Home ಇದೀಗ ಬಂದ ಸುದ್ದಿ ಕಾರ್ಕಳದ ಪರಶುರಾಮ ಪ್ರತಿಮೆ ಪೈಬರ್‌ನಿಂದ ಮಾಡಿದ್ದು ಎಂದು ಅಪಪ್ರಚಾರ ಮಾಡಿದ್ದ ಕಾಂಗ್ರೆಸಿಗರಿಗೆ ಮುಖಭಂಗ..!

ಕಾರ್ಕಳದ ಪರಶುರಾಮ ಪ್ರತಿಮೆ ಪೈಬರ್‌ನಿಂದ ಮಾಡಿದ್ದು ಎಂದು ಅಪಪ್ರಚಾರ ಮಾಡಿದ್ದ ಕಾಂಗ್ರೆಸಿಗರಿಗೆ ಮುಖಭಂಗ..!

0
ಕಾರ್ಕಳದ ಪರಶುರಾಮ ಪ್ರತಿಮೆ ಪೈಬರ್‌ನಿಂದ ಮಾಡಿದ್ದು ಎಂದು ಅಪಪ್ರಚಾರ ಮಾಡಿದ್ದ ಕಾಂಗ್ರೆಸಿಗರಿಗೆ ಮುಖಭಂಗ..!

ಕಾರ್ಕಳ : ಕಾರ್ಕಳದ ಉಮ್ಮಿಕಲ್ ಬೆಟ್ಟದ ಮೇಲೆ ಪರಶುರಾಮ ಪ್ರತಿಮೆಯನ್ನು ಪೈಬರ್ ನಿಂದ ನಿರ್ಮಿಸಲಾಗಿದೆ ಎಂದು ಕಾಂಗ್ರೆಸಿಗರು ನಡೆಸುತ್ತಿದ್ದ ಅಪಪ್ರಚಾರಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ಪ್ರತಿಮೆಯನ್ನು ಹಿತ್ತಾಳೆಯಿಂದ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ.

1231 ಪುಟಗಳ ದೋಷಾರೋಪಣಾ ಪಟ್ಟಿಯನ್ನು ತಯಾರಿಸಿ ಕಾರ್ಕಳದ ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದು, ಅದರಲ್ಲಿ ಶಿಲ್ಪಿ ಕೃಷ್ಣ ನಾಯ್ಕ ಕಂಚಿನ ಲೋಹದಿಂದ ಪರಶುರಾಮ ಮೂರ್ತಿಯನ್ನು ನಿರ್ಮಾಣ ಮಾಡದೇ, ಹಿತ್ತಾಳೆ ಲೋಹದಿಂದ ಪರಶುರಾಮ ಮೂರ್ತಿಯನ್ನು ನಿರ್ಮಾಣ ಮಾಡಿರುವುದು ತಜ್ಜರ ಪರಿಶೀಲನಾ ವರದಿಯಿಂದ ಹಾಗೂ ತನಿಖೆಯಿಂದ ಸಾಬೀತಾಗಿರುತ್ತದೆ ಎಂದು‌‌ ಉಲ್ಲೇಖಿಸಲಾಗಿದೆ. ಅಲ್ಲಿಗೆ ಕಾಂಗ್ರೆಸಿಗರು ಹೆಣೆದ ಪೈಬರ್ ಪ್ರತಿಮೆ ವಾದ ಮಕಾಡೆ ಬಿದ್ದಂತಾಗಿದೆ.

ಒಪ್ಪಂದದ ಪ್ರಕಾರ ಪ್ರತಿಮೆಯನ್ನು ಕಂಚಿನಿಂದ ನಿರ್ಮಿಸಬೇಕೆಂದಿದೆ. ಆದರೆ ಪ್ರತಿಮೆ ಹಿತ್ತಾಳೆಯದ್ದಾಗಿದ್ದು ಕಾರ್ಕಳದಲ್ಲಿ ನಿರ್ಮಿಸಿರುವ ಪರಶುರಾಮನ ಪ್ರತಿಮೆ ಪೈಬರ್ ನದ್ದು ಎಂಬ ವಾದ ಮುರಿದು ಬಿದ್ದಂತಾಗಿದೆ.

ಮೂವರ ವಿರುದ್ಧ :
ಆರೋಪಿಗಳಾದ ಶಿಲ್ಪಿ ಕೃಷ್ಣ ನಾಯ್ಕ ಉಡುಪಿ ನಿರ್ಮಿತಿ ಕೇಂದ್ರದ ಪ್ರೊಜೆಕ್ಟ ಡೈರೆಕ್ಟರ್ ಅರುಣ ಕುಮಾರ್ ಹಾಗೂ ಇಂಜಿನಿಯರ್ ಸಚಿನ್ ವೈ ಕುಮಾರ್ ಇವರುಗಳು ಅಪರಾಧಿಕ ಒಳಸಂಚು ಮತ್ತು ನಂಬಿಕೆ ದ್ರೋಹ ಮತ್ತು ವಂಚನೆ ಎಸಗಿ, ಸಾಕ್ಷಿ ನಾಶ ಮಾಡಿರುತ್ತಾರೆ. ಅವರ ವಿರುದ್ದ ಕಲಂ. 420, 409, 201, 120 (ಬಿ) ಜೊತೆಗೆ 34 ಐಪಿಸಿ ಯಂತೆ 1231 ಪುಟಗಳ ದೋಷಾರೋಪಣಾ ಪಟ್ಟಿಯನ್ನು ತಯಾರಿಸಿ ಮಾನ್ಯ ಕಾರ್ಕಳದ ನ್ಯಾಯಾಲಯಕ್ಕೆ ನಿವೇದಿಸಲಾಗಿದೆ.

ದಿನಾಂಕ 21.06.2024 ರಂದು ಕೃಷ್ಣ ಶೆಟ್ಟಿ ಇವರು ಫಿರ್ಯಾದಿ ನೀಡಿದ್ದು, ಅದರಲ್ಲಿ ಕೃಷ್ಣ ನಾಯಕ್ Krish Art World ಎಂಬ ಸಂಸ್ಥೆಯ ಮುಖಾಂತರ ಕಾರ್ಕಳ ತಾಲೂಕಿನ ಪರಶುರಾಮ್ ಥೀಮ್ ಪಾರ್ಕ ನಲ್ಲಿ ಕಂಚಿನ ಪರಶುರಾಮ್ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ ಹಣ ಪಡೆದುಕೊಂಡು ಕಾಮಗಾರಿ ನಡೆಸುತ್ತಿದ್ದು, ನಂತರ ಆರೋಪಿ ಕೃಷ್ಣ ನಾಯ್ಕ ಎಂಬವರು ಕಂಚಿನ ಮೂರ್ತಿಯನ್ನು ಮಾಡದೇ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚನೆ ಯನ್ನು ಮಾಡಿರುತ್ತಾರೆ. ಎಂದು ನೀಡಿದ ಫಿರ್ಯಾದಿಯಂತೆ ಕಾರ್ಕಳ ನಗರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 120/2024 ಕಲಂ 420.409 ಐಪಿಸಿ ರಂತೆ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗಿತ್ತು.

ಪ್ರಕರಣದ ತನಿಖಾ ಕಾಲದಲ್ಲಿ ಪರಶುರಾಮ ಮೂರ್ತಿಯ ಶಿಲ್ಪಿ ಕೃಷ್ಣ ನಾಯ್ಕ ಕಂಚಿನ ಲೋಹದಿಂದ ಪರಶುರಾಮ ಮೂರ್ತಿಯನ್ನು ನಿರ್ಮಾಣ ಮಾಡದೇ, ಹಿತ್ತಾಳೆ ಲೋಹದಿಂದ ಪರಶುರಾಮ ಮೂರ್ತಿಯನ್ನು ನಿರ್ಮಾಣ ಮಾಡಿರುವುದು ತಜ್ಜರ ಪರಿಶೀಲನಾ ವರದಿಯಿಂದ ಹಾಗೂ ತನಿಖೆಯಿಂದ ಸಾಬೀತಾಗಿದೆ ಎಂದು ದೋಷಾರೋಪಣೆ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.