ಪಂಚಮಸಾಲಿ ಸಮುದಾಯಕ್ಕೆ ಪ್ರತ್ಯೇಕ ಪ್ರವರ್ಗ ಸೃಷ್ಟಿಸಿ ಮೀಸಲಾತಿ

Social Share

ಬೆಳಗಾವಿ,ಡಿ.22-ಪಂಚಮಸಾಲಿ ಸಮುದಾಯಕ್ಕೆ ಪ್ರತ್ಯೇಕ ಪ್ರವರ್ಗ ಸೃಷ್ಟಿಸಿ ಮೀಸಲಾತಿ ನೀಡುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಇಲ್ಲಿನ ಸುವರ್ಣಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಪಂಚಮಸಾಲಿ ಸಮುದಾಯವನ್ನು 3ಬಿ ಇಂದ 2ಬಿಗೆ ಸೇರ್ಪಡೆ ಮಾಡದೆ ಪ್ರತ್ಯೇಕ ಪ್ರವರ್ಗ ಸೃಷ್ಟಿಸಿ ಮೀಸಲಾತಿ ನೀಡುವ ತೀರ್ಮಾನ ಕೈಗೊಂಡಿದೆ.

ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ನೇತೃತ್ವದಲ್ಲಿ ರಾಜ್ಯ ಸರ್ಕಾರಕ್ಕೆ ಮಧ್ಯಂತರ ವರದಿಯನ್ನು ಸಲ್ಲಿಸಿದ್ದು, ಇದರಲ್ಲಿ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬಹುದು ಎಂದು ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ ಎಂದು ಗೊತ್ತಾಗಿದೆ.

ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿರುವ ಪಂಚಮಸಾಲಿ ಸಮುದಾಯವು ಮೀಸಲಾತಿ ಪಡೆಯಲು ಅರ್ಹತೆ ಇದೆ. ಪ್ರಸ್ತುತ 3ಬಿನಲ್ಲಿರುವ ಈ ಸಮುದಾಯವನ್ನು 2ಎಗೆ ಸೇರ್ಪಡೆ ಮಾಡಬಾರದು. ಇದಕ್ಕಾಗಿ ಪ್ರತ್ಯೇಕ ಪ್ರವರ್ಗ ಸೃಷ್ಟಿಸಬೇಕೆಂದು ಮಧ್ಯಂತರ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ.

ಕೋವಿಡ್ ನೆಪದಲ್ಲಿ ಚುನಾವಣೆ ಮುಂದೂಡುವ ಯತ್ನ ನಡೀತಿದೆ : ಡಿಕೆಶಿ

2ಬಿನಲ್ಲಿ ಕುರುಬ ಸಮುದಾಯದವರಿದ್ದು, ಈ ಪ್ರವರ್ಗಕ್ಕೆ ಪಂಚಮಸಾಲಿ ಸಮುದಾಯವನ್ನು ಸೇರ್ಪಡೆ ಮಾಡಿದರೆ ವಿರೋಧ ವ್ಯಕ್ತವಾಗುತ್ತದೆ. ಹೀಗಾಗಿ ಪ್ರತ್ಯೇಕ ಪ್ರವರ್ಗ ಸೃಷ್ಟಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ.

ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿಗಾಗಿ ಅಶೋಕ್ ಆಗ್ರಹ

ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕಾದ ಅಗತ್ಯವಿಲ್ಲ. ಪ್ರತ್ಯೇಕ ಪ್ರವರ್ಗ ಸೃಷ್ಟಿಸಿ ಮೀಸಲಾತಿ ನೀಡಿದರೆ ಅದು ನ್ಯಾಯಾಲಯದಲ್ಲಿ ಊರ್ಜಿತವಾಗುತ್ತದೆ. ಸರ್ಕಾರ ಎಚ್ಚರಿಕೆಯಿಂದ ಹೆಜ್ಜೆ ಇಡುವಂತೆ ಆಯೋಗ ಮನವಿ ಮಾಡಿದೆ.

Panchamasali, community, reservation, separate category,

Articles You Might Like

Share This Article