ಬೆಂಗಳೂರು- ಜಮ್ಮು ಮತ್ತು ಕಾಶ್ಮೀರದ ಪೆಹಲ್ಗಾಮ್ ದಾಳಿಗೆ ಪ್ರತೀಕಾರ ಎಂಬಂತೆ ಭಾರತದಲ್ಲಿರುವ ಪಾಕಿಸ್ತಾನದ ಪ್ರಜೆಗಳು ದೇಶ ತೊರೆಯಬೇಕು ಎಂದು ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೆ ಕಟ್ಟಿನಿಟ್ಟಿನ ಸೂಚನೆ ನೀಡಿದ ಹಿನ್ನಲೆಯಲ್ಲಿ ಕರ್ನಾಟದಲ್ಲಿ ಅಲ್ಪಾವಧಿ ವೀಸಾ ಹೊಂದಿದ್ದ ನಾಲ್ವರು ಪಾಕ್ ಪ್ರಜೆಗಳನ್ನು ರಾಜ್ಯದಿಂದ ಗಡಿಪಾರು ಮಾಡಲಾಗಿದೆ.
ಇನ್ನೂ ಹಲವು ಜಿಲ್ಲೆಗಳಲ್ಲಿ ಪಾಕ್ ಪ್ರಜೆಗಳಿದ್ದು ಅವರನ್ನು ಸದ್ಯದಲ್ಲೇ ಹೊರಹಾಕಲಾಗುತ್ತದೆ. ಸದ್ಯ ಅಲ್ಪಾವಧಿ ವೀಸಾ ಹೊಂದಿದ್ದ ನಾಲ್ಕು ಮಂದಿ ಪಾಕ್ ಪ್ರಜೆಗಳನ್ನು ರಾಜ್ಯದಿಂದ ಗಡಿಪಾರು ಮಾಡಲಾಗಿದೆ ಎಂದು ತಿಳಿದುಬಂದಿದೆ.
ದೀರ್ಘಾವಧಿ ವೀಸಾ ಹೊಂದಿರುವವರ ಗಡಿಪಾರು ಮಾಡಲು ಕೇಂದ್ರ ಸರ್ಕಾರ ಸೂಚನೆ ನೀಡಿಲ್ಲ. ಹಾಗಾಗಿ ದೀರ್ಘಾವಧಿ ವೀಸಾ ಹೊಂದಿರುವ 91 ಮಂದಿ ಪಾಕ್ ಪ್ರಜೆಗಳು ಸದ್ಯ ರಾಜ್ಯದಲ್ಲೇ ಇದ್ದಾರೆ. ಜಿಲ್ಲಾಡಳಿತಗಳು ಹಾಗೂ ಪೊಲೀಸ್ ಇಲಾಖೆ ಕಾರ್ಯಾಚರಣೆ ವೇಳೆ ವಿವಿಧ ಜಿಲ್ಲೆಗಳಲ್ಲಿ 91 ಮಂದಿ ಪಾಕ್ ಪ್ರಜೆಗಳು ವಾಸವಿರುವುದು ಗೊತ್ತಾಗಿದೆ. ಕೆಲ ಪಾಕಿಸ್ತಾನಿ ಪ್ರಜೆಗಳು ವೈದ್ಯಕೀಯ ವೀಸಾದಡಿ ಕರ್ನಾಟಕದಲ್ಲಿದ್ದು, ಇವರಿಗೆ ಏಪ್ರಿಲ್ 29 ರವರೆಗೆ ಮಾತ್ರ ಭಾರತದಲ್ಲಿರಲು ವಿನಾಯಿತಿ ನೀಡಲಾಗಿದೆ. ಬಳಿಕ ಅವರನ್ನು ವಾಪಸ್ ಕಳಿಸಲು ಮುಂದಾಗಿದೆ.
ದೀರ್ಘಾವಧಿ ವೀಸಾ ಹೊಂದಿರುವವರ ಗಡಿಪಾರಿಗೆ ಕೇಂದ್ರ ಸೂಚಿಸದ ಕಾರಣ ದೀರ್ಘಾವಧಿ ವೀಸಾ ಹೊಂದಿರುವ 91 ಮಂದಿ ಪಾಕ್ ಪ್ರಜೆಗಳು ಇನ್ನೂ ಕರ್ನಾಟಕದಲ್ಲೇ ಇದ್ದಾರೆ. ಪಾಕಿಸ್ತಾನಿ ಪ್ರಜೆಗಳು ವೈದ್ಯಕೀಯ ವೀಸಾದಡಿ ರಾಜ್ಯದಲ್ಲಿದ್ದಾರೆ. ಇವರಿಗೆ ಏ.29ರವರೆಗೆ ಮಾತ್ರ ದೇಶದಲ್ಲಿರಲು ಕೇಂದ್ರವು ವಿನಾಯಿತಿ ನೀಡಿದ್ದು, ಗಡುವಿನೊಳಗೆ ನಿಯಮಾನುಸಾರ ಹೊರ ಕಳುಹಿಸಲಾಗುತ್ತದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಪಾಕಿಸ್ತಾನಿ ಪ್ರಜೆಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಭಟ್ಕಳ, ಕಾರವಾರದಲ್ಲಿ ಹೆಚ್ಚಿನ ಜನ ಕಂಡುಬಂದಿದ್ದಾರೆ. ಇನ್ನು ಬೆಂಗಳೂರು, ಕಲಬುರಗಿ, ಮಂಗಳೂರು, ಮೈಸೂರು ಭಾಗಗಳಲ್ಲೂ ಪಾಕ್ ಪ್ರಜೆಗಳು ನೆಲೆಸಿದ್ದಾರೆ. ಕೇಂದ್ರ ಸರ್ಕಾರದ ಸೂಚನೆಯಂತೆ ಕರ್ನಾಟಕ ರಾಜ್ಯದಲ್ಲಿರುವ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಹೇಳಿದೆ.
ರಾಜ್ಯದಲ್ಲಿ ಅತಿ ಹೆಚ್ಚು ಪಾಕಿಸ್ತಾನಿ ಪ್ರಜೆಗಳು ಉತ್ತರ ಕನ್ನಡ ಜಿಲ್ಲೆಯಲ್ಲಿದ್ದು, ಭಟ್ಕಳದಲ್ಲಿ 14 ಹಾಗೂ ಕಾರವಾರದಲ್ಲಿ ಒಬ್ಬರು ಸೇರಿ ಒಟ್ಟಾರೆ 15 ಮಂದಿ ವಾಸವಾಗಿದ್ದಾರೆ. ಈ ಪೈಕಿ 12 ಮಹಿಳೆಯರು ಹಾಗೂ ಮೂವರು ಮಕ್ಕಳಿದ್ದಾರೆ.
ಭಟ್ಕಳದ ನವಾಯತ್ ಸಮುದಾಯದಲ್ಲಿ ಪಾಕಿಸ್ತಾನದವರೊಂದಿಗೆ ಮದುವೆಯಾಗುವ ಸಂಪ್ರದಾಯವಿದೆ. ಪಾಕಿಸ್ತಾನಿಯರನ್ನು ಮದುವೆಯಾದ ಬಳಿಕ ಕೇಂದ್ರ ಸರ್ಕಾರ ದೀರ್ಘಾವಧಿ ವೀಸಾವನ್ನು ನೀಡುತ್ತಿದೆ. ಇದಲ್ಲದೆ ಬೆಂಗಳೂರು, ಕಲಬುರಗಿ, ಮಂಗಳೂರು, ಮೈಸೂರು ಸೇರಿದಂತೆ ರಾಜ್ಯದ ಹಲವು ಕಡೆ ಪಾಕ್ ಪ್ರಜೆಗಳು ನೆಲೆಸಿದ್ದಾರೆ.
ದಾವಣಗೆರೆಯಲ್ಲಿ ಒಬ್ಬರೂ ಪಾಕಿಸ್ತಾನ ವಿದ್ಯಾರ್ಥಿ ಶಿಕ್ಷಣದ ವೀಸಾದ ಮೇಲೆ ಭಾರತಕ್ಕೆ ಬಂದಿದ್ದಾರೆ. ದಾವಣಗೆರೆಯ ಜಿಲ್ಲೆಯ ವೈದ್ಯಕೀಯ ಕಾಲೇಜಿವೊಂದರಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ಓದುತ್ತಿದ್ದಾರೆ. ಇವರ ಪೀಸಾ ಅವಧಿ ಇನ್ನೂ ಮುಗಿದಿಲ್ಲ.
ಕಳೆದ ಮಾರ್ಚ್‌ನಲ್ಲಿ ನಡೆದಿದ್ದ ಅಧಿವೇಶನದಲ್ಲಿ ಗೃಹ ಸಚಿವ ಪರಮೇಶ್ವರ್ ಅವರು ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿದ್ದ 25 ಮಂದಿ ಪಾಕಿಸ್ತಾನಿ ಪ್ರಜೆಗಳನ್ನು ಅಧಿಕೃತವಾಗಿ ಬಂಧಿಸಿ ಕಾನೂನು ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದರು.
ಪಹಲ್ಲಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಪಾಕಿಸ್ತಾನದ ವಿರುದ್ಧ ತೊಡೆ ತಟ್ಟಿರುವ ಭಾರತವು ಎಲ್ಲ ರಾಜ್ಯಗಳಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ಗಂಟುಮೂಟೆ ಕಟ್ಟಿಸಿ ಎಂದು ಖಡಕ್ ಸೂಚನೆ ನೀಡಿದೆ. ಒಂದು ಮೂಲದ ಪ್ರಕಾರ ದೇಶದಲ್ಲಿ ಈಗಾಗಲೇ ವಾಸವಾಗಿದ್ದ ಒಂದು ಸಾವಿರಕ್ಕೂ ಹೆಚ್ಚಿನ ಪಾಕ್ ಪ್ರಜೆಗಳು ವಾಥ ಗಡಿ ಮೂಲಕ ಸ್ವದೇಶಕ್ಕೆ ಮರಳಿದ್ದಾರೆ.
ಕರ್ನಾಟಕ, ಮಹಾರಾಷ್ಟ್ರ, ಅಂಧ್ರ ಪ್ರದೇಶ, ತೆಲಾಂಗಣ, ದೆಹಲಿ, ಮಧ್ಯಪ್ರದೇಶ, ಉತ್ತರ ಪ್ರದೇಶ, ಪಂಜಾಬ್ ಸೇರಿದಂತೆ ದೇಶದ ವಿವಿಧ ಕಡೆ ವೀಸಾ ಅವಧಿ ಮುಗಿದಿದ್ದರೂ ಕಾನೂನು ಬಾಹಿರವಾಗಿ ಇಲ್ಲೇ ವಾಸ ಮಾಡುತ್ತಿರುವ ಪಾಕ್ ಪ್ರಜೆಗಳನ್ನು ಹುಡುಕಿ ಹುಡುಕಿ ಹೊರಗೆ ಹಾಕುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ.