ಪ್ಯಾಲೆಸ್ತೇನ್ ಮೂಲದ ಡ್ರಗ್ ಪೆಡ್ಲರ್ ಬಂಧನ, 25 ಲಕ್ಷ ಮೌಲ್ಯದ ಮಾದಕ ವಸ್ತು ಜಪ್ತಿ

Social Share

ಬೆಂಗಳೂರು,ನ.9- ಬಿಸ್ನೆಸ್ ವೀಸಾ ಪಡೆದು ಬೆಂಗಳೂರಿಗೆ ಬಂದು ಡ್ರಗ್ ಪೆಡ್ಲರ್ ತೊಡಗಿದ್ದ ಪ್ಯಾಲೆಸ್ತೇನ್ ದೇಶದ ಡ್ರಗ್ ಪೆಡ್ಲರ್ನನ್ನು ಸಿಸಿಬಿ ಪೊಲೀಸರು ಬಂಧಿಸಿ ಸುಮಾರು 25 ಲಕ್ಷ ರೂ. ಬೆಲೆ ಬಾಳುವ ಮಾದಕ ವಸ್ತುಗಳಾದ 320 ಗ್ರಾಂ ಎಂ.ಡಿ.ಎಂ.ಎ ಕ್ರಿಸ್ಟೆಲ್, ಕೃತ್ಯಕ್ಕೆ ಬಳಲಾಗುತಿ ್ತದ್ದ ಮೊಬೈಲ್ ಫೋನ್ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಮೂಲತಃ ಪ್ಯಾಲೆಸ್ತೇನ್ ದೇಶದವನಾಗಿರುವ ಆರೋಪಿಯು 6 ವರ್ಷಗಳ ಹಿಂದೆ ವಿದ್ಯಾರ್ಥಿ ವೀಸಾ ಪಡೆದು ನಗರಕ್ಕೆ ಬಂದಿದ್ದು, ಕಡಿಮೆ ಸಮಯದಲ್ಲಿ ಹೆಚ್ಚಿನ ಹಣ ಗಳಿಸುವ ಉದ್ದೇಶದಿಂದ ಇದೇ ವರ್ಷ ಬ್ಯುಸಿನೆಸ್ ವೀಸಾ ಪಡೆದು ಮತ್ತೆ ಬಂದಿದ್ದಾನೆ.

ಕುತೂಹಲ ಕೆರಳಿಸಿದೆ ಬಾಲಚಂದ್ರ ಜಾರಕಿಹೊಳಿ- ಹೆಚ್ಡಿಕೆ ಮಾತುಕತೆ

ಸುಡಾನ್ ದೇಶದ ಮತ್ತೊಬ್ಬ ಡ್ರಗ್ಪೆಡ್ಲರ್ ಜೊತೆಯಲ್ಲಿ ಯಲಹಂಕ ನ್ಯೂಟೌನ್ ಠಾಣಾ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದುಕೊಂಡು ಆತನಿಂದ ಕಡಿಮೆ ಬೆಲೆಗೆ ಮಾದಕ ವಸ್ತು ಗಳನ್ನು ಖರೀದಿಸಿ ಒಂದು ಗ್ರಾಂ ಎಂ.ಡಿ.ಎಂ.ಎ ಕ್ರಿಸ್ಟೆಲ್ ಅನ್ನು 8000 ದಿಂದ 8500ರೂ ವರೆಗೆ ಹೆಚ್ಚಿನ ಬೆಲೆಗೆ ಪರಿಚಯಸ್ಥ ಗಿರಾಕಿಗಳಿಗೆ, ವಿದ್ಯಾರ್ಥಿಗಳಿಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿದ್ದುದ್ದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ.

ಬೆಂಗಳೂರಿನ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಕಾರಿ ಮತ್ತು ಸಿಬ್ಬಂದಿಗಳ ತಂಡವು ಯಲಹಂಕ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪಿ ್ತಯಲ್ಲಿ ಕಾರ್ಯಾಚರಣೆಯನ್ನು ನಡೆಸಿ ಆರೋಪಿಯನ್ನು ಬಂಸಿದ್ದು ಈತನ ಜೊತೆಯಲ್ಲಿದ್ದ ಸುಡಾನ್ ದೇಶದ ಡ್ರಗ್ ಪೆಡ್ಲರ್ ತಲೆಮರೆಸಿಕೊಂಡಿದ್ದು ಶೋಧಕಾರ್ಯ ಮುಂದುವರೆದಿದೆ.

ರಾಜ್ಯದಲ್ಲಿ 60 ಲಕ್ಷ ನಕಲಿ ಮತದಾರರು ಪಟ್ಟಿಯಿಂದ ಹೊರಕ್ಕೆ

ಆರೋಪಿಯು ಮಾದಕ ವಸ್ತುಗಳ ಮಾರಾಟ, ಸಾಗಾಟ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿರು ವುದರಿಂದ ಆರೋಪಿಯ ವಿರುದ್ದ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್. ಕಾಯ್ದೆ ಮತ್ತು ವಿದೇಶಿಯರ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರೆದಿದೆ.

Articles You Might Like

Share This Article