ಡಿ.7ರಿಂದ 29ರವರೆಗೆ ಸಂಸತ್ ಅಧಿವೇಶನ

Social Share

ನವದೆಹಲಿ,ನ.19- ಬಹುನಿರೀಕ್ಷಿತ ಸಂಸತ್‍ನ ಚಳಿಗಾಲದ ಅಧಿವೇಶನ ಡಿ.7ರಿಂದ 29ರವರೆಗೆ 17 ದಿನಗಳ ಕಾಲ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಡಿ.7ರಿಂದ 29ರವರೆಗೆ ಅವೇಶನ ನಡೆಸಲು ತೀರ್ಮಾನಿಸಲಾಗಿದ್ದು, ಒಟ್ಟು 23 ದಿನಗಳ ಅವಧಿಯಲ್ಲಿ 17 ದಿನಗಳು ಸದನ ಜರುಗಲಿದೆ ಎಂದಿದ್ದಾರೆ. ಈ ಬಾರಿಯ ಅಧಿವೇಶನದಲ್ಲಿ ಉಭಯ ಸದನಗಳಾದ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಆರೋಗ್ಯಪೂರ್ಣ ಚರ್ಚೆ ನಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಧಿವೇಶನದಲ್ಲಿ ಶಾಸಕಾಂಗ ವ್ಯವಹಾರ ಮತ್ತು ಇತರ ವಿಷಯಗಳ ಕುರಿತು ಚರ್ಚೆಗಳನ್ನು ನಿರೀಕ್ಷಿಸಲಾಗಿದೆ. ರಚನಾತ್ಮಕ ಚರ್ಚೆಗೆ ನಾವು ಸಿದ್ಧರಿದ್ದೇವೆ ಎಂದು ಅವರು ಹೇಳಿದ್ದಾರೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಸೇರಿ ಕೆಲವು ಹಾಲಿ ಸದಸ್ಯರ ನಿಧನದ ಗೌರವಾರ್ಥ ಅಧಿವೇಶನದ ಮೊದಲ ದಿನವನ್ನು ಮುಂದೂಡುವ ಸಾಧ್ಯತೆ ಇದೆ.

“ಮೋದಿಯಂತಹ ನಾಯಕನಿಲ್ಲದಿದ್ದರೆ ನಗರಕ್ಕೊಬ್ಬ ಅಫ್ತಾಬ್ ಹುಟ್ಟುತ್ತಾನೆ”

ಕೋವಿಡ್ ಸೋಂಕಿನ ಸಂಖ್ಯೆಗಳು ಗಣನೀಯವಾಗಿ ಇಳಿಮುಖವಾಗಿರುವುದರಿಂದ ಮತ್ತು ಲೋಕಸಭೆ ಮತ್ತು ರಾಜ್ಯಸಭಾ ಸಚಿವಾಲಯದ ಹೆಚ್ಚಿನ ಸದಸ್ಯರು ಮತ್ತು ಸಿಬ್ಬಂದಿ ಸಂಪೂರ್ಣವಾಗಿ ಲಸಿಕೆ ಹಾಕಿಸಿಕೊಂಡಿರುವುದರಿಂದ ಯಾವುದೇ ಪ್ರಮುಖ ಕೋವಿಡ್ ನಿರ್ಬಂಧಗಳಿಲ್ಲದೆ ಅಧಿವೇಶನವನ್ನು ಕರೆಯುವ ಸಾಧ್ಯತೆಯಿದೆ.

ಇದೇ ಮೊದಲ ಬಾರಿಗೆ ಹೊರಜಗತ್ತಿಗೆ ಕಾಣಿಸಿಕೊಂಡ ಕಿಮ್ ಪುತ್ರಿ

ರಾಜ್ಯಸಭೆಯ ಅಧ್ಯಕ್ಷರಾಗಿರುವ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಅಧಿವೇಶನ ಇದಾಗಿದೆ. ಮುಂಬರುವ ಅಧಿವೇಶನದಲ್ಲಿ ಅಂಗೀಕರಿಸಬೇಕಾದ ಮಸೂದೆಗಳ ಪಟ್ಟಿಯನ್ನು ಸರ್ಕಾರ ಸಿದ್ಧಪಡಿಸುತ್ತಿದೆ. ಇತ್ತ ಪ್ರತಿಪಕ್ಷಗಳು ಪ್ರಸ್ತುತ ವಿಷಯಗಳ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ಒತ್ತಾಯಿಸಲು ಸಿದ್ಧತೆ ನಡೆಸಿವೆ ಎಂದು ತಿಳಿದುಬಂದಿದೆ.

ಉತ್ತರಾಖಾಂಡ್‍ : ಕಂದಕಕ್ಕೆ ಕಾರು ಉರುಳಿ ಬಿದ್ದು 12 ಸಾವು

ಹಾಲಿ ಸಂಸದರ ನಿಧನವನ್ನು ಗಮನದಲ್ಲಿಟ್ಟುಕೊಂಡು ಮುಂಬರುವ ಅಧಿವೇಶನದ ಮೊದಲ ದಿನವನ್ನು ಮುಂದೂಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ ನಿಧನರಾದ ಹಾಲಿ ಸಂಸದರಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಕೂಡ ಸೇರಿದ್ದಾರೆ.

Articles You Might Like

Share This Article