ಪಿಥೋರಗಢ,ಮೇ.20- ಪತಂಜಲಿ ಎಲೈಚಿ ಸೋನ್ ಪಾಪಡಿ ತಯಾರಿಕೆಯಲ್ಲಿ ಆಹಾರ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿದ ಮೂವರಿಗೆ ಇಲ್ಲಿನ ನ್ಯಾಯಾಲಯವು ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.
ಪಿಥೋರಗಢ್ ಮುಖ್ಯ ಜುಡಿಷಿಯಲ್ ವ್ಯಾಜಿಸ್ಟ್ರೇಟ್ ಸಂಜಯ್ ಸಿಂಗ್ ಅವರು ಜೈಲು ಶಿಕ್ಷೆಯ ಜೊತೆಗೆ ಐದು ಸಾವಿರದಿಂದ 25,000 ದವರೆಗೆ ದಂಡ ವಿಧಿಸಿದ್ದಾರೆ ಎಂದು ಸಹಾಯಕ ಪ್ರಾಸಿಕ್ಯೂಷನ್ ಅಧಿಕಾರಿ ರಿತೇಶ್ ವರ್ಮಾ ತಿಳಿಸಿದ್ದಾರೆ.
ಪಿಥೋರಗಢ್‌ನ ಬೇರಿನಾಗ್ ಪಟ್ಟಣದ ಅಂಗಡಿಯ ವ್ಯಾಪಾರಿ ಲೀಲಾಧರ್ ಪಾಠಕ್‌ಗೆ ನ್ಯಾಯಾಲಯವು ಆರು ತಿಂಗಳ ಜೈಲು ಶಿಕ್ಷೆ ಮತ್ತು ಉತ್ಪನ್ನವನ್ನು ಮಾರಾಟ ಮಾಡಿದ್ದಕ್ಕಾಗಿ 5,000 ದಂಡ ವಿಧಿಸಿದೆ ಎಂದು ವರ್ಮಾ ಹೇಳಿದರು.
ನೈನಿತಾಲ್‌ನ ರಾಮನಗರದಲ್ಲಿರುವ ಪತಂಜಲಿಯ ಪ್ರತಿನಿಧಿ ಕನ್ಹಾಜಿ ಡಿಸ್ಟ್ರಿಬ್ಯೂಟರ್ಸ್ ಪ್ರೈವೇಟ್ ಲಿಮಿಟೆಡ್‌ನ ಸಹಾಯಕ ವ್ಯವಸ್ಥಾಪಕ ಅಜಯ್ ಜೋಶಿ ಅವರಿಗೆ ನ್ಯಾಯಾಲಯವು ಆರು ತಿಂಗಳ ಜೈಲು ಶಿಕ್ಷೆ ಮತ್ತು 10,000 ದಂಡ ವಿಧಿಸಿದೆ.
ಕಂಪನಿಯ ಸಹಾಯಕ ಪ್ರಧಾನ ವ್ಯವಸ್ಥಾಪಕ ಅಭಿಷೇಕ್ ಕುಮಾರ್ ಅವರಿಗೆ 25,000 ದಂಡದೊಂದಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ.ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆ 2006ರ ಅಡಿಯಲ್ಲಿ ಮೂವರನ್ನು ಅಪರಾಧಿಗಳೆಂದು ಘೋಷಿಸಲಾಗಿದೆ ಎಂದು ಅವರು ಹೇಳಿದರು.
ಸೆಪ್ಟೆಂಬರ್ 17, 2019 ರಂದು ಪಾಠಕ್ ಅವರ ಅಂಗಡಿಯಿಂದ ಪತಂಜಲಿ ಎಲೈಚಿ ನವರತ್ನ ಸೋನ್ ಪಾಪ್ಡಿ ಮಾದರಿಗಳನ್ನು ಸಂಗ್ರಹಿಸಿದ ನಂತರ, ಅವುಗಳನ್ನು ಪರೀಕ್ಷೆಗಾಗಿ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ರಾಷ್ಟ್ರೀಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ವರ್ಮಾ ಹೇಳಿದರು.