ಬೆಂಗಳೂರು,ಜ.25- ಬಿಡುಗಡೆಗೆ ಮೊದಲು ತೀವ್ರ ವಿವಾದ ಸೃಷ್ಟಿಸಿದ್ದ ಬಾಲಿವುಡ್ ನಟ ಶಾರೂಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಚಿತ್ರ ಬಿಡುಗಡೆಗೆ ವಿರೋಧ ವ್ಯಕ್ತವಾಗಿದೆ. ಬೆಳಗಾವಿ, ಕಲಬರುಗಿ, ಹುಬ್ಬಳ್ಳಿ ಮತ್ತಿತರ ಕಡೆ ಚಿತ್ರ ಬಿಡುಗಡೆಗೆ ಹಿಂದೂಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ತಕ್ಷಣವೇ ಬಂದ್ ಮಾಡಬೇಕೆಂದು ಆಗ್ರಹಿಸಿದೆ.
ಈ ಸಂದರ್ಭದಲ್ಲಿ ಚಿತ್ರಮಂದಿರದ ಮಾಲೀಕರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ, ತಳ್ಳಾಟ, ನೂಕಾಟ ನಡೆದು ಚಿತ್ರಮಂದಿರದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.
ಬೆಳಗಾವಿ ಪಟ್ಟಣದ ಸ್ವರೂಪ ಮತ್ತು ನರ್ತಕಿ ಚಿತ್ರಮಂದಿರದ ಮೇಲೆ ಬೆಳಗ್ಗೆ ದಾಳಿ ಮಾಡಿದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು, ಚಿತ್ರದ ಬ್ಯಾನರ್ಗಳನ್ನು ಹರಿದು ಹಾಕಿದ್ದಾರೆ. ಈ ಹಿನ್ನಲೆಯಲ್ಲಿ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಭದ್ರತೆ ಕೈಗೊಂಡಿದ್ದಾರೆ.
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವಕ್ಕೆ ಸಮ್ಮತಿ
ಜನರ ಭಾವನೆಗಳನ್ನು ಅರ್ಥ ಮಾಡಿಕೊಂಡು ಸ್ವಯಂಪ್ರೇರಿತವಾಗಿ ಚಿತ್ರ ಪ್ರದರ್ಶನ ಹಿಂಪಡೆಯಲಿ. ಈ ರೀತಿ ಚಿತ್ರಗಳ ಪ್ರದರ್ಶನ ಮೂಲಕ ಸಮಾಜದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾಗುತ್ತದೆ. ಪ್ರತಿಭಟನೆ ಇವತ್ತು ಪ್ರಾರಂಭವಾಗಿದೆ. ಬಹಳಷ್ಟು ಹೆಣ್ಣುಮಕ್ಕಳು ಸಹ ಚಲನಚಿತ್ರ ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ವಿತರಕರೇ ಚಿತ್ರ ಪ್ರದರ್ಶನದಿಂದ ಹಿಂದೆ ಸರೆಯಬೇಕು ಎಂದು ಶಾಸಕ ಅಭಯ್ ಪಾಟೀಲ್ ಆಗ್ರಹಿಸಿದರು.
30 ಮಂದಿ ವಿರುದ್ಧ ದೂರು: ಸುದ್ದಿ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ಕೆಲವು ಹಿಂದೂಪರ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಫೋಸ್ಟರ್ ಹರಿಯಲು ಯತ್ನಿಸಿದ ಹಿನ್ನೆಲೆಯಲ್ಲಿ ಖಡೇಬಜಾರ್ ಠಾಣೆಯಲ್ಲಿ 30 ಹಿಂದೂಪರ ಕಾರ್ಯಕರ್ತರ ವಿರುದ್ಧ ದೂರು ದಾಖಲಾಗಿದೆ.
ಸದ್ಯ ಚಿತ್ರಮಂದಿರ ಬಳಿ ಉದ್ವಿಗ್ನ ಪರಿಸ್ಥಿತಿ ಇದೆ. ಮುಂಜಾಗ್ರತಾ ಕ್ರಮವಾಗಿ ಓರ್ವ ಸಿಪಿಐ ನೇತೃತ್ವದಲ್ಲಿ ಭದ್ರತೆ ಕಲ್ಪಿಸಲಾಗಿದ್ದು, ಕೆಎಸ್ಆರ್ಪಿ ತುಕಡಿ ಸ್ಥಳದಲ್ಲಿದೆ. ಸಿನಿಮಾ ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿರುವ ಬೆಳಗಾವಿ ದಕ್ಷಿಣ ಬಿಜೆಪಿ ಶಾಸಕ ಅಭಯ್ ಪಾಟೀಲ್, ವಿತರಕರು ಚಿತ್ರ ಪ್ರದರ್ಶನ ಹಿಂಪಡೆಯುವಂತೆ ಮನವಿ ಮಾಡಿದರು.
ಕಲಬುರಗಿ, ಹುಬ್ಬಳ್ಳಿಯಲ್ಲೂ ಕೂಡ ಚಿತ್ರ ಬಿಡುಗಡೆಗೆ ವಿರೋಧ ವ್ಯಕ್ತವಾಗಿದೆ. ಹಿಂದೂ ಜಾಗರಣ ವೇದಿಕೆ, ಎಬಿವಿಪಿ ಮತ್ತಿತರ ಸಂಘಟನೆಗಳ ಕಾರ್ಯಕರ್ತರು ಚಿತ್ರಮಂದಿರದ ಬಳಿ ಬಂದು ದಾಂಧಲೆ ಎಬ್ಬಿಸಿದರು.
ಹಾಸನ ಜೆಡಿಎಸ್ ಟಿಕೆಟ್ಗೆ ಜಿದ್ಧಾಜಿದ್ದಿ
ವಿಷಯ ತಿಳಿದ ಪೊಲೀಸರು ಇಲ್ಲಿಯೂ ಕೂಡ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಭಾಯಿಸಿದ್ದಾರೆ.
ಪಠಾಣ್ ಬಿಡುಗಡೆಗಾಗಿ ಕಾಯುತ್ತಿರುವ ಶಾರುಖ್ ಅಭಿಮಾನಿಗಳು ಚಿತ್ರವನ್ನು ವೀಕ್ಷಿಸಲು ಉತ್ಸುಕರಾಗಿದ್ದಾರೆ. ಇತರ ಯಾವುದೇ ಭಾರತೀಯ ಚಿತ್ರಕ್ಕಿಂತ ಮಿಗಿಲಾಗಿ ಪಠಾಣ್ ಚಿತ್ರವು ಬರೋಬ್ಬರಿ 100 ಕ್ಕೂ ಹೆಚ್ಚು ದೇಶಗಳಲ್ಲಿ 2,500ಕ್ಕೂ ಅಧಿಕ ಪರದೆಗಳಲ್ಲಿ ಬಿಡುಗಡೆಯಾಗಲಿದೆ.
ಪಠಾಣ್ ಚಿತ್ರದ ಬಿಡುಗಡೆಯ ಮೊದಲ ದಿನದಂದು 4 ಲಕ್ಷಕ್ಕೂ ಹೆಚ್ಚು ಟಿಕೆಟ್ಗಳು ಮಾರಾಟವಾಗುತ್ತವೆ ಎಂದು ಅಂದಾಜಿಸಲಾಗಿದೆ. ಚಿತ್ರ ಬಿಡುಗಡೆಯಾಗುವ ಮೊದಲ ದಿನವೇ ಅತಿ ಹೆಚ್ಚು ಟಿಕೆಟ್ ಮಾರಾಟವಾದ ಅಗ್ರ ಐದು ಚಿತ್ರಗಳ ಸಾಲಿಗೆ ಪಠಾಣ್ ಹೆಸರನ್ನೂ ಸೇರಿಸಲಾಗಿದೆ.
ಇನ್ಮುಂದೆ ವಿಮಾನದಲ್ಲಿ ಕೇಳಿದಷ್ಟು ಮದ್ಯ ಸಿಗಲ್ಲ
ಸೋಮವಾರ ಸಂಜೆಯ ಹೊತ್ತಿಗೆ ಪಠಾಣ್ ಚಿತ್ರದ 3.9 ಲಕ್ಷ ಟಿಕೆಟ್ಗಳು ಮಾರಾಟವಾಗಿದೆ. ಪಠಾಣ್ ಚಿತ್ರದಲ್ಲಿ ದೀಪಿಕಾ ಪಡುಕೋಣೆ ಮತ್ತು ಜಾನ್ ಅಬ್ರಹಾಂ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
Pathan, movie, release, theaters, Hindu, organizations, protest,