ಬೆಂಗಳೂರು, ಜ.19- ಪೀಣ್ಯ ಫ್ಲೈ ಓವರ್ ಲೋಡ್ ಪರೀಕ್ಷೆ ಪೂರ್ಣಗೊಂಡಿದ್ದು, ಇಂದಿನಿಂದ ಲಘು ಮೋಟಾರ್ ವಾಹನಗಳು ಮತ್ತು ಲಘು ಗೂಡ್ಸ್ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಲೋಡ್ ಟೆಸ್ಟಿಂಗ್ ವರದಿಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸುವುದಾಗಿ ತಿಳಿಸಿದೆ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾದ ಎಂ.ಎನ್.ಅನುಚೇತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಳೆದ ಮೂರು ದಿನಗಳಿಂದ ಲೋಡ್ ಟೆಸ್ಟಿಂಗ್ ಹಿನ್ನೆಲೆಯಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿತ್ತು. ಇದರಿಂದಾಗಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆಯಾಗಿತ್ತು. ಅದರಲ್ಲೂ ಬೆಳಗ್ಗೆ ಮತ್ತು ಸಂಜೆ ಪೀಕ್ ಅವರ್ ಆಗಿದ್ದರಿಂದ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸುತ್ತಮುತ್ತಲ ರಸ್ತೆಗಳಲ್ಲೂ ಸಹ ಇದೇ ಪರಿಸ್ಥಿತಿ ಕಂಡುಬಂದಿತ್ತು.
ನಾಸಾ ಸಂಪರ್ಕಕ್ಕೆ ಸಿಕ್ಕ ಚಂದ್ರಯಾನ-3ರ ಪ್ರಗ್ಯಾನ್ ರೋವರ್
ಬೆಳಗ್ಗೆ ಕಚೇರಿಗೆ ಹೋಗುವವರು ತಮ್ಮ ವಾಹನಗಳನ್ನು ಬಿಟ್ಟು ಮೆಟ್ರೋ ರೈಲುಗಳ ಮೊರೆ ಹೋಗಿದ್ದರು.
ಇದೀಗ ಲೋಡ್ ಟೆಸ್ಟಿಂಗ್ ಪರೀಕ್ಷೆ ಮುಗಿದ ಹಿನ್ನೆಲೆಯಲ್ಲಿ ಇಂದಿನಿಂದ ಲಘು ವಾಹನಗಳಿಗೆ ಅವಕಾಶ ಕಲ್ಪಿಸಿರುವುದರಿಂದ ವಾಹನ ಸವಾರರು ನಿರಾಳರಾಗಿದ್ದಾರೆ.