ಬೆಂಗಳೂರು, ಜೂ.28- ಗೃಹಸಚಿವ ಡಾ.ಜಿ.ಪರಮೇಶ್ವರ್ ತಮ್ಮ ಮನೆಗೆ ಬಂದು ಚರ್ಚೆ ಮಾಡಿದ್ದು ನಿಜ, ಆದರೆ ಅಧಿಕಾರ ಹಂಚಿಕೆ ಬಗ್ಗೆ ಯಾವುದೇಆದರೆ ಪ್ರಸ್ತಾಪವಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಸಚಿವರು ತಮ್ಮ ಮನೆಗೆ ಭೇಟಿ ನೀಡಿರುವುದರಲ್ಲಿ ವಿಶೇಷವೇನೂ ಇಲ್ಲ. ಅವರು ಬಂದು ಚರ್ಚೆ ಮಾಡಿದ್ದಾರೆ. ಎಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡುವುದು ನಮ್ಮ ಉದ್ದೇಶ ಎಂದು ಹೇಳಿದರು.
ಕುತೂಹಲ ಕೆರಳಿಸಿದ ಭೇಟಿ :
ಮಧ್ಯರಾತ್ರಿ ಜಿ.ಪರಮೇಶ್ವರ್ ಮತ್ತು ಡಿ.ಕೆ.ಶಿವಕುಮಾರ್ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಸಚಿವ ಕೆ.ಎನ್.ರಾಜಣ್ಣ ಇತ್ತೀಚೆಗೆ ರಾಜಕೀಯ ಕ್ರಾಂತಿಯಾಗಲಿದೆ ಎಂಬ ಹೇಳಿಕೆ ನೀಡಿದ್ದರು. ಅದನ್ನು ಪದೇಪದೇ ಪುನರುಚ್ಚರಿಸುತ್ತಲೇ ಇದ್ದಾರೆ.
ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಗೃಹಸಚಿವರ ನಡುವೆ ಚರ್ಚೆಯಾಗಿದೆ. ಪರಮೇಶ್ವರ್‌ರವರು ತಮ್ಮ ಈ ಭೇಟಿಯ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ. ಡಿ.ಕೆ.ಶಿವಕುಮಾರ್ ಭೇಟಿಯಾಗಿದ್ದನ್ನು ಒಪ್ಪಿಕೊಂಡಿದ್ದಾರೆ. ಆದರೆ ಚರ್ಚೆ ಬಗ್ಗೆ ಬಹಿರಂಗ ಹೇಳಿಕೆ ನೀಡಲು ನಿರಾಕರಿಸಿದ್ದಾರೆ.
- ಸಿದ್ದರಾಮಯ್ಯನವರೇ, ಗಾಂಧಿ ಕುಟುಂಬ ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ಆರ್ಎಸ್ಎಸ್ ಟೀಕಿಸಬೇಡಿ : ಆರ್.ಅಶೋಕ್
- ಪೊಲೀಸರಿಂದ ತಪ್ಪಿಸಿಕೊಂಡ ಬಾಂಗ್ಲಾದೇಶದ ಗರ್ಭಿಣಿ ಕೈದಿ
- ರಾಷ್ಟ್ರಪತಿ ಮತ್ತು ರಾಜ್ಯಪಾಲರಿಗೆ ಗಡುವು ವಿಧಿಸಲು ಬರಲ್ಲ ; ಕೇಂದ್ರ ಸರ್ಕಾರ ಎಚ್ಚರಿಕೆ
- ಆರ್ಎಸ್ಎಸ್-ಬಿಜೆಪಿ ನಡುವೆ ಯಾವುದೇ ಒಡಕಿಲ್ಲ ; ರಾಮ್ ಮಾಧವ್
- ಬೆಂಗಳೂರಿನ ಟನಲ್ ರಸ್ತೆ ನಿರ್ಮಾಣಕ್ಕೆ ಮುಗಿಬಿದ್ದ ಪ್ರತಿಷ್ಠಿತ ಸಂಸ್ಥೆಗಳು