ರಾಷ್ಟ್ರಪತ್ನಿ ಪದ ಬಳಕೆ : ಸಂಸತ್ ಒಳಗೆ ಮತ್ತು ಹೊರಗೆ ಬಿಜೆಪಿ ಪ್ರತಿಭಟನೆ

Social Share

ನವದೆಹಲಿ, ಜು.28- ಅಮಾನತು ವಿರೋಧಿಸಿ ಮಹಾತ್ಮ ಗಾಂಧಿ ಪ್ರತಿಮೆ ಎದುರು ಪ್ರತಿಪಕ್ಷಗಳ ಸಂಸದರು ನಡೆಸುತ್ತಿರುವ ಅಹೋರಾತ್ರಿ ಹೋರಾಟಕ್ಕೆ ಪ್ರತಿಯಾಗಿ, ಬಿಜೆಪಿ ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌದರಿ ನೀಡಿರುವ ಹೇಳಿಕೆ ಮುಂದಿಟ್ಟುಕೊಂಡು ಸಂಸತ್ ಒಳಗೆ ಮತ್ತು ಹೊರಗೆ ಪ್ರತಿಭಟನೆ ನಡೆಸಿದೆ.

ರಾಷ್ಟ್ರಪತಿ ಬದಲಾಗಿ ಅಧಿರ್ ರಂಜನ್ ಚೌದರಿ ರಾಷ್ಟ್ರಪತ್ನಿ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪಗಳಿವೆ. ಈ ಕುರಿತು ಭಾರೀ ಪ್ರತಿಭಟನೆ ನಡೆಸಿರುವ ಬಿಜೆಪಿ ಕಾಂಗ್ರೆಸ್ ವಿರುದ್ಧ ಮುಗಿ ಬಿದ್ದಿದೆ. ಈ ಬೆಳವಣಿಗೆಯಿಂದ ಕಾಂಗ್ರೆಸ್ ಮುಜುಗರ ಅನುಭವಿಸುವಂತಾಗಿದೆ.

ಬೆಲೆ ಏರಿಕೆ ಸೇರಿದಂತೆ ಹಲವು ಗಂಭೀರ ವಿಷಯಗಳ ಕುರಿತು ಚರ್ಚೆಗೆ ಪಟ್ಟು ಹಿಡಿದು ಪ್ರತಿಪಕ್ಷಗಳು ಕಳೆದ ಎಂಟು ದಿನಗಳಿಂದ ಸಂಸತ್‍ನಲ್ಲಿ ಪ್ರತಿಪಕ್ಷಗಳು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದವು. ಈ ನಡುವೆ ಅೀಧಿರ್ ರಂಜನ್ ಚೌದರಿ ಅವರ ಹೇಳಿಕೆ ರಾಜಕೀಯ ಪರಿಸ್ಥಿತಿಯನ್ನು ಉಲ್ಟಾ ಸೀದಾ ಮಾಡಿದೆ.

ಆಡಳಿತ ಪಕ್ಷದ ಸದಸ್ಯರೆ ಸಂಸತ್‍ನಲ್ಲಿ ಪ್ರತಿಪಕ್ಷದ ವಿರುದ್ಧ ಇಂದು ಪ್ರತಿಭಟನೆ ನಡೆಸಿದ್ದಾರೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಅವರು, ರಾಷ್ಟ್ರಪತಿ ಅವರಿಗೆ ಆಗಿರುವ ಅವಮಾನ ದೇಶದ ಬುಡಕಟ್ಟು ಸಮುದಾಯಕ್ಕಾದ ಅಪಮಾನವಾಗಿದೆ. ಇದಕ್ಕಾಗಿ ಕಾಂಗ್ರೆಸ್ ತಕ್ಷಣವೇ ಕ್ಷಮೆ ಕೇಳಬೇಕು. ಅೀರ್ ರಂಜನ್‍ಚೌದರಿಯಂತಹ ವ್ಯಕ್ತಿಯನ್ನು ಸಂಸತ್‍ನಲ್ಲಿ ಕಾಂಗ್ರೆಸ್ ನಾಯಕನ್ನಾಗಿ ನೇಮಿಸಿದ್ದಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.

ಇದಕ್ಕೂ ಮೊದಲು ಸಂಸತ್ ಆವರಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಸೇರಿ ಹಲವರ ನೇತೃತ್ವದಲ್ಲಿ ಬಿಜೆಪಿಯ ಮಹಿಳಾ ಸಂಸದರು ಪ್ರತಿಭಟನೆ ನಡೆಸಿ ಕಾಂಗ್ರೆಸ್ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸಚಿವೆ ಸ್ಮತಿ ಇರಾನಿ ಅವರು ಟ್ವೀಟ್ ಮಾಡಿ, ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯಾದ ದಿನದಿಂದಲೂ ಅವರನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ರಾಜಕಾರಣ ಮಾಡುತ್ತಿತ್ತು, ಅವರು ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕವೂ ಅದನ್ನು ಮುಂದುವರೆಸಿದೆ ಎಂದು ಆರೋಪಿಸಿದರು.

ಅೀರ್ ರಂಜನ್ ಚೌದರಿ ಹೇಳಿಕೆಯಿಂದ ಮುರ್ಮು ಅವರ ಸಾಂವಿಧಾನಿಕ ಹಕ್ಕುಗಳನ್ನು ಕುಗ್ಗಿಸಲಾಗುತ್ತಿದೆ. ಜೊತೆ ರಾಷ್ಟ್ರಪತಿ ಅವರು ಪ್ರತಿನಿಸುವ ಶ್ರೀಮಂತ ಬುಡಕಟ್ಟು ಪರಂಪರೆಗೆ ಅಪಮಾನ ಮಾಡಲಾಗಿದೆ. ದೇಶಕ್ಕೆ ಮಹಿಳೆ ಅಧ್ಯಕ್ಷೆಯಾಗಿರುವುದನ್ನು ಸಹಿಸಲಾಗದೆ ಅವರ ಆತ್ಮಸ್ಥೈರ್ಯವನ್ನು ಕುಗ್ಗಿಸುವ ಸಂಪ್ರದಾಯವನ್ನು ಪಾಲಿಸಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಇತ್ತ ಸಂಸತ್‍ನಲ್ಲೂ ವಿಷಯ ಪ್ರಸ್ತಾಪವಾಗಿದ್ದು ಬಿಜೆಪಿ ನೇತೃತ್ವದಲ್ಲಿ ಎನ್‍ಡಿಎ ಸಂಸದರು ಕಾಂಗ್ರೆಸ್ ವಿರುದ್ಧ ಹರಿ ಮುಗಿ ಬಿದಿದ್ದಾರೆ. ಅೀಧಿರ್ ರಂಜನ್ ಅವರ ಹೇಳಿಕೆ ಸೆಕ್ಸಿಯಸ್ಟ್ ಇನ್ಸಲ್ಟ್ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವ್ಯಾಖ್ಯಾನಿಸಿದ್ದಾರೆ. ಗದ್ದಲ ಕೋಲಾಹಲದಿಂದ ಸಂಸತ್ ಕಲಾಪವನ್ನು ಇಂದು ಕೂಡ ಮುಂದೂಡಲಾಗಿದೆ.

ವಿವಾದ ಭುಗಿಲೆದ್ದ ಬೆನ್ನಲ್ಲೇ ಕಾಮಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತುರ್ತು ಸಭೆ ಕರೆದಿದ್ದಾರೆ. ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಅೀಧಿರ್ ರಂಜನ್ ಚೌದರಿ ಸೇರಿ ಅನೇಕರು ಸಭೆಯಲ್ಲಿ ಭಾಗವಹಿಸಿದ್ದರು.
ಸುದ್ದಿಗಾರರ ಬೆಂಬಿಡದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿರುವ ಸೋನಿಯಾ ಗಾಂಧಿ, ಅೀಧಿರ್ ರಂಜನ್ ಚೌದರಿ ತಮ್ಮ ಹೇಳಿಕೆಗಾಗಿ ಈಗಾಗಲೇ ಕ್ಷಮೆ ಕೇಳಿದ್ದಾರೆ ಎಂದು ಸ್ಪಷ್ಟ ಪಡಿಸಿದ್ದಾರೆ.

ಇತ್ತ ಸುದ್ದಿಗಾರರೊಂದಿಗೆ ಮಾತನಾಡಿದ ಅೀಧಿರ್ ರಂಜನ್ ಚೌದರಿ ಅವರು, ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ಉದ್ದೇಶ ಪೂರ್ವಕವಾಗಿ ಸಣ್ಣ ವಿಷಯವನ್ನು ಬೆಟ್ಟ ಮಾಡುತ್ತಿದೆ. ನಾನು ಬಾಯಿ ತಪ್ಪಿ ರಾಷ್ಟ್ರಪತ್ನಿ ಎಂದು ಸಂಬೋಧಿಸಿದ್ದೇನೆ.

ಅದನ್ನು ದೊಡ್ಡದು ಮಾಡುವ ಅಗತ್ಯ ಇಲ್ಲ ಎಂದಿದ್ದಾರೆ. ಜೊತೆಗೆ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದು ತಮ್ಮ ಮಾತುಗಳ ಕುರಿತು ಸಂಸತ್‍ನಲ್ಲಿ ಹೇಳಿಕೆ ನೀಡಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಆದರೆ ಬಿಜೆಪಿ ಸದಸ್ಯರು ಸಂಸತ್ ಒಳಗೆ ಜೋರು ಗದ್ದಲ ಎಬ್ಬಿಸಿದ್ದರಿಂದ ಅೀರ್ ರಂಜನ್ ಚೌದರಿ ಅವರ ಹೇಳಿಕೆಗೆ ಅವಕಾಶ ಸಿಕ್ಕಿರಲಿಲ್ಲ.

Articles You Might Like

Share This Article