ಪಂಚಮಸಾಲಿ-ಒಕ್ಕಲಿಗ ಮೀಸಲಾತಿ ವಿಚಾರದಲ್ಲಿ ಗೊಂದಲ ಬೇಡ: ಸಿಎಂ ಬೊಮ್ಮಾಯಿ

Social Share

ಹುಬ್ಬಳ್ಳಿ,ಜ.1- ಮೀಸಲಾತಿ ವಿಚಾರದಲ್ಲಿ ಯಾವುದೇ ಕಾನೂನು ಗೊಂದಲವಿಲ್ಲ. ಪಂಚಮಸಾಲಿ -ಒಕ್ಕಲಿಗ ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಅನಗತ್ಯವಾಗಿ ಗೊಂದಲ ಬೇಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ಮಧ್ಯಂತರ ವರದಿ ಇದೆ. ಅಂತಿಮ ಆದೇಶದಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ. ಇನ್ನೂ ಇದರಲ್ಲಿ ನಮ್ಮ ಸರ್ಕಾರ ಉದ್ದೇಶ ಹೇಳಿದ್ದೇವೆ ಇದು ನಮ್ಮ ಅಚಲ ನಿರ್ಧಾರ ಸಹ ಆಗಿದೆ. ಅಂತಿಮ ವರದಿಯಲ್ಲಿ ಅಂಕಿ-ಅಂಶಗಳ ಮಾಹಿತಿ ನೀಡುತ್ತೇವೆ ಎಂದರು.

ಮೀಸಲಾತಿ ಜÁರಿ ವಿಚಾರದಲ್ಲಿ ಸಂಬಂಧಪಟ್ಟವರ ಜೊತೆ ಚರ್ಚಿಸಲಾಗುವುದು, ಯಾವುದೇ ಕಾರಣಕ್ಕೂ ಹಿಂದುಳಿದ ವರ್ಗದವರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ ಯಾರು ಆತಂಕಪಡುವ ವಿಚಾರ ಇಲ್ಲ ಎಂದರು.

ಹೊಸ ವರ್ಷಕ್ಕೆ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಶಾಕ್

ಕೆಲ ವರ್ಗದ ಜನರಿಗೆ ಶೈಕ್ಷಣಿಕ- ಉದ್ಯೋಗದಲ್ಲಿ ಹಿನ್ನಡೆಯಾಗಿದ್ದು, ನಿಜ ಆದ್ದರಿಂದ ಅವರಿಗೆ ನ್ಯಾಯಕೊಡುವ ನಿಟ್ಟಿನಲ್ಲಿ ಮೀಸಲಾತಿ ಹೆಚ್ಚಳ ಮಾಡಲಾಗಿದೆ. ಇದಕ್ಕೆ ಸ್ಪಷ್ಟೀಕರಣ ಬೇಕಾದರೆ ಕೊಡುತ್ತೇವೆ. ಇದರಲ್ಲಿ ಯಾರಿಗೂ ಅನ್ಯಾಯ ಮಾಡುವ ಪ್ರಶ್ನೆಯಿಲ್ಲ. ವಿರೋಧ ಪಕ್ಷದವರು ತಾವು ಅಕಾರದಲ್ಲಿ ಇದ್ದಾಗ ಈ ಬೇಡಿಕೆ ಈಡೇರಿಸಲು ಆಗಲಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.

ಮಹದಾಯಿ ವಿಚಾರದಲ್ಲಿ ಅನಗತ್ಯ ಪ್ರತಿಪಕ್ಷ ಗಳಿಂದ ಅನಗತ್ಯ ಗೊಂದಲ ಸೃಷ್ಟಿ ಮಾಡಲಾಗುತ್ತಿದೆ. ಮಹದಾಯಿ ಯೋಜನೆ ವಿಚಾರದಲ್ಲಿ ಡಿಪಿಆರ್ ಗ್ರಿನ್ ಸಿಗ್ನಲ್ ಆದೇಶದಲ್ಲಿ ಕೆಳಗಡೆ ಸಹಿ ಇದೆ ಇದರ ಬಗ್ಗೆ ಅನುಮಾನ ಬೇಡ ಎಂದರು.

ಕಾಂಗ್ರೆಸ್ ಯಾವ ಉದ್ದೇಶಕ್ಕೆ ಆರೋಪಿಸುತ್ತಿದೆ ಗೊತ್ತಿಲ್ಲ. ಮಹದಾಯಿಗಾಗಿ ನಾವು ಹೋರಾಟ ಮಾಡಿದ್ವಿ, ಅವರು ಹೋರಾಟ ಮಾಡಿದ್ರು ಆದರೆ ಈಗ ಆ ಹೋರಾಟಕ್ಕೆ ತಾರ್ಕಿಕ ಜಯ ಸಿಕ್ಕಿದೆ 20- 25 ವರ್ಷ ಹೋರಾಟಕ್ಕೆ ಫಲ ಸಿಕ್ಕಿದ್ದು, ಇಂತಹ ಸಂದರ್ಭಗಳಲ್ಲಿ ಲೋಪದೋಷ ಹುಡುಕುವುದು ಅವರ ಮನಸ್ಥಿತಿಯನ್ನು ಸೂಚಿಸುತ್ತದೆ ಎಂದು ಅವರು ಹೇಳಿದರು.

ಜೆಡಿಎಸ್ ಕನ್ನಡಿಗರ ಎಟಿಎಂ : ಷಾಗೆ ಎಚ್‍ಡಿಕೆ ತಿರುಗೇಟು

ಅವರ ಟೀಕೆ ಟಿಪ್ಪಣಿಗಳ ಬಗ್ಗೆ ತಲೆಕಡೆಸಿಕೊಳ್ಳುವುದಿಲ್ಲ ನಮ್ಮ ಸರ್ಕಾರದ ಅಚಲ ನಿರ್ಧಾರ. ಡಿಪಿಆರ್ ಆಗಿದೆ. ಎಂಓಎಫ್ ಕ್ಲಿಯರೆನ್ಸ್ ತೆಗೆದುಕೊಂಡು ಟೆಂಡರ್ ಕರೆದು ಕಾಮಗಾರಿ ಆರಂಭಿಸುತ್ತವೆ ಇದು ಸ್ಪಷ್ಟವಾದ ಮಾಹಿತಿ ಇದೆ ಎಂದರು.

Panchamasali, Vokkaliga, Reservation, CM Bommai,

Articles You Might Like

Share This Article