Friday, April 25, 2025
Homeಅಂತಾರಾಷ್ಟ್ರೀಯ | Internationalಉಸ್ಲಾಮಿಕ್ ಉಗ್ರರ ದಮನಕ್ಕೆ ಭಾರತಕ್ಕೆ ಇಸ್ರೇಲ್‌ ಬಲ

ಉಸ್ಲಾಮಿಕ್ ಉಗ್ರರ ದಮನಕ್ಕೆ ಭಾರತಕ್ಕೆ ಇಸ್ರೇಲ್‌ ಬಲ

Pahalgam Attack : Israel Back India

ಟೆಲ್‌ ಅವಿವ್‌, ಏ.25- ಉಗ್ರ ದಮನಕ್ಕೆ ಅಗತ್ಯ ಬಿದ್ದರೆ ಭಾರತದೊಂದಿಗೆ ನಾವು ನಿಲ್ಲುತ್ತೇವೆ ಎಂದು ಇಸ್ರೇಲ್‌ ಹೇಳಿದೆ. ಇಸ್ರೇಲ್‌ ವಿದೇಶಾಂಗ ಸಚಿವಾಲಯದ ವಕ್ತಾರ ಓರೆನ್‌ ಮಾರ್ಮೊರ್‌ಸ್ಟೈನ್‌ ಅವರು ಈ ಉಗ್ರರ ದಮನ ವಿಚಾರದಲ್ಲಿ ಭಾರತಕ್ಕೆ ಬೆಂಬಲ ಸೂಚಿಸಿದ್ದಾರೆ. ಪತ್ರಕರ್ತರೊಂದಿಗಿನ ಸಂವಾದದ ವೇಳೆ, ಭಾರತ ಮತ್ತು ಇಸ್ರೇಲ್‌ ನಡುವಿನ ಸಂಬಂಧದ ಬಗ್ಗೆ ಅವರು ಮಾತಾಡಿದರು. ಈ ವೇಳೆ, ಇಸ್ರೇಲ್‌ ಭಾರತದ ಸ್ನೇಹಿತ, ಸ್ನೇಹಿತರು ಅಗತ್ಯದ ಸಮಯದಲ್ಲಿ ಪರಸ್ಪರ ಜೊತೆಗೆ ನಿಲ್ಲಲಿವೆ ಎಂದಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಅವರು ಭಾರತವನ್ನು ಬೆಂಬಲಿಸಿ ಈ ಹೇಳಿಕೆ ನೀಡಿದ್ದಾರೆ. ಇಸ್ರೇಲ್‌ ವಿದೇಶಾಂಗ ಸಚಿವ ಗಿಡಿಯಾನ್‌ ಸಾರ್‌ ಅವರು, ಉಗ್ರರ ದಾಳಿಯ ಬಗ್ಗೆ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿದ್ದು, ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿಯಿಂದ ತೀವ್ರ ದುಃಖಿತನಾಗಿದ್ದೇನೆ.

ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಇಸ್ರೇಲ್‌ ಭಾರತದೊಂದಿಗೆ ಜೊತೆಗಿರುತ್ತದೆ ಎಂದು ಬರೆದುಕೊಂಡಿದ್ದಾರೆ. ಉಗ್ರರ ಈ ಕೃತ್ಯಕ್ಕೆ ಭಾರತ ಮಾತ್ರವಲ್ಲ ಅಮೆರಿಕ ಇನ್ನಿತರ ರಾಷ್ಟ್ರಗಳಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ, ತಾನು ಮುಂದೆ ಕೈಗೊಳ್ಳಬೇಕಾದ ನಿರ್ಧಾರಗಳ ಕುರಿತಾಗಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲು ಮುಂದಾಗಿರುವ ಸಂದರ್ಭದಲ್ಲೇ ಇಸ್ರೇಲ್‌ನ ಈ ಬೆಂಬಲ ಭಾರತಕ್ಕೆ ಆನೆ ಬಲ ಬಂದಂತಾಗಿದೆ.

RELATED ARTICLES

Latest News