ಲಘು ವಾಹನಗಳ ಸಂಚಾರಕ್ಕೆ ಪೀಣ್ಯ ಫ್ಲೈಓವರ್ ಮುಕ್ತ

Social Share

ಬೆಂಗಳೂರು, ಫೆ.16- ರಾಜಧಾನಿಯಿಂದ ಹಲವು ಜಿಲ್ಲೆ ಹಾಗೂ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಪೀಣ್ಯ ಫ್ಲೈ ಓವರ್ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಇಂದು ಲಘು ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ. ತುಮಕೂರು ರಸ್ತೆಯ ಫ್ಲೈ ಓವರ್‍ನಲ್ಲಿ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ವಾಹನಗಳ ಸಂಚಾರ ನಿಷೇಧಿಸಲಾಗಿತ್ತು.
ದುರಸ್ತಿ ಕಾರ್ಯ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದಿನಿಂದ ಲಘು ವಾಹನಗಳಾದ ದ್ವಿಚಕ್ರ ವಾಹನಗಳು, ಆಟೊ, ಕಾರುಗಳು ಫ್ಲೈ ಓವರ್ ಮೇಲೆ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಭಾರೀ ವಾಹನಗಳ ಸಂಚಾರವನ್ನು ನಿರ್ಬಂಸಲಾಗಿದೆ. ಲಾರಿ, ಬಸ್, ಟಿಪ್ಪರ್ ಸೇರಿದಂತೆ ಇತರೆ ಭಾರೀ ವಾಹನಗಳು ಪಕ್ಕದ ಸರ್ವೀಸ್ ರಸ್ತೆಯಲ್ಲೇ ಸಾಗಬೇಕು.
ಭಾರೀ ವಾಹನಗಳ ಸಂಚಾರಕ್ಕೆ ಫ್ಲೈ ಓವರ್ ಸುರಕ್ಷಿತವಲ್ಲ ಎಂದು ತಜ್ಞರು ವರದಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಹೆವಿ ವೆಹಿಕಲ್ಸ್‍ಗಳ ಸಂಚಾರ ಹೊರತುಪಡಿಸಿ ಲಘು ವಾಹನಗಳ ಓಡಾಟಕ್ಕೆ ಮಾತ್ರ ಅನುವು ಮಾಡಿಕೊಡಬಹುದು ಎಂದು ತಿಳಿಸಲಾಗಿತ್ತು.
ದುರಸ್ತಿ ಕಾರ್ಯದಿಂದ ಕೆಲ ದಿನಗಳಿಂದ ಈ ಮಾರ್ಗವಾಗಿ ಸಂಚರಿಸುವ ಪ್ರಯಾಣಿಕರು ಹಾಗೂ ವಾಹನ ಸವಾರರು ಟ್ರಾಫಿಕ್ ಜಾಮ್‍ನಿಂದಾಗಿ ತೊಂದರೆಗೊಳಗಾಗಿದ್ದರು. ಇಂದು ಲಘು ವಾಹನಗಳಿಗೆ ಅವಕಾಶ ಕಲ್ಪಿಸಿರುವುದರಿಂದ ನಿಟ್ಟುಸಿರು ಬಿಡುವಂತಾಗಿದೆ.
ಇಂದು ಮಧ್ಯಾಹ್ನದಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಹಿನ್ನೆಲೆಯಲ್ಲಿ ಹೆದ್ದಾರಿ ಪ್ರಾಕಾರದ ಅಕಾರಿಗಳು ಹಾಗೂ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Articles You Might Like

Share This Article