ನಾಗಮಂಗಲದಲ್ಲಿ ‘ಪಾಕಿಸ್ತಾನ್‌ ಜಿಂದಾಬಾದ್‌’ ಘೋಷಣೆ ಕೂಗಿಲ್ಲ : ಗೃಹಸಚಿವ ಪರಮೇಶ್ವರ್‌

ಬೆಂಗಳೂರು,ಸೆ.18- ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಎಂಬ ಘೋಷಣೆ ಕೂಗಿಲ್ಲ, ಈ ಬಗ್ಗೆ ನಮ ಗಮನಕ್ಕೆ ಯಾವ ವಿಚಾರಗಳೂ ಬಂದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧಪಕ್ಷದ ನಾಯಕ ಆರ್‌.ಅಶೋಕ್‌ ಅವರಿಗೆ ತಪ್ಪು ಮಾಹಿತಿ ಇದ್ದಂತಿದೆ ಎಂದು ಹೇಳಿದರು. ನಾಗಮಂಗಲ ಗಲಾಟೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಬಗ್ಗೆ ನಮಗೆ ಮಾಹಿತಿ ಇಲ್ಲ. ಈ ಬಗ್ಗೆ ಕೆಲವರು ತಪ್ಪು ಹೇಳಿಕೆ ನೀಡಿದ್ದಾರೆ ಎಂದು ನಮ ಅಧಿಕಾರಿಗಳು ಹೇಳುತ್ತಿದ್ದಾರೆ. ಇದನ್ನು ಪುನರ್‌ ಪರಿಶೀಲಿಸಲಾಗುತ್ತಿದೆ … Continue reading ನಾಗಮಂಗಲದಲ್ಲಿ ‘ಪಾಕಿಸ್ತಾನ್‌ ಜಿಂದಾಬಾದ್‌’ ಘೋಷಣೆ ಕೂಗಿಲ್ಲ : ಗೃಹಸಚಿವ ಪರಮೇಶ್ವರ್‌