Friday, October 11, 2024
Homeರಾಜ್ಯಕ್ಯಾಶ್ ಫಾರ್ ಪೋಸ್ಟಿಂಗ್ ದಂಧೆಗೆ ಪರಶುರಾಂ ಬಲಿಯಾಗಿದ್ದಾರೆ : ಯತ್ನಾಳ್

ಕ್ಯಾಶ್ ಫಾರ್ ಪೋಸ್ಟಿಂಗ್ ದಂಧೆಗೆ ಪರಶುರಾಂ ಬಲಿಯಾಗಿದ್ದಾರೆ : ಯತ್ನಾಳ್

ಬೆಂಗಳೂರು,ಆ.3– ಕ್ಯಾಶ್ ಫಾರ್ ಪೋಸ್ಟಿಂಗ್ ಪರಿಣಾಮ ಕರ್ನಾಟಕದಲ್ಲಿ ವರ್ಗಾವಣೆ ದಂಧೆಗೆ ಮತ್ತೊಂದು ಬಲಿಯನ್ನು ರಾಜ್ಯ ಸರ್ಕಾರ ಪಡೆದುಕೊಂಡಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್‌್ಸನಲ್ಲಿ ಪೋಸ್ಟ್ ಮಾಡಿರುವ ಅವರು, ಪಿಎಸ್ಐ ಪರಶುರಾಮ್ ಅವರಿಗೆ ಕಿರುಕುಳ ನೀಡಿ, ಹಣಕ್ಕಾಗಿ ಪೀಡಿಸಿ ಅವರ ಸಾವಿಗೆ ಯಾದಗರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಮತ್ತು ಅವರ ಮಗ ಸನ್ನಿ ಗೌಡ ಕಾರಣರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಏಳು ತಿಂಗಳ ಹಿಂದಯಷ್ಟೇ 30 ಲಕ್ಷ ಹಣ ನೀಡಿ ನಗರ ಠಾಣೆಗೆ ಪೋಸ್ಟಿಂಗ್ ಪಡೆದುಕೊಂಡಿದ್ದ ಪರಶುರಾಮ ಅವರು ಸಾಲದ ಸುಳಿಗೆ ಸಿಲುಕಿದ್ದರು, ಇದೀಗ ಮತ್ತೆ ನಿಯಮಬಾಹಿರ ವರ್ಗಾವಣೆ ಮಾಡಿಸಿ ಹಣಕ್ಕಾಗಿ ಕಿರುಕುಳ ನೀಡಿದ್ದಾರೆ ಎಂದು ದೂರಿದ್ದಾರೆ. ಈ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಯಬೇಕು ಎಂದು ಬಸನಗೌಡ ಯತ್ನಾಳ್ ಆಗ್ರಹಿಸಿದ್ದಾರೆ.

RELATED ARTICLES

Latest News