ಭಾರಿ ವಾಹನಗಳಿಗೆ ಪೀಣ್ಯ ಫ್ಲೈಓವರ್‌ ಸಂಚಾರಕ್ಕೆ ಮುಕ್ತ, ವಾರದಲ್ಲಿ 6 ದಿನ ಮಾತ್ರ ಅವಕಾಶ

ಬೆಂಗಳೂರು,ಜು.29- ಕಳೆದ ಎರಡು ವರ್ಷಗಳಿಂದ ಭಾರೀ ವಾಹನಗಳ ಸಂಚಾರ ನಿರ್ಬಂಧವಾಗಿದ್ದ ತುಮಕೂರು ರಸ್ತೆಯ ಪೀಣ್ಯ ಮೇಲ್ಸೇತುವೆ ಇಂದಿನಿಂದ ಎಲ್ಲಾ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ರಾಜ್ಯದ ಸುಮಾರು 25 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಪೀಣ್ಯ ಮೇಲ್ಸೇತುವೆಯ ತಾಂತ್ರಿಕ ಸಮಸ್ಯೆಗಳಿಂದ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧಿಸಲಾಗಿತ್ತು. ಇದೀಗ ಲೋಪದೋಷಗಳನ್ನು ಸರಿಪಡಿಸಲಾಗಿದ್ದು, ರಾಜ್ಯ ಹೆದ್ದಾರಿ ಪ್ರಾಧಿಕಾರ ಇಂದಿನಿಂದ ಎಲ್ಲಾ ವಾಹನಗಳ ಸಂಚಾರಕ್ಕೆ ಹಸಿರುನಿಶಾನೆ ತೋರಿಸಿದ್ದು, ಸಂಚಾರಿ ಪೊಲೀಸರು ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಕಳೆದ ಎರಡು ವರ್ಷಗಳಿಂದ ಈ ಮಾರ್ಗದಲ್ಲಿ … Continue reading ಭಾರಿ ವಾಹನಗಳಿಗೆ ಪೀಣ್ಯ ಫ್ಲೈಓವರ್‌ ಸಂಚಾರಕ್ಕೆ ಮುಕ್ತ, ವಾರದಲ್ಲಿ 6 ದಿನ ಮಾತ್ರ ಅವಕಾಶ