Wednesday, December 18, 2024
Homeರಾಜ್ಯಪರಪ್ಪನ ಅಗ್ರಹಾರ ಕಾರಾಗೃಹದಿಂದ ಪವಿತ್ರಾ ಗೌಡ ಬಿಡುಗಡೆ

ಪರಪ್ಪನ ಅಗ್ರಹಾರ ಕಾರಾಗೃಹದಿಂದ ಪವಿತ್ರಾ ಗೌಡ ಬಿಡುಗಡೆ

Pavitra Gowda released from Agrahara Jail

ಬೆಂಗಳೂರು,ಡಿ.17- ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪವಿತ್ರಾ ಗೌಡ ಹೈಕೋರ್ಟ್‌ ಜಾಮೀನಿನ ನಂತರ ಇಂದು ಪರಪ್ಪನ ಅಗ್ರಹಾರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ.

ಕಳೆದ 6 ತಿಂಗಳ ಹಿಂದೆ ಜೈಲು ಸೇರಿದ್ದ ನಟ ದರ್ಶನ್‌, ಗೆಳತಿ ಪವಿತ್ರಾ ಗೌಡ ಮತ್ತು ಇತರರಿಗೆ ಶುಕ್ರವಾರ ಹೈಕೋರ್ಟ್‌ನ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿತ್ತು. ನಿನ್ನೆ ಜಾಮೀನು ಪ್ರಕ್ರಿಯೆಗಳು ಎಲ್ಲಾ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಪವಿತ್ರಾ ಗೌಡ ಜೊತೆ 14ನೇ ಆರೋಪಿ ಪ್ರದೂಶ್‌ ಬಿಡುಗಡೆಯಾಗಿದ್ದಾನೆ.

ಕೋರ್ಟ್‌ ವಿಧಿಸಿ ಷರತ್ತಿನಂತೆ ಎಲ್ಲಾ ಆರೋಪಿಗಳು ತಲಾ 1 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್‌ ಹಾಗೂ ಇಬ್ಬರ ಭದ್ರತೆ ಸೇರಿದಂತೆ ಹಲವು ಷರತ್ತುಗಳನ್ನುಪೂರೈಸಿದ್ದು,
ಜೈಲಿನಿಂದ ಬಿಡುಗಡೆಯಾಗಿದ್ದಾರೆ.ನಗುಮುಖದಲ್ಲೆ ಪವಿತ್ರಾ ಗೌಡ ಕಾಣಿಸಿಕೊಂಡರು.

RELATED ARTICLES

Latest News