ಇಸ್ಲಾಮಾಬಾದ್,ಸೆ.2- ನೂತನವಾಗಿ ನಿರ್ಮಾಣವಾಗಿದ್ದ ಹೆಲಿಪ್ಯಾಡ್ ಮೇಲೆ ಲ್ಯಾಂಡಿಂಗ್ ಟೆಸ್ಟ್ ನಡೆಸುತ್ತಿದ್ದಾಗ ಪಾಕಿಸ್ತಾನದ ಸರ್ಕಾರಿ ಹೆಲಿಕಾಪ್ಟರ್ ಪತನಗೊಂಡು ಐವರು ಸಾವನ್ನಪ್ಪಿರುವ ಘಟನೆ ಗಿಲ್ಗಿಟ್-ಬಾಲ್ಟಿಸ್ತಾನ್‌ನಲ್ಲಿ ನಡೆದಿದೆ.
ಡೈಮರ್ ಜಿಲ್ಲೆಯ ಚಿಲಾಸ್‌ನ ಥೋರ್ ಪ್ರದೇಶದ ಬಳಿ ಈ ಅವಘಡ ಸಂಭವಿಸಿದ್ದು,ದುರಂತದಲ್ಲಿ ಪರಿಣಾಮ ಇಬ್ಬರು ಪೈಲಟ್ ಸೇರಿ ಮೂವರು ತಂತ್ರಜ್ಞರು ಸಾವನ್ನಪ್ಪಿದ್ದಾರೆ.ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇತ್ತೀಚಿಗೆ ಖೈಬರ್ ಪ್ರಾಂತ್ಯದಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಇದೇ ಮಾದರಿಯ ಎಂಐ-17 ಸರ್ಕಾರಿ ಹೆಲಿಕಾಪ್ಟರ್ ಪತನಗೊಂಡಿತ್ತು. ಅದಾದ ಕೆಲವು ದಿನಗಳ ನಂತರ ಇದೀಗ ಮತ್ತೊಂದು ಹೆಲಿಕಾಪ್ಟರ್ ಪತನಗೊಂಡಿದೆ.
ಹೆಲಿಕಾಪ್ಟರ್ ಭೂಸ್ಪರ್ಷ ಮಡುವಾಗ ತಾಂತ್ರಿಕ ದೋಷ ಕಂಡುಬಂದಿದ್ದು ಸುಮಾರು 100 ಅಡಿಯಿಂದ ನೆಲಕ್ಕೆ ಅಪ್ಪಳಿಸಿದೆ ಎಂದು ಮೂಲಗಳು ತಿಳಿಸಿವೆ.ಸ್ಥಳದಲ್ಲಿದ್ದ ಕೆಲವರು ದೂರ ಓಡಿ ಜೀವ ಉಳಿಸಿಕೊಂಡಿದ್ದಾರೆ.
- ಧರ್ಮಸ್ಥಳ ಪ್ರಕರಣವನ್ನು ಎನ್ಐಎಗೆ ವಹಿಸುವ ಅಗತ್ಯವಿಲ್ಲ : ಪರಮೇಶ್ವರ್
- ಟಿ20 ಕ್ರಿಕೆಟ್ಗೆ ಮಿಚೆಲ್ ಸ್ಟಾರ್ಕ್ ವಿದಾಯ
- ಶಾಸಕ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ
- ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಹಾರೈಕೆ
- ಉದ್ಯಮಿ ಅಪಹರಿಸಿ ಜೀವ ಬೆದರಿಕೆ ಹಾಕಿ 3 ಲಕ್ಷ ರೂ. ಪಡೆದಿದ್ದ ನಾಲ್ವರು ರೌಡಿ ಸೇರಿ 6 ಮಂದಿ ಅರೆಸ್ಟ್