ಬೆಳಗಾವಿ,ಡಿ.20- ಪಂಚಮಸಾಲಿ ಸಮುದಾಯದವರಿಗೆ ಮೀಸಲಾತಿ ನೀಡುವ ಕುರಿತು ಸರ್ಕಾರ ಈಗಾಗಲೇ ಸಮಿತಿ ರಚಿಸಿ ವರದಿ ನೀಡಲು ಸೂಚನೆ ನೀಡಲಾಗಿದೆ. ಸಮಿತಿ ವರದಿ ನೀಡಿದ ಬಳಿಕ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುವರ್ಣಸೌಧದಲ್ಲಿಂದು ಮಾತನಾಡಿದ ಅವರು, ಪಂಚಮಸಾಲಿ ಸಮುದಾಯದವರಿಗೆ ಮೀಸಲಾತಿ ನೀಡುವ ಕುರಿತು ಸಮಿತಿ ರಚಿಸಲಾಗಿದೆ. ಸಮಿತಿ ವರದಿ ಮಂಡಿಸಿದ ಬಳಿಕ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.
ಮಾಜಿ ಸಚಿವರಾದ ಈಶ್ವರಪ್ಪ, ರಮೇಶ್ ಜಾರಕಿಹೊಳಿ ಅವರು ಸರ್ಕಾರಕ್ಕೆ ಬೆದರಿಕೆ ಹಾಕಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ಅವರಿಬ್ಬರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಚಿಂತನೆಯಿದೆ. ಮೊನ್ನೆ ದೆಹಲಿಗೆ ಹೋಗಿದ್ದ ಸಂದರ್ಭದಲ್ಲಿ ವರಿಷ್ಠರ ಬಳಿ ಈ ವಿಚಾರ ಪ್ರಸ್ತಾಪ ಮಾಡಿದ್ದೇನೆ ಎಂದು ಹೇಳಿದರು.
ಕೆಲ ವಿಚಾರಗಳನ್ನು ಬಹಿರಂಗವಾಗಿ ಮಾತನಾಡವುದು ಸರಿಯಲ್ಲ. ರಮೇಶ್ ಜಾರಕಿಹೊಳಿ ಮತ್ತು ಈಶ್ವರಪ್ಪನವರನ್ನು ಕರೆಸಿಕೊಂಡು ವೈಯಕ್ತಿಕವಾಗಿ ಮಾತನಾಡುತ್ತೇನೆ ಎಂದು ಹೇಳಿದರು.
ಜಪಾನ್ ವಿರುದ್ಧ ಉತ್ತರ ಕೊರಿಯಾ ಆಕ್ರೋಶ : ರಕ್ತ-ನಿರ್ಣಾಯಕ ಕ್ರಮದ ಎಚ್ಚರಿಕೆ
ಡಿಕೆಶಿ ಮೇಲೆ ಮತ್ತೆ ಸಿಬಿಐ ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಸಿಬಿಐ ಒಂದು ಸ್ವತಂತ್ರ ತನಿಖಾ ಸಂಸ್ಥೆಯಾಗಿದೆ. ಡಿ.ಕೆ.ಶಿವಕುಮಾರ್ ಅವರ ಮೇಲಿರುವ ಪ್ರಕರಣಗಳ ಆಧಾರದ ಮೇಲೆ ಅದು ಕ್ರಮ ತೆಗೆದುಕೊಳ್ಳುತ್ತಿದೆ. ಡಿಕೆಶಿ ಅವರಿಗೂ ಕೂಡ ಅದು ಗೊತ್ತಿದೆ ಎಂದರು.
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಲೋಪವಿಲ್ಲದಂತೆ ನೋಡಿಕೊಳ್ಳಿ : ತುಷಾರ್ ಗಿರಿನಾಥ್
ಹಲಾಲ್ ಬಿಲ್ ಜಾರಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ವಿಶ್ವ ಮುಂದೆ ಬಂದಿದೆ. ನಾವು ಮುಂದೆ ಬಂದಿದ್ದೇವೆ. ಆ ರೀತಿಯ ಯಾವುದೇ ಪ್ರಸ್ತಾಪ ಇಲ್ಲ. ಹಲಾಲ್ ವಿಚಾರದಿಂದ ಹೊರಬನ್ನಿ ಎಂದಷ್ಟೇ ಹೇಳಿದರು.
Panchamasali, Reservation, committee report, CM Bommai,