದ್ದು ಯಾರು,ಇತಿಹಾಸ ಮರೆತಿದ್ದಾರೆ ಎಂದು ಆರೋಪಿಸಿದರು.

ಬಿ.ಎಸ್‌‍.ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಎಲ್ಲ ಜಾತಿಯವರಿಗೂ ಸಮಾನವಾಗಿ ಆರ್ಥಿಕ ಸೌಲಭ್ಯ ನೀಡಿದ್ದರು. ಅವರ ಬಗ್ಗೆ ಮಾತನಾಡುವ ಯೋಗ್ಯತೆ ಸಚಿವ ಮಧು ಬಂಗಾರಪ್ಪಗೆ ಇಲ್ಲ ಎಂದು ತಿರುಗೇಟು ನೀಡಿದರು.

ಮಡಿವಾಳ ಮಾಚೀದೇವ, ಉಪ್ಪಾರ, ಆರ್ಯವೈಶ್ಯ, ವಿಶ್ವಕರ್ಮ, ಅಂಬಿಗರ ಚೌಡಯ್ಯ, ಈಡಿಗ, ಸವಿತಾ ಸಮಾಜ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸಿ ಅನುದಾನ ನೀಡಿದ ಬಿಎಸ್‌‍ವೈ ಸಂಗೋಳ್ಳಿ ರಾಯಣ್ಣ, ಕನಕದಾಸರ ಜನ್ಮಸ್ಥಳ ಬಾಡಾದ ಅಭಿವೃದ್ಧಿಗೆ ಅನುದಾನ ನೀಡಿದರೂ ಕಾಂಗ್ರೆಸ್‌‍ ಕೆಲಸ ಮಾಡಿರಲಿಲ್ಲ. ಇದಕ್ಕೆ ಬಿ.ಎಸ್‌‍. ಯಡಿಯೂರಪ್ಪನವರೇ ಬರಬೇಕಿತ್ತಾ ಎಂದು ತಿರುಗೇಟು ನೀಡಿದರು.

ಸರ್ವಸ್ಪರ್ಶಿ ಸರ್ವರಿಗೆ ಸಮಪಾಲು-ಸಮಬಾಳು ಆಡಳಿತ ನೀಡಿದ ಯಡಿಯೂರಪ್ಪನವರು ಎಂದಿಗೂ ಜಾತಿ ರಾಜಕಾರಣ ಮಾಡಿಲ್ಲ. ಇನ್ನು ಟವರ್‌ ಸಮಸ್ಯೆ ಬಗ್ಗೆ ಕೇಂದ್ರ ಸರ್ಕಾರ ಸುಮ್ಮನೆ ಕೂತಿಲ್ಲ. ಶಿವಮೊಗ್ಗ ಜಿಲ್ಲೆಗೆ ನೆಟ್‌ವರ್ಕ್‌ ಸಮಸ್ಯೆ ಇದ್ದಕಡೆ ನೂತನವಾಗಿ 90 ಟವರ್‌ಗಳನ್ನು ಈಗಾಗಲೇ ನೀಡಲಾಗಿದೆ ಮತ್ತು ಅವು ಕಾರ್ಯಾಚರಣೆ ಶುರುಮಾಡಿದೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್‌ ಸದಸ್ಯ ಡಿ.ಎಸ್‌‍.ಅರುಣ್‌‍, ಡಾ.ಧನಂಜಯ ಸರ್ಜಿ, ಪಕ್ಷದ ಜಿಲ್ಲಾಧ್ಯಕ್ಷ ಎನ್‌‍.ಕೆ.ಜಗದೀಶ್‌‍, ಪ್ರಮುಖರಾದ ಕೆ.ಜಿ.ಕುಮಾರಸ್ವಾಮಿ, ಚಂದ್ರಶೇಖರ ಇದ್ದರು.