ಮೀಸಲಾತಿ ವಿಷಯದಲ್ಲಿ ಮುಖ್ಯಮಂತ್ರಿ ಟೋಪಿ ಹಾಕಿದ್ದಾರೆ : ಡಿಕೆಶಿ

Social Share

ಬೆಂಗಳೂರು,ಡಿ.31- ಪಂಚಮಸಾಲಿ, ಒಕ್ಕಲಿಗರ ಮೀಸಲಾತಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿನ್ನೆ ಹೊರಡಿಸಿರುವ ಘೋಷಣೆಯಿಂದ ಯಾವ ಸಮಾಜಕ್ಕೂ ನ್ಯಾಯ ಸಿಗುವುದಿಲ್ಲ. ಮುಖ್ಯಮಂತ್ರಿ ಟೋಪಿ ಹಾಕಿ, ಜನ ಸಮುದಾಯಕ್ಕೆ ಮೋಸ ಮಾಡಿದ್ದಾರೆ. ಯಾರಿಗೂ ಅವಕಾಶ ಸಿಗದಿರಲಿ ಎಂದು ರಾಜಕೀಯವಾಗಿ ಹೆದರಿಕೊಂಡು ತೆಗೆದುಕೊಂಡಿರುವ ತೀರ್ಮಾನಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಬಳಿ ಎಲ್ಲಾ ಮಾಹಿತಿ ಮತ್ತು ದಾಖಲೆಗಳಿವೆ. ಶೀಘ್ರವೇ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಸೇರಿ ಪತ್ರಿಕಾಗೋಷ್ಠಿ ನಡೆಸಿ ಎಲ್ಲ ವಿವರಗಳನ್ನು ಬಿಚ್ಚಿಡುತ್ತೇವೆ ಎಂದು ತಿರುಗೇಟು ನೀಡಿದರು.

ಸರ್ಕಾರದವರು ನಮ್ಮನ್ನು ಶಾಲಾ ಮಕ್ಕಳೆಂದು ಭಾವಿಸಿದ್ದಾರೆ. ಅವರ ಕ್ರಮದಿಂದ ಯಾರಿಗೆ ಅನುಕೂಲ? ಇರುವ ಮೀಸಲಾತಿ ವರ್ಗ ತೆಗೆದುಹಾಕಲು ಹೇಗೆ ಸಾಧ್ಯ? ಇದು ಅಸಾಧ್ಯ. ಇಡಬ್ಲ್ಯೂಎಸ್‍ಗೆ ನೀಡಲಾಗಿರುವ ಶೇ.10ರಷ್ಟು ಮೀಸಲಾತಿ ತೆಗೆದರೆ ಅವರ ಭವಿಷ್ಯ ಏನಾಗಬೇಕು ? ಯಾವುದೇ ಕ್ರಮವನ್ನಾದರೂ ಸಂವಿಧಾನ ಬದ್ಧ, ಕಾನೂನು ಬದ್ಧವಾಗಿ ತೆಗೆದುಕೊಳ್ಳಬೇಕು. ಈ ಕ್ರಮದಿಂದ ಪಂಚಮಸಾಲಿ ಹಾಗೂ ಒಕ್ಕಲಿಗರಿಗೆ ನ್ಯಾಯ ಸಿಗುತ್ತದೆ ಎಂದು ಬಿಜೆಪಿ ನಾಯಕರನ್ನು ಬಿಟ್ಟು ಆಯಾ ಸಮುದಾಯದ ಮುಖಂಡರಿಂದ ಹೇಳಿಕೆ ಕೊಡಿಸಲಿ ಎಂದು ಸವಾಲು ಹಾಕಿದರು.

ಸಚಿವ ಸಂಪುಟದ ತೀರ್ಮಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಏಕೆ ಖುದ್ದಾಗಿ ಘೋಷಣೆ ಮಾಡಿಲ್ಲ? 3 ತಿಂಗಳ ನಂತರ ಚುನಾವಣೆ ಬಂದಾಗ ಮೀಸಲಾತಿ ಪ್ರಮಾಣ ಎಷ್ಟು ಎಂದು ತೀರ್ಮಾನ ಮಾಡುತ್ತಾರೆಯೇ? ಇದು ಮೋಸ ಮಾಡುವ ತಂತ್ರ. ಯಾವ ಸಮಾಜಕ್ಕೂ ಅವರು ನ್ಯಾಯ ಒದಗಿಸಿಕೊಟ್ಟಿಲ್ಲ. ನಾವು ಸಮಬಾಳು, ಸಮಪಾಲು ಎಂಬ ನೀತಿ ಮೇಲೆ ಕೇಳುತ್ತಿದ್ದೇವೆ ಎಂದರು.

ಒಕ್ಕಲಿಗರು ಶೇ.12 ರಷ್ಟು ಮೀಸಲಾತಿ ಕೇಳಿದ್ದು ಅದನ್ನು ಘೋಷಣೆ ಮಾಡಲಿ. ಪಂಚಮಸಾಲಿ ಸಮಾಜ ಆಗ್ರಹಿಸಿರುವ ಬೇಡಿಕೆ ಘೋಷಿಸಲಿ. ಪರಿಶಿಷ್ಟರಿಗೆ ನೀಡಲಾಗಿರುವ ಮೀಸಲಾತಿ ಹೆಚ್ಚಳವನ್ನು ಸಂವಿಧಾನದ 9ನೇ ಶೆಡ್ಯೂಲ್ ನಲ್ಲಿ ಸೇರಿಸಬೇಕಿತ್ತು.

ಇದುವರೆಗೂ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕೂಡ ಹೋಗಿಲ್ಲ. ಇಲ್ಲಿ ಕೇವಲ ಆದೇಶ ಮಾಡಿದರೆ ಆಗುತ್ತದೆಯೇ? ಎಲ್ಲದಕ್ಕೂ ಕಾನೂನು ತೊಡಕು ಇದೆ. ಯಾರ ವಿರೋಧವನ್ನೂ ಕಟ್ಟಿಕೊಳ್ಳಬಾರದು ಎಂದು ಆಡುತ್ತಿರುವ ನಾಟಕ. ಈ ಬಗ್ಗೆ ಎಲ್ಲಾ ನಾಯಕರ ಜತೆ ಚರ್ಚೆ ಮಾಡಿ ನಾಳೆ ಅಥವಾ ನಾಡಿದ್ದು ತಿಳಿಸುತ್ತೇವೆ ‘ ಎಂದು ಹೇಳಿದರು.

ಎಲ್ಲರಿಗೂ ಮೀಸಲಾತಿ ಕೊಡಲು ಸಾಧ್ಯವಿಲ್ಲ ಎಂಬ ನಿರಾಣಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ‘ ಬಿಜೆಪಿಯಲ್ಲಿ ಯತ್ನಾಳ್ ಅವರಿಗೆ ಈ ವಿಚಾರದಲ್ಲಿ ತಗಾದೆ ಎತ್ತಿದರೆ ಪಕ್ಷದಿಂದ ಕಿತ್ತು ಹಾಕುವ ಬೆದರಿಕೆ ಹಾಕಿದ್ದಾರೆ. ಯತ್ನಾಳ್ ಅವರು ಈಗ ಈ ವಿಚಾರದಲ್ಲಿ ಹೇಳಿಕೆ ನೀಡಲಿ. ಬೆಂಬಲ ನೀಡಬೇಕು ಇಲ್ಲ ವಿರೋಧ ವ್ಯಕ್ತಪಡಿಸಬೇಕು.

ಕಳಸಾ ಬಂಡೂರಿ ಯೋಜನೆ ಕ್ರೆಡಿಟ್ ಪಡೆಯಲು ಮೂರೂ ಪಕ್ಷಗಳ ವಾರ್

ಬಾಯಿ ಮುಚ್ಚಿಕೊಂಡಿರುವುದು ಏಕೆ? ಅಷ್ಟೆಲ್ಲ ಮಾತನಾಡುತ್ತಿದ್ದವರು ಈಗ ಯಾಕೆ ಮಾತನಾಡುತ್ತಿಲ್ಲ. ಸಿಎಂ ಖುದ್ದಾಗಿ ಈ ಬಗ್ಗೆ ನಿರ್ಧಾರ ಪ್ರಕಟಿಸಿಲ್ಲ ಏಕೆ? ಇವರು ಕೊಡುವ ಚಾಕಲೇಟ್ ಒಪ್ಪಲು ಸಾಧ್ಯವಿಲ್ಲ. ಇವರದು ಬರೀ ಮೋಸ. ಎಲ್ಲಾ ಸಮಾಜಕ್ಕೂ ಬ್ರಹ್ಮಾಂಡ ಮೋಸ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ರಾಜ್ಯದ ಜನರಿಗೆ ಬಿಜೆಪಿ ಮಾಡುತ್ತಿರುವ ಅನ್ಯಾಯ ಯಾವ ಕಾಲದಲ್ಲೂ ಆಗಿರಲಿಲ್ಲ. ಇದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲು ನಮ್ಮ ಪ್ರತಿಭಟನಾ ಸಮಾವೇಶಕ್ಕೆ ಅಪಾರ ಪ್ರಮಾಣದಲ್ಲಿ ಜನ ಸೇರಿದ್ದರು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಚಾಲಕನಿಗೆ ಹೃದಯಘಾತವಾಗಿ ಕಾರಿಗೆ ಗುದ್ದಿದ ಬಸ್‍, ಒಂಬತ್ತು ಮಂದಿ ಸಾವು

ಅಮಿತ್ ಶಾ ಅವರ ರಾಜ್ಯ ಪ್ರವಾಸ ಹಾಗೂ ಯೋಜನೆ ಘೋಷಣೆ ಚುನಾವಣೆ ಮೇಲೆ ಪ್ರಭಾವ ಬೀರುತ್ತದೆಯೇ ಎಂದು ಕೇಳಿದಾಗ, ಅಧಿಕಾರ ಇದ್ದಾಗ ಕೆಲಸ ಮಾಡದವರು ಅಕಾರ ಹೋಗುವ ಸಮಯದಲ್ಲಿ ಯೋಜನೆ ಘೋಷಣೆ ಮಾಡಿದರೆ ಪ್ರಯೋಜನವೇನು? ಉಳಿದಿರುವ 100 ದಿನಗಳಲ್ಲಿ ಯಾವ ಯೋಜನೆ ಜಾರಿಯಾಗುತ್ತದೆ. ಇದು ಕೇವಲ ಕಾಗದದ ಮೇಲೆ ಉಳಿಯುವ ಯೋಜನೆ ಅಷ್ಟೇ. ಕಳೆದ ಚುನಾವಣೆಯಲ್ಲಿ ನೀಡಿದ್ದ 600 ಭರವಸೆಗಳಲ್ಲಿ 550 ಅನ್ನು ಜಾರಿ ಮಾಡಿಲ್ಲ. ನಮ್ಮ ಪಕ್ಷ 2013ರಲ್ಲಿ ನೀಡಿದ್ದ 169 ಭರವಸೆಗಳ ಪೈಕಿ, 168 ಭರವಸೆಗಳನ್ನು ಈಡೇರಿಸಿದ್ದೇವೆ ಎಂದರು.

Articles You Might Like

Share This Article