Sunday, September 15, 2024
Homeಅಂತಾರಾಷ್ಟ್ರೀಯ | Internationalಪಾಕಿಸ್ತಾನದಲ್ಲಿ ಸ್ವಾತಂತ್ರ್ಯ ದಿನದಂದೇ ಬೆಲ್ಜಿಯಂ ಮಹಿಳೆ ಮೇಲೆ ಗ್ಯಾಂಗ್ ರೇಪ್

ಪಾಕಿಸ್ತಾನದಲ್ಲಿ ಸ್ವಾತಂತ್ರ್ಯ ದಿನದಂದೇ ಬೆಲ್ಜಿಯಂ ಮಹಿಳೆ ಮೇಲೆ ಗ್ಯಾಂಗ್ ರೇಪ್

ಲಾಹೋರ್‌,ಆ.16- ಪಾಕಿಸ್ತಾನದಲ್ಲಿ 28 ವರ್ಷದ ಬೆಲ್ಜಿಯಂ ಮಹಿಳೆಯ ಮೇಲೆ ಐದು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇಸ್ಲಾಮಾಬಾದ್‌ನಲ್ಲಿ ಆ. 14ರಂದು ಪಾಕಿಸ್ತಾನದ ಸ್ವಾತಂತ್ರ್ಯಾ ದಿನದಂದು ಮಹಿಳೆ ಗಾಯಗೊಂಡ ಸ್ಥಿತಿಯಲ್ಲಿ ರಸ್ತೆಯಲ್ಲಿ ಪತ್ತೆಯಾಗಿದ್ದಳು. ಆಕೆಯ ಕೈಕಾಲುಗಳನ್ನು ಕಟ್ಟಲಾಗಿತ್ತು, ದೇಹದ ಮೇಲೆ ಗಾಯದ ಗುರುತುಗಳಿದ್ದವು, ಈ ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಬಂಧಿಸಲಾಗಿದೆ.

ಬೆಲ್ಜಿಯಂ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ನಂತರ ಮಹಿಳೆಯ ಕೈ ಕಾಲುಗಳನ್ನು ಕಟ್ಟಿ ಹಾಕಿ ಇಸ್ಲಾಮಾಬಾದ್‌‍ನ ಜಿ-6 ಸೆಕ್ಟರ್‌ನಲ್ಲಿ ಎಸೆಯಲಾಗಿತ್ತು. ಸಂತ್ರಸ್ತೆಯನ್ನು ಕಂಡ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ ಪರಿಣಾಮ ಪೊಲೀಸರು ಆಕೆಯನ್ನು ರಕ್ಷಿಸಿದ್ದರು.

ತನ್ನನ್ನು ಒತ್ತೆಯಾಳಾಗಿರಿಸಿಕೊಂಡು ಐದು ದಿನಗಳ ಕಾಲ ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮಹಿಳೆಯ ಆರೋಪ ದಢಪಟ್ಟಿದೆ. ಹೇಳಿಕೆ ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ತಮಿಜುದ್ದೀನ್‌ ಎಂದು ಗುರುತಿಸಲಾಗಿದೆ. ಆರೋಪಿಯು ವಿಚಾರಣೆಯ ಸಮಯದಲ್ಲಿ ಮಹಿಳೆ ಮಾನಸಿಕವಾಗಿ ಅಸ್ಥಿರಳಾಗಿದ್ದಾಳೆ ಮತ್ತು ಆಕೆಯ ಗುರುತು ಮತ್ತು ಪ್ರಯಾಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹೊಂದಿಲ್ಲ ಎಂದು ವಾದಿಸಿದರು. ಹೆಚ್ಚಿನ ತನಿಖೆಗಾಗಿ ಆರೋಪಿಗಳ ವೈದ್ಯಕೀಯ ಪರೀಕ್ಷೆ ನಡೆಸಲಾಗಲು ತೀರ್ಮಾನಿಸಲಾಗಿದೆ.

ಕೆಲ ವರ್ಷಗಳ ಹಿಂದೆ ಪಾಕಿಸ್ತಾನದಲ್ಲಿ ಇಸ್ಲಾಂ ಧರ್ಮ ಸ್ವೀಕರಿಸಲಿಲ್ಲ ಎಂಬ ಕಾರಣಕ್ಕೆ ಹಿಂದೂ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರವೆಸಗಿರುವ ಸುದ್ದಿ ಬಂದಿತ್ತು. ಈ ಪ್ರಕರಣವು ಪಾಕಿಸ್ತಾನದ ದಕ್ಷಿಣ ಪ್ರಾಂತ್ಯದ ಸಿಂಧ್‌ನ ಉಮರ್‌ಕೋಟ್‌ ಜಿಲ್ಲೆಯ ಸಮರೋ ಪ್ರದೇಶದಲ್ಲಿ ನಡೆದಿತ್ತು.

ಇದಕ್ಕೂ ಮೊದಲು ಜುಲೈ 26 ರಂದು ಹಫೀಜಾಬಾದ್‌ ಪ್ರದೇಶದಲ್ಲಿ ಕೆಲವು ದರೋಡೆಕೋರರು ಪತಿ ಮತ್ತು ಮೂರು ವರ್ಷದ ಮಗಳ ಮುಂದೆ ಬಂದೂಕು ತೋರಿಸಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು.

2023 ರಲ್ಲಿ ಪಾಕಿಸ್ತಾನದಲ್ಲಿ 6,624 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ಹೆಚ್ಚಿನ ಘಟನೆಗಳು ಫೈಸಲಾಬಾದ್‌ನಲ್ಲಿ ನಡೆದಿವೆ. 2017 ಮತ್ತು 2021 ರ ನಡುವೆ ದೇಶಾದ್ಯಂತ 21,900 ಮಹಿಳೆಯರು ಅತ್ಯಾಚಾರಕ್ಕೊಳಗಾಗಿದ್ದಾರೆ ಎಂದು ವರದಿಯಾಗಿದೆ.

RELATED ARTICLES

Latest News