Tuesday, September 2, 2025
Homeರಾಜ್ಯಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

Pavithra Gowda's bail application dismissed

ಬೆಂಗಳೂರು,ಸೆ.2- ತಮ್ಮ ಮಗಳ ಆರೈಕೆಗಾಗಿ ಜಾಮೀನು ನೀಡಬೇಕೆಂದು ಕೋರಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲ ಆರೋಪಿ ಪವಿತ್ರಾ ಗೌಡ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 57ನೇ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ.

ವ್ಯಾಸಂಗ ಮಾಡುತ್ತಿರುವ ಮಗಳ ಆರೈಕೆಗಾಗಿ ತನಗೆ ನ್ಯಾಯಾಲಯ ಮಾನವೀಯತೆ ದೃಷ್ಟಿಯಿಂದ ಜಾಮೀನು ಮಂಜೂರು ಮಾಡಬೇಕೆಂದು ಪವಿತ್ರಾ ಗೌಡ ನ್ಯಾಯಾಲಯದ ಮೊರೆ ಹೋಗಿದ್ದರು.

ನ್ಯಾಯಾಧೀಶ ಐಪಿ ನಾಯಕ್‌ ಅವರು ಅರ್ಜಿ ವಿಚಾರಣೆ ನಡೆಸಿ ಅರ್ಜಿಯನ್ನು ವಜಾ ಮಾಡಿದ್ದಾರೆ. ಆದಾಗ್ಯೂ ಹದಿನಾಲ್ಕು ದಿನಗಳ ಬಳಿಕ ಮತ್ತೆ ಜಾಮೀನು ಅರ್ಜಿ ಸಲ್ಲಿಸುವ ಅವಕಾಶ ಪವಿತ್ರಾ ಗೌಡಗೆ ಇದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್‌ ವಜಾ ಮಾಡಿದ ಕಾರಣ ಏಳು ಮಂದಿ ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇತ್ತೀಚೆಗಷ್ಟೆ ಪ್ರಕರಣದ ನಂಬರ್‌ 1 ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಅರ್ಜಿ ಹಾಕಿದ್ದರು.

RELATED ARTICLES

Latest News