ಪೇಶಾವರ,ಮಾ.4- ಈ ವಾಯುವ್ಯ ಪಾಕಿಸ್ತಾನದಲ್ಲಿ ಶುಕ್ರವಾರ ಪ್ರಾರ್ಥನೆ ಸಮಯದಲ್ಲಿ ಕಿಕ್ಕಿರಿದ ಶಿಯಾ ಮಸೀದಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ ಮತ್ತು 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಪೇಶಾವರದ ಕ್ವಿಸ್ಸಾ ಖ್ವಾನಿ ಬಜಾರ್ ಪ್ರದೇಶದ ಜಾಮಿಯಾ ಮಸೀದಿಯಲ್ಲಿ ಶುಕ್ರವಾರ ದ ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸ್ಫೋಟದ ಹೊಣೆಯನ್ನು ತಕ್ಷಣವೇ ಯಾವುದೇ ಗುಂಪು ಹೊತ್ತುಕೊಂಡಿಲ್ಲ.ಮಾಧ್ಯಮ ಪ್ರಕಾರ ಇದುವರೆಗೆ 30 ಮೃತದೇಹಗಳನ್ನು ಆಸ್ಪತ್ರೆಗೆ ತರಲಾಗಿದೆ.ಗಾಯಗೊಂಡಿರುವ 10 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಬ್ಬರು ದಾಳಿಕೋರರು ಮಸೀದಿಗೆ ಪ್ರವೇಶಿಸಲು ಪ್ರಯತ್ನಿಸಿ ಕಾವಲು ನಿಂತ ಪೊಲೀಸರ ಮೇಲೆ ಗುಂಡು ಹಾರಿಸಿದರು ಎಂದು ರಾಜಧಾನಿ ನಗರ ಪೊಲೀಸ್ ಅಧಿಕಾರಿ ಪೇಶಾವರ್ ಇಜಾಜ್ ಅಹ್ಸಾನ್ ಹೇಳಿದ್ದಾರೆ. ಈ ವೇಳೆ ಓರ್ವ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದು, ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
