ಬೆಂಗಳೂರು,ಡಿ.21- ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರ್ಪಡೆ ಮಾಡುವಂತೆ ಒತ್ತಾಯಿಸಿ ನಾಳೆ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದ್ದು, ಸರ್ಕಾರಕ್ಕೆ ತಲೆನೋವಾಗಿ ಮತ್ತೊಂದು ವಿಘ್ನ ಎದುರಾಗಿದೆ.
ಬಸವಕಲ್ಯಾಣದ ಜಯಮೃತ್ಯುಂಜಯ ಸ್ವಾಮೀಜಿಯವರ ನೇತೃತ್ವದಲ್ಲಿ ಸವದತ್ತಿಯಿಂದ ಈಗಾಗಲೇ ಪಾದಯಾತ್ರೆ ಹೊರಟ್ಟಿದ್ದು, ನಾಳೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಲಾಗಿದೆ.
ಪ್ರತಿಭಟನೆಯಲ್ಲಿ ಅಂದಾಜು 2 ಲಕ್ಷಕ್ಕೂ ಹೆಚ್ಚು ಜನ ಸೇರುವ ಸಾಧ್ಯತೆಯಿದ್ದು, ಸರ್ಕಾರಕ್ಕೆ ಗಡುವು ನೀಡಿರುವಂತೆ ನಾಳೆ ಮೀಸಲಾತಿ ಹೆಚ್ಚಳ ಮಾಡುವ ನಿರ್ಧಾರವನ್ನು ಪ್ರಕಟಿಸಬೇಕೆಂದು ಶ್ರೀಗಳು ಪಟ್ಟು ಹಿಡಿದಿದ್ದಾರೆ.
ಈ ಬೆಳವಣಿಗೆಗಳ ನಡುವೆಯೇ ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಸರ್ಕಾರದಿಂದ ಸಿಹಿ ಸುದ್ದಿ ಹೊರಡಲಿದೆ ಎಂದು ಸಮುದಾಯವರು ನಿರೀಕ್ಷೆ ಇಟ್ಟುಕೊಂಡಿದ್ದಾರೆ.
ಕರ್ನಾಟಕಕ್ಕೆ ನುಗ್ಗುತ್ತೇವೆ, ನಮಗೆ ಯಾರ ಅನುಮತಿಯೂ ಬೇಕಿಲ್ಲ : ಸಂಜಯ್ ರಾವತ್
ಹಿಂದುಳಿದ ವರ್ಗಗಳ ಆಯೋಗವು ವರದಿ ನೀಡಿದ ಬಳಿಕ ರಾಜ್ಯ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ಅಲ್ಲಿಯವರೆಗೂ ಪ್ರತಿಭಟನೆ, ಹೋರಾಟ ನಡೆಸಬಾರದು ಎಂದು ಸರ್ಕಾರ ಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ಸಮುದಾಯದ ಮುಖಂಡರಿಗೆ ಮನವಿ ಮಾಡಿದೆ.
ಆಯೋಗದ ವರದಿ ಬಂದ ನಂತರ ಸರ್ಕಾರ ಸೂಕ್ತವಾಗಿ ಸ್ಪಂದಿಸಲಿದೆ. ಇದು ಕಾನೂನು ಪ್ರಕ್ರಿಯೆಯಿಂದ ಮಾತ್ರ ಈಡೇರಲು ಸಾಧ್ಯ. ಹೀಗಾಗಿ ಸರ್ಕಾರಕ್ಕೆ ಗಡುವು ನೀಡಬಾರದೆಂದು ಸಿಎಂ ಶ್ರೀಗಳಿಗೆ ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿದ್ದಾರೆ.
ಆದರೆ ಇದಾವುದನ್ನೂ ಒಪ್ಪದ ಶ್ರೀಗಳು ಈಗಾಗಲೇ ಸವದತ್ತಿಯಿಂದ ಪಾದಯಾತ್ರೆಯನ್ನು ಆರಂಭಿಸಿದ್ದು, ಸಮುದಾಯದ ಜನಪ್ರತಿನಿಧಿಗಳು, ಸಮುದಾಯದ ಮುಖಂಡರು ಸೇರಿದಂತೆ ಮತ್ತಿತರರ ಜೊತೆ ನಾಳೆ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ದನಗಳ ಕಳ್ಳಸಾಗಣೆ ತಡೆದು 9 ಹಸುಗಳನ್ನು ರಕ್ಷಿಸಿದ ಬಿಜೆಪಿ ಶಾಸಕಿ
ಶ್ರೀಗಳು ಮುತ್ತಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ಸರ್ಕಾರಕ್ಕೆ ಮೀಸಲಾತಿ ವಿವಾದ ನುಂಗಲಾರದ ಬಿಸಿತುಪ್ಪವಾಗಿ ಪರಿಣಮಿಸಿದೆ. ಏಕೆಂದರೆ ಶ್ರೀಗಳ ಬೇಡಿಕೆಯನ್ನು ಈಡೇರಿಸದಿದ್ದರೆ ವಿಧಾನಸಭೆ ಚುನಾವಣೆಯಲ್ಲಿ ಹಿನ್ನಡೆಯಾಗಬಹುದೆಂಬ ಆತಂಕ ಒಂದು ಕಡೆಯಾದರೆ ಮತ್ತೊಂದು ಕಡೆ ಕಿತ್ತೂರು ಕರ್ನಾಟಕದಲ್ಲಿ ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಪಂಚಮಸಾಲಿ ಸಮುದಯ ನಿರ್ಣಾಯಕ ಪಾತ್ರ ವಹಿಸುವುದರಿಂದ ಬಿಕ್ಕಟ್ಟನ್ನು ಯಾವ ರೀತಿ ಪರಿಹರಿಸಿಕೊಳ್ಳಬೇಕು ಎಂಬುದು ಸರ್ಕಾರಕ್ಕೂ ಬಿಡಿಸಲಾರದ ಕಗ್ಗಂಟಾಗಿದೆ.
ಸಚಿವರಾದ ಸಿ.ಸಿ.ಪಾಟೀಲ್, ಶಂಕರ್ ಪಾಟೀಲ್ ಮುನೇನಕೊಪ್ಪ ಹಾಗು ಸಮುದಾಯದ ಶಾಸಕರು, ಮುಖಂಡರನ್ನು ಜಯಮೃತ್ಯುಂಜಯ ಸ್ವಾಮೀಜಿ ಬಳಿ ಸಂಧಾನಕ್ಕೆ ಕಳುಹಿಸಿಕೊಡಲಾಗಿತ್ತು.
ಆದರೆ ಇದಾವುದಕ್ಕೂ ಜಗ್ಗದ ಶ್ರೀಗಳು ಪಾದಯಾತ್ರೆ ನಡೆಸಿ ನಾಳೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿರುವುದು ಸರ್ಕಾರಕ್ಕೆ ನಿದ್ದೆಗೆಡುವಂತೆ ಮಾಡಿದೆ.
ಅವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಶ್ರೀಗಳ ಹೋರಾಟವನ್ನು ಪ್ರತಿಪಕ್ಷದವರು ರಾಜಕೀಯ ಅಸ್ತ್ರ ಮಾಡಿಕೊಳ್ಳಬಹುದೆಂಬ ಆತಂಕ ಒಂದುಕಡೆಯಾದರೆ ಬೇಡಿಕೆ ಈಡೇರಿಸದಿದ್ದರೆ ಸಮುದಾಯದವರ ಕೆಂಗೆಣ್ಣಿಗೆ ಗುರಿಯಾಗಬೇಕಾಗುತ್ತದೆ ಎಂಬ ಅಳಕು ಇದೆ.
#Panchamasali, #community, #protest, #SuvarnaVidhana #demanding, #2AReservation,